Tag: ಡಿಸಿ ಎಂಆರ್ ರವಿ

  • ಬಿತ್ತನೆ ಮಾಡಿ ರೈತರಿಗೆ ಆತ್ಮಸ್ಥೈರ್ಯ ತುಂಬಿದ ಚಾಮರಾಜನಗರ ಡಿಸಿ

    ಬಿತ್ತನೆ ಮಾಡಿ ರೈತರಿಗೆ ಆತ್ಮಸ್ಥೈರ್ಯ ತುಂಬಿದ ಚಾಮರಾಜನಗರ ಡಿಸಿ

    ಚಾಮರಾಜನಗರ: ಹಸಿರು ವಲಯದಲ್ಲಿ ಲಾಕ್‍ಡೌನ್ ಸಡಿಲಿಕೆ ಆಗಿರುವುದರಿಂದ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಕೃಷಿ ಚಟುವಟಿಕೆಗಳು ಗರಿಗೆದರಿವೆ. ಸ್ವತಃ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಇಂದು ಜಮೀನಿಗಿಳಿದು ಬಿತ್ತನೆ ಕಾರ್ಯ ಮಾಡುವ ಮೂಲಕ ರೈತರಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದ್ದಾರೆ.

    ಸರ್ಕಾರ ಕೃಷಿ ಚಟುವಟಿಕೆಗಳಿಗೆ ಲಾಕ್‍ಡೌನ್‍ನಿಂದ ವಿನಾಯ್ತಿ ನೀಡಿರುವುದರ ಜೊತೆಗೆ ಮಳೆರಾಯನೂ ಕೃಪೆ ತೋರಿದ್ದು ರೈತರು ಉಳುಮೆಗೆ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಗುಂಡ್ಲುಪೇಟೆ ತಾಲೂಕಿನ ವಿವಿಧೆಡೆ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಹೊಲಗಳಿಗೆ ತೆರಳಿ ಬಿತ್ತನೆ ಕಾರ್ಯ ಮಾಡುವ ಮೂಲಕ ರೈತರನ್ನು ಹುರಿದುಂಬಿಸಿದರು.

    ಇದೇ ವೇಳೆ ರೈತರ ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿ ಬಿತ್ತನೆ ಬೀಜ ಹಾಗೂ ರಸಗೊಬ್ಬರಕ್ಕೆ ತೊಂದರೆಯಾಗದಂತೆ ಕ್ರಮವಹಿಸಲಾಗಿದೆ. ರೈತ ಸಂಪರ್ಕ ಕೇಂದ್ರಗಳಲ್ಲಿ ಅಗತ್ಯ ಪ್ರಮಾಣದ ಬಿತ್ತನೆ ಬೀಜ ಹಾಗು ರಸಗೊಬ್ಬರ ದಾಸ್ತಾನು ಮಾಡಿ ರಿಯಾಯ್ತಿ ದರದಲ್ಲಿ ವಿತರಣೆ ಮಾಡಲಾಗುತ್ತಿದ್ದು, ಇದರ ಸದುಪಯೋಗಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದರು.