Tag: ಡಿಸ್ಚಾರ್ಜ್

  • ಡಿಸಾರ್ಜ್ ಆದ ಶಿವಣ್ಣ: ನಾಗವಾರದ ನಿವಾಸಕ್ಕೆ ಆಗಮನ

    ಡಿಸಾರ್ಜ್ ಆದ ಶಿವಣ್ಣ: ನಾಗವಾರದ ನಿವಾಸಕ್ಕೆ ಆಗಮನ

    ನಿನ್ನೆ ಅನಾರೋಗ್ಯದ ಕಾರಣದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಶಿವರಾಜ್ ಕುಮಾರ್, ಚಿಕಿತ್ಸೆ ಪಡೆದುಕೊಂಡು ಇಂದು ಬೆಂಗಳೂರಿನ ನಾಗವಾರದಲ್ಲಿರುವ ತಮ್ಮ ನಿವಾಸಕ್ಕೆ ವಾಪಸ್ಸಾಗಿದ್ದಾರೆ. ವೈದ್ಯರ ಸಲಹೆ ಮೇರೆಗೆ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಒಂದು ದಿನ ಆಸ್ಪತ್ರೆಯಲ್ಲೇ ಉಳಿದುಕೊಂಡು ಚಿಕಿತ್ಸೆ ಪಡೆದಿದ್ದರು.

    ಶಿವಣ್ಣ ಅವರಿಗೆ ಯಾವುದೇ ಗಂಭೀರ ಸಮಸ್ಯೆ ಇಲ್ಲ ಮತ್ತು ಕಿಡ್ನಿ ಸ್ಟೋನ್ ಆಗಿತ್ತು ಎನ್ನುವ ಮಾಹಿತಿ ಇದೆ. ಡಿಸ್ಚಾರ್ಜ್ (Discharged) ಆದ ನಂತರ ಚುನಾವಣೆ ಪ್ರಚಾರಕ್ಕೆ ತೆರಳೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

    ಲೋಸಕಭಾ ಚುನಾವಣೆಯ ಪ್ರಚಾರ ಮತ್ತು ಸತತ ಚಿತ್ರೀಕರಣದಿಂದಾಗಿ ಸುಸ್ತಾಗಿದ್ದ ನಟ ಶಿವರಾಜ್ ಕುಮಾರ್ (Shivaraj Kumar) ಒಂದು ದಿನ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ನಿನ್ನೆ ಆಸ್ಪತ್ರೆಗೆ (hospital) ದಾಖಲಾಗಿ ಚಿಕಿತ್ಸೆ ಪಡೆದು ಇಂದು ಮನೆಗೆ ವಾಪಸ್ಸಾಗಿದ್ದಾರೆ.

     

    ದೇವನಹಳ್ಳಿ ಬಳಿ ಚಿತ್ರೀಕರಣದ ವೇಳೆ ಶಿವರಾಜ್ ಕುಮಾರ್ ಅವರಿಗೆ ಸುಸ್ತಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಲವು ಪರೀಕ್ಷೆಗಳನ್ನ ಮಾಡಿಸಿ ರಿಪೋರ್ಟ್ ಪಡೆದು, ಮತ್ತೆ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ ಶಿವಣ್ಣ. ಆದರೆ, ಶೂಟಿಂಗ್ ಸೆಟ್ ನಲ್ಲಿ ಬಹಳಷ್ಟು ಧೂಳು ಆವರಿಸಿ ಮತ್ತೆ ಸುಸ್ತಾಗಿದ್ದಾರೆ ಎಂದು ಹೇಳಲಾಗುತ್ತಿದೆ.

  • ಶಿವಣ್ಣ ಅನಾರೋಗ್ಯ: ಆಸ್ಪತ್ರೆಯಿಂದ ಡಿಸ್ಚಾರ್ಜ್

    ಶಿವಣ್ಣ ಅನಾರೋಗ್ಯ: ಆಸ್ಪತ್ರೆಯಿಂದ ಡಿಸ್ಚಾರ್ಜ್

    ನಾರೋಗ್ಯದಿಂದಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಶಿವರಾಜ್ ಕುಮಾರ್ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ಯಾವುದೇ ಗಂಭೀರ ಸಮಸ್ಯೆ ಇಲ್ಲ ಮತ್ತು ಕಿಡ್ನಿ ಸ್ಟೋನ್ ಆಗಿತ್ತು ಎನ್ನುವ ಮಾಹಿತಿ ಇದೆ. ಡಿಸ್ಚಾರ್ಜ್ (Discharged) ಆದ ನಂತರ ಚುನಾವಣೆ ಪ್ರಚಾರಕ್ಕೆ ತೆರಳೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

    ಲೋಸಕಭಾ ಚುನಾವಣೆಯ ಪ್ರಚಾರ ಮತ್ತು ಸತತ ಚಿತ್ರೀಕರಣದಿಂದಾಗಿ ಸುಸ್ತಾಗಿದ್ದ ನಟ ಶಿವರಾಜ್ ಕುಮಾರ್ (Shivaraj Kumar) ಒಂದು ದಿನ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ನಿನ್ನೆ ಆಸ್ಪತ್ರೆಗೆ (hospital) ದಾಖಲಾಗಿ ಚಿಕಿತ್ಸೆ ಪಡೆದು ಇಂದು ಮನೆಗೆ ವಾಪಸ್ಸಾಗಲಿದ್ದಾರೆ.

    ದೇವನಹಳ್ಳಿ ಬಳಿ ಚಿತ್ರೀಕರಣದ ವೇಳೆ ಶಿವರಾಜ್ ಕುಮಾರ್ ಅವರಿಗೆ ಸುಸ್ತಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಲವು ಪರೀಕ್ಷೆಗಳನ್ನ ಮಾಡಿಸಿ ರಿಪೋರ್ಟ್ ಪಡೆದು, ಮತ್ತೆ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ ಶಿವಣ್ಣ. ಆದರೆ, ಶೂಟಿಂಗ್ ಸೆಟ್ ನಲ್ಲಿ ಬಹಳಷ್ಟು ಧೂಳು ಆವರಿಸಿ ಮತ್ತೆ ಸುಸ್ತಾಗಿದ್ದಾರೆ ಎಂದು ಹೇಳಲಾಗುತ್ತಿದೆ.

     

    ನಿನ್ನೆ ಚಿಕಿತ್ಸೆ ಪಡೆದು ಇಂದು ಬೆಳಿಗ್ಗೆ ಮನೆಗೆ ತೆರಳಲಿದ್ದಾರೆ ಶಿವರಾಜ್ ಕುಮಾರ್. ಚಿಕಿತ್ಸೆ ನಂತರ ಶಿವರಾಜ್ ಕುಮಾರ್ ಆರಾಮಾಗಿದ್ದಾರೆ. ಯಾವುದೇ ಆತಂಕ ಪಡುವಂಥದ್ದು ಇಲ್ಲ ಎಂದಿದ್ದರು ಆಪ್ತರು.

  • ಮಾಜಿ ಪ್ರಧಾನಿ ಹೆಚ್‌ಡಿಡಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌

    ಮಾಜಿ ಪ್ರಧಾನಿ ಹೆಚ್‌ಡಿಡಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌

    ಬೆಂಗಳೂರು: ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ (HD Devegowda) ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ.

    ಸುಸ್ತು, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಹೆಚ್‌ಡಿಡಿ ಅವರು ಮಣಿಪಾಲ್ ಆಸ್ಪತ್ರೆ ಗೆ ದಾಖಲಾಗಿದ್ದರು. ಕಳೆದ ಎರಡು ದಿನಗಳಿಂದ ಹೆಚ್‌ಡಿಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಡಾ. ಸತ್ಯನಾರಾಯಣ ಮೈಸೂರು ನೇತೃತ್ವದ ತಂಡದಿಂದ ದೇವೇಗೌಡರಿಗೆ ಚಿಕಿತ್ಸೆ ನೀಡಿದೆ.

    ಇದೀಗ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದ ಹಿನ್ನೆಲೆಯಲ್ಲಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಸದ್ಯ ಪದ್ಮನಾಭನಗರದ ಮನೆಗೆ ಹೆಚ್‌ಡಿಡಿ ತೆರಳಿ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ. ಇದನ್ನೂ ಓದಿ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಆಸ್ಪತ್ರೆಗೆ ದಾಖಲು

  • ಅಮೆಜಾನ್ ಕಾಡಲ್ಲಿ 40 ದಿನಗಳ ಬಳಿಕ ಪತ್ತೆಯಾಗಿ ಆಸ್ಪತ್ರೆ ಸೇರಿದ್ದ ಮಕ್ಕಳು ಡಿಸ್ಚಾರ್ಜ್

    ಅಮೆಜಾನ್ ಕಾಡಲ್ಲಿ 40 ದಿನಗಳ ಬಳಿಕ ಪತ್ತೆಯಾಗಿ ಆಸ್ಪತ್ರೆ ಸೇರಿದ್ದ ಮಕ್ಕಳು ಡಿಸ್ಚಾರ್ಜ್

    ಬೊಗೋಟಾ: ದಕ್ಷಿಣ ಕೊಲಂಬಿಯಾದ (South Colombia) ಅಮೆಜಾನ್ ಕಾಡು (Amazon Forest) ಪ್ರದೇಶದಲ್ಲಿ ನಡೆದ ವಿಮಾನ ಅಪಘಾತದಲ್ಲಿ (Plane Crash) ಬದುಕುಳಿದ ನಾಲ್ವರು ಕೊಲಂಬಿಯಾ ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಶುಕ್ರವಾರ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.

    ಅಮೆಜಾನ್ ಕಾಡು ಪ್ರದೇಶದಲ್ಲಿ ನಡೆದ ವಿಮಾನ ದುರಂತದಲ್ಲಿ ಲೆಸ್ಲಿ (13), ಸೋಲಿನಿ (9), ಟಿಯೆನ್ ನೊರಿಯಲ್ (5) ಮತ್ತು ಬೇಬಿ ಕ್ರಿಸ್ಟಿನ್ (1) ಎಂಬ ಮಕ್ಕಳು ಬದುಕುಳಿದಿದ್ದು, ಅವರ ತಾಯಿ ಮತ್ತು ಇನ್ನಿಬ್ಬರು ಮೃತಪಟ್ಟಿದ್ದರು. ಕಾಡಿನಲ್ಲಿ ಸತತ 40 ದಿನಗಳು ಕಳೆದ ಈ ಮಕ್ಕಳನ್ನು ಪತ್ತೆಹಚ್ಚಿ ಬೊಗೊಟಾ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿತ್ತು. ಇದೀಗ ಮಕ್ಕಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಶುಕ್ರವಾರ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಇದನ್ನೂ ಓದಿ: Twitter Monetisation: ಕಂಟೆಂಟ್‌ ಕ್ರಿಯೇಟರ್ಸ್‌ಗಳಿಗೆ ಟ್ವಿಟ್ಟರ್‌ನಿಂದ ಸಿಗುತ್ತೆ ಹಣ – ಹೇಗೆ ಅಂತೀರಾ..?

    ನೊರಿಯಲ್ ಮತ್ತು ಬೇಬಿ ಕ್ರಿಸ್ಟಿನ್ ತಂದೆಯಾದ ಮ್ಯಾನುಯೆಲ್ ರಾನೋಕ್ ಮಕ್ಕಳ ಚೇತರಿಕೆ ಕಂಡು ಸಂತಸ ವ್ಯಕ್ತಪಡಿಸಿದ್ದು, ಕೃತಜ್ಞತೆಯನ್ನು ಸಲ್ಲಿಸಿದರು. ನನ್ನ ಮಕ್ಕಳನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಿದ್ದು, ಅವರು ನನ್ನೊಂದಿಗೆ ಇರುವುದಿಲ್ಲ. ಬದಲಾಗಿ ಕುಟುಂಬ ಕಲ್ಯಾಣ ಸಂಸ್ಥೆಯು ಅವರನ್ನು ನೋಡಿಕೊಳ್ಳುತ್ತದೆ. ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಆರೋಗ್ಯವಾಗಿರುವುದು ನನಗೆ ತುಂಬಾ ಸಂತಸವನ್ನು ಉಂಟುಮಾಡಿದೆ ಎಂದು ಮ್ಯಾನುಯೆಲ್ ರಾನೋಕ್ ತಿಳಿಸಿದ್ದಾರೆ. ಇದನ್ನೂ ಓದಿ: Miracle: ಅಪಘಾತಕ್ಕೀಡಾಗಿ ಬೇರ್ಪಟ್ಟ ತಲೆಯನ್ನು ಜೋಡಿಸಿ ಯಶಸ್ವಿಯಾದ ವೈದ್ಯರು!

    ಮಕ್ಕಳನ್ನು 6 ತಿಂಗಳ ಕಾಲ ತಾತ್ಕಾಲಿಕವಾಗಿ ನೋಡಿಕೊಳ್ಳುವ ಕೊಲಂಬಿಯಾದ ಕುಟುಂಬ ಕಲ್ಯಾಣ ಸಂಸ್ಥೆಯು ನಾಲ್ವರು ಮಕ್ಕಳನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂಬುದನ್ನು ಖಚಿತಪಡಿಸಿದೆ. ಇನ್ಸ್ಟಿಟ್ಯೂಟ್‌ ನಿರ್ದೇಶಕರಾಗಿರುವ ಆಸ್ಟ್ರಿಡ್‌ ಈ ಕುರಿತು ಮಾಹಿತಿ ನೀಡಿದ್ದು, ಮಕ್ಕಳು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಅಲ್ಲದೇ ಅಮೆಜಾನ್‌ನಲ್ಲಿ 40 ದಿನ ಅಲೆದಾಡಿದ್ದ ಇವರಲ್ಲಿ ತೀವ್ರತರ ದೈಹಿಕ ಸಮಸ್ಯೆ ಈಗ ಕಾಣಿಸುತ್ತಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಟೆಸ್ಟಿಂಗ್‌ ವೇಳೆ ರಾಕೆಟ್‌ ಎಂಜಿನ್‌ ಸ್ಫೋಟ – ಜಪಾನ್‌ ಬಾಹ್ಯಾಕಾಶ ಸಂಸ್ಥೆಗೆ ಮತ್ತೆ ನಿರಾಸೆ

    ವಿಮಾನ ಪತನದ ಬಳಿಕ ಈ ಮಕ್ಕಳು ಅಮೆಜಾನ್ ಕಾಡಿನಲ್ಲಿ ನಾಪತ್ತೆಯಾಗಿದ್ದರು. ಇವರನ್ನು ಹುಡುಕುವ ಸಲುವಾಗಿ ಸುಮಾರು 200 ಮಿಲಿಟರಿ ಮತ್ತು ಸ್ಥಳೀಯ ರಕ್ಷಕರನ್ನು ಒಳಗೊಂಡಿದ್ದ ರಕ್ಷಣಾ ಕಾರ್ಯಾಚರಣಾ ತಂಡವು ಅಮೆಜಾನ್ ಕಾಡಿನಲ್ಲಿ ಶೋಧಕಾರ್ಯವನ್ನು ನಡೆಸಿತ್ತು. ಇದನ್ನೂ ಓದಿ: ಇನ್ನು ಮುಂದೆ ಫ್ರಾನ್ಸ್‌ನಲ್ಲೂ ರೂಪಾಯಿಯಲ್ಲೇ ವ್ಯವಹಾರ ಮಾಡಬಹುದು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಆಸ್ಪತ್ರೆಯಿಂದ ಡಿಸ್ಚಾರ್ಜ್

    ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಆಸ್ಪತ್ರೆಯಿಂದ ಡಿಸ್ಚಾರ್ಜ್

    ಬೆಂಗಳೂರು: ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ (HD Devegowda) ರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

    ಮೊಣಕಾಲು ನೋವಿಗೆ ಚಿಕಿತ್ಸೆಗಾಗಿ ಕಳೆದ ಐದು ದಿನಗಳಿಂದ ಮಾಜಿ ಪ್ರಧಾನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮುಂಜಾನೆಯೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ. ಇದನ್ನೂ ಓದಿ: ಹೆಬ್ಬಾಳ್ಕರ್, ಡಿಕೆಶಿ ಎಲ್ಲರೂ ಒಟ್ಟಾಗಿಯೇ ಪಕ್ಷದ ಕೆಲಸ ಮಾಡ್ತಿದ್ವಿ: ರಮೇಶ್ ಜಾರಕಿಹೊಳಿ

    ಫೆಬ್ರವರಿ 28ರಂದು ಕಾಲು ಊತ ಜಾಸ್ತಿ ಆಗಿದ್ದ ಕಾರಣ ದೇವೇಗೌಡರು ಜನರಲ್ ಚೆಕಪ್‍ (General Checkup) ಗೆಂದು ಬೆಂಗಳೂರಿನ ಆಸ್ಪತ್ರೆಗೆ ಹೋಗಿದ್ದರು. ಈ ಸಂದರ್ಭ ವೈದ್ಯರು ಪರಿಶೀಲಿಸಿ ಒಂದು ವಾರದ ಕಾಲ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದರು.

  • ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಕಟ್ಟಪ್ಪ

    ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಕಟ್ಟಪ್ಪ

    ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ ಸತ್ಯರಾಜ್ ಅವರು ಕೆಲವು ದಿನಗಳ ಹಿಂದೆ ಕೋವಿಡ್ -19 ಸೋಂಕಿಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರು ಮಂಗಳವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಅವರ ಪುತ್ರ ಸಿಬಿ ಸತ್ಯರಾಜ್ ತಿಳಿಸಿದ್ದಾರೆ.

    ಸತ್ಯರಾಜ್ (67) ವರ್ಷದ ಹಿರಿಯ ನಟರಾಗಿದ್ದಾರೆ. ನಟನಿಗೆ ಕೋವಿಡ್ -19 ಸೋಂಕು ಇರುವುದಾಗಿ ಪತ್ತೆ ಆಗಿದ್ದು, ಚೆನ್ನೈನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದನ್ನೂ ಓದಿ: ಡಿಸೆಂಬರ್ 1 ರಿಂದ ಜಿಯೋ ದುಬಾರಿ – ಹಿಂದೆ ಎಷ್ಟಿತ್ತು? ಈಗ ಎಷ್ಟು ಏರಿಕೆಯಾಗಿದೆ?

    ಆಸ್ಪತ್ರೆಗೆ ದಾಖಲಾದ ನಂತರ ಹಿರಿಯ ತಾರೆ ಸಂಪೂರ್ಣವಾಗಿ ಚೆನ್ನಾಗಿದ್ದಾರೆ. ಕೆಲವೇ ದಿನಗಳಲ್ಲಿ ನಿಮ್ಮ ಮುಂದೆ ನಟಿಸಲು ಸಜ್ಜಾಗುತ್ತಿದ್ದಾರೆ. ಅಪ್ಪ ನಿನ್ನೆ ರಾತ್ರಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಮನೆಗೆ ಮರಳಿದ್ದಾರೆ. ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಸ್ವಲ್ಪ ದಿನಗಳ ವಿಶ್ರಾಂತಿಯ ನಂತರ ಮತ್ತೆ ಚಿತ್ರರಂಗದಲ್ಲಿ ಕೆಲಸವನ್ನು ಪುನರಾರಂಭಿಸುತ್ತಾರೆ. ಪ್ರೀತಿ, ಬೆಂಬಲಕ್ಕೆ ಎಲ್ಲರಿಗೂ ಧನ್ಯವಾದಗಳು ಎಂದು ಬರೆದು ಅವರ ಮಗ ಟ್ವೀಟ್ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಶೇ.100 ಎಫ್‍ಡಿಐಗೆ ಸರ್ಕಾರದ ಅನುಮತಿ ಬೇಕಿಲ್ಲ – ಟೆಲಿಕಾಂ ಕಂಪನಿಗಳಿಗೆ ಹಲವು ಕೊಡುಗೆ ನೀಡಿದ ಕೇಂದ್ರ

    ಎಸ್‍ಎಸ್ ರಾಜಮೌಳಿ ಅವರ ಬಾಹುಬಲಿ ಚಲನಚಿತ್ರದಲ್ಲಿ ಕಟ್ಟಪ್ಪ ಪಾತ್ರಕ್ಕಾಗಿ ವಿಶ್ವಾದ್ಯಂತ ಖ್ಯಾತಿ ಪಡೆದುಕೊಂಡಿದ್ದರು. ಅವರು ವೇದಂ ಪುದಿತ್ತು, ತಾಯಿ ನಾಡು, ನಾಡಿಗನ್, ಅಮೈದಿ ಪಡೈ, ಪೆರಿಯಾರ್ ಮತ್ತು ಒಂಬದು ರೂಬೈ ನೋಟು ಮುಂತಾದ ಚಲನಚಿತ್ರಗಳಲ್ಲಿ ನಟಿಸಿ ಹೆಸರು ವಾಸಿಯಾದವರು.

    ಅವರ ಮಗನ ಮತ್ತೊಂದು ಟ್ವಿಟ್ಟರ್ ಪೋಸ್ಟ್ ನಲ್ಲಿ, ಹಿರಿಯ ನಟ ಯಾವುದೇ ಸಾಮಾಜಿಕ ಮಾಧ್ಯಮ ಪ್ಲಾಟ್‍ಫಾರ್ಮ್‍ನಲ್ಲಿ ಉಪಸ್ಥಿತಿಯನ್ನು ಹೊಂದಿಲ್ಲ. ಅವರ ಯಾವುದೇ ಖಾತೆಯನ್ನು ಅನ್‍ಫಾಲೋ, ಬ್ಲಾಕ್ ಮತ್ತು  ರಿಪೋರ್ಟ್ ಮಾಡುವಂತೆ ಅವರ ಅಭಿಮಾನಿಗಳಿಗೆ ಕೇಳಿಕೊಂಡಿದ್ದಾರೆ ಎಂದು ಸ್ಪಷ್ಟಪಡಿಸಿದ್ದರು.

  • ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಿರುವ ಮೊದಲ ಓಮಿಕ್ರಾನ್ ಸೋಂಕಿತ

    ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಿರುವ ಮೊದಲ ಓಮಿಕ್ರಾನ್ ಸೋಂಕಿತ

    ಮುಂಬೈ: ಕೊರೊನಾ ರೂಪಾಂತರಿ ತಳಿ ಓಮಿಕ್ರಾನ್ ಸೋಂಕಿಗೆ ಒಳಗಾಗಿದ್ದ ಪುಣೆಯ ವ್ಯಕ್ತಿಗೆ ನೆಗಟಿವ್ ವರದಿ ಬಂದಿದ್ದು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಿದ್ದಾರೆ.

    ಗುರುವಾರ ಸವೆನ್ ಹಿಲ್ ಆಸ್ಪತ್ರೆಯಲ್ಲಿ ನಡೆಸಿದ ಕೊರೊನಾ ಪರೀಕ್ಷೆಯಲ್ಲಿ ರೋಗಿಗೆ ನೆಗೆಟಿವ್ ವರದಿ ಬಂದಿದ್ದು, ಓಮಿಕ್ರಾನ್‍ನಿಂದ ಗುಣಮುಖರಾಗಿ ಶೀಘ್ರ ಮನೆಗೆ ಹಿಂದಿರುಗುತ್ತಿದ್ದಾರೆ ಎಂದು ಮಹಾರಾಷ್ಟ್ರದ ಪುಣೆ ಮಹಾನಗರ ಪಾಲಿಕೆಯ ಸಹಾಯಕ ವೈದ್ಯಾಧಿಕಾರಿ ಡಾ.ಸಂಜೀವ್ ವಾವರೆ ಹೇಳಿದ್ದಾರೆ. ಇದನ್ನೂ ಓದಿ: ಮೆಕ್ಸಿಕೋ ಅಪಘಾತ – 49 ಮಂದಿ ಸಾವು, 58 ಮಂದಿಗೆ ಗಾಯ

    ರೋಗಿಗೆ 40 ವರ್ಷ ವಯಸ್ಸಾಗಿದ್ದು, ಇವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಿರುವ ಮೊದಲ ಓಮಿಕ್ರಾನ್ ಸೋಂಕಿತರಾಗಿದ್ದಾರೆ. ಸದ್ಯ ಮನೆಗೆ ಹಿಂದಿರುಗುತ್ತಿರುವ ಬಗ್ಗೆ ರೋಗಿ ಸಂತಸ ವ್ಯಕ್ತಪಡಿಸಿದ್ದಾರೆ ಮತ್ತು ರೋಗಿಯ ಜೊತೆಗೆ ಸಂಪರ್ಕ ಹೊಂದಿದ್ದ 40 ಮಂದಿಯಲ್ಲಿ ಯಾರಿಗೂ ಸಹ ಕೊರೊನಾ ದೃಢಪಟ್ಟಿರಲಿಲ್ಲ. ರೋಗಿ ಜೂನ್‍ನಲ್ಲಿ ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದ ಎಂದು ತಿಳಿಸಲಾಗಿದೆ. ಸದ್ಯ ರೋಗಿ ಯಾವುದೇ ಗುಣಲಕ್ಷಣಗಳಿಲ್ಲದೇ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಿದ್ದಾರೆ. ಇದನ್ನೂ ಓದಿ:  ಕೇರಳದ ಆಲಪ್ಪುಳದಲ್ಲಿ ಹಕ್ಕಿಜ್ವರ – ಕೋಳಿ, ಮೊಟ್ಟೆ ನಾಶಕ್ಕೆ ಸರ್ಕಾರ ಆದೇಶ

    ಪುಣೆಯಲ್ಲಿ ಪತ್ತೆಯಾದ ಮೊದಲ ಓಮಿಕ್ರಾನ್ ಸೋಂಕಿಗೆ ಒಳಗಾಗಿದ್ದ ಇವರಿಗೆ 10 ದಿನಗಳ ಕ್ವಾರಂಟೈನ್ ಬಳಿಕ ಗುರುವಾರ ಕೊರೊನಾ ನೆಗೆಟಿವ್ ಬಂದಿದೆ. ಸದ್ಯ ಮಹಾರಾಷ್ಟ್ರದಲ್ಲಿ ಗುರುವಾರ ಯಾವುದೇ ಕೊರೊನಾ ಹೊಸ ಪ್ರಕರಣಗಳು ಪತ್ತೆಯಾಗಿಲ್ಲ. ಅದನ್ನು ಹೊರತುಪಡಿಸಿ ರಾಜ್ಯದಲ್ಲಿ ಒಟ್ಟು 10 ಓಮಿಕ್ರಾನ್ ಪ್ರಕರಣಗಳು ದಾಖಲಾಗಿದೆ. ಇನ್ನೂ ಓಮಿಕ್ರಾನ್ ಭೀತಿಯಿಂದ ವಿಮಾನ ನಿಲ್ದಾಣಕ್ಕೆ ಆಗಮಿಸುವ ವಿದೇಶಿಗರನ್ನು ಕ್ವಾರಂಟೈನ್‍ಗೊಳಿಸಲಾಗುತ್ತಿದೆ.

  • ಕೊರೊನಾ ಚೇತರಿಕೆ ನಂತ್ರ ಕಮಲ್ ಹಾಸನ್ ಆಸ್ಪತ್ರೆಯಿಂದ ಡಿಸ್ಚಾರ್ಜ್

    ಕೊರೊನಾ ಚೇತರಿಕೆ ನಂತ್ರ ಕಮಲ್ ಹಾಸನ್ ಆಸ್ಪತ್ರೆಯಿಂದ ಡಿಸ್ಚಾರ್ಜ್

    ಚೆನ್ನೈ: ಕಾಲಿವುಡ್ ನಟ ಕಮಲ್ ಹಾಸನ್ ಅವರು ಎರಡು ವಾರಗಳ ಬಳಿಕ ಕೊರೊನಾ ವೈರಸ್‍ನಿಂದ ಚೇತರಿಸಿಕೊಂಡು ಇಂದು ಚೆನ್ನೈನ ಶ್ರೀ ರಾಮಚಂದ್ರ ವೈದ್ಯಕೀಯ ಕೇಂದ್ರದಿಂದ ಡಿಸ್ಚಾರ್ಜ್ ಆಗಿದ್ದಾರೆ.

    ಕಮಲ್ ಹಾಸನ್ ಆಸ್ಪತ್ರೆಯಿಂದ ಹೊರಬರುತ್ತಿರುವ ಫೋಟೋಗಳು ಮತ್ತು ವೀಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಕಮಲ್ ಹಾಸನ್ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಕುರಿತ ಮಾಹಿತಿಯನ್ನು ತಮ್ಮ ಟ್ವಿಟ್ಟರ್‌ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಕೊಹ್ಲಿ ಪುತ್ರಿಯನ್ನು ರೇಪ್ ಮಾಡ್ತಿನಿ ಅಂದಿದ್ದ ಐಐಟಿ ಪದವೀಧರನಿಗೆ ಜಾಮೀನು

    ನವೆಂಬರ್ 22 ರಂದು ಕಮಲ್ ಹಾಸನ್ ಅವರಿಗೆ ಕೊರೊನಾ ವೈರಸ್ ದೃಢಪಟ್ಟ ನಂತರ ಅವರು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನವೆಂಬರ್‍ನಲ್ಲಿ ಕಮಲ್ ಹಾಸನ್ ಅವರು ಯುಎಸ್‍ನ ಚಿಕಾಗೋದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದರು. ನಂತರ ಹಿಂದಿರುಗಿದ ಬಳಿಕ ಅವರಿಗೆ ಸ್ವಲ್ಪ ಕೆಮ್ಮು ಕಾಣಿಸಿಕೊಂಡಿತ್ತು. ಅವರು ಎರಡು ವಾರಗಳ ಕಾಲ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿದ್ದರು. ಇದನ್ನೂ ಓದಿ: ನಟ ಕಮಲ್ ಹಾಸನ್‍ಗೆ ಕೊರೊನಾ ಸೋಂಕು ದೃಢ

    ಇಂದು ಕಮಲ್ ಹಾಸನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಮನೆಗೆ ಹೋಗುವ ಮುನ್ನ ಆಸ್ಪತ್ರೆಯ ಹೊರಗೆ ತಮಗೆ ಚಿಕಿತ್ಸೆ ನೀಡಿದ ವೈದ್ಯರೊಂದಿಗೆ ಫೋಟೋ ತೆಗೆಸಿಕೊಂಡರು. ಇದೀಗ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳು ಸಾಧ್ಯವಾದಷ್ಟು ನಮ್ಮನ್ನು ರಕ್ಷಿಸುತ್ತದೆ. ಅದನ್ನು ಮೀರಿ ಅಸ್ವಸ್ಥರಾದರೆ, ನಾವು ತೆಗೆದುಕೊಳ್ಳುವ ಕ್ರಮ ನಮ್ಮನ್ನು ತ್ವರಿತವಾಗಿ ಗುಣಪಡಿಸಬಹುದು. ನಾನು ಸದ್ಯ ಸೋಂಕಿನಿಂದ ಚೇತರಿಸಿಕೊಳ್ಳುತ್ತಿದ್ದೇನೆ ಎಂದು ತಿಳಿಸಿದ್ದಾರೆ.

  • ಆಸ್ಪತ್ರೆಯಿಂದ ರಜನಿಕಾಂತ್ ಡಿಸ್ಚಾರ್ಜ್ – ಮನೆಗೆ ಆಗಮಿಸಿ ದೇವರಿಗೆ ಪ್ರಾರ್ಥನೆ

    ಆಸ್ಪತ್ರೆಯಿಂದ ರಜನಿಕಾಂತ್ ಡಿಸ್ಚಾರ್ಜ್ – ಮನೆಗೆ ಆಗಮಿಸಿ ದೇವರಿಗೆ ಪ್ರಾರ್ಥನೆ

    ಚೆನ್ನೈ: ಅನಾರೋಗ್ಯ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ ಕಾಲಿವುಡ್ ಸೂಪರ್ ಸ್ಟಾರ್ ನಟ ರಜನಿಕಾಂತ್ ಭಾನುವಾರ ಡಿಸ್ಚಾರ್ಜ್ ಆಗಿದ್ದಾರೆ.

    ತೀವ್ರ ಅನಾರೋಗ್ಯದ ಹಿನ್ನೆಲೆ ಗುರುವಾರ ರಜನಿಕಾಂತ್ ಅವರನ್ನು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಅವರು ಇದೀಗ ಡಿಸ್ಚಾರ್ಜ್ ಆಗಿದ್ದು, ಫೋಟೋವೊಂದನ್ನು ತಮ್ಮ ಟ್ವಿಟ್ಟರ್‍ನಲ್ಲಿ ಹಂಚಿಕೊಂಡಿದ್ದಾರೆ. ಫೋಟೋದಲ್ಲಿ ರಜನಿಕಾಂತ್, ತಮ್ಮ ಮನೆಯಲ್ಲಿರುವ ದೇವರ ಕೋಣೆ ಮುಂದೆ ನಿಂತು ಪ್ರಾರ್ಥಿಸುತ್ತಿರುವುದನ್ನು ಕಾಣಬಹುದಾಗಿದೆ. ಜೊತೆಗೆ ಕ್ಯಾಪ್ಷನ್‍ನಲ್ಲಿ ಮನೆಗೆ ಮರಳಿದೆ ಎಂದು ಬರೆದುಕೊಂಡಿದ್ದಾರೆ.

    ಅಕ್ಟೋಬರ್ 28ರಂದು ಆರೋಗ್ಯ ತಪಾಸಣೆಗಾಗಿ ರಜನಿಕಾಂತ್ ಅವರಿಗೆ ಎದೆಯ ಭಾಗದಲ್ಲಿ ನೋವು ಮತ್ತು ಸುಸ್ತು ಕಾಣಿಸಿಕೊಂಡಿತ್ತು, ಹೀಗಾಗಿ ಅವರನ್ನು ಮುಂಜಾಗ್ರತಾ ಕ್ರಮವಾಗಿ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಮಿದುಳಿನ ರಕ್ತ ಸಂಚಾರ ವ್ಯವಸ್ಥೆಯನ್ನು ಸಹಜ ಸ್ಥಿತಿಗೆ ತರಲು ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಇದೀಗ ರಜನಿಕಾಂತ್ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

    ಈ ಮುನ್ನ 2020ರ ಡಿಸೆಂಬರ್‌ನಲ್ಲಿ ರಜನಿಕಾಂತ್ ಅವರಿಗೆ ರಕ್ತದೊತ್ತಡದಲ್ಲಿ ಏರುಪೇರು ಆಗಿದ್ದರಿಂದ ಹೈದರಾಬಾದ್‍ನ ಅಪೋಲೋ ಆಸ್ಪತ್ರೆಗೆ ದಾಕಲಿಸಲಾಯಿತು. ಮತ್ತೆ ಕಳೆದ ವಾರ ರಜನಿ ಆಸ್ಪತ್ರೆಗೆ ದಾಖಲಾಗಿದ್ದರಿಂದ ಅಭಿಮಾನಿಗಳಲ್ಲಿ ಬಾರೀ ಕಳವಳವುಂಟಾಗಿತ್ತು. ಇದನ್ನೂ ಓದಿ: ಗಡಿ ಜಿಲ್ಲೆ ಯಾದಗಿರಿಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ

    ಸದ್ಯ ರಜನಿಕಾಂತ್ ಅಭಿನಯದ ಬಹು ನಿರೀಕ್ಷಿತ ಅಣ್ಣಾತ್ತೆ ಸಿನಿಮಾ ಬಿಡುಗಡೆಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಈ ಸಿನಿಮಾ ನವೆಂಬರ್ 4ರಂದು ದೀಪಾವಳಿ ಹಬ್ಬದಂದು ಚಿತ್ರಮಂದಿರಗಳಲ್ಲಿ ಬಿಡುಗಡೆಗೊಳ್ಳಲಿದೆ. ಇದನ್ನೂ ಓದಿ: ಸೂಪರ್ ಸ್ಟಾರ್ ರಜನಿಕಾಂತ್ ಆಸ್ಪತ್ರೆಗೆ ದಾಖಲು

  • 92ರ ವೃದ್ಧೆ, 9ರ ಬಾಲಕಿ ಸೇರಿ ಒಂದೇ ಕುಟುಂಬದ 11 ಸೋಂಕಿತರು ಗುಣಮುಖ, ಆಸ್ಪತ್ರೆಯಿಂದ ಡಿಸ್ಚಾರ್ಜ್

    92ರ ವೃದ್ಧೆ, 9ರ ಬಾಲಕಿ ಸೇರಿ ಒಂದೇ ಕುಟುಂಬದ 11 ಸೋಂಕಿತರು ಗುಣಮುಖ, ಆಸ್ಪತ್ರೆಯಿಂದ ಡಿಸ್ಚಾರ್ಜ್

    ಶಿವಮೊಗ್ಗ: ಕೊರೊನಾ ಸೋಂಕಿಗೆ ಈಡಿ ದೇಶವೇ ತಲ್ಲಣಗೊಂಡಿದೆ. ಪ್ರತಿನಿತ್ಯ ಎಲ್ಲೆಡೆ ಸಾವು ನೋವುಗಳದ್ದೆ ಸುದ್ದಿ ಸದ್ದು ಮಾಡುತ್ತಿದೆ. ಇದರಿಂದಾಗಿ ಜನರು ಸಹ ಭಯಭೀತರಾಗಿದ್ದಾರೆ. ಆಕ್ಸಿಜನ್ ಸಿಗದೆ ನರಳಾಡಿ ಸಾವನ್ನಪ್ಪುತ್ತಿದ್ದಾರೆ. ಇಂತಹ ಪರಿಸ್ಥಿತಿ ನಡುವೆ ಒಂದೇ ಕುಟುಂಬದ 11 ಮಂದಿ ಕೊರೊನಾ ಸೋಂಕಿಗೆ ತುತ್ತಾಗಿ ಜಯಿಸಿ ಬಂದಿದ್ದಾರೆ.

    ಜಿಲ್ಲೆಯ ಶಿಕಾರಿಪುರ ತಾಲೂಕಿನ ಮಾರಗೊಂಡನಕೊಪ್ಪ ಗ್ರಾಮದ ಒಂದೇ ಕುಟುಂಬದ 92 ವರ್ಷದ ವೃದ್ದೆಯಿಂದ ಹಿಡಿದು 9 ವರ್ಷದ ಬಾಲಕಿ ಸೇರಿದಂತೆ 11 ಮಂದಿ ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಸೋಂಕಿಗೆ ಒಳಗಾದ ಎಲ್ಲರೂ ಚಿಕಿತ್ಸೆಗಾಗಿ ಶಿಕಾರಿಪುರ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಎಲ್ಲರೂ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

    ಇದೇ ತಿಂಗಳ 4ರಂದು ಬೆಂಗಳೂರಿನಲ್ಲಿ ನಡೆದ ಸಂಬಂಧಿಕರ ಮನೆಯ ಮುಂಜಿ ಕಾರ್ಯಕ್ರಮವೊಂದರಲ್ಲಿ ಕುಟುಂಬದ 11 ಮಂದಿ ಸದಸ್ಯರಲ್ಲಿ ಕೆಲವರು ಭಾಗವಹಿಸಿದ್ದರು. ಅದೇ ದಿನ ದಾವಣಗೆರೆಯಲ್ಲಿ ನಡೆದ ಸಂಬಂಧಿಕರ ಸಮಾರಂಭದಲ್ಲಿ ಕೆಲವು ಮಂದಿ ಭಾಗವಹಿಸಿದ್ದರು. ಎಲ್ಲರೂ ಸಮಾರಂಭ ಮುಗಿಸಿಕೊಂಡು ಮನೆಗೆ ವಾಪಸ್ಸಾಗಿದ್ದರು. ಮನೆಗೆ ವಾಪಸ್ ಆದ ಬಳಿಕ ಕುಟುಂಬದಲ್ಲಿ ಮೊದಲು ಒಬ್ಬರಿಗೆ ಜ್ವರ ಕಾಣಿಸಿಕೊಂಡಿತ್ತು. ನಂತರ ಕೋವಿಡ್ ತಪಾಸಣೆಗೆ ಒಳಗಾದ ಬಳಿಕ ಕೊರೊನಾ ಸೋಂಕು ಇರುವುದು ಪತ್ತೆಯಾಗಿತ್ತು. ನಂತರ ಮನೆಯವರಿಗೆ ಎಲ್ಲರಿಗೂ ಕೊರೊನಾ ಸೋಂಕು ಪತ್ತೆಯಾಗಿತ್ತು.

    ಸೋಂಕು ಪತ್ತೆಯಾದ ಒಂದೇ ಕುಟುಂಬದ 11 ಮಂದಿಯನ್ನು ಆರೋಗ್ಯ ಇಲಾಖೆ ಸಿಬ್ಬಂದಿ ಶಿಕಾರಿಪುರ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿತ್ತು. ಇದೀಗ ಎಲ್ಲ 11 ಮಂದಿ ಕುಟುಂಬದ ಸದಸ್ಯರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಎಲ್ಲರೂ ಹೋಮ್ ಐಸಲೋಷನ್ ಗೆ ಒಳಗಾಗಿದ್ದಾರೆ. ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾಗಿರುವ ಕುಟುಂಬ ಕೋವಿಡ್ ಗೆ ಯಾರು ಭಯಪಡಬೇಡಿ. ಆದರೆ ಕೋವಿಡ್ ನಿಯಂತ್ರಿಸಲು ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿಕೊಂಡಿದೆ.