Tag: ಡಿಸ್ಚಾರ್ಜ್

  • ಇಂದು ರಾಜ್ಯದಲ್ಲಿ 5,356 ಮಂದಿಗೆ ಕೊರೊನಾ – 8,749 ಮಂದಿ ಡಿಸ್ಚಾರ್ಜ್

    ಇಂದು ರಾಜ್ಯದಲ್ಲಿ 5,356 ಮಂದಿಗೆ ಕೊರೊನಾ – 8,749 ಮಂದಿ ಡಿಸ್ಚಾರ್ಜ್

    ಬೆಂಗಳೂರು: ರಾಜ್ಯದ ಕಳೆದ ಒಂದು ವಾರದಿಂದ ಕೊರೊನಾ ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಳವಾಗಿದ್ದು, ಇಂದು ಸಹ 8,749 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

    ರಾಜ್ಯದಲ್ಲಿಂದು 5,356 ಹೊಸ ಪ್ರಕರಣಗಳು ವರದಿಯಾಗಿದ್ದು, ಸೋಂಕಿಗೆ 51 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 10,821 ಕ್ಕೇರಿದೆ. ರಾಜ್ಯದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 7,93,907ಕ್ಕೆ ಏರಿಕೆಯಾಗಿದ್ದು, 89,483 ಸಕ್ರಿಯ ಪ್ರಕರಣಗಳಿವೆ. 936 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇಂದು ರಾಜ್ಯದಲ್ಲಿ 1,08,356 ಸ್ಯಾಂಪಲ್ ಗಳನ್ನ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 17, ಬಳ್ಳಾರಿ 115, ಬೆಳಗಾವಿ 80, ಬೆಂಗಳೂರು ಗ್ರಾಮಾಂತರ 152, ಬೆಂಗಳೂರು ನಗರ 2688, ಬೀದರ್ 3, ಚಾಮರಾಜನಗರ 40, ಚಿಕ್ಕಬಳ್ಳಾಪುರ 108, ಚಿಕ್ಕಮಗಳೂರು 102, ಚಿತ್ರದುರ್ಗ 99, ದಕ್ಷಿಣ ಕನ್ನಡ 329, ದಾವಣಗೆರೆ 298, ಧಾರವಾಡ 92, ಗದಗ 12, ಹಾಸನ 109, ಹಾವೇರಿ 32, ಕಲಬುರಗಿ 62, ಕೊಡಗು 37, ಕೋಲಾರ 47, ಕೊಪ್ಪಳ 27, ಮಂಡ್ಯ 168, ಮೈಸೂರು 220, ರಾಯಚೂರು 70, ರಾಮನಗರ 11, ಶಿವಮೊಗ್ಗ 47, ತುಮಕೂರು 100, ಉಡುಪಿ 50, ಉತ್ತರ ಕನ್ನಡ 113, ವಿಜಯಪುರ 92 ಮತ್ತು ಯಾದಗಿರಿಯಲ್ಲಿ 36 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

    ಅಕ್ಟೋಬರ್ 15ರಿಂದ ಇಂದು ಸತತ 6ನೇ ದಿನ ರಾಜ್ಯದಲ್ಲಿ ಗುಣಮುಖ ಹೊಂದುತ್ತಿರುವವರ ಸಂಖ್ಯೆ ಹೊಸ ಪ್ರಕರಣಗಳ ಸಂಖ್ಯೆಯನ್ನು ಮೀರಿಸಿದೆ. ಇಂದು ರಾಜ್ಯಾದ್ಯಂತ ಒಟ್ಟು 1,08,356 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದ್ದು, ಅವುಗಳಲ್ಲಿ 86,741 ಅಂದರೆ ಶೇ.80 ಕ್ಕಿಂತ ಹೆಚ್ಚು ಟೆಸ್ಟ್ ಗಳು ಆರ್ ಟಿ-ಪಿಸಿಆರ್ ಪರೀಕ್ಷೆಗಳಾಗಿವೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

  • 71 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ – 61.49 ಲಕ್ಷಕ್ಕೂ ಅಧಿಕ ಮಂದಿ ಗುಣಮುಖ

    71 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ – 61.49 ಲಕ್ಷಕ್ಕೂ ಅಧಿಕ ಮಂದಿ ಗುಣಮುಖ

    – ಒಂದೇ ದಿನ 66,732 ಮಂದಿಗೆ ಕೊರೊನಾ

    ನವದೆಹಲಿ: ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 71 ಲಕ್ಷದ ಗಡಿ ದಾಟಿದೆ.

    ಕಳೆದ 24 ಗಂಟೆಯಲ್ಲಿ 66,732 ಮಂದಿಗೆ ಕೊರೊನಾ ಸೋಂಕು ದೃಢವಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 71,20,539ಕ್ಕೆ ಏರಿಯಾಗಿದೆ. ಇನ್ನೂ ಒಂದೇ ದಿನ 816 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

    71,20,539ರ ಪೈಕಿ 61,49,536 ಮಂದಿ ಈವರೆಗೂ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯಕ್ಕೆ 8,61,853 ಸಕ್ರಿಯ ಪ್ರಕರಣಗಳಿವೆ. 24 ಗಂಟೆಯಲ್ಲಿ 816 ಮಂದಿ ಸಾವನ್ನಪ್ಪಿದ್ದು, ಈವರೆಗೂ ದೇಶದಲ್ಲಿ 01,09,150 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

    ಭಾನುವಾರ 9,94,851 ಮಂದಿಯನ್ನು ಕೋವಿಡ್ ಟೆಸ್ಟ್‌ಗೆ ಒಳಪಡಿಸಲಾಗಿತ್ತು. ಇದುವರೆಗೂ 8,78,72,093 ಮಂದಿಯ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

  • ಗೋವಿಂದ್ ಕಾರಜೋಳ ಕೊರೊನಾದಿಂದ ಗುಣಮುಖ- ಆಸ್ಪತ್ರೆಯಿಂದ ಡಿಸ್ಚಾರ್ಜ್

    ಗೋವಿಂದ್ ಕಾರಜೋಳ ಕೊರೊನಾದಿಂದ ಗುಣಮುಖ- ಆಸ್ಪತ್ರೆಯಿಂದ ಡಿಸ್ಚಾರ್ಜ್

    – ಹೋಂ ಐಸೋಲೇಟ್ ಆಗಿರುವ ಡಿಸಿಎಂ

    ಬಾಗಲಕೋಟೆ: ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ ಕೊರೊನಾದಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

    ಈ ಕುರಿತು ಟ್ವೀಟ್ ಮಾಡುವ ಮೂಲಕ ಅವರು ಸ್ಪಷ್ಟಪಡಿಸಿದ್ದಾರೆ. ತಮ್ಮೆಲ್ಲರ ಶುಭ ಹಾರೈಕೆ ಹಾಗೂ ಭಗವಂತನ ಕೃಪೆಯಿಂದ ನಾನು ಗುಣಮುಖವಾಗಿದ್ದೇನೆ. ನನಗೆ ಚಿಕಿತ್ಸೆ ನೀಡಿದ ವೈದ್ಯರು ಹಾಗೂ ಮಗಳ ರೂಪದಲ್ಲಿ ಆರೈಕೆ ಮಾಡಿದ ಸ್ಟಾಫ್ ನರ್ಸ್ ಗಳಿಗೆ ಅಭಾರಿಯಾಗಿದ್ದೇನೆ. ಶೀಘ್ರ ಗುಣಮುಖವಾಗುವಂತೆ ಶುಭ ಹಾರೈಸಿದ ತಮ್ಮೆಲ್ಲರಿಗೂ ಅನಂತ ಧನ್ಯವಾದಗಳು. ವೈದ್ಯರ ಸಲಹೆಯ ಮೇರೆಗೆ ನಾನು ಹೋಮ್ ಕ್ವಾರಂಟೈನ್ ನಲ್ಲಿದ್ದು, ಮನೆಯಿಂದಲೇ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಇಲಾಖೆಗಳ ಕಾರ್ಯಚಟುವಟಿಕೆಗಳನ್ನು ಸುಗಮವಾಗಿ ಎಂದಿನಂತೆ ನಿರ್ವಹಿಸುತ್ತಿದ್ದೇನೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

    ಸೆಪ್ಟೆಂಬರ್ 22 ರಂದು ಕಾರಜೋಳ ಅವರಿಗೆ ಕೊರೊನಾ ಸೋಂಕು ದೃಢವಾಗಿತ್ತು. ಇದೀಗ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಹೋಂ ಐಸೋಲೇಟ್ ಆಗಿದ್ದಾರೆ. ಈ ಹಿನ್ನೆಲೆ ಮನೆಯಿಂದಲೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಉತ್ತಮ ಚಿಕಿತ್ಸೆಯಿಂದಾಗಿ ಗುಣಮುಖರಾಗಿರುವುದಾ ತಿಳಿಸಿದ್ದಾರೆ. ಅಲ್ಲದೆ ಕಡತಗಳಿಗೆ ಸಹಿ ಮಾಡುತ್ತಿರುವ ಫೋಟೋ ಹಂಚಿಕೊಂಡಿದ್ದಾರೆ.

  • 42 ಲಕ್ಷ ದಾಟಿದ ಸೋಂಕಿತರ ಸಂಖ್ಯೆ – 32.50 ಲಕ್ಷ ಮಂದಿ ಕೊರೊನಾದಿಂದ ಗುಣಮುಖ

    42 ಲಕ್ಷ ದಾಟಿದ ಸೋಂಕಿತರ ಸಂಖ್ಯೆ – 32.50 ಲಕ್ಷ ಮಂದಿ ಕೊರೊನಾದಿಂದ ಗುಣಮುಖ

    – ಒಂದೇ ದಿನ 1,016 ಮಂದಿ ಬಲಿ

    ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೊನಾ ಹೊಸ ದಾಖಲೆ ಬರೆದಿದೆ. ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 90,802 ಪ್ರಕರಣಗಳು ವರದಿ ಆಗಿದೆ.

    ಒಂದೇ ದಿನ 90,802 ಮಂದಿಗೆ ಕೊರೊನಾ ಸೋಂಕು ದೃಢವಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 42,04,614ಕ್ಕೆ ಏರಿಕೆ ಆಗಿದೆ. ಜೊತೆಗೆ 24 ಗಂಟೆಯಲ್ಲಿ 1,016 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

    42,04,614 ಕೊರೊನಾ ಸೋಂಕಿತರ ಪೈಕಿ 8,82,542 ಸಕ್ರಿಯ ಪ್ರಕರಣಗಳಿದ್ದು, 32,50,429 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 24 ಗಂಟೆಯಲ್ಲಿ 1,016 ಮಂದಿ ಕೊರೊನಾಗೆ ಬಲಿಯಾಗಿದ್ದು, ಇದುವರೆಗೂ ಕೊರೊನಾ ಸೋಂಕಿನಿಂದ 71,642 ಮಂದಿ ಮೃತಪಟ್ಟಿದ್ದಾರೆ.

    ಕೊರೊನಾ ದೇಶಗಳ ಪಟ್ಟಿಯಲ್ಲಿ ಭಾರತ ಬ್ರೆಜಿಲ್ ಹಿಂದಿಕ್ಕಿ ಎರಡನೇ ಸ್ಥಾನಕ್ಕೆ ಜಿಗಿದಿದೆ. ಮರಣಗಳ ಪಟ್ಟಿಯಲ್ಲಿ ಭಾರತ ಮೂರನೇ ಸ್ಥಾನದಲ್ಲಿದೆ. ಇನ್ನು ದೇಶದಲ್ಲಿ ಕೊರೊನಾದಿಂದ ಚೇತರಿಸಿಕೊಂಡವರ ಪ್ರಮಾಣವೂ ದಾಖಲೆ ಮಟ್ಟದಲ್ಲಿ ಹೆಚ್ಚಿದೆ.

  • ಬೀದರಿನಲ್ಲಿ ಇಂದು 8 ಮಂದಿಯ ಬಲಿಯೊಂದಿಗೆ ಸಾವಿನ ರಣಕೇಕೆ ಹಾಕಿದ ಕೊರೊನಾ

    ಬೀದರಿನಲ್ಲಿ ಇಂದು 8 ಮಂದಿಯ ಬಲಿಯೊಂದಿಗೆ ಸಾವಿನ ರಣಕೇಕೆ ಹಾಕಿದ ಕೊರೊನಾ

    ಬೀದರ್: ಗಡಿ ಜಿಲ್ಲೆ ಬೀದರಿನಲ್ಲಿ ಇಂದು ಎಂಟು ಜನರ ಬಲಿಯೊಂದಿಗೆ ಕೊರೊನಾ ಮಹಾಮಾರಿ ತನ್ನ ಸಾವಿನ ರಣಕೇಕೆ ಹಾಕಿದೆ.

    ಬೀದರ್ ತಾಲೂಕಿನ 65 ಮತ್ತು 34 ವರ್ಷದ ಮಹಿಳೆಯರು ಹಾಗೂ 62 ವರ್ಷದ ವ್ಯಕ್ತಿ ಕೊರೊನಾಗೆ ಬಲಿಯಾಗಿದ್ದಾರೆ. ಹುಮ್ನಬಾದ್ ತಾಲೂಕಿನ 65 ವರ್ಷದ ವ್ಯಕ್ತಿ ಹಾಗೂ 55 ವರ್ಷದ ಮಹಿಳೆ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಬಸವಕಲ್ಯಾಣದ 60 ವರ್ಷದ ವ್ಯಕ್ತಿ, ಔರಾದ್ ತಾಲೂಕಿನ 62 ವರ್ಷದ ವ್ಯಕ್ತಿ ಹಾಗೂ ಭಾಲ್ಕಿ ಪಟ್ಟಣದ 24 ವರ್ಷದ ಯುವಕ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

    ತೀವ್ರ ಉಸಿರಾಟದ ಸಮಸ್ಯೆ ಹಾಗೂ ಜ್ವರದಿಂದ ಬಳಲಿ ಸಾವನ್ನಪ್ಪಿದ ಎಂಟು ಜನರಿಗೆ ಇಂದು ಕೊರೊನಾ ಪಾಸಿಟಿವ್ ಧೃಡವಾಗಿದೆ. ಎಂಟು ಜನರ ಬಲಿಯೊಂದಿಗೆ ಜಿಲ್ಲೆಯಲ್ಲಿ ಇಂದು 99 ಜನಕ್ಕೆ ಕೊರೊನಾ ಪಾಸಿಟಿವ್ ಬಂದಿದೆ. ಬೀದರಿನಲ್ಲಿ 44, ಬಸವಕಲ್ಯಾಣದಲ್ಲಿ 30, ಹುಮ್ನಬಾದ್‍ನಲ್ಲಿ 10, ಭಾಲ್ಕಿಯಲ್ಲಿ 9, ಔರಾದ್‍ನಲ್ಲಿ 6 ಜನಕ್ಕೆ ಕೊರೊನಾ ಪಾಸಿಟಿವ್ ಬಂದಿದೆ. ಪ್ರಾಥಮಿಕ ಹಾಗೂ ಕಂಟೈನ್ಮೆಂಟ್ ಏರಿಯಾ ಸಂಪರ್ಕದಿಂದಾಗಿ ಸೋಂಕು ದೃಢವಾಗಿದೆ.

    ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3,748ಕ್ಕೆ ಏರಿಕೆಯಾಗಿದೆ. ಇದರಲ್ಲಿ 2,571 ಜನ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾದ್ದಾರೆ. 1,057 ಜನರಿಗೆ ಸೋಂಕು ಸಕ್ರಿಯವಾಗಿದ್ದು ಇಲ್ಲಿಯವರೆಗೆ 116 ಜನರನ್ನು ಮಹಾಮಾರಿ ಬಲಿ ಪಡೆದಿದೆ. ಅನ್ಯ ಕಾರಣದಿಂದಾಗಿ 4 ಜನ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

  • ಎರಡೂ ವರದಿ ನೆಗೆಟಿವ್- ಆಸ್ಪತ್ರೆಯಿಂದ ಸಿದ್ದರಾಮಯ್ಯ ಡಿಸ್ಚಾರ್ಜ್

    ಎರಡೂ ವರದಿ ನೆಗೆಟಿವ್- ಆಸ್ಪತ್ರೆಯಿಂದ ಸಿದ್ದರಾಮಯ್ಯ ಡಿಸ್ಚಾರ್ಜ್

    ಬೆಂಗಳೂರು: ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್ ಆಗಿದ್ದಾರೆ.

    ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಸಿದ್ದರಾಮಯ್ಯನವರಿಗೆ ಎರಡನೇ ಬಾರಿಗೆ ನಡೆದ ಪರೀಕ್ಷೆಯಲ್ಲೂ ನೆಗೆಟಿವ್ ಬಂದಿದ್ದು, ಈ ಹಿನ್ನೆಲೆ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.

    ಮೂತ್ರ ಪಿಂಡದ ಸೋಂಕಿನ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಆಗಸ್ಟ್ 3ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿತ್ತು. ಹೀಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ಹತ್ತು ದಿನಗಳಿಂದ ಮಣಿಪಾಲ್ ಆಸ್ಪತ್ರೆ ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಇದೀಗ ಸಂಪೂರ್ಣ ಗುಣಮುಖರಾಗಿದ್ದು ಡಿಸ್ಚಾರ್ಜ್ ಆಗಿದ್ದಾರೆ.

    ಆಸ್ಪತ್ರೆಯಿಂದ ಹೊರಡುವ ಮುನ್ನ ಸಿಬ್ಬಂದಿಗೆ ಸಿದ್ದರಾಮಯ್ಯ ಕೃತಜ್ಞತೆ ಸಲ್ಲಿಸಿದ್ದಾರೆ. ಅಲ್ಲದೆ ಇದೇ ವೇಳೆ ಆಸ್ಪತ್ರೆ ಸಿಬ್ಬಂದಿ ಸಹ ಸಿದ್ದರಾಮಯ್ಯನವರಿಗೆ ಹೀ ಗುಚ್ಚ ನೀಡಿ ಬೀಳ್ಕೊಟ್ಟಿದ್ದಾರೆ. ಸಿದ್ದರಾಮಯ್ಯ ಪುತ್ರ, ಶಾಸಕ ಯತೀಂದ್ರಗೂ ನೆಗೆಟಿವ್ ವರದಿ ಬಂದ ಹಿನ್ನೆಲೆ ಅವರೂ ಸಹ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ತಂದೆಯನ್ನು ಕರೆದುಕೊಂಡು ಮನೆಗೆ ಆಗಮಿಸಿದ್ದಾರೆ.

    ಇದೇ ವೇಳೆ ಗುಣಮುಖರಾಗುವಂತೆ ಹಾರೈಸಿದ ನಾಡಿನ ಜನತೆ ಸೇರಿದಂತೆ ಎಲ್ಲರಿಗೂ ಸಿದ್ದರಾಮಯ್ಯ ಧನ್ಯವಾದಗಳನ್ನು ತಿಳಿಸಿದ್ದಾರೆ. ವೈದ್ಯರ ಸಲಹೆ ಮೇರೆಗೆ ಸಿದ್ದರಾಮಯ್ಯ ಅವರು ಮನೆಯಲ್ಲಿ ಒಂದು ವಾರ ವಿಶ್ರಾಂತಿ ಪಡೆಯಲಿದ್ದಾರೆ. ಸಿದ್ದರಾಮಯ್ಯ ಡಿಸ್ಚಾರ್ಜ್ ಆಗುವ ಸುದ್ದಿ ತಿಳಿದ ಶಾಸಕ ಜಮೀರ್ ಅಹ್ಮದ್ ಖಾನ್ ಆಸ್ಪತ್ರೆಗೆ ತೆರಳಿದ್ದು, ಆಸ್ಪತ್ರೆಯಿಂದಲೇ ಸಿದ್ದರಾಮಯ್ಯ ಜೊತೆಗೆ ಮನೆಗೆ ತೆರಳಿದ್ದಾರೆ.

  • ಕೆಜಿಎಫ್‍ನ ಅಧೀರ ಆಸ್ಪತ್ರೆಯಿಂದ ಡಿಸ್ಚಾರ್ಜ್

    ಕೆಜಿಎಫ್‍ನ ಅಧೀರ ಆಸ್ಪತ್ರೆಯಿಂದ ಡಿಸ್ಚಾರ್ಜ್

    ಮುಂಬೈ: ಬಾಲಿವುಡ್ ನಟ ಹಾಗೂ ಬಹುನಿರೀಕ್ಷಿತ ಕೆಜಿಎಫ್-2 ಚಿತ್ರದಲ್ಲಿ ಅಧೀರನ ಪಾತ್ರ ನಿರ್ವಹಿಸುತ್ತಿರುವ ಸಂಜಯ್ ದತ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

    ಉಸಿರಾಟದ ತೊಂದರೆ ಹಾಗೂ ಎದೆ ನೋವಿನಿಂದ ಆಗಸ್ಟ್ 8ರಂದು ಸಂಜಯ್ ದತ್ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಲೀಲಾವತಿ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಅಲ್ಲದೆ ಭಾನುವಾರವಷ್ಟೇ ಸಂಜಯ್ ದತ್ ಆರಾಮಾಗಿದ್ದಾರೆ, ಯಾವುದೇ ಲಕ್ಷಣಗಳು ಕಾಣಿಸಿಕೊಂಡಿಲ್ಲ ಎಂದು ಆಸ್ಪತ್ರೆ ತಿಳಿಸಿತ್ತು.

    ಸಂಜಯ್ ದತ್ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಕೊರೊನಾ ಪರೀಕ್ಷೆ ನಡೆಸಲಾಗಿತ್ತು. ಈ ವೇಳೆ ನೆಗೆಟಿವ್ ವರದಿ ಬಂದಿತ್ತು. ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಸಂಜಯ್ ದತ್ ಈ ಕುರಿತು ತಮ್ಮ ಟ್ವಿಟ್ಟರ್‍ನಲ್ಲಿ ಹಂಚಿಕೊಂಡಿದ್ದರು. ನಾನು ಆರಾಗಿದ್ದೇನೆ, ಎಲ್ಲ ಕೆಲಸಗಳನ್ನು ಮಾಡುತ್ತಿದ್ದೇನೆ. ವೈದ್ಯಕೀಯ ನಿಗಾ ವಹಿಸಲಾಗಿದೆ. ಕೊರೊನಾ ಪರೀಕ್ಷಾ ವರದಿ ಸಹ ನೆಗೆಟಿವ್ ಬಂದಿದೆ ಎಂದು ಸ್ಪಷ್ಟಪಡಿಸಿದ್ದರು.

    ಲೀಲಾವತಿ ಆಸ್ಪತ್ರೆ ವೈದ್ಯರು, ನರ್ಸ್ ಹಾಗೂ ಸಿಬ್ಬಂದಿ ತುಂಬಾ ಕಾಳಜಿ ವಹಿಸಿದ್ದಾರೆ. ಇನ್ನು ಒಂದೆರಡು ದಿನಗಳಲ್ಲಿ ಮನೆಗೆ ಮರಳುತ್ತೇನೆ. ನಿಮ್ಮ ಹಾರೈಕೆಗೆ ಧನ್ಯವಾದಗಳು. ಎಲ್ಲರೂ ಸುರಕ್ಷಿತವಾಗಿರಿ ಎಂದು ಈ ಹಿಂದೆ ಮಾಡಿದ್ದ ಟ್ವೀಟ್‍ನಲ್ಲಿ ತಿಳಿಸಿದ್ದರು.

    ಸಂಜಯ್ ದತ್ ಮಾನ್ಯತಾ ದತ್ ಅವರನ್ನು ವಿವಾಹವಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಅಲ್ಲದೆ ಮೊದಲ ಪತ್ನಿಯ ಒಬ್ಬ ಮಗಳಿದ್ದಾಳೆ. ಸಂಜಯ್ ದತ್ ಕನ್ನಡದ ಕೆಜಿಎಫ್-2 ಚಿತ್ರದಲ್ಲಿ ಅಧೀರನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಲ್ಲದೆ ಬಾಲಿವುಡ್‍ನ ಹಲವು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ.

  • ಉಡುಪಿಯಲ್ಲಿ ಇಂದು 217 ಮಂದಿಗೆ ಕೊರೊನಾ- ಸಾವಿನ ಸಂಖ್ಯೆ 50ಕ್ಕೆ ಏರಿಕೆ

    ಉಡುಪಿಯಲ್ಲಿ ಇಂದು 217 ಮಂದಿಗೆ ಕೊರೊನಾ- ಸಾವಿನ ಸಂಖ್ಯೆ 50ಕ್ಕೆ ಏರಿಕೆ

    ಉಡುಪಿ: ದಿನಗಳೆದಂತೆ ಉಡುಪಿಯಲ್ಲಿ ಕೊರೊನಾ ಪಾಸಿಟಿವ್ ಸಂಖ್ಯೆ ಹೆಚ್ಚಾಗುತ್ತಿದೆ. ಇಂದು ಜಿಲ್ಲೆಯಲ್ಲಿ 217 ಕೊರೊನಾ ಪಾಸಿಟಿವ್ ಕೇಸು ಕಾಣಿಸಿಕೊಂಡಿದೆ ಎಂದು ಡಿಎಚ್‍ಒ ಡಾ. ಸುಧೀರ್ ಚಂದ್ರ ಸೂಡಾ ಮಾಹಿತಿ ನೀಡಿದರು.

    ಉಡುಪಿ ಜಿಲ್ಲಾ ಕೊರೊನಾ ಬುಲೆಟಿನ್ ಬಿಡುಗಡೆ ಮಾಡಿದ ಅವರು, ಉಡುಪಿಯಲ್ಲಿ ಇಂದು 217 ಕೊರೊನಾ ಪಾಸಿಟಿವ್ ಬಂದಿದೆ. ಜಿಲ್ಲೆಯ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 5,353ಕ್ಕೆ ಏರಿಕೆಯಾಗಿದೆ ಎಂದು ಮಾಹಿತಿ ಕೊಟ್ಟರು. ಕೋವಿಡ್-19 ನಿಂದ ಜಿಲ್ಲೆಯಲ್ಲಿ 6 ಸಾವಾಗಿದೆ. ಈ ಮೂಲಕ ಜಿಲ್ಲೆಯ ಕೊರೊನಾ ಸಾವಿನ ಸಂಖ್ಯೆ 50ಕ್ಕೆ ಏರಿಕೆ ಆಗಿದೆ.

    ಇವತ್ತು 85 ಮಂದಿ ಡಿಸ್ಜಾರ್ಜ್ ಆಗಿದ್ದು, ಈವರೆಗೆ ಜಿಲ್ಲೆಯಲ್ಲಿ 3,157 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಸದ್ಯ ಉಡುಪಿ ಜಿಲ್ಲೆಯಲ್ಲಿ 2,153 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಪೈಕಿ 1,500ಕ್ಕೂ ಹೆಚ್ಚು ರೋಗಿಗಳು ಮನೆಯಲ್ಲೇ ಸ್ವಯಂ ಚಿಕಿತ್ಸೆ ಪಡೆಯುತ್ತಿದ್ದಾರೆ.

  • 4,752 ಮಂದಿಗೆ ಸೋಂಕು – 4,776 ಡಿಸ್ಚಾರ್ಜ್

    4,752 ಮಂದಿಗೆ ಸೋಂಕು – 4,776 ಡಿಸ್ಚಾರ್ಜ್

    ಬೆಂಗಳೂರು: ಇಂದು ರಾಜ್ಯದಲ್ಲಿ 4,752 ಮಂದಿಗೆ ಸೋಂಕು ಬಂದಿದ್ದು 4,776 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 98 ಸೋಂಕಿತರು ಮೃತಪಟ್ಟಿದ್ದಾರೆ.

    ಒಟ್ಟು ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,39,571ಕ್ಕೆ ಏರಿಕೆಯಾಗಿದೆ. ಈ ಪೈಕಿ 74,469 ಸಕ್ರಿಯ ಪ್ರಕರಣಗಳಿದ್ದರೆ 62,500 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

    ಇಲ್ಲಿಯವರೆಗೆ ಒಟ್ಟು 2,594 ಮಂದಿ ಮೃತಪಟ್ಟಿದ್ದು ಐಸಿಯುನಲ್ಲಿ 629 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಒಟ್ಟು 18,074 ಮಂದಿಗೆ ರ್ಯಾಪಿಡ್, 9,915 ಮಂದಿಗೆ ಆರ್‍ಟಿ ಪಿಸಿಆರ್ ಸೇರಿದಂತೆ ಒಟ್ಟು 27,989 ಮಂದಿಗೆ ಕೋವಿಡ್-19 ಪರೀಕ್ಷೆ ಮಾಡಲಾಗಿದೆ.

    ಬೆಂಗಳೂರು ನಗರದಲ್ಲಿ 1497, ಬಳ್ಳಾರಿ 305, ಕಲಬುರಗಿ 170 ಮತ್ತು ಮೈಸೂರಿನಲ್ಲಿ 372 ಮಂದಿಗೆ ಸೋಂಕು ಬಂದಿದೆ. ಬೆಂಗಳೂರಿನಲ್ಲಿ 2,693, ತುಮಕೂರು 20, ಬಳ್ಳಾರಿ 18, ಕಲಬರುಗಿ 369, ರಾಯಚೂರು 141 ಮಂದಿ ಬಿಡುಗಡೆಯಾಗಿದ್ದಾರೆ.

    ಒಟ್ಟು 629 ಮಂದಿ ಐಸಿಯುನಲ್ಲಿದ್ದು, ಬೆಂಗಳೂರು ನಗರ 330, ಧಾರವಾಡ 37, ಹಾಸನ 41, ಬಳ್ಳಾರಿ 23 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

  • ಕೊರೊನಾ ಗೆದ್ದ ಕಾಮೇಗೌಡರು- ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್

    ಕೊರೊನಾ ಗೆದ್ದ ಕಾಮೇಗೌಡರು- ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್

    ಮಂಡ್ಯ: ಕೆರೆಗಳ ನಿರ್ಮಾಣದ ಮೂಲಕ ಪ್ರಸಿದ್ಧಿ ಪಡೆದಿರುವ ಮಂಡ್ಯದ ಕಾಮೇಗೌಡರು ಕೊರೊನಾ ಜಯಿಸಿದ್ದು, ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

    ಜಿಲ್ಲೆಯ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಗ್ರಾಮದ ಕಾಮೇಗೌಡರು, ಗ್ರಾಮದಲ್ಲಿ ಕೆರೆ, ಕಟ್ಟೆಗಳನ್ನು ನಿರ್ಮಿಸಿ ಪ್ರಖ್ಯಾತಿ ಗಳಿಸಿದ್ದಾರೆ. ಇತ್ತೀಚೆಗೆ ಮನ್ ಕೀ ಬಾತ್‍ನಲ್ಲಿ ಪ್ರಧಾನಿ ನರೇಂದ್ರ ಮೋದಿ ಸಹ ಕಾಮೇಗೌಡರ ಕೆರೆ ಕಟ್ಟು ಕಾಯಕದ ಕುರಿತು ಪ್ರಶಂಸೆ ವ್ಯಕ್ತಪಡಿಸಿದ್ದರು.

    ಕಳೆದ ಹತ್ತು ದಿನಗಳ ಹಿಂದೆ ಕಾಮೇಗೌಡರು ಆಸ್ಪತ್ರೆಗೆ ದಾಖಲಾಗಿದ್ದರು. ಕಾಲು ನೋವಿನಿಂದ ಬಳಲುತ್ತಿದ್ದ ಕಾಮೇಗೌಡರು ಆಸ್ಪತ್ರೆಗಳಿಗೆ ಓಡಾಡುತ್ತಿದ್ದ ವೇಳೆ ಕೊರೊನಾ ಸೋಂಕು ತಗುಲಿತ್ತು. ಮಂಡ್ಯ ಕೋವಿಡ್-19 ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಕಾಮೇಗೌಡರು ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

    ಸ್ವಂತ ಕೆಲಸದೊಂದಿಗೆ ಗುಡ್ಡಗಾಡು ಪ್ರದೇಶದಲ್ಲಿ 16 ಕೆರೆಗಳನ್ನು ನಿರ್ಮಿಸಿದ ಕಾಮೇಗೌಡರು, ಸಾಮಾಜಿಕ ಕಳಕಳಿ ತೋರಿದ್ದಾರೆ. ಯಾವುದೇ ಆಕಾಂಕ್ಷೆ ಇಲ್ಲದೇ 16 ಕೆರೆಗಳನ್ನು ನಿರ್ಮಿಸಿದ್ದ ಕಾಮೇಗೌಡರು ಉಸಿತ ಬಸ್ ಪಾಸ್ ಕೇಳಿದ್ದರು. ಬಸ್ ಪಾಸ್ ಸಿಕ್ಕರೇ ಅಕ್ಕಪಕ್ಕದ ಜಿಲ್ಲೆಗಳ ದೇವಾಲಯಗಳಿಗೆ ಭೇಟಿ ನೀಡಬಹುದು ಎಂಬುವುದು ಅವರ ಚಿಂತನೆಯಾಗಿತ್ತು. ಇತ್ತೀಚೆಗೆ ಕೆಎಸ್‍ಆರ್‍ಟಿಸಿಯಿಂದ ಅವರಿಗೆ ಉಚಿತ ಬಸ್ ಪಾಸ್ ನೀಡಲಾಗಿದೆ.