Tag: ಡಿಸ್ಚಾರ್ಜ್

  • ಸದನಕ್ಕೆ ಹಾಜರಾಗಿ ಆಸ್ಪತ್ರೆಗೆ ದಾಖಲಾಗಿದ್ದ ಆನಂದ್ ಸಿಂಗ್ ಡಿಸ್ಚಾರ್ಜ್

    ಸದನಕ್ಕೆ ಹಾಜರಾಗಿ ಆಸ್ಪತ್ರೆಗೆ ದಾಖಲಾಗಿದ್ದ ಆನಂದ್ ಸಿಂಗ್ ಡಿಸ್ಚಾರ್ಜ್

    ಬೆಂಗಳೂರು: ಬಳ್ಳಾರಿಯ ವಿಜಯನಗರದ ಶಾಸಕ ಆನಂದ್ ಸಿಂಗ್ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಬುಧವಾರ ಸದನದ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಈಗ ಆರೋಗ್ಯದಲ್ಲಿ ಚೇತರಿಕೆ ಕಂಡ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

    ವಾಂತಿ ಹಾಗೂ ಎದೆ ನೋವು ಕಾಣಿಸಿಕೊಂಡಿದ್ದರಿಂದ ಶಾಸಕ ಆನಂದ್ ಬುಧವಾರ ಎರಡನೇ ಬಾರಿ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಇಂದು ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದರಿಂದ ಅವರು ಆಸ್ಪತ್ರೆಯಿಂದ ಡಿಸ್ಚರ್ಜ್ ಆಗಿ ಮನೆಗೆ ತೆರಳಿದ್ದಾರೆ. ಇಂದು ರೆಸ್ಟ್ ಮಾಡಿ ಶುಕ್ರವಾರ ಬಜೆಟ್ ಮಂಡನೆಯ ವೇಳೆ ಸದನದಲ್ಲಿ ಹಾಜರಿ ಇರುವುದಾಗಿ ಆನಂದ್ ಸಿಂಗ್ ತಿಳಿಸಿದ್ದಾರೆ.

    ಮಂಗಳವಾರ ನಡೆದ ಅಧಿವೇಶನದಲ್ಲಿ ಆನಂದ್ ಸಿಂಗ್ ಕಪ್ಪು ಬಣ್ಣದ ಗ್ಲಾಸ್ ಧರಿಸಿ ಹಾಜರಾಗಿದ್ದರು. ಕಲಾಪಕ್ಕೆ ಹಾಜರಾಗಿ ಓಡಾಟ ಹೆಚ್ಚಾಗಿದ್ದರಿಂದ ಅವರಿಗೆ ವಾಂತಿ ಹಾಗೂ ಎದೆ ನೋವು ಕಾಣಿಸಿಕೊಂಡಿತ್ತು. ಹಾಗಾಗಿ ಅವರು ವೈದ್ಯರ ಸಲಹೆ ಮೇರೆಗೆ ಮತ್ತೆ ಅಪೋಲೋ ಆಸ್ಪತ್ರೆಗೆ ಅಡ್ಮಿಟ್ ಆಗಿ ಓಪಿಡಿಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದಿದ್ದಾರೆ.

    ಆನಂದ್ ಸಿಂಗ್ ಅವರ ಪಕ್ಕೆಲುಬು ಮುರಿದಿದ್ದರಿಂದ ರೆಸ್ಟ್ ತೆಗೆದುಕೊಳ್ಳುವಂತೆ ವೈದ್ಯರು ಸೂಚಿಸಿದ್ದರು. ಆದರೆ ಬುಧವಾರ ಕಲಾಪದಲ್ಲಿ ಭಾಗವಹಿಸಿಲು ಆನಂದ್ ಸಿಂಗ್ ವಿಧಾನಸೌಧ ಮೆಟ್ಟಿಲು ಹತ್ತಿದ್ದರಿಂದ ಅವರಿಗೆ ನೋವು ಹೆಚ್ಚಾಗಿತ್ತು. ಇದರಿಂದ ಅವರು ಮನೆಗೆ ತೆರಳುತ್ತಿದ್ದಂತೆ ವಾಂತಿ ಮಾಡಿಕೊಂಡಿದ್ದರು. ಬಳಿಕ ರಿಸ್ಕ್ ತೆಗೆದುಕೊಳ್ಳುವುದು ಬೇಡ ಎನ್ನುವ ಕಾರಣಕ್ಕೆ ವೈದ್ಯರ ಸಲಹೆಯ ಮೆರೆಗೆ ಆಸ್ಪತ್ರೆಗೆ ದಾಖಲಾಗಿದ್ದರು.

    ಈ ಹಿಂದೆ ಕೂಡ ಅಪೋಲೋ ಆಸ್ಪತ್ರೆಯ ವೈದ್ಯರು ಒಂದು ವಾರ ಚಿಕಿತ್ಸೆಯ ಅಗತ್ಯವಿದೆ ಎಂದು ಹೇಳಿದ್ದರು. ಆನಂದ್ ಸಿಂಗ್ ಸಹ ಇನ್ನೂ ಒಂದು ವಾರ ಚಿಕಿತ್ಸೆ ನಡೆಯಲಿದೆ ಎಂದು ತಿಳಿಸಿದ್ದರು. ಈ ಮಧ್ಯೆ ಆನಂದ್ ಸಿಂಗ್ ಮಂಗಳವಾರ ಆಸ್ಪತ್ರೆಯಿಂದ ದಿಢೀರನೇ ಡಿಸ್ಚಾರ್ಜ್ ಆಗಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸುಳ್ವಾಡಿ ವಿಷಪ್ರಸಾದ ದುರಂತಕ್ಕೆ ಇಂದಿಗೆ ಒಂದು ತಿಂಗಳು- ಇನ್ನೂ ಡಿಸ್ಚಾರ್ಜ್ ಆಗಿಲ್ಲ ಅಸ್ವಸ್ಥರು

    ಸುಳ್ವಾಡಿ ವಿಷಪ್ರಸಾದ ದುರಂತಕ್ಕೆ ಇಂದಿಗೆ ಒಂದು ತಿಂಗಳು- ಇನ್ನೂ ಡಿಸ್ಚಾರ್ಜ್ ಆಗಿಲ್ಲ ಅಸ್ವಸ್ಥರು

    ಚಾಮರಾಜನಗರ: ಸುಳ್ವಾಡಿ ಮಾರಮ್ಮ ದೇವಸ್ಥಾನದ ವಿಷಪ್ರಸಾದ ಸೇವೆನೆ ಘಟನೆ ನಡೆದು ಇಂದಿಗೆ ಒಂದು ತಿಂಗಳಾಗಿದ್ದು, ಪ್ರಸಾದ ಸೇವಿಸಿದ ಭಕ್ತರು ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಡಿಸೆಂಬರ್ 14ರಂದು ಚಾಮರಾಜನಗರದ ಸುಳ್ವಾಡಿಯಲ್ಲಿ ಭಕ್ತರು ವಿಷ ಪ್ರಸಾದವನ್ನು ಸೇವಿಸಿದ್ದರು. ಈಗ ಈ ಘಟನೆ ನಡೆದು ಒಂದು ತಿಂಗಳಾದರೂ ಪ್ರಸಾದ ತಿಂದ ಅಸ್ವಸ್ಥರು ಆಸ್ಪತ್ರೆಯಿಂದ ಇನ್ನೂ ಡಿಸ್ಚಾರ್ಜ್ ಆಗಿಲ್ಲ. ನಾಲ್ವರು ಅಸ್ವಸ್ಥರು ಇನ್ನೂ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಸಾದ ಸೇವಿಸಿದ ನಾಲ್ಕು ಜನ ಅಸ್ವಸ್ಥರು ಮೈಸೂರಿನ ನಾಲ್ಕು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾಲ್ವರಲ್ಲಿ ಓರ್ವ ಅಸ್ವಸ್ಥರಿಗೆ ವೆಂಟಿಲೇಟರ್ ನಲ್ಲೇ ಚಿಕಿತ್ಸೆ ನೀಡಿದರೆ, ಉಳಿದ ಮೂವರು ಜನರಿಗೆ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

    ಈ ವಿಷ ಪ್ರಸಾದದ ಘಟನೆಯಲ್ಲಿ ಒಟ್ಟು 140ಕ್ಕೂ ಹೆಚ್ಚು ಮಂದಿ ವಿಷ ಪ್ರಸಾದ ಸೇವನೆ ಮಾಡಿದ್ದರು. 140 ಮಂದಿಯಲ್ಲಿ 120ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದರು. ಅಲ್ಲದೇ ಈ ವಿಷ ಪ್ರಸಾದ ಸೇವಿಸಿ 17 ಮಂದಿ ಘಟನೆಯಲ್ಲಿ ಮೃತರಾಗಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ- ಡಿಸ್ಚಾರ್ಜ್ ಬಗ್ಗೆ ಶೀಘ್ರವೇ ನಿರ್ಧಾರ

    ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ- ಡಿಸ್ಚಾರ್ಜ್ ಬಗ್ಗೆ ಶೀಘ್ರವೇ ನಿರ್ಧಾರ

    ಚೆನ್ನೈ: ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಚೆನ್ನೈನ ರೇಲಾ ಆಸ್ಪತ್ರೆಯಲ್ಲಿ ಪಿತ್ತಕೋಶ ಸೋಂಕಿನ ಆಪರೇಷನ್ ಗೆ ಒಳಗಾಗಿದ್ದ ಸಿದ್ದಗಂಗಾ ಶ್ರೀಗಳ ಆರೋಗ್ಯ ಸ್ಥಿರವಾಗಿದೆ.

    ಮಂಗಳವಾರದಿಂದ ಶ್ರೀಗಳು ದ್ರವರೂಪದ ಆಹಾರವನ್ನು ಸೇವಿಸುತ್ತಿದ್ದಾರೆ. ಕಳೆದ ಮೂರು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶ್ರೀಗಳನ್ನು ಇಂದು ಸ್ಪೆಷಲ್ ವಾರ್ಡ್ ಗೆ ಶಿಫ್ಟ್ ಮಾಡುವ ಸಾಧ್ಯತೆ ಇದೆ. ಸ್ವಲ್ಪ ಮಟ್ಟಿಗೆ ಇಂದು ವೈದ್ಯರು ಶ್ರೀಗಳನ್ನು ವಾಕಿಂಗ್ ಮಾಡಿಸುವ ಸಾಧ್ಯತೆ ಇದೆ.

    ಈಗಾಗಲೇ ದ್ರವ ರೂಪದ ಆಹಾರವನ್ನು ನೀಡಿರೋ ವೈದ್ಯರು, ಇಂದು ಸಹ ದ್ರವರೂಪದ ಆಹಾರವನ್ನು ಮುಂದುವರಿಸಲಿದ್ದಾರೆ. ಇಂದು ಬೆಳೆಗ್ಗೆ ಮತ್ತೊಮ್ಮೆ ವಿವಿಧ ರೀತಿಯ ಪರೀಕ್ಷೆಗಳನ್ನು ವೈದ್ಯರು ಮಾಡಲಿದ್ದಾರೆ. ವೈದ್ಯರು ಶ್ರೀಗಳನ್ನು ಯಾವಾಗ ಡಿಸ್ಚಾರ್ಜ್ ಮಾಡಬೇಕು ಎನ್ನುವುದರ ಬಗ್ಗೆ ನಿರ್ಧಾರ ಮಾಡಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಶಿವಣ್ಣ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್

    ಶಿವಣ್ಣ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್

    ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ವ್ಯತ್ಯಾಸವಾದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಶಿವಣ್ಣನ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಇಂದು ಬೆಳಗ್ಗೆ 11 ಗಂಟೆಗೆ ಆಸ್ಪತ್ರೆಯಿಂದ ಮನೆಗೆ ತೆರಳಲಿದ್ದಾರೆ.

    ಜ್ವರ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದ ಶಿವಣ್ಣ ಗುಣಮುಖರಾಗಿದ್ದರು. ಬ್ಯಾಕ್ ಟೂ ಬ್ಯಾಕ್ ಸಿನಿಮಾ ಶೂಟಿಂಗ್‍ನಲ್ಲಿ ತೊಡಗಿಸಿಕೊಂಡಿದ್ದರಿಂದ ಶಿವರಾಜ್‍ಕುಮಾರ್ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿದ್ದರಿಂದ ಭಾನುವಾರ ಮಧ್ಯರಾತ್ರಿಯೇ ಕುಟುಂಬಸ್ಥರು ಶಿವರಾಜ್‍ಕುಮಾರ್ ಮಲ್ಯ ಆಸ್ಪತ್ರೆಗೆ ದಾಖಲಿಸಿದ್ದರು.

    ಶಿವರಾಜ್ ಕುಮಾರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ತಮ್ಮ ಪತ್ನಿ ಜೊತೆ ಬಂದು ಸಹೋದರನ ಆರೋಗ್ಯದ ಬಗ್ಗೆ ವಿಚಾರಿಸಿದ್ದರು. ಅಲ್ಲದೇ ನಟ ವಿನಯ್ ರಾಜ್ ಕುಮಾರ್ ತಮ್ಮ ದೊಡ್ಡಪ್ಪನ ಆರೋಗ್ಯವನ್ನು ವಿಚಾರಿಸಿದ್ದರು. ನಿರ್ದೇಶಕ ಪ್ರೇಮ್ ಹಾಗೂ ಶಿವಣ್ಣ ಪುತ್ರಿ ನಿವೇದಿತಾ ಆಸ್ಪತ್ರೆಗೆ ಭೇಟಿ ನೀಡಿದ್ದರು.

    ಶಿವರಾಜ್‍ಕುಮಾರ್ ಅವರ ಆರೋಗ್ಯದ ಬಗ್ಗೆ ವಿಚಾರಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಪುನೀತ್ ರಾಜ್‍ಕುಮಾರ್, ಶಿವಣ್ಣನಿಗೆ ಏನು ಆಗಿಲ್ಲ. ಸ್ವಲ್ಪ ಜ್ವರ ಹೆಚ್ಚಾಗಿರೋದ್ರಿಂದ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಈಗ ಜ್ವರ ಕಡಿಮೆಯಾಗಿದೆ. ಡಿಸ್ಚಾರ್ಜ್ ಬಗ್ಗೆ ಇನ್ನು ಆಸ್ಪತ್ರೆಯಲ್ಲಿ ಏನೂ ಹೇಳಿಲ್ಲ. ಸಂಜೆಯೊಳಗೆ ಡಿಸ್ಚಾರ್ಜ್ ಆಗೋ ಸಾಧ್ಯತೆಯಿದೆ ಎಂದು ತಿಳಿಸಿದ್ದರು.

    ಶಿವಣ್ಣ ಅವರಿಗೆ ಏನೂ ಆಗಿಲ್ಲ. ಅವರಿಗೆ ವೈರಲ್ ಜ್ವರ ಬಂದಿದ್ದು, ಡ್ರಿಪ್ಸ್ ನೀಡುತ್ತಿದ್ದಾರೆ. ಮನೆಯಲ್ಲಿ ಡ್ರಿಪ್ಸ್ ಹಾಕಲು ಆಗದಿರುವ ಕಾರಣ ಅವರು ಆಸ್ಪತ್ರೆಗೆ ಬರುವ ಅನಿವಾರ್ಯ ಬಂತು. ಶಿವಣ್ಣ ಕ್ಷೇಮವಾಗಿದ್ದಾರೆ ಎಂದು ನಿರ್ದೇಶಕ ಪ್ರೇಮ್ ಹೇಳಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ದುನಿಯಾ ವಿಜಿಯಿಂದ ಹಲ್ಲೆಗೊಳಗಾಗಿದ್ದ ಮಾರುತಿ ಗೌಡ ಆಸ್ಪತ್ರೆಯಿಂದ ಡಿಸ್ಚಾರ್ಜ್

    ದುನಿಯಾ ವಿಜಿಯಿಂದ ಹಲ್ಲೆಗೊಳಗಾಗಿದ್ದ ಮಾರುತಿ ಗೌಡ ಆಸ್ಪತ್ರೆಯಿಂದ ಡಿಸ್ಚಾರ್ಜ್

    ಬೆಂಗಳೂರು: ದುನಿಯಾ ವಿಜಯ್‍ನಿಂದ ಹಲ್ಲೆಗೊಳಗಾಗಿದ್ದ ಮಾರುತಿ ಗೌಡ ವಿಕ್ರಮ್ ಆಸ್ಪತ್ರೆಯಿಂದ ಶುಕ್ರವಾರ ರಾತ್ರಿ ಡಿಸ್ಚಾರ್ಜ್ ಆಗಿದ್ದಾರೆ.

    ನಟ ದುನಿಯಾ ವಿಜಿ ಹಲ್ಲೆಯಿಂದ ವಿಕ್ರಮ್ ಆಸ್ಪತ್ರೆಯಲ್ಲಿ ಮಾರುತಿಗೌಡ ದಾಖಲಾಗಿದ್ದರು. ಆರು ದಿನಗಳ ಬಳಿಕ ಡಿಸ್ಚಾರ್ಜ್ ಆಗಿದ್ದಾರೆ. ಮಾರುತಿಗೌಡ ತುಟಿಗೆ ಗಾಯವಾಗಿ, ಕಣ್ಣು ಮತ್ತು ಮುಖ ಊತ ಬಂದಿತ್ತು. ಹೀಗಾಗಿ ಆರು ದಿನಗಳ ಕಾಲ ಚಿಕಿತ್ಸೆ ನೀಡಿ ತುಟಿಗೆ ಹದಿನೈದು ಹೊಲಿಗೆ ಹಾಕಲಾಗಿತ್ತು. ಸದ್ಯಕ್ಕೆ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ.

    ಕಳೆದ ಶನಿವಾರ ವಸಂತನಗರದ ಅಂಬೇಡ್ಕರ್ ಭವನದಲ್ಲಿ ಮಿಸ್ಟರ್ ಬೆಂಗಳೂರು ಬಾಡಿ ಬಿಲ್ಡಿಂಗ್ ಸ್ಪರ್ಧೆ ನಡೆಯುತಿತ್ತು. ಈ ಸ್ಪರ್ಧೆ ನೋಡಲು ದುನಿಯಾ ವಿಜಿ ತಮ್ಮ ತಂಡದೊಂದಿಗೆ ಬಂದಿದ್ದರು. ಈ ವೇಳೆ ಪಾನಿಪೂರಿ ಕಿಟ್ಟಿ ಅಣ್ಣನ ಮಗ ಮಾರುತಿಗೌಡ ಮತ್ತು ದುನಿಯಾ ವಿಜಿ ನಡುವೆ ಮಾತಿನ ಚಕಮಕಿ ನಡೆದಿತ್ತು. ಆದರೆ ಗಲಾಟೆ ವಿಕೋಪಕ್ಕೆ ತಿರುಗಿ ದುನಿಯಾ ವಿಜಯ್ ಗ್ಯಾಂಗ್, ಮಾರುತಿಗೌಡರ ಮೇಲೆ ಹಲ್ಲೆ ನಡೆಸಿ ಕಾರಿನಲ್ಲಿ ಹಾಕಿಕೊಂಡು ಕಿಡ್ನಾಪ್ ಮಾಡಿತ್ತು.

    ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದಾಗಲೇ ಬುಧವಾರ ಪಬ್ಲಿಕ್ ಟಿವಿಯೊಂದಿಗೆ ಮಾರುತಿಗೌಡ ದುನಿಯಾ ವಿಜಿ ಕ್ರೂರ ಮುಖವನ್ನು ವಿವರಿಸಿದ್ದರು.  ಇದನ್ನೂ ಓದಿ: ಹಲ್ಲೆ ಮಾಡಿದ್ದನ್ನು ಪೊಲೀಸ್ರಿಗೆ ಹೇಳ್ಬೇಡ: ಮಾರುತಿ ಗೌಡಗೆ ವಿಜಿ ವಾರ್ನಿಂಗ್

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅಪಘಾತವಾಗಿ 3ನೇ ದಿನವೂ ದರ್ಶನ್‍ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ- ವೈದ್ಯರು ಸುದ್ದಿಗೋಷ್ಠಿ ನಡೆಸುವ ಸಾಧ್ಯತೆ

    ಅಪಘಾತವಾಗಿ 3ನೇ ದಿನವೂ ದರ್ಶನ್‍ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ- ವೈದ್ಯರು ಸುದ್ದಿಗೋಷ್ಠಿ ನಡೆಸುವ ಸಾಧ್ಯತೆ

    ಮೈಸೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಇಂದು ಕೂಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸುವ ಸಾಧ್ಯತೆಗಳಿವೆ. ಅಲ್ಲದೇ ದರ್ಶನ್ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ.

    ದರ್ಶನ್ ಅವರಿಗೆ ಅಪಘಾತವಾದ ಮೂರನೇ ದಿನವೂ ಮೈಸೂರಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ನಟ ದರ್ಶನ್ ಅವರ ಆರೋಗ್ಯ ಬಗ್ಗೆ ವೈದ್ಯರು ಈವರೆಗೂ ಯಾವುದೇ ಮಾಹಿತಿ ನೀಡಿಲ್ಲ. ವೈದ್ಯರು ಇಂದು ಸುದ್ದಿಗೋಷ್ಟಿ ನಡೆಸುವ ಸಾಧ್ಯತೆಗಳಿದ್ದು, ಸದ್ಯ ಆಸ್ಪತ್ರೆಯಲ್ಲಿ ದರ್ಶನ್ ಹಾಗೂ ಅವರ ಸ್ನೇಹಿತ ಆಂಟೋನಿ ಅವರಿಗೆ ಚಿಕಿತ್ಸೆ ಮುಂದುವರೆದಿದೆ. ಈ ಅಪಘಾತದಲ್ಲಿ ಗಾಯಗೊಂಡಿದ್ದ ನಟ ದೇವರಾಜ್ ಹಾಗೂ ಪ್ರಜ್ವಲ್ ದೇವರಾಜ್ ಅವರು ಮಂಗಳವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

    ಘಟನೆಯೇನು?:
    ಶನಿವಾರ ನಟರಾದ ದರ್ಶನ್, ಸೃಜನ್ ಲೋಕೇಶ್ ಹಾಗೂ ದೇವರಾಜ್ ಕುಟುಂಬ ಮೈಸೂರು ಮೃಗಾಲಯಕ್ಕೆ ತೆರಳಿ ಪ್ರಾಣಿಗಳನ್ನು ದತ್ತು ತೆಗೆದುಕೊಂಡಿದ್ದರು. ಆ ಬಳಿಕ ಮೈಸೂರಿನಲ್ಲೇ ಉಳಿದುಕೊಂಡು ಸೋಮವಾರ ಮುಂಜಾನೆ ಅಲ್ಲಿಂದ ಹೊರಟಿದ್ದರು. ಹೀಗೆ ಕಾರ್ ನಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ಮೈಸೂರು ಹೊರವಲಯದ ಹಿನಕಲ್ ಬಳಿ ಕಾರ್ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ದರ್ಶನ್ ಅವರ ಬಲಗೈನ ಮೂಳೆ ಮುರಿದಿದ್ದು, ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಸದ್ಯ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ. ಬಲಗೈಗೆ ರಾಡ್ ಅಳವಡಿಸಲಾಗಿದ್ದು, 24 ಹೊಲಿಗೆ ಹಾಕಲಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಐಸಿಯುವಿನಲ್ಲಿ ನರಳಾಡ್ತಿರುವಾಗ್ಲೇ ಡಿಸ್ಚಾರ್ಜ್ ಮಾಡಿದ ವೈದ್ಯರು!

    ಐಸಿಯುವಿನಲ್ಲಿ ನರಳಾಡ್ತಿರುವಾಗ್ಲೇ ಡಿಸ್ಚಾರ್ಜ್ ಮಾಡಿದ ವೈದ್ಯರು!

    – ದಿಗ್ವಿಜಯ ಆಸ್ಪತ್ರೆಯಲ್ಲೊಂದು ಅಮಾನವೀಯ ಘಟನೆ

    ಬೆಂಗಳೂರು: ದುಡ್ಡಿದ್ರೆ ಆಸ್ಪತ್ರೆ ರೂಲ್ಸ್ ಗಳೇ ಮಂಗಮಾಯ ಅನ್ನೋದಕ್ಕೆ ಪ್ರತ್ಯಕ್ಷ ಸಾಕ್ಷಿ ಎಂಬಂತೆ ಬನಶಂಕರಿಯ ದಿಗ್ವಿಜಯ ಆಸ್ಪತ್ರೆಯಲ್ಲಿಯೊಂದು ಅಮಾನವೀಯ ಘಟನೆ ನಡೆದಿದೆ.

    ಸಾಮಾನ್ಯವಾಗಿ ದುಡ್ಡಿನ ಆಸೆಗಾಗಿ ಸತ್ತ ರೋಗಿಯನ್ನು ಐಸಿಯುನಲ್ಲಿಟ್ಟ ಆಸ್ಪತ್ರೆಯವರ ಕಥೆ ಕೇಳಿರ್ತೀವಿ. ಆದ್ರೇ ಇದು ದುಡ್ಡಿನ ಆಮಿಷಕ್ಕೆ ಬಲಿಯಾಗಿ ಐಸಿಯುನಲ್ಲಿ ರೋಗಿ ನರಳಾಡುತ್ತಿರುವಾಗಲೇ ಡಿಸ್ಚಾರ್ಜ್ ಮಾಡಲಾಗಿದೆ.


    ಗಂಡನ ಕಿರುಕುಳ ತಾಳಲಾರದೇ ನಿದ್ರೆ ಮಾತ್ರೆ ಸೇವಿಸಿ ಬನಶಂಕರಿಯ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸಾವು ಬದುಕಿನ ಮಧ್ಯೆ ಒದ್ದಾಡುತ್ತಿದ್ದ ಮಹಿಳೆಯನ್ನು ಬನಶಂಕರಿಯಲ್ಲಿದ್ದ ದಿಗ್ವಿಜಯ ಆಸ್ಪತ್ರೆಗೆ ಗಂಡ ದಾಖಲು ಮಾಡಿಸಿದ್ದಾರೆ. ಆದ್ರೆ ಪ್ರಕರಣದ ಬಗ್ಗೆ ಪೊಲೀಸರಿಗೆ ಮಾಹಿತಿ ಕೊಡದಂತೆ ಪತಿ ಒತ್ತಡ ಹೇರಿದ್ರಿಂದ ಆಸ್ಪತ್ರೆಯವರು ಪೊಲೀಸರಿಗೆ ದೌರ್ಜನ್ಯ ಪ್ರಕರಣದ ಬಗ್ಗೆ ಮಾಹಿತಿ ನೀಡಲ್ಲ. ಈ ಬಗ್ಗೆ ಸ್ಥಳಕ್ಕೆ ಬಂದ ಸಂತ್ರಸ್ತೆ ಪರಿಚಯಸ್ತರಾದ ಅನಿತಾ ಹಾಗೂ ಯಶೋಧ ಪೊಲೀಸರಿಗೆ ದೂರು ನೀಡದ ಬಗ್ಗೆ ಪ್ರಶ್ನಿಸಿ ಗಲಾಟೆ ಮಾಡಿದ್ದಾರೆ.

    ಆಗ ಪತಿ ಹೇಳಿದಕ್ಕೆ ದೂರು ಕೊಟ್ಟಿಲ್ಲ ಅಂತಾ ಆಸ್ಪತ್ರೆಯವರೇ ಒಪ್ಪಿಕೊಂಡಿದ್ದಲ್ಲದೇ ಫ್ಯಾಮಿಲಿಯವರ ಜೊತೆ ಐಸಿಯುನಲ್ಲಿಯೇ ವಾಗ್ವಾದಕ್ಕಿಳಿಯುತ್ತಾರೆ. ಇನ್ನು ಇಪ್ಪತ್ತನಾಲ್ಕು ಗಂಟೆ ವಿಷ ಕುಡಿದವರನ್ನು ಅಬ್ಸರ್‍ವೇಷನ್‍ನಲ್ಲಿ ಐಸಿಯುನಲ್ಲಿ ಇಡಬೇಕು ಅನ್ನೂ ರೂಲ್ಸ್ ಇದ್ರೂ, ನರಳಾಡುತ್ತಿದ್ದ ಸಂತ್ರಸ್ತೆಯನ್ನು ಯಾರು ಇಲ್ಲದ ವೇಳೆಯಲ್ಲಿ ಡಿಸ್ಚಾರ್ಜ್ ಮಾಡಿ ಗಂಡನ ಜೊತೆ ಹೋಗಮ್ಮ ಅಂತಾ ಕಳಿಸಿದ್ದಾರೆ.

    ಇತ್ತ ಮಹಿಳೆ ತನಗೆ ನಡೆಯೋದಕ್ಕೆ ಸಾಧ್ಯವಿಲ್ಲ ಅಂದ್ರೂ ಪತಿ ಬಳಿಯಿಂದ ಹಣ ಪಡೆದು ಯಾರು ಇಲ್ಲದ ವೇಳೆಯಲ್ಲಿ ಆಸ್ಪತ್ರೆಯಿಂದ ಹೊರದಬ್ಬಿದ್ದಾರೆ ಅಂತಾ ಸಂತ್ರಸ್ತೆ ಕಣ್ಣೀರು ಹಾಕಿದ್ದಾರೆ. ಸದ್ಯ ಪತಿ ಮನೆಯಿಂದ ಪಾರಾಗಿ ಬಂದಿರುವ ಮಹಿಳೆ ಖಾಸಗಿ ಆಸ್ಪತ್ರೆಯ ಅಮಾನವೀಯ ಕೃತ್ಯದ ವಿರುದ್ಧ ಕಿಡಿಕಾರಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮಲ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್- ಘಟನೆ ಬಗ್ಗೆ ಏನು ಹೇಳಲ್ಲ: ನ್ಯಾ.ವಿಶ್ವನಾಥ್ ಶೆಟ್ಟಿ

    ಮಲ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್- ಘಟನೆ ಬಗ್ಗೆ ಏನು ಹೇಳಲ್ಲ: ನ್ಯಾ.ವಿಶ್ವನಾಥ್ ಶೆಟ್ಟಿ

    ಬೆಂಗಳೂರು: ಲೋಕಾಯುಕ್ತ ಕಚೇರಿಯಲ್ಲಿಯೇ ಚಾಕು ಇರಿತಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಚೇತರಿಸಿಕೊಂಡಿದ್ದಾರೆ.

    ಕೈಗೆ ಬ್ಯಾಂಡೇಜ್ ಸುತ್ತಿಕೊಂಡು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಆಸ್ಪತ್ರೆಯಲ್ಲಿ ಎಲ್ಲರೂ ನನ್ನನ್ನು ಚೆನ್ನಾಗಿ ನೋಡಿಕೊಂಡಿದ್ದಾರೆ ಅವರೆಲ್ಲರಿಗೆ ನಾನು ಧನ್ಯವಾದ ಹೇಳಲು ಇಚ್ಛಿಸುತ್ತೇನೆ. ಹಲ್ಲೆಗೊಳಗಾದ ದಿನದ ಘಟನೆ ಬಗ್ಗೆ ಮಾತನಾಡಲು ಇದು ಸೂಕ್ತ ಸಮಯ ಅಲ್ಲ. ನನ್ನ ಆರೋಗ್ಯದ ಬಗ್ಗೆ ಪ್ರಾರ್ಥನೆ ಮಾಡಿದವರೆಲ್ಲರಿಗೂ ಧನ್ಯವಾದ ಎಂದು ಹೇಳಿ ಅಂತ ತನ್ನ ಕಾರಿನಲ್ಲಿ ತೆರಳಿದ್ರು.

    ನಗರದ ಅಂಬೇಡ್ಕರ್ ರಸ್ತೆಯಲ್ಲಿರುವ ತನ್ನ ಕಚೇರಿಯಲ್ಲಿ ಮಾರ್ಚ್ 3ರಂದು ಮಧ್ಯಾಹ್ನ ಆರೋಪಿ ತೇಜರಾಜ್ ಶರ್ಮಾ ಎಂಬಾತ ಕಚೇರಿಗೆ ನುಗ್ಗಿ ಲೋಕಾಯುಕ್ತರೊಂದಿಗೆ ಮಾತುಕತೆ ನಡೆಸಿದ್ದಾನೆ. ಬಳಿಕ ಅವರ ಎದೆ, ತೊಡೆಭಾಗ, ಹೊಟ್ಟೆ ಹಾಗೂ ಕೈ ಹೀಗೆ ಮೂರು ಬಾರಿ ಇರಿದಿದ್ದಾನೆ. ಕೂಡಲೇ ಅವರನ್ನು ಮಲ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಇತ್ತ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

  • ಎಚ್‍ಡಿ ಕುಮಾರಸ್ವಾಮಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್

    ಎಚ್‍ಡಿ ಕುಮಾರಸ್ವಾಮಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್

    ಬೆಂಗಳೂರು: ಕಳೆದ 10 ದಿನಗಳಿಂದ ಅಪೋಲೋ ಆಸ್ಪತ್ರೆಯಲ್ಲಿ ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.

    ಎರೋಟಿಕ್ ವಾಲ್ವ್ ಅಳವಡಿಕೆ ಹಿನ್ನೆಲೆಯಲ್ಲಿ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಎಚ್‍ಡಿ ಕುಮಾರಸ್ವಾಮಿ ಹೃದಯ ಶಸ್ತ್ರ ಚಿಕಿತ್ಸೆ ಸಂಬಂಧ ಸೆಪ್ಟೆಂಬರ್ 23 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಡಾ. ಸತ್ಯಕೀ ಹಾಗೂ ಡಾ.ಮಂಜುನಾಥ ಅವರ ನೇತೃತ್ವದಲ್ಲಿ ಆಪರೇಷನ್ ನಡೆದಿತ್ತು.

    ಇನ್ನು 10ನೇ ದಿನ ಡಿಸ್ಚಾರ್ಜ್ ಆಗುವುದಕ್ಕೆ ವೈದ್ಯರು ಕೂಡ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಭಾಗಗಳಲ್ಲಿ ಎಚ್‍ಡಿಕೆ ಗುಣಮುಖರಾಗಲೆಂದು ದೇವರ ಮೊರೆ ಹೋಗಿದ್ದ ಅಭಿಮಾನಿಗಳು, ಜೆಡಿಎಸ್ ಕಾರ್ಯಕರ್ತರು ದೇವಾಲಯ, ಚರ್ಚ್ ಹಾಗೂ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದರು.