Tag: ಡಿ.ಕೆ.ಶಿವಕುಮಾರ

  • ಶಾಸಕ ನಾಗೇಂದ್ರಗೆ ತಪ್ಪಿದ ಸಚಿವ ಸ್ಥಾನ- ಡಿಕೆಶಿ, ಉಗ್ರಪ್ಪರ ಮೇಲೆ ಬೆಂಬಲಿಗರ ಕಿಡಿ

    ಶಾಸಕ ನಾಗೇಂದ್ರಗೆ ತಪ್ಪಿದ ಸಚಿವ ಸ್ಥಾನ- ಡಿಕೆಶಿ, ಉಗ್ರಪ್ಪರ ಮೇಲೆ ಬೆಂಬಲಿಗರ ಕಿಡಿ

    ಬಳ್ಳಾರಿ: ಕೂಡ್ಲಿಗಿ ಶಾಸಕ ನಾಗೇಂದ್ರ ಅವರಿಗೆ ಸಚಿವ ಸ್ಥಾನ ಕೈತಪ್ಪಿದ್ದರಿಂದ ಆಕ್ರೋಶ ಹೊರಹಾಕಿದ ಬೆಂಬಲಿಗರು ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ವಿ.ಉಗ್ರಪ್ಪ ಅವರ ಬ್ಯಾನರ್‍ಗೆ ಚಪ್ಪಲಿಯಿಂದ ಹೊಡೆದು ಆಕ್ರೋಶ ಹೊರಹಾಕಿದ್ದಾರೆ.

    ನಗರದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಡಿ.ಕೆ.ಶಿವಕುಮಾರ್ ಹಾಗೂ ಸಂಸದ ವಿ.ಉಗ್ರಪ್ಪ ಅವರ ಬ್ಯಾನರ್‍ಗೆ ಚಪ್ಪಲಿ ಹಾಕಿ ಮೆರವಣಿಗೆ ಮಾಡಿದರು. ಬಳಿಕ ರಾಯಲ್ ಸರ್ಕಲ್‍ನಲ್ಲಿ ಸೇರಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ನಾಯಕರ ಫೋಟೋಗೆ ಚಪ್ಪಲಿಯಿಂದ ಹೊಡೆದು ಆಕ್ರೋಶ ಹೊರಹಾಕಿದರು. ಅಷ್ಟೇ ಅಲ್ಲದೆ ಟಯರ್ ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ಮುಂದುವರಿಸಿದರು.

    ಪ್ರತಿಭಟನೆಯಿಂದಾಗಿ ರಾಯಲ್ ಸರ್ಕಲ್‍ನಲ್ಲಿ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿ ನೂರಾರು ವಾಹನಗಳು ರಸ್ತೆಯಲ್ಲಿ ಸಾಲಾಗಿ ನಿಂತಿದ್ದವು. ಇತ್ತ ಶಾಸಕ ಭೀಮಾನಾಯ್ಕ್ ಅವರಿಗೂ ಸಚಿವ ಸ್ಥಾನ ಕೈತಪ್ಪಿದಕ್ಕೆ ಅವರ ಬೆಂಬಲಿಗರು ಹಾಗೂ ಕೈ ಕಾರ್ಯಕರ್ತರು ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ, ಟೈಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಚಿವ ಡಿಕೆಶಿಗೆ ಕಾಡುಸಿದ್ದೇಶ್ವರ ಮಠದ ಸ್ವಾಮೀಜಿ ಸಲಹೆ!

    ಸಚಿವ ಡಿಕೆಶಿಗೆ ಕಾಡುಸಿದ್ದೇಶ್ವರ ಮಠದ ಸ್ವಾಮೀಜಿ ಸಲಹೆ!

    ಬೆಂಗಳೂರು: `ಪವರ್’ಫುಲ್ ನಾಯಕ ಜಲಸಂಪನ್ಮೂಲ ಮತ್ತು ವೈದ್ಯಕೀಯ ಸಚಿವ ಡಿ.ಕೆ ಶಿವಕುಮಾರ್ ಅವರಿಗೆ ಕಾಡುಸಿದ್ದೇಶ್ವರ ಮಠದ ಶಿವಯೋಗಿ ಸ್ವಾಮೀಜಿ ಸಲಹೆ ನೀಡಿದ್ದಾರೆ.

    ಡಿ.ಕೆ ಶಿವಕುಮಾರ್ ಮಠದ ಮಗನಾಗಿ ಬೆಳೆದಿದ್ದಾರೆ. ಅವರು ಇಂತಹದ್ದೇ ಖಾತೆ ಬೇಕು ಎಂದು ಅಪೇಕ್ಷೆಪಡುವುದು ಬೇಡ. ಇರೋ ಸ್ಥಾನದಲ್ಲೇ ಅವರು ಸಾಧನೆ ಮಾಡಲಿ. ಹೀಗಾಗಿ ಸಿಕ್ಕಿರುವ ಸ್ಥಾನದಲ್ಲಿದ್ದು, ಕಾಯಕವೇ ಕೈಲಾಸವೆಂದು ಕೆಲಸ ಮಾಡಲಿ. ಮುಂದೊಂದು ದಿನ ಅವರು ಉನ್ನತ ಸ್ಥಾನಕ್ಕೆ ತಲುಪುತ್ತಾರೆ ಎಂದು ಶಿವಯೋಗಿ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

    ತಿಪಟೂರು ತಾಲೂಕಿನ ನೊಣವಿನಕೆರೆಯ ಕಾಡುಸಿದ್ದೇಶ್ವರ ಸಚಿವ ಡಿಕೆಶಿ ಅವರ ಆರಾಧ್ಯ ದೈವವಾಗಿದೆ. ಹೀಗಾಗಿ ಶ್ರೀಗಳ ಆಶೀರ್ವಾದ ಪಡೆದೇ ಡಿಕೆಶಿ ಶುಭಕಾರ್ಯ ಕೈಗೊಳ್ಳುತ್ತಾರೆ. ಅಲ್ಲದೇ ಮಠಕ್ಕೆ ಡಿಕೆಶಿ ಭೇಟಿ ನೀಡಿ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲಿದ್ದಾರೆ.

  • ಸರ್ಚ್ ವಾರೆಂಟ್‍ಗೂ ರಾಜ್ಯ ಸರ್ಕಾರಕ್ಕೂ ಸಂಬಂಧವಿಲ್ಲ: ಸಿಎಂ ಕುಮಾರಸ್ವಾಮಿ

    ಸರ್ಚ್ ವಾರೆಂಟ್‍ಗೂ ರಾಜ್ಯ ಸರ್ಕಾರಕ್ಕೂ ಸಂಬಂಧವಿಲ್ಲ: ಸಿಎಂ ಕುಮಾರಸ್ವಾಮಿ

    ಬೆಂಗಳೂರು: ಶಾಸಕ ಡಿ.ಕೆ.ಶಿವಕುಮಾರ್ ಅವರ ಮೇಲಿನ ಸಿಬಿಐ ಸರ್ಚ್ ವಾರೆಂಟ್‍ಗೂ ರಾಜ್ಯ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

    ಡಿಕೆಶಿ ಆಪ್ತರಾದ 11 ಜನರ ವಿರುದ್ಧ ಸಿಬಿಐ ಸರ್ಚ್ ವಾರೆಂಟ್ ಜಾರಿಯಾಗಿರುವ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ವಿಷಯದ ಕುರಿತು ಹಲವಾರು ಬಾರಿ ಚರ್ಚೆ ಮಾಡಲಾಗಿದೆ. ರಾಜ್ಯ ಸರ್ಕಾರಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಹೀಗಾಗಿ ತಾವೇ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವುದಾಗಿ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

    ಪ್ರಕರಣವು ಕೇಂದ್ರ ಹಾಗೂ ಡಿಕೆಶಿ ಅವರಿಗೆ ಸಂಬಂಧಿಸಿದ್ದು, ನನ್ನ ವ್ಯಾಪ್ತಿಗೆ ಬರಲ್ಲ. ಅವರು ಸಮರ್ಥರಿದ್ದಾರೆ, ಐಟಿ ದಾಳಿಯನ್ನು ಎದುರಿಸುವುದು ಬಿಡುವುದು ಅವರಿಗೆ ಬಿಟ್ಟಿದ್ದು ಎಂದು ತಿಳಿಸಿದರು.

    ರಾಜರಾಜೇಶ್ವರಿ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಜಯಗಳಿಸಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ಆರ್ ಆರ್ ನಗರದ ಚುನಾವಣೆ ಬಗ್ಗೆ ಏನೂ ತಲೆ ಕೆಡಿಸಿಕೊಂಡಿಲ್ಲ. ನಾವು ಅಥವಾ ಕಾಂಗ್ರೆಸ್ ಗೆಲ್ಲಬೇಕಿತ್ತು. ಅಲ್ಲಿ ಈಗ ಕಾಂಗ್ರೆಸ್ ಗೆದ್ದಿದೆ ಎಂದು ತಿಳಿಸಿದರು.

    ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಅವರ 11 ಮಂದಿ ಆಪ್ತರ ಮೇಲೆ ಸಿಬಿಐ ಕೋರ್ಟ್ ಸರ್ಚ್ ವಾರೆಂಟ್ ಹೊರಡಿಸಿದೆ. ಆದಾಯ ತೆರಿಗೆ ಪ್ರಕರಣದಲ್ಲಿ ಸಿಬಿಐ 82ನೇ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಪುಷ್ಪಾಂಜಲಿ ದೇವಿ ಅವರು ಸರ್ಚ್ ವಾರೆಂಟ್ ಹೊರಡಿಸಿದ್ದಾರೆ. ನಿನ್ನೆ ಕೋರ್ಟ್ ನಲ್ಲಿ ಡಿ.ಕೆ.ಶಿವಕುಮಾರ್ ಹಾಜರಾಗಿದ್ದರು. 11 ಜನರಲ್ಲಿ ಡಿಕೆ ಶಿವಕುಮಾರ್, ಡಿಕೆ ಸುರೇಶ್ ಇಬ್ಬರ ಹೆಸರಿಲ್ಲ.

    ಸರ್ಚ್ ವಾರೆಂಟ್ ಹೊರಡಿಸಿದ ವಿಚಾರ ತಿಳಿದು ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ ತುರ್ತು ಸುದ್ದಿಗೋಷ್ಠಿ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು.

    ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯ ನಿರ್ವಹಿಸುವ ಐಟಿ, ಇಡಿ ಮೂಲಕ ನಮ್ಮನ್ನು ಸದೆಬಡಿಯುವ ಪ್ರಯತ್ನ ಮಾಡಲಾಗುತ್ತಿದೆ. ಇಲಾಖೆಗಳನ್ನು ದುರಪಯೋಗ ಮಾಡಿಕೊಂಡ ಕೇಂದ್ರ ಸರ್ಕಾರ ನಮ್ಮ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ 11 ಜನರ ಮೇಲೆ ಸಿಬಿಐ ಮತ್ತು ಇಡಿ ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಹೊರಡಿಸಿದ್ದಾರೆ. ಬಿಜೆಪಿಯ ಬೆದರಿಕೆ ಮತ್ತು ಆಮಿಷಗಳಿಗೆ ನಾವು ಬಗ್ಗಲ್ಲ. ಈ ಸಂಬಂಧ ಕಾನೂನು ರೀತಿಯಲ್ಲಿ ನಾವು ಹೋರಾಡುತ್ತೇವೆ. ಬಿಜೆಪಿ ಕೀಳುಮಟ್ಟದ ರಾಜಕೀಯ ಮಾಡುತ್ತಿರೋದನ್ನು ನಾವು ಜನರಿಗೆ ತಿಳಿಸಿದ್ದೇವೆ. ಅಧಿಕಾರಿಗಳು ಯಾವ ಪ್ರಕರಣದಡಿಯಲ್ಲಿ ನಮ್ಮನ್ನು ಟಾರ್ಗೆಟ್ ಮಾಡ್ತಿದ್ದಾರೆ ಎಂಬುವುದು ನಮಗೆ ಗೊತ್ತಾಗಿಲ್ಲ ಎಂದು ಹೇಳಿದ್ದರು.

  • ರವಿ ಪೂಜಾರಿ ಹೆಸರಲ್ಲಿ ಡಿಕೆ ಸುರೇಶ್‍ಗೆ ಬೆದರಿಕೆ ಪ್ರಕರಣಕ್ಕೆ ಟ್ವಿಸ್ಟ್

    ರವಿ ಪೂಜಾರಿ ಹೆಸರಲ್ಲಿ ಡಿಕೆ ಸುರೇಶ್‍ಗೆ ಬೆದರಿಕೆ ಪ್ರಕರಣಕ್ಕೆ ಟ್ವಿಸ್ಟ್

    ಬೆಂಗಳೂರು: ಇಂಧನ ಸಚಿವ ಡಿಕೆ ಶಿವಕುಮಾರ್ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸುತ್ತಾ ಇದ್ರೆ ಇತ್ತ ಹಣಕ್ಕಾಗಿ ಭೂಗತ ಪಾತಕಿ ರವಿ ಪೂಜಾರಿ ಫೋನ್ ಮಾಡಿ ಡಿಕೆ ಸುರೇಶ್ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ.

    ಸುರೇಶ್ ಅವರಿಗೆ ಫೋನ್ ಮಾಡಿ ಬೆದರಿಕೆ ಹಾಕಿದ್ದು ಮಂಗಳೂರು ಮೂಲದ ವ್ಯಕ್ತಿ ಎಂದು ತಿಳಿದುಬಂದಿದೆ. ರವಿ ಪೂಜಾರಿಯ 50ಕ್ಕೂ ಹೆಚ್ಚು ಬಂಟರಲ್ಲಿ ಮಂಗಳೂರಿನ ಒಬ್ಬ ಸುರೇಶ್‍ಗೆ ಕಾಲ್ ಮಾಡಿ ಬೆದರಿಕೆ ಹಾಕಿದ್ದಾನೆ ಎಂದು ಹೇಳಲಾಗುತ್ತಿದೆ.

    ಡಿ.ಕೆ.ಸುರೇಶ್ ಅವರ ಚಾಲಕನಿಗೆ ರವಿ ಪೂಜಾರಿ ಬೆದರಿಕೆ ಹಾಕಿಲ್ಲವೆಂದು ಸಿಸಿಬಿ ಪೊಲೀಸ್ ಮೂಲಗಳು ತಿಳಿಸಿವೆ. ಆದರೆ ಫೋನ್ ಮಾಡಿದ ವ್ಯಕ್ತಿಯೂ ಸಹ ಸದ್ಯ ಭೂಗತವಾಗಿದ್ದಾನೆ. ಆತ ರವಿ ಪೂಜಾರಿಯ ಜೊತೆ ಇನ್ನೂ ಸಂಪರ್ಕ ಹೊಂದಿದ್ದಾನಾ ಎಂಬ ಅನುಮಾನದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.