Tag: ಡಿ ಕೆ ಶಿವಕುಮಾರ್‌ʼ

  • ಕೊಟ್ಟ ಮಾತಿನಂತೆ ನಮ್ಮ ಸರ್ಕಾರ ಪೌರ ಕಾರ್ಮಿಕರ ಬದುಕಲ್ಲಿ ಬದಲಾವಣೆ ತಂದಿದೆ: ಡಿಕೆಶಿ

    ಕೊಟ್ಟ ಮಾತಿನಂತೆ ನಮ್ಮ ಸರ್ಕಾರ ಪೌರ ಕಾರ್ಮಿಕರ ಬದುಕಲ್ಲಿ ಬದಲಾವಣೆ ತಂದಿದೆ: ಡಿಕೆಶಿ

    – ಆಯುಕ್ತರಿಗೆ ನೀಡುವ ಗೌರವವನ್ನು ಪೌರಕಾರ್ಮಿಕರಿಗೂ ನೀಡಬೇಕು; ಡಿಸಿಎಂ

    ಬೆಂಗಳೂರು: ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ಪೌರ ಕಾರ್ಮಿಕರನ್ನು ಖಾಯಂ ಮಾಡುವ ಮೂಲಕ ಅವರ ಬದುಕಿನಲ್ಲಿ ಬದಲಾವಣೆ ತಂದು, ಸಮಾಜದಲ್ಲಿ ಸಮಾನತೆ ತರುವ ಕೆಲಸ ಮಾಡಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D K Shivakumar) ತಿಳಿಸಿದರು.

    ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಗುರುವಾರ ನಡೆದ ಪೌರ-ಕಾರ್ಮಿಕರ ದಿನಾಚರಣೆ  ಹಾಗೂ 12,692 ಮಂದಿ ಪೌರಕಾರ್ಮಿಕರಿಗೆ ಖಾಯಂ ನೇಮಕಾತಿ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. ಇದನ್ನೂ ಓದಿ: ಜನರ ಒತ್ತಡಕ್ಕೆ ಕೇಂದ್ರ ಸರ್ಕಾರ ಜಾತಿಗಣತಿ ಘೋಷಣೆ: ಮಲ್ಲಿಕಾರ್ಜುನ ಖರ್ಗೆ

    ಸಮಾಜ ಸುಭದ್ರವಾಗಿರಲು ನಾಲ್ಕು ಆಧಾರ ಸ್ತಂಭಗಳಿರಬೇಕು. ಅವುಗಳೆಂದರೆ ಕೃಷಿಕ, ಕಾರ್ಮಿಕ, ಸೈನಿಕ ಹಾಗೂ ಶಿಕ್ಷಕ. ಕಾರ್ಮಿಕರು ಈ ಸಮಾಜದ ಆಧಾರಸ್ತಂಭ. ನಮ್ಮ ಸರ್ಕಾರ ಪೌರಕಾರ್ಮಿಕರನ್ನು ದೇವರ ಮಕ್ಕಳು, ಸ್ವಚ್ಛತಾ ರಾಯಭಾರಿಗಳು ಎಂದು ಭಾವಿಸುತ್ತಿದೆ. ನೀವು ಸಮಾಜದ ಆರೋಗ್ಯ ಕಾಪಾಡುತ್ತಿರುವ ವೈದ್ಯರು, ನೀವು ಬೆಂಗಳೂರು (Bengaluru) ನಗರವನ್ನು ಸುಂದರವಾಗಿಟ್ಟು ಸೇವೆ ಮಾಡಿರುವುದಕ್ಕೆ ಈ ನಗರಕ್ಕೆ ವಿಶ್ವ ಮಟ್ಟದ ಹೆಸರು ಬಂದಿದೆ. ಇಡೀ ವಿಶ್ವಕ್ಕೆ ದೊಡ್ಡ ಸೇವೆ ಮಾಡುವ ಕಾರ್ಮಿಕರ ದಿನವಿಂದು ಎಂದು ಶ್ಲಾಘಿಸಿದರು.

    ಪುರದ ಹಿತ ಕಾಪಾಡುತ್ತಿರುವವರು ಪೌರ ಕಾರ್ಮಿಕರು. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ (Mallikarjuna Kharge) ಅವರ ಮಾರ್ಗದರ್ಶನದಲ್ಲಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಾವು ವಿರೋಧ ಪಕ್ಷದಲ್ಲಿದ್ದಾಗ ಹಾಗೂ ನನ್ನ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ (Congress) ಪಕ್ಷ ಪೌರ ಕಾರ್ಮಿಕರನ್ನು ಸರ್ಕಾರಿ ಕಾರ್ಮಿಕರನ್ನಾಗಿ ಮಾಡುವ ಮಾತು ಕೊಟ್ಟಿದ್ದೆವು. ನಾವುಗಳು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ. ಪೌರ ಕಾರ್ಮಿಕರ ಮಕ್ಕಳೇ ಇಂದು ಈ ಕಾರ್ಯಕ್ರಮವನ್ನು ನಡೆಸುತ್ತಿದ್ದಾರೆ. ನಿಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ, ಬುದ್ಧಿವಂತರಾಗಿ ದೊಡ್ಡ ಹುದ್ದೆ ಅಲಂಕರಿಸುವಂತೆ ಮಾಡಬೇಕು ಎಂಬುದು ನಮ್ಮ ಸರ್ಕಾರದ ಉದ್ದೇಶ ಎಂದು ಹೇಳಿದರು. ಇದನ್ನೂ ಓದಿ: ಸರ್ಕಾರದ ಸೌಲಭ್ಯಗಳನ್ನು ಬಳಸಿ ಪ್ರಗತಿ ಹೊಂದಿ: ಪೌರಕಾರ್ಮಿಕರಿಗೆ ಸಿಎಂ ಕಿವಿಮಾತು

    ಯೋಗಿ ಎನಿಸಿಕೊಳ್ಳುವುದಕ್ಕಿಂತ ಉಪಯೋಗಿ ಎನಿಸಿಕೊಂಡರೆ ಬದುಕಿಗೆ ಹೆಚ್ಚು ಬೆಲೆ. ಪೌರಕಾರ್ಮಿಕರನ್ನು ಕುವೆಂಪು ಅವರು ಶಿವನಿಗೆ ಹೋಲಿಸಿದ್ದರು. `ಬೀದಿ ಗುಡಿಸುವ ಬಡವನೆದೆಯಲ್ಲಿ ನಾವಿದ್ದೇವೆ. ಉಳುಮೆ ಮಾಡುವ ಒಕ್ಕಲಿಗನ ಜತೆ ನಾವಿದ್ದೇವೆ. ಅಂಜದಿರು ಸೋದರನೇ ನಿಮ್ಮ ಜತೆ ನಾವಿದ್ದೇವೆ’ ಎಂದು ಕುವೆಂಪು ಅವರು ಹೇಳಿದ್ದರು. ಇಂದು ನಿಮ್ಮ ಬದುಕು ಬದಲಾವಣೆಯಾಗುತ್ತಿರುವ ಬಹಳ ಪವಿತ್ರವಾದ ದಿನ. ಇಂದು ನೀವು ಸರ್ಕಾರಿ ನೌಕರರಾಗಿದ್ದೀರಿ ಎಂದು ತಿಳಿಸಿದರು. ಇದನ್ನೂ ಓದಿ: ಎಎಸ್‍ಪಿಗೆ ಸಿಎಂ ಕೈ ಎತ್ತಿದ್ದಾರೆ, ಏಕವಚನದಲ್ಲಿ ಕರೆದಿದ್ದಾರೆ ಎಂಬುದು ಮಾಧ್ಯಮ ಸೃಷ್ಟಿ: ರಾಜಣ್ಣ

    ಮಲ್ಲಿಕಾರ್ಜುನ ಖರ್ಗೆ ಅವರು ಮುನ್ಸಿಪಲ್ ಅಧ್ಯಕ್ಷರಾಗಿ ಜೀವನ ಆರಂಭಿಸಿದವರು. ಇಂದು ದೇಶದ ಕಾಂಗ್ರೆಸ್‌ನ ಅಧ್ಯಕ್ಷರಾಗಿದ್ದಾರೆ. ಮಹಾತ್ಮಾ ಗಾಂಧೀಜಿ, ನೆಹರೂ, ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರು ಅಲಂಕರಿಸಿದ ಹುದ್ದೆಯಲ್ಲಿದ್ದಾರೆ. ಖರ್ಗೆ ಅವರು ಕಾರ್ಮಿಕ ಸಚಿವರಾಗಿ ಮಾಡಿದ ಕೆಲಸಗಳು ದೇಶದ ಇತಿಹಾಸ ಪುಟ ಸೇರಿವೆ. ದೇಶದ ಉದ್ದಗಲದಲ್ಲಿ ಇಎಸ್‌ಐ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜುಗಳನ್ನು ಆರಂಭಿಸಿದ್ದಾರೆ. ಹೀಗಾಗಿ ಅವರಿಂದಲೇ ಈ ಕಾರ್ಯಕ್ರಮ ಉದ್ಘಾಟಿಸಲು ತೀರ್ಮಾನಿಸಿದ್ದೇವೆ ಎಂದರು. ಇದನ್ನೂ ಓದಿ: Haveri | ರಸ್ತೆ ಮಧ್ಯೆ ಬಸ್ ನಿಲ್ಲಿಸಿ ನಮಾಜ್ – ಡ್ರೈವರ್ ಅಮಾನತು

    ಪೌರ ಕಾರ್ಮಿಕರ ಅಭಿವೃದ್ಧಿಗಾಗಿ ಪಾಲಿಕೆ ಬಜೆಟ್‌ನಲ್ಲಿ 600 ಕೋಟಿ ರೂ. ಹಣ ಮೀಸಲಿಡಲಾಗಿದ್ದು, ಒಂದೇ ಒಂದು ರೂಪಾಯಿ ಲಂಚ ಪಡೆಯದೇ ನಿಮ್ಮನ್ನು ಖಾಯಂ ಮಾಡಲಾಗಿದೆ. ಸಿಂಧುತ್ವ ವಿಚಾರದಲ್ಲಿ ಕೆಲವು ಗೊಂದಲಗಳಿರುವ ಕಾರಣಕ್ಕೆ ಕೆಲವರ ಕೆಲಸ ಖಾಯಂ ಆಗಿಲ್ಲ. ಈ ಬಗ್ಗೆ ಪ್ರತ್ಯೇಕವಾಗಿ ಬೂತ್ ಆರಂಭಿಸಿ, ನಿಮ್ಮ ದಾಖಲೆಗಳನ್ನು ಪರಿಶೀಲನೆ ಮಾಡಿಸಿ ನಿಮ್ಮೆಲ್ಲರಿಗೂ ನ್ಯಾಯ ಒದಗಿಸಲಾಗುವುದು ಎಂದು ವಾಗ್ದಾನ ನೀಡಿದರು. ಇದನ್ನೂ ಓದಿ: ನಮ್ಮ ಪಡೆಗಳ ಆತ್ಮಸ್ಥೈರ್ಯ ಕುಗ್ಗಿಸ್ತೀರಾ? – ಪಹಲ್ಗಾಮ್‌ ಅರ್ಜಿದಾರರ ವಿರುದ್ಧ ಸುಪ್ರೀಂ ಕೆಂಡಾಮಂಡಲ

    ಇದ್ದಾಗ ರೊಟ್ಟಿ ಕೊಟ್ಟರೆ, ಸತ್ತಾಗ ಸ್ವರ್ಗ ಸಿಗುತ್ತದೆ ಎಂದು ನಮ್ಮ ಹಿರಿಯರು ಹೇಳಿದ್ದಾರೆ. ನಮ್ಮ ಸರ್ಕಾರ ನಿಮ್ಮ ಸರ್ಕಾರ. ಬೆಂಗಳೂರಿನ ಕಾಂಗ್ರೆಸ್ ಶಾಸಕರು ಸದಾ ನಿಮ್ಮನ್ನು ಖಾಯಂ ಮಾಡುವ ಬಗ್ಗೆ ನನ್ನ ಮೇಲೆ ಒತ್ತಡ ಹಾಕುತ್ತಿದ್ದರು. ನಮ್ಮ ಪ್ರಣಾಳಿಕೆಯಲ್ಲಿ ಹೇಳಿದಂತೆ ಈ ಕೆಲಸ ಮಾಡಿದ್ದೇವೆ. ಇದು ನಮ್ಮ ಸಂಕಲ್ಪ. ಸಮಾಜ ಎನ್ನುವ ಚಕ್ರದಲ್ಲಿ ಕೆಳಗಿರುವವರು ಮೇಲಕ್ಕೆ ಹೋಗುತ್ತಾರೆ. ಮೇಲಿರುವವರು ಕೆಳಗೆ ಹೋಗುತ್ತಾರೆ ಎಂದು ವಿವೇಕಾನಂದರು ಹೇಳಿದ್ದಾರೆ. ಅದೇ ರೀತಿ ನಿಮಗೆ ಸಮಾನತೆ ನೀಡುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.

    ಬಸವಲಿಂಗಪ್ಪ, ಐಪಿಡಿ ಸಾಲಪ್ಪ ಅವರ ಜತೆ ನಾನು ರಾಜಕೀಯವಾಗಿ ಕೆಲಸ ಮಾಡಿದ್ದು, ಅವರನ್ನು ಸ್ಮರಿಸುತ್ತೇನೆ. ಅವರು ನಿಮ್ಮ ಬದುಕಿನ ಕಲ್ಯಾಣಕ್ಕೆ ಹೋರಾಟ ಮಾಡಿದ್ದಾರೆ. ಡಿ.ಸಾಲಪ್ಪ ಅವರು ನಿಮ್ಮ ಬಗ್ಗೆ ವರದಿ ನೀಡಿದ್ದಾರೆ. ಆ ವರದಿಯನ್ನು ಹಂತ ಹಂತವಾಗಿ ಅನುಷ್ಠಾನಕ್ಕೆ ತರಲು ಪ್ರಯತ್ನಿಸುತ್ತಿದ್ದೇವೆ. ನಿಮ್ಮ ಮಕ್ಕಳ ಭವಿಷ್ಯ ಗಟ್ಟಿಗೊಳಿಸಲು ಅನೇಕ ಕಾರ್ಯಕ್ರಮ ರೂಪಿಸಲಾಗಿದೆ. ಇದಕ್ಕಾಗಿ 700 ಕೋಟಿ ರೂ. ಮೀಸಲಿಡಲಾಗಿದೆ. ನೀವು ನಿವೃತ್ತಿಯಾದಾಗ 10 ಲಕ್ಷ ರೂ. ಹಣವನ್ನು ಡೆಪಾಸಿಟ್ ಮಾಡಿ 6 ಸಾವಿರ ರೂ. ಪಿಂಚಣಿ ದೊರೆಯುವಂತೆ ಯೋಜನೆ ರೂಪಿಸಿದ್ದೇವೆ. ನಿಮಗೆ ಆರೋಗ್ಯ, ಮಕ್ಕಳ ಶಿಕ್ಷಣ, ಕೌಶಲ್ಯಾಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದರು. ಇದನ್ನೂ ಓದಿ: ಹಿಂದೂಗಳ ಜೊತೆ ಹಿಂದೂಗಳೇ ನಿಲ್ಲಬೇಕು – 26 ಕುಟುಂಬಕ್ಕೆ ಶೃಂಗೇರಿ ಮಠದಿಂದ 2 ಲಕ್ಷ ಪರಿಹಾರ

    2017ರಲ್ಲಿ ಸಿದ್ದರಾಮಯ್ಯ ಅವರ ಸರ್ಕಾರ 10 ಸಾವಿರ ಪೌರ ಕಾರ್ಮಿಕರನ್ನು ನೇರ ನೇಮಕ ಮಾಡಿತ್ತು. ರಾಜ್ಯದಾದ್ಯಂತ ನಿಮಗಾಗಿ 7.70 ಲಕ್ಷ ಮನೆ ನಿರ್ಮಿಸಲಾಗಿತ್ತು. 1 ಸಾವಿರ ಪೌರ ಕಾರ್ಮಿಕರನ್ನು ವಿದೇಶ ಪ್ರವಾಸಕ್ಕೆ ಕಳುಹಿಸಲಾಗಿದೆ. 2024-25ನೇ ಸಾಲಿನ ಬಜೆಟ್‌ನಲ್ಲಿ ಆರೋಗ್ಯ ವಿಮೆ ಘೋಷಿಸಿದ್ದಾರೆ ಎಂದು ಸರ್ಕಾರದ ಕಾರ್ಯಕ್ರಮಗಳನ್ನು ವಿವರಿಸಿದರು. ಇದನ್ನೂ ಓದಿ: ಪಹಲ್ಗಾಮ್‌ ಉಗ್ರರ ದಾಳಿ ಖಂಡಿಸಿ, ತನಿಖೆಗೆ ಸಹಕರಿಸಿ: ಪಾಕ್‌ಗೆ ಬುದ್ದಿಮಾತು ಹೇಳಿದ ಅಮೆರಿಕ

    ಕೋವಿಡ್ ಸಂದರ್ಭದಲ್ಲಿ ನಿಮ್ಮ ಪ್ರಾಣವನ್ನು ಪಣಕ್ಕಿಟ್ಟು ವಾರಿಯರ್‌ನಂತೆ ಇಡೀ ರಾಜ್ಯವನ್ನು ಕಾಪಾಡಿದ್ದನ್ನು ನಾವು ಮರೆಯಲು ಸಾಧ್ಯವಿಲ್ಲ. ಪೌರ ಕಾರ್ಮಿಕರನ್ನು ಯಾರೂ ಕೀಳಾಗಿ ಕಾಣುವಂತಿಲ್ಲ. ನಾವು ಆಯುಕ್ತರಿಗೆ ನೀಡುವ ಗೌರವವನ್ನು ಪೌರಕಾರ್ಮಿಕರಿಗೂ ನೀಡಬೇಕು ಎಂದು ತಿಳಿಸಿದರು.

  • ಬೆಂಗಳೂರಿಗಿಂತ ಚೆನ್ನಾಗಿ 10,000 ಎಕ್ರೆ ಜಾಗದಲ್ಲಿ ಉತ್ತಮ ಸಿಟಿ ಮಾಡ್ತೀವಿ: ಡಿಕೆಶಿ

    ಬೆಂಗಳೂರಿಗಿಂತ ಚೆನ್ನಾಗಿ 10,000 ಎಕ್ರೆ ಜಾಗದಲ್ಲಿ ಉತ್ತಮ ಸಿಟಿ ಮಾಡ್ತೀವಿ: ಡಿಕೆಶಿ

    – ರಾಮನಗರ ಹೆಸ್ರು ಬದಲಾವಣೆ ಮಾಡಿಯೇ ತೀರುತ್ತೇನೆ; ಡಿಸಿಎಂ ಶಪಥ

    ಮೈಸೂರು: ಟೌನ್‌ಶಿಪ್ ಪಿತಾಮಹ ದೇವೇಗೌಡ (H D Devegowda) ಹಾಗೂ ಕುಮಾರಸ್ವಾಮಿ ಅವರು. ಯಾರು ಏನೇ ಹೇಳಿದ್ರು ಗ್ರೇಟರ್ ಬೆಂಗಳೂರು (Greater Bengaluru) ಮಾಡೇ ಮಾಡುತ್ತೇವೆ. ಬೆಂಗಳೂರಿಗಿಂತ (Bengaluru) ಚೆನ್ನಾಗಿ 10 ಸಾವಿರ ಎಕ್ರೆಯಲ್ಲಿ ಉತ್ತಮ ಸಿಟಿ ಮಾಡುತ್ತೇವೆ. ಇದು ಮಾಡೆಲ್ ಸಿಟಿ ಆಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D K Shivakumar) ಹೇಳಿದ್ದಾರೆ.

    ಬಿಡದಿ ಟೌನ್‌ಶಿಪ್‌ಗೆ (Bidadi Township) ರೈತರ ಭೂಮಿ ಕೈಬಿಡುವಂತೆ ಸಿಎಂಗೆ ಮಾಜಿ ಪ್ರಧಾನಿ ದೇವೇಗೌಡ ಅವರು ಪತ್ರ ಬರೆದಿರುವ ವಿಚಾರವಾಗಿ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕುಮಾರಸ್ವಾಮಿ ಕಾಲದಲ್ಲೇ 7 ಟೌನ್‌ಶಿಪ್ ಮಾಡಬೇಕು ಎಂದು ತೀರ್ಮಾನ ಆಗಿತ್ತು. ಅದಕ್ಕಾಗಿ 300 ಕೋಟಿ ರೂ. ಹಣ ಕೊಟ್ಟಿದ್ದರು. ಟೌನ್‌ಶಿಪ್ ಪ್ಲಾನ್ ಅವರ ಕಾಲದಲ್ಲೇ ಆಗಿದ್ದು. ನಾನು ಡೈನೋಟಿಫಿಕೇಶ್ ಮಾಡಲು ಹೋಗಲ್ಲ ಎಂದರು. ಇದನ್ನೂ ಓದಿ: ಹಿಂದೂಗಳ ನರಮೇಧ ನಡೆಸಿದ ಉಗ್ರರಿಗೆ ತಕ್ಕ ಶಿಕ್ಷೆ – ಇಬ್ಬರು ಭಯೋತ್ಪಾದಕರ ಮನೆಗಳು ಬ್ಲಾಸ್ಟ್!

    ಈ ಹಿಂದೆ ನನ್ನ ಮೇಲೆ ಏನೆಲ್ಲಾ ಹೇಳಿದ್ರು, ಅದೆಲ್ಲಾ ಇತಿಹಾಸ. ಟೌನ್‌ಶಿಪ್ ಪಿತಾಮಹ ದೇವೇಗೌಡ ಹಾಗೂ ಕುಮಾರಸ್ವಾಮಿ ಅವರು. ಯಾರು ಏನೇ ಹೇಳಿದ್ರು ಗ್ರೇಟರ್ ಬೆಂಗಳೂರು ಮಾಡೇ ಮಾಡುತ್ತೇವೆ. ಬೆಂಗಳೂರಿಗಿಂತ ಚೆನ್ನಾಗಿ 10 ಸಾವಿರ ಎಕ್ರೆಯಲ್ಲಿ ಉತ್ತಮ ಸಿಟಿ ಮಾಡುತ್ತೇವೆ. ಇದು ಮಾಡೆಲ್ ಸಿಟಿ ಆಗುತ್ತದೆ. ರೈತರು ಜಮೀನಿನ ಬದಲಾಗಿ ದುಡ್ಡು ತೆಗೆದುಕೊಳ್ಳಬಹುದು. ಇಲ್ಲದಿದ್ದರೆ ಅಭಿವೃದ್ದಿ ಪಡಿಸಿದ ಲ್ಯಾಂಡ್ ತೆಗೆದುಕೊಳ್ಳಬಹುದು ಎಂದು ಹೇಳಿದರು. ಇದನ್ನೂ ಓದಿ: ನಾನು ಒಂದು ಧರ್ಮದ ಪರ ಅಲ್ಲ: ಸಿದ್ದರಾಮಯ್ಯ

    2 ಬಾರಿ ಕುಮಾರಸ್ವಾಮಿ ಸಿಎಂ ಆದ್ರೂ, ಯಾಕೆ ರೈತರ ಭೂಮಿ ಸ್ವಾಧೀನದಿಂದ ಕೈ ಬಿಡಲಿಲ್ಲ. ಈ ಬಗ್ಗೆ ದೇವೇಗೌಡರೇ ಹೇಳಲಿ. ಇದರಲ್ಲಿ ರಾಜಕೀಯ ಬೇಡ. ಇದೆಲ್ಲಾ ನಿಮ್ಮ ಮಗನೇ ಮಾಡಿದ್ದು, ನಿಮ್ಮ ಕಾಲದಲ್ಲೇ ಆಗಿದ್ದು ಎಂದು ಟಾಂಗ್ ಕೊಟ್ಟರು. ಇದನ್ನೂ ಓದಿ: ಉಗ್ರರ ದಾಳಿ ನಡೆದ ಪಹಲ್ಗಾಮ್‌ನಲ್ಲಿ ನಿಮ್ಮ ʻPublic TVʼ; ಬೈಸರನ್ ವ್ಯಾಲಿಯಿಂದ ಕನ್ನಡದ ಏಕೈಕ ಚಾನಲ್ ಪ್ರತ್ಯಕ್ಷ ವರದಿ..!

    ರಾಮನಗರ ಹೆಸರು ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿ, ಅದನ್ನು ಹೇಗೆ ಮಾಡಬೇಕು ಅಂತಾ ನನಗೆ ಗೊತ್ತು. ಅದನ್ನು ಮಾಡೇ ಮಾಡುತ್ತೇನೆ. ನಾವೇನು ಹೊರಗಿನಿಂದ ಬಂದವರಲ್ಲ. ನಮ್ಮ ಭೂಮಿ ನಮ್ಮ ನೆಲದ ಬಗ್ಗೆ ನಮಗೆ ಗೊತ್ತು. ಯಾರು ಅಪ್ಪ ಅಮ್ಮನ ಹೆಸರು ಬದಲಾಯಿಸಲ್ಲ. ಅಫಿಡೆವಿಟ್ ಮಾಡಿಸಿಕೊಳ್ಳಬಹುದು ಅಷ್ಟೇ ಎಂದರು.