Tag: ಡಿ.ಕೆ.ಶಿವಕುಮಾರ್

  • ಶೈಕ್ಷಣಿಕ, ಸಂಶೋಧನಾ ಭವನ ಕಟ್ಟಡಗಳ ಶಂಕುಸ್ಥಾಪನೆ – ಗುದ್ದಲಿ ಪೂಜೆ ಮಾಡಿದ ಡಿಕೆಶಿ, ಮುನಿರತ್ನ

    ಶೈಕ್ಷಣಿಕ, ಸಂಶೋಧನಾ ಭವನ ಕಟ್ಟಡಗಳ ಶಂಕುಸ್ಥಾಪನೆ – ಗುದ್ದಲಿ ಪೂಜೆ ಮಾಡಿದ ಡಿಕೆಶಿ, ಮುನಿರತ್ನ

    ಬೆಂಗಳೂರು: ಜ್ಞಾನಭಾರತಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಶೈಕ್ಷಣಿಕ ಭವನ ಹಾಗೂ ಸಂಶೋಧನಾ ಭವನ ಕಟ್ಟಡಗಳ ಶಂಕುಸ್ಥಾಪನೆ ಸಂದರ್ಭ ಡಿಸಿಎಂ ಡಿ.ಕೆ ಶಿವಕುಮಾರ್ (D K Shivakumar) ಮತ್ತು ಶಾಸಕ ಮುನಿರತ್ನ (Munirathna) ಹಾರೆ ಹಿಡಿದು ಗುದ್ದಲಿ ಪೂಜೆ ಮಾಡಿದ್ದಾರೆ.

    ಜ್ಞಾನಭಾರತಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಪ್ರಧಾನ ಮಂತ್ರಿ ಉಚ್ಚತರ ಶಿಕ್ಷಾ ಅಭಿಯಾನ ಯೋಜನೆಯಡಿಯಲ್ಲಿ ಮಂಜೂರಾಗಿರುವ ಶೈಕ್ಷಣಿಕ ಭವನ ಹಾಗೂ ಸಂಶೋಧನಾ ಭವನ ಕಟ್ಟಡಗಳ ಶಂಕುಸ್ಥಾಪನೆ ನಡೆಯಿತು. ಇದನ್ನೂ ಓದಿ: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಂಗನಾ ರಣಾವತ್ ಭೇಟಿ

    ಕಾರ್ಯಕ್ರಮದಲ್ಲಿ ರಾಜರಾಜೇಶ್ವರಿನಗರ ಶಾಸಕ ಮುನಿರತ್ನ ಅಧ್ಯಕ್ಷತೆ ವಹಿಸಿದ್ದು, ಶಂಕುಸ್ಥಾಪನೆ ನೆರವೇರಿಸಲು ಡಿಕೆಶಿ ಅವರನ್ನ ಆಹ್ವಾನಿಸಿದ್ದರು. ಈ ವೇಳೆ ಇಬ್ಬರು ಸೇರಿ ಶಂಕುಸ್ಥಾಪನೆ ಮಾಡಿದರು. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್ ಉಪಸ್ಥಿತರಿದ್ದರು. ಇದನ್ನೂ ಓದಿ: ಬಲ್ಡೋಟಾ ಕಾರ್ಖಾನೆ ವಿಸ್ತರಣೆ ಕೆಲಸ ನಿಲ್ಲಿಸುವಂತೆ ಜಿಲ್ಲಾಧಿಕಾರಿಗೆ ಸಿಎಂ ಸೂಚನೆ

    ಇತ್ತೀಚಿನ ದಿನಗಳಲ್ಲಿ ಡಿಕೆ ಬ್ರದರ್ಸ್ ಮತ್ತು ಮುನಿರತ್ನ ನಡುವೆ ರಾಜಕೀಯ ಜಟಾಪಟಿ ಜೋರಾಗಿತ್ತು. ಇದೀಗ ಇಬ್ಬರು ಸೇರಿ ಗುದ್ದಲಿ ಪೂಜೆ ಮಾಡಿರುವುದು ನಾನಾ ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ: ಮದುವೆಯಾದ 6 ತಿಂಗಳಿಗೆ ಟೆಕ್ಕಿ ಆತ್ಮಹತ್ಯೆ – ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ

  • ವಿಧಾನಸಭೆಯಲ್ಲಿ ಅಕ್ರಮ ಮದ್ಯ ಮಾರಾಟ ವಿಚಾರ ಗದ್ದಲ, ಕೋಲಾಹಲ – ಕಿಕ್‌ ಇಳಿಸಿದ ಡಿಕೆಶಿ

    ವಿಧಾನಸಭೆಯಲ್ಲಿ ಅಕ್ರಮ ಮದ್ಯ ಮಾರಾಟ ವಿಚಾರ ಗದ್ದಲ, ಕೋಲಾಹಲ – ಕಿಕ್‌ ಇಳಿಸಿದ ಡಿಕೆಶಿ

    – ಎಸ್ಸಿ-ಎಸ್ಟಿ ಜನ ಮಾತ್ರ ಮದ್ಯ ಕುಡೀತಾರಾ?
    – ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ ತೀವ್ರ ಆಕ್ಷೇಪ

    ಬೆಂಗಳೂರು: ವಿಧಾನಸಭೆ (Vidhan Sabha) ಕಲಾಪದಲ್ಲಿಂದು ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮಧ್ಯ ಮಾರಾಟ ವಿಚಾರ ಗದ್ದಲ, ಕೋಲಾಹಲ ಸೃಷ್ಟಿಸಿತ್ತು.

    ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟ (Liquor Sale) ತಡೆಯುವಂತೆ ಶಾಸಕ ಮಹಾಂತೇಶ ಕೌಜಲಗಿ ಪ್ರಶ್ನೆ ಕೇಳಿದ್ರು. ಈ ವೇಳೆ ವಿಪಕ್ಷ ಸದಸ್ಯರು ಅಕ್ರಮ ಮದ್ಯ ಮಾರಾಟಕ್ಕೆ ಅಬಕಾರಿ ಇಲಾಖೆ ಟಾರ್ಗೆಟ್ ಫಿಕ್ಸ್ ಮಾಡಿರೋದೇ ಕಾರಣ ಅಂತ ಆಪಾದಿಸಿದರು. ಇದನ್ನೂ ಓದಿ: ಸಾರ್ವಜನಿಕ ಸ್ಥಳಗಳಲ್ಲಿ ಮಕ್ಕಳಿಗೆ ಹಾಲುಣಿಸಲು ಸೂಕ್ತ ಸೌಕರ್ಯ ಕಲ್ಪಿಸಿ – ಸರ್ಕಾರಗಳಿಗೆ ಸುಪ್ರೀಂ ಸೂಚನೆ

    ಈ ವೇಳೆ ಎಸ್‌ಸಿ/ಎಸ್‌ಟಿ ಕಾಲೋನಿಗಳಲ್ಲೇ ಹೆಚ್ಚಾಗಿ ಅಕ್ರಮ ಮದ್ಯ ಮಾರಾಟ ಮಾಡಲಾಗ್ತಿದೆ. ಇದರಿಂದ ತಮ್ಮ ಕ್ಷೇತ್ರದಲ್ಲಿ 35-40 ವರ್ಷದ ಒಬ್ಬೇಒಬ್ಬ ದಲಿತ ಯುವಕರೂ ಬದುಕಿಲ್ಲ ಅಂತ ಶಾಸಕ ಆರಗ ಜ್ಞಾನೇಂದ್ರ ಸದನದ ಗಮನ ಸೆಳೆದರು. ಆದ್ರೆ ಆರಗ ಜ್ಞಾನೇಂದ್ರ ಹೇಳಿಕೆಗೆ ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ ತೀವ್ರವಾಗಿ ಆಕ್ಷೇಪಿಸಿದ್ರು. ಯಾಕ್ರೀ ಆರಗ ಅವರೇ ಎಸ್ಸಿ-ಎಸ್ಟಿ ಜನ ಮಾತ್ರ ಮದ್ಯ ಕುಡೀತಾರಾ? ಬೇರೆಯವ್ರು ಯಾರೂ ಕುಡಿಯಲ್ವಾ? ನೀವು ಕುಡಿಯಲ್ವಾ? ನೀವು ಕುಡಿಯಲ್ಲ ಅಂತ ಪ್ರಮಾಣ ಮಾಡ್ತೀರ? ಅಂತ ಆರಗ ಮೇಲೆ ಗರಂ ಆದ್ರು.

    ಈ ವೇಳೆ ಡಿಸಿಎಂ ಡಿಕೆಶಿ ಮಧ್ಯಪ್ರವೇಶಿಸಿ, ರಾಜ್ಯಪಾಲರು ಭಾಷಣ ಮಾಡಿದ್ದಾರೆ, ಅದರ ಮೇಲಿನ ಚರ್ಚೆ ವೇಳೆ ಇದು ಚರ್ಚೆ ಆಗಲಿ. ಆರಗ ಜ್ಞಾನೇಂದ್ರ ಗೃಹ ಸಚಿವರು ಆಗಿದ್ದವರು, ಅವರ ಕಾಲದಲ್ಲಿ ಇಂಥ ಎಷ್ಟು ಅಕ್ರಮ ಮದ್ಯದಂಗಡಿ ನಿಲ್ಲಿಸಿದ್ದಾರೆ? ಅಂತ ಚರ್ಚೆ ಆಗಲಿ ಅಂತ ಕೋಲಾಹಕ್ಕೆ ತೆರೆ ಎಳೆದ್ರು. ಇದನ್ನೂ ಓದಿ: ನಿಮಗೂ ವಯಸ್ಸಾಗಿದೆ, ಅಧ್ಯಕ್ಷರ ಅವಧಿ ಮುಗಿಯೋದ್ರಲ್ಲಿ ದಲಿತ ಸಿಎಂ ಮಾಡಿ – ಖರ್ಗೆಗೆ ಕಾರಜೋಳ ಸವಾಲ್

  • ಸಿನಿಮಾ ಇಲ್ಲದೇ ಬದುಕೋ ಶಕ್ತಿ ನಮ್ಗೆ ಇದೆ: ಡಿ.ಕೆ ಶಿವಕುಮಾರ್

    ಸಿನಿಮಾ ಇಲ್ಲದೇ ಬದುಕೋ ಶಕ್ತಿ ನಮ್ಗೆ ಇದೆ: ಡಿ.ಕೆ ಶಿವಕುಮಾರ್

    ಬೆಂಗಳೂರು: ಸಿನಿಮಾ ಇಲ್ಲದೇ ಬದುಕುವ ಶಕ್ತಿ ನಮಗೆ ಇದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (D K Shivakumar) ಹೇಳಿದರು.

    `ನಟ್ಟು, ಬೋಲ್ಟು ಟೈಟು’ ಹೇಳಿಕೆಗೆ ಚಿತ್ರರಂಗ ಟೀಕೆ ಮಾಡುತ್ತಿರುವ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ. ಅವರು ಟೀಕೆ ಮಾಡಲಿ ಅಂತಾನೇ ಹೇಳುತ್ತಿದ್ದೇನೆ. ಅವರಿಗೆಲ್ಲಾ ಎಷ್ಟು ಸಹಾಯ ಮಾಡಿದ್ದೇನೆ ಎಂದು ನನಗೂ ಗೊತ್ತಿದೆ, ಸಹಾಯ ಮಾಡಿಸಿಕೊಂಡವರಿಗೂ ಗೊತ್ತಿದೆ ಎಂದರು. ಇದನ್ನೂ ಓದಿ: ವಿಧಾನಸಭೆಯೊಳಗೆ ಪಾನ್ ಮಸಾಲ ಅಗಿದು, ಉಗಿದ ಶಾಸಕ – ಸ್ವಚ್ಛಗೊಳಿಸಿದ ಸ್ಪೀಕರ್‌

    ಇದು ರಾಜ್ಯದ ಹಣ, ನೆಲ, ಜಲ, ನಿಮ್ಮ ಭಾಷೆ. ಈಗ ಅಂತಾರಾಷ್ಟ್ರೀಯ ಫಿಲಂ ಫೆಸ್ಟಿವಲ್ ಮಾಡಿರುವುದು ಅವರ ಚಿತ್ರ ಬೆಳೆಯಲಿ ಎಂದು. ಅವರ ಚಿತ್ರಗಳಿಗೆ ಪ್ರಚಾರ ಅವ್ರು ಮಾಡದೇ ನಾವು ಬೆಳಗ್ಗೆ ಸಂಜೆ ಮಾಡೋಕೆ ಆಗುತ್ತಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ʻಕೈʼ ಕಾರ್ಯಕರ್ತೆ ಹಿಮಾನಿ ಹತ್ಯೆ ಕೇಸ್‌ – ಮೃತದೇಹ ಸೂಟ್‌ಕೇಸ್‌ನಲ್ಲಿ ಹಾಕಿ ಆರೋಪಿ ಎಳೆದೊಯ್ಯುವ ಸಿಸಿಟಿವಿ ದೃಶ್ಯ ಪತ್ತೆ

    ನಾಗಾಭರಣ ಅವರನ್ನು ಆಹ್ವಾನ ಮಾಡದೇ ಇರುವ ಬಗ್ಗೆ ಪ್ರತಿಕ್ರಿಯಿಸಿ, ನಾಗಾಭರಣ ಅವರಿಗೆ ಆಮಂತ್ರಣ ಕೊಡದೇ ಇರಬಹುದು. ಇದರಲ್ಲಿ ಇಲಾಖೆಯ ತಪ್ಪಿದೆಯೋ ಗೊತ್ತಿಲ್ಲ. ಆದರೆ ಕಾರ್ಯಕ್ರಮ ಅವರದ್ದು. ನನಗೆ ಗೊತ್ತು ಅವರು ಟೀಕೆ ಮಾಡುತ್ತಾರೆ ಎಂದು. ಅವರು ಟೀಕೆ ಮಾಡಿದರೂ ನನಗೇನೂ ಬೇಜಾರಿಲ್ಲ. ನಾವು ತಪ್ಪು ಮಾಡಿದ್ದರೆ ನಾವು ಸರಿ ಮಾಡಿಕೊಳ್ಳುತ್ತೇವೆ. ಅವ್ರು ತಪ್ಪು ಮಾಡಿದ್ರೆ ಅವ್ರು ಸರಿ ಮಾಡಿಕೊಳ್ಳಲಿ ಎಂದು ಹೇಳಿದರು. ಇದನ್ನೂ ಓದಿ: PUBLiC TV Impact | ಸಿಎಂ ಮನೆ ಬಳಿಯಿದ್ದ ವ್ಯಾಪಾರ ರಹಿತ ವಲಯ ಬೋರ್ಡ್ ತೆಗೆದ ಪಾಲಿಕೆ

    ಫಿಲಂ ಇಲ್ಲದೇ ಬದುಕುವ ಶಕ್ತಿ ನಮಗೆ ಇದೆ. ಆದರೆ ಅವರಿಗೆ ಫಿಲಂ ಪ್ರಮೋಷನ್‌ಗೆ ಜನರೂ ಬೇಕು, ಸರ್ಕಾರವೂ ಬೇಕು ಎಂದು ಹೇಳಿದರು. ಇದನ್ನೂ ಓದಿ: ವಿಜಯಪುರ ಕಾನ್ಸ್‌ಟೇಬಲ್‌ ಭಾವುಕ ಪೋಸ್ಟ್‌ – ಆತನಿಂದ ರಜೆಗೆ ಯಾವ್ದೇ ಮನವಿ ಬಂದಿಲ್ಲ: ಎಸ್ಪಿ ಸ್ಪಷ್ಟನೆ

  • ಚಿತ್ರರಂಗ ಗೋಕಾಕ್ ಚಳವಳಿ ಮಾಡಿ ಸರ್ಕಾರವನ್ನೇ ಬೀಳಿಸಿತ್ತು: ಸಾರಾ ಗೋವಿಂದು ಎಚ್ಚರಿಕೆ

    ಚಿತ್ರರಂಗ ಗೋಕಾಕ್ ಚಳವಳಿ ಮಾಡಿ ಸರ್ಕಾರವನ್ನೇ ಬೀಳಿಸಿತ್ತು: ಸಾರಾ ಗೋವಿಂದು ಎಚ್ಚರಿಕೆ

    ಬೆಂಗಳೂರು: ಡಿಸಿಎಂ ವಾರ್ನಿಂಗ್ ಮಾಡೋದು ಸರಿಯಲ್ಲ. ಗೋಕಾಕ್ ಚಳವಳಿ ಮಾಡಿ ಚಿತ್ರರಂಗ ಸರ್ಕಾರವನ್ನೇ ಬೀಳಿಸಿತ್ತು ಎಂದು ನಿರ್ಮಾಪಕ ಸಾರಾ ಗೋವಿಂದು (Sa Ra Govindu) ಹೇಳಿದರು.

    ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಭಾಷೆಗೆ ಅನ್ಯಾಯವಾದಾಗ ಸ್ಪಂದಿಸುವುದು ನಮ್ಮ ಕರ್ತವ್ಯವಾಗಿದೆ. ಮಾತು ಅತಿರೇಕಕ್ಕೆ ಹೋಗಬಾರದು. ಕಲಾವಿದರಿಗೆ ಗೌರವ ಕೊಡಬೇಕು. ನಿಮ್ಮ ಮಾತಿನ ನೋವು ನಮಗೆ ಅರ್ಥವಾಗುತ್ತದೆ. ಆದರೆ ನಾವು ಹೋರಾಟ ಮಾಡಿಕೊಂಡು ಬಂದಿದ್ದೇವೆ. ಮಹದಾಯಿ, ಕಳಸ ಬಂಡೂರಿ ವಿಚಾರಕ್ಕೆ ಬಂದಾಗ ನಾವು ಹೋರಾಟ ಮಾಡಿದ್ದೇವೆ ಎಂದರು. ಇದನ್ನೂ ಓದಿ: ‘ಅರಗಿಣಿ ಮೇಲೆ ‘ವಿದ್ಯಾಪತಿ’ಗೆ ಲವ್- ನಾಗಭೂಷಣ್‌, ಮಲೈಕಾ ರೊಮ್ಯಾಂಟಿಕ್‌ ಸಾಂಗ್‌ ಔಟ್

    ಕನ್ನಡ ಪರ ಸಂಘಟನೆಗಳು ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿತ್ತು. ರಾಜಭವನ ಮುಂಭಾಗ ಬಿಗಿ ಪೊಲೀಸ್ ಬಂದೋಬಸ್ತ್ ಹಿನ್ನೆಲೆ ರಾಜಭವನಕ್ಕೆ ಮುತ್ತಿಗೆ ಹಾಕಲು ಬಂದ ಕನ್ನಡಪರ ಸಂಘಟನೆಗಳಿಗೆ ಪೊಲೀಸರು ಅವಕಾಶ ನೀಡಲಿಲ್ಲ.  ಇದನ್ನೂ ಓದಿ: ಡಿಕೆಶಿ ಲೂಸ್ ಲೂಸಾಗಿ ಮಾತನಾಡಿರಬಹುದು – ಸಿ.ಟಿ.ರವಿ ಟಕ್ಕರ್

    ಈ ವೇಳೆ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ (Vatal Nagaraj) ಪ್ರತಿಕ್ರಿಯಿಸಿ, ಎಂಇಎಸ್ ನಿಷೇಧ, ಮೇಕೆದಾಟು, ಕಳಸಬಂಡೂರಿ ಯೋಜನೆ ಅನುಷ್ಠಾನ, ಕನ್ನಡಿಗರರಿಗೆ ಉದ್ಯೋಗ, ಬೆಳಗಾವಿಯಲ್ಲಿ ಹಲ್ಲೆ ಪ್ರಕರಣ ಇವೆಲ್ಲದರ ವಿರುದ್ಧ ಕನ್ನಡಿಗರ ಸಮರ. ಹೀಗಾಗಿಯೇ ಅಖಂಡ ಕರ್ನಾಟಕ ಬಂದ್ ಕರೆದಿದ್ದೇವೆ. ಮೆಟ್ರೋ ದರ ಏರಿಕೆಯನ್ನು ಸೇರಿಸಿದ್ದೇವೆ. ಬಂದ್ ದಿನ ಮೆಟ್ರೋ ಓಡಬಾರದು. ಗ್ರೇಟರ್ ಬೆಂಗಳೂರು ಮಾಡಿ ತಮಿಳು, ತೆಲುಗು, ಪಂಜಾಬಿಗೊಂದು ಬೆಂಗಳೂರನ್ನು ಕೊಡಲು ನಿರ್ಧರಿಸಿದ್ದಾರೆ ಎಂದು ಕಿಡಿಕಾರಿದರು.

    22 ರಂದು ಮಾರ್ಚ್ ಬಂದ್ ಆಗೇ ಆಗುತ್ತದೆ. ಬಂದ್ ದಿನಾಂಕ ಬದಲಾವಣೆ ಮಾಡಲ್ಲ. ಒಂದು ದಿನ ಕರ್ನಾಟಕಕ್ಕೆ ತ್ಯಾಗ ಮಾಡಿ. ಸಾರಿಗೆ ಸಚಿವರೇ ನೀವಾಗಿ ನೀವೇ ಬಸ್ ನಿಲ್ಲಿಸಬೇಕು. ಪರೀಕ್ಷೆ, ದೇವಸ್ಥಾನ ಅಂತೆಲ್ಲ ನೋಡೋಕೆ ಆಗಲ್ಲ. ಪರೀಕ್ಷೆಯನ್ನು ಮುಂದೂಡಲಿ ಅದು ಅವರ ಕರ್ತವ್ಯ ಎಂದರು. ಇದನ್ನೂ ಓದಿ: ರಶ್ಮಿಕಾ ಮಂದಣ್ಣ ಕರ್ನಾಟಕ ಎಲ್ಲಿದೆ ಗೊತ್ತಿಲ್ಲ ಅಂದಿದ್ರು – ಶಾಸಕ‌ ರವಿ ಗಣಿಗ ನಿಗಿನಿಗಿ ಕೆಂಡ

  • ಖರ್ಗೆ ಅವ್ರ ಮಾತಿಗೆ ನಾನು ಬದ್ಧನಾಗಿದ್ದೇನೆ – ಡಿಕೆಶಿ

    ಖರ್ಗೆ ಅವ್ರ ಮಾತಿಗೆ ನಾನು ಬದ್ಧನಾಗಿದ್ದೇನೆ – ಡಿಕೆಶಿ

    ಬೆಂಗಳೂರು: ಅಧಿಕಾರ ಹಂಚಿಕೆ ವಿಚಾರವಾಗಿ ಚರ್ಚೆ ಮಾಡದಂತೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಸೂಚನೆ ನೀಡಿದ್ದು, ನಾನು ಅವರ ಮಾತಿಗೆ ಬದ್ಧನಾಗಿದ್ದೇನೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Sivakumar) ತಿಳಿಸಿದರು.

    ಡಿಕೆ ಶಿವಕುಮಾರ್ ಸಿಎಂ ಆಗೋದನ್ನ ತಡೆಯೋಕೆ ಯಾರಿಂದಕೂ ಸಾಧ್ಯವಿಲ್ಲ ಎಂಬ ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರ ಹೇಳಿಕೆಗೆ ವಿಧಾನಸೌಧದಲ್ಲಿ ಅವರು ಪ್ರತಿಕ್ರಿಯೆ ನೀಡಿದರು. ಇದನ್ನೂ ಓದಿ: ರಶ್ಮಿಕಾ ಮಂದಣ್ಣ ಕರ್ನಾಟಕ ಎಲ್ಲಿದೆ ಗೊತ್ತಿಲ್ಲ ಅಂದಿದ್ರು – ಶಾಸಕ‌ ರವಿ ಗಣಿಗ ನಿಗಿನಿಗಿ ಕೆಂಡ

    ವೀರಪ್ಪ ಮೊಯ್ಲಿ ಅವರು ತಮ್ಮ ಅಭಿಪ್ರಾಯ ಹೇಳಿದ್ದಾರೆ. ನಾನು ಅದರ ಬಗ್ಗೆ ಚರ್ಚೆ ಮಾಡುವುದಿಲ್ಲ. ನಾನು ಕಾರ್ಯಕರ್ತರ ಸಭೆ ಮಾಡಲು ಹೋಗಿದ್ದೆ. ಮೊಯ್ಲಿ ಅವರ ಹೇಳಿಕೆಗೆ ನಾನು ‌ಪ್ರತಿಕ್ರಿಯೆ ಕೊಡಲ್ಲ. ಮಲ್ಲಿಕಾರ್ಜುನ ಖರ್ಗೆ ಅವರು ಮಾತಾಡಬಾರದು ಅಂತ ಹೇಳಿದ್ದಾರೆ. ನಾನು ಅದಕ್ಕೆ ಬದ್ದವಾಗಿದ್ದೇನೆ ಅಂತ ತಿಳಿಸಿದರು. ಇದನ್ನೂ ಓದಿ: ನನ್ನ ಮಾತು ಕೇಳ್ದಿದ್ರೆ ಕಂಪ್ಲೇಂಟ್ ಕೊಡ್ತೀನಿ – ಕಲಬುರಗಿಯಲ್ಲಿ ಪತ್ನಿ ಕಿರುಕುಳಕ್ಕೆ ನವವಿವಾಹಿತ ಬಲಿ

  • ಸಿಎಂ ಆಗ್ತಾರೆ ಅಂದಾಗ ಡಿಕೆಶಿ ಮೊಗದಲ್ಲಿ ಹಾಲಿನ ಮಳೆಯೋ, ಜೇನಿನ ಹೊಳೆಯೋ ಅನ್ನೋ ಖುಷಿಯಿತ್ತು: ಅಶೋಕ್

    ಸಿಎಂ ಆಗ್ತಾರೆ ಅಂದಾಗ ಡಿಕೆಶಿ ಮೊಗದಲ್ಲಿ ಹಾಲಿನ ಮಳೆಯೋ, ಜೇನಿನ ಹೊಳೆಯೋ ಅನ್ನೋ ಖುಷಿಯಿತ್ತು: ಅಶೋಕ್

    – ಖುದ್ದು ಸಿದ್ದರಾಮಯ್ಯನವರೇ ಅಧಿಕಾರ ಬಿಡುವಂತೆ ಡಿಕೆಶಿ ಮಾಡ್ತಾರೆಂದ ವಿಪಕ್ಷ ನಾಯಕ

    ಬೆಂಗಳೂರು: ಡಿಕೆಶಿ ಸಿಎಂ ಆಗೋದನ್ನು ಯಾರಿಂದಲೂ ತಪ್ಪಿಸಲು ಆಗಲ್ಲ ಎಂದು ವೀರಪ್ಪ ಮೊಯ್ಲಿ (Veerappa Moily)  ಹೇಳಿದಾಗ ಹಾಲಿನ ಮಳೆಯೋ, ಜೇನಿನ ಹೊಳೆಯೋ ಎನ್ನುವಂತ ಖುಷಿ ಡಿಕೆಶಿ ಮೊಗದಲ್ಲಿ ಇತ್ತು ಎಂದು ವಿಪಕ್ಷ ನಾಯಕ ಆರ್ ಅಶೋಕ್ (R Ashok) ಲೇವಡಿ ಮಾಡಿದರು.

    ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿಕೆ ಕುರಿತು ಮಾಧ್ಯಮದರೊಂದಿಗೆ ಪ್ರತಿಕ್ರಿಯಿಸಿದ ಅವರು, ನಾನೂ ಕೂಡಾ ಮೊಯ್ಲಿಯವರ ಅಬ್ಬರದ ಭಾಷಣ ನೋಡಿದೆ. ಡಿಕೆಶಿ ಸಿಎಂ ಆಗೋದನ್ನು ಯಾರಿಂದಲೂ ತಪ್ಪಿಸಲು ಆಗಲ್ಲ ಅಂದಿದ್ದಾರೆ. ಆಗ ಡಿಕೆಶಿ ಮೊಗದಲ್ಲಿ ಹಾಲಿನ ಮಳೆಯೋ, ಜೇನಿನ ಹೊಳೆಯೋ ಎನ್ನುವಂತಹ ಖುಷಿ ಇತ್ತು ಎಂದರು. ಇದನ್ನೂ ಓದಿ: ರಾಜ್ಯದಲ್ಲಿ ಹಕ್ಕಿ ಜ್ವರದ ಭೀತಿ – ಪಶುಸಂಗೋಪನೆ ಇಲಾಖೆಯಿಂದ ಕೋಳಿ ಸೇವನೆಗೆ ಮಾರ್ಗಸೂಚಿ ಪ್ರಕಟ

    ಇದು ಸಿದ್ದರಾಮಯ್ಯ ಅವರ ಲಾಸ್ಟ್ ಬಜೆಟ್ ಆಗಬಹುದು. ಲಾಸ್ಟ್ ಆದರೂ ಲೀಸ್ಟ್ ಅಲ್ಲ. ಅತೀ ಹೆಚ್ಚು ಸಾಲಮಾಡಿ ಡಿಕೆಶಿಗೆ ಬಿಟ್ಟು ಹೋಗಬಹುದು. ಸಿದ್ದರಾಮಯ್ಯ ಇರುತ್ತಾರೋ, ಹೋಗುತ್ತಾರೆ ಎನ್ನುವ ಎಪಿಸೋಡ್ ಕಳೆದ 2 ವರ್ಷಗಳಿಂದ ನಡೆಯುತ್ತಲೇ ಇದೆ ಎಂದು ಹೇಳಿದರು. ಇದನ್ನೂ ಓದಿ: ಗ್ಯಾರಂಟಿಗಳಿಂದ ಕಾಂಗ್ರೆಸ್ ಭಿಕ್ಷಾಪಾತ್ರೆ ಹಿಡಿಯುವ ಹಂತಕ್ಕೆ ಬಂದಿದೆ: ಆರ್. ಅಶೋಕ್

    ಮೊಯ್ಲಿಯವರು ಮಾಜಿ ಸಿಎಂ, ಮಾಜಿ ಕೇಂದ್ರ ಸಚಿವ ಆಗಿದ್ದವರು. ಅವರಿಗೆ ಪವರ್ ಶೇರ್ ಒಪ್ಪಂದದ ಬಗ್ಗೆ ಗೊತ್ತಿದೆ. ಹಾಗಾಗಿ ಧೈರ್ಯವಾಗಿ ಮೊಯ್ಲಿ ಹಾಗೆ ಹೇಳಿದ್ದಾರೆ. ಆದರೆ ಸಿದ್ದರಾಮಯ್ಯ ನಾನೇ ಸಿಎಂ ಅಂತಿದ್ದಾರೆ. ನಾವು ಮಾತನಾಡಿದರೆ ಜಾತಕ ಹೇಳುತ್ತಾರೆ ಅಂತಾರೆ. ಹಾಗಾದರೆ ಶನಿಬಲ, ಗುರುಬಲ ಯಾಕೆ ಕೇಳುತ್ತಾರೆ. ಕೋಡಿ ಮಠದ ಸ್ವಾಮೀಜಿ ಸಹ ಸಿದ್ದರಾಮಯ್ಯ ಸುಲಭಕ್ಕೆ ಅಧಿಕಾರ ಕೊಡಲ್ಲ ಅಂದಿದ್ದಾರೆ. ನಾನು, ಯಾವಾಗ ಒದ್ದು ಕಿತ್ತುಕೊಳ್ಳುತ್ತೀರಾ ಅಂತ ಹೇಳಿದ್ದಕ್ಕೂ ಕೋಡಿಮಠದ ಸ್ವಾಮೀಜಿ ಹೇಳಿಕೆಗೂ, ಮೊಯ್ಲಿ ಹೇಳಿಕೆಗೂ ತಾಳೆ ಆಯ್ತಲ್ಲ. ಸಿಎಂ ಸ್ಥಾನ ಸಾಕಪ್ಪ ಅಂತ ಖುದ್ದು ಸಿದ್ದರಾಮಯ್ಯ ಅವರೇ ಅಧಿಕಾರ ಬಿಟ್ಟು ಹೋಗುವಂತೆ ಡಿಕೆಶಿ ಮಾಡುತ್ತಾರೆ ಎಂದರು. ಇದನ್ನೂ ಓದಿ: ಗ್ಯಾರಂಟಿ ಎಫೆಕ್ಟ್ – ರಸ್ತೆ ಗುಂಡಿ ಮುಚ್ಚೋಕು ಸರ್ಕಾರದ ಬಳಿ ದುಡ್ಡಿಲ್ಲ: ಹೆಚ್.ಟಿ ಮಂಜು

  • ಹೀರೋಗಳು ಜೀರೋ ಆಗಿದ್ದಾರೆ.. ಗುಂಪುಗಾರಿಕೆ, ಜಾತಿ ರಾಜಕಾರಣ ಬಿಟ್ ಬಿಡಿ: ಕಾಂಗ್ರೆಸ್ ನಾಯಕರಿಗೆ ಡಿಕೆಶಿ ವಾರ್ನ್

    ಹೀರೋಗಳು ಜೀರೋ ಆಗಿದ್ದಾರೆ.. ಗುಂಪುಗಾರಿಕೆ, ಜಾತಿ ರಾಜಕಾರಣ ಬಿಟ್ ಬಿಡಿ: ಕಾಂಗ್ರೆಸ್ ನಾಯಕರಿಗೆ ಡಿಕೆಶಿ ವಾರ್ನ್

    ಉಡುಪಿ: ಗುಂಪುಗಾರಿಕೆ ಮಾಡಿದ ಹೀರೋಗಳು ಜೀರೋ ಆಗಿದ್ದಾರೆ. ಜೀರೋಗಳು ಹೀರೋ ಆಗಿದ್ದಾರೆ. ಜಾತಿ ಮೇಲೆ ರಾಜಕಾರಣ ಮಾಡೋದನ್ನು ಬಿಟ್ ಬಿಡಿ. ಎಲ್ಲರೂ ಒಂದಾಗಿ ಕೆಲಸ ಮಾಡಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಚಾಟಿ ಬೀಸಿದ್ದಾರೆ.

    ಉಪಮುಖ್ಯಮಂತ್ರಿಯಾದ ನಂತರ ಡಿಕೆ ಶಿವಕುಮಾರ್ ಮೊದಲ ಬಾರಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ಕೊಟ್ಟಿದ್ದಾರೆ. ಮೊದಲ ಭೇಟಿಯಲ್ಲೇ ಕಾಂಗ್ರೆಸ್ ನಾಯಕರಿಗೆ ಖಡಕ್ ವಾರ್ನಿಂಗ್ ಮಾಡಿದ್ದಾರೆ.

    ಉಡುಪಿಯಲ್ಲಿ 5 ಕ್ಕೆ ಐದು ಸೋಲಿಗೆ ಕಾರಣ ಏನು? ಡಿಕೆ ಶಿವಕುಮಾರ್ ಬಣ ಅಥವಾ ಇನ್ಯಾವುದೋ ನಾಯಕರ ಬಣ ಮಾಡಬೇಡಿ. ಎಲ್ಲರದ್ದೂ ಒಂದೇ ಬಣ, ಅದು ಕಾಂಗ್ರೆಸ್ ಬಣ. ಜಿಲ್ಲಾ ಕಾಂಗ್ರೆಸ್ ಮುಂದಿನ ಮೂರು ತಿಂಗಳಲ್ಲಿ ಎಲ್ಲ ಸರಿ ಆಗಬೇಕು. ಪಕ್ಷ ಸಂಘಟನೆ ಮಾಡಬೇಕು. ಇಲ್ಲವಾದರೆ ಎಲ್ಲವನ್ನು ಬದಲಾವಣೆ ಮಾಡಬೇಕಾಗುತ್ತದೆ ಎಂದಿದ್ದಾರೆ.

    ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ತತ್ವದಡಿ ಕೆಲಸ ಮಾಡಿ. ಕೆಲ ಸಚಿವರ ನೇತೃತ್ವದಲ್ಲಿ ಒಂದು ಕೋರ್ ಟೀಮ್ ರಚನೆ ಮಾಡುತ್ತೇನೆ. ಸರ್ಕಾರ ಮತ್ತು ಪಕ್ಷ ಜೊತೆಯಾಗಿ ಕೆಲಸ ಮಾಡುವ ಟೀಮ್ ಅದು. ಸರ್ಕಾರದ ಯೋಜನೆಗಳನ್ನು ಜನತೆಗೆ ಮುಟ್ಟಿಸುವ ಕೆಲಸ ಮಾಡುತ್ತೇವೆ. ರಾಜ್ಯದಲ್ಲಿ ನೂರು ಹೊಸ ಕಾಂಗ್ರೆಸ್ ಕಚೇರಿ ತೆರೆದು ಸೇವೆ ಕೊಡಬೇಕು‌ ಎಂದು ತಿಳಿಸಿದ್ದಾರೆ.

    ಯೂಥ್ ಕಾಂಗ್ರೆಸ್ ಎಲೆಕ್ಷನ್ ಆಗಿದೆ. ನೀವು ಹಲವು ಜನ ಗೆದ್ದಿದ್ದೀರಿ. ನೀವು ಗೆದ್ದಿರೋದು ಬಿಜೆಪಿ ಮೇಲೆ ಅಲ್ಲ, ಕಾಂಗ್ರೆಸ್ ಪಕ್ಷದ ಒಳಗೆ. ಗೆದ್ದವರು ಸೋತವರನ್ನು ಒಟ್ಟಿಗೆ ತೆಗೆದುಕೊಂಡು ಹೋಗಬೇಕು. ಪಕ್ಷದೊಳಗೆ ಗುಂಪುಗಾರಿಕೆ ಮಾಡಬೇಡಿ ಬಿಟ್ ಬಿಡಿ. ಕಾಂಗ್ರೆಸ್‌ನಲ್ಲಿ ಗುಂಪುಗಾರಿಕೆ ಮಾಡಬೇಡಿ ಎಂದು ಹೇಳಿದ್ದಾರೆ.

    ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ಬರ್ತಾ ಇದೆ. ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಲ್ಲಿ 9 ಸೀಟ್ ಗೆಲ್ಬೇಕು. ಆರು ಮೂರು ತಿಂಗಳು ನೋಡ್ತೀವಿ. ಹೊಸ ಕ್ಯಾಂಡಿಡೇಟ್‌ಗಳನ್ನು ಚೇಂಜ್ ಮಾಡ್ತೀವಿ. ಕಾಂಗ್ರೆಸ್ ಪಕ್ಷದಲ್ಲಿ ವ್ಯಕ್ತಿ ಪೂಜೆ ಮಾಡುವುದನ್ನು ಬಿಡಿ. ಪಕ್ಷ ಪೂಜೆ ಮಾಡಿ ಎಂದು ಸೂಚಿಸಿದ್ದಾರೆ.

  • ಡಿ.ಕೆ.ಶಿವಕುಮಾರ್ ಅವರೇ ವಿನಾಶ ಕಾಲೇ ವಿಪರೀತ ಬುದ್ಧಿ: ಜೆಡಿಎಸ್ ವಾಗ್ದಾಳಿ

    ಡಿ.ಕೆ.ಶಿವಕುಮಾರ್ ಅವರೇ ವಿನಾಶ ಕಾಲೇ ವಿಪರೀತ ಬುದ್ಧಿ: ಜೆಡಿಎಸ್ ವಾಗ್ದಾಳಿ

    – ರೌಡಿ ಕೊತ್ವಾಲನ ಶಿಷ್ಯ ಡಿಕೆಶಿ ನಡೆದು ಬಂದ ದಾರಿಯೇ ಅಂತಹದ್ದು ಎಂದು JDS ಟೀಕೆ

    ಬೆಂಗಳೂರು: ಸಿನಿಮಾ ನಟರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ವಾರ್ನಿಂಗ್ ಕೊಟ್ಟ ವಿಚಾರಕ್ಕೆ ಡಿಸಿಎಂ ವಿರುದ್ಧ ಜೆಡಿಎಸ್‌ ವಾಗ್ದಾಳಿ ನಡೆಸಿದೆ. ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಜೆಡಿಎಸ್ (JDS) ವಿನಾಶ ಕಾಲೇ ವಿಪರೀತ ಬುದ್ಧಿ ಅಂತ ಕಿಡಿಕಾರಿದೆ.

    ಜೆಡಿಎಸ್ ಟ್ವೀಟ್ ಏನು?
    ವಿನಾಶ ಕಾಲೇ ವಿಪರೀತ ಬುದ್ಧಿ. ರೌಡಿ ಕೊತ್ವಾಲನ ಶಿಷ್ಯ ಡಿಕೆಶಿ ನಡೆದು ಬಂದ ದಾರಿ, ಬೆಳೆದು ಬಂದ ಪರಿಸರ, ಜೊತೆಗಿದ್ದವರ ಸಹವಾಸವೇ ಅಂತಹದ್ದು. ಮಿಸ್ಟರ್ ಡಿ.ಕೆ.ಶಿವಕುಮಾರ್ ನಿಮ್ಮ ಪಾದಯಾತ್ರೆ ರಾಜಕೀಯ ಪ್ರೇರಿತವಾಗಿತ್ತು. ಕಾಂಗ್ರೆಸ್ ಪಕ್ಷದ ರಾಜಕೀಯ ಪಾದಯಾತ್ರೆಗೆ ಸಿನಿಮಾ ಕಲಾವಿದರು ಭಾಗವಹಿಸಲಿಲ್ಲ ಎಂದು ಕನ್ನಡದ ನಟರಿಗೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ವೇದಿಕೆಯಲ್ಲಿ ಬೆದರಿಕೆ ಹಾಕಿರುವುದು ಹೇಡಿತನ ಮತ್ತು ಖಂಡನೀಯ. ಇದನ್ನೂ ಓದಿ: ಡಿಸಿಎಂ ಅಧಿಕಾರ ದರ್ಪದಿಂದ ಹೇಳಿರಬಹುದು- ಡಿಕೆಶಿ ನಟ್ಟು, ಬೋಲ್ಟು ಹೇಳಿಕೆಗೆ ಫಿಲ್ಮ್ಂ ಚೇಂಬರ್ ಅಧ್ಯಕ್ಷ ಅಸಮಾಧಾನ

    ಡಿಸಿಎಂ ಈ ಗೊಡ್ಡು ಬೆದರಿಕೆ ನಿಮ್ಮ ಹತಾಶೆ ಮತ್ತು ನೀವು ಮಾನಸಿಕ ಸ್ಥಿಮಿತ ಕಳೆದುಕೊಂಡಿರುವುದನ್ನು ತೋರಿಸುತ್ತಿದೆ. ಕನ್ನಡ ಚಿತ್ರರಂಗ ಹಾಗೂ ಸಿನಿಮಾ ಕಲಾವಿದರು ಯಾವುದೇ ಪಕ್ಷದ ಕಾಲಾಳುಗಳಲ್ಲ. ಅವರು ಯಾರನ್ನು ಯಾವ ಪಕ್ಷವನ್ನು ಬೆಂಬಲಿಸಬೇಕು? ಎನ್ನುವುದು ಅವರ ವಯಕ್ತಿಕ ತೀರ್ಮಾನ.

    ನಮ್ಮದು ಪ್ರಜಾಪ್ರಭುತ್ವ, ಸಂವಿಧಾನದ ಅಡಿಯಲ್ಲಿ ನೀವು ಡಿಸಿಎಂ ಆಗಿದ್ದೀರಿ. ರೌಡಿಸಂ, ಧಮ್ಕಿ ರಾಜಕೀಯ ಯಾರಿಗೂ ಶೋಭೆ ತರುವುದಿಲ್ಲ. ಕನಕಪುರವನ್ನು ರಿಪಬ್ಲಿಕ್ ಮಾಡಿಕೊಂಡು ದರ್ಪ, ದೌರ್ಜನ್ಯ, ಬೆದರಿಕೆ ಹಾಕಿ ಜನರನ್ಮು ಹಿಂಸಿಸುತ್ತಾ, ಬಂಡೆಗಳನ್ನು ಖಾಲಿ ಮಾಡಿರುವ ಅಪೂರ್ವ ಸಹೋದರರಿಗೆ ಮತದಾರರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಾಗೂ‌‌ ಬೆಂಗಳೂರು ಗ್ರಾಮಾಂತರದಲ್ಲಿ ನಿಮ್ಮ ಸಹೋದರನಿಗೆ ನಟ್ಟು, ಬೋಲ್ಟು ಸರಿ ಮಾಡಿದ್ದಾರೆ. ಇದನ್ನೂ ಓದಿ: ಸರ್ಕಾರದ ಖಜಾನೆ ಖಾಲಿಯಾಗಿದೆ, ಗ್ಯಾರಂಟಿ ಹೆಸರಲ್ಲಿ ಹೆಚ್ಚಿನ ತೆರಿಗೆ ಹಾಕಿದ್ದಾರೆ: ಹೆಚ್‌ಡಿಕೆ ವಾಗ್ದಾಳಿ

    ಸಿಎಂ ಕುರ್ಚಿಗೆ ಏರಲು ತಿರುಕನ ಕನಸು ಕಾಣುತ್ತಾ ಅಡ್ಡದಾರಿ, ತಂತ್ರ-ಕುತಂತ್ರ ವಾಮಮಾರ್ಗದಲ್ಲಿ ಸಾಗಿರುವ ನಿನಗೆ ಕಾಂಗ್ರೆಸ್ ಪಾರ್ಟಿಯವರೇ ನಟ್ಟು, ಬೋಲ್ಟು ಟೈಟು ಮಾಡುತ್ತಿದ್ದಾರೆ. ಅಷ್ಟು ಸಾಲದೇ ಅಂತ ವಾಗ್ದಾಳಿ ನಡೆಸಿದೆ.

  • ಕುಂಭಮೇಳದಲ್ಲಿ ನಾನು ಭಾಗಿಯಾದರೆ ತಪ್ಪೇನಿದೆ: ಸ್ವಪಕ್ಷದ ನಾಯಕರಿಗೆ ಡಿಕೆಶಿ ಟಾಂಗ್

    ಕುಂಭಮೇಳದಲ್ಲಿ ನಾನು ಭಾಗಿಯಾದರೆ ತಪ್ಪೇನಿದೆ: ಸ್ವಪಕ್ಷದ ನಾಯಕರಿಗೆ ಡಿಕೆಶಿ ಟಾಂಗ್

    – ನಾನು ಯಾವ ದೇವಸ್ಥಾನಕ್ಕೆ ಹೋದರೂ ಸಂಚಲನವಾಗುತ್ತೆ ಎಂದ ಡಿಸಿಎಂ

    ಉಡುಪಿ: ಕುಂಭಮೇಳದಲ್ಲಿ (Maha Kumbh) ನಾನು ಭಾಗಿಯಾದರೆ ತಪ್ಪೇನಿದೆ ಎಂದು ಸ್ವಪಕ್ಷದ ನಾಯಕರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಟಾಂಗ್ ಕೊಟ್ಟರು.

    ಉಡುಪಿಯಲ್ಲಿ (Udupi) ಮಾತನಾಡಿದ ಅವರು, ನಾನು ಕುಂಭಮೇಳಕ್ಕೆ ಹೋಗಿದ್ದೆ. ಅಲ್ಲಿ ನೀರಿಗೆ ಏನಾದರೂ ಜಾತಿ, ಧರ್ಮ ಇದೆಯಾ? ನೀರಿಗೆ ಏನಾದರೂ ಪಾರ್ಟಿ ಇದೆಯಾ? ತಿ.ನರಸೀಪುರದ ಕುಂಭಮೇಳದಲ್ಲೂ ನಾನು ಭಾಗಿಯಾಗಿದ್ದೇನೆ. ಕುಂಭಮೇಳದಲ್ಲಿ ಭಾಗಿ ಆದರೆ ತಪ್ಪೇನಿದೆ? ಯಾರು ಯಾವ ಲೆಕ್ಕಚಾರ ಬೇಕಾದರೂ ಹಾಕಿಕೊಳ್ಳಲಿ, ಅವಶ್ಯಕತೆ ಇಲ್ಲ. ಯಾವ ಲೆಕ್ಕಾಚಾರನೂ ಅವಶ್ಯಕತೆ ಇಲ್ಲ ಎಂದು ಕುಂಭಮೇಳ ವಿರೋಧಿಗಳಿಗೆ ತಿರುಗೇಟು ನೀಡಿದರು. ಇದನ್ನೂ ಓದಿ: ಉಡುಪಿಯ ಕಾಪು ಹೊಸ ಮಾರಿಗುಡಿಗೆ ಡಿಕೆಶಿ ಭೇಟಿ, ಪೂಜೆ ಸಲ್ಲಿಕೆ

    ನಾನು ಯಾವ ದೇವಸ್ಥಾನಕ್ಕೆ ಹೋದರೂ, ಯಾವ ಧಾರ್ಮಿಕ ವಿಚಾರ ಮಾತನಾಡಿದರೂ ಸಂಚಲನವಾಗುತ್ತದೆ. ನಿಮ್ಮ ಜಿಲ್ಲೆಯವರೇ ನನ್ನನ್ನು ಏಸು ಕುಮಾರ ಎಂದು ಕರೆದಿದ್ದರು. ಯೇಸುವಿನ ಶಿಲಾಮೂರ್ತಿಗೆ ನಾನು ಪ್ರೋತ್ಸಾಹ ಕೊಟ್ಟೆ ಎಂಬ ಕಾರಣಕ್ಕೆ ಹೀಗೆ ಹೇಳಿದ್ದರು. ಯಾರೋ ಒಬ್ಬ ಎಂಪಿ ಮುಸ್ಲಿಮರ ಎದೆ ಸೀಳಿದರೆ ಮೂರು ಅಕ್ಷರ ಇಲ್ಲ ಎಂದಿದ್ದ. ಬರಿ ಪಂಚರ್ ಹಾಕೋಕೆ ಲಾಯಕ್ಕು ಎಂದಿದ್ದ. ಅವರೆಲ್ಲ ನಮ್ಮ ಬ್ರದರ್ಸ್, ಅವರಿಲ್ಲದೆ ಬದುಕೋಕೆ ಆಗಲ್ಲ ಎಂದಿದ್ದೆ. ಚಿಕನ್ನು ಮಟನ್ನು ನಾವು ಕಡಿಯೋಕೆ ಆಗುತ್ತಾ? ಅವರೇ ಕಡಿಯುವವರು. ಯಾವ ಕೆಲಸ ಯಾರು ಮಾಡಬೇಕು ಅವರೇ ಮಾಡುತ್ತಾರೆ. ಅವರನ್ನು ಬ್ರದರ್ಸ್ ಅಂದಿದ್ದಕ್ಕೆ ನನ್ನನ್ನು ಇನ್ನೊಂದು ಹೆಸರಲ್ಲಿ ಕರೆದರು ಎಂದು ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಹರಿಹಾಯ್ದರು.

    ನಾನು ಶಿವನ ಮಗ ಶಿವಕುಮಾರ್ ಎಂದು ತಂದೆ ಹೆಸರಿಟ್ಟರು. ದೊಡ್ಡ ಆಲದ ಕೆಂಪೇಗೌಡನ ಮಗ ನಾನು. ಶಿವನ ದೇವಸ್ಥಾನಕ್ಕೆ ಹೋದರೆ ಅಲ್ಲೂ ಏನೋ ಒಂದು ಕರೀತಾರೆ ಎಂದರು. ಇದನ್ನೂ ಓದಿ: ಡಿಸಿಎಂ ಅಧಿಕಾರ ದರ್ಪದಿಂದ ಹೇಳಿರಬಹುದು- ಡಿಕೆಶಿ ನಟ್ಟು, ಬೋಲ್ಟು ಹೇಳಿಕೆಗೆ ಫಿಲ್ಮ್ಂ ಚೇಂಬರ್ ಅಧ್ಯಕ್ಷ ಅಸಮಾಧಾನ

    ಬೆಳಗಾವಿ ಗಡಿಯಲ್ಲಿ ಮಹಾರಾಷ್ಟ್ರದಿಂದ ಪ್ರತ್ಯೇಕ ಇಬ್ಬರು ಗಡಿ ಉಸ್ತುವಾರಿ ಸಚಿವರ ನೇಮಕ ವಿಚಾರವಾಗಿ ಮಾತನಾಡಿ, ನಮ್ಮಲ್ಲೂ ಗಡಿಯಲ್ಲಿ ಉಸ್ತುವಾರಿ ಸಚಿವರಿದ್ದಾರೆ. ಗಡಿಯಲ್ಲಿರುವ ಮಂತ್ರಿಗಳೇ ಎಲ್ಲಾ ಕೆಲಸ ನಿಭಾಯಿಸುತ್ತಾರೆ ಎಂದು ತಿಳಿಸಿದರು.

    ಡಿಕೆಶಿ ಹಿಂದುತ್ವ ನಿಲುವನ್ನು ಶ್ಲಾಘಿಸಿರುವ ಯಶ್‌ಪಾಲ್ ಸುವರ್ಣ, ಸ್ವಾಗತ ಕೋರಿರುವ ಸುನೀಲ್ ಕುಮಾರ್ ಬಗ್ಗೆ ಪ್ರತಿಕ್ರಿಯಿಸಿ, ಅವರಿಗೆ ಒಳ್ಳೆದಾಗಲಿ. ರಾಜ್ಯಕ್ಕೆ ಒಳ್ಳೆದಾಗಲಿ. ಅವರ ಮನೆಯನ್ನ (ಬಿಜೆಪಿ ಬಣ ಫೈ) ಸರಿ ಮಾಡಿಕೊಳ್ಳಲಿ ಎಂದು ಟಾಂಗ್ ಕೊಟ್ಟರು.

  • ಉಡುಪಿಯ ಕಾಪು ಹೊಸ ಮಾರಿಗುಡಿಗೆ ಡಿಕೆಶಿ ಭೇಟಿ, ಪೂಜೆ ಸಲ್ಲಿಕೆ

    ಉಡುಪಿಯ ಕಾಪು ಹೊಸ ಮಾರಿಗುಡಿಗೆ ಡಿಕೆಶಿ ಭೇಟಿ, ಪೂಜೆ ಸಲ್ಲಿಕೆ

    – ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ ಡಿಕೆಶಿ 9,99,999 ರೂ. ವೆಚ್ಚದ ಸೇವೆ

    ಉಡುಪಿ: ಉಡುಪಿ (Udupi) ಪ್ರವಾಸದಲ್ಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕಾಪು ಶ್ರೀ ಹೊಸ ಮಾರಿಗುಡಿಗೆ (Kapu Hosa Marigudi) ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

    ಮಾರಿಯಮ್ಮನ ಗದ್ದುಗೆ ಪ್ರತಿಷ್ಠಾಪನೆಯಲ್ಲಿ ಶಿವಕುಮಾರ್ (D.K.Shivakumar) ಭಾನುವಾರ ಭಾಗಿಯಾದರು. ಕಾಪು ಶ್ರೀ ಹಳೆ ಮಾರಿಗುಡಿ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾದರು. ಮಾರಿಗುಡಿ ಗದ್ದುಗೆ ಪ್ರತಿಷ್ಠಾಪನಾ ಕಾರ್ಯಕ್ರಮ ಬೆಳಗ್ಗೆ 11:30 ಕ್ಕೆ ನಡೆಯಿತು. ಇದನ್ನೂ ಓದಿ: ಡಿಸಿಎಂ ಅಧಿಕಾರ ದರ್ಪದಿಂದ ಹೇಳಿರಬಹುದು- ಡಿಕೆಶಿ ನಟ್ಟು, ಬೋಲ್ಟು ಹೇಳಿಕೆಗೆ ಫಿಲ್ಮ್ಂ ಚೇಂಬರ್ ಅಧ್ಯಕ್ಷ ಅಸಮಾಧಾನ

    ಹತ್ತು ದಿನಗಳ ಕಾಲ ನಡೆಯುತ್ತಿರುವ ಮಾರಿಯಮ್ಮನ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಡಿಸಿಎಂ ಪಾಲ್ಗೊಂಡರು. ಹೊಸ ಮಾರಿಗುಡಿ ದೇಗುಲ ಪ್ರವೇಶಿಸಿದ ಡಿಕೆಶಿ, ಮಾರಿಯಮ್ಮನ ಚಿನ್ನದ ಗದ್ದುಗೆಯಲ್ಲಿ ಪ್ರತಿಷ್ಠಾಪನಾ ವಿಧಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕಾಪು ಮಾರಿಗುಡಿಯಲ್ಲಿರುವ ಉಚ್ಚಂಗಿ ದೇವಿಯ ದರ್ಶನ ಮಾಡಿದರು. ಕೆಂಪು ಕಲ್ಲಿನಿಂದ ನಿರ್ಮಾಣ ಆಗಿರುವ ದೇಗುಲ ವೀಕ್ಷಿಸಿದರು. ಬಾಗಲಕೋಟೆಯ ಇಳಕಲ್‌ನ ವಿಶಿಷ್ಟ ಕೆಂಪು ಕಲ್ಲಿನ ದೇಗುಲ ಇದಾಗಿದೆ. ಸುಮಾರು 30 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಆಗಿರುವ ಹೊಸ ಮಾರಿಗುಡಿ ಇದು.

    ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಕಾಪು ಕ್ಷೇತ್ರದ ವತಿಯಿಂದ ಗೌರವಿಸಲಾಯಿತು. ಬಿಜೆಪಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸನ್ಮಾನಿಸಿದರು. ಕಾಪು ಮಾರಿಯಮ್ಮನ ಮೂರ್ತಿ, ಪ್ರಸಾದ ನೀಡಿ ಗೌರವಿಸಿದರು. ಇದನ್ನೂ ಓದಿ: ಸರ್ಕಾರದ ಖಜಾನೆ ಖಾಲಿಯಾಗಿದೆ, ಗ್ಯಾರಂಟಿ ಹೆಸರಲ್ಲಿ ಹೆಚ್ಚಿನ ತೆರಿಗೆ ಹಾಕಿದ್ದಾರೆ: ಹೆಚ್‌ಡಿಕೆ ವಾಗ್ದಾಳಿ

    ಕಾಪು ಹೊಸ ಮಾರಿಗುಡಿಗೆ ಡಿ.ಕೆ.ಶಿವಕುಮಾರ್ ಅವರು 9,99,999 ರೂಪಾಯಿ ವೆಚ್ಚದ ಸೇವೆ ಮಾಡಿದ್ದಾರೆ. ಡಿಕೆಶಿ ಪತ್ನಿ ಉಷಾ ಅವರ ಹೆಸರಲ್ಲಿ ಸೇವೆ ನೀಡಿದ್ದಾರೆ. ದೇಗುಲ ನಿರ್ಮಾಣ ಕಾರ್ಯಕ್ಕೆ ದೇಣಿಗೆ ನೀಡಿದ್ದಾರೆ.