Tag: ಡಿ.ಕೆ.ಶಿವಕುಮಾರ್

  • ಅಣ್ಣ ಸಿಎಂ ಆಗಲಿ ಅನ್ನೋ ಆಸೆ ಈಗಲೂ ಇದೆ: ಡಿ.ಕೆ ಸುರೇಶ್

    ಅಣ್ಣ ಸಿಎಂ ಆಗಲಿ ಅನ್ನೋ ಆಸೆ ಈಗಲೂ ಇದೆ: ಡಿ.ಕೆ ಸುರೇಶ್

    – ಸಿಎಂ ಕುರ್ಚಿ ಬೇಕು ಅಂತ ಸಿದ್ದರಾಮಯ್ಯರನ್ನ ಎಳೆದು ಕೂರಿಸೋಕೆ ಆಗುತ್ತಾ?

    ಬೆಂಗಳೂರು: ಅಣ್ಣ ಸಿಎಂ ಆಗಲಿ ಅನ್ನೋ ಆಸೆ ಈಗಲೂ ಇದೆ. ಆದರೆ ಅದಕ್ಕೆ ಕಾಲ ಕೂಡಿ ಬರಬೇಕು ಎಂದು ಮಾಜಿ ಸಂಸದ ಡಿ.ಕೆ ಸುರೇಶ್ ( D K Suresh) ಹೇಳಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ (D K Shivakumar) ಹೈಕಮಾಂಡ್ ಭೇಟಿ ಯಾವುದು ಹೊಸತಲ್ಲ. ನಿರಂತರವಾಗಿ ಭೇಟಿ ಮಾಡುತ್ತಲ್ಲೇ ಇರುತ್ತಾರೆ. ಹೈಕಮಾಂಡ್ ಮುಂದೆ ಡಿಮ್ಯಾಂಡ್ ಇಡಲು ಏನಿದೆ ಪಾರ್ಟಿ ಅವರನ್ನ ಡಿಸಿಎಂ ಮಾಡಿದೆಯಲ್ಲ ಇನ್ನೇನು ಬೇಕು ಎಂದಿದ್ದಾರೆ. ಇದನ್ನೂ ಓದಿ: ನಮ್ಮ ತೆರಿಗೆ ಹಣವನ್ನ ಉತ್ತರ ಭಾರತಕ್ಕೆ ಕೊಡ್ತಿದ್ದಾರೆ: ಸತೀಶ್‌ ಜಾರಕಿಹೊಳಿ

    ಈಗ ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿ ಇದ್ದಾರೆ, ಸ್ಥಾನ ಬೇಕು ಅಂತ ಎಂದು ಚೇರ್‌ನಿಂದ ಎಳೆದು ಕೂರಿಸೋಕೆ ಆಗುತ್ತಾ? ಪಕ್ಷದ ಅಧ್ಯಕ್ಷರು ದೆಹಲಿಗೆ ಹೋಗುತ್ತಾ ಇರುತ್ತಾರೆ. ಹೈಕಮಾಂಡ್ ಜೊತೆ ಸಂಪರ್ಕ ಇಟ್ಟುಕೊಂಡಿರುತ್ತಾರೆ. ಹೈಕಮಾಂಡ್ ಭೇಟಿ ಮಾಡಿ ಬರುವುದು ಪ್ರವೃತ್ತಿ. ಡಿಕೆಶಿ ಮುಂದೆ ಯಾವುದೇ ಅಜೆಂಡ ಇಲ್ಲ. ಬೇರೆ ಯಾವುದೇ ಚಿಂತನೆಗಳೂ ಇಲ್ಲ. ಹಕ್ಕು ಅನ್ನೋ ಪ್ರಶ್ನೆ ಇಲ್ಲ ಎಂದು ನುಡಿದ್ದಾರೆ.

    ಡಿ.ಕೆ.ಶಿವಕುಮಾರ್ ಹಿಂದೆ ಪ್ರಧಾನಿ ಭೇಟಿ ಆಗುವುದು ಹೈಕಮಾಂಡ್ ಗಮನಕ್ಕೆ ತಂದಿದ್ದರು. ಶಿವರಾತ್ರಿ ಹಬ್ಬದಲ್ಲಿ ಅಮಿತ್ ಶಾ ಭೇಟಿಯೂ ಹೈಕಮಾಂಡ್ ಗಮನಕ್ಕೆ ತಂದಿದ್ದರು ಎಂದು ಹೇಳಿದ್ದಾರೆ. ಇದನ್ನೂ ಓದಿ: ಪ್ರಪಂಚದಾದ್ಯಂತ ಜನ ಭಾರತಕ್ಕೆ ಬರಲು ಇಚ್ಛಿಸುತ್ತಾರೆ, ತಿಳಿದುಕೊಳ್ಳಲು ಬಯಸುತ್ತಾರೆ – ಮೋದಿ

    ಕೇಂದ್ರದ ತೆರಿಗೆ ಕಡಿತ ಮಾಡುವ ವಿಚಾರವಾಗಿ ಪ್ರತಿಕ್ರಿಯಿಸಿ, ಈ ವಿಷಯ ಅಲ್ಲಲ್ಲಿ ಚರ್ಚೆ ಆಗುತ್ತಿದೆ. ಒಕ್ಕೂಟ ವ್ಯವಸ್ಥೆಯನ್ನು ದುರ್ಬಲ ಮಾಡುವ ಕೆಲಸ ನಡೆಯುತ್ತಿದೆ. ರಾಜ್ಯಗಳಿಗೆ ಶಕ್ತಿ ತುಂಬುವುದು ಬಿಟ್ಟು ಬಲವಂತವಾದ ಕಾನೂನು ಹೇರಲು ಹೊರಟಿದೆ ಎಂದು ಕಿಡಿಕಾರಿದ್ದಾರೆ.

    ರಾಜ್ಯಗಳ ಅಭಿವೃದ್ಧಿ ಕುಂಠಿತಕ್ಕೆ ಕೇಂದ್ರ ಸರ್ಕಾರ ಯಾವ ರೀತಿ ಕಾರಣ ಆಗುತ್ತಿದೆ ನಾವು ನೋಡ್ತಾ ಇದ್ದೇವೆ. ರಾಷ್ಟ್ರ ಹಾಗೂ ರಾಜ್ಯದ ಜನರು ತಿರುಗಿ ಬೀಳಬಹುದು. ತೆರಿಗೆ ಹಣ ಕೊಡಿ ಎಂದು ನಾನು ಮನವಿ ಮಾಡ್ತೇನೆ. ಜನಸಂಖ್ಯೆ ಆಧಾರದ ಮೇಲೆ ತೆರಿಗೆ ಹಣ ವಿಭಜನೆ ಆಗುತ್ತಿದೆ. ಮಹಿಳಾ ಮೀಸಲಾತಿ ಅನುಮೋದನೆ ಆಗಿದೆ. ಜಾತಿಗಣತಿ ಆಗುವ ಸಾಧ್ಯತೆ ಇದೆ. ಕ್ಷೇತ್ರಗಳನ್ನ ಜಾಸ್ತಿ ಮಾಡಿದರೆ, ಸಂಪೂರ್ಣವಾಗಿ ಉತ್ತರ ಭಾರತದ ಹಿಡಿತಕ್ಕೆ ಹೋಗುತ್ತದೆ. ಬಿಜೆಪಿ ನಾಯಕರು ಮಲತಾಯಿ ಧೋರಣೆ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ. ಇದನ್ನೂ ಓದಿ: ಸಿ.ಟಿ.ರವಿ – ಲಕ್ಷ್ಮಿ ಹೆಬ್ಬಾಳ್ಕರ್ ಕೇಸ್ ಎಥಿಕ್ಸ್ ಕಮಿಟಿಗೆ ರವಾನೆ: ಬಸವರಾಜ್ ಹೊರಟ್ಟಿ

    ದೇಶ ಅಂದರೆ ಉತ್ತರ ಪ್ರದೇಶ ಹಾಗೂ ಗುಜರಾತ್ ಎರಡೇ ರಾಜ್ಯ ಅಲ್ಲ. ನಮಗೂ ಕೂಡ ಸಮಾನ ಅವಕಾಶ ಸಿಗಬೇಕು ಅದನ್ನ ಕಸಿದುಕೊಳ್ಳುತ್ತಿದ್ದಾರೆ. ರಾಜಕೀಯ ಒಂದು ಕಡೆ ಇಡಿ, ನಮ್ಮ ಅಸ್ತಿತ್ವ ಉಳಿಸಿಕೊಳ್ಳಬೇಕು. ಎಲ್ಲಾ ರಾಜಕೀಯ ಪಕ್ಷಗಳು ಒಂದಾಗಬೇಕು. ಇಂಥ ಕಾನೂನು ಮಾಡಿ ನಮ್ಮನ್ನ ಸೆದೆಬಡಿಯುವುದು, ಎಲ್ಲವನ್ನೂ ಮ್ಯಾನೇಜ್ ಮಾಡುವ ಕಲೆ ಬಿಜೆಪಿಯದ್ದು ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ದೆಹಲಿ ಖಾಸಗಿ ಬ್ಯಾಂಕ್‌ನಲ್ಲಿ ಅಗ್ನಿ ಅವಘಡ – ಕಾರಣ ಸಸ್ಪೆನ್ಸ್

  • ಡಿಕೆಶಿ ಶಿವರಾತ್ರಿಗೆ ಹೋದ್ರೆ ಪಕ್ಷದ ವಿರುದ್ಧ ಆಗುತ್ತಾ? : ಎಂ.ಬಿ ಪಾಟೀಲ್

    ಡಿಕೆಶಿ ಶಿವರಾತ್ರಿಗೆ ಹೋದ್ರೆ ಪಕ್ಷದ ವಿರುದ್ಧ ಆಗುತ್ತಾ? : ಎಂ.ಬಿ ಪಾಟೀಲ್

    ವಿಜಯಪುರ: ಡಿಸಿಎಂ ಡಿ.ಕೆ ಶಿವಕುಮಾರ್ (D K Shivakumar) ಹಿಂದೂ ಅಲ್ವಾ. ಅವರು ಶಿವರಾತ್ರಿಗೆ ಹೋದರೆ ಏನಾಗುತ್ತದೆ. ಶಿವರಾತ್ರಿ ಆಚರಿಸುವುದು ಪಕ್ಷದ ವಿರುದ್ಧ ಆಗುತ್ತಾ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ (M B Patil) ಪ್ರಶ್ನಿಸಿದರು.

    ಡಿಕೆಶಿ ಶಿವರಾತ್ರಿ ಆಚರಣೆಯಲ್ಲಿ ಭಾಗಿ ವಿಚಾರಕ್ಕೆ ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಅದು ಅವರ ವೈಯಕ್ತಿಕ ವಿಚಾರ. ನನ್ನ ವೈಯಕ್ತಿಕ ವಿಚಾರ ಪಕ್ಷದಲ್ಲ. ಪಕ್ಷದ ವಿಚಾರ ನನ್ನ ವೈಯಕ್ತಿಕ ಅಲ್ಲ. ನನ್ನ ವೈಯಕ್ತಿಕ ಅಸ್ಮಿತೆ, ನನ್ನ ವೈಯಕ್ತಿಕ ಆಚರಣೆ ಅದು ಬೇರೆ ಎಂದು ಸಮರ್ಥಿಸಿಕೊಂಡರು. ಇದನ್ನೂ ಓದಿ: 1ನೇ ತರಗತಿಗೆ ದಾಖಲಾತಿ ವಯಸ್ಸು ಸಡಿಲಿಕೆಯಿಲ್ಲ – ಮಧು ಬಂಗಾರಪ್ಪ

    ಹೀಗಾಗಿ ಒಂದಕ್ಕೊಂದು ಮಿಕ್ಸ್ ಮಾಡುವ ಅವಶ್ಯಕತೆ ಇಲ್ಲ. ಪಕ್ಷದ ಸಿದ್ದಾಂತ ಇರುತ್ತದೆ. ಡಿಕೆಶಿ ಅವರು ಹಿಂದೂ ಅಲ್ವಾ. ಶಿವರಾತ್ರಿಗೆ ಹೋದ್ರೆ ಏನಾಗುತ್ತೆ, ಪಕ್ಷದ ವಿರುದ್ಧ ಆಗುತ್ತಾ. ನಾನು ಶಿವರಾತ್ರಿಗೆ ಲಿಂಗದ ಗುಡಿಗೆ ಹೋಗಿದ್ದೆ. ಶಿವಗಿರಿಗೆ ಹೋಗಿದ್ದೆ. ಅಮಿತ್ ಶಾ ಅವರ ಜೊತೆಯಲ್ಲಿ ಡಿಕೆಶಿ ಅವರು ಶಿವರಾತ್ರಿ ಕಾರ್ಯಕ್ರಮದಲ್ಲಿ ಭಾಗಿ ಆದರೆ ಏನು ತಪ್ಪಿದೆ. ಅನೇಕ ಕಾರ್ಯಕ್ರಮಗಳಲ್ಲಿ ನಮ್ಮನ್ನೂ ಕರೆದಿರುತ್ತಾರೆ, ಅವರನ್ನೂ ಕರೆದಿರುತ್ತಾರೆ ಎಂದು ಹೇಳಿದರು.

    ರಾಹುಲ್ ಗಾಂಧಿ ವಿರುದ್ಧ ಸದ್ಗುರು ಜಗ್ಗಿ ವಾಸುದೇವ ಅವರ ಹೇಳಿಕೆ ಒಂದು ಭಾಗ. ಇದು ಶಿವರಾತ್ರಿ ಕಾರ್ಯಕ್ರಮಕ್ಕೆ ಅವರೂ ಹೋಗಿದ್ದಾರೆ ಎಂದರು. ಇದನ್ನೂ ಓದಿ: ತಂಗಿ ಬಗ್ಗೆ ರಶ್ಮಿಕಾ ಮಂದಣ್ಣ ಶಾಕಿಂಗ್ ಕಾಮೆಂಟ್: ಹೀಗ್ಯಾಕಂದ್ರು ಶ್ರೀವಲ್ಲಿ?

    ಸಿಎಂ ಬದಲಾವಣೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ನಾನು ಯಾವುದೇ ಹೇಳಿಕೆ ನೀಡುವುದಿಲ್ಲ ಎಂದುನಿರ್ಧಾರ ಮಾಡಿದ್ದೇನೆ. ಈ ವಿಚಾರ ಹೈಕಮಾಂಡ್‌ಗೆ ಬಿಟ್ಟಿದ್ದು ಎಂದರು.

  • ಕಾಂಗ್ರೆಸ್‌ ಸರ್ಕಾರ ಸುಭದ್ರವಾಗಿದೆ, ಅದೃಷ್ಟ ಒಲಿದು ಬಂದಾಗ ಡಿಕೆಶಿ ಸಿಎಂ ಆಗ್ತಾರೆ: ಜಿಟಿಡಿ

    ಕಾಂಗ್ರೆಸ್‌ ಸರ್ಕಾರ ಸುಭದ್ರವಾಗಿದೆ, ಅದೃಷ್ಟ ಒಲಿದು ಬಂದಾಗ ಡಿಕೆಶಿ ಸಿಎಂ ಆಗ್ತಾರೆ: ಜಿಟಿಡಿ

    ಮೈಸೂರು: ಸದ್ಯ ಕಾಂಗ್ರೆಸ್‌ ಸರ್ಕಾರ (Congress Government) ಸುಭದ್ರವಾಗಿದೆ. ಅದೃಷ್ಟ ಒಲಿದು ಬಂದಾಗ ಡಿ.ಕೆ ಶಿವಕುಮಾರ್‌ ಸಿಎಂ ಆಗ್ತಾರೆ ಎಂದು ಮಾಜಿ ಸಚಿವ ಜಿ.ಟಿ ದೇವೇಗೌಡ (GT Deve Gowda) ಹೇಳಿದ್ದಾರೆ.

    ಮೈಸೂರಿನಲ್ಲಿಂದು (Mysuru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಕರ್ನಾಟಕದಲ್ಲಿ ಭಾರೀ ಗಟ್ಟಿಯಾಗಿದೆ. 138 ಸ್ಥಾನಗಳಿಂದ ಸುಭದ್ರವಾಗಿದೆ. ಸಿಎಂ ಆಗಿ ಸಿದ್ದರಾಮಯ್ಯ (Siddaramaiah), ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್ (DK Shivakumar) ಇದ್ದಾರೆ. ಅದೃಷ್ಟ ಒಲಿದು ಬಂದಾಗ ಡಿಕೆಶಿ ಸಿಎಂ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ಇದನ್ನೂ ಓದಿ: ಬದರಿನಾಥದಲ್ಲಿ ಹಿಮಪಾತ, 47 ಕಾರ್ಮಿಕರ ರಕ್ಷಣೆ – ಮೂವರ ಸ್ಥಿತಿ ಗಂಭೀರ, ಮೋದಿಯಿಂದ ಅಗತ್ಯ ನೆರವಿನ ಭರವಸೆ

    1996 ರಿಂದ 2004ರ ವರೆಗೆ ಸಿದ್ದರಾಮಯ್ಯ ಸಿಎಂ ಆಗ್ತಾರೆ ಅನ್ಕೊಂಡು ಬಂದ್ರು ಅದು ಆಗಲಿಲ್ಲ. ಈಗ ಡಿ.ಕೆ ಶಿವಕುಮಾರ್ ನಡೆ ಬಗ್ಗೆ ಹೆಚ್ಚಿನ ಬಗ್ಗೆ ನನಗೆ ಗೊತ್ತಿಲ್ಲ. ಆ ರಾಜಕೀಯದ ಬಗ್ಗೆ ನಾನು ಹೆಚ್ಚು ತಲೆಕೆಡಿಸಿಕೊಳ್ಳುತ್ತಿಲ್ಲ. ಈ ಬಗ್ಗೆ ಡಿ.ಕೆ ಶಿವಕುಮಾರ್ ಜೊತೆ ಮಾತನಾಡಿಲ್ಲ ಎಂದು ಜಿಟಿಡಿ ಹೇಳಿದ್ದಾರೆ. ಇದನ್ನೂ ಓದಿ: ಸಿಲಿಂಡರ್ ಸ್ಫೋಟ ಪ್ರಕರಣ – ಗಾಯಾಳು ಸಾವು 

  • ಸಿಎಂ, ಕಾಂಗ್ರೆಸ್ ಹೆದರಿಸಲು ಡಿಕೆಶಿ ಹಿಂದುತ್ವದ ವೇಷ ಹಾಕಿದ್ದಾರೆ: ಮುನಿರತ್ನ

    ಸಿಎಂ, ಕಾಂಗ್ರೆಸ್ ಹೆದರಿಸಲು ಡಿಕೆಶಿ ಹಿಂದುತ್ವದ ವೇಷ ಹಾಕಿದ್ದಾರೆ: ಮುನಿರತ್ನ

    ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ (D K Shivakumar) ಅವರು ಸಿದ್ದರಾಮಯ್ಯ (Siddaramaiah) ಮತ್ತು ಕಾಂಗ್ರೆಸ್ ಅನ್ನು ಹೆದರಿಸಲು ಹಿಂದುತ್ವದ ವೇಷ ಹಾಕಿದ್ದಾರೆ ಎಂದು ಆರ್.ಆರ್ ನಗರ ಶಾಸಕ ಮುನಿರತ್ನ (Munirathna) ವಾಗ್ದಾಳಿ ನಡೆಸಿದರು.

    ಸಿಎಂ ಭೇಟಿ ಬಳಿಕ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಹಿಂದೂ ಅಲ್ಲ ಅಂತ ನಾವು ಯಾರು ಹೇಳಿಲ್ಲ. ಅವರು ಹಿಂದೂನೇ. ಹಿಂದು ಆಗಿಯೇ ಸಾಯಲಿ ಯಾರು ಬೇಡ ಅಂದರು. ಡಿಕೆಶಿ ಅವರು ಸಿದ್ದರಾಮಯ್ಯಗೆ ಬ್ಲಾಕ್‌ಮೇಲ್ ಮಾಡೋದಕ್ಕೆ ಹಿಂದುತ್ವದ ವೇಷ ಹಾಕಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಪ್ರಾರ್ಥನೆ ನಡೆಸುತ್ತಿದ್ದಾಗಲೇ ಪಾಕ್‌ ಮಸೀದಿಯಲ್ಲಿ ಬಾಂಬ್‌ ಸ್ಫೋಟ – 5 ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

    ಸಿದ್ದರಾಮಯ್ಯರನ್ನ ಮತ್ತು ಕಾಂಗ್ರೆಸ್ ಅನ್ನ ಬ್ಲ್ಯಾಕ್‌ಮೇಲ್ ಮಾಡಲು ಇವೆಲ್ಲಾ ತಂತ್ರ ಅಷ್ಟೇ. ಸದ್ಗುರು ಅವರು ಇವರನ್ನು ಆಹ್ವಾನ ಮಾಡೋಕೆ ಬಂದಿರೋದಿಲ್ಲ. ಇವರೇ ಪ್ಲ್ಯಾನ್ ಮಾಡಿ ಅವರನ್ನ ಕರೆಸಿಕೊಂಡು ಆಹ್ವಾನ ಬಂದಿದೆ ಅಂತ ಪತ್ರಿಕೆ ಹಿಡಿದುಕೊಂಡು ಹೋಗಿದ್ದಾರೆ. ಡಿಕೆಶಿ ಬಿಜೆಪಿಗೆ ಬರೋ ಪ್ರಶ್ನೆಯೇ ಇಲ್ಲ. ಇವರು ಸಿಎಂ ಅನ್ನು ಹೆದರಿಸಲು ಬಜೆಪಿಯ ಕಥೆ ಹೇಳುತ್ತಿದ್ದಾರೆ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಟ್ಯಾಟೂಗೆ 22 ಹೆವಿ ಮೆಟಲ್‌ ಬಳಕೆಯಿಂದ ಚರ್ಮರೋಗ: ದಿನೇಶ್‌ ಗುಂಡೂರಾವ್‌

    ಡಿಕೆಶಿ ಬಿಜೆಪಿಗೆ ಬಂದರೆ ಕುಕ್ಕರ್‌ನಲ್ಲಿ ಬಾಂಬ್ ಇಟ್ಟ ಬ್ರದರ್ಸ್ ಆ್ಯಂಡ್ ಸಿಸ್ಟರ್‌ಗೆ ಕೋಪ ಬರುವುದಿಲ್ವಾ? ಏಸು ಬೆಟ್ಟದವರು ಕೋಪ ಮಾಡಿಕೊಳ್ಳುತ್ತಾರೆ. ಇವರು ಹೀಗೆ ಮಾಡಿದರೆ ಏಕನಾಥ್ ಶಿಂಧೆ ಆಗುವುದಿಲ್ಲ. ಏಕ ವ್ಯಕ್ತಿ ಆಗುತ್ತಾರೆ. ಬೆಂಗಳೂರನ್ನ ಡಿಕೆಶಿ ಹಾಳು ಮಾಡಿ ಇಟ್ಟಿದ್ದಾರೆ. ಬೆಂಗಳೂರು ಬಗ್ಗೆ ಡಿಕೆಶಿಗೆ ಗೊತ್ತೇ ಇಲ್ಲ. ಬೆಂಗಳೂರು ಹೀಗೆ ಹೋದರೆ ಐಟಿ-ಬಿಟಿ, ಸಿಲಿಕಾನ್ ಸಿಟಿ ಎನ್ನುವ ಹೆಸರು ಹೋಗುತ್ತದೆ ಎಂದು ಗುಡುಗಿದರು. ಇದನ್ನೂ ಓದಿ: ಎರಡು ಬಿಎಂಟಿಸಿ ಬಸ್‌ಗಳಿಗೆ ಸಿಲುಕಿ ಅಪ್ಪಚ್ಚಿಯಾದ ಆಟೋ – ಚಾಲಕ ಸೇರಿ ಇಬ್ಬರು ಬಲಿ

  • ಡಿಕೆಶಿ ಬಿಜೆಪಿ ಸೇರುವ ಕುರಿತು ಯಾವುದೇ ಚರ್ಚೆ ಇಲ್ಲ: ಬಸವರಾಜ ಬೊಮ್ಮಾಯಿ

    ಡಿಕೆಶಿ ಬಿಜೆಪಿ ಸೇರುವ ಕುರಿತು ಯಾವುದೇ ಚರ್ಚೆ ಇಲ್ಲ: ಬಸವರಾಜ ಬೊಮ್ಮಾಯಿ

    – ರಾಜಕಾರಣದಲ್ಲಿ ಬೆಳವಣಿಗೆ ಓವರ್ ನೈಟೇ ಆಗೋದು ಎಂದ ಸಂಸದ

    ಬೆಂಗಳೂರು: ಡಿಕೆಶಿ, ಅಮಿತ್ ಶಾ ಇಶಾ ಫೌಂಡೇಶನ್‌ನ ಶಿವರಾತ್ರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕೆ ರಾಜಕೀಯ ಅರ್ಥ ಕಲ್ಪಿಸುವ ಅಗತ್ಯ ಇಲ್ಲ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

    ವಿಧಾನಸೌಧದಲ್ಲಿ ಮಾತನಾಡಿದ ಅವರು, ಸದ್ಗುರು ಕಾರ್ಯಕ್ರಮದಲ್ಲಿ ಮೋದಿ ಅವರು ಹಿಂದೆ ಭಾಗವಹಿಸಿದ್ದರು. ಅಮಿತ್ ಶಾ ಅವರು ಭಾಗಿಯಾಗಿದ್ದರು. ನಾವೂ ಸಹ ಸಾಕಷ್ಟು ಸಲ ಭಾಗಿವಹಿಸಿದ್ದೆವು. ಆದರೆ, ಕಾಂಗ್ರೆಸ್‌ನಲ್ಲಿ ಬೇರೆ ಬೇರೆ ವ್ಯಾಖ್ಯಾನ ನಡೆಯುತ್ತಿರುವುದು ಅವರ ಪಕ್ಷದ ವಿಚಾರ ಎಂದು ಹೇಳಿದರು.

    ಅದು ಆ ಪಕ್ಷದ ಅಪನಂಬಿಕೆ ಮತ್ತು ಗೊಂದಲದ ಸಂಕೇತ. ಅಪನಂಬಿಕೆ ಇದೆ, ಅದಕ್ಕೆ ಅಪಸ್ವರ ಇದೆ‌. ಡಿಕೆಶಿ ಬಿಜೆಪಿ ಸೇರುವ ಕುರಿತು ಯಾವುದೇ ಚರ್ಚೆ ಇಲ್ಲ. ರಾಜಕಾರಣದಲ್ಲಿ ಬೆಳವಣಿಗೆ ಕ್ಷಿಪ್ರವೇ ಆಗೋದು, ಓವರ್ ನೈಟ್ ಆಗೋದು. ಪ್ರಶ್ನೆ ಅದಲ್ಲ. ಆದರೆ, ನಮ್ಮ ತಿಳಿವಳಿಕೆಯಲ್ಲಿ ಆ ರೀತಿ ಯಾವುದೇ ಸ್ಥಿತಿ ಇಲ್ಲ ಎಂದು ಸ್ಪಷ್ಟಪಡಿಸಿದರು.

    ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ನನ್ನ ಹೆಸರನ್ನ ತೇಲಿಬಿಡ್ತೀರಿ. ಎಲ್ಲರೂ ಒಟ್ಟಿಗೆ ಶಕ್ತಿಯಾಗಿ ಮತ್ತೊಮ್ಮೆ ಸರ್ಕಾರ ರಚನೆ ಮಾಡಬೇಕು. ಎಲ್ಲರನ್ನೂ ಒಳಗೊಂಡಂತಹ ಸಂಘಟನೆ ಮಾಡುವ ಉದ್ದೇಶ ಇದೆ ಎಂದು ಹೇಳಿದರು.

  • ಡಿಕೆಶಿ ಕಾಂಗ್ರೆಸ್ ಸಿದ್ಧಾಂತದ ವಿರುದ್ಧ ಇದ್ರೆ ಸಸ್ಪೆಂಡ್ ಮಾಡಿ: ಜಗದೀಶ್ ಶೆಟ್ಟರ್

    ಡಿಕೆಶಿ ಕಾಂಗ್ರೆಸ್ ಸಿದ್ಧಾಂತದ ವಿರುದ್ಧ ಇದ್ರೆ ಸಸ್ಪೆಂಡ್ ಮಾಡಿ: ಜಗದೀಶ್ ಶೆಟ್ಟರ್

    ಹುಬ್ಬಳ್ಳಿ: ಡಿ.ಕೆ ಶಿವಕುಮಾರ್ (DK Shivakumar) ನಿಮ್ಮ ತತ್ವದ ವಿರುದ್ಧ ಇದ್ದರೆ ಅವರನ್ನು ಸಸ್ಪೆಂಡ್ ಮಾಡಿಬಿಡಿ ಎಂದು ಕಾಂಗ್ರೆಸ್ಸಿಗರಿಗೆ (Congress) ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadish Shettar) ಟಾಂಗ್ ಕೊಟ್ಟಿದ್ದಾರೆ.

    ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ಡಿಕೆಶಿ ಕುಂಭಮೇಳಕ್ಕೆ (Maha Kumbh Mela) ಹೋಗಿರೋದು, ಕೊಯಮತ್ತೂರಿಗೆ ಹೋಗಿರೋ ವಿಚಾರಕ್ಕೆ ಪಕ್ಷದಲ್ಲೇ ವಿರೋಧ ವ್ಯಕ್ತವಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದರು. ಡಿಕೆಶಿ ಹೋಗಿರೋದು  ಸಹಜ, ಇದರಲ್ಲಿ ದೊಡ್ಡಸ್ಥಿಕೆ ಏನಿಲ್ಲ. ಇದು ಸರಿ ಆಗಲ್ಲ ಅಂದ್ರೆ, ನಿಮ್ಮ ಪಕ್ಷದ ತತ್ವ ಸಿದ್ಧಾಂತಕ್ಕೆ ವಿರೋಧವಾಗಿದ್ರೆ ಅವರನ್ನು ಸಸ್ಪೆಂಡ್ ಮಾಡಿ ಎಂದು ಹೇಳಿದ್ದಾರೆ.

    ಕಾಂಗ್ರೆಸ್‍ಗೆ ಹಿಂದೂಗಳ ಬಗ್ಗೆ ದ್ವೇಷ ಇದೆ. ಇದರಿಂದ ಕಾಂಗ್ರೆಸ್ ಉದ್ದಾರ ಆಗಲ್ಲ. ಹಿಂದೂಗಳಿಲ್ಲದೆ ನೀವು ರಾಜಕಾರಣ ಮಾಡ್ತೀವಿ ಅಂದ್ರೆ ಅದು ನಿಮ್ಮ ಹಣೆಬರಹ. ಹಿಂದೂಗಳನ್ನ ಕೀಳಾಗಿ ಕಾಣೋದೆ, ಅವರ ಅವನತಿಗೆ ಕಾರಣ ಎಂದಿದ್ದಾರೆ.

    ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್ ಖರ್ಗೆ ಅವರ ಹೇಳಿಕೆ ಹಿಂದೂ ವಿರೋಧಿಯಾಗಿವೆ. ಈ ದೇಶ ಹಿಂದೂಗಳ ದೇಶ, ಹಿಂದೂ ರಾಷ್ಟ್ರ ಅನ್ನೋ ಪರಂಪರೆ ಇದೆ. ಕಮ್ಯುನಿಸ್ಟರು ಕೂಡಾ ಹಿಂದೂ ದೇವಾಲಯಕ್ಕೆ ಹೋಗಿದ್ದಾರೆ. ಕಾಂಗ್ರೆಸ್‍ನವರು ಎಷ್ಟೋ ಜನ ಕುಂಭಮೇಳಕ್ಕೆ ಹೋಗಿದ್ದಾರೆ. ರಾಜಕಾರಣಕ್ಕೆ ಧರ್ಮಕ್ಕೆ ತಳಕು ಹಾಕಬಾರದು ಎಂದಿದ್ದಾರೆ.

  • ಕಾಂಗ್ರೆಸ್‌ನಲ್ಲೇ ಡಿಕೆಶಿಯವ್ರನ್ನ ಟಾರ್ಗೆಟ್ ಮಾಡಲಾಗ್ತಿದೆ: ಛಲವಾದಿ ನಾರಾಯಣಸ್ವಾಮಿ

    ಕಾಂಗ್ರೆಸ್‌ನಲ್ಲೇ ಡಿಕೆಶಿಯವ್ರನ್ನ ಟಾರ್ಗೆಟ್ ಮಾಡಲಾಗ್ತಿದೆ: ಛಲವಾದಿ ನಾರಾಯಣಸ್ವಾಮಿ

    – ಡಿಕೆಶಿ ಒಬ್ಬ ಹಿಂದೂವಾದಿ ಅನ್ನೋದು ಸಾಬೀತಾಗಿದೆ ಎಂದ ಎಂಎಲ್‌ಸಿ

    ಬೆಂಗಳೂರು: ಡಿಕೆಶಿಯವರನ್ನು ಕಾಂಗ್ರೆಸ್‌ನ (Congress) ಒಳಗೇ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ವಾಗ್ದಾಳಿ ನಡೆಸಿದರು.

    ಅಮಿತ್ ಶಾ (Amit Shah) ಜೊತೆ ಡಿಕೆಶಿ ವೇದಿಕೆ ಹಂಚಿಕೊಂಡಿದ್ದಕ್ಕೆ ಕಾಂಗ್ರೆಸಿಗರು ಆಕ್ಷೇಪ ವ್ಯಕ್ತಪಡಿಸಿರುವ ವಿಚಾರವಾಗಿ ಮಾತನಾಡಿ, ಡಿಕೆಶಿ ಅಮಿತ್ ಶಾ ಜೊತೆ ರಾಜಕೀಯ ವೇದಿಕೆ ಹಂಚಿಕೊಳ್ಳಲಿಲ್ಲ. ರಾಜಕೀಯೇತರ ವೇದಿಕೆಯಲ್ಲಿ ಅಮಿತ್ ಶಾ ಜೊತೆ ಪಾಲ್ಗೊಂಡಿದ್ದರು. ಸದ್ಗುರು ಆಹ್ವಾನ ಮೇರೆಗೆ ಡಿಕೆಶಿಯವರು ಅಲ್ಲಿಗೆ ಹೋಗಿದ್ದಾರೆ. ಅದಕ್ಕೆ ಕಾಂಗ್ರೆಸ್‌ನಲ್ಲಿ ಆಕ್ಷೇಪ ಬರುತ್ತಿರುವುದು ಸರಿಯಲ್ಲ ಎಂದರು. ಇದನ್ನೂ ಓದಿ: ಕಾರ್ಮೋಡ ಕವಿದಿತ್ತು.. ಮುತ್ತಿನ ಹನಿಗಳು ಉದುರಿತು.. ತೂಗುವ ತೊಟ್ಟಿಲು ಕೈತಪ್ಪಿತು.. ನಾನ್ ಇದ್ದೇನಲೇ ಪರಾಕ್!

    ಡಿಕೆಶಿ ಕಾಂಗ್ರೆಸ್ ಅಧ್ಯಕ್ಷರು, ಆದರೆ ಅಮಿತ್ ಶಾ ಬಿಜೆಪಿ ಅಧ್ಯಕ್ಷರಲ್ಲ. ಡಿಕೆಶಿಯವರನ್ನು ಕಾಂಗ್ರೆಸ್‌ನ ಒಳಗೇ ಟಾರ್ಗೆಟ್ ಮಾಡಲಾಗುತ್ತಿದೆ. ಅವರನ್ನ ಟಾರ್ಗೆಟ್ ಮಾಡಿ ಮೂಲೆ ಗುಂಪು ಮಾಡುವ ಕೆಲಸ ಕಾಂಗ್ರೆಸ್‌ನಲ್ಲಿ ಆಗುತ್ತಿದೆ ಎಂದು ಹೇಳಿದರು.

    ಡಿಕೆಶಿ ಒಬ್ಬ ಹಿಂದೂವಾದಿ ಎನ್ನುವುದು ಸಾಬೀತಾಗಿದೆ. ಆದ್ದರಿಂದ ಪಕ್ಷದಲ್ಲಿ ಅವರನ್ನು ಮೂಲೆಗೆ ಸರಿಸುವ ಕೆಲಸ ಶುರುವಾಗಿದೆ. ಆದರೆ ಅವರು ಅಮಿತ್ ಶಾ ಅವರನ್ನ ಭೇಟಿಯಾದರೂ ಎಂದು ಬಿಜೆಪಿಗೆ ಸೇರುತ್ತಾರೆ ಎನ್ನುವುದಲ್ಲ. ಡಿಕೆಶಿ ಬಿಜೆಪಿಗೆ ಬರ್ತಾರೆ ಅನ್ನೋದು ಊಹಾಪೋಹ ಅಷ್ಟೇ. ಆದರೂ ಆ ವಿಷಯವನ್ನು ತಳ್ಳಿ ಹಾಕಲೂ ಆಗುವುದಿಲ್ಲ. ಈ ಹಿಂದೆಯೂ ಇಂತಹ ಬೆಳವಣಿಗೆ ಆಗಿದೆ. ಬಿಜೆಪಿಗೆ ಬರ್ತಾರಾ ಇಲ್ವಾ ಅನ್ನೋ ಪ್ರಶ್ನೆಗೆ ಡಿಕೆಶಿ ಅವರೇ ಉತ್ತರ ಕೊಡಬೇಕು ಎಂದರು. ಇದನ್ನೂ ಓದಿ: ಏಕತೆಯ ಮಹಾ ಯಜ್ಞ ಪೂರ್ಣಗೊಂಡಿತು: ಐತಿಹಾಸಿಕ ಕುಂಭಮೇಳದ ಬಗ್ಗೆ ಮೋದಿ ಬಣ್ಣನೆ

  • ಗ್ರೇಟರ್ ಬೆಂಗಳೂರು ಮಾಡಿ ಕೆಂಪೇಗೌಡ ಕಟ್ಟಿದ ನಾಡನ್ನ ಛಿದ್ರ ಮಾಡೋಕೆ ಕಾಂಗ್ರೆಸ್ ಮುಂದಾಗಿದೆ: ಛಲವಾದಿ

    ಗ್ರೇಟರ್ ಬೆಂಗಳೂರು ಮಾಡಿ ಕೆಂಪೇಗೌಡ ಕಟ್ಟಿದ ನಾಡನ್ನ ಛಿದ್ರ ಮಾಡೋಕೆ ಕಾಂಗ್ರೆಸ್ ಮುಂದಾಗಿದೆ: ಛಲವಾದಿ

    – ಬೆಂಗಳೂರು ಅಭಿವೃದ್ಧಿ ಮಾಡೋಕೆ ಆಗಲ್ಲ ಅಂದ್ರೆ ರಾಜೀನಾಮೆ ಕೊಡಿ ಎಂದು ವಾಗ್ದಾಳಿ

    ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ರೇಟರ್ ಬೆಂಗಳೂರು ಪ್ರಸ್ತಾಪಕ್ಕೆ ಬಜೆಪಿ ವಿರೋಧ ಮಾಡಿದೆ. ಈ ಸಂಬಂಧ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸರ್ಕಾರದ ನಡೆ ಖಂಡಿಸಿದರು.

    ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಬಿಬಿಎಂಪಿ ಚುನಾವಣೆ ಅಗಬೇಕಿತ್ತು‌. ಹೀಗೆ ಚುನಾವಣೆ ಮುಂದೂಡೋದ್ರಿಂದ ಪ್ರಜಾಪ್ರಭುತ್ವಕ್ಕೆ ಚ್ಯುತಿ ಬರುತ್ತದೆ. ಬ್ರ್ಯಾಂಡ್ ಬೆಂಗಳೂರು ಅಂದೋರು ಈಗ ಯಾಕೆ ಗ್ರೇಟರ್ ಬೆಂಗಳೂರು ಅಂತಿದ್ದೀರಾ. ಬ್ರ್ಯಾಂಡ್ ಬೆಂಗಳೂರು ಮಾಡಲು ಆಗದವರು‌ ಗ್ರೇಟರ್ ಬೆಂಗಳೂರು ಮಾಡ್ತಾರಾ ಎಂದು ಪ್ರಶ್ನಿಸಿದರು.

    ಇದು ಸರಿಯಾದ ಕ್ರಮ ಅಲ್ಲ. ಗ್ರೇಟರ್ ಬೆಂಗಳೂರು ಮಾಡಿ ಕೆಂಪೇಗೌಡ ಕಟ್ಟಿದ ಬೆಂಗಳೂರನ್ನ ಛಿದ್ರ ಮಾಡೋಕೆ ಕಾಂಗ್ರೆಸ್ ಹೊರಟಿದೆ. ಬೆಂಗಳೂರನ್ನ ಒಗ್ಗಟ್ಟಾಗಿ ಇಡೋ ಕೆಲಸ ಆಗಬೇಕು. ವಿಚಿತ್ರಕಾರಿ ಜನ ಬೆಂಗಳೂರಿಗೆ ಬಂದು ಹಾಳು ಮಾಡಿದ್ದು ಆಯ್ತು. ಬೆಂಗಳೂರನ್ನ ಸುಭದ್ರಗೊಳಿಸಬೇಕು. ಅದು ಬಿಟ್ಟು 6, 7 ಭಾಗ ಮಾಡ್ತೀವಿ. 6 ಮೇಯರ್ ಮಾಡ್ತೀವಿ ಅನ್ನೋದು ಸರಿಯಲ್ಲ. ಗ್ರೇಟರ್ ಬೆಂಗಳೂರಿಗೆ ನಮ್ಮ ವಿರೋಧ ಇದೆ ಎಂದರು‌.

    ದೇವರೇ ಬಂದರು ಬೆಂಗಳೂರು ಅಭಿವೃದ್ಧಿ ಮಾಡೋಕೆ ಆಗಲ್ಲ ಎಂಬ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಕೈಲಾಗದವರು ಮೈ ಪರಚಿಕೊಂಡ ರೀತಿ ಇವರದ್ದು ಆಗಿದೆ. ಬೆಂಗಳೂರನ್ನ ಹಾಗೆ ಮಾಡ್ತೀವಿ ಹೀಗೆ ಮಾಡ್ತೀವಿ ಅಂತ ಸುಳ್ಳು ಹೇಳಿ ಅಧಿಕಾರಕ್ಕೆ ಬಂದವರು ಇವರು.ಅವರು ಕೊಟ್ಟ ಗ್ಯಾರಂಟಿಗೆ ವಾರಂಟಿ ಇಲ್ಲದ ಹಾಗೇ ಆಗಿದೆ.ಇವರು ನಮ್ಮನ್ನ ಗ್ಯಾರಂಟಿ ಒಂದೇ ಕಾಪಾಡುತ್ತೆ ಅಂತ ಅಂದುಕೊಂಡಿದ್ದಾರೆ. ದೇವರು ಬಂದರೂ ಅಭಿವೃದ್ಧಿ ಮಾಡೋಕೆ ಆಗಲ್ಲ ಅಂದರೆ ನೀವು ಯಾಕೆ ಅಧಿಕಾರದಲ್ಲಿ ಇದ್ದೀರಾ? ಅಧಿಕಾರ ಬಿಟ್ಟು ತೊಲಗಿ ಹೋಗಿ. ರಾಜೀನಾಮೆ ಕೊಟ್ಟುಬಿಡಿ. ಇಷ್ಟು ದಿನ ಬೆಂಗಳೂರನ್ನ ನೀವೇ ಕಾಪಾಡಿರೋದಾ? ನಿಮ್ಮಿಂದ ಆಗಿಲ್ಲ ಅಂದರೆ ಅಧಿಕಾರ ಬಿಟ್ಟು ಹೋಗಿ ಅಂತ ಕಾಂಗ್ರೆಸ್ ವಿರುದ್ದ, ಡಿಕೆಶಿ ವಿರುದ್ದ ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದರು

  • ಬೆಂಗಳೂರಿನ ರಸ್ತೆ ಗುಂಡಿಗಳೂ ಸೊನ್ನೆ, ಅಭಿವೃದ್ಧಿಯೂ ಸೊನ್ನೆ: ಆರ್.ಅಶೋಕ್ ಟೀಕೆ

    ಬೆಂಗಳೂರಿನ ರಸ್ತೆ ಗುಂಡಿಗಳೂ ಸೊನ್ನೆ, ಅಭಿವೃದ್ಧಿಯೂ ಸೊನ್ನೆ: ಆರ್.ಅಶೋಕ್ ಟೀಕೆ

    – ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರಕ್ಕೆ ಒತ್ತಾಯಿಸಿದ ವಿಪಕ್ಷ ನಾಯಕ

    ಬೆಂಗಳೂರು: ರಸ್ತೆ ಗುಂಡಿಗಳ ಆಕಾರ ಸೊನ್ನೆಯಾಗಿರುವಂತೆಯೇ ಬೆಂಗಳೂರಿನ (Bengaluru) ಅಭಿವೃದ್ಧಿಯೂ ಸೊನ್ನೆಯೇ ಆಗಿದೆ. ಅಭಿವೃದ್ಧಿಗಾಗಿ ಆದಷ್ಟು ಬೇಗ ಬಿಬಿಎಂಪಿ ಚುನಾವಣೆ (BBMP Election) ನಡೆಸಬೇಕು ಎಂದು ಸರ್ಕಾರಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ್ (R Ashok) ಒತ್ತಾಯಿಸಿದರು.

    ಬಿಬಿಎಂಪಿ ಚುನಾವಣೆ ಹಾಗೂ ಬೆಂಗಳೂರಿನ ಅಭಿವೃದ್ಧಿ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆದಷ್ಟು ಬೇಗ ಚುನಾವಣೆ ನಡೆಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸುತ್ತೇವೆ. ಈ ಸಂಬಂಧ ನ್ಯಾಯಾಲಯದಲ್ಲಿ ವಾದ ಮಾಡಲು 15 ತಜ್ಞರ ತಂಡವನ್ನು ರಚಿಸಲಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಬೆಂಗಳೂರಿನ ಅಭಿವೃದ್ಧಿ ಸೊನ್ನೆಯಾಗಿದೆ. ರಸ್ತೆ ಗುಂಡಿಗಳ ಆಕಾರ ಸೊನ್ನೆಯಾಗಿರುವಂತೆಯೇ ಅಭಿವೃದ್ಧಿಯೂ ಸೊನ್ನೆಯೇ ಆಗಿದೆ. ರಸ್ತೆ ಗುಂಡಿಗಳಿಂದ ಬಿದ್ದು ಗಾಯಕ್ಕೊಳಗಾಗಿ ಜನರು ಆಸ್ಪತ್ರೆ ಸೇರುತ್ತಿದ್ದಾರೆ. ಎಲ್ಲಾ ಕಡೆ ಕಸದ ರಾಶಿ ಕಂಡುಬರುತ್ತಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಭಾರತದತ್ತ ಯುರೋಪಿಯನ್ ರಾಷ್ಟ್ರಗಳ ಹೆಜ್ಜೆ – ತಿಂಗಳಾಂತ್ಯಕ್ಕೆ 27 ರಾಷ್ಟ್ರಗಳ ಆಯುಕ್ತರ ತಂಡ ಭೇಟಿ

    ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಹಿಮಾಲಯದ ಶಿಖರದಂತೆ ನಗರದ ಅಭಿವೃದ್ಧಿಯನ್ನು ಬ್ರ್ಯಾಂಡ್‌ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದರು. ಈಗ ಅವರೇ ಬೆಂಗಳೂರನ್ನು ಉದ್ಧಾರ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಇದರ ವಿರುದ್ಧ ಹೋರಾಟ ಮಾಡಲು ಸಭೆ ನಡೆಸಲಾಗಿದೆ ಎಂದರು. ಇದನ್ನೂ ಓದಿ: ಮಲೆ ಮಹದೇಶ್ವರ ಕೋಟಿ ಒಡೆಯ – 1.94 ಕೋಟಿ ಕಾಣಿಕೆ ಸಂಗ್ರಹ

    ಸರ್ಕಾರಕ್ಕೆ ಬಿಬಿಎಂಪಿ ಚುನಾವಣೆ ನಡೆಸುವ ಮನಸ್ಸಿಲ್ಲ. ಗ್ರೇಟರ್ ಬೆಂಗಳೂರು ರಚಿಸುತ್ತೇವೆ. ಇನ್ನಷ್ಟು ಪ್ರದೇಶಗಳನ್ನು ಬೆಂಗಳೂರಿಗೆ ಸೇರಿಸುತ್ತೇವೆ ಎಂದು ಹೇಳುತ್ತಿದೆ. ಇರುವ ನಗರವನ್ನೇ ಸುಧಾರಣೆ ಮಾಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಇನ್ನು ಹೊಸ ಪ್ರದೇಶಗಳ ಅಭಿವೃದ್ಧಿ ಹೇಗೆ ಸಾಧ್ಯ. ಬೆಂಗಳೂರನ್ನು ಒಡೆದರೆ ನಾಡಪ್ರಭು ಕೆಂಪೇಗೌಡರಿಗೆ ಅಪಮಾನ ಮಾಡಿದಂತಾಗುತ್ತದೆ. ಕೆಂಪೇಗೌಡರನ್ನು ನಂಬುವ ಜನರ ಮನಸ್ಸಿಗೆ ನೋವಾಗುತ್ತದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ವಿಶ್ವವಿದ್ಯಾಲಯಗಳನ್ನು ಮುಚ್ಚುವುದಕ್ಕೆ ನಾವು ಅವಕಾಶ ಕೊಡುವುದಿಲ್ಲ: ವಿಜಯೇಂದ್ರ

    ಈಗ 198 ವಾರ್ಡ್‌ಗಳಿಗೆ ಚುನಾವಣೆ ನಡೆಸಿದರೆ ಸಾಕು. ರಸ್ತೆ ಮೇಲ್ಭಾಗದಲ್ಲೇ ಸುರಂಗ ನಿರ್ಮಾಣವಾಗುತ್ತಿರುವಾಗ 150 ಅಡಿ ಕೆಳಗೆ ಸುರಂಗ ಕೊರೆಯಲು ಹೊರಟಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗಳಿಂದ ಜನರು ರೊಚ್ಚಿಗೆದ್ದಿದ್ದಾರೆ. ಬೆಂಗಳೂರು ಇಂದು ಸರಿ ಹೋಗಲಿದೆ ಎಂದು ಜನರು ಕಾಯುತ್ತಿದ್ದಾರೆ. ಬೆಂಗಳೂರಿಗೆ ಬೆಂಗಳೂರಿನವರೇ ಆದ ಸಚಿವರಿಲ್ಲ. ಬೇರೆ ಜಿಲ್ಲೆಯ ಸಚಿವರಿಗೆ ನಗರದ ಬಗ್ಗೆ ಆಸಕ್ತಿ ಇಲ್ಲ. ಸರ್ಕಾರದಿಂದಾಗಿ ಬೆಂಗಳೂರು ಅನಾಥವಾಗಿದೆ ಎಂದು ದೂರಿದರು. ಇದನ್ನೂ ಓದಿ: ರಾಜ್ಯಾಧ್ಯಕ್ಷ ಸ್ಥಾನಕ್ಕೆ ಯತ್ನಾಳ್ ಸ್ಪರ್ಧೆ ಇಲ್ಲ; ಹೈಕಮಾಂಡ್ ವಾರ್ನ್ ಬಳಿಕ ಭಿನ್ನರ ಶಸ್ತ್ರತ್ಯಾಗ – ಬಿವೈವಿ ಫುಲ್ ಆ್ಯಕ್ಟಿವ್

    ಬೆಂಗಳೂರು ಡಾನ್, ಮಾಫಿಯಾಗಳ ಕೈಗೆ ಸಿಲುಕಿದೆ. ಮೈಸೂರು ಗಲಭೆ, ಬೆಂಗಳೂರಿನ ಬಾಂಬ್ ಬ್ಲಾಸ್ಟ್, ಅತ್ಯಾಚಾರ ಮೊದಲಾದ ಅಪರಾಧಿ ಚಟುವಟಿಕೆಗಳು ರಾಜ್ಯದಲ್ಲಿ ನಡೆಯುತ್ತಿವೆ. ಜನರೇ ಸ್ವತಃ ಆತ್ಮರಕ್ಷಣೆ ಮಾಡಿಕೊಳ್ಳುವ ಸ್ಥಿತಿ ಬಂದಿದೆ. ಕಾಂಗ್ರೆಸ್ ನಾಯಕರು ಇನ್ನೂ ಗ್ಯಾರಂಟಿಗಳ ಗುಂಗಿನಲ್ಲೇ ಇದ್ದಾರೆ. ಕೊಲೆ, ಸುಲಿಗೆ ನಿರಂತರವಾಗಿದ್ದು, ಈ ಸರ್ಕಾರ ತೊಲಗಿದರೆ ಸಾಕು ಎಂದು ಜನರು ಹೇಳುತ್ತಿದ್ದಾರೆ ಎಂದರು. ಇದನ್ನೂ ಓದಿ: ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ಪೋಷಕರಿಗೆ ಬಿತ್ತು 25,000 ರೂ. ದಂಡ

    ಸಿಎಂ ಸಿದ್ದರಾಮಯ್ಯ ಅವರಿಗೆ ಬೆಂಗಳೂರಿನ ಜವಾಬ್ದಾರಿ ವಹಿಸಿಲ್ಲ. ಡಿಸಿಎಂ ಡಿ.ಕೆ.ಶಿವಕುಮಾರ್ ದೇವರ ಮೊರೆ ಹೋಗಿ, ನಗರವನ್ನು ದೇವರಿಗೆ ಅರ್ಪಣೆ ಮಾಡಿದ್ದಾರೆ. ರಾಜಧಾನಿಯನ್ನು ದೇವರೇ ಕಾಪಾಡಬೇಕಿದೆ. ಬೆಂಗಳೂರಿನ ಉಸ್ತುವಾರಿಯನ್ನು ಯಾರಾದರೂ ವಹಿಸಿಕೊಳ್ಳಲಿ. ಆದರೆ ಬೆಂಗಳೂರನ್ನು ಉದ್ಧಾರ ಮಾಡುವವರು, ನಗರದ ಬಗ್ಗೆ ಜ್ಞಾನ ಇರುವವರು ಸಚಿವರಾಗಲಿ ಎಂದು ಟಾಂಗ್ ಕೊಟ್ಟರು. ಇದನ್ನೂ ಓದಿ: ರೋಹಿಣಿ-ರೂಪಾ ಗಲಾಟೆ ಪ್ರಕರಣ; ಸಿಂಧೂರಿಗೆ ರಿಲೀಫ್ ನೀಡಿದ ಹೈಕೋರ್ಟ್

  • ಡಿ.ಕೆ.ಶಿವಕುಮಾರ್‌ಗೆ ಒಳ್ಳೆಯದಾಗಲಿ ಅಂತ ರಾಜಣ್ಣ ಮಾತಾಡ್ತಿದ್ದಾರೆ: ಡಿ.ಕೆ.ಸುರೇಶ್

    ಡಿ.ಕೆ.ಶಿವಕುಮಾರ್‌ಗೆ ಒಳ್ಳೆಯದಾಗಲಿ ಅಂತ ರಾಜಣ್ಣ ಮಾತಾಡ್ತಿದ್ದಾರೆ: ಡಿ.ಕೆ.ಸುರೇಶ್

    ಬೆಂಗಳೂರು: ಸಚಿವ ರಾಜಣ್ಣ ಅವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಮೇಲೆ ಪ್ರೀತಿ ಇರುವುದರಿಂದ ಅವರಿಗೆ ಒಳ್ಳೆಯದಾಗಲಿ ಎಂದು ರಾಜಣ್ಣ ಮಾತನಾಡುತ್ತಿದ್ದಾರೆ ಅಷ್ಟೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.

    ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಸಂಸದ, ಶಿವಕುಮಾರ್ ಅವರಿಗೆ ಒಳ್ಳೆಯದಾಗಲಿ ಎಂಬ ಭಾವನೆ ಎಲ್ಲರಿಗೂ ಇದೆ. ರಾಜಣ್ಣ ಅವರಿಗೆ ಡಿ.ಕೆ.ಶಿವಕುಮಾರ್ ಅವರ ಮೇಲೆ‌ ಪ್ರೀತಿ ಇದೆ. ಅದಕ್ಕೆ ಮಾತನಾಡ್ತಾರೆ. ಕಲ್ಲಿಗೆ ಏಟು ಬಿದ್ದಾಗಲೇ ಶಿಲೆ ಆಗುವುದು, ತಟ್ಟುತ್ತಿದ್ದಾರೆ ಎಂದು ತಿಳಿಸಿದ್ದಾರೆ.

    ಕೆಪಿಸಿಸಿ ಕಾರ್ಯಾಧ್ಯಕ್ಷರಿಗೆ ಕೊಂಬು ಇದೆಯಾ, ಇಲ್ವಾ ಅನ್ನೋದನ್ನ ಹೈಕಮಾಂಡ್ ತೀರ್ಮಾನ ಮಾಡುತ್ತೆ. ಹೀಗೆ ಬಹಿರಂಗವಾಗಿ ಮಾತನಾಡುವುದರಿಂದ ಡ್ಯಾಮೇಜ್ ಆಗುತ್ತೋ ಇಲ್ವೋ ಅನ್ನೋದನ್ನ ಸಿಎಂರನ್ನ ಕೇಳಿ, ಎಐಸಿಸಿ ಅಧ್ಯಕ್ಷರನ್ನು ಕೇಳಿ, ರಾಜ್ಯ ಉಸ್ತುವಾರಿಯನ್ನು ಕೇಳಿ. ಯಾರಿಗಾದರೂ ಒಳ್ಳೆಯದಾಗಬೇಕು ಅಂದ್ರೆ ಸಾಕಷ್ಟು ಜನರ ಆಶೀರ್ವಾದ ಬೇಕು. ಆಶೀರ್ವಾದ ಮಾಡ್ತಿದ್ದಾರೆ, ಪ್ರಸಾದ ಕೊಡ್ತಿದಾರೆ. ಪ್ರಸಾದ ಜಾಸ್ತಿ ಆದರೂ ಹೊಟ್ಟೆ ನೋವು ಬರಲ್ಲ. ನಾವು ಹಳ್ಳಿಯಿಂದ ಬಂದವರು ಎಂದಿದ್ದಾರೆ.

    ಪವರ್ ಶೇರಿಂಗ್ ಬಗ್ಗೆ ನನಗೆ ಏನು ಮಾಹಿತಿ ಇಲ್ಲ. ನಾನು ಸಾಮಾನ್ಯ ಕಾರ್ಯಕರ್ತ. ಅಧಿಕಾರ ಹಂಚಿಕೆ ಬಗ್ಗೆ ಈಗ ಚರ್ಚೆ ಯಾಕೆ? ಕುರ್ಚಿ ಖಾಲಿ ಇಲ್ಲ. ಚರ್ಚೆ ಹುಟ್ಟು ಹಾಕಿದವರು ಯಾರು? ಎಂದಿದ್ದಾರೆ. ಕೆಎಂಎಫ್ ಅಧ್ಯಕ್ಷ ಸ್ಥಾನ ಸೇರಿದಂತೆ ಯಾವುದೇ ಹುದ್ದೆಯ ಆಕಾಂಕ್ಷಿ ನಾನಲ್ಲ. ಜನ ನನ್ನನ್ನ ಸೋಲಿಸಿದ್ದಾರೆ. ರೆಸ್ಟ್ ಮಾಡ್ತಿದ್ದೀನಿ ಎಂದು ತಿಳಿಸಿದ್ದಾರೆ.