Tag: ಡಿ.ಕೆ.ಶಿವಕುಮಾರ್

  • ಸಚಿವ ಡಿ.ಕೆ.ಶಿವಕುಮಾರ್ ಹೆಸರು ಹೇಳಿಕೊಂಡು ವಂಚನೆ ಮಾಡುತ್ತಿದ್ದ ವ್ಯಕ್ತಿಯ ಬಂಧನ

    ಸಚಿವ ಡಿ.ಕೆ.ಶಿವಕುಮಾರ್ ಹೆಸರು ಹೇಳಿಕೊಂಡು ವಂಚನೆ ಮಾಡುತ್ತಿದ್ದ ವ್ಯಕ್ತಿಯ ಬಂಧನ

    ಬೆಳಗಾವಿ: ಸಚಿವ ಡಿ.ಕೆ.ಶಿವಕುಮಾರ್ ಹೆಸರು ಹೇಳಿಕೊಂಡು ವಂಚನೆ ಮಾಡುತ್ತಿದ್ದ ವ್ಯಕ್ತಿಯನ್ನ ಬೆಳಗಾವಿ ಜಿಲ್ಲೆಯ ರಾಮದುರ್ಗ ಪೊಲೀಸರು ಬಂಧಿಸಿದ್ದಾರೆ.

    ಡಿ.ಕೆ.ಶಿವಕುಮಾರ್ ಅಭಿಮಾನಿಗಳ ಸಂಘದ ಮಾಜಿ ಜಿಲ್ಲಾಧ್ಯಕ್ಷ ಅನ್ವರ್ ಜಮಾದಾರ್ ಬಂಧಿತ ಆರೋಪಿ. ಈತ ಹೆಸ್ಕಾಂನಲ್ಲಿ ಲೈನ್ ಮ್ಯಾನ್ ಸೇರಿದಂತೆ ವಿವಿಧ ಹುದ್ದೆ ಕೊಡಿಸುವುದಾಗಿ ಹೇಳಿ ಹಣ ಪಡೆದು 30ಕ್ಕೂ ಹೆಚ್ಚು ಜನರಿಗೆ ವಂಚನೆ ಮಾಡಿದ್ದ.

    ಬೆಳಗಾವಿ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳ ಜನರಿಗೆ ಹಣ ಪಡೆದು ವಂಚನೆ ಮಾಡಿದ್ದ. ಹಣ ವಾಪಸ್ ಕೊಡುವಂತೆ ಕೇಳಿದಾಗ ತಲೆಮರೆಸಿಕೊಂಡಿದ್ದ.

    ಇದ್ರಿಂದ ಕಂಗಾಲಾದ ಜನ ಬೆಳಗಾವಿ ಅಧಿವೇಶನದ ವೇಳೆ ಈ ವಿಷಯವನ್ನ ಡಿ.ಕೆ.ಶಿವಕುಮಾರ್ ಗಮನಕ್ಕೆ ತಂದಿದ್ರು. ಈ ವೇಳೆ ಡಿಕೆಶಿ ಸೂಚನೆ ಮೇರೆಗೆ ಹನುಮಂತ ಉಗಾರೆ ಎಂಬುವರು ದೂರು ನೀಡಿದ್ರು. ಹಣ ನೀಡಿದ್ದನ್ನು ಉಗಾರೆ ತನ್ನ ಮೊಬೈಲ್‍ನಲ್ಲಿ ಚಿತ್ರೀಕರಿಸಿಕೊಂಡಿದ್ದರು. ಇವರ ದೂರು ಹಾಗೂ ಸಾಕ್ಷಿ ಮೇರೆಗೆ ಅನ್ವರ್‍ನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

     

  • ನನಗೆ ಮಾರ್ಕೆಟ್ ಇದೆ, ಹಾಗಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನನ್ನ ಹೆಸರು ಕೇಳಿಬರ್ತಿದೆ : ಡಿಕೆಶಿ

    ನನಗೆ ಮಾರ್ಕೆಟ್ ಇದೆ, ಹಾಗಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನನ್ನ ಹೆಸರು ಕೇಳಿಬರ್ತಿದೆ : ಡಿಕೆಶಿ

    ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಿಮ್ಮ ಹೆಸರು ಕೇಳಿ ಬರ್ತಿದೆ ಎಂದು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ, ನನಗೆ ಕಾಂಗ್ರೆಸ್‍ನಲ್ಲಿ ಮಾರ್ಕೆಟ್ ಇದೆ. ಎಲ್ಲರೂ ನನ್ನ ಹೆಸರು ಹೇಳ್ತಾಯಿದ್ದಾರೆ. ನನ್ನ ಹೆಸರು ಕೇಳಿ ಬರಲಿ ಬಿಡಿ ಎಂದು ಸಚಿವ ಡಿ.ಕೆ.ಶಿವಕುಮಾರ್ ಉತ್ತರಿಸಿದ್ದಾರೆ.

    ನಾನು ಆರು ದಿನಗಳ ಹಿಂದೆ ಖಾಸಗಿ ಪ್ರವಾಸದ ಮೇಲೆ ಅಮೆರಿಕಗೆ ಹೋಗಿದ್ದೆ. ಆದರೆ ಬರುವಾಗ ದೆಹಲಿಗೆ ತೆರಳಿ ಇಂಧನ ಸಚಿವರ ಸಮ್ಮೇಳನದಲ್ಲಿ ಭಾಗವಹಿಸಲು ಹೋಗಿದ್ದೆ. ದೆಹಲಿಗೆ ಹೋದ ಮೇಲೆ ಪಕ್ಷದ ಕಚೇರಿಗೆ ತೆರಳಿ ನಾಯಕರನ್ನು ಭೇಟಿಯಾಗಿ ಬಂದಿದ್ದೇನೆ. ಬೇರಾವ ಕಾರಣಕ್ಕೆ ಹೋಗಿರಲಿಲ್ಲ ಎಂದು ಹೇಳಿದರು.

    ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆ ಗೊತ್ತಿಲ್ಲ. ಸ್ವಾಭಾವಿಕವಾಗಿ ದೆಹಲಿಗೆ ಹೋದಾಗ ಪಕ್ಷದ ಕಚೇರಿಗೆ ತೆರಳಿ ವರಿಷ್ಠರು, ರಾಜ್ಯ ಉಸ್ತುವಾರಿ ನಾಯಕರನ್ನು ಭೇಟಿ ಮಾಡಿದ್ದೇನೆ. ಕಾಂಗ್ರೆಸ್ ಉಸ್ತುವಾರಿಗಳಿಗೆ ಸಹಕಾರ ನೀಡುವುದಾಗಿ ತಿಳಿಸಿದ್ದೇನೆ. ನಾನೆಲ್ಲೂ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಅರ್ಜಿ ಹಾಕಿಲ್ಲ. ಕೆಪಿಸಿಸಿ ಅಧ್ಯಕ್ಷರನ್ನು ನಮ್ಮ ನಾಯಕರು ಆಯ್ಕೆ ಮಾಡುತ್ತಾರೆ. ಹೈಕಮಾಂಡ್ ಯಾವತ್ತು ಆದೇಶ ಹೊರಡಿಸುತ್ತೋ ಅಂದು ಕೆಪಿಸಿಸಿ ಅಧ್ಯಕ್ಷರು ಆಯ್ಕೆ ಆಗ್ತಾರೆ ಎಂದು ಶಿವಕುಮಾರ್ ತಿಳಿಸಿದರು.

     

  • ಕೆಪಿಸಿಸಿ ಅಧ್ಯಕ್ಷರ ನೇಮಕಾತಿ: ಕೈ ಪಾಳಯದಲ್ಲಿ ಶುರುವಾದ ಪೈಪೋಟಿ

    ಕೆಪಿಸಿಸಿ ಅಧ್ಯಕ್ಷರ ನೇಮಕಾತಿ: ಕೈ ಪಾಳಯದಲ್ಲಿ ಶುರುವಾದ ಪೈಪೋಟಿ

    ಬೆಂಗಳೂರು: ಕೆಪಿಸಿಸಿಗೆ ಹೊಸ ಅಧ್ಯಕ್ಷರ ನೇಮಕಾತಿಗೆ ಕೈ ಪಾಳಯದಲ್ಲಿ ಪೈಪೋಟಿ ಜೋರಾಗಿದೆ. ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಬದಲಾವಣೆಗೂ ಹೈಕಮಾಂಡ್ ಮೇಲೆ ಒತ್ತಡ ಹೆಚ್ಚಿದೆ. ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಸಚಿವ ಡಿ.ಕೆ ಶಿವಕುಮಾರ್ ಅವರು ದೆಹಲಿಗೆ ತೆರಳಿ ಲಾಭಿ ಆರಂಭಿಸಿದ್ದಾರೆ ಎಂದು ಹೇಳಲಾಗಿದೆ.

    ಉಪ ಚುನಾವಣೆಗೂ ಮೊದಲೇ ತಮಗೆ ಪಕ್ಷದ ಜವಾವ್ದಾರಿ ವಹಿಸಿ, ಉಪ ಚುನಾವಣೆಯಲ್ಲಿ ಜಯ ಗಳಿಸೋದರ ಜೊತೆಗೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಮತ್ತೆ ಅಧಿಕಾರಕ್ಕೆ ತರಲು ಕಾರ್ಯತಂತ್ರ ರೂಪಿಸುವ ಬಗ್ಗೆ ಹೈಕಮಾಂಡ್ ಜೊತೆ ಮಾತುಕತೆಗೆ ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.

    ಲಂಡನ್ ಪ್ರವಾಸದಿಂದ ರಾಜ್ಯಕ್ಕೆ ವಾಪಸ್ ಆಗಿರುವ ಜಿ.ಪರಮೇಶ್ವರ್ ಇಂದು ಸುದ್ದಿಗೋಷ್ಡಿ ಕರೆದು ಅಧ್ಯಕ್ಷ ಹುದ್ದೆ ಬಗ್ಗೆ ತಮ್ಮ ಭಾವನೆಗಳನ್ನ ಹಂಚಿಕೊಳ್ಳಲಿದ್ದಾರೆ. 2018 ರ ಚುನಾವಣೆವರೆಗೆ ತಾವೇ ಅಧ್ಯಕ್ಷರಾಗಿ ಮುಂದುವರಿಯಬೇಕು ಅಂತಾ ಗೃಹ ಸಚಿವ ಪರಮೇಶ್ವರ್ ಪಟ್ಟು ಹಿಡಿದಿದ್ದು, ಮುಂದಿನ ಚುನಾವಣೆ ಎದುರಿಸಲು ಅಧ್ಯಕ್ಷರ ಬದಲಾವಣೆ ಅನಿವಾರ್ಯ ಅಂತಾ ಕಾಂಗ್ರೆಸ್‍ನ ಪ್ರಮುಖ ನಾಯಕರು ಹೈಕಮಾಂಡ್‍ಗೆ ಒತ್ತಾಯಿಸಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

    ಡಿ.ಕೆ.ಶಿವಕುಮಾರ್ ದೆಹಲಿ ಮಟ್ಟದಲ್ಲಿ ಲಾಭಿ ನಡೆಸಿದ್ರೆ, ಕೆ.ಎಚ್ ಮುನಿಯಪ್ಪ ಕೂಡಾ ರೇಸ್‍ನಲ್ಲಿದ್ದಾರೆ. ಅದ್ರೆ ಸಿಎಂ ಮಾತ್ರ ಎಸ್.ಆರ್.ಪಾಟೀಲ್ ಪರ ಬ್ಯಾಟಿಂಗ್ ಮಾಡ್ತಿದ್ದಾರೆ. ಏನೇ ಬದಲಾವಣೆ ಇದ್ರೂ ಉಪ ಚುನಾವಣೆಯ ಬಳಿಕ ಅಂತಾ ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ರಾಜ್ಯ ಕೈ ಪಾಳಯದ ಪ್ರಮುಖ ನಾಯಕರಿಗೆ ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ.