Tag: ಡಿ.ಕೆ.ಶಿವಕುಮಾರ್

  • ಸಿಎಂ ಉತ್ತರ ಕೊಟ್ಮೇಲೆ ಎಲ್ಲಾ ಮುಗೀತು; ದೆಹಲಿಯಿಂದ ವಾಪಸ್ಸಾದ ಡಿಕೆಶಿ ಫಸ್ಟ್ ರಿಯಾಕ್ಷನ್

    ಸಿಎಂ ಉತ್ತರ ಕೊಟ್ಮೇಲೆ ಎಲ್ಲಾ ಮುಗೀತು; ದೆಹಲಿಯಿಂದ ವಾಪಸ್ಸಾದ ಡಿಕೆಶಿ ಫಸ್ಟ್ ರಿಯಾಕ್ಷನ್

    ಬೆಂಗಳೂರು: ಸಿಎಂ ಅವರೇ ಉತ್ತರ ಕೊಟ್ಟ ಮೇಲೆ ಎಲ್ಲಾ ಮುಗೀತು ಎಂದು ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಫಸ್ಟ್ ರಿಯಾಕ್ಷನ್ ನೀಡಿದ್ದಾರೆ.

    ಹೈಕಮಾಂಡ್ ಭೇಟಿ ಮಾಡಿ ಬಳಿಕ ಬೆಂಗಳೂರಿನ (Bengaluru) ಕೆಂಪೇಗೌಡ ಏರ್‌ಪೋರ್ಟ್ಗೆ ಡಿಕೆಶಿ ಅವರು ಬಂದಿಳಿದರು. ಈ ವೇಳೆ ಕೆಲವೇ ಶಾಸಕರ ಬೆಂಬಲ ಡಿ.ಕೆ ಶಿವಕುಮಾರ್‌ಗಿದೆ ಎಂಬ ಸಿಎಂ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದರು. ಇದನ್ನೂ ಓದಿ: ಚಾಮರಾಜನಗರ | ಹುಲಿಗಳ ಸಾವಿನ ಬಳಿಕ ಚಿರತೆ ಶವ ಪತ್ತೆ – ವಿಷಪ್ರಾಶನ ಶಂಕೆ

    ನಾನು ಪಕ್ಷದ ಅಧ್ಯಕ್ಷನಾಗಿದ್ದೇನೆ. ಪಾರ್ಟಿಯವರು ಏನು ಹೇಳಿದ್ದಾರೆ ಅಂತ ಈಗಾಗಲೇ ಸಿಎಂ ಅವರೇ ಉಲ್ಲೇಖಿಸಿದ್ದಾರೆ. ನಾನು ಮುಖ್ಯಮಂತ್ರಿಗಳ ಹೇಳಿಕೆಯನ್ನ ಗಮನಿಸಿದ್ದೇನೆ. ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಸಿಎಂ ಅವರೇ ಉತ್ತರಿಸಿದ್ದಾರೆ. ಸಿಎಂ ಅವರು ಮಾತನಾಡಿದ ಮೇಲೆ ಪದೇ ಪದೇ ನಾನು ಮಾತನಾಡೋದು ಸರಿಯಲ್ಲ ಎಂದಿದ್ದಾರೆ. ಇದನ್ನೂ ಓದಿ: ಮುಜರಾಯಿ ಸುಪರ್ದಿಗೆ ಗಾಳಿ ಆಂಜನೇಯ ದೇಗುಲ – 5 ವರ್ಷದ ನಂತ್ರ ಟ್ರಸ್ಟ್‌ಗೆ ವಾಪಸ್: ರಾಮಲಿಂಗಾರೆಡ್ಡಿ

    ಅಲ್ಲದೇ ಅಧಿಕಾರ ಶೇರಿಂಗ್ ಬಗ್ಗೆ ನಮಗೆ ಗಾಬರಿ ಇಲ್ಲ. ನಿಮಗ್ಯಾಕೆ ಗಾಬರಿ ಅಂತಾ ಮಾಧ್ಯಮಗಳನ್ನು ಪ್ರಶ್ನಿಸಿದರು. ಬಳಿಕ ಡಿಕೆಶಿ ಸಿಎಂ ಆಗಬೇಕೆಂದು ಸಾಕಷ್ಟು ಬೆಂಬಲಿಗರಿಗೆ ಆಸೆ ಇದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಎಲ್ಲರಿಗೂ ಆಸೆಗಳು ಇರುತ್ತದೆ. ಈ ಬಗ್ಗೆ ನಾನು ಸದ್ಯಕ್ಕೆ ಮಾತನಾಡಲ್ಲ. ಕಾಮೆಂಟ್ ಮಾಡುವ ಅವಶ್ಯಕತೆ ನನಗಿಲ್ಲ. ಮಾತನಾಡುವವರೇ ಎಲ್ಲಾ ಪ್ರಶ್ನೆಗಳನ್ನ ಮತ್ತು ಉತ್ತರಗಳನ್ನ ಅವರೇ ಕೊಡುತ್ತಿದ್ದಾರೆ ಎಂದು ಹೇಳಿದ್ದಾರೆ.

  • ಡಿ.ಕೆ.ಶಿವಕುಮಾರ್ ಇಂದಲ್ಲ, ನಾಳೆ ಸಿಎಂ ಆಗೇ ಆಗ್ತಾರೆ: ಶಾಸಕ ರಂಗನಾಥ್

    ಡಿ.ಕೆ.ಶಿವಕುಮಾರ್ ಇಂದಲ್ಲ, ನಾಳೆ ಸಿಎಂ ಆಗೇ ಆಗ್ತಾರೆ: ಶಾಸಕ ರಂಗನಾಥ್

    ಬೆಂಗಳೂರು: ಸದ್ಯ ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ. ಆದರೆ ಇಂದಲ್ಲ ನಾಳೆ ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಸಿಎಂ ಆಗೇ ಆಗ್ತಾರೆ ಎಂದು ಕಾಂಗ್ರೆಸ್ ಶಾಸಕ ರಂಗನಾಥ್ (Ranganath) ತಿಳಿಸಿದ್ದಾರೆ.

    5 ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂಬ ಸಿದ್ದರಾಮಯ್ಯ (Siddaramaiah) ಹೇಳಿಕೆಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸಿಎಂ, ಡಿಸಿಎಂ ದೆಹಲಿಗೆ ಹೋಗಿದ್ದಾರೆ. ಕೇಂದ್ರ ಮತ್ತು ರಾಜ್ಯದ ನಾಯಕರ ಮಟ್ಟದ ಚರ್ಚೆ ಮಾಡ್ತಾರೆ. ರಾಜ್ಯ ಸರ್ಕಾರ ದೇಶದಲ್ಲಿ ಮುಖ್ಯವಾದ ಸ್ಥಾನದಲ್ಲಿದೆ ಎಂದರು. ಇದನ್ನೂ ಓದಿ: ರಾಹುಲ್‌ ಪತ್ರ – ಸರ್ಕಾರಿ ಪದವಿ ಕಾಲೇಜುಗಳಲ್ಲಿ 35 ವರ್ಷದ ಬಳಿಕ ವಿದ್ಯಾರ್ಥಿ ಚುನಾವಣೆಗೆ ಅನುಮತಿ?

    ಬಿಜೆಪಿಗೆ ಸೆಡ್ಡು ಹೊಡೆದು ಕಾಂಗ್ರೆಸ್ ಸರ್ಕಾರ ಬಡವರ ಜೊತೆ ಇದ್ದೇವೆ ಎಂದು ತೋರಿಸಿದ್ದೇವೆ. ಹಾಗಾಗಿ ಕಾಂಗ್ರೆಸ್ ಪಕ್ಷದ ಹಿರಿಯರಿಗೆ ಯಾವ ರೀತಿ ಬಲ ಕೊಡಬೇಕು ಎಂದು ಮಾತಾಡಿರಬಹುದು ಎಂದು ಭಾವಿಸುತ್ತೇನೆ. ಬುಧವಾರವೂ ಸುರ್ಜೇವಾಲ ಅವರು ಶಾಸಕರ ಕಷ್ಟ ಸುಖ ಕೇಳಿದ್ದಾರೆ. ನಮ್ಮ ವಿಚಾರಗಳನ್ನ ತಿಳಿಸಿದ್ದೇವೆ. ಬಗೆಹರಿಯುವ ವಿಶ್ವಾಸ ಇದೆ ಎಂದು ನುಡಿದರು. ಇದನ್ನೂ ಓದಿ: 2029ಕ್ಕೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರ್ತೀವಿ, ಬಿಜೆಪಿ ನಾಯಕರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

    ಸುರ್ಜೇವಾಲ ಮುಂದೆ ನಾಯಕತ್ವ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮೀಡಿಯಾದವರೆಲ್ಲ ಫ್ರೆಂಡ್ಲಿಯಾಗಿ ಈಗ ಆಗಬೇಕು, ನಾಳೆ ಆಗಬೇಕು ಎಂದು ಹೊರಟಿದ್ದೀರಿ. ಶಿಸ್ತಿನ ಕಾಂಗ್ರೆಸ್ ಪಾರ್ಟಿಯಿದು. ಹೈಕಮಾಂಡ್ ನಾಯಕರು ಮಾನದಂಡ ತೆಗೆದುಕೊಂಡು ಯಾವ ಕಾಲಕ್ಕೆ ಏನು ನಿರ್ಧಾರ ಮಾಡಬೇಕು ಎಂಬ ಇತಿಹಾಸವಿದೆ ಎಂದರು. ಇದನ್ನೂ ಓದಿ: ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಸಿಎಂ ಆಗಿ ಆಯ್ಕೆ, ಚರ್ಚೆ ಇಲ್ಲ: ಹೆಚ್.ಸಿ.ಮಹದೇವಪ್ಪ

    ರಾಹುಲ್ ಗಾಂಧಿ ಅವರು ಸೂಕ್ತ, ಸಮರ್ಥ ನಾಯಕತ್ವ ತೆಗೆದುಕೊಂಡು ಹೋಗ್ತಾ ಇದ್ದಾರೆ. ಸಿಎಂ ಹೈಕಮಾಂಡ್ ಆದೇಶ, ಶಾಸಕರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಕೊಟ್ಟ ಪ್ರಣಾಳಿಕೆಯನ್ನು ಸಿಎಂ, ಡಿಸಿಎಂ ಮಾಡಿ ತೋರಿಸಿದ್ದಾರೆ. ಪವರ್ ಶೇರಿಂಗ್ ಬಗ್ಗೆ ಮಾತಾಡುವಷ್ಟು ದೊಡ್ಡವನು ನಾನಲ್ಲ. ಸಿಎಂ ಕುರ್ಚಿ ಖಾಲಿ ಇಲ್ಲ. ನಿಮ್ಮ ಕೆಲಸ ಮಾಡಿ ಎಂದು ಡಿಕೆಶಿಯವರೇ ಹೇಳ್ತಾ ಇದ್ದಾರೆ. ಯಾವ ಶಾಸಕರು, ಹಿರಿಯರು ಮಾತನಾಡಬಾರದು ಎಂದು ಹೇಳಿದರು.

    ನನ್ನ ಹೇಳಿಕೆಯನ್ನ ನಾನು ಪ್ರತಿಪಾದನೆ ಮಾಡುತ್ತೇನೆ. ಯಾವ ರೀತಿ ಅಂದ್ರೆ ಡಿಕೆಶಿ 40 ವರ್ಷಗಳಿಂದ ಕಾಂಗ್ರೆಸ್ ಪಕ್ಷ ಕಟ್ಟಲು ಶ್ರಮ ಹಾಕಿದ್ದಾರೆ. ಹೋರಾಟ ಮಾಡಿದ್ದಾರೆ. ಇವತ್ತು 140 ಸ್ಥಾನ ಬರಲು ಡಿಕೆಶಿ ಪ್ರಮುಖ ಕಾರಣ ಎಂದು ನಾನು ಹೆಮ್ಮೆಯಿಂದ ಹೇಳುತ್ತೇನೆ. ಇವತ್ತಲ್ಲ ನಾಳೆ, ಸಿಎಂ ಆಗೇ ಆಗುತ್ತಾರೆ. ಹೈಕಮಾಂಡ್ ನಿರ್ಧಾರ ಮಾಡುತ್ತದೆ. ನಮ್ಮ ಮಿತಿಯಲ್ಲಿ ನಾವು ಇರುವುದು ರಾಜಕೀಯ ಧರ್ಮ. ಶಾಸಕರ ಬೆಂಬಲದ ಬಗ್ಗೆ ಸಿಎಂ ಮಾತಾಡಿರಲ್ಲ. ಯಾಕೆಂದರೆ ಸಿಎಂ ಅವರು ಹಿರಿಯರಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಶಾಸಕರೆಲ್ಲ ಸಂತೋಷದಲ್ಲಿದ್ದೇವೆ ಎಂದು ತಿಳಿಸಿದರು.

  • 5 ವರ್ಷ ಸಿದ್ದರಾಮಯ್ಯನವರೇ ಸಿಎಂ – ಯತೀಂದ್ರ ಬ್ಯಾಟಿಂಗ್‌

    5 ವರ್ಷ ಸಿದ್ದರಾಮಯ್ಯನವರೇ ಸಿಎಂ – ಯತೀಂದ್ರ ಬ್ಯಾಟಿಂಗ್‌

    ಮೈಸೂರು: ನನ್ನ ಪ್ರಕಾರ 5 ವರ್ಷ ಸಿದ್ದರಾಮಯ್ಯನವರೇ ಸಿಎಂ ಆಗಿರುತ್ತಾರೆ ಎಂದು ವಿಧಾನ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಹೇಳಿದ್ದಾರೆ.

    ಮೈಸೂರಿನಲ್ಲಿ (Mysuru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ಪ್ರಕಾರ 5 ವರ್ಷ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರೆ. ಸಿಎಂ ಬದಲಾವಣೆ ಚರ್ಚೆ ಹೈಕಮಾಂಡ್‌ ಮುಂದೆ ನಡೆದಿಲ್ಲ. ಎಐಸಿಸಿ ಕಾರ್ಯದರ್ಶಿ ಈಗಾಗಲೇ ಇದನ್ನು ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ಚೀತಾಗಳ ಉಡುಗೊರೆ ನೀಡಿದ್ದಕ್ಕೆ ಧನ್ಯವಾದ: ನಮೀಬಿಯಾಗೆ ಮೋದಿ ಕೃತಜ್ಞತೆ

    ಇನ್ನೂ ಓಬಿಸಿ ಸಮಿತಿಗೆ ಸಿಎಂ ಆಯ್ಕೆ ಕುರಿತ ವಿಚಾರಕ್ಕೆ ಪ್ರತಿಕ್ರಿಯಿಸಿ, ಯಾರ್ರಿ ಹೇಳಿದ್ದು ಮುಖ್ಯಮಂತ್ರಿ ಆದವರನ್ನ ಓಬಿಸಿ ಕಮಿಟಿಗೆ ಕಳುಹಿಸಿದ್ರೆ ಪ್ರಮೋಷನ್ನಾ? ಅಂತ ಕೆಂಡಾಮಂಡಲರಾದರು. ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗದ ನಾಯಕ. ದೇಶದಲ್ಲಿರುವ ಹಿಂದುಳಿದ ವರ್ಗಗಳ ನಾಯಕರು ಆ ಕಮಿಟಿಯಲ್ಲಿದ್ದಾರೆ. ಹಾಗಾಗಿ ಅಲ್ಲಿ ಸದಸ್ಯರಾಗಿರುತ್ತಾರೆ. ಅದಕ್ಕೂ ಸಿಎಂ ಬದಲಾವಣೆ ವಿಚಾರಕ್ಕೂ ಸಂಬಂಧ ಕಲ್ಪಿಸುವ ಅಗತ್ಯ ಇಲ್ಲ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಹಳಸಿದ ದಾಲ್‌ ಬಡಿಸಿದ್ದಕ್ಕೆ ಶಾಸಕನಿಂದ ಕ್ಯಾಂಟೀನ್‌ ಸಿಬ್ಬಂದಿ ಮೇಲೆ ಹಲ್ಲೆ – ಕ್ಯಾಂಟೀನ್‌ ಲೈಸೆನ್ಸೇ ರದ್ದು

    ಬಿಜೆಪಿ ಹೇಳೋದನ್ನೆಲ್ಲ ನೀವು ನಂಬಿದ್ರೆ ಆಗಲ್ಲ. ನಮ್ಮ ಸರ್ಕಾರ ಬಂದಾಗಿಂದ ಸರ್ಕಾರ ಬದಲಾಗುತ್ತೆ, ಸಿಎಂ ಬದಲಾಗ್ತಾರೆ ಅಂತಿದ್ದಾರೆ. ನವೆಂಬರ್ ತಿಂಗಳಿಗೆ ನಮ್ಮ ತಂದೆ ಎರಡೂವರೆ ವರ್ಷ ಪೂರೈಕೆ ಮಾಡ್ತಾರೆ. ಹಾಗಾಗಿ ಸಿಎಂ ಆಸೆ ಇಟ್ಟುಕೊಂಡಿರೋರು ಕೇಳ್ತಾರೆ. ಕೇಳೋದ್ರಲ್ಲ ತಪ್ಪಿಲ್ಲ, ತೀರ್ಮಾನ ಮಾಡೋದು ಹೈಕಮಾಂಡ್ ಹಾಗೂ ಶಾಸಕರು. ಸರ್ಕಾರ ಬಂದಾಗಿದ ಈ ಪ್ರಶ್ನೆಗೆ ಉತ್ತರ ಮಾಡುತ್ತಿದ್ದೇನೆ ದಯವಿಟ್ಟು ಆ ಪ್ರಶ್ನೆ ಕೇಳಬೇಡಿ ಅಂತ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಜು.28ರಂದು ಮದ್ದೂರಿಗೆ ಸಿಎಂ – 1,400 ಕೋಟಿ ವೆಚ್ಚದ 75 ಕಾಮಗಾರಿಗಳ ಉದ್ಘಾಟನೆ

    ರಂಭಾಪುರಿ ಶ್ರೀ ಹೇಳಿಕೆಗೆ ತಿರುಗೇಟು
    ಇನ್ನೂ ಉಚಿತ ಭಾಗ್ಯಗಳಿಂದ ಜನ ಸೋಮಾರಿ ಆಗುತ್ತಿದ್ದಾರೆ ಅನ್ನೋ ರಂಭಾಪುರಿ ಶ್ರೀಗಳ ಹೇಳಿಕೆಗೆ ಪ್ರತಿಕ್ರಿಯಿಸಿ, ಇದನ್ನ ಈಗಲ್ಲ, ಕಳೆದಬಾರಿ ಭಾಗ್ಯಗಳನ್ನ ಕೊಟ್ಟಾಗಲೂ ಹೀಗೆ ಹೇಳ್ತಿದ್ರು. ಯಾರೂ ಸೋಮಾರಿಗಳಾಗಲ್ಲ, ಬಡವರು ಹೊಟ್ಟೆ ತುಂಬಾ ಊಟ ಮಾಡಿ ಸೋಮಾರಿ ಆಗೋದಿಲ್ಲ. ಕೇವಲ ಅಕ್ಕಿ ಕೊಟ್ಟ ತಕ್ಷಣ ಎಲ್ಲಾ ಸಿಗುತ್ತಾ? ಜೀವನಕ್ಕಾಗಿ ಅವರೂ ದುಡಿಯುತ್ತಾರೆ. ಇದು ತಲತಲಾಂತರದಿಂದ ಬೇರೊಬ್ಬರ ಕೈಲಿ ದುಡಿಸಿಕೊಂಡು ಸುಖವಾಗಿ ಬಂದಿರೋರು ಹೇಳುವ ಮಾತುಗಳು ಎಂದು ತಿರುಗೇಟು ನೀಡಿದ್ದಾರೆ.

    ಇದೇ ಪ್ರಶ್ನೆಯನ್ನ ಶ್ರೀಮಂತರ ಸಾಲ ಮನ್ನ ಮಾಡುವ ಕೇಂದ್ರ ಸರ್ಕಾರಕ್ಕೆ ಕೇಳಲಿ. ಆವಾಗ ಕೇಳದ ಇವರಿಗೆ ಬಡವರಿಗೆ ಕೊಟ್ಟಾಗೆ ಯಾಕೆ ಕಣ್ಣುರಿ? ಯಾರು ಏನೇ ಟೀಕೆ ಮಾಡಿದ್ರೂ ನಾವು ಕೊಟ್ಟೇ ಕೊಡ್ತೀವಿ ಎಂದು ತಿಳಿಸಿದ್ದಾರೆ.

  • ರಂಭಾಪುರಿ ಶ್ರೀಗಳಿಗೂ ಕಾಂಗ್ರೆಸ್ ಪಕ್ಷಕ್ಕೂ ಏನ್ ಸಂಬಂಧ? – ಸತೀಶ್ ಜಾರಕಿಹೊಳಿ ಟಾಂಗ್

    ರಂಭಾಪುರಿ ಶ್ರೀಗಳಿಗೂ ಕಾಂಗ್ರೆಸ್ ಪಕ್ಷಕ್ಕೂ ಏನ್ ಸಂಬಂಧ? – ಸತೀಶ್ ಜಾರಕಿಹೊಳಿ ಟಾಂಗ್

    ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ (DK Shivakumar) ಸಿಎಂ ಆಗಲು ಅವಕಾಶ ಮಾಡಿಕೊಡಬೇಕು ಎಂಬ ರಂಭಾಪುರಿ ಶ್ರೀಗಳ (Rambhapuri Shree) ಹೇಳಿಕೆಗೆ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ತಿರುಗೇಟು ನೀಡಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ಪ್ರತಿಕ್ರಿಯಿಸಿದ ಅವರು, ರಂಭಾಪುರಿ ಶ್ರೀಗಳಿಗೂ ಅದಕ್ಕೂ ಏನು ಸಂಬಂಧ? ಅದು ಪಾರ್ಟಿಗೆ ಸಂಬಂಧಪಟ್ಟ ವಿಚಾರ. ಸ್ವಾಮೀಜಿಗಳಿಗೂ ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧ ಇರುವುದಿಲ್ಲ. ಅವರ ಕಾರ್ಯವ್ಯಾಪ್ತಿ ಬೇರೆ ನಮ್ಮ ಕಾರ್ಯ ವ್ಯಾಪ್ತಿ ಬೇರೆ ಎಂದು ಟಾಂಗ್ ಕೊಟ್ಟರು.ಇದನ್ನೂ ಓದಿ: ಖಾಸಗಿ ಮೆಡಿಕಲ್ ಲಾಬಿಗೆ ಮಣಿದ ಸರ್ಕಾರ, ಹೈಕೋರ್ಟ್ ಆದೇಶ ಸ್ವಾಗತಾರ್ಹ: ಆರ್ ಅಶೋಕ್

    ಸಿಎಂ ಆಯ್ಕೆ ಮಾಡುವುದು ಶಾಸಕರು ಮತ್ತು ಹೈಕಮಾಂಡ್. ಸ್ವಾಮೀಜಿಗಳು ಅವರ ಪರ ಹೇಳಿದರೆ, ಇವರೇ ಮುಂದುವರಿಯಬೇಕೆಂದು ಈ ಕಡೆ ಹತ್ತು ಜನ ಹೇಳುತ್ತಾರೆ. ಸಮಾಜ ಕಟ್ಟುವುದು, ಆಶೀರ್ವಾದ ಮಾಡುವುದು ಸ್ವಾಮೀಜಿಯವರ ಕೆಲಸ. ಈ ರೀತಿಯಾದ ಹೇಳಿಕೆಗಳನ್ನು ಸ್ವಾಮೀಜಿಗಳು ಕೊಡಬಾರದು. ಅವರಿಗೆ ಸಂಬಂಧಪಟ್ಟಿದ್ದಲ್ಲ ಎಂದರು.

    ಇದೇ ವೇಳೆ ಗ್ಯಾರಂಟಿಗಳಿಂದ ಜನ ಸೋಮಾರಿ ಆಗುತ್ತಿದ್ದಾರೆ ಎಂಬ ರಂಭಾಪುರಿ ಶ್ರೀಗಳ ಹೇಳಿಕೆಗೆ ಪ್ರತಿಕ್ರಿಯಿಸಿ, ಸರಿಯಾದ ಉತ್ತರ ಸಿಗಬೇಕಾದರೆ ಜನರನ್ನು ಕೇಳಬೇಕು. ನಮ್ಮ ಪಕ್ಷದ ಕಾರ್ಯಕ್ರಮವನ್ನು ನಾವು ಸಮರ್ಥನೆ ಮಾಡಿಕೊಳ್ಳುತ್ತೇವೆ. ಪಕ್ಷದವರು ತಮ್ಮ ಕಾರ್ಯಕ್ರಮಗಳನ್ನು ಸಮರ್ಥನೆ ಮಾಡಿಕೊಳ್ಳುತ್ತಾರೆ. ಒಂದು ಸಾವಿರ ಜನರನ್ನು ಸಂದರ್ಶನ ಮಾಡಿದ್ರೆ ಉತ್ತರ ಸಿಗಲಿದೆ. ಪಕ್ಷ ನಿರ್ಧಾರ ನಾವು ಸಮರ್ಥನೆ ಮಾಡುತ್ತೇವೆ. ಆದರೆ ಜನರ ಉತ್ತರವೇ ಫೈನಲ್ ಎಂದು ಹೇಳಿದರು.ಇದನ್ನೂ ಓದಿ:  ಸಿಎಂ ಬದಲಾವಣೆ ವಿಚಾರದಲ್ಲಿ ಗೊಂದಲ ಏಕೆ? ಹೈಕಮಾಂಡ್ ಏನೂ ಇಲ್ಲ ಅಂದಿದೆ: ಸತೀಶ್ ಜಾರಕಿಹೊಳಿ

  • ಖಾಲಿ ಮಾತು ಬೇಡ, ಮೊದಲು ದುಡ್ಡು ಕೊಡಿಸಲಿ: ಕುಮಾರಸ್ವಾಮಿಯನ್ನು ಛೇಡಿಸಿದ ಡಿಕೆಶಿ

    ಖಾಲಿ ಮಾತು ಬೇಡ, ಮೊದಲು ದುಡ್ಡು ಕೊಡಿಸಲಿ: ಕುಮಾರಸ್ವಾಮಿಯನ್ನು ಛೇಡಿಸಿದ ಡಿಕೆಶಿ

    ನವದೆಹಲಿ: ಮೊದಲು ದುಡ್ಡು ಕೊಡಿಸಲಿ, ಕೇವಲ ಖಾಲಿ ಮಾತನಾಡುವುದು ಬೇಡ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D K Shivakumar) ಅವರು ಹೆಚ್.ಡಿ.ಕುಮಾರಸ್ವಾಮಿಯನ್ನು (H D Kumaraswamy) ಛೇಡಿಸಿದ್ದಾರೆ.

    ದೆಹಲಿಯ (Delhi) ಕರ್ನಾಟಕ ಭವನದಲ್ಲಿ ಬುಧವಾರ ಮಾಧ್ಯಮಗೋಷ್ಠಿಯಲ್ಲಿ ಟನಲ್ ರಸ್ತೆ ವಿಚಾರವಾಗಿ ನಿತಿನ್ ಗಡ್ಕರಿ (Nithin Gadkari) ಅವರನ್ನು ಹೆಚ್‌ಡಿಕೆ ಭೇಟಿಯಾಗಿ ಚರ್ಚೆ ನಡೆಸಿರೋದು ಕ್ರೆಡಿಟ್ ವಾರ್ ಆಗುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕುಮಾರಸ್ವಾಮಿ ಅವರ ಸಲಹೆ ಮತ್ತು ನಿಮ್ಮ ಸಲಹೆಯನ್ನು ನಾನು ಸ್ವೀಕಾರ ಮಾಡುತ್ತೇನೆ. ಕ್ರೆಡಿಟ್ ಯಾರು ಬೇಕಾದರೂ ಪಡೆದುಕೊಳ್ಳಲಿ ಎಂದಿದ್ದಾರೆ. ಇದನ್ನೂ ಓದಿ: ಕೋರ್ಟ್‌ಗೆ ಹಾಜರಾಗಿ ವಿದೇಶಕ್ಕೆ ಹಾರಲಿರುವ ದರ್ಶನ್

    ಸಂಪುಟ ಬದಲಾವಣೆಗಾಗಿ ಸಿಎಂ ದೆಹಲಿ ಭೇಟಿ ನೀಡಿದ್ದಾರೆಯೇ ಎಂಬ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸದ್ಯಕ್ಕೆ ಸಂಚಿವ ಸಂಪುಟ ಬದಲಾವಣೆ ಕುರಿತು ಯಾವುದೇ ಚರ್ಚೆಯಿಲ್ಲ. ನಾವು ಬಂದಿರುವುದು ಅಭಿವೃದ್ಧಿ ವಿಚಾರಗಳನ್ನು ಚರ್ಚೆ ನಡೆಸಲು, ಬೆಂಗಳೂರಿನಲ್ಲಿ ಒಂದಷ್ಟು ರಸ್ತೆಗಳನ್ನು ಅಗಲೀಕರಣ ಮಾಡಬೇಕಿದೆ. ಇದಕ್ಕೆ ರಕ್ಷಣಾ ಇಲಾಖೆ ಭೂಮಿಗಳ ಅವಶ್ಯಕತೆಯಿದೆ. ಈ ಕಾರಣಕ್ಕೆ ಹಾಗೂ ದಸರಾ ವೇಳೆ ಚುಟುಕು ಏರ್ ಶೋ ನಡೆಸಲು ರಕ್ಷಣಾ ಸಚಿವರನ್ನು ಭೇಟಿ ಮಾಡುವುದಕ್ಕಾಗಿ ಬಂದಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ 11,122.76 ಕೋಟಿ ಅನುದಾನಕ್ಕಾಗಿ ಮನವಿ: ಡಿಸಿಎಂ ಡಿಕೆಶಿ

    ನಾಲ್ಕು ಎಂಎಲ್‌ಸಿ ಸ್ಥಾನಗಳ ನಾಮನಿರ್ದೇಶನ ಯಾವಾಗ ಎಂಬ ಪ್ರಶ್ನೆಗೆ ಅವರು, ವಿಧಾನಸಭಾ ಅಧಿವೇಶನದ ಮುಂಚಿತವಾಗಿ ಮುಗಿಯುತ್ತದೆ. ಮಾಧ್ಯಮದವರಿಗೂ ಒಂದು ಸ್ಥಾನ ನೀಡಲಾಗುವುದು ಎಂದು ಉತ್ತರಿಸಿದ್ದಾರೆ. ಇದನ್ನೂ ಓದಿ: 10 ಗಂಟೆಗಳಲ್ಲಿ ಜೋಡೆತ್ತುಗಳಿಂದ ಬರೋಬ್ಬರಿ 20 ಎಕ್ರೆ ಈರುಳ್ಳಿ ಬಿತ್ತನೆ – ಬಾಗಲಕೋಟೆ ರೈತನ ಸಾಧನೆ

    ನೀವು ಸೋನಿಯಾ ಗಾಂಧಿ ಹಾಗೂ ಇತರೆ ಹಿರಿಯ ನಾಯಕರನ್ನು ಭೇಟಿಯಾಗಿದ್ದೀರಾ ಎಂದು ಕೇಳಿದಾಗ, ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿಲ್ಲ. ಹಿರಿಯ ನಾಯಕರ ಭೇಟಿಗೆ ಸಮಯ ಕೇಳಿದ್ದೇನೆ. ಸಮಯ ನೀಡದಿದ್ದರೆ ಯಾರನ್ನೂ ಭೇಟಿಯಾಗಲು ಆಗುವುದಿಲ್ಲ. ರಾಹುಲ್ ಗಾಂಧಿ ಅವರು ಪಾಟ್ನಾಗೆ ತೆರಳಿದ್ದಾರೆ ಎಂದು ತಿಳಿಸಿದ್ದಾರೆ.

    ಬೀದರ್‌ನ ಸಣ್ಣ ನೀರಾವರಿ ಇಲಾಖೆಯ ಎಫ್‌ಡಿಎ ಅವರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿಡಿಯೋ ಹರಿಬಿಟ್ಟಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ವಿಚಾರ ನನಗೆ ತಿಳಿದಿಲ್ಲ. ಮಾಹಿತಿ ತಿಳಿದು ಮಾತನಾಡುತ್ತೇನೆ ಎಂದಿದ್ದಾರೆ. ಪಾಟ್ನಾದಲ್ಲಿ ರಾಹುಲ್ ಗಾಂಧಿ ಅವರ ಪ್ರತಿಭಟನೆಯನ್ನು ತಡೆದಿರುವ ಬಗ್ಗೆ ಕೇಳಿದಾಗ, ವಿರೋಧ ಪಕ್ಷಗಳ ದನಿಯನ್ನು ಅಡಗಿಸುವುದೇ ಈ ಸರ್ಕಾರದ ಕೆಲಸ. ರಾಹುಲ್ ಗಾಂಧಿ ಅವರು ಮತದಾರರ ಹಕ್ಕುಗಳನ್ನು ರಕ್ಷಿಸಲು ಹೋಗಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಡಿಕೆ ಬ್ರದರ್ಸ್ ಹೆಸ್ರಲ್ಲಿ ವಂಚನೆ ಕೇಸ್; ಸಿನಿಮಾ ನಿರ್ಮಾಣಕ್ಕೆ ಪ್ಲ್ಯಾನ್ ಮಾಡಿದ್ದ `ಬಂಗಾರಿ’ ಗೌಡ!

    ಮಹಾರಾಷ್ಟ್ರದಲ್ಲಿ ಭಾಷಾ ಸಂಘರ್ಷದ ಬಗ್ಗೆ ಉತ್ತರಿಸಿದ ಅವರು, ಇದು ಆಯಾ ರಾಜ್ಯಕ್ಕೆ ಸಂಬಂಧಪಟ್ಟ ವಿಚಾರ. ಅದರ ಬಗ್ಗೆ ನಾನು ಮಾತನಾಡುವುದಿಲ್ಲ. ನಾವು ಕನ್ನಡ ಮತ್ತು ಇಂಗ್ಲಿಷ್‌ಗೆ ಪ್ರಾಮುಖ್ಯತೆ ನೀಡುತ್ತೇವೆ ಎಂದು ಹೇಳಿದ್ದಾರೆ. ಕನ್ನಡ ಪರೀಕ್ಷೆ ಅಂಕಗಳನ್ನು 125ರಿಂದ 100 ಕ್ಕೆ ಇಳಿಸಿರುವ ಬಗ್ಗೆ ಬಿಜೆಪಿ ಹಾಗೂ ಕೇಂದ್ರ ಸಚಿವ ಸೋಮಣ್ಣ ಅವರು ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಮಾತನಾಡಿ, ನನ್ನ ಇಲಾಖೆಯ ಬಗ್ಗೆ ನನಗೆ ಪ್ರಶ್ನೆ ಕೇಳಿದರೆ ಉತ್ತರ ಹೇಳಬಹುದು ಎಂದಿದ್ದಾರೆ. ಇದನ್ನೂ ಓದಿ: ವೇಷತೊಟ್ಟು ಜೋಗತಿಯಾದ ನಟ ಶ್ರೀನಗರ ಕಿಟ್ಟಿ

    ಟನಲ್ ರಸ್ತೆ ವಿಚಾರವಾಗಿ ಮಾತನಾಡಿದ ಅವರು, ಇದಕ್ಕೆ ಎರಡು-ಮೂರು ದಿನದಲ್ಲಿ ಗ್ಲೋಬಲ್ ಟೆಂಡರ್ ಕರೆಯಲಾಗುವುದು. ಟೋಲ್ ಇಲ್ಲದೇ ರಸ್ತೆ ಮಾಡಲು ಸಾಧ್ಯವಿಲ್ಲ. ಏರ್‌ಪೋರ್ಟ್, ಮೈಸೂರು ರಸ್ತೆ, ನೈಸ್ ರಸ್ತೆಗಳಲ್ಲಿ ಟೋಲ್ ಇದೆಯಲ್ಲ ಎಂದು ಹೇಳಿದ್ದಾರೆ.

    ಸುರ್ಜೇವಾಲ ಅವರ ಕರ್ನಾಟಕ ಭೇಟಿಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರು ಈ ವರ್ಷವನ್ನು ಪಕ್ಷ ಸಂಘಟನಾ ವರ್ಷ ಎಂದು ಘೋಷಣೆ ಮಾಡಿದ್ದಾರೆ. ಜಿಲ್ಲಾ ಅಧ್ಯಕ್ಷರನ್ನು ಕರೆಸಿ ಸಭೆ ನಡೆಸಲಾಗಿದೆ. ರಾಜ್ಯದಾದ್ಯಂತ 100 ಕಾಂಗ್ರೆಸ್ ಕಚೇರಿಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಮಾಧ್ಯಮಗಳು ಹೇಳಿದಂತೆ ಯಾವುದೇ ರಾಜಕೀಯ ವಿಚಾರ ಇಲ್ಲಿಲ್ಲ. ಕೇವಲ ಸಂಘಟನೆ ವಿಚಾರ ಎಂದು ವಿವರಿಸಿದ್ದಾರೆ.

  • ರಾಜ್ಯದ ಆರು ನೀರಾವರಿ ಯೋಜನೆಗಳಿಗೆ 11,122.76 ಕೋಟಿ ಅನುದಾನಕ್ಕಾಗಿ ಮನವಿ: ಡಿಸಿಎಂ ಡಿಕೆಶಿ

    ರಾಜ್ಯದ ಆರು ನೀರಾವರಿ ಯೋಜನೆಗಳಿಗೆ 11,122.76 ಕೋಟಿ ಅನುದಾನಕ್ಕಾಗಿ ಮನವಿ: ಡಿಸಿಎಂ ಡಿಕೆಶಿ

    – ಭದ್ರಾ ಮೇಲ್ದಂಡೆ ಯೋಜನೆಗೂ ಪರಿಷ್ಕೃತ ಅನುದಾನ ಕೇಳಿದ್ದೇವೆ

    ನವದೆಹಲಿ: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ಒಟ್ಟು 11,122.76 ಕೋಟಿ ಅನುದಾನಕ್ಕಾಗಿ ಮನವಿ ಸಲ್ಲಿಸಿದ್ದೇವೆ. ಕುಡಿಯುವ ನೀರಿನ ಉದ್ದೇಶದ ಎತ್ತಿನಹೊಳೆ ಯೋಜನೆಗೆ ಶೇ.25 ರಷ್ಟು ಆರ್ಥಿಕ ಸಹಾಯ, ಕಳಸಾ ಬಂಡೂರಿ ಯೋಜನೆ, ಕೃಷ್ಣಾ ನದಿ ನೀರಿನ ವಿಚಾರವಾಗಿ ಕೇಂದ್ರ ಜಲಶಕ್ತಿ ಹಾಗೂ ಪರಿಸರ ಸಚಿವರನ್ನು ಭೇಟಿ ಮಾಡಿ ಚರ್ಚೆ ನಡೆಸಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಹೇಳಿದರು.

    ನವದೆಹಲಿಯ ಕರ್ನಾಟಕ ಭವನದಲ್ಲಿ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬುಧವಾರ ಮಾಧ್ಯಮಗೋಷ್ಠಿ ನಡೆಸಿ ದೆಹಲಿ ಪ್ರವಾಸ ಹಾಗೂ ಕೇಂದ್ರ ಸಚಿವರ ಭೇಟಿ ವಿಚಾರವಾಗಿ ಮಾಹಿತಿ ನೀಡಿದರು.

    ಆರು ನೀರಾವರಿ ಯೋಜನೆಗಳಾದ ಸೊನ್ನತಿ ಏತ ನೀರಾವರಿ ಯೋಜನೆಗೆ 804.66 ಕೋಟಿ, ಯುಕೆಪಿಯ ಇಂಡಿ ಶಾಖಾ ಕಾಲುವೆಗೆ 2,666.70 ಕೋಟಿ, ಮಲಪ್ರಭಾ ಕಾಲುವೆ ಮೂರನೇ ಹಂತಕ್ಕೆ 3,000 ಕೋಟಿ, ಘಟಪ್ರಭಾ ಬಲದಂಡೆ ಕಾಲುವೆ ಮತ್ತು ಚಿಕ್ಕೋಡಿ ಶಾಖಾ ನಾಲೆಗೆ 1,444.42 ಕೋಟಿ, ಬೆಣ್ಣೆಹಳ್ಳದ ಪ್ರವಾಹ ನಿಯಂತ್ರಣ ಹಾಗೂ ನಿರ್ವಹಣೆಗಾಗಿ 1,610 ಕೋಟಿ ಸೇರಿದಂತೆ ಒಟ್ಟು 11,122.76 ಕೋಟಿ ಅನುದಾನಕ್ಕಾಗಿ ಮನವಿ ಸಲ್ಲಿಸಿದ್ದೇವೆ. ಇದರಲ್ಲಿ ಒಂದಕ್ಕೆ ಅನುದಾನ ನೀಡಲಾಗಿದೆ ಎಂಬ ಮಾಹಿತಿ ಬಂದಿದೆ. ಆದರೆ, ನಮಗೆ ಇನ್ನು ಅಧಿಕೃತವಾಗಿ ತಿಳಿಸಿಲ್ಲ ಎಂದು ತಿಳಿಸಿದರು.

    ಎತ್ತಿನಹೊಳೆ ಯೋಜನೆಯನ್ನು ಕುಡಿಯುವ ನೀರಿನ ಉದ್ದೇಶಕ್ಕೆ ಎಂದು ಅನುಮೋದಿಸಿ ಶೇ.25 ರಷ್ಟು ಆರ್ಥಿಕ ಸಹಾಯ ನೀಡಬೇಕಾಗಿ ಮನವಿ ಮಾಡಿದ್ದೇನೆ. ಈ ಯೋಜನೆ ಕಾಮಗಾರಿಯನ್ನು ತುಮಕೂರು ಹಾಗೂ ಹಾಸನ ಭಾಗದಲ್ಲಿ ನಿಲ್ಲಿಸಲಾಗಿತ್ತು. ಯೋಜನೆ ಹಾದುಹೋಗುವ ಕಡೆ ಕಂದಾಯ ಭೂಮಿ ಹೊಂದಿದ್ದ ರೈತರಿಗೆ ಪೋಡಿ ವಿತರಣೆ ಮಾಡಿ ಪರಿಹಾರವನ್ನೂ ನೀಡಲಾಗಿತ್ತು ಎಂದರು.

    ಆದರೆ, ತದನಂತರ ಅರಣ್ಯ ಇಲಾಖೆಯವರು ಇದು ನಮ್ಮ ಭೂಮಿ ಎಂದು ತಕರಾರು ತೆಗೆದರು. ಅವರ ಬಳಿ ಸಂಘರ್ಷ ಬೇಡ ಎಂದು ಬದಲಿ ಭೂಮಿ ನೀಡಿದ್ದೇವೆ. ಇದಕ್ಕೆ ಅರಣ್ಯ ಇಲಾಖೆಯವರು ಕ್ಲಿಯರೆನ್ಸ್ ಪ್ರಮಾಣ ಪತ್ರ ನೀಡಬೇಕಿತ್ತು, ಆದರೆ ಮಾಡಿಲ್ಲ. ಕೆಲವು ತಕರಾರುಗಳನ್ನು ಹಾಕಿದ್ದಾರೆ. ಈಗಾಗಲೇ ಕೇಂದ್ರ ಸಚಿವರನ್ನು ಮೂರು ಬಾರಿ ಭೇಟಿ ಮಾಡಲಾಗಿತ್ತು. ಆದರೂ ಇದಕ್ಕೆ ಒಪ್ಪಿಗೆ ಸಿಕ್ಕಿಲ್ಲ. ಕಾಲುವೆ ತೆಗೆದಾಗ ಬರುವ ಮಣ್ಣನ್ನು ಇಲ್ಲಿಯೇ ಹಾಕಲಾಗುತ್ತಿದೆ. ಬದಲಾಗಿ 25 ಕಿಲೋಮೀಟರ್ ದೂರ ಹಾಕಿ ಎಂಬುದು ಅವರ ಪ್ರಮುಖ ತಕರಾರು. ಕೇಂದ್ರ ಸಚಿವರು ಸದ್ಯದಲ್ಲೇ ಇದನ್ನು ಬಗೆಹರಿಸುವುದಾಗಿ ತಿಳಿಸಿದ್ದಾರೆ ಎಂದು ಹೇಳಿದರು.

    ಖಾತೆಗೆ ಹಣ ಬರುವವರೆಗೂ ಖಾತರಿ ಇಲ್ಲ
    ಭದ್ರಾ ಮೇಲ್ದಂಡೆ ವಿಚಾರವಾಗಿ ಕೇಳಿದಾಗ, ಈ ಬಗ್ಗೆಯೂ ಅನುದಾನ ಕೇಳಿದ್ದೇವೆ. ಕೇಂದ್ರ ಸರ್ಕಾರದಿಂದ ಪರಿಷ್ಕೃತ ಅಂದಾಜು ಪಟ್ಟಿ ಕೇಳಿದ್ದರು, ಅದನ್ನು ಕೂಡ ಸಲ್ಲಿಸಿದ್ದೇವೆ. ಈ ಹಿಂದೆ ಹೇಳಿದ್ದ 5,300 ಕೋಟಿಗಿಂತಲೂ ಹೆಚ್ಚು ಅನುದಾನದ ಪರಿಷ್ಕೃತ ಪಟ್ಟಿ ಕಳುಹಿಸಿದ್ದೇವೆ. ಈಗಾಗಲೇ 10,604 ಕೋಟಿ ಖರ್ಚು ಮಾಡಿದ್ದೇವೆ ಎಂದು ಹೇಳಿದ್ದೇವೆ. ಹಣ ನೀಡುತ್ತೇವೆ ಎಂದು ಹೇಳಿದ್ದಾರೆ. ಹಣ ಸರ್ಕಾರದ ಖಾತೆಗೆ ಬರುವವರೆಗೂ ನಂಬಿಕೆಯಿಲ್ಲ ಎಂದರು.

    ಕಳೆದ ಎರಡು ವರ್ಷದಿಂದ ಅನುದಾನದ ಬಗ್ಗೆ ಹೇಳಿದ್ದನ್ನೇ ಕೇಂದ್ರ ಸರ್ಕಾರ ಹೇಳುತ್ತಿದೆ ಎಂದು ಕೇಳಿದಾಗ, ಇದರ ಬಗ್ಗೆ ಕೇಂದ್ರ ಸರ್ಕಾರವನ್ನೇ ಕೇಳಬೇಕು. ಇದು ರಾಜಕೀಯವೇ? ಕೇಂದ್ರ ಸರ್ಕಾರದ ಬಳಿ ದುಡ್ಡಿಲ್ಲವೇ? ಎಂದು ಕೇಳಬೇಕು. ಯೋಜನೆಗೆ ಎಷ್ಟು ಖರ್ಚಾಗಿದೆ ಎಂದು ಮಾಹಿತಿ ಕೇಳಿದ್ದರು. ಅದನ್ನೂ ಸಹ ನೀಡಲಾಗಿದೆ. ಒಮ್ಮೆ ಮಾತ್ರ ಕ್ಯಾಬಿನೆಟ್ ಬಳಿ ಇದೆ ಎಂದು ಹೇಳಿದ್ದರು ಎಂದು ತಿಳಿಸಿದರು.

    ಡಿಪಿಆರ್ ಸಲ್ಲಿಸಿದ ಮೇಲೆ 5,300 ಕೋಟಿ ಘೋಷಣೆ ಮಾಡಿದ್ದರು. ಈಗ ವಿಳಂಬವಾಗುತ್ತಿರುವುದು ಏಕೆ ಎಂದು ಕೇಳಿದಾಗ, ಏನು ಮಾಡುವುದು ಅಧಿಕಾರಕ್ಕೆ ಕಾಂಗ್ರೆಸ್ ಸರ್ಕಾರ ಬಂದುಬಿಟ್ಟಿತ್ತಲ್ಲ ಎಂದು ಮಾರ್ಮಿಕವಾಗಿ ಉತ್ತರಿಸಿದರು.

    ನಮಗೆ ಸಹಕಾರ ನೀಡಿದರೆ ಗೋವಾದವರಿಗೂ ಸಹಕಾರ
    ಗೋವಾದವರು ನಮ್ಮ ಭಾಗದಲ್ಲಿ ವಿದ್ಯುತ್ ಮಾರ್ಗ ಹಾಕಲು ನಾವು ತಕರಾರು ತೆಗೆದಿದ್ದೇವೆ ಎಂದು ಹೇಳಿದ್ದಾರೆ. ನೀವು ನಮಗೆ ಸಹಕಾರ ನೀಡುವುದಾದರೆ ನಾವು ನಿಮಗೆ ನೀಡುತ್ತೇವೆ ಎಂದು ಹೇಳಿದ್ದೇವೆ. ಒಂದು ವಾರದಲ್ಲಿ ಇದರ ಬಗ್ಗೆ ಕೇಂದ್ರ ಪರಿಸರ ಸಚಿವರು ಅಭಿಪ್ರಾಯ ತಿಳಿಸುವುದಾಗಿ ಹೇಳಿದ್ದಾರೆ. ಮುಂದಿನ ಸಂಸತ್ ಅಧಿವೇಶನ ನಡೆಯುವುದರ ಒಳಗಾಗಿ ಮತ್ತೆ ಭೇಟಿ ಮಾಡುತ್ತೇನೆ ಎಂದು ತಿಳಿಸಿದ್ದೇನೆ ಎಂದರು.

    ಕಳಸಾ ಬಂಡೂರಿ ಕಾಮಗಾರಿ ಸಂಬಂಧವಾಗಿ ಬಿಜೆಪಿ ಸರ್ಕಾರವಿದ್ದ ವೇಳೆ ಕೆಲಸ ಮಾಡಬಹುದು ಎಂದು ಹೇಳಿದರು. ಈ ಪ್ರಕಾರವಾಗಿ ನಾವು ಟೆಂಡರ್ ಅನ್ನು ಕೂಡ ಕರೆಯಲಾಯಿತು. ಆದರೆ ಗೋವಾ ಸರ್ಕಾರ 2023ರ ಜ.9 ರಂದು ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಇದಕ್ಕೆ ನಮ್ಮ ಅಧಿಕಾರಿಗಳು ತಕ್ಷಣ ಉತ್ತರ ನೀಡಿ, ‘ನೀವು ಶೋಕಾಸ್ ನೋಟಿಸ್ ನೀಡಲು ಬರುವುದಿಲ್ಲ’ ಎಂದು ಹೇಳಿದ್ದಾರೆ. ಈ ವ್ಯಾಜ್ಯ ನ್ಯಾಯಾಲಯದಲ್ಲಿದೆ ಎಂದರು.

    ಈ ವಿಚಾರವನ್ನು ಕೇಂದ್ರ ಸಚಿವರ ಗಮನಕ್ಕೆ ತಂದು, ‘ಗೋವಾ ಸರ್ಕಾರ ನಮಗೆ ಶೋಕಾಸ್ ನೋಟಿಸ್ ನೀಡಲು ಯಾರು’ ಎಂದು ಕೇಳಿದ್ದೇನೆ. ನಮ್ಮ ಜಾಗದಲ್ಲಿ ನಾವು ಕಾಮಗಾರಿ ನಡೆಸುತ್ತೇವೆ. ನೀವು ಈ ವಿಚಾರವಾಗಿ ಅವರಿಗೆ ತಿಳಿಹೇಳಿ. ಇದರ ಬಗ್ಗೆ ಪ್ರಹ್ಲಾದ್ ಜೋಶಿ ಅವರೂ ಸಹ ಬಂದು ಮಾತನಾಡಿದರು ಎಂದು ಕೇಂದ್ರ ಸಚಿವರು ಹೇಳಿದರು. ಗೋವಾ ತಕರಾರಿನ ಬಗ್ಗೆ ಈಗಾಗಲೇ ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದೆ. ನಮ್ಮ ಅರಣ್ಯ ಭೂಮಿ ಬಗ್ಗೆ ಕೇಂದ್ರ ಸರ್ಕಾರ ನಮ್ಮ ಬಳಿ ಕೇಳುತ್ತದೆ. ಗೋವಾ ನಮಗೆ ಸೂಚನೆ ನೀಡಲು ಯಾರು ಎಂದು ಪುರುಚ್ಚರಿಸಿದರು.

    ಮೇಕೆದಾಟು ವಿಚಾರವಾಗಿ ಅಪ್ರೇಸಲ್ ವರದಿಯನ್ನು ಕೇಂದ್ರ ಸರ್ಕಾರ ನೀಡಬೇಕು. ಸಿಡ್ಬ್ಯೂಸಿಗೆ ಅಪ್ರೇಸಲ್ ವರದಿ ನೀಡಿ ಡಿಪಿಆರ್‌ಗೆ ಅನುಮತಿ ನೀಡಬೇಕು ಎಂದು ಹೇಳಿದ್ದೇನೆ. ಸಿಡ್ಬ್ಯೂಎಂಎ ಅವಾರ್ಡ್ ಅನ್ನು ಸುಪ್ರೀಂ ಕೋರ್ಟ್ ಆದೇಶದ ಪ್ರಕಾರವೇ ಮಾಡಿ ನೀಡಿದ್ದೇವೆ. ನೀವು ನ್ಯಾಯಾಲಯಕ್ಕೆ ಏನು ಬೇಕಾದರೂ ವರದಿ ನೀಡಿ. ನ್ಯಾಯಲಯ ತನ್ನ ತೀರ್ಮಾನ ತಿಳಿಸಲಿ ಎಂದು ಹೇಳಿದ್ದೇವೆ. ನಮಗಿಂತ ಹೆಚ್ಚು ತಮಿಳುನಾಡಿಗೆ ಉಪಯೋಗ ಎಂದು ತಿಳಿಸಿದ್ದೇವೆ. ಇದರ ಬಗ್ಗೆ ಅವರನ್ನು ಕರೆಸಿ ಮಾತನಾಡುತ್ತೇನೆ ಎಂದು ಸಚಿವರು ತಿಳಿಸಿದ್ದಾರೆ ಎಂದರು.

    ಕೃಷ್ಣಾ ನದಿ ನೀರಿನ ವಿಚಾರವಾಗಿ ಸಭೆಯ ದಿನಾಂಕ ನಿಗದಿಯಾಗಿತ್ತು. ಆದರೆ ಇದ್ದಕ್ಕಿದ್ದಂತೆ ಸಭೆ ರದ್ದಾಯಿತು. ಜುಲೈ ತಿಂಗಳಿನಲ್ಲಿಯೇ ಮತ್ತೊಮ್ಮೆ ಸಭೆ ಕರೆಯುವುದಾಗಿ ಜಲಶಕ್ತಿ ಸಚಿವರು ತಿಳಿಸಿದ್ದಾರೆ. ಏಕೆಂದರೆ ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಳದ ಬಗ್ಗೆ ತೀರ್ಮಾನವಾಗಿದ್ದರೂ 10 ವರ್ಷದಿಂದ ನಮ್ಮ ಪಾಲಿನ ನೀರು ಸಿಗದೇ ಕಾಯುತ್ತಿದ್ದೇವೆ. 1.40 ಲಕ್ಷ ಎಕರೆಗೆ ನೀರಾವರಿ ನೀಡಲು ನಾವು ತಯಾರಿ ಮಾಡಿಕೊಂಡಿದ್ದೇವೆ. ಇದರ ಬಗ್ಗೆ ಒಪ್ಪಂದವೂ ಆಗಿದೆ. ಕೇಂದ್ರದಿಂದ ಗೆಜೆಟ್ ನೋಟಿಫಿಕೇಷನ್ ಮಾತ್ರ ಆಗಬೇಕು. ನಮ್ಮ ನೀರನ್ನು ಬಳಸಿಕೊಳ್ಳುವುದಕ್ಕೆ ಮಹಾರಾಷ್ಟ್ರ ಏಕೆ ತಕರಾರು ಹಾಕಬೇಕು. ಮಹಾರಾಷ್ಟ್ರ, ಆಂಧ್ರ, ತೆಲಂಗಾಣವನ್ನು ಕರೆದು ಮಾತನಾಡಬೇಕು ಎಂದು ಹೇಳಿದ್ದೇನೆ. ಇದರ ಬಗ್ಗೆ ಸಭೆಯನ್ನು ಸಂಸತ್ ಅಧಿವೇಶನದ ಒಳಗಾಗಿ ಕರೆಯುತ್ತೇವೆ ಎಂದು ಸಚಿವರು ತಿಳಿಸಿದ್ದಾರೆ. ಕೇಂದ್ರ ಸಚಿವರು, ಸಂಸದರಿಗೆ ಈ ವಿಚಾರವಾಗಿ ಒತ್ತಡ ಏರಬೇಕು ಎಂದು ಮತ್ತೊಮ್ಮೆ ಮನವಿ ಮಾಡುತ್ತೇನೆ ಎಂದರು.

    ಕೇಂದ್ರ ಸಚಿವರನ್ನು ಭೇಟಿ ಮಾಡುವ ವೇಳೆ ಇದೇ ವೇಳೆ ಜೊತೆಯಲ್ಲಿ ಕೇಂದ್ರ ಸಚಿವರಾದ ಸೋಮಣ್ಣ ಅವರು ಸಹ ಇದ್ದರು. ಪ್ರಹ್ಲಾದ್ ಜೋಶಿ ಅವರನ್ನೂ ಭೇಟಿ ಮಾಡಲಾಯಿತು ಎಂದು ಹೇಳಿದರು.

  • ಸ್ವಾಮೀಜಿಗಳು ಹೇಳಿಕೆ‌ ನೀಡುವುದು ಅವರ ವೈಯಕ್ತಿಕ ಅಭಿಪ್ರಾಯ – ರಂಭಾಪುರಿ ಶ್ರೀ ಹೇಳಿಕೆಗೆ ಸಚಿವ ಚೆಲುವರಾಯಸ್ವಾಮಿ ಪ್ರತಿಕ್ರಿಯೆ

    ಸ್ವಾಮೀಜಿಗಳು ಹೇಳಿಕೆ‌ ನೀಡುವುದು ಅವರ ವೈಯಕ್ತಿಕ ಅಭಿಪ್ರಾಯ – ರಂಭಾಪುರಿ ಶ್ರೀ ಹೇಳಿಕೆಗೆ ಸಚಿವ ಚೆಲುವರಾಯಸ್ವಾಮಿ ಪ್ರತಿಕ್ರಿಯೆ

    ನವದೆಹಲಿ: ಸ್ವಾಮೀಜಿಗಳು ಹೇಳಿಕೆ‌ ನೀಡುವುದು ಅವರ ವೈಯಕ್ತಿಕ ಅಭಿಪ್ರಾಯ, ಅರ್ಶಿವಾದ ಮಾಡುವುದಾಗಲಿ ಅಥವಾ ಅಭಿಪ್ರಾಯ ತಿಳಿಸುವುದು ಅದು ಅವರ ವೈಯಕ್ತಿಕವಾಗಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ (Chaluvarayaswamy) ಹೇಳಿದರು.

    ಡಿಕೆ ಶಿವಕುಮಾರ್ (D.K.Shivakumar) ಮುಖ್ಯಮಂತ್ರಿಯಾಗಲಿ ಎಂದು ರಂಭಾಪುರಿ ಶ್ರೀ (Rambhapuri Swamiji) ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಪಕ್ಷದಲ್ಲಿ ಆ ರೀತಿ ಪ್ರಶ್ನೆಯೇ ಇಲ್ಲ‌. ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಬಹಳ ಅನ್ಯೋನ್ಯವಾಗಿದ್ದಾರೆ. ಬಹಳ ಕಷ್ಟ ಪಟ್ಟು ಪಕ್ಷ ಅಧಿಕಾರಕ್ಕೆ ತಂದಿದ್ದಾರೆ. ನಾನು ಕೂಡ ನೋಡಿದ್ದೇನೆ. ಅವರು ಪ್ರತಿ ಹಂತದಲ್ಲೂ ಮತ್ತೆ ಸರ್ಕಾರ ತರಬೇಕು. ಜನಪರ ಕೆಲಸ ಮಾಡಬೇಕು ಎಂದು ಕೆಲಸ ಮಾಡುತ್ತಿದ್ದಾರೆ ಎಂದರು. ಇದನ್ನೂ ಓದಿ: ಬಿಹಾರ ಮತದಾರರ ಪಟ್ಟಿ ನವೀಕರಣ: ಜುಲೈ 10 ರಂದು ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ

    ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಏನೇ ತೀರ್ಮಾನ ಆದರೂ ಹೈಕಮಾಂಡ್ ಜೊತೆಗೆ ಮಾತಾಡಿ ತೀರ್ಮಾನ ಮಾಡೋ ಥರ ಇಟ್ಟುಕೊಂಡಿದ್ದಾರೆ. ಸ್ವಾಮಿಜಿ ಅವರ ಅಭಿಪ್ರಾಯ ಅದು ಅವರ ವೈಯಕ್ತಿಕ. ಬಹಳ ಹಿಂದಿನಿಂದಲೂ ಬಹಳಷ್ಟು ಜನರು ಅಭಿಪ್ರಾಯ ಹೇಳಿದ್ದಾರೆ. ನೀವು ಯಾಕೆ ಹೇಳಿದ್ದೀರಿ ಅಂತಾ ನಾವು ಕೇಳಲು ಆಗುತ್ತಾ? ಡಿಕೆ ಶಿವಕುಮಾರ್ ಕೇಳಲು ಆಗುತ್ತಾ ಅಥವಾ ಸಿದ್ದರಾಮಯ್ಯನವರನ್ನು ಕೇಳಲು ಆಗುತ್ತಾ? ಸ್ವಾಮೀಜಿಗಳು ನಮಗೆ ಗುರುಗಳ ಸ್ಥಾನದಲ್ಲಿ ಇದ್ದಾರೆ. ಅವರ ಅಭಿಪ್ರಾಯ ಅಷ್ಟೇ ಇದು. ಹೆಚ್ಚು ಚರ್ಚೆ ಅಗತ್ಯ ಇಲ್ಲ ಎಂದು ತಿಳಿಸಿದರು.

    ಗ್ಯಾರಂಟಿ ಬೇಕಾ ರಸ್ತೆ ಬೇಕಾ ಎಂಬ ಬಸವರಾಜ್ ರಾಯರೆಡ್ಡಿ ಹೇಳಿಕೆ ವಿಚಾರವಾಗಿ ಮಾತನಾಡಿ, ಗ್ಯಾರಂಟಿನೂ ಆಗುತ್ತೆ ರಸ್ತೆನೂ ಆಗುತ್ತೆ. ಅದ್ಯಾಕೆ ಅವರು ಮಾತಾಡಿದ್ದಾರೋ ನನಗೆ ಗೊತ್ತಿಲ್ಲ. ಮೊನ್ನೆ 50 ಕೋಟಿ ಕೊಟ್ಟಿದ್ದಾರೆ. ಅಲ್ಲದೇ, ಇಲಾಖೆಗಳಲ್ಲೂ ಅನುದಾನ ಕೊಟ್ಟಿದ್ದಾರೆ. ಆರ್‌ಡಿಪಿಆರ್ PWD ಇಲಾಖೆಯಲ್ಲೂ ಕೊಟ್ಟಿದ್ದಾರೆ. ರಾಯರೆಡ್ಡಿ ಹಿರಿಯ ಶಾಸಕರು. ಅವರು ಯಾಕೆ ಹೀಗೆ ನನಗೆ ಗೊತ್ತಿಲ್ಲ. ಹೈಕಮಾಂಡ್ ಸೂಚನೆ ಮೇರೆಗೆ ಸುರ್ಜೇವಾಲ ಸಭೆ ನಡೆಸುತ್ತಿದ್ದಾರೆ. ಯಾವುದೇ ಗೊಂದಲ ಇಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಖಲಿಸ್ತಾನಿ ಭಯೋತ್ಪಾದಕ ಹ್ಯಾಪಿ ಪಾಸಿಯಾ ಭಾರತಕ್ಕೆ ಹಸ್ತಾಂತರ ಪ್ರಕ್ರಿಯೆ ಶುರು

  • ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗಲ್ಲ: ಡಿ.ಕೆ.ಶಿವಕುಮಾರ್

    ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗಲ್ಲ: ಡಿ.ಕೆ.ಶಿವಕುಮಾರ್

    – ಆಷಾಢ ಶುಕ್ರವಾರ; ಚಾಮುಂಡಿ ಬೆಟ್ಟದಲ್ಲಿ ಡಿಕೆಶಿ ವಿಶೇಷ ಪೂಜೆ

    ಮೈಸೂರು: ಆಷಾಢ ಶುಕ್ರವಾರದ (Ashada) ಪ್ರಯುಕ್ತ ಚಾಮುಂಡಿ ಬೆಟ್ಟಕ್ಕೆ ತೆರಳಿ ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಚಾಮುಂಡಿ ತಾಯಿಗೆ (Chamundi Hills) ವಿಶೇಷ ಪೂಜೆ ಸಲ್ಲಿಸಿದ್ದಾರೆ.

    ಶುಕ್ರವಾರ ಬೆಟ್ಟಕ್ಕೆ ತೆರಳಿದ ಡಿಸಿಎಂ ಈಡುಗಾಯಿ ಒಡೆದು ಪ್ರಾರ್ಥಿಸಿದರು. ಈ ವೇಳೆ ಮಂತ್ರ ಪಠಣ ಕೂಡ ಮಾಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರಿಗೂ ಒಳ್ಳೆಯದು ಮಾಡು ಎಂದು ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥಿಸಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: 2ನೇ ಆಷಾಢ ಶುಕ್ರವಾರ – ಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ಚಾಮುಂಡಿ ತಾಯಿ

    ದುಃಖವನ್ನು ದೂರು ಮಾಡುವ ದೇವಿ ಚಾಮುಂಡಿ. ಈ ಬಾರಿ ಇಡೀ ರಾಜ್ಯದಲ್ಲಿ ಒಳ್ಳೆಯ ಮಳೆಯಾಗಿದೆ. ಎಲ್ಲರಿಗೂ ಒಳ್ಳೆಯದನ್ನು ಮಾಡಲೆಂದು ಪ್ರಾರ್ಥನೆ ಮಾಡಿದ್ದೇನೆ. ಪ್ರಯತ್ನಕ್ಕಿಂತ ಪ್ರಾರ್ಥನೆಯಿಂದ ಫಲ ಸಿಗುತ್ತದೆ ಎಂಬ ನಂಬಿಕೆ ಇದೆ. ಇಡೀ ರಾಜ್ಯಕ್ಕೆ ಏನೇ ಕೆಲಸ ಮಾಡಬೇಕಾದರೂ ತಾಯಿಗೆ ಪೂಜೆ ಸಲ್ಲಿಸಿ ಮಾಡುತ್ತೇವೆ. ಇಂದು ಕುಟುಂಬ ಸಮೇತ ಬಂದು ತಾಯಿಗೆ ಪೂಜೆ ಸಲ್ಲಿಸಿದ್ದೇನೆ ಎಂದು ಹೇಳಿದ್ದಾರೆ.

    ನಿಮ್ಮ ಪ್ರಾರ್ಥನೆಗೆ ಫಲ ಸಿಗುತ್ತಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗುವುದಿಲ್ಲ ಎಂಬುದು ನನ್ನ ನಂಬಿಕೆ. ನನಗೆ ಏನು ಬೇಕೋ ಅದನ್ನು ಪ್ರಾರ್ಥನೆ ಮಾಡಿದ್ದೇನೆ. ಯಾವ ಚರ್ಚೆಯೂ ಬೇಡ ಈಗ ಎಂದು ಸಿಎಂ ರೇಸ್ ವಿಚಾರಕ್ಕೆ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ತಾಯಿ ಚಾಮುಂಡಿ ದರ್ಶನ ಪಡೆದ ನಟ ದರ್ಶನ್

    ರಾಜಕೀಯದ ಬಗ್ಗೆ ಮಾತನಾಡುವುದಿಲ್ಲ. ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷರು ಹಾಗೂ ಹಿರಿಯರು. ಅವರು ಬುದ್ಧಿವಾದ ಹೇಳಿ ಸಂದೇಶ ಕೊಟ್ಟಿದ್ದಾರೆ. ಎಲ್ಲರೂ ಸೇರಿ ಒಟ್ಟಾಗಿ ಕೆಲಸ ಮಾಡೋಣ ಎಂದಷ್ಟೇ ಹೇಳಿ ಡಿಕೆಶಿ ಹೊರಟರು.

  • 5 ವರ್ಷ ನಾನೇ ಸಿಎಂ, ನಮ್ಮ ಸರ್ಕಾರ ಬಂಡೆ ತರ ಇರುತ್ತೆ: ಸಿದ್ದರಾಮಯ್ಯ

    5 ವರ್ಷ ನಾನೇ ಸಿಎಂ, ನಮ್ಮ ಸರ್ಕಾರ ಬಂಡೆ ತರ ಇರುತ್ತೆ: ಸಿದ್ದರಾಮಯ್ಯ

    ಚಿಕ್ಕಬಳ್ಳಾಪುರ: 5 ವರ್ಷವೂ ನಾನೇ ಸಿಎಂ, ನಮ್ಮ ಸರ್ಕಾರ ಬಂಡೆ ತರ ಇರುತ್ತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು.

    ಚಿಕ್ಕಬಳ್ಳಾಪುರದಲ್ಲಿಂದು (Chikkaballapura) ಕ್ಯಾಬಿನೆಟ್‌ ಸಭೆಗೂ ಮುನ್ನ ನಂದಿ ಗ್ರಾಮದ ಶ್ರೀ ಭೋಗನಂದೀಶ್ವರಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ್ದರು. ಈ ವೇಳೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, 5 ವರ್ಷ ನಾನೇ ಸಿಎಂ ಆಗಿರ್ತೀನಿ. ನಿಮಗ್ಯಾಕೆ ಅನುಮಾನ ಬಂದಿದೆ? ಅಂತ ಪ್ರಶ್ನಿಸಿದ್ರು. ಇದನ್ನೂ ಓದಿ: ಸಿಎಂ ಕಾರ್ಯಕ್ರಮದಲ್ಲಿ ಅಪಮಾನ – ಸ್ವಯಂ ನಿವೃತ್ತಿಗೆ ಮುಂದಾದ ಎಎಸ್‌ಪಿ ಬರಮಣ್ಣಿ

    ಬಿಜೆಪಿಯವರು (BJP_ ಸುಳ್ಳು ಹೇಳೋದ್ರಲ್ಲಿ ನಿಸ್ಸೀಮರು, ಸತ್ಯ ಹೇಳೋದು ಅವರಿಗೆ ಗೊತ್ತೇ ಇಲ್ಲ. ನಾವೆಲ್ಲರೂ ಒಟ್ಟಾಗಿದ್ದೇವೆ. 5 ವರ್ಷ ನಾವೇ ಅಧಿಕಾರದಲ್ಲಿ ಇರ್ತೇವೆ. ನಮ್ಮ ಸರ್ಕಾರ (Congress Government) ಬಂಡೆ ತರ ಇರುತ್ತೆ ಎಂದರು.

    ಬಿಜೆಪಿಯವರು ಹಗಲು ಕನಸು ಕಾಣ್ತಿದ್ದಾರೆ. ಅಧಿಕಾರದಲ್ಲಿದ್ದಾಗ ಏನೂ ಮಾಡಲಿಲ್ಲ. ಡಿಕೆ ಶಿವಕುಮಾರ್ ಹೇಳೋ ಹಾಗೆ ಏನೂ ಸಾಕ್ಷಿ ಗುಡ್ಡೆ ಬಿಟ್ಡು ಹೋಗಿದ್ದಾರೆ. ಕುಮಾರಸ್ವಾಮಿ ಜೊತೆ ಸಮ್ಮಿಶ್ರ ಸರ್ಕಾರದಲ್ಲಿ ಏನು ಮಾಡಿದ್ರು? ಸುಳ್ಳು ಹೇಳಿಕೊಂಡು ಜನರನ್ನ ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡಿದ್ದಾರೆ ಬಿಟ್ರೆ, ಬೇರೆನೂ ಮಾಡಿಲ್ಲ ಎಂದು ಅಸಮಾಧಾನ ಹೊರಹಾಕಿದ್ರು. ಇದನ್ನೂ ಓದಿ: ಓಲಾ, ಊಬರ್ ಬಳಕೆದಾರರಿಗೆ ಶಾಕ್ – ಪೀಕ್ ಅವರ್‌ನಲ್ಲಿ ದುಪ್ಪಟ್ಟು ದರ ವಿಧಿಸಲು ಕೇಂದ್ರ ಒಪ್ಪಿಗೆ 

    2ನೇ ವರ್ಷದ ಸಾಧನಾ ಸಮಾವೇಶದಲ್ಲಿ 3 ಲಕ್ಷ ಜನ ಇದ್ರು. ಮಳೆ ಇದ್ದರೂ ಸಹ ಜನ ಬಂದಿದ್ದರು. ಯಾರಾದ್ರೂ ಸುಮ್ಮನೆ ಬರ್ತಾರಾ? ಅಂತ ಪ್ರಶ್ನೆ ಮಾಡಿದ ಸಿಎಂ, ವಿಪಕ್ಷ ನಾಯಕ ಆರ್‌. ಅಶೋಕ್‌, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧವೂ ತೀವ್ರ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಪಕ್ಷದಲ್ಲಿ ಯಾರೇ ಶಿಸ್ತು ಉಲ್ಲಂಘಿಸಿದ್ರು ನೋಟಿಸ್ ಕೊಡ್ತೀನಿ – ಡಿಕೆಶಿ

  • ಡಿಸೆಂಬರ್‌ ಬಳಿಕ ಮಧ್ಯಂತರ ಚುನಾವಣೆ ಬರುತ್ತೆ, ಬಿಜೆಪಿ 150 ಸ್ಥಾನದೊಂದಿಗೆ ಸರ್ಕಾರ ರಚಿಸುತ್ತೆ: ಕಾರಜೋಳ ಭವಿಷ್ಯ

    ಡಿಸೆಂಬರ್‌ ಬಳಿಕ ಮಧ್ಯಂತರ ಚುನಾವಣೆ ಬರುತ್ತೆ, ಬಿಜೆಪಿ 150 ಸ್ಥಾನದೊಂದಿಗೆ ಸರ್ಕಾರ ರಚಿಸುತ್ತೆ: ಕಾರಜೋಳ ಭವಿಷ್ಯ

    ಚಿತ್ರದುರ್ಗ: ರಾಜ್ಯ ರಾಜಕಾರಣದಲ್ಲಿ ʻಸೆಪ್ಟೆಂಬರ್ ಕ್ರಾಂತಿʼ ಭವಿಷ್ಯ ಸ್ಫೋಟಗೊಂಡಿದೆ. ಸದ್ಯ ರಾಜ್ಯ ರಾಜಕಾರಣದಲ್ಲಿ, ಕಾಂಗ್ರೆಸ್ ಪಕ್ಷದಲ್ಲಿ (Congress Party) ನಡೆಯುತ್ತಿರುವ ಮಹತ್ವದ ಚರ್ಚೆ ಈ ಸೆಪ್ಟೆಂಬರ್ ಕ್ರಾಂತಿ. ಸೆಪ್ಟೆಂಬರ್ ಸ್ಫೋಟಕ್ಕೆ ಇನ್ನೆರಡು ತಿಂಗಳಷ್ಟೇ ಬಾಕಿ. ಹಿರಿಯ ಸಚಿವ ಕೆಎನ್ ರಾಜಣ್ಣ (KN Rajanna) ನೀಡಿರುವ ಈ ಹೇಳಿಕೆ ಸದ್ಯ ರಾಜಕಾರಣದಲ್ಲಿ ನಾನಾ ಆಯಾಮದಲ್ಲಿ ವಿಶ್ಲೇಷಣೆಗೆ ಕಾರಣವಾಗ್ತಿದೆ. ಈ ನಡುವೆ ಕಾಂಗ್ರೆಸ್‌ನಲ್ಲೇ ವಾಗ್ಯುದ್ಧ ನಡೆಯುತ್ತಿದೆ.

    ಈ ನಡುವೆ ಚಿತ್ರದುರ್ಗದ ಚಳ್ಳಕೆರೆಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಸಂಸದ ಗೋವಿಂದ ಕಾರಜೋಳ (Govind Karjol), ಡಿಸೆಂಬರ್ ಬಳಿಕ ಯಾವುದೇ ಸಂದರ್ಭದಲ್ಲೂ ಮಧ್ಯಂತರ ಚುನಾವಣೆ ಬರಬಹುದು ಎಂದು ಭವಿಷ್ಯ ನುಡಿದಿದ್ದಾರೆ. ಇದನ್ನೂ ಓದಿ: ರೈಲ್ವೆ ಯೋಜನೆಗಳಿಗೆ ಹಣ ಕೊಡದ ರಾಜ್ಯ ಸರ್ಕಾರ – ಬಿಜೆಪಿ ನಾಯಕರಿಂದ ತೀವ್ರ ಟೀಕೆ

    2028ಕ್ಕೆ ವಿಧಾನಸಭೆ ಚುನಾವಣೆ (Assembly election) ಬರುತ್ತದೆಂದು ನಾನು ಹೇಳಲ್ಲ. ಡಿಸೆಂಬರ್ ಬಳಿಕ ಯಾವುದೇ ಸಂದರ್ಭದಲ್ಲಿ ಚುನಾವಣೆ ಬರಬಹುದು. 150 ಶಾಸಕರೊಂದಿಗೆ ಬಿಜೆಪಿ ಸರ್ಕಾರ ರಚಿಸುವ ಭರವಸೆಯಿದೆ. ಕಾಂಗ್ರೆಸ್ ಸರ್ಕಾರ ಒಂದೇ ಒಂದು ಅಭಿವೃದ್ಧಿ ಕೆಲಸ ಮಾಡುತ್ತಿಲ್ಲ. ಸಿಎಂ, ಡಿಸಿಎಂ, ಉಸ್ತುವಾರಿ ಸಚಿವರಿಗೆ ಜನ ಶಾಪ ಹಾಕ್ತಿದ್ದಾರೆಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಪುರಿ ಕಾಲ್ತುಳಿತದಲ್ಲಿ ಮೂವರ ಸಾವು ಪ್ರಕರಣ – ಸಂತ್ರಸ್ತರ ಕುಟುಂಬಗಳಿಗೆ ತಲಾ 25 ಲಕ್ಷ ಪರಿಹಾರ

    ಇನ್ನೂ ಸೆಪ್ಟೆಂಬರ್ ಕ್ರಾಂತಿಗೆ ಸಚಿವರು, ಶಾಸಕರು ತಮ್ಮದೇ ಆದ ಧಾಟಿಯಲ್ಲಿ ಸಮರ್ಥನೆ ಕೊಡ್ತಿದ್ದಾರೆ. ಅಷ್ಟಕ್ಕೂ ಸೆಪ್ಟೆಂಬರ್ ಕ್ರಾಂತಿಯನ್ನು ಏನೆಲ್ಲಾ ಬದಲಾವಣೆಗಳು ಆಗಲಿದೆ ಅನ್ನೋದು ಸದ್ಯದ ಕುತೂಹಲ. ಇನ್ನು ಬಿಜೆಪಿ ನಾಯಕರು ಸೆಪ್ಟೆಂಬರ್ ಕ್ರಾಂತಿಗೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಕೊಡ್ತಿದ್ದಾರೆ. ವಿಪಕ್ಷ ನಾಯಕ ಅಶೋಕ್, ರಾಜಣ್ಣಕ್ಕಿಂತ ಮೊದ್ಲೇ ಹೇಳಿದ್ದೇ. ಕಾಂಗ್ರೆಸ್‌ನೊಳಗೆ ಕ್ಷಿಪ್ರ ಕ್ರಾಂತಿ ಆಗೋದು ಶತಸಿದ್ಧ ಎಂದಿದ್ದಾರೆ. ಇದನ್ನೂ ಓದಿ: ಕಾವೇರಿ ಆರತಿ ವಿಷಯಕ್ಕೆ ಕಾನೂನು ಮೂಲಕವೇ ಉತ್ತರ: ಪೂಜೆ, ಪ್ರಾರ್ಥನೆಗೆ ಯಾರೂ ಅಡ್ಡಿ ಮಾಡುವುದಿಲ್ಲ: ಡಿಕೆಶಿ

    ಈ ನಡುವೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಕೆಲವೇ ದಿನಗಳಲ್ಲಿ ಈ ಸರ್ಕಾರ ಪತನ ಆಗತ್ತೆ. 2026ರಲ್ಲೇ ಎಲೆಕ್ಷನ್ ನಡೆಯುತ್ತೆ ಅಂತ ಭವಿಷ್ಯ ನುಡಿದಿದ್ದಾರೆ. ಇನ್ನು ಅಶೋಕ್ ಹೇಳಿಕೆಗೆ ಕಾಂಗ್ರೆಸ್ ನಾಯಕರು ತಿರುಗೇಟು ಕೊಟ್ಟಿದ್ದಾರೆ. ಅಶೋಕ್ ಭವಿಷ್ಯ, ಜ್ಯೋತಿಷಿ ಕಲಿತಿದ್ರೆ ನನಗೆ ಟೈಂ ಕೊಡ್ಸಿ, ನನಗೂ ಕೇಳೋದು ಇದೆ, ಅವರನ್ನ ಭೇಟಿ ಮಾಡ್ತೀನಿ ಅಂತ ಡಿಕೆಶಿ ವ್ಯಂಗ್ಯವಾಡಿದ್ದಾರೆ. ಇನ್ನುಳಿದ ಸಚಿವ ತಮ್ಮದೇ ರೀತಿಯಲ್ಲಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.