Tag: ಡಿ.ಕೆ.ಶಿವಕುಮಾರ್

  • ದುರ್ಘಟನೆಯಲ್ಲಿ ಪೊಲೀಸರನ್ನ ಹರಕೆಯ ಕುರಿ ಮಾಡಿದ್ದಾರೆ, ಸಿಎಂ, ಡಿಸಿಎಂ, ಪರಂ ರಾಜೀನಾಮೆ ಕೊಡ್ಬೇಕು: ವಿಜಯೇಂದ್ರ ಆಗ್ರಹ

    ದುರ್ಘಟನೆಯಲ್ಲಿ ಪೊಲೀಸರನ್ನ ಹರಕೆಯ ಕುರಿ ಮಾಡಿದ್ದಾರೆ, ಸಿಎಂ, ಡಿಸಿಎಂ, ಪರಂ ರಾಜೀನಾಮೆ ಕೊಡ್ಬೇಕು: ವಿಜಯೇಂದ್ರ ಆಗ್ರಹ

    – ಚಿನ್ನಸ್ವಾಮಿ ಸ್ಟೇಡಿಯಂ ಕಾರ್ಯಕ್ರಮ ಕಾನೂನು ಬಾಹಿರ ಅಂದ್ಮೇಲೆ ಡಿಸಿಎಂ ಹೋಗಿದ್ದೇಕೆ?

    ಬೆಂಗಳೂರು: ಆರ್‌ಸಿಬಿ (RCB) ಗೆಲುವಿನ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ, 11 ಸಾವಿನ ಸಂಬಂಧ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ (BY Vijayendra) ಅವರು ಆಗ್ರಹಿಸಿದ್ದಾರೆ.

    ಬೆಂಗಳೂರಿನಲ್ಲಿಂದು (Bengaluru) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಫ್‍ಐಆರ್‌ನಲ್ಲಿ ಕೆಎಸ್‍ಸಿಎ (KSCA), ಆರ್‌ಸಿಬಿ ಮತ್ತು ಡಿಎನ್‌ವೆ ಇವೆಂಟ್‌ ಮ್ಯಾನೇಜ್ಮೆಂಟ್‌ ಸಂಸ್ಥೆಯನ್ನು ಆರೋಪಿಗಳಾಗಿ ಹೆಸರಿಸಿದ್ದಾರೆ. ಸ್ವತಃ ಮುಖ್ಯಮಂತ್ರಗಳೇ ಆರೋಪಿ ನಂ.1, ಉಪ ಮುಖ್ಯಮಂತ್ರಿಗಳು ಆರೋಪಿ ನಂ.2, ಮಾನ್ಯ ಗೃಹ ಸಚಿವ ಪರಮೇಶ್ವರ್ (G Parameshwar) ಅವರು ಆರೋಪಿ ನಂ.3 ಎಂದು ವಾಗ್ದಾಳಿ ನಡೆಸಿದರು. ಕಾಲ್ತುಳಿತ ಹಾಗೂ 11 ಜನ ಅಮಾಯಕರ ಸಾವಿನ ಸಂಬಂಧ ಕೊನೆಗೂ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಿದ್ದಾರೆ. ರಾಜ್ಯ ಹೈಕೋರ್ಟ್ ಸ್ವಯಂಪ್ರೇರಿತ ಕೇಸ್ ತೆಗೆದುಕೊಂಡು ರಾಜ್ಯ ಸರಕಾರಕ್ಕೆ ಛೀಮಾರಿ ಹಾಕಿದ ನಂತರ ಸರಕಾರ ಎಚ್ಚತ್ತುಕೊಂಡಿದೆ ಎಂದು ವಿಶ್ಲೇಷಿಸಿದರು.

    ಮುಖ್ಯಮಂತ್ರಿಗಳು, ಪೊಲೀಸ್ ಅಧಿಕಾರಿಗಳನ್ನು ಹರಕೆಯ ಕುರಿ ಮಾಡುವ ಬದಲಾಗಿ ತಾವೇ ಜವಾಬ್ದಾರಿ, ನೈತಿಕ ಹೊಣೆ ಹೊತ್ತು ಉಪ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಿದೆ ಎಂದು ಮತ್ತೊಮ್ಮೆ ಒತ್ತಾಯಿಸಿದರು. ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್‍ಸಿಎ), ಆರ್‌ಸಿಬಿ ಮತ್ತು ಏಜೆನ್ಸಿಯಾದ ಡಿಎನ್‌ಎಯನ್ನ ಪ್ರಮುಖವಾಗಿ ಆರೋಪಿಗಳೆಂದು ಎಫ್‍ಐಆರ್‌ನಲ್ಲಿ ವಿಜಯೇಂದ್ರ ಉಲ್ಲೇಖಿಸಿದ್ದಾರೆ.

    ಎಫ್‍ಐಆರ್ ತರುವಾಯ, ಮುಖ್ಯಮಂತ್ರಿಗಳು ಏಕಾಏಕಿ ಜಾಗೃತರಾಗಿದ್ದಾರೆ. ಮುಖ್ಯಮಂತ್ರಿಗಳು ರಾತ್ರಿ ಪತ್ರಿಕಾಗೋಷ್ಠಿ ನಡೆಸಿ ಬೆಂಗಳೂರು ಕಮೀಷನರ್ ಸೇರಿ 5 ಜನ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದ್ದಾರೆ. ಅರ್ಥಾತ್, ಮುಖ್ಯಮಂತ್ರಿಗಳು ಮೊನ್ನೆ ನಡೆದ ದುರ್ಘಟನೆ, 11 ಜನರ ಸಾವಿಗೆ ರಾಜ್ಯ ಸರಕಾರದಿಂದ ತಪ್ಪಾಗಿದೆ ಎಂದು ಒಪ್ಪಿಕೊಂಡಿದ್ದಾರೆ. ತಮ್ಮ ತಪ್ಪನ್ನು ಮುಚ್ಚಿ ಹಾಕಿಕೊಳ್ಳಲು ಪೊಲೀಸರನ್ನು ಹರಕೆಯ ಕುರಿಯಾಗಿ ರಾಜ್ಯ ಸರ್ಕಾರ ಮಾಡಿದೆ ಎಂದು ಆರೋಪಿಸಿದರು.

    ತಪ್ಪಿಸಿಕೊಳ್ಳುವ ಷಡ್ಯಂತ್ರ ಮುಖ್ಯಮಂತ್ರಿಗಳದ್ದು..
    ಪೊಲೀಸ್ ಅಧಿಕಾರಿಗಳನ್ನು ಹರಕೆಯ ಕುರಿ ಮಾಡಿ ತಪ್ಪಿಸಿಕೊಳ್ಳುವ ಷಡ್ಯಂತ್ರ ಮುಖ್ಯಮಂತ್ರಿಗಳದು ಎಂದು ಬಿ.ವೈ ವಿಜಯೇಂದ್ರ ಅವರು ಆರೋಪಿಸಿದರು. ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದ್ದೀರಿ. ವೈಫಲ್ಯಕ್ಕಾಗಿ ಬೇಹುಗಾರಿಕಾ ದಳದ ಅಧಿಕಾರಿಗಳನ್ನು ಯಾಕೆ ಅಮಾನತು ಮಾಡಿಲ್ಲ? ಎಂದು ಕೇಳಿದರು. ಬೇಹುಗಾರಿಕಾ ದಳ ನೇರ ಸಿಎಂ ಕೆಳಗಡೆ ಬರುತ್ತದೆ, ಅವರನ್ನು ಅಮಾನತು ಮಾಡಿದ್ರೆ ಇದು ಮುಖ್ಯಮಂತ್ರಿಗಳ ಬುಡಕ್ಕೇ ಬರಲಿದೆ. ಆದ್ದರಿಂದ ಅವರನ್ನ ಅಮಾನತು ಮಾಡಿಲ್ಲ ಎಂದು ವಿಜಯೇಂದ್ರ ತಿಳಿಸಿದರು.

    ನಾವು 30-40 ಸಾವಿರ ಜನರು ಬರುವ ನಿರೀಕ್ಷೆ ಇಟ್ಟುಕೊಂಡಿದ್ದೆವು. 2 ರಿಂದ 3 ಲಕ್ಷ ಜನರು ಬಂದಿದ್ದಾರೆ, ನಾವು ಇದನ್ನು ನಿರೀಕ್ಷೆ ಮಾಡಿರಲಿಲ್ಲ ಎನ್ನುವ ಮೂಲಕ ಬೇಹುಗಾರಿಕಾ ದಳದ ವೈಫಲ್ಯವನ್ನು ಸ್ವತಃ ಮುಖ್ಯಮಂತ್ರಿಗಳು ಒಪ್ಪಿಕೊಂಡಿದ್ದಾರೆ ಎಂದು ಸ್ಪಷ್ಟಪಡಿಸಿದರು.

    ಪೊಲೀಸರಿಂದ ಅನುಮತಿ ನಿರಾಕರಣೆ…
    ನಿನ್ನೆ ನಡೆದ ಐಪಿಎಲ್ ಫೈನಲ್ ಪಂದ್ಯದಲ್ಲಿ ಗೆದ್ದು ಬೀಗಿದ ಹೆಮ್ಮೆಯ ಆರ್‌ಸಿಬಿ ತಂಡಕ್ಕೆ ಅಭಿನಂದನೆಗಳು. ರಾಜ್ಯ ಅತ್ಯಂತ ಹೆಮ್ಮೆ ಹಾಗೂ ಖುಷಿಪಡುವ ಕೆಲಸವನ್ನು ಆರ್‌ಸಿಬಿ ತಂಡ ಮಾಡಿದ್ದು, ಅವರನ್ನು ಇಂದು ಸಂಜೆ 4 ಗಂಟೆಗೆ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಅಭಿನಂದಿಸಲಿದ್ದೇವೆ. ಈ ಐತಿಹಾಸಿಕ ಕ್ಷಣದಲ್ಲಿ ನೀವೂ ಭಾಗಿಯಾಗಿ ಎಂದು ಸ್ವತಃ ಮುಖ್ಯಮಂತ್ರಿಗಳೇ ಸಾಮಾಜಿಕ ಜಾಲತಾಣದ ಮೂಲಕ ಕರೆ ಕೊಟ್ಟಿದ್ದರು. 3 ರಂದು ಮ್ಯಾಚ್ ಆಗುವ ಮೊದಲೇ ಕೆಎಸ್‍ಸಿಎ, ಆರ್‌ಸಿಬಿ ಮತ್ತು ಏಜೆನ್ಸಿಯಾದ ಡಿಎನ್‌ಎ ಕಡೆಯಿಂದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಹೋಗಿದ್ದರು. ಸಂಭ್ರಮಾಚರಣೆಗೆ ಅನುಮತಿ ಕೋರಿದ್ದರು. ಲಕ್ಷೋಪಲಕ್ಷ ಆರ್‌ಸಿಬಿ ಅಭಿಮಾನಿಗಳು ಬರುವ ಕಾರಣ ನಾಳೆ ಸಂಭ್ರಮಾಚರಣೆಗೆ ಅನುಮತಿ ಕೊಡಲಾಗದು ಎಂದು ಪೊಲೀಸ್ ಅಧಿಕಾರಿಗಳು ಮುಚ್ಚಳಿಕೆ ಬರೆದುಕೊಟ್ಟಿದ್ದರು ಎಂದು ವಿವರಿಸಿದರು.

    ಪೊಲೀಸ್ ಇಲಾಖೆ ಸಂಭ್ರಮಾಚರಣೆಗೆ ಅನುಮತಿ ಕೊಟ್ಟಿರಲಿಲ್ಲ. ಲಕ್ಷ ಲಕ್ಷ ಜನರು ಬರುವುದು ಗೊತ್ತಿದ್ದು ಹೀಗೆ ಹೇಳಿದ್ದಾರೆ. ಹಾಗಿದ್ದರೆ ರಾಜ್ಯ ಸರಕಾರಕ್ಕೆ ಯಾರು ಅನುಮತಿ ಕೊಟ್ಟರು ಎಂದು ಪ್ರಶ್ನಿಸಿದರು. ವಿಧಾನಸೌಧದ ಬಳಿ ಲಕ್ಷ ಲಕ್ಷ ಜನ ಆರ್‌ಸಿಬಿ ಅಭಿಮಾನಿಗಳು ಬಂದಿದ್ದರು. ಅವರಿಗೆ ಯಾರ ಅನುಮತಿ ಇತ್ತು ಎಂದು ಕೇಳಿದರು.

    ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅನುಮತಿ ಕೊಟ್ಟಿರಲಿಲ್ಲ. ಕಾನೂನುಬಾಹಿರವಾಗಿ ಕಾರ್ಯಕ್ರಮ ನಡೆದಿದೆ ಎಂದು ಎಫ್‍ಐಆರ್ ಮಾಡಿದ್ದಾರೆ. ಅಲ್ಲಿ ಅನುಮತಿ ಇಲ್ಲದಿದ್ದರೂ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗಿ, ಅಲ್ಲಿ ಸಂಭ್ರಮಾಚರಣೆಯಲ್ಲಿ ಯಾಕೆ ಭಾಗವಹಿಸಿದ್ದರು? ಅಲ್ಲಿ ಕಪ್ ಹಿಡಿದು ಮುತ್ತಿಕ್ಕುವ ಕೆಲಸವನ್ನು ಯಾಕೆ ಮಾಡಿದರು ಎಂದು ಕೇಳಿದರು.

    ಸರ್ಕಾರ ಕಿತ್ತು ಹಾಕಬೇಕೆಂಬ ಆಶಯ ಜನಸಾಮಾನ್ಯರದ್ದು..
    ಇವತ್ತು ಬೆಳಿಗ್ಗೆ ಉಪ್ಪಾರಪೇಟೆ ಪೊಲೀಸ್ ಠಾಣೆ ಬಳಿ ವಾಹನದಲ್ಲಿ ಬರುತ್ತಿದ್ದೆ. ಒಬ್ಬ ಆಟೋ ಚಾಲಕನನ್ನು ಮಾತನಾಡಿಸಿದೆ. ಏನ್ರೀ ವಿರೋಧ ಪಕ್ಷದವರು ನೀವಿದ್ದೀರಿ. ಪಾಪ 11 ಜನ ಅಮಾಯಕರು ಪ್ರಾಣ ಕಳಕೊಂಡಿದ್ದಾರೆ. ಈ ದರಿದ್ರ ಕಾಂಗ್ರೆಸ್ ಸರಕಾರವನ್ನ ನೀವು ಕಿತ್ತು ಹಾಕಬೇಕು ಎಂದು ಅವರು ಹೇಳಿದರು. ಇದು ಜನರ ಈಗಿನ ಆಶಯ ಎಂದು ಬಿ.ವೈ ವಿಜಯೇಂದ್ರ ಅವರು ವಿವರಿಸಿದರು.

    ಈ ವಿಜಯೋತ್ಸವ ಸರ್ಕಾರಕ್ಕೆ ಯಾಕೆ ಬೇಕಿತ್ತು ಎಂದು ಕಾಂಗ್ರೆಸ್ಸಿನ ಮುಖಂಡ ಬಿ.ಕೆ ಹರಿಪ್ರಸಾದ್ ಅವರು ಪ್ರಶ್ನಿಸಿದ್ದಾರೆ. ಆರ್‌ಸಿಬಿ ಗೆಲುವು ಸಾಧಿಸಿದೆ ಎಂದು ರಾಜ್ಯ ಸರ್ಕಾರ ಯಾಕೆ ಸಂಭ್ರಮಾಚರಣೆ ಮಾಡಿದೆ ಎಂದು ಕೇಳಿದ್ದಾರೆ. 11 ಜನರ ಸಾವಿಗೆ ರಾಜ್ಯ ಸರ್ಕಾರವೇ ಉತ್ತರಿಸಬೇಕಿದೆ ಎಂದಿದ್ದಾಗಿ ಗಮನ ಸೆಳೆದರು.

    ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್, ಜೆಡಿಎಸ್ ಸಂಸದ ಎಂ.ಮಲ್ಲೇಶ್ ಬಾಬು, ಮಾಜಿ ಸಂಸದ ಪ್ರತಾಪ್ ಸಿಂಹ, ಶಾಸಕ ಹರೀಶ್ ಪೂಂಜಾ ಮತ್ತು ಜೆಡಿಎಸ್ ಮುಖಂಡರು ಮತ್ತು ವಿಧಾನ ಪರಿಷತ್ ಮಾಜಿ ಸದಸ್ಯರಾದ ಹೆಚ್.ಎಂ.ರಮೇಶ್ ಗೌಡ, ಆರ್. ಚೌಡ ರೆಡ್ಡಿ ಅವರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.

  • Chinnaswamy Stampede Case – ಆರ್‌ಸಿಬಿ ಫ್ರಾಂಚೈಸಿ, ಕೆಎಸ್‌ಸಿಎ ವಿರುದ್ಧ FIR

    Chinnaswamy Stampede Case – ಆರ್‌ಸಿಬಿ ಫ್ರಾಂಚೈಸಿ, ಕೆಎಸ್‌ಸಿಎ ವಿರುದ್ಧ FIR

    ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿಕ್ಟರಿ ಸೆಲೆಬ್ರೇಷನ್ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ 11 ಮಂದಿ ಬಲಿಯಾಗಿದ್ದಾರೆ. ಈ ಪ್ರಕರಣದ (Chinnaswamy Stampede Case) ತನಿಖೆ ನಡೆಸಿರುವ ಇದೀಗ ಯುಡಿಆರ್ ಬದಲಿಗೆ ಎಫ್‌ಐಆರ್‌ (FIR) ದಾಖಲಿಸಿದ್ದಾರೆ.

    ಆರ್‌ಸಿಬಿ ಫ್ರಾಂಚೈಸಿ, ಕೆಎಸ್‌ಸಿಎ ಮತ್ತು ಡಿಎನ್‌ಎ ಇವೆಂಟ್ ಮ್ಯಾನೇನ್ಮೆಂಟ್‌ ಸಂಸ್ಥೆ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್‌ 105 (ಮಾನವ ನರಹತ್ಯೆ), BNS 106, 118(1), 118(2), 190, 132, 125A,125(B) ಅಡಿಯಲ್ಲಿ ಕೇಸ್ ದಾಖಲು ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಂಡ್ಯ | ಮದ್ವೆಗೆ ಹುಡುಗಿ ನೋಡಿಕೊಂಡು ಬೆಂಗಳೂರಿಗೆ ಹೋದವನು ಮನೆಗೆ ಹಿಂತಿರುಗಿದ್ದು ಶವವಾಗಿ…

    ಈ ಮೊದಲು ಯುಡಿಆರ್‌ (UDR) ದಾಖಲಿಸಲಾಗಿತ್ತು, ಇದು ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಈ ಬಗ್ಗೆ ʻಪಬ್ಲಿಕ್‌ ಟಿವಿʼ ಪ್ರಶ್ನೆ ಮಾಡಿತ್ತು. ಯುಡಿಆರ್ ಅಂದ್ರೆ, ಅನ್ ನ್ಯಾಚುರಲ್ ಡೆತ್ ರಿಪೋರ್ಟ್ (ಅಸಹಜ ಸಾವಿನ ವರದಿ) ಈ ಬೆನ್ನಲ್ಲೇ ಎಚ್ಚೆತ್ತ ಪೊಲೀಸ್‌ ಇಲಾಖೆ ಎಫ್‌ಐಆರ್‌ ದಾಖಲಿಸಿದೆ. ಇದನ್ನೂ ಓದಿ: ಜಮೀರ್ ಮಗ, ರಿಜ್ವಾನ್ ಮಗ, ಸಿಎಂ ಮೊಮ್ಮಗನಿಗಾಗಿ ವಿಧಾನಸೌಧದಲ್ಲಿ ಕಾರ್ಯಕ್ರಮ ಮಾಡಿದ್ರಾ: ಸರ್ಕಾರದ ವಿರುದ್ಧ ಪ್ರತಾಪ್‌ ಸಿಂಹ ಕಿಡಿ

    ಅನುಮಾನ ಮೂಡಲು ಮೂರು ಕಾರಣ
    ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತದಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯನ್ನು (KSCA) ಹೊಣೆಗಾರರನ್ನಾಗಿ ಮಾಡಿಲ್ಲ. ಪೊಲೀಸ್ ಇಲಾಖೆಯ ಅನುಮತಿ ಪಡೆಯದೇ ಸಾಮಾಜಿಕ ಜಾಲತಾಣದಲ್ಲಿ ಇವತ್ತು (ಜೂ. 4) ಆರ್‌ಸಿಬಿ ತಂಡದ ವಿಕ್ಟರಿ ಪರೇಡ್ ಇದೆ ಅಂತ ಪ್ರಕಟಣೆ ನೀಡಿ, ಆ ಮೂಲಕ ಲಕ್ಷಾಂತರ ಜನರು ಜಮಾವಣೆಯಾಗಲು ನೇರ ಕಾರಣವಾಗಿರುವ ಆರ್‌ಸಿಬಿ ಮ್ಯಾನೇಜ್ ಮೆಂಟ್ ಅನ್ನು ಹೊಣೆಗಾರರನ್ನಾಗಿಸಿಲ್ಲ. ಇನ್ನು, ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಆಟಗಾರರಿಗೆ ಸನ್ಮಾನ ಕಾರ್ಯಕ್ರಮವನ್ನು ನಿರ್ವಹಿಸುವ ಜವಾಬ್ದಾರಿ ಹೊತ್ತಿದ್ದ ಡಿಎನ್ಎ ಇವೆಂಟ್ ಮ್ಯಾನೇಜ್ ಮೆಟ್ ಸಂಸ್ಥೆಯನ್ನು ಹೊಣೆಗಾರರನ್ನಾಗಿ ಮಾಡಿಲ್ಲ. ಇದು ಅನುಮಾನಕ್ಕೆ ಕಾರಣವಾಗಿದೆ. ಇದನ್ನೂ ಓದಿ: Stampede Case | ಮೃತಪಟ್ಟ 11 ಸಂತ್ರಸ್ತರ ಕುಟುಂಬಗಳಿಗೆ RCB ಆಡಳಿತ ಮಂಡಳಿಯಿಂದ ತಲಾ 10 ಲಕ್ಷ ರೂ. ಪರಿಹಾರ ಘೋಷಣೆ

    ಏನಿದು ಪ್ರಕರಣ?
    ರಾಯಲ್ ಚಾಲೆಂಜರ್ಸ್ ಬೆಂಗಳೂರು 18 ವರ್ಷಗಳ ಬಳಿಕ ಐಪಿಎಲ್ ಚಾಂಪಿಯನ್ ಪಟ್ಟವನ್ನೇನೋ ಅಲಂಕರಿಸಿದೆ. ಆದರೆ, ಆರ್‌ಸಿಬಿ ಫ್ಯಾನ್ಸ್ ಐತಿಹಾಸಿಕ ಕ್ಷಣದ ಸಂಭ್ರಮದಲ್ಲಿ ದುರಂತ ಸಂಭವಿಸಿದೆ. 10ಕ್ಕೂ ಹೆಚ್ಚು ಅಭಿಮಾನಿಗಳು ಸಾವನ್ನಪ್ಪಿ ಸೂತಕವಾಗಿ ಆಗಿಬಿಟ್ಟಿದೆ. ಪಂಜಾಬ್ ವಿರುದ್ಧ ಬೆಂಗಳೂರು 6 ರನ್‌ಗಳ ಭರ್ಜರಿ ಜಯ ಸಾಧಿಸ್ತಿದ್ದಂತೆಯೇ ಸಿಲಿಕಾನ್ ಸಿಟಿಯಲ್ಲಿ ನಿನ್ನೆ ರಾತ್ರಿಯೇ ದೀಪಾವಳಿಯಂಥಹ ಸಂಭ್ರಮ ಇತ್ತು. ಇವತ್ತು ಇಡೀ ದಿನ ಹೆಚ್‌ಎಎಲ್ ಏರ್‌ಪೋರ್ಟ್ ರೋಡ್, ತಾಜ್ ವೆಸ್ಟ್ ಎಂಡ್ ಹೊಟೇಲ್ ರೋಡ್, ವಿಧಾನಸೌಧ, ಚಿನ್ನಸ್ವಾಮಿ ಸ್ಟೇಡಿಯಂ ರಸ್ತೆ ಸುತ್ತ ಮುತ್ತ ರೆಡ್ ಆರ್ಮಿ ಎಲ್ಲಾ ಕಡೆ ಆರ್‌ಸಿಬಿ ತಂಡಕ್ಕೆ ತಮ್ಮ ಅಭಿಮಾನ ತೋರಿದರು. ಇದನ್ನೂ ಓದಿ: ಮಗಳಿಗೆ ಮದುವೆ ಮಾಡಲು ಯೋಜಿಸಿದ್ದೆವು, ನಮ್ಮ ಕಷ್ಟ ಯಾವ ತಂದೆ-ತಾಯಿಗೂ ಬೇಡ: ಮೃತ ಟೆಕ್ಕಿ ತಂದೆ ಕಣ್ಣೀರು

    ಇವತ್ತು ದಿಢೀರನೆ ವಿಜಯೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದರಿಂದ ಅಭಿಮಾನಿಗಳ ಸುನಾಮಿಯೇ ಸೃಷ್ಟಿ ಆಯ್ತು… ಉಚಿತ ಪ್ರವೇಶ ಆಗಿದ್ದರಿಂದ ಕ್ರೀಡಾಂಗಣಕ್ಕೆ ಫ್ಯಾನ್ಸ್ ಹರಿದುಬಂದಿತ್ತು. ಗೇಟ್ ನಂಬರ್ 18, 19, 20ರ ಬಳಿ ಅಭಿಮಾನಿ ಸಾಗರ ತಡೆಯಲು ಪೊಲೀಸರು ಹೈರಾಣಾಗಿ ಹೋದರು. ಒಂದು ಹಂತದಲ್ಲಿ ಲಾಠಿಯನ್ನೂ ಬೀಸಿದರು. ಕ್ಷಣ ಕ್ಷಣಕ್ಕೂ ಆರ್‌ಸಿಬಿ ಅಭಿಮಾನಿಗಳ ಸುನಾಮಿ ಹೆಚ್ಚುತ್ತಲೇ ಇತ್ತು. ಆದರೆ, ಗೇಟ್ ನಂ.12ರ ಬಳಿ ಗೇಟ್ ತೆಗೆಯುತ್ತಿದ್ದಂತೆಯೇ ಭಾರೀ ಪ್ರಮಾಣದಲ್ಲಿ ನೂಕು ನುಗ್ಗಲು ನಡೀತು. ಒಬ್ಬರ ಮೇಲೋಬ್ಬರು ಬಿದ್ದರು, ಉಸಿರಾಡೋಕೂ ಕೂಡ ಸಾಧ್ಯವಾಗಲಿಲ್ಲ. ತಕ್ಷಣವೇ ಹತ್ತಿರದ ಬೌರಿಂಗ್ ಆಸ್ಪತ್ರೆ, ವೈದೇಹಿ ಆಸ್ಪತ್ರೆ (ಮಲ್ಯ ರಸ್ತ್ರೆ), ಮಣಿಪಾಲ್‌ಗೆ ದಾಖಲಿಸಲಾಯಿತು. ಆದರೆ, ಬೌರಿಂಗ್ ಆಸ್ಪತ್ರೆಯಲ್ಲಿ 6, ವೈದೇಹಿ ಆಸ್ಪತ್ರೆಯಲ್ಲಿ 4 ಹಾಗೂ ಮಣಿಪಾಲ ಆಸ್ಪತ್ರೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.

  • ಜಮೀರ್ ಮಗ, ರಿಜ್ವಾನ್ ಮಗ, ಸಿಎಂ ಮೊಮ್ಮಗನಿಗಾಗಿ ವಿಧಾನಸೌಧದಲ್ಲಿ ಕಾರ್ಯಕ್ರಮ ಮಾಡಿದ್ರಾ: ಸರ್ಕಾರದ ವಿರುದ್ಧ ಪ್ರತಾಪ್‌ ಸಿಂಹ ಕಿಡಿ

    ಜಮೀರ್ ಮಗ, ರಿಜ್ವಾನ್ ಮಗ, ಸಿಎಂ ಮೊಮ್ಮಗನಿಗಾಗಿ ವಿಧಾನಸೌಧದಲ್ಲಿ ಕಾರ್ಯಕ್ರಮ ಮಾಡಿದ್ರಾ: ಸರ್ಕಾರದ ವಿರುದ್ಧ ಪ್ರತಾಪ್‌ ಸಿಂಹ ಕಿಡಿ

    – ಕೊಹ್ಲಿ ಫೋನ್ ಮಾಡಿ ಇವತ್ತೇ ಬರ್ತೀನಿ ಕಾರ್ಯಕ್ರಮ ಮಾಡಿ ಅಂದಿದ್ರಾ ಎಂದು ವಾಗ್ದಾಳಿ

    ಮೈಸೂರು: ವಿರಾಟ್ ಕೊಹ್ಲಿ (Virat Kohli) ಫೋನ್ ಮಾಡಿ ಇವತ್ತೇ ಬಂದು ಬಿಡ್ತೀನಿ ಕಾರ್ಯಕ್ರಮ ಮಾಡಿ ಅಂದಿದ್ರಾ ಎಂದು ಕಾಲ್ತುಳಿತ ದುರಂತ ವಿಚಾರವಾಗಿ ಸರ್ಕಾರದ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ಕಿಡಿಕಾರಿದರು.

    ಸರ್ಕಾರದ ಬೇಜವಾಬ್ದಾರಿತನದಿಂದ ಸಂಭ್ರಮಾಚರಣೆ ಶೋಕಾಚರಣೆಯಾಗಿ ಬದಲಾಯಿತು. ಸಿದ್ದರಾಮಯ್ಯ ಬರೀ ಒರಟು ವ್ಯಕ್ತಿ ಅಂದುಕೊಂಡಿದ್ದೆ. ನೀವು ಸಂವೇದನೆ ಇಲ್ಲದ ನಿರ್ಭಾವುಕ ಮನುಷ್ಯ ಎಂಬುದು ನಿನ್ನೆ ಗೊತ್ತಾಯಿತು. ಸಿದ್ದರಾಮಯ್ಯ ನಿರ್ಭಾವುಕ ನಿರ್ಲಜ್ಜ ವ್ಯಕ್ತಿ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಮಗಳಿಗೆ ಮದುವೆ ಮಾಡಲು ಯೋಜಿಸಿದ್ದೆವು, ನಮ್ಮ ಕಷ್ಟ ಯಾವ ತಂದೆ-ತಾಯಿಗೂ ಬೇಡ: ಮೃತ ಟೆಕ್ಕಿ ತಂದೆ ಕಣ್ಣೀರು

    ಸಿಎಂ ಮೊಮ್ಮಗ, ಸಚಿವರು ಮತ್ತು ಅಧಿಕಾರಿಗಳ ಮಕ್ಕಳ ಫೋಟೋಗ್ರಾಫ್ ಆಟೋಗ್ರಾಫ್‌ಗಾಗಿ ವಿಧಾನಸೌಧದ ಮುಂದೆ ಕಾರ್ಯಕ್ರಮ ನಡೆಯಿತು. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ಗೆ ಭದ್ರತೆಯ ಪಾಠ ಮಾಡಿದ್ದ ಸಂತೋಷ್ ಲಾಡ್, ಪ್ರಿಯಾಂಕ್ ಖರ್ಗೆ ಈಗ ಎಲ್ಲಿ ಹೋದ್ರು? ಯುಪಿ ಸಿಎಂ 60 ಕೋಟಿ ಜನರನ್ನು ಸಂಭಾಳಿಸಿದ್ದಾರೆ. ನೀವು 60 ಸಾವಿರ ಜನರನ್ನು ಸಂಭಾಳಿಸಲು ಆಗಲಿಲ್ಲ. ಕಾಂಗ್ರೆಸ್‌ಗೆ ದರಿದ್ರ ಬಂದಿದೆ. ಆರ್‌ಸಿಬಿ ಗೆಲುವಲ್ಲಿ ಪ್ರಚಾರ ಪಡೆಯಲು ಜನರನ್ನು ಬಲಿ ಕೊಟ್ಟಿತು ಎಂದು ಬೇಸರ ವ್ಯಕ್ತಪಡಿಸಿದರು.

    ಡಿಸಿಎಂ ಶಾಲು, ಗ್ಲಾಸ್ ಹಾಕಿಕೊಂಡು ಪೋಸ್ ಕೊಟ್ಟಿದ್ದೆ ಕೊಟ್ಟಿದ್ದು. ಅದನ್ನು ಬಿಟ್ಟು ಯಾವ ತಯಾರಿಯೂ ನಡೆದಿರಲಿಲ್ಲ. ವಿರಾಟ್ ಕೊಹ್ಲಿ ಫೋನ್ ಮಾಡಿ ಇವತ್ತೆ ಬಂದು ಬಿಡ್ತೀನಿ ಪ್ರೋಗ್ರಾಂ ಮಾಡಿ ಅಂದಿದ್ರಾ? ನಿಮಗೆ ಮರುದಿನವೇ ಕಾರ್ಯಕ್ರಮ ಮಾಡುವ ಒತ್ತಡ ಏನಿತ್ತು ಹೇಳಿ? ರೋಡ್ ಶೋ ಮಾಡಿದ್ದರೆ ಲಕ್ಷಾಂತರ ಜನ ನೋಡುತ್ತಿದ್ದರು. ಸರ್ಕಾರಕ್ಕೆ ಮಿನಿಮಮ್ ಕಾಮನ್‌ಸೆನ್ಸ್ ಇದ್ದಿದ್ದರೆ ಈ ಘಟನೆ ನಡೆಯುತ್ತಿರಲಿಲ್ಲ ಎಂದು ತರಾಟೆ ತೆಗೆದುಕೊಂಡರು. ಇದನ್ನೂ ಓದಿ: ಕಾಲ್ತುಳಿತ ಪ್ರಕರಣದ ಹೊಣೆಯನ್ನು ಸರ್ಕಾರ ವಹಿಸಿಕೊಳ್ಳುತ್ತೆ: ಪ್ರಿಯಾಂಕ್ ಖರ್ಗೆ

    ಜಮೀರ್ ಮಗ, ರಿಜ್ವಾನ್ ಮಗ, ಮುಖ್ಯ ಕಾರ್ಯದರ್ಶಿ ಮಗಳು, ಸಿಎಂ ನಿಮ್ಮ ಮೊಮ್ಮಗನಿಗಾಗಿ ವಿಧಾನಸೌಧದ ಮುಂದೆ ಕಾರ್ಯಕ್ರಮ ಮಾಡಿದ್ರಾ? ಆಂಧ್ರದಲ್ಲಿ ನಟ ಅಲ್ಲು ಅರ್ಜುನ್‌ನನ್ನು ಕಾಲ್ತುಳಿತ ಪ್ರಕರಣದಲ್ಲೇ ಅರೆಸ್ಟ್ ಮಾಡಿದ್ರು. ಈಗ ಇಲ್ಲಿ ಸಿಎಂ ಅರೆಸ್ಟ್ ಆಗುತ್ತಾರಾ? ಡಿಸಿಎಂ ಅರೆಸ್ಟ್ ಆಗುತ್ತಾರಾ? ಗೃಹಮಂತ್ರಿ ತಲೆದಂಡ ಆಗುತ್ತಾ? ಯಾರು ಇದಕ್ಕೆ ಹೊಣೆ ಹೇಳಿ. ತಿಪ್ಪೆ ಸಾರಿಸಲು ತನಿಖೆಗೆ ಆದೇಶ ಮಾಡಲಾಗಿದೆ. ಇದರಿಂದ ಯಾವ ಪ್ರಯೋಜನ ಇಲ್ಲ. ಕರ್ನಾಟಕ ಪೊಲೀಸ್ ಇಲಾಖೆಗೆ ಕಳಂಕ ತರುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡಿದೆ ಎಂದು ಟೀಕಿಸಿದರು.

  • ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಪ್ರಕರಣ – ಮಕ್ಕಳ ಸಾವು ನೆನೆದು ಕಣ್ಣೀರಿಟ್ಟ ಡಿಕೆಶಿ

    ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಪ್ರಕರಣ – ಮಕ್ಕಳ ಸಾವು ನೆನೆದು ಕಣ್ಣೀರಿಟ್ಟ ಡಿಕೆಶಿ

    – ನನ್ನ ಹೊಟ್ಟೆ ಉರಿಯುತ್ತಿದೆ ಎಂದು ಗದ್ಗದಿತರಾದ ಡಿಸಿಎಂ

    ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತದಿಂದ (Stampede) ಉಂಟಾದ ಸಾವು-ನೋವು ನೆನೆದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ (DK Shivakumar) ಕಣ್ಣೀರಿಟ್ಟಿದ್ದಾರೆ. ಮಕ್ಕಳ ಸಾವು ನೆನೆದು ಗದ್ಗದಿತರಾಗಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳೊಂದಿಗೆ ಈ ಕುರಿತು ಮಾತನಾಡಿದ ಅವರು, ನನಗೆ ಹೊಟ್ಟೆ ಉರಿಯುತ್ತಿದೆ, ಆ ಮಕ್ಕಳ ತಾಯಿ ಮಾತನಾಡೋದನ್ನ ಸಹಿಸೋಕೆ ಆಗ್ತಾ ಇಲ್ಲ ಅಂತ ಕಣ್ಣೀರು ಹಾಕಿದ್ರು. ಇದನ್ನೂ ಓದಿ: Stampede Case | ಕಾಲ್ತುಳಿತ ಬಗ್ಗೆ ʻಪಬ್ಲಿಕ್‌ ಟಿವಿʼ ಪ್ರಶ್ನೆಗೆ ಉತ್ತರ ನೀಡದೇ ನುಣುಚಿದ KSCA

    ಇದನ್ನ ಯಾವ ಫ್ಯಾಮಿಲಿ ಕೂಡ ತಡೆದುಕೊಳ್ಳಲ್ಲ. ಪೊಲೀಸ್ ಇಲಾಖೆ (Police Department) ಕೂಡಲೇ ಹೇಳ್ತು ಇದನ್ನ ತಡೆಯಿರಿ ಅಂತ. ನಾನೂ ಕೂಡಲೇ ಮ್ಯಾನೇಜ್ಮೆಂಟ್‌ಗೆ ಹೇಳಿದೆ, ಅವರು ಹೋಗೋದಕ್ಕೂ ಕೂಡ ಜಾಗ ಇರಲಿಲ್ಲ. ಕೂಡಲೇ ಅವರನ್ನ ನಾನು ಕಾರ್‌ನಲ್ಲಿ ಕೂರಿಸಿಕೊಂಡು ಹೋದೆ, ಮಾಧ್ಯದವರು ಹೇಳಿದ ಬಳಿಕವೇ ನಮಗೆ ಗೊತ್ತಾಯ್ತು ಎಂದು ತಿಳಿಸಿದ್ರು. ಇದನ್ನೂ ಓದಿ: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಕೇಸ್‌ – ಪೊಲೀಸರನ್ನ ಸಂಪರ್ಕಿಸದೇ ವಿಕ್ಟರಿ ಪೆರೇಡ್‌ ಘೋಷಿಸಿದ್ದ RCB ಫ್ರಾಂಚೈಸಿ

    ಯಾರು ಏನೇ ಹೇಳಿದರೂ ಟೀಕೆ ಮಾಡಲಿ, ಸದನದಲ್ಲಿ ಎಲ್ಲವೂ ಬರಲಿದೆ. ಅವರವರ ಕಾಲದಲ್ಲಿ ಏನಾಯ್ತು ಅಂತ ಗೊತ್ತಿದೆ. ರಾಜ್ ಕುಮಾರ್ ಸತ್ತಾಗ ಏನಾಯ್ತು ಅಂತ ಗೊತ್ತಿದೆ. ನಾನು ಆಗ ದೆಹಲಿಯಲ್ಲಿ ಇದ್ದೆ, ಕುಮಾರಸ್ವಾಮಿ ಟೀಕೆ ಮಾಡುತ್ತಲೇ ಇರಲಿ. ಡರ್ಟಿ ಪಾಲಿಟಿಕ್ಸ್ ನಾನು ಮಾತಾಡಲ್ಲ. ಹೌದು ಯಾರೇ ಮಾಡಿದರೂ ಕೂಡ ಸರ್ಕಾರ ಜವಬ್ದಾರಿ ತೆಗೆದುಕೊಳ್ಳುತ್ತದೆ. ಇದು ಕರ್ನಾಟಕದ ಇಮೇಜ್‌, ನಮ್ಮ ಮನಸ್ಸಿಗೆ, ನಮ್ಮ ಕುಟುಂಬಕ್ಕೂ ನೋವಾಗಿದೆ. ಒಬ್ಬರು ತಾಯಿ ಹೇಳ್ತಾರೆ ಪೋಸ್ಟ್ ಮಾರ್ಟಮ್ ಮಾಡಬೇಡಿ ಅಂತ, ಎಷ್ಟು ಹೊಟ್ಟೆ ಉರಿಯಬೇಕು ಅಲ್ವ? ಈ ವಿಚಾರದಲ್ಲಿ ರಾಜಕೀಯ ಮಾಡೋದು ಬೇಡ ಅಂತ ಕಣ್ಣೀರಿಟ್ಟಿದ್ದಾರೆ.

    ಮುಂದುವರಿದು.. ಇವರು ಸಾವಿನ ಮೇಲೆಯೇ ರಾಜಕೀಯ ಮಾಡೋದು. ಬಿಜೆಪಿ, ಜೆಡಿಎಸ್‌ನ ಪೊಲಿಟಿಕಲ್ ಅಜೆಂಡಾನೇ ಅದು, 18 ವರ್ಷದ ಬಳಿಕ ಕಪ್ ಬಂದಿದೆ ಅಂದಾಗ ಸಹಜವಾಗಿ ಅಭಿಮಾನ ಇರುತ್ತದೆ. ಸಿಎಂ, ಗೃಹ ಸಚಿವರು, ಸರ್ಕಾರ ಶಾಕ್ ನಲ್ಲಿ ಇದೆ. ಇಷ್ಟು ದೊಡ್ಡ ಘಟನೆ ಆಗುತ್ತೆ ಅಂತ ಅಂದುಕೊಂಡೇ ಇರಲಿಲ್ಲ. ಈ ಪ್ರಕರಣ ಗಂಭೀರವಾಗಿ ತೆಗೆದುಕೊಂಡಿದ್ದೇವೆ. ನಾನು ಪೊಲಿಟಿಕಲ್ ಬಗ್ಗೆ, ವಿಪಕ್ಷದ ಟೀಕೆಗೆ ಮಾತನಾಡಲ್ಲ. ನಾನು ಜನರಿಗೆ ಮಾತ್ರ ಉತ್ತರ ಕೊಡ್ತೀನಿ. ಇವರೆಲ್ಲಾ ಪಾಲಿಟಿಕ್ಸ್ ಮಾಡೋ ಮಾಸ್ಟರ್ ಮೈಂಡ್ಸ್ ಅಷ್ಟೆ ಅಂತ ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಟೀಂ ಇಂಡಿಯಾದ್ದು 5 ದಿನ, ಸಿಎಸ್‌ಕೆ 3 ದಿನದ ನಂತರ ಆಚರಣೆ ಮಾಡಿದ್ರೆ ಒಂದೇ ದಿನದಲ್ಲಿ ವಿಜಯೋತ್ಸವ ಆಚರಿಸಿದ್ದು ಯಾಕೆ? – ಜೆಡಿಎಸ್‌ ಆಕ್ರೋಶ

    ಏನಿದು ಪ್ರಕರಣ?
    ರಾಯಲ್ ಚಾಲೆಂಜರ್ಸ್ ಬೆಂಗಳೂರು 18 ವರ್ಷಗಳ ಬಳಿಕ ಐಪಿಎಲ್ ಚಾಂಪಿಯನ್ ಪಟ್ಟವನ್ನೇನೋ ಅಲಂಕರಿಸಿದೆ. ಆದರೆ, ಆರ್‌ಸಿಬಿ ಫ್ಯಾನ್ಸ್ ಐತಿಹಾಸಿಕ ಕ್ಷಣದ ಸಂಭ್ರಮದಲ್ಲಿ ದುರಂತ ಸಂಭವಿಸಿದೆ. 10ಕ್ಕೂ ಹೆಚ್ಚು ಅಭಿಮಾನಿಗಳು ಸಾವನ್ನಪ್ಪಿ ಸೂತಕವಾಗಿ ಆಗಿಬಿಟ್ಟಿದೆ. ಪಂಜಾಬ್ ವಿರುದ್ಧ ಬೆಂಗಳೂರು 6 ರನ್‌ಗಳ ಭರ್ಜರಿ ಜಯ ಸಾಧಿಸ್ತಿದ್ದಂತೆಯೇ ಸಿಲಿಕಾನ್ ಸಿಟಿಯಲ್ಲಿ ನಿನ್ನೆ ರಾತ್ರಿಯೇ ದೀಪಾವಳಿಯಂಥಹ ಸಂಭ್ರಮ ಇತ್ತು. ಇವತ್ತು ಇಡೀ ದಿನ ಹೆಚ್‌ಎಎಲ್ ಏರ್‌ಪೋರ್ಟ್ ರೋಡ್, ತಾಜ್ ವೆಸ್ಟ್ ಎಂಡ್ ಹೊಟೇಲ್ ರೋಡ್, ವಿಧಾನಸೌಧ, ಚಿನ್ನಸ್ವಾಮಿ ಸ್ಟೇಡಿಯಂ ರಸ್ತೆ ಸುತ್ತ ಮುತ್ತ ರೆಡ್ ಆರ್ಮಿ ಎಲ್ಲಾ ಕಡೆ ಆರ್‌ಸಿಬಿ ತಂಡಕ್ಕೆ ತಮ್ಮ ಅಭಿಮಾನ ತೋರಿದರು.

    ಇವತ್ತು ದಿಢೀರನೆ ವಿಜಯೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದರಿಂದ ಅಭಿಮಾನಿಗಳ ಸುನಾಮಿಯೇ ಸೃಷ್ಟಿ ಆಯ್ತು… ಉಚಿತ ಪ್ರವೇಶ ಆಗಿದ್ದರಿಂದ ಕ್ರೀಡಾಂಗಣಕ್ಕೆ ಫ್ಯಾನ್ಸ್ ಹರಿದುಬಂದಿತ್ತು. ಗೇಟ್ ನಂಬರ್ 18, 19, 20ರ ಬಳಿ ಅಭಿಮಾನಿ ಸಾಗರ ತಡೆಯಲು ಪೊಲೀಸರು ಹೈರಾಣಾಗಿ ಹೋದರು. ಒಂದು ಹಂತದಲ್ಲಿ ಲಾಠಿಯನ್ನೂ ಬೀಸಿದರು. ಕ್ಷಣ ಕ್ಷಣಕ್ಕೂ ಆರ್‌ಸಿಬಿ ಅಭಿಮಾನಿಗಳ ಸುನಾಮಿ ಹೆಚ್ಚುತ್ತಲೇ ಇತ್ತು. ಆದರೆ, ಗೇಟ್ ನಂ.12ರ ಬಳಿ ಗೇಟ್ ತೆಗೆಯುತ್ತಿದ್ದಂತೆಯೇ ಭಾರೀ ಪ್ರಮಾಣದಲ್ಲಿ ನೂಕು ನುಗ್ಗಲು ನಡೀತು. ಒಬ್ಬರ ಮೇಲೋಬ್ಬರು ಬಿದ್ದರು, ಉಸಿರಾಡೋಕೂ ಕೂಡ ಸಾಧ್ಯವಾಗಲಿಲ್ಲ. ತಕ್ಷಣವೇ ಹತ್ತಿರದ ಬೌರಿಂಗ್ ಆಸ್ಪತ್ರೆ, ವೈದೇಹಿ ಆಸ್ಪತ್ರೆ (ಮಲ್ಯ ರಸ್ತ್ರೆ), ಮಣಿಪಾಲ್‌ಗೆ ದಾಖಲಿಸಲಾಯಿತು. ಆದರೆ, ಬೌರಿಂಗ್ ಆಸ್ಪತ್ರೆಯಲ್ಲಿ 6, ವೈದೇಹಿ ಆಸ್ಪತ್ರೆಯಲ್ಲಿ 4 ಹಾಗೂ ಮಣಿಪಾಲ ಆಸ್ಪತ್ರೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.

  • ಅನ್ ಕಂಟ್ರೋಲ್ಡ್ ಕ್ರೌಡ್ ಆಯ್ತು: ಕಾಲ್ತುಳಿತದ ಬಗ್ಗೆ ಡಿಕೆಶಿ ರಿಯಾಕ್ಷನ್

    ಅನ್ ಕಂಟ್ರೋಲ್ಡ್ ಕ್ರೌಡ್ ಆಯ್ತು: ಕಾಲ್ತುಳಿತದ ಬಗ್ಗೆ ಡಿಕೆಶಿ ರಿಯಾಕ್ಷನ್

    – ಅಭಿಮಾನ ಇರಲಿ, ಆದರೆ ಜೀವಕ್ಕಿಂತ ದೊಡ್ಡದಲ್ಲ.. ಸುರಕ್ಷಿತವಾಗಿರಿ ಎಂದ ಡಿಸಿಎಂ

    ಬೆಂಗಳೂರು: ಅನ್ ಕಂಟ್ರೋಲ್ಡ್ ಕ್ರೌಡ್ ಆಯ್ತು. ಹೀಗಾಗಿ, ತೆರೆದ ವಾಹನದಲ್ಲಿ ವಿಜಯೋತ್ಸವ ಮೆರವಣಿಗೆ ರದ್ದು ಮಾಡಿದ್ದೆವು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ತಿಳಿಸಿದರು.

    ಕಾಲ್ತುಳಿತ ದುರಂತ ಕುರಿತು ಮಾತನಾಡಿದ ಡಿಕೆಶಿ, ಪರಿಸ್ಥಿತಿ ಬಗ್ಗೆ ವಿಮಾನ ನಿಲ್ದಾಣದಲ್ಲೇ ಗಮನಿಸಿದ್ದೆವು. ಅದಕ್ಕೆ ನಾವು ಮೆರವಣಿಗೆಯನ್ನು ರದ್ದು ಮಾಡಿ, ಕ್ಲೋಸ್ ವಾಹನದಲ್ಲಿ ಆಟಗಾರರನ್ನು ಕರೆತಂದೆವು. ಆದರೂ, ಅವರ ಮನವಿ ಇತ್ತು. ವಿಧಾನಸೌಧದಿಂದಲಾದರೂ ಬರಬೇಕು ಅಂತ. ಮಳೆ ಬಂದು ತಕ್ಷಣ ಕ್ರೌಡ್ ಅನ್ ಕಂಟ್ರೋಲ್ ಆಯಿತು ಎಂದು ವಿವರಿಸಿದರು. ಇದನ್ನೂ ಓದಿ: ಆರ್‌ಸಿಬಿ ವಿಜಯೋತ್ಸವದ ವೇಳೆ ಯಡವಟ್ಟು – ಕಾಲ್ತುಳಿತಕ್ಕೆ 10 ಆರ್‌ಸಿಬಿ ಫ್ಯಾನ್ಸ್‌ ದುರ್ಮರಣ

    ಇಲ್ಲೂ ಕೂಡ ಅನೇಕ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಮೆರವಣಿಗೆ ಇತ್ತು. 1 ಗಂಟೆಗೂ ಹೆಚ್ಚು ಸಮಯ ಕಾರ್ಯಕ್ರಮ ಮಾಡುವುದಿತ್ತು. ಆದರೆ, 10-15 ನಿಮಿಷದಲ್ಲಿ ಕಾರ್ಯಕ್ರಮ ಮುಗಿಸಿದೆವು ಎಂದು ತಿಳಿಸಿದರು.

    ಸಾವು-ನೋವಿನ ಬಗ್ಗೆ ಕೇಳಿದ ಪ್ರಶ್ನೆಗೆ, ನಾನು ಕೂಡ ಆಸ್ಪತ್ರೆಗೆ ಹೋಗ್ತೀನಿ. ಅಧಿಕೃತ ಸಾವಿನ ಮಾಹಿತಿ ತೆಗೆದುಕೊಳ್ಳಬೇಕು ಎಂದರು. ಭದ್ರತಾ ವೈಫಲ್ಯದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರ ನೀಡದೇ ಡಿಸಿಎಂ ತೆರಳಿದರು. ಇದನ್ನೂ ಓದಿ: ಸರ್ಕಾರದ ಪ್ರಚಾರದ ಹುಚ್ಚಿಗೆ ಜನ ಬಲಿಯಾಗಿದ್ದಾರೆ: ವಿಜಯೇಂದ್ರ ಆಕ್ರೋಶ

    ಕಾಲ್ತುಳಿತ ದುರಂತದ ಬಗ್ಗೆ ಎಕ್ಸ್ ಪೋಸ್ಟ್ ಹಾಕಿರುವ ಡಿಸಿಎಂ, ಆರ್‌ಸಿಬಿಯ ಐಪಿಎಲ್ ಗೆಲುವಿನ ಸಂಭ್ರಮಾಚರಣೆಗೆ ಸಾಕ್ಷಿಯಾಗಬೇಕಿದ್ದ ಜನರು ದುರಂತಕ್ಕೆ ಒಳಗಾಗಿ, ಮೃತಪಟ್ಟಿರುವುದು ತೀವ್ರ ನೋವು ಮತ್ತು ಆಘಾತ ತಂದಿದೆ. ಮೃತರಿಗೆ ನನ್ನ ಸಂತಾಪಗಳು. ಅವರ ಕುಟುಂಬಕ್ಕೆ ನನ್ನ ಸಾಂತ್ವನಗಳು. ಅಭಿಮಾನ ಇರಲಿ, ಆದರೆ ಜೀವಕ್ಕಿಂತ ದೊಡ್ಡದಲ್ಲ. ದಯವಿಟ್ಟು ಎಲ್ಲರೂ ಸುರಕ್ಷಿತವಾಗಿರಿ ಎಂದು ಮನವಿ ಮಾಡಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.

  • ಆರ್‌ಸಿಬಿ ಸ್ಟಾರ್‌ ಕೊಹ್ಲಿಗೆ ಕನ್ನಡದ ಬಾವುಟ ನೀಡಿದ ಡಿಕೆಶಿ – ಧ್ವಜ ಹಾರಿಸಿ ಸಂಭ್ರಮಿಸಿದ ವಿರಾಟ್‌

    ಆರ್‌ಸಿಬಿ ಸ್ಟಾರ್‌ ಕೊಹ್ಲಿಗೆ ಕನ್ನಡದ ಬಾವುಟ ನೀಡಿದ ಡಿಕೆಶಿ – ಧ್ವಜ ಹಾರಿಸಿ ಸಂಭ್ರಮಿಸಿದ ವಿರಾಟ್‌

    ಬೆಂಗಳೂರು: 18ನೇ ಐಪಿಎಲ್‌ (IPL 2025) ಆವೃತ್ತಿಯ ಟ್ರೋಫಿ ಗೆದ್ದ ಖುಷಿಯಲ್ಲಿ ಆರ್‌ಸಿಬಿ (RCB) ತಂಡ ಬುಧವಾರ ತವರಿಗೆ ಆಗಮಿಸಿದೆ. ಟ್ರೋಫಿ ಜಯಿಸಿದ ಆಟಗಾರರನ್ನು ಅಭಿಮಾನಿಗಳು ಸಂಭ್ರಮದಿಂದ ಬರಮಾಡಿಕೊಂಡರು.

    ಆರ್‌ಸಿಬಿ ತಂಡದ ಆಟಗಾರರಿಗೆ ಹೆಎಎಲ್‌ ವಿಮಾನ ನಿಲ್ದಾಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ (D.K.Shivakumar) ಸ್ವಾಗತ ಕೋರಿದರು. ಈ ವೇಳೆ, ಆರ್‌ಸಿಬಿ ಸ್ಟಾರ್‌ ವಿರಾಟ್‌ ಕೊಹ್ಲಿಗೆ (Virat Kohli) ಕನ್ನಡದ ಬಾವುಟ ನೀಡಿದರು. ಕನ್ನಡ ಧ್ವಜ ಹಾರಿಸುವ ಮೂಲಕ ವಿರಾಟ್‌ ಖುಷಿಪಟ್ಟರು. ಇದನ್ನೂ ಓದಿ: ಬೆಂಗಳೂರಿಗೆ ʻರಾಯಲ್‌ʼ ಆಗಿ ಎಂಟ್ರಿ ಕೊಟ್ಟ ಆರ್‌ಸಿಬಿ ತಂಡ

    ಇಂದು ವಿಧಾನಸೌಧದ ಬಳಿ ಸಂಭ್ರಮಾಚರಣೆ ಸಮಾರಂಭ ಇದೆ. ಈ ಹಿನ್ನೆಲೆಯಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಆಟಗಾರರು ಬೆಂಗಳೂರಿಗೆ ಆಗಮಿಸಿದ್ದಾರೆ. ಅವರನ್ನು ಸ್ವಾಗತಿಸಲು ಅಭಿಮಾನಿಗಳು ರಸ್ತೆಯುದ್ದಕ್ಕೂ ಕಿಕ್ಕಿರಿದು ಜಮಾಯಿಸಿದ್ದಾರೆ.

    ರಸ್ತೆಯದ್ದಕ್ಕೂ ಅಭಿಮಾನಿಗಳ ಸಾಗರವೇ ನೆರೆದಿದೆ. ರಜತ್‌ ಪಾಟೀದಾರ್‌ ಪಡೆಗೆ ಗ್ರ್ಯಾಂಡ್‌ ವೆಲ್‌ಕಮ್‌ ಕೋರಲು ಫ್ಯಾನ್ಸ್‌ ಕಾತರರಾಗಿದ್ದಾರೆ. ಇದನ್ನೂ ಓದಿ: ಆರ್‌ಸಿಬಿ ವಿಜಯೋತ್ಸವ – ಟಿಕೆಟ್‌, ಪಾಸ್‌ ಹೊಂದಿದವರಿಗೆ ಮಾತ್ರ ಚಿನ್ನಸ್ವಾಮಿಗೆ ಎಂಟ್ರಿ

    ಮಂಗಳವಾರ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಂಜಾಬ್‌ ವಿರುದ್ಧದ ಫೈನಲ್‌ ಪಂದ್ಯದಲ್ಲಿ ಆರ್‌ಸಿಬಿ 6 ರನ್‌ಗಳ ರೋಚಕ ಜಯ ಸಾಧಿಸಿತು. ಆ ಮೂಲಕ 18 ವರ್ಷಗಳ ಬಳಿಕ ಚೊಚ್ಚಲ ಐಪಿಎಲ್‌ ಟ್ರೋಫಿ ಎತ್ತಿ ಹಿಡಿಯಿತು. ಆರ್‌ಸಿಬಿ ಅಭಿಮಾನಿಗಳ ಪಾಲಿಗೆ ಇದು ನಿಜಕ್ಕೂ ಐತಿಹಾಸಿಕ ಕ್ಷಣವಾಗಿತ್ತು. ವಿರಾಟ್‌ ಕೊಹ್ಲಿಗೂ ಈ ಗೆಲುವು ವಿಶೇಷವಾಗಿತ್ತು.

  • ಶಾಲೆಗಳ ಸಹಯೋಗದಲ್ಲಿ ಬೆಂಗಳೂರು ಹವಾಮಾನ ಕಾರ್ಯಯೋಜನೆ ಕ್ಲಬ್‌ಗಳ ರಚನೆ: ಡಿ.ಕೆ ಶಿವಕುಮಾರ್

    ಶಾಲೆಗಳ ಸಹಯೋಗದಲ್ಲಿ ಬೆಂಗಳೂರು ಹವಾಮಾನ ಕಾರ್ಯಯೋಜನೆ ಕ್ಲಬ್‌ಗಳ ರಚನೆ: ಡಿ.ಕೆ ಶಿವಕುಮಾರ್

    ಬೆಂಗಳೂರು: ಮಕ್ಕಳಲ್ಲಿ ಎಳೆ ವಯಸ್ಸಿನಲ್ಲಿ ಪರಿಸರ, ಹಸಿರು ಇಂಧನ, ಸ್ವಚ್ಛತೆ, ನೀರಿನ ಸಂರಕ್ಷಣೆ, ಗುಣಮಟ್ಟದ ಗಾಳಿ ಬಗ್ಗೆ ಅರಿವು ಮೂಡಿಸಲು ಜಿಬಿಎ ವ್ಯಾಪ್ತಿಯ ಶಾಲೆಗಳ ಸಹಯೋಗದಲ್ಲಿ ಬೆಂಗಳೂರು ಹವಾಮಾನ ಕಾರ್ಯಯೋಜನೆ ಕ್ಲಬ್ ರಚನೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D K Shivakumar) ಹೇಳಿದರು.

    ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಅವರು, ಜೂ. 5ರಂದು ವಿಶ್ವ ಪರಿಸರ ದಿನ ಹಿನ್ನೆಲೆಯಲ್ಲಿ ಬೆಂಗಳೂರು (Bengaluru) ಹವಾಮಾನ ಕಾರ್ಯಯೋಜನೆ(Climate action plan) ಕ್ಲಬ್ ಸ್ಥಾಪಿಸಲಾಗುತ್ತಿದೆ. ಇದರಲ್ಲಿ ಓರ್ವ ಶಿಕ್ಷಕರು ಹಾಗೂ ಕನಿಷ್ಠ 25 ವಿದ್ಯಾರ್ಥಿಗಳನ್ನು ಒಳಗೊಂಡಂತೆ ಕ್ಲಬ್ ರಚಿಸಲಾಗುವುದು. ಇವರಿಗೆ ಅಗತ್ಯವಾದ ಪ್ರಮಾಣಪತ್ರ, ಬ್ಯಾಡ್ಜ್‌ಗಳನ್ನು ನಾವು ನೀಡುತ್ತೇವೆ. ದೇಶದಲ್ಲಿ ಮುಂಬೈ, ಚೆನ್ನೈ ಹಾಗೂ ಬೆಂಗಳೂರು ಮೂರು ನಗರಗಳು ಹವಾಮಾನ ಕಾರ್ಯ ಯೋಜನೆಯಲ್ಲಿ ತೊಡಗಿಸಿಕೊಂಡಿವೆ. ಇದರ ಭಾಗವಾಗಿ ನಾವು ಹೊಸ ಯೋಜನೆಗಳನ್ನು ಹಮ್ಮಿಕೊಂಡಿದ್ದೇವೆ ಎಂದರು. ಇದನ್ನೂ ಓದಿ: ರಾಕೇಶ್‌ ಪೂಜಾರಿ ನಿವಾಸಕ್ಕೆ ರಿಷಬ್‌ ಶೆಟ್ಟಿ ದಂಪತಿ ಭೇಟಿ – ತಾಯಿ, ತಂಗಿಗೆ ಸಾಂತ್ವನ ಹೇಳಿದ ನಟ

    ಜಿಬಿಎ ವ್ಯಾಪ್ತಿಯಲ್ಲಿ 6 ಸಾವಿರ ಶಾಲೆಗಳಿದ್ದು, ಇದರಲ್ಲಿ 4500 ಖಾಸಗಿ ಹಾಗೂ 1,500 ಸರ್ಕಾರಿ ಶಾಲೆಗಳಿವೆ. ಈ ಎಲ್ಲಾ ಶಾಲೆಗಳು ಈ ಯೋಜನೆಯಲ್ಲಿ ಭಾಗವಹಿಸಲು ಮನವಿ ಮಾಡಲಾಗಿದೆ. ಇದಕ್ಕೆ ಈಗಾಗಲೇ 650 ಶಾಲೆಗಳು ಹಾಗೂ ಪಿಯು ಕಾಲೇಜುಗಳು ಒಪ್ಪಿಗೆ ನೀಡಿವೆ. ಈಗಾಗಲೇ 18 ಕ್ಲಬ್ ಗಳು ರಚನೆಯಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದರು. ಇದನ್ನೂ ಓದಿ: ಆಪರೇಷನ್ ಸಿಂಧೂರ | ಜೂ.9ರಂದು ಸರ್ವಪಕ್ಷಗಳ ನಿಯೋಗ ಭೇಟಿಯಾಗಲಿದ್ದಾರೆ ಪ್ರಧಾನಿ ಮೋದಿ

    ಈ ಕ್ಲಬ್‌ಗಳನ್ನು ರಚಿಸಲು ಸಾರ್ವಜನಿಕ ಸಂಘ ಸಂಸ್ಥೆಗಳಿಗೂ ಅವಕಾಶ ನೀಡಲಾಗುವುದು. ಇವುಗಳ ನೋಂದಣಿಗೆ 6ರಂದು ವೆಬ್‌ಸೈಟ್ ಅನಾವರಣಗೊಳಿಸಲಾಗುವುದು. ಇದರಲ್ಲಿ ಭಾಗವಹಿಸುವವರಿಗೆ ಬ್ಲೂ, ಗ್ರೀನ್ ಅವಾರ್ಡ್‌ಗಳನ್ನು ನೀಡಲಾಗುವುದು. ಈ ಕ್ಲಬ್‌ಗಳು ಹಸಿರು ಇಂಧನ, ಘನ ತ್ಯಾಜ್ಯ ನಿರ್ವಹಣೆ, ಗಾಳಿ ಗುಣಮಟ್ಟ, ತ್ಯಾಜ್ಯ ನೀರು, ಮಳೆನೀರು, ನಗರ ಯೋಜನೆ, ವಿಪತ್ತು ನಿರ್ವಹಣೆ ವಿಚಾರಗಳು ಒಳಗೊಂಡಿರುತ್ತದೆ. ಈ ವಿಚಾರಗಳ ಮೇಲೆ ಪ್ರಶಸ್ತಿಯನ್ನು ನೀಡಲಾಗುವುದು. 175 ಮಂದಿ, ಸಂಘ ಸಂಸ್ಥೆಗಳು ಈ ಪ್ರಶಸ್ತಿಗೆ ಆಯ್ಕೆಯಾಗಿವೆ. ಈ ಪ್ರಶಸ್ತಿ ಆಯ್ಕೆಗೆ 15 ತೀರ್ಪುಗಾರರ ತಂಡವನ್ನು ನೇಮಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಕಲ್ಲಡ್ಕ ಪ್ರಭಾಕರ್ ಭಟ್ ಸೇರಿ 15 ಜನರ ವಿರುದ್ಧ ಎಫ್‌ಐಆರ್; ಕೇಸ್ ವಾಪಸ್ ಪಡೆಯಲು ಬಿಜೆಪಿ ಒತ್ತಾಯ

    ಜೂನ್ 6ರಂದು ಸಂಜೆ ನೆಹರೂ ತಾರಾಲಯದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಂದು ವಸ್ತು ಪ್ರದರ್ಶನವನ್ನು ನಾವು ಆಯೋಜಿಸಿದ್ದೇವೆ. ಮುಂದಿನ ದಿನಗಳಲ್ಲಿ ಈ ಕ್ಲಬ್ ಮೂಲಕ ರಸಪ್ರಶ್ನೆ, ಚರ್ಚಾ ಸ್ಪರ್ಧೆ ಆಯೋಜಿಸಿ, ಮಕ್ಕಳಲ್ಲಿ ಈ ವಿಚಾರವಾಗಿ ಜಾಗೃತಿ ಮೂಡಿಸಲು ಹಮ್ಮಿಕೊಳ್ಳಲಾಗುವುದು.ನಾವು ವಿದ್ಯುತ್ ಚಾಲಿತ ವಾಹನಗಳಿಗೆ ಆದ್ಯತೆ ನೀಡಲಾಗುತ್ತಿದ್ದು, ಸಾರಿಗೆ ಇಲಾಖೆಯಲ್ಲಿ ಸಾವಿರಾರು ಬಸ್ ಖರೀದಿ ಮಾಡಲಾಗಿದೆ. ಇನ್ನು ಎಲೆಕ್ಟ್ರಿಕ್ ವಾಹನ ಖರೀದಿಗೆ ಪ್ರೋತ್ಸಾಹ ನೀಡಲಾಗುತ್ತಿವೆ. ನಾನು ಬೆಂಗಳೂರು ಸಚಿವನಾದ ಬಳಿಕ ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಶಾಲೆಗಳ ಸಹಯೋಗದಲ್ಲಿ ಮಕ್ಕಳ ಕೈಯಲ್ಲಿ ಮರ ಬೆಳೆಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

    ಜೂನ್ 6ರಂದು ಸ್ವಚ್ಛ ಬೆಂಗಳೂರು ಯೋಜನೆ ಹಾಗೂ ಕಾರ್ಯಯೋಜನೆ ಘೋಷಣೆ ಮಾಡಲಾಗುವುದು. ಬೆಂಗಳೂರಿನಲ್ಲಿರುವ ಕಸವನ್ನು ಒಂದು ಬಾರಿಗೆ ತೆಗೆಯಬೇಕು ಎಂದು ತೀರ್ಮಾನಿಸಲಾಗಿದೆ. ಕಸವಿರುವ ಜಾಗದ ಬಗ್ಗೆ ಸಾರ್ವಜನಿಕರು ಜಿಬಿಎ ಅಧಿಕಾರಿಗಳಿಗೆ ಮಾಹಿತಿ ನೀಡಬಹುದು. ಈ ಮಾಹಿತಿ ಬಂದ ನಂತರ ಅಧಿಕಾರಿಗಳು ಕಸ ವಿಲೇವಾರಿ ಮಾಡಲಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: 2 ಜಿಲ್ಲೆಗಳ ರೈತರ ಸಭೆ ಕರೆದು ಚರ್ಚಿಸಿ, ಪ್ರಕರಣ ವಾಪಸ್ ಪಡೆಯಿರಿ: ಆರ್ ಅಶೋಕ್ ಆಗ್ರಹ

    ಇನ್ನು ರಸ್ತೆ ಬದಿಯಲ್ಲಿ ಕಸ ತಂದು ಸುರಿಯುವುದನ್ನು ತಪ್ಪಿಸಲು ಹೆಚ್ಚು ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗುವುದು. ಇನ್ನು ಬೆಂಗಳೂರಿನಲ್ಲಿ ಪ್ಲಾಸ್ಟಿಕ್ ನಿಷೇಧಕ್ಕೆ ಕ್ರಮ ಕೈಗೊಂಡಿದ್ದೇವೆ. 2023-24ನೇ ಸಾಲಿನಲ್ಲಿ 19 ಹೊಸ ಪಾರ್ಕ್ ಅಭಿವೃದ್ಧಿ ಮಾಡಿ, 47 ಪಾರ್ಕ್‌ಗಳನ್ನು ಮೇಲ್ದರ್ಜೆಗೆ ಏರಿಸಿದ್ದೇವೆ. 19 ಕೆರೆಗಳ ಅಭಿವೃದ್ಧಿ ಮಾಡಿ, 40 ಕೆರೆಗಳಿಗೆ ಬೇಲಿ ಹಾಕಲಾಗಿದೆ. ಇದಕ್ಕಾಗಿ 34.50 ಕೋಟಿ ರೂ. ವೆಚ್ಚ ಮಾಡಲಾಗಿದೆ. ಕೆರೆಗಳ ಅಭಿವೃದ್ಧಿಗೆ 55 ಕೋಟಿ ರೂ. ವೆಚ್ಚ ಮಾಡುತ್ತಿದ್ದು, ಜುಲೈ ವೇಳೆಗೆ 4 ಕೆರೆಗಳ ಅಭಿವೃದ್ಧಿ ಪೂರ್ಣಗೊಳ್ಳಲಿದೆ. 2025-26ನೇ ಸಾಲಿನಲ್ಲಿ ಉದ್ಯಾನವನಗಳ ಮೇಲ್ದರ್ಜೆಗೆ ಏರಿಸಲು 80 ಕೋಟಿ ರೂ. ಹಣ ಮೀಸಲಿಡಲಾಗಿದೆ ಎಂದು ಮಾಹಿತಿ ನೀಡಿದರು.

    ಕೆರೆಗಳ ಅಭಿವೃದ್ಧಿಗೆ 250 ಕೋಟಿ ಮೀಸಲಿಡಲಾಗಿದೆ. ನ್ಯಾಯಾಲಯದ ನಿರ್ದೇಶನ ಮೇರೆಗೆ ನಗರದಲ್ಲಿ ಮರಗಣತಿ ಮಾಡಲು ತೀರ್ಮಾನಿಸಿದ್ದು, ಮಹದೇವಪುರ ಹಾಗೂ ಬೊಮ್ಮನಹಳ್ಳಿಯಲ್ಲಿ ಪ್ರಾಯೋಗಿಕ ಯೋಜನೆ ಮಾಡಲಾಗಿದೆ. ಪ್ರತಿ ವಿಧಾನ ಸಭಾ ಕ್ಷೇತ್ರದಲ್ಲಿ ಒಂದೊಂದು ವಾರ್ಡ್‌ಗೆ 1 ಕೋಟಿ ರೂ. ಮೀಸಲಿಟ್ಟು ಬೆಂಗಳೂರು ಗ್ರೀನ್ ವಾರ್ಡ್ ಆಗಿ ಮಾಡಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ನಿರ್ಮಾಪಕರಿಗೆ ಕತೆ ಹೇಳಿ ವಾಪಸ್ ಆಗುತ್ತಿದ್ದಾಗ ಹೃದಯಾಘಾತ – ತಮಿಳು ನಿರ್ದೇಶಕ ವಿಕ್ರಂ ಸುಗುಮಾರನ್ ನಿಧನ

    ಈ ಕ್ಲಬ್ ಗಳ ಕಾರ್ಯಚಟುವಟಿಕೆ ಮೇಲ್ವಿಚಾರಣೆ ಇದರ ಮೇಲ್ವಿಚಾರಣೆಗೆ ಅಧಿಕಾರಿಗಳ ತಂಡ ನೇಮಿಸಲಾಗಿದೆ. ವಿಶೇಷ ಆಯುಕ್ತರು ಇದರ ಭಾಗವಾಗಿರುತ್ತಾರೆ. ಐಎಎಸ್ ಅಧಿಕಾರಿ ಪ್ರೀತಿ ಗೆಹ್ಲೋಟ್ ಅವರ ತಂಡ ಕೂಡ ಇದರಲ್ಲಿ ಕಾರ್ಯನಿರ್ವಹಿಸುತ್ತಿದೆ. ಈಗಾಗಲೇ ನೂರಾರು ಶಾಲೆಗಳನ್ನು ನೋಂದಣಿ ಮಾಡಲಾಗಿದೆ ಎಂದರು.

    ವಾಹನಗಳ ಹೊಗೆಯಿಂದ ವಾಯುಮಾಲಿನ್ಯ ಹೆಚ್ಚುತ್ತಿರುವ ಬಗ್ಗೆ ಮಾತನಾಡಿದ ಅವರು, ಇದಕ್ಕಾಗಿ ನಾವು ಸಾರಿಗೆ ಇಲಾಖೆ ಒಳಪಡಿಸಿಕೊಂಡಿದ್ದೇವೆ. ಮೊದಲು ಸಾರಿಗೆ ಇಲಾಖೆ ಬಸ್‌ಗಳ ಸಮಸ್ಯೆ ಬಗೆಹರಿಸಲಿದ್ದೇವೆ. ಎಲೆಕ್ಟ್ರಿಕ್ ವಾಹನಗಳಿಗೆ ಪ್ರೋತ್ಸಾಹ ನೀಡುತ್ತಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ರಾಮನಗರ-ತುಮಕೂರು ಮಧ್ಯೆ ಹೇಮಾವತಿ ಕಲಹ – ಸರ್ವಪಕ್ಷ ಸಭೆ ಕರೆಯಲು ಬಿಜೆಪಿ ಆಗ್ರಹ

    ಮರಗಣತಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ನಾವು 6.50 ಲಕ್ಷ ಮರಗಳನ್ನು ಗುರುತಿಸಿದ್ದೇವೆ. ಕಸದ ಸಮಸ್ಯೆ ಹೆಚ್ಚಾಗಿದ್ದು, ಮಾರ್ಷಲ್‌ಗಳು ಏನು ಮಾಡುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಮಾರ್ಷಲ್‌ಗಳು ಅವರ ಕೆಲಸ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ 1.50 ಕೋಟಿ ಜನಸಂಖ್ಯೆ ಇದೆ. ಇಲ್ಲಿ ಸಾರ್ವಜನಿಕರ ಸಹಕಾರ ಮುಖ್ಯ. ಅವರಲ್ಲಿ ಜಾಗೃತಿ ಮೂಡಿಸಬೇಕು. ಕಸ ಎಸೆದರೆ ವಿಧಿಸುವ ದಂಡ ಏರಿಕೆ ಮಾಡಲು ಚಿಂತಿಸುತ್ತಿದ್ದೇವೆ. ಖಾಲಿ ನಿವೇಶನಗಳ ಮಾಲೀಕರಿಗೆ ತಮ್ಮ ನಿವೇಶನ ಸ್ವಚ್ಛವಾಗಿಟ್ಟುಕೊಳ್ಳಲು ಸೂಚಿಸಲಾಗುವುದು. ನಗರದಲ್ಲಿ ನಿತ್ಯ 6 ಸಾವಿರ ಟನ್ ಕಸ ಉತ್ಪತ್ತಿಯಾಗುತ್ತಿದೆ ಎಂದರು. ಇದನ್ನೂ ಓದಿ: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಕ್ಷಿಣ ಆಫ್ರಿಕಾದ ದೈತ್ಯ ಬ್ಯಾಟರ್‌ ಕ್ಲಾಸೆನ್‌ ಗುಡ್‌ಬೈ

    ಜಿಬಿಎ ಬೌಂಡರಿ ನಿಗದಿ ಯಾವಾಗ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈಗ ಇರುವ ವ್ಯಾಪ್ತಿಯನ್ನೇ ಮಾಡಲು ಅಧಿಸೂಚನೆ ಹೊರಡಿಸಿದ್ದೇವೆ. ಇದು ಅಂತಿಮವಾಗಿದೆ. ಈ ವಿಚಾರವಾಗಿ ಸಚಿವರು ಹಾಗೂ ಸರ್ವಪಕ್ಷ ಶಾಸಕರು ಅನೇಕ ಸಲಹೆ ನೀಡಿದ್ದಾರೆ. ಈ ವಿಚಾರವಾಗಿ ಕೆಲವರ ಬಗ್ಗೆ ಮಾತನಾಡಬೇಕಿದ್ದು, ಎರಡು 3 ದಿನಗಳಲ್ಲಿ ಎಷ್ಟು ಪಾಲಿಕೆ ಮಾಡಬೇಕು ಎಂದು ತೀರ್ಮಾನಿಸಿ, ಇದಕ್ಕೆ ಅಂತಿಮ ರೂಪ ನೀಡಬೇಕು. ಈ ಪಾಲಿಕೆಗಳ ಚುನಾವಣೆ ನಡೆಸಬೇಕು. ನಂತರ ಯಾವ ಯಾವ ಪ್ರದೇಶಗಳನ್ನು ಸೇರಿಸಿಕೊಳ್ಳಬೇಕು ಎಂದು ತೀರ್ಮಾನಿಸಲಾಗುವುದು ಎಂದು ಹೇಳಿದರು.

  • 2 ಜಿಲ್ಲೆಗಳ ರೈತರ ಸಭೆ ಕರೆದು ಚರ್ಚಿಸಿ, ಪ್ರಕರಣ ವಾಪಸ್ ಪಡೆಯಿರಿ: ಆರ್ ಅಶೋಕ್ ಆಗ್ರಹ

    2 ಜಿಲ್ಲೆಗಳ ರೈತರ ಸಭೆ ಕರೆದು ಚರ್ಚಿಸಿ, ಪ್ರಕರಣ ವಾಪಸ್ ಪಡೆಯಿರಿ: ಆರ್ ಅಶೋಕ್ ಆಗ್ರಹ

    – ಹಿಂದೂ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಲು ಟಾಸ್ಕ್ ಫೋರ್ಸ್ ರಚನೆ; ಕಿಡಿ

    ಬೆಂಗಳೂರು: ಹೇಮಾವತಿ ನೀರು ಹಂಚಿಕೆ ವಿಚಾರದಲ್ಲಿ ಸರ್ಕಾರ ಎಲ್ಲ ರೈತರನ್ನು ಹಾಗೂ ಸರ್ವಪಕ್ಷಗಳ ಪ್ರಮುಖರನ್ನು ಕರೆದು ಸಭೆ ಮಾಡಿ ಚರ್ಚಿಸಬೇಕು. ರೈತರ ವಿರುದ್ಧ ದಾಖಲಿಸಿದ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ಆಗ್ರಹಿಸಿದರು.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಗಡಿಗೆ ಹೇಮಾವತಿ ನೀರು (Hemavati Water) ನೀಡಲು ತುಮಕೂರಿನ ರೈತರು ಪ್ರತಿಭಟಿಸುತ್ತಿರುವಾಗ, ಎರಡೂ ಜಿಲ್ಲೆಗಳ ಪ್ರತಿನಿಧಿಗಳು ಹಾಗೂ ರೈತರ ಜೊತೆ ಸರ್ಕಾರ ಚರ್ಚಿಸಬೇಕಿತ್ತು. ಈ ಕೆಲಸವನ್ನು ಸರ್ಕಾರ ಮಾಡದೆಯೇ ರೈತರ ನಡುವೆಯೇ ಎತ್ತಿ ಕಟ್ಟುವ ಕೆಲಸ ಮಾಡಿದೆ. ರೈತರಿಗೆ ಮನವರಿಕೆ ಮಾಡುವ ಬದಲು ಬೆದರಿಕೆ ಹಾಕುವುದು ಒಳ್ಳೆಯದಲ್ಲ. ಎಲ್ಲ ರೈತರನ್ನು ಸಮಭಾವದಿಂದ ನೋಡಬೇಕೇ ಹೊರತು, ಮಠಾಧೀಶರ ಮೇಲೆ, ಜನಪ್ರತಿನಿಧಿಗಳ ಮೇಲೆ ಕೇಸ್ ಹಾಕಬಾರದು. ಕಾಂಗ್ರೆಸ್‌ನ ಶಾಸಕರೇ ಆದ ಗುಬ್ಬಿ ಶ್ರೀನಿವಾಸ್ ಕೂಡ ಇದರ ವಿರುದ್ಧ ನಿಂತಿದ್ದಾರೆ ಎಂದರು. ಇದನ್ನೂ ಓದಿ: ರಾಮನಗರ-ತುಮಕೂರು ಮಧ್ಯೆ ಹೇಮಾವತಿ ಕಲಹ – ಸರ್ವಪಕ್ಷ ಸಭೆ ಕರೆಯಲು ಬಿಜೆಪಿ ಆಗ್ರಹ

    ರೈತರ ವಿರುದ್ಧ ಪ್ರಕರಣ ದಾಖಲಿಸುವುದು ಅಕ್ಷಮ್ಯ ಅಪರಾಧವಾಗಿದೆ. ರೈತರ ಜೊತೆಗೆ ಚರ್ಚಿಸಿ ಸಮನ್ವಯ ಸಾಧಿಸಬೇಕು. ಡಿಸಿಎಂ ಡಿ.ಕೆ ಶಿವಕುಮಾರ್ (D K Shivakumar) ಅವರ ಕುರ್ಚಿ ಹೋದರೆ ಅಧಿಕಾರವೇ ಇರುವುದಿಲ್ಲ. ರಾಜ್ಯ ಸರ್ಕಾರ ಎರಡು ಜಿಲ್ಲೆಗಳ ಸರ್ವಪಕ್ಷ ಸಭೆ ಕರೆದು ತೀರ್ಮಾನ ಕೈಗೊಳ್ಳಬೇಕು. ಅಲ್ಲದೇ ಕೇಸ್ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.

    ಹಿಂದೂಗಳೇ ಗುರಿ:
    ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಟಾಸ್ಕ್ ಫೋರ್ಸ್ ಮಾಡಿ, ಹಿಂದೂ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ. ಇದು ಕೋಮುವಾದದ ವಿರುದ್ಧ ಅಲ್ಲ, ಹಿಂದೂಗಳ ವಿರುದ್ಧ ಇರುವ ಫೋರ್ಸ್. ಈ ಹಿಂದೆ ಇದ್ದ ಅಧಿಕಾರಿಗಳನ್ನು ವರ್ಗಾವಣೆ ಮಾಡಿ, ಅವರಿಗೆ ಬೇಕಾದ ಅಧಿಕಾರಿಗಳನ್ನು ನೇಮಿಸಿಕೊಂಡಿದ್ದಾರೆ. ಘಟನೆ ನಡೆದು ಎಷ್ಟೋ ದಿನಗಳಾದ ನಂತರ ಪ್ರಕರಣ ದಾಖಲಿಸಲಾಗುತ್ತಿದೆ. ಸುಳ್ಳು ಅಪಾದನೆ ಮಾಡಿ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿದರೆ, ಬೀದಿಗಿಳಿದು ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ʻಆಪರೇಷನ್‌ ಸಿಂಧೂರʼ ವೇಳೆ ಭಾರತ ಧ್ವಂಸಗೊಳಿಸಿದ್ದ ಮುರಿಡ್ಕೆ ಮಸೀದಿಯಲ್ಲಿ ಮತ್ತೆ ತಲೆಎತ್ತಿದ ಲಷ್ಕರ್‌ ಗುಂಪು; ವಿಡಿಯೋ ವೈರಲ್‌

    ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಕಾಂಗ್ರೆಸ್ ಪಕ್ಷದಿಂದ ಕರಾವಳಿ ಭಾಗಕ್ಕೆ ಹಣ ಬರುತ್ತಿಲ್ಲ. ಕಾಂಗ್ರೆಸ್‌ನ ಭಿಕ್ಷೆಯಿಂದ ಅಲ್ಲಿನ ಜನರು ಬದುಕುತ್ತಿಲ್ಲ. ಜನರ ಹಣದಲ್ಲೇ ಕಾಂಗ್ರೆಸ್ ನಾಯಕರು ಬದುಕುತ್ತಿದ್ದಾರೆ. ಡಿ.ಕೆ ಶಿವಕುಮಾರ್ ಕರಾವಳಿ ಜನರ ಬಳಿ ಕ್ಷಮೆ ಕೋರಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಕ್ಷಿಣ ಆಫ್ರಿಕಾದ ದೈತ್ಯ ಬ್ಯಾಟರ್‌ ಕ್ಲಾಸೆನ್‌ ಗುಡ್‌ಬೈ

    ರಸ್ತೆ ದುರಸ್ತಿಯ ಯೋಗ್ಯತೆ ಇಲ್ಲದ ಸರ್ಕಾರ:
    ಗ್ರೇಟರ್ ಬೆಂಗಳೂರು (Greater Bengaluru) ರಚನೆ ಮಾಡಿದ ನಂತರ ಅಭಿವೃದ್ಧಿ ಕಾರ್ಯ ಆಗಿದೆಯೇ ಎಂದು ನೋಡಬೇಕು. ಬೆಂಗಳೂರಿನಲ್ಲಿ ಎಲ್ಲ ರಸ್ತೆಗಳಲ್ಲಿ ಗುಂಡಿಗಳಿವೆ. ರಸ್ತೆಗಳನ್ನು ದುರಸ್ತಿ ಮಾಡುವ ಯೋಗ್ಯತೆಯೇ ಸರ್ಕಾರಕ್ಕೆ ಇಲ್ಲ. ಕಸ ವಿಲೇವಾರಿ ಮಾಡಲು ಗುತ್ತಿಗೆದಾರರಿಗೆ ಜನವರಿಯಿಂದಲೇ ಬಿಲ್ ಪಾವತಿ ಮಾಡಿಲ್ಲ. ಹೊರರಾಜ್ಯದವರಿಗೆ ಗುತ್ತಿಗೆ ನೀಡಿ ಕಸದ ಲಾಬಿ ಸೃಷ್ಟಿ ಮಾಡಿದ್ದಾರೆ. ಇಂತಹ ಸ್ಥಿತಿಯಲ್ಲಿ ಬಿಬಿಎಂಪಿ ಚುನಾವಣೆ ಮಾಡಿದರೆ ಯಾವ ಮುಖ ಇಟ್ಟುಕೊಂಡು ಜನರ ಬಳಿಗೆ ಹೋಗುತ್ತಾರೆ ಎಂದು ಪ್ರಶ್ನಿಸಿದರು.

    ಮೇಕೆದಾಟು ಯೋಜನೆಗೆ ಆಗ್ರಹಿಸಿ ತಮಿಳುನಾಡು ಸರ್ಕಾರದ ಮುಂದೆ ಪ್ರತಿಭಟಿಸಲು, ಕಲ್ಲು ಹೊಡೆಯಲು ನಾವು ಸಿದ್ಧರಿದ್ದೇವೆ. ಡಿಸಿಎಂ ಡಿ.ಕೆ ಶಿವಕುಮಾರ್ ಇದಕ್ಕೆ ಸಿದ್ಧರಿದ್ದಾರೆಯೇ? ಇಲಾಖೆಗಳಿಗೆ ಅನುದಾನ ನೀಡದೆಯೇ ಸಚಿವರಿಗೆ ಕೆಲಸ ಮಾಡಲು ಆಗುತ್ತಿಲ್ಲ. ಕೆಎಸ್‌ಆರ್‌ಟಿಸಿಗೆ ಹಣ ನೀಡಿಲ್ಲ. ಜೋಳ ಖರೀದಿ ಕೇಂದ್ರಗಳಿಗೆ ಹಣ ನೀಡಿಲ್ಲ. ಸರ್ಕಾರಿ ಆಸ್ಪತ್ರೆಗಳಿಗೆ ಸಂಬಳಕ್ಕೆ ಹಣ ಕೊಟ್ಟಿಲ್ಲ ಕಿಡಿಕಾರಿದರು. ಇದನ್ನೂ ಓದಿ: ಕಮಲ್ ಹಾಸನ್‌ಗೆ ಕನ್ನಡದ ಪುಸ್ತಕ ನೀಡಿದ ರಂಜನಿ ರಾಘವನ್

    ನಟ ಕಮಲ್ ಹಾಸನ್ (Kamal Haasan) ಅವರ ಯಾವುದೇ ಚಿತ್ರಗಳ ಪ್ರದರ್ಶನಕ್ಕೆ ಅವಕಾಶ ನೀಡಬಾರದು. ಕನ್ನಡದ ವಿಚಾರಕ್ಕೆ ಬಂದಾಗ ಎಲ್ಲರೂ ಸ್ಪಷ್ಟವಾಗಿರಬೇಕು. ಕನ್ನಡದ ಎಲ್ಲ ಕಲಾವಿದರು ಕನ್ನಡದ ಪರವಾಗಿ ಮಾತಾಡಬೇಕು ಎಂದರು.

  • ಬೆಂಗಳೂರು ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆಯೇ ಹೆಚ್ಚು – ಡಿಕೆಶಿ

    ಬೆಂಗಳೂರು ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆಯೇ ಹೆಚ್ಚು – ಡಿಕೆಶಿ

    ಬೆಂಗಳೂರು: ಸಿಲಿಕಾನ್ ಸಿಟಿಯ ಅಭಿವೃದ್ಧಿಗೆ ಕಾಂಗ್ರೆಸ್ (Congress) ಸರ್ಕಾರಗಳ ಕೊಡುಗೆಯೇ ಹೆಚ್ಚು. ಸಮಗ್ರ ಅಭಿವೃದ್ಧಿಗೆ ಮುಂದಿನ ಮೂರ್ನಾಲ್ಕು ವರ್ಷಗಳಲ್ಲಿ ನಮ್ಮ ಸರ್ಕಾರ 1 ಲಕ್ಷ ಕೋಟಿ ರೂ. ಮೊತ್ತದ ದೊಡ್ಡ ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DCM DK Shivakumar) ಹೇಳಿದರು.

    ದಾಸರಹಳ್ಳಿ (Dasarahalli) ವಿಧಾನಸಭಾ ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಳೆದ 20 ವರ್ಷಗಳಲ್ಲಿ ಬೆಂಗಳೂರಿನ ಜನಸಂಖ್ಯೆ 70 ಲಕ್ಷ ನಿಂದ 1.50 ಕೋಟಿ ಏರಿಕೆಯಾಗಿದೆ. ಹೀಗಾಗಿ ಬೆಂಗಳೂರಿನ (Bengaluru) ಅಭಿವೃದ್ಧಿಗೆ ಮುಂದಿನ ಮೂರ್ನಾಲ್ಕು ವರ್ಷಗಳಲ್ಲಿ 1 ಲಕ್ಷ ಕೋಟಿ ರೂ. ಮೊತ್ತದ ಯೋಜನೆಗಳನ್ನು ರೂಪಿಸಿದ್ದೇವೆ ಎಂದರು.ಇದನ್ನೂ ಓದಿ: ದೆಹಲಿ | ಲ್ಯಾಂಡಿಂಗ್‌ ವೇಳೆ ತೀವ್ರ ಪ್ರಕ್ಷುಬ್ಧತೆ – 38 ನಿಮಿಷ ಆಕಾಶದಲ್ಲೇ ಗಿರಕಿ ಹೊಡೆದು ಲ್ಯಾಂಡ್‌ ಆದ ಇಂಡಿಗೋ ಫ್ಲೈಟ್

    ನಿಮ್ಮ ಕ್ಷೇತ್ರದಲ್ಲಿ ಹಾದು ಹೋಗುವ ನೆಲಮಂಗಲ (Nelamangala) ಮೇಲ್ಸೇತುವೆ ಬಿಜೆಪಿಯವರು ಮಾಡಿದ್ದಲ್ಲ, ಕೃಷ್ಣ ಬೈರೇಗೌಡ ಅವರ ಕ್ಷೇತ್ರದಲ್ಲಿ ವಿಮಾನ ನಿಲ್ದಾಣಕ್ಕೆ ಹೋಗುವ ಮೇಲ್ಸೇತುವೆ, ಹೊಸೂರು ರಸ್ತೆಯಲ್ಲಿರುವ ಮೇಲ್ಸೇತುವೆ, ಕೋಲಾರಕ್ಕೆ ಡಬಲ್ ರೋಡ್ ಮಾಡಿದ್ದು, ಮನಮೋಹನ್ ಸಿಂಗ್ ಅವರ ಸರ್ಕಾರ. ಬೆಂಗಳೂರಿನಲ್ಲಿ ಇಂತಹ ಯಾವುದೇ ಕಾರ್ಯಕ್ರಮವಿದ್ದರೂ ಅದು ಕಾಂಗ್ರೆಸ್ ಸರ್ಕಾರದ ಕೊಡುಗೆಯೇ ವಿನಃ ಬಿಜೆಪಿ ಸರ್ಕಾರದ್ದಲ್ಲ. ಬೆಂಗಳೂರು ಬೆಳೆಯುತ್ತಿದೆ. ಹೀಗಾಗಿ ನಾವು ಗ್ರೇಟರ್ ಬೆಂಗಳೂರು (Greater Bengaluru) ಪ್ರಾಧಿಕಾರ ರಚನೆ ಮಾಡಿದ್ದೇವೆ. ಇದರಲ್ಲಿ ಎಷ್ಟು ಪಾಲಿಕೆ ಮಾಡಬೇಕು ಎಂದು ಚರ್ಚೆ ಮಾಡಲು ಸಚಿವರು ಹಾಗೂ ಶಾಸಕರ ಸಭೆ ಮಾಡಿದ್ದೇನೆ. ಇನ್ನೊಂದು ವಾರದಲ್ಲಿ ಮತ್ತೊಂದು ಸಭೆ ಮಾಡಿ, ಅಂತಿಮ ತೀರ್ಮಾನ ಮಾಡಲಾಗುವುದು. ಪಾಲಿಕೆ ರಚಿಸಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಯನ್ನು ಮಾಡುತ್ತೇವೆ. ಹೊಸ ಪಾಲಿಕೆ ಸದಸ್ಯರು ಆಯ್ಕೆಯಾಗಬೇಕು. ಮುಂದೆ ದಾಸರಹಳ್ಳಿಯಲ್ಲಿ ಶಾಸಕ ಹಾಗೂ ಕಾರ್ಪೊರೇಟರ್ ಸ್ಥಾನಗಳು ಕಾಂಗ್ರೆಸ್ ಪಕ್ಷಕ್ಕೆ ಎಂಬ ನಂಬಿಕೆ ಇದೆ ಎಂದು ಹೇಳಿದರು.

    ರಾಜ್ಯದಲ್ಲಿ ಉದ್ಯೋಗ ಸೃಷ್ಟಿಸಲು ಇತ್ತೀಚಿಗೆ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಮಾಡಿದ್ದೆವು. ಅದರಲ್ಲಿ 10 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದೆ. ನಾನು ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ಅಧಿಕಾರ ಸ್ವೀಕಾರ ಮಾಡಿದಾಗ ಒಂದು ಮಾತು ಹೇಳಿದ್ದೆ. ಮಹಿಳೆಯರು ಹಾಗೂ ಯುವಕರು ಮನಸ್ಸು ಮಾಡಿದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದಿದ್ದೆ. ಮಹಿಳೆಯರಿಗೆ ಉಪಕಾರ ಸ್ಮರಣೆ ಇರುತ್ತದೆ. ಹೀಗಾಗಿ ನಮ್ಮ ಐದು ಗ್ಯಾರಂಟಿ ಯೋಜನೆಗಳ ಪೈಕಿ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮಿ, ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ ಯೋಜನೆಗಳನ್ನು ಮಹಿಳೆಯರಿಗಾಗಿ ಮಾಡಲಾಗಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ದಿನವೇ ಐದೂ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಅನುಮೋದನೆ ನೀಡಲಾಯಿತು. ಆ ಮೂಲಕ ನಾವು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ. ನಮ್ಮ ಸರ್ಕಾರ 2 ವರ್ಷ ಪೂರೈಸಿದ್ದು, ಸಚಿವ ಕೃಷ್ಣ ಬೈರೇಗೌಡ ಅವರ ನೇತೃತ್ವದಲ್ಲಿ 1,11,111 ಕುಟುಂಬಗಳಿಗೆ ಉಚಿತವಾಗಿ ಪಟ್ಟಾ ಖಾತೆಯನ್ನು ನೀಡುವ ಮೂಲಕ 6ನೇ ಗ್ಯಾರಂಟಿ ಯೋಜನೆ ಭೂ ಗ್ಯಾರಂಟಿಯನ್ನು ನೀಡಿದ್ದೇವೆ ಎಂದು ತಿಳಿಸಿದರು.

    ಕಳೆದ ವಿಧಾನಸಭೆ ಚುನಾವಣೆಗೂ ಮುನ್ನ ಮಾಜಿ ಶಾಸಕ ಮಂಜುನಾಥ್‌ಗೆ ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ ಎಂದು ಹೇಳಿದ್ದೆ. ಮಂಜಣ್ಣ ನನ್ನ ಮಾತು ಕೇಳಿದ್ದರೆ, ನನ್ನ ಹಾಗೂ ಕೃಷ್ಣ ಬೈರೇಗೌಡ ಅವರ ಮಧ್ಯೆ ವಿಧಾನಸೌಧದಲ್ಲಿ ಕೂರುತ್ತಿದ್ದರು. ಮಂಜಣ್ಣ ಇಲ್ಲಿ ಶಾಸಕರಾಗಿ ಗೆದ್ದಿದ್ದು, ತನ್ನ ಸಾಮರ್ಥ್ಯದ ಮೇಲೆ ಹೊರತು ಜೆಡಿಎಸ್ ಪಕ್ಷದಿಂದ ಅಲ್ಲ. ಈಗ ಆಗಿರುವುದನ್ನು ಬಿಟ್ಟು, ಮುಂಬರುವ 2028ರ ಚುನಾವಣೆಯಲ್ಲಿ ನೀವು ಮಂಜಣ್ಣ ಅವರನ್ನು ವಿಧಾನಸೌಧದಲ್ಲಿ ಕೂರಿಸಬೇಕು. ನಮ್ಮ ಸರ್ಕಾರ ಈ ದೇಶಕ್ಕೆ ಮಾದರಿ. ಬಿಜೆಪಿ ಭಾವನೆ ಮೇಲೆ ರಾಜಕೀಯ ಮಾಡಿದರೆ, ನಾವು ಬದುಕಿನ ಮೇಲೆ ರಾಜಕೀಯ ಮಾಡುತ್ತೇವೆ. ನಮಗೆ ನಿಮ್ಮ ಬದುಕು ಮುಖ್ಯ, ನಿಮಗೆ ಪ್ರತಿ ತಿಂಗಳು ಕನಿಷ್ಠ 5 ಸಾವಿರ ರೂ. ಉಳಿತಾಯ ಆದರೆ ನಿಮಗೆ ಅನುಕೂಲವಾಗುತ್ತದೆ ಎಂಬ ಉದ್ದೇಶದಿಂದ ನಾವು ಗ್ಯಾರಂಟಿ ಯೋಜನೆ ಜಾರಿಗೆ ತಂದೆವು. ಬೆಲೆ ಏರಿಕೆ ಸಮಸ್ಯೆಯಿಂದ ಜನರನ್ನು ರಕ್ಷಣೆ ಮಾಡಲಾಗಿದೆ ಎಂದರು.

    ರಾಜ್ಯದಲ್ಲಿ ಬಿಜೆಪಿ ಸರ್ಕಾರ ನಾಲ್ಕು ವರ್ಷ ಅಧಿಕಾರದಲ್ಲಿತ್ತು. ಬಿಜೆಪಿ ಇಂತಹ ಒಂದೇ ಒಂದು ಯೋಜನೆಯನ್ನು ನೀಡಲಿಲ್ಲ. ನಿಮ್ಮ ಶಾಸಕರು ಕೇವಲ ಬರಿ ಮಾತಲ್ಲೇ ನಿಮನ್ನು ಮರಳು ಮಾಡುತ್ತಿದ್ದಾರೆ. ಖಾಲಿ ಡಬ್ಬಾದಂತೆ ಕೇವಲ ಸದ್ದು ಮಾತ್ರ ಮಾಡುತ್ತಾರೆ. ಮಂಜಣ್ಣ ಇಲ್ಲಿ ಸೋತಿದ್ದರು. 8 ಸಾವಿರ ಕುಟುಂಬಗಳ ಆಸ್ತಿಯನ್ನು ಇ-ಖಾತಾ ಮಾಡಿಸಿದ್ದಾರೆ. ನಮ್ಮ ಪಾಲಿಗೆ ಇಲ್ಲಿ ಮಂಜುನಾಥ್ ಅವರೇ ಶಾಸಕರು. ಅವರು ಹೇಳಿದಂತೆ ನಾವು ಕೇಳುತ್ತೇವೆ. ನಿಮ್ಮ ಆಸ್ತಿ ದಾಖಲೆ ಸರಿಪಡಿಸಿ, ಅದನ್ನು ನಿಮ್ಮ ಮನೆಬಾಗಿಲಿಗೆ ಉಚಿತವಾಗಿ ತಲುಪಿಸುವ ಐತಿಹಾಸಿಕ ತೀರ್ಮಾನ ಮಾಡಿದ್ದೇವೆ. ಕಾಂಗ್ರೆಸ್ ಪಕ್ಷ ಸದಾ ಜನರ ಬದುಕಿನ ಬಗ್ಗೆ ಆಲೋಚನೆ ಮಾಡುತ್ತದೆ. ಕಾಂಗ್ರೆಸ್ ಪಕ್ಷಕ್ಕೆ ಅದರದ್ದೇ ಇತಿಹಾಸವಿದೆ ಎಂದರು.

    ಇತ್ತೀಚೆಗೆ ದೇಶದಲ್ಲಿ ಯುದ್ಧದ ವಾತಾವರಣ ಸೃಷ್ಟಿಯಾಗಿತ್ತು. ಈ ಸಂದರ್ಭದಲ್ಲಿ ಜನ ಇಂದಿರಾಗಾಂಧಿ ಅವರನ್ನು ಸ್ಮರಿಸುತ್ತಿದ್ದರು. ಇಂದಿರಾಗಾಂಧಿ ಇದ್ದಿದ್ದರೆ ದೇಶವನ್ನು ಹೇಗೆ ಮುನ್ನಡೆಸುತ್ತಿದ್ದರು ಎಂದು ಜನ ಆಲೋಚನೆ ಮಾಡಿದರು. ಇಂದಿರಾಗಾಂಧಿ, ರಾಜೀವ್ ಗಾಂಧಿ ಅವರು ದೇಶಕ್ಕಾಗಿ ಪ್ರಾಣ ಬಿಟ್ಟರು. ಸೋನಿಯಾ ಗಾಂಧಿ ಅವರು ಈ ದೇಶಕ್ಕಾಗಿ ಪ್ರಧಾನಮಂತ್ರಿ ಸ್ಥಾನವನ್ನು ಎರಡು ಬಾರಿ ತ್ಯಾಗ ಮಾಡಿದರು. ಇದು ಕಾಂಗ್ರೆಸ್ ಪಕ್ಷದ ಶಕ್ತಿ. ಬಿಜೆಪಿಯಲ್ಲಿ ಇಂತಹ ತ್ಯಾಗ ಮಾಡಿರುವವರು ಒಬ್ಬರಾದರೂ ಇದ್ದಾರಾ? ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸಿರುವುದು ಬಹಳ ಸಂತೋಷ. ಆರಂಭದಲ್ಲಿ ನನಗೆ ಇದು ಮಹಿಳಾ ಕಾಂಗ್ರೆಸ್ ಸಭೆಯೇ ಎಂದು ಅನುಮಾನ ಮೂಡಿತು. ಇಲ್ಲಿ ಗಂಡಸರಿಗೆ ಜಾಗ ಕೊಡದೇ ಅವರು ರಸ್ತೆಯಲ್ಲಿ ನಿಂತಿದ್ದಾರೆ. ಮುಂದೆ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರಿಗೆ 33% ಮೀಸಲಾತಿ ಕೊಟ್ಟ ಬಳಿಕ ನಮ್ಮ ಪರಿಸ್ಥಿತಿ ಏನಾಗುತ್ತದೆಯೋ ಗೊತ್ತಿಲ್ಲ ಎಂದು ತಿಳಿಸಿದರು.ಇದನ್ನೂ ಓದಿ: ‘ಥಗ್‌ ಲೈಫ್‌’ ಟೀಂ ಉದ್ಧಟತನ ಬಟಾಬಯಲು – ಕನ್ನಡ ಬಿಟ್ಟು 4 ಭಾಷೆಗಳಿಗೆ ಸಿನಿಮಾ ಡಬ್‌

  • ಡಿಕೆಶಿ ಪಾದಕ್ಕೆ ಕೋಟಿ ನಮಸ್ಕಾರ ಮಾಡ್ತೀನಿ, ಹೇಮಾವತಿ ಕೈ ಬಿಡಿ: ವಿ.ಸೋಮಣ್ಣ

    ಡಿಕೆಶಿ ಪಾದಕ್ಕೆ ಕೋಟಿ ನಮಸ್ಕಾರ ಮಾಡ್ತೀನಿ, ಹೇಮಾವತಿ ಕೈ ಬಿಡಿ: ವಿ.ಸೋಮಣ್ಣ

    ಬೀದರ್: ಡಿ.ಕೆ ಶಿವಕುಮಾರ್ (DK Shivakumar) ಪಾದಕ್ಕೆ ಕೋಟಿ ನಮಸ್ಕಾರ ಮಾಡ್ತೀನಿ, ಹೇಮಾವತಿ ಕೈ ಬಿಡಿ ಎಂದು ಕೇಂದ್ರ ಸಚಿವ ವಿ.ಸೋಮಣ್ಣ (V Somanna) ಹೇಳಿದರು.

    ಬೀದರ್‌ನಲ್ಲಿ (Bidar) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೇಮಾವತಿ ನೀರು (Hemavati) ಹಂಚಿಕೆ ವಿಚಾರದಲ್ಲಿ ಡಿ.ಕೆ ಶಿವಕುಮಾರ್ ಯಾಕೆ ಹೀಗಾದರೋ ಗೊತ್ತಿಲ್ಲ. ರಾಜಕೀಯನೇ ಬೇರೆ, ವಿಶ್ವಾಸನೇ ಬೇರೆ. ಯಾಕೆ ಹೇಮಾವತಿ ಹಿಂದೆ ಬಿದ್ದಿದ್ದಾರೆ ಗೊತ್ತಿಲ್ಲ. ತುಮಕೂರಿನ ಜನ ಬಹಳ ಮುಗ್ಧರಿದ್ದಾರೆ. ನಾನು ಯಾವುದೋ ಊರಿನಿಂದ ಬಂದವನಿಗೆ ವೋಟ್ ಹಾಕಿದ್ದಾರೆ. ನನಗೋಸ್ಕರನಾದರೂ ಆ ಯೋಜನೆ ಕೈ ಬಿಡಿ ಎಂದು ಡಿಕೆಶಿಗೆ ಮನವಿ ಮಾಡುತ್ತೇನೆ ಎಂದರು.ಇದನ್ನೂ ಓದಿ: ಸರ್ಕಾರಿ ಆಸ್ಪತ್ರೆಗಳಲ್ಲಿ ಅವ್ಯವಸ್ಥೆ, ಚಿಕಿತ್ಸೆ ಕೊರತೆ ಇದ್ರೆ ದೂರು ಕೊಡಿ – ಆರೋಗ್ಯ ಇಲಾಖೆಯಿಂದ ವಾಟ್ಸಪ್‌ ನಂಬರ್‌ ರಿಲೀಸ್‌

    ಇಪ್ಪತ್ತು ವರ್ಷದ ಹಿಂದೆ ಮಾಡಿದ ಈ ಯೋಜನೆಯಿಂದ ಜನ ನೆಮ್ಮದಿಯಾಗಿದ್ದಾರೆ. ಜನರನ್ನ ನೆಮ್ಮದಿಯಿಂದ ಇರಲು ಬಿಡಿ. 5 ತಾಲೂಕಿನವರು ಒಳ್ಳೆಯ ಜೀವನ ಮಾಡುತ್ತಿದ್ದಾರೆ. ನೀವ್ಯಾಕೆ ಹುಳಿ ಹಿಂಡುವ ಕೆಲಸ ಮಾಡುತ್ತಿದ್ದೀರಿ. ತಿಪ್ಪಗೊಂಡನಹಳ್ಳಿ, ಮಂಚನಬೇಲೆ ಸೇರಿದಂತೆ ಬೇರೆ ಯೋಜನೆಗಳು ನೀವೇ ಮಾಡಿ. ನೀವೇ ಮಹಾರಾಜ, ನೀವೇ ಉಪಮುಖ್ಯಮಂತ್ರಿ ಎಂದು ಹೇಳಿದರು.

    ಇದೇ ವೇಳೆ ಬೆಳಗಾವಿ (Belagavi) ಸಾಮೂಹಿಕ ಅತ್ಯಾಚಾರ, ಕರಾವಳಿಯಲ್ಲಿ ಹತ್ಯೆಗಳು ಸೇರಿದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟ ವಿಚಾರದ ಕುರಿತು ಮಾತನಾಡಿ, ಈಗಾಲಾದರೂ ಸರ್ಕಾರ ಎಚ್ಚೆತ್ತುಕೊಳ್ಳಬೇಕಿದೆ. ಇಲ್ಲವಾದರೆ ಪೂರ್ಣ ದುಷ್ಪರಿಣಾಮವನ್ನು ಸರ್ಕಾರ ಎದುರಿಸಬೇಕಾಗುತ್ತದೆ. ಗೂಬೆ ಕೂರಿಸುವುದನ್ನು ಬಿಟ್ಟು ವಾಸ್ತವದ ಕಡೆ ಗಮನಹರಿಸಬೇಕು. ಕಳ್ಳರನ್ನು ಬಗ್ಗು ಬಡಿಯುವ ಕೆಲಸ ಪೊಲೀಸರು ಮಾಡಬೇಕು. ಪೊಲೀಸರನ್ನು ಫ್ರೀಯಾಗಿ ಬಿಡಬೇಕು, ಫ್ರೀಯಾಗಿ ಬಿಟ್ರೆ ಎಲ್ಲವೂ ಸರಿಹೋಗುತ್ತದೆ. ಈ ಕುರಿತು ಗೃಹ ಮಂತ್ರಿಗಳಿಗೆ ಮನವಿ ಮಾಡುತ್ತೇನೆ ಎಂದು ಹೇಳಿದರು.

    ಇದೇ ವೇಳೆ ಹೆಚ್‌ಎಎಲ್ (HAL Airport) ವಿಮಾನ ನಿಲ್ದಾಣ ಆಂಧ್ರಪ್ರದೇಶಕ್ಕೆ ಶಿಫ್ಟ್ ಮಾಡುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈ ಘಟಕವನ್ನು ನಾವು ಕಬಳಿಸಲ್ಲ. ಇದರ ಅವಶ್ಯಕತೆ ನಮಗಿಲ್ಲ ಎಂದು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಹೇಳಿದ್ದಾರೆ. ಸುಳ್ಳು ಯಾವತ್ತೂ ನಿಜಾ ಆಗೋಕೆ ಸಾಧ್ಯವಿಲ್ಲ ಎಂದು ಸ್ಪಷ್ಟನೆ ನೀಡಿದರು.ಇದನ್ನೂ ಓದಿ: ವಿಜಯಪುರದ ರಸ್ತೆ, ರೈಲು, ವಾಯುಮಾರ್ಗ ಎಲ್ಲವೂ ಅಭಿವೃದ್ಧಿಯಾಗಲಿದೆ: ಎಂ.ಬಿ ಪಾಟೀಲ್