Tag: ಡಿ.ಕೆ.ಶಿವಕುಮಾರ್. ಸಿದ್ದರಾಮಯ್ಯ

  • ಡಿಕೆಶಿ ಎದುರಿಸುವ ಶಕ್ತಿ ಯಾರಿಗೂ ಇಲ್ಲ: ಸಿ.ಟಿ ರವಿ

    ಡಿಕೆಶಿ ಎದುರಿಸುವ ಶಕ್ತಿ ಯಾರಿಗೂ ಇಲ್ಲ: ಸಿ.ಟಿ ರವಿ

    ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಅವರನ್ನ ಎದುರಿಸುವ ಶಕ್ತಿ ಯಾರಿಗೂ ಇಲ್ಲ. ಅವರನ್ನ ಯಾರೂ ಬ್ಲ್ಯಾಕ್‌ಮೇಲ್‌ ಮಾಡೋಕೆ ಆಗಲ್ಲ. ಅವರೇ ಬ್ಲ್ಯಾಕ್‌ಮೇಲ್‌ ಮಾಡ್ತಾರೆ. ಅವರನ್ನ ಎದುರಿಸುವ ಶಕ್ತಿ ಯಾರಿಗೂ ಇಲ್ಲ. ಅವರೇ ಎಲ್ಲರನ್ನ ಎದುರಿಸ್ತಾರೆ ಎಂದು ಮಾಜಿ ಶಾಸಕ ಸಿ.ಟಿ ರವಿ (CT Ravi) ವ್ಯಂಗ್ಯವಾಡಿದ್ದಾರೆ.

    ಬೆಂಗಳೂರಿನಲ್ಲಿದ್ದು (Bengaluru) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಿನ್ನೆಯಿಂದ ಸಿಎಂ ಶಾಸಕರ ಸಭೆ ನಡೆಸ್ತಿದ್ದಾರೆ. ಶಾಸಕರು ಬರೆದ ಪತ್ರವನ್ನ ಆಧರಿಸಿ ಸಿಎಲ್‌ಪಿ ಕರೆದಿದ್ರು, ಈಗ ಸಭೆ ನಡೆಸ್ತಿದ್ದಾರೆ ಹಾಗಾಗಿ ಶಾಸಕರು ಬರೆದ ಪತ್ರ ನಕಲಿ ಅಲ್ಲ, ಅಸಲಿ ಅನ್ನೋದನ್ನ ಇದರಿಂದ ಒಪ್ಪಿಕೊಂಡಂಗೆ ಆಗಿದೆ. TCಗಳ ಬದಲಾವಣೆಗೂ ಶಾಸಕರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಮುಂದೆ ಶಾಸಕರ ಈ ಅಸಹನೆ ಸ್ಫೋಟಗೊಳ್ಳುತ್ತೆ. ಲೋಕಸಭೆ ಚುನಾವಣೆ ಬಳಿಕ ಈ ಸರ್ಕಾರ ಉಳಿಯುತ್ತಾ? ಅನ್ನುವಂತಾಗಿದೆ. ಅಷ್ಟೊಂದು ಅಸಹಾಯಕ ಸ್ಥಿತಿಗೆ ಸರ್ಕಾರ ತಲುಪಿದೆ.

    ಗುತ್ತಿಗೆದಾರ ಬಳಿ ಕಮಿಷನ್ ಕೇಳ್ತಿದ್ದಾರೆ:
    ಬಿಬಿಎಂಪಿ (BBMP) ಗುತ್ತಿಗೆದಾರರಿಂದ ಬಿಲ್ ಪಾವತಿ ಆಗದ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿ.ಟಿ ರವಿ, ಬಿಲ್ ಪಾವತಿ ಮಾಡಲು ಬ್ಲ್ಯಾಕ್‌ಮೇಲ್‌ ಮಾಡ್ತಿದ್ದಾರೆ ಅನ್ನೋದು ಗಮನಕ್ಕೆ ಬಂದಿದೆ. ಪಾರದರ್ಶಕತೆ ಆಡಳಿತ ಕೊಡ್ತೀನಿ ಅಂದವರು ಧಮ್ಕಿ ಹಾಕ್ತಿದ್ದಾರೆ. ಈಗಿನ ಬಿಲ್ ಗಳಿಗೆ ಕಮಿಷನ್ ಅಷ್ಟೇ ಅಲ್ಲ, ಕಳೆದ 5 ವರ್ಷಗಳ ಹಿಂದೆ ನಡೆದ ಕಾಮಗಾರಿಗಳ ಬಿಲ್ ಪಾವತಿಗೂ ಕಮಿಷನ್ ಕೇಳ್ತಿದ್ದಾರೆ ಎಂಬ ಮಾಹಿತಿ ಇದೆ. ಡಿಕೆಶಿ ಅವರನ್ನ ಬ್ಲ್ಯಾಕ್‌ಮೇಲ್‌ ಮಾಡಲು ಆಗಲ್ಲ. ಏಕೆಂದ್ರೆ ಅವರೇ ಬ್ಲ್ಯಾಕ್‌ಮೇಲ್‌ ಮಾಡ್ತಾರೆ. ಅವರನ್ನು ಎದುರಿಸುವ ಶಕ್ತಿ ಯಾರಿಗೂ ಇಲ್ಲ. ಅವರೇ ಎಲ್ಲರನ್ನ ಎದುರಿಸ್ತಾರೆ ಎಂದು ಟಾಂಗ್ ಕೊಟ್ಟಿದ್ದಾರೆ.

    ಕೃಷಿ ಸಚಿವರ ವಿರುದ್ಧ ಪತ್ರ ಬರೆದಿದ್ದಾರೆ, ಅದರ ಬಗ್ಗೆ ತನಿಖೆ ನಡೆಸಿ ಅಂತಾ ಹೇಳಿದ್ದಾರೆ. ತನಿಖೆ ನಡೆಸಿ ವರದಿ ಕೊಡಬೇಕಾಗುತ್ತೆ. ಆದ್ರೆ ತನಿಖೆಗೂ ಮೊದಲೇ ನಕಲಿ ಅಂತಾ ಇವರು ಹೇಗೆ ಹೇಳ್ತಾರೆ? ಸಿಎಂ, ಚಲುವರಾಯಸ್ವಾಮಿ (Chaluvarayaswamy) ತನಿಖೆ ಸಂಸ್ಥೆಗಳಾ? ಸಿಐಡಿ ತನಿಖೆಗೆ ಕೊಟ್ಟಿದ್ದಾರೆ ಈಗ, ಸಿಐಡಿ ತನಿಖೆ ವರದಿ ಕೊಡಬೇಕಲ್ಲವಾ? ಸಿಐಡಿ ತನಿಖೆಗೂ ಮೊದಲೇ ಪತ್ರ ನಕಲಿ ಅಂದ್ರೆ ನಾವು ಹೇಳಬೇಕಾಗುತ್ತೆ ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಳ್ಳುತ್ತಾರೆ ಅಂತಾ ಎಂದು ವ್ಯಂಗ್ಯವಾಡಿದ್ದಾರೆ.

    ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ವಿಚಾರ ಕುರಿತು ಮಾತನಾಡಿದ ಸಿ.ಟಿ ರವಿ, ಅಧ್ಯಕ್ಷರನ್ನ ಯಾವಾಗ ನೇಮಕ ಮಾಡ್ಬೇಕು ಅನ್ನೋದು ಹೈಕಮಾಂಡ್‌ಗೆ ಚೆನ್ನಾಗಿ ಗೊತ್ತಿದೆ. ತಾಯಿ ಬಗ್ಗೆ ಮಕ್ಕಳಿಗೆ ಹೇಗೆ ನಂಬಿಕೆ ಇರುತ್ತೆ? ಹಾಗೆಯೇ ನಮಗೆ ಪಕ್ಷದ ಮೇಲೆ, ಹೈಕಮಾಂಡ್ ಮೇಲೆ ನಂಬಿಕೆ ಇದೆ. ನಾನು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಯಲ್ಲ ಎಂದು ಮೊದಲೇ ಹೇಳಿದ್ದೆ. ದೆಹಲಿಗೆ ಹೋದಾಗ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸಹಕಾರ ಕೊಟ್ಟಿದ್ದವರಿಗೆಲ್ಲ ಧನ್ಯವಾದ ಹೇಳಿ ಬಂದಿದ್ದೇನೆ ಎಂದು ತಿಳಿಸಿದ್ದಾರೆ.

    ರಾಹುಲ್ ಗಾಂಧಿ ಅವ್ರನ್ನ ಕೇಳಲು ಬಯಸುತ್ತೇನೆ ನಿಮ್ಮ ಮೊಹಬತ್ ಚೀನಾದ ಜೊತೆಗಾ? ನಮ್ಮ ದೇಶದ ಪ್ರಧಾನಿಯನ್ನ ವಿದೇಶದಲ್ಲಿ ಟೀಕಿಸಿದ್ರಿ. ಚೀನಾದ ಕಮ್ಯೂನಿಸ್ಟ್ ಜೊತೆ ಮಾಡಿಕೊಂಡ ಒಪ್ಪಂದ ಇದೇನಾ ರಾಹುಲ್ ಗಾಂಧಿ ಅವರೇ? ನ್ಯೂಯಾರ್ಕ್ ಟೈಮ್ಸ್ ವರದಿ ಆಧರಿಸಿ ಸಮಗ್ರ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಿದ್ದರಾಮಯ್ಯ, ಡಿಕೆಶಿ ನಡುವೆ ಯುದ್ಧ ಶುರುವಾಗಿದೆ: ಈಶ್ವರಪ್ಪ

    ಸಿದ್ದರಾಮಯ್ಯ, ಡಿಕೆಶಿ ನಡುವೆ ಯುದ್ಧ ಶುರುವಾಗಿದೆ: ಈಶ್ವರಪ್ಪ

    ಶಿವಮೊಗ್ಗ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ನಡುವೆ ಈಗ ಯುದ್ಧ ಆರಂಭವಾಗಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

    PRIYANKA GANDHI

    ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರಿಯಾಂಕಾ ಗಾಂಧಿ ಅವರನ್ನು ಕರ್ನಾಟಕದಿಂದ ರಾಜ್ಯಸಭೆಗೆ ಸ್ಪರ್ಧಿಸುವಂತೆ ಆಹ್ವಾನಿಸಿದ್ದಾರೆ. ಇದಕ್ಕೆ ವಿರುದ್ಧವಾಗಿ ಸಿದ್ದರಾಮಯ್ಯ ಚೇಲಾಗಳು ಸಿದ್ದರಾಮಯ್ಯನ ಮುಖ್ಯಮಂತ್ರಿ ಮಾಡಬೇಕೆಂಬ ಉದ್ದೇಶದಿಂದ ಸಿದ್ದು ಬ್ರಿಗೇಡ್ ಆರಂಭಿಸಿದ್ದಾರೆ. ಹೀಗಾಗಿ ಡಿಕೆಶಿ ಹಾಗೂ ಸಿದ್ದು ನಡುವೆ ಯುದ್ಧ ಈಗ ಆರಂಭವಾಗಿದೆ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಬೊಮ್ಮಾಯಿ, ಕಟೀಲ್‌ಗೆ ತರಾಟೆ – ಅಭಿವೃದ್ಧಿ ಬಗ್ಗೆ ಮಾತಾಡಿ ಎಂದು ಆರ್‌ಎಸ್‌ಎಸ್‌ ಚಾಟಿ

    ESHWARAPPA

    ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ಉತ್ತರಪ್ರದೇಶದ ಚುನಾವಣೆಯ ಉಸ್ತುವಾರಿಯನ್ನು ಪ್ರಿಯಾಂಕಾ ಗಾಂಧಿ ಅವರಿಗೆ ವಹಿಸಿತ್ತು. ಅಲ್ಲಿ 397 ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಠೇವಣಿಯನ್ನೂ ಉಳಿಸಿಕೊಳ್ಳಲಿಲ್ಲ. ಇದಕ್ಕೆ ಪ್ರಿಯಾಂಕಾ ಗಾಂಧಿಯವರೇ ಕಾರಣ. ಕಾಂಗ್ರೆಸ್ ಸೋಲಿನಲ್ಲಿ ಅವರ ಪಾತ್ರ ಬಹಳ ಇದೆ. ಸದ್ಯ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕೃತ ವಿಪಕ್ಷವಾಗಿದೆ. ರಾಜ್ಯಸಭೆಗೆ ಸ್ಪರ್ಧಿಸಿದರೆ ಪ್ರಿಯಾಂಕಾ ಗೆಲ್ಲುತ್ತಾರೆ, ರಾಜ್ಯದ ಉಸ್ತುವಾರಿಯನ್ನೂ ವಹಿಸಿಕೊಳ್ಳುತ್ತಾರೆ. ನಂತರ ರಾಜ್ಯದಲ್ಲಿ ಕಾಂಗ್ರೆಸ್ ವಿಪಕ್ಷ ಸ್ಥಾನದಲ್ಲೂ ಉಳಿಯುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಆಂಜನೇಯಸ್ವಾಮಿ ಕನ್ನಡ ನಾಡಿನ ಪುತ್ರ: ಬೊಮ್ಮಾಯಿ

    ಇಡೀ ದೆಶದಲ್ಲೇ ಕಾಂಗ್ರೆಸ್ ನಿರ್ನಾಮ ಆಗುತ್ತಿರುವಂತೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲೂ ಕಾಂಗ್ರೆಸ್ ನಿರ್ನಾಮ ಆಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

  • ಡಿಕೆಶಿ ಸೋಂಕಿಗೆ ತುತ್ತಾಗಿರೋ ಸುದ್ದಿ ತಿಳಿದು ಬೇಸರವಾಯಿತು: ಸಿದ್ದರಾಮಯ್ಯ

    ಡಿಕೆಶಿ ಸೋಂಕಿಗೆ ತುತ್ತಾಗಿರೋ ಸುದ್ದಿ ತಿಳಿದು ಬೇಸರವಾಯಿತು: ಸಿದ್ದರಾಮಯ್ಯ

    ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರು ಕೊರೊನಾ ಸೋಂಕಿಗೆ ತುತ್ತಾಗಿರುವುದಕ್ಕೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.

    ಡಿಕೆ ಶಿವಕುಮಾರ್ ಅವರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದ್ದು, ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ತಿಳಿಸಿದ್ದರು. ಸದ್ಯ ಡಿಕೆಶಿ ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ ಸಿಎಂ ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಅನೇಕರು ಡಿಕೆಶಿ ಶೀಘ್ರವೇ ಗುಣಮುಖರಾಗಿ ಬರಲಿ ಎಂದು ಹಾರೈಸಿದ್ದಾರೆ.

    ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರು ಕೊರೊನಾ ಸೋಂಕಿಗೆ ತುತ್ತಾಗಿರುವ ಸುದ್ದಿ ತಿಳಿದು ಬೇಸರವಾಯಿತು. ಆದಷ್ಟು ಬೇಗ ಸೋಂಕಿನಿಂದ ಗುಣಮುಖರಾಗಿ ಜನಸೇವೆಗೆ ಮರಳಲಿ ಎಂದು ಹಾರೈಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.

    “ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿಕೆ ಶಿವಕುಮಾರ್ ಅವರು ಶೀಘ್ರದಲ್ಲಿ ಕೊರೊನಾ ಸೋಂಕಿನಿಂದ ಪೂರ್ಣ ಗುಣಮುಖರಾಗಿ, ಮತ್ತೆ ಎಂದಿನಂತೆ ತಮ್ಮ ಕಾರ್ಯಕ್ಷೇತ್ರದಲ್ಲಿ ಸಕ್ರಿಯರಾಗಿ ತೊಡಗಿಕೊಳ್ಳಲಿ” ಎಂದು ಸಿಎಂ ಯಡಿಯೂರಪ್ಪ ಹಾರೈಸಿದ್ದಾರೆ.

    ಡಿ.ಕೆ. ಶಿವಕುಮಾರ್ ಅವರಿಗೆ ಕೋವಿಡ್ ಇರುವುದಾಗಿ ತಿಳಿಯಿತು. ಕೊರೊನಾ ವೈರಸ್ ಸೋಂಕಿನಿಂದ ಅವರು ಶೀಘ್ರ ಗುಣಮುಖರಾಗಲಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಇನ್ನೂ ಡಿಕೆಶಿ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿರುವ ವಿಷಯ ತಿಳಿದು ನೋವಾಗಿದೆ. ಅವರು ಶೀಘ್ರವಾಗಿ ಗುಣಾಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಚಿವ ಸುಧಾಕರ್ ಟ್ವೀಟ್ ಮಾಡಿದ್ದಾರೆ.

    “ಮಾಜಿ ಸಚಿವರು, ಕೆಪಿಸಿಸಿ ಅಧ್ಯಕ್ಷರು ಹಾಗೂ ಆತ್ಮೀಯರಾದ ಡಿ.ಕೆ. ಶಿವಕುಮಾರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸಾರ್ವಜನಿಕ ಜೀವನದಲ್ಲಿ ಸದಾ ಚಟುವಟಿಕೆಯಿಂದ ಇರುವ ಶಿವಕುಮಾರ್ ಅವರು ಶೀಘ್ರವಾಗಿ ಗುಣಮುಖರಾಗಲಿ” ಸಚಿವ ಶ್ರೀರಾಮುಲು ಹಾರೈಸಿದ್ದಾರೆ.