Tag: ಡಿ.ಕೆ.ಸುರೇಶ್

  • ಹಣೆಯಲ್ಲಿ ಬರೆದಿದ್ದರೆ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ, ಇಲ್ಲದಿದ್ದರೆ ಇಲ್ಲ: ಡಿ.ಕೆ.ಸುರೇಶ್

    ಹಣೆಯಲ್ಲಿ ಬರೆದಿದ್ದರೆ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ, ಇಲ್ಲದಿದ್ದರೆ ಇಲ್ಲ: ಡಿ.ಕೆ.ಸುರೇಶ್

    – 2028 ಕ್ಕೆ ಸಿದ್ದರಾಮಯ್ಯ ಅವರ ಸ್ಪರ್ಧೆ ತಪ್ಪಿಲ್ಲ ಎಂದ ಮಾಜಿ ಸಂಸದ

    ಬೆಂಗಳೂರು: ನಮ್ಮ ಸಹೋದರ ಡಿ.ಕೆ.ಶಿವಕುಮಾರ್ ಅವರ ಹಣೆಯಲ್ಲಿ ಬರೆದಿದ್ದರೆ ಸಿಎಂ ಆಗುತ್ತಾರೆ, ಇಲ್ಲದಿದ್ದರೆ ಇಲ್ಲ. ಅದಕ್ಕೆ ಏಕೆ ತಲೆಕೆಡಿಸಿಕೊಳ್ಳಬೇಕು ಎಂದು ಬಮೂಲ್ ಅಧ್ಯಕ್ಷ, ಮಾಜಿ ಸಂಸದ ಡಿ.ಕೆ.ಸುರೇಶ್ (D.K.Suresh) ಹೇಳಿದ್ದಾರೆ.

    ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಬುಧವಾರ ಮಾತನಾಡಿದ ಅವರು, ಸಹೋದರನ ರಾಜಕೀಯ ಭವಿಷ್ಯ ಬದಲಾಗಲಿದೆ ಹಾಗೂ ಅಣ್ಣನನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ನೋಡುವ ಆಸೆಯಿದೆ ಎನ್ನುವ ಹಿಂದಿನ ಹೇಳಿಕೆ ಬಗ್ಗೆ ಕೇಳಿದಾಗ, ಆಸೆಯಿದೆ ಎಂದು ಹೇಳಿದ್ದೆ. ಅವರ ಹಣೆಯಲ್ಲಿ ‌ಬರೆದಿದ್ದರೆ ಅದು ಆಗುತ್ತದೆ, ಇಲ್ಲದಿದ್ದರೆ ಇಲ್ಲ. ಪಕ್ಷ ಹೇಳಿದಂತೆ ಅವರು ನಡೆದುಕೊಳ್ಳುತ್ತಾರೆ. ಪಕ್ಷದ ಅಧ್ಯಕ್ಷರಾಗಿ, ಡಿಸಿಎಂ ಆಗಿ ಪಕ್ಷದ ಏಳಿಗೆಗೆ, ಘನತೆಗೆ ಚ್ಯುತಿ ಬರದಂತೆ ಅವರು ನಡೆದುಕೊಳ್ಳುತ್ತಿದ್ದಾರೆ ಎಂದರು. ಇದನ್ನೂ ಓದಿ: ನಾವು ಮಾತಾಡಿದಷ್ಟು ಪಕ್ಷಕ್ಕೆ ಡ್ಯಾಮೇಜ್, ಸೈಲೆಂಟ್ ಆಗಿ ಇರದಿದ್ರೆ ವಿಪಕ್ಷಗಳಿಗೆ ಆಹಾರ ಆಗ್ತೀವಿ: ರಾಮಲಿಂಗಾ ರೆಡ್ಡಿ

    ಪಕ್ಷನಿಷ್ಠರಾಗಿ ಡಿ.ಕೆ.ಶಿವಕುಮಾರ್ ನಡೆದುಕೊಳ್ಳುತ್ತಿದ್ದಾರೆ. ನವೆಂಬರ್ ಕ್ರಾಂತಿ ವಿಚಾರದ ಬಗ್ಗೆ ಅವರು ಗಮನ ಹರಿಸುತ್ತಿಲ್ಲವಲ್ಲ ಎಂದು ಕೇಳಿದಾಗ, ಪಕ್ಷದ ಅಧ್ಯಕ್ಷರಾಗಿ ಎಲ್ಲರನ್ನೂ ಸಮಾನವಾಗಿ ನೋಡಬೇಕಿರುವುದು ಅವರ ಕರ್ತವ್ಯ ಎಂದು ಹೇಳಿದರು.

    ನವೆಂಬರ್ 15 ರ ನಂತರ ಏನಾದರೂ ಬದಲಾವಣೆ ಆಗುತ್ತದೆಯೇ ಎಂಬ ಪ್ರಶ್ನೆಗೆ, ನನಗೆ ನವೆಂಬರ್ ಎಂದರೆ ಕನ್ನಡ ರಾಜ್ಯೋತ್ಸವ ನೆನಪಾಗುತ್ತದೆ. ನಾವು, ನೀವೆಲ್ಲರೂ ಸೇರಿ ಈ ಹಬ್ಬವನ್ನು ಆಚರಣೆ ಮಾಡೋಣ. ಮಿಕ್ಕ ವಿಚಾರಗಳ ಬಗ್ಗೆ ನನಗೆ ತಿಳಿದಿಲ್ಲ. ಈ ಪ್ರಶ್ನೆಯನ್ನು ಪಕ್ಷದ ಅಧ್ಯಕ್ಷರು, ಮುಖ್ಯಮಂತ್ರಿಯವರು, ಎಐಸಿಸಿ ನಾಯಕರಿಗೆ ಕೇಳಬೇಕು ಎಂದು ತಿಳಿಸಿದರು. ಇದನ್ನೂ ಓದಿ: ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ ಬಗ್ಗೆ ಮಾತಾಡದೇ ಬಾಯಿಮುಚ್ಚಿಕೊಂಡು ಇರ್ಬೇಕು: ಬೋಸರಾಜು

    2028 ಕ್ಕೆ ಸಿದ್ದರಾಮಯ್ಯ ಅವರ ಸ್ಪರ್ಧೆ ತಪ್ಪಿಲ್ಲ
    ರಾಜಕೀಯದಲ್ಲಿ 95-98 ವರ್ಷ ಆದವರೂ ಇದ್ದಾರೆ. ಸಿದ್ದರಾಮಯ್ಯ ಅವರು ಸ್ಪರ್ಧಿಸುತ್ತೇನೆ ಎನ್ನುವುದರಲ್ಲಿ ಯಾವ ತಪ್ಪೂ ಇಲ್ಲ.‌ ಅವರು ನಮ್ಮ ನಾಯಕರು. ಮುಂದಿನ ಚುನಾವಣೆಯನ್ನು ಅವರ ನೇತೃತ್ವದಲ್ಲಿ ಎದುರಿಸುತ್ತೇವೆ. ಒಬ್ಬ ನಾಯಕನಿಗೆ ಇರಬೇಕಾದ ಎಲ್ಲಾ ಅವಕಾಶಗಳು ಅವರಿಗಿದೆ. ಎಲ್ಲರಿಗಿಂತ ಗಟ್ಟಿಯಾಗಿ, ಚೆನ್ನಾಗಿ ಓಡಾಡುತ್ತಿದ್ದಾರೆ. ದಿನನಿತ್ಯ ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. ಉತ್ತಮವಾಗಿ ಆಡಳಿತ ನಡೆಯುತ್ತಿದೆ. ಅವರ ನಾಯಕತ್ವದಲ್ಲಿ ಚುನಾವಣೆ ಎದುರಿಸುವುದರಲ್ಲಿ ತಪ್ಪೇನಿಲ್ಲ ಎಂದರು.

    2.5 ವರ್ಷದ ಬಗ್ಗೆ ಹೆಚ್ಚು ಮಾಹಿತಿಯಿಲ್ಲ. ಇದು ಎರಡೂವರೆ ವರ್ಷದ ವಿಚಾರವಲ್ಲ. ಐದು ವರ್ಷಗಳ ಕಾಲ ಕೆಲಸ ಮಾಡಿ ಎಂದು ಜನ ಆಶೀರ್ವಾದ ಮಾಡಿದ್ದಾರೆ. 140 ಸ್ಥಾನಗಳನ್ನು ಕೊಟ್ಟಿದ್ದಾರೆ. ನಾವು ಜನರ ಹಿತವನ್ನು ಕಾಯಬೇಕು. ಕೊಟ್ಟಿರುವ ಮಾತು ಉಳಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಪಕ್ಷ ಹಾಗೂ ಸರ್ಕಾರ ಒಟ್ಟಾಗಿ ಕೆಲಸ‌ ಮಾಡುತ್ತಿವೆ ಎಂದು ತಿಳಿಸಿದರು.

    ಆರ್‌ಎಸ್‌ಎಸ್ ತನ್ನ ಕೆಲವು ಬದಲಾವಣೆ ಮಾಡಿಕೊಳ್ಳಬೇಕು
    ಆರ್‌ಎಸ್‌ಎಸ್ ಪಥಸಂಚಲ‌ನಕ್ಕೆ ಯಾವುದೇ ಕಡಿವಾಣ ಹಾಕಿಲ್ಲ. ದೊಣ್ಣೆ ಹಿಡಿದುಕೊಂಡು ಮಾಡುವ ಪಥಸಂಚಲನಕ್ಕೆ ವಿರೋಧವಿದೆ. ದೊಣ್ಣೆ ಹಿಡಿದುಕೊಂಡು ಮಾಡುವ ಪಥಸಂಚಲನ ಹಿಂದಿನ ಕಾಲದಲ್ಲಿ ಸರಿ ಎನಿಸುತ್ತಿತ್ತು. ಬೇರೆಯವರು ಇದೇ ಸಂದರ್ಭದಲ್ಲಿ ಲಾಠಿ ಹಿಡಿದು ಓಡಾಡುವುದಕ್ಕೆ ಅವಕಾಶ ನೀಡುತ್ತೀರಾ ಎನ್ನುವುದು ಇಲ್ಲಿನ ಪ್ರಶ್ನೆ. ಇವರು ದೊಣ್ಣೆ ಹಿಡಿದು ಓಡಾಡುತ್ತಾರೆ. ಬೇರೆ ಸಮುದಾಯ, ಸಂಘಟನೆಗಳು ಇದೇ ಕೆಲಸ ಮಾಡಿದರೆ ಆಗ ಏನಾಗುತ್ತದೆ ಎನ್ನುವುದನ್ನು ಚಿಂತನೆ ಮಾಡಬೇಕಾದ ಕಾಲವಿದು. ಅದರ ಬಗ್ಗೆ ಸ್ಪಷ್ಟನೆ ನೀಡಬೇಕಿದೆ. ಈ ಮೊದಲು ಆರ್‌ಎಸ್‌ಎಸ್ ನವರು ಚಡ್ಡಿ ಹಾಕುತ್ತಿದ್ದರು. ಈಗ ಪ್ಯಾಂಟ್ ಧರಿಸುತ್ತಿದ್ದಾರೆ. ಅಂದರೆ ಬದಲಾವಣೆಗಳನ್ನು ಅವರೂ ಸಹ ಮಾಡಿಕೊಳ್ಳಬೇಕು. ನಾನು ಅವರಿಗೆ ಹೇಳುವಷ್ಟು ದೊಡ್ಡವನಲ್ಲ. ಅವರೇ ಇದರ ಬಗ್ಗೆ ಅರಿತುಕೊಂಡರೆ ಒಳ್ಳೆಯದು ಎಂದರು.

  • ಇಡಿಯಿಂದ ಎರಡನೇ ಬಾರಿ ವಿಚಾರಣೆ – ಆಸ್ತಿಯ ಲೆಕ್ಕ ಕೊಟ್ಟ ಡಿ.ಕೆ ಸುರೇಶ್

    ಇಡಿಯಿಂದ ಎರಡನೇ ಬಾರಿ ವಿಚಾರಣೆ – ಆಸ್ತಿಯ ಲೆಕ್ಕ ಕೊಟ್ಟ ಡಿ.ಕೆ ಸುರೇಶ್

    ಬೆಂಗಳೂರು: ಐಶ್ವರ್ಯ ಗೌಡಳಿಂದ (Aishwarya Gowda) ವಂಚನೆ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಮಾಜಿ ಸಂಸದ ಡಿ.ಕೆ ಸುರೇಶ್‌ರನ್ನ (D K Suresh) ಎರಡನೇ ಬಾರಿಗೆ ವಿಚಾರಣೆ ನಡೆಸಿದ್ದಾರೆ.

    10 ದಿನಗಳ ಹಿಂದೆ ವಿಚಾರಣೆ ಎದರುಸಿದ ಬಳಿಕ ಜುಲೈ 8ಕ್ಕೆ ಹೆಚ್ಚುವರಿ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಮಂಗಳವಾರ 11 ಗಂಟೆ ವೇಳೆಗೆ ವಿಚಾರಣೆಗೆ ಹಾಜರಾಗಿ ಮಧ್ಯಾಹ್ನ 2 ಗಂಟೆವರೆಗೂ ವಿಚಾರಣೆ ಎದುರಿಸಿದರು. ಇದನ್ನೂ ಓದಿ: ಕಾಂತಾರ ಪ್ರೀಕ್ವೆಲ್ ಯಶಸ್ಸಿಗಾಗಿ ರಿಷಬ್ ಶೆಟ್ಟಿ ಸ್ನೇಹಿತರಿಂದ ವಿಶೇಷ ಪೂಜೆ

    ವಿಚಾರಣೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅನ್ಯಾಯಕ್ಕೆ ಒಳಗಾಗಿದ್ದವರು ಏನು ಮಾಹಿತಿ ಕೊಟ್ಟಿದ್ದಾರೊ ನನಗೆ ಗೊತ್ತಿಲ್ಲ. ನನ್ನನ್ನು ಕರೆದಿದ್ದಾರೆ ಅದಕ್ಕೆ ಬಂದು ಹೇಳಿಕೆ ಕೊಟ್ಟಿದ್ದೇನೆ. ಅವರು ಕೇಳಿದ ದಾಖಲೆ ನೀಡಿದ್ದೇನೆ. ವೈಯಕ್ತಿಕ ಆಸ್ತಿ ಹಾಗೂ ಅದರ ದಾಖಲೆಗಳನ್ನು ಕೇಳಿದರು ಅದನ್ನೂ ಕೊಟ್ಟಿದ್ದೇನೆ ಎಂದರು. ಇದನ್ನೂ ಓದಿ: ಶೂ ಒಳಗೆ, ಮನೆ ಎದುರು ಕೀ ಮುಚ್ಚಿಡುವವರೇ ಹುಷಾರ್ – 65 ಲಕ್ಷ ರೂ. ಕನ್ನ ಹಾಕಿದ್ದವ ಅರೆಸ್ಟ್

    ನನಗೂ ಆಕೆಗೂ ಯಾವುದೇ ಸಂಬಂಧ ಇಲ್ಲ. ಅದು ಹೇಗೆ ಈ ಕೇಸ್‌ಗೆ ಲಿಂಕ್ ಮಾಡಿದ್ರೋ ಗೊತ್ತಿಲ್ಲ. ಕೊಟ್ಟಿರುವ ದಾಖಲೆಗಳನ್ನು ಪರಿಶೀಲನೆ ನಡೆಸುತ್ತೇವೆ ಎಂದಿದ್ದಾರೆ. ಅವರು ಪರಿಶೀಲನೆ ನಡೆಸಲಿ. ಮತ್ತೆ ವಿಚಾರಣೆಗೆ ಬನ್ನಿ ಎಂದು ಕರೆದಿಲ್ಲ. ಐಟಿಗೂ, ಲೋಕಾಯುಕ್ತಕ್ಕೂ ಸಹ ಮಾಹಿತಿ ಮತ್ತು ದಾಖಲಾತಿ ಕೊಟ್ಟಿದ್ದೇವೆ. ಅದೇ ರೀತಿ ಇಲ್ಲಿಯೂ ಕೊಟ್ಟಿದ್ದು ವಿಚಾರಣೆಗೆ ಸಂಪೂರ್ಣ ಸಹಕಾರ ನೀಡಿದ್ದೇನೆ ಎಂದು ಹೇಳಿದರು.

  • 2 ಕೋಟಿಗೂ ಅಧಿಕ ಮೌಲ್ಯದ ಫ್ಲ್ಯಾಟ್‌ ಸೇರಿ ʻಬಂಗಾರಿʼಗೌಡಳ 3.98 ಕೋಟಿ ಆಸ್ತಿ ಜಪ್ತಿ

    2 ಕೋಟಿಗೂ ಅಧಿಕ ಮೌಲ್ಯದ ಫ್ಲ್ಯಾಟ್‌ ಸೇರಿ ʻಬಂಗಾರಿʼಗೌಡಳ 3.98 ಕೋಟಿ ಆಸ್ತಿ ಜಪ್ತಿ

    ಬೆಂಗಳೂರು: ಐಶ್ವರ್ಯಗೌಡ ವಂಚನೆ ಪ್ರಕರಣದಲ್ಲಿ (Fraud Case) ಮಾಜಿ ಸಂಸದ, ಕಾಂಗ್ರೆಸ್ ಮುಖಂಡ ಡಿ.ಕೆ.ಸುರೇಶ್ (DK Suresh) ಇಂದು ಇಡಿ ತನಿಖೆ ಎದುರಿಸಿದ್ದಾರೆ. ಬೆಳಗ್ಗೆ 11 ಗಂಟೆಯಿಂದ ಸಂಜೆ 6 ಗಂಟೆವರೆಗೆ ಸುದೀರ್ಘ 7 ಗಂಟೆಗಳ ವಿಚಾರಣೆ ಎದುರಿಸಿದ್ದಾರೆ. ಜುಲೈ 8ಕ್ಕೆ ಮತ್ತೆ ವಿಚಾರಣೆಗೆ ಬರುವಂತೆ ಇಡಿ ಸೂಚಿಸಿದೆ.

    ಈ ನಡುವೆ ಐಶ್ವರ್ಯಗೌಡಗೆ (Aishwarya Gowda) ಸೇರಿದ್ದ 3.98 ಕೋಟಿ ಆಸ್ತಿಯನ್ನು ಇಡಿ ಜಪ್ತಿ ಮಾಡಿದೆ. ಇದರಲ್ಲಿ 2.01 ಕೋಟಿ ಮೌಲ್ಯದ ಫ್ಲ್ಯಾಟ್, 1.97 ಕೋಟಿ ಮೌಲ್ಯದ ನಗದು, ಚಿನ್ನಾಭರಣ ಸೇರಿದೆ. ಆಸ್ತಿ ಸೀಜ್ ಆಗಿರೊ ಬಗ್ಗೆ ಇಡಿ ಅಧಿಕೃತ ಮಾಹಿತಿ ಹಂಚಿಕೊಂಡಿದೆ.ಇದನ್ನೂ ಓದಿ: ಮದ್ವೆಯಾದ ಒಂದೇ ತಿಂಗಳಿಗೆ ಪತಿ ಶವವಾಗಿ ಪತ್ತೆ – ಬ್ಯಾಂಕ್ ಉದ್ಯೋಗಿ ಜೊತೆಗಿನ ಅಫೇರ್ ಕಾರಣ; ರಹಸ್ಯ ಬಯಲು

    ಐಶ್ವರ್ಯಗೌಡಳ ಮೇಲೆ ರಾಜ್ಯದಲ್ಲಿ ವಂಚನೆ ಸಂಬಂಧ ಹಲವು ಎಫ್‌ಐಆರ್‌ಗಳಾಗಿದ್ವು. ಅಕ್ರಮ ಹಣ ವರ್ಗಾವಣೆ ಹಿನ್ನೆಲೆ ಇದೀಗ ಇಡಿ ಐಶ್ವರ್ಯಳ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದೆ.

    ಇನ್ನೂ ವಿಚಾರಣೆ ಬಳಿಕ ಮಾತನಾಡಿದ ಡಿ.ಕೆ ಸುರೇಶ್, ಇಡಿ ಕೇಳಿದ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಕೊಟ್ಟಿದ್ದೇನೆ. ಜುಲೈ 8ಕ್ಕೆ ವಿಚಾರಣೆಗೆ ಕರೆದಿದ್ದಾರೆ. ಸಹಕಾರ ಕೊಡ್ತೇನೆ ಅಂದಿದ್ದಾರೆ. ಇದನ್ನೂ ಓದಿ: ಉಪಚುನಾವಣೆ ಫಲಿತಾಂಶ ಪ್ರಕಟ – ಎಎಪಿ 2, ಬಿಜೆಪಿ, ಕಾಂಗ್ರೆಸ್, ಟಿಎಂಸಿ ತಲಾ ಒಂದೊಂದು ಕ್ಷೇತ್ರಗಳಲ್ಲಿ ಗೆಲುವು

  • ಬಮೂಲ್ ಅಧ್ಯಕ್ಷರಾಗಿ ಮಾಜಿ ಸಂಸದ ಡಿ.ಕೆ.ಸುರೇಶ್ ಅವಿರೋಧ ಆಯ್ಕೆ

    ಬಮೂಲ್ ಅಧ್ಯಕ್ಷರಾಗಿ ಮಾಜಿ ಸಂಸದ ಡಿ.ಕೆ.ಸುರೇಶ್ ಅವಿರೋಧ ಆಯ್ಕೆ

    ಬೆಂಗಳೂರು: ಸಹಕಾರ ಹಾಲು ಒಕ್ಕೂಟ (Bamul)ದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಡಿ.ಕೆ.ಸುರೇಶ್ (D.K.Suresh) ಸಂಘದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

    ಬಮೂಲ್ ಆಡಳಿತ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ.ಸುರೇಶ್ ಅವರು ಬೆಂಗಳೂರು ಡೈರಿ ಸರ್ಕಲ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದರು. ಈ ಸ್ಥಾನಕ್ಕೆ ಬೇರೆ ಯಾರೂ ಉಮೇದುವಾರಿಕೆ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: ಗುತ್ತಿಗೆ ಆಯ್ತು ಈಗ ವಸತಿ ಯೋಜನೆಯಲ್ಲೂ ಮುಸ್ಲಿಮ್‌ ಮೀಸಲಾತಿ ಶೇ.15ಕ್ಕೆ ಹೆಚ್ಚಳ

    ನಂತರ ಮಾತನಾಡಿದ ಅವರು, ಬೆಂಗಳೂರು ಸಹಕಾರ ಹಾಲು ಒಕ್ಕೂಟ ನಿಯಮಿತ (ಬಮೂಲ್)ನಲ್ಲಿ 16 ನಿರ್ದೇಶಕರ ಪೈಕಿ 14 ಜನ ಚುನಾವಣೆ ಮೂಲಕ ಆರಿಸಲಾಗಿದ್ದು, ಇಬ್ಬರು ಸರ್ಕಾರದಿಂದ ನಾಮನಿರ್ದೇಶನಗೊಂಡಿದ್ದಾರೆ. ಬಮೂಲ್‌ನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನನ್ನನ್ನು ಅಧ್ಯಕ್ಷನನ್ನಾಗಿ, ಮಾಗಡಿ ತಾಲೂಕಿನ ಕುದೂರು ರಾಜಣ್ಣ ಅವರನ್ನು ಉಪಾಧ್ಯಕ್ಷರನ್ನಾಗಿ ಎಲ್ಲಾ ನಿರ್ದೇಶಕರು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ನಮ್ಮ ಪಕ್ಷದ ಅಧ್ಯಕ್ಷರಾದ ಡಿಸಿಎಂ ಡಿ.ಕೆ.ಶಿವಕುಮಾರ್, ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾರೆಡ್ಡಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ, ಶಾಸಕರಾದ ಬಾಲಕೃಷ್ಣ, ಸಿ.ಪಿ.ಯೋಗೇಶ್ವರ್, ಇಕ್ಬಾಲ್ ಹುಸೇನ್, ಶಿವಣ್ಣ, ಶರತ್ ಬಚ್ಚೇಗೌಡ, ಕೃಷ್ಣ ಬೈರೇಗೌಡರು ಸೇರಿದಂತೆ ಬಮೂಲ್‌ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಶಾಸಕರ ಸರ್ವಸಮ್ಮತದ ತೀರ್ಮಾನದಂತೆ ನನ್ನನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

    ಈ ಸಂದರ್ಭದಲ್ಲಿ ಎಲ್ಲರಿಗೂ ನಾನು ವೈಯಕ್ತಿಕವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಇಂದು ನಡೆದ ಚುನಾವಣೆಯಲ್ಲಿ ಸಹಕಾರ ಸಂಸ್ಥೆ ಜವಾಬ್ದಾರಿಯನ್ನು ನನಗೆ ನೀಡಿದ್ದಾರೆ. ಈ ಒಕ್ಕೂಟದ ಹಾಲು ಉತ್ಪಾದಕರು, ರೈತ ಬಾಂಧವರು ನಮ್ಮ ಮೇಲೆ ನಿರೀಕ್ಷೆ ಇಟ್ಟು ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದಾರೆ. ಅವರಿಗೂ ಧನ್ಯವಾದ ತಿಳಿಸುತ್ತೇನೆ. ಹಾಲು ಉತ್ಪಾದಕರು, ನಿರ್ದೇಶಕರು ಬದಲಾವಣೆ ತರುವ ನಿರೀಕ್ಷೆ ಹೊಂದಿದ್ದು, ಎಲ್ಲರ ಸಹಕಾರ ಪಡೆದು ಬೆಂಗಳೂರು ಸಹಕಾರ ಹಾಲು ಒಕ್ಕೂಟ ಹಾಗೂ ರೈತರಿಗೆ ನ್ಯಾಯ ಒದಗಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣ – ಹೆಚ್‌ಡಿಕೆಗೆ ಬಿಗ್ ರಿಲೀಫ್

    ಕನಕಪುರ ಹಾಲು ಒಕ್ಕೂಟದಲ್ಲಿ ಇತ್ತೀಚೆಗೆ ಪರಿಸರಸ್ನೇಹಿ ಹಾಲಿನ ಪ್ಯಾಕೆಟ್ ಪರಿಚಯಿಸಿದ್ದೀರಿ. ಅದನ್ನು ಬಮೂಲ್‌ಗೂ ವಿಸ್ತರಣೆ ಮಾಡುತ್ತೀರಾ ಎಂದು ಕೇಳಿದಾಗ, ನಾವು ಪರಿಸರ ಸ್ನೇಹಿ ಹಾಲಿನ ಪ್ಯಾಕೆಟ್ ಅನ್ನು ಪರಿಚಯಿಸಿದ್ದು, ಇದನ್ನು ಬೆಂಗಳೂರಿಗೆ ಮಾತ್ರವಲ್ಲ ಕರ್ನಾಟಕ ರಾಜ್ಯಾದ್ಯಂತ ಪರಿಚಯಿಸುವ ಚಿಂತನೆ ಇದೆ. ಪ್ರಾಯೋಗಿಕವಾಗಿ ಒಂದು ಪಂಚಾಯ್ತಿ ಮಟ್ಟದಲ್ಲಿ ಇದನ್ನು ವಿತರಣೆ ಮಾಡಿದ್ದೇವೆ. ಮುಂದಿನ ಆಡಳಿತ ಮಂಡಳಿಯಲ್ಲಿ ಇದರ ಸಾಧಕ-ಬಾಧಕಗಳನ್ನು ವಿಸ್ತೃತವಾಗಿ ಚರ್ಚೆ ಮಾಡಿ ತೀರ್ಮಾನ ಮಾಡಲಾಗುವುದು. ಮಾರುಕಟ್ಟೆ ವ್ಯಾಪ್ತಿ ಹೆಚ್ಚಿಸಿ, ಹಾಲು ಉತ್ಪಾದಕರಿಗೆ ನ್ಯಾಯ ಒದಗಿಸುವ ಜವಾಬ್ದಾರಿ ನಮ್ಮ ಮೇಲಿದ್ದು, ಹಂತಹಂತವಾಗಿ ಇದನ್ನು ಮಾಡುತ್ತೇವೆ. ಆಡಳಿತ ಮಂಡಳಿಯ ಎಲ್ಲಾ ಸದಸ್ಯರು ಸೇರಿ ಸಂಘದ ಆಗುಹೋಗುಗಳ ಬಗ್ಗೆ ಸರ್ಕಾರದ ಜತೆ ಚರ್ಚಿಸಿ, ಬದಲಾವಣೆ ತರಬೇಕಾಗಿದೆ. ಈ ನಿಟ್ಟಿನಲ್ಲಿ ಮಾಧ್ಯಮ ಸೇರಿದಂತೆ ಎಲ್ಲರ ಸಹಕಾರ ಕೋರುತ್ತೇನೆ. ರೈತರ ಬದುಕು ಹಾಲಿನ ಕ್ಷೇತ್ರದಲ್ಲಿದೆ. ನೀವು ನನ್ನ ಮೇಲೆ ಹಾಗೂ ಒಕ್ಕೂಟದ ಮೇಲೆ ನಂಬಿಕೆ ಇಟ್ಟಿದ್ದು, ಇದಕ್ಕೆ ನ್ಯಾಯವನ್ನು ಒದಗಿಸುವಂತೆ ಬದಲಾವಣೆ ತರುವ ಪ್ರಯತ್ನ ಮಾಡುತ್ತೇನೆ ಎಂದಿದ್ದಾರೆ.

  • ಐಶ್ವರ್ಯಗೌಡ ವಂಚನೆ ಕೇಸ್ – ಡಿ.ಕೆ.ಸುರೇಶ್‌ಗೆ ED ಸಮನ್ಸ್

    ಐಶ್ವರ್ಯಗೌಡ ವಂಚನೆ ಕೇಸ್ – ಡಿ.ಕೆ.ಸುರೇಶ್‌ಗೆ ED ಸಮನ್ಸ್

    ಬೆಂಗಳೂರು: ಐಶ್ವರ್ಯಗೌಡ (Aishwarya Gowda) ವಂಚನೆ ಪ್ರಕರಣದಲ್ಲಿ ಮಾಜಿ ಸಂಸದ ಡಿ.ಕೆ.ಸುರೇಶ್ (D.K.Suresh) ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಕೊಟ್ಟಿದೆ.

    ಐಶ್ವರ್ಯಗೌಡ ಕೇಸ್‌ನಲ್ಲಿ ಈಗಾಗಲೇ ಶಾಸಕ ವಿನಯ್ ಕುಲಕರ್ಣಿ ಸಂಕಷ್ಟ ಎದುರಿಸುತ್ತಿದ್ದಾರೆ. ಅವರ ಬೆನ್ನಲ್ಲೇ ಕಾಂಗ್ರೆಸ್ ನಾಯಕ ಡಿ.ಕೆ.ಸುರೇಶ್‌ಗೆ ಇ.ಡಿ ಶಾಕ್ ಕೊಟ್ಟಿದೆ. ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿ ವಿಸ್ಕಿ ಪ್ರಚಾರ ಮಾಡೋದಕ್ಕೆ RCB ಸಂಭ್ರಮ ಕಾರ್ಯಕ್ರಮ ಮಾಡಿದ್ರಾ?: ಸಿ.ಟಿ.ರವಿ ವಾಗ್ದಾಳಿ

    ಈ ಕುರಿತು ಪ್ರತಿಕ್ರಿಯಿಸಿರುವ ಡಿಕೆ ಸುರೇಶ್, ಮಧ್ಯಾಹ್ನ 12-30 ಗಂಟೆಗೆ ಇ.ಡಿಯವರು ಬಂದು ಸಮನ್ಸ್ ನೀಡಿದ್ದಾರೆ. ನಾನು ಹೊರಗೆ ಹೋಗಿದ್ದೆ ಇಡಿಯವರು ಬಂದಿದ್ದಾರೆ ಎಂದು ಗೊತ್ತಾದ ಮೇಲೆ ಬಂದೆ. ಅವರು ಸಮನ್ಸ್ ಕೊಟ್ಟಿದ್ದಾರೆ. ಸಮನ್ಸ್ನಲ್ಲಿ ಯಾವ ಪ್ರಕರಣ ಅಂತ ಇಲ್ಲ. ಆದರೆ, ದಾಖಲಾತಿ ನೋಡಿದಾಗ ಈ ಪ್ರಕರಣ ಅಂತ ಗೊತ್ತಾಯ್ತು ಎಂದು ತಿಳಿಸಿದ್ದಾರೆ.

    ಗುರುವಾರ ಬನ್ನಿ ಅಂದಿದ್ದಾರೆ. ಆದರೆ ಪೂರ್ವ ನಿಯೋಜಿತ ಕಾರ್ಯಕ್ರಮ ಇದೆ. ಅದಕ್ಕೆ ಸೋಮವಾರ ಬರುತ್ತೇನೆ ಎಂದು ಮೌಕಿಕವಾಗಿ ತಿಳಿಸಿದ್ದೇನೆ. ಈಗ ಇ-ಮೇಲ್ ಮೂಲಕ ಅಧಿಕೃತವಾಗಿ ತಿಳಿಸುತ್ತಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: EXCLUSIVE | ಲೋಕಾಯುಕ್ತ ಲಂಚ ಪ್ರಕರಣಕ್ಕೆ ಡೈರಿ ಮಿಸ್ಟರಿ – ನಿಂಗಪ್ಪ ಮನೆಯಲ್ಲಿದ್ದ 2 ಡೈರಿ ರಿಕವರಿ

    ನಾನು ಯಾವುದೇ ವ್ಯವಹಾರ ನಡೆಸಿಲ್ಲ. ಅವರು (ಐಶ್ವರ್ಯಗೌಡ) ನಮ್ಮ ಕ್ಷೇತ್ರದವರು ಒಂದೆರಡು ಕಾರ್ಯಕ್ರಮಕ್ಕೆ ಹೋಗಿದ್ದೆ. ನನ್ನ ತಂಗಿ ಅಂತಾ ಹೇಳಿಕೊಂಡು ಒಡಾಡುವುದರ ಬಗ್ಗೆ ನಾನೇ ದೂರು ಕೊಟ್ಟಿದ್ದೇನೆ. ಇ.ಡಿಯವರು 7-8 ದಾಖಲೆಗಳನ್ನು ಕೇಳಿದ್ದಾರೆ. ನನ್ನ ಬಳಿ ದಾಖಲೆ ಕೇಳಿದ್ದು ಅಸಂಬದ್ಧ. ಇ.ಡಿ ವಿಚಾರಣೆಗೆ ಹೋದಾಗ ಅಲ್ಲಿ ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ.

  • ಸತ್ತವರ ಬಗ್ಗೆ ಕುಮಾರಸ್ವಾಮಿಗೆ ಅನುಕಂಪ ಇದ್ಯೋ, ರಾಜಕೀಯ ಇದ್ಯೋ: ಡಿ.ಕೆ.ಸುರೇಶ್ ತಿರುಗೇಟು

    ಸತ್ತವರ ಬಗ್ಗೆ ಕುಮಾರಸ್ವಾಮಿಗೆ ಅನುಕಂಪ ಇದ್ಯೋ, ರಾಜಕೀಯ ಇದ್ಯೋ: ಡಿ.ಕೆ.ಸುರೇಶ್ ತಿರುಗೇಟು

    ರಾಮನಗರ: ಕಾಲ್ತುಳಿತ ಪ್ರಕರಣದಲ್ಲಿ ಡಿಸಿಎಂ ಡಿಕೆಶಿಯದ್ದು ಡ್ರಾಮಾ ಕಣ್ಣೀರು ಎಂಬ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಹೇಳಿಕೆ ವಿಚಾರ ಕುರಿತು ರಾಮನಗರದಲ್ಲಿ ಮಾಜಿ ಸಂಸದ ಡಿ.ಕೆ.ಸುರೇಶ್ (D.K.Suresh) ತಿರುಗೇಟು ನೀಡಿದ್ದಾರೆ.

    ಡ್ರಾಮಾ ಮಾಡೋದ್ರಲ್ಲಿ ಕುಮಾರಸ್ವಾಮಿ ಎಕ್ಸ್ಫರ್ಟ್. ಅದು ಇಡೀ ರಾಜ್ಯದ ಜನರಿಗೆ ಗೊತ್ತು. ಯಾವ ಸಂದರ್ಭದಲ್ಲಿ ಯಾವ ರೀತಿ ಡ್ರಾಮಾ ಆಡಬೇಕು, ವಿಷಯಗಳನ್ನ ಯಾವ ರೀತಿ ತಿರುಚಬೇಕು ಅನ್ನೋದು ಗೊತ್ತಿದೆ. ಅವರಿಗೆ ಸತ್ತವರ ಬಗ್ಗೆ ಅನುಕಂಪ ಇದ್ಯೋ, ರಾಜಕೀಯ ಇದ್ಯೋ.! ಅವರು ಯಾವತ್ತೂ ಸತ್ತವರ ಮೇಲೆ ರಾಜಕಾರಣ ಮಾಡಿಕೊಂಡು ಬೆಳೆದು ಬಂದವರು. ಅವರಿಗೆ ಯಾವತ್ತೂ ಸಾರ್ವಜನಿಕ ಹಿತಾಸಕ್ತಿ ಬಗ್ಗೆ ಗೌರವ ಇಲ್ಲ. ಇವತ್ತೂ ರಾಜಕೀಯಕ್ಕಾಗಿ ಆರೋಪ ಮಾಡ್ತಿದ್ದಾರೆ. ಸರ್ಕಾರದ ಕಾರ್ಯಕ್ರಮ ಇದ್ದಿದ್ದರಿಂದ ಡಿಕೆಶಿ ಅಲ್ಲಿ ಹೋಗಿದ್ರು. ವಿಧಾನಸೌದದಲ್ಲಿ ಕಾರ್ಯಕ್ರಮ ಮುಗಿದ ಬಳಿಕ ಕಾಲ್ತುಳಿತ ಆಗಿದೆ ಅಂತ ಗೊತ್ತಾಯ್ತು. ಹಾಗಾಗಿ ಚಿನ್ನಸ್ವಾಮಿ ಕ್ರೀಡಾಂಗಣದ ಕಾರ್ಯಕ್ರಮ ವೈಂಡಪ್ ಮಾಡಿಸೋಕೆ ಹೋಗಿದ್ರು. ಬಳಿಕ 10 ನಿಮಿಷದಲ್ಲಿ ಕಾರ್ಯಕ್ರಮ ಮುಗಿಸಲಾಗಿದೆ. ರಾಜಕೀಯವಾಗಿ ಏನೋ ಹೇಳಬೇಕು ಕುಮಾರಸ್ವಾಮಿ ಹೇಳ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ನಾನು ಈ ರಾಜ್ಯದ ಸಿಎಂ, ವಿಧಾನಸೌಧದಲ್ಲಿ ಕಾರ್ಯಕ್ರಮ ಆಗ್ಬೇಕು – ಆಯುಕ್ತರಿಗೆ ಗದರಿದ್ದಕ್ಕೆ ಭದ್ರತೆ ಎಂದ ಹೆಚ್‌ಡಿಕೆ

    ಪ್ರಕರಣದಲ್ಲಿ ಸಿಎಂ ಎ1, ಡಿಸಿಎಂ ಎ2 ಮಾಡಬೇಕು ಎಂಬ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿಕೆ ವಿಚಾರ ಕುರಿತು ಮಾತನಾಡಿ, ವಿಜಯೇಂದ್ರಗೆ ಹೇಳಿ ಮೊದಲು ಮೋದಿ ಹಾಗೂ ಅಮಿತ್ ಶಾರನ್ನ ಎ1, ಎ2 ಮಾಡಲಿ. ಪ್ರಯಾಗರಾಜ್‌ನಲ್ಲಿ ನಡೆದ ಘಟನೆಗೆ ಎ1, ಎ2 ಮಾಡಿ. ಕುಮಾರಸ್ವಾಮಿ ಇದರ ನೈತಿಕ ಹೊಣೆ ಹೊರ್ತಾರಾ? ಎಲ್ಲಿ ಏನೇ ಆದ್ರೂ ಡಿ.ಕೆ.ಶಿವಕುಮಾರ್ ಮಾತ್ರ ಕಾರಣ. ಡಿಕೆಶಿ ಟಾರ್ಗೆಟ್ ಮಾಡೋದು ಬಿಟ್ರೆ ಅವರಿಗೆ ಬೇರೆ ಏನೂ ಗೊತ್ತಿಲ್ಲ. ಡಿಕೆಶಿ ಒಬ್ಬರೇ ಎಲ್ಲರಿಗೂ ಕಾಣೋದು. ಯಾವ ಕಾರಣಕ್ಕೆ ಟಾರ್ಗೆಟ್ ಮಾಡ್ತಿದ್ದಾರೆ ಅಂತ ಮಾಧ್ಯಮದವರು ಹುಡುಕಿ ಎಂದರು.

    ಈ ದುರಂತಕ್ಕೆ, ಸಾವು-ನೋವಿಗೆ ಎಲ್ಲರೂ ಕಾರಣ. ಎಲ್ಲರೂ ಈ ವಿಚಾರಕ್ಕೆ ತಲೆತಗ್ಗಿಸಬೇಕಿದೆ. ಇದರಲ್ಲಿ ಸರ್ಕಾರದ ವೈಫಲ್ಯವೂ ಇದೆ. ಪೆಹಲ್ಗಾಮ್‌ನಲ್ಲಿ ಆದ ದುರಂತ ಕೇಂದ್ರ ಸರ್ಕಾರದ ವೈಫಲ್ಯ ಅಲ್ವಾ? ಕುಮಾರಸ್ವಾಮಿ ಅವ್ರು ಪ್ರಧಾನಮಂತ್ರಿ, ಹೋಂ ಮಿನಿಸ್ಟರ್ ರಾಜೀನಾಮೆ ಕೇಳಿದ್ರಾ? ಹೌದು, ಅದು ಉಗ್ರರ ಅಟ್ಟಹಾಸ, ಅಮಾಯಕರು ಬಲಿಯಾದ್ರು‌. ಅದರಲ್ಲಿ ನಾವು ರಾಜಕೀಯ ಮಾಡಲಿಲ್ಲ, ವಿಪಕ್ಷಗಳು ಬೆಂಬಲ ಕೊಡಲಿಲ್ವಾ? ಈ ಕಾಲ್ತುಳಿತ ಪ್ರಕರಣ ಕೂಡಾ ಅನಿರೀಕ್ಷಿತ ಅವಘಡ. ಲಕ್ಷಾಂತರ ಜನರು ಒಂದೇ ಕಡೆ ಸೇರಿದ್ರೆ ಅನಿರೀಕ್ಷಿತ ಘಟನೆ ನಡೆಯೋದು ಸಹಜ. ಕುಮಾರಸ್ವಾಮಿ ಸಿಎಂ ಆಗಿದ್ದಾಗ ಡಾ.ರಾಜಕುಮಾರ್ ಅಂತ್ಯಕ್ರಿಯೆಯಲ್ಲಿ ಅವಘಡ ಆಯ್ತು. ಕುಮಾರಸ್ವಾಮಿ ಆಗ ರಾಜಿನಾಮೆ ಕೊಟ್ರಾ? ಆಗ ಅವಿತುಕೊಂಡು ಕೂತಿದ್ದರು. ಇದನ್ನ ಕುಮಾರಸ್ವಾಮಿ, ಅಶೋಕ್‌, ವಿಜಯೇಂದ್ರಗೆ ಕೇಳಿ. ಇದರಲ್ಲಿ ರಾಜಕೀಯ ಬಿಡಿ. ಲೋಪ ಆಗಿರೋದು ನಿಜ. ಅದನ್ನ ಸರಿಪಡಿಸೋದು ಸರ್ಕಾರದ ಜವಾಬ್ದಾರಿ. ಇದರಲ್ಲಿ ರಾಜಕೀಯ ಮಾಡುವವರಿಗೆ ತಿಳಿಹೇಳಬೇಕು ಎಂದರು. ಇದನ್ನೂ ಓದಿ: ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಳಿಗೆ ಒಂದೊಂದು ಕೋಟಿ ಪರಿಹಾರ ಕೊಡಬೇಕು – ಲಕ್ಷ್ಮಿ ಹೆಬ್ಬಾಳ್ಕರ್‌ ಆಗ್ರಹ

  • ಅವರದ್ದೇ ಕಾರ್ಯಕರ್ತರ ಮೇಲೆ ದೌರ್ಜನ್ಯ ಮಾಡಿದ ಶಾಸಕನ ಬಗ್ಗೆ ಬಿಜೆಪಿಯವರು ಮಾತಾಡಲಿ: ಡಿಕೆ ಸುರೇಶ್

    ಅವರದ್ದೇ ಕಾರ್ಯಕರ್ತರ ಮೇಲೆ ದೌರ್ಜನ್ಯ ಮಾಡಿದ ಶಾಸಕನ ಬಗ್ಗೆ ಬಿಜೆಪಿಯವರು ಮಾತಾಡಲಿ: ಡಿಕೆ ಸುರೇಶ್

    ಬೆಂಗಳೂರು: ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರ ವಿರುದ್ಧ ದೌರ್ಜನ್ಯ ಮಾಡ್ತಿರೋ ಅವರದ್ದೇ ಶಾಸಕ ಮುನಿರತ್ನ(Munirathna) ಬಗ್ಗೆ ಬಿಜೆಪಿ ನಾಯಕರೇ ಉತ್ತರ ಕೊಡಬೇಕು ಎಂದು ಮಾಜಿ ಸಂಸದ ಡಿಕೆ ಸುರೇಶ್(D K Suresh) ಹೇಳಿದರು.

    ಆರ್‌ಆರ್ ನಗರದ(RR Nagar) ಬಿಜೆಪಿ ಶಾಸಕ ಮುನಿರತ್ನ ಮೇಲೆ ಮತ್ತೊಂದು ಕೇಸ್ ದಾಖಲು ಆಗಿರೋ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಾನು ಸಾಮಾಜಿಕ ಜಾಲತಾಣಗಳಲ್ಲಿ ನೋಡಿದ್ದೇನೆ. ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರಿಗೆ ಆದ ಅವಮಾನ ಹಾಗೂ ಅವರ ಮೇಲಾಗಿರೋ ದೌರ್ಜನ್ಯದ ಬಗ್ಗೆ ತಿಳಿಸಿದ್ದಾರೆ. ಆತ್ಮಹತ್ಯೆಗೂ ಪ್ರಯತ್ನ ಪಟ್ಟು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದಕ್ಕೆ ಬಿಜೆಪಿ ನಾಯಕರು ಉತ್ತರ ಕೊಡಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಗೃಹ ಸಚಿವ ಪರಮೇಶ್ವರ್‌ಗೆ ಇಡಿ ಶಾಕ್‌

    ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರಿಗೆ ಮಾನ್ಯ ಶಾಸಕರು ಕಿರುಕುಳ ಕೊಡ್ತಿದ್ದಾರೆ. ಶಾಸಕರ ಹೆಸರಿನಲ್ಲಿ ಅಧಿಕಾರ ದುರುಪಯೋಗ ಮಾಡಿಕೊಳ್ತಿದ್ದಾರೆ. ಇದರ ಬಗ್ಗೆ ಬಿಜೆಪಿ(BJP) ನಾಯಕರು ಉತ್ತರ ಕೊಡಬೇಕು. ಮುನಿರತ್ನರನ್ನ ಎಲ್ಲಾ ಕಡೆ ಬಿಜೆಪಿ ನಾಯಕರು ಫ್ರಂಟ್ ಲೈನ್‌ನಲ್ಲಿ ಕರೆದುಕೊಂಡು ತಿರುಗಾಡುತ್ತಿದ್ದಾರೆ. ಇದಕ್ಕೆ ಬಿಜೆಪಿ ನಾಯಕರು ಉತ್ತರ ಹೇಳಿದ್ರೆ ಒಳ್ಳೆಯದು ಎಂದರು. ಇದನ್ನೂ ಓದಿ: ಬೆಂಗ್ಳೂರು ರಸ್ತೆಗೆ ಟೈಟಾನಿಕ್ ಬೋಟ್ ಇಳಿಸಿದ ಊಬರ್!

  • ಅಣ್ಣ ಸಿಎಂ ಆಗಲಿ ಅನ್ನೋ ಆಸೆ ಈಗಲೂ ಇದೆ: ಡಿ.ಕೆ ಸುರೇಶ್

    ಅಣ್ಣ ಸಿಎಂ ಆಗಲಿ ಅನ್ನೋ ಆಸೆ ಈಗಲೂ ಇದೆ: ಡಿ.ಕೆ ಸುರೇಶ್

    – ಸಿಎಂ ಕುರ್ಚಿ ಬೇಕು ಅಂತ ಸಿದ್ದರಾಮಯ್ಯರನ್ನ ಎಳೆದು ಕೂರಿಸೋಕೆ ಆಗುತ್ತಾ?

    ಬೆಂಗಳೂರು: ಅಣ್ಣ ಸಿಎಂ ಆಗಲಿ ಅನ್ನೋ ಆಸೆ ಈಗಲೂ ಇದೆ. ಆದರೆ ಅದಕ್ಕೆ ಕಾಲ ಕೂಡಿ ಬರಬೇಕು ಎಂದು ಮಾಜಿ ಸಂಸದ ಡಿ.ಕೆ ಸುರೇಶ್ ( D K Suresh) ಹೇಳಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ (D K Shivakumar) ಹೈಕಮಾಂಡ್ ಭೇಟಿ ಯಾವುದು ಹೊಸತಲ್ಲ. ನಿರಂತರವಾಗಿ ಭೇಟಿ ಮಾಡುತ್ತಲ್ಲೇ ಇರುತ್ತಾರೆ. ಹೈಕಮಾಂಡ್ ಮುಂದೆ ಡಿಮ್ಯಾಂಡ್ ಇಡಲು ಏನಿದೆ ಪಾರ್ಟಿ ಅವರನ್ನ ಡಿಸಿಎಂ ಮಾಡಿದೆಯಲ್ಲ ಇನ್ನೇನು ಬೇಕು ಎಂದಿದ್ದಾರೆ. ಇದನ್ನೂ ಓದಿ: ನಮ್ಮ ತೆರಿಗೆ ಹಣವನ್ನ ಉತ್ತರ ಭಾರತಕ್ಕೆ ಕೊಡ್ತಿದ್ದಾರೆ: ಸತೀಶ್‌ ಜಾರಕಿಹೊಳಿ

    ಈಗ ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿ ಇದ್ದಾರೆ, ಸ್ಥಾನ ಬೇಕು ಅಂತ ಎಂದು ಚೇರ್‌ನಿಂದ ಎಳೆದು ಕೂರಿಸೋಕೆ ಆಗುತ್ತಾ? ಪಕ್ಷದ ಅಧ್ಯಕ್ಷರು ದೆಹಲಿಗೆ ಹೋಗುತ್ತಾ ಇರುತ್ತಾರೆ. ಹೈಕಮಾಂಡ್ ಜೊತೆ ಸಂಪರ್ಕ ಇಟ್ಟುಕೊಂಡಿರುತ್ತಾರೆ. ಹೈಕಮಾಂಡ್ ಭೇಟಿ ಮಾಡಿ ಬರುವುದು ಪ್ರವೃತ್ತಿ. ಡಿಕೆಶಿ ಮುಂದೆ ಯಾವುದೇ ಅಜೆಂಡ ಇಲ್ಲ. ಬೇರೆ ಯಾವುದೇ ಚಿಂತನೆಗಳೂ ಇಲ್ಲ. ಹಕ್ಕು ಅನ್ನೋ ಪ್ರಶ್ನೆ ಇಲ್ಲ ಎಂದು ನುಡಿದ್ದಾರೆ.

    ಡಿ.ಕೆ.ಶಿವಕುಮಾರ್ ಹಿಂದೆ ಪ್ರಧಾನಿ ಭೇಟಿ ಆಗುವುದು ಹೈಕಮಾಂಡ್ ಗಮನಕ್ಕೆ ತಂದಿದ್ದರು. ಶಿವರಾತ್ರಿ ಹಬ್ಬದಲ್ಲಿ ಅಮಿತ್ ಶಾ ಭೇಟಿಯೂ ಹೈಕಮಾಂಡ್ ಗಮನಕ್ಕೆ ತಂದಿದ್ದರು ಎಂದು ಹೇಳಿದ್ದಾರೆ. ಇದನ್ನೂ ಓದಿ: ಪ್ರಪಂಚದಾದ್ಯಂತ ಜನ ಭಾರತಕ್ಕೆ ಬರಲು ಇಚ್ಛಿಸುತ್ತಾರೆ, ತಿಳಿದುಕೊಳ್ಳಲು ಬಯಸುತ್ತಾರೆ – ಮೋದಿ

    ಕೇಂದ್ರದ ತೆರಿಗೆ ಕಡಿತ ಮಾಡುವ ವಿಚಾರವಾಗಿ ಪ್ರತಿಕ್ರಿಯಿಸಿ, ಈ ವಿಷಯ ಅಲ್ಲಲ್ಲಿ ಚರ್ಚೆ ಆಗುತ್ತಿದೆ. ಒಕ್ಕೂಟ ವ್ಯವಸ್ಥೆಯನ್ನು ದುರ್ಬಲ ಮಾಡುವ ಕೆಲಸ ನಡೆಯುತ್ತಿದೆ. ರಾಜ್ಯಗಳಿಗೆ ಶಕ್ತಿ ತುಂಬುವುದು ಬಿಟ್ಟು ಬಲವಂತವಾದ ಕಾನೂನು ಹೇರಲು ಹೊರಟಿದೆ ಎಂದು ಕಿಡಿಕಾರಿದ್ದಾರೆ.

    ರಾಜ್ಯಗಳ ಅಭಿವೃದ್ಧಿ ಕುಂಠಿತಕ್ಕೆ ಕೇಂದ್ರ ಸರ್ಕಾರ ಯಾವ ರೀತಿ ಕಾರಣ ಆಗುತ್ತಿದೆ ನಾವು ನೋಡ್ತಾ ಇದ್ದೇವೆ. ರಾಷ್ಟ್ರ ಹಾಗೂ ರಾಜ್ಯದ ಜನರು ತಿರುಗಿ ಬೀಳಬಹುದು. ತೆರಿಗೆ ಹಣ ಕೊಡಿ ಎಂದು ನಾನು ಮನವಿ ಮಾಡ್ತೇನೆ. ಜನಸಂಖ್ಯೆ ಆಧಾರದ ಮೇಲೆ ತೆರಿಗೆ ಹಣ ವಿಭಜನೆ ಆಗುತ್ತಿದೆ. ಮಹಿಳಾ ಮೀಸಲಾತಿ ಅನುಮೋದನೆ ಆಗಿದೆ. ಜಾತಿಗಣತಿ ಆಗುವ ಸಾಧ್ಯತೆ ಇದೆ. ಕ್ಷೇತ್ರಗಳನ್ನ ಜಾಸ್ತಿ ಮಾಡಿದರೆ, ಸಂಪೂರ್ಣವಾಗಿ ಉತ್ತರ ಭಾರತದ ಹಿಡಿತಕ್ಕೆ ಹೋಗುತ್ತದೆ. ಬಿಜೆಪಿ ನಾಯಕರು ಮಲತಾಯಿ ಧೋರಣೆ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ. ಇದನ್ನೂ ಓದಿ: ಸಿ.ಟಿ.ರವಿ – ಲಕ್ಷ್ಮಿ ಹೆಬ್ಬಾಳ್ಕರ್ ಕೇಸ್ ಎಥಿಕ್ಸ್ ಕಮಿಟಿಗೆ ರವಾನೆ: ಬಸವರಾಜ್ ಹೊರಟ್ಟಿ

    ದೇಶ ಅಂದರೆ ಉತ್ತರ ಪ್ರದೇಶ ಹಾಗೂ ಗುಜರಾತ್ ಎರಡೇ ರಾಜ್ಯ ಅಲ್ಲ. ನಮಗೂ ಕೂಡ ಸಮಾನ ಅವಕಾಶ ಸಿಗಬೇಕು ಅದನ್ನ ಕಸಿದುಕೊಳ್ಳುತ್ತಿದ್ದಾರೆ. ರಾಜಕೀಯ ಒಂದು ಕಡೆ ಇಡಿ, ನಮ್ಮ ಅಸ್ತಿತ್ವ ಉಳಿಸಿಕೊಳ್ಳಬೇಕು. ಎಲ್ಲಾ ರಾಜಕೀಯ ಪಕ್ಷಗಳು ಒಂದಾಗಬೇಕು. ಇಂಥ ಕಾನೂನು ಮಾಡಿ ನಮ್ಮನ್ನ ಸೆದೆಬಡಿಯುವುದು, ಎಲ್ಲವನ್ನೂ ಮ್ಯಾನೇಜ್ ಮಾಡುವ ಕಲೆ ಬಿಜೆಪಿಯದ್ದು ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ದೆಹಲಿ ಖಾಸಗಿ ಬ್ಯಾಂಕ್‌ನಲ್ಲಿ ಅಗ್ನಿ ಅವಘಡ – ಕಾರಣ ಸಸ್ಪೆನ್ಸ್

  • ಡಿ.ಕೆ.ಶಿವಕುಮಾರ್‌ಗೆ ಒಳ್ಳೆಯದಾಗಲಿ ಅಂತ ರಾಜಣ್ಣ ಮಾತಾಡ್ತಿದ್ದಾರೆ: ಡಿ.ಕೆ.ಸುರೇಶ್

    ಡಿ.ಕೆ.ಶಿವಕುಮಾರ್‌ಗೆ ಒಳ್ಳೆಯದಾಗಲಿ ಅಂತ ರಾಜಣ್ಣ ಮಾತಾಡ್ತಿದ್ದಾರೆ: ಡಿ.ಕೆ.ಸುರೇಶ್

    ಬೆಂಗಳೂರು: ಸಚಿವ ರಾಜಣ್ಣ ಅವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಮೇಲೆ ಪ್ರೀತಿ ಇರುವುದರಿಂದ ಅವರಿಗೆ ಒಳ್ಳೆಯದಾಗಲಿ ಎಂದು ರಾಜಣ್ಣ ಮಾತನಾಡುತ್ತಿದ್ದಾರೆ ಅಷ್ಟೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.

    ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಸಂಸದ, ಶಿವಕುಮಾರ್ ಅವರಿಗೆ ಒಳ್ಳೆಯದಾಗಲಿ ಎಂಬ ಭಾವನೆ ಎಲ್ಲರಿಗೂ ಇದೆ. ರಾಜಣ್ಣ ಅವರಿಗೆ ಡಿ.ಕೆ.ಶಿವಕುಮಾರ್ ಅವರ ಮೇಲೆ‌ ಪ್ರೀತಿ ಇದೆ. ಅದಕ್ಕೆ ಮಾತನಾಡ್ತಾರೆ. ಕಲ್ಲಿಗೆ ಏಟು ಬಿದ್ದಾಗಲೇ ಶಿಲೆ ಆಗುವುದು, ತಟ್ಟುತ್ತಿದ್ದಾರೆ ಎಂದು ತಿಳಿಸಿದ್ದಾರೆ.

    ಕೆಪಿಸಿಸಿ ಕಾರ್ಯಾಧ್ಯಕ್ಷರಿಗೆ ಕೊಂಬು ಇದೆಯಾ, ಇಲ್ವಾ ಅನ್ನೋದನ್ನ ಹೈಕಮಾಂಡ್ ತೀರ್ಮಾನ ಮಾಡುತ್ತೆ. ಹೀಗೆ ಬಹಿರಂಗವಾಗಿ ಮಾತನಾಡುವುದರಿಂದ ಡ್ಯಾಮೇಜ್ ಆಗುತ್ತೋ ಇಲ್ವೋ ಅನ್ನೋದನ್ನ ಸಿಎಂರನ್ನ ಕೇಳಿ, ಎಐಸಿಸಿ ಅಧ್ಯಕ್ಷರನ್ನು ಕೇಳಿ, ರಾಜ್ಯ ಉಸ್ತುವಾರಿಯನ್ನು ಕೇಳಿ. ಯಾರಿಗಾದರೂ ಒಳ್ಳೆಯದಾಗಬೇಕು ಅಂದ್ರೆ ಸಾಕಷ್ಟು ಜನರ ಆಶೀರ್ವಾದ ಬೇಕು. ಆಶೀರ್ವಾದ ಮಾಡ್ತಿದ್ದಾರೆ, ಪ್ರಸಾದ ಕೊಡ್ತಿದಾರೆ. ಪ್ರಸಾದ ಜಾಸ್ತಿ ಆದರೂ ಹೊಟ್ಟೆ ನೋವು ಬರಲ್ಲ. ನಾವು ಹಳ್ಳಿಯಿಂದ ಬಂದವರು ಎಂದಿದ್ದಾರೆ.

    ಪವರ್ ಶೇರಿಂಗ್ ಬಗ್ಗೆ ನನಗೆ ಏನು ಮಾಹಿತಿ ಇಲ್ಲ. ನಾನು ಸಾಮಾನ್ಯ ಕಾರ್ಯಕರ್ತ. ಅಧಿಕಾರ ಹಂಚಿಕೆ ಬಗ್ಗೆ ಈಗ ಚರ್ಚೆ ಯಾಕೆ? ಕುರ್ಚಿ ಖಾಲಿ ಇಲ್ಲ. ಚರ್ಚೆ ಹುಟ್ಟು ಹಾಕಿದವರು ಯಾರು? ಎಂದಿದ್ದಾರೆ. ಕೆಎಂಎಫ್ ಅಧ್ಯಕ್ಷ ಸ್ಥಾನ ಸೇರಿದಂತೆ ಯಾವುದೇ ಹುದ್ದೆಯ ಆಕಾಂಕ್ಷಿ ನಾನಲ್ಲ. ಜನ ನನ್ನನ್ನ ಸೋಲಿಸಿದ್ದಾರೆ. ರೆಸ್ಟ್ ಮಾಡ್ತಿದ್ದೀನಿ ಎಂದು ತಿಳಿಸಿದ್ದಾರೆ.

  • ಐಶ್ವರ್ಯ ಕೇಸಲ್ಲೀಗ ಪೊಲೀಸರಿಗೆ ಸಿಡಿಆರ್‌ ಸಂಕಷ್ಟ – ಎಸಿಪಿ ಚಂದನ್‌ಗೆ ಹೆಗಲಿಗೆ ತನಿಖೆ ಹೊಣೆ

    ಐಶ್ವರ್ಯ ಕೇಸಲ್ಲೀಗ ಪೊಲೀಸರಿಗೆ ಸಿಡಿಆರ್‌ ಸಂಕಷ್ಟ – ಎಸಿಪಿ ಚಂದನ್‌ಗೆ ಹೆಗಲಿಗೆ ತನಿಖೆ ಹೊಣೆ

    ಬೆಂಗಳೂರು: ಡಿಕೆ ಸುರೇಶ್ (DK Suresh) ಸಹೋದರಿ ಅಂತಾ ಕೋಟಿ ಕೋಟಿ ವಂಚನೆ ಮಾಡಿದ ಪ್ರಕರಣದ ಸಂಬಂಧ ಆರೋಪಿಯಾಗಿರುವ ಐಶ್ವರ್ಯಗೌಡ (Aishwarya Gowda) ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ.

    ನಾಲ್ವರ ಸಿಡಿಆರ್ ಪಡೆದುಕೊಂಡ ಸಂಬಂಧ ಎಫ್‌ಐಆರ್ ದಾಖಲಾದ ಬೆನ್ನಲ್ಲೇ, ಸಿಡಿಆರ್ ಪಡೆದ ಪ್ರಕರಣದ ತನಿಖೆಗಾಗಿಯೇ ಹೊಸ ತನಿಖಾಧಿಕಾರಿಯನ್ನು ನೇಮಕ ಮಾಡಲಾಗಿದೆ. ಎಸಿಪಿ ಚಂದನ್ ಕುಮಾರ್ (ACP Chandan) ನೇತೃತ್ವದಲ್ಲಿ ತನಿಖೆ ನಡೆಯಲಿದ್ದು, ಪ್ರಾಥಮಿಕ ತನಿಖೆಯಲ್ಲಿ ಐಶ್ವರ್ಯಗೌಡ ರಾಮನಗರದ ಹಲವು ರಾಜಕೀಯ ಮುಖಂಡರ ಸಿಡಿಆರ್ ಕಲೆಕ್ಟ್ ಮಾಡಿರೋದು ಗೊತ್ತಾಗಿದೆ. ಇದನ್ನೂ ಓದಿ: ಶಾರ್ಟ್‌ಕಟ್‌ ರಾಜಕೀಯಕ್ಕೆ ಜನರು ಶಾರ್ಟ್ ಸರ್ಕ್ಯೂಟ್ ನೀಡಿದ್ದಾರೆ – ಇದು ವಿಕಾಸದ ಗೆಲುವು ಎಂದ ಮೋದಿ

    ಇದಕ್ಕೆ ಕೆಲ ಪೊಲೀಸ್ ಅಧಿಕಾರಿಗಳನ್ನು ಕೂಡ ಬಳಸಿಕೊಂಡು ಅವರ ಜೊತೆಗೆ ಹಣದ ವ್ಯವಹಾರ ನಡೆಸಿದ್ದಾಳೆ. ಯಾವುದೇ ಪ್ರಕರಣದ ತನಿಖಾಧಿಕಾರಿಗೆ ಮಾತ್ರ ಸಿಡಿಆರ್ ಪಡೆಯುವ ಅಧಿಕಾರವಿದ್ದು, ಐಶ್ವರ್ಯಗೌಡ ಹೇಗೆ ರಾಜಕೀಯ ಮುಖಂಡರ ಸಿಡಿಆರ್ ಪಡೆದುಕೊಂಡಿದ್ದಾಳೆ. ಅದನ್ನು ಹೇಗೆ ಯಾವ ಕಾರಣಕ್ಕೆ ಬಳಸಿಕೊಳ್ತದ್ಲು ಅನ್ನೋ ಅನುಮಾನ ಪೊಲೀಸರನ್ನ ಕಾಡಿದೆ. ಇದೇ ಕಾರಣಕ್ಕೆ ಎಸಿಪಿ ಚಂದನ್ ಕುಮಾರ್ ನೇತೃತ್ವದಲ್ಲಿ ಸಿಡಿಆರ್ ಪ್ರಕರಣವನ್ನೇ ಪ್ರತ್ಯಕವಾಗಿ ತನಿಖೆಗೆ ಆದೇಶ ನೀಡಲಾಗಿದೆ.  ಇದನ್ನೂ ಓದಿ: ಕೇಜ್ರಿ`ವಾಲ್’ ಛಿದ್ರಗೊಳಿಸಿದ ಮೋದಿ-ಶಾ ಜೋಡಿಯ ಸಾಮ, ದಾನ, ಬೇಧ, ದಂಡ ತಂತ್ರ?

    ಎಸಿಪಿ ಚಂದನ್‌ಗೆ ತನಿಖೆ ಹೊಣೆ:
    ಅಕ್ರಮವಾಗಿ ಸಿಡಿಆರ್‌ ಪಡೆದ ಪ್ರಕರಣದ ತನಿಖೆಯನ್ನು ವಿಜಯನಗರ ಉಪ ವಿಭಾಗದ ಎಸಿಪಿ ಚಂದನ್‌ ಕುಮಾರ್‌ ಅವರಿಗೆ ಪಶ್ಚಿಮ ವಿಭಾಗದ ಡಿಸಿಪಿ ಎಸ್‌. ಗಿರೀಶ್‌ ವಹಿಸಿದ್ದಾರೆ. ಬ್ಯಾಟರಾಯನಪುರ ಉಪ ವಿಭಾಗದ ಎಸಿಪಿ ದೂರುದಾರರಾಗುರುವ ಕಾರಣ ತನಿಖೆ ಹೊಣೆ ಚಂದನ್‌ ಅವರ ಹೆಗಲಿಗೆ ಬಿದ್ದಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್‌ ಹಾಗೂ ಅವರ ತಂಡದ ವಿರುದ್ಧ ಎಸಿಪಿ ಚಂದನ್‌ ತನಿಖೆ ನಡೆಸಿದ್ದರು.  ಇದನ್ನೂ ಓದಿ: ಲೋಕಸಭೆಯಲ್ಲಿ ಅಯೋಧ್ಯೆ ಸೋಲಿನ ಸೇಡನ್ನು ತೀರಿಸಿದ ಬಿಜೆಪಿ