Tag: ಡಿ ನೋಟಿಫಿಕೇಷನ್

  • ಬಿಎಸ್‌ವೈಗೆ ಸುಪ್ರೀಂ ಕೋರ್ಟ್‌ನಿಂದ ಬಿಗ್ ರಿಲೀಫ್

    ಬಿಎಸ್‌ವೈಗೆ ಸುಪ್ರೀಂ ಕೋರ್ಟ್‌ನಿಂದ ಬಿಗ್ ರಿಲೀಫ್

    ನವದೆಹಲಿ: ಐಟಿ ಕಾರಿಡಾರ್ ಡಿ ನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಹೈಕೋರ್ಟ್ ಆದೇಶಕ್ಕೆ ತಡೆ ನೀಡಿರುವ ಸುಪ್ರೀಂ ಕೋರ್ಟ್ ಸದ್ಯಕ್ಕೆ ಬಿ.ಎಸ್ ಯಡಿಯೂರಪ್ಪ ವಿರುದ್ಧ ತನಿಖೆ ಮಾಡದಂತೆ ಸೂಚಿಸಿದೆ.

    ತಮ್ಮ ವಿರುದ್ಧ ಲೋಕಾಯುಕ್ತ ತನಿಖೆಗೆ ಹೈಕೋರ್ಟ್ ಸೂಚಿಸಿದ ಹಿನ್ನೆಲೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಬಿ.ಎಸ್ ಯಡಿಯೂರಪ್ಪ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ. ಎನ್.ವಿ ರಮಣ ನೇತೃತ್ವದ ತ್ರಿ ಸದಸ್ಯ ಪೀಠ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿತು.

    SUPREME COURT

    2000-2001ನಲ್ಲಿ ಐಟಿ ಕಾರಿಡಾರ್ ಯೋಜನೆಗೆ ವಶಪಡಿಸಿಕೊಂಡ ಭೂಮಿಯನ್ನು 2006 ರಲ್ಲಿ ಉಪ ಮುಖ್ಯಮಂತ್ರಿಯಾಗಿದ್ದ ಬಿ.ಎಸ್ ಯಡಿಯೂರಪ್ಪ ಅಧಿಕಾರ ದುರ್ಬಳಕೆ ಮಾಡಿಕೊಂಡು ಆಪ್ತರ ಹೆಸರಿಗೆ ಡಿ ನೋಟಿಫಿಕೇಷನ್ ಮಾಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ವಾಸುದೇವ ರೆಡ್ಡಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಇದನ್ನೂ ಓದಿ: ಹೈಕಮಾಂಡ್‍ಗೆ ಸೆಡ್ಡು ಹೊಡೆದ ಬಿಎಸ್‍ವೈ – ಪುತ್ರನಿಗೆ ಕ್ಷೇತ್ರ ಬಿಟ್ಟುಕೊಟ್ಟಿರುವ ಹಿಂದಿದೆ ಹಲವು ಲೆಕ್ಕಾಚಾರ

    ಈ ಪ್ರಕರಣವನ್ನು ವಜಾ ಮಾಡುವಂತೆ ಬಿ.ಎಸ್ ಯಡಿಯೂರಪ್ಪ ಹಾಗೂ ಮತ್ತೋರ್ವ ಆರೋಪಿ ಆರ್.ವಿ ದೇಶಪಾಂಡೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಆರ್.ವಿ ದೇಶಪಾಂಡೆ ಅವರನ್ನು ಪ್ರಕರಣದಿಂದ ಕೈ ಬಿಟ್ಟು ಬಿಎಸ್‌ವೈ ವಿರುದ್ಧ ತನಿಖೆ ನಡೆಸಲು ಸೂಚನೆ ನೀಡಿತ್ತು. ಈ ಆದೇಶವನ್ನು ಪ್ರಶ್ನೆ ಮಾಡಿ ಬಿ.ಎಸ್ ಯಡಿಯೂರಪ್ಪ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ: ಬಾಬ್ರಿ ಮಸೀದಿ ವಿವಾದ: ಅಡ್ವಾಣಿ ಸೇರಿ ಹಲವು ನಾಯಕರನ್ನು ಖುಲಾಸೆಗೊಳಿಸಿದ್ದ ಅರ್ಜಿ ಆ.1ಕ್ಕೆ ವಿಚಾರಣೆ

    Live Tv
    [brid partner=56869869 player=32851 video=960834 autoplay=true]

  • ಬಿಎಸ್‍ವೈ ಡಿ ನೋಟಿಫಿಕೇಷನ್ ಪ್ರಕರಣಕ್ಕೆ ಹೊಸ ಟ್ವಿಸ್ಟ್!

    ಬಿಎಸ್‍ವೈ ಡಿ ನೋಟಿಫಿಕೇಷನ್ ಪ್ರಕರಣಕ್ಕೆ ಹೊಸ ಟ್ವಿಸ್ಟ್!

    ಬೆಂಗಳೂರು: ಶಿವರಾಮ್ ಕಾರಂತ್ ಬಡಾವಣೆಯಲ್ಲಿ ಡಿ ನೋಟಿಫಿಕೇಷನ್ ಪ್ರಕರಣಕ್ಕೆ ದಿನಕ್ಕೊಂದು ಹೊಸ ಟ್ವಿಸ್ಟ್ ಸಿಗುತ್ತಿದೆ. ಇಡೀ ಪ್ರಕರಣವನ್ನು ಬೆನ್ನಟ್ಟಿದ ಪಬ್ಲಿಕ್ ಟಿವಿಗೆ ಮತ್ತಷ್ಟು ಸ್ಪೋಟಕ ಮಾಹಿತಿಗಳು ದೊರೆತಿದೆ.

    ಕೇವಲ ರಾಜಕೀಯ ದುರುದ್ದೇಶದಿಂದಲೇ ಬಿಎಸ್‍ವೈ ವಿರುದ್ಧ ಎಫ್‍ಐಆರ್ ದಾಖಲಿಸಿರೋ ಬಗ್ಗೆ ದಾಖಲಾತಿಗಳು ದೊರೆತಿವೆ.

    2013 ರಲ್ಲಿ ಇಡೀ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಂದಿನ ಅಪರ ಮುಖ್ಯಕಾರ್ಯದರ್ಶಿ ಆಗಿದ್ದ ಅಭಿವೃದ್ಧಿ ಆಯುಕ್ತ ಉಮೇಶ್ ಅವರು ಸರ್ಕಾರಕ್ಕೆ 14 ಪುಟಗಳ ರಹಸ್ಯ ವರದಿಯೊಂದನ್ನು ಸಲ್ಲಿಸಿದ್ದರು. ಈ ವರದಿಯಲ್ಲಿ ಡಿ ನೋಟಿಫಿಕೇಷನ್‍ಗೆ ಸಹಕಾರ ನೀಡಿದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಿ ಅಂತ ರಹಸ್ಯ ವರದಿಯಲ್ಲಿ ತಿಳಿಸಿಲಾಗಿದೆ. ಆದರೆ ಸರ್ಕಾರ ಅಂದಿನಿಂದ ಇಂದಿನವರೆಗೆ ಸುಮ್ಮನಿದ್ದು, ಆಗಸ್ಟ್ ತಿಂಗಳಲ್ಲಿ ಡಿಕೆಶಿ ಮನೆ ಮೇಲೆ ದಾಳಿ ನಡೆಯುತ್ತಿದ್ದಂತೆ ಪ್ರಕರಣದ ಬಗ್ಗೆ ಅತಿಯಾದ ಕಾಳಜಿ ತೋರಿಸುತ್ತಿದೆ.

    ಡಿ ನೋಟಿಫಿಕೇಷನ್ ಪ್ರಕರಣದ ಬಗ್ಗೆ ಜೂನ್ 6 ರಂದೇ ಜನಸಮಾನ್ಯರ ವೇದಿಕೆಯ ಅಧ್ಯಕ್ಷ ಅಯ್ಯಪ್ಪ ದೂರು ನೀಡಿದ್ರು. ಆದರೆ ಯಾವುದೇ ಕ್ರಮ ಕೈಗೊಳ್ಳದ ಸರ್ಕಾರ ಡಿಕೆಶಿ ಮೆನೆ ದಾಳಿ ಆಗುತ್ತಿದ್ದಂತೆ ಬಿಜೆಪಿ ರಾಜ್ಯಧ್ಯಕ್ಷರ ವಿರುದ್ಧ ಎಸಿಬಿಯ ಮೂಲಕ ತಿರುಗೇಟು ನೀಡಿದೆ.