Tag: ಡೀಪ್ಫೇಕ್

  • ಯೋಗಿ ಡೀಪ್‌ಫೇಕ್ ವೀಡಿಯೋ ಶೇರ್ ಮಾಡಿದ ಆರೋಪ – ಓರ್ವ ಅರೆಸ್ಟ್

    ಯೋಗಿ ಡೀಪ್‌ಫೇಕ್ ವೀಡಿಯೋ ಶೇರ್ ಮಾಡಿದ ಆರೋಪ – ಓರ್ವ ಅರೆಸ್ಟ್

    ಲಕ್ನೋ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರ ಡೀಪ್‌ಫೇಕ್ (Deep Fake) ವೀಡಿಯೋವನ್ನು ಪೋಸ್ಟ್ ಮಾಡಿ ಶೇರ್ ಮಾಡಿದ ಆರೋಪದ ಮೇಲೆ ಉತ್ತರಪ್ರದೇಶ (Uttar Pradesh) ಎಸ್‌ಟಿಎಫ್ (STF) ತಂಡ ಓರ್ವನನ್ನು ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ದಾರಿತಪ್ಪಿಸುವ ಸಂಗತಿಗಳನ್ನು ಹರಡಲು, ದೇಶ ವಿರೋಧಿ ಅಂಶಗಳನ್ನು ಬಲಪಡಿಸಲು ಈ ವಿಡಿಯೋವನ್ನು ಬಳಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಮಿತಾಬ್ ಯಶ್ ಹೇಳಿದ್ದಾರೆ. ಮೇ 1ರಂದು ಉತ್ತರ ಪ್ರದೇಶ ಮುಖ್ಯಮಂತ್ರಿಯ ಎಐ ಡೀಪ್‌ಫೇಕ್ ವೀಡಿಯೋವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಬಳಿಕ ಇದು ವೈರಲ್ ಆಗಿದೆ ಎಂದು ಯಶ್ ತಿಳಿಸಿದ್ದಾರೆ. ಇದನ್ನೂ ಓದಿ: ಹೆಚ್.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

    ಭಾರತೀಯ ದಂಡ ಸಂಹಿತೆಯ ಸೆಕ್ಷನ್ 468 (ವಂಚನೆಗಾಗಿ ಫೋರ್ಜರಿ), 505(2) (ಸಾರ್ವಜನಿಕ ಕಿಡಿಗೇಡಿತನದ ಹೇಳಿಕೆ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ನೋಯ್ಡಾ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದ್ದು, ಎಸ್‌ಟಿಎಫ್ ಈ ಬಗ್ಗೆ ತನಿಖೆ ಆರಂಭಿಸಿತ್ತು. ಇದನ್ನೂ ಓದಿ: KSET -23 ತಾತ್ಕಾಲಿಕ ಅಂಕ ಪ್ರಕಟ

    ಆರೋಪಿ ಶ್ಯಾಮ್ ಕಿಶೋರ್ ಗುಪ್ತಾನನ್ನು ಗುರುವಾರ ಬಂಧಿಸಲಾಗಿದೆ. ನೋಯ್ಡಾದ ಸ್ಥಳೀಯ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಹೆಚ್ಚಿನ ಕಾನೂನು ಪ್ರಕ್ರಿಯೆಗಳನ್ನು ನಡೆಸಲಾಗುತ್ತಿದೆ ಎಂದು ಯಶ್ ಹೇಳಿದ್ದಾರೆ. ಇದನ್ನೂ ಓದಿ: ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಬ್ರಿಜ್‌ಭೂಷಣ್‌ಗೆ ಟಿಕೆಟ್‌ ಇಲ್ಲ – ಪುತ್ರನಿಗೆ ಬಿಜೆಪಿ ಮಣೆ

  • ರಶ್ಮಿಕಾ ಮಂದಣ್ಣ ಡೀಪ್‌ಫೇಕ್ ವಿಡಿಯೋ: ವ್ಯಕ್ತಿಯ ಬಂಧನ

    ರಶ್ಮಿಕಾ ಮಂದಣ್ಣ ಡೀಪ್‌ಫೇಕ್ ವಿಡಿಯೋ: ವ್ಯಕ್ತಿಯ ಬಂಧನ

    ಕ್ಷಿಣ ಭಾರತದ ಹೆಸರಾಂತ ನಟಿ ರಶ್ಮಿಕಾ ಮಂದಣ್ಣಗೆ ಈ ಡೀಪ್‌ಫೇಕ್ ವಿಡಿಯೋ ಕಾಟ ನಿದ್ದೆಗೆಡಿಸಿತ್ತು. ಡೀಪ್‌ಫೇಕ್ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕಾಗಿ ಸಾಕಷ್ಟು ಜನರು ಒತ್ತಾಯಿಸಿದ್ದರು. ಒತ್ತಡ ಹೆಚ್ಚಾಗುತ್ತಿದ್ದಂತೆಯೇ ಪೊಲೀಸರು ಆಸಾಮಿಗಳಿಗೆ ಬಲೆ ಬೀಸಿದ್ದರು. ಕೊನೆಗೂ ವ್ಯಕ್ತಿಯೊಬ್ಬನ ಬಂಧನವಾಗಿದೆ. ರಶ್ಮಿಕಾ ಸೇರಿದಂತೆ ಹಲವರ ಡೀಪ್‌ಫೇಕ್ ವಿಡಿಯೋ ಮಾಡಿದ್ದ ಆಂಧ್ರ ಪ್ರದೇಶದ ವ್ಯಕ್ತಿಯನ್ನು ದೆಹಲಿ (Delhi) ಪೊಲೀಸರು ಬಂಧಿಸಿದ್ದಾರೆ.

    ಮೊನ್ನೆಯಷ್ಟೇ ರಶ್ಮಿಕಾ ಮಂದಣ್ಣ ಅವರ ಮತ್ತೊಂದು ಡೀಪ್‌ಫೇಕ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ತಿಂಗಳ ಹಿಂದೆಯಷ್ಟೇ ಇವರ ಡೀಪ್‌ಫೇಕ್ ವಿಡಿಯೋ ಸಾಕಷ್ಟು ಸದ್ದು ಮಾಡಿತ್ತು. ಸರಕಾರದ ಮಟ್ಟದಲ್ಲಿ ಚರ್ಚೆಗೂ ಕಾರಣವಾಗಿತ್ತು. ಆದರೂ, ಅದನ್ನು ತಡೆಯಲು ಸಾಧ್ಯವಾಗಿಲ್ಲ ಎನ್ನುವುದಕ್ಕೆ ಹರಿಬಿಟ್ಟ ಮತ್ತೊಂದು ವಿಡಿಯೋ ಸಾಕ್ಷಿಯಾಗಿತ್ತು.

    ತಿಂಗಳ ಹಿಂದೆಯಷ್ಟೇ ರಶ್ಮಿಕಾ ಮಂದಣ್ಣ (Rashmika Mandanna) ಅವರ ಡೀಪ್‌ಫೇಕ್ ವಿಡಿಯೋ ಸಂಚಲನವನ್ನೇ ಸೃಷ್ಟಿ ಮಾಡಿತ್ತು. ರಶ್ಮಿಕಾ ಪರ ಅನೇಕರು ಮಾತನಾಡಿದ್ದರು. ದುರುಳರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದರು. ಕೇಂದ್ರ ಸರಕಾರ ಕೂಡ ಇದನ್ನು ಗಂಭೀರವಾಗಿ ತೆಗೆದುಕೊಂಡು, ಡೀಪ್‌ಫೇಕ್ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗುವುದಾಗಿ ಹೇಳಿತ್ತು. ಆದರೂ, ಡೀಪ್‌ಫೇಕ್ ಕಾಟ ಮುಂದುವರೆದಿತ್ತು.

    ಡೀಪ್‌ನೆಕ್ ಬ್ಲಾಕ್ ಡ್ರೆಸ್‌ನಲ್ಲಿದ್ದ ಯುವತಿಯೊಬ್ಬರ ವಿಡಿಯೋವನ್ನು ಥೇಟ್ ರಶ್ಮಿಕಾ ಮಂದಣ್ಣ ಅವರಂತೆ ಮಾರ್ಫ್ ವಿಡಿಯೋ ಸೃಷ್ಟಿಸಿದ್ದರು. ವಿಡಿಯೋದಲ್ಲಿರುವುದು ರಶ್ಮಿಕಾ ಅಲ್ಲ, ಜರಾ ಪಟೇಲ್ ಎನ್ನುವುದು ಗೊತ್ತಾಗಿತ್ತು. ಡೀಪ್‌ಫೇಕ್ ತಂತ್ರಜ್ಞಾನ (Deepfake Technology) ಬಳಸಿ ರಶ್ಮಿಕಾ ಹೆಸರಿಗೆ ಮಸಿ ಬಳಿಯಲು ಕಿಡಿಗೇಡಿಗಳು ಯತ್ನಿಸಿದ್ದಕ್ಕೆ ನೆಟ್ಟಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

     

    ಸೂಪರ್ ಸ್ಟಾರ್, ನಟ ಅಮಿತಾಬ್ ಕೂಡ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ. ಈ ಬೆನ್ನಲ್ಲೇ ಈ ಪ್ರಕರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇದೊಂದು ಅತ್ಯಂತ ಅಪಾಯಕಾರಿ ಕೃತ್ಯ. ಇಂತಹ ಮಾರ್ಫಿಂಗ್ ವಿಡಿಯೋಗಳ ನಿಯಂತ್ರಣ ಸಾಮಾಜಿಕ ಜಾಲತಾಣಗಳ (Social Media) ಹೊಣೆ. ಅಪ್‌ಲೋಡ್ ಆದ 36 ಗಂಟೆಗಳಲ್ಲಿ ಇವುಗಳನ್ನು ತೊಲಗಿಸದಿದ್ದರೆ ಅಂತಹ ಸಾಮಾಜಿಕ ಜಾಲತಾಣವನ್ನು ಕೋರ್ಟ್‌ಗೆ ಎಳೆಯಬಹುದು ಎಂದು ಸ್ಪಷ್ಟಪಡಿಸಿದೆ.

  • ಸಚಿನ್ ತೆಂಡೂಲ್ಕರ್ ಡೀಪ್‍ಫೇಕ್ ವೀಡಿಯೋ ಪ್ರಕರಣ- ಗೇಮ್ ಅಪ್ಲಿಕೇಶನ್ ವಿರುದ್ಧ ಎಫ್‍ಐಆರ್

    ಸಚಿನ್ ತೆಂಡೂಲ್ಕರ್ ಡೀಪ್‍ಫೇಕ್ ವೀಡಿಯೋ ಪ್ರಕರಣ- ಗೇಮ್ ಅಪ್ಲಿಕೇಶನ್ ವಿರುದ್ಧ ಎಫ್‍ಐಆರ್

    ಮುಂಬೈ: ಇತ್ತೀಚೆಗೆ ವೈರಲ್ ಆಗಿದ್ದ ಕ್ರಿಕೆಟ್ ದಂತಕತೆ ಸಚಿನ್ ತೆಂಡೂಲ್ಕರ್ (Sachin Tendulkar) ಅವರ ಡೀಪ್‍ಫೇಕ್ (Deepfake) ವೀಡಿಯೋ ಸಂಬಂಧ ಮುಂಬೈ (Mumbai) ಪೊಲೀಸರು (Police) ಗೇಮಿಂಗ್ ಅಪ್ಲಿಕೇಶನ್ ಹಾಗೂ ಫೇಸ್‍ಬುಕ್ ಪುಟವೊಂದರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

    ಸಚಿನ್ ತೆಂಡೂಲ್ಕರ್ ಮತ್ತು ಅವರ ಮಗಳು ಸಾರಾ ಆನ್‍ಲೈನ್ ಗೇಮ್‍ವೊಂದರ ಮೂಲಕ ದೊಡ್ಡ ಮೊತ್ತದ ಹಣವನ್ನು ಗೆದ್ದಿದ್ದಾರೆ ಎಂದು ವೀಡಿಯೋದಲ್ಲಿ ಹೇಳಲಾಗಿತ್ತು. ಅಲ್ಲದೇ ಸಚಿನ್ ಗೇಮಿಂಗ್ ಅಪ್ಲಿಕೇಷನ್‍ನ್ನು ಪ್ರಚಾರ ಮಾಡುತ್ತಿದ್ದಾರೆ ಎಂದು ಅವರ ಧ್ವನಿ ಹಾಗೂ ಅವರ ವೀಡಿಯೋ ಬಳಸಿ ಹಂಚಿಕೊಳ್ಳಲಾಗಿತ್ತು. ಇದನ್ನು ಸಚಿನ್ ಅವರ ಟ್ವಿಟ್ಟರ್ ಮೂಲಕವೂ ಫ್ಲಾಗ್ ಮಾಡಲಾಗಿತ್ತು. ಇದನ್ನೂ ಓದಿ: ರಾಯಚೂರಿನಿಂದ ರಾಮಭಕ್ತನ ಪಾದಯಾತ್ರೆ: ರಾಮಮಂದಿರ ತಲುಪಲು 250 ಕಿ.ಮೀ ಬಾಕಿ

    ಈ ಬಗ್ಗೆ ಸಚಿನ್ ಆಪ್ತ ಸಹಾಯಕರೊಬ್ಬರು ನೀಡಿದ ದೂರಿನ ಅಡಿ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್ 500ರ ಅಡಿ (ಮಾನನಷ್ಟ) ಮತ್ತು ಐಟಿ ಕಾಯ್ದೆಯ ಸೆಕ್ಷನ್ 66ರ (ಆಕ್ಷೇಪಾರ್ಹ ಸಂದೇಶಗಳನ್ನು ಕಳುಹಿಸುವುದು) ಅಡಿಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ. ಗೇಮಿಂಗ್ ಸೈಟ್ ಮತ್ತು ಫೇಸ್‍ಬುಕ್ ಪುಟದ ಮಾಲೀಕರ ಬಗ್ಗೆ ಪೊಲೀಸರು ವಿವರಗಳನ್ನು ಹಂಚಿಕೊಂಡಿಲ್ಲ.

    ಈ ವೀಡಿಯೋ ವೈರಲ್ ಆದ ಬೆನ್ನಲ್ಲೇ ತೆಂಡೂಲ್ಕರ್ ಇದು ನಕಲಿ ವೀಡಿಯೋ ಎಂದು ಸ್ಪಷ್ಟನೆ ನೀಡಿದ್ದರು. ಅಲ್ಲದೇ ತಂತ್ರಜ್ಞಾನಗಳ ದುರುಪಯೋಗದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರು. ಈ ಬಗ್ಗೆ ಸೂಕ್ತ ಕ್ರಮಗಳು ಅವಶ್ಯಕವಾಗಿ ಬೇಕು ಎಂದು ಆಗ್ರಹಿಸಿದ್ದರು. ಇದನ್ನೂ ಓದಿ: ಇಂಡಿಯಾ ಇಂಟರ್ನ್ಯಾಷನಲ್ ಸೈನ್ಸ್ ಫೆಸ್ಟಿವಲ್- ವಿಜ್ಞಾನ ಸಾಹಿತ್ಯ ಹಬ್ಬದಲ್ಲಿ ಮಿಂಚಿದ ಕನ್ನಡ

  • ರಶ್ಮಿಕಾ ಡೀಪ್‌ಫೇಕ್ ವಿಡಿಯೋ: ಶಂಕಿತರ ವಿಚಾರಣೆ

    ರಶ್ಮಿಕಾ ಡೀಪ್‌ಫೇಕ್ ವಿಡಿಯೋ: ಶಂಕಿತರ ವಿಚಾರಣೆ

    ಶ್ಮಿಕಾ ಮಂದಣ್ಣ ಎರಡೆರಡು ಬಾರಿ ಡೀಪ್‌ಫೇಕ್ ಹಾವಳಿಗೆ ತುತ್ತಾಗಿದ್ದಾರೆ. ಡೀಪ್‌ಫೇಕ್  ಮಾಡಿರೋ ದುರುಳರನ್ನು ಹುಡುಕುವುದಕ್ಕಾಗಿ ಪೊಲೀಸ್ ಇಲಾಖೆ ಗಂಭೀರವಾಗಿ ಕಾರ್ಯಚರಣೆ ನಡೆಸಿತ್ತು. ಇದೀಗ ನಾಲ್ವರ ಶಂಕಿತರನ್ನು ಪೊಲೀಸರು ಠಾಣೆಗೆ ಕರೆಯಿಸಿಕೊಂಡಿದ್ದು, ಅವರನ್ನು ತೀವ್ರ ವಿಚಾರಣೆಗೆ (Interrogation) ಗುರಿ ಪಡಿಸಲಾಗಿದೆ. ತಾವು ವಿಡಿಯೋ ಡೀಪ್‌ಫೇಕ್ ಮಾಡಿಲ್ಲ. ಕೇವಲ ಸೋಷಿಯಲ್ ಮೀಡಿಯಾದಲ್ಲಿ ಹಾಕಿದ್ದೆವು ಎಂದು ಹೇಳಿದ ಹಿನ್ನೆಲೆಯಲ್ಲಿ ಬಿಟ್ಟು ಕಳುಹಿಸಿದ್ದಾರೆ ಎನ್ನಲಾಗುತ್ತಿದೆ.

    ಮೊನ್ನೆಯಷ್ಟೇ ರಶ್ಮಿಕಾ ಮಂದಣ್ಣ ಅವರ ಮತ್ತೊಂದು ಡೀಪ್‌ಫೇಕ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ತಿಂಗಳ ಹಿಂದೆಯಷ್ಟೇ ಇವರ ಡೀಪ್‌ಫೇಕ್ ವಿಡಿಯೋ ಸಾಕಷ್ಟು ಸದ್ದು ಮಾಡಿತ್ತು. ಸರಕಾರದ ಮಟ್ಟದಲ್ಲಿ ಚರ್ಚೆಗೂ ಕಾರಣವಾಗಿತ್ತು. ಆದರೂ, ಅದನ್ನು ತಡೆಯಲು ಸಾಧ್ಯವಾಗಿಲ್ಲ ಎನ್ನುವುದಕ್ಕೆ ಹರಿಬಿಟ್ಟ ಮತ್ತೊಂದು ವಿಡಿಯೋ ಸಾಕ್ಷಿಯಾಗಿತ್ತು.

    ತಿಂಗಳ ಹಿಂದೆಯಷ್ಟೇ ರಶ್ಮಿಕಾ ಮಂದಣ್ಣ (Rashmika Mandanna) ಅವರ ಡೀಪ್‌ಫೇಕ್ ವಿಡಿಯೋ ಸಂಚಲನವನ್ನೇ ಸೃಷ್ಟಿ ಮಾಡಿತ್ತು. ರಶ್ಮಿಕಾ ಪರ ಅನೇಕರು ಮಾತನಾಡಿದ್ದರು. ದುರುಳರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದರು. ಕೇಂದ್ರ ಸರಕಾರ ಕೂಡ ಇದನ್ನು ಗಂಭೀರವಾಗಿ ತೆಗೆದುಕೊಂಡು, ಡೀಪ್‌ಫೇಕ್ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗುವುದಾಗಿ ಹೇಳಿತ್ತು. ಆದರೂ, ಡೀಪ್‌ಫೇಕ್ ಕಾಟ ಮುಂದುವರೆದಿತ್ತು.

    ಡೀಪ್‌ನೆಕ್ ಬ್ಲಾಕ್ ಡ್ರೆಸ್‌ನಲ್ಲಿದ್ದ ಯುವತಿಯೊಬ್ಬರ ವಿಡಿಯೋವನ್ನು ಥೇಟ್ ರಶ್ಮಿಕಾ ಮಂದಣ್ಣ ಅವರಂತೆ ಮಾರ್ಫ್ ವಿಡಿಯೋ ಸೃಷ್ಟಿಸಿದ್ದರು. ವಿಡಿಯೋದಲ್ಲಿರುವುದು ರಶ್ಮಿಕಾ ಅಲ್ಲ, ಜರಾ ಪಟೇಲ್ ಎನ್ನುವುದು ಗೊತ್ತಾಗಿತ್ತು. ಡೀಪ್‌ಫೇಕ್ ತಂತ್ರಜ್ಞಾನ (Deepfake Technology) ಬಳಸಿ ರಶ್ಮಿಕಾ ಹೆಸರಿಗೆ ಮಸಿ ಬಳಿಯಲು ಕಿಡಿಗೇಡಿಗಳು ಯತ್ನಿಸಿದ್ದಕ್ಕೆ ನೆಟ್ಟಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಹಾಗಾಗಿ ಪೊಲೀಸರು ಕಿಡಿಗೇಡಿಗಳ ಬೆನ್ನು ಬಿದ್ದಿದ್ದರು.

     

    ಸೂಪರ್ ಸ್ಟಾರ್, ನಟ ಅಮಿತಾಬ್ ಕೂಡ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದರು. ಈ ಬೆನ್ನಲ್ಲೇ ಈ ಪ್ರಕರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿತ್ತು. ಇದೊಂದು ಅತ್ಯಂತ ಅಪಾಯಕಾರಿ ಕೃತ್ಯ. ಇಂತಹ ಮಾರ್ಫಿಂಗ್ ವಿಡಿಯೋಗಳ ನಿಯಂತ್ರಣ ಸಾಮಾಜಿಕ ಜಾಲತಾಣಗಳ (Social Media) ಹೊಣೆ. ಅಪ್‌ಲೋಡ್ ಆದ 36 ಗಂಟೆಗಳಲ್ಲಿ ಇವುಗಳನ್ನು ತೊಲಗಿಸದಿದ್ದರೆ ಅಂತಹ ಸಾಮಾಜಿಕ ಜಾಲತಾಣವನ್ನು ಕೋರ್ಟ್‌ಗೆ ಎಳೆಯಬಹುದು ಎಂದು ಸ್ಪಷ್ಟಪಡಿಸಿತ್ತು.

  • ಡೀಪ್‌ಫೇಕ್ ವಿರುದ್ಧ ಗುಡುಗಿದ ರಶ್ಮಿಕಾ: ದೇಶ ನೆನಪಿಸಿಕೊಳ್ಳಿ ಅಂತಾರೆ ನಟಿ

    ಡೀಪ್‌ಫೇಕ್ ವಿರುದ್ಧ ಗುಡುಗಿದ ರಶ್ಮಿಕಾ: ದೇಶ ನೆನಪಿಸಿಕೊಳ್ಳಿ ಅಂತಾರೆ ನಟಿ

    ಶ್ಮಿಕಾ ಮಂದಣ್ಣ ಇದೇ ಮೊದಲ ಬಾರಿಗೆ ಬಹಿರಂಗವಾಗಿ ಡೀಪ್‌ಫೇಕ್ ವಿರುದ್ಧ ಮಾತನಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು ಡೀಪ್‌ಫೇಕ್  ವಿರುದ್ಧ ಧ್ವನಿ ಎತ್ತುವಂತೆ ಕರೆ ನೀಡಿದ್ದಾರೆ. ನಾವು ಒಳ್ಳೆಯ ದೇಶದಲ್ಲಿ ಇದ್ದೇವೆ. ಯಾರೂ ಇದನ್ನು ಮಾಡಬಾರದು. ಅಲ್ಲದೇ ಯಾರೂ ಸುಮ್ಮನೆ ಇರಬಾರದು. ದುರುಳರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗುವಂತೆ ಆಗ್ರಹಿಸಿ ಎಂದಿದ್ದಾರೆ.

    ತಂತ್ರಜ್ಞಾನ ದುರ್ಬಳಕೆಯಿಂದ ರಶ್ಮಿಕಾ ಮಂದಣ್ಣ (Rashmika Mandanna) ಡೀಪ್‌ಫೇಕ್ (Deepafake) ವಿಡಿಯೋ ಸಖತ್ ವೈರಲ್ ಆಗಿತ್ತು. ಇದೀಗ ಆಲಿಯಾ ಭಟ್‌ಗೂ ಅದೇ ಕಂಟಕ ಎದುರಾಗಿದೆ. ಬೇರೆ ಯಾರದ್ದೋ ಮಹಿಳೆಯ ದೇಹಕ್ಕೆ ಆಲಿಯಾ ಮುಖವನ್ನ ಎಡಿಟ್ ಮಾಡಿ ವೈರಲ್ ಮಾಡಿದ್ದಾರೆ.

    ಡೀಪ್‌ಫೇಕ್ ವಿಡಿಯೋ ವೈರಲ್ ಆದ ಬೆನ್ನಲೇ ಸೈಬರ್ ಕ್ರೈಂ ತಂಡ ಕಠಿಣ ಕ್ರಮ ಕೈಗೊಂಡರೂ ಕೂಡ ಮತ್ತೆ ಕಿಡಿಗೇಡಿಗಳಿಂದ ಕಾಟ ಶುರುವಾಗಿದೆ. ಈ ಸೋಷಿಯಲ್ ಮೀಡಿಯಾದಲ್ಲಿ ಅರೆ ಬರೆ ಬಟ್ಟೆಯಲ್ಲಿ ಸಖತ್ ಹಾಟ್ ಕಾಣಿಸಿಕೊಂಡಿರುವ ಯುವತಿಯ ದೇಹಕ್ಕೆ ಆಲಿಯಾ (Aliaa Bhatt) ಮುಖ ಅಂಟಿಸಿ ವೈರಲ್ ಮಾಡಿದ್ದಾರೆ.

     

    ಈ ಹಿಂದೆಯೂ ಕೂಡ ರಶ್ಮಿಕಾ ಡೀಪ್‌ಫೇಕ್ ವಿಡಿಯೋ ವೈರಲ್ ಆದಾಗ ಅಮಿತಾಭ್ ಬಚ್ಚನ್ ಸೇರಿದಂತೆ ಹಲವರು ಕಲಾವಿದರು ರಶ್ಮಿಕಾ ಪರ ಧ್ವನಿಯೆತ್ತಿದ್ದರು. ತಪ್ಪು ಮಾಡಿದವರಿಗೆ ತಕ್ಕ ಶಿಕ್ಷೆ ಆಗಲೇಬೇಕೆಂದು ಅನೇಕರು ಮನವಿ ಮಾಡಿದ್ದರು.

  • ರಶ್ಮಿಕಾ ಬಳಿಕ ಆಲಿಯಾ ಡೀಪ್‌ಫೇಕ್ ವಿಡಿಯೋ ವೈರಲ್

    ರಶ್ಮಿಕಾ ಬಳಿಕ ಆಲಿಯಾ ಡೀಪ್‌ಫೇಕ್ ವಿಡಿಯೋ ವೈರಲ್

    ತಂತ್ರಜ್ಞಾನ ದುರ್ಬಳಕೆಯಿಂದ ರಶ್ಮಿಕಾ ಮಂದಣ್ಣ (Rashmika Mandanna) ಡೀಪ್‌ಫೇಕ್ (Deepafake) ವಿಡಿಯೋ ಸಖತ್ ವೈರಲ್ ಆಗಿತ್ತು. ಇದೀಗ ಆಲಿಯಾ ಭಟ್‌ಗೂ ಅದೇ ಕಂಟಕ ಎದುರಾಗಿದೆ. ಬೇರೆ ಯಾರದ್ದೋ ಮಹಿಳೆಯ ದೇಹಕ್ಕೆ ಆಲಿಯಾ ಮುಖವನ್ನ ಎಡಿಟ್ ಮಾಡಿ ವೈರಲ್ ಮಾಡಿದ್ದಾರೆ. ಇದನ್ನೂ ಓದಿ:ಮತ್ತೆ ಕನ್ನಡ ಸಿನಿಮಾದಲ್ಲಿ ನಟಿಸುತ್ತಾರಾ ರಶ್ಮಿಕಾ ಮಂದಣ್ಣ? ನಟಿ ಸ್ಪಷ್ಟನೆ

    ಡೀಪ್‌ಫೇಕ್ ವಿಡಿಯೋ ವೈರಲ್ ಆದ ಬೆನ್ನಲೇ ಸೈಬರ್ ಕ್ರೈಂ ತಂಡ ಕಠಿಣ ಕ್ರಮ ಕೈಗೊಂಡರೂ ಕೂಡ ಮತ್ತೆ ಕಿಡಿಗೇಡಿಗಳಿಂದ ಕಾಟ ಶುರುವಾಗಿದೆ. ಈ ಸೋಷಿಯಲ್ ಮೀಡಿಯಾದಲ್ಲಿ ಅರೆ ಬರೆ ಬಟ್ಟೆಯಲ್ಲಿ ಸಖತ್ ಹಾಟ್ ಕಾಣಿಸಿಕೊಂಡಿರುವ ಯುವತಿಯ ದೇಹಕ್ಕೆ ಆಲಿಯಾ (Aliaa Bhatt) ಮುಖ ಅಂಟಿಸಿ ವೈರಲ್ ಮಾಡಿದ್ದಾರೆ.

    ಈ ಹಿಂದೆಯೂ ಕೂಡ ರಶ್ಮಿಕಾ ಡೀಪ್‌ಫೇಕ್ ವಿಡಿಯೋ ವೈರಲ್ ಆದಾಗ ಅಮಿತಾಭ್ ಬಚ್ಚನ್ ಸೇರಿದಂತೆ ಹಲವರು ಕಲಾವಿದರು ರಶ್ಮಿಕಾ ಪರ ಧ್ವನಿಯೆತ್ತಿದ್ದರು. ತಪ್ಪು ಮಾಡಿದವರಿಗೆ ತಕ್ಕ ಶಿಕ್ಷೆ ಆಗಲೇಬೇಕೆಂದು ಅನೇಕರು ಮನವಿ ಮಾಡಿದ್ದರು. ಇದನ್ನೂ ಓದಿ:ಮತ್ತೆ ಕನ್ನಡ ಸಿನಿಮಾದಲ್ಲಿ ನಟಿಸುತ್ತಾರಾ ರಶ್ಮಿಕಾ ಮಂದಣ್ಣ? ನಟಿ ಸ್ಪಷ್ಟನೆ

    ಸದ್ಯ ಆಲಿಯಾ ಭಟ್ ಅವರು ಸಿನಿಮಾ ಮತ್ತು ತಾಯ್ತನದ ಹೊಣೆ ಸರಿದೂಗಿಸಿಕೊಂಡು ಹೋಗುತ್ತಿದ್ದಾರೆ. ಬಾಲಿವುಡ್ ಮತ್ತು ಹಾಲಿವುಡ್ ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ.

  • ಡೀಪ್‌ಫೇಕ್ ವಿಡಿಯೋಗಳ ನಿಯಂತ್ರಣಕ್ಕೆ ವಿಶೇಷ ಅಧಿಕಾರಿಯ ತಂಡ ರಚನೆ

    ಡೀಪ್‌ಫೇಕ್ ವಿಡಿಯೋಗಳ ನಿಯಂತ್ರಣಕ್ಕೆ ವಿಶೇಷ ಅಧಿಕಾರಿಯ ತಂಡ ರಚನೆ

    ನವದೆಹಲಿ: ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿನ ಡೀಪ್‌ಫೇಕ್ (Deepfake) ಹಾವಳಿಯನ್ನು ಪರಿಶೀಲಿಸಲು ಮತ್ತು ಆನ್‌ಲೈನ್‌ನಲ್ಲಿ ನಕಲಿ ವಿಷಯವನ್ನು ಪತ್ತೆಹಚ್ಚಿದಾಗ ನಾಗರಿಕರು ದೂರು ದಾಖಲಿಸಲು ಸಹಾಯ ಮಾಡಲು ಸರ್ಕಾರವು ವಿಶೇಷ ಅಧಿಕಾರಿಗಳ ತಂಡವನ್ನು ನಿಯೋಜಿಸಲಿದೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರಾಜೀವ್ ಚಂದ್ರಶೇಖರ್ (Rajeev Chandrasekhar) ಶುಕ್ರವಾರ ಹೇಳಿದ್ದಾರೆ.

    ಡೀಪ್‌ಫೇಕ್ ವಿಡಿಯೋಗಳು ಅಂತರ್ಜಾಲದಲ್ಲಿ ಹೆಚ್ಚಿದ ಬಳಿಕ ಅದ ನಿಂಯತ್ರಣಕ್ಕೆ ಈ ಕ್ರಮ ತೆಗೆದುಕೊಳ್ಳಲಾಗಿದೆ. ಇಂದಿನಿಂದ MeitY ಮತ್ತು ಭಾರತ ಸರ್ಕಾರವು ಸಮಸ್ಯೆ ಪರಿಹರಿಸಲು ಏಳು ಅಧಿಕಾರಿಗಳನ್ನು ನಾಮನಿರ್ದೇಶನ ಮಾಡುತ್ತದೆ. ಎಲ್ಲಾ ಪ್ಲಾಟ್‌ಫಾರ್ಮ್‌ಗಳಿಂದ 100% ಇದು ಮೇಲ್ವಿಚಾರಣೆ ಮಾಡಲಿದೆ ಎಂದು ರಾಜೀವ್ ಚಂದ್ರಶೇಖರ್ ತಿಳಿಸಿದ್ದಾರೆ. ಇದನ್ನೂ ಓದಿ: ಡೀಪ್‌ಫೇಕ್‌ ಸಮಾಜಕ್ಕೆ ಹಾನಿಕಾರಕ; ನಿಯಂತ್ರಣಕ್ಕೆ ಶೀಘ್ರವೇ ನಿಯಮ: ಅಶ್ವಿನಿ ವೈಷ್ಣವ್‌

    ಅಧಿಕಾರಿಗಳ ನಿಯೋಜನೆಯಿಂದ ನಾಗರಿಕರು ದೂರುಗಳು ಅಥವಾ ಕಾನೂನು ಉಲ್ಲಂಘನೆಯ ಘಟನೆಗಳನ್ನು ಸರ್ಕಾರದ ಗಮನಕ್ಕೆ ತರಲು ಬಹಳ ಸುಲಭವಾಗುತ್ತದೆ. ಏಳು ಅಧಿಕಾರಿಗಳು ದೂರಿನ ಅನ್ವಯ ಡಿಜಿಟಲ್ ಪ್ಲಾಟ್‌ಫಾರ್ಮ್ ಮಾಹಿತಿಯನ್ನು ತೆಗೆದುಕೊಂಡು ಸಮಸ್ಯೆಗೆ ಅನುಗುಣವಾಗಿ ಪ್ರತಿಕ್ರಿಯಿಸುತ್ತಾರೆ.

    ಭಾರತದ ಐಟಿ ಕಾನೂನು ಹಳೆಯದಾಗಿದ್ದು, ಡೀಪ್‌ಫೇಕ್ ಅನ್ನು ಎದುರಿಸಲು ಹೊಸ ನಿಯಮಗಳ ಸೇರ್ಪಡೆ ಬಗ್ಗೆ ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಒತ್ತಿ ಹೇಳಲಾಗಿದೆ. ಮಕ್ಕಳ ಲೈಂಗಿಕ ನಿಂದನೆ ಸೇರಿದಂತೆ ಭಾರತೀಯ ಇಂಟರ್ನೆಟ್‌ನಲ್ಲಿ ನಿಷೇಧಿಸಲಾದ ಹಲವಾರು ಇತರ ವರ್ಗಗಳ ವಿಷಯವನ್ನು ನಿರ್ಬಂಧಿಸುವ ಬಗ್ಗೆ ಚರ್ಚಿಸಿದೆ ಎಂದು ಸಚಿವರು ತಿಳಿಸಿದರು. ಇದನ್ನೂ ಓದಿ: ಮೋದಿ ಡೀಪ್‌ ಫೇಕ್‌ ವಿಡಿಯೋ ವೈರಲ್‌ – ಗರ್ಬಾ ನೃತ್ಯ ಮಾಡಿದ್ದು ನಾನೇ ಎಂದ ವ್ಯಕ್ತಿ

    ರಶ್ಮಿಕಾ ಮಂದಣ್ಣ, ಕತ್ರಿನಾ ಕೈಫ್ ಮತ್ತು ಕಾಜೋಲ್ ಸೇರಿದಂತೆ ಬಾಲಿವುಡ್ ತಾರೆಯರ ಡೀಪ್‌ಫೇಕ್ ವಿಡಿಯೋಗಳ ಸರಣಿಯು ಕಳೆದ ತಿಂಗಳು ಆನ್‌ಲೈನ್‌ನಲ್ಲಿ ವೈರಲ್ ಆಗಿ ತೀವ್ರ ಕಳವಳವನ್ನು ಹುಟ್ಟುಹಾಕಿತ್ತು. ತಮ್ಮ ಸೈಟ್‌ಗಳಿಂದ ಡೀಪ್‌ಫೇಕ್‌ ವಿಡಿಯೋ‌ಗಳನ್ನು ತೆಗೆದುಹಾಕದಿದ್ದರೆ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರವು ನವೆಂಬರ್ 24 ರಂದು ಗೂಗಲ್, ಫೇಸ್‌ಬುಕ್, ಯೂಟ್ಯೂಬ್ ಸೇರಿದಂತೆ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಿಗೆ ಸಮನ್ಸ್ ನೀಡಿದೆ.

  • ಡೀಪ್‍ಫೇಕ್ ವಿಡಿಯೋದಲ್ಲಿ ಬಾಲಿವುಡ್ ನಟಿ ಕಾಜೋಲ್

    ಡೀಪ್‍ಫೇಕ್ ವಿಡಿಯೋದಲ್ಲಿ ಬಾಲಿವುಡ್ ನಟಿ ಕಾಜೋಲ್

    ಬಾಲಿವುಡ್ ಖ್ಯಾತ ನಟಿ ಕಾಜೋಲ್ (Kajol)ಅವರ ಡೀಪ್‍ಫೇಕ್ ವಿಡಿಯೋ ವೈರಲ್ ಆಗುತ್ತಿದೆ. ರಶ್ಮಿಕಾ ಮಂದಣ್ಣ, ಕತ್ರಿನಾ (Katrina) ನಂತರ ಮತ್ತೋರ್ವ ನಟಿ ಇಂಥದ್ದೊಂದು ಕುತಂತ್ರಕ್ಕೆ ಸಿಲುಕಿಕೊಂಡಿದ್ದಾರೆ. ತಮ್ಮ ಡೀಪ್‍ಫೇಕ್ ವಿಡಿಯೋ ಕಂಡು ನಟಿ ಗರಂ ಆಗಿದ್ದಾರೆ. ಕೂಡಲೇ ದುರುಳರಿಗೆ ಹೆಡೆಮುರಿ ಕಟ್ಟುವಂತೆ ಅವರು ಪೊಲೀಸ್ ಇಲಾಖೆಗೆ ಮನವಿ ಮಾಡಿಕೊಂಡಿದ್ದಾರೆ.

    ಸೋಷಿಯಲ್ ಮೀಡಿಯಾದಲ್ಲಿ ಹೆಚ್ಚೆಚ್ಚು ಇಂತಹ ವಿಡಿಯೋಗಳು ಹರಿದಾಡುತ್ತಿವೆ. ಸಹಜವಾಗಿಯೇ ನಟಿಯರಿಗೆ ಆತಂಕ ಹೆಚ್ಚಿಸಿದೆ. ಇಂತಹ ವಿಡಿಯೋಗಳನ್ನು ಮಾಡುವವರ ವಿರುದ್ಧ ಆದಷ್ಟು ಬೇಗ ಕಠಿಣ ಕ್ರಮಕ್ಕೆ ಮುಂದಾಗಿ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಅಲ್ಲದೇ ಆಕ್ರೋಶ ಕೂಡ ಹೊರ ಹಾಕುತ್ತಿದ್ದಾರೆ.

    ಬೆನ್ನುಬಿದ್ದ ದೆಹಲಿ ಪೊಲೀಸ್

    ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್ ಆಗಿದ್ದ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರ ಡೀಪ್‍ಫೇಕ್ (Deepfake) ವೀಡಿಯೋ ವಿಚಾರವಾಗಿ ದೆಹಲಿ (Delhi) ಪೊಲೀಸರು (Police) ಬಿಹಾರ ಮೂಲದ 19 ವರ್ಷದ ಯುವಕನನ್ನು ವಿಚಾರಣೆ ನಡೆಸಿದ್ದಾರೆ.

    ಶಂಕಿತ ಯುವಕ ಮೊದಲು ಸಾಮಾಜಿಕ ಜಾಲತಾಣದಲ್ಲಿ ವೀಡಿಯೋವನ್ನು ಅಪ್‍ಲೋಡ್ ಮಾಡಿದ್ದಾನೆ. ಅಲ್ಲದೇ ನಂತರ ಅದನ್ನು ಇತರ ವೇದಿಕೆಗಳಲ್ಲಿ ವ್ಯಾಪಕವಾಗಿ ಹಂಚಿಕೊಂಡಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ. ಯುವಕನ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋವನ್ನು ಮೊದಲು ಅಪ್‍ಲೋಡ್ ಮಾಡಿದ್ದರಿಂದ ತನಿಖೆಗೆ ಹಾಜರಾಗುವಂತೆ ಯುವಕನಿಗೆ ನೋಟಿಸ್ ನೀಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

    ಬಿಹಾರ ಮೂಲದ ಯುವಕನಿಗೆ ಐಎಫ್‍ಎಸ್‍ಒ ಘಟಕದ ಮುಂದೆ ಹಾಜರಾಗಲು ಮತ್ತು ತನ್ನ ಮೊಬೈಲ್ ಫೋನ್ ತರಲು ಸೂಚಿಸಲಾಗಿತ್ತು. ಎಫ್‍ಐಆರ್ ದಾಖಲಿಸಿದ ಕೂಡಲೇ ಐಎಫ್‍ಎಸ್‍ಒ ಘಟಕವು ಆರೋಪಿಯನ್ನು ಗುರುತಿಸಲು ಯುಆರ್‍ಎಲ್ ಮತ್ತು ಇತರ ವಿವರಗಳನ್ನು ಪಡೆಯಲು ಮೆಟಾಗೆ ಪತ್ರ ಬರೆದಿತ್ತು. ಆ ಮಾಹಿತಿ ಆಧಾರದ ಮೇಲೆ ನೋಟಿಸ್ ನೀಡಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

     

    ಈ ಪ್ರಕರಣ ಸಂಬಂಧ ನ.10 ಐಪಿಸಿ ಸೆಕ್ಷನ್ 465 ಮತ್ತು 469 (ಗೌರವಕ್ಕೆ ಹಾನಿ ಮಾಡುವ ಉದ್ದೇಶದಿಂದ ನಕಲು ಮಾಡುವುದು) ಮತ್ತು ಇಂಟೆಲಿಜೆನ್ಸ್ ಫ್ಯೂಷನ್ ಮತ್ತು ಸ್ಟ್ರಾಟೆಜಿಕ್ ಆಪರೇಷನ್ಸ್ (IFSO) ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66ಸಿ ಮತ್ತು 66ಇ ಅಡಿಯಲ್ಲಿ ಎಫ್‍ಐಆರ್ ದಾಖಲಿಸಲಾಗಿತ್ತು.

  • ನಟಿ ರಶ್ಮಿಕಾ ಡೀಪ್‍ಫೇಕ್ ವೀಡಿಯೋ ಪ್ರಕರಣ – ಯುವಕನ ವಿಚಾರಣೆ

    ನಟಿ ರಶ್ಮಿಕಾ ಡೀಪ್‍ಫೇಕ್ ವೀಡಿಯೋ ಪ್ರಕರಣ – ಯುವಕನ ವಿಚಾರಣೆ

    ನವದೆಹಲಿ: ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್ ಆಗಿದ್ದ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರ ಡೀಪ್‍ಫೇಕ್ (Deepfake) ವೀಡಿಯೋ ವಿಚಾರವಾಗಿ ದೆಹಲಿ (Delhi) ಪೊಲೀಸರು (Police) ಬಿಹಾರ ಮೂಲದ 19 ವರ್ಷದ ಯುವಕನನ್ನು ವಿಚಾರಣೆ ನಡೆಸಿದ್ದಾರೆ.

    ಶಂಕಿತ ಯುವಕ ಮೊದಲು ಸಾಮಾಜಿಕ ಜಾಲತಾಣದಲ್ಲಿ ವೀಡಿಯೋವನ್ನು ಅಪ್‍ಲೋಡ್ ಮಾಡಿದ್ದಾನೆ. ಅಲ್ಲದೇ ನಂತರ ಅದನ್ನು ಇತರ ವೇದಿಕೆಗಳಲ್ಲಿ ವ್ಯಾಪಕವಾಗಿ ಹಂಚಿಕೊಂಡಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ. ಯುವಕನ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋವನ್ನು ಮೊದಲು ಅಪ್‍ಲೋಡ್ ಮಾಡಿದ್ದರಿಂದ ತನಿಖೆಗೆ ಹಾಜರಾಗುವಂತೆ ಯುವಕನಿಗೆ ನೋಟಿಸ್ ನೀಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.ಇದನ್ನೂ ಓದಿ: ರಶ್ಮಿಕಾ ಮಂದಣ್ಣರ ಮತ್ತೊಂದು ಡೀಪ್‌ಫೇಕ್ ವಿಡಿಯೋ ವೈರಲ್

    ಬಿಹಾರ ಮೂಲದ ಯುವಕನಿಗೆ ಐಎಫ್‍ಎಸ್‍ಒ ಘಟಕದ ಮುಂದೆ ಹಾಜರಾಗಲು ಮತ್ತು ತನ್ನ ಮೊಬೈಲ್ ಫೋನ್ ತರಲು ಸೂಚಿಸಲಾಗಿತ್ತು. ಎಫ್‍ಐಆರ್ ದಾಖಲಿಸಿದ ಕೂಡಲೇ ಐಎಫ್‍ಎಸ್‍ಒ ಘಟಕವು ಆರೋಪಿಯನ್ನು ಗುರುತಿಸಲು ಯುಆರ್‍ಎಲ್ ಮತ್ತು ಇತರ ವಿವರಗಳನ್ನು ಪಡೆಯಲು ಮೆಟಾಗೆ ಪತ್ರ ಬರೆದಿತ್ತು. ಆ ಮಾಹಿತಿ ಆಧಾರದ ಮೇಲೆ ನೋಟಿಸ್ ನೀಡಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಈ ಪ್ರಕರಣ ಸಂಬಂಧ ನ.10 ಐಪಿಸಿ ಸೆಕ್ಷನ್ 465 ಮತ್ತು 469 (ಗೌರವಕ್ಕೆ ಹಾನಿ ಮಾಡುವ ಉದ್ದೇಶದಿಂದ ನಕಲು ಮಾಡುವುದು) ಮತ್ತು ಇಂಟೆಲಿಜೆನ್ಸ್ ಫ್ಯೂಷನ್ ಮತ್ತು ಸ್ಟ್ರಾಟೆಜಿಕ್ ಆಪರೇಷನ್ಸ್ (IFSO) ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66ಸಿ ಮತ್ತು 66ಇ ಅಡಿಯಲ್ಲಿ ಎಫ್‍ಐಆರ್ ದಾಖಲಿಸಲಾಗಿತ್ತು. ಇದನ್ನೂ ಓದಿ: ಬ್ಲ್ಯಾಕ್ ಮೇಲ್ ಮಾಡಿದ ಯುವ ನಟಿಯ ಬಂಧನ

  • ಸಾರಾ ತೆಂಡೂಲ್ಕರ್ –ಶುಭಮನ್ ಗಿಲ್ ಡೀಪ್‌ಫೇಕ್‌ ಎಫೆಕ್ಟ್ : ಡೇಟಿಂಗ್.. ಡೇಟಿಂಗ್

    ಸಾರಾ ತೆಂಡೂಲ್ಕರ್ –ಶುಭಮನ್ ಗಿಲ್ ಡೀಪ್‌ಫೇಕ್‌ ಎಫೆಕ್ಟ್ : ಡೇಟಿಂಗ್.. ಡೇಟಿಂಗ್

    ದೇಶದಲ್ಲಿ ಡೀಪ್‌ಫೇಕ್‌ (Deepfake) ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಮೊನ್ನೆಯಷ್ಟೇ ರಶ್ಮಿಕಾ ಮಂದಣ್ಣ ಅವರು ಡೀಪ್‌ಫೇಕ್‌ ವಿಡಿಯೋ ಸಂಚಲನ ಮೂಡಿಸಿತ್ತು. ಕತ್ರಿನಾ ಕೈಫ್ ಕೂಡ ಇದಕ್ಕೆ ತುತ್ತಾದರು. ಇದೀಗ ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ (Sara Tendulkar) ಮತ್ತು ಕ್ರಿಕೆಟಿಗ (Cricket) ಶುಭಮನ್ ಗಿಲ್ (Shubman Gill) ಅವರ ಡೀಪ್‌ಫೇಕ್‌ ಫೋಟೋವೊಂದು ವೈರಲ್ ಆಗುತ್ತಿದೆ. ಇಬ್ಬರೂ ಜೊತೆಗಿರುವ ಫೋಟೋವನ್ನು ಡೀಪ್‌ಫೇಕ್‌ ಮಾಡಿ ಇಬ್ಬರೂ ಡೇಟ್ ಮಾಡುತ್ತಿದ್ದಾರೆ ಎಂದು ಸುದ್ದಿ ಹರಿಬಿಡಲಾಗುತ್ತಿದೆ.

    ಶುಭಮನ್ ಮತ್ತು ಸಾರಾ ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎಂದು ಆಗಾಗ್ಗೆ ಸುದ್ದಿ ಆಗುತ್ತಲೇ ಇರುತ್ತದೆ. ಇಬ್ಬರೂ ಬಹಿರಂಗವಾಗಿ ಈವರೆಗೂ ಆ ಕುರಿತು ಮಾತನಾಡಿಲ್ಲ. ಆದರೂ, ಅವರಿಬ್ಬರ ಜೊತೆಗಿನ ಫೋಟೋವನ್ನು ನಕಲು ಮಾಡಿ, ಸೋಷಿಯಲ್ ಮೀಡಿಯಾದಲ್ಲಿ ಹರಿಬಿಡಲಾಗಿದೆ.

    ಚುರುಕು ಮುಟ್ಟಿಸುತ್ತಿರುವ ದೆಹಲಿ ಪೊಲೀಸ್

    ನ್ಯಾಷನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ (Rashmika Mandanna) ಅವರ ಡೀಪ್‌ಫೇಕ್ (Deepfake) ಎಐ-ರಚಿಸಿದ ವೀಡಿಯೋಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಶುಕ್ರವಾರ ಎಫ್‌ಐಆರ್‌ ದಾಖಲಿಸಿದ್ದಾರೆ. ವಿಶೇಷ ಸೆಲ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ದೆಹಲಿ ಪೊಲೀಸರು (Delhi Police) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಈ ವಿಷಯದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. “ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್‌ ವೀಡಿಯೋಗೆ ಸಂಬಂಧಿಸಿದಂತೆ, ಐಪಿಸಿಯ ಎಫ್‌ಐಆರ್ ಯು/ಎಸ್ 465 ಮತ್ತು 469, 1860 ಮತ್ತು ಐಟಿ ಆಕ್ಟ್, 2000 ರ ಸೆಕ್ಷನ್ 66 ಸಿ ಮತ್ತು 66 ಇ ಅನ್ನು ದೆಹಲಿ ಪೊಲೀಸ್ ಸ್ಪೆಷಲ್‌ ಸೆಲ್‌ನಲ್ಲಿ ದಾಖಲಿಸಲಾಗಿದೆ. ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ.

    ಅರೆಬೆತ್ತಲಾಗಿದ್ದ ಮಹಿಳೆಯೊಬ್ಬರ ವೀಡಿಯೋಗೆ ನಟಿ ರಶ್ಮಿಕಾ ಅವರ ಮುಖ ಸೇರಿಸಿ ಡೀಪ್‌ಫೇಕ್‌ ವೀಡಿಯೋ ಮಾಡಲಾಗಿತ್ತು. ಇದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ಇದಕ್ಕೆ ರಶ್ಮಿಕಾ ಮಂದಣ್ಣ ಸೇರಿ ಖ್ಯಾತ ನಟರು ಸಹ ಆಕ್ರೋಶ ವ್ಯಕ್ತಪಡಿಸಿದ್ದರು. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ದೆಹಲಿ ಮಹಿಳಾ ಆಯೋಗ ಕೂಡ ಕ್ರಮಕೈಗೊಳ್ಳುವಂತೆ ಒತ್ತಾಯಿಸಿತ್ತು.

    ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವೀಡಿಯೋ ಹಲವಾರು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿದೆ ಎಂಬ ಮಾಧ್ಯಮ ವರದಿಗಳ ಕುರಿತು ದೆಹಲಿ ಮಹಿಳಾ ಆಯೋಗವು ಸುಮೊಟೊ ಅರಿವು ತೆಗೆದುಕೊಂಡಿದೆ. ವರದಿಯ ಪ್ರಕಾರ, ನಟಿ ಈ ವಿಷಯದಲ್ಲಿ ತಮ್ಮ ಕಳವಳವನ್ನು ವ್ಯಕ್ತಪಡಿಸಿದ್ದಾರೆ. ವೀಡಿಯೋದಲ್ಲಿ ಆಕೆಯ ಚಿತ್ರವನ್ನು ಅಕ್ರಮವಾಗಿ ಮಾರ್ಫಿಂಗ್ ಮಾಡಲಾಗಿದೆ ಎಂದು ಆಯೋಗ ತಿಳಿಸಿತ್ತು.

     

    ಈ ಪ್ರಕರಣದಲ್ಲಿ ಇಲ್ಲಿಯವರೆಗೆ ಯಾವುದೇ ಬಂಧನವಾಗಿಲ್ಲ. ನವೆಂಬರ್ 17 ರೊಳಗೆ ಆರೋಪಿಗಳ ವಿವರಗಳೊಂದಿಗೆ ಎಫ್‌ಐಆರ್ ಪ್ರತಿಯನ್ನು ನೀಡಬೇಕು. ಇದು ಅತ್ಯಂತ ಗಂಭೀರವಾದ ವಿಷಯವಾಗಿದೆ. ದಯವಿಟ್ಟು ಈ ವಿಷಯದಲ್ಲಿ ದಾಖಲಾಗಿರುವ ಎಫ್‌ಐಆರ್‌ನ ಪ್ರತಿಯನ್ನು ಒದಗಿಸಿ ಎಂದು ಆಯೋಗ ಕೇಳಿದೆ.