Tag: ಡೀಪ್‌ ಫೇಕ್‌ ವೀಡಿಯೋ

  • ಯೋಗಿ ಆದಿತ್ಯನಾಥ್ ಡೀಪ್‍ಫೇಕ್ ವೀಡಿಯೋ ವೈರಲ್

    ಯೋಗಿ ಆದಿತ್ಯನಾಥ್ ಡೀಪ್‍ಫೇಕ್ ವೀಡಿಯೋ ವೈರಲ್

    ಲಕ್ನೋ: ಕೆಲವು ದಿನಗಳ ಹಿಂದೆ ಸದ್ದು ಮಾಡಿ ತಣ್ಣಗಾಗಿದ್ದ ಡೀಪ್‍ ಫೇಕ್ ವೀಡಿಯೋ (Deep Fake Video) ಇದೀಗ ಮತ್ತೆ ಸದ್ದು ಮಾಡಿದೆ. ಉತ್ತರ ಪ್ರದೇಶ (Uttar Pradesh) ಸಿಎಂ ಯೋಗಿ ಆದಿತ್ಯನಾಥ್ (Yogi Adityanath) ಅವರ ಡೀಪ್‍ ಫೇಕ್ ವೀಡಿಯೋ ವಿಚಾರವಾಗಿ ಲಕ್ನೋದ ಸೈಬರ್ ಪೊಲೀಸ್ (Police) ಠಾಣೆಯಲ್ಲಿ 2 ಎಫ್‍ಐಆರ್‌ಗಳು ದಾಖಲಾಗಿವೆ.

    ಡೀಪ್‍ ಫೇಕ್ ವಿಡಿಯೋದಲ್ಲಿ ಯೋಗಿ ಆದಿತ್ಯನಾಥ್ ಅವರ ಚಿತ್ರ ಬಳಸಿ ಔಷಧ ಖರೀದಿಸುವಂತೆ ಮನವಿ ಮಾಡಲಾಗುತ್ತಿದೆ. ಮಧುಮೇಹ ಔಷಧವನ್ನು ಪ್ರಚಾರ ಮಾಡಲು ಯೋಗಿಯವರ ಚಿತ್ರವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ. ಇದಲ್ಲದೇ ಮತ್ತೊಂದು ವೀಡಿಯೋದಲ್ಲಿ ಯೋಗಿ ಆದಿತ್ಯನಾಥ್ ಅವರ ಹೆಸರಿನಲ್ಲಿ ಮತ್ತೊಂದು ಔಷಧಿ ಖರೀದಿಸುವಂತೆ ಮನವಿ ಮಾಡಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಫೇಸ್‍ಬುಕ್ ಕೇಂದ್ರ ಕಚೇರಿಯಿಂದ ಮಾಹಿತಿ ಕೇಳಿದ್ದಾರೆ. ಪ್ರಕರಣದ ತನಿಖೆಗಾಗಿ ಎರಡು ತಂಡಗಳನ್ನು ರಚಿಸಲಾಗಿದೆ.

    ಕೆಲ ತಿಂಗಳುಗಳ ಹಿಂದೆ ಅನೇಕ ನಟ, ನಟಿಯರ ಡೀಪ್‍ಫೇಕ್ ವೀಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು. ಆರಂಭದಲ್ಲಿ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‍ ಫೇಕ್ ವೀಡಿಯೋ ವೈರಲ್ ಆಗಿತ್ತು. ಈ ಸಂಬಂಧ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.

    ಏನಿದು ಡೀಪ್‌ಫೇಕ್?
    ಯಾರದ್ದೋ ದೇಹಕ್ಕೆ ಯಾರದ್ದೋ ತಲೆಯನ್ನು ಫೋಟೋ ಎಡಿಟಿಂಗ್‌ ಟೂಲ್‌ ಮೂಲಕ ಜೋಡಿಸುವುದು ಹಳೇಯ ವಿಚಾರ. ಈ ಫೋಟೋಗಳನ್ನು ನೋಡುವಾಗ ಸ್ವಲ್ಪವಾದರೂ ಅನುಮಾನ ಬರುತ್ತದೆ. ಆದರೆ ಡೀಪ್‌ ಫೇಕ್‌ ತಂತ್ರಜ್ಞಾನದಲ್ಲಿ ಯಾವುದೇ ಅನುಮಾನ ಬಾರದಂತೆ ಫೋಟೋ ಅಲ್ಲ ವಿಡಿಯೋವನ್ನೇ ಸೃಷ್ಟಿ ಮಾಡಲಾಗುತ್ತದೆ. ವಿಡಿಯೋ ಎಷ್ಟು ನೈಜತೆ ಇರುತ್ತದೆ ಅಂದರೆ ವ್ಯಕ್ತಿಯ ದೇಹಕ್ಕೂ ಮತ್ತು ಮುಖಕ್ಕೆ ನೇರ ಸಂಬಂಧ ಇದ್ದಂತೆ ಇರುತ್ತದೆ. ಮೂಲ ವಿಡಿಯೋ ಬೇರೆ ಆಗಿದ್ದರೂ ಈ ವ್ಯಕ್ತಿಯೇ ವಿಡಿಯೋದಲ್ಲಿ ನಟಿಸುತ್ತಿದ್ದಂತೆ ಬಿಂಬಿಸಲಾಗುತ್ತದೆ.

    ಆರ್ಟಿಫಿಷಿಯಲ್ ಇಂಟೆಲಿಜೆನ್ಸ್+ಮೆಷಿನ್ ಲರ್ನಿಂಗ್ ಸಹಾಯದಿಂದ ಮಾರ್ಫಿಂಗ್ ವಿಡಿಯೋ, ಫೋಟೋಗಳು ಸೃಷ್ಟಿ ಮಾಡುವುದಕ್ಕೆ ಡೀಪ್‌ಫೇಕ್‌ ಎಂದು ಕರೆಯಲಾಗುತ್ತದೆ. ಒಬ್ಬ ಒಬ್ಬ ವ್ಯಕ್ತಿಯಂತೆಯೇ ಸೇಮ್ ಟು ಸೇಮ್ ಡೂಪ್ ಸೃಷ್ಟಿಸಬಹುದು. ಥಟ್ಟನೇ ನೋಡಿದಾಗ ಯಾವುದೇ ವ್ಯತ್ಯಾಸವೇ ಗೊತ್ತಗುವುದಿಲ್ಲ. ಮೃತ ನಟನನ್ನು ಮತ್ತೆ ಸ್ಕ್ರೀನ್‌ ಮೇಲೆ ಮೇಲೆ ಈ ತಂತ್ರಜ್ಞಾನದ ಸಹಾಯದಿಂದ ತೋರಿಸಬಹುದು.

  • ಇದು ದೇಶವೇ ಎದುರಿಸುತ್ತಿರುವ ದೊಡ್ಡ ಬೆದರಿಕೆ – ತನ್ನ ಡೀಪ್‌ಫೇಕ್‌ ವೀಡಿಯೋ ಬಗ್ಗೆ ಮೋದಿ ಕಳವಳ

    ಇದು ದೇಶವೇ ಎದುರಿಸುತ್ತಿರುವ ದೊಡ್ಡ ಬೆದರಿಕೆ – ತನ್ನ ಡೀಪ್‌ಫೇಕ್‌ ವೀಡಿಯೋ ಬಗ್ಗೆ ಮೋದಿ ಕಳವಳ

    ನವದೆಹಲಿ: ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರ ನಂತ್ರ ಬಾಲಿವುಡ್‌ ನಟಿಯರ ಡೀಪ್‌ಫೇಕ್‌ ವೀಡಿಯೋಗಳು ಸೋಶಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿವೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನೂ ವೀಡಿಯೋವೊಂದರಲ್ಲಿ ಡೀಫ್‌ ಫೇಕ್‌ ಮಾಡಲಾಗಿದ್ದು, ಈ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

    ದೆಹಲಿಯಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯಲ್ಲಿ ದೀಪಾವಳಿ ಮಿಲನ್‌ ಕಾರ್ಯಕ್ರಮದಲ್ಲಿ (Diwali Milan Programme) ಪತ್ರಕರ್ತರನ್ನುದ್ದೇಶಿಸಿ ಅವರು ಮಾತನಾಡಿದರು. ಪ್ರಸ್ತುತ ನಮ್ಮ ಭಾರತೀಯ ವ್ಯವಸ್ಥೆಯು ಎದುರಿಸುತ್ತಿರುವ ದೊಡ್ಡ ಬೆದರಿಕೆಗಳಲ್ಲಿ ಡೀಪ್‌ಫೇಕ್‌ (Deepfakes Video) ಕೂಡ ಒಂದಾಗಿದೆ. ಇದು ಸಮಾಜದಲ್ಲಿ ಅವ್ಯವಸ್ಥೆಯನ್ನುಂಟುಮಾಡಬಹುದು. ಆದ್ದರಿಂದ ಹೆಚ್ಚುತ್ತಿರುವ ಸಮಸ್ಯೆಗಳ ಬಗ್ಗೆ ಜನರಿಗೆ ತಿಳಿಸಿ ಅವರನ್ನು ಶಿಕ್ಷಿತರನ್ನಾಗಿ ಮಾಡಬೇಕು ಎಂದು ಕರೆ ನೀಡಿದ್ದಾರೆ.

    ಡೀಪ್‌ಫೇಕ್‌ಗಳಿಗಾಗಿ ಕೃತಕ ಬುದ್ಧಿಮತ್ತೆಯನ್ನು (Artifical Intelligence) ದುರುಪಯೋಗಪಡಿಸಿಕೊಳ್ಳುವಾಗ ನಾಗರಿಕರು ಮತ್ತು ಮಾಧ್ಯಮಗಳು ಬಹಳ ಜಾಗರೂಕರಾಗಿರಬೇಕು. ಪ್ರಜಾಪ್ರಭುತ್ವದ ಸಮಗ್ರತೆಗೆ ಡೀಪ್‌ಫೇಕ್‌ಗಳು ಹೇಗೆ ಗಣನೀಯ ಸವಾಲುಗಳನ್ನು ಒಡ್ಡುತ್ತಿವೆ? ನಕಲಿ ಮತ್ತು ನೈಜ ಕ್ಲಿಪ್‌ಗಳ ನಡುವೆ ವ್ಯತ್ಯಾಸ ಕಂಡುಹಿಡಿಯುವುದು ಕಷ್ಟಕರವಾಗಿದೆ. ಇದು ಇತ್ತೀಚೆಗೆ ರಾಜಕಾರಣಿಗಳನ್ನೂ ಗುರಿ ಮಾಡಲಾಗುತ್ತಿದೆ, ಕೃತಕ ವಾಯ್ಸ್‌ಓವರ್‌, ನಕಲಿ ವೀಡಿಯೋ ಕ್ಲಿಪ್‌ಗಳನ್ನು ಬಳಸಿ ರಾಜಕಾರಣಿಗಳನ್ನ ಗುರಿಯಾಗಿಸಲಾಗುತ್ತಿದೆ. ಇಂತಹ ಎಲ್ಲ ಸಮಸ್ಯೆಗಳ ಬಗ್ಗೆ ಅರಿತುಕೊಂಡು ಸಾರ್ವಜನಿಕರು ಎಚ್ಚರದಿಂದಿರಬೇಕು ಎಂದು ಕಿವಿಮಾತು ಹೇಳಿದ್ದಾರೆ.

    ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಗರ್ಬಾ ನೃತ್ಯ ಮಾಡುತ್ತಿರುವ ಡೀಪ್‌ ಫೇಕ್‌ ವಿಡಿಯೋ ಉಲ್ಲೇಖಿಸಿ ಮಾತನಾಡಿದ್ದು, ತಾನು ಚಿಕ್ಕಂದಿನಿಂದಲೂ ಗರ್ಬಾ ನೃತ್ಯ ಮಾಡಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕರಾಚಿಯಲ್ಲಿ ಬೀಡುಬಿಟ್ಟ ಚೀನಾದ ಜಲಾಂತರ್ಗಾಮಿ, ಯುದ್ಧನೌಕೆ – ಭಾರತಕ್ಕೆ ಇದರ ಸಂದೇಶವೇನು?

    ವೈರಲ್‌ ವೀಡಿಯೋದಲ್ಲಿ ಪ್ರಧಾನಿಯನ್ನೇ ಹೋಲುವ ವ್ಯಕ್ತಿಯೊಬ್ಬರು ಕೆಲ ಮಹಿಳೆಯರೊಂದಿಗೆ ನೃತ್ಯ ಮಾಡುವುದು ಕಂಡುಬಂದಿತ್ತು. ಆದ್ರೆ ಮಾಧ್ಯಮ ಸಂಸ್ಥೆಯೊಂದು ಅದನ್ನು ಫ್ಯಾಕ್ಟ್‌ಚೆಕ್‌ಗೆ ಒಳಪಡಿಸಿದಾಗ ವೀಡಿಯೋದಲ್ಲಿದ್ದ ವ್ಯಕ್ತಿ ಪ್ರಧಾನಿಯಲ್ಲ, ವಿಕಾಸ್‌ ಮಹಂತೆ ಎನ್ನುವ ನಟ‌ ಎಂದು ತಿಳಿದುಬಂದಿತ್ತು.

    ಇತ್ತೀಚೆಗೆ ಡೀಪ್‌ ಫೇಕ್‌ ವೀಡಿಯೋಗಳು ಹೆಚ್ಚಾಗುತ್ತಿದ್ದು, ಸಹಜವಾಗಿಯೇ ನಟಿಯರಿಗೆ ಆತಂಕ ಹೆಚ್ಚಿಸಿದೆ. ಇಂತಹ ವಿಡಿಯೋಗಳನ್ನು ಮಾಡುವವರ ವಿರುದ್ಧ ಆದಷ್ಟು ಬೇಗ ಕಠಿಣ ಕ್ರಮಕ್ಕೆ ಮುಂದಾಗಿ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ನಟಿ ರಶ್ಮಿಕಾ ಮಂದಣ್ಣ ಅವರ ಬಳಿಕ ಕಾಜೋಲ್, ಕತ್ರಿನಾ ಕೈಫ್‌ ಅವರ ಡೀಪ್‌ಫೇಕ್ ವೀಡಿಯೋಗಳೂ ಜಾಲತಾಣದಲ್ಲಿ ಸದ್ದು ಮಾಡುತ್ತಿವೆ. ಇದನ್ನೂ ಓದಿ: ಗಾಜಾದ ಅಲ್ ಶಿಫಾ ಆಸ್ಪತ್ರೆಯೇ ಹಮಾಸ್ ಅಡ್ಡ; ಶಸ್ತ್ರಾಸ್ತ್ರ ಪತ್ತೆ – ಉಗ್ರರ ಅಡಗುದಾಣಗಳ ಮೇಲೆ ಬುಲ್ಡೋಜರ್