Tag: ಡೀಸೆಲ್ ಬೆಲೆ

  • ಬೆಲೆ ಏರಿಕೆ ವಿರುದ್ಧ ಸಮರ – ಮಧ್ಯರಾತ್ರಿಯಿಂದಲೇ ಲಾರಿ ಮುಷ್ಕರ

    ಬೆಲೆ ಏರಿಕೆ ವಿರುದ್ಧ ಸಮರ – ಮಧ್ಯರಾತ್ರಿಯಿಂದಲೇ ಲಾರಿ ಮುಷ್ಕರ

    ಬೆಂಗಳೂರು: ಡೀಸೆಲ್ ದರ ಏರಿಕೆ (Diesel Price Hike) ಖಂಡಿಸಿ ಏಪ್ರಿಲ್‌ 14ರ ಮಧ್ಯರಾತ್ರಿಯಿಂದಲೇ ಲಾರಿ ಮಾಲೀಕರ ಸಂಘ (Lorry Owners Association) ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಇದರಿಂದ ರಾಜ್ಯಾದ್ಯಂತ 6 ಲಕ್ಷ ಲಾರಿಗಳ ಸಂಚಾರ ಬಂದ್‌ ಆಗಲಿದ್ದು, ರಾಜ್ಯಕ್ಕೆ ಬರುವ ಮತ್ತು ಹೊರರಾಜ್ಯಗಳಿಗೆ ತೆರಳುವ ಸರಕು ಸಾಗಣೆಯಲ್ಲಿ ವ್ಯತ್ಯಾಸವಾಗುವ ಸಾಧ್ಯತೆಯಿದೆ.

    ಹೌದು. ಪ್ರಸ್ತುತ ಡಿಸೇಲ್ ದರ ಹೆಚ್ಚಳ, ರಾಜ್ಯ ಹೆದ್ದಾರಿಗಳಿಗೆ ಟೋಲ್ ಅಳವಡಿಕೆ ಹಣ ವಸೂಲಿ, ಆರ್‌ಟಿಓ ಬಾರ್ಡರ್ ಚೆಕ್ ಪೋಸ್ಟ್, FC ಶುಲ್ಕ ಹೆಚ್ಚಿಸಿರುವುದು, ಬೆಂಗಳೂರು ನಗರದಲ್ಲಿ ಸರಕು ಸಾಗಾಣಿಕೆ ವಾಹನಗಳಿಗೆ ನೋ ಎಂಟ್ರಿ, ಚಾಲಕರ ಮೇಲೆ ಹಲ್ಲೆ ಹೀಗೆ ವಿವಿಧ ಬೇಡಿಕೆಗಳನ್ನು ಒತ್ತಾಯಿಸಿ ಲಾರಿ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದು ಲಾರಿ ಮಾಲೀಕರ ಸಂಘದ ಅಧ್ಯಕ್ಷ ಜಿ.ಆ‌ರ್.ಷಣ್ಮುಖಪ್ಪ ತಿಳಿಸಿದ್ದಾರೆ. ಇದನ್ನೂ ಓದಿ: ಸರ್ಕಾರಿ ನೌಕರರ ಆಸ್ತಿ ವಿವರ ಸಲ್ಲಿಕೆ ಕಡ್ಡಾಯ – ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

    ಆಲ್ ಇಂಡಿಯಾ ಮೋಟರ್ ಟ್ರಾನ್ಸ್ ಪೋರ್ಟ್ ಕಾಂಗ್ರೆಸ್‌ ದೆಹಲಿ, ಸೌಥ್ ಇಂಡಿಯಾ ಮೋಟರ್ ಟ್ರಾನ್ಸ್ ಪೋರ್ಟ್ ಅಸೋಸಿಯೇಷನ್, ಕರ್ನಾಟಕ ಗೂಡ್ಸ್ ಟ್ರಾನ್ಸ್ ಪೋರ್ಟ್ ಅಸೋಸಿಯೇಷನ್, ಏರ್ ಪೋರ್ಟ್ ಟ್ಯಾಕ್ಸಿ ಅಸೋಸಿಯೇಷನ್, ಬೆಂಗಳೂರು ಟೂರಿಸ್ಟ್ ಟ್ಯಾಕ್ಸಿ ಅಸೋಸಿಯೇಷನ್, ಜಲ್ಲಿ ಕಲ್ಲು, ಮರಳು ಲಾರಿ ಅಸೋಸಿಯೇಷನ್, ರಾಜ್ಯ ಪಡಿತರ ಆಹಾರ ಧಾನ್ಯಗಳ ಸಾಗಾಣಿಕೆದಾರರ ಸಂಘ, ಸೌಥ್ ಜೋನ್ ಲಿಪಿಜಿ ಅಸೋಸಿಯೇಷನ್, ಜಲ್ಲಿ, ಮರಳು ಸಾಗಣೆ ವಾಹನಗಳು, ಗ್ಯಾಸ್ ಟ್ಯಾಂಕ್ ಮಾಲೀಕರ ಸಂಘ ಸಹಿತ 69 ಸಂಘಟನೆಗಳು ಮುಷ್ಕರ ಬೆಂಬಲಿಸಿವೆ. ರಾಜ್ಯದಲ್ಲಿ ಸುಮಾರು 700 ಗೂಡ್ಸ್‌ ಕಚೇರಿಗಳಿದ್ದು, ಬಂದ್ ಆಗಲಿವೆ. ಈ ಬಗ್ಗೆ ಕೈಗಾರಿಕೆ, ಕಾರ್ಖಾನೆ, ಕಂಪನಿಗಳಿಗೆ ಮುಷ್ಕರದ ಬಗ್ಗೆ ಪತ್ರ ಬರೆಯಲಾಗಿದೆ ಎಂದು ಸಹ ಅವರು ತಿಳಿಸಿದ್ದಾರೆ.

    ಡೀಸೆಲ್ ದರವನ್ನು 2024ರ ಜೂನ್‌ನಲ್ಲಿ 3 ರೂ. ಏರಿಕೆ ಮಾಡಿದ್ದ ರಾಜ್ಯ ಸರ್ಕಾರ ಈಗ ಮತ್ತೆ 2 ರೂ. ಹೆಚ್ಚಳ ಮಾಡಿದೆ. ಈ ಏರಿಕೆ ಕೈಬಿಡುವವರೆಗೆ ಮುಷ್ಕರ ಕೈಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ನಡುರಸ್ತೆಯಲ್ಲೇ ಅನ್ಯಧರ್ಮೀಯ ಯುವತಿಗೆ ಹಿಗ್ಗಾಮುಗ್ಗಾ ಥಳಿಸಿದ ದುಷ್ಕರ್ಮಿಗಳು – 6 ಆರೋಪಿಗಳು ಅರೆಸ್ಟ್

    ರಾಜ್ಯದಲ್ಲಿ 18 ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಿಸಲಾಗುತ್ತಿದೆ. ಬೇರೆ ಯಾವ ರಾಜ್ಯದಲ್ಲಿಯೂ ರಾಜ್ಯ ಹೆದ್ದಾರಿಗೆ ಟೋಲ್‌ ಇಲ್ಲ. ಹಾಗಾಗಿ ರಾಜ್ಯದಲ್ಲಿ ಟೋಲ್ ಸಂಗ್ರಹ ಕೈಬಿಡಬೇಕು. ಗಡಿ ಚೆಕ್‌ಪೋಸ್ಟ್‌ಗಳನ್ನು ರದ್ದುಮಾಡಬೇಕು. ವಾಹನಗಳ ಸಾಮರ್ಥ್ಯ ಅರ್ಹತಾ ಪತ್ರ (ಫಿಟ್‌ನೆಸ್ ಸರ್ಟಿಫಿಕೆಟ್) ನವೀಕರಣಕ್ಕೆ ಶುಲ್ಕವನ್ನು ಹೆಚ್ಚು ಮಾಡಿ ಕೇಂದ್ರ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ. ಅದನ್ನು ರಾಜ್ಯ ಸರ್ಕಾರ ಜಾರಿ ಮಾಡಬಾರದು. ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಿಗೆ ಸರಕು ಸಾಗಣೆ ವಾಹನಗಳ ಪ್ರವೇಶವನ್ನು ನಿಷೇಧಿಸಿರುವುದು, ಕೇವಲ 5 ಗಂಟೆ ಅವಕಾಶ ನೀಡಿರುವುದನ್ನು ತೆಗೆದುಹಾಕಬೇಕು ಎಂಬುದು ನಮ್ಮ ಪ್ರಮುಖ ಬೇಡಿಕೆಗಳಾಗಿವೆ ಎಂದು ತಿಳಿಸಿದ್ದಾರೆ.

    ಯಾವೆಲ್ಲ ಸೇವೆಗಳಲ್ಲಿ ವ್ಯತ್ಯಯ?
    ಸದ್ಯ ರಾಜ್ಯಾದ್ಯಂತ 6 ಲಕ್ಷ ಸರಕು ಲಾರಿಗಳ ಕಾರ್ಯಾಚರಣೆ ಬಂದ್‌ ಆಗುವುದರಿಂದ ತರಕಾರಿ, ಹಣ್ಣುಗಳ ಪೂರೈಕೆಯಲ್ಲಿ ವ್ಯತ್ಯಯ ಸಾಧ್ಯತೆ ಇದೆ. ಏರ್ ಪೋರ್ಟ್ ಟ್ಯಾಕ್ಸಿ, ಟೂರಿಸ್ಟ್ ಟ್ಯಾಕ್ಸಿ ಸಿಗೋದು ಸಹ ಅನುಮಾನವಿದೆ. ಇದರಿಂದ ಡಿಪೋಗಳಿಗೆ ಪಡಿತರ ಆಹಾರ ಧಾನ್ಯಗಳ ಪೂರೈಕೆ, ಎಲ್‌ಪಿಜಿ ಸಿಲಿಂಡರ್‌ ಸರಬರಾಜು ಹಾಗೂ ಕೆಲ ಪೆಟ್ರೋಲ್ ಬಂಕ್‌ಗಳಲ್ಲಿ ಡಿಸೇಲ್ ವ್ಯತ್ಯಯ ಸಾಧ್ಯತೆ ಇದೆ ಎಂದು ಸಹ ಲಾರಿ ಮಾಲೀಕರು ತಿಳಿಸಿದ್ದಾರೆ. ಇದನ್ನೂ ಓದಿ: 2,000 ಕೋಟಿ ಅಕ್ರಮ, 400 ಕೋಟಿ ಕಮಿಷನ್ ಆರೋಪ – ಡಿಕೆಶಿ, ಡಿಕೆಸು ವಿರುದ್ಧ ರಾಜ್ಯಪಾಲರಿಗೆ ಮುನಿರತ್ನ ದೂರು

  • ಡೀಸೆಲ್ ಬೆಲೆ ಏರಿಕೆ – ಖಾಸಗಿ ಬಸ್ ಪ್ರಯಾಣ ದರ ದುಬಾರಿ!

    ಡೀಸೆಲ್ ಬೆಲೆ ಏರಿಕೆ – ಖಾಸಗಿ ಬಸ್ ಪ್ರಯಾಣ ದರ ದುಬಾರಿ!

    – ಲಾರಿ ಮುಷ್ಕರಕ್ಕೆ ಖಾಸಗಿ ಬಸ್ ಮಾಲೀಕರ ಸಾಥ್

    ಬೆಂಗಳೂರು: ಈ ವರ್ಷ ಆರಂಭದಿಂದಲೂ ನಿತ್ಯ ಜೇಬಿಗೆ ಹೊರೆಯಾಗುವ ಶಾಕಿಂಗ್ ಸುದ್ದಿಗಳೇ ಕೇಳಿಬರುತ್ತಿವೆ. ನಿತ್ಯ ಒಂದಲ್ಲ ಒಂದು ದರ ಏರಿಕೆಯಿಂದ ಕಂಗೆಟ್ಟಿದ್ದ ಜನಕ್ಕೆ ಈಗ ಮತ್ತೊಂದು ಸರದಿ. ಡೀಸೆಲ್ ದರ ಏರಿಕೆಯಾದ (Diesel Price Hike) ಬೆನ್ನಲ್ಲೇ ಖಾಸಗಿ ಬಸ್ ಪ್ರಯಾಣ ದರ ಕೂಡ ಏರಿಕೆಯಾಗಲಿದೆ.

    ಡೀಸೆಲ್ ದರ ಏರಿಕೆ ಮಾಡಿ ಸರ್ಕಾರದ ವಿರುದ್ಧ ವಾಣಿಜ್ಯ ವಾಹನಗಳು ಸಮರ ಸಾರಿವೆ. ಏ.15ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೂ ಮುಂದಾಗಿವೆ. ಈ ಮಧ್ಯೆ ಈ ಮುಷ್ಕರಕ್ಕೆ ಖಾಸಗಿ ಬಸ್ (Private Bus) ಮಾಲೀಕರು ಕೂಡ ಬೆಂಬಲ ಸೂಚಿಸಿದ್ದಾರೆ. ಮುಷ್ಕರಕ್ಕೆ ಬೆಂಬಲ ಸೂಚಿಸುವುದರ ಜೊತೆಗೆ ಪ್ರಯಾಣ ದರ ಏರಿಕೆಗೂ ಕೂಡ ನಿರ್ಧಾರ ಮಾಡಿದ್ದಾರೆ. ಇದನ್ನೂ ಓದಿ: ಚೀನಾ ಮೇಲಿನ ಟ್ಯಾರಿಫ್‌ ಅನ್ನು 104% ಹೆಚ್ಚಿಸಿದ ಅಮೆರಿಕ

    ಪ್ರತಿ ಸ್ಟೇಜ್‌ಗೂ 2 ರೂ.ನಂತೆ 15%ರಷ್ಟು ದರ ಏರಿಕೆಗೆ ನಿರ್ಧಾರ ಮಾಡಿವೆ. ಅದರಂತೆ ಮುಷ್ಕರ ಆರಂಭವಾದ ದಿನದಿಂದಲೇ ದರ ಏರಿಕೆ ಮಾಡುವ ಸಾಧ್ಯತೆ ಇದೆ. ಎಸಿ, ನಾನ್‌ಎಸಿ, ಸ್ಲೀಪರ್ ಬಸ್‌ಗಳಲ್ಲಿ ದರ ಏರಿಕೆಯಾಗಲಿದೆ. ಈಗಾಗಲೇ ಡೀಸೆಲ್ ದರ, ಬಿಡಿ ಭಾಗಗಳ ದರ, ಟೈರ್ ದರಗಳ ಹೆಚ್ಚಳ ಸೇರಿದಂತೆ ಎಲ್ಲಾ ದರ ಏರಿಕೆ ಕಾರಣ ದರೇರಿಕೆ ಮಾಡದೇ ಬೇರೆ ಆಯ್ಕೆಯೇ ಇಲ್ಲ ಎಂಬ ನಿರ್ಧಾರಕ್ಕೆ ಖಾಸಗಿ ಬಸ್ ಮಾಲೀಕರು ಬಂದಿದ್ದಾರೆ. ಇದನ್ನೂ ಓದಿ: ಅಕ್ರಮ ಸಂಬಂಧ ಆರೋಪ – ಪತ್ನಿ ಆತ್ಮಹತ್ಯೆ, ಪತಿ ಅರೆಸ್ಟ್‌, 7 ಮಂದಿ ವಿರುದ್ಧ FIR

    ರಾಜ್ಯಾದ್ಯಂತ ಒಟ್ಟು 14,000 ಖಾಸಗಿ ಬಸ್‌ಗಳು ನಿತ್ಯ ಓಡಾಟ ಮಾಡುತ್ತಿವೆ. ಬೆಂಗಳೂರಿನಲ್ಲೇ ಎರಡೂವರೆ ಸಾವಿರ ವಾಹನ ಓಡಾಟ ಮಾಡುತ್ತವೆ. ಅಲ್ಲದೇ ವಿಕೇಂಡ್‌ಗಳಲ್ಲಿ ಸಾವಿರಾರು ಸಂಖ್ಯೆಯ ಜನ ಬೆಂಗಳೂರಿನಿಂದ ಹೊರ ಹೋಗಲು ಖಾಸಗಿ ಬಸ್‌ಗಳನ್ನೇ ಅವಲಂಬಿಸಿದ್ದಾರೆ. ಅಲ್ಲದೇ ಗ್ರಾಮೀಣ ಪ್ರದೇಶದ ಹಲವು ಕಡೆ ಈಗಲೂ ಕೂಡ ಖಾಸಗಿ ಬಸ್‌ಗಳೇ ಪ್ರಮುಖ ಸಾರಿಗೆ. ಸದ್ಯದ ದರ ಏರಿಕೆ ಆಯಾ ಗ್ರಾಮೀಣ ಪ್ರದೇಶಗಳ ಜನರ ಮೇಲೆ ಮತ್ತಷ್ಟು ಹೊರೆಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಭಾರತದ ಉದ್ಯಮಿಗೆ ಅಮೆರಿಕದಲ್ಲಿ ಕಹಿ ಅನುಭವ – ಏರ್‌ಪೋರ್ಟ್‌ನಲ್ಲಿ 8 ಗಂಟೆ ಕೂರಿಸಿದ ಆರೋಪ

    ಬೆಂಗಳೂರಿನಿಂದ ಯಾವ ಭಾಗಕ್ಕೆ ಎಷ್ಟು ದರ?
    ಬೆಂಗಳೂರು ಟು ಹುಬ್ಬಳ್ಳಿ:
    ಈಗಿನ ದರ – 1,000 ರೂ.
    ಸಾಮಾನ್ಯ ದಿನ ದರ – 1,200 ರೂ.
    ವಾರಾಂತ್ಯ ದರ – 1,500 ರೂ.

    ಬೆಂಗಳೂರು ಟು ಬೆಳಗಾವಿ:
    ಈಗಿನ ದರ – 1,200ರೂ.
    ಸಾಮಾನ್ಯ ದಿನ ದರ – 1,400 ರೂ.
    ವಾರಾಂತ್ಯ ದರ – 1,600 ರೂ.

    ಬೆಂಗಳೂರು ಟು ಕಲಬುರಗಿ:
    ಈಗಿನ ದರ – 1,200 ರೂ.
    ಸಾಮಾನ್ಯ ದಿನ ದರ – 1,400 ರೂ.
    ವಾರಾಂತ್ಯ ದರ- 1,600 ರೂ.

    ಬೆಂಗಳೂರು ಟು ಮಂಗಳೂರು:
    ಈಗಿನ ದರ – 1,000 ರೂ.
    ಸಾಮಾನ್ಯ ದಿನ ದರ – 1,400 ರೂ.
    ವಾರಾಂತ್ಯ ದರ – 1,600 ರೂ.

    ಬೆಂಗಳೂರು ಟು ಬಳ್ಳಾರಿ:
    ಈಗಿನ ದರ – 700 ರೂ.
    ಸಾಮಾನ್ಯ ದಿನ ದರ- 1,000 ರೂ.
    ವಾರಾಂತ್ಯ ದರ – 1,200 ರೂ.

    ಬೆಂಗಳೂರು ಟು ಶಿವಮೊಗ್ಗ:
    ಈಗಿನ ದರ – 750 ರೂ.
    ಸಾಮಾನ್ಯ ದಿನ ದರ – 1,000 ರೂ.
    ವಾರಾಂತ್ಯ ದರ – 1,200 ರೂ.

  • ಹಿಂದೆ ಡೀಸೆಲ್ ದರ ಏರಿಕೆ ಆದಾಗ ಯಾಕೆ ಲಾರಿ ಮಾಲೀಕರು ಮುಷ್ಕರ ಮಾಡಲಿಲ್ಲ? – ಡಿಕೆಶಿ

    ಹಿಂದೆ ಡೀಸೆಲ್ ದರ ಏರಿಕೆ ಆದಾಗ ಯಾಕೆ ಲಾರಿ ಮಾಲೀಕರು ಮುಷ್ಕರ ಮಾಡಲಿಲ್ಲ? – ಡಿಕೆಶಿ

    ರಾಮನಗರ: ರಾಜಕೀಯಕ್ಕೆ ಮಣಿದು ಲಾರಿ ಮಾಲೀಕರು ಮುಷ್ಕರ ಮಾಡೋದು ಸರಿಯಲ್ಲ. ಮುಷ್ಕರ ಮಾಡಿದ್ರೆ ನಿಮಗೆ ನಷ್ಟ ಆಗುತ್ತೆ. ಹಾಗಾಗಿ ಯಾವುದೇ ಮುಷ್ಕರ ಮಾಡಬೇಡಿ ಎಂದು ಡಿಸಿಎಂ ಡಿ.ಕೆ ಶಿವಕುಮಾರ್‌ (DK Shivakumar) ಲಾರಿ ಮಾಲೀಕರಿಗೆ ಮನವಿ ಮಾಡಿದ್ದಾರೆ.

    ರಾಜ್ಯದಲ್ಲಿ ಡಿಸೇಲ್ ದರ ಏರಿಕೆ (Diesel Price Hike) ಖಂಡಿಸಿ ಲಾರಿ ಮಾಲೀಕರು ಮುಷ್ಕರಕ್ಕೆ ಕರೆ ನೀಡಿರುವ ವಿಚಾರ ಕುರಿತು ಕನಕಪುರದಲ್ಲಿ ಡಿಸಿಎಂ ಪ್ರತಿಕ್ರಿಯೆ ನೀಡಿದರು. ಇದನ್ನೂ ಓದಿ: ನಾಳೆಯಿಂದ ಬಿಜೆಪಿಯಿಂದ ಜನಾಕ್ರೋಶ ಯಾತ್ರೆ – ಮೈಸೂರಿನಲ್ಲಿ ಜೋಶಿ ಚಾಲನೆ; ಸರ್ಕಾರದ ವೈಫಲ್ಯ ವಿರುದ್ಧ ಕಹಳೆ

    ಲಾರಿ ಮಾಲೀಕರು ಮುಷ್ಕರ (Lorry Owners Strike) ಕರೆದಿರೋ ಬಗ್ಗೆ ಮಾಹಿತಿ ಇಲ್ಲ. ಹಿಂದೆ ಪೆಟ್ರೋಲ್, ಡೀಸೆಲ್ ದರ ಏರಿಕೆ ಆದಾಗ ಯಾಕೆ ಇವರು ಮುಷ್ಕರ ಮಾಡಲಿಲ್ಲ? ಆವತ್ತು ಕೂಡ ಮುಷ್ಕರ ಮಾಡಬಹುದಿತ್ತಲ್ಲ. ಈಗ ರಾಜಕೀಯ ಕಾರಣಕ್ಕಾಗಿ ಮುಷ್ಕರ ಮಾಡ್ತಿದ್ದಾರೆ. ಈಗಲೂ ಎಲ್ಲಾ ಲಾರಿ ಮಾಲೀಕರಿಗೆ ಮನವಿ ಮಾಡ್ತೀನಿ. ಸುಮ್ಮನೆ ರಾಜಕೀಯಕ್ಕೆ ಒಳಗಾಗಬೇಡಿ. ರಾಜಕೀಯಕ್ಕೆ ಮಣಿದು ಮುಷ್ಕರ ಮಾಡೋದು ಸರಿಯಲ್ಲ ಎಂದು ಹೇಳಿದರು. ಇದನ್ನೂ ಓದಿ: ಈ ಸರ್ಕಾರ ಪೋಸ್ಟ್‌ ಮಾರ್ಟಂಗೂ ದರ ವಿಧಿಸಿಬಿಟ್ರೆ ಸಾಯೋದಕ್ಕೂ ಜನ ಹಿಂಜರೀತಾರೆ – ಸಿ.ಟಿ ರವಿ ಲೇವಡಿ

    ಮುಷ್ಕರ ಮಾಡಿದ್ರೆ ನಿಮಗೆ ನಷ್ಟ ಆಗುತ್ತೆ. ನೀವು ಸರ್ಕಾರದ ಜೊತೆ ಇರಬೇಕು. ನಿಮ್ಮ ಬದುಕು ನೋಡಿ, ಒಂದು ದಿನ ಮುಷ್ಕರ ಮಾಡಿದ್ರೆ ಆ ನಷ್ಟ ಭರಿಸಲು ನಿಮ್ಮ ಕೈಯಲ್ಲಿ ಆಗಲ್ಲ. ಲಾರಿ ಇಎಂಐ, ಬಡ್ಡಿ, ಡ್ರೈವರ್ ಸಂಬಳ ಇದೆಲ್ಲ ಹೊರೆ ಆಗುತ್ತೆ. ದಯಮಾಡಿ ಯಾವುದೇ ಮುಷ್ಕರ ಮಾಡಬೇಡಿ ಎಂದು ಲಾರಿ ಮಾಲೀಕರಿಗೆ ಮನವಿ ಮಾಡಿದರು. ಇದನ್ನೂ ಓದಿ: ವಿನಯ್ ಸೋಮಯ್ಯ ಆತ್ಮಹತ್ಯೆ ಕೇಸ್ ಸಿಬಿಐಗೆ ವಹಿಸುವ ಅಗತ್ಯ ಇಲ್ಲ: ಪರಮೇಶ್ವರ್

  • ಏ.15 ರಿಂದ ಅನಿರ್ದಿಷ್ಟಾವಧಿ ಲಾರಿ ಮುಷ್ಕರ – 9 ಲಕ್ಷ ವಾಣಿಜ್ಯ ವಾಹನಗಳ ಸಂಚಾರ ಬಂದ್‌

    ಏ.15 ರಿಂದ ಅನಿರ್ದಿಷ್ಟಾವಧಿ ಲಾರಿ ಮುಷ್ಕರ – 9 ಲಕ್ಷ ವಾಣಿಜ್ಯ ವಾಹನಗಳ ಸಂಚಾರ ಬಂದ್‌

    – ಏರ್‌ಪೋರ್ಟ್‌ ಟ್ಯಾಕ್ಸಿ, ಗೂಡ್ಸ್ ವಾಹನಗಳೂ ಬಂದ್

    ಬೆಂಗಳೂರು: ಡೀಸೆಲ್ ದರ ಏರಿಕೆ (Diesel Price Hike) ಖಂಡಿಸಿ ಇದೇ ಏಪ್ರಿಲ್ 15 ರಿಂದ ಲಾರಿ ಮಾಲೀಕರ ಸಂಘ (Lorry Owners Association) ಮುಷ್ಕರಕ್ಕೆ ಕರೆ ನೀಡಿದ್ದಾರೆ. ಅಂದು ರಾಜ್ಯಾದ್ಯಂತ ಎಲ್ಲಾ ಲಾರಿಗಳ ಸಂಚಾರ ಸ್ಥಗಿತಗೊಳ್ಳಲಿದ್ದು, ಗೂಡ್ಸ್ ವಾಹನಗಳು, ಏರ್‌ಪೋರ್ಟ್‌ ಟ್ಯಾಕ್ಸಿಗಳೂ (Airport Taxi) ಸಹ ಸಂಪೂರ್ಣ ಬಂದ್‌ ಆಗಲಿದೆ.

    ಬಸ್‌ ಟಿಕೆಟ್‌, ಮೆಟ್ರೋ, ಹಾಲು, ವಿದ್ಯುತ್‌ ಬಳಿಕ ಡಿಸೇಲ್‌ ದರ ಏರಿಕೆ ಮಾಡಿ ಕರ್ನಾಟಕ ಸರ್ಕಾರ ಜನರ ಕೆಂಗಣ್ಣಿಗೆ ಗುರಿಯಾಗಿದೆ. ಈ ಬೆನ್ನಲ್ಲೇ ಲಾರಿ ಮಾಲೀಕರ ಸಂಘ ಡೀಸೆಲ್ ಬೆಲೆ ಏರಿಕೆ ವಿರುದ್ಧ ಹೋರಾಟಕ್ಕೆ ಕರೆ ನೀಡಿದೆ. ಈ ಸಂಬಂಧ ಚಾಮರಾಜಪೇಟೆಯ ಖಾಸಗಿ ಹೋಟೆಲ್‌ನಲ್ಲಿಂದು (Private Hotel) ವಾಣಿಜ್ಯ ವಾಹನಗಳ ಮಾಲೀಕರ ಸಂಘ ಸಭೆ ನಡೆಸಿದ್ದು, ಸಭೆಯ ಬಳಿಕ ಹೋರಾಟಕ್ಕೆ ಕರೆ ನೀಡಿದೆ. ಇದೇ ಏಪ್ರಿಲ್‌ 15ರ ಬೆಳಗ್ಗೆ 6 ಗಂಟೆಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ.

    ಈ ಕುರಿತು ಮಾತನಾಡಿರುವ ಲಾರಿ ಅಸೋಸಿಯೇಷನ್ ಅಧ್ಯಕ್ಷ ಷಣ್ಮುಗಪ್ಪ, ಡಿಸೇಲ್ ಬೆಲೆ 7 ತಿಂಗಳಲ್ಲಿ 5 ರೂ ಏರಿಕೆಯಾಗಿದೆ. ಇದು ಲಾರಿ ಸೇರಿದಂತೆ ವಾಣಿಜ್ಯ ವಾಹನಗಳ ಮಾಲೀಕರು ನೇಣು ಹಾಕಿಕೊಳ್ಳುವ ಸ್ಥಿತಿ ಬಂದಿದೆ. ಏನಾದರೂ ಫ್ರೀ ಕೊಡಲಿ, ಆದರೆ ಹೊಟ್ಟೆ ಮೇಲೆ ಹೊಡೆದು ದರ ಏರಿಕೆ ಮಾಡೋದು ಸರಿಯಲ್ಲ. ಫಿಟ್ನೆಸ್ ಫೀಸ್, ಬಾರ್ಡರ್ ಚೆಕ್ ಪೋಸ್ಟ್, ಡಿಸೇಲ್ ದರ ಸೇರಿದಂತೆ ಪ್ರಮುಖ ಬೇಡಿಕೆಗಳನ್ನ ಈಡೇರಿಕೆಗೆ ಒತ್ತಾಯಿಸಿ ಮುಷ್ಕರಕ್ಕೆ ಕರೆ ನೀಡಲಾಗಿದೆ. 14ನೇ ತಾರೀಖು ಅಂಬೇಡ್ಕರ್ ಜಯಂತಿ ರಾತ್ರಿಯಿಂದಲೇ ಹೋರಾಟ ಶುರು ಮಾಡಲಿದ್ದೇವೆ. ಬೇಡಿಕೆ ಈಡೇರುವವರೆಗೆ ಕರ್ನಾಟಕದ ಒಳಗೆ ಯಾರೂ ಬರಲ್ಲ. ಇದಕ್ಕೆ ಪೆಟ್ರೋಲ್ ಮಾಲೀಕರು ಬೆಂಬಲಕೊಟ್ಟಿದ್ದಾರೆ, ಏರ್ಪೋಟ್ ಟ್ಯಾಕ್ಸಿ, ಜಲ್ಲಿ ಮರಳು, ಸೇರಿದಂತೆ ಗೂಡ್ಸ್ ವಾಹನಗಳು ಬಂದ್ ಆಗಲಿವೆ. ಎಲ್ಲಾ ಬಗೆಯ ವಾಣಿಜ್ಯ ವಾಹನಗಳ 9 ಲಕ್ಷ ವಾಹನಗಳು ಸ್ಥಗಿತವಾಗಲಿವೆ ಎಂದು ತಿಳಿಸಿದ್ದಾರೆ.

    ಏಪ್ರಿಲ್‌ 14ರ ವರೆಗೆ ಸರ್ಕಾರಕ್ಕೆ ಗಡುವು ನೀಡುತ್ತೇವೆ. ಸರ್ಕಾರ ನಮ್ಮ ಬೇಡಿಕೆಗಳಿಗೆ ಮಣಿಯದಿದ್ದರೆ, 14ರ ರಾತ್ರಿಯಿಂದಲೇ ಹೋರಾಟ ಶುರು ಮಾಡಲಿದ್ದೇವೆ. ಹೋರಾಟ ಶುರುವಾದ ಬಳಿಕ ಯಾವುದೇ ರಾಜ್ಯದಿಂದ ಕರ್ನಾಟಕ ಒಳಗೆ ವಾಣಿಜ್ಯ ವಾಹನ ಸಂಚಾರ ಮಾಡಲ್ಲ. ಚೆಕ್ ಪೋಸ್ಟ್‌ಗಳಲ್ಲಿ ಖುದ್ದು ನಾವುಗಳೇ ನಿಲ್ಲುತ್ತೇವೆ. ಯಾವುದೇ ವಾಣಿಜ್ಯ ವಾಹನಗಳನ್ನ ಒಳಗಡೆ ಬಿಡದಂತೆ ನೋಡಿಕೊಳ್ಳುತ್ತೇವೆ ಎಂದು ಎಚ್ಚರಿಸಿದ್ದಾರೆ.

    ಯಾವೆಲ್ಲಾ ವಾಹನಗಳು ಬಂದ್‌?
    ಏಪ್ರಿಲ್‌ 15ರಿಂದ ಏರ್ ಪೋರ್ಟ್ ಟ್ಯಾಕ್ಸಿ, ಜಲ್ಲಿ ಕಲ್ಲು, ಮರಳು ಲಾರಿ, ಗೂಡ್ಸ್ ವಾಹನಗಳು ಸೇರಿದಂತೆ 6 ಲಕ್ಷ ಲಾರಿಗಳ ಸಂಚಾರ ಬಂದ್‌ ಆಗಲಿದೆ. ಜೊತೆಗೆ ಅಕ್ಕಿ ಲೊಡ್, ಗೂಡ್ಸ್, ಪೆಟ್ರೋಲ್ ಡಿಸೇಲ್ ಲಾರಿಗಳನ್ನೂ ಬಂದ್‌ ಮಾಡಲಾಗುತ್ತದೆ. ಇದಕ್ಕೆ ಚಾಲಕರ ಸಂಘದಿಂದಲೂ ಬೆಂಬಲ ವ್ಯಕ್ತವಾಗಿದೆ. ಎಲ್ಲಾ ಬಗೆಯ ವಾಣಿಜ್ಯ ವಾಹನಗಳ 9 ಲಕ್ಷ ವಾಹನಗಳ ಸಂಚಾರ ಸ್ಥಗಿತವಾಗಲಿವೆ ಎಂದು ತಿಳಿಸಿದ್ದಾರೆ.

  • ಧರ್ಮ ಸಂಕಟದಲ್ಲಿದ್ದೀವಿ- ತೈಲ ಬೆಲೆ ಏರಿಕೆಗೆ ವಿತ್ತ ಸಚಿವರ ಪ್ರತಿಕ್ರಿಯೆ

    ಧರ್ಮ ಸಂಕಟದಲ್ಲಿದ್ದೀವಿ- ತೈಲ ಬೆಲೆ ಏರಿಕೆಗೆ ವಿತ್ತ ಸಚಿವರ ಪ್ರತಿಕ್ರಿಯೆ

    ನವದೆಹಲಿ: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಏರಿಕೆಯ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಹಣಕಾಸುವ ಸಚಿವೆ ನಿರ್ಮಲಾ ಸೀತಾರಾಮನ್, ನಾವು ಧರ್ಮ ಸಂಕಟದಲ್ಲಿದ್ದೇವೆ ಎಂದು ಮತ್ತೊಮ್ಮೆ ತಮ್ಮ ಅಸಹಾಯಕತೆಯನ್ನ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಅರ್ಥವ್ಯವಸ್ಥೆಯ ವೃದ್ಧಿ ಆಗುತ್ತಿರುವ ಸುಳಿವು ಸಿಗ್ತಿದೆ ಎಂದು ಹೇಳಿದರು.

    ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿತ್ತ ಸಚಿವರು, ನಾವು ದೇಶದ ಯುವಕರನ್ನ ಗಮನದಲ್ಲಿರಿಸಿ ಬಜೆಟ್ ಮಂಡಿಸಿದ್ದೇವೆ. ಭವಿಷ್ಯದ 20 ವರ್ಷಗಳನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ಮಂಡನೆ ಮಾಡಲಾಗಿದೆ. ಲಾಕ್‍ಡೌನ್ ನಿಂದಾಗಿ ಕುಸಿತವಾಗಿದ್ದ ಅರ್ಥ ವ್ಯವಸ್ಥೆ ಚೇತರಿಕೆ ಕಾಣುತ್ತಿರುವ ಲಕ್ಷಣಗಳು ನಮ್ಮ ಮುಂದಿವೆ. ಹಲವು ಉದ್ದಿಮೆದಾರರ ಜೊತೆ ಮಾತನಾಡಿದ್ದು, ಎಲ್ಲ ಕಾರ್ಖಾನೆಗಳು ಪೂರ್ಣ ಕಾರ್ಮಿಕರೊಂದಿಗೆ ಕಾರ್ಯ ನಿರ್ವಹಿಸುತ್ತಿವೆ. ಕಂಪನಿಗಳು ತಮ್ಮ ಕಾರ್ಯದ ವ್ಯಾಪ್ತಿಯನ್ನ ವಿಸ್ತರಿಸುವತ್ತ ಹೆಜ್ಜೆ ಇರಿಸಿವೆ ಎಂದರು.

    ಐಐಟಿ ಮತ್ತು ಐಐಎಂ ಪ್ರಕಾರ ದೇಶದಲ್ಲಿ ಉದ್ಯೋಗ ಸೃಷ್ಟಿಯ ದರ ವೃದ್ಧಿಯಾಗಿದೆ. ಲಾಕ್‍ಡೌನ್ ಸ್ವಗ್ರಾಮಗಳಿಗೆ ಹಿಂದಿರುಗಿದ್ದ ಪ್ರವಾಸಿ ಕಾರ್ಮಿಕರು ನಗರಗಳತ್ತ ಹೊರಟಿದ್ದಾರೆ. ಬ್ಯಾಂಕುಗಳು ಹೋಮ್ ಲೋನ್ ಮೇಲಿನ ಬಡ್ಡಿ ದರ ಇಳಿಕೆ ಮಾಡಿದೆ ಎಂದು ತಿಳಿಸಿದರು. ಇದನ್ನೂ ಓದಿ: ಬೆಲೆ ಏರಿಕೆ ನಿಯಂತ್ರಣ ಸರ್ಕಾರದಿಂದ ಸಾಧ್ಯವಿಲ್ಲ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

    ತೈಲ ಬೆಲೆ ದಿನೇ ದಿನೇ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಲು ಹಣಕಾಸು ಸಚಿವಾಲಯವು ಚಿಂತನೆ ನಡೆಸಿದ್ದು, ಮಾರ್ಚ್ ಮಧ್ಯದಲ್ಲಿ ಬೆಲೆ ಇಳಿಕೆಯ ಸಿಹಿ ಸುದ್ದಿ ಸಿಗಬಹುದು. ತೈಲ ಬೆಲೆ ಏರಿಕೆಯಿಂದಾಗಿ ಅಗತ್ಯ ವಸ್ತುಗಳ ಬೆಲೆಯೂ ಏರತೊಡಗಿದೆ. ಹೀಗಾಗಿ ಅಬಕಾರಿ ಸುಂಕವನ್ನು ಕಡಿತಗೊಳಿಸಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಮೂವರು ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಇದನ್ನೂ ಓದಿ: ಸಾಮಾನ್ಯ ಜನರೇ ನಮ್ಮ ಬಂಡವಾಳಶಾಹಿಗಳು- ರಾಹುಲ್‌ಗೆ ಸೀತಾರಾಮನ್ ತಿರುಗೇಟು

    ವಿಶ್ವದ ಮೂರನೇ ಅತಿದೊಡ್ಡ ಕಚ್ಚಾ ತೈಲ ಗ್ರಾಹಕ ದೇಶವಾಗಿರುವ ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಮೇಲೆ ಶೇ.60 ರಷ್ಟು ತೆರಿಗೆ ವಿಧಿಸಲಾಗುತ್ತಿದೆ. ಕಳೆದ ವರ್ಷ ಕೋವಿಡ್ ಹಿನ್ನೆಲೆಯಲ್ಲಿ ತೈಲ ಬೆಲೆ ವಿಶ್ವಾದ್ಯಂತ ಇಳಿಕೆಯಾಗಿತ್ತು. ಆದರೆ ಭಾರತದಲ್ಲಿ ಅಬಕಾರಿ ಸುಂಕ ಹೆಚ್ಚಳ ಮಾಡಿದ್ದರಿಂದ ಬೆಲೆ ಇಳಿಕೆಯ ಲಾಭ ಗ್ರಾಹಕರಿಗೆ ಸಿಕ್ಕಿರಲಿಲ್ಲ. ಇದನ್ನೂ ಓದಿ: ಕೊರೊನಾ ಬಿಕ್ಕಟ್ಟು ದೈವೇಚ್ಛೆ: ನಿರ್ಮಲಾ ಸೀತಾರಾಮನ್

  • ಇಂಧನ ಬೆಲೆ ಏರಿಸಿ ಜನರನ್ನು ಲೂಟಿ ಮಾಡಲಾಗುತ್ತಿದೆ – IYC ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಆರೋಪ

    ಇಂಧನ ಬೆಲೆ ಏರಿಸಿ ಜನರನ್ನು ಲೂಟಿ ಮಾಡಲಾಗುತ್ತಿದೆ – IYC ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಆರೋಪ

    ನವದೆಹಲಿ: ಪೆಟ್ರೋಲ್, ಡಿಸೇಲ್‍ನ ನಿರಂತರ ಬೆಲೆ ಏರಿಕೆ ಖಂಡಿಸಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಇಂದು ದೆಹಲಿಯಲ್ಲಿ ಯೂತ್ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು.

    ಅಧ್ಯಕ್ಷ ಬಿ.ವಿ ಶ್ರೀವಾಸ್ ನೇತೃತ್ವದಲ್ಲಿ ದೆಹಲಿ ಪ್ರಮುಖ ರಸ್ತೆಗಳಲ್ಲಿ ಎತ್ತಿನಗಾಡಿ ಓಡಿಸಿ, ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಬೆಲೆ ಏರಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ಬಳಿಕ ಮಾತನಾಡಿದ ಬಿ.ವಿ ಶ್ರೀನಿವಾಸ್, ಅಂತರಾಷ್ಟ್ರೀಯ ಮಟ್ಟದಲ್ಲಿ ಈಗ ಕಚ್ಚಾ ತೈಲದ ಬೆಲೆ ವ್ಯಾಪಕವಾಗಿ ಕುಸಿದಿದೆ. ಆದರೂ ಕೇಂದ್ರ ಸರ್ಕಾರ ಕಳೆದ 23 ದಿನಗಳಿಂದ ನಿರಂತರವಾಗಿ ಪ್ರತಿನಿತ್ಯವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಸುತ್ತಿರುವುದು ಸರಿಯಲ್ಲ ಎಂದರು.

    ಕಚ್ಚಾ ತೈಲದ ಬೆಲೆ ಇಳಿಕೆಯಾದಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸುವುದು ಸಾಮಾನ್ಯವಾದ ಸಂಗತಿ. ಆದರೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲ ಕುಸಿದಿದ್ದರೂ ಪ್ರತಿದಿನವೂ ಪೆಟ್ರೋಲ್ – ಡೀಸೆಲ್ ಬೆಲೆ ಹೆಚ್ಚಿಸುತ್ತಿದೆ. ಈ ಮೂಲಕ ಲಾಕ್‍ಡೌನ್ ಮತ್ತು ಕೊರೊನಾ ಕಷ್ಟದಲ್ಲಿರುವ ಜನ ಸಾಮಾನ್ಯರಿಂದ ಹಣವನ್ನು ಲೂಟಿ ಮಾಡುತ್ತಿದೆ ಎಂದು ಆರೋಪಿಸಿದರು.

    ಜನರು ಕಷ್ಟದಲ್ಲಿದ್ದಾಗಲೂ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸುತ್ತಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಜನರಿಗೆ ಬೇಕಿರುವ ಇತರೆ ಅಗತ್ಯ ವಸ್ತುಗಳ ಬೆಲೆಗಳು ಕೂಡ ಏರಿಕೆಯಾಗುತ್ತಿವೆ ಹೀಗಾಗಿ ಬೆಲೆ ಏರಿಕೆ ನಿಯಂತ್ರಿಸಬೇಕು ಎಂದು ಶ್ರೀನಿವಾಸ್ ಒತ್ತಾಯಿಸಿದರು.

    ಆಲ್ ಇಂಡಿಯಾ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹರೀಶ್ ಪವಾರ್, ಕಾರ್ಯದರ್ಶಿಗಳಾದ ಖುಸ್ಬೂ ಶರ್ಮಾ, ಮುಖೇಶ್ ಕುಮಾರ್, ಮೋಹಿತ್ ಚೌಧರಿ, ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.