Tag: ಡೆಂಗ್ಯೂ

  • ದಿಢೀರ್‌ ಆಸ್ಪತ್ರೆಗೆ ದಾಖಲಾದ ನಟ ವಿಜಯ್‌ ದೇವರಕೊಂಡ

    ದಿಢೀರ್‌ ಆಸ್ಪತ್ರೆಗೆ ದಾಖಲಾದ ನಟ ವಿಜಯ್‌ ದೇವರಕೊಂಡ

    ತೆಲುಗು ನಟ ವಿಜಯ್ ದೇವರಕೊಂಡ (Vijay Deverakonda) ಅವರನ್ನು ಆಸ್ಪತ್ರೆಗೆ (Hospital) ದಾಖಲಿಸಲಾಗಿದೆ ಎಂದು ವರದಿಯಾಗಿದೆ.

    ಡೆಂಗ್ಯೂ (Dengue) ಜ್ವರದಿಂದ ನಟ ಆಸ್ಪತ್ರೆಗೆ ದಾಖಲಾಗಿದ್ದು, ಜುಲೈ 20ರ ಒಳಗೆ ಅವರನ್ನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ಸಾಧ್ಯತೆಯಿದೆ ವರದಿಗಳು ತಿಳಿಸಿವೆ. ಇದನ್ನೂ ಓದಿ: ನಟ ವಿಷ್ಣುವರ್ಧನ್‌ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನಕ್ಕೆ ಮನವಿ

    ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆಯಾದರೂ, ವಿಜಯ್ ದೇವರಕೊಂಡ ಅಥವಾ ಅವರ ತಂಡವು ಆಸ್ಪತ್ರೆ ದಾಖಲಾಗಿರುವ ಬಗ್ಗೆ ಯಾವುದೇ ಅಧಿಕೃತ (Official Message) ಮಾಹಿತಿ ಹಂಚಿಕೊಂಡಿಲ್ಲ.  ಇದನ್ನೂ ಓದಿ: ತಲೈವಾನ್ ತಲೈವಿ ಟ್ರೈಲರ್‌ ರಿಲೀಸ್ – ವಿಜಯ್ ಸೇತುಪತಿ-ನಿತ್ಯಾ ಮಸ್ತ್ ಮಸ್ತ್..!

    ಗೌತಮ್ ತಿನ್ನನುರಿ ನಿರ್ದೇಶನದ ನಟ ವಿಜಯ್ ದೇವರಕೊಂಡ ನಟನೆಯ ‘ಕಿಂಗ್‌ಡಮ್‌ʼ ಚಿತ್ರ ಇದೇ ಜುಲೈ 31 ರಂದು ಬಿಡುಗಡೆಯಾಗಲಿದೆ. 100 ಕೋಟಿ ಬಜೆಟ್‌ನಲ್ಲಿ ನಿರ್ಮಿಸಲಾದ ಈ ಸ್ಪೈ ಆಕ್ಷನ್ ಥ್ರಿಲ್ಲರ್ ಚಿತ್ರ ಭಾರೀ ನಿರೀಕ್ಷೆ ಮೂಡಿಸಿದೆ. ಆದ್ರೆ ಚಿತ್ರ ರಿಲೀಸ್‌ಗೂ ಮೊದಲೇ ನಟ ಈಗ ಆಸ್ಪತ್ರೆಗೆ ದಾಖಲಾಗಿದ್ದಾರೆ.

  • ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 91 ಹೊಸ ಡೆಂಗ್ಯೂ ಪ್ರಕರಣ ದಾಖಲು

    ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 91 ಹೊಸ ಡೆಂಗ್ಯೂ ಪ್ರಕರಣ ದಾಖಲು

    ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳ (Dengue Case) ಸಂಖ್ಯೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 91 ಹೊಸ ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ.

    ರಾಜ್ಯದಲ್ಲಿ ಈವರೆಗೆ ಒಟ್ಟು 29,611 ಪ್ರಕರಣಗಳು ದಾಖಲಾಗಿದ್ದು, 683 ಪ್ರಕರಣಗಳು ಸಕ್ರಿಯವಾಗಿವೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಕಳೆದ 24 ಗಂಟೆಯಲ್ಲಿ 38 ಡೆಂಗ್ಯೂ ಪ್ರಕರಣ ವರದಿಯಾಗಿದೆ ಎಂದು ಆರೋಗ್ಯ ಇಲಾಖೆ (Health Department) ಮಾಹಿತಿ ನೀಡಿದೆ.ಇದನ್ನೂ ಓದಿ: ಉಡುಪಿಯಲ್ಲಿ ಮೇಘಸ್ಪೋಟ – ನಾಪತ್ತೆಯಾದ ವೃದ್ಧೆ ಶವವಾಗಿ ಪತ್ತೆ

    ಬೆಂಗಳೂರಲ್ಲಿ ಡೆಂಗ್ಯೂ ಸ್ಥಿತಿ ಹೇಗಿದೆ?
    ಬೆಂಗಳೂರಲ್ಲಿ ಜನವರಿಯಿಂದ ಇಲ್ಲಿಯವರೆಗೆ 9,035 ಡೆಂಗ್ಯೂ ಕೇಸ್‌ಗಳು ವರದಿಯಾಗಿವೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಆರೋಗ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಇತ್ತೀಚಿನ ದಿನಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿದ ಸೊಳ್ಳೆಗಳ ಲಾರ್ವಾಗಳು ಕೊಚ್ಚಿಕೊಂಡು ಹೋಗುತ್ತಿದೆ. ಹೀಗಾಗಿ ದೈನಂದಿನ ಸರಾಸರಿ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿವೆ ಎಂದು ಹೇಳಿದ್ದಾರೆ.

    ಜೂನ್ ತಿಂಗಳಿನಲ್ಲಿ ಪ್ರತಿ ನಿತ್ಯ 200 ಪಾಸಿಟಿವ್ ಕೇಸ್‌ಗಳು ವರದಿಯಾಗುತ್ತಿದ್ದವು. ಆದರೆ ಆಗಸ್ಟ್ 1 ರಿಂದ 6ರ ನಡುವೆ 771 ಪ್ರಕರಣಗಳು ವರದಿಯಾಗಿವೆ. ಕಳೆದ ವಾರ ದೈನಂದಿನ ಸರಾಸರಿ 130ಕ್ಕೆ ಇಳಿದಿದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.ಇದನ್ನೂ ಓದಿ: ಕರಾಚಿಯಲ್ಲಿ ಸ್ಫೋಟ| ಇಬ್ಬರು ಚೀನಿ ಪ್ರಜೆಗಳು ಬಲಿ – 8 ಮಂದಿಗೆ ಗಾಯ

    ಈ ವರ್ಷದ ಅಗಸ್ಟ್‌ವರೆಗೆ ಜಾಗತಿಕವಾಗಿ 1.2 ಕೋಟಿಗೂ ಹೆಚ್ಚು ಡೆಂಗ್ಯೂ ಪ್ರಕರಣಗಳು ಕಾಣಿಸಿಕೊಂಡಿವೆ. 6,991 ಜನ ಡೆಂಗ್ಯೂ ಪ್ರಕರಣದಿಂದ ಸಾವನ್ನಪ್ಪಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ  (WHO) ವರದಿ ಅಂಕಿಅಂಶಗಳು ತಿಳಿಸಿವೆ.

  • ಪ್ರಪಂಚದಾದ್ಯಂತ ಈ ವರ್ಷ ಡೆಂಗ್ಯೂ ಪ್ರಕರಣ ಹೆಚ್ಚಳ – ಕಾರಣವೇನು? 

    ಪ್ರಪಂಚದಾದ್ಯಂತ ಈ ವರ್ಷ ಡೆಂಗ್ಯೂ ಪ್ರಕರಣ ಹೆಚ್ಚಳ – ಕಾರಣವೇನು? 

    ಭಾರತದಾದ್ಯಂತದ ಹಲವು ನಗರಗಳಲ್ಲಿ ಡೆಂಗ್ಯೂ (Dengue) ಪ್ರಕರಣಗಳ ಉಲ್ಬಣಗೊಂಡಂತೆ, ಬ್ರೆಜಿಲ್ ಮತ್ತು ಇತರ ದಕ್ಷಿಣ ಅಮೆರಿಕದ ದೇಶಗಳು ಸೇರಿದಂತೆ ವಿಶ್ವದೆಲ್ಲೆಡೆ ಹೆಚ್ಚು ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಇನ್ನೂ ವಿಶ್ವ ಆರೋಗ್ಯ ಸಂಸ್ಥೆಯ (WHO) ದತ್ತಾಂಶದ ಪ್ರಕಾರ ವರ್ಷದಿಂದ ವರ್ಷಕ್ಕೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದು ಕಂಡುಬಂದಿದೆ. ಜಾಗತಿಕವಾಗಿ 1.2 ಕೋಟಿಗೂ ಹೆಚ್ಚು ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ.  

    ಡೆಂಗ್ಯೂ ಎಂದರೇನು?

    ಡೆಂಗ್ಯೂ ಈಡಿಸ್ ಈಜಿಪ್ಟಿ ಸೊಳ್ಳೆಯಿಂದ ಹರಡುವ ವೈರಲ್ ಸೋಂಕು. ಡೆಂಗ್ಯೂವಿನಿಂದ ಹೆಚ್ಚಿನ ಜನರಲ್ಲಿ ಸಾಮಾನ್ಯ ರೋಗಲಕ್ಷಣಗಳು ಕಂಡು ಬರುತ್ತದೆ. ಅಂದರೆ ಜ್ವರ, ತೀವ್ರ ತಲೆನೋವು, ಸ್ನಾಯು ಮತ್ತು ಕೀಲು ನೋವುಗಳು, ವಾಕರಿಕೆ ಮತ್ತು ವಾಂತಿ, ಕಣ್ಣುಗಳ ಹಿಂದೆ ನೋವು ಮತ್ತು ದದ್ದುಗಳು ಕಾಣಿಸಿಕೊಳ್ಳುತ್ತವೆ. ತೀವ್ರ ತರವಾದ ಪ್ರಕರಣಗಳಲ್ಲಿ, ಸೋಂಕು ಆಂತರಿಕ ರಕ್ತಸ್ರಾವಕ್ಕೆ ಕಾರಣವಾಗಬಹುದು. ಅಲ್ಲದೇ ಸರಿಯಾದ ಚಿಕಿತ್ಸೆ ಸಿಗದಿದ್ದರೆ ಸಾವು ಕೂಡ ಸಂಭವಿಸಲಿದೆ. 

    ಸೋಂಕಿನ ಪರಿಣಾಮವೇನು?

    ರಕ್ತನಾಳಗಳಿಗೆ ಡೆಂಗ್ಯೂ ವೈರಸ್ ಹಾನಿಯುಂಟು ಮಾಡುತ್ತದೆ. ರಕ್ತಕಣಗಳ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗುತ್ತದೆ. ಪರಿಣಾಮವಾಗಿ ಅಂಗಾಂಗ ವೈಫಲ್ಯವಾಗುತ್ತದೆ. ಕೆಲವೊಮ್ಮೆ ಜೀವಕ್ಕೂ ಸಂಚಕಾರ ತರಬಹುದು.

    ಈ ವರ್ಷ ಎಷ್ಟು ಮಂದಿಗೆ ಡೆಂಗ್ಯೂ ಸೋಂಕು ಕಾಣಿಸಿಕೊಂಡಿದೆ? 

    ಈ ವರ್ಷದ ಆಗಸ್ಟ್‌ವರೆಗೆ ಜಾಗತಿಕವಾಗಿ 1.2 ಕೋಟಿಗೂ ಹೆಚ್ಚು ಡೆಂಗ್ಯೂ ಪ್ರಕರಣಗಳು ಕಾಣಿಸಿಕೊಂಡಿವೆ. ಡೆಂಗ್ಯೂನಿಂದ 6,991 ಸಾವುಗಳು ದಾಖಲಾಗಿವೆ ಎಂದು WHO ದ ಜಾಗತಿಕ ಡೆಂಗ್ಯೂ ವರದಿಯ ಅಂಕಿಅಂಶಗಳು ತಿಳಿಸಿವೆ. 

    ಇದು ಕಳೆದ ವರ್ಷ ದಾಖಲಾದ 52.7 ಲಕ್ಷ ಪ್ರಕರಣಗಳಿಗಿಂತ ಎರಡು ಪಟ್ಟು ಹೆಚ್ಚಾಗಿದೆ. ಕಳೆದ ವರ್ಷಕ್ಕಿಂತ ಮೊದಲು, ಕಳೆದ ದಶಕದಲ್ಲಿ, ಸುಮಾರು 20-30 ಲಕ್ಷ ವಾರ್ಷಿಕ ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಅಲ್ಲದೇ 2024 ರ ದಾಖಲೆಯ ಸಂಖ್ಯೆಗಳಲ್ಲಿ ಬಹಳಷ್ಟು ವರದಿ ಆಗದೆ ಲೆಕ್ಕಕ್ಕೆ ಸಿಗದಿರುವುದು ಸಾಕಷ್ಟಿದೆ ಎನ್ನಲಾಗಿದೆ. 

    ಭಾರತದಲ್ಲಿ ಡೆಂಗ್ಯೂ ಪ್ರಕರಣಗಳ ಸ್ಥಿತಿ ಏನು?

    ಕಳೆದ ಎರಡು ತಿಂಗಳಿಂದ ದೇಶದ ಹಲವಾರು ನಗರಗಳಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿದೆ ಎಂದು ವರದಿಯಾಗಿದೆ. ಇತ್ತೀಚಿನ ಲಭ್ಯವಿರುವ ಮಾಹಿತಿಯ ಪ್ರಕಾರ ಜೂನ್ ಅಂತ್ಯದವರೆಗೆ 32,000 ಕ್ಕೂ ಹೆಚ್ಚು ಪ್ರಕರಣಗಳು ಮತ್ತು 32 ಸಾವುಗಳಿಗೆ ಡೆಂಗ್ಯೂಗೆ ಕಾರಣವಾಗಿವೆ.

    2023 ರ ಇದೇ ಅವಧಿಗೆ ಹೋಲಿಸಿದರೆ ಈ ವರ್ಷ ವರದಿಯಾದ ಡೆಂಗ್ಯೂ ಪ್ರಕರಣಗಳ ಸಂಖ್ಯೆಯಲ್ಲಿ ಭಾರತದಲ್ಲಿ ಸುಮಾರು 50% ಏರಿಕೆಯಾಗಿದೆ ಎಂದು ಆಗಸ್ಟ್ ಆರಂಭದಲ್ಲಿ ಕೇಂದ್ರ ಆರೋಗ್ಯ ಕಾರ್ಯದರ್ಶಿ ಅಪೂರ್ವ ಚಂದ್ರ ಹೇಳಿದ್ದರು. 

    ಬೆಂಗಳೂರಲ್ಲಿ ಡೆಂಗ್ಯೂ ಸ್ಥಿತಿ ಹೇಗಿದೆ? 

    ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜನವರಿಯಿಂದ ಇಲ್ಲಿಯವರೆಗೆ 9,035 ಡೆಂಗ್ಯೂ ಕೇಸ್ ಗಳು ವರದಿಯಾಗಿವೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆರೋಗ್ಯ ಅಧಿಕಾರಿಗಳು ಶನಿವಾರ ಮಾಹಿತಿ ನೀಡಿದ್ದಾರೆ.

    ಇತ್ತೀಚಿನ ದಿನಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿದ ಸೊಳ್ಳೆಗಳ ಲಾರ್ವಾಗಳು ಕೊಚ್ಚಿಕೊಂಡು ಹೋಗುತ್ತಿದೆ. ಹೀಗಾಗಿ ದೈನಂದಿನ ಸರಾಸರಿ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿವೆ ಎಂದು ಹೇಳಿದ್ದಾರೆ.

    ಜೂನ್ ತಿಂಗಳಿನಲ್ಲಿ ಪ್ರತ ನಿತ್ಯ 200 ಪಾಸಿಟಿವ್ ಕೇಸ್‌ಗಳು ವರದಿಯಾಗುತ್ತಿದ್ದವು. ಆದರೆ, ಆಗಸ್ಟ್ 1 ರಿಂದ 6 ರ ನಡುವೆ 771 ಪ್ರಕರಣಗಳು ವರದಿಯಾಗಿವೆ. ಕಳೆದ ವಾರ ದೈನಂದಿನ ಸರಾಸರಿ 130ಕ್ಕೆ ಇಳಿದಿದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

    ಡೆಂಗ್ಯೂ ಪ್ರಕರಣಗಳ ಹೆಚ್ಚಳದ ಹಿಂದಿರುವ ಕಾರಣವೇನು? 

    ನಗರೀಕರಣ: ದಟ್ಟವಾದ ಜನಸಂಖ್ಯೆ ಹೊಂದಿರುವ ನಗರ ಪ್ರದೇಶಗಳಲ್ಲಿ ರೋಗವು ಹೆಚ್ಚು ವೇಗವಾಗಿ ಹರಡುತ್ತದೆ. ಏಕೆಂದರೆ ನಗರ ಪ್ರದೇಶಗಳು ಈಡಿಸ್ ಈಜಿಪ್ಟಿ ಸೊಳ್ಳೆಗಳ ಸಂತಾನವೃದ್ಧಿಗೆ ಅನೇಕ ಅವಕಾಶವಿದೆ. ಈ ಕಾರಣದಿಂದ ಡೆಂಗ್ಯೂ ಹೆಚ್ಚಳಕ್ಕೆ ಅನುಕೂಲವಾಗಲಿದೆ. 

    ಹವಾಮಾನ ಬದಲಾವಣೆ: ತಾಪಮಾನದಲ್ಲಿನ ಹೆಚ್ಚಳವು ಸೊಳ್ಳೆಗಳು ಸಂತಾನೋತ್ಪತ್ತಿ ಮಾಡಲು ಕಾರಣವಾಗುತ್ತದೆ. ಇದಲ್ಲದೆ, ಹವಾಮಾನ ಬದಲಾವಣೆಯು ವೈರಸ್ ಹೆಚ್ಚು ಬಲವಾಗಲು ಮತ್ತು ಹರಡಲು ಕಾರಣವಾಗಿದೆ. ಇನ್ನೂ ಈಡಿಸ್ ಈಜಿಪ್ಟಿ ಇದು ಶುದ್ಧವಾದ, ನಿಂತ ನೀರಿನಲ್ಲಿ ಸಂತಾನೋತ್ಪತ್ತಿ ಮಾಡುತ್ತದೆ.  

    ಅಮೆರಿಕ ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ & ಪ್ರಿವೆನ್ಷನ್ ಪ್ರಕಾರ ʻಹೆಚ್ಚಿನ ತಾಪಮಾನವು ಡೆಂಗ್ಯೂ ಹರಡುವ ಸೊಳ್ಳೆಗಳ ಸಂಖ್ಯೆಯನ್ನು ಹೆಚ್ಚಿಸುತ್ತದೆ. ಅಲ್ಲದೇ ಡೆಂಗ್ಯೂವಿನಂತಹ ರೋಗ ವೇಗವಾಗಿ ಹಬ್ಬಲಿದೆ ಎಂದು ಹೇಳಿದೆ. 

    ಜನರ ಸಂಚಾರ: ಜನ ಡೆಂಗ್ಯೂ ಬಾಧಿತ ಪ್ರದೇಶಗಳಿಗೆ ಭೇಟಿ ನೀಡುವುದು ಹೆಚ್ಚಿನ ರೋಗ ಹರಡುವಿಕೆಗೆ ಕಾರಣವಾಗಿದೆ. ಡೆಂಗ್ಯೂ ಅಲ್ಲದೇ ಚಿಕೂನ್‌ಗುನ್ಯಾ ಮತ್ತು ಜಿಕಾದಂತಹ ಇತರ ಸೋಂಕುಗಳು ಸಹ ಹರಡುತ್ತವೆ.

    ಡೆಂಗ್ಯೂ ತಡೆಗಟ್ಟುವುದು ಹೇಗೆ?

    ಸೊಳ್ಳೆಗಳು ಮನೆಗಳ ಸುತ್ತಮುತ್ತ ಸಂತಾನೋತ್ಪತ್ತಿ ಮಾಡದಂತೆ ಎಚ್ಚರವಹಿಸಬೇಕು. ಕುಂಡಗಳಲ್ಲಿ, ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರವಹಿಸಬೇಕು. 

    Aedes aegypti ಸೊಳ್ಳೆಗಳು ಹಗಲಿನಲ್ಲಿ ಕಚ್ಚುತ್ತವೆ. ಇದರಿಂದ ಸೊಳ್ಳೆ ಕಡಿತದಿಂದ ಜನರು ತಮ್ಮನ್ನು ತಾವು ರಕ್ಷಿಸಿಕೊಳ್ಳಬೇಕು. ಇಡೀ ದೇಹವನ್ನು ಆವರಿಸುವ ಬಟ್ಟೆಗಳನ್ನು ಧರಿಸುವುದರಿಂದ ಸೊಳ್ಳೆ ಕಡಿತದಿಂದ ತಪ್ಪಿಸಿಕೊಳ್ಳಬಹುದಾಗಿದೆ. 

    * ಸೊಳ್ಳೆ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು

    * ನೀರು ಶೇಖರಣೆಯಾಗುವ ಯಾವುದೇ ಪ್ರದೇಶವಿದ್ದರೂ ಶುಚಿಗೊಳಿಸಬೇಕು

    * ಮಳೆ ನೀರು ನಿಲ್ಲದಂತೆ ನೋಡಿಕೊಳ್ಳಬೇಕು

    * ಸರಾಗವಾಗಿ ನೀರು ಹರಿಯುವಂತೆ ಚರಂಡಿ, ಮೋರಿಗಳನ್ನು ಸುಸ್ಥಿತಿಯಲ್ಲಿಡಬೇಕು

    * ಮನೆ, ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು

    * ಸೊಳ್ಳೆ ನಿವಾರಕ ಬಳಕೆ ಮಾಡಬೇಕು

    ಡೆಂಗ್ಯೂ ವಿರುದ್ಧ ಯಾವುದೇ ಲಸಿಕೆಗಳಿವೆಯೇ?

    WHO ಎರಡು ಲಸಿಕೆಗಳನ್ನು ಡೆಂಗ್ಯೂವಿಗೆ ಶಿಫಾರಸು ಮಾಡುತ್ತದೆ. ಸನೋಫಿಯ ಡೆಂಗ್ವಾಕ್ಸಿಯಾ ಮತ್ತು ಟಕೆಡಾದ ಕ್ಯೂಡೆಂಗಾ. ಆದರೆ, ಇವುಗಳಿಗೆ ಭಾರತದಲ್ಲಿ ಅನುಮೋದನೆ ಸಿಕ್ಕಿಲ್ಲ. ಭಾರತದಲ್ಲಿ ತನ್ನದೇ ಆದ ಹಲವಾರು ಲಸಿಕೆಗಳನ್ನು ನೀಡಲಾಗುತ್ತಿದೆ.

    ಆರಂಭಿಕ ಹಂತದಲ್ಲಿ ಡೆಂಗ್ಯೂ ಜ್ವರದ ಲಕ್ಷಣ ಕಾಣಿಸಿಕೊಂಡರೆ, ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಪಡೆಯಬೇಕು. ಎಲ್ಲಾ ಆಸ್ಪತ್ರೆಗಳಲ್ಲೂ ಡೆಂಗ್ಯೂ ರೋಗಕ್ಕೆ ಚಿಕಿತ್ಸೆ ಲಭ್ಯವಿದೆ. ಡೆಂಗ್ಯೂ ಜ್ವರ ತೀವ್ರಮಟ್ಟದಲ್ಲಿದ್ದರೆ, ರಕ್ತದಲ್ಲಿ ಪ್ಲೇಟ್‌ಲೆಟ್‌ಗಳ ಸಂಖ್ಯೆಯನ್ನು ಹೆಚ್ಚಿಸಲು ವೈದ್ಯರು ಅಗತ್ಯ ಕ್ರಮ ಕೈಗೊಳ್ಳುತ್ತಾರೆ.

  • ಬಳ್ಳಾರಿಯಲ್ಲಿ ಶಂಕಿತ ಡೆಂಗ್ಯೂಗೆ 5 ವರ್ಷದ ಬಾಲಕ ಬಲಿ

    ಬಳ್ಳಾರಿಯಲ್ಲಿ ಶಂಕಿತ ಡೆಂಗ್ಯೂಗೆ 5 ವರ್ಷದ ಬಾಲಕ ಬಲಿ

    ಬಳ್ಳಾರಿ: ಶಂಕಿತ ಡೆಂಗ್ಯೂವಿನಿಂದ (Dengue) 5 ವರ್ಷದ ಬಾಲಕ ಮೃತಪಟ್ಟ ಘಟನೆ ಕುರುಗೋಡು ತಾಲೂಕಿನ ಸಿದ್ದಮ್ಮನಹಳ್ಳಿಯಲ್ಲಿ ನಡೆದಿದೆ. ಮೃತ ಬಾಲಕನನ್ನು ಪ್ರದೀಪ್ ಆಚಾರಿ (5) ಎಂದು ಗುರುತಿಸಲಾಗಿದೆ.

    ಒಂದು ವಾರದಲ್ಲಿ ಸಿದ್ದಮ್ಮನಹಳ್ಳಿಯಲ್ಲಿ 20ಕ್ಕೂ ಹೆಚ್ಚು ಜನರಲ್ಲಿ ಡೆಂಗ್ಯೂ ಜ್ವರ ಕಾಣಿಸಿಕೊಂಡಿದೆ. ಪ್ರತೀ ನಿತ್ಯ ಸೋಂಕಿತರು ಆಸ್ಪತ್ರೆಗೆ ಅಲೆದಾಡುತ್ತಿದ್ದಾರೆ. ಇದರಿಂದ ಗ್ರಾಮದಲ್ಲಿ ಆತಂಕ ಮನೆ ಮಾಡಿದೆ. ಇದನ್ನೂ ಓದಿ: Uttar Pradesh | ರೈಲು ಹಳಿಯ ಮೇಲೆ ಕಾಂಕ್ರೀಟ್ ಕಂಬ ಇರಿಸಿದ್ದ ಅಪ್ರಾಪ್ತ ವಶಕ್ಕೆ

    ಡೆಂಗ್ಯೂ ಪ್ರಕರಣ ಹೆಚ್ಚಾಗುತ್ತಿದ್ದರೂ ಪಂಚಾಯ್ತಿ ಅಧಿಕಾರಿಗಳು ಫಾಗಿಂಗ್ ಮಾಡುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ಇದನ್ನೂ ಓದಿ: ಇಂದು ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ; ತಾಯಿ ದರ್ಶನಕ್ಕೆ ನಿರ್ಬಂಧ

  • ರಾಜ್ಯದಲ್ಲಿ 20 ಸಾವಿರದ ಸನಿಹದತ್ತ ಡೆಂಗ್ಯೂ ಪ್ರಕರಣ – ಇದುವರೆಗೆ 10 ಮಂದಿ ಬಲಿ

    ರಾಜ್ಯದಲ್ಲಿ 20 ಸಾವಿರದ ಸನಿಹದತ್ತ ಡೆಂಗ್ಯೂ ಪ್ರಕರಣ – ಇದುವರೆಗೆ 10 ಮಂದಿ ಬಲಿ

    – ನಿತ್ಯವೂ 300ರ ಸನಿಹಕ್ಕೆ ಕೇಸ್

    ಬೆಂಗಳೂರು: ರಾಜ್ಯದಲ್ಲಿ (Karnataka) ಡೆಂಗ್ಯೂ (Dengue) ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ. ಇಲ್ಲಿಯವರೆಗೂ ರಾಜ್ಯದಲ್ಲಿ 19,923 ಡೆಂಗ್ಯೂ ಪ್ರಕರಣ ದಾಖಲಾಗಿ 20 ಸಾವಿರ ಸನಿಹದತ್ತ ಮುನ್ನುಗ್ಗುತ್ತಿದೆ.

    ರಾಜ್ಯದಲ್ಲಿ ಇದುವರೆಗೂ 10 ಜನ ಡೆಂಗ್ಯೂಗೆ ಬಲಿಯಾಗಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಮೂರು ಸಾವು, ಶಿವಮೊಗ್ಗದಲ್ಲಿ ಇಬ್ಬರು, ಹಾಸನದಲ್ಲಿ ಇಬ್ಬರು ಸಾವು ಮತ್ತು ಧಾರವಾಡ ಮತ್ತು ಹಾವೇರಿಯಲ್ಲಿ ಒಂದೊಂದು ಸಾವಾಗಿದೆ. ಜೊತೆಗೆ ಪ್ರತಿನಿತ್ಯ ಮೂನ್ನೂರರ ಸನಿಹಕ್ಕೆ ಕೇಸ್ ದಾಖಲಾಗುತ್ತಿವೆ. ಮಂಗಳವಾರ 259 ಡೆಂಗ್ಯೂ ಕೇಸ್ ದಾಖಲಾಗಿವೆ. ಬೆಂಗಳೂರು, ಧಾರವಾಡ, ಹಾವೇರಿ ಸೇರಿದಂತೆ ಎಂಟಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಎರಡಂಕಿಯಲ್ಲಿ ಕೇಸ್ ದಾಖಲಾಗುತ್ತಿದೆ. ಇದನ್ನೂ ಓದಿ: ಆ.8ರಿಂದ ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ – ಹೂಗಳಲ್ಲಿ ಅಂಬೇಡ್ಕರ್ ಜೀವನಗಾಥೆ ಅನಾವರಣ

    ಇನ್ನೂ ರಾಜ್ಯ ಆರೋಗ್ಯ ಇಲಾಖೆ ಈಗಾಗಲೇ ಮುಂಜಾಗ್ರತೆಯನ್ನು ವಹಿಸುತ್ತಾ ಇದೆ. ಆಸ್ಪತ್ರೆಗಳಲ್ಲಿ ಬೆಡ್ ಮೀಸಲು ಇಡುತ್ತಿದ್ದು, ಪ್ರತಿ ಶುಕ್ರವಾರ ಲಾರ್ವಾ ಸೈಟ್ಸ್ ನಾಶ ಮಾಡಲಾಗುತ್ತಿದೆ. ಮನೆಮನೆ ಸರ್ವೆ ಮಾಡಿ ಜಾಗೃತಿಯನ್ನೂ ಮೂಡಿಸಲಾಗುತ್ತಿದೆ. ಜನರು ಕೂಡಲೇ ಎಚ್ಚೆತ್ತುಕೊಂಡು ಡೆಂಗ್ಯೂ ರೋಗ ಲಕ್ಷಣಗಳು ಕಂಡು ಬಂದರೆ ವೈದ್ಯರನ್ನು ಭೇಟಿ ಮಾಡಲು ಆರೋಗ್ಯ ಇಲಾಖೆ ಸೂಚಿಸಿದೆ. ಇದನ್ನೂ ಓದಿ: Paris Olympics 2024 | ಅನರ್ಹಗೊಂಡ ಕೆಲವೇ ನಿಮಿಷಗಳಲ್ಲಿ ವಿನೇಶ್‌ ಆಸ್ಪತ್ರೆಗೆ ದಾಖಲು

  • ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸಿ ಬಂಪರ್ ಬಹುಮಾನ ಗೆಲ್ಲಿ – ರೀಲ್ಸ್ ಪ್ರಿಯರಿಗೆ ಬಿಬಿಎಂಪಿ ಆಫರ್

    ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸಿ ಬಂಪರ್ ಬಹುಮಾನ ಗೆಲ್ಲಿ – ರೀಲ್ಸ್ ಪ್ರಿಯರಿಗೆ ಬಿಬಿಎಂಪಿ ಆಫರ್

    – ಐದು ಉತ್ತಮ ರೀಲ್ಸ್‌ಗೆ ತಲಾ 25,000 ರೂ. ಬಹುಮಾನ
    – ಹೆಚ್ಚು ವಿದ್ಯಾರ್ಥಿಗಳನ್ನು ಬಳಸಿಕೊಂಡು ರೀಲ್ಸ್ ಮಾಡುವ ಶಾಲೆಗೆ 1 ಲಕ್ಷ ರೂ.

    ಬೆಂಗಳೂರು: ರೀಲ್ಸ್ ಪ್ರಿಯರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಆರೋಗ್ಯ ಇಲಾಖೆ ಭರ್ಜರಿ ಆಫರ್ ಕೊಟ್ಟಿದೆ. ಡೆಂಗ್ಯೂ (Degue) ಕುರಿತು ಜಾಗೃತಿ ಮೂಡಿಸುವ ರೀಲ್ಸ್ ಮಾಡಿ ಬಹುಮಾನ ಗೆಲ್ಲಿ ಎಂದು ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ.

    ರಾಜ್ಯಾದ್ಯಂತ ಹಾಗೂ ಬೆಂಗಳೂರಲ್ಲಿ (Bengaluru) ಡೆಂಗ್ಯೂ ಸೋಂಕು ಮತ್ತು ಸಾವು ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಬಿಬಿಎಂಪಿ ಆರೋಗ್ಯ ಇಲಾಖೆ ಹೊಸ ಪ್ರಯತ್ನ ಮಾಡಿದೆ. ರೀಲ್ಸ್ ಮೂಲಕ ಡೆಂಗ್ಯೂ ವಾರಿಯರ್ ಆಗಲು ಬಿಬಿಎಂಪಿ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿದೆ. ಇದನ್ನೂ ಓದಿ: ಡೆಂಗ್ಯೂ ಜ್ವರದಿಂದ MBBS ವಿದ್ಯಾರ್ಥಿ ಸಾವು – ಮುಗಿಲು ಮುಟ್ಟಿದ ಪೋಷಕರ ಆಕ್ರಂದನ!

    ಸೋಷಿಯಲ್ ಮೀಡಿಯಾದಲ್ಲಿ ಡೆಂಗ್ಯೂ ಕುರಿತು ರೀಲ್ಸ್ ವೀಡಿಯೋಗಳನ್ನು ಬಿಬಿಎಂಪಿ ಆಹ್ವಾನಿಸಿದೆ. ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುವ ರೀಲ್ಸ್ ಮಾಡಿದವರಿಗೆ ಬಹುಮಾನ ನೀಡಲಾಗುವುದು. ಮೊದಲ ಐದು ಉತ್ತಮ ರೀಲ್ಸ್‌ಗೆ 25,000 ರೂ. ಬಹುಮಾನ ನೀಡಲಾಗುವುದು. ದ್ವಿತೀಯ ಬಹುಮಾನಕ್ಕೆ ಆಯ್ಕೆಯಾಗುವ ಐವರಿಗೆ ತಲಾ 10 ಸಾವಿರ ರೂ. ಬಹುಮಾನ ನೀಡುವುದಾಗಿ ಬಿಬಿಎಂಪಿ ಪ್ರಕಟಣೆಯಲ್ಲಿ ತಿಳಿಸಿದೆ.

    ಶಾಲಾ ಮಕ್ಕಳಿಗೆ ಬಂಪರ್ ಆಫರ್
    ಉತ್ತಮ ರೀತಿಯಲ್ಲಿ ಹೆಚ್ಚು ವಿದ್ಯಾರ್ಥಿಗಳ ಮೂಲಕ ರೀಲ್ಸ್ ಮಾಡಿಸುವ ಶಾಲೆಗೆ ಬರೋಬ್ಬರಿ 1 ಲಕ್ಷ ಬಹುಮಾನ ನೀಡುವುದಾಗಿ ಬಿಬಿಎಂಪಿ ತಿಳಿಸಿದೆ. ಅಲ್ಲದೇ ಮಕ್ಕಳಿಗೆ ಜಾಗೃತಿ ಮೂಡಿಸುವ ವೀಡಿಯೋ ಮಾಡಲು ಉತ್ತೇಜಿಸುವ ಶಿಕಕ್ಷಕರಿಗೂ 35 ಸಾವಿರ ಬಹುಮಾನ ನೀಡುವುದಾಗಿ ತಿಳಿಸಿದೆ. ಇದನ್ನೂ ಓದಿ: ರಾಮನಗರದಲ್ಲಿ ಡೆಂಗ್ಯೂಗೆ 19 ವರ್ಷದ ಯುವತಿ ಬಲಿ

    ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುವ ರೀಲ್ಸ್ ಮಾಡಿ ಅದನ್ನು ಬಿಬಿಎಂಪಿ ಆರೋಗ್ಯ ಇಲಾಖೆಗೆ ಫೇಸ್‌ಬುಕ್ ಮತ್ತು ಎಕ್ಸ್ (ಟ್ವಿಟ್ಟರ್) ಖಾತೆಗೆ ಟ್ಯಾಗ್ ಮಾಡಬೇಕು. ಡೆಂಗ್ಯೂ ಬಗ್ಗೆ ಹೆಚ್ಚಿನ ಮಾಹಿತಿಯೊಂದಿಗೆ ಹೆಚ್ಚು ವೀಕ್ಷಣೆ ಪಡೆಯುವ ರೀಲ್ಸ್ಗೆ ತಕ್ಕಂತೆ ಬಹುಮಾನ ನೀಡಲಾಗುವುದು ಎಂದು ತಿಳಿಸಿದೆ. ರೀಲ್ಸ್ ಹಂಚಿಕೊಳ್ಳುವ ಪ್ರತಿಯೊಬ್ಬರಿಗೂ ಡೆಂಗ್ಯೂ ವಾರಿಯರ್ ಎಂಬ ಪಟ್ಟವನ್ನು ಪಾಲಿಕೆ ಆರೋಗ್ಯ ವಿಭಾಗ ನೀಡಲಿದೆ.

    ಸಿಲಿಕಾನ್ ಸಿಟಿಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಷಿಯಲ್ ಮೀಡಿಯಾ ಬಳಸಿಕೊಂಡು ಜಾಗೃತಿ ಮೂಡಿಸಲು ಬಿಬಿಎಂಪಿ ಮುಂದಾಗಿದೆ. ಅದಕ್ಕಾಗಿ ವಿಭಿನ್ನ ಕಾರ್ಯಕ್ರಮಕ್ಕೆ ಉತ್ತೇಜನ ನೀಡಿದೆ. ಇದನ್ನೂ ಓದಿ: ಡೆಂಗ್ಯೂ ನಿಯಂತ್ರಣಕ್ಕೆ ಮಾರ್ಗಸೂಚಿ ಪ್ರಕಟ – ಬಿಪಿಎಲ್‌ ಕಾರ್ಡ್‌ದಾರರಿಗೆ ಸೊಳ್ಳೆ ನಿರೋಧಕ, ಬೇವಿನ ಎಣ್ಣೆ ವಿತರಿಸಲು ಸೂಚನೆ!

  • ಚಿಕ್ಕಬಳ್ಳಾಪುರದಲ್ಲಿ ಶಂಕಿತ ಡೆಂಗ್ಯೂಗೆ 18 ವರ್ಷದ ಯುವತಿ ಬಲಿ

    ಚಿಕ್ಕಬಳ್ಳಾಪುರದಲ್ಲಿ ಶಂಕಿತ ಡೆಂಗ್ಯೂಗೆ 18 ವರ್ಷದ ಯುವತಿ ಬಲಿ

    ಚಿಕ್ಕಬಳ್ಳಾಪುರ: ಶಂಕಿತ ಡೆಂಗ್ಯೂಗೆ (Suspected Dengue) 18 ವರ್ಷದ ಯುವತಿ (Young Woman) ಬಲಿಯಾಗಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಗೌರಿಬಿದನೂರು ತಾಲೂಕಿನ ನಾಮಗೊಂಡ್ಲು ಗ್ರಾಮದಲ್ಲಿ ನಡೆದಿದೆ.

    ಯಶಸ್ವಿನಿ (18) ಮೃತ ಯುವತಿ. ಕಳೆದ ಒಂದು ವಾರದಿಂದ ತೀವ್ರತರನಾದ ಜ್ವರದಿಂದ ಬಳಲುತ್ತಿದ್ದ ಯಶಸ್ವಿನಿಯನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಯಶಸ್ವಿನಿ ಮೃತಪಟ್ಟಿದ್ದಾಳೆ. ದ್ವಿತೀಯ ಪಿಯುಸಿಯಲ್ಲಿ 95% ಅಂಕ ಗಳಿಸಿದ್ದ ಯಶಸ್ವಿನಿ ಪ್ರಥಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದಳು. ಇದನ್ನೂ ಓದಿ: ರಾಮನಗರ ಹೆಸರು ಮರುನಾಮಕರಣಕ್ಕೆ ಜೆಡಿಎಸ್ ವಿರೋಧ ಇಲ್ಲ, ಹಾಸನದವರ ವಿರೋಧ ಇದೆ: ಹೆಚ್‌ಸಿ ಬಾಲಕೃಷ್ಣ

    ರಾಜ್ಯದಲ್ಲಿ ಶುಕ್ರವಾರ ಒಂದೇ ದಿನ 400ಕ್ಕೂ ಹೆಚ್ಚು ಡೆಂಗ್ಯೂ ಕೇಸ್ ಪತ್ತೆಯಾಗಿದೆ. ಶುಕ್ರವಾರ ರಾಜ್ಯದಲ್ಲಿ 437 ಡೆಂಗ್ಯೂ ಕೇಸ್ ದಾಖಲಾಗಿತ್ತು. ರಾಜ್ಯದಲ್ಲಿ ಒಟ್ಟು ಡೆಂಗ್ಯೂ ಕೇಸ್ 8,658ಕ್ಕೆ ಏರಿಕೆಯಾಗಿದೆ. ಶುಕ್ರವಾರದವರೆಗೆ ಡೆಂಗ್ಯೂಗೆ ಏಳು ಜನರು ಬಲಿಯಾಗಿದ್ದು, ಇದು ಎಂಟನೇ ಬಲಿಯಾಗಿದೆ. ಇದನ್ನೂ ಓದಿ: ದೇವೇಗೌಡರ ಕುಟುಂಬದಲ್ಲಿ ಉಳಿದವನು ನಿಖಿಲ್ ಅಂತಾ ಅರೆಸ್ಟ್ ಮಾಡೋಕೆ ಪ್ಲ್ಯಾನ್‌ ಮಾಡಿದ್ರು: ಹೆಚ್‌ಡಿಕೆ‌ ಕಿಡಿ

  • 2 ತಿಂಗಳಿಂದ ಊರ ಮಂದಿಗೆ ಒಂದೇ ಕಾಯಿಲೆ; ಆಸ್ಪತ್ರೆಗೆ ತೋರಿಸಿದರೂ ಪ್ರಯೋಜನವಿಲ್ಲ – ಚಿಕ್ಕಮಗಳೂರಿನ ಗ್ರಾಮದಲ್ಲಿ ಆತಂಕ

    2 ತಿಂಗಳಿಂದ ಊರ ಮಂದಿಗೆ ಒಂದೇ ಕಾಯಿಲೆ; ಆಸ್ಪತ್ರೆಗೆ ತೋರಿಸಿದರೂ ಪ್ರಯೋಜನವಿಲ್ಲ – ಚಿಕ್ಕಮಗಳೂರಿನ ಗ್ರಾಮದಲ್ಲಿ ಆತಂಕ

    ಚಿಕ್ಕಮಗಳೂರು: ತಾಲೂಕಿನ ಬಯಲು ಸೀಮೆಯ ದೇವರಗೊಂಡನಹಳ್ಳಿ ಗ್ರಾಮದ ಜನ ವಿಚಿತ್ರ ಕಾಯಿಲೆಯಿಂದ ಬಳಲುತ್ತಿದ್ದಾರೆ. 1500 ಕ್ಕೂ ಹೆಚ್ಚು ಮಂದಿಯಿರುವ ಗ್ರಾಮದಲ್ಲಿ 800 ಕ್ಕೂ ಅಧಿಕ ಜನರು ಒಂದೇ ಕಾಯಿಲೆಯಿಂದ ನರಳುತ್ತಿದ್ದಾರೆ. ಆದರೆ ಗ್ರಾಮದಲ್ಲಿ ಒಂದೇ ಒಂದು ಡೆಂಗ್ಯೂ (Dengue) ಅಥವಾ ಇತರೆ ಮಾರಕ ಕಾಯಿಲೆ ದೃಢಪಟ್ಟಿಲ್ಲದಿರುವುದು ಅಚ್ಚರಿ ಮೂಡಿಸಿದೆ.

    ಎರಡು ತಿಂಗಳ ಹಿಂದೆ ಗ್ರಾಮದ ಕೆಲವರಲ್ಲಿ ಕಾಣಿಸಿಕೊಂಡ ಜ್ವರ, ಮೈ-ಕೈ ನೋವು, ಮಂಡಿನೋವು, ಮೈತುರಿಕೆ ಇಡೀ ಗ್ರಾಮಕ್ಕೆ ಆವರಿಸಿದೆ. ಒಂದೊಂದು ಮನೆಯಲ್ಲಿ ಇಬ್ಬರು ರೋಗಿಗಳು ನರಳುತ್ತಿದ್ದಾರೆ. ಮನೆಗೊಬ್ಬರಂತೆ ದಿನಕ್ಕೊಬ್ಬರು ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಬರ್ಗರ್ ಕಿಂಗ್ ರೆಸ್ಟೋರೆಂಟ್ ಶೂಟೌಟ್ ಕೇಸ್ – ಮೂವರು ಗ್ಯಾಂಗ್‍ಸ್ಟರ್‌ಗಳ ಎನ್‍ಕೌಂಟರ್

    ನಿಗೂಢ ಜ್ವರಕ್ಕೆ ಒಬ್ಬೊಬ್ಬರು 15 ಸಾವಿರ ಹಣ ಖರ್ಚು ಮಾಡಿದ್ದಾರೆ. ಆದರೆ ಕಾಯಿಲೆ ಯಾವುದು ಎಂಬುದು ಮಾತ್ರ ಗೊತ್ತಾಗುತ್ತಿಲ್ಲ. ಅಲ್ಲದೇ ಯಾರಲ್ಲಿಯೂ ಡೆಂಗ್ಯೂ ಆಗಲಿ, ಚಿಕನ್‌ಗುನ್ಯಾ ಆಗಲಿ ಕಾಣಿಸಿಕೊಂಡಿಲ್ಲ. ಇದು ಗ್ರಾಮಸ್ಥರಲ್ಲಿ ಮತ್ತಷ್ಟು ಆತಂಕ ಹೆಚ್ಚಿಸಿದೆ. ಈಗಾಗಲೇ ಖಾಸಗಿ ಹಾಗೂ ಸರ್ಕಾರಿ ಅಸ್ಪತ್ರೆಗೆ ಅಲೆದು ಅಲೆದು ಗ್ರಾಮದ ಜನ ಸುಸ್ತಾಗಿದ್ದಾರೆ. ಮೊದಲು ಜ್ವರ ಬಳಿಕ ಮೈ-ಕೈ ನೋವು, ತುರಿಕೆ-ಉರಿ ಬಾಧಿಸುತ್ತಿದೆ. ಆದರೆ ಮೆಡಿಸನ್ ತೆಗೆದುಕೊಂಡರೂ ಸಾಂಕ್ರಾಮಿಕ ರೋಗದಿಂದ ಮುಕ್ತಿ ಸಿಕ್ಕಿಲ್ಲ.

    ಪ್ರಕರಣ ತಿಳಿದ ಕೂಡಲೇ ಆರೋಗ್ಯ ಸಿಬ್ಬಂದಿ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಊರಿನ ಮನೆಯಲ್ಲಿ ಇದ್ದ ನೀರನ್ನು ಪರೀಕ್ಷೆಗೆ ಒಳಪಡಿಸಿದ್ದಾರೆ. ಅದರಲ್ಲಿ ಡೆಂಗ್ಯೂ, ಚಿಕನ್‌ಗುನ್ಯಾ ಬರುವಂತಹ ಸೊಳ್ಳೆಗಳ ಮಾದರಿ ಕೂಡ ಪತ್ತೆಯಾಗಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಲಾರ್ವ ಕೊಂಡೊಯ್ದಿದ್ದಾರೆ. ಅದರ ವರದಿ ಏನು ಬರುತ್ತೋ ಎಂದು ಹಳ್ಳಿಗರು ಅತಂತ್ರಕ್ಕೀಡಾಗಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ್ದ ಪರಿಷತ್ ಸದಸ್ಯ ಸಿ.ಟಿ.ರವಿ ಜಿಲ್ಲಾಡಳಿತ ಈ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಮಾಜಿ ಸಚಿವ ನಾಗೇಂದ್ರ 6 ದಿನ ಇ.ಡಿ ಕಸ್ಟಡಿಗೆ

    ದೇವಗೊಂಡನಹಳ್ಳಿಯ ಜನರ ಜ್ವರ, ಮೈ-ಕೈ ನೋವು, ಮಂಡಿನೋವಿಗೆ ಕಾರಣವೇನು ಎಂಬುದೇ ಗೊತ್ತಾಗುತ್ತಿಲ್ಲ. ಊರಿಗೆ ಊರೇ ಮಲಗಿದರೂ ಯಾರಿಗೂ ಡೆಂಗ್ಯೂ, ಚಿಕನ್‌ಗುನ್ಯಾ ಪಾಸಿಟಿವ್ ಬಂದಿಲ್ಲ. ಇದು ಜನರ ಆತಂಕಕ್ಕೆ ಕಾರಣವಾಗಿದೆ.

  • ಶಿವಮೊಗ್ಗದಲ್ಲಿ ಶಂಕಿತ ಡೆಂಗ್ಯೂಗೆ ಮಹಿಳೆ ಬಲಿ

    ಶಿವಮೊಗ್ಗದಲ್ಲಿ ಶಂಕಿತ ಡೆಂಗ್ಯೂಗೆ ಮಹಿಳೆ ಬಲಿ

    ಶಿವಮೊಗ್ಗ: ಶಂಕಿತ ಡೆಂಗ್ಯೂಗೆ (Suspected Dengue) ಮಹಿಳೆಯೊಬ್ಬರು ಬಲಿಯಾದ ಘಟನೆ ಶಿವಮೊಗ್ಗ (Shivamogga) ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆಯಲ್ಲಿ (Ripponpet) ನಡೆದಿದೆ.

    ರಶ್ಮಿ ಆರ್.ನಾಯಕ್ (42) ಮೃತ ಮಹಿಳೆ. ಕಳೆದ 15 ದಿನಗಳಿಂದ ರಶ್ಮಿ ತೀವ್ರ ಜ್ವರದಿಂದ ಬಳಲುತ್ತಿದ್ದು, ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದನ್ನೂ ಓದಿ: ಖರ್ಗೆಗೆ ಒಂದು ಕಡೆ ಲ್ಯಾಂಡ್‌ ಅಲಾಟ್‌ ಆಗಿದೆಯಂತೆ: ರಮೇಶ್‌ ಜಿಗಜಿಣಗಿ ಹೊಸ ಬಾಂಬ್‌

    ಇಂದು ಚಿಕಿತ್ಸೆ ಫಲಕಾರಿಯಾಗದೇ ರಶ್ಮಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಸೂರಜ್‌ ರೇವಣ್ಣ ಜಾಮೀನು ಅರ್ಜಿ ವಜಾ

  • Dengue Cases Alert: ರಾಜ್ಯದಲ್ಲಿಂದು 197 ಕೇಸ್‌ ದಾಖಲು – ಪ್ರಕರಣಗಳ ಸಂಖ್ಯೆ 7,362ಕ್ಕೆ ಏರಿಕೆ!

    Dengue Cases Alert: ರಾಜ್ಯದಲ್ಲಿಂದು 197 ಕೇಸ್‌ ದಾಖಲು – ಪ್ರಕರಣಗಳ ಸಂಖ್ಯೆ 7,362ಕ್ಕೆ ಏರಿಕೆ!

    ಬೆಂಗಳೂರು: ಡೆಡ್ಲಿ ಡೆಂಗ್ಯೂ ಪ್ರಕರಣಗಳು (Dengue Cases) ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಸೋಮವಾರ (ಜು.8) 197 ಪ್ರಕರಣಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 7,362ಕ್ಕೆ ಏರಿಕೆಯಾಗಿದೆ.

    7,362 ಪ್ರಕರಣಗಳಲ್ಲಿ 303 ಸಕ್ರೀಯ ಪ್ರಕರಣಗಳಿವೆ. ಡೆಂಗ್ಯೂ ಜ್ವರಕ್ಕೆ ಸೋಮವಾರವೂ ಓರ್ವ ವ್ಯಕ್ತಿ ಬಲಿಯಾಗಿದ್ದು, ಒಟ್ಟು ಮೃತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಈ ಪೈಕಿ ಹಾಸನದಲ್ಲಿ 2, ಮೈಸೂರು, ಹಾವೇರಿ, ಧಾರವಾಡ, ಶಿವಮೊಗ್ಗ ಹಾಗೂ ಬೆಂಗಳೂರಲ್ಲಿ ತಲಾ ಒಂದೊಂದು ಮರಣ ಕೇಸ್‌ ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ (Health Department) ಮಾಹಿತಿ ನೀಡಿದೆ.

    ಏನಿದು ಡೆಂಗ್ಯೂ?
    ಇದೊಂದು ವೈರಸ್.

    ಯಾವುದರಿಂದ ಹರಡುತ್ತೆ?
    ಈಡಿಸ್ ಈಜಿಪ್ಟಿ ಹೆಣ್ಣು ಸೊಳ್ಳೆ (Idis Aegypti Mosquito).

    ಡೆಂಗ್ಯೂ ವೈರಸ್ ಮೂಲ ಯಾವುದು?
    ಡೆಂಗ್ಯೂ ತರಹದ ಕಾಯಿಲೆಯು ಮೊದಲು ಚೀನಾದಲ್ಲಿ ಜಿನ್ ರಾಜವಂಶದಿಂದ (265-420 ಶತಮಾನ) ಬಂದಿದೆ. 17 ನೇ ಶತಮಾನದಲ್ಲಿ ಡೆಂಗ್ಯೂಗೆ ಹೋಲುವ ಸಾಂಕ್ರಾಮಿಕ ರೋಗಗಳು ಸಂಭವಿಸಿದವು ಎಂಬುದಕ್ಕೆ ಪುರಾವೆಗಳಿವೆ.

    ಡೆಂಗ್ಯೂ ರೋಗ ಬರುವುದು ಹೇಗೆ?
    ಸೊಳ್ಳೆ ಕಡಿತದಿಂದ ಡೆಂಗ್ಯೂ ರೋಗ ಬರುತ್ತದೆ. ಈಡಿಸ್ ಈಜಿಪ್ಟಿ ಹೆಣ್ಣು ಸೊಳ್ಳೆ ಕಡಿತದಿಂದ ಡೆಂಗ್ಯೂ ವೈರಸ್ ಸೋಂಕು ಹರಡುತ್ತದೆ.

    ಸೋಂಕಿನ ಪರಿಣಾಮವೇನು?
    ರಕ್ತನಾಳಗಳಿಗೆ ಡೆಂಗ್ಯೂ ವೈರಸ್ ಹಾನಿಯುಂಟು ಮಾಡುತ್ತದೆ. ರಕ್ತಕಣಗಳ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗುತ್ತದೆ. ಪರಿಣಾಮವಾಗಿ ಅಂಗಾಂಗ ವೈಫಲ್ಯವಾಗುತ್ತದೆ. ಕೆಲವೊಮ್ಮೆ ಜೀವಕ್ಕೂ ಸಂಚಕಾರ ತರಬಹುದು.

    ರೋಗ ಲಕ್ಷಣಗಳೇನು?
    ಜ್ವರ, ತಲೆನೋವು, ವಾಂತಿ, ಕಣ್ಣು ಊದಿಕೊಂಡು ನೋವು ಉಂಟಾಗುವುದು, ಕೈ-ಕಾಲುಗಳಲ್ಲಿ ಸೆಳೆತ, ನೋವು, ಆಯಾಸ.

    ಡೆಂಗ್ಯೂ ತಡೆಗಟ್ಟುವುದು ಹೇಗೆ?
    * ಸೊಳ್ಳೆ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು
    * ನೀರು ಶೇಖರಣೆಯಾಗುವ ಯಾವುದೇ ಪ್ರದೇಶವಿದ್ದರೂ ಶುಚಿಗೊಳಿಸಬೇಕು
    * ಮಳೆ ನೀರು ನಿಲ್ಲದಂತೆ ನೋಡಿಕೊಳ್ಳಬೇಕು
    * ಸರಾಗವಾಗಿ ನೀರು ಹರಿಯುವಂತೆ ಚರಂಡಿ, ಮೋರಿಗಳನ್ನು ಸುಸ್ಥಿತಿಯಲ್ಲಿಡಬೇಕು
    * ಮನೆ, ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು
    * ಸೊಳ್ಳೆ ನಿವಾರಕ ಬಳಕೆ ಮಾಡಬೇಕು

    ಚಿಕಿತ್ಸಾ ಕ್ರಮ ಏನು?
    ಆರಂಭಿಕ ಹಂತದಲ್ಲಿ ಡೆಂಗ್ಯೂ ಜ್ವರದ ಲಕ್ಷಣ ಕಾಣಿಸಿಕೊಂಡರೆ, ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಪಡೆಯಬೇಕು. ಎಲ್ಲಾ ಆಸ್ಪತ್ರೆಗಳಲ್ಲೂ ಡೆಂಗ್ಯೂ ರೋಗಕ್ಕೆ ಚಿಕಿತ್ಸೆ ಲಭ್ಯವಿದೆ. ಡೆಂಗ್ಯೂ ಜ್ವರ ತೀವ್ರಮಟ್ಟದಲ್ಲಿದ್ದರೆ, ರಕ್ತದಲ್ಲಿ ಪ್ಲೇಟ್‌ಲೆಟ್‌ಗಳ ಸಂಖ್ಯೆಯನ್ನು ಹೆಚ್ಚಿಸಲು ವೈದ್ಯರು ಅಗತ್ಯ ಕ್ರಮ ಕೈಗೊಳ್ಳುತ್ತಾರೆ.