ಮೃತ ಮಗುವನ್ನು ಚಿಕ್ಕೂಡ ಗ್ರಾಮದ ರಾಜಪ್ಪ ಮತ್ತು ದಿವ್ಯ ದಂಪತಿಯ 2 ವರ್ಷದ 11 ತಿಂಗಳ ನಿರ್ವಾಣ ಕುಮಾರ್ ಎಂದು ಗುರುತಿಸಲಾಗಿದೆ.
5 ದಿನಗಳಿಂದ ಮಗು ತೀವ್ರ ಜ್ವರದಿಂದ ಬಳಲುತ್ತಿತ್ತು. ಚಿಕಿತ್ಸೆಗಾಗಿ ಮಗುವನ್ನು ಜಿಲ್ಲೆಯ ಶಿವಮೊಗ್ಗದ ಸರ್ಜಿ ಆಸ್ಪತ್ರೆಗೆ (Sarji Hospital Shivamogga) ದಾಖಲಿಸಲಾಗಿತ್ತು. ಚಿಕಿತ್ಸೆ ಬಳಿಕವು ಸ್ವಲ್ಪವೂ ಚೇತರಿಕೆ ಕಾಣದೇ ಮಗು ಸಾವನ್ನಪ್ಪಿದೆ. ಗ್ರಾಮದಲ್ಲಿ ಸ್ವಚ್ಚತೆ ಇಲ್ಲದಿರುವುದರಿಂದ ಡೆಂಗ್ಯೂಗೆ ಕಾರಣವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.ಇದನ್ನೂ ಓದಿ: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಕೇಸ್ – ಇಂದು ಮಾಜಿ ಸಚಿವ ನಾಗೇಂದ್ರ ಜಾಮೀನು ಭವಿಷ್ಯ
– ಮಗ ಮೃತಪಟ್ಟ ಆಸ್ಪತ್ರೆಯಲ್ಲೇ ಡೆಂಗ್ಯೂ ಚಿಕಿತ್ಸೆ ಪಡೆಯುತ್ತಿರೋ ತಾಯಿ
ಹಾಸನ: ಡೆಂಗ್ಯೂ ಜ್ವರದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಎಂಬಿಬಿಎಸ್ ವಿದ್ಯಾರ್ಥಿ (MBBS Student) ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಹಾಸನ ನಗರದ ಖಾಸಗಿ ಆಸ್ಪತ್ರೆಯಲ್ಲಿ (Hassan Private Hospital) ನಡೆದಿದೆ.
ಹೊಳೆನರಸೀಪುರ ತಾಲ್ಲೂಕಿನ ಹಳ್ಳಿ ಮೈಸೂರು ಹೋಬಳಿಯ ಗೋಹಳ್ಳಿ ಗ್ರಾಮದ ಕುಶಾಲ್ (22) ಮೃತ ವಿದ್ಯಾರ್ಥಿ. ಕುಶಾಲ್ ಡೆಂಗ್ಯೂ ಮಹಾಮಾರಿಯಿಂದಲೇ ಮೃತಪಟ್ಟಿದ್ದಾನೆ ಎನ್ನಲಾಗಿದ್ದು, ಪ್ರಯೋಗಾಲಯದ ವರದಿ ಬಂದ ನಂತರ ನಿಖರ ಕಾರಣ ತಿಳಿಯಲಿದೆ ತಿಳಿದುಬಂದಿದೆ. ಇದನ್ನೂ ಓದಿ: PublicTV Explainer: ಬಜೆಟ್ ಎಂದರೇನು? ಆಯವ್ಯಯದ ಬಗ್ಗೆ ನಿಮಗೆಷ್ಟು ಗೊತ್ತು?
ಕಳೆದ ಒಂದು ವಾರದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕುಶಾಲ್, ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ತಡರಾತ್ರಿ ಸಾವನ್ನಪ್ಪಿದ್ದಾನೆ. ಪ್ರತಿಭಾನ್ವಿತ, ಬಡ ವಿದ್ಯಾರ್ಥಿಯಾಗಿದ್ದ ಕುಶಾಲ್, ಹಿಮ್ಸ್ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಭವಿಷ್ಯದಲ್ಲಿ ವೈದ್ಯನಾಗಿ ಜನಸೇವೆ ಮಾಡಬೇಕು ಎಂಬ ಹಂಬಲ ಇಟ್ಟುಕೊಂಡಿದ್ದ ಕುಶಾಲ್, ಕಿರಿಯ ವಯಸ್ಸಿನಲ್ಲಿಯೇ ಕಣ್ಮರೆಯಾಗಿರುವುದು ಪೋಷಕರಲ್ಲಿ ಅತೀವ ದುಃಖವನ್ನುಂಟುಮಾಡಿದೆ. ಇದನ್ನೂ ಓದಿ: ಬೆಂಗಳೂರು-ಮಂಗಳೂರು ನಡುವೆ ಹೆಚ್ಚುವರಿ ರೈಲು ಆರಂಭ – ಸಂಸದ ಬ್ರಿಜೇಶ್ ಚೌಟ ಮನವಿಗೆ ತಕ್ಷಣವೇ ಸ್ಪಂದಿಸಿದ ರೈಲ್ವೆ ಇಲಾಖೆ
ವಿಪರ‍್ಯಾಸವೆಂದರೇ ಕುಶಾಲ್ ಸಾವನ್ನಪ್ಪಿದ ಆಸ್ಪತ್ರೆಯಲ್ಲೇ ತಾಯಿ ರೇಖಾ ಸಹ ಡೆಂಗ್ಯೂ ಜ್ವರದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ರೇಖಾ ಟೈಲರ್ ವೃತ್ತಿ ಮಾಡುತ್ತಿದ್ದು, ತಂದೆ ಮಂಜುನಾಥ್ ಶಿಕ್ಷಕನಾಗಿದ್ದಾರೆ. ತಮ್ಮ ಇತಿಮಿತಿಯ ನಡುವೆಯೂ ಮಗ ಚೆನ್ನಾಗಿ ಓದಿ ವೈದ್ಯನಾಗಲಿ, ಆ ಮೂಲಕ ನೊಂದ ಜನರಿಗೆ ಸೇವೆ ಮಾಡಲಿ ಎಂಬುದು ತಂದೆ ಮಂಜುನಾಥ್ ಬಯಕೆಯಾಗಿತ್ತು. ಇದಕ್ಕಾಗಿ ಎಲ್ಲಾ ರೀತಿಯ ಶ್ರಮ ತೆಗೆದುಕೊಂಡಿದ್ದರು. ಆದರೆ ತನ್ನ ಹಾಗೂ ಹೆತ್ತವರ ಆಸೆ ಈಡೇರುವ ಮುನ್ನವೇ ಕುಶಾಲ್ ಮಾರಣಾಂತಿಕ ಕಾಯಿಲೆ ಬಲಿಯಾಗಿದ್ದಾನೆ. ಇದನ್ನೂ ಓದಿ: ರಾಜ್ಯದ ಜಲಾಶಯಗಳಲ್ಲಿ 536 ಟಿಎಂಸಿ ನೀರು ಸಂಗ್ರಹ – ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆ
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 437 ಡೆಂಗ್ಯೂ ಪ್ರಕರಣಗಳು (Dengue Case) ವರದಿಯಾಗಿದ್ದು, ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 388ಕ್ಕೇರಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 8,658ಕ್ಕೆ ಏರಿಕೆಯಾಗಿದೆ.
ಬೆಂಗಳೂರು ಬಿಬಿಎಂಪಿ (BBMP) ವ್ಯಾಪ್ತಿಯಲ್ಲಿ 165 ಹೊಸ ಕೇಸ್‌ಗಳು ದಾಖಲಾಗಿದ್ದು, ಸದ್ಯ 91 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ಹಂಚಿಕೊಂಡಿದೆ. ಕಳೆದ 24 ಗಂಟೆಗಳಲ್ಲಿ 2,704 ಡೆಂಗ್ಯೂ ಟೆಸ್ಟ್ ನಡೆಸಲಾಗಿದ್ದು, ಈ ಪೈಕಿ 437 ಜನರಿಗೆ ಪ್ರಕರಣ ಧೃಢವಾಗಿದೆ. ಈವರೆಗೆ ಒಟ್ಟು 63,741 ಮಂದಿಗೆ ಡೆಂಗ್ಯೂ ಪರೀಕ್ಷೆ ನಡೆಸಲಾಗಿದೆ. ಇದನ್ನೂ ಓದಿ: ಪ್ರತಿವರ್ಷ ಜೂನ್ 25ರಂದು ʻಸಂವಿಧಾನ ಹತ್ಯಾ ದಿವಸ್ʼ ಆಚರಣೆ – ಅಮಿತ್ ಶಾ ಘೋಷಣೆ
ಎಲ್ಲೆಲ್ಲಿ ಎಷ್ಟು ಕೇಸ್?
ಬಿಎಂಪಿ ವ್ಯಾಪಿಯಲ್ಲಿ 165, ಬೆಂಗಳೂರು ನಗರ 10, ಬೆಂಗಳೂರು ಗ್ರಾಮಾಂತರ 5, ರಾಮನಗರ 14, ಕೋಲಾರ 19, ಚಿಕ್ಕಬಳ್ಳಾಪುರ 7, ತುಮಕೂರು 5, ಚಿತ್ರದುರ್ಗ 3, ದಾವಣಗೆರೆ 24, ಬೆಳಗಾವಿ 32, ಗದಗ 15, ಉತ್ತರ ಕನ್ನಡ 1, ಕಲಬುರಗಿ 20, ಬೀದರ್ 10, ಬಳ್ಳಾರಿ 4, ವಿಜಯನಗರ 1, ಕೊಪ್ಪಳ 3, ಮೈಸೂರು 17, ಮಂಡ್ಯ 47, ಹಾಸನ 6, ಉಡುಪಿ 10, ಚಿಕ್ಕಮಗಳೂರು 10, ಕೊಡಗು 9 ಕೇಸ್ ಪತ್ತೆಯಾಗಿವೆ. ಶುಕ್ರವಾರ ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ. ಒಟ್ಟು ಮರಣ ಸಂಖ್ಯೆ 7 ಇದೆ.
ಮಾರ್ಗಸೂಚಿ ಏನು?
1. ಒಂದೇ ಸ್ಥಳದಲ್ಲಿ ಎರಡು ಅಥವಾ ಮೂರು ಡೆಂಗ್ಯೂ ಕೇಸ್ ಕಂಡುಬಂದರೆ ಹಾಟ್ ಸ್ಪಾಟ್ ಅಂತ ಪರಿಗಣನೆ
2. ಹಾಟ್‌ಸ್ಪಾಟ್‌ಗಳಲ್ಲಿ ಲಾರ್ವಾ ನಾಶ ಚಟುವಟಿಕೆಯನ್ನು ತೀವ್ರಗೊಳಿಸುವುದು, ಒಳಾಂಗಣ/ಹೊರಾಂಗಣದಲ್ಲಿ ಲಾರ್ವಾನಾಶಕಗಳ ಬಳಕೆ ಹಾಗೂ ಒಳಾಂಗಣದಲ್ಲಿ ಡೆಂಗ್ಯೂ ನಾಶಕವನ್ನು ಸಿಂಪಡಿಸಿ ಮನೆಯ ಸದಸ್ಯರನ್ನ 30 ನಿಮಿಷಗಳ ಕಾಲ ಮನೆಯಿಂದ ಹೊರಗಡೆ ಇರುವಂತೆ ಸೂಚಿಸುವುದು
3. ಡೆಂಗ್ಯೂ ಪಾಸಿಟಿವ್ ಆದ ಸ್ಥಳಗಳಲ್ಲಿ ಫೀವರ್ ಕ್ಲಿನಿಕ್‌ಗಳನ್ನು ತುರ್ತಾಗಿ ಸಕ್ರೀಯಗೊಳಿಸಬೇಕು.
4. ಹಾಟ್‌ಸ್ಪಾಟ್ ಪ್ರದೇಶಗಳಲ್ಲಿ ಬಿಪಿಎಲ್ ಕುಟುಂಬಗಳಿಗೆ ಸೊಳ್ಳೆ ನಿರೋಧಕ, ಬೇವಿನ ಎಣ್ಣೆ ವಿತರಣೆ ಖಚಿತಪಡಿಸಿಕೊಳ್ಳುವುದು ಹಾಗೂ ಕೈ, ಕಾಲು – ಕುತ್ತಿಗೆಯ ಭಾಗದಲ್ಲಿ ಹಚ್ಚಿಕೊಳ್ಳುವಂತೆ ತಿಳಿಸುವುದು.
5. ಡೆಂಗ್ಯೂ ಪಾಸಿಟಿವ್ ಆದ ವ್ಯಕ್ತಿಯನ್ನ ಜ್ವರ ಕಾಣಿಸಿಕೊಂಡ ದಿನದಿಂದ 14 ದಿನಗಳ ಕಾಲ ಅನುಪಾಲನೆ ಮಾಡುವುದು
6. ಬೇವಿನ ಎಣ್ಣೆ ಇಲ್ಲದೇ ಹೋದರೆ ಸಿಟ್ರೋನೆಲ್ ಆಯಿಲ್, ಲೆಮನ್ ಗ್ರೇಸ್ ಆಯಿಲ್ ಅಥವಾ ಡೀಟ್ ಆಧಾರಿತ ಕ್ರೀಂ ಆಯಿಲ್‌ಗಳನ್ನ ವಿತರಣೆ ಮಾಡಬೇಕು
7. ಡೆಂಗ್ಯೂ ಪ್ರಕರಣಗಳ ನಿರ್ವಹಣೆಗಾಗಿ ತಾಲ್ಲೂಕು ಮತ್ತು ಜಿಲ್ಲಾ ಆಸ್ಫತ್ರೆಗಳಲ್ಲಿ 5 ರಿಂದ 10 ಹಾಸಿಗೆಗಳನ್ನು ಮೀಸಲಿಡಬೇಕು.
8. ಡೆಂಗ್ಯೂ ಜ್ವರ ಪ್ರಕರಣಗಳ ಪರೀಕ್ಷೆ, ಚಿಕಿತ್ಸೆ ಹಾಗೂ ನಿರ್ವಹಣಾ ಸೌಲಭ್ಯವನ್ನು ಆರೋಗ್ಯ ಇಲಾಖೆ ವ್ಯಾಪ್ತಿಯಲ್ಲಿರುವ ಎಲ್ಲಾ ಆರೋಗ್ಯ ಸಂಸ್ಥೆಗಳು ಎಲ್ಲರಿಗೂ ಸಂಪೂರ್ಣ ಉಚಿತವಾಗಿ ನೀಡಬೇಕು.
9. ಎಲ್ಲಾ ಆರೋಗ್ಯ ಸಂಸ್ಥೆಗಳಲ್ಲಿ ಟೆಸ್ಟಿಂಗ್ ಕಿಟ್, ಅಗತ್ಯ ಪ್ರಮಾಣದ ಔಷಧಿ ಹಾಗೂ IV Fluids ಔಷಧ ದಾಸ್ತಾನು ಲಭ್ಯತೆಯನ್ನು ಖಚಿತಪಡಿಸಬೇಕು. ಜಿಲ್ಲಾವಾರು ಸರ್ಕಾರಿ ಹಾಗೂ ಖಾಸಗಿ ರಕ್ತನಿಧಿಗಳಿಂದ ಪ್ಲೇಟ್‌ಲೆಟ್, ಪ್ಲಾಸ್ಮಾ ಹಾಗೂ ಇತರ ಕಾಂಪೊನೆಂಟ್‌ಗಳ ಬಗ್ಗೆ ಪ್ರತಿದಿನ ಮಾಹಿತಿ ನೀಡಬೇಕು.
10. ಕಡ್ಡಾಯವಾಗಿ ಡೆಂಗ್ಯೂ ಜ್ವರ ನಿರ್ವಹಣೆ ಸಂಬಂಧ ಶಿಷ್ಟಾಚಾರ ಪಾಲನೆ ಮಾಡಬೇಕು.
ಬೆಂಗಳೂರು: ಯಶವಂತಪುರ ಕ್ಷೇತ್ರದ ಎಂಆರ್ ಲೇಔಟ್ ನಿವಾಸಿಗಳಿಗೆ ಡೆಂಗ್ಯೂ (Dengue Fever) ಭೀತಿ ಶುರುವಾಗಿದೆ. ಮನೆಗಳ ಮುಂದೆಯೇ ಕಸ ಬಿದ್ದಿದ್ದು, ವಿಲೇವಾರಿ ಮಾಡದ ಪಾಲಿಕೆಯ ಸಿಬ್ಬಂದಿ ವಿರುದ್ಧ ಜನ ಆಕ್ರೋಶ ಹೊರಹಾಕಿದ್ದಾರೆ.
ಬೆಂಗಳೂರಿನಲ್ಲಿ ಡೆಂಗ್ಯೂ ದಿನೇದಿನೇ ಆತಂಕ ಸೃಸ್ಟಿಸ್ತಿದೆ. ಬಿಬಿಎಂಪಿ ಕಮಿಷನರ್ ನಾನಾ ಕಸರತ್ತು ನಡೆಸುತ್ತಿದ್ರೂ ನಿಯಂತ್ರಣಕ್ಕೆ ಸಿಗ್ತಿಲ್ಲ. ಇದೇ ಡೆಂಗ್ಯೂ ಭೀತಿಯಿಂದ ಯಶವಂತಪುರ ಕ್ಷೇತ್ರದ ಎಂಆರ್ ಲೇಔಟ್ ನಿವಾಸಿಗಳು ಅಕ್ಷರಶಃ ಭಯಭೀತಗೊಂಡಿದ್ದಾರೆ. ಫುಟ್‍ಪಾತ್ ಮೇಲಿನ ಕಸ ವಿಲೇವಾರಿ ಮಾಡದೇ ಇರೋದ್ರಿಂದ ಸೊಳ್ಳೆಗಳು ಕಾಟ ವಿಪರೀತವಾಗಿವೆ. ಹೀಗಾಗಿ ಜನ ತಮ್ಮ ಮನೆಗಳ ಕಿಟಕಿ, ಬಾಗಿಲು ಕ್ಲೋಸ್ ಮಾಡಿಕೊಂಡೇ ವಾಸ ಮಾಡುತ್ತಿದ್ದಾರೆ.
ಇತ್ತ ಮನೆಗಳ ಸುತ್ತಮುತ್ತ ಸ್ವಚ್ಛತೆ ಕಾಪಾಡಬೇಕು ಇಲ್ಲದಿದ್ರೆ ದಂಡ ಹಾಕ್ತೀವಿ ಅಂತ ಕಮಿಷನರ್ ಸೂಚನೆ ನೀಡಿದ್ದಾರೆ. ಆದ್ರೆ ಪಾಲಿಕೆಯ ಕೆಲ ಸಿಬ್ಬಂದಿಯೇ ಆಯಾ ಏರಿಯಾಗಳಲ್ಲಿ ಕಸ ವಿಲೇವಾರಿ ಮಾಡಿಸ್ತಿಲ್ಲ. ಅದೇನೆ ಆಗ್ಲಿ ಅನಾರೋಗ್ಯ ಸೃಷ್ಟಿಯಾಗೋ ಮುನ್ನವೇ ಏರಿಯಾ ಜನರ ಆರೋಗ್ಯ ಕಾಪಾಡಬೇಕಿದೆ.
ಮೈಸೂರು: ಜಿಲ್ಲೆಯಲ್ಲಿ ಡೆಂಗ್ಯೂ ಜ್ವರಕ್ಕೆ ಮೊದಲ ಬಲಿಯಾಗಿದೆ. ಆರೋಗ್ಯಾಧಿಕಾರಿ ನಾಗೇಂದ್ರ (32) ನಿಧನರಗಿದ್ದಾರೆ.
ನಾಗೇಂದ್ರ ಅವರು ಹುಣಸೂರು ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೈಸೂರು ಜಿಲ್ಲೆಯಲ್ಲಿ ಒಟ್ಟು 162 ಆಕ್ಟೀವ್ ಪ್ರಕರಣಗಳಿವೆ. ಇತ್ತ ಹಾಸನ ಜಿಲ್ಲೆಯಲ್ಲಿ ಡೆಂಗ್ಯೂ ಜ್ವರ ಹೆಚ್ಚಾಗಿ ಮಕ್ಕಳನ್ನೇ ಹೆಚ್ಚಾಗಿ ಕಾಡುತ್ತಿದೆ. ಒಂದೇ ವಾರದಲ್ಲಿ ಮೂವರು ಬಾಲಕಿಯರು ಮೃತಪಟ್ಟಿದ್ದಾರೆ.
ಕಳೆದ ಜನವರಿಯಿಂದ ಈವರೆಗೆ ಡೆಂಗ್ಯೂ ಶಂಕಿತ 628 ವಯಸ್ಕರು ಹಾಗೂ 602 ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಒಳರೋಗಿಯಾಗಿ ದಾಖಲಿಸಿ ಹಿಮ್ಸ್ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಜಿಲ್ಲೆಯಲ್ಲಿ ಡೆಂಗ್ಯೂ ಪೀಡಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೆ ಇದೆ. ಈವರೆಗೆ ಒಟ್ಟು ನಾಲ್ವರು ಮಹಾಮಾರಿ ಡೆಂಗ್ಯೂಗೆ ಬಲಿಯಾಗಿದ್ದಾರೆ. ಅದರಲ್ಲಿ ಎರಡು ಸಾವುಗಳನ್ನು ರಾಜ್ಯ ಡೆಂಗ್ಯೂ ಡೆತ್ ಆಡಿಟ್ ಸಮಿತಿ ದೃಢಪಡಿಸಿದೆ.
ಇದುವರೆಗೆ ಜಿಲ್ಲೆಯಲ್ಲಿ 6400 ಜನರಿಗೆ ಡೆಂಗ್ಯೂ ಪರೀಕ್ಷೆ ನಡೆಸಲಾಗಿದೆ. ಡೆಂಗ್ಯೂ ನಿಯಂತ್ರಕ್ಕೆ ಹಲವು ಕ್ರಮ ಕೈಗೊಂಡ ಬಗ್ಗೆ ಹಿಮ್ಸ್ ವೈದ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಹಾಸನ: ಬೆಂಗಳೂರು ಬಳಿಕ ಮಾರಕ ಡೆಂಗ್ಯೂ ಜ್ವರಕ್ಕೆ (Dengue Fever) ಹಾಸನದಲ್ಲೊಂದು ಜೀವ ಬಲಿಯಾಗಿದೆ. 13 ವರ್ಷದ ಬಾಲಕಿ ಡೆಂಗ್ಯೂ ಜ್ವರದಿಂದ ಮೃತಪಟ್ಟ ಘಟನೆ ಹಾಸನ ತಾಲೂಕಿನ ಬೊಮ್ಮನಾಯಕಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅಕ್ಷತಾ (13) ಮೃತ ಬಾಲಕಿ. ಅಕ್ಷತಾ ಮೂಲತಃ ಅರಕಲಗೂಡು ತಾಲ್ಲೂಕಿನ ದೊಡ್ಡಮಗ್ಗೆ ಗ್ರಾಮದವರು. ಕೂಲಿ ಕೆಲಸ ಮಾಡುತ್ತಿದ್ದ ಅಪ್ಪಣ್ಣ ಶೆಟ್ಟಿ ಹಾಗೂ ಪದ್ಮಾ ದಂಪತಿ ಪುತ್ರಿ ಅಕ್ಷತಾ, ಹಾಸನದ ಖಾಸಗಿ ಶಾಲೆಯಲ್ಲಿ (Hassan Private School) 7ನೇ ತರಗತಿ ಓದುತ್ತಿದ್ದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಡೆಂಗ್ಯೂಗೆ 27 ವರ್ಷದ ಯುವಕ ಬಲಿ
ಕಳೆದ ಬುಧವಾರ ಜ್ವರಕ್ಕೆ ತುತ್ತಾಗಿದ್ದರು. ನಂತರ ಬಾಲಕಿಗೆ ಬೊಮ್ಮನಾಯಕಹಳ್ಳಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗಿತ್ತು. ಆದಾಗ್ಯೂ ಬಾಲಕಿ ಗುಣಮುಖಳಾಗದೇ ಇದ್ದ ಕಾರಣ ಪೋಷಕರು ಆಕೆಯನ್ನ ಹಾಸನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೂ ಅಕ್ಷತಾ ಆರೋಗ್ಯದಲ್ಲಿ ಚೇತರಿಕೆ ಕಾಣದೇ ಮತ್ತೊಂದು ಆಸ್ಪತ್ರೆಗೆ ದಾಖಲಿಸಿದ್ದರು.
ಬಾಲಕಿ ಸ್ಥಿತಿ ಗಂಭೀರವಾಗುತ್ತಿದ್ದಂತೆ ಜಿಲ್ಲಾಸ್ಪತ್ರೆ ಕರೆದುಕೊಂಡು ಹೋಗುವಂತೆ ಖಾಸಗಿ ಆಸ್ಪತ್ರೆ ವೈದ್ಯರು ತಿಳಿಸಿದ್ದರು. ನಂತರ ಪೋಷಕರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಕೊನೆಗೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಸಾವನ್ನಪ್ಪಿದ್ದಾಳೆ. ಬಾಲಕಿ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ಲೋಕಸಭೆಯಲ್ಲಿ ಹಿನ್ನಡೆಗೆ ಅತಿಯಾದ ಆತ್ಮವಿಶ್ವಾಸ, ಕಾರ್ಯಕರ್ತರ ಕಡೆಗಣನೆ ಕಾರಣ: ಡಿವಿಎಸ್
ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಡೆಂಗ್ಯೂಗೆ ಮೊದಲ ಬಲಿಯಾಗಿದೆ. ಕಾಲೇಜು ವಿದ್ಯಾರ್ಥಿನಿಯೊಬ್ಬಳು ಡೆಂಗ್ಯೂ ಜ್ವರದಿಂದ (Dengue Fever) ಮೃತಪಟ್ಟಿದ್ದಾಳೆ.
ಮೃತಳನ್ನು ಸಹನಾ ಬಾನು (18) ಎಂದು ಗುರುತಿಸಲಾಗಿದೆ. ಈಕೆ ಚಿಕ್ಕಮಗಳೂರು ನಗರದ ಮಹಮ್ಮದ್ ಖಾನ್ ಗಲ್ಲಿ ನಿವಾಸಿ. ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಸಹನಾ ಬಾನು ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಆದರೆ ಚಿಕಿತ್ಸೆ ಫಲಿಸದೇ ಸಹನಾ ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾಳೆ.
ಡೆಂಗ್ಯೂ ಜ್ವರದ ಲಕ್ಷಣಗಳು:
* ಅಧಿಕ ಜ್ವರ, ತಲೆನೋವು, ಸುಸ್ತು ಕಾಣಿಸಿಕೊಳ್ಳುತ್ತವೆ.
* ಮಾಂಸಖಂಡಗಳಲ್ಲಿ, ಕೈ, ಕಾಲುಗಳ ಕೀಲುಗಳಲ್ಲಿ ನೋವು ಉಂಟಾಗುತ್ತದೆ.
* ಕಣ್ಣಿನಲ್ಲಿ ಹೇಳಲಾಗದ ನೋವು, ಉರಿಯಾಗುತ್ತದೆ.
* ಕೆಮ್ಮು, ಗಂಟಲು ಕೆರೆತ ಬರುತ್ತದೆ.
* ಕೆಲವರಿಗೆ ವಾಂತಿ, ತಲೆ ಸುತ್ತು ಕಾಣಿಸಿಕೊಳ್ಳುತ್ತವೆ.
ಮುಂಜಾಗ್ರತಾ ಕ್ರಮಗಳೇನು?:
* ಡೆಂಗ್ಯೂ ಹರಡುತ್ತಿದೆ ಎಂಬುದು ಗೊತ್ತಾಗುತ್ತಿದ್ದಂತೆ ನೀವು ಎಚ್ಚರಗೊಳ್ಳಬೇಕು. ನಿಮ್ಮ ಸುತ್ತಮುತ್ತಲಿನ ಪರಿಸರವನ್ನು ಶುಚಿಗೊಳಿಸಬೇಕು.
* ಸೊಳ್ಳೆಗಳಿಗೆ ಸೂಕ್ತವಾದ ತಾಣಗಳನ್ನು ನಾಶಪಡಿಸುವುದು.
* ಮನೆಯ ಸುತ್ತಮುತ್ತ ನಿಂತಿರುವ ನೀರಿನ ನೆಲೆಗಳನ್ನು ನಾಶ ಪಡಿಸಬೇಕು.
* ತೆಂಗಿನ ಚಿಪ್ಪು, ಟಯರ್ಗಳು, ಚಿಕ್ಕ ಗುಂಡಿಗಳು, ಬೇಡ ಎಂದು ಬಿಸಾಡಿದ ಪ್ಲಾಸ್ಟಿಕ್ ಬಕೆಟ್, ಜಗ್ ಇತ್ಯಾದಿಗಳ ಸಂಗ್ರಹ ಬೇಡ.
* ನೀರು ನಿಂತಿರುವ ಕಡೆ ಸೂಕ್ತ ಕೀಟನಾಶಕ ಸಿಂಪಡಿಸಿ.
* ಮಕ್ಕಳಿಗೆ ಉದ್ದ ತೋಳಿನ ಬಟ್ಟೆ, ಸಾಕ್ಸ್ ಹಾಕಿರಿ.
* ಸೊಳ್ಳೆಗಳು ಮೊಟ್ಟೆಗಳನ್ನು ಇಡಲು ಅವಕಾಶ ಇರುವ ಕುಂಡಗಳು, ಮತ್ತಿತರ ವಸ್ತುಗಳನ್ನು ಸ್ವಚ್ಛ ಮಾಡಿರಿ.
ಒಟ್ಟಿನಲ್ಲಿ ಡೆಂಗ್ಯೂ ಜ್ವರ ಬಂತೆಂದರೆ ಭಯ ಪಡುವುದು ಬೇಡ. ದಿನ ನಿತ್ಯದ ಆಹಾರ ಕ್ರಮ, ನಾಲಿಗೆ ರುಚಿಯನ್ನು ನಿಯಂತ್ರಣದಲ್ಲಿಡುವುದರಿಂದ ಡೆಂಗ್ಯೂವನ್ನು ಹೊಡೆದೋಡಿಸಬಹುದು. ಜ್ವರ ಕಾಣಿಸಿಕೊಂಡ ತಕ್ಷಣ ವೈದ್ಯರ ಭೇಟಿ ಮಾಡಿ ಸೂಕ್ತ ಔಷಧಿಗಳನ್ನು ತೆಗೆದುಕೊಳ್ಳಿ. ಸಾಕಷ್ಟು ಮನೆಮದ್ದು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಿ. ಸಲಹೆಗಳನ್ನೂ ಪಾಲಿಸಿದರೆ ನೀವು ಡೆಂಗ್ಯೂ ಜ್ವರದಿಂದ ಪಾರಾಗಬಹುದು.
ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ (Uttara Kannada) ಡೆಂಗ್ಯೂಗೆ ಇನ್ನೊಬ್ಬರು ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ.
ಭಟ್ಕಳದ ಮೊಹಮ್ಮದ್ ಮೀರಾನ್ ಸಾದಾ (77) ಡೆಂಗ್ಯೂ ಜ್ವರದಿಂದ (Dengue Fever) ಮೃತಪಟ್ಟಿದ್ದಾರೆ. ಭಟ್ಕಳದ ಖಾಝಿಯಾ ಸ್ಟ್ರೀಟ್ ನಿವಾಸಿಯಾಗಿದ್ದ ಮೀರಾನ್ ಸಾದಾ ಅವರು ಜ್ವರದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಇದೀಗ ಅವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಸಾದಾ ನಿಧನದ ಮೂಲಕ ಜಿಲ್ಲೆಯಲ್ಲಿ ಈವರೆಗೆ ಡೆಂಗ್ಯೂದಿಂದ ಇಬ್ಬರ ಸಾವಾಗಿದೆ.
ಭಾನುವಾರ ಮಾವಿನಕುರ್ವ ಪಂಚಾಯ್ತಿ ವ್ಯಾಪ್ತಿಯ ತಲಗೋಡು ನಿವಾಸಿ ಪ್ರಜ್ವಲ್ ಗೋವಿಂದ ಕಾರ್ವಿ (24) ಬಲಿಯಾಗಿದ್ದರು. ಇಬರು ಸಾಗರಶ್ರೀ ಬೋಟ್‍ನಲ್ಲಿ ಮೀನುಗಾರನಾಗಿ ಕಾರ್ಯನಿರ್ವಹಿಸುತ್ತಿದ್ದು, ಒಂದು ವಾರದಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಿಸದೇ ಭಾನುವಾರ ಮೃತಪಟ್ಟಿದ್ದರು. ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ ಜ್ವರಕ್ಕೆ ಮೊದಲ ಬಲಿ
ಭಟ್ಕಳದ ಬಂದರಿನಲ್ಲಿ ಮೀನುಗಾರಿಕೆ ವೃತ್ತಿ ಮಾಡುತ್ತಿರುವ ಇನ್ನೂ ಇಬ್ಬರಿಗೆ ಡೆಂಗ್ಯೂ ಜ್ವರ ಕಾಣಿಸಿಕೊಂಡಿದ್ದು, ಅವರು ಸಹ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿತ್ತು. ಭಟ್ಕಳ ಬಂದರಿನಲ್ಲಿ ಶುಚಿತ್ವ ಇಲ್ಲದ ಕಾರಣ ಹೆಚ್ಚು ಸೊಳ್ಳೆಗಳ ಉತ್ಪತ್ತಿಯಾಗುತಿದ್ದು, ಈ ಭಾಗದಲ್ಲಿ ಹಲವರಿಗೆ ಡೆಂಗ್ಯೂ ಜ್ವರ ಕಾಣಿಸಿಕೊಳ್ಳಲು ಕಾರಣವಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಇದನ್ನೂ ಓದಿ: ಡೆಂಗ್ಯೂ ಜ್ವರಕ್ಕೆ ಮನೆ ಮದ್ದು
ಡೆಂಗ್ಯೂ ಜ್ವರದ ಲಕ್ಷಣಗಳು:
* ಅಧಿಕ ಜ್ವರ, ತಲೆನೋವು, ಸುಸ್ತು ಕಾಣಿಸಿಕೊಳ್ಳುತ್ತವೆ.
* ಮಾಂಸಖಂಡಗಳಲ್ಲಿ, ಕೈ, ಕಾಲುಗಳ ಕೀಲುಗಳಲ್ಲಿ ನೋವು ಉಂಟಾಗುತ್ತದೆ.
* ಕಣ್ಣಿನಲ್ಲಿ ಹೇಳಲಾಗದ ನೋವು, ಉರಿಯಾಗುತ್ತದೆ.
* ಕೆಮ್ಮು, ಗಂಟಲು ಕೆರೆತ ಬರುತ್ತದೆ.
* ಕೆಲವರಿಗೆ ವಾಂತಿ, ತಲೆ ಸುತ್ತು ಕಾಣಿಸಿಕೊಳ್ಳುತ್ತವೆ.
ಮುಂಜಾಗ್ರತಾ ಕ್ರಮಗಳೇನು?:
* ಡೆಂಗ್ಯೂ ಹರಡುತ್ತಿದೆ ಎಂಬುದು ಗೊತ್ತಾಗುತ್ತಿದ್ದಂತೆ ನೀವು ಎಚ್ಚರಗೊಳ್ಳಬೇಕು. ನಿಮ್ಮ ಸುತ್ತಮುತ್ತಲಿನ ಪರಿಸರವನ್ನು ಶುಚಿಗೊಳಿಸಬೇಕು.
* ಸೊಳ್ಳೆಗಳಿಗೆ ಸೂಕ್ತವಾದ ತಾಣಗಳನ್ನು ನಾಶಪಡಿಸುವುದು.
* ಮನೆಯ ಸುತ್ತಮುತ್ತ ನಿಂತಿರುವ ನೀರಿನ ನೆಲೆಗಳನ್ನು ನಾಶ ಪಡಿಸಬೇಕು.
* ತೆಂಗಿನ ಚಿಪ್ಪು, ಟಯರ್ಗಳು, ಚಿಕ್ಕ ಗುಂಡಿಗಳು, ಬೇಡ ಎಂದು ಬಿಸಾಡಿದ ಪ್ಲಾಸ್ಟಿಕ್ ಬಕೆಟ್, ಜಗ್ ಇತ್ಯಾದಿಗಳ ಸಂಗ್ರಹ ಬೇಡ.
* ನೀರು ನಿಂತಿರುವ ಕಡೆ ಸೂಕ್ತ ಕೀಟನಾಶಕ ಸಿಂಪಡಿಸಿ.
* ಮಕ್ಕಳಿಗೆ ಉದ್ದ ತೋಳಿನ ಬಟ್ಟೆ, ಸಾಕ್ಸ್ ಹಾಕಿರಿ.
* ಸೊಳ್ಳೆಗಳು ಮೊಟ್ಟೆಗಳನ್ನು ಇಡಲು ಅವಕಾಶ ಇರುವ ಕುಂಡಗಳು, ಮತ್ತಿತರ ವಸ್ತುಗಳನ್ನು ಸ್ವಚ್ಛ ಮಾಡಿರಿ.
ಒಟ್ಟಿನಲ್ಲಿ ಡೆಂಗ್ಯೂ ಜ್ವರ ಬಂತೆಂದರೆ ಭಯ ಪಡುವುದು ಬೇಡ. ದಿನ ನಿತ್ಯದ ಆಹಾರ ಕ್ರಮ, ನಾಲಿಗೆ ರುಚಿಯನ್ನು ನಿಯಂತ್ರಣದಲ್ಲಿಡುವುದರಿಂದ ಡೆಂಗ್ಯೂವನ್ನು ಹೊಡೆದೋಡಿಸಬಹುದು. ಜ್ವರ ಕಾಣಿಸಿಕೊಂಡ ತಕ್ಷಣ ವೈದ್ಯರ ಭೇಟಿ ಮಾಡಿ ಸೂಕ್ತ ಔಷಧಿಗಳನ್ನು ತೆಗೆದುಕೊಳ್ಳಿ. ಸಾಕಷ್ಟು ಮನೆ ಮದ್ದು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಿ. ಸಲಹೆಗಳನ್ನೂ ಪಾಲಿಸಿದರೆ ನೀವು ಡೆಂಗ್ಯೂ ಜ್ವರದಿಂದ ಪಾರಾಗಬಹುದು.
ಶಿವಮೊಗ್ಗ: ಡೆಂಗ್ಯೂ ಜ್ವರಕ್ಕೆ (Dengue Fever) ನವವಿವಾಹಿತೆಯೊಬ್ಬರು (Newly Married Woman) ಬಲಿಯಾದ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ರಿಪ್ಪನ್ ಪೇಟೆಯ ಶಬರೀಶನಗರದಲ್ಲಿ ಘಟನೆ ನಡೆದಿದ್ದು, ಮಧುರ (31) ಡೆಂಗ್ಯೂ ಜ್ವರಕ್ಕೆ ತುತ್ತಾಗಿ ಮೃತಪಟ್ಟಿದ್ದಾರೆ. ಈಕೆ ಕಳೆದ ಆರು ತಿಂಗಳ ಹಿಂದೆ ಮಂಜುನಾಥ್ ಎಂಬವರೊಂದಿಗೆ ವಿವಾಹವಾಗಿದ್ದರು. ಕಳೆದ ಒಂದು ವಾರದಿಂದ ಮಧುರ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದರು. ಇದನ್ನೂ ಓದಿ: ಅತ್ತಿಬೆಲೆ ಪಟಾಕಿ ದುರಂತ- ಗೋದಾಮು ಮಾಲೀಕ ಅರೆಸ್ಟ್
ಅನಾರೋಗ್ಯ ಹಿನ್ನೆಲೆ ಮಧುರ ಸಾಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೆಚ್ಚಿನ ಚಿಕಿತ್ಸೆಗೆಂದು ಶಿವಮೊಗ್ಗಕ್ಕೆ ಕರೆ ತರುವ ವೇಳೆ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ಅಪ್ರಾಪ್ತ ಸಹೋದರಿಯರು