Tag: ಡೆಂಟಿಸ್ಟ್

  • ಕ್ಲಿನಿಕ್ ಲ್ಯಾಬ್‍ಗೆ ಕರ್ಕೊಂಡು ಹೋದ – ಡೆಂಟಿಸ್ಟ್‌ಗೆ ಚಾಕು ಇರಿದ ಲಿವ್ ಇನ್ ಪಾರ್ಟ್ನರ್

    ಕ್ಲಿನಿಕ್ ಲ್ಯಾಬ್‍ಗೆ ಕರ್ಕೊಂಡು ಹೋದ – ಡೆಂಟಿಸ್ಟ್‌ಗೆ ಚಾಕು ಇರಿದ ಲಿವ್ ಇನ್ ಪಾರ್ಟ್ನರ್

    – 2 ವರ್ಷಗಳಿಂದ ಲಿವ್ ಇನ್ ರಿಲೇಷನ್‍ಶಿಪ್‍ನಲ್ಲಿದ್ರು

    ತಿರುವನಂತಪುರಂ: ಲಿವ್ ಇನ್ ಪಾರ್ಟ್ನರ್ ನೊಬ್ಬ ದಂತವೈದ್ಯೆಗೆ ಚಾಕುವಿನಿಂದ ಇರಿದಿದ್ದು, ಪರಿಣಾಮ ಚಿಕಿತ್ಸೆ ಫಲಿಕಾರಿಯಾಗದೆ ಡೆಂಟಿಸ್ಟ್ ಮೃತಪಟ್ಟಿರುವ ಘಟನೆ ಕೇಳರದ ಎರ್ನಾಕುಲಂ ಜಿಲ್ಲೆಯಲ್ಲಿ ನಡೆದಿದೆ.

    ಡಾ.ಸೋನಾ (30) ಮೃತ ಡೆಂಟಿಸ್ಟ್. ಸೆಪ್ಟೆಂಬರ್ 28 ರಂದು ಆರೋಪಿ ಮಹೇಶ್ (37) ಚಾಕುವಿನಿಂದ ಇರಿದಿದ್ದನು. ತೀವ್ರ ಗಾಯಗೊಂಡಿದ್ದ ಸೋನಾರನ್ನು ತ್ರಿಶೂರ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ನಿಧನರಾಗಿದ್ದಾರೆ. ಚಾಕುವಿನಿಂದ ಇರಿದ ನಂತರ ಆರೋಪಿ ಮಹೇಶ್ ಸ್ಥಳದಿಂದ ಪರಾರಿಯಾಗಿದ್ದಾನೆ.

    ಮೃತ ಸೋನಾ ಕಳೆದ ಒಂದೂವರೆ ವರ್ಷಗಳಿಂದ ತ್ರಿಶೂರ್‌ನ ಒಲ್ಲೂರು ಬಳಿಯ ಕುಟ್ಟ ನೆಲ್ಲೂರ್ ನಲ್ಲಿ ಡೆಂಟಲ್ ಕ್ಲಿನಿಕ್ ನಡೆಸುತ್ತಿದ್ದರು. ಕಳೆದ ಎರಡು ವರ್ಷಗಳಿಂದ ಮಹೇಶ್ ಜೊತೆ ಲಿವ್ ಇನ್ ರಿಲೇಷನ್‍ಶಿಪ್‍ನಲ್ಲಿದ್ದರು. ಆರೋಪಿ ಮಹೇಶ್ ಕಟ್ಟಣ ನಿರ್ಮಾಣ ಕೆಲಸ ಮಾಡುತ್ತಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

    ಇತ್ತೀಚೆಗೆ ಇವರ ಮಧ್ಯೆ ಹಣಕಾಸಿನ ವಿಚಾರಕ್ಕೆ ಜಗಳ ನಡೆದಿತ್ತು. ಈ ವೇಳೆ ಮಹೇಶ್ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾನೆ ಎಂದು ಸೋನಾ ಒಲ್ಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಮಹೇಶ್ ನನ್ನ ಆದಾಯವನ್ನು ಕ್ಲಿನಿಕ್‍ನಿಂದ ಅಕ್ರಮವಾಗಿ ತೆಗೆದುಕೊಂಡಿದ್ದಾನೆ ಎಂದು ಸೋನಾ ದೂರಿನಲ್ಲಿ ಆರೋಪಿಸಿದ್ದರು ಎಂದು ತಿಳಿದುಬಂದಿದೆ.

    ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಆದರೆ ಸೆಪ್ಟೆಂಬರ್ 28 ರಂದು ಮೃತ ಸೋನಾ ಮತ್ತು ಮಹೇಶ್ ಇಬ್ಬರು ಕ್ಲಿನಿಕ್‍ನಲ್ಲಿ ಈ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ಸೋನಾ ತಂದೆ ಜೋಸ್ ಕೂಡ ಇದ್ದರು. ಆದರೆ ಮಾತುಕತೆಯ ಸಮಯದಲ್ಲೇ ಆರೋಪಿ ಮಹೇಶ್ ಸೋನಾರನ್ನು ಕ್ಲಿನಿಕ್‍ನ ಲ್ಯಾಬ್‍ಗೆ ಒತ್ತಾಯಿಸಿ ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ಏಕಾಏಕಿ ಚಾಕುವಿನಿಂದ ಇರಿದಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಹಲ್ಲೆಯಿಂದ ಸೋನಾರ ಹೊಟ್ಟೆಗೆ ತೀವ್ರ ಗಾಯಗಳಾಗಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೋನಾ ಭಾನುವಾರ ಸಾವನ್ನಪ್ಪಿದ್ದಾರೆ. ಆರೋಪಿ ಮಹೇಶ್ ಹಲ್ಲೆ ಮಾಡಿದ ತಾನು ತಪ್ಪೊಪ್ಪಿಕೊಳ್ಳಲು ಪೊಲೀಸ್ ಠಾಣೆಗೆ ಹೋಗುವುದಾಗಿ ಹತ್ತಿರದ ಅಂಗಡಿ ಮಾಲೀಕರಿಗೆ ತಿಳಿಸಿ ನಂತರ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ಸೋನಾಗೆ ಈಗಾಗಲೇ ಮದುವೆಯಾಗಿದ್ದು, ತನ್ನ ಪತಿಯಿಂದ ಬೇರೆಯಾಗಿದ್ದರು. ಒಂದು ಮಗು ಕೂಡ ಇತ್ತು. ಆರೋಪಿ ಮಹೇಶ್ ಇನ್ನೂ ಮದುವೆಯಾಗಿರಲಿಲ್ಲ. ಸದ್ಯಕ್ಕೆ ಪೊಲೀಸರು ಸೋನಾ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೇರೆ ಆಸ್ಪತ್ರೆಗೆ ರವಾನಿಸಿದ್ದು, ಆರೋಪಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ.

  • ಆಸ್ಟ್ರೇಲಿಯಾದಲ್ಲಿ ಭಾರತೀಯ ಮೂಲದ ವೈದ್ಯೆಯ ಬರ್ಬರ ಕೊಲೆ!

    ಆಸ್ಟ್ರೇಲಿಯಾದಲ್ಲಿ ಭಾರತೀಯ ಮೂಲದ ವೈದ್ಯೆಯ ಬರ್ಬರ ಕೊಲೆ!

    – ಮೃತದೇಹವನ್ನ ಸೂಟ್‍ಕೇಸಿನಲ್ಲಿ ತುಂಬಿ ವೈದ್ಯೆಯ ಕಾರಿನಲ್ಲಿಯೇ ಬಚ್ಚಿಟ್ರು!

    ಮೆಲ್ಬೋರ್ನ್: ಆಸ್ಟ್ರೇಲಿಯಾದ ಜನನಿಬಿಡ ಪ್ರದೇಶದಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ಭಾರತೀಯ ಮೂಲದ ದಂತ ವೈದ್ಯೆ ಬುಧವಾರ ಬರ್ಬರವಾಗಿ ಕೊಲೆ ಆದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

    ಪ್ರೀತಿ ರೆಡ್ಡಿ (32) ಕೊಲೆಯಾದ ದಂತ ವೈದ್ಯೆ. ಈಸ್ಟರ್ನ್ ಸಿಡ್ನಿ ರಸ್ತೆಯಲ್ಲಿ ವೈದ್ಯೆ ಪಾರ್ಕ್ ಮಾಡಿದ್ದ ಕಾರಿನ ಸೂಟ್‍ಕೇಸಿನಲ್ಲೇ ಮೃತದೇಹವನ್ನು ತುಂಬಿಡಲಾಗಿತ್ತು. ಪ್ರೀತಿ ಮಾಜಿ ಪ್ರಿಯಕರ ಕೂಡ ಅಪಘಾತದಲ್ಲಿ ಮೃತಪಟ್ಟಿದ್ದರಿಂದ ಈ ಪ್ರಕರಣದ ಬಗ್ಗೆ ಅನುಮಾನಗಳು ಹೆಚ್ಚಾಗುತ್ತಿದೆ ಎಂದು ನ್ಯೂ ಸೌತ್ ವೇಲ್ಸ್‍ನ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

    ಪ್ರೀತಿ ಕೊನೆಯದಾಗಿ ಭಾನುವಾರ ಜಾರ್ಜ್ ರಸ್ತೆಯಲ್ಲಿರುವ ಮ್ಯಾಕ್‍ಡಾನಲ್ಡ್ ನ ಲೈನಿನಲ್ಲಿ ನಿಂತಿದ್ದರು. ಬಳಿಕ ಅಲ್ಲಿಂದ ಏಕಾಏಕಿ ನಿಗೂಢವಾಗಿ ನಾಪತ್ತೆ ಆಗಿದ್ದರು. ಮಂಗಳವಾರ ಪೊಲೀಸರು ಕಿಂಗ್ಸ್ ಫೋರ್ಡ್ ನಲ್ಲಿರುವ ಸ್ಟ್ರಾಚನ್ ಲೇನ್‍ನಲ್ಲಿ ಪ್ರೀತಿಯ ಕಾರನ್ನು ಪತ್ತೆ ಹಚ್ಚಿದ್ದರು. ಬಳಿಕ ಆ ಕಾರನ್ನು ಪರಿಶೀಲಿಸಿದ್ದಾಗ ಸೂಟ್‍ಕೇಸ್‍ನಲ್ಲಿ ಪ್ರೀತಿ ಮೃತದೇಹ ಇರುವುದನ್ನು ಗಮಿನಿಸಿದ್ದಾರೆ.

    ಪ್ರೀತಿಯ ಮೃತದೇಹದ ಮೇಲೆ ಚಾಕುವಿನಿಂದ ಇರಿದ ಗಾಯದ ಗುರುತುಗಳಿದ್ದವು. ಅಲ್ಲದೇ ಪ್ರೀತಿ ಮತ್ತು ಆಕೆಯ ಮಾಜಿ ಪ್ರಿಯಕರ ಸಿಡ್ನಿಯ ಮಾರ್ಕೆಟ್ ರಸ್ತೆಯ ಹೋಟೆಲ್‍ನಲ್ಲಿ ವಾಸಿಸುತ್ತಿದ್ದರು. ಪ್ರೀತಿ ಭಾನುವಾರ ಬೆಳಗ್ಗೆ 11 ಗಂಟೆಗೆ ತನ್ನ ಕುಟುಂಬದವರ ಜೊತೆ ಕೊನೆಯದಾಗಿ ಮಾತನಾಡಿದ್ದರು. ಅಲ್ಲದೇ ವಾರಾಂತ್ಯದಲ್ಲಿ ಆಕೆ ಸೇಂಟ್ ಲಿಯೋನಾಡ್ರ್ಸ್ ನಲ್ಲಿ ನಡೆಯುವ ಡೆಂಟಲ್ ಕಾನ್ಫರೆನ್ಸ್ ನಲ್ಲಿ ಭಾಗವಹಿಸುತ್ತಿದ್ದರು.

    ಪ್ರೀತಿ ತನ್ನ ಪೋಷಕರಿಗೆ ತಿಂಡಿ ತಿಂದು ಕರೆ ಮಾಡುವುದಾಗಿ ಹೇಳಿದ್ದರು. ಆದರೆ ಆಕೆ ಕರೆ ಮಾಡದೇ ಇರುವ ಕಾರಣ ಆಕೆಯ ಪೋಷಕರು ಪೊಲೀಸರಿಗೆ ಕರೆ ಮಾಡಿದ್ದಾರೆ. ಪ್ರೀತಿ ನಿಗೂಢವಾಗಿ ನಾಪತ್ತೆ ಆದ ದಿನದಿಂದ ನಾವು ನೆಮ್ಮದಿಯಾಗಿ ನಿದ್ದೆ ಮಾಡಲು ಸಾಧ್ಯವಾಗಲಿಲ್ಲ. ಆಕೆ ಸುರಕ್ಷಿತವಾಗಿ ಹಿಂದಿರುಗಲಿ ಎಂದು ನಾವೆಲ್ಲರೂ ಪ್ರಾರ್ಥಿನೆ ಮಾಡಲಾಗಿತ್ತು ಎಂದು ಪ್ರೀತಿ ಸಹದ್ಯೋಗಿಗಳು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv