Tag: ಡೈವರ್

  • ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ –  ಚಾಲಕರಿಬ್ಬರೂ ಸ್ಥಳದಲ್ಲೇ ದುರ್ಮರಣ

    ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ – ಚಾಲಕರಿಬ್ಬರೂ ಸ್ಥಳದಲ್ಲೇ ದುರ್ಮರಣ

    ಧಾರವಾಡ: ಖಾಸಗಿ ಸಂಸ್ಥೆಯ ಲಾರಿ ಹಾಗೂ ಅಶೋಕ್ ಲೇಲ್ಯಾಂಡ್ ಮಿನಿ ಲಾರಿಯ ನಡುವೆ ಭೀಕರ ಅಪಘಾತ ಸಂಭವಿಸಿ ಚಾಲಕರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡ ಜಿಲ್ಲೆಯ ಹಾರೋಬೆಳವಡಿ ಗ್ರಾಮದ ಬಳಿ ನಡೆದಿದೆ.

    ಧಾರವಾಡ-ಸವದತ್ತಿ ರಾಜ್ಯ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಸವದತ್ತಿ ಕಡೆಗೆ ಹೋಗುತ್ತಿದ್ದ ಲಾರಿಗೆ ಎದುರಿಂದ ಬರುತ್ತಿದ್ದ ಮತ್ತೊಂದು ಮಿನಿ ಲಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಇಬ್ಬರೂ ಚಾಲಕರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಎರಡೂ ಲಾರಿಗಳ ಮುಂದಿನ ಭಾಗ ಸಂಪೂರ್ಣ ಜಖಂಗೊಂಡಿದೆ. ಇದನ್ನೂ ಓದಿ: ಬೇರೆಯವರೊಂದಿಗೆ ಮದುವೆ ಆಗಿದ್ದಕ್ಕೆ ವಧುವನ್ನೇ ಕೊಂದ ಪ್ರೇಮಿ

    ಮೃತಪಟ್ಟವರನ್ನು ಸಿದ್ದಪ್ಪ ತುರಾಯಿ (27) ಹಾಗೂ ಗಗನ್ (26) ಎಂದು ಗುರುತಿಸಲಾಗಿದೆ. ಲಾರಿಯಲ್ಲಿದ್ದ ಮತ್ತೋರ್ವ ಗಂಭೀರ ಗಾಯಗೊಂಡಿದ್ದು, ಗಾಯಾಳುವನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ರವಾನೆ ಮಾಡಲಾಗಿದೆ. ಘಟನೆಯಿಂದ ಕೆಲಕಾಲ ಧಾರವಾಡ ಸವದತ್ತಿ ರಸ್ತೆ ಸಂಪೂರ್ಣವಾಗಿ ಬಂದ್ ಆಗಿತ್ತು. ಸ್ಥಳಕ್ಕೆ ಧಾರವಾಡ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಗರ್ಭಿಣಿ ಪತ್ನಿಗೆ ಟಾಯ್ಲೆಟ್ ಕ್ಲೀನರ್ ಆ್ಯಸಿಡ್ ಕುಡಿಸಿ ಕೊಂದ ಪಾಪಿ ಪತಿ