Tag: ಡೊನಲ್ಡ್ ಟ್ರಂಪ್

  • ಟ್ರಂಪ್ ಭೇಟಿ ಹಿನ್ನೆಲೆಯಲ್ಲಿ ಬೀದಿ ವ್ಯಾಪಾರಿಗಳ ಮೇಲೆ ಜೆಸಿಬಿ ಘರ್ಜನೆ – ಅಸಲಿ ಸುದ್ದಿ ಏನು?

    ಟ್ರಂಪ್ ಭೇಟಿ ಹಿನ್ನೆಲೆಯಲ್ಲಿ ಬೀದಿ ವ್ಯಾಪಾರಿಗಳ ಮೇಲೆ ಜೆಸಿಬಿ ಘರ್ಜನೆ – ಅಸಲಿ ಸುದ್ದಿ ಏನು?

    ಬೆಂಗಳೂರು: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಗುಜರಾತಿನ ಅಹಮದಾಬಾದಿನಲ್ಲಿರುವ ಬೀದಿ ಬದಿಯ ವ್ಯಾಪಾರಿಗಳ ತಳ್ಳು ಗಾಡಿಯನ್ನು ಜೆಸಿಬಿ ಮೂಲಕ ಧ್ವಂಸಗೊಳಿಸಲಾಗುತ್ತಿದೆ ಎನ್ನುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

    ಫೇಸ್‍ಬುಕ್ ಮತ್ತು ವಾಟ್ಸಪ್ ನಲ್ಲಿ ಈ ವಿಡಿಯೋ ವೈರಲ್ ಆಗಿದೆ. ಆದರೆ ಇದೊಂದು ಸುಳ್ಳು ವಿಡಿಯೋ ಆಗಿದ್ದು ಒಡಿಶಾದ ರಾಜಧಾನಿ ಭುವನೇಶ್ವರದಲ್ಲಿ ಮಹಾನಗರ ಪಾಲಿಕೆ ರಸ್ತೆ ತೆರವು ಕಾರ್ಯಾಚರಣೆಯ ದೃಶ್ಯಕ್ಕೆ ಸುಳ್ಳು ಮಾಹಿತಿ ನೀಡಿ ವಿಡಿಯೋ ಹರಿ ಬಿಡಲಾಗುತ್ತಿದೆ.

    ಈ ವಿಡಿಯೋವನ್ನು ಒಡಿಶಾದಲ್ಲಿರುವ ವಾಹಿನಿಯೊಂದು 2020ರ ಜನವರಿ 24 ರಂದು ಅಪ್ಲೋಡ್ ಮಾಡಿದೆ. ವಿಶೇಷ ಏನೆಂದರೆ ಉತ್ತರ ಪ್ರದೇಶದಲ್ಲಿ ನಡೆದ ಸಿಎಎ ವಿರೋಧಿ ಹೋರಾಟದ ಸಂದರ್ಭದಲ್ಲೂ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು.

    ಈಗ ವಿಡಿಯೋ ಯೂಟ್ಯೂಬ್ ನಲ್ಲಿ ರೋಸ್ ನ್ಯೂಸ್ ಟಿವಿ ಹೆಸರಿನಲ್ಲಿರುವ ಯೂಟ್ಯೂಬ್ ಖಾತೆಯಲ್ಲಿ ಅಪ್ಲೋಡ್ ಆಗಿದೆ. ಈ ವಿಡಿಯೋಗೆ ಟ್ರಂಪ್ ಅಹಮದಾಬಾದಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಬೀದಿ ವ್ಯಾಪಾರಿಗಳನ್ನು ಬಲವಂತವಾಗಿ ತೆರವುಗೊಳಿಸಲಾಗುತ್ತಿದೆ ಎಂದು ಶೀರ್ಷಿಕೆ ನೀಡಲಾಗಿದೆ.

    ಡೊನಾಲ್ಡ್ ಟ್ರಂಪ್ ಭಾರತ ಪ್ರವಾಸ ಕೈಗೊಳ್ಳುತ್ತಾರೆ ಎಂಬ ಸುದ್ದಿ ಬರುತ್ತಿದ್ದರೂ ಫೆ.11ರಂದು ಶ್ವೇತಭವನ ಟ್ವೀಟ್ ಮಾಡುವ ಮೂಲಕ ಅಧಿಕೃತವಾಗಿ ಖಚಿತಗೊಂಡಿತ್ತು. ಶ್ವೇತಭವನ ಪ್ರಕಟ ಮಾಡುವ ಮೊದಲೇ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.

  • ಮೋದಿ ಭೇಟಿ ವೇಳೆ  ಟ್ರಂಪ್ ಪತ್ನಿ ಮೆಲಾನಿಯಾ ಧರಿಸಿದ್ದ ಡ್ರೆಸ್ ಬೆಲೆ ಎಷ್ಟು ಗೊತ್ತೆ?

    ಮೋದಿ ಭೇಟಿ ವೇಳೆ ಟ್ರಂಪ್ ಪತ್ನಿ ಮೆಲಾನಿಯಾ ಧರಿಸಿದ್ದ ಡ್ರೆಸ್ ಬೆಲೆ ಎಷ್ಟು ಗೊತ್ತೆ?

    ವಾಷಿಂಗ್ಟನ್: ಭಾರತ ಪ್ರಧಾನಿ ನರೇಂದ್ರ ಮೋದಿ ಅವರು ಶ್ವೇತಭವನಕ್ಕೆ ಭೇಟಿ ನೀಡಿದ್ದ ವೇಳೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪತ್ನಿ ಮೆಲಾನಿಯಾ ಟ್ರಂಪ್ ಭಾರೀ ಮೊತ್ತದ ಡ್ರೆಸ್ ಧರಿಸಿದ್ದರು ಎಂಬುದಾಗಿ ವರದಿಯಾಗಿದೆ.

    ಮೆಲಾನಿಯಾ ಟ್ರಂಪ್ ಹಳದಿ ಬಣ್ಣದ ಗೌನ್ ಧರಿಸಿ ಮೋದಿ ಅವರನ್ನು ಸ್ವಾಗತಿಸಿದ್ದರು. ಈ ಗೌನ್‍ಗೆ 2,160 ಡಾಲರ್(ಅಂದಾಜು 1.39 ಲಕ್ಷ ರೂ.) ಇದೆ ಎಂದು ಮಾಧ್ಯಮಗಳು ವರದಿ ಮಾಡಿದೆ.

    ಮೋದಿ ಮೆಲಾನಿಯಾ ಟ್ರಂಪ್‍ಗೆ ಕಾಶ್ಮೀರಿ ಶಾಲ್, ಕಾಂಗ್ರಾ ಕಣಿವೆಯ ಟೀ, ಜೇನುತುಪ್ಪ, ಹಾಗೂ ಬೆಳ್ಳಿಯ ಬ್ರೇಸ್‍ಲೆಟ್ ಉಡುಗೊರೆಯಾಗಿ ನೀಡಿದ್ದಾರೆ. ಇನ್ನು ಟ್ರಂಪ್ ಅವರಿಗಾಗಿ ಪಂಜಾಬ್‍ನ ಹೊಶಿಯಾರ್‍ಪುರ್‍ನ ವಿಶೇಷತೆಯಾದ ಸುಂದರವಾದ ಕೆತ್ತನೆಯುಳ್ಳ ಮರದ ಪೆಟ್ಟಿಗೆಯನ್ನ ಉಡುಗೊರೆಯಾಗಿ ನೀಡಿದ್ದಾರೆ. ಇದರೊಂದಿಗೆ ಅಬ್ರಹಂ ಲಿಂಕನ್ ಅವರ ಸ್ಮರಣೆಗಾಗಿ 1965ರಲ್ಲಿ ವಿತರಿಸಲಾಗಿದ್ದ ಪೋಸ್ಟಲ್ ಸ್ಟ್ಯಾಂಪ್ ಕೂಡ ಉಡುಗೊರೆಯಾಗಿ ನೀಡಿದ್ದಾರೆ.

    ಸ್ಲೋವೇನಿಯಾ ಮೂಲದ ಮೆಲಾನಿಯ ಡೊನಾಲ್ಡ್ ಟ್ರಂಪ್ ಅವರನ್ನು ವಿವಾಹವಾಗುವುದಕ್ಕೂ ಮೊದಲು ಫ್ಯಾಶನ್ ರೂಪದರ್ಶಿಯಾಗಿದ್ದರು.

    ಇದನ್ನೂ ಓದಿ: ಹಸ್ತಲಾಘವ, ಅಪ್ಪುಗೆ, ಆತ್ಮೀಯತೆ- ನೀವು ನಿದ್ದೆಯಲ್ಲಿದ್ದಾಗ ಮೋದಿ ಟ್ರಂಪ್ ಭೇಟಿ ವೇಳೆ ನಡೆದಿದ್ದೇನು?

     

     

  • ಅಮೆರಿಕಕ್ಕೆ ಭಾರತೀಯ ಟೆಕ್ಕಿಗಳನ್ನು ಕಳುಹಿಸಬೇಕೇ:ಇನ್ಫಿ ನಾರಾಯಣ ಮೂರ್ತಿ ಹೇಳಿದ್ದು ಹೀಗೆ

    ಬೆಂಗಳೂರು: ಎಚ್-1 ಬಿ ವೀಸಾ ನೀಡಿ ಭಾರತೀಯ ಕಂಪೆನಿಗಳು ವಿದೇಶಕ್ಕೆ ಉದ್ಯೋಗಿಗಳನ್ನು ಕಳಹಿಸುವ ಬದಲು ಅವರಿಗೆ ಸ್ವದೇಶದಲ್ಲೇ ಉದ್ಯೋಗ ನೀಡಬೇಕು ಎಂದು ಇನ್ಫೋಸಿಸ್ ಸಂಸ್ಥಾಪಕ ಎನ್.ನಾರಾಯಣ ಮೂರ್ತಿ ಹೇಳಿದ್ದಾರೆ.

    ವಾಹಿನಿಯೊಂದರೆ ಜೊತೆ ಮಾತನಾಡಿದ ಅವರು, ಭಾರತೀಯ ಸಾಫ್ಟ್ ವೇರ್ ಕಂಪೆನಿಗಳು ಅಮೆರಿಕದಲ್ಲಿ ಅಮೆರಿಕ ಜನತೆಗೆ, ಕೆನಡಾದಲ್ಲಿ ಕೆನಡಾದ ಪ್ರಜೆಗಳಿಗೆ, ಇಂಗ್ಲೆಂಡಿನಲ್ಲಿ ಇಂಗ್ಲೆಂಡ್ ಮಂದಿಗೆ ಅವಕಾಶ ನೀಡಬೇಕು ಆಗ ಮಾತ್ರ ನಾವು ಅಂತಾರಾಷ್ಟ್ರೀಯ ಕಂಪೆನಿಯಾಗಿ ಗುರುತಿಸಿಕೊಳ್ಳಲು ಸಾಧ್ಯವಾಗುತ್ತದೆ. ಈ ರೀತಿ ಮಾಡಿದಾಗ ನಾವು ಬಹು ಸಂಸ್ಕೃತಿಯ ಕಂಪೆನಿಯಾಗುತ್ತೇವೆ ಎಂದು ಎಂದು ತಿಳಿಸಿದರು.

    ಕಾಲೇಜಿನ ಹಂತದಲ್ಲೇ ಉದ್ಯೋಗಿಗಳನ್ನು ನೇಮಕ ಮಾಡಿ ಅವರಿಗೆ ಸೂಕ್ತ ತರಬೇತಿ ನೀಡಬೇಕು. ಈ ಮೂಲಕ ಸ್ಥಳೀಯರಿಗೆ ಹೆಚ್ಚು ಹೆಚ್ಚು ಅವಕಾಶಗಳನ್ನು ನೀಡಬೇಕು ಎಂದು ನಾರಾಯಣ ಮೂರ್ತಿ ಅಭಿಪ್ರಾಯ ವ್ಯಕ್ತಪಡಿಸಿದರು.

    ಕನಿಷ್ಠ 1,30,000 ಡಾಲರ್(ಅಂದಾಜು 88.17 ಲಕ್ಷ ರೂ.) ಸಂಬಳ ಹೊಂದಿದ ಉದ್ಯೋಗಿಗಳಿಗೆ ಮಾತ್ರ ಎಚ್-1ಬಿ ವೀಸಾ ನೀಡಲು ಅಮೆರಿಕ ಸರ್ಕಾರ ಮುಂದಾಗಿದೆ. ಎಚ್-1ಬಿ ವೀಸಾದ ಕಾನೂನು ತಿದ್ದುಪಡಿ ಮಾಡಲು ‘ಹೈ ಸ್ಕಿಲ್ಡ್ ಇಂಟಿಗ್ರಿಟಿ ಆಂಡ್ ಫೇರ್‍ನೆಸ್ ಮಸೂದೆ 2017’ ಅಮೆರಿಕದ ಸಂಸತ್ತಿನಲ್ಲಿ ಮಂಡನೆಯಾಗಿದೆ. ಪ್ರಸ್ತಾವಿತ ಮಸೂದೆಯಲ್ಲಿ ಎಚ್-1ಬಿ ವೀಸಾ ಪಡೆಯಲು ಉದ್ಯೋಗಿಗಳಿಗೆ ಕನಿಷ್ಠ 1.30 ಲಕ್ಷ ಡಾಲರ್ ಸಂಬಳ ನೀಡಬೇಕೆಂಬ ಅಂಶವಿದೆ.

    ಪ್ರಸ್ತುತ ಈಗ ಎಚ್-1ಬಿ ವೀಸಾ ಹೊಂದಿದವರಿಗೆ ಕನಿಷ್ಠ ಸಂಬಳದ ಮಿತಿ 60 ಸಾವಿರ ಡಾಲರ್(40.69 ಲಕ್ಷ ರೂ.) ಇದೆ. 1989ರ ಜಾರಿಗೆ ಬಂದಿದ್ದ ಈ ವೀಸಾ ನಿಯಮದಲ್ಲಿ ಇದೂವರೆಗೆ ಯಾವುದೇ ಬದಲಾವಣೆ ಆಗಿರಲಿಲ್ಲ. ಆದರೆ ಈಗ ಈ ವೀಸಾದ ಅಡಿ ಅಮೆರಿಕಕ್ಕೆ ತೆರಳುವ ಉದ್ಯೋಗಿಗಳ ಸಂಬಳದ ಮಿತಿ ಡಬಲ್ ಆಗಿದೆ. ಮಸೂದೆ ಮಂಡನೆಯಾಗುತ್ತಿದ್ದಂತೆ, ಟಿಸಿಎಸ್, ವಿಪ್ರೋ, ಎಚ್‍ಸಿಎಲ್ ಕಂಪೆನಿಗಳ ಶೇರುಗಳು ದಿಢೀರ್ ಕುಸಿದಿತ್ತು.