Tag: ಡ್ಯಾಂ

  • ಬೆಳ್ತಂಗಡಿ| ನದಿಯಲ್ಲಿ ಈಜಲು ಹೋದ ಮೂವರು ಯುವಕರು ನೀರುಪಾಲು

    ಬೆಳ್ತಂಗಡಿ| ನದಿಯಲ್ಲಿ ಈಜಲು ಹೋದ ಮೂವರು ಯುವಕರು ನೀರುಪಾಲು

    ಮಂಗಳೂರು: ಡ್ಯಾಂ ಒಂದರಲ್ಲಿ ಈಜಾಡಲು ಹೋಗಿ ಮೂವರು ಯುವಕರು (Youths) ನೀರುಪಾಲಾದ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬೆಳ್ತಂಗಡಿ (Belthangady) ತಾಲೂಕಿನ ವೇಣೂರು ಸಮೀಪದ ಮೂಡುಕೋಡಿ ಎಂಬಲ್ಲಿ ನಡೆದಿದೆ.

    ಮೂಡುಕೋಡಿ ಗ್ರಾಮದ ವಾಲ್ಟರ್ ಎಂಬವರ ಮನೆಗೆ ಕಾರ್ಯಕ್ರಮದ ನಿಮಿತ್ತ ಬಂದ ಮೂಡಬಿದ್ರೆ ತಾಲೂಕಿನ ಎಡಪದವು ನಿವಾಸಿ ಲಾರೆನ್ಸ್ (20), ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಸೂರಜ್ (19), ಬಂಟ್ವಾಳ ಗ್ರಾಮದ ವಗ್ಗದ ಜೈಸನ್ (19) ಎಂಬವರು ಸಾವನ್ನಪ್ಪಿದ ದುರ್ದೈವಿಗಳು. ವಾಲ್ಟರ್‌ರವರ ಮನೆಯಲ್ಲಿ ಊಟ ಮುಗಿಸಿ ಮೂಡುಕೋಡಿ ಗ್ರಾಮದ ಬರ್ಕಜೆ ಡ್ಯಾಂ ಬಳಿ ಈಜಲು ಹೋಗಿದ್ದರು. ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಮೂವರು ಯುವಕರು ನೀರುಪಾಲಾಗಿದ್ದಾರೆ. ಇದನ್ನೂ ಓದಿ: ಭೋವಿ ನಿಗಮ ಹಗರಣ: ಡಿವೈಎಸ್ಪಿ ಹೆಸರು ಬರೆದಿಟ್ಟರೂ ಬಂಧನ ಮಾಡಿಲ್ಲ ಯಾಕೆ – ಸರ್ಕಾರಕ್ಕೆ ಹೈಕೋರ್ಟ್‌ ಚಾಟಿ

    ಈಜು ತಜ್ಞರು ಮೂವರು ಯುವಕರ ಮೃತದೇಹ ನೀರಿನಿಂದ ಹೊರತೆಗೆದಿದ್ದಾರೆ. ಮೃತರು ಮಂಗಳೂರಿನ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು. ಘಟನಾ ಸ್ಥಳಕ್ಕೆ ವೇಣೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ದಿಢೀರ್‌ ದೆಹಲಿಗೆ ಸಿಎಂ – ಸಿದ್ದರಾಮಯ್ಯ ಸಂಪುಟಕ್ಕೆ ಶೀಘ್ರವೇ ಸರ್ಜರಿ?

  • KRS ಡ್ಯಾಂಗೆ ಒಳಹರಿವು ಹೆಚ್ಚಳ

    KRS ಡ್ಯಾಂಗೆ ಒಳಹರಿವು ಹೆಚ್ಚಳ

    ಮಂಡ್ಯ: ಕಾವೇರಿ (Cauvery) ಜಲಾನಯನ ಪ್ರದೇಶದಲ್ಲಿ ಕಳೆದ 2 ದಿನಗಳಿಂದ ಸ್ವಲ್ಪ ಪ್ರಮಾಣದಲ್ಲಿ ಮಳೆ ಬಿದ್ದ ಪರಿಣಾಮ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂನ (KRS Dam) ಒಳಹರಿವು 11,800 ಕ್ಯೂಸೆಕ್‌ಗೆ ಏರಿಕೆಯಾಗಿದೆ.

    ಸಾಕಷ್ಟು ಆತಂಕ ಮೂಡಿಸಿದ್ದ ಕೆಆರ್‌ಎಸ್‌ನ ನೀರಿನ ಮಟ್ಟ ಇದೀಗ 2 ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಹಿನ್ನೆಲೆ ಡ್ಯಾಂಗೆ ಹರಿದು ಬರುವ ನೀರಿನ ಪ್ರಮಾಣದಲ್ಲಿ ಏರಿಕೆಯಾಗಿದೆ. ನಿನ್ನೆ (ಸೋಮವಾರ) ಬೆಳಗ್ಗೆ 5,811 ಕ್ಯೂಸೆಕ್ ಇದ್ದ ಒಳ ಹರಿವು ಇಂದು ಬೆಳಗ್ಗೆ 11,800 ಕ್ಯೂಸೆಕ್ ಏರಿಕೆಯಾಗಿದೆ.

    ಒಳ ಹರಿವು ಹೆಚ್ಚಳದಿಂದ ಮತ್ತೆ ಕೆಆರ್‌ಎಸ್ ಡ್ಯಾಂ ನೀರಿನ ಮಟ್ಟ 100 ಅಡಿ ಗಡಿ ತಲುಪಿದೆ. ಸದ್ಯ 99.50 ಅಡಿಗೆ ಕೆಆರ್‌ಎಸ್ ನೀರಿನ ಮಟ್ಟ ಏರಿಕೆಯಾಗಿದೆ. ಒಳ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ರೈತರಲ್ಲಿ ಸ್ವಲ್ಪ ಸಮಾಧಾನ ಮೂಡಿದೆ. ಮತ್ತೊಂದೆಡೆ ತಮಿಳುನಾಡಿಗೆ ನೀರು ಬಿಡುಗಡೆ ಮುಂದುವರಿಕೆಯಾಗಿದ್ದು, ಇಂದು 1,592 ಕ್ಯೂಸೆಕ್ ನೀರು ತಮಿಳುನಾಡಿಗೆ ಹೋಗುತ್ತಿದೆ. ಇದನ್ನೂ ಓದಿ: ಬೆಂಗಳೂರಿನ ನಡುರಸ್ತೆಯಲ್ಲಿ ಹೊತ್ತಿ ಉರಿದ ಬೃಹತ್ ಗಾತ್ರದ ಕ್ರೇನ್

    ಕೆಆರ್‌ಎಸ್ ಡ್ಯಾಂ ಇಂದಿನ ನೀರಿನ ಮಟ್ಟ:
    ಗರಿಷ್ಠ ಮಟ್ಟ – 124.80 ಅಡಿ
    ಇಂದಿನ ಮಟ್ಟ – 99.50 ಅಡಿ
    ಒಳ ಹರಿವು – 11,800 ಕ್ಯೂಸೆಕ್
    ಹೊರ ಹರಿವು – 1,592 ಕ್ಯೂಸೆಕ್
    ಗರಿಷ್ಠ ಸಂಗ್ರಹ ಸಾಮರ್ಥ್ಯ – 49.452 ಟಿಎಂಸಿ
    ಇಂದು ಸಂಗ್ರಹ ಇರುವ ನೀರು – 22.453 ಟಿಎಂಸಿ ಇದನ್ನೂ ಓದಿ: Breaking – ಮೆಟ್ರೋ ಹಸಿರು ಮಾರ್ಗದ ಸಂಚಾರದಲ್ಲಿ ಭಾರೀ ವ್ಯತ್ಯಯ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾವೇರಿ, ಹೇಮಾವತಿ ನೀರಿಗಾಗಿ ಮಂಗಳವಾರ ಕೆಆರ್ ಪೇಟೆ ಬಂದ್

    ಕಾವೇರಿ, ಹೇಮಾವತಿ ನೀರಿಗಾಗಿ ಮಂಗಳವಾರ ಕೆಆರ್ ಪೇಟೆ ಬಂದ್

    ಮಂಡ್ಯ: ಕಾವೇರಿ (Cauvery) ಮತ್ತು ಹೇಮಾವತಿ (Hemavati) ನೀರಿಗಾಗಿ ಸೆಪ್ಟೆಂಬರ್ 26ರಂದು ಕೆಆರ್ ಪೇಟೆ (KR Pete) ಬಂದ್‌ಗೆ (Bandh) ಕರೆ ನೀಡಲಾಗಿದೆ.

    ಕಾವೇರಿ ನೀರಿನ ಜೊತೆಗೆ ಹೇಮಾವತಿ ನೀರು ಉಳಿವಿಗಾಗಿ ಬಂದ್‌ಗೆ ಕರೆ ನೀಡಲಾಗಿದೆ. ರೈತ, ಕನ್ನಡ, ದಲಿತ, ಪ್ರಗತಿಪರ ಸಂಘಟನೆಗಳು ಬದ್‌ಗೆ ಕರೆ ನೀಡಿವೆ. ಈ ಬಂದ್‌ಗೆ ಜೆಡಿಎಸ್ ಹಾಗೂ ಬಿಜೆಪಿಯೂ ಬೆಂಬಲ ಸೂಚಿಸಿವೆ. ಇದನ್ನೂ ಓದಿ: ಗೋಮಾಂಸ ಸಾಗಾಟ ಮಾಡುತ್ತಿದ್ದ ಕಾರಿಗೆ ಬೆಂಕಿ ಹಚ್ಚಿದ ಶ್ರೀರಾಮ ಸೇನೆ

    ಕೆಆರ್ ಪೇಟೆ ಭಾಗದಲ್ಲಿ ಉಪಯೋಗಕ್ಕೆ ಸಿಗುವುದು ಹೇಮಾವತಿ ನೀರು. ಕೆಆರ್‌ಎಸ್ ಡ್ಯಾಂನಲ್ಲಿ ನೀರು ಖಾಲಿಯಾದರೆ ಹೇಮಾವತಿಯಿಂದ ನೀರು ಬಿಡುಗಡೆಯಾಗಲಿದೆ. ಆಗ ಎರಡೂ ಡ್ಯಾಂನ ನೀರು ಖಾಲಿಯಾಗುವ ಆತಂಕ ಎದುರಾಗಿದೆ. ಹೀಗಾಗಿ ಎರಡು ಡ್ಯಾಂ ನೀರು ರಕ್ಷಣೆಗೆ ಆಗ್ರಹಿಸಿ ಕೆಆರ್ ಪೇಟೆ ಬಂದ್‌ಗೆ ಕರೆ ನೀಡಲಾಗಿದೆ. ಇದನ್ನೂ ಓದಿ: ಬಂದ್ ಮಾಡಿದರೆ ಬ್ರ್ಯಾಂಡ್‌ ಬೆಂಗಳೂರಿಗೆ ಧಕ್ಕೆ – ಡಿಕೆಶಿ ಹೇಳಿಕೆಗೆ ಆಕ್ರೋಶ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 1 ವರ್ಷದಲ್ಲಿ 3 ಬಾರಿ ಭರ್ತಿ – ದಾಖಲೆ ಬರೆದ ಕೆಆರ್‌ಎಸ್ ಡ್ಯಾಂ

    1 ವರ್ಷದಲ್ಲಿ 3 ಬಾರಿ ಭರ್ತಿ – ದಾಖಲೆ ಬರೆದ ಕೆಆರ್‌ಎಸ್ ಡ್ಯಾಂ

    ಮಂಡ್ಯ: 1 ವರ್ಷದ ಅವಧಿಯಲ್ಲಿ ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಜಲಾಶಯ (KRS Dam) 3 ಬಾರಿ ಭರ್ತಿಯಾಗುವ ಮೂಲಕ ದಾಖಲೆ ಬರೆದಿದೆ.

    ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮವಾಗಿ ಮಳೆಯಾಗುತ್ತಿರುವ ಕಾರಣ ಕೆಆರ್‌ಎಸ್ ಡ್ಯಾಂಗೆ ಒಳಹರಿವಿನ ಪ್ರಮಾಣ ಕಳೆದ 4-5 ದಿನಗಳಿಂದ ಹೆಚ್ಚಳವಾಗಿದೆ. ಹೀಗಾಗಿ ಕೆಆರ್‌ಎಸ್ ಜಲಾಶಯ ಈ ವರ್ಷ 3ನೇ ಬಾರಿಗೆ ಭರ್ತಿಯಾಗಿದೆ.

    ಈ ವರ್ಷ ಜುಲೈ, ಸೆಪ್ಟೆಂಬರ್ ಹಾಗೂ ಇದೀಗ ಅಕ್ಟೋಬರ್ ತಿಂಗಳಿನಲ್ಲಿ ಕೆಆರ್‌ಎಸ್ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿದೆ. ಡ್ಯಾಂ ಸಂಪೂರ್ಣವಾಗಿ ಭರ್ತಿಯಾಗಿರುವುದು ಹಳೆ ಮೈಸೂರು ಭಾಗದ ಜನರಲ್ಲಿ ಹಾಗೂ ಮಂಡ್ಯದ ರೈತರಲ್ಲಿ ಮಂದಹಾಸ ಮೂಡಿಸಿದೆ. ಇದನ್ನೂ ಓದಿ: ಉಗ್ರರನ್ನು ಮಟ್ಟ ಹಾಕಲು ಉತ್ತರ ಭಾರತದ ಹಲವೆಡೆ NIA ರೇಡ್

    krs dam

    124.80 ಗರಿಷ್ಠ ಅಡಿಗಳಿರುವ ಕೆಆರ್‌ಎಸ್ ಡ್ಯಾಂ ಅಷ್ಟೇ ಅಡಿಗಳಷ್ಟು ತುಂಬಿ ಭರ್ತಿಯಾಗಿದೆ. ಒಳಹರಿವಿನ ಪ್ರಮಾ 36,733 ಕ್ಯೂಸೆಕ್ ಇದ್ದು, ಹೊರ ಹರಿವಿನ ಪ್ರಮಾಣ 33,633 ಕ್ಯೂಸೆಕ್ ಇದೆ. ಕೆಆರ್‌ಎಸ್ ಡ್ಯಾಂ 49.452 ಟಿಎಂಸಿ ಗರಿಷ್ಠ ಸಂಗ್ರಹದ ಸಾಮರ್ಥ್ಯವಿದ್ದು, ಸಂಪೂರ್ಣವಾಗಿ 49.452 ಟಿಎಂಸಿ ನೀರು ಭರ್ತಿಯಾಗಿದೆ. ಇದನ್ನೂ ಓದಿ: ಸರ್ಕಾರಿ ನೌಕರನಿಗೆ ಕಪಾಳಮೋಕ್ಷ ಮಾಡಿದ ಹಾಸನ ಎಸಿ

    Live Tv
    [brid partner=56869869 player=32851 video=960834 autoplay=true]

  • 3 ವರ್ಷಗಳ ಬಳಿಕ ಕೆಆರ್‌ಎಸ್ ಡ್ಯಾಂನಿಂದ 1 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ರಿಲೀಸ್ – ಪ್ರವಾಹದ ಭೀತಿ

    3 ವರ್ಷಗಳ ಬಳಿಕ ಕೆಆರ್‌ಎಸ್ ಡ್ಯಾಂನಿಂದ 1 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ರಿಲೀಸ್ – ಪ್ರವಾಹದ ಭೀತಿ

    ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂಗೆ ಅಪಾರ ಪ್ರಮಾಣದಲ್ಲಿ ನೀರು ಬರುತ್ತಿದೆ. ಈ ಹಿನ್ನೆಲೆ 3 ವರ್ಷಗಳ ಬಳಿಕ ಕೆಆರ್‌ಎಸ್ ಡ್ಯಾಂನಿಂದ 1 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಇದರಿಂದ ಪ್ರವಾಹದ ಭೀತಿ ಎದುರಾಗಿದೆ.

    ಕೆಆರ್‌ಎಸ್ ಡ್ಯಾಂನಿಂದ 1 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ಬಿಟ್ಟಿರುವ ಕಾರಣ ಕಾವೇರಿ ಕೊಳ್ಳದ ಜನರು ಪ್ರವಾಹದ ಭೀತಿಯನ್ನು ಎದುರಿಸುವ ಸ್ಥಿತಿ ಬಂದೊದಗಿದೆ. ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ, ಕಾರೇಕುರ, ಮಜ್ಜಿಗೆ ಪುರ, ಬಲಮುರಿ, ಹೊಂಗಹಳ್ಳಿ, ಪಾಲಹಳ್ಳಿ, ಶ್ರೀರಂಗಪಟ್ಟಣ, ಎಣ್ಣೆಹೊಳೆ ಕೊಪ್ಪಲು, ರಾಮಪುರ, ಮೇಳಾಪುರ, ಚಂದಗಾಲು, ಹಂಗರಹಳ್ಳಿ, ಮರಳಗಾಲ, ದೊಡ್ಡಪಾಳ್ಯ, ಚಿಕ್ಕಪಾಳ್ಯ, ಮಹದೇವಪುರ ಸೇರಿದಂತೆ 40ಕ್ಕೂ ಅಧಿಕ ಗ್ರಾಮಗಳ ಜಮೀನುಗಳು ಜಲಾವೃತವಾಗಿವೆ. ಇದನ್ನೂ ಓದಿ: ಪಾಕಿಸ್ತಾನಿ ಸಹೋದರಿಯಿಂದ ಮೋದಿಗೆ ಬಂತು ರಕ್ಷಾ ಬಂಧನ – 2024ರ ಚುನಾವಣೆಗೆ ಹಾರೈಕೆ

    ರಂಗನತಿಟ್ಟು ಪಕ್ಷಿಧಾಮ, ಪಶ್ಚಿಮ ವಾಹಿನಿ, ಗೋಸಾಯ್ ಘಾಟ್, ಬಿಜಿ ಹೊಳೆ ಸಮೀಪದ ದೇವಸ್ಥಾನಗಳು, ನಿಮಿಷಾಂಭ ದೇವಸ್ಥಾನದ ಸ್ನಾನಘಟ್ಟಗಳು ಜಲಾವೃತವಾಗಿವೆ. ಇದಲ್ಲದೇ ಶ್ರೀರಂಗಪಟ್ಟಣದ ಐತಿಹಾಸಿಕ ವೆಲ್ಲೆಸ್ಲಿ ಸೇತುವೆ ಮುಳುಗಡೆಯ ಅಂಚಿಗೆ ಬಂದಿದೆ. 1 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ಬರುತ್ತಿರುವ ಕಾರಣ 200 ವರ್ಷಗಳ ಇತಿಹಾಸವಿರುವ ವೆಲ್ಲೆಸ್ಲಿ ಸೇತುವೆ ಅಪಾಯದ ಅಂಚಿನಲ್ಲಿದೆ. ಹೀಗಾಗಿ ವೆಲ್ಲೆಸ್ಲಿ ಸೇತುವೆ ಮೇಲೆ ಸಂಚಾರ ಬಂದ್ ಮಾಡಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಇಂದು 1,837 ಮಂದಿಗೆ ಕೊರೊನಾ ಸೋಂಕು – 4 ಸಾವು

    ಕಾವೇರಿ ನದಿ ಪಾತ್ರದ ಎಲ್ಲಾ ಪ್ರವಾಸಿ ಸ್ಥಳಗಳು ಬಂದ್ ಆಗಿದ್ದು, ನದಿಯಿಂದ 1 ಕಿ.ಮೀ ವ್ಯಾಪ್ತಿಯ ವರೆಗೆ ನಿಷೇಧ ಹೇರಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಆಲಮಟ್ಟಿ ಡ್ಯಾಂ ಆವರಣಕ್ಕೆ ನುಗ್ಗಿದ ಬುರ್ಖಾಧಾರಿ – ಅವಳಲ್ಲ ಅವನು

    ಆಲಮಟ್ಟಿ ಡ್ಯಾಂ ಆವರಣಕ್ಕೆ ನುಗ್ಗಿದ ಬುರ್ಖಾಧಾರಿ – ಅವಳಲ್ಲ ಅವನು

    ವಿಜಯಪುರ: ಡ್ಯಾಂ ಪ್ರವೇಶ ದ್ವಾರದಲ್ಲಿ ಬುರ್ಖಾಧಾರಿ ಆತಂಕ ಮೂಡಿಸಿದ ಸುದ್ದಿ ವಿಜಯಪುರದ ನಿಡಗುಂದಿ ತಾಲೂಕಿನ ಆಲಮಟ್ಟಿ ಡ್ಯಾಂ ಆವರಣದಲ್ಲಿ ನಡೆದಿದೆ.

    ಬೆಳಗ್ಗೆ ನಸುಕಿನ ಜಾವದಲ್ಲೇ ಬುರ್ಖಾ ಧರಿಸಿ ಡ್ಯಾಂ ಆವರಣಕ್ಕೆ ಹೋಗುತ್ತಿದ್ದ ವ್ಯಕ್ತಿ ಕಂಡು ಸ್ಥಳದಲ್ಲಿದ್ದ ಪೊಲೀಸರು ಸೇರಿದಂತೆ ಹಲವರು ದಂಗಾಗಿದ್ದಾರೆ.  ಇಷ್ಟು ಬೇಗ ಡ್ಯಾಂ ಒಳಗೆ ಪ್ರವೇಶ ನೀಡಲ್ಲ ಎಂದು ಪ್ರವೇಶ ದ್ವಾರದ ಬಳಿ ತಪಾಸಣೆ ವೇಳೆ ಪೊಲೀಸರು ಹೇಳಿದ್ದಾರೆ.

    ಈ ವೇಳೆ ಬುರ್ಖಾ ಧರಿಸಿದ್ದ ಮಹಿಳೆಯಲ್ಲ, ಪುರುಷ ಎಂದು ಪೊಲೀಸರಿಗೆ ಸಂಶಯ ವ್ಯಕ್ತವಾಗಿದೆ. ಬುರ್ಖಾಧಾರಿಯ ಧ್ವನಿಯಿಂದ ಉಂಟಾಗಿದ್ದ ಸಂಶಯದ ಹಿನ್ನೆಲೆ ಪೊಲೀಸರು ಬುರ್ಖಾಧಾರಿ ಮೇಲೆ ನಿಗಾ ವಹಿಸಿದ್ದಾರೆ. ಕೆಲ ಸಮಯದ ಬಳಿಕ ಬುರ್ಖಾಧಾರಿ ಮುಳ್ಳು ಕಂಟಿಗಳಾಚೆ ಹೋಗಿ ಬುರ್ಖಾ ತೆಗೆದು ಆಚೆ ಬಂದಿದ್ದಾರೆ. ಇದನ್ನೂ ಓದಿ: ಗಾಂಜಾ ಸಾಗಾಟ ಎಂದು ತನಿಖೆ ಮಾಡಿದ ಪೊಲೀಸರಿಗೆ ತಿಳಿಯಿತು ಕೊಲೆ ರಹಸ್ಯ 

    ಆಗ ಬುರ್ಖಾಧಾರಿ ಮಹಿಳೆಯಲ್ಲಾ ಪುರುಷ ಎಂಬುದು ಪೊಲೀಸರಿಗೆ ಬಹಿರಂಗವಾಗಿದೆ. ಆಗ ಬುರ್ಖಾಧರಿಸಿದ್ದು ಯುವಕ ಎಂಬುದನ್ನು ಕಂಡುಹಿಡಿದ ಪೊಲೀಸರು ಕೂಡಲೇ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

    ವಿಚಾರಣೆಯಲ್ಲಿ ತಿಳಿದಿದ್ದೇನು?
    ಆಲಮಟ್ಟಿ ಪೊಲೀಸರ ವಿಚಾರಣೆಯಲ್ಲಿ ತಾನು ಹಾಸನ ಜಿಲ್ಲೆಯ ಸಕಲೇಶಪುರ ನಿವಾಸಿ ಎಂದು ಯುವಕ ಹೇಳಿಕೊಂಡಿದ್ದಾನೆ. ನನ್ನ ಹೆಸರು ಕಿಶೋರ್ ಮಲ್ಲಿಕಾರ್ಜುನ್ ಸ್ವಾಮಿ. ನನ್ನಲ್ಲಿ ಹೆಣ್ತನ ಬೆಳೆಯುತ್ತಿದೆ. ಹೀಗಾಗಿ ತೃತೀಯ ಲಿಂಗಿಯಾಗಿ ಪರಿವರ್ತನೆ ಹೊಂದುತ್ತಿದ್ದೇನೆ.

    ನನಗೆ ಮದುವೆ ಬೇಡ ಎಂದರೂ ಮನೆಯಲ್ಲಿ ಒತ್ತಡ ಹೇರುತ್ತಿದ್ದಾರೆ. ಆದ್ದರಿಂದ ಮನೆ ಬಿಟ್ಟು ಬಂದಿದ್ದಾಗಿ ವಿಚಾರಣೆಯಲ್ಲಿ ಕೆಲ ವಿಚಾರಗಳನ್ನ ಕಿಶೋರ್ ಹೇಳಿದ್ದಾನೆ. ಬೆಂಗಳೂರಿನ ಬೇಕರಿ ಒಂದರಲ್ಲಿ ಕೆಲಸ ನಿರ್ವಹಿಸುತ್ತಿರುವುದಾಗಿ ತಿಳಿಸಿದ್ದಾನೆ. ಇದನ್ನೂ ಓದಿ: ಗಾಂಜಾ ಗ್ಯಾಂಗ್ ಹಿಡಿಯಲು ಹೋಗಿ ಭೀಕರ ಅಪಘಾತ: ಸ್ವಗ್ರಾಮಕ್ಕೆ ಆಗಮಿಸಿದ ಪಿಎಸ್‍ಐ ಮೃತದೇಹ 

    ಸದ್ಯ ಪೊಲೀಸರ ವಿಚಾರಣೆ ಮುಂದುವರಿದಿದ್ದು, ಆಲಮಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಕೆಆರ್‌ಎಸ್‌ ಡ್ಯಾಂ ಭರ್ತಿಗೆ 1 ಅಡಿ ಬಾಕಿ – ಕಾವೇರಿ ಕೊಳ್ಳದ ಜನರಿಗೆ ಪ್ರವಾಹದ ಭೀತಿ

    ಕೆಆರ್‌ಎಸ್‌ ಡ್ಯಾಂ ಭರ್ತಿಗೆ 1 ಅಡಿ ಬಾಕಿ – ಕಾವೇರಿ ಕೊಳ್ಳದ ಜನರಿಗೆ ಪ್ರವಾಹದ ಭೀತಿ

    ಮಂಡ್ಯ: ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ ಕೆಆರ್‌ಎಸ್‌ ಡ್ಯಾಂ ಭರ್ತಿಗೆ ಇನ್ನೊಂದು ಅಡಿಯಷ್ಟೇ ಬಾಕಿ ಇದೆ. ಈ ಸುದ್ದಿ ಈ ಭಾಗದ ರೈತರಿಗೆ ಸಂತಸ ತಂದಿದ್ರೆ ಮತ್ತೊಂದೆಡೆ ಕಾವೇರಿ ಕೊಳ್ಳದ ಜನರಿಗೆ ಪ್ರವಾಹದ ಭೀತಿ ಎದುರಾಗಿದೆ.

    ಕಾವೇರಿ ಜಲಾನಯನ ಪ್ರದೇಶದಲ್ಲಿ ಅಪಾರ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಅಣೆಕಟ್ಟಿಗೆ 30,216 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಇದರಿಂದ ಡ್ಯಾಂ ಸಂಪೂರ್ಣ ಭರ್ತಿಗೆ ಇನ್ನೊಂದು ಅಡಿಯಷ್ಟೇ ಬಾಕಿ ಇದೆ. 124.80 ಅಡಿಗಳಷ್ಟು ಇರುವ ಕೆಆರ್‌ಎಸ್‌ ಡ್ಯಾಂ ಸದ್ಯ 123.20 ಅಡಿಗಳಷ್ಟು ಭರ್ತಿಯಾಗಿದೆ. ಡ್ಯಾಂ ಭರ್ತಿಗೆ ಇನ್ನೂ ಕ್ಷಣಗಣನೆ ಇರುವ ಕಾರಣ ಡ್ಯಾಂನಿಂದ ನದಿಗೆ 106 ಅಡಿ ಮಟ್ಟದ 15 ಗೇಟ್‍ಗಳ ಮೂಲಕ 25,000 ಕ್ಯೂಸೆಕ್ ನೀರನ್ನು ಹರಿಬಿಡಲಾಗುತ್ತಿದೆ. 49.452 ಟಿಎಂಸಿ ಸಾಂದ್ರತೆ ಇರುವ ಕೆಆರ್‌ಎಸ್‌ ಡ್ಯಾಂನಲ್ಲಿ 47.800 ಟಿಎಂಸಿ ನೀರು ಇದೆ. ಇದನ್ನೂ ಓದಿ: ಕೊಡಗಿನ ಕೊಯಿನಾಡಿನಲ್ಲಿ ಕಣ್ಣೆದುರೇ ಕುಸಿದು ಬಿದ್ದ ಗುಡ್ಡ – ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ಕಾವೇರಿ

    ಒಂದು ಕಡೆ ಕೆಆರ್‌ಎಸ್‌ ಡ್ಯಾಂ 25,000 ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಹರಿಬಿಟ್ಟಿದ್ರೆ, ಇನ್ನೊಂದೆಡೆ ಕೆಆರ್‌ಎಸ್‌ ಡ್ಯಾಂ ಸಮೀಪದಲ್ಲೇ ಇರುವ ರಂಗನತಿಟ್ಟು ಪಕ್ಷಿಧಾಮ ಮುಳುಗಡೆಯ ಭೀತಿಯಲ್ಲಿ ಇದೆ. ಹೀಗಾಗಿ ರಂಗನತಿಟ್ಟು ಪಕ್ಷಿಧಾಮದಲ್ಲಿ ಪ್ರವಾಸಿಗರಿಗೆ ಬೋಟಿಂಗ್‍ನ್ನು ಬಂದ್ ಮಾಡಲಾಗಿದೆ. ಕಳೆದ ಎರಡು ವರ್ಷಗಳ ಹಿಂದೆ ಕೆಆರ್‌ಎಸ್‌ ಡ್ಯಾಂನಿಂದ 1 ಲಕ್ಷ ಕ್ಯೂಸೆಕ್ ನೀರು ಹರಿಬಿಟ್ಟಿದ್ದ ಕಾರಣ ಇಲ್ಲಿನ 40ಕ್ಕೂ ಹೆಚ್ಚು ನಡುಗಡ್ಡೆಗಳು ಹಾನಿಯಾಗಿದ್ದವು. ಇದಾದ ನಂತರ ಅರಣ್ಯ ಇಲಾಖೆ ಇಲ್ಲಿನ ನಡುಗಡ್ಡೆಗಳನ್ನು ಮತ್ತೆ ನಿರ್ಮಾಣ ಮಾಡಿತ್ತು. ಇದೀಗ ಈ ಬಾರಿಯೂ ಹೆಚ್ಚಿನ ಪ್ರಮಾಣದಲ್ಲಿ ಕೆಆರ್‌ಎಸ್‌ ಡ್ಯಾಂನಿಂದ ನೀರು ಹರಿಬಿಟ್ಟರೆ ಮತ್ತೆ ಅದೇ ರೀತಿಯ ವಾತಾವರಣ ನಿರ್ಮಾಣವಾಗುತ್ತದೆ. ಅಲ್ಲದೇ ಕಾವೇರಿ ಕೊಳ್ಳದ ಜನರಿಗೂ ಸಹ ಪ್ರವಾಹದ ಭೀತಿ ಎದುರಾಗಿದ್ದು, ಈಗಾಗಲೇ ಕಾವೇರಿ ನೀರಾವರಿ ನಿಗಮ ಕಾವೇರಿ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರಬೇಕೆಂದು ಸೂಚನೆಯನ್ನು ಸಹ ನೀಡಿದೆ. ಇದನ್ನೂ ಓದಿ: ಮೈದುಂಬಿ ಧುಮ್ಮುಕ್ಕುತ್ತಿರುವ ಗೋಕಾಕ್ ಫಾಲ್ಸ್‌ನಲ್ಲಿ ಪ್ರವಾಸಿಗರ ಹುಚ್ಚಾಟ

    Live Tv
    [brid partner=56869869 player=32851 video=960834 autoplay=true]

  • ಸಿಐಡಿಗೆ ಪ್ರಕರಣ ದಾಖಲಾಗ್ತಿದ್ದಂತೆ ಡ್ಯಾಂಗೆ ಮೊಬೈಲ್ ಎಸೆದ ಆರೋಪಿ

    ಸಿಐಡಿಗೆ ಪ್ರಕರಣ ದಾಖಲಾಗ್ತಿದ್ದಂತೆ ಡ್ಯಾಂಗೆ ಮೊಬೈಲ್ ಎಸೆದ ಆರೋಪಿ

    ಕಲಬುರಗಿ: ಪಿಎಸ್‍ಐ(PSI) ಅಕ್ರಮ ನೇಮಕಾತಿ ಪ್ರಕರಣ ಸಿಐಡಿಗೆ ದಾಖಲಾಗುತ್ತಿದ್ದಂತೆಯೇ ಕಿಂಗ್ ಪಿನ್ ಮಂಜುನಾಥ್ ಮೇಳಕುಂದಿ ತನ್ನ ಮೊಬೈಲ್ (Mobile) ಅನ್ನು ಜಲಾಶಯಕ್ಕೆ ಬಿಸಾಕಿರುವ ಪ್ರಸಂಗ ನಡೆದಿದೆ.

    ಕಲಬುರಗಿ ಜಿಲ್ಲೆ ಆಳಂದ ತಾಲೂಕಿನಲ್ಲಿರುವ ಅಮರ್ಜಾ ಡ್ಯಾಂ (Amarja Dam)ಗೆ ಮೊಬೈಲ್ ಬಿಸಾಕುವ ಮೂಲಕ ಮಂಜುನಾಥ್ ಅಕ್ರಮದ ಸಾಕ್ಷ್ಯ ನಾಶ ಮಾಡಲು ಯತ್ನಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಸಿಐಡಿ (CID) ಅಧಿಕಾರಿಗಳು ನದಿಯಲ್ಲಿರುವ ಮೊಬೈಲ್‍ಗಾಗಿ ಹುಡುಕಾಟ ಆರಂಭಿಸಿದ್ದಾರೆ. ಡಿವೈಎಸ್ ಪಿ ಪ್ರಕಾಶ್ ರಾಠೋಡ ನೇತೃತ್ವದಲ್ಲಿ ಐದು ಜನ ಸ್ವಿಮ್ಮಿಂಗ್ ಮುಳುಗುತಜ್ಞರು ಹುಡುಕಾಟ ನಡೆಯುತ್ತಿದೆ. ಇದನ್ನೂ ಓದಿ: PSI ನೇಮಕಾತಿಯಲ್ಲಿ ಅಕ್ರಮ ಪ್ರಕರಣ- ಆರೋಪಿ ಪತಿಯನ್ನೇ ಜೈಲಿಗಟ್ಟಿದ ಜೈಲರ್ ಪತ್ನಿ!

    ಇತ್ತ ಪಿಎಸ್‍ಐ ಪರೀಕ್ಷೆ ಅಕ್ರಮ ಪ್ರಕರಣ ಬಗೆದಷ್ಟು ಬಯಲಾಗ್ತಿದೆ. ಇಡೀ ಪ್ರಕರಣದ ಕಿಂಗ್ ಪಿನ್ ಕಾಶಿನಾಥ ಚಿಲ್ ಜ್ಞಾನ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೇರಿ ಕ್ರಿಮಿನಲ್ ಬುದ್ಧಿ ಉಪಯೋಗಿಸಿ ಮುಖ್ಯೋಪಾಧ್ಯಾಯನಾದ. ಶಾಲೆಯ ಉಸ್ತುವಾರಿ ವಹಿಸಿಕೊಂಡು ಲಕ್ಷ ಲಕ್ಷ ಲೂಟಿ ಮಾಡಿದ. ಈ ನಡುವೆ ದಿವ್ಯಾ ಹಾಗರಗಿ ಮತ್ತು ರಾಜೇಶ್ ಹಾಗರಗಿ ವಿಶ್ವಾಸ ಗಳಿಸಿದ. ಈ ಹಿನ್ನೆಲೆಯಲ್ಲಿ ಕಾಶಿನಾಥ್‍ನನ್ನು ನಂಬಿ ದಿವ್ಯಾ ಹಾಗರಗಿ ಸಂಪೂರ್ಣ ಶಾಲೆಯ ಜವಾಬ್ದಾರಿ ಕೊಟ್ಟಿದ್ದಳು.

    Divya hagaragi (2)

    ತಾನು ಹೆಡ್ ಮಾಸ್ಟರ್ ಆದ ಬಳಿಕ ಅದೆ ಶಾಲೆಯಲ್ಲಿ ತನ್ನ ಪತ್ನಿಗೆ ನೌಕರಿಗೆ ಸೇರಿಸಿದ. ಪರೀಕ್ಷೆಯಲ್ಲಿ ಬೇರೆ ಶಿಕ್ಷಕರನ್ನ ಅಕ್ರಮಕ್ಕೆ ಬಳಸಿಕೊಂಡಿದ್ದ. ತನ್ನ ಪತ್ನಿಗೆ ಪರೀಕ್ಷಾ ಅಕ್ರಮದಿಂದ ದೂರ ಇಟ್ಟಿದ್ದ. ತುತ್ತು ಅನ್ನಕ್ಕೆ ಪರದಾಡ್ತಿದ್ದ ಕಾಶಿನಾಥ ಕಡಿಮೆ ಸಮಯದಲ್ಲಿ ಕೊಟ್ಯಾಧೀಶ ನಾಗಿದ್ದ. ಕಳೆದ ಕೆಲ ವರ್ಷಗಳ ಹಿಂದೆ 50 ಲಕ್ಷಕ್ಕೂ ಅಧಿಕ ಹಣ ಖರ್ಚು ಮಾಡಿ ಮನೆ ಕಟ್ಟಿದ್ದ ಕಾಶಿನಾಥ ಕಳೆದ ವರ್ಷ ಕಾರು ಖರೀದಿಸಿದ್ದ.

  • ಮುತ್ಯಾಲಮಡುವು ಗಡಿಭಾಗದಲ್ಲಿ ಚೆಕ್ ಡ್ಯಾಂ ನಿರ್ಮಾಣಕ್ಕೆ ಗುದ್ದಲಿ ಪೂಜೆ

    ಮುತ್ಯಾಲಮಡುವು ಗಡಿಭಾಗದಲ್ಲಿ ಚೆಕ್ ಡ್ಯಾಂ ನಿರ್ಮಾಣಕ್ಕೆ ಗುದ್ದಲಿ ಪೂಜೆ

    ಆನೇಕಲ್: ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ವಣಕನಹಳ್ಳಿ ಗ್ರಾಮ ಪಂಚಾಯಿತಿ ಮುತ್ಯಾಲಮಡುವು ವ್ಯಾಪ್ತಿಯಲ್ಲಿ ಇಂದು ಡ್ಯಾಂ ನಿರ್ಮಾಣಕ್ಕೆ ಗುದ್ದಲಿ ಪೂಜೆ ಮಾಡಲಾಯಿತು.

    ವಣಕನಹಳ್ಳಿ ಗ್ರಾಮಪಂಚಾಯತಿಯ ಚೂಡೇನ ಹಳ್ಳಿ, ಸುಣವಾರ, ಸೋಲೂರು, ಮೆಣಸನಹಳ್ಳಿ, ಪಣಕನಹಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿ ನೀರಿನ ಅಭಾವ ಬಹಳಷ್ಟು ಇದ್ದು, ಈ ಸಮಸ್ಯೆಯನ್ನು ನೀಗಿಸಲು ಹಲವು ವರ್ಷಗಳಿಂದ ಪಂಚಾಯತಿ ಅಧಿಕಾರಿಗಳು ಹಾಗೂ ಸದಸ್ಯರು ಸಾಕಷ್ಟು ಪ್ರಯತ್ನ ಪಡುತ್ತಿದ್ದರು. ಈ ವಿಚಾರವಾಗಿ ಈಗಾಗಲೇ ಅನೇಕ ಬಾರಿ ಚರ್ಚೆಗಳಾಗಿದ್ದರೂ, ಸಹ ಇದಕ್ಕೊಂದು ಶಾಶ್ವತ ಪರಿಹಾರ ಕಲ್ಪಿಸಲು ಸಾಧ್ಯವಾಗಿರಲಿಲ್ಲ. ಇದನ್ನೂ ಓದಿ: ಗಿಣಿರಾಮನ ರಾಣಿಗೆ ಮೋಹಕ ತಾರೆ ಕೊಟ್ರು ಕಾಂಪ್ಲಿಮೆಂಟ್

    ಇದೀಗ ಒಂದು ಖಾಸಗಿ ಕಂಪನಿ ಕಾಂಟಿನೆಂಟಲ್ ಪ್ರೈವೇಟ್ ಲಿಮಿಟೆಡ್ ಈ ಸಮಸ್ಯೆಗೆ ಪರಿಹಾರ ಕಲ್ಪಿಸುವ ಸಲುವಾಗಿ ಚೆಕ್ ಡ್ಯಾಮ್ ನಿರ್ಮಾಣ ಕಾರ್ಯಕ್ಕೆ ಮುಂದಾಗಿದೆ. ಈ ಕಂಪನಿ ಸುಮಾರು ನಾಲ್ಕು ದಶಲಕ್ಷ ಲೀಟರ್ ನಷ್ಟು ನೀರು ಶೇಖರಣೆಯಾಗುವಂತಹ ಚೆಕ್ ಡ್ಯಾಂ ನಿರ್ಮಾಣಕ್ಕೆ ಮುಂದಾಗಿದ್ದು, ವನಕನಹಳ್ಳಿ ಗ್ರಾಮ ಪಂಚಾಯತಿ ಸಹಯೋಗದಲ್ಲಿ ಇಂದು ಗುದ್ದಲಿ ಪೂಜೆ ನೆರವೇರಿದೆ.

    ಚೂಡೇನಹಳ್ಳಿ ಗ್ರಾಮದ ಪಕ್ಕದಲ್ಲಿ ಮುತ್ಯಾಲಮಡು ಜಲಪಾತದ ಕಾಲುವೆ ಹಾದು ಹೋಗುತ್ತಿದ್ದು, ಇದೇ ನೀರಿಗೆ ಸಿಎಸ್‌ಆರ್ ಫಂಡ್ ಮೂಲಕ ಕಾಂಟಿನೆಂಟಲ್ ಪ್ರೈವೇಟ್ ಲಿಮಿಟೆಡ್ ಚೆಕ್ ಡ್ಯಾಂ ನಿರ್ಮಾಣ ಮಾಡಲು ಮುಂದಾಗಿದೆ. ಈ ನೀರು ಶೇಖರಣೆಯಾದರೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅನೇಕ ಹಳ್ಳಿಗಳಿಗೆ ನೀರಿನ ಸಮಸ್ಯೆ ಪರಿಹಾರವಾಗುತ್ತದೆ. ಇದನ್ನೂ ಓದಿ: ಆನ್‍ಲೈನ್ ಪಾಠ ಕೇಳಿ ಕುಗ್ಗಿದ್ದ ಮಕ್ಕಳಿಗೆ ವಿಶೇಷ ತರಬೇತಿ ನೀಡಿದ ಸುರಾನ ವಿದ್ಯಾಲಯ

    ಜೊತೆಗೆ ಕೃಷಿ ಚಟುವಟಿಗೆಗಳಿಗೆ ಉಪಯೋಗವಾಗುತ್ತದೆ. ಕೇವಲ ಎರಡು ವರ್ಷಗಳಲ್ಲಿ ನಿರ್ಮಾಣ ಕಾರ್ಯ ಮುಗಿದು ಡ್ಯಾಂ ನೀರು ಬಳಸುವಂತೆ ಆಗುತ್ತೆ ಎಂದು ಕಂಪೆನಿ ಭರವಸೆಯನ್ನು ನೀಡಿದೆ. ಇದರಿಂದ ಅಲ್ಲಿನ ಗ್ರಾಮಸ್ಥರು ನಿಟ್ಟುಸಿರು ಬಿಡುವಂತಾಗಿದೆ ಎಂದು ಪಂಚಾಯತಿ ಅಧ್ಯಕ್ಷರು ಅನುಪಮಾ ತಿಳಿಸಿದ್ದಾರೆ.

  • ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ಖಂಡಿಸಿ ಪ್ರತಿಭಟನೆ

    ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ಖಂಡಿಸಿ ಪ್ರತಿಭಟನೆ

    ಮಂಡ್ಯ: ಕೆಆರ್‌ಎಸ್‌ ಜಲಾಶಯ ಭರ್ತಿಗೂ ಮುನ್ನ ತಮಿಳುನಾಡಿಗೆ ನೀರು ಹರಿಸುತ್ತಿರುವ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣದಲ್ಲಿ ಮಂಡ್ಯ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಾಣವಾಗಿರುವ ಸೇತುವೆ ಕೆಳ ಭಾಗ ನಿಂತು ಮಂಡ್ಯ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದ್ದಾರೆ. ಕೆಆರ್‌ಎಸ್‌ ಜಲಾಶಯ ಭರ್ತಿಯಾಗುವ ಮೊದಲೇ ಅಧಿಕಾರಿಗಳು ತಮಿಳುನಾಡಿಗೆ ಐದು ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು ಹರಿಸುತ್ತಿರುವುದು ಖಂಡನೀಯ. ಈಗಾಗಲೇ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯೂ ಕಡಿಮೆಯಾಗಿದೆ. ಹೀಗಾಗಿ ಕೆಆರ್‌ಎಸ್‌ ಜಲಾಶಯಕ್ಕೆ ಬರುವ ಒಳಹರಿವು ಸಹ ಕಡಿಮೆಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ನೀರು ಹರಿಸಬಾರದು ಎಂದು ಆಗ್ರಹಿಸಿದರು. ಇದನ್ನೂ ಓದಿ: ಕೆಆರ್‌ಎಸ್‌ ಭರ್ತಿಗೂ ಮುನ್ನ ತಮಿಳುನಾಡಿಗೆ ನೀರು – ರೈತರಿಂದ ಆಕ್ರೋಶ

    ಅಧಿಕಾರಿಗಳು ನಿನ್ನೆಯಿಂದ ತಮಿಳುನಾಡಿಗೆ ಐದು ಸಾವಿರ ಕ್ಯೂಸೆಕ್ ನೀರು ಹರಿಸುತ್ತಿರುವುದು ಈ ಭಾಗದ ಜನರಿಗೆ ಹಾಗೂ ರೈತರಿಗೆ ಮಾಡುವ ದ್ರೋಹವಾಗಿದೆ. ಈ ಕೂಡಲೇ ಅಧಿಕಾರಿಗಳು ನೀರು ಬಿಡುವುದನ್ನು ನಿಲ್ಲಸಬೇಕೆಂದು ಒತ್ತಾಯಿಸಿದರು.

    ನೀರಿನ ಮಟ್ಟ ಎಷ್ಟಿದೆ?

    ನೀರಿನ ಇಂದಿನ ಮಟ್ಟ- 93.60 ಅಡಿ
    ಡ್ಯಾಂ ನ ಗರಿಷ್ಠ ಮಟ್ಟ 124.80 ಅಡಿ
    ಒಳಹರಿವು – 19,714 ಕ್ಯೂಸೆಕ್
    ಹೊರ ಹರಿವು- 5401 ಕ್ಯೂಸೆಕ್
    ನೀರಿನ ಸಂಗ್ರಹ – 18.199 ಟಿಎಂಸಿ
    ಗರಿಷ್ಟ ಸಂಗ್ರಹ – 49.452 ಟಿಎಂಸಿ