Tag: ಡ್ರೈವರ್

  • Haveri | ರಸ್ತೆ ಮಧ್ಯೆ ಬಸ್ ನಿಲ್ಲಿಸಿ ನಮಾಜ್ – ಡ್ರೈವರ್ ಅಮಾನತು

    Haveri | ರಸ್ತೆ ಮಧ್ಯೆ ಬಸ್ ನಿಲ್ಲಿಸಿ ನಮಾಜ್ – ಡ್ರೈವರ್ ಅಮಾನತು

    ಹಾವೇರಿ: ರಸ್ತೆ ಮಧ್ಯೆ ಬಸ್ ನಿಲ್ಲಿಸಿ ನಮಾಜ್ (Namaz) ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಮಾಜ್ ಮಾಡಿದ ಡ್ರೈವರ್ (Driver) ಕಂ ಕಂಡಕ್ಟರ್‌ನನ್ನು ಅಮಾನತು (Suspend) ಮಾಡಲಾಗಿದೆ.

    ಎಆರ್ ಮುಲ್ಲಾ ಅಮಾನತುಗೊಂಡ ಡ್ರೈವರ್. ವಿಶಾಲಗಡದಿಂದ ಹಾನಗಲ್‌ಗೆ ಬರುವ ರಸ್ತೆ ಮಧ್ಯೆ ಬಸ್ ನಿಲ್ಲಿಸಿ ಎಆರ್ ಮುಲ್ಲಾ ನಮಾಜ್ ಮಾಡಿದ್ದರು. ಬಸ್ಸಿನಲ್ಲಿಯೇ ನಮಾಜ್ ಮಾಡಿದ ದೃಶ್ಯವನ್ನು ಪ್ರಯಾಣಿಕರೊಬ್ಬರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದರು. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈತನ ಮೇಲೆ ಕ್ರಮಕೈಗೊಳ್ಳುವಂತೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದರು.  ಇದನ್ನೂ ಓದಿ: Haveri | ಮಾರ್ಗ ಮಧ್ಯೆ ಸಾರಿಗೆ ಬಸ್ ನಿಲ್ಲಿಸಿ ನಮಾಜ್ ಮಾಡಿದ ಡ್ರೈವರ್

    ವೀಡಿಯೋ ವೈರಲ್ ಆದ ಬೆನ್ನಲ್ಲೇ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಬಸ್‌ನಲ್ಲಿ ನಮಾಜ್ ಮಾಡಿದ್ದ ಡ್ರೈವರ್ ಮೇಲೆ ತನಿಖೆಗೆ ಸೂಚಿಸಿದ್ದರು. ಸಾರಿಗೆ ಸಚಿವರ ಸೂಚನೆ ಹಿನ್ನೆಲೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತನಿಖೆ ನಡೆಸಿ ಚಾಲಕ ಎಆರ್ ಮುಲ್ಲಾ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ರಸ್ತೆ ಮಧ್ಯೆ ಬಸ್ ನಿಲ್ಲಿಸಿ ಡ್ರೈವರ್ ನಮಾಜ್ – ತನಿಖೆಗೆ ರಾಮಲಿಂಗಾ ರೆಡ್ಡಿ ಆದೇಶ

  • ರಸ್ತೆ ಮಧ್ಯೆ ಬಸ್ ನಿಲ್ಲಿಸಿ ಡ್ರೈವರ್ ನಮಾಜ್ – ತನಿಖೆಗೆ ರಾಮಲಿಂಗಾ ರೆಡ್ಡಿ ಆದೇಶ

    ರಸ್ತೆ ಮಧ್ಯೆ ಬಸ್ ನಿಲ್ಲಿಸಿ ಡ್ರೈವರ್ ನಮಾಜ್ – ತನಿಖೆಗೆ ರಾಮಲಿಂಗಾ ರೆಡ್ಡಿ ಆದೇಶ

    ಬೆಂಗಳೂರು: ಹಾವೇರಿಯಲ್ಲಿ (Haveri) ರಸ್ತೆ ಮಧ್ಯೆ ಬಸ್ ನಿಲ್ಲಿಸಿ ಡ್ರೈವರ್ ಕಂ ಕಂಡಕ್ಟರ್ ನಮಾಜ್ (Driver Namaz) ಮಾಡಿದ ವೀಡಿಯೋ ವೈರಲ್ ಆದ ಬೆನ್ನಲ್ಲೇ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಆದೇಶಿಸಿದ್ದಾರೆ.

    ಈ ಕುರಿತು ಹುಬ್ಬಳ್ಳಿಯ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕರಿಗೆ ಪತ್ರ ಬರೆದ ರಾಮಲಿಂಗಾ ರೆಡ್ಡಿ, ಸೂಕ್ತ ತನಿಖೆ ನಡೆಸಲು ಸೂಚನೆ ನೀಡಿದ್ದಾರೆ. ಇದನ್ನೂ ಓದಿ: Haveri | ಮಾರ್ಗ ಮಧ್ಯೆ ಸಾರಿಗೆ ಬಸ್ ನಿಲ್ಲಿಸಿ ನಮಾಜ್ ಮಾಡಿದ ಡ್ರೈವರ್

    ಪತ್ರದಲ್ಲಿ ಏನಿದೆ?
    ಏ.29ರಂದು ಸಂಜೆ ಹುಬ್ಬಳ್ಳಿಯಿಂದ ಹಾವೇರಿಗೆ ಕಾರ್ಯಾಚರಣೆಯಾಗುತ್ತಿದ್ದ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಚಾಲಕ ಕಂ ನಿರ್ವಾಹಕ ಮಾರ್ಗ ಮಧ್ಯೆ ಬಸ್ ನಿಲ್ಲಿಸಿ ನಮಾಜ್ ಮಾಡಿರುವ ಬಗ್ಗೆ ಪ್ರಯಾಣಿಕರೊಬ್ಬರು ಮಾಡಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿದೆ. ಇದನ್ನೂ ಓದಿ: ಪಾಪಿ ಪಾಕಿಸ್ತಾನ – ಗಡಿಯಲ್ಲಿ ಸುರಂಗ ಕುತಂತ್ರ ತನಿಖೆಗೆ ಬಿಎಸ್‌ಎಫ್‌ಗೆ ನಿರ್ದೇಶನ

    ಸರ್ಕಾರಿ ಸೇವೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಕೆಲವೊಂದು ನೀತಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕಾಗಿರುತ್ತದೆ. ಪ್ರತಿಯೊಬ್ಬ ವ್ಯಕ್ತಿಗೂ ಧಾರ್ಮಿಕ ಸ್ವಾತಂತ್ರ‍್ಯದ ಹಕ್ಕಿದ್ದರೂ ಸಹ ಸಾರ್ವಜನಿಕ ಸೇವೆಯಲ್ಲಿರುವವರು, ಕರ್ತವ್ಯದ ವೇಳೆ ಹೊರತುಪಡಿಸಿ ತಮ್ಮ ತಮ್ಮ ಧರ್ಮವನ್ನು ಪಾಲಿಸಬಹುದಾಗಿರುತ್ತದೆ. ಆದರೆ ಕರ್ತವ್ಯದ ಸಮಯದಲ್ಲಿ ಮಾರ್ಗ ಮಧ್ಯದಲ್ಲಿ ಬಸ್ ಅನ್ನು ನಿಲ್ಲಿಸಿ, ಬಸ್‌ನಲ್ಲಿ ಪ್ರಯಾಣಿಕರು ಇದ್ದಾಗ್ಯೂ ಸಹ ನಮಾಜ್ ಮಾಡಿರುವುದು ಆಕ್ಷೇಪಾರ್ಹ. ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟ್ರ್ಯಾಕ್ಟರ್, ಓರ್ವ ಕಾರ್ಮಿಕ ಸಾವು, 8 ಜನರಿಗೆ ಗಾಯ

    ಈ ವಿಡಿಯೋ ಬಗ್ಗೆ ಕೂಡಲೇ ತನಿಖೆ ನಡೆಸಿ, ಸಂಬಂಧಪಟ್ಟ ಸಿಬ್ಬಂದಿ ತಪ್ಪಿತಸ್ಥರೆಂದು ಕಂಡುಬಂದಲ್ಲಿ ಸೂಕ್ತ ಶಿಸ್ತಿನ ಕ್ರಮ ಜರುಗಿಸಲು ಸೂಚಿಸಿದೆ. ಇನ್ನು ಮುಂದೆ ಈ ರೀತಿಯ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಬೇಕು ಎಂದು ಆದೇಶಿಸಿದ್ದಾರೆ. ಇದನ್ನೂ ಓದಿ: ಬಿಹಾರ ಚುನಾವಣೆಗಾಗಿ ಕೇಂದ್ರ ಜನಗಣತಿಗೆ ಮುಂದಾಗಿದೆ: ಸಂತೋಷ್ ಲಾಡ್

  • Haveri | ಮಾರ್ಗ ಮಧ್ಯೆ ಸಾರಿಗೆ ಬಸ್ ನಿಲ್ಲಿಸಿ ನಮಾಜ್ ಮಾಡಿದ ಡ್ರೈವರ್

    Haveri | ಮಾರ್ಗ ಮಧ್ಯೆ ಸಾರಿಗೆ ಬಸ್ ನಿಲ್ಲಿಸಿ ನಮಾಜ್ ಮಾಡಿದ ಡ್ರೈವರ್

    ಹಾವೇರಿ: ಸಾರಿಗೆ ಬಸ್ ನಿಲ್ಲಿಸಿ ಹಾವೇರಿ ಮಾರ್ಗ ಮಧ್ಯದಲ್ಲಿ ಕಂಡಕ್ಟರ್ ಕಂ ಡ್ರೈವರ್(Driver) ನಮಾಜ್ (Namaz) ಮಾಡಿದ ವೀಡಿಯೋ ವೈರಲ್ ಆಗಿದೆ.

    ಹಾನಗಲ್ ಟು ವಿಶಾಲಗಡ್ ಬಸ್ ಡ್ರೈವರ್ ಕಂ ಕಂಡಕ್ಟರ್ ಬಸ್‌ನಲ್ಲೇ ನಮಾಜ್ ಮಾಡಿದ್ದಾರೆ. ಮಂಗಳವಾರ ಸಂಜೆ ಹುಬ್ಬಳ್ಳಿ ಮತ್ತು ಹಾವೇರಿ ಮಾರ್ಗ ಮಧ್ಯದಲ್ಲಿ ಬಸ್ ನಿಲ್ಲಿಸಿ ನಮಾಜ್ ಸಮಯಕ್ಕೆ ಡ್ರೈವರ್ ನಮಾಜ್ ಮಾಡಿದ್ದಾರೆ. ಇದನ್ನೂ ಓದಿ: ನಾವು ಬಿರುಗಾಳಿ ಬೀಸಿದ್ರೂ ʻಅಲ್ಲಾಹು ಅಕ್ಬರ್ʼ ಅಂತೀವಿ – ಪಹಲ್ಗಾಮ್ ಜಿಪ್‌ಲೈನ್ ಆಪರೇಟರ್ ತಂದೆ

    ಇದನ್ನು ನೋಡಿದ ಬಸ್ಸಿನಲ್ಲಿದ್ದ ಪ್ರಯಾಣಿಕರು ಒಂದು ಕ್ಷಣ ದಂಗಾಗಿದ್ದಾರೆ. ಪ್ರಯಾಣಿಕರೊಬ್ಬರು ಇದರ ವೀಡಿಯೋ ಮಾಡಿ ವೈರಲ್ ಮಾಡಿದ್ದಾರೆ. ಕರ್ತವ್ಯದ ಅವಧಿಯಲ್ಲಿಯೇ ನಮಾಜ್ ಮಾಡಿದ್ದು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಆತನ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲೆಯ ಜನರು ಆಗ್ರಹಿಸಿದ್ದಾರೆ.‌ ಇದನ್ನೂ ಓದಿ: ಕುಡುಪು ಕ್ರಿಕೆಟ್ ಮೈದಾನದಲ್ಲಿ ವ್ಯಕ್ತಿ ಕೊಲೆ ಕೇಸ್ – 20 ಆರೋಪಿಗಳು ಬಂಧನ

  • ಬಿಎಂಟಿಸಿ ಡಿಪೋ ಮ್ಯಾನೇಜರ್ ಕಚೇರಿ ಎದುರೇ ಚಾಲಕ ಆತ್ಮಹತ್ಯೆ

    ಬಿಎಂಟಿಸಿ ಡಿಪೋ ಮ್ಯಾನೇಜರ್ ಕಚೇರಿ ಎದುರೇ ಚಾಲಕ ಆತ್ಮಹತ್ಯೆ

    ಚಿಕ್ಕಬಳ್ಳಾಪುರ: ಬಿಎಂಟಿಸಿ ಬಸ್ (BMTC BUS) ಡಿಪೋದಲ್ಲಿ ಮ್ಯಾನೇಜರ್ ಕಚೇರಿ ಎದುರೇ ಚಾಲಕ ಕಂ ನಿರ್ವಾಹಕ ಆತ್ಮಹತ್ಯೆಗೆ (Suicide) ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ (Devanahalli) ನಡೆದಿದೆ.

    ಆವತಿ ಗ್ರಾಮದ ನಾಗೇಶ್ (45) ಆತ್ಮಹತ್ಯೆಗೆ ಶರಣಾದ ನೌಕರ. ಕಳೆದ ರಾತ್ರಿ ಡಿಪೋಗೆ ಆಗಮಿಸಿದ ನಾಗೇಶ್ ಮ್ಯಾನೇಜರ್ ಕಚೇರಿ ಎದುರೇ ನೇಣಿಗೆ ಶರಣಾಗಿದ್ದಾರೆ. ಬೆಳಗ್ಗೆ ಸಿಬ್ಬಂದಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

    ನಾಗೇಶ್ ಕೆಲಸಕ್ಕೆ ಪದೇ ಪದೇ ರಜೆ ಹಾಕುತ್ತಿದ್ದ ಎನ್ನಲಾಗಿದ್ದು, ಈ ಕಾರಣಕ್ಕೆ ಕಳೆದ 15 ದಿನಗಳಿಂದ ಕೆಲಸಕ್ಕೆ ಹಾಜರಾದರೂ ನಾಗೇಶ್‌ಗೆ ಕೆಲಸ ಕೊಟ್ಟಿರಲಿಲ್ಲ. ಹೀಗಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ನಾಗೇಶ್ ಸಹೋದ್ಯೋಗಿಗಳು ಆರೋಪಿಸಿದ್ದಾರೆ.

    ಘಟನೆಗೆ ಸಂಬಂಧಿಸಿದಂತೆ ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಲಗಿದ್ದಲ್ಲೇ ಮಡಿದ ಸ್ಟಾರ್ ನಟ ದುಲ್ಕರ್ ಸಲ್ಮಾನ್ ಡ್ರೈವರ್

    ಮಲಗಿದ್ದಲ್ಲೇ ಮಡಿದ ಸ್ಟಾರ್ ನಟ ದುಲ್ಕರ್ ಸಲ್ಮಾನ್ ಡ್ರೈವರ್

    ಲಯಾಳಂ ಖ್ಯಾತ ನಟ ದುಲ್ಕರ್ ಸಲ್ಮಾನ್ (Dulquer Salmaan) ಅವರ ಡ್ರೈವರ್ ಭಾಸ್ಕರ್ ಪ್ರಸಾದ್ (Bhaskar Prasad) ನಿನ್ನೆ ರಾತ್ರಿ ಸಾವನ್ನಪ್ಪಿದ್ದಾರೆ (passed away). ಈ ಸಾವು ಹಲವು ಗೊಂದಲಗಳನ್ನು ಸೃಷ್ಟಿಸಿದೆ. ನಿನ್ನೆ ರಾತ್ರಿ ದುಲ್ಕರ್ ಅವರನ್ನು ಏರ್ ಪೋರ್ಟಿಗೆ ಬಿಟ್ಟು ಬಂದು, ಪಿಜ್ಜಾ ಮತ್ತು ಕೂಲ್ ಡ್ರಿಂಕ್ಸ್ ಕುಡಿದು ಮಲಗಿದವರು ಹಠಾತ್ತಾಗಿ ನಿಧನರಾಗಿದ್ದಾರೆ. ಇದು ದುಲ್ಕರ್ ಅವರ ಚೆನ್ನೈನ ಮನೆಯಲ್ಲಿ ನಡೆದ ದುರ್ಘಟನೆ ಎಂದು ಹೇಳಲಾಗುತ್ತಿದೆ.

    ದುಲ್ಕರ್ ಮನೆಯ ಸಿಬ್ಬಂದಿ ಹೇಳಿರುವ ಪ್ರಕಾರ, ‘ಏರ್ ಪೋರ್ಟ್ ನಿಂದ ಮನೆಗೆ ಬಂದು, ಪಿಜ್ಜಾ ತಿಂದಿದ್ದಾರೆ. ನಂತರ ಕೂಲ್ ಡ್ರಿಂಕ್ಸ್ ಕೂಡ ಕುಡಿದಿದ್ದಾರೆ. ಹಾಗೆಯೇ ಮಲಗಿದ್ದವರು ವಿಪರೀತ ಕೆಮ್ಮಿದ್ದಾರಂತೆ. ಕೆಮ್ಮುತ್ತಲೇ ಪ್ರಜ್ಞೆ ಕಳೆದುಕೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತು. ಆಸ್ಪತ್ರೆ ಸೇರುವ ಮುನ್ನವೇ ಅವರ ಪ್ರಾಣ ಹೋಯಿತು’ ಎಂದಿದ್ದಾರೆ. ಇದನ್ನೂ ಓದಿ: ಸಾನ್ಯ ಎಲಿಮಿನೇಷನ್ ನಂತರ ರೂಪೇಶ್ ಶೆಟ್ಟಿ ಎನರ್ಜಿ ಡಬಲ್ ಆಯ್ತು: ಅನುಪಮಾ

    ಈಗಾಗಲೇ ಭಾಸ್ಕರ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಅದರ ವರದಿ ಬಂದ ನಂತರವಷ್ಟೇ ಭಾಸ್ಕರ್ ಅವರಿಗೆ ಏನಾಯಿತು ಎನ್ನುವ ವಿವರ ಸಿಗಲಿದೆ. ಈ ವಿಷಯ ತಿಳಿಯುತ್ತಿದ್ದಂತೆಯೇ ದುಲ್ಕರ್ ಕೂಡ ಕಣ್ಣೀರು ಹಾಕಿದ್ದು, ಮೃತ ಡ್ರೈವರ್ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಭಾಸ್ಕರ್ ಒಳ್ಳೆಯ ಚಾಲಕನಾಗಿದ್ದ ಎಂದು ಮಾತನಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬಿಎಂಟಿಸಿ ಶೀಘ್ರ ಆಗಲಿದೆ ಕಂಡಕ್ಟರ್ ಲೆಸ್ – ಡಿಜಿಟಲ್ ತಂತ್ರಜ್ಞಾನದಿಂದ ಟಿಕೆಟ್ ಕಲೆಕ್ಷನ್

    ಬಿಎಂಟಿಸಿ ಶೀಘ್ರ ಆಗಲಿದೆ ಕಂಡಕ್ಟರ್ ಲೆಸ್ – ಡಿಜಿಟಲ್ ತಂತ್ರಜ್ಞಾನದಿಂದ ಟಿಕೆಟ್ ಕಲೆಕ್ಷನ್

    ಬೆಂಗಳೂರು: ಬಿಎಂಟಿಸಿ (BMTC) ಸದ್ಯ ಮುಳುಗೋ ಹಡಗು. ಇರುವ ನೌಕರರಿಗೆ ಸಂಬಳ ಕೊಡಲಾಗದೇ ನಿಗಮ ಹೆಣಗಾಡುತ್ತಿದೆ. ಹೀಗಿರುವಾಗ ನಷ್ಟದ ಸುಳಿಯಿಂದ ಬಿಎಂಟಿಸಿಯನ್ನು ಮೇಲೆತ್ತಲು ಮಾಸ್ಟರ್ ಪ್ಲಾನ್ ರೆಡಿಯಾಗಿದೆ. ಹೊಸ ಪ್ಲಾನ್ ಪ್ರಕಾರ ಬಸ್ ಓಡಿದರೆ, ಡ್ರೈವರ್ ಇರುತ್ತಾರೆ. ಆದರೆ ನಿರ್ವಾಹಕ ಮಾತ್ರ ಇರುವುದಿಲ್ಲ. ಏನಿದು ಹೊಸ ಪ್ಲಾನ್? ನಿರ್ವಾಹಕ ಇಲ್ಲದೇ ಟಿಕೆಟ್ ಕಲೆಕ್ಷನ್ ಹೇಗೆ? ಈ ಎಲ್ಲದರ ಕುರಿತಂತೆ ಮಾಹಿತಿ ಈ ಕೆಳಗಿನಂತಿದೆ.

    ಹೌದು, ಬಿಎಂಟಿಸಿ ಬಸ್ ಹತ್ತುತ್ತಿದ್ದಂತೆ ನಿಮ್ಮನ್ನ ಸ್ವಾಗತಿಸುವುದೇ ನಿರ್ವಾಹಕ. ಆದರೆ ಇನ್ಮುಂದೆ ಬಿಎಂಟಿಸಿಯಲ್ಲಿ ಈ ನಿರ್ವಾಹಕರು ಕಾಣುವುದು ಡೌಟ್. ನಿರ್ವಾಹಕರಿಲ್ಲದೇ ಟಿಕೆಟ್ ಕಲೆಕ್ಷನ್ ಟಿಕೆಟ್ ಕಲೆಕ್ಷನ್ ಹೇಗೆ ಮಾಡುವುದು ಎಂಬುವುದರ ಬಗ್ಗೆ ಬಿಎಂಟಿಸಿ ಪ್ಲಾನ್ ಮಾಡಿಕೊಂಡಿದೆ. ಸದ್ಯ ನಿಗಮ ಆರ್ಥಿಕ ಹೊರೆ ಎದುರಿಸುತ್ತಿದೆ. ಜೊತೆಗೆ ಡ್ರೈವರ್ ಕೊರತೆಯೂ ಕಾಡುತ್ತಿದೆ. ಹೊಸ ನೇಮಕಾತಿಗೂ ಸರ್ಕಾರ ಒಪ್ಪಿಗೆ ಸೂಚಿಸುತ್ತಿಲ್ಲ. ಹೀಗಾಗಿ ನಿರ್ವಾಹಕ ಪೋಸ್ಟ್‌ಗಳನ್ನೇ ಎತ್ತಂಗಡಿ ಮಾಡಲು ನಿಗಮ ಪ್ಲಾನ್ ಮಾಡಿದೆ. ಇದನ್ನೂ ಓದಿ: ರಾಜ್ಯದಲ್ಲಿ ಬಲವಂತದ ಮತಾಂತರ ಹಾವಳಿ – ವಿವಾಹಿತನನ್ನು ಮತಾಂತರಗೊಳಿಸಿದ ಮುಸ್ಲಿಂ ನಾರಿ

    ಬಿಎಂಟಿಸಿಯಲ್ಲಿ ಡಿಜಿಟಲ್ ತಂತ್ರಜ್ಞಾನ (Digital Technology) ಅಳವಡಿಸುವ ಪ್ರಯತ್ನವನ್ನು ಆರಂಭಿಸಲಾಗಿದೆ. ಕಾಮನ್ ಮೊಬಿಲಿಟಿ ಕಾರ್ಡ್, ಇ ಪಾಸ್, ಸೇರಿ ಹಲವು ಡಿಜಿಟಲ್ ಸೌಲಭ್ಯವನ್ನು ಜಾರಿಗೆ ತಂದು ಟಿಕೆಟ್ ಕಲೆಕ್ಷನನ್ನು ಸಂಪೂರ್ಣ ಡಿಜಿಟಲೈಸ್ ಮಾಡಲು ಬಿಎಂಟಿಸಿ ತೀರ್ಮಾನಿಸಿದೆ. ಈ ಮೂಲಕ ನಿಗಮದಲ್ಲಿರುವ ಎಲ್ಲಾ ನಿರ್ವಾಹಕರನ್ನು ಕೆಲಸದಿಂದ ಮುಕ್ತರಾಗಲಿದ್ದಾರೆ. ಸದ್ಯ ಇರುವ ಪ್ರತಿಯೊಬ್ಬ ನಿರ್ವಾಹಕರು ಕಂಡಕ್ಟರ್ ಕಂ ಡ್ರೈವರ್ ಆದವರೇ. ಹೀಗಾಗಿ ಈ ಎಲ್ಲಾ ನಿರ್ವಾಹಕರನ್ನು ಡ್ರೈವಿಂಗ್‍ಗೆ ನಿಯೋಜಿಸಲು ಬಿಎಂಟಿಸಿ ತೀರ್ಮಾನಿಸಿದೆ. ಈ ಮೂಲಕ ಹೊಸ ನೇಮಕಾತಿ ಇಲ್ಲದೇ ಹೆಚ್ಚುವರಿ ಬಸ್‍ಗಳನ್ನು ರಸ್ತೆಗಿಳಿಸಲು ಬಿಎಂಟಿಸಿ ಪ್ಲಾನ್ ಮಾಡಿದೆ. ಆದರೆ ಇದಕ್ಕೆ ಕಾರ್ಮಿಕ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿವೆ.

    ಇದು ಕಾರ್ಮಿಕರ ಹೊಟ್ಟೆ ಮೇಲೆ ಹೊಡೆಯುವ ಹುನ್ನಾರ. ಮುಂದೆ ಬಿಎಂಟಿಸಿಯನ್ನು ಖಾಸಗೀಕರಣ ಮಾಡುವ ನಿಟ್ಟಿನ ಕೊನೆಯ ಮಳೆಯಾಗಿದೆ. ಬಿಎಂಟಿಸಿ ಸಂಸ್ಥೆಯ ನೌಕರರು ಬೀದಿಗೆ ಬರುತ್ತಾರೆ. ಸರ್ಕಾರ ಇದಕ್ಕೆ ಕಡಿವಾಣ ಹಾಕಬೇಕು ಎಂದು ಕಾರ್ಮಿಕ ಮುಖಂಡ ಆನಂದ್ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಚಾಲಕನ ಯಡವಟ್ಟು – ಖಾಸಗಿ ಬಸ್ ಪಲ್ಟಿ, 30ಕ್ಕೂ ಹೆಚ್ಚು ಮಂದಿಗೆ ಗಾಯ

    ಸದ್ಯದ ಪರಿಸ್ಥಿತಿಯಲ್ಲಿ ನಿರ್ವಾಹಕರಿಲ್ಲದೇ ಬಸ್ ಊಹಿಸುವುದು ಅಸಾಧ್ಯ, ಹೆಚ್ಚಿನ ಮಂದಿಗೆ ಡಿಜಿಟಲ್ ತಂತ್ರಜ್ಞಾನ ಒಪ್ಪಿಕೊಳ್ಳುವುದಕ್ಕೆ ಸಮಯ ಬೇಕಾಗಲಿದೆ. ಆದರೂ ಬಿಎಂಟಿಸಿ ಸಿಬ್ಬಂದಿ ಹೊರೆ ತಪ್ಪಿಸುವ ನಿಟ್ಟಿನಲ್ಲಿ ಈ ಯೋಜನೆ ಜಾರಿಗೆ ಮುಂದಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಹೆಬ್ಬಾಳದಲ್ಲಿ ಸರಣಿ ಅಪಘಾತ – ಬಿಬಿಎಂಪಿ ಕಸದ ಲಾರಿಗೆ ಬಾಲಕಿ ಬಲಿ

    ಹೆಬ್ಬಾಳದಲ್ಲಿ ಸರಣಿ ಅಪಘಾತ – ಬಿಬಿಎಂಪಿ ಕಸದ ಲಾರಿಗೆ ಬಾಲಕಿ ಬಲಿ

    – ಪೊಲೀಸರು ದೂರು ನೀಡಿದ್ದರೂ ಸ್ಪಂದಿಸದ ಬಿಬಿಎಂಪಿ
    – ಹೆಬ್ಬಾಳ ಅಂಡರ್‍ಪಾಸ್‍ನಲ್ಲಿ ನೀರು

    ಬೆಂಗಳೂರು:  ಶಾಲಾ ಬಾಲಕಿಯೊಬ್ಬಳು ಡಿವೈಡರ್ ದಾಟುತ್ತಿದ್ದ ವೇಳೆ ಬಿಬಿಎಂಪಿ ಕಸದ ಲಾರಿ ಬಂದು ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಹೆಬ್ಬಾಳದ ಫ್ಲೈ ಓವರ್ ಬಳಿ ನಡೆದಿದೆ.

    ಸದಾಶಿವನಗರದ ಸ್ಟೇಲಾ ಮೇರಿಸ್ ಸ್ಕೂಲ್‍ನಲ್ಲಿ ವ್ಯಾಸಂಗ ಮಾಡುತ್ತಿದ್ದ ಅಕ್ಷಯ (15) ಸಾವನ್ನಪ್ಪಿದ್ದು, 8 ಮಂದಿಗೆ ಗಂಭೀರ ಗಾಯಗೊಂಡಿದ್ದಾರೆ. ಹೆಬ್ಬಾಳ ಸಂಚಾರಿ  ಪೊಲೀಸರ ದೌಡಾಯಿಸಿ ಸ್ಥಳ ಪರಿಶೀಲನೆ ಮಾಡುತ್ತಿದ್ದಾರೆ.

    ಆಗಿದ್ದು ಏನು?: ಅಂಡರ್ ಪಾಸ್‍ನಲ್ಲಿ ನೀರು ತುಂಬಿದ್ದ ಪರಿಣಾಮ ಪಾದಚಾರಿಗಳು ರಸ್ತೆ ಮೇಲೆ ಓಡಾಡುತ್ತಾ ರಸ್ತೆ ದಾಟುತ್ತಿದ್ದರು. ಮಧ್ಯಾಹ್ನ 12:30ರ ವೇಳೆಗೆ ಬಸ್ ಇಳಿದ ಬಾಲಕಿ ಅಂಡರ್ ಪಾಸ್‍ನಲ್ಲಿ ನೀರು ತುಂಬಿರುವುದನ್ನು ನೋಡಿ, ಡಿವೈಡರ್ ದಾಟಿ ರಸ್ತೆ ಕ್ರಾಸ್ ಮಾಡುತ್ತಿದ್ದಳು. ಐದು ಜನ ವಿದ್ಯಾರ್ಥಿಗಳು ಒಟ್ಟಿಗೆ ಡೈವಡರ್ ಜಂಪ್ ಮಾಡಿ ರಸ್ತೆ ದಾಟುತ್ತಿದ್ದರು. ಈ ವೇಳೆ ಕಾರು ಮತ್ತು ಬೈಕ್ ಸಡನ್ ಆಗಿ ಬ್ರೇಕ್ ಹಾಕಿದ್ದಾರೆ. ಆದರೆ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಬಿಬಿಎಂಪಿ ಕಸದ ಲಾರಿ, ಕಾರು, ಬೈಕ್‍ಗೆ ಡಿಕ್ಕಿಯಾಗಿ ಬಾಲಕಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ಸಾವನ್ನಪ್ಪಿದ್ದು, ಇತರೇ ಎಂಟು ಜನರಿಗೆ ಗಂಭೀರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದನ್ನೂ ಓದಿ: 133 ಪ್ರಯಾಣಿಕರಿದ್ದ ಚೀನಾ ವಿಮಾನ ಪತನ

    ಅಂಡರ್ ಪಾಸ್‍ನಲ್ಲಿ ನೀರು ತುಂಬಿರೊ ಬಗ್ಗೆ ಪೊಲೀಸರು ಬೆಳಗ್ಗೆನೇ ಬಿಬಿಎಂಪಿಗೆ ಮಾಹಿತಿ ನೀಡಿದ್ದಾರೆ. ಆದರೆ ಇಲ್ಲಿವರೆಗೂ ಯಾವುದೇ ಸಿಬ್ಬಂದಿ ನೀರು ತೆಗೆಯುವ ಕೆಲಸ ಮಾಡಿಲ್ಲ. ಹೀಗಾಗಿ ಸಾರ್ವಜನಿಕರೆಲ್ಲಾ ಡಿವೈಡರ್ ಹತ್ತಿ ರಸ್ತೆ ದಾಟುತ್ತಿದ್ದರು. ಇದನ್ನೂ ಓದಿ: ಕಚ್ಚಾತೈಲ ಬೆಲೆ ಮತ್ತೆ ಶೇ.3 ಏರಿಕೆ; ಮಾರುಕಟ್ಟೆಯಿಂದ ಹೊರಬೀಳಲಿದೆಯಾ ರಷ್ಯಾ ತೈಲ

    ಈ ಅಪಘಾತದಲ್ಲಿ ಬೈಕ್ ಸವಾರನಿಗೆ ಕಾಲು ಮುರಿದಿದೆ. ಬೇರೆ ಯಾರಿಗೂ ಗಾಯವಾಗಿಲ್ಲ. ಲಾರಿ ಡ್ರೈವರ್ ಸದ್ಯ ಪೊಲೀಸರ ವಶದಲ್ಲಿದ್ದು, ಆರ್‌ಟಿ ನಗರ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಅಂಡರ್‍ಪಾಸ್‍ನಲ್ಲಿ ನಿಂತಿರುವ ನೀರನ್ನು ತೆಗೆಯುವಂತೆ ಪೊಲೀಸರು ಬಿಬಿಎಂಪಿಗೆ ಬೆಳಗ್ಗೆ ಕರೆ ಮಾಡಿ ತಿಳಿಸಿದ್ದಾರೆ. ರಸ್ತೆ ದಾಟುವ ವೇಳೆ ಸಮಸ್ಯೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸರು ಪದೇ ಪದೇ ಕರೆ ಮಾಡಿದರೂ ಬಿಬಿಎಂಪಿಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆದರೆ ಈ ಅಪಘಾತ ನಡೆದ ಒಂದು ಗಂಟೆಯಲ್ಲಿ ನೀರನ್ನು ಖಾಲಿ ಮಾಡಿ ಜನರ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

     

  • ಆರೂವರೆ ಕೋಟಿ ಮೌಲ್ಯದ MI ಮೊಬೈಲ್‍ಗಳಿರುವ ಟ್ರಕ್ ರಾಬರಿ ಮಾಡಿದ ಖದೀಮರು

    ಆರೂವರೆ ಕೋಟಿ ಮೌಲ್ಯದ MI ಮೊಬೈಲ್‍ಗಳಿರುವ ಟ್ರಕ್ ರಾಬರಿ ಮಾಡಿದ ಖದೀಮರು

    ಕೋಲಾರ: ಆರೂವರೆ ಕೋಟಿ ರೂ. ಮೌಲ್ಯದ ಎಂಐ ಮೊಬೈಲ್‍ಗಳ ಟ್ರಕ್ ರಾಬರಿ ಮಾಡಿ ಚಾಲಕನ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಂಗಳೂರು-ಚೆನ್ನೈ ಹೆದ್ದಾರಿಯಲ್ಲಿ ನಡೆದಿದೆ.

    ಚೆನ್ನೈ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾವಿರಾರು ವಾಹನಗಳು ಓಡಾಡುತ್ತಲೇ ಇರುತ್ತವೆ. ಹೆದ್ದಾರಿಯಲ್ಲಿ ಕತ್ತಲ ರಾತ್ರಿಯಲ್ಲಿ ಸಿನಿಮೀಯ ರೀತಿಯಲ್ಲಿ ಭರ್ಜರಿ ರಾಬರಿಯೊಂದು ನಡೆದಿದೆ. ಬರೋಬ್ಬರಿ ಆರೂವರೆ ಕೋಟಿ ರೂ. ಮೌಲ್ಯದ ಎಂಐ ಮೊಬೈಲ್‍ಗಳನ್ನು ತುಂಬಿ ಬರುತ್ತಿದ್ದ ಲಾರಿಯನ್ನು ರಾಬರಿ ಮಾಡಲಾಗಿದೆ.

    ಬೆಂಗಳೂರಿನ ಶ್ರೀಜಿ ಟ್ರಾನ್ಸ್​ಪೋರ್ಟ್ ಒಂದು ಕಂಟೈನರ್ ಲಾರಿ, ನಿನ್ನೆ ಮಧ್ಯಾಹ್ನ 3 ಗಂಟೆಗೆ ಚನ್ನೈ ನಿಂದ ಸುಮಾರು 6:39 ಕೋಟಿ ರೂ ಮೌಲ್ಯದ ಎಂ.ಐ. ಕಂಪನಿಯ ಮೊಬೈಲ್‍ಗಳನ್ನು ತುಂಬಿಕೊಂಡು ಹೊರಟಿತ್ತು, ಲಾರಿ ಡ್ರೈವರ್ ಸುರೇಶ್ ನಿನ್ನೆ ರಾತ್ರಿ 9:30 ರ ಸುಮಾರಿಗೆ ರಾಜ್ಯದ ಗಡಿ ಪ್ರವೇಶಮಾಡಿದ್ದಾನೆ. ನಂಗಲಿ ಟೋಲ್ ಬಳಿ ಲಾರಿ ನಿಲ್ಲಿಸಿ ನಂತರ ಮೂತ್ರ ವಿಸರ್ಜನೆ ಮಾಡಿ ಮತ್ತೆ ಹೊರಟಿದ್ದಾನೆ. ಲಾರಿ ಮುಳಬಾಗಿಲು ತಾಲ್ಲೂಕು ದೇವರಾಯಸಮುದ್ರ ಬಳಿ ಬರುತ್ತಿದ್ದಂತೆ ಒಂದು ಕಾರಿನಲ್ಲಿ ಬಂದ ಆರು ಜನರ ತಂಡ ಲಾರಿ ಅಡ್ಡಗಟ್ಟಿ ಜಗಳ ಶುರುಮಾಡಿದ್ದಾರೆ. ಇದನ್ನೂ ಓದಿ: ಬಾರ್ ಬೇಕು, ಬೇಡ -ಡಿಸಿ ಕಚೇರಿ ಮುಂದೆ ಮಹಿಳೆಯರು, ಪುರುಷರ ಹೈಡ್ರಾಮಾ

    ನಂತರ ಲಾರಿ ಡ್ರೈವರ್ ಸುರೇಶ್‍ನನ್ನು ಹೆದ್ದಾರಿಯಿಂದ ಪಕ್ಕದ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಹೊಡೆದು ಕೈಕಾಲು ಕಟ್ಟಿ ಬಾಯಿಗೆ ಬಟ್ಟೆ ತುರುಕಿ ಅವನನ್ನು ಅಲ್ಲೇ ಬಿಟ್ಟು ಬಂದು ಹೆದ್ದಾರಿಯಲ್ಲಿ ನಿಂತಿದ್ದ ಲಾರಿಯಲ್ಲಿದ್ದ, ಮೊಬೈಲ್‍ಗಳನ್ನು ಇನ್ನೊಂದು ಲಾರಿಗೆ ತುಂಬಿಸಿಕೊಂಡು ನಂತರ ಲಾರಿಯನ್ನು ಅಲ್ಲಿಂದು ಸುಮಾರು ಎಂಟು ಕಿ.ಮೀ. ದೂರದ ಕೋಲಾರ ತಾಲ್ಲೂಕು ನೆರ್ನಹಳ್ಳಿ ಬಳಿ ಬಿಟ್ಟು ಹೋಗಿದ್ದಾರೆ. ರಾತ್ರಿ ಇಡೀ ನಿರ್ಜನ ಪ್ರದೇಶದಲ್ಲಿ ಕಳೆದ ಡ್ರೈವರ್ ಸುರೇಶ್ ಬೆಳಿಗ್ಗೆ 9:30ರ ಸುಮಾರಿಗೆ ಹೆದ್ದಾರಿ ಬಳಿ ಬಂದು ಸ್ಥಳೀಯರ ಸಹಾಯ ಪಡೆದು ನಂತರ ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

    ಸುಮಾರು ಆರೂವರೆ ಕೋಟಿ ರೂಪಾಯಿ ಮೌಲ್ಯದ ಮೊಬೈಲ್ ಕಳ್ಳತನವಾಗಿರುವುದು ತಿಳಿಯುತ್ತಿದ್ದಂತೆ ಕಾರ್ಯಪ್ರವೃತ್ತರಾದ ಕೋಲಾರ ಪೊಲೀಸರು, ತನಿಖೆ ಚುರುಕುಗೊಳಿಸಿದ್ದಾರೆ ಡ್ರೈವರ್ ಸುರೇಶ್‍ನಿಂದ ಸಂಪೂರ್ಣ ಮಾಹಿತಿ ಪಡೆದ ಪೊಲೀಸರು, ರಾಬರಿ ಟೀಂ ಕುರಿತು ಮಾಹಿತಿ ಕಲೆಹಾಕುತ್ತಿದ್ದಾರೆ.

    ಸ್ಥಳಕ್ಕೆ ಭೇಟಿ ನೀಡಿ ಬೆರಳಚ್ಚು ತಜ್ಞರ ತಂಡ, ಹಾಗೂ ಕೋಲಾರ ಎಸ್‍ಪಿ ಕಿಶೋರ್ ಬಾಬು ಅವರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಸುಳಿವಿಗಾಗಿ ಹುಡುಕಾಟ ಶುರುಮಾಡಿದ್ದಾರೆ. ಇದೊಂದು ಪ್ರೀಪ್ಲಾನ್ ರಾಬರಿ ಎನ್ನಲಾಗಿದ್ದು, ಡ್ರೈವರ್ ಸುರೇಶ್ ನೀಡಿರುವ ಕೆಲವೊಂದು ಮಾಹಿತಿ ಆಧರಿಸಿ ಪೊಲೀಸರು ತನಿಖೆ ಶುರುಮಾಡಿದ್ದಾರೆ. ಆದಷ್ಟು ಬೇಗ ಆರೋಪಿಗಳನ್ನು ಪತ್ತೆ ಹಚ್ಚುವ ವಿಶ್ವಾಸ ಪೊಲೀಸರು ನೀಡಿದ್ದಾರೆ.

    ಪ್ರತಿಷ್ಠಿತ ಮೊಬೈಲ್ ಕಂಪನಿಯ ಕೋಟ್ಯಂತರ ರೂಪಾಯಿ ಮೌಲ್ಯದ ಮೊಬೈಲ್‍ಗಳು ಇಷ್ಟು ಸುಲಭವಾಗಿ ರಾಬರಿಕೋರರ ಪಾಲಾಗಿದೆ ಅಂದರೆ ಈ ಪ್ರಕರಣದಲ್ಲಿ ಒಳಗಿನವರದ್ದೇ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ. ಆದಷ್ಟು ಬೇಗ ಈ ಕಳ್ಳರ ತಂಡವನ್ನು ಬಂಧಿಸಿದರೆ ಎಲ್ಲಾ ಅನುಮಾನ ಆತಂಕಕಗಳಿಗೆ ತೆರೆ ಬೀಳಲಿದೆ.

  • ಬಳ್ಳಾರಿಯಲ್ಲಿ ಮತ್ತೆ ಅಕ್ರಮ ಅದಿರು ಸಾಗಾಟ

    ಬಳ್ಳಾರಿಯಲ್ಲಿ ಮತ್ತೆ ಅಕ್ರಮ ಅದಿರು ಸಾಗಾಟ

    ಬಳ್ಳಾರಿ: ಗಣಿನಾಡಲ್ಲಿ ಸಂಪೂರ್ಣವಾಗಿ ಅಕ್ರಮ ಗಣಿಗಾರಿಕೆ ಹಾಗೂ ಸಾಗಾಟ ಸದ್ದು ಮತ್ತೆ ಶುರುವಾಗಿ ಬಿಟ್ಟಿದೆ. ಬಳ್ಳಾರಿ ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಅಕ್ರಮ ಗಣಿ ಸಾಗಾಟ ಮಾಡುತ್ತಿದ್ದ 20ಕ್ಕೂ ಹೆಚ್ಚು ಲಾರಿಗಳನ್ನ ವಶಕ್ಕೆ ಪಡೆದಿದ್ದಾರೆ.

    ಗಣಿನಾಡು ಬಳ್ಳಾರಿ ಅಂದರೆ ಅಕ್ರಮ ಗಣಿಗಾರಿಕೆ, ಅಕ್ರಮ ಗಣಿ ಸಾಗಾಟ ಎನ್ನುವುದು ಇಡೀ ದೇಶಕ್ಕೇ ಸಾರಿತು. ಮಾಜಿ ಸಚಿವ ಜನಾರ್ದನ ರೆಡ್ಡಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಲುಕಿಕೊಂಡು ಸಿಬಿಐ ತನಿಖೆ ಆರಂಭಿಸಿದ ಬಳಿಕ ಸುಪ್ರೀಂ ಕೋರ್ಟ್ ಗಣಿ ರಪ್ತಿಗೆ ನಿಷೇಧ ಹೇರಿತ್ತು. ಪ್ಲಾಂಟ್ ಇದ್ದವರಿಗೆ ಗಣಿಗಾರಿಕೆ ಮಾತ್ರ ಅವಕಾಶ ಮಾಡಿ ಕೊಟ್ಟಿತ್ತು. ಆದರೆ ಇಂದು ಸುಪ್ರೀಂ ಕೋರ್ಟ್ ಆದೇಶದ ಮಧ್ಯೆಯೂ ಕೋಟಿ ಕೋಟಿ ಬೆಲೆ ಬಾಳುವ ಕಬ್ಬಿಣದ ಗಣಿಯನ್ನು ಆಂಧ್ರಕ್ಕೆ ಅಕ್ರಮವಾಗಿ ರವಾನೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

    ಬಳ್ಳಾರಿ ಪೊಲೀಸರು ಫ್ಲೈ ಹ್ಯಾಶ್ ತುಂಬಿಕೊಂಡು ಆಂಧ್ರಕ್ಕೆ ತೆರಳುತ್ತಿದ್ದ, ಲಾರಿಗಳ ಮೇಲೆ ನಿಗಾ ಇಟ್ಟು, ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಫ್ಲೈ ಹ್ಯಾಶ್ ಒಯ್ಯುವ ನೆಪದಲ್ಲಿ ಅದಿರನ್ನ ಸಾಗಾಟ ಮಾಡುತ್ತಿರುವ ಅಂಶ ಗೊತ್ತಾಗಿದೆ. ಪ್ಲೈ ಹ್ಯಾಶ್ ಮಧ್ಯೆ 43 ಪಸೆರ್ಂಟ್ ನಷ್ಟು ಅದಿರನ್ನು ತುಂಬಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 20 ಲಾರಿಗಳನ್ನು ಸೀಜ್ ಮಾಡಲಾಗಿದೆ.

    ಈ ಕುರಿತಂತೆ ಕಾರ್ಯಾಚರಣೆ ನಡೆದ ಖಾಕಿ ಟೀಂ ಅದಿರು ಸಾಗಾಣಿಕೆ ಮಾಡುತ್ತಿದ್ದ ಲಾರಿ ಡ್ರೈವರ್ಸ್ ಹಾಗೂ ಕ್ಲೀನರ್ ಗಳನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಅಕ್ರಮ ಅದಿರು ಸಾಗಾಟವನ್ನು ಬಳ್ಳಾರಿ ಎಸ್ಪಿ ಸೈದುಲ್ ಅಡಾವತ್ ದೃಢಪಡಿಸಿದ್ದು, ಸೂಕ್ತ ತನಿಖೆ ನಡೆಸುವುದಾಗಿ ಹೇಳಿದ್ದಾರೆ. ಇತ್ತ ಅದಿರು ಲಾರಿಗಳನ್ನು ವಶಕ್ಕೆ ಪಡೆದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಇಸ್ಪಾತ್ ಎನ್ನುವ ಸ್ಪಾಂಜ್ ಐರೆನ್ ಕಂಪನಿಯಿಂದ ಫ್ಲೈ ಹ್ಯಾಶ್ ರವಾನೆಗೆ ಪರವಾನಿಗೆ ಪಡೆದು ಅದರಲ್ಲಿ ಅದಿರನ್ನ ಸಾಗಾಟ ಮಾಡಲಾಗುತ್ತಿರುವುದು ಗೊತ್ತಾಗಿದೆ. ಈ ಬಗ್ಗೆ ಮಾತನಾಡಿರುವ ಲಾರಿ ಡ್ರೈವರ್‍ಗಳು ಇದು ಪ್ಲೈ ಹ್ಯಾಶ್ ಎಂದುಕೊಂಡಿದ್ವಿ, ಆದರೆ ಅದಿರು ತುಂಬಲಾಗಿದೆ ಎನ್ನುವುದು ಗೊತ್ತಿರಲಿಲ್ಲ. ಇದೇ ರೀತಿ ಇಪ್ಪತ್ತು ದಿನಗಳಿಂದ ಸಾಗಾಟ ಮಾಡಿದ್ದೇವೆ. ನಮ್ಮದೇನು ತಪ್ಪಿಲ್ಲ ಎನ್ನುತ್ತಿದ್ದಾರೆ. ಇದನ್ನೂ ಓದಿ:ದೇವಸ್ಥಾನದಲ್ಲಿ ಬಿಜೆಪಿ ಮುಖಂಡನ ಮಗಳ ಅದ್ಧೂರಿ ವಿವಾಹ- ಜಿಲ್ಲಾಡಳಿತದಿಂದ ತಡೆ

  • ಹೆದ್ದಾರಿಯಲ್ಲಿ ಚಾಲಕರನ್ನು ಬೆದರಿಸಿ ಹಣ ದರೋಡೆ – ಆರೋಪಿಗಳ ಬಂಧನ

    ಹೆದ್ದಾರಿಯಲ್ಲಿ ಚಾಲಕರನ್ನು ಬೆದರಿಸಿ ಹಣ ದರೋಡೆ – ಆರೋಪಿಗಳ ಬಂಧನ

    ಹುಬ್ಬಳ್ಳಿ: ಜಿಲ್ಲೆಯ ಹೊರವಲಯದ ಗದಗ ರಿಂಗ್ ರೋಡ್‍ನಲ್ಲಿ ಎರಡು ಟಾಟಾ ಏಸ್ ವಾಹನಗಳ ಚಾಲಕರನ್ನು ಬೆದರಿಸಿ, ದರೋಡೆ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧನ ಮಾಡುವಲ್ಲಿ ಬೆಂಡಿಗೇರಿ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

    ಬಂಧಿತರನ್ನು ಹುಬ್ಬಳ್ಳಿಯ ಗಂಗಾಧರ ನಗರದ ವಿಶಾಲ್ ಕಾಶಿನಾಥ ಬಿಜವಾಡ ಹಾಗೂ ಕರ್ಣ ಮುಂಡಗೋಡ ಎಂದು ಗುರುತಿಸಲಾಗಿದೆ. ಪಲ್ಸರ್ ಬೈಕಿನಲ್ಲಿ ನಿನ್ನೆ ಈ ಇಬ್ಬರು ಆರೋಪಿಗಳು ರಿಂಗ್ ರೋಡ್‍ನಲ್ಲಿ ಹೋಗುತ್ತಿದ್ದ ಕೃಷ್ಣಾ ಹಾಗೂ ಫಾರೂಕ್ ಎಂಬುವವರ ಟಾಟಾ ಏಸ್ ವಾಹನವನ್ನು ನಿಲ್ಲಿಸಿ, 38 ಸಾವಿರ ರೂಪಾಯಿ ದೋಚಿಕೊಂಡು ಪರಾರಿಯಾಗಿದ್ದರು. ಇದನ್ನೂ ಓದಿ: ಬೃಹತ್ ಪೈಪ್ ಬಿದ್ದು ಸೂಪರ್ ವೈಸರ್ ಸಾವು

    ಘಟನೆಯ ಬಳಿಕ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಬೆಂಡಿಗೇರಿ ಠಾಣೆಯ ಪೊಲೀಸರು ಐಟಿಸಿ ಗೋಡೌನ್ ಬಳಿಯಿರುವ ಸಿಸಿಟಿವಿ ಕ್ಯಾಮೆರಾಗಳ ದೃಶ್ಯವನ್ನು ಪರಿಗಣಿಸಿ ಆರೋಪಿಗಳ ಜಾಡು ಹಿಡಿದಿದ್ದಾರೆ. ಹಳಿಯಾಳ ರಸ್ತೆಯಲ್ಲಿ ಪಾರ್ಟಿ ಮಾಡುತ್ತ ಕುಳಿತ ಸಮಯದಲ್ಲಿ ಪೊಲೀಸರು ಆರೋಪಿಗಳನ್ನು ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.