Tag: ಡ್ರೋಣ್

  • ಡ್ರೋಣ್ ಕಣ್ಣಲ್ಲಿ ಗಗನಚುಕ್ಕಿ ಜಲಪಾತ ಸೆರೆ- ಹಾಲ್ನೊರೆಯಂತೆ ಧುಮ್ಮಿಕ್ಕುವ ಕಾವೇರಿ ಐಸಿರಿ

    ಡ್ರೋಣ್ ಕಣ್ಣಲ್ಲಿ ಗಗನಚುಕ್ಕಿ ಜಲಪಾತ ಸೆರೆ- ಹಾಲ್ನೊರೆಯಂತೆ ಧುಮ್ಮಿಕ್ಕುವ ಕಾವೇರಿ ಐಸಿರಿ

    ಮಂಡ್ಯ: ಭಾರೀ ಮಳೆಯಿಂದಾಗಿ ಗಗನಚುಕ್ಕಿ ಜಲಪಾತ ಎಲ್ಲರ ಕಣ್ಮನ ಸೆಳೆಯುತ್ತಿದ್ದು, ಹಾಲ್ನೊರೆಯಂತೆ ಧುಮ್ಮಿಕ್ಕುವ ಕಾವೇರಿ ಐಸಿರಿ ಡ್ರೋಣ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    ನಯನ ಮನೋಹರ ದೃಶ್ಯ ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡು ಹರಿದು ಬರುತ್ತಿದೆ. ಪ್ರಕೃತಿ ಸೊಬಗಿನಲ್ಲಿ ಕಾವೇರಿ ಭೋರ್ಗರೆಯುತ್ತಿದ್ದಾಳೆ. ಸುಮಾರು ನೂರು ಮೀಟರ್ ಎತ್ತರದಿಂದ ಕಾವೇರಿ ಧುಮ್ಮಿಕ್ಕುತ್ತಿದ್ದಾಳೆ. ಕೆಆರ್‍ಎಸ್, ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರು ಬಿಡುತ್ತಿರೋ ಹಿನ್ನೆಲೆಯಲ್ಲಿ ಕಾವೇರಿ ಮೈದುಂಬಿ ಹರಿಯುತ್ತಿದ್ದಾಳೆ.

    ಕಾವೇರಿ ಜಲಾನಯನ ಪ್ರದೇಶದಲ್ಲಿ ನಾಲ್ಕು ವರ್ಷಗಳಿಂದ ಕಡಿಮೆ ಪ್ರಮಾಣದ ಮಳೆ ಬಿದ್ದಿತ್ತು. ಹೀಗಾಗಿ ಗಗನಚುಕ್ಕಿ ಜಲಪಾತ ಕಳೆಗುಂದಿತ್ತು. ಈ ಬಾರಿ ಕೊಡಗು ವ್ಯಾಪ್ತಿಯಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದರಿಂದ ಕಾವೇರಿ ನದಿ ಮೈದುಂಬಿದೆ. ಜಲ ನೃತ್ಯ ವೈಭೋಗ ಕಣ್ಮುಂಬಿಕೊಳ್ಳಲು ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ.

  • ನಾಯಿ ಮರಿಯನ್ನು ರಕ್ಷಿಸಲು 6 ಗಂಟೆಯಲ್ಲಿ ಡ್ರೋಣ್ ಸಿದ್ಧಪಡಿಸಿದ ಟೆಕ್ಕಿ! ವಿಡಿಯೋ ನೋಡಿ

    ನಾಯಿ ಮರಿಯನ್ನು ರಕ್ಷಿಸಲು 6 ಗಂಟೆಯಲ್ಲಿ ಡ್ರೋಣ್ ಸಿದ್ಧಪಡಿಸಿದ ಟೆಕ್ಕಿ! ವಿಡಿಯೋ ನೋಡಿ

    ಲಕ್ನೋ: ಕೊಳಚೆ ನೀರು ಹರಿಯುವ ಕಾಲುವೆಯಲ್ಲಿ ನಾಯಿ ಮರಿಯೊಂದು ಬಿದ್ದು ಒದ್ದಾಡುತ್ತಿದ್ದನ್ನು ಕಂಡ ಟೆಕ್ಕಿಯೊಬ್ಬರು ಕೇವಲ 6 ಗಂಟೆಯಲ್ಲಿ ಡ್ರೋಣ್ ತಯಾರಿಸಿ ರಕ್ಷಿಸಿರುವ ಘಟನೆ ಲಕ್ನೋದಲ್ಲಿ ನಡೆದಿದೆ.

    ರಾಜ್ ಮಿಲಿಂದರ್ (27) ನಾಯಿ ಮರಿಯನ್ನು ರಕ್ಷಿಸಿದ ಟೆಕ್ಕಿ. ಬೆಳಗ್ಗೆ ವಾಕಿಂಗ್ ಮಾಡಲು ತೆರಳಿದ್ದ ರಾಜ್, ನಾಯಿ ಮರಿ ಮೋರಿಯಲ್ಲಿ ಬಿದ್ದು ಒದ್ದಾಡುವುದನ್ನು ಕಂಡು ರಕ್ಷಿಸಲು ಸ್ಥಳೀಯರ ಸಹಾಯ ಕೇಳಿದ್ದಾರೆ. ಆದರೆ ಯಾರು ಸಹಾಯ ಮಾಡಲು ನಿರಾಕರಿಸಿ ನಾಯಿ ಮರಿ ಅಲ್ಲಿಯೇ ಸಾಯಲಿ ಎಂದು ಹೇಳಿದ್ರಂತೆ. ಈ ವೇಳೆ ನಾಯಿ ಮರಿಯನ್ನು ರಕ್ಷಿಸಬೇಕು ಎಂದು ತೀರ್ಮಾನಿಸಿದ ರಾಜ್ ನೇರ ಲ್ಯಾಬ್‍ಗೆ ತೆರಳಿ ಡ್ರೋಣ್ ತಯಾರಿಸಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸುವ ರಾಜ್, ನಾಯಿ ಮರಿ ರಕ್ಷಿಸಲು ಸಹಾಯ ಕೇಳಿದ ವೇಳೆ ಎರಡು ದಿನಗಳಿಂದ ಮೋದಿಯಲ್ಲಿ ಅದು ಸಿಕ್ಕಿಕೊಂಡು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ವಿಷಯ ತಿಳಿಯಿತು. ಅದ್ದರಿಂದ ಅದನ್ನು ರಕ್ಷಣೆ ಮಾಡಲು ನಿರ್ಧರಿಸಿ ಎಐ ಕಂಟ್ರೋಲ್ ಡ್ರೋಣ್ ತಯಾರಿಸಿದ್ದಾಗಿ ಹೇಳಿದ್ದಾರೆ.

    ಡ್ರೋಣ್ ಗೆ ರೊಬೋಟಿಕ್ ಕೈ ಜೋಡಿಸಲಾಗಿತ್ತು, ಬಳಿಕ ರಿಮೋಟ್ ಕಂಟ್ರೋಲ್ ಬಳಸಿ ಅದನ್ನು ನಿಯಂತ್ರಣ ಮಾಡಲಾಯಿತು. ಅಲ್ಲದೇ ಅದಕ್ಕೆ ಸ್ಮಾರ್ಟ್ ಸೆನ್ಸಾರ್ ಅಳವಡಿಸಲಾಗಿತ್ತು. ಇದರಿಂದ ನಾಯಿಯನ್ನು ರಕ್ಷಣೆ ಮಾಡಲು ಸಾಧ್ಯವಾಯಿತು. ಕೊಳಚೆ ಕಾಲುವೆಗೆ ಇಳಿದು ನಾಯಿ ಮರಿಯನ್ನು ರಕ್ಷಿಸುವುದು ಅಸಾಧ್ಯವಾಗಿತ್ತು. ಅದ್ದರಿಂದ ಅನಿವಾರ್ಯವಾಗಿ ಡ್ರೋಣ್ ಸಹಾಯ ಪಡೆಯಬೇಕಾಯಿತು ಎಂದು ಹೇಳಿದ್ದಾರೆ.

  • ನಿಗೂಢವಾಗಿ ಕಣ್ಮರೆಯಾದ ಟೆಕ್ಕಿಗಾಗಿ ಡ್ರೋಣ್ ಕ್ಯಾಮೆರಾ ಬಳಸಿ ಪೊಲೀಸರ ಹುಡುಕಾಟ

    ನಿಗೂಢವಾಗಿ ಕಣ್ಮರೆಯಾದ ಟೆಕ್ಕಿಗಾಗಿ ಡ್ರೋಣ್ ಕ್ಯಾಮೆರಾ ಬಳಸಿ ಪೊಲೀಸರ ಹುಡುಕಾಟ

    ಬೆಂಗಳೂರು: ಓಎಲ್‍ಎಕ್ಸ್ ಆ್ಯಪ್ ಮುಖಾಂತರ ಕಾರು ಮಾರಾಟಕ್ಕಿಟ್ಟು ಗ್ರಾಹಕರನ್ನು ಭೇಟಿಯಾಗಲು ಹೊರಟ ಟೆಕ್ಕಿ ನಿಗೂಢ ರೀತಿಯಲ್ಲಿ ಕಣ್ಮರೆಯಾಗಿ 23 ದಿನಗಳ ಕಳೆದಿದ್ದು, ಪೊಲೀಸರು ಟೆಕ್ಕಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

    ಕಳೆದ ಡಿಸೆಂಬರ್ 18 ರಂದು ಕುಮಾರ್ ಅಜಿತಾಬ್(30) ಎಂಬ ಟೆಕ್ಕಿ ಬೆಂಗಳೂರಿನ ವೈಟ್ ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಿಂದ ಕಾಣೆಯಾಗಿದ್ದರು. ಈ ಪ್ರಕರಣವನ್ನು ಸವಾಲಾಗಿ ತೆಗೆದುಕೊಂಡಿರುವ ಪೊಲೀಸರು ಡ್ರೋಣ್ ಕ್ಯಾಮೆರಾ ಬಳಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

    ಅಜಿತಾಬ್ ಮೂಲತಃ ಬಿಹಾರದವರಾಗಿದ್ದು, ಬೆಂಗಳೂರಿನ ಬೆಳ್ಳಂದೂರಿನಲ್ಲಿರುವ ಬ್ರಿಟೀಷ್ ಟೆಲಿಕಾಂ ಕಂಪನಿಯಲ್ಲಿ ಕಳೆದ ಐದು ವರ್ಷಗಳಿಂದ ಕೆಲಸ ಮಾಡಿಕೊಂಡು ವೈಟ್ ಫೀಲ್ಡ್ ನ ಅಪಾರ್ಟ್ ಮೆಂಟ್‍ವೊಂದರಲ್ಲಿ ಸ್ನೇಹಿತರ ಜೊತೆ ನೆಲೆಸಿದ್ದರು. ತನ್ನ ಬಳಿಯಿದ್ದ ಸಿಯಾಜ್ ಕಾರನ್ನು ಮಾರಲು ಒಎಲ್‍ಎಕ್ಸ್ ನಲ್ಲಿ ಪ್ರಕಟಿಸಿದ್ದರು. ಕಾರನ್ನು ಬೇರೆಯವರಿಗೆ ತೋರಿಸಲೆಂದು ಡಿಸೆಂಬರ್ 18ರಂದು ತನ್ನ ಫ್ಲಾಟ್ ನಿಂದ ಹೊರಟವರು ಮತ್ತೆ ವಾಪಸ್ಸಾಗದೆ ಕಣ್ಮರೆಯಾಗಿದ್ದಾರೆ.

    ಅಜಿತಾಬ್ ಕಾರನ್ನು ಕೊಳ್ಳುವವರು ಆತನಿಗೆ ಕರೆ ಮಾಡಿದ್ದರಿಂದ ಅಂದು ತನ್ನ ಕೆಎ03 ಓಚಿ1751 ಕಾರಿನಲ್ಲಿ ಮನೆಯಿಂದ ಹೊರಹೋಗಿದ್ದರು. ಆದ್ರೆ ಅಜಿತಾಬ್ ಮನೆಗೆ ವಾಪಸ್ಸಾಗದ ಕಾರಣ ಎಲ್ಲೆಡೆ ಹುಡುಕಾಟ ನಡೆಸಿದ ಕುಟುಂಬದವರು ಈ ಬಗ್ಗೆ ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕಂಪ್ಲೆಂಟ್ ದಾಖಲಿಸಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಜಿತಾಬ್ ಗಾಗಿ ಕರ್ನಾಟಕ ಸೇರಿದಂತೆ ಎಲ್ಲೆಡೆ ಹುಡುಕಾಟ ನಡೆಸುತ್ತಿದ್ದು ಯಾವುದೇ ಪ್ರಯೋಜನವಾಗಿಲ್ಲ.

    ಕೊನೆಯ ಬಾರಿ ಅಜಿತಾಬ್ ಮೊಬೈಲ್ ಸಿಗ್ನಲ್ ಆಫ್ ಆದ ಸ್ಥಳವಾದ ವರ್ತೂರು ಸಮೀಪದ ಗುಂಜೂರು ಸಮೀಪ ಪೊಲೀಸರು ಹುಡುಕಾಟ ಪ್ರಾರಂಭಿಸಿದ್ದಾರೆ. 8 ತಂಡಗಳನ್ನು ರಚಿಸಿಕೊಂಡಿದ್ದು ಒಂದು ತಂಡ ಗುಂಜೂರು ಸುತ್ತಮುತ್ತಲಿನ ಪ್ರದೇಶಗಳು, ವರ್ತೂರು ಕೆರೆ, ಕೈಕೊಂಡ್ರಹಳ್ಳಿ ಕೆರೆ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಡ್ರೋಣ್ ಕ್ಯಾಮೆರಾ ಬಳಸಿ ಹುಡುಕಾಟ ನಡೆಸುತ್ತಿದ್ದಾರೆ. ಇನ್ನು 7 ತಂಡಗಳು ಬೇರೆ ರೀತಿಯಲ್ಲಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ಡಿಸಿಪಿ ಅಬ್ದುಲ್ ಅಹದ್ ದೂರವಾಣಿ ಮೂಲಕ ತಿಳಿಸಿದ್ದಾರೆ.

    ಒಟ್ಟಾರೆ ಅಜಿತಾಬ್ ರನ್ನು ಕಾರು ಕೊಳ್ಳುವ ನೆಪದಲ್ಲಿ ಯಾರಾದರು ಕರೆಸಿಕೊಂಡು ಕಿಡ್ನಾಪ್ ಮಾಡಿದ್ದಾರೋ? ಇಲ್ಲವೇ ಬೇರೆ ಯಾವುದೇ ಕಾರಣದಿಂದ ಕಣ್ಮರೆಯಾಗಿದ್ದಾರೋ ಎಂಬ ಅನುಮಾನಗಳು ಕಾಡತೊಡಗಿದೆ. ತಮ್ಮ ಮಗ ಮನೆಗೆ ವಾಪಸ್ಸಾಗುವ ನಿರೀಕ್ಷೆಯಲ್ಲಿ ಅಜಿತಾಬ್ ತಂದೆ ಜೀವಿಸುತ್ತಿದ್ದು, ಪೊಲೀಸರ ಕಾರ್ಯಾಚರಣೆ ಯಾವ ಫಲ ನೀಡುತ್ತದೆ ಎಂಬುದನ್ನು ಕಾದು ನೋಡಬೇಕಿದೆ.