Tag: ತಂಬಾಕು ಉತ್ಪನ್ನ

  • ಮುಜರಾಯಿ ಇಲಾಖೆ ದೇವಸ್ಥಾನಗಳ ಬಳಿ ತಂಬಾಕು ಉತ್ಪನ್ನ ಮಾರಾಟ ನಿಷೇಧ

    ಮುಜರಾಯಿ ಇಲಾಖೆ ದೇವಸ್ಥಾನಗಳ ಬಳಿ ತಂಬಾಕು ಉತ್ಪನ್ನ ಮಾರಾಟ ನಿಷೇಧ

    ಬೆಂಗಳೂರು: ಮುಜರಾಯಿ ಇಲಾಖೆಯ (Muzrai Department) ದೇವಸ್ಥಾನಗಳ ಸುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಗುಟ್ಕಾ, ಸಿಗರೇಟು ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳನ್ನು (Tobacco Products) ಮಾರಾಟವನ್ನು ನಿಷೇಧಿಸಿದೆ ಮುಜರಾಯಿ ಇಲಾಖೆ ಆದೇಶ ಪ್ರಕಟಿಸಿದೆ.

    ದೇವಸ್ಥಾನದ ಆಸುಪಾಸು ದೈವಿಕ ಕಳೆ ಇರುವುದರಿಂದ ಭಕ್ತರ ಧಾರ್ಮಿಕತೆಗೆ ಪೂರಕ ವಾತಾವರಣ ಕಲ್ಪಿಸಲು ಹೊಸ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಸರ್ಕಾರದ ನಿರ್ಧಾರವನ್ನು ಶ್ಲಾಘಿಸಿ ಕಾಂಗ್ರೆಸ್ (Congress) ಟ್ವೀಟ್ (Tweet) ಮಾಡಿದೆ. ಇದನ್ನೂ ಓದಿ: ಸೆ.21ರಂದು ಸುಪ್ರೀಂಗೆ ಕೆಆರ್‌ಎಸ್ ಚಿತ್ರಣ ಮನವರಿಕೆ ಮಾಡಿ – ಪ್ರತಿಭಟನಾಕಾರರ ಆಕ್ರೋಶ

    ಟ್ವೀಟ್‌ನಲ್ಲಿ ಏನಿದೆ?
    ‘ಧರ್ಮ’ ಎಂದರೆ ಮನುಷ್ಯನಿಗೆ ಆಧ್ಯಾತ್ಮಿಕ ಅನುಭೂತಿ ನೀಡುವ ಮಾರ್ಗ ಮಾತ್ರ. ಆಧ್ಯಾತ್ಮಿಕ ಅನುಭೂತಿಯನ್ನು ನೀಡುವ ದೇವಾಲಯಗಳಲ್ಲಿ ಸ್ವಚ್ಛತೆ, ಪ್ರಶಾಂತತೆ ಇರಬೇಕಾಗುತ್ತದೆ.

    ಮುಜುರಾಯಿ ಇಲಾಖೆಯ ದೇವಾಲಯಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಗುಟ್ಕಾ, ಸಿಗರೇಟು ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡದಂತೆ ನಮ್ಮ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ ಎಂದು ಬರೆದುಕೊಂಡಿದೆ. ಇದನ್ನೂ ಓದಿ: CWRC ಆದೇಶ ಪಾಲನೆ ಅಸಾಧ್ಯ, ತಮಿಳುನಾಡಿಗೆ ನೀರು ಬಿಡಲ್ಲ: ಕೇಂದ್ರಕ್ಕೆ ಸಿಎಂ ಪತ್ರ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆಂಧ್ರದಲ್ಲಿ ಒಂದು ವರ್ಷ ಗುಟ್ಕಾ, ಪಾನ್ ಮಸಾಲ ನಿಷೇಧ

    ಆಂಧ್ರದಲ್ಲಿ ಒಂದು ವರ್ಷ ಗುಟ್ಕಾ, ಪಾನ್ ಮಸಾಲ ನಿಷೇಧ

    ವಿಜಯವಾಡ: ತಂಬಾಕು, ನಿಕೊಟಿನ್ ಹಾಗೂ ಇತರೆ ತಂಬಾಕಿನ ಉತ್ಪನ್ನಗಳ ತಯಾರಿಕೆಯಾದ ಗುಟ್ಕಾ ಹಾಗೂ ಪಾನ್ ಮಸಾಲಗಳ ಮಾರಾಟವನ್ನು ಆಂಧ್ರಪ್ರದೇಶ ಸರ್ಕಾರ ನಿಷೇಧಿಸಿದೆ.

    ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಕಾಯ್ದೆ ಅಡಿಯಲ್ಲಿ ಈ ಕಾನೂನನ್ನು ಜಾರಿಗೆ ತರಲಾಗಿದೆ. ಇನ್‌ಸ್ಟಿಟ್ಯೂಟ್ ಆಫ್ ಪ್ರಿವೆಂಟಿವ್ ಮೆಡಿಸಿನ್, ಸಾರ್ವಜನಿಕ ಆರೋಗ್ಯ ಪ್ರಯೋಗಾಲಯಗಳು ಮತ್ತು ಆರೋಗ್ಯ, ಆಹಾರ ಸುರಕ್ಷತಾ ನಿರ್ದೇಶನಾಲಯದ ಆಯುಕ್ತರು ಈ ಆದೇಶವನ್ನು ಹೊರಡಿಸಿದ್ದಾರೆ.

    ಇಂದಿನಿಂದ ಒಂದು ವರ್ಷದವರೆಗೆ ಈ ನಿಯಮವೂ ರಾಜ್ಯಾದ್ಯಂತ ಜಾರಿಯಲ್ಲಿರುತ್ತದೆ ಎಂದು ಸರ್ಕಾರ ತಿಳಿಸಿದೆ. ರಾಜ್ಯ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಪದಾರ್ಥಗಳನ್ನು ಹೊಂದಿರುವ ಗುಟ್ಕಾ, ಪಾನ್ ಮಸಾಲ ತಯಾರಿಕೆ, ಸಂಗ್ರಹಣೆ, ವಿತರಣೆ, ಸಾಗಣೆ ಮತ್ತು ಮಾರಾಟದಿಂದ ಅಪಾರ ಹಾನಿಯಾಗುತ್ತದೆ. ಅದನ್ನು ತಿನ್ನುವುದರಿಂದ ಹೃದಯಕ್ಕೆ ಸಂಬಂಧಿಸಿದ ಕಾಯಲೆಗಳು ಬರುವ ಸಾಧ್ಯತೆಯಿದ್ದು, ಇದರಿಂದಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:  ಯುಎಸ್, ಭಾರತದ 900ಕ್ಕೂ ಹೆಚ್ಚು ಉದ್ಯೋಗಿಗಳನ್ನು ವಜಾಗೊಳಿಸಿದ CEO

    ತಂಬಾಕು ಉತ್ಪನ್ನಗಳನ್ನು ಜಗಿಯುವ ತಂಬಾಕು, ಖೈನಿ, ಖರ್ರಾ, ಪರಿಮಳಯುಕ್ತ ತಂಬಾಕು ಹೀಗೆ ವಿವಿಧ ಬಗೆಯಲ್ಲಿ ಪ್ಯಾಕ್ ಮಾಡಲಾಗುವ ತಂಬಾಕು ಮಾರಾಟವನ್ನು ಇಡೀ ಆಂಧ್ರಪ್ರದೇಶದಲ್ಲಿ ಒಂದು ವರ್ಷಗಳ ಕಾಲ ನಿಷೇಧಿಸಲಾಗಿದೆ.

  • ಉ.ಕನ್ನಡ ಜಿಲ್ಲೆಯಾದ್ಯಂತ ತಂಬಾಕು ಉತ್ಪನ್ನ, ಮಾರಾಟ ಹಾಗೂ ಬಳಕೆ ನಿಷೇಧ

    ಉ.ಕನ್ನಡ ಜಿಲ್ಲೆಯಾದ್ಯಂತ ತಂಬಾಕು ಉತ್ಪನ್ನ, ಮಾರಾಟ ಹಾಗೂ ಬಳಕೆ ನಿಷೇಧ

    ಕಾರವಾರ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ತಂಬಾಕು ಉತ್ಪನ್ನ, ಮಾರಾಟ ಹಾಗೂ ಬಳಕೆ ಮಾಡುವುದನ್ನು ನಿಷೇಧ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಹರೀಶ್ ಕುಮಾರ್ ಕೆ.ಅವರು ಆದೇಶ ಹೊರಡಿಸಿದ್ದಾರೆ.

    ಪಾನ್ ಮಸಾಲಾ ಮತ್ತು ಅಡಿಕೆಯಿಂದ ತಯಾರಾದ ಉತ್ಪನ್ನಗಳಿಂದ ಕೋವಿಡ್-19 ಸಾಂಕ್ರಾಮಿಕ ರೋಗವು ವ್ಯಾಪಕವಾಗಿ ಹರಡುವ ಸಾಧ್ಯತೆ ಇದೆ. ಹೀಗಾಗಿ ಹೊಗೆ ರಹಿತ ತಂಬಾಕು ಉತ್ಪನ್ನಗಳನ್ನು ಮಾರಾಟ ಮತ್ತು ಬಳಕೆ ಮಾಡುವುದು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ನಿಷೇಧಿಸಲಾಗಿದೆ. ಸಾರ್ವಜನಿಕರ ಆರೋಗ್ಯ ಹಿತ ದೃಷ್ಟಿಯಿಂದ ಕೊರೊನಾ ಹತೋಟಿಗೆ ಬರುವವರೆಗೂ ಈ ನಿಷೇಧ ಜಾರಿಯಲ್ಲಿ ಇರುತ್ತದೆ ಎಂದು ಡಿಸಿ ಅದೇಶ ಮಾಡಿದ್ದಾರೆ.

    ಒಂದು ವೇಳೆ ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ, ಸಾಂಕ್ರಾಮಿಕ ರೋಗಗಳ ಕಾಯ್ದೆ-1897, ವಿಪತ್ತು ನಿರ್ವಹಣಾ ಕಾಯ್ದೆ-2005, ಐಪಿಸಿ-1960, ಸಿ.ಆರ್.ಪಿ.ಸಿ.ಅಡಿಯಲ್ಲಿ ಪ್ರಕರಣ ದಾಖಲಿಲಾಗುವುದು. ಈ ನಿಯಮವನ್ನು ಉಲ್ಲಂಘಿಸಿದರೆ ಸಂಬಂಧಿಸಿದವರ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

  • ತಂಬಾಕು ಉತ್ಪನ್ನಗಳ ಮಾರಾಟ ಮಳಿಗೆ ಮೇಲೆ ದಾಳಿ

    ತಂಬಾಕು ಉತ್ಪನ್ನಗಳ ಮಾರಾಟ ಮಳಿಗೆ ಮೇಲೆ ದಾಳಿ

    ಚಿಕ್ಕಮಗಳೂರು: ನಗರದ ಬೇಲೂರು ರಸ್ತೆ ಹಾಗೂ ಕೋಟೆ ಸರ್ಕಲ್ ವ್ಯಾಪ್ತಿಯ ಅಂಗಡಿ-ಮುಂಗಟ್ಟುಗಳ ಮೇಲೆ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ತಾಲೂಕು ತನಿಖಾ ದಳ ವಿವಿಧ ಇಲಾಖೆಗಳ ಸಹಯೋಗದಲ್ಲಿ ದಾಳಿ ನಡೆಸಿ ದಂಡ ವಿಧಿಸಿದೆ.

    ಬೇಲೂರು ರಸ್ತೆ ಮತ್ತು ಕೋಟೆ ಸರ್ಕಲ್ ವ್ಯಾಪ್ತಿಯಲ್ಲಿನ ಶಾಲಾ ಆವರಣದ ಸುತ್ತ ಮುತ್ತಲಿನ ಅಂಗಡಿ-ಮುಂಗಟ್ಟುಗಳು, ಪಾನ್ ಶಾಪ್, ಬೇಕರಿ, ಜ್ಯೂಸ್ ಸೆಂಟರ್, ಹೋಟೆಲ್, ಪ್ರಾವಿಜನ್ ಸ್ಟೋರ್, ಬಾರ್ ಅಂಡ್ ರೆಸ್ಟೋರೆಂಟ್ ಹಾಗೂ ಇತರೆ ಚಿಲ್ಲರೆ ಅಂಗಡಿಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟದ 3 ತಿಳುವಳಿಕೆ ನೋಟಿಸ್ ನೀಡಲಾಗಿತ್ತು.

    ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್ ನಂತಹ ಮಾರಕ ಕಾಯಿಲೆಗಳು ಬರುವುದರ ಜೊತೆ ವ್ಯಸಿನಿಗಳ ಕುಟುಂಬಕ್ಕೂ ಆರ್ಥಿಕ ಹೊರೆ ಹೆಚ್ಚುತ್ತದೆ. ಇದಕ್ಕೆ ಕಡಿವಾಣ ಹಾಕಿ ವ್ಯಸನ ಮುಕ್ತ ಸಮಾಜ ರೂಪಿಸುವುದು ಪ್ರತಿಯೊಬ್ಬರ ಜವಾಬ್ದಾರಿ. ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡುವುದು ಅಪರಾಧವಾಗಿದೆ. ಅಂಗಡಿ ಮುಂಗಟ್ಟಿನ ಮಾಲೀಕರು ಈ ಬಗ್ಗೆ ಕಡ್ಡಾಯವಾಗಿ ನಾಮಫಲಕಗಳನ್ನು ಪ್ರದರ್ಶಿಸಬೇಕು. ಶಾಲಾ-ಕಾಲೇಜುಗಳ ಆವರಣದಲ್ಲಿ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ನಿಷೇಧವಿದೆ ಎಂದು ಸಾರ್ವಜನಿಕರ ಗಮನಕ್ಕೆ ತರಲಾಗಿತ್ತು.

    ಆದರೂ ತಂಬಾಕು ಉತ್ಪನ್ನಗಳನ್ನ ಮಾರಾಟ ಮಾಡಿದ ಹಿನ್ನೆಲೆ 15 ಪ್ರಕರಣಗಳನ್ನು ದಾಖಲಿಸಿಕೊಂಡು ಅಧಿಕಾರಿಗಳು ದಂಡ ವಿಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಆರ್.ದಿನೇಶ್, ಸಾಮಾಜಿಕ ಕಾರ್ಯಕರ್ತ ಎಂ.ರಾಘವೇಂದ್ರ, ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕರಾದ ಎಂ.ಕೆ.ಪತ್ತಾರ್, ತಾಲೂಕು ಆರೋಗ್ಯ ಇಲಾಖೆಯ ಬಿ.ಹೆಚ್.ಇ.ಒ ಬೇಬಿ, ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಕುಮಾರ್, ಸಗನಯ್ಯ ಮತ್ತು ಗೋವರ್ಧನ್ ಪಾಲ್ಗೊಂಡಿದ್ದರು.