Tag: ತಜೀಂದರ್ ಪಾಲ್ ಸಿಂಗ್

  • ಆಪ್ ಪಂಜಾಬ್ ಪೊಲೀಸರನ್ನು ದುರಪಯೋಗಪಡಿಸಿಕೊಂಡಿದೆ: ಬಿಜೆಪಿ ಆರೋಪ

    ಆಪ್ ಪಂಜಾಬ್ ಪೊಲೀಸರನ್ನು ದುರಪಯೋಗಪಡಿಸಿಕೊಂಡಿದೆ: ಬಿಜೆಪಿ ಆರೋಪ

    ನವದೆಹಲಿ: ಬಿಜೆಪಿ ಮುಖಂಡ ತಜೀಂದರ್ ಪಾಲ್ ಸಿಂಗ್ ಬಗ್ಗಾ ಅವರನ್ನು ಬಂಧಿಸಲು ಪಂಜಾಬ್‍ನ ಆಪ್ ನೇತೃತ್ವದ ಸರ್ಕಾರವು ರಾಜ್ಯ ಪೊಲೀಸ್ ಪಡೆಯನ್ನು ದುರುಪಯೋಗ ಪಡಿಸಿಕೊಂಡಿದೆ ಎಂದು ದೆಹಲಿ ಬಿಜೆಪಿ ಮುಖ್ಯಸ್ಥ ಆದೇಶ್ ಗುಪ್ತಾ ಆರೋಪಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಜೀಂದರ್ ಪಾಲ್ ಸಿಂಗ್ ವಾಪಸ್ ಮನೆಗೆ ಮರಳಿದ್ದಾರೆ. ಇದು ಪ್ರಜಾಪ್ರಭುತ್ವದ ಮತ್ತು ನ್ಯಾಯದ ವಿಜಯವಾಗಿದೆ. ತಜೀಂದರ್ ಸಿಂಗ್ ಬಿಡುಗೆಡೆಯಿಂದಾಗಿ ಕೇಜ್ರಿವಾಲ್ ಅವರ ದುರಹಂಕಾರ ಮುರಿದಿದೆ. ಅವರು ಬಗ್ಗಾವನ್ನು ಬಂಧಿಸಲು ಪಂಜಾಬ್ ಪೊಲೀಸ್ ಬಲವನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ಪೊಲೀಸರು ತಜೀಂದರ್ ಪಾಲ್ ಸಿಂಗ್‍ರನ್ನು ಬಂಧಿಸುವಾಗ ತಂದೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಎಂದು ಕಿಡಿಕಾರಿದರು.

    ರೈತರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತುವುದು ಮತ್ತು ಕಾಶ್ಮೀರಿ ಪಂಡಿತರಿಗೆ ತೋರಿದ ಅಗೌರವಕ್ಕೆ ಕ್ಷಮೆ ಯಾಚಿಸುವುದು ಅಪರಾಧವಾಗಿದ್ದರೆ, ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತನು ಈ ಅಪರಾಧವನ್ನು ಮುಂದುವರಿಸುತ್ತಾರೆ ಎಂದರು. ಇದನ್ನೂ ಓದಿ: ಕೇಜ್ರಿವಾಲ್ ವಿರುದ್ಧ ಟೀಕೆ- ಪೊಲೀಸರಿಂದ ದೆಹಲಿ ಬಿಜೆಪಿ ಮುಖಂಡ ಅರೆಸ್ಟ್

    ಯಾವುದೇ ರೀತಿಯ ಕ್ರಮಕ್ಕೂ ಬಿಜೆಪಿ ಕಾರ್ಯಕರ್ತರು ಹೆದರುವುದಿಲ್ಲ. ಕೇಜ್ರಿವಾಲ್ ಅವರ ದುರಹಂಕಾರದ ವಿರುದ್ಧ ನಾವು ಹೋರಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಇದು ಸೇಡಿನ ರಾಜಕಾರಣ: ಬಿಜೆಪಿ ಮುಖಂಡನ ಬಂಧನಕ್ಕೆ ನವಜೋತ್‌ ಸಿಧು ಕಿಡಿ

    ಶುಕ್ರವಾರ ರಾಷ್ಟ್ರ ರಾಜಧಾನಿಯಲ್ಲಿ ಪಂಜಾಬ್ ಪೊಲೀಸರು ಬಂಧಿಸಿದ ನಂತರ ತಜೀಂದರ್ ಸಿಂಗ್ ಮಧ್ಯ ರಾತ್ರಿ ದೆಹಲಿಯಲ್ಲಿರುವ ಅವರ ನಿವಾಸವನ್ನು ತಲುಪಿದರು. ತಜೀಂದರ್‌ ಸಿಂಗ್ ಅವರ ಕುಟುಂಬದ ಸದಸ್ಯರು ದೆಹಲಿಯಲ್ಲಿರುವ ಅವರ ಮನೆಗೆ ಹಿಂದಿರುಗಿದ ನಂತರ ಸಂಭ್ರಮಿಸಿದ್ದರು. ಇದನ್ನೂ ಓದಿ: ಬಿಜೆಪಿ ನಾಯಕನನ್ನು ದೆಹಲಿ ಪೊಲೀಸರಿಗೆ ಮಾತ್ರ ಹಸ್ತಾಂತರಿಸುತ್ತೇವೆ: ಹರಿಯಾಣ ಗೃಹ ಸಚಿವ

  • ಬಿಜೆಪಿ ನಾಯಕನನ್ನು ದೆಹಲಿ ಪೊಲೀಸರಿಗೆ ಮಾತ್ರ ಹಸ್ತಾಂತರಿಸುತ್ತೇವೆ: ಹರಿಯಾಣ ಗೃಹ ಸಚಿವ

    ಬಿಜೆಪಿ ನಾಯಕನನ್ನು ದೆಹಲಿ ಪೊಲೀಸರಿಗೆ ಮಾತ್ರ ಹಸ್ತಾಂತರಿಸುತ್ತೇವೆ: ಹರಿಯಾಣ ಗೃಹ ಸಚಿವ

    ಚಂಡೀಗಢ: ಬಿಜೆಪಿ ಮುಖಂಡ ತಜೀಂದರ್ ಪಾಲ್ ಸಿಂಗ್ ಬಗ್ಗಾ ಅವರನ್ನು ಪಂಜಾಬ್‌ ಪೊಲೀಸರು ದೆಹಲಿಯಿಂದ ಬಂಧಿಸಿ ಪಂಜಾಬ್‌ಗೆ ಕರೆತರುವಾಗ ಹರಿಯಾಣ ಪೊಲೀಸರು ಪಂಜಾಬ್‌ ಪೊಲೀಸರನ್ನು ತಡೆದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಹರಿಯಾಣ ಗೃಹ ಸಚಿವ ಅನಿಲ್ ವಿಜ್ ಅವರು, ದೆಹಲಿ ಪೊಲೀಸರಿಗೆ ಮಾತ್ರ ತಜೀಂದರ್ ಸಿಂಗ್‍ರನ್ನು ಹಸ್ತಾಂತರಿಸುತ್ತೇವೆ ಎಂದು ತಿಳಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹರಿಯಾಣ ಪೊಲೀಸರು ಯಾವುದೇ ಅಡೆತಡೆಗಳನ್ನು ಸೃಷ್ಟಿಸುವುದಿಲ್ಲ. ಬಿಜೆಪಿ ನಾಯಕನನ್ನು ಅಪಹರಿಸಲಾಗಿದೆ ಎಂಬ ಮಾಹಿತಿ ದೆಹಲಿ ಪೊಲೀಸರಿಂದ ಬಂದಿದೆ. ಇದರಿಂದಾಗಿ ಕ್ರಮ ಕೈಗೊಂಡಿದ್ದೇವೆ. ಹಾಗೂ ದೆಹಲಿ ಪೊಲೀಸರಿಗೆ ಮಾತ್ರ ತಜೀಂದರ್ ಸಿಂಗ್‍ರನ್ನು ಹಸ್ತಾಂತರಿಸುತ್ತೇವೆ ಎಂದರು.

    ತಜೀಂದರ್ ಪಾಲ್ ಸಿಂಗ್ ಅವರ ಅಪಹರಣದ ಬಗ್ಗೆ ದೆಹಲಿ ಪೊಲೀಸರಿಂದ ಮಾಹಿತಿ ಸಿಕ್ಕಿದೆ. ನಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಅಡ್ಡಿಯಾಗಿ ವರ್ತಿಸುತ್ತಿಲ್ಲ. ಅಪಹರಣ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸ್ ಠಾಣೆಗೆ ಅವರನ್ನು ಹಾಜರು ಪಡಿಸುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ರಷ್ಯಾ ವಿದೇಶಾಂಗ ಸಚಿವನ ವಿವಾದಿತ ಹೇಳಿಕೆ – ಇಸ್ರೇಲ್ ಪ್ರಧಾನಿಗೆ ಪುಟಿನ್ ಕ್ಷಮೆ

    ತಜೀಂದರ್ ಬಗ್ಗಾ ಅವರನ್ನು ಅಪಹರಿಸಲಾಗಿದೆ ಎಂದು ಆರೋಪಿಸಿ ದೆಹಲಿ ಪೊಲೀಸರು ಪಂಜಾಬ್ ಪೊಲೀಸರ ವಿರುದ್ಧ ಎಫ್‍ಐಆರ್ ದಾಖಲಿಸಿದ್ದಾರೆ. ಎಫ್‍ಐಆರ್‌ಗೆ ಪ್ರತಿಕ್ರಿಯೆಯಾಗಿ ಪಂಜಾಬ್ ಪೊಲೀಸರು ಹರಿಯಾಣ ಡಿಜಿಪಿಗೆ ಪತ್ರ ಬರೆದಿದ್ದಾರೆ. ಇದರಲ್ಲಿ ಬಗ್ಗಾ ಅವರ ಬಂಧನವು ಅಪಹರಣದ ಪ್ರಕರಣವಲ್ಲ ಮತ್ತು ಹರಿಯಾಣ ಪೊಲೀಸರು ತಮ್ಮ ಕೆಲಸಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಕೇಜ್ರಿವಾಲ್ ವಿರುದ್ಧ ಟೀಕೆ- ಪೊಲೀಸರಿಂದ ದೆಹಲಿ ಬಿಜೆಪಿ ಮುಖಂಡ ಅರೆಸ್ಟ್

    ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಪಂಜಾಬ್‍ನ ಪೊಲೀಸರು ಬಿಜೆಪಿ ಮುಖಂಡ ತಜೀಂದರ್ ಪಾಲ್ ಸಿಂಗ್ ಬಗ್ಗಾ ಅವರನ್ನು ದೆಹಲಿಯಲ್ಲಿ ಬಂಧಿಸಿದ್ದರು. ದೆಹಲಿ ಮುಖ್ಯಮಂತ್ರಿ ಅವರಿಗೆ ಜೀವ ಬೆದರಿಕೆ ಹಾಕದ್ದ ಹಿನ್ನೆಲೆಯಲ್ಲಿ ಆಪ್ ನಾಯಕ ಸನ್ನಿಸಿಂಗ್ ಅವರು ತಜೀಂದರ್ ಪಾಲ್ ಸಿಂಗ್ ಅವರ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿ ವದಂತಿಗಳನ್ನು ಹರಡುತ್ತಿದ್ದಾರೆ. ಧಾರ್ಮಿಕ ಮತ್ತು ಕೋಮು ದ್ವೇಷವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂಬ ಆರೋಪಿಸಿ ಸೈಬರ್‌ ಸೆಲ್‍ನಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಕಾರ್ಯದರ್ಶಿಯನ್ನು ಬಂಧಿಸಿದ್ದರು.

  • ಕೇಜ್ರಿವಾಲ್ ವಿರುದ್ಧ ಟೀಕೆ- ಪೊಲೀಸರಿಂದ ದೆಹಲಿ ಬಿಜೆಪಿ ಮುಖಂಡ ಅರೆಸ್ಟ್

    ಕೇಜ್ರಿವಾಲ್ ವಿರುದ್ಧ ಟೀಕೆ- ಪೊಲೀಸರಿಂದ ದೆಹಲಿ ಬಿಜೆಪಿ ಮುಖಂಡ ಅರೆಸ್ಟ್

    ನವದೆಹಲಿ: ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಪಂಜಾಬ್‍ನ ಪೊಲೀಸರು ಬಿಜೆಪಿ ಮುಖಂಡ ತಜೀಂದರ್ ಪಾಲ್ ಸಿಂಗ್ ಬಗ್ಗಾ ಅವರನ್ನು ದೆಹಲಿಯಲ್ಲಿ ಬಂಧಿಸಿದ್ದಾರೆ.

    ದೆಹಲಿ ಮುಖ್ಯಮಂತ್ರಿ ಅವರಿಗೆ ಜೀವ ಬೆದರಿಕೆ ಹಾಕದ್ದ ಹಿನ್ನೆಲೆಯಲ್ಲಿ ಆಪ್ ನಾಯಕ ಸನ್ನಿಸಿಂಗ್ ಅವರು ತಜೀಂದರ್ ಪಾಲ್ ಸಿಂಗ್ ಅವರ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿ ವದಂತಿಗಳನ್ನು ಹರಡುತ್ತಿದ್ದಾರೆ. ಧಾರ್ಮಿಕ ಮತ್ತು ಕೋಮು ದ್ವೇಷವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂಬ ಆರೋಪಿಸಿ ಸೈಬರ್‍ಸೆಲ್‍ನಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಕಾರ್ಯದರ್ಶಿಯನ್ನು ಬಂಧಿಸಿದ್ದಾರೆ.

    ಘಟನೆ ಏನು?:
    ಈ ಹಿಂದೆ ದೆಹಲಿ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದಿ ಕಾಶ್ಮೀರ್ ಫೈಲ್ಸ್ ಸಿನಿಮಾವನ್ನು ಸುಳ್ಳು ಚಿತ್ರ ಎಂದು ಲೇವಡಿ ಮಾಡಿದ್ದರು. ಇದನ್ನೂ ಓದಿ: 47 ಲಕ್ಷ ಜನರ ಸಾವಿಗೆ ಕೇಂದ್ರ ಸರ್ಕಾರವೇ ಹೊಣೆ: ದಿನೇಶ್ ಗುಂಡೂರಾವ್

    ಈ ಹೇಳಿಕೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ತಜೀಂದರ್ ಪಾಲ್ ಅವರು, ಸ್ವಾತಂತ್ರ್ಯದ ನಂತರ ಭಾರತದ ಇತಿಹಾಸದಲ್ಲಿ ನಡೆದ ಅತಿದೊಡ್ಡ ನರಮೇಧವನ್ನು ದೆಹಲಿ ವಿಧಾನಸಭೆಯಲ್ಲಿ ಲೇವಡಿ ಮಾಡಲಾಗಿದೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಕಾಶ್ಮೀರಿ ಪಂಡಿತರ ನರಮೇಧದ ಕಥೆ ದಿ ಕಾಶ್ಮೀರ ಫೈಲ್ಸ್ ಸಿನಿಮಾವನ್ನು ಟೀಕಿಸಿದ್ದಾರೆ. ಇದರಿಂದಾಗಿ 100 ಕೋಟಿ ಹಿಂದೂಗಳಿಗೆ ಅವಮಾನವಾಗಿದೆ.

    ಈ ಹಿನ್ನೆಲೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರು ಕ್ಷಮೆ ಕೇಳಬೇಕು. ಅವರು ಕ್ಷಮೆ ಕೇಳದಿದ್ದರೆ ಭಾರತೀಯ ಜನತಾ ಯುವ ಮೋರ್ಚಾ ಕಾರ್ಯಕರ್ತರು ಅವರನ್ನು ಬದುಕಲು ಬಿಡುವುದಿಲ್ಲ. ಅವರು ಕ್ಷಮೆ ಕೇಳುವವರೆಗೆ ನಾವು ನಮ್ಮ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ ಎಂದು ಹೇಳಿದ್ದರು. ಇದನ್ನೂ ಓದಿ: 2,500 ಕೋಟಿ ಕೊಡಿ ನಿಮ್ಮನ್ನೂ ಸಿಎಂ ಮಾಡ್ತೀವಿ ಅಂದ್ರು: ಬಾಂಬ್ ಸಿಡಿಸಿದ ಯತ್ನಾಳ್

    ಈ ಹಿನ್ನೆಲೆಯಲ್ಲಿ ದೂರು ದಾಖಲಿಸಿಕೊಂಡ ಪಂಜಾಬ್ ಪೊಲೀಸರು ದೆಹಲಿಯಲ್ಲಿದ್ದ ಬಿಜೆಪಿ ಮುಖಂಡ ತಜೀಂದರ್ ಪಾಲ್ ಸಿಂಗ್ ಅವರನ್ನು ಬಂಧಿಸಿದ್ದಾರೆ. ಮೂಲಗಳ ಪ್ರಕಾರ 10-12 ಕಾರುಗಳಲ್ಲಿ 50 ಪೊಲೀಸರು ತಾಜೀಂದರ್ ಬಗ್ಗಾ ಅವರನ್ನು ಬಂಧಿಸಲು ದೆಹಲಿಯಲ್ಲಿರುವ ಅವರ ನಿವಾಸಕ್ಕೆ ಬಂದಿದ್ದರು.

  • ‘ಚುನವಿ ಹಿಂದೂ’ – ‘ಗಂಗಾ ಆರತಿ’ ಪೂಜೆಗೈದ ರಾಗಾ ವಿರುದ್ಧ ಬಿಜೆಪಿ ವ್ಯಂಗ್ಯ

    ‘ಚುನವಿ ಹಿಂದೂ’ – ‘ಗಂಗಾ ಆರತಿ’ ಪೂಜೆಗೈದ ರಾಗಾ ವಿರುದ್ಧ ಬಿಜೆಪಿ ವ್ಯಂಗ್ಯ

    ಲಕ್ನೋ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗಂಗೆಗೆ ಆರತಿ ಮಾಡುತ್ತಿದ್ದ ವೀಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಈ ಈ ಪೋಸ್ಟ್ ಗೆ ಬಿಜೆಪಿ ನಾಯಕ ತಜೀಂದರ್ ಪಾಲ್ ಸಿಂಗ್ ‘ಚುನವಿ ಹಿಂದೂ’ ಎಂದು ವ್ಯಗ್ಯವಾಡಿದ್ದಾರೆ.

    ರಾಹುಲ್ ಗಾಂಧಿ ಅವರು ಉತ್ತರಾಖಂಡಕ್ಕೆ ಭೇಟಿ ನೀಡಿದಾಗ ಪ್ರಸಿದ್ಧ ಹರ್ ಕಿ ಪೌರಿ ಘಾಟ್‍ನಲ್ಲಿ ‘ಗಂಗಾ ಆರತಿ’ ಮಾಡಿದ್ದು, ಆ ವೀಡಿಯೋಗಳನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಳ್ಳಲಾಗಿದೆ. ಈ ಟ್ವೀಟ್ ನೋಡಿದ ತಜೀಂದರ್ ಪಾಲ್ ಸಿಂಗ್ ಅವರು ರೀಟ್ವೀಟ್ ಮಾಡಿ ‘ಚುನವಿ ಹಿಂದೂ’ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಫೆ.19 ರಿಂದ 28ವರೆಗೆ ದ.ಕ ಜಿಲ್ಲೆಯಲ್ಲಿ ಕಡತ ವಿಲೇವಾರಿ, ಕಂದಾಯ ಮೇಳ

    ಗಂಗೆಗೆ ಆರತಿ ಸಲ್ಲಿಸುವ ವೇಳೆ ರಾಹುಲ್ ಅವರಿಗೆ ಅರ್ಚಕರೊಬ್ಬರು ಮಾರ್ಗದರ್ಶನ ನೀಡುತ್ತಿರುವ ವೀಡಿಯೋ ತುಣುಕನ್ನು ಹಂಚಿಕೊಂಡಿರುವ ಬಗ್ಗಾ ಅವರು, ರಾಹುಲ್ ‘ಚುನವಿ ಹಿಂದೂ’ ಆಗಿದ್ದಾರೆ. ಅವರು ಹೆಚ್ಚು ತರಬೇತಿ ಪಡೆಯಬೇಕು ಎಂದು ಬರೆದುಕೊಂಡು ಟ್ವೀಟ್ ಮಾಡಿದ್ದಾರೆ.

    ನಿನ್ನೆ ಉತ್ತರಾಖಂಡದಲ್ಲಿ ಗಂಗೆ ಪೂಜೆ ಮಾಡಲು ಬಂದಿದ್ದ ರಾಹುಲ್ ಅವರನ್ನು ನೋಡಲು ಅಪಾರ ಜನಸಮೂಹ ನೆರೆದಿತ್ತು. ಆಗ ಅವರು ‘ಹರ್ ಹರ್ ಗಂಗೆ’ ಘೋಷಣೆಗಳನ್ನು ಕುಗುತ್ತಿದ್ದು, ಈ ವೇಳೆ ರಾಹುಲ್ ‘ಗಂಗಾ ಆರತಿ’ ಮಾಡಿದ್ದಾರೆ. ಕಾರ್ಯಕ್ರಮಕ್ಕೆ ಸಂಬಂಧಿಸಿದ ಮೂರು ವೀಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

    ರಾಹುಲ್ ಅವರು ತಾವು ಪ್ರಾರ್ಥನೆ ಸಲ್ಲಿಸುತ್ತಿರುವ ವೀಡಿಯೋವನ್ನು ಟ್ವೀಟ್ ಮಾಡಿದ್ದು, ಗಂಗಾಜಿಗೆ ನಮಸ್ಕಾರಗಳು! ಉತ್ತರಾಖಂಡದ ಉಜ್ವಲ ಭವಿಷ್ಯಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದರು.

    ಕಳೆದ ತಿಂಗಳು, ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಕೂಡ ಗಾಂಧಿ ಕುಟುಂಬವನ್ನು ಧರ್ಮದ ವಿಚಾರದಲ್ಲಿ ತಿರುಗೇಟು ಕೊಟ್ಟಿದ್ದರು. ಯೋಗಿ ಅವರು, ತಮ್ಮನ್ನು ‘ಆಕಸ್ಮಿಕ ಹಿಂದೂಗಳು’ ಎಂದು ಕರೆದುಕೊಳ್ಳುವವರು, ತಮ್ಮನ್ನು ತಾವು ಹಿಂದೂಗಳು ಎಂದು ಕರೆದುಕೊಳ್ಳಲು ಸಾಧ್ಯವಿಲ್ಲ. ಚುನಾವಣೆಯ ಸಮಯದಲ್ಲಿ ಮಾತ್ರ ಅವರು ಹಿಂದೂಗಳಾಗುತ್ತಾರೆ ಎಂದು ಕಿಡಿಕಾರಿದ್ದರು.

    ಉತ್ತರಾಖಂಡದ ಉಧಮ್ ಸಿಂಗ್ ನಗರದ ಕಿಚ್ಚಾ ಮಂಡಿಯಲ್ಲಿ ರೈತರ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಹುಲ್, ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದರು. ನಮ್ಮ ದೇಶದಲ್ಲಿ ಪ್ರಧಾನಿಯಿಲ್ಲ, ಅದರ ಬದಲು ಜನರು ತಮ್ಮ ಮಾತುಗಳನ್ನು ಕೇಳಬೇಕು ಎನ್ನುವ ರಾಜನಿದ್ದಾನೆ ಎಂದು ಆರೋಪಿಸಿದ್ದರು. ಇದನ್ನೂ ಓದಿ: ಭಾರತಕ್ಕೆ ಇಂದು ಪ್ರಧಾನಿ ಇಲ್ಲ, ಏನೇ ಮಾಡಿದ್ರೂ ಜನ ಸುಮ್ಮನಿರಬೇಕೆನ್ನುವ ರಾಜನಿದ್ದಾನೆ: ರಾಗಾ

    ಪ್ರಧಾನಿ ದೇಶದ ಜನರಿಗಾಗಿ ಕೆಲಸ ಮಾಡಬೇಕು. ಜನರ ಮಾತನ್ನು ಕೇಳಬೇಕು. ನರೇಂದ್ರ ಮೋದಿ ಪ್ರಧಾನಿ ಅಲ್ಲ, ಅವರು ರಾಜ. ಅವರು ಸುಮಾರು ಒಂದು ವರ್ಷ ರೈತರನ್ನು ಕಡೆಗಣಿಸಿ ನಂತರ ಪರಿಹಾರವನ್ನು ಕೊಟ್ಟರು. ಒಬ್ಬ ರಾಜನು ಕೂಲಿ ಕಾರ್ಮಿಕರ ಜೊತೆ ಮಾತನಾಡುವುದಿಲ್ಲ. ಅವರ ಮಾತುಗಳನ್ನು ಕೇಳುವುದಿಲ್ಲ. ತನ್ನದೇ ನಿರ್ಧಾರ ತೆಗೆದುಕೊಳ್ಳುತ್ತಾನೆ ಎಂದು ಟೀಕಿಸಿದ್ದರು.