ಮೇಘನಾ ರಾಜ್ ಸರ್ಜಾ (Meghana Raj) ಹಲವು ವರ್ಷಗಳ ನಂತರ ನಟಿಸಿರುವ ‘ತತ್ಸಮ ತದ್ಭವ’ (Tatsama Tadbhava) ಚಿತ್ರದ ಟ್ರೈಲರ್ (Trailer) ಇತ್ತೀಚೆಗೆ ಬಿಡುಗಡೆಯಾಯಿತು. ಧ್ರುವ ಸರ್ಜಾ (Dhruv Sarja) ಹಾಗೂ ಡಾಲಿ ಧನಂಜಯ (Dhananjay) ಮುಖ್ಯ ಅತಿಥಿಗಳಾಗಿ ಆಗಮಿಸಿ ಟ್ರೈಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಯಶಸ್ಸನ್ನು ಹಾರೈಸಿದರು. ಹಿರಿಯ ನಟ ಸುಂದರರಾಜ್ ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಆನಂತರ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾಹಿತಿ ನೀಡಿದರು.

ನಾನು ಸಿನಿಮಾದಲ್ಲಿ ನಟಿಸಬಾರದು ಎಂದು ನಿರ್ಧರಿಸಿದಾಗ ಬಂದ ಸಿನಿಮಾವಿದು ಎಂದು ಮಾತು ಆರಂಭಿಸಿದ ಮೇಘನರಾಜ್ ಸರ್ಜಾ, ಈ ಚಿತ್ರ ಆರಂಭವಾಗಲು ಕಾರಣ ನನ್ನ ಪತಿ ಚಿರು. ಅವರಿಗೆ ಪ್ರಜ್ವಲ್ (Prajwal Devaraj) ಹಾಗೂ ಪನ್ನಗ ಅವರ ಜೊತೆ ಸೇರಿ ಸದಭಿರುಚಿಯ ಚಿತ್ರಗಳನ್ನು ನಿರ್ಮಾಣ ಮಾಡಬೇಕೆಂಬ ಆಸೆಯಿತ್ತು. ಆನಂತರ ಪನ್ನಗಾಭರಣ ಈ ಚಿತ್ರದ ಕಥೆಯನ್ನು ಹೇಳಲು ನಿರ್ದೇಶಕರನ್ನು ಮನೆಗೆ ಕಳುಹಿಸಿದರು. ಕಥೆ ಇಷ್ಟವಾಯಿತು. ಅಭಿನಯಿಸಿದ್ದೇನೆ. ಪನ್ನಗಾಭರಣ, ಸ್ಫೂರ್ತಿ ಅನಿಲ್ ಹಾಗೂ ಚೇತನ್ ನಂಜುಂಡಯ್ಯ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಪ್ರಜ್ವಲ್ ಅಭಿನಯಿಸಿದ್ದಾರೆ. ಇಂದು ಟ್ರೇಲರ್ ಬಿಡುಗಡೆಯಾಗಿದೆ. ನಾನು ಈ ಚಿತ್ರ ಮಾಡಲು ಸಹಕಾರ ನೀಡಿದ ನನ್ನ ಎರಡು ಕುಟುಂಬಕ್ಕೆ ಧನ್ಯವಾದ. ಟ್ರೈಲರ್ ಬಿಡುಗಡೆ ಮಾಡಿಕೊಟ್ಟ ಧ್ರುವ ಸರ್ಜಾ ಹಾಗೂ ಧನಂಜಯ ಅವರಿಗೆ ವಿಶೇಷ ಧನ್ಯವಾದ ಎಂದರು.

ನಾನು ಈವರೆಗೂ ಮಾಡದ ಪಾತ್ರ ಈ ಚಿತ್ರದಲ್ಲಿ ಮಾಡಿದ್ದೇನೆ. ಬಹಳ ಇಷ್ಟಪಟ್ಟು ಮಾಡಿರುವ ಸಿನಿಮಾವಿದು. ಟ್ರೇಲರ್ ಗೆ ನಮ್ಮ ತಂದೆ ದೇವರಾಜ್ ಅವರು ಧ್ವನಿ ನೀಡಿದ್ದಾರೆ ಎಂದು ಪ್ರಜ್ವಲ್ ದೇವರಾಜ್ ತಿಳಿಸಿದರು. ತತ್ಸಮ ತದ್ಭವ ಒಂದು ಕ್ರೈಮ್ ಥ್ರಿಲ್ಲರ್ ಚಿತ್ರ. ಆದರೆ ಮಾಮೂಲಿ ಕ್ರೈಮ್ ಥ್ರಿಲ್ಲರ್ ಗಳಿಗಿಂತ ವಿಭಿನ್ನ. ನನ್ನ ಕಥೆ ಮೆಚ್ಚಿ ನಿರ್ಮಾಣ ಮಾಡಿರುವ ನಿರ್ಮಾಪಕರಿಗೆ, ಚಿತ್ರದಲ್ಲಿ ನಟಿಸಿರುವ ಕಲಾವಿದರಿಗೆ ಹಾಗೂ ತಂತ್ರಜ್ಞರಿಗೆ ನಾನು ಆಭಾರಿ ಎನ್ನುತ್ತಾರೆ ನಿರ್ದೇಶಕ ವಿಶಾಲ್ ಆತ್ರೇಯ.

ನಾನು ಸಾಮಾನ್ಯವಾಗಿ ಭಾವುಕನಾಗುವುದಿಲ್ಲ. ಇಂದು ಏಕೋ ಗೊತ್ತಿಲ್ಲ ಸ್ವಲ್ಪ ಭಾವುಕನಾಗುತ್ತಿದ್ದೇನೆ ಎಂದು ಮಾತು ಪ್ರಾರಂಭಿಸಿದ ನಿರ್ಮಾಪಕ ಪನ್ನಗಾಭರಣ, ನಾನು ನಿರ್ಮಾಪಕನಾಗಬೇಕು ಅಂತ ಇರಲಿಲ್ಲ. ನಿರ್ಮಾಪಕನಾದೆ. ನನ್ನೊಟ್ಟಿಗೆ ಕೆಲವು ಸ್ನೇಹಿತರು ಕೈ ಜೋಡಿಸಿದರು. ಈಗ ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಟ್ರೈಲರ್ ಬಿಡುಗಡೆ ಮಾಡಿಕೊಟ್ಟ ಧ್ರುವ ಸರ್ಜಾ ಹಾಗೂ ಧನಂಜಯ ಅವರಿಗೆ ಧನ್ಯವಾದ. ಕೆ.ಆರ್.ಜಿ ಸ್ಟುಡಿಯೋಸ್ ಮೂಲಕ ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ ಎಂದರು.
ಸಂಗೀತ ನಿರ್ದೇಶಕ ವಾಸುಕಿ ವೈಭವ್, ಛಾಯಾಗ್ರಾಹಕ ಶ್ರೀನಿವಾಸ ರಾಮಯ್ಯ, ಕೆ.ಆರ್.ಜಿ ಸ್ಟುಡಿಯೋಸ್ ಯೋಗಿ ಜಿ ರಾಜ್ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]




















ನಿಮ್ಮನ್ನು ಮತ್ತೆ ಬೆಳ್ಳಿತೆರೆಯಲ್ಲಿ ನೋಡುವುದು ಯಾವಾಗ? ಎಂದು ಹೆಚ್ಚು ಕೇಳಲಾದ ಪ್ರಶ್ನೆಗೆ ಅಂತಿಮವಾಗಿ ಉತ್ತರ ಇಲ್ಲಿದೆ ಎಂದು ಹೇಳಿದ್ದಾರೆ.ಭಯದಿಂದ ಸಿಕ್ಕಿಹಾಕಿಕೊಂಡಾಗ ನಿರ್ಭಯವಾಗಿರುವುದು ಅವಳ ಏಕೈಕ ಮಾರ್ಗವಾಗಿದೆ ಎಂದು ಕ್ಯಾಪ್ಷನ್ ನೀಡಿ ಪೋಸ್ಟರ್ ಶೇರ್ ಮಾಡಿದ್ದಾರೆ. ನಟಿಯ ಹೊಸ ಹೆಜ್ಜೆಗೆ ಅಭಿಮಾನಿಗಳು ಶುಭಕೋರಿದ್ದಾರೆ.