Tag: ತನ್ವೀರ್‌ ಪೀರಾ

  • ಯತ್ನಾಳ್ ಆರೋಪಿಸಿದ ಅದೇ ಮೌಲ್ವಿ ಜೊತೆ ಗಡ್ಕರಿ ಫೋಟೋ ಬಿಡುಗಡೆ ಮಾಡಿದ ಕಾಂಗ್ರೆಸ್ ಮುಖಂಡ

    ಯತ್ನಾಳ್ ಆರೋಪಿಸಿದ ಅದೇ ಮೌಲ್ವಿ ಜೊತೆ ಗಡ್ಕರಿ ಫೋಟೋ ಬಿಡುಗಡೆ ಮಾಡಿದ ಕಾಂಗ್ರೆಸ್ ಮುಖಂಡ

    ಧಾರವಾಡ: ಹುಬ್ಬಳ್ಳಿಯಲ್ಲಿ ನಡೆದ ಮೌಲ್ವಿಗಳ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಭಾಗವಹಿಸಿದ ನಂತರ ಮೌಲ್ವಿ ತನ್ವೀರ್ ಪೀರಾ (Tanveer Peer) ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಬಹಳಷ್ಟು ಆರೋಪಗಳನ್ನು ಮಾಡಿದರು. ಈ ಆರೋಪಕ್ಕೆ ಈಗ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಯತ್ನಾಳ್ ಆರೋಪಕ್ಕೆ ಕಾಂಗ್ರೆಸ್ ಮುಖಂಡರೊಬ್ಬರು ಫೋಟೋ ಬಿಡುಗಡೆ ಮಾಡಿ ತಿರುಗೇಟು ನೀಡಿದ್ದಾರೆ.

    ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಫೋಟೋ ಬಿಡುಗಡೆ ಮಾಡಿ ತಿರುಗೇಟು ನೀಡಿರುವ ಧಾರವಾಡದ ಮುಸ್ಲಿಂ ಮುಖಂಡ ಇಸ್ಮಾಯಿಲ್ ತಮಟಗಾರ, ಶಾಸಕ ಯತ್ನಾಳ್ ಆರೋಪ ಮಾಡಿದ್ದ ಮೌಲ್ವಿ ತನ್ವೀರ್ ಪೀರಾ ಜೊತೆಯಲ್ಲೇ ಕೇಂದ್ರ ಸಚಿವ ನಿತಿನ್ ಗಡ್ಕರಿ ಇರುವ ಫೋಟೋ ಬಿಡುಗಡೆ ಮಾಡಿದ್ದಾರೆ.

    ಫೋಟೋ ಬಿಡುಗಡೆ ಮಾಡಿ ಹೇಳಿಕೆ ನೀಡಿದ ಇಸ್ಮಾಯಿಲ್ ತಮಟಗಾರ, ಯತ್ನಾಳ್ ಅವರು ಒಂದು ಫೋಟೋ ಬಿಡುಗಡೆ ಮಾಡಿದ್ದಾರೆ, ಆ ಫೋಟೋಗಳನ್ನು ಈಗ ವೆಬ್‌ಸೈಟ್‌ನಿಂದ ತೆಗೆದಿದ್ದಾರೆ. ಅದೇ ವೆಬ್‌ಸೈಟ್‌ನಲ್ಲಿ ಬಿಜೆಪಿ ಮುಖಂಡರ ಫೋಟೋಗಳೂ ಇವೆ ಎಂದು ಹೇಳಿದರು. ಇದನ್ನೂ ಓದಿ: ಗಣ್ಯರ ಮಾಹಿತಿ ಮೊದಲೇ ಗೊತ್ತಿತ್ತು – ಸಿಎಂ ಭದ್ರತಾ ವಿಚಾರದಲ್ಲಿ ಎಡವಿದ್ರಾ ಧಾರವಾಡ ಪೊಲೀಸರು?

    ಅದರಲ್ಲಿ ಗಡ್ಕರಿಯವರ ಫೋಟೋ ಸಹ ಇದೆ. ಇರಾಕ್‌ನಲ್ಲಿನ ಪ್ರಸಿದ್ಧ ದರ್ಗಾ ಅದು. ಆ ದರ್ಗಾದ ಮುಖ್ಯಸ್ಥರ ಜೊತೆ ಮೌಲ್ವಿ ತನ್ವೀರ್ ಪೀರಾ ಇರೋ ಫೋಟೋ ಇವೆ. ಅದೇ ಮುಖ್ಯಸ್ಥರನ್ನು ಗಡ್ಕರಿಯವರು ಈ ಹಿಂದೆ ಭೇಟಿಯಾಗಿದ್ದಾರೆ. ಆ ಭೇಟಿ ವೇಳೆಯ ಫೋಟೋ ಇದಾಗಿದೆ. ಈ ಫೋಟೋದಲ್ಲಿ ಇರಾಕ್ ರಾಷ್ಟ್ರಧ್ವಜವೂ ಇದೆ. ಅದು ಜಗತ್ಪ್ರಸಿದ್ಧ ದರ್ಗಾ. ಅಲ್ಲಿ ಜಗತ್ತಿನ ಅನೇಕರು ಹೋಗುತ್ತಾರೆ. ಅದನ್ನೇ ಇಟ್ಟುಕೊಂಡು ಯತ್ನಾಳ್ ಆರೋಪ ಮಾಡುತ್ತಿದ್ದಾರೆ ಎಂದರು.

    ಯತ್ನಾಳರಿಗೆ ಧಾರವಾಡ ಹುಚ್ಚಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬೇಕು. ಇಲ್ಲವೇ ಇಲ್ಲಿನ ಹುಚ್ಚಾಸ್ಪತ್ರೆಯಿಂದ ಮಾತ್ರೆಯಾದರೂ ಒಯ್ದು ಕೊಡಬೇಕಿದೆ. ಇಲ್ಲಿ 50 ಕಿಮೀ ಸಮೀಪದ ಬೆಳಗಾವಿಗೆ ಅವರು ಬಂದಿದ್ದಾರೆ. ಹೀಗಾಗಿ ಧಾರವಾಡ ಮೆಂಟಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲಿ ಎಂದು ಇಸ್ಮಾಯಿಲ್ ಯತ್ನಾಳ್ ಬಗ್ಗೆ ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: ನಾನು ರಾಜ್ಯಾಧ್ಯಕ್ಷನಾದ 20 ದಿನಗಳಲ್ಲಿಯೇ ಬದಲಾವಣೆ: ವಿಜಯೇಂದ್ರ

  • ಗಣ್ಯರ ಮಾಹಿತಿ ಮೊದಲೇ ಗೊತ್ತಿತ್ತು – ಸಿಎಂ ಭದ್ರತಾ ವಿಚಾರದಲ್ಲಿ ಎಡವಿದ್ರಾ ಧಾರವಾಡ ಪೊಲೀಸರು?

    ಗಣ್ಯರ ಮಾಹಿತಿ ಮೊದಲೇ ಗೊತ್ತಿತ್ತು – ಸಿಎಂ ಭದ್ರತಾ ವಿಚಾರದಲ್ಲಿ ಎಡವಿದ್ರಾ ಧಾರವಾಡ ಪೊಲೀಸರು?

    ಧಾರವಾಡ: ಸಿಎಂ ಸಿದ್ದರಾಮಯ್ಯನವರ (CM Siddaramaiah) ಭದ್ರತಾ ವಿಚಾರದಲ್ಲಿ ಧಾರವಾಡ ಪೊಲೀಸರು (Dharwad Police) ಎಡವಿದ್ರಾ ಎಂಬ ಗಂಭೀರ ಪ್ರಶ್ನೆ ಎದ್ದಿದೆ.

    ಹುಬ್ಬಳ್ಳಿಯಲ್ಲಿ ನಡೆದ ಮುಸ್ಲಿಂ ಧರ್ಮಗುರುಗಳ ಸಮ್ಮೇಳನದಲ್ಲಿ ವೇದಿಕೆ ಮೇಲೆ ಕುಳಿತವರ ಮಾಹಿತಿ ಪೊಲೀಸ್ ಮತ್ತು ಜಿಲ್ಲಾಡಳಿತಕ್ಕೆ ಮೊದಲೇ ಗೊತ್ತಿತ್ತು ಎಂಬ ವಿಚಾರ ಈಗ ಮೂಲಗಳಿಂದ ತಿಳಿದು ಬಂದಿದೆ.

    ತನ್ವೀರ್ ಪೀರಾ (Tanveer Peera) ಮೇಲಿನ ಅಪರಾಧಗಳ‌ ಬಗ್ಗೆಯೂ ಪೊಲೀಸರಿಗೆ ಮಾಹಿತಿ ಇತ್ತು. ಆದರೆ ಯಾವುದನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿರಲಿಲ್ಲ. ಈಗ ಬಿಜೆಪಿ ಶಾಸಕ ಯತ್ನಾಳ್‌ ಸಿಡಿಸಿದ ʼಐಸಿಸ್‌ ಬಾಂಬ್‌ʼ ನಿಂದ ಎಚ್ಚೆತ್ತ ಪೊಲೀಸರು ಕಾರ್ಯಕ್ರಮ ಆಯೋಜಕರಿಂದ ಮತ್ತೊಮ್ಮೆ ವೇದಿಕೆ ಮೇಲೆ ಕುಳಿತವರಿಂದ ಮಾಹಿತಿ ಪಡೆಯುತ್ತಿದ್ದಾರೆ.

     
    ವೇದಿಕೆಯ ಮೇಲೆ ಸಿಎಂ ಜೊತೆಗಿದ್ದ 26 ಜನರ ಮಾಹಿತಿಯನ್ನು ಪೊಲೀಸರು ಸಂಗ್ರಹಿಸುತ್ತಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಯತ್ನಾಳ್‌ ಮತ್ತಷ್ಟು ಬಾಂಬ್‌ ಸಿಡಿಸುವ ಸಾಧ್ಯತೆ ಇರುವುದರಿಂದ ಸರ್ಕಾರ ಎಚ್ಚೆತ್ತುಕೊಂಡು ಗಣ್ಯರ ಮಾಹಿತಿ ಸಂಗ್ರಹಿಸಲು ಸೂಚಿಸಿದೆ.

    ಪಬ್ಲಿಕ್‌ ಟಿವಿ ಜೊತೆ ಮಾತನಾಡಿದ್ದ ಯತ್ನಾಳ್‌, ತನ್ವೀರ್‌ ಪೀರಾ ಮದರಸಾ ನಡೆಸುತ್ತಿದ್ದು, ವಿಮಾನದಲ್ಲೇ ದೇಶ, ವಿದೇಶಗಳನ್ನು ಸುತ್ತುತ್ತಿದ್ದಾರೆ. ಈ ವ್ಯಕ್ತಿಗೆ ಹಣ ನೀಡುವವರು ಯಾರು? ಟಿಕೆಟ್‌ ಬುಕ್‌ ಮಾಡುವವರು ಯಾರು? ಈ ವ್ಯಕ್ತಿಯ ಖಾತೆಗೆ ಯಾವ ದೇಶದಿಂದ ಎಷ್ಟು ಹಣ ಬರುತ್ತದೆ ಎಂಬುದನ್ನು ಪತ್ತೆ ಹಚ್ಚಿದರೆ ಎಲ್ಲಾ ವಿಚಾರಗಳು ಬಯಲಾಗುತ್ತದೆ. ಈ ಸಂಬಂಧ ರಾಷ್ಟ್ರೀಯ ತನಿಖಾ ದಳ (NIA) ಈ ವ್ಯಕ್ತಿಯ ಮೇಲೆ ತನಿಖೆ ನಡೆಸಬೇಕೆಂದು ಕೋರಿ ಪತ್ರ ಬರೆದಿದ್ದೇನೆ ಎಂದು ಹೇಳಿದ್ದರು.

     

    ಯಾರು ಈ ತನ್ವೀರ್‌ ಪೀರಾ?
    ಸಿದ್ದರಾಮಯ್ಯ ಜೊತೆ ವೇದಿಕೆ ಹಂಚಿಕೊಂಡಿದ್ದ ತನ್ವೀರ್ ಪೀರಾ ಈ ವರ್ಷದ ಮೇ ತಿಂಗಳಿನಲ್ಲಿ ವಿಜಯಪುರದಲ್ಲಿ ನಡೆದಿದ್ದ ಶೂಟೌಟ್ ಕೇಸಲ್ಲಿ ಮೂರನೇ ಆರೋಪಿಯಾಗಿದ್ದಾರೆ.

    ಮೇ 6 ರಂದು ವಿಜಯಪುರದಲ್ಲಿ ನಡೆದ ಶೂಟೌಟ್‌ನಲ್ಲಿ ರೌಡಿ ಶೀಟರ್ ಹೈದರಾಲಿ ನದಾಫ್ ಎಂಬುವನ ಹತ್ಯೆ ನಡೆದಿತ್ತು. ಆ ಹತ್ಯೆಯನ್ನು ತನ್ವೀರ್‌ ಪೀರಾ ಹಾಸ್ಮಿ ಮಾಡಿಸಿದ್ದಾರೆಂಬ ಆರೋಪ ಕೇಳಿ ಬಂದಿತ್ತು. ಹತ್ಯೆಯಾದ ಹೈದರಾಲಿ ಪತ್ನಿ ನಿಶಾತ್ ದೂರು ದಾಖಲಿಸಿದ್ದರು. ದೂರಿನಲ್ಲಿ ತನ್ವೀರ್ ಪೀರಾ ಹೆಸರನ್ನು ಕೂಡ ಹಾಕಲಾಗಿತ್ತು. ಈ ಪ್ರಕರಣದ ತನಿಖೆ ನಡೆಯುತ್ತಿದೆ.  ಇದನ್ನೂ ಓದಿ: ಐಸಿಸ್‌ ಜೊತೆ ನಂಟು ಸಾಬೀತು ಪಡಿಸಿದ್ರೆ ದೇಶ ತೊರೆಯುತ್ತೇನೆ: ಯತ್ನಾಳ್‌ಗೆ ತನ್ವೀರ್‌ ಪೀರಾ ಸವಾಲ್‌

     

    ವಿಜಯಪುರ ಮೂಲದವ ಸದ್ಯ ಸೂಫಿ ಎಂದು ಗುರುತಿಸಿಕೊಂಡಿರುವ ತನ್ವೀರ್ ಪೀರಾ ದೇಶಾದ್ಯಂತ ಸುತ್ತಾಟ ನಡೆಸುತ್ತಿದ್ದಾರೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ (Basangouda Patil Yatnal) ಮತ್ತು ತನ್ವೀರ್ ಪೀರಾ ನಡುವಣ ವೈರತ್ವ ಇಂದಿನದ್ದಲ್ಲ. 2018ರಲ್ಲಿ ನಡೆದ ಕಾರ್ಯಕ್ರಮದಲ್ಲಿ ಯತ್ನಾಳ್ ವಿರುದ್ಧ ತನ್ವೀರ್ ಅಬ್ಬರಿಸಿದ್ದರು. ಮುಂದೆ ಬಕ್ರೀದ್ ಬರಲಿದೆ. ಆಗ ಕುರುಬಾನಿ ಕೊಡುತ್ತೇವೆ. ಆಗ ಸೈತಾನ್ ವಿರೋಧಿಸಿದರೆ ನಾವು ಸುಮ್ಮನಿರಲ್ಲ. ಒಂದು ಕುರುಬಾನಿ ಜೊತೆಗೆ ಇನ್ನೊಂದು ಕುರುಬಾನಿ ಆಗಬಾರದು. ಈಗಲೇ ಎಚ್ಚರಿಸುತ್ತಿದ್ದೇನೆ ಎಂದಿದ್ದರು. ಈ ಸಂಬಂಧ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ತನ್ವೀರ್ ವಿರುದ್ಧ ಕೇಸ್ ದಾಖಲಾಗಿತ್ತು.

     

  • ವಿಜಯಪುರ ಶೂಟೌಟ್‌ ಕೇಸ್‌ನಲ್ಲಿ 3ನೇ ಆರೋಪಿ – ಸಿಎಂ ಜೊತೆ ವೇದಿಕೆ ಹಂಚಿಕೊಂಡಿದ್ದ ತನ್ವೀರ್‌ ಪೀರಾ ಯಾರು?

    ವಿಜಯಪುರ ಶೂಟೌಟ್‌ ಕೇಸ್‌ನಲ್ಲಿ 3ನೇ ಆರೋಪಿ – ಸಿಎಂ ಜೊತೆ ವೇದಿಕೆ ಹಂಚಿಕೊಂಡಿದ್ದ ತನ್ವೀರ್‌ ಪೀರಾ ಯಾರು?

    ವಿಜಯಪುರ: ಹುಬ್ಬಳ್ಳಿಯಲ್ಲಿ ನಡೆದ ಮುಸ್ಲಿಂ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಜೊತೆ ವೇದಿಕೆ ಹಂಚಿಕೊಂಡಿದ್ದ ತನ್ವೀರ್ ಪೀರಾ (Tanveer Peera) ಈ ವರ್ಷದ ಮೇ ತಿಂಗಳಿನಲ್ಲಿ ವಿಜಯಪುರದಲ್ಲಿ ನಡೆದಿದ್ದ ಶೂಟೌಟ್ ಕೇಸಲ್ಲಿ ಮೂರನೇ ಆರೋಪಿಯಾಗಿದ್ದಾರೆ.

    ಮೇ 6 ರಂದು ವಿಜಯಪುರದಲ್ಲಿ ನಡೆದ ಶೂಟೌಟ್‌ನಲ್ಲಿ ರೌಡಿ ಶೀಟರ್ ಹೈದರಾಲಿ ನದಾಫ್ ಎಂಬುವನ ಹತ್ಯೆ ನಡೆದಿತ್ತು. ಆ ಹತ್ಯೆಯನ್ನು ತನ್ವೀರ್‌ ಪೀರಾ ಹಾಸ್ಮಿ ಮಾಡಿಸಿದ್ದಾರೆಂಬ ಆರೋಪ ಕೇಳಿ ಬಂದಿತ್ತು. ಹತ್ಯೆಯಾದ ಹೈದರಾಲಿ ಪತ್ನಿ ನಿಶಾತ್ ದೂರು ದಾಖಲಿಸಿದ್ದರು. ದೂರಿನಲ್ಲಿ ತನ್ವೀರ್ ಪೀರಾ ಹೆಸರನ್ನು ಕೂಡ ಹಾಕಲಾಗಿತ್ತು. ಈ ಪ್ರಕರಣದ ತನಿಖೆ ನಡೆಯುತ್ತಿದೆ.

     

    ವಿಜಯಪುರ ಮೂಲದವ ಸದ್ಯ ಸೂಫಿ ಎಂದು ಗುರುತಿಸಿಕೊಂಡಿರುವ ತನ್ವೀರ್ ಪೀರಾ ದೇಶಾದ್ಯಂತ ಸುತ್ತಾಟ ನಡೆಸುತ್ತಿದ್ದಾರೆ.

    ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ (Basangouda Patil Yatnal) ಮತ್ತು ತನ್ವೀರ್ ಪೀರಾ ನಡುವಣ ವೈರತ್ವ ಇಂದಿನದ್ದಲ್ಲ. 2018ರಲ್ಲಿ ನಡೆದ ಕಾರ್ಯಕ್ರಮದಲ್ಲಿ ಯತ್ನಾಳ್ ವಿರುದ್ಧ ತನ್ವೀರ್ ಅಬ್ಬರಿಸಿದ್ದರು.

    ಮುಂದೆ ಬಕ್ರೀದ್ ಬರಲಿದೆ. ಆಗ ಕುರುಬಾನಿ ಕೊಡುತ್ತೇವೆ. ಆಗ ಸೈತಾನ್ ವಿರೋಧಿಸಿದರೆ ನಾವು ಸುಮ್ಮನಿರಲ್ಲ. ಒಂದು ಕುರುಬಾನಿ ಜೊತೆಗೆ ಇನ್ನೊಂದು ಕುರುಬಾನಿ ಆಗಬಾರದು. ಈಗಲೇ ಎಚ್ಚರಿಸುತ್ತಿದ್ದೇನೆ ಎಂದಿದ್ದರು. ಈ ಸಂಬಂಧ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ತನ್ವೀರ್ ವಿರುದ್ಧ ಕೇಸ್ ದಾಖಲಾಗಿತ್ತು.

    ಪಬ್ಲಿಕ್‌ ಟಿವಿ ಜೊತೆ ಮಾತನಾಡಿದ ಯತ್ನಾಳ್‌, ತನ್ವೀರ್‌ ಪೀರಾ ಮದರಸಾ ನಡೆಸುತ್ತಿದ್ದು, ವಿಮಾನದಲ್ಲೇ ದೇಶ, ವಿದೇಶಗಳನ್ನು ಸುತ್ತುತ್ತಿದ್ದಾರೆ. ಈ ವ್ಯಕ್ತಿಗೆ ಹಣ ನೀಡುವವರು ಯಾರು? ಟಿಕೆಟ್‌ ಬುಕ್‌ ಮಾಡುವವರು ಯಾರು ಎಂದು ಪತ್ತೆ ಹಚ್ಚಿದರೆ ಎಲ್ಲಾ ವಿಚಾರಗಳು ಬಯಲಾಗುತ್ತದೆ. ಈ ಸಂಬಂಧ ರಾಷ್ಟ್ರೀಯ ತನಿಖಾ ದಳ (NIA) ಈ ವ್ಯಕ್ತಿಯ ಮೇಲೆ ತನಿಖೆ ನಡೆಸಬೇಕೆಂದು ಕೋರಿ ಪತ್ರ ಬರೆದಿದ್ದೇನೆ ಎಂದು ಹೇಳಿದರು.