Tag: ತಮಿಳಗ ವೆಟ್ರಿ ಕಳಗಂ

  • ದಳಪತಿ ವಿಜಯ್‌ ಟಿವಿಕೆ ಪಕ್ಷದ ಸಿಎಂ ಅಭ್ಯರ್ಥಿ – ಬಿಜೆಪಿ, ಡಿಎಂಕೆ ಜೊತೆ ಮೈತ್ರಿ ಇಲ್ಲ

    ದಳಪತಿ ವಿಜಯ್‌ ಟಿವಿಕೆ ಪಕ್ಷದ ಸಿಎಂ ಅಭ್ಯರ್ಥಿ – ಬಿಜೆಪಿ, ಡಿಎಂಕೆ ಜೊತೆ ಮೈತ್ರಿ ಇಲ್ಲ

    ಚೆನ್ನೈ: 2026ರ ತಮಿಳುನಾಡು ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ಶುರುವಾಗಿದ್ದು, ನಟ-ರಾಜಕಾರಣಿ ದಳಪತಿ ವಿಜಯ್‌ (Thalapathy Vijay) ಅವರನ್ನ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಅಧಿಕೃತ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಲಾಗಿದೆ.

    ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಕುರಿತು ನಿರ್ಣಯ ಅಂಗೀಕರಿಸಿದ್ದು, ಯಾವುದೇ ಕಾರಣಕ್ಕೂ ಬಿಜೆಪಿ (BJP) ಜೊತೆಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ, ಡಿಎಂಕೆ (DMK) ಜೊತೆಗೂ ಇಲ್ಲ ಎಂದು ಖಡಾಖಂಡಿತವಾಗಿ ಹೇಳಲಾಗಿದೆ. ಇದನ್ನೂ ಓದಿ: ಒಂದು ಗಡಿ, ಮೂರು ವಿರೋಧಿಗಳು; ಆಪರೇಷನ್‌ ಸಿಂಧೂರದಲ್ಲಿ ಪಾಕ್‌-ಚೀನಾ-ಟರ್ಕಿ ನಂಟು ಬಹಿರಂಗಪಡಿಸಿದ ಸೇನಾ ಉಪಮುಖ್ಯಸ್ಥ

    ಈಗಿನಿಂದಲೇ ಚುನಾವಣಾ ತಯಾರಿ ಮಾಡಿಕೊಳ್ಳುತ್ತಿರುವ ಟಿವಿಕೆ ಪಕ್ಷ ಮುಂದಿನ ತಿಂಗಳಲ್ಲಿ ಬೃಹತ್‌ ರಾಜ್ಯ ಸಮ್ಮೇಳನ ಆಯೋಜಿಸಲು ತಯಾರಿ ನಡೆಸುತ್ತಿದೆ. ಪಕ್ಷದ ಸಿದ್ಧಾಂತಗಳನ್ನ ಜನರಿಗೆ, ಮನೆ ಮನೆಗೆ ಹಳ್ಳಿಗೆ ಹಳ್ಳಿಗೆ ತಲುಪಿಸಲು ಸಾರ್ವಜನಿಕ ಸಭೆಗಳನ್ನು ನಡೆಸಲು ಪ್ಲ್ಯಾನ್‌ ಮಾಡಿದೆ. ಜೊತೆಗೆ ಪಕ್ಷದ ಸದಸ್ಯತ್ವ ಹೆಚ್ಚಿಸಲು ಮತ್ತು ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲು ನಿರ್ಧರಿಸಲಾಗಿದೆ. ಇದನ್ನೂ ಓದಿ: ದೆಹಲಿ ಸರ್ಕಾರದಿಂದ ಯೂಟರ್ನ್ – ಅವಧಿ ಮೀರಿದ ವಾಹನಗಳಿಗೆ ಹೇರಿದ್ದ ಇಂಧನ ನಿಷೇಧ ಆದೇಶ ವಾಪಸ್

    ಟಿವಿಕೆ ಇಂದು ಪಕ್ಷದ ಕಾರ್ಯಕಾರಿ ಸಮಿತಿ ಸಭೆ ನಡೆಸಿತು. ಇದರಲ್ಲಿ ಮುಂದಿನ ವಿಧಾನಸಭೆ ಚುನಾವಣೆಯ ಅಭ್ಯರ್ಥಿ ವಿಜಯ್ಎಂದು ತೀರ್ಮಾನಿಸಿದೆ. ಮುಂದಿನ ತಿಂಗಳು ದೊಡ್ಡ ಮಟ್ಟದ ರಾಜ್ಯ ಸಮ್ಮೇಳನ ನಡೆಸಿ, ಪಕ್ಷದ ಸಿದ್ಧಾಂತವನ್ನು ಹಳ್ಳಿಗಳಿಗೆ ತಲುಪಿಸಲು ತೀರ್ಮಾನಿಸಲಾಗಿದೆ.

    ಮೈತ್ರಿಗೆ ನೋ ಎಂದ ವಿಜಯ್
    ಇನ್ನೂ ಸಭೆಯಲ್ಲಿ ಮಾತನಾಡಿದ ನಟ ಮತ್ತು ಟಿವಿಕೆ ನಾಯಕ ವಿಜಯ್‌, ಬಿಜೆಪಿಯ ಜೊತೆಗೆ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ. ಬಹಿರಂಗವಾಗಿ ಮಾತ್ರವಲ್ಲ, ತೆರೆಮರೆಯಲ್ಲೂ ಮೈತ್ರಿ ಮಾಡಿಕೊಳ್ಳೋದೆ ಇಲ್ಲ ಎಂದು ಖಡಕ್ಆಗಿ ಹೇಳಿದ್ದಾರೆ.

    ಇತ್ತೀಚೆಗೆ ಬೆಂಗಳೂರಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಇತ್ತೀಚಿನ ಇಂಗ್ಲಿಷ್ ಭಾಷೆಯ ಕುರಿತಾದ ಹೇಳಿಕೆ ವೈರಲ್ಆಗಿತ್ತು. ಅದನ್ನು ಉಲ್ಲೇಖಿಸಿ ಮಾತನಾಡಿದ ವಿಜಯ್, ಇದು ದುರುದ್ಧೇಶಪೂರಿತ. ಇದರಿಂದಲೇ ತಿಳಿಯುತ್ತದೆ ಮುಂದೆ ತಮಿಳುನಾಡಿನ ಮೇಲೂ ಎರಡು ಭಾಷಾ ನೀತಿ ಹೇರಿಕೆಯಾಗಲಿದೆ ಹೀಗಾಗಿ, ಮೈತ್ರಿ ಮಾಡಿಕೊಳ್ಳುವುದು ಸರಿಯಲ್ಲ ಎಂದು ನುಡಿದಿದ್ದಾರೆ.

    ಬಿಜೆಪಿಯೊಂದಿಗೆ ತಮಿಳುನಾಡಿನಲ್ಲಿ ವಿಷ ಬೀಜ ಬಿತ್ತಲು ಸಾಧ್ಯವಿಲ್ಲ. ಅಣ್ಣಾ ಮತ್ತು ಪೆರಿಯಾರ್ ಅವರನ್ನು ವಿರೋಧಿಸಿ ತಮಿಳುನಾಡಿನಲ್ಲಿ ಗೆಲ್ಲಲು ಸಾಧ್ಯವಿಲ್ಲ. ಡಿಎಂಕೆ ಅಥವಾ AIADMK ಬಿಜೆಪಿ ಜೊತೆಗೂ ಕೈ ಜೋಡಿಸೋದಿಲ್ಲ ಎಂದು ಖಚಿತಪಡಿಸಿದ್ದಾರೆ. ಇದನ್ನೂ ಓದಿ: 2026ರ ಚುನಾವಣೆಯಲ್ಲಿ ಬಹುದೊಡ್ಡ ಪಕ್ಷವಾಗಿ ಗೆಲ್ತೀವಿ – ದಳಪತಿ ವಿಜಯ್‌ ʻವಿಕ್ಟರಿʼ ಮಾತು

  • ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ ಪಕ್ಷವನ್ನು ಅಧಿಕೃತಗೊಳಿಸಿದ ಚುನಾವಣಾ ಆಯೋಗ

    ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ ಪಕ್ಷವನ್ನು ಅಧಿಕೃತಗೊಳಿಸಿದ ಚುನಾವಣಾ ಆಯೋಗ

    ಮಿಳಿನ ಸ್ಟಾರ್ ನಟ ವಿಜಯ್ ದಳಪತಿ (Vijay Thalapathy) ಆರಂಭಿಸಿದ ‘ತಮಿಳಿಗ ವೆಟ್ರಿ ಕಳಗಂ’ (TVK) ಪಕ್ಷವನ್ನು ಚುನಾವಣಾ ಆಯೋಗವು ಅಧಿಕೃತವಾಗಿ ನೊಂದಣಿ ಮಾಡಿಕೊಂಡಿದೆ. ಇದನ್ನೂ ಓದಿ:ಗುರುದತ್‌ ಗಾಣಿಗ ನಿರ್ದೇಶನದ ‘ಜುಗಾರಿ ಕ್ರಾಸ್’ ಸಿನಿಮಾ ಅನೌನ್ಸ್- ಕುತೂಹಲ ಹೆಚ್ಚಿಸಿದ ಫಸ್ಟ್ ಲುಕ್

    ನಾವು ಫೆಬ್ರವರಿ 2ರಂದು ಚುನಾವಣಾ ಆಯೋಗಕ್ಕೆ ನಮ್ಮ ಪಕ್ಷದ ಮಾನ್ಯತೆಗಾಗಿ ಅರ್ಜಿ ಸಲ್ಲಿಸಿದ್ದೇವೆ. ನಮ್ಮ ಅರ್ಜಿಯನ್ನು ಕಾನೂನುಬದ್ಧವಾಗಿ ಪರಿಶೀಲಿಸಿದ ನಂತರ, ಚುನಾವಣಾ ಆಯೋಗವು ನಮ್ಮ ‘ತಮಿಳಗ ವೆಟ್ರಿ ಕಳಗಂ’ ಪಕ್ಷವನ್ನು ನೋಂದಾಯಿಸಿದೆ ಮತ್ತು ಚುನಾವಣಾ ರಾಜಕೀಯದಲ್ಲಿ ಭಾಗವಹಿಸಲು ನಮ್ಮ ಪಕ್ಷವನ್ನು ಅನುಮೋದಿಸಿದೆ ಎಂದು ನಟ ವಿಜಯ್ ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದ್ದಾರೆ. ಇನ್ನೂ ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲು ಈಗಿನಿಂದಲೇ ತೆರೆಮರೆಯಲ್ಲಿ ತಯಾರಿ ನಡೆಯುತ್ತಿದೆ.

    ಅಂದಹಾಗೆ, ವಿಜಯ್ ಸದ್ಯ ‘ದಿ ಗೋಟ್’ (The Goat) ಸಿನಿಮಾದ ಮೂಲಕ ಸದ್ದು ಮಾಡುತ್ತಿದ್ದಾರೆ. ಥಿಯೇಟರ್‌ನಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ.

  • Citizenship Law: ಸಿಎಎ ಜಾರಿಗೆ ದಳಪತಿ ವಿಜಯ್‌ ವಿರೋಧ

    ಚೆನ್ನೈ: ಇತ್ತೀಚೆಗಷ್ಟೇ ತಮಿಳಗ ವೆಟ್ರಿ ಕಳಗಂ ಪಕ್ಷ ಸ್ಥಾಪಿಸಿ ರಾಜಕೀಯ ಪ್ರವೇಶಿಸಿರುವ ನಟ ವಿಜಯ್‌ ದಳಪತಿ (Vijay Thalapathy) ಪೌರತ್ವ ತಿದ್ದುಪಡಿ ಕಾಯ್ದೆ (CAA) ಜಾರಿಗೆ ವಿರೋಧ ವ್ತಕ್ಯಪಡಿಸಿದ್ದಾರೆ.

    ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಪ್ರಧಾನಿ ಮೋದಿ (Narendra Modi) ನೇತೃತ್ವದ ಸರ್ಕಾರ ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಮಾಡಿ ಸೋಮವಾರವಷ್ಟೇ (ಮಾ.11) ಅಧಿಸೂಚನೆ ಹೊರಡಿಸಿತ್ತು. ಸಿಎಎ ಕಾಯ್ದೆಗೆ ಕೆಲವರು ಮೆಚ್ಚುಗೆ ಸೂಚಿಸಿದ್ರೆ, ಇನ್ನೂ ಕೆಲವರು ವಿರೋಧಿಸಿ ಸೋಶಿಯಲ್‌ ಮೀಡಿಯಾಗಳಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಈ ಬೆನ್ನಲ್ಲೇ ದಳಪತಿ ವಿಜಯ್‌ ಸಹ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಭಾರತದ ಪ್ರತಿಯೊಬ್ಬ ಮುಸ್ಲಿಮರೂ ಸಿಎಎಯನ್ನು ಸ್ವಾಗತಿಸಬೇಕು: ಮುಸ್ಲಿಂ ಜಮಾತ್‌ ಅಧ್ಯಕ್ಷ ಕರೆ

    ದಳಪತಿ ಹೇಳಿದ್ದೇನು?
    ಸಿಎಎ ಜಾರಿಗೆ ವಿರೋಧಿಸಿ ಪತ್ರಿಕಾ ಪ್ರಕಟಣೆ ಹೊರಡಿಸಿರುವ ವಿಜಯ್‌, ಸಿಎಎ ಜಾರಿಗೆ ಜಾರಿ ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ. ದೇಶದ ಎಲ್ಲಾ ನಾಗರಿಕರು ಸಾಮಾಜಿಕ ಸಾಮರಸ್ಯದಿಂದ ಬದುಕುವ ವಾತಾವರಣದಲ್ಲಿ ಭಾರತೀಯ ಪೌರತ್ವ ತಿದ್ದುಪಡಿ ಕಾಯಿದೆ-2019 (ಸಿಎಎ) ನಂತಹ ಯಾವುದೇ ಕಾನೂನನ್ನು ಜಾರಿಗೆ ತರುವುದು ಸ್ವೀಕಾರಾರ್ಹವಲ್ಲ ಎಂದಿದ್ದಾರೆ. ಅಲ್ಲದೇ ತಮಿಳುನಾಡಿನಲ್ಲಿ ಈ ಕಾಯ್ದೆ ಜಾರಿಯಾಗದಂತೆ ನೋಡಿಕೊಳ್ಳಬೇಕು ಎಂದು ಸರ್ಕಾರಕ್ಕೆ (Tamil Nadu government) ಮನವಿ ಮಾಡಿದ್ದಾರೆ. ಇದನ್ನೂ ಓದಿ: ಮಿಷನ್‌ ದಿವ್ಯಾಸ್ತ್ರ ಪ್ರಯೋಗ ಯಶಸ್ವಿ – ಏನಿದು MIRV ತಂತ್ರಜ್ಞಾನ? ಯುದ್ಧದ ವೇಳೆ ಹೇಗೆ ಸಹಾಯವಾಗುತ್ತೆ? ಯಾರ ಬಳಿಯಿದೆ?

    ಸಿಎಎಯಲ್ಲಿ ಏನಿದೆ?
    ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ತಾನದಲ್ಲಿ ಕಿರುಕುಳಕ್ಕೆ ಒಳಗಾಗಿ ಭಾರತಕ್ಕೆ ವಲಸೆ ಬಂದಿರುವ ಮುಸ್ಲಿಮೇತರರಿಗೆ ಭಾರತದ ಪೌರತ್ವ (Citizenship) ನೀಡಲಾಗುತ್ತದೆ. 2014ರ ಡಿಸೆಂಬರ್ 31ಕ್ಕೆ ಮೊದಲು ರಕ್ಷಣೆ ಬಯಸಿ ಭಾರತಕ್ಕೆ ಶರಣಾರ್ಥಿಗಳಾಗಿ ಬಂದಿರುವ ಹಿಂದೂಗಳು, ಕ್ರೈಸ್ತರು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳಿಗೆ ಮಾತ್ರ ಸಿಎಎ ಅನ್ವಯ ಪೌರತ್ವ ನೀಡಲಾಗುತ್ತದೆ. ಪೌರತ್ವ ನೋಂದಣಿ ಪ್ರಕ್ರಿಯೆ ಸಂಪೂರ್ಣವಾಗಿ ಆನ್‌ಲೈನ್‌ನಲ್ಲಿಯೇ ಮುಗಿಯಲಿದ್ದು, ದೇಶದಲ್ಲಿರುವ ಮುಸ್ಲಿಮರಿಗೆ ಸಿಎಎಯಿಂದ ಯಾವುದೇ ತೊಂದರೆ ಆಗುವುದಿಲ್ಲ ಎಂಬುದನ್ನು ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ – ಕೇಂದ್ರದಿಂದ ಅಧಿಸೂಚನೆ ಪ್ರಕಟ