Tag: ತಮಿಳುನಾಡು ಮಳೆ

  • Bengaluru | ನಿಲ್ಲದ ವರುಣನ ಆರ್ಭಟ: ನಾಳೆ ಶಾಲೆಗಳಿಗೆ ರಜೆ ಘೋಷಣೆ

    Bengaluru | ನಿಲ್ಲದ ವರುಣನ ಆರ್ಭಟ: ನಾಳೆ ಶಾಲೆಗಳಿಗೆ ರಜೆ ಘೋಷಣೆ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ (Silicon City) ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ನಾಳೆ (ಅ.16ರಂದು) ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

    ಸೋಮವಾರ ರಾತ್ರಿಯಿಂದ ಸುರಿಯುತ್ತಿರುವ ಮಳೆಯಿಂದಾಗಿ ನಗರದಲ್ಲಿ ಭಾರೀ ಅವಾಂತರಗಳು ಸೃಷ್ಟಿಯಾಗಿದ್ದು, ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿವೆ.ಇದನ್ನೂ ಓದಿ: 95 ನಿಮಿಷಗಳ ಥ್ರಿಲ್ಲರ್ ‘ಪ್ರಕರಣ ತನಿಖಾ ಹಂತದಲ್ಲಿದೆ’ ಚಿತ್ರ ಈ ವಾರ ತೆರೆಗೆ!

    ಮಳೆ ಅಬ್ಬರದ ಹಿನ್ನೆಲೆ ಬೆಂಗಳೂರು ಜಿಲ್ಲಾಧಿಕಾರಿ ಜಗದೀಶ್ (DC Jagadeesh) ರಜೆ ಘೋಷಿಸಿದ್ದು, ಅಂಗನವಾಡಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆ ಮುನ್ಸೂಚನೆ ಮೇರೆಗೆ ನಾಳೆ ಒಂದು ದಿನ ರಜೆ ಘೋಷಣೆ ಮಾಡಲಾಗಿದ್ದು, ಪ್ರಾಥಮಿಕ, ಪ್ರೌಢಶಾಲಾ ಬಿಟ್ಟು ಉಳಿದ ತರಗತಿಗಳು ಎಂದಿನಂತೆ ನಡೆಯಲಿವೆ ಹಾಗೂ ಪದವಿ, ಸ್ನಾತಕೋತ್ತರ ಪದವಿ, ಐಐಟಿ, ಎಂಜಿನಿಯರಿಂಗ್ ಕಾಲೇಜುಗಳಿಗೆ ರಜೆ ಇಲ್ಲ ಎಂದು ತಿಳಿಸಿದ್ದಾರೆ.

    ಎಲ್ಲಾ ಶಾಲೆಗಳಿಗೆ ದಸರಾ ರಜೆ ನೀಡಲಾಗಿದ್ದು, ದಸರಾ ರಜೆ ಕಡಿತ ಮಾಡಿ ತರಗತಿ ನಡೆಸುತ್ತಿರುವ ಶಾಲೆಗಳು ಮಕ್ಕಳ ಹಿತದೃಷ್ಟಿಯಿಂದ ರಜೆ ನೀಡಬೇಕು ಎಂದು ಖಾಸಗಿ ಶಾಲೆಗಳ ಸಂಘಟನೆಗಳು ಶಾಲಾ ಆಡಳಿತ ಮಂಡಳಿಗಳಿಗೆ ಸೂಚನೆ ನೀಡಿವೆ. ಮಳೆ ಜಾಸ್ತಿಯಿದ್ದರೆ, ಪರಿಸ್ಥಿತಿಗೆ ಅನುಗುಣವಾಗಿ, ಆಯಾ ಪ್ರದೇಶಗಳ ಮಳೆಯ ಪರಿಸ್ಥಿತಿ ನೋಡಿಕೊಂಡು ರಜೆ ನೀಡುವಂತೆ ತಿಳಿಸಿದ್ದು, ಕುಸ್ಮಾ, ಕ್ಯಾಮ್ಸ್, ರುಪ್ಸಾ ಸಂಘಟನೆಗಳು ತಮ್ಮ ಸಂಘಟನೆಗಳ ಶಾಲೆಗಳಿಗೆ ಸೂಚನೆ ನೀಡಿವೆ.ಇದನ್ನೂ ಓದಿ:ಕೋಲಾರ| ಮಳೆ, ಚಳಿಯನ್ನೂ ಲೆಕ್ಕಿಸದೇ ಚಿಕನ್ ಬಿರಿಯಾನಿಗಾಗಿ ಮುಗಿಬಿದ್ದ ಜನ

  • ಭಾರೀ ಮಳೆಗೆ ತತ್ತರಿಸಿದ ತಮಿಳುನಾಡು – ಇನ್ನೂ ಎರಡು ದಿನ ರೆಡ್ ಅಲರ್ಟ್

    ಭಾರೀ ಮಳೆಗೆ ತತ್ತರಿಸಿದ ತಮಿಳುನಾಡು – ಇನ್ನೂ ಎರಡು ದಿನ ರೆಡ್ ಅಲರ್ಟ್

    ಚೆನ್ನೈ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಭಾನುವಾರ ತಮಿಳುನಾಡಿನ 38 ಜಿಲ್ಲೆಗಳ ಪೈಕಿ 36 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

    ರಾಜಧಾನಿ ಚೆನ್ನೈನಲ್ಲಿ 24 ಗಂಟೆಗಳಲ್ಲಿ 134.29 ಮಿಮೀ ರಷ್ಟು ಅತೀ ಹೆಚ್ಚು ಮಳೆ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಗರದ ಹಲವಾರು ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದ್ದು, ತಗ್ಗು ಪ್ರದೇಶಗಳಲ್ಲಿರುವ ಮನೆಗಳು ನೀರಿನಲ್ಲಿ ಮುಳುಗಡೆಗೊಂಡಿದೆ. ಅಲ್ಲದೇ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಲು ಮೂರು ಜಲಾಶಯಗಳ ಗೇಟ್‍ಗಳನ್ನು ತೆರೆಯಲಾಗಿದೆ. ಇದನ್ನೂ ಓದಿ: NCB ವಿಚಾರಣೆಯಿಂದ ಆರ್ಯನ್ ಖಾನ್ ಎಸ್ಕೇಪ್- ಶಾರೂಖ್ ಮಗ ಕೊಟ್ಟ ಕಾರಣ ಏನು?

    ಪ್ರಧಾನಿ ನರೇಂದ್ರ ಮೋದಿ ಅವರು, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಿಗೆ ಕರೆ ಮಾಡಿ ರಾಜ್ಯದ ಪರಿಸ್ಥಿತಿ ಸಂವಹನ ನಡೆಸಿದ್ದು, ರಕ್ಷಣಾ ಮತ್ತು ಪರಿಹಾರ ಕುರಿತಂತೆ ಕೇಂದ್ರದಿಂದ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಇಲ್ಲಿಯವರೆಗೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‍ಡಿಆರ್‍ಎಫ್) ನಾಲ್ಕು ತಂಡಗಳನ್ನು ರಾಜ್ಯದಲ್ಲಿ ನಿಯೋಜಿಸಲಾಗಿದೆ.

    ಧಾರಾಕಾರ ಮಳೆಯಿಂದಾಗಿ ತಮಿಳುನಾಡಿನ ಮೂರು ಜಿಲ್ಲೆಗಳಲ್ಲಿ ಶಾಲಾ, ಕಾಲೇಜಿಗೆ ರಜೆ ಘೋಷಿಸಲಾಗಿದ್ದು, ಚೆನ್ನೈ ನಗರದ ರೈಲು ಸಂಚಾರ ಅಸ್ತವ್ಯಸ್ಥಗೊಂಡಿದೆ. ಇನ್ನೂ 2 ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ಚೆನ್ನೈನಲ್ಲಿ ವರುಣನ ಆರ್ಭಟ – ಪ್ರವಾಹದ ಎಚ್ಚರಿಕೆ

    ಮತ್ತೊಂದೆಡೆ ಇಂದು ಮುಂಜಾನೆಯಿಂದ ಬೆಂಗಳೂರಿನಲ್ಲಿ ದಟ್ಟಮಂಜು ಕವಿದ ವಾತಾವರಣವಿದ್ದು, ಜಿಟಿಜಿಟಿ ಮಳೆಯಾಗುತ್ತಿದೆ. ಇದನ್ನೂ ಓದಿ: ಕೇರಳದಲ್ಲಿ120 ವರ್ಷಗಳಲ್ಲಿಯೇ ಅತ್ಯಧಿಕ ಮಳೆ