Tag: ತಮಿಳು ನಾಡು

  • ಭಾಗಮತಿ ಎಕ್ಸ್‌ಪ್ರೆಸ್ ರೈಲು ದುರಂತ – 18 ಗಂಟೆಗಳ ಬಳಿಕ ತೆರವು ಕಾರ್ಯಾಚರಣೆ ಯಶಸ್ವಿ

    ಭಾಗಮತಿ ಎಕ್ಸ್‌ಪ್ರೆಸ್ ರೈಲು ದುರಂತ – 18 ಗಂಟೆಗಳ ಬಳಿಕ ತೆರವು ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಭಾಗಮತಿ ಎಕ್ಸ್‌ಪ್ರೆಸ್ (Bagmati Express) ರೈಲು ದುರಂತ (Train Accident) ನಡೆದ ಜಾಗದಲ್ಲಿ ಹಳಿಗಳ ತೆರವು ಕಾರ್ಯಚರಣೆ ಸತತ 18 ಘಂಟೆಗಳ ಬಳಿಕ ಯಶಸ್ವಿಯಾಗಿದೆ. ಹೊಸ ಟ್ರ್ಯಾಕ್ ನಿರ್ಮಾಣ ಮಾಡಿ, ಎಂದಿನಂತೆ ರೈಲು ಓಡಾಟಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ.

    ಅಪಘಾತದ ಬಳಿಕ ಹಳಿಗಳ ಮೇಲೆ ಬಿದ್ದಿದ್ದ ಎಲ್ಲಾ ಬೋಗಿಗಳನ್ನ ಸಂಪೂರ್ಣವಾಗಿ ರೈಲ್ವೆ ಸಿಬ್ಬಂದಿ ತೆರವುಗೊಳಿಸಿದ್ದಾರೆ. ಟ್ರಯಲ್ ರನ್ ಬಳಿಕ ಎಲ್ಲಾ ರೈಲುಗಳ ಓಡಾಟಕ್ಕೆ ಅನುವು ಮಾಡಿಕೊಡುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

    ಕರ್ನಾಟದ ಮೈಸೂರು (Mysuru), ಬೆಂಗಳೂರು ಮೂಲಕವಾಗಿ ಬಿಹಾರದ ದರ್ಭಾಂಗ್‌ಗೆ (Darbhanga) ಹೊರಟಿದ್ದ ಭಾಗಮತಿ ಎಕ್ಸ್‌ಪ್ರೆಸ್ ರೈಲು ಚೆನ್ನೈನ ಕವರಪೆಟ್ಟೈ ಬಳಿ ಭೀಕರ ಅಪಘಾತಕ್ಕೊಳಗಾಗಿತ್ತು. ಲೂಪ್ ಲೈನ್‍ನಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಭಾಗಮತಿ ಎಕ್ಸ್‌ಪ್ರೆಸ್ ಡಿಕ್ಕಿ ಹೊಡೆದು, 13 ಬೋಗಿಗಳು ಹಳಿ ತಪ್ಪಿದ್ದವು. ಇದೀಗ ಸತತ 18 ಘಂಟೆಗಳ ಬಳಿಕ ಹಳಿಗಳ ಮೇಲೆ ಬಿದ್ದಿದ್ದ ಬೋಗಿಗಳನ್ನ ಸಂಪೂರ್ಣವಾಗಿ ತೆರವುಗೊಳಿಸಲಾಗಿದೆ.

    ಕೇವಲ ಇಂಜಿನ್ ತೆರವು ಕಾರ್ಯಾಚರಣೆ ಮಾತ್ರ ಬಾಕಿ ಇದೆ. 120 ಟನ್ ತೂಕವಿರುವ ರೈಲಿನ ಇಂಜಿನ್ ತೆರವುಗೊಳಿಸಿ, ಟ್ರಯಲ್ ರನ್ ಮುಗಿಸಿದ ಬಳಿಕ ಎಲ್ಲಾ ರೈಲುಗಳ ಓಡಾಟಕ್ಕೆ ರೈಲ್ವೆ ಅಧಿಕಾರಿಗಳು ಅನುವು ಮಾಡಿಕೊಳ್ಳಲಿದ್ದಾರೆ.

    ಹೊಸದಾಗಿ ಟ್ರ್ಯಾಕ್ ಅಳವಡಿಸಿದ್ದು, ಸಂಪೂರ್ಣ ತೆರವು ಕಾರ್ಯಾಚರಣೆಯ ಬಳಿಕ ಎಂದಿನಂತೆ ರೈಲು ಸಂಚಾರ ಆರಂಭವಾಗಲಿದೆ. ಇನ್ನೂ 19 ಜನರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಚೆನ್ನೈ ನಗರದ ಸ್ಟ್ಯಾನ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಮೂವರಿಗೆ ಚಿಕಿತ್ಸೆ ಮುಂದುವರೆದಿದೆ.

    ಕವರಪೆಟ್ಟೈ ಲೂಪ್ ಲೈನ್ ನಲ್ಲಿ ಕಳೆದ ಒಂದು ವಾರದಿಂದ ಗೂಡ್ಸ್ ರೈಲು ನಿಂತಿತ್ತು. ಭಾಗಮತಿ ಎಕ್ಸ್‌ಪ್ರೆಸ್ ಮುಖ್ಯ ಮಾರ್ಗದಲ್ಲಿ ಗುಡೂರು ಕಡೆಗೆ ತೆರಳಲು ಗ್ರೀನ್ ಸಿಗ್ನಲ್ ಸಿಕ್ಕಿದೆ. ಆದ್ರೆ ಅದು ತಪ್ಪಾಗಿ ಕವರಪೆಟ್ಟೈ ನಿಲ್ದಾಣದ ಲೂಪ್ ಲೈನ್ ಗೆ ಪ್ರವೇಶಿಸಿದೆ. ಇದೇ ಲೈನ್ ನಲ್ಲಿ ಗೂಡ್ಸ್ ರೈಲು ನಿಂತಿತ್ತು. ಈ ವೇಳೆ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ರೈಲ್ವೆ ಪಾಯಿಂಟ್ ತಪ್ಪಾಗಿ ಈ ಘಟನೆ ನಡೆದಿರೋದು ಮೇಲ್ನೋಟಕ್ಕೆ ತಿಳಿದಿದ್ದು, ರೈಲ್ವೆ ಅಧಿಕಾರಿಗಳು ಹಾಗೂ ಎನ್‍ಐಎ ಯಿಂದ ತನಿಖೆ ನಡೆಯುತ್ತಿದೆ.

  • Bagmati Express Train Accident | ಸಾವಿರಕ್ಕೂ ಅಧಿಕ ಪ್ರಯಾಣಿಕರಿಗೆ ರೈಲ್ವೇಯಿಂದ ಕರೆ

    Bagmati Express Train Accident | ಸಾವಿರಕ್ಕೂ ಅಧಿಕ ಪ್ರಯಾಣಿಕರಿಗೆ ರೈಲ್ವೇಯಿಂದ ಕರೆ

    ಬೆಂಗಳೂರು: ಭಾಗಮತಿ ಎಕ್ಸ್‌ಪ್ರೆಸ್‌ ರೈಲು ಅಪಘಾತ (Bagmati Express Train Accident) ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದಿಂದ ಹತ್ತಿರುವ ಸುಮಾರು 1 ಸಾವಿರಕ್ಕೂ ಹೆಚ್ಚು ಪ್ರಯಾಣಿಕರಿಗೆ (Passengers) ರಾತ್ರಿಯೇ ರೈಲ್ವೆ ಅಧಿಕಾರಿಗಳು (Railway officials) ಕರೆ ಮಾಡಿ ವಿಚಾರಿಸಿದ್ದಾರೆ.

    ಬೆಂಗಳೂರು ವಲಯ, ಮೈಸೂರು ವಲಯದಿಂದ ಬೋರ್ಡಿಂಗ್ ಆಗಿರುವ ಎಲ್ಲಾ ಪ್ರಯಾಣಿಕರಿಗೆ ಕರೆ ಹೋಗಿದೆ. ಒಂದು ಸಾವಿರ ಪ್ರಯಾಣಿಕರ ಪೈಕಿ 60% ಮಂದಿ ಕರೆ ಸ್ವೀಕರಿಸಿದ್ದರೆ 40% ಜನ ಕರೆ ಸ್ವೀಕರಿಸಿಲ್ಲ. ಕರೆ ಸ್ವೀಕರಿಸದವರು ಸೇಫಾಗಿ ಇದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: Bagmati Express Train Accident | ರೈಲು ಅಪಘಾತ ಹೇಗಾಯ್ತು? ದೋಷ ಯಾರದ್ದು?

     

    ಕಾಲ್ ರಿಸೀವ್ ಮಾಡಿದ ಪ್ರಯಾಣಿಕರು ಹಲವು ಸಮಸ್ಯೆ ಹೇಳಿಕೊಂಡಿದ್ದಾರೆ. ನಮ್ಮ ಲಗೇಜ್ ಮಿಸ್ ಆಗಿದೆ. ಲಗೇಜ್ ವ್ಯವಸ್ಥೆ ಮಾಡಿಕೊಡಿ. ನಮಗೆ ಬೇರೆ ರೈಲು ಸಿಗುತ್ತಾ ಏನು ಮಾಡಬೇಕು ಅಂತಾ ಪ್ರಶ್ನೆ ಮಾಡಿದ್ದಾರೆ. ಒಂದು ಗುಂಪು ಆರೇಳು ಜನರಿಗೆ ಗಾಯಗಳಾಗಿವೆ ಎಂದು ಮಾಹಿತಿ ನೀಡಿದ್ದಾರೆ.

    ರೈಲು ಅಪಘಾತದಲ್ಲಿ 19 ಮಂದಿ ಗಾಯಗೊಂಡಿದ್ದಾರೆ. ಎಲ್ಲಾ ಪ್ರಯಾಣಿಕರನ್ನೂ ಮೆಮು ರೈಲಿನ ಮೂಲಕ ಶಿಫ್ಟ್ ಮಾಡಲಾಗಿದೆ. ಶನಿವಾರ ಪ್ರಯಾಣಿಕರು ಎಲ್ಲೆಲ್ಲಿಗೆ ತಲುಪಬೇಕು ಅಲ್ಲಿಗೆ ವ್ಯವಸ್ಥೆ ಮಾಡಲಾಗುತ್ತದೆ. ದೇವರ ದಯೆಯಿಂದ ದೊಡ್ಡ ಅನಾಹುತ ತಪ್ಪಿದೆ. ಯಾವ ಕಾರಣಕ್ಕೆ ಅಪಘಾತವಾಯ್ತು ಎನ್ನುವುದರ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ರೈಲ್ವೇ ಖಾತೆಯ ರಾಜ್ಯ ಸಚಿವ ವಿ ಸೋಮಣ್ಣ ತಿಳಿಸಿದ್ದರು.

     

    ಮೈಸೂರಿನಿಂದ ಬಿಹಾರದ ದರ್ಬಾಂಗ್‌ಗೆ ಹೊರಟಿದ್ದ ಬಾಗಮತಿ ಎಕ್ಸ್‌ಪ್ರೆಸ್‌ ರೈಲು (Mysuru-Darbhanga Bagmati Express) ಹಳಿಯಲ್ಲಿ ನಿಂತಿದ್ದ ಗೂಡ್ಸ್‌ ರೈಲಿಗೆ ಹಿಂದಿನಿಂದ ಡಿಕ್ಕಿ ಹೊಡೆದಿತ್ತು. ಕವರಪೆಟ್ಟೈ ನಿಲ್ದಾಣದ ಬಳಿಕ ಲೂಪ್‌ ಲೈನಿಗೆ ಪ್ರವೇಶ ಪಡೆದಿದ್ದರಿಂದ ಈ ಅಪಘಾತ ಸಂಭವಿಸಿದೆ.

     

  • Bagmati Express Train Accident | ರೈಲು ಅಪಘಾತ ಹೇಗಾಯ್ತು? ದೋಷ ಯಾರದ್ದು?

    Bagmati Express Train Accident | ರೈಲು ಅಪಘಾತ ಹೇಗಾಯ್ತು? ದೋಷ ಯಾರದ್ದು?

    ಚೆನ್ನೈ: ಒಡಿಶಾದಲ್ಲಿ ನಡೆದ ಅಪಘಾತದಂತೆ ಮತ್ತೊಂದು ರೈಲು ಅಪಘಾತ ತಮಿಳುನಾಡಿನಲ್ಲಿ (Tamil Nadu) ನಡೆದಿದೆ. ಮೈಸೂರಿನಿಂದ ಬಿಹಾರದ ದರ್ಬಾಂಗ್‌ಗೆ ಹೊರಟಿದ್ದ ಬಾಗಮತಿ ಎಕ್ಸ್‌ಪ್ರೆಸ್‌ ರೈಲು (Mysuru-Darbhanga Bagmati Express) ಲೂಪ್‌ ಲೈನಿಗೆ ಪ್ರವೇಶ ಪಡೆದಿದ್ದರಿಂದ ಈ ಅಪಘಾತ ಸಂಭವಿಸಿದೆ.

    ಅಪಘಾತ ಹೇಗಾಯ್ತು?
    ಮೈಸೂರಿನಿಂದ ದರ್ಬಾಂಗ್‌ಗೆ ತೆರಳುತ್ತಿದ್ದ ಬಾಗಮತಿ ಎಕ್ಸ್‌ಪ್ರೆಸ್‌ ರಾತ್ರಿ ಪೊನ್ನೇರಿ ರೈಲು ನಿಲ್ದಾಣ ದಾಟಿತ್ತು. ಈ ವೇಳೆ ಮುಂದಿನ ನಿಲ್ದಾಣ ಕವರಪೆಟ್ಟೈಗೆ (Kavaraipettai) ತೆರಳಲು ಗ್ರೀನ್‌ ಸಿಗ್ನಲ್‌ ಸಿಕ್ಕಿತ್ತು.  ರಾತ್ರಿ 8:30ರ ವೇಳೆ ನಿಲ್ದಾಣ ಪ್ರವೇಶಿಸುವಾಗ ಗೂಡ್ಸ್‌ ರೈಲಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ.

    ಕವರೈಪೆಟ್ಟೈ ಎಲ್ಲಿದೆ?
    ಚೆನ್ನೈನಿಂದ ಕವರಪೆಟ್ಟೈ 40 ಕಿ.ಮೀ ದೂರದಲ್ಲಿದೆ. ಮೈಸೂರಿನಿಂದ ಬೆಳಗ್ಗೆ 10:34ಕ್ಕೆ ಹೊರಟ್ಟಿದ್ದ ರೈಲು ಮಧ್ಯಾಹ್ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ(ಕೆಎಸ್‌ಆರ್‌) ನಿಲ್ದಾಣಕ್ಕೆ ತಲುಪಿತ್ತು. ಅ.13 ರಂದು ಈ ರೈಲು ಬಿಹಾರ ದರ್ಬಾಂಗಕ್ಕೆ ತಲುಪಬೇಕಿತ್ತು.  ಇದನ್ನೂ ಓದಿ: Bagmati Express Train Accident | 19 ಮಂದಿಯಲ್ಲಿ ಇಬ್ಬರಿಗೆ ಗಂಭೀರ ಗಾಯ – ಸೋಮಣ್ಣ

    ಅಪಘಾತಕ್ಕೆ ಕಾರಣ ಏನು?
    ಈ ರೈಲು ಕವರಪೆಟ್ಟೈ ನಿಲ್ದಾಣದ ನಂತರ ಗುಡೂರಿನ ಕಡೆಗೆ ಹೋಗಬೇಕಿತ್ತು. ಇದು ಎಕ್ಸ್‌ಪ್ರೆಸ್‌ ರೈಲಾಗಿದ್ದ ಕಾರಣ ಕವರಪೆಟ್ಟೈ ನಿಲ್ದಾಣದಲ್ಲಿ ನಿಲುಗಡೆ ಇರಲಿಲ್ಲ. ಚೆನ್ನೈನಿಂದ ಈ ರೈಲಿಗೆ ಗ್ರೀನ್‌ ಸಿಗ್ನಲ್‌ ಸಿಕ್ಕಿತ್ತು. ಚಾಲಕ ಸಿಗ್ನಲ್‌ಗಳನ್ನು ಸರಿಯಾಗಿ ಅನುಸರಿಸಿದ್ದಾನೆ. ಇಲ್ಲಿ ರೈಲು ಮೇನ್‌ ಲೈನ್‌ನಲ್ಲಿ ಸಾಗಬೇಕಿತ್ತು.ಆದರೆ ಲೂಪ್‌ ಲೈನ್‌ಗೆ (Loop Line) ರೈಲು ಪ್ರವೇಶ ಮಾಡಿ ನಿಂತಿದ್ದ ಗೂಡ್ಸ್‌ ರೈಲಿಗೆ ಡಿಕ್ಕಿ ಹೊಡೆದು ಬೋಗಿಗಳು ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಗಂಟೆಗೆ 100 ಕಿ.ಮೀ ವೇಗದಲ್ಲಿ  ಎಕ್ಸ್‌ಪ್ರೆಸ್‌ ರೈಲು ಸಂಚರಿಸುತ್ತಿದ್ದ ಕಾರಣ 13 ಬೋಗಿಗಳು ಹಳಿ ತಪ್ಪಿವೆ.


    ಏನಿದು ಲೂಪ್‌ಲೈನ್‌?
    ಸುಗಮ ಸಂಚಾರಕ್ಕಾಗಿ ರೈಲು ನಿಲ್ದಾಣಗಳಲ್ಲಿ ನಿರ್ಮಿಸಲಾಗುವ ಹೆಚ್ಚುವರಿ ಹಳಿಗಳನ್ನು ಲೂಪ್‌ ಲೈನ್‌ ಎಂದು ಕರೆಯಲಾಗುತ್ತದೆ. ಅದು ನಿಲ್ದಾಣದ ವ್ಯಾಪ್ತಿ ಮುಗಿದ ಬಳಿಕ ಮತ್ತೆ ಮೇನ್‌ ಲೈನ್‌ಗೆ ಸೇರ್ಪಡೆಯಾಗುತ್ತದೆ. ಎಕ್ಸ್‌ಪ್ರೆಸ್‌ ರೈಲುಗಳ ಸಂಚಾರಕ್ಕೆ ಯಾವುದೇ ಸಮಸ್ಯೆ ಆಗದೇ ಇರಲು ಸಾಧಾರಣವಾಗಿ ಪ್ಯಾಸೆಂಜರ್‌ ರೈಲು, ಗೂಡ್ಸ್‌ ರೈಲುಗಳನ್ನು ನಿಲ್ದಾಣದಲ್ಲಿರುವ ಲೂಪ್‌ ಲೈನಿನಲ್ಲಿ ನಿಲ್ಲಿಸಲಾಗುತ್ತದೆ. ಸಾಮಾನ್ಯವಾಗಿ ಲೂಪ್‌ ಲೈನ್‌ ಉದ್ದ 750 ಮೀಟರ್‌ ಇರುತ್ತದೆ.

    ದೋಷ ಯಾರದ್ದು?
    ಕತ್ತರಿಸಿದ ಹಳಿಯಲ್ಲಿ ಸಂಚಾರ, ಸಿಗ್ನಲ್‌ ಉಲ್ಲಂಘಿಸುವುದು, ನಿಗದಿ ಪಡಿಸಿದ ವೇಗಕ್ಕಿಂತ ಹೆಚ್ಚಿನ ವೇಗದಲ್ಲಿ ಸಂಚಾರ, ಹಳಿ ಮೇಲೆ ಇಡಲಗಿರುವ ಭಾರೀ ಗಾತ್ರದ ವಸ್ತುಗಳಿಗೆ ಡಿಕ್ಕಿ, ಎಂಜಿನ್‌ ಸಮಸ್ಯೆ, ಸಿಗ್ನಲಿಂಗ್‌ ಸಮಸ್ಯೆಯಿಂದ ರೈಲು ಅಪಘಾತಗಳು ಸಂಭವಿಸುತ್ತಿರುತ್ತದೆ. ಆದರೆ ಈ ಪ್ರಕರಣದಲ್ಲಿ ಸಿಗ್ನಲಿಂಗ್‌ನಲ್ಲಿ ದೋಷ ಇರುವುದು ಕಾಣುತ್ತದೆ. ಗ್ರೀನ್‌ ಸಿಗ್ನಲ್‌ ಸಿಕ್ಕಿದ ನಂತರ ಲೋಕೋಪೈಲಟ್‌ ರೈಲನ್ನು ಚಲಾಯಿಸಿದ್ದಾನೆ. ಈ ಪ್ರಕರಣದಲ್ಲಿ ಪೈಲಟ್‌ ಸರಿಯಾಗಿಯೇ ಚಾಲನೆ ಮಾಡಿದ್ದಾನೆ. ಆದರೆ ಮೇನ್‌ ಲೈನಿನಿಂದ ಲೂಪ್‌ ಲೈನಿಗೆ ಹಳಿ ಬದಲಾಯಿಸಿದ್ದೇ ಕಾರಣ ಎನ್ನುವುದು ಮೆಲ್ನೋಟಕ್ಕೆ ಕಾಣುತ್ತದೆ. ಈಗ ಇಲಾಖೆ ಈ ಅಪಘಾತದ ಕಾರಣ ಹುಡುಕಲು ತನಿಖೆಗೆ ಆದೇಶಿಸಿದೆ.


    ಒಡಿಶಾದಲ್ಲಿ ಏನಾಗಿತ್ತು?
    ಜೂನ್‌ 2, 2023 ರಂದು ಬಾಲಸೋರ್ ಜಿಲ್ಲೆಯ ಬಹನಾಗ ಬಜಾರ್ ರೈಲು ನಿಲ್ದಾಣದಲ್ಲಿ ಮೂರು ರೈಲುಗಳ ಮಧ್ಯೆ ಅಪಘಾತ ಸಂಭವಿಸಿತ್ತು. ಈ ಘಟನೆಯಲ್ಲಿ 296 ಮಂದಿ ಸಾವನ್ನಪ್ಪಿ 1,200ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಬಹನಾಗ ಬಜಾರ್ ರೈಲು ನಿಲ್ದಾಣದಲ್ಲಿ 4 ಹಳಿಗಳು ಇವೆ. ಈ ಪೈಕಿ ಎರಡು ಮುಖ್ಯ ಅಥವಾ ಮೇನ್‌ ಹಳಿಗಳು ಆಗಿದ್ದರೆ ಇನ್ನು ಎರಡು ಲೂಪ್‌ ಹಳಿಗಳು. ಅದೇ ರೀತಿಯಾಗಿ ಒಂದು ಹಳಿಯಲ್ಲಿ ಗೂಡ್ಸ್‌ ರೈಲನ್ನು ನಿಲ್ಲಿಸಲಾಗಿತ್ತು. ಸಂಜೆಯ ವೇಳೆ ವೇಗವಾಗಿ ಮುಖ್ಯ ಹಳಿಯಲ್ಲಿ ಬರುತ್ತಿದ್ದ ಕೋರಮಂಡಲ್‌ ಎಕ್ಸ್‌ಪ್ರೆಸ್‌ ಎಲೆಕ್ಟ್ರಾನಿಕ್ ಸಿಗ್ನಲ್‌ ದೋಷದಿಂದ ಗೂಡ್ಸ್‌ ರೈಲು ನಿಂತಿದ್ದ ಹಳಿಯನ್ನು ಪ್ರವೇಶಿಸಿ ಗುದ್ದಿದೆ.

    ಈ ರೈಲು ಡಿಕ್ಕಿ ಹೊಡೆಯುವ ಸಮಯದಲ್ಲೇ ಇನ್ನೊಂದು ಮುಖ್ಯ ಹಳಿಯಲ್ಲಿ ಬೆಂಗಳೂರಿನಿಂದ ಹೌರಾಗೆ ಹೊರಟಿದ್ದ ಸೂಪರ್‌ ಫಾಸ್ಟ್‌ ಎಕ್ಸ್‌ಪ್ರೆಸ್‌ ರೈಲು ಬಂದಿತ್ತು. ಗೂಡ್ಸ್‌ ರೈಲಿಗೆ ಗುದ್ದಿದ ರಭಸಕ್ಕೆ ಕೋರಮಂಡಲ್‌ ಎಕ್ಸ್‌ಪ್ರೆಸ್‌ ರೈಲಿನ ಬೋಗಿಗಳು ಯಶವಂತಪುರದಿಂದ ಹೊರಟಿದ್ದ ರೈಲಿನ ಕೊನೆಯ ಎರಡು ಬೋಗಿಗಳ ಮೇಲೆ ಬಿದ್ದಿತ್ತು. ಕೋರಮಂಡಲ್ ಎಕ್ಸ್‌ಪ್ರೆಸ್‌ನ ಹಳಿತಪ್ಪಿದ ಬೋಗಿಗಳು ಗಂಟೆಗೆ 126 ಕಿ.ಮೀ ವೇಗದಲ್ಲಿ ಬರುತ್ತಿದ್ದ ಯಶವಂತಪುರ ಎಕ್ಸ್‌ಪ್ರೆಸ್‌ ರೈಲಿನ ಬೋಗಿಗಳ ಮೇಲೆ ಬಿದ್ದ ಪರಿಣಾಮ ಸಾವು ನೋವು ಹೆಚ್ಚಾಗಿತ್ತು. ಈ ಪ್ರಕರಣದ ತನಿಖೆ ನಡೆಸಿದ ಸಿಬಿಐ ಕರ್ತವ್ಯ ಲೋಪ ಇತ್ಯಾದಿ ಆರೋಪಗಳನ್ನು ಹೊರಿಸಿ ಸೀನಿಯರ್‌ ಸೆಕ್ಷನ್‌ ಎಂಜಿನಿಯರ್‌, ಸಿಗ್ನಲ್‌ ವಿಭಾಗದ ಎಂಜಿನಿಯರ್‌ ಮತ್ತು ಟೆಕ್ನಿಷಿಯನ್‌ ವಿರುದ್ಧ ಆರೋಪ ಪಟ್ಟಿಯನ್ನು ಸಲ್ಲಿಸಿತ್ತು.

  • ಲೋಕ ಚುನಾವಣೆ : ಮತದಾನ ಮಾಡಿ ಮಾದರಿಯಾದ ನಟ ಕಮಲ್

    ಲೋಕ ಚುನಾವಣೆ : ಮತದಾನ ಮಾಡಿ ಮಾದರಿಯಾದ ನಟ ಕಮಲ್

    ಮಿಳುನಾಡು (Tamil Nadu) ಸೇರಿದಂತೆ 21 ರಾಜ್ಯಗಳ 102 ಕ್ಷೇತ್ರಗಳಿಗೆ ಇಂದು ಮತದಾನ ನಡೆದದೆ. ಇದು ಮೊದಲ ಹಂತದ ಮತದಾನವಾಗಿದ್ದು, ಆಸಕ್ತಿಯಿಂದ ಅನೇಕರು ಈ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದರು. ನಟ ಮತ್ತು ಎಂಎನ್‌ಎಂ ಮುಖ್ಯಸ್ಥ ಕಮಲ್ ಹಾಸನ್ ಕೂಡ ಮತದಾನ ಮಾಡಿ ಮಾದರಿಯಾಗಿದ್ದು, ಚೆನ್ನೈನ ಕೊಯಾಂಬೆಡುವಿನ ಮತಗಟ್ಟೆಯಲ್ಲಿ ಅವರು ಮತದಾನ ಮಾಡಿದ್ದಾರೆ.

    ಸದ್ಯ ಕಮಲ್ ರಾಜಕಾರಣದಲ್ಲಿ ಬ್ಯುಸಿಯಾಗಿದ್ದು, ಊಳಿಗಮಾನ್ಯ ರಾಜಕೀಯ ಬಿಟ್ಟು ರಾಷ್ಟ್ರದ ಬಗ್ಗೆ ನಿಸ್ವಾರ್ಥವಾಗಿ ಯೋಚಿಸುವ ಯಾವುದೇ ರಾಜಕೀಯ ಮೈತ್ರಿಯನ್ನು ತಮ್ಮ ಪಕ್ಷ ಬೆಂಬಲಿಸುತ್ತದೆ ಎಂದು ಮಕ್ಕಳ್ ನೀಧಿ ಮೈಯಂ (MNM) ಸಂಸ್ಥಾಪಕ, ನಟ ಕಮಲ್ ಹಾಸನ್ (Kamal Haasan) ತಿಳಿಸಿದ್ದಾರೆ.

     

    ಚೆನ್ನೈನಲ್ಲಿ (Chennai) ಎಂಎನ್‌ಎಂನ 7ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ, ತಮ್ಮ ಪಕ್ಷವು ಇಂಡಿಯಾ ಒಕ್ಕೂಟದ ಭಾಗವಾಗುತ್ತಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಪಕ್ಷ ಇನ್ನೂ ಇಂಡಿಯಾ ಬ್ಲಾಕ್‌ಗೆ ಸೇರಿಲ್ಲ. ಪಕ್ಷ ರಾಜಕೀಯವನ್ನು ಸಮಾಧಿ ಮಾಡಿ ರಾಷ್ಟ್ರದ ಬಗ್ಗೆ ಯೋಚಿಸಬೇಕು ಎಂದು ನಾನು ಈಗಾಗಲೇ ಹೇಳಿದ್ದೇನೆ. ರಾಷ್ಟ್ರದ ಬಗ್ಗೆ ನಿಸ್ವಾರ್ಥವಾಗಿ ಯೋಚಿಸುವ ಯಾರಿಗೇ ಆಗಲಿ ನನ್ನ ಪಕ್ಷ ಬೆಂಬಲಿಸುತ್ತದೆ. ಆದರೆ ಸ್ಥಳೀಯ, ಊಳಿಗಮಾನ್ಯ ರಾಜಕೀಯವನ್ನು ಮುಂದುವರಿಸಿದರೆ ನಾವು ಅದರ ಭಾಗವಾಗುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

  • ‘ಮ್ಯಾಕ್ಸ್’ ಕೊನೆಯ ಹಂತದ ಚಿತ್ರೀಕರಣ ಶುರು

    ‘ಮ್ಯಾಕ್ಸ್’ ಕೊನೆಯ ಹಂತದ ಚಿತ್ರೀಕರಣ ಶುರು

    ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾದ ಕೊನೆಯ ಹಂತದ ಚಿತ್ರೀಕರಣ ತಮಿಳು ನಾಡಿನ (Tamil Nadu) ಮಹಾಬಲಿಪುರಂನಲ್ಲಿ ನಡೆಯುತ್ತಿದೆ. ಕಿಚ್ಚ ಸುದೀಪ್, ಸಂಯುಕ್ತಾ ಹೊರನಾಡು ಸೇರಿದಂತೆ ಹಲವು ಕಲಾವಿದರು ಕೊನೆಯ ಹಂತದ ಚಿತ್ರೀಕರಣದಲ್ಲಿ ತೊಡಗಿದ್ದಾರೆ. ಈ ಮಾಹಿತಿಯನ್ನೂ ಸ್ವತಃ ಕಲಾವಿದರೇ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

    ಮೊನ್ನೆಯಷ್ಟೇ ಸುದೀಪ್ (Sudeep) ಮ್ಯಾಕ್ಸ್ ಚಿತ್ರದ ಬಗ್ಗೆ ಹೊಸ ಅಪ್ ಡೇಟ್ ನೀಡಿದ್ದರು. 15 ದಿನಗಳ ಕಾಲ ಶೂಟಿಂಗ್ ಮುಗಿಸಿದರೆ, ಮ್ಯಾಕ್ಸ್ ಚಿತ್ರದ ಚಿತ್ರೀಕರಣ ಮುಕ್ತಾಯವಾಗತ್ತೆ. ನಂತರ ಮೇ ತಿಂಗಳಿನಲ್ಲಿ ಚಿತ್ರ ರಿಲೀಸ್ (Release) ಆಗಬಹುದು ಅಂದಿದ್ದರು.

    ‘ಮ್ಯಾಕ್ಸ್’ ಸಿನಿಮಾ ಬಗ್ಗೆ ಅಭಿಮಾನಿಗಳು ಪದೇ ಪದೇ ಅಪ್‌ಡೇಟ್ ಕೇಳುತ್ತಲೇ ಇರುತ್ತಾರೆ. ಅದಕ್ಕೆ ಈ ಹಿಂದೆಯೂ ಪ್ರತಿಕ್ರಿಯೆ ನೀಡಿದ್ದರು ಸುದೀಪ್,  ‘ನಿಮ್ಮ ಪ್ರೀತಿ, ಕ್ಯೂರಿಯಾಸಿಟಿ ನನಗೆ ಅರ್ಥವಾಗುತ್ತದೆ. ಆದರೆ, ಸಿನಿಮಾ ಶೂಟ್ (Shooting) ಪೂರ್ಣಗೊಳ್ಳದೆ ಆ ಬಗ್ಗೆ ಅಪ್‌ಡೇಟ್ ನೀಡೋದು ಹೇಗೆ’ ಅನ್ನೋದು ಸುದೀಪ್ ಅವರ ಪ್ರಶ್ನೆಯಾಗಿತ್ತು. ನವೆಂಬರ್‌ನಲ್ಲಿ ಮಳೆಯಿಂದ ಶೂಟ್ ಮಾಡಲು ಸಾಧ್ಯವಾಗಿರಲಿಲ್ಲ. ಡಿಸೆಂಬರ್‌ನಲ್ಲಿ ಕೆಲವು ಅಡೆತಡೆಗಳು ಎದುರಾದವು. ಈಗ ಸಂಕ್ರಾಂತಿ ಬಳಿಕ ಮತ್ತೆ ‘ಮ್ಯಾಕ್ಸ್’ ಶೂಟಿಂಗ್ ಶುರು ಆಗಿದೆ ಎಂದು ತಿಳಿಸಿದ್ದರು.

    ಮೊನ್ನೆಯಷ್ಟೇ ಸಿನಿಮಾದ ಪ್ರಮುಖ ದೃಶ್ಯವನ್ನು ಶೂಟ್ ಮಾಡಿ ಮುಗಿಸಿದ್ದಾರೆ. ಅದೊಂದು ಪ್ರಮುಖ ಘಟ್ಟ. ಜೊತೆಗೆ ಸಣ್ಣದೊಂದು ಭಾಗದ ಚಿತ್ರೀಕರಣ ಮುಗಿದರೆ ಸಿನಿಮಾ ಮುಗಿದಂತೆ. ಎಲ್ಲ ರಫ್ ಕಟ್ ದೃಶ್ಯಗಳನ್ನು ನೋಡಿದೆ. ಸೂಪರ್. ಅದ್ಭುತವಾಗಿ ಸಿನಿಮಾ ಮೂಡಿ ಬಂದಿದೆ. ಪ್ರತಿಯೊಬ್ಬರ ಎಫರ್ಟ್ ಕಾಣುತ್ತಿದೆ ಎಂದು ಸುದೀಪ್ ಈ ಹಿಂದೆ ಎಕ್ಸ್ (ಟ್ವಿಟ್) ಮಾಡಿದ್ದರು.

     

    ಕ್ರಿಕೆಟ್, ಬಿಗ್ ಬಾಸ್ ನಡುವೆಯೂ ನಿರೀಕ್ಷಿತ ಮ್ಯಾಕ್ಸ್ (Max) ಸಿನಿಮಾದ ಚಿತ್ರೀಕರಣ ಮುಗಿಸುತ್ತಿದ್ದಾರೆ ಕಿಚ್ಚ ಸುದೀಪ್. ಈಗಷ್ಟೇ ಚಿತ್ರದ ಕ್ಲೈಮ್ಯಾಕ್ಸ್ (Climax) ಶೂಟಿಂಗ್ ಮುಗಿಸಿದ್ದಾರೆ. ಅಂದುಕೊಂಡ ತಿಂಗಳಲ್ಲೇ ಸಿನಿಮಾ ತೆರೆಗೆ ತರಬೇಕಾಗಿದ್ದರಿಂದ ಚಿತ್ರೀಕರಣಕ್ಕೆ ಹೆಚ್ಚು ಒತ್ತು ನೀಡಿದ್ದಾರಂತೆ. ಇನ್ನು ಕೆಲವೇ ದಿನಗಳಲ್ಲಿ ಮ್ಯಾಕ್ಸ್ ಸಿನಿಮಾದ ಸಂಪೂರ್ಣ ಚಿತ್ರೀಕರಣ ಕೂಡ ಮುಗಿಯಲಿದೆ.

  • ವಿಜಯ್ ರಾಜಕೀಯಕ್ಕೆ ಬರೋಕೆ ನಾನೇ ಹೇಳಿದ್ದೆ: ನಟ ಕಮಲ್ ಹಾಸನ್

    ವಿಜಯ್ ರಾಜಕೀಯಕ್ಕೆ ಬರೋಕೆ ನಾನೇ ಹೇಳಿದ್ದೆ: ನಟ ಕಮಲ್ ಹಾಸನ್

    ಮಿಳು ನಾಡಿನಲ್ಲಿ ಸಿನಿಮಾದವರ ರಾಜಕೀಯ ಗರಿಗೆದರಿದೆ. ಮೊನ್ನೆಯಷ್ಟೇ ನಟ ವಿಜಯ್ ರಾಜಕಾರಣಕ್ಕೆ ಎಂಟ್ರಿ ಪಡೆದಿದ್ದಾರೆ. ಈ ವಿಷಯದ ಕುರಿತು ಮಾತನಾಡಿರುವ ಕಮಲ್ ಹಾಸನ್, ನಾನೇ ವಿಜಯ್ (Vijay) ಅವರನ್ನು ರಾಜಕಾರಣಕ್ಕೆ ಬರುವುದಕ್ಕೆ ಹೇಳಿದ್ದೆ ಎಂದಿದ್ದಾರೆ. ಜೊತೆಗೆ ವಿಜಯ್ ಅವರ ರಾಜಕೀಯ ಭವಿಷ್ಯಕ್ಕೆ ಶುಭ ಕೋರಿದ್ದಾರೆ.

    ಈ ನಡುವೆ ರಾಜಕಾರಣದ ಕುರಿತು ಮಾತನಾಡಿರುವ ಕಮಲ್, ಊಳಿಗಮಾನ್ಯ ರಾಜಕೀಯ ಬಿಟ್ಟು ರಾಷ್ಟ್ರದ ಬಗ್ಗೆ ನಿಸ್ವಾರ್ಥವಾಗಿ ಯೋಚಿಸುವ ಯಾವುದೇ ರಾಜಕೀಯ ಮೈತ್ರಿಯನ್ನು ತಮ್ಮ ಪಕ್ಷ ಬೆಂಬಲಿಸುತ್ತದೆ ಎಂದು ಮಕ್ಕಳ್ ನೀಧಿ ಮೈಯಂ (MNM) ಸಂಸ್ಥಾಪಕ, ನಟ ಕಮಲ್ ಹಾಸನ್ (Kamal Haasan) ತಿಳಿಸಿದ್ದಾರೆ.

    ಚೆನ್ನೈನಲ್ಲಿ (Chennai) ಎಂಎನ್‌ಎಂನ 7ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ, ತಮ್ಮ ಪಕ್ಷವು ಇಂಡಿಯಾ ಒಕ್ಕೂಟದ ಭಾಗವಾಗುತ್ತಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಪಕ್ಷ ಇನ್ನೂ ಇಂಡಿಯಾ ಬ್ಲಾಕ್‌ಗೆ ಸೇರಿಲ್ಲ. ಪಕ್ಷ ರಾಜಕೀಯವನ್ನು ಸಮಾಧಿ ಮಾಡಿ ರಾಷ್ಟ್ರದ ಬಗ್ಗೆ ಯೋಚಿಸಬೇಕು ಎಂದು ನಾನು ಈಗಾಗಲೇ ಹೇಳಿದ್ದೇನೆ. ರಾಷ್ಟ್ರದ ಬಗ್ಗೆ ನಿಸ್ವಾರ್ಥವಾಗಿ ಯೋಚಿಸುವ ಯಾರಿಗೇ ಆಗಲಿ ನನ್ನ ಪಕ್ಷ ಬೆಂಬಲಿಸುತ್ತದೆ. ಆದರೆ ಸ್ಥಳೀಯ, ಊಳಿಗಮಾನ್ಯ ರಾಜಕೀಯವನ್ನು ಮುಂದುವರಿಸಿದರೆ ನಾವು ಅದರ ಭಾಗವಾಗುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

     

    2024ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ತಮ್ಮ ಪಕ್ಷದ ಮೈತ್ರಿ ಕುರಿತು ಚರ್ಚೆಗಳು ನಡೆಯುತ್ತಿವೆ. ಈ ಬಗ್ಗೆ ಆದಷ್ಟು ಬೇಗ ಒಳ್ಳೆಯ ಸುದ್ದಿಯನ್ನು ಮಾಧ್ಯಮಗಳಿಗೆ ತಿಳಿಸಲಾಗುವುದು ಎಂದಿದ್ದಾರೆ.  ಮುಂಬರುವ ಲೋಕಸಭೆ ಚುನಾವಣೆಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ನೇತೃತ್ವದ ಡಿಎಂಕೆ ಜೊತೆ ಹಾಸನ್ ಪಕ್ಷ ಮೈತ್ರಿ ಮಾತುಕತೆಯಲ್ಲಿ ತೊಡಗಿದೆ ಎಂಬ ಊಹಾಪೋಹಗಳು ಹರಿದಾಡುತ್ತಿದ್ದವು. ಇದೀಗ ಸ್ವತಃ ಕಮಲ್ ಹಾಸನ್ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

  • ಸದ್ಯಕ್ಕೆ ರಾಜಕೀಯಕ್ಕೆ ಬರಲ್ಲ, ಜನಪರ ಕೆಲಸ ನಿಲ್ಲಲ್ಲ: ನಟ ವಿಶಾಲ್

    ಸದ್ಯಕ್ಕೆ ರಾಜಕೀಯಕ್ಕೆ ಬರಲ್ಲ, ಜನಪರ ಕೆಲಸ ನಿಲ್ಲಲ್ಲ: ನಟ ವಿಶಾಲ್

    ಮಿಳು ನಾಡಿನಲ್ಲಿ ನಟರ ರಾಜಕೀಯ ಪರ್ವ ಶುರುವಾಗಿದೆ. ಇತ್ತೀಚಿನ ವರ್ಷಗಳಲ್ಲಿ ಕಮಲ್ ಹಾಸನ್, ರಜನಿಕಾಂತ್ ನಂತರ ದೊಡ್ಡ ಮಟ್ಟದಲ್ಲಿ ರಾಜಕೀಯ ಪ್ರವೇಶ ಮಾಡುವುದರ ಕುರಿತು ಸುದ್ದಿಯಾಗಿದ್ದ ದಳಪತಿ ವಿಜಯ್ ಅವರದ್ದು. ಈಗಾಗಲೇ ವಿಜಯ್ ರಾಜಕೀಯ ಅಖಾಡಕ್ಕೂ ಇಳಿದಾಯಿತು. ಈ ನಡುವೆ ಮತ್ತೋರ್ವ ನಟ ಕೂಡ ರಾಜಕಾರಣಕ್ಕೆ ಪ್ರವೇಶ ಮಾಡಲಿದ್ದಾರೆ ಎನ್ನುವ ಮಾಹಿತಿ ಹರಿದಾಡುತ್ತಿತ್ತು.

    ಹೌದು, ನಟ ವಿಶಾಲ್ (Vishal) ಕೂಡ ರಾಜಕಾರಣಕ್ಕೆ ಎಂಟ್ರಿ ಕೊಡಲಿದ್ದಾರೆ ಎಂದು ಹೇಳಲಾಗಿತ್ತು. ರಾಜಕಾರಣವನ್ನು ಗುರಿಯಾಗಿಟ್ಟುಕೊಂಡು ಅವರು ಜನಪರ ಕೆಲಸ ಮಾಡುತ್ತಿದ್ದಾರೆ ಎನ್ನುವ ಚರ್ಚೆ ಕೂಡ ನಡೆದಿತ್ತು. ಅವರ ತಾಯಿ ಹೆಸರಿನಲ್ಲಿ ಫೌಂಡೇಶನ್, ಅಭಿಮಾನಿಗಳ ಕ್ಲಬ್ ಹೆಸರಿನಲ್ಲಿ ಸಮಾಜ ಸೇವೆ ಹೀಗೆ ವಿಶಾಲ್ ಮಾಡುತ್ತಿರುವುದಕ್ಕೆ ರಾಜಕಾರಣವನ್ನು ತಳುಕು ಹಾಕಲಾಗಿತ್ತು.

    ಈ ಎಲ್ಲ ಕುರಿತಂತೆ ವಿಶಾಲ್ ಪ್ರತಿಕ್ರಿಯೆ ನೀಡಿದ್ದಾರೆ. ರಾಜಕೀಯ ಕನಸು ಇಟ್ಟುಕೊಂಡು ತಾವು ಸಮಾಜಮುಖಿ ಕೆಲಸಗಳನ್ನು ಮಾಡುತ್ತಿಲ್ಲ ಎಂದು ಅವರು ಹೇಳಿದ್ದಾರೆ. ನನ್ನ ಖುಷಿಯಾಗಿ ಇವೆಲ್ಲವನ್ನೂ ಮಾಡುತ್ತಿರುವೆ. ಅದಕ್ಕೂ ರಾಜಕಾರಣಕ್ಕೂ ತಳುಕು ಹಾಕಬೇಡಿ ಎಂದು ಅವರು ಪತ್ರ ಬರೆದಿದ್ದಾರೆ.

     

    ಸದ್ಯಕ್ಕೆ ರಾಜಕಾರಣದ ಬಗ್ಗೆ ಯೋಚನೆ ಮಾಡಿಲ್ಲ. ಮುಂದೆ ಏನು ಅಂತ ಗೊತ್ತಿಲ್ಲ. ಸಮಾಜ ಸೇವೆ ಎಂದಿನಂತೆ ಮುಂದುವರೆಯಲಿದೆ. ತಾಯಿ ಹೆಸರಿನಲ್ಲಿ ಮತ್ತು ಅಬ್ದುಲ್ ಕಲಾಂ ಅವರ ಹೆಸರಿನಲ್ಲಿ ನಡೆಯುವ ಕಾರ್ಯಕ್ರಮಗಳು ನಡೆಯುತ್ತಲೇ ಇರುತ್ತವೆ ಎಂದಿದ್ದಾರೆ.

  • ಕರ್ನಾಟಕ ಬಂದ್ ಬಿಸಿ – 60 ವಿಮಾನ ರದ್ದು

    ಕರ್ನಾಟಕ ಬಂದ್ ಬಿಸಿ – 60 ವಿಮಾನ ರದ್ದು

    ಬೆಂಗಳೂರು: ಕರ್ನಾಟಕ ಬಂದ್ (Karnataka Bandh) ಹಿನ್ನೆಲೆ ವಿಮಾನ (Flight) ಹಾರಾಟಗಳಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ಕಳೆದ ಮಧ್ಯರಾತ್ರಿಯಿಂದ ಇಂದು ಮಧ್ಯರಾತ್ರಿ 12 ಗಂಟೆಯವರೆಗೆ 60ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದಾಗಿದೆ.

    ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) ವಿಮಾನ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಕೆಂಪೇಗೌಡ ವಿಮಾನ ನಿಲ್ದಾಣದಿಂದ ತೆರಳುವ 44 ವಿಮಾನಗಳು ರದ್ದಾಗಿದ್ದು, ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸುವ 16 ವಿಮಾನಗಳ ಹಾರಾಟ ರದ್ದು ಮಾಡಲಾಗಿದೆ.

    ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುತ್ತಿರುವ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಬಂದ್ ಇಂದು ಬೆಳಗ್ಗೆ 6 ಗಂಟೆಯಿಂದ ಪ್ರಾರಂಭವಾಗಿದ್ದು, ಸಂಜೆ 6 ಗಂಟೆಯವರೆಗೂ ನಡೆಯಲಿದೆ. ಕರ್ನಾಟಕ ಬಂದ್‌ಗೆ ರಾಜ್ಯದ ವಿವಿಧ ಕಡೆಗಳಿಂದ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ಏರ್‌ಪೋರ್ಟ್ ಒಳಗಡೆ ಪ್ರತಿಭಟನೆಗೆ ಯತ್ನ – ಐವರು ಪೊಲೀಸರ ವಶಕ್ಕೆ

    ಕರ್ನಾಟಕ ಬಂದ್ ಹಿನ್ನೆಲೆ ಹೆಚ್ಚಿನ ಪ್ರಯಾಣಿಕರು ಕೊನೆ ಕ್ಷಣದಲ್ಲಿ ತಮ್ಮ ವಿಮಾನದ ಟಿಕೆಟ್‌ಗಳನ್ನು ಕ್ಯಾನ್ಸಲ್ ಮಾಡಿದ್ದಾರೆ. ಈ ಕಾರಣಕ್ಕೆ ಹಲವು ವಿಮಾನಯಾನ ಸಂಸ್ಥೆಗಳು ವಿಮಾನ ಹಾರಾಟಗಳನ್ನು ರದ್ದು ಮಾಡಿವೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಈವರೆಗೂ ಪರಿಹಾರ ಸಿಗದೇ ಇರೋ ಏಕೈಕ ಸಮಸ್ಯೆ ಕಾವೇರಿಯದ್ದು: ನಟ ಉಪೇಂದ್ರ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಬುರ್ಕಾ ಧರಿಸಿ ನೃತ್ಯ – ವ್ಯಕ್ತಿ ಬಂಧನ

    ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಬುರ್ಕಾ ಧರಿಸಿ ನೃತ್ಯ – ವ್ಯಕ್ತಿ ಬಂಧನ

    ಚೆನ್ನೈ: ಗಣೇಶ ಚತುರ್ಥಿ ಆಚರಣೆ ವೇಳೆ ತಮಿಳುನಾಡಿನ (Tamil Nadu) ವೆಲ್ಲೂರು ಮೂಲದ ವ್ಯಕ್ತಿಯೊಬ್ಬ ಬುರ್ಕಾ ಧರಿಸಿ ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ಆತನನ್ನು ಬಂಧಿಸಲಾಗಿದೆ.

    ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ (Ganesh procession) ವೇಳೆ ವ್ಯಕ್ತಿಯೊಬ್ಬ ಬುರ್ಕಾ ಧರಿಸಿ (Burqa Dances) ನೃತ್ಯ ಮಾಡಿದ್ದ. ಈ ದೃಶ್ಯದ ವೀಡಿಯೋ ವೈರಲ್‌ ಆಗಿತ್ತು. ಬುರ್ಕಾ ಧರಿಸಿದ್ದ ವ್ಯಕ್ತಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಇದನ್ನೂ ಓದಿ: ಅವಕಾಶ ಸಿಕ್ಕಾಗೆಲ್ಲಾ ಲೈಂಗಿಕ ಕಿರುಕುಳಕ್ಕೆ ಯತ್ನ: ಬ್ರಿಜ್ ಭೂಷಣ್ ವಿರುದ್ಧ ದೆಹಲಿ ಪೊಲೀಸ್

    ದೂರು ಆಧರಿಸಿ ಪೊಲೀಸರು ತನಿಖೆ ನಡೆಸಿ, ವಿರುತ್ತಂಪಟ್ಟು ಮೂಲದ ಅರುಣ್‌ಕುಮಾರ್‌ ಎಂಬಾತನನ್ನು ಬಂಧಿಸಿದ್ದಾರೆ. ಘಟನೆಯಲ್ಲಿ ಭಾಗಿಯಾಗಿರುವ ಇತರರ ಪತ್ತೆಗೆ ಪೊಲೀಸರು ಮುಂದಾಗಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

    ಎರಡು ಸಮುದಾಯಗಳ ನಡುವೆ ದ್ವೇಷ ಉಂಟು ಮಾಡಲು ಯತ್ನಿಸಿದ ಆರೋಪದಡಿ ಅರುಣ್‌ಕುಮಾರ್‌ನನ್ನು ಬಂಧಿಸಲಾಗಿದೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲು ಯತ್ನಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಅಕ್ರಮವಾಗಿ ಗಡಿ ನುಸುಳಿದ ಪಾಕಿಸ್ತಾನಿ ಪ್ರಜೆಯನ್ನು ಬಂಧಿಸಿದ ಬಿಎಸ್‌ಎಫ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನನಗೆ 25 ಕೋಟಿ ರೂ. ಮೋಸವಾಗಿದೆ: ಕಮಲ್ ಹಾಸನ್ ಮಾಜಿ ಪ್ರೇಯಸಿ, ನಟಿ ಗೌತಮಿ ಅಳಲು

    ನನಗೆ 25 ಕೋಟಿ ರೂ. ಮೋಸವಾಗಿದೆ: ಕಮಲ್ ಹಾಸನ್ ಮಾಜಿ ಪ್ರೇಯಸಿ, ನಟಿ ಗೌತಮಿ ಅಳಲು

    ಮಿಳು (Tamil Nadu) ಸಿನಿಮಾ ರಂಗದ ಖ್ಯಾತ ನಟ ಕಮಲ್ ಹಾಸನ್ (Kamal Haasan) ಮಾಜಿ ಪ್ರೇಯಸಿ, ನಟಿ ಗೌತಮ್ (Gauthami) ತಮಗೆ ಕಂಪನಿಯೊಂದರಿಂದ ತಮಗೆ 25 ಕೋಟಿ ರೂಪಾಯಿ ಮೋಸವಾಗಿದೆ ಎಂದು ಪೊಲೀಸ್ ಠಾಣೆ ಮೆಟ್ಟಿಲು ಏರಿದ್ದಾರೆ. ಅಳಗಪ್ಪನ್ ಕಂಪನಿಯ ಮುಖ್ಯಸ್ಥರಿಂದ ತಮಗೆ ದೋಖಾವಾಗಿದ್ದು, ತಮಗೆ ನ್ಯಾಯ ಕೊಡಿಸಬೇಕೆಂದು ಅವರು ಚೆನ್ನೈ ಸಿಟಿ ಪೊಲೀಸ್ ಕಮಿಷ್ನರ್ ಗೆ ದೂರು ಸಲ್ಲಿಸಿದ್ದಾರೆ.

    ಶ್ರೀಪರೆಂಬುದುರ್ ನಲ್ಲಿ ನಟಿ ಗೌತಮಿ ಅವರಿಗೆ ಸೇರಿದ್ದ 46 ಎಕರೆ ಜಮೀನು ಇದೆ. ಅದನ್ನು ಮಾರಾಟ ಮಾಡಲು ಅಳಗಪ್ಪನ್ ಕಂಪನಿಗೆ ಪವರ್ ಆಫ್ ಅಟಾರ್ನಿ ನೀಡಿದ್ದರಂತೆ. ಇದನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಗೌತಮಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಅಲ್ಲದೇ, ತಮ್ಮ ಕೃಷಿ ಭೂಮಿಯನ್ನು ನಾಲ್ಕು ಕೋಟಿ ರೂಪಾಯಿಗೆ ಮಾರಾಟ ಮಾಡಿದರೂ ಕಂಪನಿ ತಮಗೆ ಕೇವಲ 62 ಲಕ್ಷ ರೂಪಾಯಿಯನ್ನು ಮಾತ್ರ ನೀಡಿದೆ ಎಂದು ಅವರು ದೂರಿದ್ದಾರೆ.

    ಹಣದ ಮೋಸ (Cheating) ಮಾಡುವುದರ ಜೊತೆಗೆ ತಮ್ಮ ಸಹಿ ಕೂಡ ಫೋರ್ಜರಿ ಮಾಡಲಾಗಿದೆ ಎಂದು ಆರೋಪಿಸಿರುವ ಗೌತಮಿ, ತಮಗಾದ ಅನ್ಯಾಯವನ್ನು ಪ್ರಶ್ನಿಸಿದರೆ, ಕಂಪನಿಯವರು ತಮಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ತಾವು ಕಷ್ಟಪಟ್ಟು ಸಂಪಾದನೆ ಮಾಡಿರುವ ಆಸ್ತಿಯದು. ಇದೀಗ ಅನಿವಾರ್ಯ ಕಾರಣಗಳಿಂದ ಮಾರಾಟಕ್ಕೆ ಮುಂದಾಗಿದ್ದೆ. ಆದರೆ, ಈ ರೀತಿ ಮೋಸವಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]