Tag: ತರಕಾರಿ ಮಾರುಕಟ್ಟೆ

  • ತರಕಾರಿ ಬೆಲೆ ಏರಿಕೆ – ಆಜಾದ್‌ಪುರ ಮಂಡಿ ತರಕಾರಿ ಮಾರುಕಟ್ಟೆಗೆ ರಾಗಾ ಭೇಟಿ

    ತರಕಾರಿ ಬೆಲೆ ಏರಿಕೆ – ಆಜಾದ್‌ಪುರ ಮಂಡಿ ತರಕಾರಿ ಮಾರುಕಟ್ಟೆಗೆ ರಾಗಾ ಭೇಟಿ

    ನವದೆಹಲಿ: ದೇಶದಲ್ಲಿ ತರಕಾರಿ ಬೆಲೆ ಏರಿಕೆ (Price Hike) ಬೆನ್ನಲ್ಲೇ ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Delhi) ದೆಹಲಿಯ ಆಜಾದ್‌ಪುರ (Azadpur) ಮಂಡಿ ತರಕಾರಿ ಮಾರುಕಟ್ಟೆಗೆ (Vegetable Market) ಭೇಟಿ ನೀಡಿದ್ದಾರೆ.

    ಮಂಗಳವಾರ ಬೆಳಗ್ಗೆ ಮಂಡಿ ತರಕಾರಿ ಮಾರುಕಟ್ಟೆಗೆ ಭೇಟಿ ನೀಡಿದ ರಾಹುಲ್ ಗಾಂಧಿ, ತರಕಾರಿ ವರ್ತಕರೊಂದಿಗೆ ನೇರ ಮಾತುಕತೆ ನಡೆಸಿದ್ದಾರೆ. ಈ ಕುರಿತು ವಿಡಿಯೋವೊಂದು ಲಭ್ಯವಾಗಿದ್ದು, ವಿಡಿಯೋದಲ್ಲಿ ತರಕಾರಿ ಬೆಲೆಗಳ ಕುರಿತು ರಾಹುಲ್ ಗಾಂಧಿ ವರ್ತಕರೊಂದಿಗೆ ಮಾತನಾಡುವುದನ್ನು ಕಾಣಬಹುದಾಗಿದೆ. ಇದನ್ನೂ ಓದಿ: Commercial LPG Cylinder Price: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 100 ರೂ. ಇಳಿಕೆ

    ಶನಿವಾರ ರಾಹುಲ್ ಗಾಂಧಿ ಅವರು, ದೆಹಲಿಯ ಆಜಾದ್‌ಪುರ ಮಾರುಕಟ್ಟೆಯಲ್ಲಿ ತರಕಾರಿ ಮಾರಾಟಗಾರರೊಬ್ಬರು ಕಣ್ಣೀರು ಹಾಕುತ್ತಿರುವ ವಿಡಿಯೋವೊಂದನ್ನು ತಮ್ಮ ಟ್ಟಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಆ ವಿಡಿಯೋದಲ್ಲಿ ತರಕಾರಿ ವ್ಯಾಪಾರಿ ರಾಮೇಶ್ವರ್ ಎಂಬವರು ಕಣ್ಣಿರು ಹಾಕುತ್ತಾ, ಟೊಮೆಟೋ ತುಂಬಾ ದುಬಾರಿಯಾಗಿದೆ. ಅದನ್ನು ಖರೀದಿಸಲು ನನ್ನ ಬಳಿ ಸಾಕಷ್ಟು ಹಣವಿಲ್ಲ ಎಂದು ತಮ್ಮ ಕಷ್ಟವನ್ನು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಚುನಾವಣಾ ಭರವಸೆ ಈಡೇರಿಸಲು ಸಾಧ್ಯವಾಗ್ಲಿಲ್ಲ ಅಂತ ತನಗೆ ತಾನೇ ಚಪ್ಪಲಿಯಿಂದ ಹೊಡೆದುಕೊಂಡ ಕೌನ್ಸಿಲರ್

    ಅಲ್ಲದೇ ಅದನ್ನು ಯಾವ ಬೆಲೆಗೆ ಮಾರಾಟ ಮಾಡುತ್ತೇವೆ ಎಂದು ಹೇಳಲು ಅಸಾಧ್ಯ. ಮಳೆಯಲ್ಲಿ ತೇವವಾದರೆ ಅಥವಾ ಸ್ಟಾಕ್‌ಗೆ ಏನಾದರೂ ಹಾನಿಯಾದರೆ ನಾವು ಭಾರೀ ನಷ್ಟವನ್ನು ಅನುಭವಿಸಬೇಕಾಗುತ್ತದೆ ಎಂದರು. ಇದನ್ನೂ ಓದಿ: ಎಕ್ಸ್‌ಪ್ರೆಸ್ ವೇ ನಿರ್ಮಾಣದ ವೇಳೆ ಕ್ರೇನ್ ಕುಸಿದು 16 ಮಂದಿ ಕಾರ್ಮಿಕರು ದುರ್ಮರಣ

    ಇಷ್ಟು ಮಾತ್ರವಲ್ಲದೇ ಹಣದುಬ್ಬರವು ತನ್ನನ್ನು ಹತಾಶ ಪರಿಸ್ಥಿತಿಗೆ ತಳ್ಳಿದ್ದು, ದಿನಕ್ಕೆ 100ರಿಂದ 200 ರೂ. ಗಳಿಸಲು ಸಾಧ್ಯವಾಗುತ್ತಿಲ್ಲ ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದರು. ಇದನ್ನೂ ಓದಿ: ಜ್ಞಾನವಾಪಿ ಮಸೀದಿಯಲ್ಲಿ ತ್ರಿಶೂಲ ಏನು ಮಾಡುತ್ತಿದೆ? – ಯೋಗಿ ಆದಿತ್ಯನಾಥ್ ಪ್ರಶ್ನೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಿನ್ನ, ಬೆಳ್ಳಿಯಲ್ಲ ಈಗ ನಿಂಬೆಹಣ್ಣಿನ ಮೇಲೆ ಕಳ್ಳರ ಕಣ್ಣು- 12 ಮೂಟೆ ನಿಂಬೆಹಣ್ಣು ಕಳವಾಗಿದ್ದೇಗೆ?

    ಚಿನ್ನ, ಬೆಳ್ಳಿಯಲ್ಲ ಈಗ ನಿಂಬೆಹಣ್ಣಿನ ಮೇಲೆ ಕಳ್ಳರ ಕಣ್ಣು- 12 ಮೂಟೆ ನಿಂಬೆಹಣ್ಣು ಕಳವಾಗಿದ್ದೇಗೆ?

    ಲಕ್ನೋ: ಪೆಟ್ರೋಲ್, ಡೀಸೆಲ್‌ನಂತೆಯೇ ದಿನಬಳಕೆ ವಸ್ತುಗಳ ಬೆಲೆಯೂ ಏರಿಕೆಯಾಗುತ್ತಿದೆ. ಕೆಲದಿನಗಳ ಹಿಂದೆಯಷ್ಟೇ ಅಡುಗೆ ಎಣ್ಣೆದರ, ಅಡುಗೆ ಅನಿಲದರವೂ ಏರಿಕೆಯಾಗಿದೆ. ಆದರೀಗ ನಿಂಬೆ ಹಣ್ಣು ಜನರನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ.

    ಗಗನಕ್ಕೇರುತ್ತಿರುವ ಬೆಲೆಗಳ ನಡುವೆ, ಗಾಜಿಯಾಬಾದ್‌ನ ಮೋದಿನಗರ ಪ್ರದೇಶದ ತರಕಾರಿ ಮಾರುಕಟ್ಟೆಯಲ್ಲಿ ಕಳ್ಳರು ಅಂದಾಜು 70,000 ರೂಪಾಯಿ ಮೌಲ್ಯದ 12 ಮೂಟೆ ನಿಂಬೆಹಣ್ಣುಗಳನ್ನು ಕದ್ದಿರುವುದು ಬೆಳಕಿಗೆ ಬಂದಿದೆ. ಮಾರುಕಟ್ಟೆಲ್ಲಿದ್ದ ಯಾವುದೇ ತರಕಾರಿಗಳನ್ನು ಮುಟ್ಟದೇ ನಿಂಬೆಹಣ್ಣನ್ನು ಮಾತ್ರವೇ ಕದ್ದೊಯ್ದಿರುವುದು ಕುತೂಹಲಕ್ಕೆ ಕಾರಣವಾಗಿದೆ. ಇದನ್ನೂ ಓದಿ: ರಾಜ್ ಠಾಕ್ರೆ ಬೊಗಳುವ ನಾಯಿ – ಪರೋಕ್ಷವಾಗಿ ಅಕ್ಬರುದ್ದೀನ್ ಟಾಂಗ್

    Lemon

    ಘಾಜಿಯಾಬಾದ್‌ನ ಮೋದಿನಗರ-ಹಾಪುರ್ ರಸ್ತೆಯಲ್ಲಿರುವ ಗಡನಾ ಗ್ರಾಮದ ಮಾರುಕಟ್ಟೆಯ ವ್ಯಾಪಾರಿಯಾಗಿರುವ ಭೋಜ್‌ಪುರ ನಿವಾಸಿ ರಶೀದ್ ಮಳಿಗೆಯಲ್ಲಿ ನಿಂಬಿಹಣ್ಣು ಕಳವಾಗಿದೆ. ಇತ್ತೀಚಿಗೆ ನಿಂಬೆಹಣ್ಣು ಕದಿಯುತ್ತಿರುವ ಘಟನೆಗಳನ್ನು ಗಮನದಲ್ಲಿಟ್ಟುಕೊಂಡು ತರಕಾರಿ ಮಾರುಕಟ್ಟೆಯಲ್ಲೂ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಹಾಗಿದ್ದೂ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ವಿರುದ್ಧ ಹೋರಾಡಿ, ರಮ್ಯಾ ವಿರುದ್ಧ ಅಲ್ಲ – ಡಿಕೆಶಿ ಬೆಂಬಲಿಗರಿಗೆ ಮಹದೇವಪ್ಪ ಟಾಂಗ್

    Lemon

    ಇದೇ ರೀತಿಯ ಘಟನೆಯಲ್ಲಿ ಶಹಜಹಾನ್‌ಪುರದ ಗೋಡೌನ್‌ನಲ್ಲಿಯೂ 50 ಕೆಜಿಯಷ್ಟು ನಿಂಬೆಹಣ್ಣು ಕಳವಾಗಿತ್ತು, ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.  ಇಲ್ಲಿನ ತಿಲ್ಹಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಗೋದಾಮಿನಲ್ಲಿಯೂ 40 ಕೆಜಿ ಈರುಳ್ಳಿ ಮತ್ತು 38 ಕೆಜಿ ಬೆಳ್ಳುಳ್ಳಿಯೂ ಕಳವಾಗಿರುವುದು ಬೆಳಕಿಗೆ ಬಂದಿತ್ತು. ಇದೀಗ 3ನೇ ಬಾರಿಗೆ ನಿಂಬೆಹಣ್ಣು ಕಳವಾಗಿರುವುದು ಕಂಡುಬಂದಿದೆ.

  • ಕಲಬುರಗಿಯಲ್ಲಿ ತರಕಾರಿ ಮಾರುಕಟ್ಟೆ ಸಂಕೀರ್ಣಕ್ಕೆ ಸಿಎಂ ಶಂಕುಸ್ಥಾಪನೆ

    ಕಲಬುರಗಿಯಲ್ಲಿ ತರಕಾರಿ ಮಾರುಕಟ್ಟೆ ಸಂಕೀರ್ಣಕ್ಕೆ ಸಿಎಂ ಶಂಕುಸ್ಥಾಪನೆ

    ಕಲಬುರಗಿ: ಅನ್ನದಾತರ ಬದುಕು ಹಸನಗೊಳಿಸಲು ಹತ್ತಾರು ರೈತಾಪಿ ಯೋಜನೆಗಳನ್ನು ರಾಜ್ಯದಲ್ಲಿ ಜಾರಿಗೊಳಿಸಿದ್ದು, ರೈತರ ಆದಾಯ ದ್ವಿಗುಣಗೊಳಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

    ನಗರದ ಎಂ.ಎಸ್.ಕೆ ಮಿಲ್ ವಾಣಿಜ್ಯ ಬಡಾವಣೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಕಲಬುರಗಿ ನಾಗರಾಭಿವೃದ್ಧಿ ಪ್ರಾಧಿಕಾರದ ಜಂಟಿ ಅನುದಾನದಡಿ, 2 ಎಕರೆ ಪ್ರದೇಶದಲ್ಲಿ ಸುಮಾರು 26.30 ಕೋಟಿ ರೂ. ವೆಚ್ಚದಲ್ಲಿ ನೂತನ ಮಾದರಿಯ ತರಕಾರಿ ಮಾರುಕಟ್ಟೆ ಸಂಕೀರ್ಣಕ್ಕೆ ಶನಿವಾರ ಅಡಿಗಲ್ಲು ಹಾಕಿ ಅವರು ಮಾತನಾಡಿದರು.

    ಅನ್ನದಾತರ ಬೆಳೆಗೆ ಸೂಕ್ತ ಮಾರುಕಟ್ಟೆ ದೊರಕಬೇಕು ಎಂಬ ನಿಟ್ಟಿನಲ್ಲಿ ಕೃಷಿ ಮತ್ತು ತೋಟಗಾರಿಕೆಗೆ ಹೆಚ್ಚಿನ ರೀತಿಯ ಪ್ರೋತ್ಸಾಹ ನೀಡಲಾಗುತ್ತಿದೆ. ಕೋವಿಡ್ ಸಂದರ್ಭದಲ್ಲಿ ಹೂವು ಬೆಳೆಗಾರರು ಹಾಗೂ ತರಕಾರಿ ಮಾರಾಟಗಾರರು ಸೂಕ್ತ ಮಾರುಕಟ್ಟೆ ಸಿಗದೆ ಕಷ್ಟ ಅನುಭವಿಸಿದ್ದರು. ಇದನ್ನರಿತ ಕೇಂದ್ರ ಸರ್ಕಾರ ದೂರದ ಪ್ರದೇಶದಲ್ಲಿಯೂ ತರಕಾರಿ, ಹಣ್ಣುಗಳನ್ನು ಮಾರಾಟ ಮಾಡಲು ಸಾಗಾಣಿಕೆಗೆ ಕಿಸಾನ್ ರೈಲು ಯೋಜನೆ ಜಾರಿಗೆ ತಂದಿದ್ದು, ರೈತರಿಗೆ ತುಂಬಾ ಅನುಕೂಲವಾಗಿದೆ. ಮುಂದಿನ ದಿನಗಳಲ್ಲಿ ರೈತರ ಆದಾಯ ದ್ವಿಗುಣ ಮಾಡುವ ನಿಟ್ಟಿನಲ್ಲಿ ಮತ್ತಷ್ಟು ಹೊಸ ಯೋಜನೆಗಳನ್ನು ಜಾರಿಗೊಳಿಸುವುದಾಗಿ ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

    ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ 20 ಕೊಟಿ ರೂ. ಹಾಗೂ ಕಲಬುರಗಿ ನಾಗರಾಭಿವೃದ್ಧಿ ಪ್ರಾಧಿಕಾರದಿಂದ 6.30 ಕೋಟಿ ರೂ. ಹೀಗೆ ಒಟ್ಟು 26.30 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ತರಕಾರಿ ಮಾರುಕಟ್ಟೆ ಸಂಕೀರ್ಣ ರಾಜ್ಯದ ಇತಿಹಾಸದಲ್ಲೇ ಮೊದಲ ಕಟ್ಟಡವಾಗಿದ್ದು, ತುಂಬಾ ಸಂತೋಷದಿಂದ ಅಡಿಗಲ್ಲು ನೆರವೇರಿಸಿದ್ದೇನೆ. ಈ ತರಹದ ಮಾದರಿ ತರಕಾರಿ ಮಾರುಕಟ್ಟೆ ನಿರ್ಮಾಣದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ಗಮನಕ್ಕೂ ತರಲಾಗುವುದು ಎಂದರು.

    ನೂತನ ತರಕಾರಿ ಮಾರುಕಟ್ಟೆಯಿಂದ ಈ ಭಾಗದ ರೈತರ ಹಾಗೂ ಜನರ ಬಹುದಿನಗಳ ಕನಸು ನನಸಾಗಲಿದ್ದು, ರಸ್ತೆ ಬದಿಯಲ್ಲಿ ತರಕಾರಿ ಮಾರಾಟ ಮಾಡಿ ನಷ್ಟ ಅನುಭವಿಸುತ್ತಿದ್ದ ಮತ್ತು ಮಳೆಗಾಲದಲ್ಲಿ ತುಂಬಾ ತೊಂದರೆ ಅನುಭವಿಸುತ್ತಿದ್ದ ರೈತಾಪಿ ವರ್ಗಕ್ಕೆ ಇದರಿಂದ ನೆಮ್ಮದಿ ಸಿಕ್ಕಿದೆ. ರಸ್ತೆಯುದ್ದಕ್ಕೂ ಜನ ಗುಂಪಾಗಿ ಸೇರುವ ಕಾರಣ ಅಪಘಾತವಾಗುವ ಸಾಧ್ಯತೆಗಳನ್ನು ಮನಗಂಡು ನೂತನ ತರಕಾರಿ ಮಾರುಕಟ್ಟೆ ಸ್ಥಾಪಿಸಲಾಗುತ್ತಿದೆ. ಇದರಿಂದ ಪ್ರದೇಶದಲ್ಲಿನ ಮುಕ್ತ ಸಂಚಾರಕ್ಕೂ ಅನುವಾಗಲಿದೆ ಎಂದರು.

    ರಾಜ್ಯದಲ್ಲಿ ರೈತರು ಬೆಳೆದ ಬೆಳೆಗೆ ವೈಜ್ಞಾನಿಕವಾಗಿ ಬೆಲೆ ದೊರಕಿಸುವಲ್ಲಿ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಕೃಷಿ ನಮ್ಮ ಆದ್ಯತಾ ವಲಯವಾಗಿದ್ದು, ಕೃಷಿಗೆ ಹೆಚ್ಚಿನ ರೀತಿಯಲ್ಲಿ ಪ್ರೋತ್ಸಾಹ ನೀಡಿದೆ. ಕೋವಿಡ್ ಲಾಕ್‍ಡೌನ್ ಸಂದರ್ಭದಲ್ಲಿ ಹೂ ಬೆಳೆಗಾರರಿಗೆ ಪ್ರತಿ ಹೆಕ್ಟೇರ್‍ಗೆ ತಲಾ 10,000 ರೂ. ಗಳಂತೆ 20 ಸಾವಿರ ರೈತರಿಗೆ ಪರಿಹಾರ ನೀಡಲಾಗಿದೆ. ಅದೇ ರೀತಿ ಹಣ್ಣು ಮತ್ತು ತರಕಾರಿ ಬೆಳೆಗಾರರಿಗೆ ಗರಿಷ್ಠ 1 ಹೆಕ್ಟೇರ್‍ಗೆ ತಲಾ 10,000 ರೂ. ಗಳಂತೆ 69,000 ಸಾವಿರ ರೈತರಿಗೆ ಆರ್ಥಿಕ ನೆರವು ನೀಡಲಾಗಿದೆ ಎಂದರು.

    ಕಟ್ಟಡದ ವಿಶೇಷತೆ
    ನೂತನ ತರಕಾರಿ ಮಾರುಕಟ್ಟೆ ಕಾಂಪ್ಲೆಕ್ಸ್ ಬೇಸ್‍ಮೆಂಟ್ ಮಹಡಿ, ನೆಲ ಮಹಡಿ ಹಾಗೂ ಮೊದಲನೇ ಮಹಡಿ ಒಳಗೊಂಡಿದೆ. ಬೇಸ್‍ಮೆಂಟ್ ಮಹಡಿಯಲ್ಲಿ ವಾಹನ ನಿಲುಗಡೆ, ಲಿಫ್ಟ್, ಸ್ಟೇರ್‍ಕೇಸ್, ಸಂಪ್ ಟ್ಯಾಂಕ್, ಎಲೆಕ್ಟ್ರೀಕಲ್ ಕೋಣೆ ಇರಲಿದೆ. ನೆಲ ಮಹಡಿಯಲ್ಲಿ 62 ಅಂಗಡಿಗಳು, ತರಕಾರಿ ಮಾರಾಟಕ್ಕೆ 192 ಮಳಿಗೆ, ಸಗಟು ವ್ಯಾಪಾರ ಹರಾಜು ಪ್ರಕ್ರಿಯೆಗೆ ಪ್ಲಾಟ್‍ಫಾರ್ಮ್, ಘನತ್ಯಾಜ್ಯ ಸಂಗ್ರಹಣೆಗೆ ಸ್ಥಳ, ಕೋಲ್ಟ್ ಸ್ಟೋರೇಜ್ ಕೋಣೆ ಹಾಗೂ ಶೌಚಾಲಯ ಇರಲಿವೆ. ಮೊದಲನೇ ಮಹಡಿಯಲ್ಲಿ 47 ಅಂಗಡಿಗಳು, ಇತರೆ ಕಾರ್ಯಾಲಯ, ಬ್ಯಾಂಕ್ ಇರಲಿದ್ದು, ಒಟ್ಟಾರೆ ಸಂಕೀರ್ಣದಲ್ಲಿ 301 ಅಂಗಡಿಗಳಿರಲಿವೆ ಎಂದು ಸಿ.ಎಂ. ಯಡಿಯೂರಪ್ಪನವರು ಹೇಳಿದ್ದಾರೆ.

  • ಕಲಬುರಗಿಯಲ್ಲಿ ನೂತನ ಮಾದರಿಯ ತರಕಾರಿ ಮಾರುಕಟ್ಟೆ ನಿರ್ಮಾಣಕ್ಕೆ ಸಚಿವ ಸಂಪುಟ ಒಪ್ಪಿಗೆ: ನಿರಾಣಿ

    ಕಲಬುರಗಿಯಲ್ಲಿ ನೂತನ ಮಾದರಿಯ ತರಕಾರಿ ಮಾರುಕಟ್ಟೆ ನಿರ್ಮಾಣಕ್ಕೆ ಸಚಿವ ಸಂಪುಟ ಒಪ್ಪಿಗೆ: ನಿರಾಣಿ

    – 2 ಎಕರೆ ಜಮೀನಿನಲ್ಲಿ ಪಿಪಿಪಿ ಮಾದರಿಯಲ್ಲಿ ನಿರ್ಮಾಣ
    – ಯೋಜನೆಗೆ ಒಟ್ಟು 26.30 ಕೋಟಿ ವೆಚ್ಚ

    ಬೆಂಗಳೂರು: ಕಲಬುರಗಿ ಜಿಲ್ಲೆ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಭಿವೃದ್ಧಿಪಡಿಸಿರುವ ಎಂಎಸ್‍ಕೆ ವಾಣಿಜ್ಯ ಬಡಾವಣೆಯಲ್ಲಿ ನೂತನ ಮಾದರಿಯ ತರಕಾರಿ ಮಾರುಕಟ್ಟೆ ನಿರ್ಮಾಣ ಮಾಡಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

    ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಹಾಗೂ ಕಲಬುರಗಿ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿಯವರ ‘ವಿಶೇಷ ಆಸಕ್ತಿಯ’ ಪರಿಣಾಮವಾಗಿ ನಗರದಲ್ಲಿ ತರಕಾರಿ ಮಾರುಕಟ್ಟೆ ನಿರ್ಮಾಣ ಮಾಡಲು ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

    ಈ ಕುರಿತು ಮಾಹಿತಿ ನೀಡಿದ ಸಚಿವ ನಿರಾಣಿ, ಕಲಬುರಗಿ ಪ್ರಾಧಿಕಾರದ ವತಿಯಿಂದ ಅಭಿವೃದ್ಧಿಗೊಳಿಸಿರುವ ಎಂಎಸ್‍ಕೆಎಲ್ ವಾಣಿಜ್ಯ ಬಡಾವಣೆಯಲ್ಲಿ ಕಾಯ್ದಿರಿಸಲಾದ ಅಂದಾಜು 2 ಎಕರೆ ವಿಸ್ತೀರ್ಣದ ನಾಗರಿಕ ಸೌಲಭ್ಯದ ನಿವೇಶನದಲ್ಲಿ ಸುವರ್ಣ ಕರ್ನಾಟಕ ವಾಣಿಜ್ಯ ಮಳಿಗೆಯನ್ನು ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದರು.

    ನವೆಂಬರ್ 27, 2012ರನ್ವಯ ಈ ಯೋಜನೆಗೆ ಅನುಮೋದನೆ ನೀಡಲಾಗಿತ್ತು. ಕೆಲವು ಕಾರಣಗಳಿಂದ ಯೋಜನೆಯನ್ನು ರದ್ದುಗೊಳಿಸಿ ನಾಗರಿಕ ಸೌಲಭ್ಯದ ನಿವೇಶನದಲ್ಲಿ ಹಲವು ವರ್ಷಗಳಿಂದ ತರಕಾರಿ ಮಾರಾಟ ಮಾಡಲು ಸೂಕ್ತ ಮಾರುಕಟ್ಟೆ ಕಲ್ಪಿಸುವ ಉದ್ದೇಶದಿಂದ ಈಗ ನೂತನ ಮಾದರಿಯ ತರಕಾರಿ ಮಾರುಕಟ್ಟೆಯನ್ನು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ, ಕಲಬುರಗಿ ವತಿಯಿಂದ ನೀಡಲಾಗುವ ಅನುದಾನ ಮತ್ತು ಪ್ರಾಧಿಕಾರದ ವತಿಯಿಂದ 26.30 ಕೋಟಿ ರೂ. ವೆಚ್ಚದಲ್ಲಿ ಅನುಮೋದನೆ ನೀಡಲು ಆಯುಕ್ತರು ಸಮ್ಮತಿಸಿದ್ದರು ಎಂದರು.

    ಎಂಎಸ್‍ಕೆ ಮಿಲ್ (ವಾಣಿಜ್ಯ) ಬಡಾವಣೆಗೆ ಹೊಂದಿಕೊಂಡಿರುವ ಅಫ್ಜಲ್‍ಪುರಗೆ ಹೋಗುವ ರಸ್ತೆಯಲ್ಲಿ ಚಿಲ್ಲರೆ ವ್ಯಾಪಾರಸ್ಥರು ರಸ್ತೆಯಲ್ಲಿ ವ್ಯಾಪಾರ ಮಾಡುತ್ತಿದ್ದರು. ಪ್ರಸ್ತುತ ಕೊರೊನಾ ಹರಡುವಿಕೆ ತಡೆಗಟ್ಟಲು ಜಿಲ್ಲಾಡಳಿತ ಟೊಂಕ ಕಟ್ಟಿ ನಿಂತಿದೆ. ರಸ್ತೆ ಬದಿಯ ಚಿಲ್ಲರೆ ವ್ಯಾಪಾರಸ್ಥರನ್ನು ಪ್ರಾಧಿಕಾರದ ಅಟಲ್ ಬಿಹಾರಿ ವಾಜಪೇಯಿ ಬಡಾವಣೆಗೆ ತಾತ್ಕಾಲಿಕವಾಗಿ ಸ್ಥಳಾಂತರ ಮಾಡಲಾಗಿದೆ ಎಂದು ತಿಳಿಸಿದರು.

    ಈ ಬಡಾವಣೆ ತುಂಬಾ ದೂರವಿದ್ದು, ಸಾರ್ವಜನಿಕರಿಗೆ ಅನಾನೂಕೂಲವಾಗುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಕಲಬುರಗಿ ಸುತ್ತಲಿನ ಹಳ್ಳಿಗಳಿಂದ ಬರುವ ರೈತರ ತರಕಾರಿಯನ್ನು ರಸ್ತೆಬದಿ ಮಾರಾಟ ಮಾಡುತ್ತಿರುವುದರಿಂದ ನೂತನವಾಗಿ ತರಕಾರಿ ಮಾರುಕಟ್ಟೆ ನಿರ್ಮಾಣ ಮಾಡಲು ತೀರ್ಮಾನಿಸಲಾಗಿದೆ ಎಂದರು. 60 ದ್ವಿಚಕ್ರ, 150 ನಾಲ್ಕು ಚಕ್ರ ವಾಹನಗಳ ನಿಲುಗಡೆ, ಲಿಫ್ಟ್, ಸ್ಟೇರ್ ಕೇಸ್, ಟ್ಯಾಂಕ್, ಎಲೆಕ್ಟ್ರಿಕಲ್, ಪೆನೆಲ್ ಕೋಣೆಯನ್ನು ಅಳವಡಿಸಲಾಗಿದೆ. ನೆಲಮಹಡಿಯಲ್ಲಿ ದೊಡ್ಡ, ಸಣ್ಣ ಅಂಗಡಿ, ಫ್ಲಾಟ್‍ಫಾರಂ, ಸಗಟು ವ್ಯಾಪಾರದ ಹರಾಜು ಪ್ರಕ್ರಿಯೆ ಘನತ್ಯಾಜ್ಯ ವಸ್ತುಗಳ ಸಂಗ್ರಹಣೆ, ಕೋಲ್ಟ್ ಸ್ಟೋರೆಜ್, ಬ್ಯಾಂಕ್ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ ಎಂದು ವಿವರಿಸಿದರು.

  • ಕೊರೊನಾ ಹಿನ್ನೆಲೆ ತರಕಾರಿ ಮಾರುಕಟ್ಟೆ ಸ್ಥಳಾಂತರ- ಕೊಳ್ಳುವವರೂ ಇಲ್ಲ, ಮಾರುವವರೂ ಇಲ್ಲ

    ಕೊರೊನಾ ಹಿನ್ನೆಲೆ ತರಕಾರಿ ಮಾರುಕಟ್ಟೆ ಸ್ಥಳಾಂತರ- ಕೊಳ್ಳುವವರೂ ಇಲ್ಲ, ಮಾರುವವರೂ ಇಲ್ಲ

    – ಚಿನ್ನದ ಅಂಗಡಿ ಬಂದ್‍ಗೆ ಗದಗನಲ್ಲಿ ಆಕ್ರೋಶ

    ಧಾರವಾಡ/ಗದಗ: ಕೊರೊನಾ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆ, ಧಾರವಾಡ ಮಹಾನಗರ ಪಾಲಿಕೆ ಧಾರವಾಡ ತರಕಾರಿ ಮಾರುಕಟ್ಟೆಯನ್ನು ನಗರದ ಕೆಇ ಬೊರ್ಡ್ ಶಾಲೆಯ ಆವರಣಕ್ಕೆ ಸ್ಥಳಾಂತರಿಸಿದೆ. ಆದರೆ ಅಲ್ಲಿ ಕೊಳ್ಳವವರೂ ಬರುತ್ತಿಲ್ಲ, ಮಾರುವವರೂ ಬರುತ್ತಿಲ್ಲ. ಹೀಗಾಗಿ ಆವರಣ ಬಿಕೋ ಎನ್ನುತ್ತಿದೆ.

    ವ್ಯಾಪಾರಕ್ಕೆ ಬರುವವರಿಗೆ ಇಗಾಗಲೇ ಪಾಲಿಕೆ ಮಾರ್ಕಿಂಗ್ ಮಾಡಿ ಜಾಗ ಗುರುತಿಸುವ ಕೆಲಸ ಮಾಡುತ್ತಿದೆ. ಅಲ್ಲದೆ ಕೆಲವೇ ಕೆಲವು ತರಕಾರಿ ವ್ಯಾಪಾರಿಗಳು ಮಾತ್ರ ಸ್ಥಳಕ್ಕೆ ಆಗಮಿಸಿದ್ದಾರೆ. ಆದರೆ ವ್ಯಾಪಾರ ಇಲ್ಲದ ಕಾರಣ ಮೊದಲಿನ ಜಾಗಕ್ಕೇ ಕಳುಹಿಸಿ ಎಂದು ಮನವಿ ಮಾಡುತಿದ್ದಾರೆ.

    ಬಿಸಿಲಿನಲ್ಲಿ ಕೂರಲು ಆಗುತ್ತಿಲ್ಲ, ಅಲ್ಲದೆ ಜನರು ಸಹ ಇತ್ತ ಬರುತ್ತಿಲ್ಲ. ವ್ಯಾಪಾರವೇ ಆಗುತ್ತಿಲ್ಲ. ಹೀಗಾಗಿ ತುಂಬಾ ಕಷ್ಟವಾಗುತ್ತಿದೆ. ನಮ್ಮನ್ನು ಮೊದಲಿನ ಜಾಗಕ್ಕೇ ಕಳುಹಿಸಿ ಎಂದು ಕೇಳಿಕೊಳ್ಳುತ್ತಿದ್ದಾರೆ. ಗ್ರಾಹಕರು ಸಹ ಮಾರುಕಟ್ಟೆಯತ್ತ ಬಾರುತ್ತಿಲ್ಲ. ಹೀಗಾಗಿ ಆವರಣ ಬಿಕೋ ಎನ್ನುತ್ತಿದೆ.

    ಚಿನ್ನದ ಅಂಗಡಿ ಬಂದ್ ಗೆ ಆಕ್ರೋಶ

    ಸರ್ಕಾರದ ಆಫ್ ರೂಲ್ಸ್ ನಿರ್ಧಾರದ ವಿರುದ್ಧ ಗದಗ ಜಿಲ್ಲೆಯ ಅನೇಕ ಚಿನ್ನದ ಅಂಗಡಿ ಮಾಲೀಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನಾವು ಕೋವಿಡ್ ನಿಯಮಗಳನ್ನು ಪಾಲಿಸುತ್ತೇವೆ. ಅಂಗಡಿ ತೆರೆಯಲು ಅವಕಾಶ ಕಲ್ಪಿಸಿ ಕೊಡಿ ಎಂದು ಚಿನ್ನದ ಅಂಗಡಿಯ ಅನೇಕ ಮಾಲೀಕರು ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ರಾಜ್ಯದ ಅನೇಕ ಕಡೆಗಳಲ್ಲಿ ಮಾರ್ಕೆಟ್ ಓಪನ್ ಇದೆ. ಗದಗನಲ್ಲಿ ಮಾತ್ರ ಬಂದ್ ಯಾಕೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಕಳೆದ 2 ವರ್ಷಗಳಿಂದ ವ್ಯಾಪಾರ ಕುಂಠಿತದಿಂದ ಸಾಕಷ್ಟು ತೊಂದರೆಯಲ್ಲಿದ್ದೆವೆ. ಜೀವನ ನಡೆಸುವುದು ದುಸ್ತರವಾಗಿದೆ. ರಾಜಕಾರಣಿಗಳು ಚುನಾವಣೆ, ಸಭೆ, ಸಮಾರಂಭಗಳಂತಹ ಅನೇಕ ಕಾರ್ಯಕ್ರಮಗಳನ್ನು ಮಾಡುತ್ತಾರೆ. ಅವರಿಗಿಲ್ಲದ ಕಾನೂನು ಸಣ್ಣಪುಟ್ಟ ವ್ಯಾಪಾರಸ್ಥರು, ಸಾರ್ವಜನಿಕರಿಗೆ ಯಾಕೆ ಎಂದು ಸರ್ಕಾರದ ವಿರುದ್ಧ ಗುಡುಗಿದರು. ಮದುವೆ, ಶುಭ ಸಮಾರಂಭಗಳ ಈ ಸೀಸನ್ ನಲ್ಲಿ ಅಂಗಡಿಗಳನ್ನು ಬಂದ್ ಮಾಡಿಸಿದರೆ ಬದುಕೊದು ಹೇಗೆ ಎಂದು ಪ್ರಶ್ನಿಸಿದರು. ವೀಕೆಂಡ್ ಲಾಕ್‍ಡೌನ್ ಬಿಟ್ಟು ಉಳಿದ ದಿನಗಳಲ್ಲಿ, ಕೋವಿಡ್ ನಿಯಮ ಪಾಲಿಸುತ್ತೇವೆ ದಿನಕ್ಕೆ 4 ಗಂಟೆ ವರೆಗೆಯಾದರೂ, ಅಂಗಡಿ ತೆರೆಯಲು ಅನುಮತಿ ಕೊಡಿ ಎಂದು ಚಿನ್ನದ ಅಂಗಡಿ ಮಾಲೀಕರು ಬೇಡಿಕೆ ಇಟ್ಟಿದ್ದಾರೆ.

  • ಒಂದು ವಾರ ಎಪಿಎಂಸಿ ತರಕಾರಿ ಮಾರುಕಟ್ಟೆ ಬಂದ್

    ಒಂದು ವಾರ ಎಪಿಎಂಸಿ ತರಕಾರಿ ಮಾರುಕಟ್ಟೆ ಬಂದ್

    ಚಾಮರಾಜನಗರ: ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಚಾಮರಾಜನಗರ ಎಪಿಎಂಸಿ (ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ) ತರಕಾರಿ ಮಾರುಕಟ್ಟೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.

    ತರಕಾರಿ ಮಂಡಿಗಳನ್ನು ಇಂದಿನಿಂದ ಆರು ದಿನಗಳ ಕಾಲ ಮುಚ್ಚಲು ತರಕಾರಿ ವ್ಯಾಪಾರಿಗಳು, ದಲ್ಲಾಳಿಗಳು ತೀರ್ಮಾನಿಸಿದ್ದು, ಎಪಿಎಂಸಿಯಲ್ಲಿ ತರಕಾರಿ ವ್ಯಾಪಾರ ವಹಿವಾಟು ಸ್ಥಗಿತಗೊಂಡಿದೆ. ಈ ಮಾಹಿತಿ ಇಲ್ಲದೆ ಇಂದು ಮಾರುಕಟ್ಟೆಗೆ ತರಕಾರಿ ತಂದ ಕೆಲ ರೈತರು ನಿರಾಶರಾಗಿ ವಾಪಸ್ ಹೋಗಬೇಕಾಯಿತು. ಇಷ್ಟು ದಿನ ರೈತರು, ವ್ಯಾಪಾರಿಗಳು, ದಲ್ಲಾಳಿಗಳಿಂದ ಗಿಜಿಗುಡುತ್ತಿದ್ದ ಎಪಿಎಂಸಿ ತರಕಾರಿ ಮಾರುಕಟ್ಟೆ ಇಂದು ಬಿಕೋ ಎನ್ನುತ್ತಿತ್ತು.

    ರೈತರು, ಸಗಟು, ಚಿಲ್ಲರೆ ವ್ಯಾಪಾರಿಗಳು, ದಲ್ಲಾಳಿಗಳು ಸೇರಿದಂತೆ ನಿತ್ಯ ಎರಡು ಸಾವಿರಕ್ಕೂ ಹೆಚ್ಚು ಮಂದಿ ತರಕಾರಿ ಮಂಡಿಗೆ ಬರುತ್ತಾರೆ. ತರಕಾರಿ ಹರಾಜು ಮತ್ತು ವ್ಯಾಪಾರದ ವೇಳೆ ಸಾಮಾಜಿಕ ಅಂತರ ಕಾಪಾಡುವುದು ಕಷ್ಟವಾಗಿದೆ. ಹೀಗಾಗಿ ಜನಜಂಗುಳಿಯಿಂದ ಕೊರೊನಾ ಹರಡುವ ಸಾಧ್ಯತೆಗಳಿವೆ. ಇದರಿಂದ ಜೂನ್ 29 ರಿಂದ ಜುಲೈ 4 ರವರೆಗೆ ತಾತ್ಕಾಲಿಕವಾಗಿ ತರಕಾರಿ ಮಂಡಿ ಮುಚ್ಚಲು ತರಕಾರಿ ವ್ಯಾಪಾರಿಗಳು ಹಾಗೂ ದಲ್ಲಾಳಿಗಳು ಸಭೆ ಸೇರಿ ತೀರ್ಮಾನ ಕೈಗೊಂಡಿದ್ದಾರೆ.

  • ಕೊರೊನಾ ಆತಂಕ- ಇಡೀ ಗ್ರಾಮಕ್ಕೆ ಔಷಧಿ ಸಿಂಪಡಣೆ

    ಕೊರೊನಾ ಆತಂಕ- ಇಡೀ ಗ್ರಾಮಕ್ಕೆ ಔಷಧಿ ಸಿಂಪಡಣೆ

    ಚಿಕ್ಕಮಗಳೂರು: ಪ್ರತಿ ದಿನ ಹಾಸನದ ಸಂತೆಗೆ ಹೋಗಿ ಬರುತ್ತಿದ್ದ ವ್ಯಕ್ತಿಗೆ ಕೊರೊನಾ ಸೋಂಕು ದೃಢವಾದ ಹಿನ್ನೆಲೆ ಆತಂಕ ಗೊಂಡಿರುವ ತಾಲೂಕಿನ ಭೌದಣಿಕೆ ಗ್ರಾಮಸ್ಥರು ಇಡೀ ಗ್ರಾಮಕ್ಕೆ ಔಷಧಿ ಸಿಂಪಡಿಸಿದ್ದಾರೆ.

    ಜೂನ್ 21ರ ಭಾನುವಾರದಂದು ಭೌದಣಿಕೆ ಗ್ರಾಮದ ತರಕಾರಿ ವ್ಯಾಪಾರಸ್ಥನಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಗ್ರಾಮದ ವ್ಯಕ್ತಿಗೆ ಕೊರೊನಾ ಸೋಂಕು ತಗುಲುತ್ತಿದ್ದಂತೆ ತಹಶೀಲ್ದಾರ್ ಸೇರಿದಂತೆ ಅಧಿಕಾರಿ ವರ್ಗ ಗ್ರಾಮಕ್ಕೆ ಭೇಟಿ ನೀಡಿತ್ತು. ಇಂದು ಗ್ರಾಮದಲ್ಲಿರೋ ನೂರಕ್ಕೂ ಹೆಚ್ಚು ಮನೆಗಳಿಗೆ ಔಷಧಿ ಸಿಂಪಡಿಸಲಾಗಿದೆ. ಪ್ರತಿ ಮನೆಯ ಸುತ್ತಮುತ್ತ, ರಸ್ತೆ, ಜನಸಾಮಾನ್ಯರು ಕೂರುತ್ತಿದ್ದ ಕಟ್ಟೆಗಳಿಗೂ ಸೇರಿದಂತೆ ಇಡೀ ಗ್ರಾಮಕ್ಕೆ ಔಷಧಿ ಸಿಂಪಡಿಸಲಾಗಿದೆ.

    ಮುಂಜಾಗೃತ ಕ್ರಮವಾಗಿ ಸೋಂಕಿತ ವ್ಯಕ್ತಿಯ ಕುಟುಂಬಸ್ಥರು ಹಾಗೂ ಆತನ ಸಂಬಂಧಿಕರನ್ನು ಈಗಾಗಲೇ ಕ್ವಾರಂಟೈನ್ ಮಾಡಲಾಗಿದೆ. ಸೋಂಕಿತ ವ್ಯಕ್ತಿಯು ವಾಸವಿದ್ದ ಬೀದಿಯನ್ನು ಈಗಾಗಲೇ ಅಧಿಕಾರಿಗಳು ಮುಂಜಾಗ್ರತ ಕ್ರಮವಾಗಿ ಸೀಲ್‍ಡೌನ್ ಮಾಡಿದ್ದಾರೆ. ಹಾಸನದ ಎಪಿಎಂಸಿಯಿಂದ ಪ್ರತಿದಿನ ತರಕಾರಿ ತಂದು ಮಾರುತ್ತಿದ್ದ ಈ ವ್ಯಕ್ತಿ ಚಿಕ್ಕಮಗಳೂರಿನ ಹಲವು ಏರಿಯಾಗಳಲ್ಲೂ ತರಕಾರಿ ವ್ಯಾಪಾರ ಮಾಡಿದ್ದ. ಈ ಮಧ್ಯೆ ತರಕಾರಿ ಖರೀದಿಗೆ ಬೇಲೂರು ಎಪಿಎಂಸಿ ಮಾರುಕಟ್ಟೆಗೂ ಹೋಗಿದ್ದ ಎಂದು ಹೇಳಲಾಗುತ್ತಿದೆ. ಈಗಾಗಲೇ ಚಿಕ್ಕಮಗಳೂರು ನಗರದ ಜಯನಗರ, ಕೋಟೆ ಬಡಾವಣೆ, ಮಾರ್ಕೇಟ್ ರಸ್ತೆ ಸೇರಿದಂತೆ ಚಿಕ್ಕಮಗಳೂರು ನಗರದ ಹಲವು ಏರಿಯಾಗಳಲ್ಲಿ ತೀವ್ರ ಆತಂಕ ಎದುರಾಗಿದ್ದು, ಜನ ಆತಂಕದಿಂದಲೇ ಜೀವನ ನಡೆಸುತ್ತಿದ್ದಾರೆ.

  • ವಾರ್ಡ್‌ಗಳಲ್ಲೇ ತರಕಾರಿ ಮಾರುಕಟ್ಟೆ ಸ್ಥಾಪನೆ- ಅಂತರ ಕಾಯ್ದುಕೊಳ್ಳದಿದ್ರೆ ಲಾಠಿ ಏಟು

    ವಾರ್ಡ್‌ಗಳಲ್ಲೇ ತರಕಾರಿ ಮಾರುಕಟ್ಟೆ ಸ್ಥಾಪನೆ- ಅಂತರ ಕಾಯ್ದುಕೊಳ್ಳದಿದ್ರೆ ಲಾಠಿ ಏಟು

    ರಾಯಚೂರು: ಕೊರೊನಾ ಎಫೆಕ್ಟ್ ಹಿನ್ನೆಲೆಯಲ್ಲಿ ಸುರಕ್ಷಿತ ಅಂತರ ಕಾಯ್ದುಕೊಂಡು ರಾಯಚೂರಿನಲ್ಲಿ ಜನ ಕಿರಾಣಿ ಹಾಗೂ ಮೆಡಿಕಲ್ ಶಾಪ್ ಗಳಲ್ಲಿ ವಸ್ತುಗಳನ್ನ ಕೊಳ್ಳುತ್ತಿದ್ದಾರೆ. ಅಂತರದ ಮಾರ್ಕ್ ಮಾಡಿರುವ ಬಾಕ್ಸ್ ಗಳಲ್ಲೇ ನಿಂತು ಸಾಮಾಗ್ರಿಗಳನ್ನ ಖರೀದಿಸುವ ಮೂಲಕ ಜಾಗೃತಿ ಮೆರೆಯಲು ಮುಂದಾಗಿದ್ದಾರೆ. ಜನರಿಗೆ ಕಿರಾಣಿ, ತರಕಾರಿ ಹಾಗೂ ಮೆಡಿಕಲ್ ಸೇರಿದಂತೆ ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ. ಹಲವೆಡೆ ಜನರು ಕೂಡ ಉತ್ತಮ ರೀತಿಯಲ್ಲಿ ಸ್ಪಂದನೆ ಮಾಡುತ್ತಿದ್ದಾರೆ.

    ಸುರಕ್ಷತಾ ಅಂತರಕ್ಕೆ ಮುಂದಾಗಿರುವ ಜನ ಹಾಗೂ ಅಂಗಡಿಗಳ ಮಾಲೀಕರು ಸೋಂಕು ಹರಡುವಿಕೆ ತಡೆಯುವ ಸರ್ಕಾರದ ಕ್ರಮಗಳಿಗೆ ಸ್ಪಂದಿಸಿದ್ದಾರೆ. ಎಷ್ಟೇ ಕಟ್ಟುನಿಟ್ಟಾಗಿ ಹೇಳಿದರೂ ಕೆಲವೆಡೆ ಜನ ಮಾತು ಕೇಳುತ್ತಿಲ್ಲ. ಅಂತಹ ಪ್ರದೇಶಗಳಲ್ಲಿ ಪೊಲೀಸರು ದಡಂದಶಗುಣಂ ಎನ್ನುವಂತೆ ಲಾಠಿ ರುಚಿ ತೋರಿಸುತ್ತಿದ್ದಾರೆ.

    ಬೆಳಗ್ಗೆ ಜನಜಂಗುಳಿಯಿಂದ ಕೂಡಿದ್ದ ತರಕಾರಿ ಮಾರುಕಟ್ಟೆ ಮಧ್ಯಾಹ್ನದ ವೇಳೆಗೆ ಸಂಪೂರ್ಣ ಖಾಲಿಯಾಗಿದೆ. ನಾಳೆಯಿಂದ ವಾರ್ಡ್‍ಗಳಲ್ಲೆ ತರಕಾರಿ ಮಾರಾಟ ಮಾಡಲು ಅವಕಾಶ ನೀಡಲಾಗಿದೆ. ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ನಗರದ 35 ವಾರ್ಡ್ ಜನರಿಗೆ 17 ಸ್ಥಳಗಳಲ್ಲಿ ತರಕಾರಿ ಕೊಳ್ಳಲು ಅವಕಾಶ ನೀಡಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯಾಪಾರ ಮಾಡಲು ಕಿರಾಣಿ ಅಂಗಡಿ , ಔಷಧಿ ಅಂಗಡಿ ಮಾಲೀಕರಿಗೆ ಸೂಚಿಸಲಾಗಿದೆ.

  • ಮೊನ್ನೆಯಿಂದ ನಿಮ್ಮ ನಾಟಕ ನೋಡ್ತಾ ಇದ್ದೇನೆ, ಒಳಗೆ ಹಾಕಿಬಿಡ್ತೇನೆ- ಮಾಲ್ ಮ್ಯಾನೇಜರ್‌ಗೆ ಡಿಸಿ ಕ್ಲಾಸ್

    ಮೊನ್ನೆಯಿಂದ ನಿಮ್ಮ ನಾಟಕ ನೋಡ್ತಾ ಇದ್ದೇನೆ, ಒಳಗೆ ಹಾಕಿಬಿಡ್ತೇನೆ- ಮಾಲ್ ಮ್ಯಾನೇಜರ್‌ಗೆ ಡಿಸಿ ಕ್ಲಾಸ್

    ಉಡುಪಿ: ಮಾಲ್‍ಗಳನ್ನು ಬಂದ್ ಮಾಡ್ಬೇಕು ಅಂತ ರಾಜ್ಯ ಸರ್ಕಾರ ಖಡಕ್ ಸೂಚನೆ ಕೊಟ್ಟರೂ, ಉಡುಪಿಯಲ್ಲಿ ಕೆಲ ಮಾಲ್‍ಗಳು ಹಿಂಬದಿ ಬಾಗಿಲಲ್ಲಿ ಬ್ಯುಸಿನೆಸ್ ಮಾಡುತ್ತಿವೆ. ಇದರ ವಿರುದ್ಧ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್, ಎಸ್.ಪಿ ವಿಷ್ಣುವರ್ಧನ್ ಸಿಟಿ ರೌಂಡ್ಸ್ ಸಂದರ್ಭದಲ್ಲಿ ಕ್ಲಾಸ್ ತೆಗೆದುಕೊಂಡಿದ್ದಾರೆ.

    ಉಡುಪಿಯ ತರಕಾರಿ ಮಾರುಕಟ್ಟೆ ಅಂಗಡಿಗಳು ಮಾಲ್‍ಗಳಿಗೆ ಡಿಸಿ, ಎಸ್.ಪಿ ತಹಶೀಲ್ದಾರ್, ದಿಢೀರ್ ದಾಳಿ ಮಾಡಿದರು. ಈ ಸಂದರ್ಭದಲ್ಲಿ ಬಿಗ್ ಬಜಾರ್ ಮ್ಯಾನೇಜರನ್ನು ಡಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ. ಮೊನ್ನೆಯಿಂದ ನಿಮ್ಮ ನಾಟಕ ನೋಡ್ತಿದ್ದೇನೆ. ಇವನನ್ನು ಒಳಗೆ ಹಾಕಿ. ನಾನೇ ಕಂಪ್ಲೇಂಟ್ ಕೊಡ್ತೇನೆ. ಅಂತ ತರಕಾರಿ ಬೆಲೆ ಏರಿಸಿದ್ದಕ್ಕೆ ಮೆನೇಜರ್ ರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಿಗ್ ಬಜಾರ್ ಎಸಿ ಹಾಕಿ ಎಗ್ಗಿಲ್ಲದೆ ವ್ಯಾಪಾರ ಮಾಡುತ್ತಿತ್ತು. ಇದರ ವಿರುದ್ಧ ಕೂಡ ಡಿಸಿ ಕೆಂಡಾಮಂಡಲರಾದರು.

    ತರಕಾರಿ ಅಂಗಡಿ ಮಾಲೀಕನಿಗೆ ಪಾಠ:
    ನಗರದ ತರಕಾರಿ ಅಂಗಡಿಗಳಿಗೆ ಭೇಟಿ ಕೊಟ್ಟ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಸ್ವಚ್ಛತಾ ಕ್ರಮ ಅನುಸರಿಸದ ಕಾರಣ ತರಕಾರಿ ಶಾಪ್ ನಲ್ಲಿ ಸ್ಯಾನಿಟೈಸರ್ ಬಳಕೆ ಇಲ್ಲದ್ದನ್ನು ಕಂಡು ಕೋಪಗೊಂಡರು. ತರಕಾರಿ ವ್ಯಾಪಾರಿಗೆ ಜಿಲ್ಲಾಧಿಕಾರಿಯಿಂದ ಸ್ವಚ್ಚತೆಯ ಕ್ಲಾಸ್ ನಡೆಯಿತು.

    ಕೆಮ್ಮು, ಸೀನು ಇದ್ದವರಿಗೆ ತರಕಾರಿ ಕೊಡಬೇಡಿ. ಕೈಗೆ ಗ್ಲೌಸ್ ಮುಖಕ್ಕೆ ಮಾಸ್ಕ್ ಧರಿಸದೇ ನೀವು ಅಂಗಡಿಗೆ ಬರಲೇಬೇಡಿ. ನಿಮಗೆ ವ್ಯಾಪಾರ ಮುಖ್ಯವೋ ನಿಮ್ಮ ಆರೋಗ್ಯ ಮುಖ್ಯವೋ ಎಂದರು. ಅಂತರ ಕಾಯ್ದುಕೊಂಡು ವ್ಯಾಪಾರ ಮಾಡೋದಾದ್ರೆ ಮಾಡಿ. ತರಕಾರಿ ಅಂಗಡಿಗೆ ವಿನಾಯಿತಿ ಕೊಟ್ಟದ್ದನ್ನು ದುರುಪಯೋಗ ಮಾಡಬೇಡಿ ಎಂದರು.

  • ರಾಯಚೂರು ತರಕಾರಿ ಮಾರುಕಟ್ಟೆಗೆ ತಟ್ಟಿಲ್ಲ ಕೊರೊನಾ ಭೀತಿ – ಜೋರಾಗಿ ನಡೆದಿದೆ ವ್ಯಾಪಾರ

    ರಾಯಚೂರು ತರಕಾರಿ ಮಾರುಕಟ್ಟೆಗೆ ತಟ್ಟಿಲ್ಲ ಕೊರೊನಾ ಭೀತಿ – ಜೋರಾಗಿ ನಡೆದಿದೆ ವ್ಯಾಪಾರ

    ರಾಯಚೂರು: ಜಿಲ್ಲೆಯಲ್ಲಿ ಎಲ್ಲಡೆ ಕೊರೊನಾ ಭೀತಿ ಹೆಚ್ಚಾಗಿದೆ. ಬಸ್, ರೈಲು ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದೆ. ಚಿತ್ರಮಂದಿರ, ಶಾಪಿಂಗ್ ಮಾಲ್‍ಗಳು ಬಂದ್ ಆಗಿವೆ. ಆದರೆ ರಾಯಚೂರಿನ ತರಕಾರಿ ಮಾರುಕಟ್ಟೆಗೆ ಮಾತ್ರ ಯಾವುದೇ ಎಫೆಕ್ಟ್ ಆಗಿಲ್ಲ. ಎಂದಿನಂತೆ ಜನ ಉತ್ಸಾಹದಿಂದ ವ್ಯಾಪಾರ ವಹಿವಾಟು ನಡೆಸಿದ್ದಾರೆ.

    ವ್ಯಾಪಾರಿಗಳು ಸಹ ಹೆಚ್ಚಿನ ಪ್ರಮಾಣದ ತರಕಾರಿಯನ್ನ ತಂದು ಮಾರಾಟ ಮಾಡುತ್ತಿದ್ದಾರೆ. ಹೊರಗಡೆಯಿಂದ ನಮಗೆ ಭೀತಿಯಿದೆ ಆದರೆ ರಾಯಚೂರಿನಲ್ಲಿ ಕೊರೊನಾ ಸೋಂಕು ಇಲ್ಲ ಅಂತ ಹೇಳುತ್ತಿದ್ದಾರೆ. ಇನ್ನೂ ಮಾಸ್ಕ್ ಸಿಗುತ್ತಿಲ್ಲವಾದ್ದರಿಂದ ಜನ ಮಾಸ್ಕ್ ಧರಿಸುವುದನ್ನು ಸಹ ಕಡಿಮೆಮಾಡಿದ್ದಾರೆ.

    ಜಿಲ್ಲೆಯಲ್ಲಿ ವಿದೇಶದಿಂದ ಮರಳಿದ ಒಟ್ಟು 25 ಜನರ ಮೇಲೆ ನಿಗಾ ಇಡಲಾಗಿದೆ. ಮೂವರನ್ನ ರಿಮ್ಸ್ ಆಸ್ಪತ್ರೆಯ ವಿಶೇಷ ವಾರ್ಡ್ ಗೆ ದಾಖಲಿಸಲಾಗಿದೆ. ಯಾರಲ್ಲೂ ರೋಗ ಲಕ್ಷಣಗಳು ಕಂಡು ಬಂದಿಲ್ಲ. ಎಲ್ಲಾ ಶಂಕಿತರ ಮಾದರಿಗಳನ್ನ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.