Tag: ತಲೆದಂಡ

  • ಸಂಚಾರಿ ವಿಜಯ್ ನಟನೆಯ ಕೊನೆಯ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ : ರಾಷ್ಟ್ರ ಪ್ರಶಸ್ತಿ ಪಡೆದ 4 ಚಿತ್ರಗಳಲ್ಲಿ ವಿಜಯ್ ನಟನೆ

    ಸಂಚಾರಿ ವಿಜಯ್ ನಟನೆಯ ಕೊನೆಯ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ : ರಾಷ್ಟ್ರ ಪ್ರಶಸ್ತಿ ಪಡೆದ 4 ಚಿತ್ರಗಳಲ್ಲಿ ವಿಜಯ್ ನಟನೆ

    68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದ್ದು, ಸಂಚಾರಿ ವಿಜಯ್ ನಟನೆಯ ಕೊನೆಯ ಸಿನಿಮಾ ತಲೆದಂಡ ಚಿತ್ರಕ್ಕೆ ಅತ್ಯುತ್ತಮ ಪರಿಸರ ಕಾಳಜಿ ಸಿನಿಮಾ ರಾಷ್ಟ್ರೀಯ ಗರಿ ದೊರೆತಿದೆ. ಕೃಪಾಕರ ನಿರ್ದೇಶನದಲ್ಲಿ ಮೂಡಿ ಬಂದ ಈ ಸಿನಿಮಾದಲ್ಲಿ ವಿಜಯ್ ವಿಶೇಷ ಚೇತನ ವ್ಯಕ್ತಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಸಿನಿಮಾದ ನಟನೆಗಾಗಿ ಮತ್ತೊಮ್ಮೆ ವಿಜಯ್ ನ್ಯಾಷಿನಲ್ ಅವಾರ್ಡ್ ಪಡೆಯುತ್ತಾರೆ ಎಂದೇ ಅಭಿಮಾನಿಗಳು ಭಾವಿಸಿದ್ದರು. ಆದರೆ, ಸಿನಿಮಾಗೆ ಈ ಬಾರಿ ಪ್ರಶಸ್ತಿ ಸಂದಿದೆ.

    ಅತ್ಯಂತ ಚಿಕ್ಕ ವಯಸ್ಸಿನಲ್ಲೇ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಪಡೆದಿರುವ ವಿಜಯ್, ಹಲವು ವರ್ಷಗಳ ನಂತರ ಕನ್ನಡಕ್ಕೆ ಇಂಥದ್ದೊಂದು ಗೌರವ ಸಿಗಲು ಕಾರಣರಾಗಿದ್ದರು. ಲಿಂಗದೇವರು ನಿರ್ದೇಶನದಲ್ಲಿ ಮೂಡಿ ಬಂದ ‘ನಾನು ಅವನಲ್ಲ ಅವಳು’ ಸಿನಿಮಾಗಾಗಿ ವಿಜಯ್ ಅವರಿಗೆ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಬಂದಿತ್ತು. ಅಲ್ಲದೇ, ವಿಜಯ್ ನಟನೆಯ ನಾಲ್ಕು ಸಿನಿಮಾಗಳಿಗೆ ರಾಷ್ಟ್ರ ಪ್ರಶಸ್ತಿ ಬಂದಿದ್ದು, ಮೂರು ಸಿನಿಮಾಗಳಿಗೆ ಮತ್ತು ಒಂದು ಚಿತ್ರಕ್ಕಾಗಿ ವಿಜಯ್ ವೈಯಕ್ತಿಕ ಪ್ರಶಸ್ತಿ ಪಡೆದಿದ್ದಾರೆ. ಓದಿ: Breaking- 68ನೇ ರಾಷ್ಟ್ರ ಚಲನಚಿತ್ರ ಪ್ರಶಸ್ತಿ : ಡೊಳ್ಳು, ತಲೆದಂಡ, ನಾದದ ನವನೀತ ಸಿನಿಮಾಗಳಿಗೆ ರಾಷ್ಟ್ರ ಗರಿ

    ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಪಡೆದ ವರ್ಷವೇ, ವಿಜಯ್ ನಟನೆಯ ಮಂಸೋರೆ ನಿರ್ದೇಶನದ ‘ಹರಿವು’ ಚಿತ್ರಕ್ಕೆ ಅತ್ಯುತ್ತಮ ಪ್ರಾದೇಶಿ ಸಿನಿಮಾ ರಾಷ್ಟ್ರ ಪ್ರಶಸ್ತಿ ಸಂದಿತ್ತು. ಅಲ್ಲದೇ, 2018ರಲ್ಲಿ ಮಂಸೋರೆ ನಿರ್ದೇಶನದ ‘ನಾತಿಚರಾಮಿ’ ಸಿನಿಮಾಗೂ ಅತ್ಯುತ್ತಮ ಪ್ರಾದೇಶಿ ಸಿನಿಮಾ ರಾಷ್ಟ್ರ ಪ್ರಶಸ್ತಿ ದೊರೆತಿದೆ. ಈ ಸಿನಿಮಾದಲ್ಲೂ ವಿಜಯ್ ನಟಿಸಿದ್ದಾರೆ. ಈ ಬಾರಿ ಕೃಪಾಕರ ನಿರ್ದೇಶನದಲ್ಲಿ ಮೂಡಿ ಬಂದಿರುವ ತಲೆದಂಡ ಸಿನಿಮಾಗೆ ಅತ್ಯುತ್ತಮ ಪ್ರಾದೇಶಿಕ ಚಲನಚಿತ್ರ ರಾಷ್ಟ್ರ ಪ್ರಶಸ್ತಿ ದೊರೆತಿದೆ. ಸಹಜವಾಗಿಯೇ ಅಭಿಮಾನಿಗಳಿಗೆ ಖುಷಿಯಾಗಿದೆ. ಈ ಸಂದರ್ಭದಲ್ಲಿ ವಿಜಯ್ ಇರಬೇಕಿತ್ತು ಎನ್ನುವ ಬೇಡಿಕೆ ಹೆ‍ಚ್ಚಿದೆ.

    Live Tv
    [brid partner=56869869 player=32851 video=960834 autoplay=true]

  • Breaking- 68ನೇ ರಾಷ್ಟ್ರ ಚಲನಚಿತ್ರ ಪ್ರಶಸ್ತಿ : ಡೊಳ್ಳು, ತಲೆದಂಡ, ನಾದದ ನವನೀತ ಸಿನಿಮಾಗಳಿಗೆ ರಾಷ್ಟ್ರ ಗರಿ

    Breaking- 68ನೇ ರಾಷ್ಟ್ರ ಚಲನಚಿತ್ರ ಪ್ರಶಸ್ತಿ : ಡೊಳ್ಳು, ತಲೆದಂಡ, ನಾದದ ನವನೀತ ಸಿನಿಮಾಗಳಿಗೆ ರಾಷ್ಟ್ರ ಗರಿ

    ಇಂದು ನವದೆಹಲಿಯಲ್ಲಿ 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದ್ದು, ಕನ್ನಡದ ಸಿನಿಮಾಗಳಿಗೂ ಹಲವು ಪ್ರಶಸ್ತಿಗಳು ಸಂದಿವೆ. ಈಗಾಗಲೇ ಸಾಕಷ್ಟು ಪ್ರಶಸ್ತಿಗಳನ್ನು ಬಾಚಿಕೊಂಡಿರುವ ಸಾಗರ್ ಪುರಾಣಿಕ್ ನಿರ್ದೇಶನದ, ಪವನ್ ಒಡೆಯರ್ ನಿರ್ಮಾಣದ ಡೊಳ್ಳು ಚಿತ್ರಕ್ಕೆ ಎರಡು ಪ್ರಶಸ್ತಿಗಳು ಸಂದಿದ್ದು, ಸಂಚಾರಿ ವಿಜಯ್ ನಟನೆಯ ‘ತಲೆದಂಡ’ ಸಿನಿಮಾಗೂ ರಾಷ್ಟ್ರ ಪ್ರಶಸ್ತಿ ಸಂದಿದೆ. ಅಲ್ಲದೇ, ಗಿರೀಶ್ ಕಾಸರವಳ್ಳಿ ನಿರ್ದೇಶನದ, ವಾರ್ತಾ ಇಲಾಖೆ ನಿರ್ಮಿಸಿರುವ ಡಾ.ಪಿ.ಟಿ ವೆಂಕೇಶ್ ಕುಮಾರ್ ಬದುಕಿನ ‘ನಾದದ ನವನೀತ’ ಚಿತ್ರಕ್ಕೂ ರಾಷ್ಟ್ರೀಯ ಪ್ರಶಸ್ತಿ ಸಂದಿದೆ.

    ಅತ್ಯುತ್ತಮ ಪರಿಸರ ಕಾಳಜಿ ಚಿತ್ರವಾಗಿ ಕೃಪಾಕರ್ ನಿರ್ದೇಶನದ, ಸಂಚಾರಿ ವಿಜಯ್ ನಟನೆಯ ‘ತಲೆದಂಡ’ ಚಿತ್ರ ರಾಷ್ಟ್ರೀಯ ಪ್ರಶಸ್ತಿ ದೊರೆತರೆ, ಲೋಕೇಷನ್ ಸೌಂಡ್ ಡಿಸೈನಿಂಗ್ ವಿಭಾಗದಲ್ಲಿ ಡೊಳ್ಳು ಸಿನಿಮಾ ಪ್ರಶಸ್ತಿ ಪಡೆದುಕೊಂಡಿದೆ. ಅತ್ಯುತ್ತಮ ಪ್ರಾದೇಶಿಕ ಚಿತ್ರ ಡೊಳ್ಳು ರಾಷ್ಟ್ರೀಯ ಪ್ರಶಸ್ತಿ ಪಡೆದುಕೊಂಡರೆ, ಅತ್ಯುತ್ತಮ ಪ್ರಾದೇಶಿಕ ತುಳು ಸಿನಿಮಾ ಪ್ರಶಸ್ತಿಯು ಸಂತೋಷ್ ನಿರ್ದೇಶನದ ‘ಜೀಟಿಗೆ’ ದೊರೆತಿದೆ. ಕಲೆ ಮತ್ತು ಸಾಂಸ್ಕೃತಿಕ ಚಿತ್ರವಾಗಿ ಗಿರೀಶ್ ಕಾಸರವಳ್ಳಿ ನಿರ್ದೇಶನ ಮಾಡಿರುವ ‘ನಾದದ ನವನೀತ’ ಚಿತ್ರಕ್ಕೆ ಪ್ರಶಸ್ತಿ ಸಂದಿದೆ. ಇದನ್ನೂ ಓದಿ:`ಮಾರ್ಟಿನ್’ ಆ್ಯಕ್ಷನ್ ಸೀನ್‌ಗಾಗಿ ಧ್ರುವಾ ಸರ್ಜಾ- ಎ.ಪಿ ಅರ್ಜುನ್ ಭರ್ಜರಿ ತಯಾರಿ

    ಅತ್ಯುತ್ತಮ ಪರಿಸರ ಕಾಳಜಿ ಚಿತ್ರ : ತಲೆದಂಡ

    ಅತ್ಯುತ್ತಮ ಲೋಕೆಷನ್ ಸೌಂಡ್ ಡಿಸೈನ್ ಚಿತ್ರ : ಡೊಳ್ಳು

    ಅತ್ಯುತ್ತಮ ಕಲೆ ಮತ್ತು ಸಾಂಸ್ಕೃತಿಕ ಚಿತ್ರ : ನಾದದ ನವನೀತ

    ಅತ್ಯುತ್ತಮ ಪ್ರಾದೇಶಿಕ ಸಿನಿಮಾ : ಡೊಳ್ಳು

    ಅತ್ಯುತ್ತಮ ಪ್ರಾದೇಶಿಕ ತುಳು ಸಿನಿಮಾ : ಜೀಟಿಗೆ

    Live Tv
    [brid partner=56869869 player=32851 video=960834 autoplay=true]

  • ಮರಗಳನ್ನು ರಕ್ಷಿಸಲು ಬುದ್ಧಿಮಾಂದ್ಯನಾಗಿ ತೆರೆ ಮೇಲೆ ಬಂದ ವಿಜಯ್

    ಮರಗಳನ್ನು ರಕ್ಷಿಸಲು ಬುದ್ಧಿಮಾಂದ್ಯನಾಗಿ ತೆರೆ ಮೇಲೆ ಬಂದ ವಿಜಯ್

    ಬೆಂಗಳೂರು: ಅಪಘಾತದಿಂದ ಸ್ಯಾಂಡಲ್‍ವುಡ್‍ನ ಉದಯೋನ್ಮುಖ ನಟ ಸಂಚಾರಿ ವಿಜಯ್ ನಿಧನರಾಗಿದ್ದು, ಚಂದನವನಕ್ಕೆ ತುಂಬಲಾರದಷ್ಟು ನಷ್ಟ ಉಂಟಾಗಿದೆ. ಈ ಹೊತ್ತಿನಲ್ಲಿ ಸಂಚಾರಿ ವಿಜಯ್ ಅಭಿನಯಿಸಿರುವ ತಲೆದಂಡ ಸಿನಿಮಾದ ಟೀಸರ್ ಇಂದು ಬಿಡುಗಡೆಯಾಗಿದೆ.

    ನಾನು ಅವನಲ್ಲ ಅವಳು, ಹರಿವು ಹೀಗೆ ವಿಭಿನ್ನ ಪಾತ್ರಗಳಲ್ಲಿ ನಟಿಸುವ ಮೂಲಕ ಜನರ ಪ್ರೀತಿ ಗಳಿಸುವುದರ ಜೊತೆಗೆ ಪ್ರಶಂಸೆ ಪಡೆದಿದ್ದ ನಟ ಸಂಚಾರಿ ವಿಜಯ್, ತಲೆದಂಡ ಸಿನಿಮಾದ ಟೀಸರ್‌ನಲ್ಲಿ ಕೂಡ ಭಿನ್ನವಾಗಿ ಕಾಣಿಸಿಕೊಂಡಿದ್ದಾರೆ.

    ಸಿನಿಮಾದಲ್ಲಿ ಸಂಚಾರಿ ವಿಜಯ್ ಬುದ್ಧಿ ಮಾಂದ್ಯನ ಪಾತ್ರದಲ್ಲಿ ಅಭಿನಯಿಸಿದ್ದು, ಬುದ್ಧಿವಂತರೂ ಮಾಡುವ ಅನ್ಯಾಯದ ವಿರುದ್ಧ ಬುದ್ಧಿಮಾಂದ್ಯನು ಹೋರಾಡುತ್ತಿರುವ ಕಥಾವಸ್ತುವನ್ನು ಈ ಸಿನಿಮಾ ಹೊಂದಿದೆ. ಟೀಸರ್‌ನಲ್ಲಿ ಮರಗಳನ್ನು ರಕ್ಷಿಸಬೇಕು, ಪರಿಸರ ಉಳಿಸಬೇಕು ಎಂದು ವಿಜಯ್ ಮರಗಳಿಗೆ ಅಡ್ಡಲಾಗಿ ನಿಂತಿರುವುದನ್ನು ನೋಡಬಹುದಾಗಿದೆ. ಟೀಸರ್‌ನಲ್ಲಿ ವಿಜಯ್ ಮುಗ್ಧ ಅಭಿನಯ ನೋಡಿದರೆ ನಿಜಕ್ಕೂ ಎಲ್ಲರ ಮನಕಲಕುವಂತಿದೆ. ಇದನ್ನೂ ಓದಿ: ಸಂಚಾರಿ ವಿಜಯ್ ನೆನಪಿಗೋಸ್ಕರ ಮಂಗಳಮುಖಿಯರಿಗೆ ದಿನಸಿ ಕಿಟ್ ಹಂಚಿದ ಯುವಕ

    ಈಗಾಗಲೇ ನಾನು ಅವನಲ್ಲ ಅವಳು ಸಿನಿಮಾಕ್ಕೆ ರಾಷ್ಟ್ರ ಪ್ರಶಸ್ತಿ ಪಡೆದಿರುವ ವಿಜಯ್ ತಲೆದಂಡ ಸಿನಿಮಾದ ಮೂಲಕ ಪ್ರೇಕ್ಷಕರನ್ನು ಮೋಡಿ ಮಾಡಿ ಎಲ್ಲರ ಮನ ಗೆಲ್ಲುತ್ತಾರೆ ಎಂಬುವುದಕ್ಕೆ ಯಾವುದೇ ಅನುಮಾನವಿಲ್ಲ ಎಂದರೆ ತಪ್ಪಾಗಲಾರದು. ಇದನ್ನೂ ಓದಿ: ತಿಪಟೂರಿನಿಂದ ಧರ್ಮಸ್ಥಳಕ್ಕೆ ಸೈಕಲ್ ಪ್ರವಾಸ ಹೋಗ್ತಿದ್ರು ಸಂಚಾರಿ ವಿಜಯ್

    ತಲೆದಂಡ ಮಾತ್ರವಲ್ಲದೇ ಅವಸ್ಥಾಂತರ, ಲಂಕೆ, ಮೋಲೊಬ್ಬ ಮಾಯಾವಿ ಮುಂತಾದ ಸಿನಿಮಾಗಳಲ್ಲಿ ಸಂಚಾರಿ ವಿಜಯ್ ಅಭಿನಯಿಸಿದ್ದರು. ಇನ್ನೂ ಘೋಷಿಸದೇ ಇರುವ ಹಲವಾರು ಪ್ರಾಜೆಕ್ಟ್‍ಗಳು ವಿಜಯ್ ಕೈನಲ್ಲಿದ್ದವು. ಇದನ್ನೂ ಓದಿ: ಸ್ನೇಹಿತ ರಘು ತೋಟದಲ್ಲೇ ಮಣ್ಣಲ್ಲಿ ಮಣ್ಣಾದ ವಿಜಯ್