Tag: `ತಾಯ್ತ

  • ಹರ್ಷಿಕಾ ಪೂಣಚ್ಚ ನಟನೆಯ ‘ತಾಯ್ತ’ ಚಿತ್ರದ ಹಾಡು ಬಿಡುಗಡೆ

    ಹರ್ಷಿಕಾ ಪೂಣಚ್ಚ ನಟನೆಯ ‘ತಾಯ್ತ’ ಚಿತ್ರದ ಹಾಡು ಬಿಡುಗಡೆ

    ಟನಾಗಿ, ಸಂಗೀತ ನಿರ್ದೇಶಕನಾಗಿ ಗುರುತಿಸಿಕೊಂಡಿರುವ ಲಯಕೋಕಿಲ ಚೊಚ್ಚಲ ನಿರ್ದೇಶನದ ‘ತಾಯ್ತ’ (Taytha) ಚಿತ್ರಕ್ಕಾಗಿ ರಾಮ್ ನಾರಾಯಣ್ ಬರೆದಿರುವ ‘ಶಿವನೇ ಕಾಪಾಡು’ ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಹಿಂದೂ, ಮುಸ್ಲಿಂ ಹಾಗೂ ಕ್ರೈಸ್ತ ಧರ್ಮದ ಮೂರು ದೇವರುಗಳನ್ನು ಕುರಿತಾದ ಈ ಹಾಡನ್ನು ಮೂರು ಧರ್ಮದ ಗುರುಗಳು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು.

    ಸಾಧುಕೋಕಿಲ (Sadhu Kokila), ಉಷಾ ಕೋಕಿಲ, ಸಿರಿ ಮ್ಯೂಸಿಕ್ ಚಿಕ್ಕಣ್ಣ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ನಮ್ಮದು ಸಂಗೀತದ ಕುಟುಂಬ. ಬಹುತೇಕ ಎಲ್ಲರೂ ಸಂಗೀತಕ್ಕೆ ಸಂಬಂಧಿಸಿದ ವಿವಿಧ ಭಾಗಗಳಲ್ಲಿ ಕೆಲಸ ಮಾಡುತ್ತಿದ್ದೇವೆ‌. ನಮ್ಮ ಅಣ್ಣ ಲಯಕೋಕಿಲ ಈಗ ನಿರ್ದೇಶಕನಾಗಿದ್ದಾರೆ. ಅವರ ನಿರ್ದೇಶನದ ತಾಯ್ತ ಚಿತ್ರದ ಹಾಡೊಂದು ಇಂದು ಬಿಡುಗಡೆಯಾಗಿದೆ. ಅವರೆ ಸಂಗೀತ ನೀಡಿದ್ದಾರೆ. ನಾನು ಕೂಡ ಚಿತ್ರದಲ್ಲಿ ಅಭಿನಯಿಸಿದ್ದೇನೆ. ಚಿತ್ರ ಯಶಸ್ವಿಯಾಗಲಿ ಎಂದು ಸಾಧುಕೋಕಿಲ ಹಾರೈಸಿದರು. ಇದನ್ನೂ ಓದಿ:‘ಕಾರ್ತಿಕೇಯ 2’ ನಿರ್ದೇಶಕನ ಜೊತೆ ಕೈ ಜೋಡಿಸಿದ ನಾಗಚೈತನ್ಯ

    ಇದು ನನ್ನ ಮೊದಲ ನಿರ್ದೇಶನದ ಚಿತ್ರ. ಹಾರಾರ್ ಜಾನರ್ ಚಿತ್ರವಾಗಿದ್ದರೂ, ಕಾಮಿಡಿ ಹಾಗೂ ಥ್ರಿಲ್ಲರ್ ಕೂಡ ಇದೆ. ನಿರ್ಮಾಪಕ ಶಾಹಿದ್ ಅವರು ಕಥೆ ಬರೆದಿದ್ದಾರೆ. ಚಿತ್ರಕಥೆ, ಸಂಭಾಷಣೆ ಬರೆದು ಸಂಗೀತ ಸಂಯೋಜನೆ ಹಾಗೂ ನಿರ್ದೇಶನವನ್ನು ನಾನು ಮಾಡಿದ್ದೇನೆ. ರಿಯಾನ್ ಈ ಚಿತ್ರದ ನಾಯಕನಾಗಿ, ಹರ್ಷಿಕಾ ಪೂಣಚ್ಚ ನಾಯಕಿಯಾಗಿ ನಟಿಸಿದ್ದಾರೆ. ನನ್ನ ಮಗಳು ಭಾನುಪ್ರಿಯ ಕೂಡ ಅಭಿನಯಿಸಿದ್ದಾರೆ. ಕೆಲವರನ್ನು ಬಿಟ್ಟು, ಈ ಚಿತ್ರದಲ್ಲಿ ಅಭಿನಯಿಸಿರುವ ಎಲ್ಲರೂ ಹೊಸ ಕಲಾವಿದರೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದೆ. ಇಂದು ಬಿಡುಗಡೆಯಾಗಿರುವ ಹಾಡನ್ನು ರಾಮ್ ನಾರಾಯಣ್ ಬರೆದಿದ್ದಾರೆ. ಅನುರಾಧ ಭಟ್ ಹಾಡಿದ್ದಾರೆ. ಸದ್ಯದಲ್ಲೇ ಚಿತ್ರ ಬಿಡುಗಡೆಯಾಗಲಿದೆ ಎಂದು ಲಯಕೋಕಿಲ (Laya Kokila) ತಿಳಿಸಿದರು.

    ನಾಯಕ ರಿಯಾನ್ (Riyana), ನಾಯಕಿ ಹರ್ಷಿಕಾ ಪೂಣಚ್ಚ (Harshika Poonachha), ನಟಿ ಭಾನುಪ್ರಿಯ, ಸೇರಿದಂತೆ ಅನೇಕ ಕಲಾವಿದರು ಹಾಗೂ ಹಾಡು ಬರೆದಿರುವ ರಾಮ್ ನಾರಾಯಣ್ ಮುಂತಾದವರು ತಾಯ್ತ ಚಿತ್ರದ ಕುರಿತು ಮಾತನಾಡಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಟಿ ಹರ್ಷಿಕಾ ಪೂಣಚ್ಚ ‘ತಾಯ್ತ’ ಕಟ್ಟಿಸಿಕೊಂಡಿದ್ದು ಯಾಕೆ?

    ನಟಿ ಹರ್ಷಿಕಾ ಪೂಣಚ್ಚ ‘ತಾಯ್ತ’ ಕಟ್ಟಿಸಿಕೊಂಡಿದ್ದು ಯಾಕೆ?

    ಶಾಹಿದ್ ನಿರ್ಮಿಸಿರುವ, ಲಯ ಕೋಕಿಲ (Laya Kokila) ನಿರ್ದೇಶನದ ‘ತಾಯ್ತ’ (Taytha) ಚಿತ್ರದ ಟೀಸರ್ (Teaser) ಇತ್ತೀಚೆಗೆ ಬಿಡುಗಡೆಯಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್, ಹಿರಿಯ ನಿರ್ದೇಶಕ ಸಾಯಿಪ್ರಕಾಶ್, ನಟ ಧರ್ಮ ಮುಖ್ಯ ಅತಿಥಿಗಳಾಗಿ ಆಗಮಿಸಿ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದರು.

    ಯಾರಾದರೂ ತುಂಬಾ ಹೆದರಿಕೊಂಡಾಗ ‘ತಾಯ್ತ’ ಕಟ್ಟಿಸಿಕೊ ಎಂದು ಹೇಳುತ್ತಾರೆ. ನನ್ನ ಮೊದಲ ನಿರ್ದೇಶನದ ಚಿತ್ರಕ್ಕೆ ‘ತಾಯ್ತ’ ಎಂದು ಹೆಸರಿಟ್ಟಿದ್ದೀನಿ. ಇದು ಪ್ರೇಮಕಥೆಯಾದರೂ, ಇದರಲ್ಲಿ ಹಾರರ್, ಥ್ರಿಲ್ಲರ್, ಕಾಮಿಡಿ ಎಲ್ಲವೂ ಇದೆ. ಶಾಹಿದ್ ಈ ಚಿತ್ರದ ನಿರ್ಮಾಪಕರು. ರಿಯಾನ್ (Riyan) ಈ ಚಿತ್ರದ ನಾಯಕ. ಹರ್ಷಿಕಾ ಪೂಣಚ್ಛ ನಾಯಕಿ. ಸಾಧುಕೋಕಿಲ, ಪುಷ್ಪಸ್ವಾಮಿ, ಶಾಹಿದ್, ಶೋಭ್ ರಾಜ್ ಅವರ ಜೊತೆಗೆ ನಾನು ಸಹ ಈ ಚಿತ್ರದಲ್ಲಿ ಅಭಿನಯಿಸಿದ್ದೇನೆ. ಸಂಗೀತ ಕೂಡ ನೀಡಿದ್ದೇನೆ. ಇಂದು ಟೀಸರ್ ಬಿಡುಗಡೆಯಾಗಿದೆ. ಬಿಡುಗಡೆ ಮಾಡಿಕೊಟ್ಟ ಗಣ್ಯರಿಗೆ ಹಾಗೂ ನನ್ನ‌ ಇಡೀ ಚಿತ್ರತಂಡಕ್ಕೆ ಧನ್ಯವಾದ ಎಂದರು ಲಯಕೋಕಿಲ.

    ಈ ಚಿತ್ರದ ಕಥೆ ಇಷ್ಟವಾಯಿತು. ಇದು ನನ್ನ ಮೊದಲ ಚಿತ್ರ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಾಯಕ ರಿಯಾನ್. ಈ ಚಿತ್ರದಲ್ಲಿ ನಾನು ಖುಷಿ ಎಂಬ ಹೆಸರಿನ ಕಾಲೇಜು ವಿದ್ಯಾರ್ಥಿ ಪಾತ್ರದಲ್ಲಿ ನಟಿಸಿದ್ದೇನೆ. ಇದು ನಾನು ಅಭಿನಯಿಸಿರುವ ಮೊದಲ ಹಾರರ್ ಚಿತ್ರ. ಕಾಲೇಜ್ ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಒಂದು ಸ್ಥಳಕ್ಕೆ ಹೋದಾಗ ಅಲ್ಲಿ ಏನೇನು ಆಗುತ್ತದೆ ಎಂಬುದನ್ನು ಚಿತ್ರದಲ್ಲೇ ನೋಡಬೇಕು ಎಂದು ನಾಯಕಿ ಹರ್ಷಿಕಾ ಪೂಣಚ್ಚ  (Harshika Poonachcha)ತಿಳಿಸಿದರು. ಇದನ್ನೂ ಓದಿ: ಪಿಂಕ್ ಕಲರ್ ಡ್ರೆಸ್‌ನಲ್ಲಿ ದೀಪಿಕಾ ದಾಸ್ ಮಿಂಚಿಂಗ್

    ಕಥೆ ಇಷ್ಟವಾಗಿ, ನಿರ್ಮಾಣಕ್ಕೆ ಮುಂದಾದೆ. ಚಿಕ್ಕಮಗಳೂರು, ಬೇಲೂರು ಮುಂತಾದ ಕಡೆ ಚಿತ್ರೀಕರಣ ಮಾಡಿದ್ದೇವೆ. ನಾನು ಕೂಡ ನಟಿಸಿದ್ದೇನೆ. ಚಿತ್ರ ತರೆಗೆ ಬರಲು ಸಿದ್ದವಾಗಿದೆ ಎಂದರು ನಿರ್ಮಾಪಕ ಶಾಹಿದ್. ಹಿರಿಯ ನಟಿ ಪುಷ್ಪಸ್ವಾಮಿ ಸಹ ತಮ್ಮ ಪಾತ್ರದ ಕುರಿತು ಮಾತನಾಡಿದರು.

  • ವೈರಲ್‌ ಆಯ್ತು ಹರ್ಷಿಕಾ ನಟನೆಯ `ತಾಯ್ತ’ ಚಿತ್ರದ ಲುಕ್

    ವೈರಲ್‌ ಆಯ್ತು ಹರ್ಷಿಕಾ ನಟನೆಯ `ತಾಯ್ತ’ ಚಿತ್ರದ ಲುಕ್

    ಸ್ಯಾಂಡಲ್‌ವುಡ್ ಚಿಟ್ಟೆ ಹರ್ಷಿಕಾ ಪೂಣಚ್ಚ ಸದ್ಯದ ಕನ್ನಡದ ಬ್ಯುಸಿ ನಟಿ. ಬಹುಭಾಷಾ ಚಿತ್ರಗಳಲ್ಲಿ ಮಿಂಚ್ತಿರೋ ಪ್ರತಿಭೆ, ಇದೀಗ `ತಾಯ್ತ’ ಚಿತ್ರದ ಮೂಲಕ ಗಾಂಧಿನಗರದಲ್ಲಿ ಸೌಂಡ್ ಮಾಡ್ತಿದ್ದಾರೆ. ಈ ಸಿನಿಮಾ ಚಿತ್ರೀಕರಣದ ಫೋಟೋ ತುಣುಕು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

     

    View this post on Instagram

     

    A post shared by Layakokila Laya (@layakokila)

    ಕನ್ನಡ ಸಿನಿಮಾಗಳ ಜೊತೆಗೆ ಪರಭಾಷಾ ಚಿತ್ರಗಳಲ್ಲಿ ಆಕ್ಟೀವ್ ಆಗಿರೋ ನಟಿ ಹರ್ಷಿಕಾ, ಇತ್ತೀಚೆಗೆ ಬೋಜಪುರಿ ಚಿತ್ರದಲ್ಲೂ ನಟಿಸಿ ಸೈ ಎನಿಸಿಕೊಂಡಿದ್ರು. ಈಗ ಕನ್ನಡದ `ತಾಯ್ತ’ ಚಿತ್ರದ ಮೂಲಕ ಸುದ್ದಿಯಲ್ಲಿದ್ದಾರೆ. ವಿಭಿನ್ನ ಪಾತ್ರದ ಮೂಲಕ ರಂಜಿಸಲು ಸಜ್ಜಾಗಿದ್ದಾರೆ.

    ಕನ್ನಡದ ಜನಪ್ರಿಯ ಹಾಸ್ಯನಟ ಸಾಧುಕೋಕಿಲ ಅವರ ಸಹೋದರ ಲಯಕೋಕಿಲ ನಿರ್ದೇಶನದಲ್ಲಿ `ತಾಯ್ತ’ ಚಿತ್ರ ಮೂಡಿ ಬಂದಿದೆ. ಪವರ್‌ಫುಲ್ ಪಾತ್ರದ ಜೊತೆ ಡಿಫರೆಂಟ್ ಶೇಡ್‌ನಲ್ಲಿ ಹರ್ಷಿಕಾ ಕಾಣಸಿಕೊಂಡಿದ್ದಾರೆ. ಸದ್ಯ ಸಿನಿಮಾದ ಹಾಡಿನ ಚಿತ್ರೀಕರಣದ ಫೋಟೋ ಶೇರ್ ಮಾಡಿದ್ದು ಸದ್ಯ ಈ ಫೋಟೋ ವೈರಲ್ ಆಗ್ತಿದೆ. ಚಿಕ್ಕಮಗಳೂರಿನ ಸುಂದರ ತಾಣಗಳಲ್ಲಿ ಹಾಡಿನ ಚಿತ್ರೀಕರಣ ಮಾಡಲಾಗಿದೆ. ಇದನ್ನು ಓದಿ:ಮೋಸ್ಟ್ ಬ್ಯಾಚುಲರ್ ಹುಡುಗಿ ನಿಧಿ ಅಗರ್ವಾಲ್ ಕಾಂಡೋಮ್ ಕಂಟಕ

    ಶಾಹಿದ್ ನಿರ್ಮಾಣದಲ್ಲಿ ಮೂಡಿ ಬಂದಿರೋ `ತಾಯ್ತ’ ಚಿತ್ರದಲ್ಲಿ ನವ ನಟ ರಿಹಾನ್‌ಗೆ ಜೋಡಿಯಾಗಿ ನಟಿ ಹರ್ಷಿಕಾ ನಟಿಸಿದ್ದಾರೆ. ಸದ್ಯದಲ್ಲೇ `ತಾಯ್ತ’ ಚಿತ್ರ ತೆರೆಗೆ ಅಪ್ಪಳಿಸಲಿದೆ. ಕನ್ನಡ ಚಿತ್ರಗಳ ಜೊತೆಗೆ ಪರಭಾಷಾ ಚಿತ್ರಗಳಲ್ಲೂ ನಟಿಸ್ತಿರೋ ಹರ್ಷಿಕಾ ನಟಿಸಿರುವ ಚಿತ್ರಕ್ಕಾಗಿ ಅಭಿಮಾನಿಗಳು ಕಾಯ್ತಿದ್ದಾರೆ.