Tag: ತಾರಾ ಅನುರಾಧ

  • ಮಹಿಳೆಯರಿಗೆ ಫ್ರೀ ಬಸ್‌ ಕೊಟ್ಟರು, ಪಾಪ ಪುರುಷರಿಗೆ ಏನ್‌ ಮಾಡಿದ್ರು? – ಸರ್ಕಾರಕ್ಕೆ ನಟಿ ತಾರಾ ಪ್ರಶ್ನೆ

    ಮಹಿಳೆಯರಿಗೆ ಫ್ರೀ ಬಸ್‌ ಕೊಟ್ಟರು, ಪಾಪ ಪುರುಷರಿಗೆ ಏನ್‌ ಮಾಡಿದ್ರು? – ಸರ್ಕಾರಕ್ಕೆ ನಟಿ ತಾರಾ ಪ್ರಶ್ನೆ

    – ವಕ್ಫ್‌ ವಿಚಾರ ತಂದು ಸರ್ಕಾರ ಹಿಂದೂ-ಮುಸ್ಲಿಮರನ್ನು ಒಡೆಯುತ್ತಿದೆ
    – ನಿಖಿಲ್‌ರನ್ನ ಗೆಲ್ಲಿಸದಿದ್ರೆ ನಾವೆಲ್ಲ ಪಾಪ ಮಾಡಿದಂತೆ ಎಂದ ನಟಿ

    ರಾಮನಗರ: ಕಾಂಗ್ರೆಸ್‌ನವರು ಮಹಿಳೆಯರಿಗಾಗಿ ಫ್ರೀ ಬಸ್‌ ಮಾಡಿದ್ರು, ಪಾಪ ಪುರುಷರು ಏನ್‌ ಮಾಡಿದ್ರು? ಪುರುಷರ ಜೇಬಿಗೆ ಕತ್ತರಿ ಹಾಕಿ, ಮಹಿಳೆಯರಿಗೆ ಕೊಟ್ಟರು. ನಿಖಿಲ್‌ ಕುಮಾರಸ್ವಾಮಿ (Nikhil Kumaraswamy) ಅವರನ್ನ ಈಗಲೂ ಶಾಸಕರಾಗಿ ನಾವು ಆಯ್ಕೆ ಮಾಡದಿದ್ದರೆ, ನಾವೆಲ್ಲ ಪಾಪ ಮಾಡಿದಂತೆ ಎಂದು ನಟಿ ತಾರಾ ಅನುರಾಧ (Tara Anuradha) ಹೇಳಿದರು.

    ಚನ್ನಪಟ್ಟಣದಲ್ಲಿಂದು ನಡೆದ ಬಿಜೆಪಿ-ಜೆಡಿಎಸ್‌ ನಾಯಕರ (BJP JDS Leaders) ಮೈತ್ರಿ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಕಾಂಗ್ರೆಸ್‌ನಿಂದ ಅಘೋಷಿತ ಕಾನೂನು ಜಾರಿ ಆದಂತಿದೆ: ಛಲವಾದಿ ನಾರಾಯಣಸ್ವಾಮಿ

    ಹಿಂದೂ-ಮುಸ್ಲಿಮರನ್ನು ಸರ್ಕಾರ ಒಡೆಯುತ್ತಿದೆ:
    ಚನ್ನಪಟ್ಟಣದ (Channapatna) ಜನ ಬಂಗಾರದ ಗೊಂಬೆಯಾಗಿ ಮಾಡಿ ನಿಖಿಲ್ ರನ್ನ ಶಾಸಕರಾಗಿ ಮಾಡ್ತೀರೆಂಬ ನಂಬಿಕೆಯಿದೆ. ಚನ್ನಪಟ್ಟಣದಲ್ಲಿ ಹಿಂದೂ-ಮುಸ್ಲಿಮರು ಭಾಯಿ ಭಾಯಿಯಂತಿದ್ದಾರೆ, ಎಲ್ಲ ಹಬ್ಬಗಳಲ್ಲಿ ಒಂದಾಗಿರ್ತಾರೆ. ಆದ್ರೆ ವಕ್ಫ್ ವಿಚಾರ ತಂದು ಹಿಂದೂ-ಮುಸ್ಲಿಮರನ್ನ ಒಡೆಯುವ ಕೆಲಸ ಸರ್ಕಾರ ಮಾಡ್ತಿದೆ ಎಂದು ಕಿಡಿ ಕಾರಿದರು.

    ನಿಖಿಲ್ ಎರಡು ಅಗ್ನಿಪರೀಕ್ಷೆ ಎದುರಿಸಿದ್ದಾರೆ. ಈ ಪರೀಕ್ಷೆಯಲ್ಲಿ ಗೆಲ್ಲಿಸದಿದ್ರೆ ನಾವು ಪಾಪ ಮಾಡಿದಂತೆ. ನಿಖಿಲ್ ಕೈ ಹಿಡಿದು ಮೇಲೆತ್ತಿ ನನ್ನ ಅಣ್ಣನ ಮಗ ನಿಖಿಲ್ ರನ್ನ ಗೆಲ್ಲಿಸಿ ಅಂತ ತಾರಾ ಮನವಿ ಮಾಡಿದರು.

    ಇದೇ ವೇಳೆ ಕೇಂದ್ರ ಸಚಿವ ವಿ. ಸೋಮಣ್ಣ ಮಾತನಾಡಿ, ಚನ್ನಪಟ್ಟಣದಲ್ಲಿ ನಿಖಿಲ್ ಪರ ದೊಡ್ಡ ಗಾಳಿ ಬೀಸ್ತಿದೆ. ಸರ್ಕಾರದ ವಿರುದ್ಧ ಅಲೆ ಇದೆ, ಯೋಗೇಶ್ವರ್ ಕಾಂಗ್ರೆಸ್‌ ಸೇರಿ ತಮ್ಮ ಮೈಮೇಲೆ ತಾವೇ ಗಾಯ ಮಾಡ್ಕೊಂಡು ಔಷಧಿ ಇಲ್ಲದೇ ಪರದಾಡ್ತಿದ್ದಾರೆ. ಗುತ್ತಿಗೆದಾರರರಿಂದ ಸಂಗ್ರಹಿಸಿದ ಹಣ ತಂದು ಕಾಂಗ್ರೆಸ್‌ನವ್ರು ಚುನಾವಣೆ ಮಾಡ್ತಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: Chikkaballapura | ಪುರಾತನ ಆಂಜನೇಯಸ್ವಾಮಿ ದೇವಾಲಯವೂ ವಕ್ಫ್ ಆಸ್ತಿ!

    ನಿಖಿಲ್ ಎರಡು ಸಲ ಏನೂ ತಪ್ಪು ಮಾಡದೇ ನೋವು ಅನುಭವಿಸಿದ್ದಾರೆ. ನಿಖಿಲ್ ರಾಮನಗರದಲ್ಲಿ, ಮಂಡ್ಯದಲ್ಲಿ ಸೋತಿರಬಹುದು, ಆದರೆ ಚನ್ನಪಟ್ಟಣದ ಜನ ನಿಖಿಲ್‌ಗೆ ಜನ ದೊಡ್ಡಮಟ್ಟದಲ್ಲಿ ಆಶೀರ್ವಾದ ಮಾಡ್ತಾರೆ ಅಂತ ಭವಿಷ್ಯ ನುಡಿದರು.

  • ವಿಜಯ್ ಕಿರಗಂದೂರು ಸೇರಿದಂತೆ ಮೂವರಿಗೆ ವಿಶೇಷ ಪ್ರಶಸ್ತಿ

    ವಿಜಯ್ ಕಿರಗಂದೂರು ಸೇರಿದಂತೆ ಮೂವರಿಗೆ ವಿಶೇಷ ಪ್ರಶಸ್ತಿ

    ಕನ್ನಡ ಚಿತ್ರರಂಗದ ಪ್ರಥಮ ಪ್ರಚಾರಕರ್ತ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದಿವಂಗತ ಡಿ.ವಿ.ಸುಧೀಂದ್ರ ಅವರಿಂದ ಸ್ಥಾಪಿಸಲ್ಪಟ್ಟ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯು ಕಳೆದ 47 ವರ್ಷಗಳಿಂದ ಕನ್ನಡ ಚಿತ್ರರಂಗ ಮತ್ತು ಮಾಧ್ಯಮದ ನಡುವೆ ಸೇತುವೆಯಂತೆ ಕಾರ್ಯನಿರ್ವಹಿಸುತ್ತಾ ಬಂದಿದೆ. ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ ಮೂಲಕ ಕಳೆದ 20 ವರ್ಷಗಳಿಂದ ಚಲನಚಿತ್ರ ಪತ್ರಕರ್ತರಿಗೆ ಮತ್ತು ಚಿತ್ರರಂಗದ ಗಣ್ಯರಿಗೆ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ಸುಧೀಂದ್ರ ಅವರ ನಂತರ ಸುಧೀಂದ್ರ ವೆಂಕಟೇಶ್ ಈ ಸಂಪ್ರದಾಯವನ್ನು ಮುಂದುವರೆಸಿದ್ದು, 2022ನೇ ಸಾಲಿನ ವಾರ್ಷಿಕ 11 ಪ್ರಶಸ್ತಿಗಳನ್ನು ನೀಡುವುದರ ಜೊತೆಗೆ ಈ ಬಾರಿ ಇನ್ನೂ ಮೂರು ವಿಶೇಷ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುತ್ತಿದೆ.

    2022ರಲ್ಲಿ ಇಡೀ ಜಗತ್ತೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ ಚಿತ್ರಗಳೆಂದರೆ ಅದು ‘ಕೆಜಿಎಫ್ 2’ ಮತ್ತು ‘ಕಾಂತಾರ’. ಈ ಎರಡೂ ಚಿತ್ರಗಳನ್ನು ನಿರ್ಮಿಸಿ, ಕನ್ನಡ ಚಿತ್ರರಂಗದ ಕೀರ್ತಿಪತಾಕೆಯನ್ನು ಹಾರಿಸಿದ ಹೊಂಬಾಳೆ ಫಿಲಂಸ್ ನ ಶ್ರೀ ವಿಜಯ್ ಕಿರಗಂದೂರು ಅವರಿಗೆ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯಿಂದ ವಿಶೇಷ ಪ್ರಶಸ್ತಿ ನೀಡಲಾಗುತ್ತಿದೆ. ಇದನ್ನೂ ಓದಿ: ಉದ್ಯಮಿ ವಿಶಾಲ್‌ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ `ವಜ್ರಕಾಯ’ ನಟಿ ಶುಭ್ರ ಅಯ್ಯಪ್ಪ

    ಕಳೆದ ವರ್ಷ ಬಿಡುಗಡೆಯಾದ ‘ಗಂಧದ ಗುಡಿ’ಯನ್ನು ಒಂದು ಚಿತ್ರ ಎನ್ನುವುದಕ್ಕಿಂತ ಅದ್ಭುತವಾದ ಅನುಭವ ಎಂದರೆ ತಪ್ಪಿಲ್ಲ. ಕನ್ನಡ ನಾಡಿನ ಪ್ರಾಕೃತಿಕ ಸಂಪತ್ತನ್ನು ತಮ್ಮ ಕಣ್ಣುಗಳ ಮೂಲಕ ಕನ್ನಡಿಗರಿಗೆ ತೋರಿಸಿದವರು ದಿವಂಗತ ಪುನೀತ್ ರಾಜಕುಮಾರ್. ಇಂಥದ್ದೊಂದು ಅಪೂರ್ವವಾದ ಅನುಭವವನ್ನು ಕಟ್ಟಿಕೊಟ್ಟ ಪುನೀತ್ ಮತ್ತು ಇಂಥದ್ದೊಂದು ಸಾಹಸಕ್ಕೆ ಕೈ ಹಾಕಿದ ನಿರ್ಮಾಪಕಿ ಶ್ರೀಮತಿ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಗೆ ಈ ಪ್ರಶಸ್ತಿ ಸಂದಾಯವಾಗಿದೆ.

    ಇನ್ನು, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟಿ ಶ್ರೀಮತಿ  ತಾರಾ ಅನೂರಾಧ ಅವರ ಅಭಿನಯ, ಪಾತ್ರಗಳು ಮತ್ತು ಕನ್ನಡ ಚಿತ್ರರಂಗಕ್ಕೆ ಅವರ ಕೊಡುಗೆಯನ್ನು ಸ್ಮರಿಸಿ, ಅವರಿಗೂ ಈ ಬಾರಿ ವಿಶೇಷ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ 47ನೇ ವಾರ್ಷಿಕೋತ್ಸವ ಹಾಗೂ 21 ಮತ್ತು 22ನೇ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಸಂಸ್ಥೆಯ ಸ್ಥಾಪಕರಾದ ಶ್ರೀ ಡಿ.ವಿ. ಸುಧೀಂದ್ರ ಅವರ ಜನ್ಮದಿನದಂದು (ಜನವರಿ 25) ಚಾಮರಾಜಪೇಟೆಯ ಕನ್ನಡ ಚಲನಚಿತ್ರ ಕಲಾವಿದರ ಸಂಘದಲ್ಲಿ ಸಂಜೆ 5ಕ್ಕೆ ಆಯೋಜಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕಟೀಲು ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ನಟಿ ತಾರಾ ಭೇಟಿ

    ಕಟೀಲು ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ನಟಿ ತಾರಾ ಭೇಟಿ

    ಸ್ಯಾಂಡಲ್‌ವುಡ್‌ನ (Sandalwood) ಹಿರಿಯ ನಟಿ ತಾರಾ ಅನುರಾಧ (Tara Anuradha) ಇದೀಗ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ(Kateel Durgaparameshwari) ಭೇಟಿ ನೀಡಿದ್ದಾರೆ. ತಮ್ಮ ಎಲ್ಲಾ ಕೆಲಸಕ್ಕೆ ಬ್ರೇಕ್ ಹಾಕಿ, ದೇವರ ಸನ್ನಿಧಾನಕ್ಕೆ ನಟಿ ತೆರಳಿದ್ದಾರೆ.

    ಸಿನಿಮಾ ಮತ್ತು ರಾಜಕೀಯ ಎರಡು ಕ್ಷೇತ್ರಗಳಲ್ಲಿ ನಟಿ ತಾರಾ ಅನುರಾಧ ಆಕ್ಟೀವ್ ಆಗಿದ್ದಾರೆ. ಈ ಮಧ್ಯೆ ಡಿಸೆಂಬರ್ 2ರಂದು ತಾರಾ ಕಟೀಲಿನ ಪುಣ್ಯ ಕ್ಷೇತ್ರ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ದರ್ಶನ ಪಡೆದು ಪ್ರಸಾದ ಸ್ವೀಕರಿಸಿದ್ದಾರೆ. ಇದನ್ನೂ ಓದಿ: ಶಿವನ ಮುಡಿಗೆ ಸಿದ್ಧಶ್ರೀ ಪ್ರಶಸ್ತಿಯ ಗರಿ – ಪಂರ್ಜುಲಿ ದೈವಕ್ಕೆ ಅರ್ಪಿಸಿದ ರಿಷಬ್

    ಇನ್ನೂ ಸಾಲು ಸಾಲು ಚಿತ್ರಗಳಲ್ಲಿ ನಟಿ ತಾರಾ ಬ್ಯುಸಿಯಾಗಿದ್ದಾರೆ. `ನನ್ನಮ್ಮ ಸೂಪರ್ ಸ್ಟಾರ್ 2′ ರಿಯಾಲಿಟಿ ಶೋನ ಜಡ್ಜ್ ಆಗಿ ಕಾಣಿಸಿಕೊಳ್ತಿದ್ದಾರೆ. ರಾಜಕೀಯ ಕ್ಷೇತ್ರದಲ್ಲಿ ನಟಿ ತಾರಾ ಸೈ ಎನಿಸಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಆವರ್ತ’ ಹಾಡುಗಳ ರಿಲೀಸ್ ಮಾಡಿದ ರಾಷ್ಟ್ರಪ್ರಶಸ್ತಿ ವಿಜೇತ ನಟಿ ತಾರಾ ಅನುರಾಧ

    ‘ಆವರ್ತ’ ಹಾಡುಗಳ ರಿಲೀಸ್ ಮಾಡಿದ ರಾಷ್ಟ್ರಪ್ರಶಸ್ತಿ ವಿಜೇತ ನಟಿ ತಾರಾ ಅನುರಾಧ

    ನ್ನಡ ಚಿತ್ರರಂಗಕ್ಕೆ “ತುಳಸಿದಳ” ದಂತಹ ಅದ್ಭುತ ಚಿತ್ರವನ್ನು ಕೊಟ್ಟ ವೇಮಗಲ್ ಜಗನ್ನಾಥ್ ರಾವ್ (Vemagal Jagannathrao) ನಿರ್ದೇಶನದಲ್ಲಿ ಮೂಡಿಬಂದಿರುವ ಚಿತ್ರ “ಆವರ್ತ”. ಇತ್ತೀಚಿಗೆ ಈ ಚಿತ್ರದ ಹಾಡುಗಳನ್ನು ರಾಷ್ಟ್ರಪ್ರಶಸ್ತಿ ವಿಜೇತ ನಟಿ ತಾರಾ ಅನುರಾಧ (Tara Anuradha) ಬಿಡುಗಡೆ ಮಾಡಿದರು.  ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಟ್ರೇಲರ್ ಅನಾವರಣಗೊಳಿಸಿದರು.

    ನನ್ನ ಮೊದಲ ಚಿತ್ರ “ತುಳಸಿದಳ”. ಆ ಚಿತ್ರದಲ್ಲಿ ವೇಮಗಲ್ ಜಗನ್ನಾಥ್ ರಾವ್ ಅವರು ನನ್ನನ್ನು ಗುರುತಿಸಿ ಅವಕಾಶ ನೀಡಿದ್ದರು. ನನ್ನ ಗುರುಗಳು ನಿರ್ದೇಶಿಸಿರುವ ಈ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಿರುವುದಕ್ಕೆ ಬಹಳ ಖುಷಿಯಾಗಿದೆ. ಚಿತ್ರತಂಡಕ್ಕೆ ಒಳ್ಳೆಯದಾಗಲಿ ಎಂದು ತಾರಾ ಅನುರಾಧ ಶುಭ ಕೋರಿದರು. ಭಾ.ಮ.ಹರೀಶ್ ಅವರು ಚಿತ್ರಕ್ಕೆ ಶುಭ ಹಾರೈಸಿದರು. ಇದನ್ನೂ ಓದಿ:‘ಕರ್ನಾಟಕ ರತ್ನ’ದ ಅರ್ಥನೇ ಪುನೀತ್ ರಾಜ್ ಕುಮಾರ್ : ಜ್ಯೂನಿಯರ್ ಎನ್.ಟಿ.ಆರ್

    ಯುವಕನೊಬ್ಬನಿಗೆ ಕಥೆ ಬರೆಯುವ ಹವ್ಯಾಸ. ಕಾಲ್ಪನಿಕ ಕಥೆ ಬರೆಯುವ ಬಯಕೆಯಿಲ್ಲದ ಆತನಿಗೆ ನೈಜಘಟನೆ ಕುರಿತು ಕಥೆ ಬರೆಯುವ ಆಸಕ್ತಿ. ಆ ಸಮಯದಲ್ಲಿ ಆತನಿಗೊಂದು ಮೆಸೇಜ್ ಬರುತ್ತದೆ. ಆತ ಆ ಸ್ಥಳಕ್ಕೆ ಹೋದಾಗ ಏನೆಲ್ಲಾ ಆಗುತ್ತದೆ? ಎಂಬುದು ನಮ್ಮ ಚಿತ್ರದ ಕಥೆ ಎನ್ನುವ ನಿರ್ದೇಶಕ ವೇಮಗಲ್ ಜಗನ್ನಾಥರಾವ್, ನವೆಂಬರ್ 18 ರಂದು ಚಿತ್ರವನ್ನು ತೆರೆಗೆ ತರುವುದಾಗಿ ತಿಳಿಸಿದರು.

    ಕಥೆಗಾರನ ಪಾತ್ರದಲ್ಲಿ ಕಾಣಿಸಿಕೊಂಡಿರುವುದಾಗಿ ನಾಯಕ  ಜಯ್ ಚಂದ್ರ (Jayachandra) ಹೇಳಿದರು. ಸಿ.ಓ.ಡಿ ಅಧಿಕಾರಿ ಪಾತ್ರಧಾರಿ ಧನ್ವಿತ್ ಹಾಗೂ ನಾಯಕಿ ನಯನ (Nayana) “ಆವರ್ತ” (Avartha) ಚಿತ್ರದ ಬಗ್ಗೆ ಮಾತನಾಡಿದರು. ಮೂರು ಸಾಹಸ ಸನ್ನಿವೇಶಗಳು ಚೆನ್ನಾಗಿದೆ ಎಂದು ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ತಿಳಿಸಿದರು. ಸಂಗೀತ ನಿರ್ದೇಶಕ ಅತಿಶಯ್ ಜೈನ್ ಹಾಗೂ ಛಾಯಾಗ್ರಾಹಕ ಮಲ್ಲಿಕಾರ್ಜುನ್ ತಮ್ಮ ಕಾರ್ಯದ ಕುರಿತು ಮಾಹಿತಿ ನೀಡಿದರು.

    Live Tv
    [brid partner=56869869 player=32851 video=960834 autoplay=true]

  • ನಟ ರಾಜೇಶ್ ನಿಧನಕ್ಕೆ ವಿವಿಧ ಕ್ಷೇತ್ರಗಳ ಗಣ್ಯರ ಸಂತಾಪ

    ನಟ ರಾಜೇಶ್ ನಿಧನಕ್ಕೆ ವಿವಿಧ ಕ್ಷೇತ್ರಗಳ ಗಣ್ಯರ ಸಂತಾಪ

    ಹಿರಿಯ ನಟ ರಾಜೇಶ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. “ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್ ಅವರು ಇಂದು ನಮ್ಮನ್ನು ಅಗಲಿದ್ದಾರೆ. ಅವರು ಅತ್ಯಂತ ಪ್ರೌಢಿಮೆಯ ಅಭಿನಯವನ್ನು ಪ್ರದರ್ಶಿಸುತ್ತಿದ್ದ ಕಲಾವಿದರಾಗಿದ್ದರು. ಅವರ ಸಿನಿಮಾಗಳು ಮನದಾಳದಲ್ಲಿದೆ. ಯಾವುದೇ ಪಾತ್ರವನ್ನು ನೀಡಿದರೂ ಸುಲಲಿತವಾಗಿ ಅಭಿನಯಿಸುವ ಸಾಮರ್ಥ್ಯ ಅವರಲ್ಲಿತ್ತು.

    ಕಲಾಸೇವೆಯನ್ನು ಅವರು ಅತ್ಯಂತ ಪ್ರಾಮಾಣಿಕತೆಯಿಂದ ಮಾಡಿದ್ದಾರೆ. ತಾನು ದೊಡ್ಡ ನಟನೆಂಬ ಆಡಂಬರವಿಲ್ಲದೇ ಬದುಕಿದ ಅತ್ಯಂತ ಸರಳಜೀವಿ. ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಅಗಲಿಕೆಯ ದು:ಖವನ್ನು ಭರಿಸುವ ಶಕ್ತಿಯನ್ನು ಕುಟುಂಬದವರಿಗೆ ಭಗವಂತ ನೀಡಲಿ ಹಾಗೂ ಅವರ ಆತ್ಮಕ್ಕೆ ಶಾಂತಿ ದೊರೆಯಲಿ” ಎಂದು ತಿಳಿಸಿದ್ದಾರೆ. ಇದನ್ನೂ ಓದಿ : ಪ್ರೇಮಂ ಪೂಜ್ಯಂ ಬೆಡಗಿಗೆ ಈಗ ಜೂಲಿಯಟ್

    ಡಿ.ಕೆ. ಶಿವಕುಮಾರ್ ಸಂತಾಪ 
    ಹಿರಿಯ ನಟ ರಾಜೇಶ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. ‘ರಾಜೇಶ್ ಅವರು ಹಿರಿಯ ನಟರು, ಅತ್ಯುತ್ತಮ ಕಲಾವಿದರು. ನಾವು ಅವರ ಚಿತ್ರಗಳನ್ನು ನೋಡಿ ಬೆಳೆದವರು. ಅವರ ಅಗಲಿಕೆ ನೋವು ತಂದಿದೆ. ರಾಜೇಶ್ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಅವರು ಸಂತಾಪ ನುಡಿಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ : ತೆಲುಗಿನ ಚೊಚ್ಚಲ ಚಿತ್ರದ ಮುಹೂರ್ತದಲ್ಲಿ ಕಾಣಲಿಲ್ಲ ದುನಿಯಾ ವಿಜಯ್

    ಗಿರಿಜಾ ಲೋಕೇಶ್ ಕಂಬನಿ 
    ರಾಜೇಶ್ ಅವರ ಜೊತೆ ನಾಟಕಗಳಲ್ಲಿ ಅಭಿನಯಿಸಿದ್ದೇನೆ ಕಲೆಯಲ್ಲಿ ತುಂಬಾ ಶ್ರದ್ದೆ ಅವರಿಗೆ ಹದಿನಾರನೇ ವಯಸ್ಸಿನಲ್ಲಿ ನಾನು ‌ಅವರೊಟ್ಟಿಗೆ ನಾಟಕದಲ್ಲಿ ಅಭಿನಯಿಸಿದ್ದೇನೆ. ಕಾಸ್ಟ್ಯೂಮ್, ಹೇರ್ ಸ್ಟೈಲ್, ಬಾಡಿ ಲಾಂಗ್ವೇಜ್ ಯಾವುದೇ ಇರಲಿ ಅಲ್ಲಿ ಶಿಸ್ತು ಬಯಸುತ್ತಿದ್ದರು. ಪಾತ್ರದಲ್ಲಿ ಪರಕಾಯ ಪ್ರವೇಶ ಮಾಡುತ್ತಿದ್ದರು ಅವರಿಂದ ನೋಡಿ ತುಂಬಾ ಕಲಿತಿದ್ದೇವೆ. ಅವರು ಶಿಸ್ತುಬದ್ದ ಜೀವನ ನಡೆಸಿದ್ದರು. ಇದನ್ನು ಓದಿ : ಪಾರ್ವತಮ್ಮ ರಾಜ್ ಕುಮಾರ್ ಮತ್ತು ಬೆಳ್ಳಿ ಬಟ್ಟಲು ಸ್ಟೋರಿ ಹೇಳಿದ ರಂಗಾಯಣ ರಘು

    ಆರೋಗ್ಯದ ಬಗ್ಗೆ ತುಂಬಾ ಕಾಳಜಿ ವಹಿಸಿದ್ದರು. ಕಲಾವಿದರು ಅಡ್ಡದಿಡ್ಡಿ ದೇಹ ಬೆಳೆಸಬಾರದು, ನೀಟಾಗಿರಬೇಕು. ಫಿಟ್ ಅಂಡ್ ಫೈನ್ ಆಗಿರಬೇಕು ಎನ್ನುತ್ತಿದ್ದರು. ಬೆಳುವಲದ‌ ಮಡಿಲಲ್ಲಿ ಚಿತ್ರದಲ್ಲಿ ರಾಜೇಶ್ ಅವರ ಮಗಳಾಗಿ ಅಭಿನಯಿಸಿದ್ದೇನೆ ಅವರು ಸಂತೃಪ್ತ ಜೀವನ ನಡೆಸಿ ಹೋಗಿದ್ದಾರೆ ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಕಂಬನಿ ಮಿಡಿದಿದ್ದಾರೆ ಹಿರಿಯ ನಟಿ ಗಿರಿಜಾ ಲೋಕೇಶ್. ಇದನ್ನೂ ಓದಿ : ರಾಮ್ ಪೋತಿನೇನಿ ಸಿನಿಮಾಗೆ ಅಖಂಡ ಡೈರೆಕ್ಟರ್ ನಿರ್ದೇಶನ

    ಅಂತಿಮ ದರ್ಶನ ಪಡೆದ ಮುಖ್ಯಮಂತ್ರಿ ಚಂದ್ರು 
    ರಾಜೇಶ್ ಅಂತಿಮ ದರ್ಶನ ಪಡೆದ ಮಾತನಾಡಿದ ಚಂದ್ರು, “ರಾಜೇಶ್ ಆತ್ಮೀಯರು ಹಾಗೂ ನನ್ನ ಮಾರ್ಗದರ್ಶಕರು. ರಾಜ್ ಕುಮಾರ್ , ಉದಯ್ ಕುಮಾರ್, ಕಲ್ಯಾಣ್ ಕುಮಾರ್ ಸಾಲಿನವರು ಅಭಿನಯಕ್ಕೆ ನವರಸಗಳನ್ನು ತುಂಬಿದವರು. ರಂಗಭೂಮಿಯಲ್ಲಿ ಪಳಗಿದವರು, ಅದ್ಬುತ ಅಭಿನಯ ಮಾಡುತ್ತಿದ್ದರು. ಅವರ ಜೊತೆಗೆ ಬೇರೆಯವರು ಅದ್ಬುತವಾಗಿ ನಟಿಸಬೇಕು‌ ಎನ್ನುತ್ತಿದ್ದರು. ಇಂಗ್ಲಿಷ್ ಪಾಂಡಿತ್ಯವೂ ಇತ್ತು. ಕನ್ನಡ ಪಾಂಡಿತ್ಯವೂ ಇತ್ತುಅವರೊಟ್ಟಿಗೆ ಅಭಿನಯಿಸಿದ್ದೇನೆ. ತುಂಬು ಜೀವನ ಮಾಡಿ‌ ಹೋಗಿದ್ದಾರೆ. ರಾಜ್ ಕುಮಾರ್, ಕಲ್ಯಾಣ್ ಕುಮಾರ್, ಉದಯ್ ಕುಮಾರ್, ರಾಜೇಶ್ ಸೇರಿದಂತೆ ದಿಗ್ವಿಜರ ಪರಂಪರೆಯವರ ಜೊತೆ ಸಿನಿಮಾ ಮಾಡುವ ಭಾಗ್ಯ ನನ್ನದು” ಎಂದು ಚಂದ್ರು. ಇದನ್ನೂ ಓದಿ : ಹಿರಿಯ ನಟ ರಾಜೇಶ್ ಅವರ ಅಪರೂಪದ ಫೋಟೋಗಳು

    ತಾರಾ ಅನುರಾಧ ಸಂತಾಪ 
    ನಮ್ಮ ಚಿತ್ರರಂಗದ ಹಿರಿಯರನ್ನ ಕಳೆದುಕೊಂಡಿದ್ದೇವೆ. ಅವರ ಕೆಲಸ, ಸಿನಿಮಾಗಳು ನಮಗೆ ಅವರ ನೆನಪು ಉಳಿಯುವಂತೆ ಮಾಡುತ್ತವೆ ಎಂದಿದ್ದಾರೆ ರಾಷ್ಟ್ರ ಪ್ರಶಸ್ತಿ ವಿಜೇತೆ ನಟಿ ತಾರಾ ಅನುರಾಧ.

  • ನಟಿ ತಾರಾ ಅನುರಾಧ, ಯುವ ನಟಿ ನಿಶ್ವಿಕಾರಿಂದ ಅರ್ಥಪೂರ್ಣ ಕ್ರಿಸ್ಮಸ್ ಆಚರಣೆ

    ನಟಿ ತಾರಾ ಅನುರಾಧ, ಯುವ ನಟಿ ನಿಶ್ವಿಕಾರಿಂದ ಅರ್ಥಪೂರ್ಣ ಕ್ರಿಸ್ಮಸ್ ಆಚರಣೆ

    ಬೆಂಗಳೂರು: ಕ್ರಿಸ್ಮಸ್‍ಗೆ ಈಗಾಗಲೇ ಕೌಂಟ್ ಡೌನ್ ಆರಂಭಗೊಂಡಿದೆ. ಹಬ್ಬದ ಆಚರಣೆಗೆ ಸಿಲಿಕಾನ್ ಸಿಟಿ ಸಕಲ ರೀತಿಯಿಂದಲೂ ಸಜ್ಜುಗೊಂಡಿದ್ದು, ಕೆಲವೆಡೆ ಸೆಲೆಬ್ರೇಷನ್ ಸಹ ಮಾಡುತ್ತಿದ್ದಾರೆ. ಇಂದು ಕನ್ನಡ ಚಲನ ಚಿತ್ರರಂಗದ ನಟಿ ತಾರಾ ಅನುರಾಧ ಹಾಗೂ ಯುವ ನಟಿ ನಿಶ್ವಿಕಾ, ಕೊಳಗೇರಿಯ ಮಕ್ಕಳೊಂದಿಗೆ ಕ್ರಿಸ್ಮಸ್ ಆಚರಿಸಿದ್ರು.

    ಭಾರತಿ ನಗರ ನಾಗರಿಕ ವೇದಿಕೆ ಕಾಕ್ಸ್ ಟೌನ್ ಗಂಗಮ್ಮ ದೇವಸ್ಥಾನದ ಆವರಣದಲ್ಲಿ, ನೂರಾರು ಸ್ಲಂ ಮಕ್ಕಳಿಗೆ ಕೇಕ್ ಮತ್ತು ಊಟ ವಿತರಿಸುವ ಮೂಲಕ ಕ್ರಿಸ್ಮಸ್ ಹಾಗೂ ಹೊಸ ವರ್ಷ 2020ನ್ನು ಅರ್ಥಪೂರ್ಣವಾಗಿ ಆಚರಿಸಿದರು.

    ಸಾಂತಾ ಕ್ಲಾಸ್ ವೇಷ ಧರಿಸಿದ ನೂರಾರು ಮಂದಿ ಮಕ್ಕಳೊಂದಿಗೆ ನಟಿ ಮಣಿಯರು ಮಕ್ಕಳಾದರು. ಈ ವೇಳೆ ಮಾತನಾಡಿದ ನಟಿ ತಾರಾ ಅನುರಾಧ, ಎಲ್ಲಾ ಧರ್ಮದ ಹಬ್ಬಗಳು ಪರಸ್ಪರ ಪ್ರೀತಿ, ಸೌಹಾರ್ದತೆಯ ಸಂದೇಶ ಸಾರುತ್ತವೆ. ಅದೇ ರೀತಿ ಕ್ರಿಸ್ಮಸ್ ಹಬ್ಬ ಪ್ರೀತಿಯ ಸಂಕೇತವಾಗಿದೆ ಎಂದರು.

    ನಟಿ ನಿಶ್ವಿಕಾ ಮಾತನಾಡಿ, ಮಕ್ಕಳು ದೇವರ ಸಮ. ಮುದ್ದು ಮಕ್ಕಳೊಂದಿಗೆ ಕ್ರಿಸ್ಮಸ್ ಹಬ್ಬ ಆಚರಿಸುವುದೇ ಜೀವನದ ಸಂತಸದ ಕ್ಷಣವಾಗಿದೆ ಎಂದರು. ಈ ವೇಳೆ ಭಾರತಿ ನಗರ ನಾಗರಿಕ ವೇದಿಕೆ ಅಧ್ಯಕ್ಷ ಎನ್.ಎಸ್.ರವಿ ಹಾಜರಿದ್ದರು.