Tag: ತಾಲಿಬಾನ್

  • ಸಾರ್ವಜನಿಕವಾಗಿ ನಾಲ್ವರು ಕಳ್ಳರ ಕೈ ಕಟ್ ಮಾಡಿದ ತಾಲಿಬಾನ್ ಸರ್ಕಾರ

    ಸಾರ್ವಜನಿಕವಾಗಿ ನಾಲ್ವರು ಕಳ್ಳರ ಕೈ ಕಟ್ ಮಾಡಿದ ತಾಲಿಬಾನ್ ಸರ್ಕಾರ

    ಕಾಬೂಲ್: ಅಫ್ಘಾನಿಸ್ತಾನವನ್ನು (Afghanistan) ವಶಪಡಿಸಿಕೊಂಡ ನಂತರ ತಾಲಿಬಾನ್ (Taliban) ಸರ್ಕಾರ ಒಂದೆಲ್ಲಾ ಒಂದು ವಿಷಯಕ್ಕೆ ಚರ್ಚೆ ಆಗುತ್ತಿದೆ. ಇತ್ತೀಚೆಗಷ್ಟೇ ಮಹಿಳೆಯರ ಶಿಕ್ಷಣಕ್ಕೆ ನಿಷೇಧ ಹೇರಿ ಭಾರೀ ಟೀಕೆಗೆ ಒಳಗಾಗಿತ್ತು. ಇದೀಗ ಕಳ್ಳತನ ಆರೋಪದ ಮೇಲೆ ನಾಲ್ವರ ಕೈಗಳನ್ನು ಸಾರ್ವಜನಿಕವಾಗಿ ಕತ್ತರಿಸುವುದರ ಮೂಲಕ ಮತ್ತೇ ಚರ್ಚೆ ಗ್ರಾಸವಾಗಿದೆ.

    ಕಂದಹರ್‌ನ ಅಹ್ಮದ್ ಶಾಹಿ ಸ್ಟೇಡಿಯಂನಲ್ಲಿ ಸಾರ್ವಜನಿಕರ ಸಮ್ಮುಖದಲ್ಲಿ ಈ ಘಟನೆ ನಡೆದಿದೆ. ಈ ಬಗ್ಗೆ ಗವರ್ನರ್ ಕಚೇರಿಯ ವಕ್ತಾರ ಹಾಜಿ ಝೈದ್ ಮಾಹಿತಿ ನೀಡಿದ್ದು, ವಿವಿಧ ಅಪರಾಧಗಳಿಗಾಗಿ ಫುಟ್ಬಾಲ್ ಕ್ರೀಡಾಂಗಣದಲ್ಲಿ ಕಳ್ಳತನದ (Theft) ಆರೋಪದ ಮೇರೆಗೆ 4 ಮಂದಿಗಳ ಕೈಯನ್ನು ಕತ್ತರಿಸಲಾಯಿತು. ಜೊತೆಗೆ 9 ಮಂದಿಯನ್ನು ಥಳಿಸಲಾಯಿತು. ಆ ಅಪರಾಧಿಗಳಿಗೆ 25-29 ಬಾರಿ ಹೊಡೆಯಲಾಗಿದೆ ಎಂದು ತಿಳಿಸಿದ್ದಾರೆ.

    ಘಟನೆ ವೇಳೆ ತಾಲಿಬಾನ್ ಅಧಿಕಾರಿಗಳು, ಧಾರ್ಮಿಕ ಮೌಲ್ವಿಗಳು, ಹಿರಿಯರು ಮತ್ತು ಸ್ಥಳೀಯ ಜನರು ಕ್ರೀಡಾಂಗಣದಲ್ಲಿ ಉಪಸ್ಥಿತರಿದ್ದರು. ಇದೀಗ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಫೋಟೋದಲ್ಲಿ 9 ಮಂದಿ ಅಪರಾಧಿಗಳು ಹುಲ್ಲಿನ ಮೇಲೆ ಕುಳಿತಿರುವುದನ್ನು ಕಾಣಬಹುದು. ಇದನ್ನೂ ಓದಿ: ಆರತಿ ಕೊಲೆ ಕೇಸ್‌ – ಹತ್ಯೆಗೈದ ಆರೋಪಿಯ ಶವ ಕೆರೆಯಲ್ಲಿ ಪತ್ತೆ

    ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ ತಾಲಿಬಾನ್ ಸರ್ಕಾರವು ಮೊದಲ ಬಾರಿಗೆ ಸಾರ್ವಜನಿಕವಾಗಿ ಅಪರಾಧಿಯೊಬ್ಬನನ್ನು ಗಲ್ಲಿಗೇರಿಸಿತ್ತು. ಇದನ್ನೂ ಓದಿ: ಕೊಪ್ಪಳದಲ್ಲಿ ಕೋಳಿಗಳನ್ನು ಅರೆಸ್ಟ್ ಮಾಡಿದ ಖಾಕಿ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಅಫ್ಘಾನಿಸ್ತಾನದ ಮಾಜಿ ಸಂಸದೆ ಗುಂಡೇಟಿಗೆ ಬಲಿ

    ಅಫ್ಘಾನಿಸ್ತಾನದ ಮಾಜಿ ಸಂಸದೆ ಗುಂಡೇಟಿಗೆ ಬಲಿ

    ಕಾಬೂಲ್: ಅಫ್ಘಾನಿಸ್ತಾನವನ್ನು (Afghanistan) ತಾಲಿಬಾನ್ (Taliban) ವಶಪಡಿಸಿಕೊಳ್ಳುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದಿದ್ದ ಮಾಜಿ ಸಂಸದೆ (Former Lawmaker) ಗುಂಡಿಕ್ಕಿ ಕೊಂದಿರುವ ಘಟನೆ ಅಫ್ಘನ್ ರಾಜಧಾನಿ ಕಾಬೂಲ್‌ನಲ್ಲಿ (Kabul) ನಡೆದಿರುವುದಾಗಿ ಅಲ್ಲಿನ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

    ಅಫ್ಘಾನಿಸ್ತಾನದ ಮಾಜಿ ಸಂಸದೆ ಮುರ್ಸಲ್ ನಬಿಜಾದಾ (Mursal Nabizada)(32) ಅವರ ಮನೆಗೆ ಶನಿವಾರ ರಾತ್ರಿ ವೇಳೆ ಬಂದೂಕುಧಾರಿಗಳು ನುಗ್ಗಿದ್ದು, ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ಗುಂಡಿನ ದಾಳಿ ವೇಳೆ ನಬಿಜಾದಾ ಅವರ ಅಂಗರಕ್ಷಕರೊಬ್ಬರು ಕೂಡಾ ಸಾವನ್ನಪ್ಪಿದ್ದಾರೆ ಎಂದು ಕಾಬೂಲ್ ಪೊಲೀಸ್ ವಕ್ತಾರ ಖಾಲಿದ್ ಜದ್ರಾನ್ ಹೇಳಿದ್ದಾರೆ.

    ಮುರ್ಸಲ್ ನಬಿಜಾದಾ ಅವರು ಈ ಹಿಂದಿನ ಅಮೆರಿಕ ಬೆಂಬಲಿತ ಸರ್ಕಾರದ ಸಂಸತ್ತಿನ ಸದಸ್ಯರಾಗಿದ್ದರು. ಅವರು ಅಫ್ಘಾನಿಸ್ತಾನದ ಒಬ್ಬ ನಿರ್ಭೀತ ನಾಯಕಿಯಾಗಿದ್ದರು ಎಂದು ಮಾಜಿ ಶಾಸಕ ಮರಿಯಮ್ ಸೊಲೈಮಂಖಿಲ್ ತಿಳಿಸಿದ್ದಾರೆ. ಆಗಸ್ಟ್ 2021 ರಲ್ಲಿ ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ವೇಳೆ ಅವರು ತಮ್ಮ ಅಧಿಕಾರದಿಂದ ಕೆಳಗಿಳಿಯಬೇಕಾಯಿತು.

    ಶನಿವಾರ ರಾತ್ರಿ ನಡೆದಿರುವ ಗುಂಡಿನ ದಾಳಿಯಲ್ಲಿ ಮುರ್ಸಲ್ ನಬಿಜಾದಾ ಹಾಗೂ ಅವರ ಅಂಗರಕ್ಷಕ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ನಬಿಜಾದಾ ಅವರ ಸಹೋದರ ಕೂಡಾ ಗಾಯಗೊಂಡಿದ್ದಾರೆ. ಘಟನೆಯನ್ನು ಭದ್ರತಾ ಪಡೆಗಳು ಗಂಭೀರವಾಗಿ ತೆಗೆದುಕೊಂಡಿದ್ದು, ತನಿಖೆಯನ್ನು ಪ್ರಾರಂಭಿಸಿದೆ. ಇದನ್ನೂ ಓದಿ: ಹಾಕಿ ವಿಶ್ವಕಪ್‌ – ಭಾರತ, ಇಂಗ್ಲೆಂಡ್‌ ಪಂದ್ಯ ಡ್ರಾನಲ್ಲಿ ಅಂತ್ಯ

    ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಧಿಕಾರಕ್ಕೆ ಬಂದ ಬಳಿಕ ಉನ್ನತ ಸರ್ಕಾರಿ ಹುದ್ದೆಯಲ್ಲಿರುವವರಿಗೆ ದೇಶವನ್ನು ತೊರೆಯಲು ಅವಕಾಶ ನೀಡಲಾಗಿತ್ತು. ಅಂತಹ ಉನ್ನತ ಹುದ್ದೆಯಲ್ಲಿದ್ದ ಹಲವಾರು ಮಹಿಳೆಯರು ವಿದೇಶಕ್ಕೆ ತೆರಳಿದ್ದರು. ಆದರೆ ನಬಿಜಾದಾ ಮಾತ್ರ ತನ್ನ ಜನರಿಗಾಗಿ ಅಫ್ಘಾನಿಸ್ತಾನದಲ್ಲೇ ಉಳಿಯಲು ಹಾಗೂ ಹೋರಾಡಲು ನಿರ್ಧರಿಸಿದ್ದರು ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಸೋಮವಾರ ಬೆಂಗಳೂರಿನಲ್ಲಿ ಪ್ರಿಯಾಂಕಾ ಅಬ್ಬರ- 1 ಲಕ್ಷ ಮಹಿಳಾ ಕಾರ್ಯಕರ್ತರು ಭಾಗಿ ಸಾಧ್ಯತೆ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ತಾಲಿಬಾನ್ ಆಡಳಿತದ ವಿರುದ್ಧ ಮುನಿಸು – ಅಫ್ಘಾನಿಸ್ತಾನ ವಿರುದ್ಧ ನಾವು ಆಡಲ್ಲ ಎಂದ ಆಸ್ಟ್ರೇಲಿಯಾ

    ತಾಲಿಬಾನ್ ಆಡಳಿತದ ವಿರುದ್ಧ ಮುನಿಸು – ಅಫ್ಘಾನಿಸ್ತಾನ ವಿರುದ್ಧ ನಾವು ಆಡಲ್ಲ ಎಂದ ಆಸ್ಟ್ರೇಲಿಯಾ

    ಸಿಡ್ನಿ: ಅಫ್ಘಾನಿಸ್ತಾನ (Afghanistan) ವಿರುದ್ಧ ಏಕದಿನ ಸರಣಿ (ODI) ಆಡಬೇಕಾಗಿದ್ದ ಆಸ್ಟ್ರೇಲಿಯಾ (Australia) ತಂಡ ಇದೀಗ ಈ ಸರಣಿಯಿಂದ ಹಿಂದೆ ಸರಿದಿದೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್ (Taliban)  ಆಡಳಿತ ಕಂಡು ಮುನಿಸಿಕೊಂಡಿರುವ ಆಸ್ಟ್ರೇಲಿಯಾ ಈ ನಿರ್ಧಾರ ತೆಗೆದುಕೊಂಡಿದೆ.

    ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತದಿಂದ ಆಸ್ಟ್ರೇಲಿಯಾ ಕ್ರಿಕೆಟ್ ಬೋರ್ಡ್ ಬೇಸತ್ತು, ಈ ನಿರ್ಧಾರಕ್ಕೆ ಮುಂದಾಗಿದೆ. ತಾಲಿಬಾನ್ ಸರ್ಕಾರ ಅಲ್ಲಿನ ಮಹಿಳೆಯರ ಹಕ್ಕನ್ನು ಕಸಿದುಕೊಳ್ಳುತ್ತಿದ್ದು, ಮಹಿಳೆಯ ಶಿಕ್ಷಣ ಸೇರಿದಂತೆ ಉದ್ಯೋಗಗಳಿಗೆ ನಿಷೇಧ ಹೇರಿದ ಬೆನ್ನಲ್ಲೇ ಆಕ್ಷೇಪಗಳು ಕೇಳಿಬರುತ್ತಿದೆ. ಹಾಗಾಗಿ ಮಹಿಳೆಯ ಹಕ್ಕನ್ನು ಹತ್ತಿಕ್ಕುತ್ತಿರುವ ತಾಲಿಬಾನ್ ಕ್ರಮವನ್ನು ಖಂಡಿಸಿ ಈ ನಿರ್ಧಾರ ತೆಗದುಕೊಂಡಿದೆ. ಇದನ್ನೂ ಓದಿ: 6ನೇ ತರಗತಿಯೊಳಗಿನ ಹೆಣ್ಣು ಮಕ್ಕಳಿಗೆ ಮಾತ್ರ ಶಿಕ್ಷಣ – ಮಹಿಳಾ ಶಿಕ್ಷಣಕ್ಕೆ ತಾಲಿಬಾನ್ ಅಸ್ತು

    ಆಸ್ಟ್ರೇಲಿಯಾ ಮಹಿಳೆಯರ ಹಕ್ಕು ಮತ್ತು ಮಹಿಳೆಯರು ಕೂಡ ಕ್ರೀಡೆಯಲ್ಲಿ ಭಾಗವಹಿಸಬೇಕು ಎಂದು ಸಂಪೂರ್ಣ ಬೆಂಬಲ ನೀಡುತ್ತದೆ. ಆದರೆ ತಾಲಿಬಾನ್ ಇತ್ತೀಚೆಗೆ ಅಫ್ಘಾನಿಸ್ತಾನದಲ್ಲಿ ಮಹಿಳೆಯರ ಶಿಕ್ಷಣ ಸಹಿತ ಉದ್ಯೋಗಕ್ಕೆ ನಿಷೇಧ ಹೇರಿತ್ತು. ಪಾರ್ಕ್ ಮತ್ತು ಜಿಮ್‍ಗೆ ತೆರಳಬಾರದೆಂದು ಸೂಚಿಸಿತ್ತು. ಇದನ್ನು ವಿರೋಧಿಸಿ ಮಹಿಳೆಯರು ಬೀದಿಗಿಳಿದು ಹೋರಾಟ ನಡೆಸಿದ್ದರು. ಈ ಬೆನ್ನಲ್ಲೇ ಕ್ರಿಕೆಟ್ ಆಸ್ಟ್ರೇಲಿಯಾ ಮಹಿಳೆಯರ ಪರ ಬೆಂಬಲ ವ್ಯಕ್ತಪಡಿಸಿ ಅಘ್ಫಾನಿಸ್ತಾನ ವಿರುದ್ಧ ಕ್ರಿಕೆಟ್ ಸರಣಿ ಆಡದಿರಲು ನಿರ್ಧರಿಸಿದೆ.

    ಮಾರ್ಚ್‍ನಲ್ಲಿ ಅಫ್ಘಾನಿಸ್ತಾನ ವಿರುದ್ಧ ಆಸ್ಟ್ರೇಲಿಯಾ ದುಬೈನಲ್ಲಿ ಏಕದಿನ ಸರಣಿ ಆಡಬೇಕಾಗಿತ್ತು. ಈ ಸರಣಿ ರದ್ದುಗೊಳ್ಳುವ ಸಾಧ್ಯತೆ ಹೆಚ್ಚಿದೆ. ಇದನ್ನೂ ಓದಿ: ಈಡನ್ ಗಾರ್ಡನ್ಸ್‌ನಲ್ಲಿ 2ನೇ ಏಕದಿನ ಪಂದ್ಯ – ಸರಣಿ ಗೆಲ್ಲುವ ತವಕದಲ್ಲಿ ಭಾರತ, ಪುಟಿದೇಳುವ ವಿಶ್ವಾಸದಲ್ಲಿ ಲಂಕಾ

    ಇತ್ತ ತಾಲಿಬಾನ್‌ ನಡೆ ಕಂಡು ಅಲ್ಲಿನ ಮಹಿಳೆಯರು ಬೀದಿಗಿಳಿದು ಹೋರಾಟ ನಡೆಸಿದ್ದರು. ಈ ಬೆನ್ನಲ್ಲೇ ಪದವಿ ಕಾಲೇಜಿನ ಪುರುಷ ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿದ್ದರು. ಮಹಿಳಾ ವಿದ್ಯಾರ್ಥಿಗಳು ಹಾಜರಾಗುವವರೆಗೂ ನಾವೂ ಹಾಜರಾಗುವುದಿಲ್ಲ ಎಂದು ಪ್ರತಿಭಟನೆಗೆ ಮುಂದಾಗಿದ್ದರು. ಮಹಿಳೆಯರಿಗೆ ಬುರ್ಕಾ ನಿಷೇಧ ಹೇರಿದ್ದ ಬೆನ್ನಲ್ಲೇ ಮಹಿಳಾ ಶಿಕ್ಷಣ (Women Education) ನಿಷೇಧಿಸಿದ್ದ ತಾಲಿಬಾನ್ (Taliban) ಇದೀಗ ಮತ್ತೆ ಮಹಿಳಾ ಶಿಕ್ಷಣ ಮುಂದುವರಿಸುವ ನಿರ್ಧಾರ ಕೈಗೊಂಡಿದೆ. 1 ರಿಂದ 6ನೇ ತರಗತಿ ವರೆಗಿನ ಅಥವಾ ಅದಕ್ಕಿಂತಲೂ ಕಡಿಮೆ ವಯಸ್ಸಿನ ಹೆಣ್ಣುಮಕ್ಕಳಿಗೆ ಶಾಲೆಗಳಲ್ಲಿ (Schools) ತಮ್ಮ ಅಧ್ಯಯನ ಮುಂದುವರಿಸಲು ಅವಕಾಶ ನೀಡಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • 6ನೇ ತರಗತಿಯೊಳಗಿನ ಹೆಣ್ಣು ಮಕ್ಕಳಿಗೆ ಮಾತ್ರ ಶಿಕ್ಷಣ – ಮಹಿಳಾ ಶಿಕ್ಷಣಕ್ಕೆ ತಾಲಿಬಾನ್ ಅಸ್ತು

    6ನೇ ತರಗತಿಯೊಳಗಿನ ಹೆಣ್ಣು ಮಕ್ಕಳಿಗೆ ಮಾತ್ರ ಶಿಕ್ಷಣ – ಮಹಿಳಾ ಶಿಕ್ಷಣಕ್ಕೆ ತಾಲಿಬಾನ್ ಅಸ್ತು

    ಕಾಬೂಲ್: ಮಹಿಳೆಯರಿಗೆ ಬುರ್ಕಾ ನಿಷೇಧ ಹೇರಿದ್ದ ಬೆನ್ನಲ್ಲೇ ಮಹಿಳಾ ಶಿಕ್ಷಣ (Women Education) ನಿಷೇಧಿಸಿದ್ದ ತಾಲಿಬಾನ್ (Taliban) ಮತ್ತೆ ಮಹಿಳಾ ಶಿಕ್ಷಣ ಮುಂದುವರಿಸುವ ನಿರ್ಧಾರ ಕೈಗೊಂಡಿದೆ. 1 ರಿಂದ 6ನೇ ತರಗತಿವರೆಗಿನ ಅಥವಾ ಅದಕ್ಕಿಂತಲೂ ಕಡಿಮೆ ವಯಸ್ಸಿನ ಹೆಣ್ಣುಮಕ್ಕಳಿಗೆ ಶಾಲೆಗಳಲ್ಲಿ (Schools) ತಮ್ಮ ಅಧ್ಯಯನ ಮುಂದುವರಿಸಲು ಅವಕಾಶ ನೀಡಿದೆ.

    https://twitter.com/GawharshadMedia/status/1612482642481381376?ref_src=twsrc%5Etfw%7Ctwcamp%5Etweetembed%7Ctwterm%5E1612482642481381376%7Ctwgr%5E59f3a0bec476186b0fc4fa903a31592b08a61e9e%7Ctwcon%5Es1_&ref_url=https%3A%2F%2Fwww.indiatoday.in%2Findia%2Fstory%2Fnitish-kumars-remarks-population-women-uneducated-men-responsibility-controversy-2318800-2023-01-08

    ತಾಲಿಬಾನ್ ಶಿಕ್ಷಣ ಸಚಿವಾಲಯವು (Taliban Education Ministry) 6ನೇ ತರಗತಿಯೊಳಗಿನ ಹೆಣ್ಣುಮಕ್ಕಳಿಗೆ ಬಾಲಕಿಯರಿಗೆ ಶಾಲೆಗಳು ಮತ್ತು ಶೈಕ್ಷಣಿಕ ಕೇಂದ್ರಗಳನ್ನು ತೆರೆಯುವಂತೆ ಅಧಿಕಾರಿಗಳಿಗೆ ಪತ್ರಾದೇಶ ಹೊರಡಿಸಿದೆ. 

    ಕೆಲ ದಿನಗಳ ಹಿಂದೆ ತಾಲಿಬಾನ್‌ ಮಹಿಳಾ ಶಿಕ್ಷಣಕ್ಕೆ (Women Education)  ಸಂಪೂರ್ಣ ನಿಷೇಧ ಹೇರಿತ್ತು. ಇದನ್ನು ವಿರೋಧಿಸಿ ಮಹಿಳೆಯರು ಬೀದಿಗಿಳಿದು ಹೋರಾಟ ನಡೆಸಿದ್ದರು. ಈ ಬೆನ್ನಲ್ಲೇ ಪದವಿ ಕಾಲೇಜಿನ ಪುರುಷ ವಿದ್ಯಾರ್ಥಿಗಳು ತರಗತಿಗಳನ್ನ ಬಹಿಷ್ಕರಿಸಿದ್ದರು. ಮಹಿಳಾ ವಿದ್ಯಾರ್ಥಿಗಳು ಹಾಜರಾಗುವವರೆಗೂ ನಾವೂ ಹಾಜರಾಗುವುದಿಲ್ಲ ಎಂದು ಪ್ರತಿಭಟನೆಗೆ ಮುಂದಾಗಿದ್ದರು.

    ಮಾನವಹಕ್ಕುಗಳ ಆಯೋಗ, ತಾಲಿಬಾನ್ ಶಿಕ್ಷಣ ಕ್ರಮವನ್ನು ನಾಚಿಕೆಗೇಡಿನ ನಿರ್ಧಾರ ಎಂದು ಖಂಡಿಸಿತ್ತು. ಇದು ತಾಲಿಬಾನ್ `ಅಫ್ಘನ್ನರ ಮೂಲಭೂತ ಹಕ್ಕುಗಳ’ ಗೌರವದ ಕೊರತೆಯನ್ನು ಸ್ಪಷ್ಟಪಡಿಸುತ್ತದೆ ಎಂದು ಕಿಡಿ ಕಾರಿತು. ಈ ಬೆನ್ನಲ್ಲೇ ತಾಲಿಬಾನ್ ಶಿಕ್ಷಣ ನೀತಿ ಮಾನವೀಯತೆಗೆ ವಿರೋಧ, ಮಹಿಳಾ ಶಿಕ್ಷಣದ ನೀತಿಗಳಲ್ಲಿ ಬದಲಾವಣೆಯ ಅಗತ್ಯವಿದೆ ವಿದೇಶಿ ಸರ್ಕಾರಗಳು ಹೇಳಿದ್ದವು. ಇದನ್ನೂ ಓದಿ: ಹಿಜಬ್ ಸೂಚನೆ ಕಡೆಗಣನೆ, ಮಹಿಳೆಯರು ಮದುವೆಗೆ ಹೋಗುವ ಉಡುಪು ಧರಿಸುತ್ತಾರೆ: ತಾಲಿಬಾನ್ ಸಮರ್ಥನೆ

    G7 ಗುಂಪಿನ ಕೆನಡಾ, ಫ್ರಾನ್ಸ್, ಜರ್ಮನಿ, ಇಟಲಿ, ಜಪಾನ್, ಯುನೈಟೆಡ್ ಕಿಂಗ್‌ಡಮ್, ಯುನೈಟೆಡ್ ಸ್ಟೇಟ್ಸ್ ಮತ್ತು ಯುರೋಪಿಯನ್ ಯೂನಿಯನ್ ವಿದೇಶಾಂಗ ಸಚಿವರು ನಿಷೇಧವನ್ನು ಹಿಂತೆಗೆದುಕೊಳ್ಳುವಂತೆ ತಾಲಿಬಾನ್‌ಗೆ ಒತ್ತಾಯಿಸಿದ್ದರು. ಟರ್ಕಿ, ಕತಾರ್ ಮತ್ತು ಪಾಕಿಸ್ತಾನ ಸೇರಿದಂತೆ ಮುಸ್ಲಿಂ ರಾಷ್ಟ್ರಗಳೂ ಅಸಮಾಧಾನ ವ್ಯಕ್ತಪಡಿಸಿದ್ದವು. ಈ ಹಿನ್ನೆಲೆಯಲ್ಲಿ ತಮ್ಮ ಶಿಕ್ಷಣ ನೀತಿಯನ್ನು ಮರುಪರಿಶೀಲಿಸಿದ ತಾಲಿಬಾನ್ ಸಚಿವಾಲಯ 6ನೇ ತರಗತಿಯೊಳಗಿನ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಅಸ್ತು ಎಂದಿದೆ. ಇದನ್ನೂ ಓದಿ: ವಿದ್ಯಾರ್ಥಿನಿಯರು ಹಾಜರಾಗದಿದ್ರೆ ನಮಗೂ ಉನ್ನತ ಶಿಕ್ಷಣ ಬೇಡ – ತಾಲಿಬಾನ್‌ಗೆ ವಿದ್ಯಾರ್ಥಿಗಳಿಂದ ಎಚ್ಚರಿಕೆ

    ಆದ್ರೆ ತಮ್ಮ ನಿಲುವನ್ನು ಸಮರ್ಥಿಸಿಕೊಂಡಿದ್ದ ತಾಲಿಬಾನ್ ಸರ್ಕಾರದ ಉನ್ನತ ಶಿಕ್ಷಣ ಸಚಿವ ನಿದಾ ಮೊಹಮ್ಮದ್ ನದೀಮ್, ವಿಶ್ವವಿದ್ಯಾನಿಲಯಗಳಲ್ಲಿ ಲಿಂಗಗಳ ಸಮೀಕರಣ ತಡೆಗಟ್ಟಲು ಈ ನೀತಿ ಪರಿಚಯಿಸಲಾಗಿದೆ. ಅಫ್ಘಾನಿಸ್ತಾನದ ಆಂತರಿಕ ವ್ಯವಹಾರಗಳಲ್ಲಿ ವಿದೇಶಿಯರು ಹಸ್ತಕ್ಷೇಪ ಮಾಡುವುದನ್ನು ನಿಲ್ಲಿಸಬೇಕು ಎಂದು ಹೇಳಿದ್ದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕಾಬೂಲ್‌ ಮಿಲಿಟರಿ ವಿಮಾನ ನಿಲ್ದಾಣದಲ್ಲಿ ಸ್ಫೋಟ – 10 ಮಂದಿ ಸಾವು

    ಕಾಬೂಲ್‌ ಮಿಲಿಟರಿ ವಿಮಾನ ನಿಲ್ದಾಣದಲ್ಲಿ ಸ್ಫೋಟ – 10 ಮಂದಿ ಸಾವು

    ಕಾಬೂಲ್: ಅಫ್ಘಾನಿಸ್ತಾನದ (Afghanistan) ರಾಜಧಾನಿ ಕಾಬೂಲ್‌ನ ಮಿಲಿಟರಿ ವಿಮಾನ ನಿಲ್ದಾಣದಲ್ಲಿ (Kabul Military Airport) ಸ್ಫೋಟ ಸಂಭವಿಸಿದ್ದು, 10 ಜನರು ಸಾವನ್ನಪ್ಪಿದ್ದಾರೆ. ಸ್ಫೋಟದಲ್ಲಿ 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

    ಕಾಬೂಲ್‌ನ ಮಿಲಿಟರಿ ವಿಮಾನ ನಿಲ್ದಾಣದ ಮುಖ್ಯ ಗೇಟ್‌ಗೆ ಸಮೀಪದಲ್ಲಿ ಸ್ಫೋಟ ಸಂಭವಿಸಿದ್ದು, ಅನೇಕರು ಗಾಯಗೊಂಡಿದ್ದಾರೆ ಎಂದು ತಾಲಿಬಾನ್ (Taliban) ಆಂತರಿಕ ಸಚಿವಾಲಯದ ವಕ್ತಾರ ಅಬ್ದುಲ್ ನಫೀ ಟಕ್ಕೂರ್ ತಿಳಿಸಿದ್ದಾರೆ. ದಾಳಿ ಜವಾಬ್ದಾರಿಯನ್ನು ಈವರೆಗೂ ಯಾವ ಉಗ್ರ ಸಂಘಟನೆಯೂ ಹೊತ್ತಿಲ್ಲ. ಇದನ್ನೂ ಓದಿ: ಹೊಸ ವರ್ಷ ಆಚರಣೆ ವೇಳೆ ಕಾಲ್ತುಳಿತಕ್ಕೆ ಸಿಲುಕಿ 9 ಮಂದಿ ಸಾವು

    ಈಚೆಗಷ್ಟೇ ಉತ್ತರ ತಖಾರ್ ಪ್ರಾಂತ್ಯದ ರಾಜಧಾನಿ ತಾಲೂಕನ್ ನಗರದಲ್ಲಿ ಸ್ಫೋಟವೊಂದು ಸಂಭವಿಸಿತ್ತು. ಈ ವೇಳೆ ನಾಲ್ವರು ಗಾಯಗೊಂಡಿದ್ದರು. ಇದಾದ ಮೂರು ದಿನಗಳಲ್ಲೇ ಮತ್ತೊಂದು ಸ್ಫೋಟ ಸಂಭವಿಸಿದೆ.

    ತಾಲಿಬಾನ್ ಭದ್ರತಾ ಕಮಾಂಡರ್ ಅಬ್ದುಲ್ ಮುಬಿನ್ ಸಫಿ, ಸ್ಫೋಟ ಕುರಿತು ಅಧಿಕೃತ ಹೇಳಿಕೆ ನೀಡಿದ್ದಾರೆ. ಅಲ್ಲದೇ ಸ್ಥಳೀಯ ಆಡಳಿತ ಸಿಬ್ಬಂದಿಯ ಮೇಜಿನ ಕೆಳಗೆ ಬಾಂಬ್ ಇರಿಸಲಾಗಿದೆ ಎಂದು ಖಾಮಾ ಪ್ರೆಸ್ ವರದಿ ಮಾಡಿದೆ. ಇದನ್ನೂ ಓದಿ: ಪಾಕಿಸ್ತಾನ ವಿರುದ್ಧ ಯುದ್ಧ ಸಾರುವುದಾಗಿ ಬೆದರಿಕೆ ಹಾಕಿದ ತಾಲಿಬಾನ್

    Live Tv
    [brid partner=56869869 player=32851 video=960834 autoplay=true]

  • ಪಾಕಿಸ್ತಾನ ವಿರುದ್ಧ ಯುದ್ಧ ಸಾರುವುದಾಗಿ ಬೆದರಿಕೆ ಹಾಕಿದ ತಾಲಿಬಾನ್

    ಪಾಕಿಸ್ತಾನ ವಿರುದ್ಧ ಯುದ್ಧ ಸಾರುವುದಾಗಿ ಬೆದರಿಕೆ ಹಾಕಿದ ತಾಲಿಬಾನ್

    ಇಸ್ಲಾಮಾಬಾದ್: ಇದೇ ರೀತಿ ಪಾಕಿಸ್ತಾನದಲ್ಲಿ (Pakistan) ಸರ್ಕಾರ ನಡೆದುಕೊಂಡು ಹೋದರೆ ಮುಂದೆ ಪಾಕ್ ವಿರುದ್ಧ ಯುದ್ಧ ಸಾರಿ ಅಲ್ಲಿಯೂ ಕೂಡ ಅಘ್ಫಾನಿಸ್ತಾನದಂತೆ ತಾಲಿಬಾನ್ (Taliban) ಸರ್ಕಾರ ರಚಿಸುವುದಾಗಿ ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ (TTP) ಬೆದರಿಕೆ ಹಾಕಿದೆ.

    ಪಾಕಿಸ್ತಾನ ಸರ್ಕಾರ ತನ್ನ ರಾಷ್ಟ್ರದ ಮುಸ್ಲಿಮರಿಗೆ ಸರಿಯಾದ ಸಹಕಾರ ನೀಡುತ್ತಿಲ್ಲ. ಸಾರ್ವಭೌಮತ್ವವನ್ನು (Sovereignty) ಪ್ರಶ್ನಿಸುವಂತೆ ಮಾಡುತ್ತಿದೆ ಹೀಗೆ ಮುಂದುವರಿದರೆ, ಟಿಟಿಪಿ ರಕ್ಷಣೆಯಿಂದ ಹಿಡಿದು ಶಿಕ್ಷಣದವರೆಗೆ ತನ್ನದೇ ಆದ ಸಚಿವ ಸಂಪುಟವನ್ನು ಘೋಷಿಸಿ ಸರ್ಕಾರ ರಚಿಸಿ ಆಡಳಿತ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಭಯೋತ್ಪಾದನೆಯಿಂದ ಭಾರತ ನೊಂದಷ್ಟು ಬೇರಾವ ದೇಶವೂ ನೊಂದಿಲ್ಲ: ಜೈಶಂಕರ್

    ಇದಲ್ಲದೆ, ಟಿಟಿಪಿ ತನ್ನ ಸಡಿಲವಾದ ನಿಯಂತ್ರಣದಲ್ಲಿರುವ ಪ್ರದೇಶಗಳನ್ನು ಎರಡು ವಲಯಗಳಾಗಿ ವಿಂಗಡಿಸಿದೆ. ಪೇಶಾವರ್, ಮಲಕಾಂಡ್, ಮರ್ದಾನ್, ಮತ್ತು ಗಿಲ್ಗಿಟ್-ಬಲೂಚಿಸ್ತಾವನ್ನು ಉತ್ತರ ಮತ್ತು ಡೇರಾ, ಇಸ್ಮಾಯಿಲ್ ಖಾನ್, ಬನ್ನು ಮತ್ತು ಕೊಹತ್ ಸೇರಿದಂತೆ ಕೆಲ ಪ್ರದೇಶಗಳನ್ನು ದಕ್ಷಿಣ ಪ್ರಾಂತ್ಯವನ್ನಾಗಿ ವಿಂಗಡಿಸಿದೆ.

    ಟಿಟಿಪಿ 148 ಬಾರಿ ದಾಳಿ:
    ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ ತನ್ನ ಬೆಂಬಲಿಗರೊಂದಿಗೆ ಒಂದು ವರ್ಷದಲ್ಲಿ ಪಾಕಿಸ್ತಾನದ ರಕ್ಷಣಾ ಪಡೆಗಳ ಮೇಲೆ 148 ಬಾರಿ ದಾಳಿ ಮಾಡಿದೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್‍ ಯಶಸ್ಸು ಕಂಡು ಸರ್ಕಾರ ರಚಿಸಿದ ಬಳಿಕ ಪಾಕಿಸ್ತಾನದ ಕಡೆ ಕಣ್ಣಿಟ್ಟಿದೆ. ಇದನ್ನೂ ಓದಿ: ಲೈಂಗಿಕ ಕಿರುಕುಳ ಕೇಸ್‌ ದಾಖಲು- ಹರಿಯಾಣದ ಕ್ರೀಡಾ ಸಚಿವ ಸ್ಥಾನಕ್ಕೆ ಸಂದೀಪ್ ಸಿಂಗ್ ರಾಜೀನಾಮೆ

    https://twitter.com/Noorzay__/status/1609091024999047168

    2021ರಲ್ಲಿ ಟಿಟಿಪಿ ಪೊಲೀಸರ ಮೇಲೆ ಸಾಕಷ್ಟು ಬಾರಿ ಭಯೋತ್ಪಾದಕ ದಾಳಿಗಳನ್ನು ನಡೆಸಿದೆ. ಬಲೂಚಿಸ್ತಾನ್ ಪ್ರದೇಶದ ಖೈಬರ್ ಪಖ್ತುಂಖ್ವಾ ಮತ್ತು ಕ್ವೆಟ್ಟಾದಲ್ಲಿನ ಸೇನಾ ಪ್ರಧಾನ ಕಚೇರಿಯ ಮೇಲೂ ದಾಳಿ ನಡೆಸಿ ಶಕ್ತಿ ಪ್ರದರ್ಶಿಸಿದೆ. ಇದೀಗ ದೇಶದ ಬುಡಕಟ್ಟು ಪ್ರದೇಶಗಳಲ್ಲಿ ತಮ್ಮ ಭಯೋತ್ಪಾದಕ ಕಾರ್ಯಾಚರಣೆಯನ್ನು ವಿಸ್ತರಿಸಲು ಇತರ ಉಗ್ರಗಾಮಿ ಗುಂಪುಗಳು ಟಿಟಿಪಿಯೊಂದಿಗೆ ಕೈಜೋಡಿಸುತ್ತಿವೆ ಎಂದು ಖಾಮಾ ಪ್ರೆಸ್ ವರದಿ ಮೂಲಕ ಆರೋಪ ಮಾಡಿದೆ.

    Live Tv
    [brid partner=56869869 player=32851 video=960834 autoplay=true]

  • ವಿದ್ಯಾರ್ಥಿನಿಯರು ಹಾಜರಾಗದಿದ್ರೆ ನಮಗೂ ಉನ್ನತ ಶಿಕ್ಷಣ ಬೇಡ – ತಾಲಿಬಾನ್‌ಗೆ ವಿದ್ಯಾರ್ಥಿಗಳಿಂದ ಎಚ್ಚರಿಕೆ

    ವಿದ್ಯಾರ್ಥಿನಿಯರು ಹಾಜರಾಗದಿದ್ರೆ ನಮಗೂ ಉನ್ನತ ಶಿಕ್ಷಣ ಬೇಡ – ತಾಲಿಬಾನ್‌ಗೆ ವಿದ್ಯಾರ್ಥಿಗಳಿಂದ ಎಚ್ಚರಿಕೆ

    ಕಾಬೂಲ್: ಅಫ್ಘಾನಿಸ್ತಾನದಲ್ಲಿರುವ (Afghan) ತಾಲಿಬಾನ್ ಸರ್ಕಾರ (Taliban Government) ವಿದ್ಯಾರ್ಥಿನಿಯರಿಗೆ (Afghan Students) ವಿಶ್ವವಿದ್ಯಾಲಯ ಶಿಕ್ಷಣವನ್ನು ನಿಷೇಧಿಸಿದ ಬೆನ್ನಲ್ಲೇ ವಿದ್ಯಾರ್ಥಿಗಳು ತಮ್ಮ ತರಗತಿಗೆ ಗೈರಾಗಿದ್ದಾರೆ. ವಿದ್ಯಾರ್ಥಿನಿಯರು ತರಗತಿಗಳಿಗೆ ಹಾಜರಾಗುವವರೆಗೂ ತಾವೂ ಕಾಲೇಜು ಪ್ರವೇಶ ಮಾಡುವುದಿಲ್ಲವೆಂದು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

    ನಾವು ನಮ್ಮ ಪ್ರತಿಭಟನೆಯನ್ನು (Protest) ಮುಂದುವರಿಸುತ್ತೇವೆ. ಮಹಿಳಾ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗದಿದ್ರೆ, ನಾವೂ ನಮ್ಮ ಪಾಠ ಪ್ರವಚನಗಳನ್ನ ಬಹಿಷ್ಕರಿಸುತ್ತೇವೆ. ಶಿಕ್ಷಣವನ್ನು ಮುಂದುವರಿಸೋದಿಲ್ಲ ಎಂದು ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಹಿಜಬ್ ಸೂಚನೆ ಕಡೆಗಣನೆ, ಮಹಿಳೆಯರು ಮದುವೆಗೆ ಹೋಗುವ ಉಡುಪು ಧರಿಸುತ್ತಾರೆ: ತಾಲಿಬಾನ್ ಸಮರ್ಥನೆ

    ನಮ್ಮ ಸಹೋದರಿಯರಿಗೆ ವಿಶ್ವವಿದ್ಯಾನಿಲಯಗಳು (Universities) ಮುಚ್ಚಲ್ಪಟ್ಟಿವೆ. ಹಾಗಾಗಿ ನಮಗೂ ವಿಶ್ವವಿದ್ಯಾಲಯಕ್ಕೆ ಹೋಗಲು ಇಷ್ಟವಿಲ್ಲ ಎಂದು ವಿದ್ಯಾರ್ಥಿ ನವೀದುಲ್ಲಾ ಹೇಳಿಕೊಂಡಿದ್ದಾರೆ. ಇದರಿಂದ ಕಾಬೂಲ್ ವಿಶ್ವವಿದ್ಯಾಲಯದ ಉಪನ್ಯಾಸಕರು ತಮ್ಮ ನಿರ್ಧಾರ ಮರುಪರಿಶೀಲಿಸುವಂತೆ ತಾಲಿಬಾನ್‌ಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಮೂಗಿನ ಮೂಲಕ ತೆಗೆದುಕೊಳ್ಳುವ ಲಸಿಕೆಯ ತುರ್ತು ಬಳಕೆಗೆ ಕೇಂದ್ರ ಸರ್ಕಾರ ಅನುಮತಿ

    ಅಫ್ಘಾನಿಸ್ತಾನ ಸರ್ಕಾರವು ಇತ್ತೀಚೆಗೆ ಮಹಿಳಾ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ನಿರ್ಬಂಧ ವಿಧಿಸಿತು. ಈ ನಿರ್ಧಾರ ವಿದ್ಯಾರ್ಥಿಗಳ ವ್ಯಾಪಕ ಪ್ರತಿಭಟನೆ ಮತ್ತು ಜಾಗತಿಕ ಖಂಡನೆಗೆ ಕಾರಣವಾಯಿತು. ಮಹಿಳಾ ವಿದ್ಯಾರ್ಥಿಗಳು ಶಿಕ್ಷಣ ನಿಷೇಧಿಸುವುದಕ್ಕಿಂತ ನಮ್ಮ ಶಿರಚ್ಛೇದನ ಮಾಡುವುದೇ ಉತ್ತಮ ಎಂದು ಬೀದಿಗಿಳಿದು ಹೋರಾಟ ನಡೆಸಲು ಮುಂದಾದರು. ಈ ಬೆನ್ನಲ್ಲೇ ಪುರುಷ ಅಭ್ಯರ್ಥಿಗಳೂ ಉನ್ನತ ಶಿಕ್ಷಣವನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸ್ಥಳೀಯ, ವಿದೇಶಿ ಎನ್‌ಜಿಒಗಳಲ್ಲಿ ಮಹಿಳೆ ಉದ್ಯೋಗಿಗಳಿಗೆ ಅವಕಾಶ ಕೊಡ್ಬೇಡಿ – ತಾಲಿಬಾನ್‌ ಆದೇಶ

    ಸ್ಥಳೀಯ, ವಿದೇಶಿ ಎನ್‌ಜಿಒಗಳಲ್ಲಿ ಮಹಿಳೆ ಉದ್ಯೋಗಿಗಳಿಗೆ ಅವಕಾಶ ಕೊಡ್ಬೇಡಿ – ತಾಲಿಬಾನ್‌ ಆದೇಶ

    ಕಾಬೂಲ್: ಅಫ್ಘಾನಿಸ್ತಾನದ (Afghanistan) ಎಲ್ಲಾ ಸ್ಥಳೀಯ ಹಾಗೂ ವಿದೇಶಿ ಸರ್ಕಾರೇತರ ಸಂಸ್ಥೆಗಳಿಗೆ (NGO) ಮಹಿಳಾ ಉದ್ಯೋಗಿಗಳನ್ನು ಕೆಲಸಕ್ಕೆ ನೇಮಿಸಿಕೊಳ್ಳದಂತೆ ತಾಲಿಬಾನ್ (Taliban) ಆದೇಶಿಸಿದೆ.

    ಮಹಿಳೆಯರಿಗೆ ಇಸ್ಲಾಮಿಕ್‌ ವಸ್ತ್ರ ಸಂಹಿತೆ ಪಾಲಿಸುವಂತೆ ಸೂಚನೆ ನೀಡಲಾಗಿತ್ತು. ಆದರೆ ಈ ನಿಯಮವನ್ನು ಕೆಲವರು ಪಾಲಿಸದ ಕಾರಣ, ಮಹಿಳಾ ಉದ್ಯೋಗಿಗಳಿಗೆ (Women Employees) ಕಚೇರಿಗಳಲ್ಲಿ ಕೆಲಸ ಮಾಡಲು ಅವಕಾಶ ನೀಡಬಾರದು ಎಂದು ತಾಲಿಬಾನ್‌ ಸೂಚಿಸಿದೆ. ಇದನ್ನೂ ಓದಿ: `ನೀವು ತುಂಬಾ ದಪ್ಪ’ – ಮಹಿಳೆಗೆ ವಿಮಾನ ಹತ್ತಲು ನಿರಾಕರಿಸಿದ ಕತಾರ್‌ ಏರ್‌ವೇಸ್‌ಗೆ 3 ಲಕ್ಷ ದಂಡ

    ವಿಶ್ವವಿದ್ಯಾನಿಲಯಗಳಲ್ಲಿ ಮಹಿಳೆಯರಿಗೆ ಅವಕಾಶ ನೀಡಬಾರದು ಎಂದ ಬೆನ್ನಲ್ಲೇ ತಾಲಿಬಾನ್‌ ಮತ್ತೊಂದು ಆದೇಶ ಹೊರಡಿಸಿದೆ. ಇದರ ವಿರುದ್ಧ ಅಫ್ಘಾನಿಸ್ತಾನದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಅಲ್ಲದೇ ಜಾಗತಿಕವಾಗಿ ಖಂಡನೆ ಕೂಡ ವ್ಯಕ್ತವಾಗಿದೆ.

    ವಿಶ್ವವಿದ್ಯಾನಿಲಯ ಶಿಕ್ಷಣದ ಮೇಲಿನ ನಿಷೇಧವನ್ನು ಪ್ರತಿಭಟಿಸುವ ಮಹಿಳೆಯರನ್ನು ಚದುರಿಸಲು ತಾಲಿಬಾನ್ ಭದ್ರತಾ ಪಡೆಗಳು ನೀರಿನ ಫಿರಂಗಿಯನ್ನು ಬಳಸಿದವು ಎಂದು ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ. ಅಫ್ಘಾನಿಸ್ತಾನದ ಮಹಿಳೆಯರು ನಿಷೇಧದ ವಿರುದ್ಧ ಪ್ರಮುಖ ನಗರಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಚೀನಾದಲ್ಲಿ ಒಂದೇ ದಿನ 3.7 ಕೋಟಿ ಮಂದಿಗೆ ಸೋಂಕು

    ವಿವಿಗಳಲ್ಲಿ ಮಹಿಳೆಯರಿಗೆ ಶಿಕ್ಷಣ ನಿಷೇಧಿಸಿದ ತಾಲಿಬಾನ್‌ ಆದೇಶಕ್ಕೆ ಸೌದಿ ಅರೇಬಿಯಾ, ಟರ್ಕಿ, ಯುನೈಟೆಡ್ ಅರಬ್ ಎಮಿರೇಟ್ಸ್‌ನಂತಹ ದೇಶಗಳಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಹಿಜಬ್ ಸೂಚನೆ ಕಡೆಗಣನೆ, ಮಹಿಳೆಯರು ಮದುವೆಗೆ ಹೋಗುವ ಉಡುಪು ಧರಿಸುತ್ತಾರೆ: ತಾಲಿಬಾನ್ ಸಮರ್ಥನೆ

    ಹಿಜಬ್ ಸೂಚನೆ ಕಡೆಗಣನೆ, ಮಹಿಳೆಯರು ಮದುವೆಗೆ ಹೋಗುವ ಉಡುಪು ಧರಿಸುತ್ತಾರೆ: ತಾಲಿಬಾನ್ ಸಮರ್ಥನೆ

    ಕಾಬೂಲ್: ತಾಲಿಬಾನ್ (Taliban) ಸರ್ಕಾರ ಅಫ್ಘಾನಿಸ್ತಾನದಲ್ಲಿ (Afghanistan) ಮಹಿಳೆಯರ (Women) ವಿಶ್ವವಿದ್ಯಾಲಯ (University) ಶಿಕ್ಷಣವನ್ನು ನಿಷೇಧಿಸಿದ್ದು, ಜಾಗತಿಕವಾಗಿ ಟೀಕೆಗಳಿಗೆ ಗುರಿಯಾಗಿದೆ. ಇದೀಗ ತಾಲಿಬಾನ್ ಸರ್ಕಾರದ ಉನ್ನತ ಶಿಕ್ಷಣ ಸಚಿವರು ಮಹಿಳೆಯರನ್ನು ಶಿಕ್ಷಣದಿಂದ ದೂರವಿಡುವ ನಿರ್ಧಾರಕ್ಕೆ ಸಮರ್ಥನೆ ನೀಡಿದ್ದಾರೆ.

    ಮಹಿಳೆಯರ ಶಿಕ್ಷಣವನ್ನು ನಿಷೇಧಿಸುವ ವಿಚಾರದ ಬಗ್ಗೆ ಮೊದಲ ಬಾರಿ ಸಾರ್ವಜನಿಕವಾಗಿ ಮಾತನಾಡಿರುವ ತಾಲಿಬಾನ್ ಸಚಿವ ಮೊದಮ್ಮದ್ ನದೀಮ್, ವಿಶ್ವವಿದ್ಯಾಲಯಗಳಲ್ಲಿ ಹುಡುಗರು ಹಾಗೂ ಹುಡುಗಿಯರು ಜೊತೆಯಾಗಿ ಓದುವುದನ್ನು ತಪ್ಪಿಸುವ ಸಲುವಾಗಿ ಮಹಿಳೆಯರಿಗೆ ವಿಶ್ವವಿದ್ಯಾಲಯಗಳ ಶಿಕ್ಷಣವನ್ನು ನಿಷೇಧಿಸಲಾಗಿದೆ. ವಿಶ್ವವಿದ್ಯಾಲಯಗಳ ಕೆಲವು ವಿಚಾರಗಳು ಇಸ್ಲಾಂನ ತತ್ವಗಳನ್ನು ಉಲ್ಲಂಘಿಸುತ್ತವೆ. ಮುಂದಿನ ಸೂಚನೆ ಬರುವವರೆಗೂ ಈ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ಅವರು ತಿಳಿಸಿದ್ದಾರೆ.

    ಹುಡುಗಿಯರು ವಿಶ್ವವಿದ್ಯಾಲಯಕ್ಕೆ ಹೋಗುವ ಸಂದರ್ಭ ಮದುವೆಗೆ ಹೋಗುವವರಂತೆ ಉಡುಪುಗಳನ್ನು ಧರಿಸಿಕೊಂಡು ಹೋಗುತ್ತಿದ್ದಾರೆ. ಅವರು ಕಟ್ಟುನಿಟ್ಟಾಗಿ ಹಿಜಬ್ ಧರಿಸುವ ಸೂಚನೆಯನ್ನೂ ಕಡೆಗಣಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮೂಗಿನ ಮೂಲಕ ತೆಗೆದುಕೊಳ್ಳುವ ಲಸಿಕೆಯ ತುರ್ತು ಬಳಕೆಗೆ ಕೇಂದ್ರ ಸರ್ಕಾರ ಅನುಮತಿ

    ವಿಶ್ವವಿದ್ಯಾಲಯಗಳ ಕೆಲವು ವಿಜ್ಞಾನ ವಿಷಯಗಳು ಮಹಿಳೆಯರ ಓದಿಗೆ ಸೂಕ್ತವಾಗಿಲ್ಲ. ಎಂಜಿನಿಯರಿಂಗ್, ಕೃಷಿ ಹಾಗೂ ಇತರ ಕೆಲವು ಕೋರ್ಸ್‌ಗಳು ವಿದ್ಯಾರ್ಥಿನಿಯರ ಘನತೆ, ಗೌರವ ಹಾಗೂ ಅಫ್ಘಾನ್ ಸಂಸ್ಕೃತಿಗೆ ಹೊಂದಿಕೆಯಾಗುವುದಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

    ತಾಲಿಬಾನ್‌ನ ನಿರ್ಧಾರವನ್ನು ಮುಸ್ಲಿಂ ಬಹುಸಂಖ್ಯಾತ ಸೌದಿ ಅರೇಬಿಯಾ, ಟರ್ಕಿ, ಕತಾರ್ ಸೇರಿದಂತೆ ಹಲವು ದೇಶಗಳಲ್ಲಿನ ಜನರು ವ್ಯಾಪಕವಾಗಿ ಖಂಡಿಸಿದ್ದಾರೆ. ಆದರೆ ಅಫ್ಘಾನಿಸ್ತಾನದ ಆಂತರಿಕ ವ್ಯವಹಾರಗಳಲ್ಲಿ ವಿದೇಶಿಗರು ಹಸ್ತಕ್ಷೇಪ ಮಾಡುವುದನ್ನು ನಿಲ್ಲಿಸಬೇಕು ಎಂದು ನದೀಮ್ ಹೇಳಿದ್ದಾರೆ. ಇದನ್ನೂ ಓದಿ: ಉಕ್ರೇನ್ ಜೊತೆಗಿನ ಯುದ್ಧವನ್ನು ಶೀಘ್ರವೇ ನಿಲ್ಲಿಸುತ್ತೇವೆ: ಪುಟಿನ್

    ಸದ್ಯ ಮಹಿಳೆಯರಿಗೆ ವಿಶ್ವವಿದ್ಯಾಲಯಗಳನ್ನು ಮುಚ್ಚಲಾಗಿದೆ. ಆದರೆ ಮುಂದಿನ ದಿನಗಳಲ್ಲಿ ಈ ನಿರ್ಧಾರವನ್ನು ಪರಿಶೀಲಿಸುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮಹಿಳೆಯರ ಶಿಕ್ಷಣಕ್ಕೆ ತಾಲಿಬಾನ್ ನಿಷೇಧ – ಪ್ರತಿಭಟನೆಗೆ ಪರೀಕ್ಷೆಯಿಂದಲೇ ಹೊರನಡೆದ ಅಫ್ಘನ್ ಯುವಕರು

    ಮಹಿಳೆಯರ ಶಿಕ್ಷಣಕ್ಕೆ ತಾಲಿಬಾನ್ ನಿಷೇಧ – ಪ್ರತಿಭಟನೆಗೆ ಪರೀಕ್ಷೆಯಿಂದಲೇ ಹೊರನಡೆದ ಅಫ್ಘನ್ ಯುವಕರು

    ಕಾಬೂಲ್: ವಿಶ್ವವಿದ್ಯಾಲಯಗಳಲ್ಲಿ (University) ವಿದ್ಯಾರ್ಥಿನಿಯರು ಶಿಕ್ಷಣ ಪಡೆಯುವುದನ್ನು ನಿಷೇಧಿಸಿರುವ ತಾಲಿಬಾನ್ (Taliban) ನಡೆಯನ್ನು ಪ್ರತಿಭಟಿಸಲು ಅಫ್ಘಾನಿಸ್ತಾನದ (Afghanistan) ಯುವಕರು ಒಗ್ಗಟ್ಟಾಗಿ ಪರೀಕ್ಷೆಯಿಂದಲೇ (Exam) ಹೊರನಡೆದಿದ್ದಾರೆ.

    ನಂಗರ್‌ಹಾರ್ ಹಾಗೂ ಕಂದಹಾರ್‌ನಲ್ಲಿನ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು (Students) ಪರೀಕ್ಷೆಯಿಂದ ಹೊರನಡೆದಿದ್ದಾರೆ. ವಿದ್ಯಾರ್ಥಿಗಳು ತಾಲಿಬಾನ್ ಆದೇಶದ ವಿರುದ್ಧವಾಗಿ ಫಲಕಗಳನ್ನು ಪ್ರದರ್ಶಿಸಿ ಪ್ರತಿಭಟನೆ ನಡೆಸಿದ್ದಾರೆ.

    ತಾಲಿಬಾನ್‌ನ ಉನ್ನತ ಶಿಕ್ಷಣ ಸಚಿವಾಲಯ ಮಹಿಳಾ ಹಕ್ಕುಗಳು ಮತ್ತು ಸ್ವಾತಂತ್ರ‍್ಯಗಳ ಮೇಲೆ ಇತ್ತೀಚೆಗೆ ದಬ್ಬಾಳಿಕೆಯನ್ನು ಹೆಚ್ಚಿಸುತ್ತಿದ್ದು, ಅಫ್ಘಾನಿಸ್ತಾನದಲ್ಲಿ ಮಹಿಳೆಯರಿಗೆ ವಿಶ್ವವಿದ್ಯಾಲಯ ಶಿಕ್ಷಣದ ಮೇಲೆ ನಿಷೇಧವನ್ನು ಹೇರಿದೆ. ಇದು ಅಂತಾರಾಷ್ಟ್ರೀಯವಾಗಿ ಭಾರೀ ಟೀಕೆಗೆ ಕಾರಣವಾಗಿದೆ. ಇದನ್ನೂ ಓದಿ: ಸೌದಿ ಪರೀಕ್ಷಾ ಕೇಂದ್ರಗಳಲ್ಲಿ ಅಬಯಾ ಬ್ಯಾನ್

    ಕಳೆದ ವರ್ಷ ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ಬಳಿಕ ಇಸ್ಲಾಮಿಕ್ ಕಾನೂನಿನ ಕಟ್ಟುನಿಟ್ಟಿನ ಕ್ರಮಗಳನ್ನು ವ್ಯಾಪಕವಾಗಿ ಜಾರಿಗೆ ತಂದಿದೆ. ಪ್ರಾರಂಭದಲ್ಲಿ ಮಧ್ಯಮ ಹಾಗೂ ಪ್ರೌಢಶಾಲೆಯಿಂದ ಹುಡುಗಿಯರನ್ನು ನಿಷೇಧಿಸಲಾಗಿತ್ತು. ಬಳಿಕ ಉದ್ಯೋಗದಿಂದ ಮಹಿಳೆಯರನ್ನು ನಿರ್ಬಂಧಿಸಿಸಲಾಗಿತ್ತು

    ಸಾರ್ವಜನಿಕವಾಗಿ ಮಹಿಳೆಯರು ಅಡಿಯಿಂದ ಮುಡಿ ವರೆಗೆ ದೇಹವನ್ನು ಸಂಪೂರ್ಣವಾಗಿ ಮುಚ್ಚುವಂತೆ ಬಟ್ಟೆ ಧರಿಸಲು ಆದೇಶಿಸಿತ್ತು. ಬಳಿಕ ಮಹಿಳೆಯರನ್ನು ಪಾರ್ಕ್ ಹಾಗೂ ಜಿಮ್‌ಗಳಿಂದ ನಿಷೇಧ ಹೇರಲಾಗಿದೆ. ಅಷ್ಟೇ ಅಲ್ಲದೇ ಮಹಿಳೆಯರು ತಮ್ಮೊಂದಿಗೆ ಪುರುಷ ಸಂಬಂಧಿ ಇಲ್ಲದೇ ಪ್ರಯಾಣಿಸುವಂತಿಲ್ಲ ಎಂದು ಆದೇಶ ಹೊರಡಿಸಿತ್ತು. ಇದನ್ನೂ ಓದಿ: ಲೈಂಗಿಕತೆಯ ಒಪ್ಪಿಗೆ ವಯಸ್ಸನ್ನು ಕಡಿಮೆ ಮಾಡಲ್ಲ: ಕೇಂದ್ರ ಸರ್ಕಾರ

    Live Tv
    [brid partner=56869869 player=32851 video=960834 autoplay=true]