Tag: ತಿಕೋಟ

  • ವಿಜಯಪುರದಲ್ಲಿ ಮತ್ತೆ ಭೂಕಂಪ – ಜನರಲ್ಲಿ ಆತಂಕ

    ವಿಜಯಪುರದಲ್ಲಿ ಮತ್ತೆ ಭೂಕಂಪ – ಜನರಲ್ಲಿ ಆತಂಕ

    ವಿಜಯಪುರ: ಜಿಲ್ಲೆಯಲ್ಲಿ ಮತ್ತೆ ಭೂಕಂಪ ಸಂಭವಿಸಿದ್ದು, ಜಿಲ್ಲೆಯ ತಿಕೋಟ ತಾಲೂಕಿನಲ್ಲಿ ಭೂಕಂಪದ (Earthquake) ಅನುಭವ ಆಗಿದೆ.

    ವಿಜಯಪುರ (Vijayapura) ಜಿಲ್ಲೆಯ ತೀಕೋಟ (Tikota) ತಾಲೂಕಿನಲ್ಲಿ ಇಂದು (ಮಂಗಳವಾರ) ಸಂಜೆ 7:30ರ ಸುಮಾರಿಗೆ ಜನರಿಗೆ ಭೂಕಂಪನದ ಅನುಭವ ಆಗಿದೆ. ಭಾರಿ ಸದ್ದಿನಿಂದ ಭೂಮಿ ನಡುಗಿದ ಅನುಭವ ಆಗಿದೆ. ಇದನ್ನೂ ಓದಿ: ಫಸ್ಟ್‌ ಟೈಂ ಭಾರತೀಯ ವ್ಯಕ್ತಿಗೆ ಪಟ್ಟ – ಫಿಭಾ ಏಷ್ಯಾ ವಿಭಾಗದ ಅಧ್ಯಕ್ಷರಾಗಿ ಕನ್ನಡಿಗ ಗೋವಿಂದರಾಜ್ ಆಯ್ಕೆ

    ಭೂಕಂಪನ ಹಿನ್ನೆಲೆಯಲ್ಲಿ ಜನರು ಮನೆ ಬಿಟ್ಟು ಹೊರ ಬಂದಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ. ಭೂಕಂಪನ ಮರುಕಳಿಸಿದ ಹಿನ್ನೆಲೆಯಲ್ಲಿ ತಿಕೋಟ ತಾಲೂಕಿನ ಜನರಲ್ಲಿ ಆತಂಕ ಮನೆ ಮಾಡಿದೆ. ಇದನ್ನೂ ಓದಿ: ಕ್ಯಾಥೋಲಿಕ್‌ ಚರ್ಚ್‌ಗಳ ಪಾದ್ರಿಗಳಿಂದ 5,000 ಬಾಲಕಿಯರ ಮೇಲೆ ಅತ್ಯಾಚಾರ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬಬಲೇಶ್ವರ, ತಿಕೋಟ ಜನರಿಗೆ ಸಿಹಿ ಸುದ್ದಿ- ಮಿನಿ ವಿಧಾನಸೌಧ ನಿರ್ಮಾಣಕ್ಕೆ ಟೆಂಡರ್ ಆಹ್ವಾನ

    ಬಬಲೇಶ್ವರ, ತಿಕೋಟ ಜನರಿಗೆ ಸಿಹಿ ಸುದ್ದಿ- ಮಿನಿ ವಿಧಾನಸೌಧ ನಿರ್ಮಾಣಕ್ಕೆ ಟೆಂಡರ್ ಆಹ್ವಾನ

    ವಿಜಯಪುರ: ಜಿಲ್ಲೆಯ ಬಬಲೇಶ್ವರ ವಿಧಾನಸಭಾ ಕ್ಷೇತ್ರದ ಬಬಲೇಶ್ವರ ಮತ್ತು ತಿಕೋಟಾ ನೂತನ ತಾಲೂಕು ಕೇಂದ್ರಗಳಾಗಿ ಒಂದು ವರ್ಷ ಕಳೆದಿದೆ. ಆದರೂ ತಾಲೂಕು ಅಡಳಿತ ಕಚೇರಿ ಇಲ್ಲ. ಇದೀಗ ಎರಡೂ ತಾಲೂಕುಗಳ ಜನತೆಗೆ ಸಿಹಿ ಸುದ್ದಿ ಸಿಕ್ಕಿದ್ದು, ಮಿನಿ ವಿಧಾನಸೌಧ ನಿರ್ಮಾಣಕ್ಕೆ ಟೆಂಡರ್ ಆಹ್ವಾನಿಸಲಾಗಿದೆ.

    ಎರಡು ನೂತನ ತಾಲೂಕಿನ ಜನರು ತಾಲೂಕು ಕಚೇರಿಗಳನ್ನು ನಿರ್ಮಿಸಲು ಅನೇಕ ಹೋರಾಟ ಮಾಡಿದ್ದರು. ಆದರೆ ಸೂಕ್ತ ಕಟ್ಟಡಗಳ ಕೊರತೆ ಇರುವುದರಿಂದ ತಾಲೂಕು ಕಚೇರಿ ನಿರ್ಮಾಣಕ್ಕೆ ಹಿಂದೇಟು ಹಾಕಿದ್ದರು. ಇದೀಗ ಎರಡು ನೂತನ ತಾಲೂಕಿನ ಜನರಿಗೆ ಕ್ಷೇತ್ರದ ಶಾಸಕ, ಮಾಜಿ ಸಚಿವ ಎಂ.ಬಿ.ಪಾಟೀಲ್ ಖುಷಿ ವಿಚಾರ ಪ್ರಕಟಿಸಿದ್ದಾರೆ. ತಾಲೂಕು ಕೇಂದ್ರಗಳಾದ ಬಬಲೇಶ್ವರ ಮತ್ತು ತಿಕೋಟಾದಲ್ಲಿ ಮಿನಿ ವಿಧಾನಸೌಧಗಳನ್ನು ನಿರ್ಮಿಸಲು ಟೆಂಡರ್ ಕರೆಯಲಾಗಿದೆ.

    ನೂತನ ತಾಲೂಕು ಕೇಂದ್ರಗಳಲ್ಲಿ ಎಲ್ಲ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಕಚೇರಿಗಳನ್ನು ಒಂದೇ ಸೂರಿನಡಿ ತರುವ ಉದ್ದೇಶದಿಂದ ತಲಾ 10 ಕೋಟಿ ರೂ. ವೆಚ್ಚದಲ್ಲಿ ಬಬಲೇಶ್ವರ ಹಾಗೂ ತಿಕೋಟಾ ಎರಡು ಕಡೆ ಸುಸಜ್ಜಿತ ಮಿನಿ ವಿಧಾನಸೌಧ ನಿರ್ಮಿಸಲಾಗುತ್ತಿದೆ. ಬಬಲೇಶ್ವರದಲ್ಲಿ ಅಡವಿಸಂಗಾಪುರ ರಸ್ತೆಯಲ್ಲಿರುವ ಸರ್ಕಾರಿ ಜಾಗದಲ್ಲಿ ಹಾಗೂ ತಿಕೋಟಾದಲ್ಲಿ ಹಳೆ ಪ್ರವಾಸಿ ಮಂದಿರದ ಜಾಗದಲ್ಲಿ ಈ ಮಿನಿ ವಿಧಾನಸೌಧಗಳನ್ನು ನಿರ್ಮಿಸಲಾಗುತ್ತಿದೆ. ಈಗಾಗಲೇ ಟೆಂಡರ್ ಕರೆಯಲಾಗಿದ್ದು, ಟೆಂಡರ್ ಪ್ರಕ್ರಿಯೆ ಮುಗಿದ ನಂತರ ಕಾಮಗಾರಿ ಆರಂಭಿಸಲಾಗುವುದು ಎಂದು ಶಾಸಕ ಎಂ.ಬಿ.ಪಾಟೀಲ್ ಪ್ರಕಟಿಸಿದ್ದಾರೆ.