Tag: ತಿಪಟೂರು

  • Tumakuru | ಟೈಯರ್ ಬ್ಲಾಸ್ಟ್ ಆಗಿ ಮನೆಗೆ ನುಗ್ಗಿದ KSRTC ಬಸ್

    Tumakuru | ಟೈಯರ್ ಬ್ಲಾಸ್ಟ್ ಆಗಿ ಮನೆಗೆ ನುಗ್ಗಿದ KSRTC ಬಸ್

    – ಬಸ್ಸಿನಲ್ಲಿದ್ದ 10ಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯ

    ತುಮಕೂರು: ಚಲಿಸುತ್ತಿದ್ದ ಬಸ್ಸಿನ ಟೈರ್ ಬ್ಲಾಸ್ಟ್ (Tyre Blast) ಆದ ಪರಿಣಾಮ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ (KSRTC) ಬಸ್ ಮನೆಗೆ ನುಗ್ಗಿದ ಘಟನೆ ತುಮಕೂರು (Tumakuru) ಜಿಲ್ಲೆ ತಿಪಟೂರು ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ.

    ಚಾಲಕನ ನಿಯಂತ್ರಣ ತಪ್ಪಿ ಬಸ್ ಮನೆಗೆ ನುಗ್ಗಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಸಿದ್ದಪುರ ಗ್ರಾಮದ ಬಳಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 206ರ ಸಮೀಪವೇ ಇರುವ ಪುಟ್ಟಣ್ಣ ಎಂಬುವರ ಮನೆಗೆ ಬಸ್ ನುಗ್ಗಿದೆ. ಬಸ್ ನುಗ್ಗಿದ ರಭಸಕ್ಕೆ ಗೋಡೆ ಪುಲ್ ಡ್ಯಾಮೇಜ್ ಆಗಿದೆ. ಇದನ್ನೂ ಓದಿ: ಗಾಳಿಯಲ್ಲಿ ಗುಂಡು ಹಾರಿಸಿ ಹುಟ್ಟುಹಬ್ಬ ಆಚರಣೆ – ಪಂಚಾಯತ್‌ ಸದಸ್ಯ ಅರೆಸ್ಟ್‌

    ಆಗುಂಬೆಯಿಂದ ಕೋಲಾರಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನ ಟೈರ್ ಬ್ಲಾಸ್ಟ್ ಆಗಿ ಏಕಾಏಕಿ ರಸ್ತೆ ಬದಿಯಿದ್ದ ಮನೆಗೆ ಡಿಕ್ಕಿ ಹೊಡೆದಿದೆ. ಬಸ್‌ನಲ್ಲಿದ್ದ 10ಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನ ತಿಪಟೂರು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ತಿಪಟೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ – ಗೋಕಾಕ್ ಜಲಪಾತಕ್ಕೆ ಜೀವಕಳೆ

  • Tumakuru| ವಾಮಾಚಾರ ಮಾಡಿ ದೇವಾಲಯದ ಬಾಗಿಲಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

    Tumakuru| ವಾಮಾಚಾರ ಮಾಡಿ ದೇವಾಲಯದ ಬಾಗಿಲಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

    ತುಮಕೂರು: ವಾಮಾಚಾರ (Witchcraft) ಮಾಡಿ ಶಕ್ತಿ ದೇವತೆ ಕೆಂಪಮ್ಮ ದೇವಿ ದೇವಾಲಯದ (Kempamma Devi Temple) ಬಾಗಿಲಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ತುಮಕೂರು (Tumakuru) ಜಿಲ್ಲೆ ತಿಪಟೂರು ತಾಲೂಕಿನಲ್ಲಿ ನಡೆದಿದೆ.

    ಕಿಬ್ಬನಹಳ್ಳಿ ಹೋಬಳಿಯ ಹಟ್ನ ಗ್ರಾಮದ ಹೊರವಲಯದ ತೋಪಿನಲ್ಲಿ ಇರುವ ಕೆಂಪಮ್ಮ ದೇವಿ ದೇವಾಲಯಕ್ಕೆ ಮಂಗಳವಾರ ಸಂಜೆ ಯಾರೂ ಇಲ್ಲದ್ದನ್ನು ಗಮನಿಸಿ ಪಶ್ಚಿಮದ ಬಾಗಿಲಿಗೆ ವಾಮಾಚಾರ ಮಾಡಿದ್ದಾರೆ. ನಂತರ ವಾಮಾಚಾರದ ವಸ್ತುಗಳಿಗೆ ಬೆಂಕಿ ಹಚ್ಚಿದ ಪರಿಣಾಮ ಸಂಪೂರ್ಣ ಬಾಗಿಲಿಗೆ ಬೆಂಕಿ ಆವರಿಸಿದೆ. ಇಂದು ಬೆಳಗ್ಗೆ ಪೂಜಾ ಕೈಂಕರ್ಯಗಳನ್ನು ನಡೆಸಲು ಬಂದಾಗ ಘಟನೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ‘ಡೆವಿಲ್’ ಚಿತ್ರೀಕರಣ ಆರಂಭಕ್ಕೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ದಾಸ

    ಘಟನೆಯಿಂದ ದೇವಸ್ಥಾನದ ಬಾಗಿಲು ಸಂಪೂರ್ಣ ಸುಟ್ಟು ಕರಕಲಾಗಿದೆ. ಸ್ಥಳದಲ್ಲಿ ವಾಮಾಚಾರಕ್ಕೆ ಬಳಸಿದ್ದ ಬೊಂಬೆ, ಕುಂಕುಮ, ತಾಮ್ರದ ತಗಡು ವಸ್ತುಗಳು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಕಿಬ್ಬನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: Kolar| 2 ಖಾಸಗಿ ಬಸ್‌ಗಳ ನಡುವೆ ಅಪಘಾತ – ಓರ್ವ ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ

  • KSRTC, ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಸ್ಥಳದಲ್ಲೇ ಸಾವು

    KSRTC, ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಸ್ಥಳದಲ್ಲೇ ಸಾವು

    ತುಮಕೂರು: ಕೆಎಸ್‌ಆರ್‌ಟಿಸಿ ಬಸ್ (KSRTC Bus) ಹಾಗೂ ಬೈಕ್ ನಡುವೆ ಭೀಕರ ಅಪಘಾತ ನಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು (Tumakuru) ಜಿಲ್ಲೆ ತಿಪಟೂರು (Tiptur) ತಾಲೂಕಿನ ನೊಣವಿನಕೆರೆ ಬಳಿ ಆಲ್ಬುರಿನಲ್ಲಿ ನಡೆದಿದೆ.

    ಬಿದರೆಕೆರೆ ಗ್ರಾಮದ ಯೋಗೇಶ್(23), ದಯಾನಂದ್(25) ಮೃತ ದುರ್ದೈವಿಗಳು. ಶುಕ್ರವಾರ ರಾತ್ರಿ ಯೋಗೇಶ್ ಮತ್ತು ದಯಾನಂದ್ ಒಂದೇ ಬೈಕ್‌ನಲ್ಲಿ ಬಿದರೆಕೆರೆ ಕಡೆಯಿಂದ ತುರುವೇಕೆರೆ ಕಡೆಗೆ ತೆರಳುತ್ತಿದ್ದರು. ಈ ವೇಳೆ ತುರುವೇಕೆರೆ ಕಡೆಯಿಂದ ಬಂದ ಕೆಎಸ್‌ಆರ್‌ಟಿಸಿ ಬಸ್ ಬೈಕ್‌ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಹೆಂಡತಿ ತವರಿಗೆ ಹೋಗಿದ್ದಕ್ಕೆ ಖುಷಿಯಾಗಿದೆ – ಪೋಸ್ಟರ್ ಹಾಕಿ, ಬಿಸ್ಕತ್ ಹಂಚಿ ಸಂಭ್ರಮಿಸಿದ ಗಂಡ!

    ಮೃತರು ಬೈಕ್ ಗ್ಯಾರೇಜ್‌ನಲ್ಲಿ ಕೆಲಸ ಮಾಡಿತ್ತಿದ್ದರು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ನೊಣವಿನಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ನೊಣವಿನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನಕಾರಾತ್ಮಕ ತಂತ್ರಗಳಿಂದ ರಾಜಕೀಯ ಮಾಡ್ತಿದ್ದವರಿಗೆ ದೆಹಲಿ ಜನರಿಂದ ತಕ್ಕ ಪಾಠ: ಜೋಶಿ

  • ತೆಂಗಿನಕಾಯಿ ಫ್ಯಾಕ್ಟರಿ ನೀರಿನ ಗುಂಡಿಗೆ ಬಿದ್ದು 2 ವರ್ಷದ ಮಗು ದುರ್ಮರಣ

    ತೆಂಗಿನಕಾಯಿ ಫ್ಯಾಕ್ಟರಿ ನೀರಿನ ಗುಂಡಿಗೆ ಬಿದ್ದು 2 ವರ್ಷದ ಮಗು ದುರ್ಮರಣ

    ತುಮಕೂರು: ತೆಂಗಿನಕಾಯಿ ಫ್ಯಾಕ್ಟರಿಯಲ್ಲಿ (Coconut Factory) ತೆಂಗಿನಕಾಯಿಯ ನೀರಿನ ತ್ಯಾಜ್ಯ ಸಂಗ್ರಹವಾಗುವ ಗುಂಡಿಯಲ್ಲಿ ಮಗುವೊಂದು ಬಿದ್ದು ಸಾವನಪ್ಪಿದ ಘಟನೆ ತುಮಕೂರು (Tumakuru) ಜಿಲ್ಲೆ ತಿಪಟೂರು (Tiptur) ತಾಲೂಕಿನ ಮೀಸೆತಿಮ್ಮನಹಳ್ಳಿ ಬಳಿ ಇರುವ ಮಾನ್ಯಶ್ರೀ ಕೋಕನೆಟ್ ಫ್ಯಾಕ್ಟರಿಯಲ್ಲಿ ನಡೆದಿದೆ.

    ಇಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಎರಡು ವರ್ಷದ ಹೆಣ್ಣು ಮಗು ಕಾರ್ಖಾನೆಯ ಗುಂಡಿಗೆ ಬಿದ್ದು ಮೃತಪಟ್ಟಿದೆ. ಬಿಹಾರ ಮೂಲದ ತಂದೆ ಹರೀಂದ್ರಕುಮಾರ್ ಮತ್ತು ತಾಯಿ ರೀನಾದೇವಿ ಪುತ್ರಿ ಕುಸುಮ ಕುಮಾರಿ (2) ಸಾವನ್ನಪ್ಪಿರುವ ದುರ್ದೈವಿ. ಇದನ್ನೂ ಓದಿ:  Saif Ali Khan Stabbed| ಮನೆಯ ಕೆಲಸದಾಕೆಯ ಜೊತೆ ದಾಳಿಕೋರನಿಗೆ ಇತ್ತಾ ಸಂಬಂಧ?

    ಬುಧವಾರ 2 ಗಂಟೆ ಸುಮಾರಿಗೆ ಆಟವಾಡುತ್ತಿದ್ದ ಮಗು ಕಾಣದೇ ಇದ್ದಾಗ ಪೋಷಕರು ಹುಡುಕಾಟ ನಡೆಸಿದ ಸಂದರ್ಭ ಗುಂಡಿ ಒಳಗೆ ಬಿದ್ದಿರುವುದನ್ನು ಗಮನಿಸಿ ಮಗುವನ್ನು ಮೇಲೆ ಎತ್ತಲಾಗಿದೆ. ನಂತರ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯದಲ್ಲೇ ಕೊನೆಯುಸಿರೆಳೆದಿದೆ. ಇದನ್ನೂ ಓದಿ: ಹಸುವಿನ ಕೆಚ್ಚಲು ಕೊಯ್ದವನು ಮಾನಸಿಕ ಅಸ್ವಸ್ಥ ಅಲ್ಲ, ಹಲಾಲ್ ಕೋರ್ ಸಾಬಿ: ಪ್ರತಾಪ್ ಸಿಂಹ ಕಿಡಿ

    ತೆಂಗಿನಕಾಯಿ ಪೌಡರ್ ಮಾಡುವ ಮೊದಲು ಸುಲಿದ ತೆಂಗಿನಕಾಯಿ ತೊಳೆದ ನೀರು, ಹಾಗೂ ಕಾಯಿಯೊಳಗಿನ ನೀರು ತ್ಯಾಜ್ಯದ ರೂಪದಲ್ಲಿ ಈ ಗುಂಡಿಯಲ್ಲಿ ಸಂಗ್ರಹವಾಗುತ್ತದೆ. ಅದೇ ಗುಂಡಿಯಲ್ಲಿ ಮಗು ಬಿದ್ದು ಮೃತಪಟ್ಟಿದೆ. ಘಟನೆ ಸಂಬಂಧ ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    ಇದನ್ನೂ ಓದಿ: ಬೀದರ್‌ನಲ್ಲಿ ಫಿಲ್ಮಿ ಸ್ಟೈಲ್‌ ಎಟಿಎಂ ಹಣ ದರೋಡೆ – ಗನ್‌ಮ್ಯಾನ್‌ ಇಲ್ಲದೇ ಹಣ ತುಂಬಲು ಬಂದಿದ್ದ ಸಿಬ್ಬಂದಿ

  • Tumakuru| ಚಿರತೆ ಬಾಲ ಹಿಡಿದು ಬೋನಿಗೆ ಹಾಕಿದ ಯುವಕ – ಅರಣ್ಯ ಇಲಾಖೆ ಸಿಬ್ಬಂದಿ ಶಾಕ್

    Tumakuru| ಚಿರತೆ ಬಾಲ ಹಿಡಿದು ಬೋನಿಗೆ ಹಾಕಿದ ಯುವಕ – ಅರಣ್ಯ ಇಲಾಖೆ ಸಿಬ್ಬಂದಿ ಶಾಕ್

    ತುಮಕೂರು: ಯುವಕನೋರ್ವ ಚಿರತೆ (Leopard) ಬಾಲ ಹಿಡಿದು ಬೋನಿಗೆ ಹಾಕಿದ ಘಟನೆ ತುಮಕೂರು (Tumakuru) ಜಿಲ್ಲೆ ತಿಪಟೂರು (Tiptur) ತಾಲೂಕಿನ ರಂಗಾಪುರ ಗ್ರಾಮದಲ್ಲಿ ನಡೆದಿದೆ.

    ಚಿರತೆಯೊಂದು ಹಲವು ದಿನಗಳಿಂದ ರಂಗಾಪುರ ಗ್ರಾಮದ ಸುತ್ತಮುತ್ತ ಕಾಣಿಸಿಕೊಳ್ಳುತ್ತಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿತ್ತು. ಇಂದು ಪುರಲೇಹಳ್ಳಿ ರಸ್ತೆಯಲ್ಲಿರುವ ಕುಮಾರ್ ಎಂಬವರ ಮನೆ ಬಳಿ ಚಿರತೆ ಕಾಣಿಸಿಕೊಂಡಿದೆ. ಈ ಹಿನ್ನೆಲೆ ಅರಣ್ಯ ಇಲಾಖೆ (Forest Department) ಸಿಬ್ಬಂದಿಗೆ ಮಾಹಿತಿ ನೀಡಲಾಗಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಬಲೆ ಬಿಟ್ಟು ಚಿರತೆ ಸೆರೆಹಿಡಿಯುವ ಸಲುವಾಗಿ ಸಕಲ ಸಲಕರಣೆಗಳೊಂದಿಗೆ ಬಂದಿದ್ದರು. ಆದರೆ ಚಿರತೆ ಸೆರೆಹಿಡಿಯಲಾಗದೇ ಕೈಚೆಲ್ಲಿ ಕುಳಿತರು. ಇದನ್ನೂ ಓದಿ: ತಿರುಪತಿಯಂತೆ ಧರ್ಮಸ್ಥಳದಲ್ಲೂ ದರ್ಶನಕ್ಕೆ ಕ್ಯೂ ಕಾಂಪ್ಲೆಕ್ಸ್: ಏನಿದರ ವಿಶೇಷ? ಇಲ್ಲಿದೆ ಸಂಪೂರ್ಣ ವಿವರ

    ಈ ವೇಳೆ ಗ್ರಾಮದ ಆನಂದ್ ಎಂಬವರು ಚಿರತೆ ಬಾಲ ಹಿಡಿದು ಬೋನಿಗೆ ಹಾಕಿದ್ದಾರೆ. 5 ವರ್ಷದ ಚಿರತೆಯನ್ನು ಯುವಕ ಸೆರೆಹಿಡಿದಿದ್ದನ್ನು ಕಂಡು ಅರಣ್ಯ ಇಲಾಖೆ ಸಿಬ್ಬಂದಿ ಶಾಕ್ ಆಗಿದ್ದಾರೆ. ಆನಂದ್ ಸಾಹಸಕ್ಕೆ ಇಡೀ ಸುತ್ತಮುತ್ತಲಿನ ಗ್ರಾಮಸ್ಥರೆಲ್ಲಾ ಖುಷಿಯಾಗಿದ್ದು, ಅವರ ಧೈರ್ಯ, ಸಾಹಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮಕ್ಕಳಲ್ಲಿ ಹೆಚ್ಚುತ್ತಿದೆ HMPV- ಮಕ್ಕಳ ತಜ್ಞರು ಪೋಷಕರಿಗೆ ಕೊಟ್ಟ ಎಚ್ಚರಿಕೆ ಏನು?

  • Tumakuru| ಶಾಲಾ ಶಿಕ್ಷಕಿಯ ವಾಹನ ಅಡ್ಡಗಟ್ಟಿ ಸರಗಳ್ಳತನ

    Tumakuru| ಶಾಲಾ ಶಿಕ್ಷಕಿಯ ವಾಹನ ಅಡ್ಡಗಟ್ಟಿ ಸರಗಳ್ಳತನ

    ತುಮಕೂರು: ಕನಕದಾಸರ ಜಯಂತಿ ಮುಗಿಸಿ ವಾಪಸ್ ಆಗುತ್ತಿದ್ದ ಶಿಕ್ಷಕಿಯ ದ್ವಿಚಕ್ರವಾಹನವನ್ನು ಅಡ್ಡಗಟ್ಟಿ ಸರಗಳ್ಳತನ ಮಾಡಿದ ಘಟನೆ ತುಮಕೂರು (Tumakuru) ಜಿಲ್ಲೆ ತಿಪಟೂರು (Tiptur) ತಾಲೂಕಿನ ಮರಿಸಿದ್ದಯ್ಯನ ಪಾಳ್ಯದ ಬಳಿ ನಡೆದಿದೆ.

    ಮರಿಸಿದ್ದಯ್ಯನ ಪಾಳ್ಯದ ಪ್ರಾಥಮಿಕ ಶಾಲೆ ಶಿಕ್ಷಕಿ (Teacher) ರೇಖಾ ಶಾಲೆಯಲ್ಲಿ ಕನಕದಾಸರ ಜಯಂತಿ ಮುಗಿಸಿ ಹಿಂದಿರುಗುವ ವೇಳೆ ಆಕೆಯ ದ್ವಿಚಕ್ರವಾಹನವನ್ನು ಅಡ್ಡಗಟ್ಟಿ ದುಷ್ಕರ್ಮಿಗಳು ಸರ (Chain) ಎಗರಿಸಿದ್ದಾರೆ. ಬುಲೆಟ್‌ನಲ್ಲಿ ಬಂದ ಕಳ್ಳರು 40 ಹಾಗೂ 20 ಗ್ರಾಂ ತೂಕದ ಎರಡು ಸರ ಕಸಿದು ಪರಾರಿಯಾಗಿದ್ದಾರೆ. ಈ ವೇಳೆ ಬುಲೆಟ್ ವಿಡಿಯೋ ಮಾಡಿಕೊಳ್ಳಲು ಶಿಕ್ಷಕಿ ಮುಂದಾಗಿದ್ದಾರೆ. ಇದನ್ನು ಅರಿತ ಕಳ್ಳರು ಆಕೆಯ ಮೊಬೈಲ್ ಕೂಡ ಕಿತ್ತುಕೊಂಡು ಎಸ್ಕೇಪ್ ಆಗಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಡಿ.9 ರಿಂದ ಚಳಿಗಾಲದ ಅಧಿವೇಶನ

    ಗಾಯಗೊಂಡಿದ್ದ ಶಿಕ್ಷಕಿ ರೇಖಾಗೆ ತಿಪಟೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ನಾನೇನು ಡ್ಯಾನ್ಸ್‌ ಮಾಡ್ತೀದ್ದೀನಾ? – ಮಾಧ್ಯಮಗಳ ಮುಂದೆ ಮುಡಾ ಮಾಜಿ ಆಯುಕ್ತನ ಪೌರುಷ

  • ಪಾತ್ರೆ ತೊಳೆದ ನೀರು ಪಕ್ಕದ ಮನೆಯತ್ತ ಹರಿದಿದ್ದಕ್ಕೆ ಜಗಳ- ಯುವಕನ ಕೊಲೆ

    ಪಾತ್ರೆ ತೊಳೆದ ನೀರು ಪಕ್ಕದ ಮನೆಯತ್ತ ಹರಿದಿದ್ದಕ್ಕೆ ಜಗಳ- ಯುವಕನ ಕೊಲೆ

    ತುಮಕೂರು: ಕ್ಷುಲ್ಲಕ ಕಾರಣಕ್ಕೆ ಪ್ರಾರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ತಿಪಟೂರಿನ (Tiptur) ಕನ್ನುಘಟ್ಟ ಗ್ರಾಮದಲ್ಲಿ ನಡೆದಿದೆ.

    ವಸಂತಕುಮಾರ್ (24) ಕೊಲೆಯಾದ ಯುವಕ. ಜಯಮ್ಮ ಎಂಬವರ ಮನೆಯ ಪಾತ್ರೆ ತೊಳೆಯುವ ನೀರು ಪಕ್ಕದ ಮನೆಯ ಬಸವಲಿಂಗಯ್ಯ ಅವರ ಮನೆಯತ್ತ ಹರಿಯುತ್ತಿತ್ತು. ಇದನ್ನು ಪ್ರಶ್ನಿಸಿ ಬಸವಲಿಂಗಯ್ಯ ಅವರ ಕುಟುಂಬ ಜಗಳ ಆರಂಭಿಸಿದೆ. ಇದನ್ನೂ ಓದಿ: ಮೂರು ತಿಂಗಳೊಳಗೆ 108 ಆರೋಗ್ಯ ಸೇವೆಗೆ ಹೊಸ ರೂಪ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

    ಬಳಿಕ ಜಯಮ್ಮನ ಪತಿ ಶಿವಬಸವಯ್ಯ, ಮಗ ವಸಂತಕುಮಾರ್ ಮೇಲೆ ಬಸವಲಿಂಗಯ್ಯ ಮತ್ತು ಅವರ ಮಗ ಕುಮಾರ್ ದೊಣ್ಣೆ ಮತ್ತು ಸುತ್ತಿಗೆಯಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ತೀವ್ರವಾಗಿ ಗಾಯಗೊಂಡ ವಸಂತ್‍ಕುಮಾರ್‍ನನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

    ಈ ಸಂಬಂಧ ನೊಣವಿನಕೆರೆ (Nonavinakere) ಪೊಲೀಸ್ ಠಾಣೆಯಲ್ಲಿ ಕುಮಾರ್ ಸೇರಿದಂತೆ ಎಂಟು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ರಾಜ್ಯ ಸರ್ಕಾರಕ್ಕೆ ಅನ್ನಭಾಗ್ಯ ಅಕ್ಕಿ ಟೆನ್ಷನ್- ತೆಲಂಗಾಣದಲ್ಲೂ ಅಕ್ಕಿ ಸಿಗ್ತಿಲ್ಲ ಎಂದ ಸಿಎಂ

  • ಜಾತಿ ಬಲ ಇಲ್ಲದಿದ್ದರೂ, ಅಭಿವೃದ್ಧಿ ನಂಬಿ ಗೆದ್ದು ಸಚಿವರಾದ ಬಿ.ಸಿ. ನಾಗೇಶ್

    ಜಾತಿ ಬಲ ಇಲ್ಲದಿದ್ದರೂ, ಅಭಿವೃದ್ಧಿ ನಂಬಿ ಗೆದ್ದು ಸಚಿವರಾದ ಬಿ.ಸಿ. ನಾಗೇಶ್

    ತುಮಕೂರು: ರಾಜಕಾರಣದಲ್ಲಿ ಜಾತಿ ಮತ್ತು ದುಡ್ಡಿನ ಬಲವೇ ಪ್ರಮುಖ ಪಾತ್ರ ವಹಿಸುತ್ತದೆ. ಅಭಿವೃದ್ಧಿ ನೋಡಿ ಮತ ಹಾಕುವ ಆದ್ಯತೆಯ ಪ್ರಮಾಣ ಕಡಿಮೆ. ಪ್ರಬಲ ಜಾತಿಯ ಮತಗಳೇ ನಿರ್ಣಾಯಕವಾಗಿ, ಕ್ಷೇತ್ರದಿಂದ ಸ್ಪರ್ಧಿಸಿದ ಪ್ರಬಲ ಸಮುದಾಯದ ಅಭ್ಯರ್ಥಿಯೇ ಗೆಲ್ಲೋದು ಹೆಚ್ಚು. ಆದರೆ ಅಪರೂಪಕ್ಕೆ ಎಂಬಂತೆ ಜಾತಿ ಪ್ರಾಬಲ್ಯ ಇಲ್ಲದೇ ಇದ್ದರೂ ಗೆದ್ದು ಸಚಿವ ಸ್ಥಾನ ಅಲಂಕರಿಸಿದವರೂ ಇದ್ದಾರೆ.

    ಸಮುದಾಯದ ಮತ ನಂಬದೇ ಸರಳತೆ, ಕ್ಷೇತ್ರದ ಜನರೊಂದಿಗಿನ ಆಪ್ತತೆ ಹಾಗೂ ಅಭಿವೃದ್ಧಿ ಕೆಲಸದ ಮೂಲಕ ತಿಪಟೂರು (Tiptur) ಶಾಸಕ, ಶಿಕ್ಷಣ ಸಚಿವ ಬಿ.ಸಿ.ನಾಗೇಶ್ (BC Nagesh) ಬಿಜೆಪಿಯಿಂದ (BJP) ಎರಡು ಬಾರಿ ಗೆದ್ದು ಸಚಿವರಾಗಿದ್ದಾರೆ.

    ಸಚಿವ ಬಿ.ಸಿ.ನಾಗೇಶ್ ಬ್ರಾಹ್ಮಣ ಸಮುದಾಯದವರು. ತಿಪಟೂರು ಕ್ಷೇತ್ರದಲ್ಲಿ ಲಿಂಗಾಯತ ಸಮುದಾಯದ ಪ್ರಾಬಲ್ಯ ಇದೆ. ಸರಿಸುಮಾರು 68 ಸಾವಿರ ನೊಳಂಬ ಲಿಂಗಾಯತರ ಮತಗಳಿವೆ. ಬ್ರಾಹ್ಮಣ ಸಮುದಾಯದ ಮತ ಕೇವಲ 5-8 ಸಾವಿರದ ಆಸುಪಾಸು. ಆದರೂ ಲಿಂಗಾಯತ ಸಮುದಾಯದ ಕಾಂಗ್ರೆಸ್ ಮಾಜಿ ಶಾಸಕ ಕೆ.ಷಡಕ್ಷರಿ ಅವರನ್ನು ಪರಾಭವಗೊಳಿಸಿ ಬಿ.ಸಿ.ನಾಗೇಶ್ ಎರಡು ಬಾರಿ ಶಾಸಕರಾಗಿ ಸಚಿವರಾಗಿದ್ದಾರೆ.

    ತಿಪಟೂರು ತಾಲೂಕಿನವರಾದ ಬಿ.ಸಿ. ನಾಗೇಶ್ ಅವರು, 2008 ಮತ್ತು 2018ರ ಸಾರ್ವತ್ರಿಕ ಚುನಾವಣೆಯಲ್ಲಿ ತಿಪಟೂರು ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಬೆಂಗಳೂರಿನ ಬಿ.ಎಂ.ಎಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ (ಬಿ.ಇ) ಪದವೀಧರರಾಗಿರುವ ಬಿ.ಸಿ ನಾಗೇಶ್ ಅವರು ಕಾಲೇಜು ದಿನಗಳಲ್ಲೇ ಜನ ಸೇವೆ ಮಾಡುವ ಉದ್ದೇಶದಿಂದ ಸಾರ್ವಜನಿಕ ಜೀವನಕ್ಕೆ ಧುಮುಕಿದರು.

    ಸಾಂದರ್ಭಿಕ ಚಿತ್ರ

    ಸ್ವಾತಂತ್ರ್ಯ ಭಾರತದ ಕರಾಳ ಘಟನೆಗಳಲ್ಲಿ ಒಂದಾದ ‘ತುರ್ತು ಪರಿಸ್ಥಿತಿ’ ಹೇರಿಕೆ ವಿರುದ್ಧ ಹೋರಾಟ ನಡೆಸಿದ ಬಿ.ಸಿ. ನಾಗೇಶ್ ಅವರು ಸೆರೆಮನೆ ವಾಸ ಅನುಭವಿಸಿದ್ದಾರೆ. ಬಿ.ಸಿ. ನಾಗೇಶ್ ಅವರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ (ಎಬಿವಿಪಿ) ಪೂರ್ಣಾವಧಿ ಕಾರ್ಯಕರ್ತರಾಗಿ, ಎಬಿವಿಪಿ ಬೆಂಗಳೂರು ವಿಭಾಗದ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ. ದೇಶದ ಹಿತಕ್ಕಾಗಿ ಕಾರ್ಯನಿರ್ವಹಿಸುವ ರಾಷ್ಟ್ರೀಯ ಸ್ವಯಂ ಸೇವಾ ಸಂಘದ (RSS) ಸ್ವಯಂ ಸೇವಕರಾಗಿ ಬಿ.ಸಿ. ನಾಗೇಶ್ ಅವರು ಅವಿರತ ದುಡಿದಿದ್ದಾರೆ. ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ತುಮಕೂರು ಜಿಲ್ಲೆಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯ ಜವಾಬ್ದಾರಿಯನ್ನು ನಿಭಾಯಿಸಿರುವ ಬಿ.ಸಿ. ನಾಗೇಶ್ ಹಿಡಿದ ಅಭಿವೃದ್ಧಿ ಕೆಲಸ ಮಾಡಿಯೇ ತೀರುವ ಛಾತಿ ಇದ್ದವರು.

    ಶಿಕ್ಷಣ ಇಲಾಖೆಯ ಜವಾಬ್ದಾರಿ ವಹಿಸಿಕೊಂಡ ಬಳಿಕ ಅಮೂಲಾಗ್ರ ಬದಲಾವಣೆ ತಂದರು. 15 ಸಾವಿರ ಶಿಕ್ಷಕರ ನೇಮಕ, 10 ಸಾವಿರ ಶಾಲಾ ಕೊಠಡಿಗಳ ನಿರ್ಮಾಣ ಮಾಡಿ ಸದ್ದು ಮಾಡಿದ್ದಾರೆ. ಅತಿಥಿ ಶಿಕ್ಷಕರ ಗೌರವ ಸಂಭಾವನೆ ಹೆಚ್ಚಳ, ಬಿಸಿಯೂಟ ನೌಕರರ ಸಂಬಳವೂ ಹೆಚ್ಚಿಸಿ ಕೈಹಿಡಿದಿದ್ದಾರೆ. ಇದನ್ನೂ ಓದಿ: ಶಾಸಕ ಸ್ಥಾನಕ್ಕೆ ಗುಬ್ಬಿ ಶ್ರೀನಿವಾಸ್ ಇಂದು ರಾಜೀನಾಮೆ

    ಶಿಕ್ಷಣ ಇಲಾಖೆಯ ಜವಾಬ್ದಾರಿ ಹೊತ್ತ ಬಳಿಕ ತಮ್ಮ ಕ್ಷೇತ್ರದ ಅಭಿವೃದ್ಧಿ ಕೆಲಸದ ಮೇಲೂ ಸಚಿವರು ತೀರಾ ನಿಗಾ ಇರಿಸಿದ್ದರು. ಹೊನ್ನವಳ್ಳಿ ಏತನೀರಾವರಿ ಯೋಜನೆಯ ಎರಡನೇ ಹಂತದ ಅನುಷ್ಠಾನ. ರಾಷ್ಟ್ರೀಯ ಹೆದ್ದಾರಿ 206 ಚತುಷ್ಪಥ ನಿರ್ಮಾಣಕ್ಕೆ 32 ಕೋಟಿ ರೂ., ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಲ್ಲಿ 180 ಕೋಟಿ ರೂ. ವೆಚ್ಚದಲ್ಲಿ ಹತ್ತಾರು ಕೆರೆಗಳಿಗೆ ನೀರು ಹರಿಸಿದ್ದಾರೆ. ತಿಪಟೂರು ನೊಣವಿನಕೆರೆ ರಸ್ತೆ, ತಿಪಟೂರು ಹುಳಿಯಾರು ರಸ್ತೆ, ತಿಪಟೂರು-ಹಾಸನ ರಸ್ತೆ ಹೀಗೆ ನೂರಾರು ಕೋಟಿ ವೆಚ್ಚದಲ್ಲಿ ಪ್ರಮುಖ ರಸ್ತೆಗಳ ಅಭಿವೃದ್ಧಿ ಮಾಡಿದ್ದಾರೆ. ದಿ. ಹಾಸ್ಯ ನಟ ನರಸಿಂಹರಾಜು ಅವರ ರಂಗಮಂದಿರ, ಶಾಲಾ ಕಾಲೇಜು ಕಟ್ಟಡ ಹೀಗೆ ಅಭಿವೃದ್ಧಿ ಅಜೆಂಡಾ ಇಟ್ಟುಕೊಂಡ ಬಿ.ಸಿ.ನಾಗೇಶ್ ಮುಂದಿನ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸದಲ್ಲಿ ಇದ್ದಾರೆ.

    ಆದಾಗ್ಯೂ ಪಠ್ಯಪುಸ್ತಕ ರಚನಾ ಸಮಿತಿ ವಿವಾದ, ಹಿಜಬ್ ವಿವಾದಗಳಿಂದ ಸಚಿವರಿಗೆ ಸ್ವಲ್ಪ ಹಿನ್ನಡೆಯಾದರೂ ಈ ಬಾರಿ ಚುನಾವಣೆಯಲ್ಲಿ ಫಲಿತಾಂಶ ಏನಾಗಲಿದೆ ಎಂಬ ಕುತೂಹಲ ಹೆಚ್ಚಾಗಿದೆ. ಇದನ್ನೂ ಓದಿ: ಬಿಜೆಪಿ ಮಾಜಿ ಸಂಸದ ಮಂಜುನಾಥ್ ಕುನ್ನೂರು, ಪುತ್ರ ಶೀಘ್ರವೇ ಕಾಂಗ್ರೆಸ್‌ಗೆ ಸೇರ್ಪಡೆ

  • ಕಾಂಗ್ರೆಸ್ ಪಾರ್ಟಿಯ ಅರ್ಥ ಕಮಿಷನ್, ಕರಪ್ಷನ್ – ಜೆ.ಪಿ.ನಡ್ಡಾ

    ಕಾಂಗ್ರೆಸ್ ಪಾರ್ಟಿಯ ಅರ್ಥ ಕಮಿಷನ್, ಕರಪ್ಷನ್ – ಜೆ.ಪಿ.ನಡ್ಡಾ

    ತುಮಕೂರು: ಕಾಂಗ್ರೆಸ್ (Congress) ಪಾರ್ಟಿಯ ಅರ್ಥ ಕಮಿಷನ್, ಕರಪ್ಷನ್, ಕ್ರಿಮಿನಲೈಸೇಷನ್ ಮತ್ತು ಪರಿವಾರವಾದ. ಆದರೆ ಬಿಜೆಪಿಯ (BJP) ಅರ್ಥ ವಿಕಾಸ್ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ (J.P.Nadda) ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.

    ತಿಪಟೂರಿನಲ್ಲಿ (Tiptur) ನಡೆದ ರೋಡ್ ಶೋನಲ್ಲಿ (Road Show) ಭಾಗವಹಿಸಿ ಮಾತನಾಡಿದ ಅವರು, ರೋಡ್ ಶೋಗೆ ಅಭೂತಪೂರ್ವ ಬೆಂಬಲ ದೊರೆತಿದೆ. ಇದನ್ನು ನೋಡುತ್ತಿದ್ದರೆ ಮುಂದಿನ ದಿನಗಳಲ್ಲಿ ನೀವೆಲ್ಲರು ಎಲ್ಲೆಲ್ಲೂ ಕಮಲ ಅರಳಿಸುತ್ತೀರಿ ಎಂದು ಅನಿಸುತ್ತಿದೆ. ಕಮಲ ಅರಳಿಸಬೇಕು ಎನ್ನುವುದು ಬಿಜೆಪಿಯ ಅವಶ್ಯಕತೆಯಲ್ಲ. ಕರ್ನಾಟಕದ (Karnataka) ಮಣ್ಣಿಗಾಗಿ ಮತ್ತು ಅಭಿವೃದ್ಧಿಗಾಗಿ ಕಮಲ ಅರಳಬೇಕಾದ ಅನಿವಾರ್ಯತೆಯಿದೆ ಎಂದರು. ಇದನ್ನೂ ಓದಿ: ಸುವರ್ಣ ಮಂಡ್ಯ ಪುಸ್ತಕದಲ್ಲಿ ಉರಿಗೌಡ, ನಂಜೇಗೌಡರ ಬಗ್ಗೆ ಉಲ್ಲೇಖ – ರಾಜಕೀಯ ವಾದಕ್ಕೆ ಪುಷ್ಟಿ 

    ನಾನು ನಿಮ್ಮಲ್ಲಿ ಮನವಿ ಮಾಡುತ್ತೇನೆ. ಮುಂದಿನ ಚುನಾವಣೆ (Election) ಕೇವಲ ಭಾರತೀಯ ಜನತಾ ಪಾರ್ಟಿಗೆ ಮಾತ್ರವಲ್ಲ. ಅದು ಕರ್ನಾಟಕದ ಪ್ರತಿಯೊಬ್ಬ ಜನತೆಯ ಭವಿಷ್ಯದ ಚುನಾವಣೆಯಾಗಿದೆ. ಅದನ್ನು ನಾವು ತಿಳಿದುಕೊಳ್ಳಬೇಕಿದೆ. ಕರ್ನಾಟಕದಲ್ಲಿ ಹೈವೇ, ಎಕ್ಸ್ಪ್ರೆಸ್‌ವೇ, ದೊಡ್ಡ ದೊಡ್ಡ ಚತುಷ್ಪಥ ರಸ್ತೆಗಳು ಆಗುತ್ತಿದೆಯೋ ಇಲ್ವೋ ಗೊತ್ತಿಲ್ಲ. ರೈಲ್ವೆಗಳ ಸಂಖ್ಯೆ ಹೆಚ್ಚಳವಾಗಿದೆಯೋ ಇಲ್ಲವೋ ಗೊತ್ತಿಲ್ಲ. ಹನ್ನೊಂದು ಏರ್‌ಪೋರ್ಟ್ ಜೊತೆಗೆ ಇಂಟರ್ನೆಟ್ ಹಳ್ಳಿ ಹಳ್ಳಿಗಳನ್ನು ತಲುಪಿದೆಯೋ ಇಲ್ವೋ ಗೊತ್ತಿಲ್ಲ. ಮೋದಿಯವರ (Narendra Modi) ಈ ಯೋಜನೆಯನ್ನು ಅನುಷ್ಠಾನಕ್ಕೆ ತರುವ ಕೆಲಸವನ್ನು ಯಡಿಯೂರಪ್ಪನವರು (B.S.Yediyurappa) ಮಾಡಿದರು. ಈಗ ಬೊಮ್ಮಾಯಿ (Basavaraj Bommai) ಅದನ್ನು ಮುಂದುವರೆಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ:  ಸಿದ್ದರಾಮಯ್ಯ ಪಾಕಿಸ್ತಾನ, ಅಫ್ಘಾನಿಸ್ತಾನದಲ್ಲಿ ಸ್ಪರ್ಧಿಸಿದ್ರೆ ಒಳ್ಳೆಯದು – ಅಶೋಕ್ ವ್ಯಂಗ್ಯ 

    ಇತ್ತೀಚಿಗೆ 3 ಈಶಾನ್ಯ ರಾಜ್ಯಗಳಲ್ಲಿ ಚುನಾವಣೆ ನಡೆಯಿತು. ನಾಗಾಲ್ಯಾಂಡ್, ತ್ರಿಪುರ ಮತ್ತು ಮೇಘಾಲಯ ಮೂರು ಕಡೆಗಳಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿದೆ. ಆದರೆ ಕಾಂಗ್ರೆಸ್ ಪಕ್ಷಕ್ಕೆ ತ್ರಿಪುರದಲ್ಲಿ ಮೂರು ಸೀಟ್, ಮೇಘಾಲಯದಲ್ಲಿ 5 ಸೀಟ್ ಮತ್ತು ನಾಗಾಲ್ಯಾಂಡ್‌ನಲ್ಲಿ ಶೂನ್ಯ ಸೀಟ್ ದೊರಕಿದೆ. ರಾಹುಲ್ ಗಾಂಧಿ (Rahul Gandhi) ಏನು ಹೇಳುತ್ತಾರೆ? ಅವರು ಭಾರತದಲ್ಲಿ ಹೇಳುವುದಿಲ್ಲ, ಬದಲಿಗೆ ಇಂಗ್ಲೆಂಡ್‌ನಲ್ಲಿ (England) ಹೇಳುತ್ತಾರೆ. ಅವರು ಇಂಗ್ಲೆಂಡ್‌ಗೆ ಹೋಗಿ ಪ್ರಜಾಪ್ರಭುತ್ವಕ್ಕೆ (Democracy) ಆಪತ್ತಿದೆ ಎಂದು ಹೇಳುತ್ತಾರೆ. ನೀವೇ ಹೇಳಿ ಪ್ರಜಾತಂತ್ರಕ್ಕೆ ಆಪತ್ತಿದೆಯಾ? ರಾಹುಲ್ ಗಾಂಧಿ ಭಾರತದ ಸಾರ್ವಭೌಮತ್ವವನ್ನು ಇಂಗ್ಲೆಂಡ್‌ನಲ್ಲಿ ಚಾಲೆಂಜ್ ಮಾಡಿದ್ದಾರೆ. ಅಮೆರಿಕ (America) ಮತ್ತು ಯೂರೋಪ್ (Europe) ದೇಶಗಳನ್ನು ಭಾರತದ ವಿರುದ್ಧ ಎತ್ತಿಕಟ್ಟುವ ಕೆಲಸವನ್ನು ರಾಹುಲ್ ಗಾಂಧಿ ಮಾಡಿದ್ದಾರೆ. ಹೀಗಾಗಿ ಚುನಾವಣೆಯಲ್ಲಿ ಅವರನ್ನು ಮನೆಗೆ ಕಳುಹಿಸುವ ಮೂಲಕ ಅವರಿಗೆ ತಕ್ಕ ಪಾಠ ಕಲಿಸಬೇಕಿದೆ ಎಂದು ಕಿಡಿ ಕಾರಿದರು. ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಅಸಲಿಮುಖ ಮತ್ತೊಮ್ಮೆ ಕಳಚಿ ಬಿದ್ದಿದೆ: ಅನಿತಾ ಕುಮಾರಸ್ವಾಮಿ ಕಿಡಿ 

    ಕಾಂಗ್ರೆಸ್ ಪಕ್ಷದವರು ಮೋದಿ ಮರ್ ಜಾ.. ಮರ್ ಜಾ ಎನ್ನುತ್ತಿದ್ದಾರೆ. ಆದರೆ ಜನರು ಮಾತ್ರ ಮೋದಿ ಮತ್ ಜಾ.. ಮತ್ ಜಾ ಎನ್ನುತ್ತಿದ್ದಾರೆ. ಕರ್ನಾಟಕ ಸದ್ಯ ಇನೋವೇಷನ್‌ನಲ್ಲಿ ಹಾಗೂ ಸ್ಟಾರ್ಟಪ್‌ನಲ್ಲಿ ನಂಬರ್ ಒನ್ ಇದೆ. ಇನ್ಮುಂದೆಯೂ ನಂಬರ್ ಒನ್ ಸ್ಥಾನದಲ್ಲಿ ಇರಬೇಕು ಎಂದರೆ ಕರ್ನಾಟಕದಲ್ಲಿ ಮತ್ತೆ ಕಮಲ ಅರಳಬೇಕು ಎಂದರು. ಇದನ್ನೂ ಓದಿ: ಮಿಸ್ಡ್‌ಕಾಲ್ ಕೊಟ್ಟು ಬಿಜೆಪಿ ಸದಸ್ಯತ್ವ ಪಡೆದಿದ್ದ ಸೈಲೆಂಟ್ ಸುನಿ – ಸದಸ್ಯತ್ವ ರದ್ದುಗೊಳಿಸಿದ ಪಕ್ಷ

  • ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ – ಸವಾರ ಸ್ಥಳದಲ್ಲಿಯೇ ಸಾವು

    ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ – ಸವಾರ ಸ್ಥಳದಲ್ಲಿಯೇ ಸಾವು

    ತುಮಕೂರು: ತಿಪಟೂರು ತಾಲೂಕಿನ ಹೊನ್ನವಳ್ಳಿ ಹೋಬಳಿಯ ಎಚ್.ಬೈರಾಪುರ ಗೇಟ್ ಬಳಿ ವಿದ್ಯುತ್ ಕಂಬಕ್ಕೆ ದ್ವಿಚಕ್ರ ವಾಹನ ಡಿಕ್ಕಿಯಾಗಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.

    ಮೃತ ವ್ಯಕ್ತಿಯನ್ನು ಚಿಕ್ಕನಾಯಕನಹಳ್ಳಿ ತಾಲೂಕಿನ ಹಂದನಕೆರೆ ಹೋಬಳಿಯ ಲಕ್ಷ್ಮೀಪುರ ಗ್ರಾಮದ ಶ್ರೀಧರ್ (25) ಎಂದು ಗುರುತಿಸಲಾಗಿದೆ. ತಿಪಟೂರಿನ ಹುಚ್ಚನಟ್ಟಿ ಚಿಪ್ಪು ಕಾರ್ಖಾನೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಶ್ರೀಧರ್, ಬುಧವಾರ ರಾತ್ರಿ ಕೆಲಸ ಮುಗಿಸಿಕೊಂಡು ತಮ್ಮ ಬೈಕಿನಲ್ಲಿ ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ಎಚ್.ಬೈರಾಪುರ ಗೇಟ್ ಬಳಿ ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

    ಘಟನೆಯಲ್ಲಿ ಬೈಕ್ ಚಲಾಯಿಸುತ್ತಿದ್ದ ಶ್ರೀಧರ್, ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಿಂಬದಿ ಸವಾರ ಅದೇ ಗ್ರಾಮದ ನಿವಾಸಿ ಮಂಜುನಾಥ್ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುವನ್ನು ಚಿಕಿತ್ಸೆಗೆ ತಿಪಟೂರಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೊನ್ನವಳ್ಳಿಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಇದನ್ನೂ ಓದಿ:ತಂದೆಯಿಂದಲೇ ಮಗನ ಬರ್ಬರ ಹತ್ಯೆ!