Tag: ತಿರುಪತಿ

  • ತಿರುಪತಿಯಲ್ಲಿ ಬರೋಬ್ಬರಿ 100 ಕೋಟಿ ಲೂಟಿ – ಬಿಜೆಪಿ ನಾಯಕ ಆರೋಪ

    ತಿರುಪತಿಯಲ್ಲಿ ಬರೋಬ್ಬರಿ 100 ಕೋಟಿ ಲೂಟಿ – ಬಿಜೆಪಿ ನಾಯಕ ಆರೋಪ

    – ಕಳ್ಳತನದ ಸಿಸಿಟಿವಿ ದೃಶ್ಯ ರಿಲೀಸ್

    ಹೈದರಾಬಾದ್: ತಿರುಪತಿಯ (Tirupati) ವೆಂಕಟೇಶ್ವರನ ಸನ್ನಿಧಿಯಲ್ಲಿ ಬರೋಬ್ಬರಿ 100 ಕೋಟಿ ರೂ. ಕಳ್ಳತನ ಮಾಡಿರುವುದಾಗಿ ಬಿಜೆಪಿ ಮುಖಂಡ ಟಿಟಿಡಿ ಟ್ರಸ್ಟ್ ಸದಸ್ಯ ಭಾನುಪ್ರಕಾಶ್ ರೆಡ್ಡಿ ಆರೋಪಿಸಿದ್ದಾರೆ.

    ಜಗನ್‌ಮೋಹನ್ ರೆಡ್ಡಿ ಆಡಳಿತದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ತಿಮ್ಮಪ್ಪನ ಕಾಣಿಕೆ ಹುಂಡಿಯಿಂದ 100 ಕೋಟಿ ರೂ.ಗೂ ಅಧಿಕ ಹಣ ಕಳ್ಳತನ ಮಾಡಲಾಗಿದೆ ಆರೋಪಿಸಿದ್ದಾರೆ. ಈ ಹಣವನ್ನು ದೇವಸ್ಥಾನದ ಸಿಬ್ಬಂದಿ ರವಿಕುಮಾರ್ ಕಾಣಿಕೆ ಪೆಟ್ಟಿಗೆಯಿಂದ ಕದ್ದಿದ್ದಾರೆ ಎಂದು ತಿಳಿಸಿದ್ದಾರೆ. ಅಲ್ಲದೇ ಈ ಸಂಬಂಧ ಸಿಸಿಟಿವಿ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಿದ್ದಾರೆ.ಇದನ್ನೂ ಓದಿ: ಜೈನ ಮಂದಿರಗಳ ಅರ್ಚಕರಿಗೆ ವೇತನ – ಅಧಿಕೃತ ಆದೇಶ

    ಲೂಟಿ ಮಾಡಿದ ಹಣವನ್ನು ಕೋಟ್ಯಂತರ ರೂ. ಮೌಲ್ಯದ ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಿದ್ದಾರೆ. ಅಲ್ಲದೇ ಈ ಹಣವನ್ನು ಜಗನ್ ರೆಡ್ಡಿ ಅವರ ತಡೆಪಲ್ಲಿ ಅರಮನೆಗೆ ವರ್ಗಾಯಿಸಲಾಗಿದೆ. ಬಳಿಕ ಲೋಕ್ ಅದಾಲತ್‌ನಲ್ಲಿಯೂ ಈ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸಿ, ಎಲ್ಲಾ ಸಾಕ್ಷ್ಯಗಳನ್ನು ನಾಶಪಡಿಸಲಾಗಿದೆ. ಟಿಟಿಡಿಯ ಇತಿಹಾಸದಲ್ಲಿ ನಡೆದ ಅತ್ಯಂತ ದೊಡ್ಡ ಲೂಟಿ ಎಂದು ಹೇಳಿದ್ದಾರೆ.

    ಈ ಹಿನ್ನೆಲೆ ಆಂಧ್ರ ರಾಜಕೀಯದಲ್ಲಿ ಅಲ್ಲೋಲ-ಕಲ್ಲೋಲಕ್ಕೆ ಉಂಟಾಗಿದ್ದು, ಅಲ್ಲದೇ ತಿರುಪತಿ ಭಕ್ತರಲ್ಲೂ ಭಾರೀ ಚರ್ಚೆಗೆ ಕಾರಣವಾಗಿದೆ.ಇದನ್ನೂ ಓದಿ: ರಾಯಚೂರು | ನಟಿ ಸಪ್ತಮಿಗೌಡ ನೋಡಲು ಅಭಿಮಾನಿಗಳ ನೂಕುನುಗ್ಗಲು

  • ಭಕ್ತರಿಗೆ ಸಿಹಿಸುದ್ದಿ; ಮಾದಪ್ಪನ ದರ್ಶನಕ್ಕೆ ತಿರುಪತಿ ಮಾದರಿ ವ್ಯವಸ್ಥೆ

    ಭಕ್ತರಿಗೆ ಸಿಹಿಸುದ್ದಿ; ಮಾದಪ್ಪನ ದರ್ಶನಕ್ಕೆ ತಿರುಪತಿ ಮಾದರಿ ವ್ಯವಸ್ಥೆ

    ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟಕ್ಕೆ ದಿನೇ ದಿನೆ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದೆ. ಮಹದೇಶ್ವರನ ದರ್ಶನಕ್ಕಾಗಿ ಭಕ್ತರು ಗಂಟೆಗಟ್ಟಲೇ ಸರತಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ಉಂಟಾಗುತ್ತಿದೆ. ಹಾಗಾಗಿ, ಭಕ್ತರು ಸುಗಮವಾಗಿ ಮಹದೇಶ್ವರನ ದರ್ಶನ ಪಡೆಯಲು ಅನುಕೂಲವಾಗುವಂತೆ ತಿರುಪತಿ ಮಾದರಿಯಲ್ಲಿ ಕ್ಯೂ ಕಾಂಪ್ಲೆಕ್ಸ್ ನಿರ್ಮಾಣ ಮಾಡಲಾಗುತ್ತಿದೆ.

    ಮಲೆ ಮಹದೇಶ್ವರ ಬೆಟ್ಟ (Male Mahadeshwara Hills) ದಕ್ಷಿಣ ಭಾರತದ ಪ್ರಮುಖ ಯಾತ್ರಾ ಸ್ಥಳ. ಕೋಟ್ಯಂತರ ಭಕ್ತರ ಆರಾಧ್ಯ ದೈವ ಮಲೆ ಮಹದೇಶ್ವರನ ಸನ್ನಿಧಿಗೆ ನಿತ್ಯ ಸಾವಿರಾರು ಭಕ್ತರು ಬರುತ್ತಿದ್ದಾರೆ. ಅದರಲ್ಲೂ ಅಮಾವಾಸ್ಯೆ, ಜಾತ್ರೆ ಹಾಗೂ ರಜಾದಿನಗಳಲ್ಲಿ ಭಕ್ತರ ಸಂಖ್ಯೆ ಲಕ್ಷ ದಾಟುತ್ತದೆ. ಶಕ್ತಿ ಯೋಜನೆ ಜಾರಿಯಾದ ನಂತರ ಭಕ್ತರು ಸಂಖ್ಯೆ ಮತ್ತಷ್ಟು ಹೆಚ್ಚಾಗಿದ್ದು, ಮಹದೇಶ್ವರನ ದರ್ಶನ ಪಡೆಯಲು ಭಕ್ತರು ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ಇದೆ. ಹಾಗಾಗಿ, ಭಕ್ತರು ಸುಗಮ ಹಾಗೂ ಬೇಗ ಮಹದೇಶ್ವರನ ದರ್ಶನ ಪಡೆಯಲು ಅನುಕೂಲವಾಗುವಂತೆ ತಿರುಪತಿ ಮಾದರಿಯಲ್ಲಿ ಕ್ಯೂ ‌ಕಾಂಪ್ಲೆಕ್ಸ್ ನಿರ್ಮಿಸಲಾಗುತ್ತಿದೆ. ಈ ಕಾಂಪ್ಲೆಕ್ಸ್‌ಗಳಲ್ಲಿ ಭಕ್ತರು ಕುಳಿತುಕೊಳ್ಳಲು ಆಸನ ವ್ಯವಸ್ಥೆ, ಕುಡಿಯುವ ನೀರಿನ ಸೌಲಭ್ಯ, ಉಪಾಹಾರ, ಮಕ್ಕಳ ಆರೈಕೆ ಕೇಂದ್ರ ಮೊದಲಾದ ಸೌಲಭ್ಯಗಳನ್ನು ಒಳಗೊಂಡಿದೆ.

    ಬೆಟ್ಟಕ್ಕೆ ಬರುವ ಭಕ್ತರು ಮಹದೇಶ್ವರನ ದರ್ಶನ ಪಡೆಯಲು ಮೊದಲೇ ಸಮಯ ನಿಗದಿ ಮಾಡಲು ಸಹ ನಿರ್ಧರಿಸಲಾಗಿದೆ. ಇದರಿಂದ ಭಕ್ತರು ದೇವಸ್ಥಾನ ಆವರಣದಲ್ಲಿ ಅನವಶ್ಯಕವಾಗಿ ಕಾಯುವುದು ತಪ್ಪಲಿದೆ. ಕ್ಯೂ ಕಾಂಪ್ಲೆಕ್ಸ್ ಅಲ್ಲದೇ ಒಂದೇ ಬಾರಿಗೆ 4 ಸಾವಿರ ಮಂದಿ ಕುಳಿತು ಭೋಜನ ಮಾಡುವ ಸುಸಜ್ಜಿತ ದಾಸೋಹ ಭವನವನ್ನು ನಿರ್ಮಿಸಲಾಗುತ್ತಿದೆ.

    ಎಲ್ಲವೂ ಅಂದುಕೊಂಡಂತೆ ಆದರೆ ಮೂರು ತಿಂಗಳ ಒಳಗೆ ತಿರುಪತಿ ಮಾದರಿ ಕ್ಯೂ ಕಾಂಪ್ಲೆಕ್ಸ್ ಹಾಗೂ ಸುಸಜ್ಜಿತ ದಾಸೋಹ ಭವನ ನಿರ್ಮಾಣ ಕಾಮಗಾರಿ ಮುಗಿಯಲಿದೆ. ಇದೇ ವೇಳೆ, ಕಾಲ್ನಡಿಗೆಯಲ್ಲಿ ಬರುವ ಭಕ್ತರಿಗೆ ಬೆಟ್ಟದಿಂದ ಮಹದೇಶ್ವರ ಬೆಟ್ಟದವರೆಗೆ ತಿರುಪತಿ ಮಾದರಿ ಮೆಟ್ಟಿಲು ನಿರ್ಮಾಣ ಕಾಮಗಾರಿಯು ಪೂರ್ಣಗೊಳ್ಳುವ ನಿರೀಕ್ಷೆಯಿದೆ.

  • ತಿರುಪತಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌

    ತಿರುಪತಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌

    – ತಿರುಮಲ ಭಕ್ತರಿಗೆ ಅನ್ನಪ್ರಸಾದ ಬಡಿಸಿದ ಸಚಿವೆ

    ಅಮರಾವತಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ತಿರುಪತಿಗೆ (Tirupati) ಭೇಟಿ ನೀಡಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

    ಟಿಟಿಡಿ ಅಧಿಕಾರಿಗಳು ಅವರಿಗೆ ಭವ್ಯ ಸ್ವಾಗತ ನೀಡಿ ದರ್ಶನಕ್ಕೆ ವ್ಯವಸ್ಥೆ ಮಾಡಿದರು. ದರ್ಶನದ ನಂತರ, ರಂಗನಾಯಕಕುಲ ಮಂಟಪದಲ್ಲಿ ವಿದ್ವಾಂಸರು ಅವರನ್ನು ಆಶೀರ್ವದಿಸಿ ದೇವರ ಕಾಣಿಕೆಗಳನ್ನು ನೀಡಿದರು. ಇದನ್ನೂ ಓದಿ: ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಪ್ರಮಾಣ ಸ್ವೀಕಾರ

    ಗುರುವಾರ ಸಂಜೆ ಕುಟುಂಬ ಸದಸ್ಯರೊಂದಿಗೆ ತಿರುಮಲ ಬೆಟ್ಟದ ಪಟ್ಟಣಕ್ಕೆ ನಿರ್ಮಲಾ ಸೀತಾರಾಮನ್ ಆಗಮಿಸಿದ್ದರು. ಶ್ರೀ ಗಾಯತ್ರಿ ವಿಶ್ರಾಂತಿ ಗೃಹಕ್ಕೆ ಆಗಮಿಸಿದ ಅವರನ್ನು ಟಿಟಿಡಿ ಹೆಚ್ಚುವರಿ ಇಒ ವೆಂಕಯ್ಯ ಚೌಧರಿ ಆತ್ಮೀಯವಾಗಿ ಸ್ವಾಗತಿಸಿದ್ದರು.

    ಕೇಂದ್ರ ಸಚಿವರು ಶುಕ್ರವಾರ ಬೆಳಗ್ಗೆ ತಿರುಪತಿಗೆ ತೆರಳಿ ಪೂಜೆ ಸಲ್ಲಿಸಿದರು. ಸಿವಿಎಸ್ಒ ಮುರಳೀಕೃಷ್ಣ, ಸ್ವಾಗತ ಉಪ ಕಾರ್ಯನಿರ್ವಾಹಕ ಅಧಿಕಾರಿ ಭಾಸ್ಕರ್ ಇತರರು ಉಪಸ್ಥಿತರಿದ್ದರು. ಪೂಜೆ ಬಳಿಕ ನಿರ್ಮಲಾ ಸೀತಾರಾಮನ್‌ ಅವರು ಆಂಧ್ರಪ್ರದೇಶದ ತಿರುಮಲದಲ್ಲಿರುವ ವೆಂಗಮಾಂಬ ಅನ್ನಪ್ರಸಾದ ಸಂಕೀರ್ಣದಲ್ಲಿ ಭಕ್ತರಿಗೆ ಪ್ರಸಾದ ಬಡಿಸಿದರು.

    ಮತ್ತೊಂದೆಡೆ, ಸಂಗೀತಗಾರ ಅನಿರುದ್ಧ್ ರವಿಚಂದರ್ ಅವರು ಇಂದು ಮುಂಜಾನೆ ಅಭಿಷೇಕ ಸೇವೆಯಲ್ಲಿ ಭಾಗವಹಿಸಿ ವೆಂಕಟೇಶ್ವರನಿಗೆ ಪ್ರಾರ್ಥನೆ ಸಲ್ಲಿಸಿದರು. ದೇವಾಲಯದ ಅಧಿಕಾರಿಗಳು ಅವರಿಗೆ ತೀರ್ಥ ಪ್ರಸಾದವನ್ನು ನೀಡಿದರು. ಇದನ್ನೂ ಓದಿ: 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಇಂದು ಪ್ರಮಾಣವಚನ ಸ್ವೀಕಾರ

  • ತಿರುಪತಿಯಿಂದ ರೈಲಿನಲ್ಲಿ ಬರುತ್ತಿದ್ದಾಗ ಹೃದಯಾಘಾತ – ಬಾಗಲಕೋಟೆ ವ್ಯಕ್ತಿ ಸಾವು

    ತಿರುಪತಿಯಿಂದ ರೈಲಿನಲ್ಲಿ ಬರುತ್ತಿದ್ದಾಗ ಹೃದಯಾಘಾತ – ಬಾಗಲಕೋಟೆ ವ್ಯಕ್ತಿ ಸಾವು

    ಬಾಗಲಕೋಟೆ: ಜಿಲ್ಲೆಯ ಕಲಾದಗಿ ಗ್ರಾಮದ ವ್ಯಕ್ತಿಯೊಬ್ಬರು ಇಂದು ಮುಂಜಾನೆ ತಿರುಪತಿಯಿಂದ (Tirupati) ಕಲಾದಗಿ ಕಡೆಗೆ ಬರುವಾಗ ರೈಲಿನಲ್ಲಿ ಹೃದಯಘಾತದಿಂದ (Heart Attack) ಮೃತಪಟ್ಟಿದ್ದಾರೆ.

    ಕಲಾದಗಿಯ ಕಟ್ಟಡ ಕಾರ್ಮಿಕನಾಗಿದ್ದ ಯಲ್ಲಪ್ಪ ಅಡಗಲ್ಲ (35) ತಿರುಪತಿಗೆ ತೆರಳಿದ್ದರು. ಇಂದು ಬೆಳಗ್ಗೆ ತಿರುಪತಿಯಿಂದ ಹುಬ್ಬಳಿಗೆ ಬರುತ್ತಿದ್ದಾಗ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಬಾಗಲಕೋಟೆಯ ತೋಟಗಾರಿಕೆ ವಿವಿ ಮುಚ್ಚೋದಿಲ್ಲ- ಚೆಲುವರಾಯಸ್ವಾಮಿ

     

    ಮುಂಜಾನೆ 7:30 ರ ವೇಳೆಗೆ ಯಲ್ಲಪ್ಪ ಮೃತಪಟ್ಟಿದ್ದಾರೆ. ಸದ್ಯ ಶವ ಆಂಧ್ರಪ್ರದೇಶದ ನಂದನೂರು ರೈಲ್ವೆ ನಿಲ್ದಾಣದಲ್ಲಿ ಇಳಿಸಿಕೊಳ್ಳಲಾಗಿದ್ದು, ರೈಲ್ವೆ ಪೊಲೀಸರು ಮೃತನ ಕುಟುಂಬಸ್ಥರಿಗೆ ವಿಷಯ ತಿಳಿಸಿದ್ದಾರೆ.

  • ತಿರುಪತಿಯಲ್ಲಿ ಮದುವೆ ಆಗುವ ಕನ್ನಡಿಗರಿಗೆ ಗುಡ್‌ನ್ಯೂಸ್ – ತಿರುಮಲದ ಕಲ್ಯಾಣ ಮಂಟಪದಲ್ಲಿ ಮೊದಲ ಮದುವೆ

    ತಿರುಪತಿಯಲ್ಲಿ ಮದುವೆ ಆಗುವ ಕನ್ನಡಿಗರಿಗೆ ಗುಡ್‌ನ್ಯೂಸ್ – ತಿರುಮಲದ ಕಲ್ಯಾಣ ಮಂಟಪದಲ್ಲಿ ಮೊದಲ ಮದುವೆ

    ಅಮರಾವತಿ: ತಿರುಪತಿಗೆ (Tirupati) ತೆರಳುವ ಕರ್ನಾಟಕದ (Karnataka) ಭಕ್ತರಿಗೆ ಮುಜರಾಯಿ ಇಲಾಖೆ (Muzrai Department) ಗುಡ್ ನ್ಯೂಸ್ ನೀಡಿದೆ. ತಿರುಮಲದಲ್ಲಿ ನಿರ್ಮಿಸಿರುವ ಕಲ್ಯಾಣ ಮಂಟಪ ಇಂದಿನಿಂದ ಸೇವೆಗೆ ಸಿದ್ಧವಾಗಿದೆ. ತಿರುಮಲ ಕಲ್ಯಾಣ ಮಂಟಪದಲ್ಲಿ ಕರ್ನಾಟಕದ ಜೋಡಿಯ ಮೊದಲ ಮದುವೆ (Marriage) ಆಗುತ್ತಿದೆ. ಈಗಾಗಲೇ ಎಂಟು ಮದುವೆಗಳು ಬುಕ್ ಆಗಿವೆ.

    ಮುಜರಾಯಿ ಇಲಾಖೆಯಿಂದ ತಿರುಪತಿಗೆ ತೆರಳುವ ಕರ್ನಾಟಕ ರಾಜ್ಯದ ಭಕ್ತರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕಳೆದ ತಿಂಗಳು ತಿರುಮಲದಲ್ಲಿ ರಾಜ್ಯ ಮುಜರಾಯಿ ಇಲಾಖೆ ಕಲ್ಯಾಣ ಮಂಟಪ ಉದ್ಘಾಟನೆ ಮಾಡಿತ್ತು. ಈಗ ಈ ಕಲ್ಯಾಣ ಮಂಟಪದಲ್ಲಿ ಮೊದಲ ಮದುವೆ ಇಂದು ನಡೆಯುತ್ತಿದೆ. ಕರ್ನಾಟಕ ರಾಜ್ಯದ ಜೋಡಿಗಳ ಮೊದಲ ಮದುವೆ ನಡೆಯುತ್ತಿದ್ದು. ತಿರುಮಲ ಕಲ್ಯಾಣ ಮಂಟಪದಲ್ಲಿ ಮದುವೆಗಾಗಿ ರಾಜ್ಯದ ವಿವಿಧ ಜಿಲ್ಲೆಯ 8 ಜೋಡಿ ಮದುವೆಗೆ ಬುಕ್ಕಿಂಗ್ ಮಾಡಿದ್ದಾರೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ತಾಯಿಗೆ ಬೆಂಕಿ – ಶವದ ಪಕ್ಕವೇ ಮಲಗಿದ್ದ ಪುತ್ರ ಅರೆಸ್ಟ್‌

    ಇನ್ನೂ ನೂತನವಾಗಿ ಇರುವ ಕಲ್ಯಾಣ ಮಂಟಪದಲ್ಲಿ 36 ಕೊಠಡಿಗಳು ಇದ್ದು, 500 ಆಸನದ ವ್ಯವಸ್ಥೆ ಇದೆ. ಒಂದು ಮದುವೆಗೆ ಜಿಎಸ್‌ಟಿ ಸೇರಿಸಿ ಮೂರುವರೆ ಲಕ್ಷ ರೂ. ಆಗಲಿದೆ. ಸದ್ಯಕ್ಕೆ ಕಲ್ಯಾಣ ಮಂಟಪಕ್ಕೆ ತೆರಳಿ ಬುಕ್ಕಿಂಗ್ ಮಾಡುತ್ತಿದ್ದು, ಶೀಘ್ರದಲ್ಲೇ ಆನ್‌ಲೈನ್ ವ್ಯವಸ್ಥೆ ಕೂಡ ಜಾರಿ ಮಾಡಲಿದ್ದಾರೆ. ಇದನ್ನೂ ಓದಿ: ಖಾಸಗಿ ಅಂಬುಲೆನ್ಸ್‌ಗಳಿಗೆ ಶಾಕ್ ಕೊಟ್ಟ ಸರ್ಕಾರ- KPME ನಡಿ ಲೈಸೆನ್ಸ್ ಕಡ್ಡಾಯ

    ಒಟ್ಟಾರೆ ತಿರುಪತಿಗೆ ತೆರಳೋ ಕರ್ನಾಟಕ ಭಕ್ತರು ತಿರುಪತಿಯಲ್ಲೆ ಮದುವೆ ಮಾಡಬೇಕು ಎಂಬ ಇಚ್ಛೆ ಇದ್ದರೆ ಮುಜರಾಯಿ ಇಲಾಖೆ ಅವಕಾಶ ಕಲ್ಪಿಸಿದೆ. ಬುಕ್ಕಿಂಗ್ ಮಾಡಿ ತಿರುಮಲದಲ್ಲಿ ಮದುವೆ ಆಗಬಹುದು. ಇದನ್ನೂ ಓದಿ: ಸೇನಾ ವಾಹನದ ಮೇಲೆ ಬಿದ್ದ ಬಂಡೆ – ಇಬ್ಬರು ಯೋಧರು ಸಾವು

  • ತಿರುಪತಿಯಲ್ಲಿ ಭಕ್ತರ ಶೀಘ್ರ ದರ್ಶನಕ್ಕಾಗಿ `ಶ್ರೀವಾಣಿ ದರ್ಶನ’ ಟಿಕೆಟ್ ಸೇವೆ ಆರಂಭ

    ತಿರುಪತಿಯಲ್ಲಿ ಭಕ್ತರ ಶೀಘ್ರ ದರ್ಶನಕ್ಕಾಗಿ `ಶ್ರೀವಾಣಿ ದರ್ಶನ’ ಟಿಕೆಟ್ ಸೇವೆ ಆರಂಭ

    – 60 ಲಕ್ಷ ರೂ. ವೆಚ್ಚದಲ್ಲಿ ಹೊಸ ಕೌಂಟರ್‌ಗಳ ನಿರ್ಮಾಣ

    ಹೈದರಾಬಾದ್: ತಿರುಪತಿಯಲ್ಲಿ (Tirupati) ಭಕ್ತರ ಶೀಘ್ರ ದರ್ಶನ ಮತ್ತು ಭಕ್ತರ ಕಾಯುವ ಸಮಯ ಕಡಿಮೆ ಮಾಡುವ ಸಲುವಾಗಿ ಟಿಟಿಡಿ (TTD) ದೇವಸ್ಥಾನ ಮಂಡಳಿ ಹೊಸ `ಶ್ರೀವಾಣಿ ದರ್ಶನ’ ಟಿಕೆಟ್ ಸೇವೆ ಆರಂಭಿಸಿದೆ.

    `ಶ್ರೀವಾಣಿ ದರ್ಶನ’ ಟಿಕೆಟ್ ಮೂಲಕ ಭಕ್ತರು ಕಾಯುವ ಸಮಯ ಕಡಿಮೆಯಾಗಲಿದೆ ಎಂದು ತಿರುಮಲ ತಿರುಪತಿ ದೇವಸ್ಥಾನ ಮಂಡಳಿ ತಿಳಿಸಿದೆ. ಸದ್ಯ ನೂತನ ಶ್ರೀವಾಣಿ ದರ್ಶನ ಟಿಕೆಟ್ ವಿತರಣಾ ಕೇಂದ್ರವನ್ನು ತಿರುಮಲದಲ್ಲಿ ತೆರೆಯಲಾಗಿದೆ.

    ಈ ಕುರಿತು ಟಿಟಿಡಿ ಅಧ್ಯಕ್ಷ ಬಿ.ಆರ್.ನಾಯ್ಡು (BR Naidu) ಮಾತನಾಡಿ, ಶ್ರೀವಾಣಿ ದರ್ಶನ ಟಿಕೆಟ್‌ಗಳಿಗಾಗಿ ಭಕ್ತರು ಬೆಳಿಗ್ಗೆ 5 ಗಂಟೆಯಿಂದಲೇ ಸರತಿ ಸಾಲಿನಲ್ಲಿ ನಿಲ್ಲುತ್ತಿದ್ದಾರೆ. ಈ ಸಂದರ್ಭದಲ್ಲಿ, ಟಿಕೆಟ್‌ಗಳನ್ನು ಸುಲಭವಾಗಿ ನೀಡಲು ಅತ್ಯಾಧುನಿಕ ಮೂಲಸೌಕರ್ಯದೊಂದಿಗೆ 60 ಲಕ್ಷ ರೂ. ವೆಚ್ಚದಲ್ಲಿ ಹೊಸ ಕೌಂಟರ್‌ಗಳನ್ನು ನಿರ್ಮಿಸಲಾಗಿದೆ ಎಂದು ಹೇಳಿದ್ದಾರೆ.

  • ಅನ್ಯ ಧರ್ಮಗಳ ಪಾಲನೆ – ತಿರುಪತಿಯ ನಾಲ್ವರು ನೌಕರರ ಅಮಾನತು

    ಅನ್ಯ ಧರ್ಮಗಳ ಪಾಲನೆ – ತಿರುಪತಿಯ ನಾಲ್ವರು ನೌಕರರ ಅಮಾನತು

    ಅಮರಾವತಿ: ಹಿಂದೂಗಳಲ್ಲದವರು, ಇತರೆ ಧರ್ಮಗಳನ್ನು ಪಾಲನೆ ಮಾಡಿದ ಹಿನ್ನೆಲೆಯಲ್ಲಿ ತಿರುಪತಿ (TTD) ನಾಲ್ವರು ನೌಕರರನ್ನು ಅಮಾನತು ಮಾಡಲಾಗಿದೆ.

    ಉಪ ಕಾರ್ಯನಿರ್ವಾಹಕ ಎಂಜಿನಿಯರ್ (ಗುಣಮಟ್ಟ ನಿಯಂತ್ರಣ) ಬಿ. ಎಲಿಜರ್, ಎಸ್‌ವಿ ಆಯುರ್ವೇದ ಫಾರ್ಮಸಿಯ ಜಿ. ಅಸುಂತ, ಬಾಲಾಜಿ ಇನ್‌ಸ್ಟಿಟ್ಯೂಟ್ ಆಫ್ ಸರ್ಜರಿ, ರಿಸರ್ಚ್ ಅಂಡ್ ರಿಹ್ಯಾಬಿಲಿಟೇಶನ್ ಫಾರ್ ದಿ ಡಿಸೇಬಲ್ಡ್ (ಬಿಐಆರ್‌ಆರ್‌ಡಿ) ಆಸ್ಪತ್ರೆಯ ನರ್ಸ್ ಎಸ್.ರೋಸಿ ಮತ್ತು ಗ್ರೇಡ್-ಐ ಫಾರ್ಮಾಸಿಸ್ಟ್ ಎಂ. ಪ್ರೇಮಾವತಿ ಅಮಾನತುಗೊಂಡ ನೌಕರರು ಎಂದು ಟಿಟಿಡಿ ಅಧಿಕೃತ ವಕ್ತಾರರು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಹೈದರಾಬಾದ್‌ನಲ್ಲಿ ಮಳೆ ಅವಾಂತರ – ಫ್ಲೈಓವರ್, ರಸ್ತೆಗಳು ಮುಳುಗಡೆ

    ಮೇ ತಿಂಗಳಲ್ಲಿ ಮಂಡಳಿಯು ನಡೆಸುತ್ತಿರುವ ವಿವಿಧ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಹಿಂದೂಯೇತರರನ್ನು ಆಂಧ್ರಪ್ರದೇಶದ ಇತರ ಸರ್ಕಾರಿ ಇಲಾಖೆಗಳಿಗೆ ವರ್ಗಾಯಿಸಲಾಗುವುದು ಅಥವಾ ಅದರ ಸ್ವಯಂಪ್ರೇರಿತ ನಿವೃತ್ತಿ ಯೋಜನೆಯನ್ನು ಆಯ್ಕೆ ಮಾಡಿಕೊಳ್ಳಬಹುದು ಎಂದು ಟಿಟಿಡಿ ಹೇಳಿತ್ತು.

    ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಬಂಡಿ ಸಂಜಯ್ ಕುಮಾರ್ ಅವರು ಕಳೆದ ವಾರ ತಿರುಮಲಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ, ತಿರುಮಲ ತಿರುಪತಿ ದೇವಸ್ಥಾನಗಳಲ್ಲಿ (ಟಿಟಿಡಿ) ಹಿಂದೂಯೇತರರನ್ನು ನೇಮಿಸಿಕೊಳ್ಳುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಜು.23-26ರವರೆಗೆ ಪ್ರಧಾನಿ ಮೋದಿ ಬ್ರಿಟನ್, ಮಾಲ್ಡೀವ್ಸ್‌ಗೆ ಭೇಟಿ

    ಅಮಾನತುಗೊಂಡ ನೌಕರರು, ಸಂಸ್ಥೆಯ ನೀತಿ ಸಂಹಿತೆಯನ್ನು ಪಾಲಿಸದ ಮತ್ತು ಹಿಂದೂ ಧಾರ್ಮಿಕ ಸಂಘಟನೆಯ ನೌಕರರಾಗಿ ತಮ್ಮ ಕರ್ತವ್ಯಗಳನ್ನು ನಿರ್ವಹಿಸುವಾಗ ಬೇಜವಾಬ್ದಾರಿಯಿಂದ ವರ್ತಿಸಿದ ಆರೋಪವನ್ನು ಹೊತ್ತಿದ್ದಾರೆ.

    ಅನ್ಯ ಧರ್ಮವನ್ನು ಆಚರಿಸಿದ ಆರೋಪದ ಮೇಲೆ ಟಿಟಿಡಿ ಜು.9 ರಂದು ತನ್ನ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಎ. ರಾಜಶೇಖರ್ ಬಾಬು ಅವರನ್ನು ಅಮಾನತುಗೊಳಿಸಿತ್ತು. ಬಾಬು ಅವರು ತಿರುಪತಿ ಜಿಲ್ಲೆಯ ತಮ್ಮ ಹುಟ್ಟೂರು ಪುತ್ತೂರಿನಲ್ಲಿ ಪ್ರತಿ ಭಾನುವಾರ ಚರ್ಚ್‌ಗೆ ಹೋಗಿ ಪ್ರಾರ್ಥನೆ ಸಲ್ಲಿಸುತ್ತಿದ್ದರು ಎಂದು ಟಿಟಿಡಿ ಹೇಳಿಕೆ ತಿಳಿಸಿದೆ.

  • ಚಿಕ್ಕಮಗಳೂರು – ತಿರುಪತಿ ರೈಲಿಗೆ ಸೋಮಣ್ಣ ಚಾಲನೆ

    ಚಿಕ್ಕಮಗಳೂರು – ತಿರುಪತಿ ರೈಲಿಗೆ ಸೋಮಣ್ಣ ಚಾಲನೆ

    • ಕುರ್ಚಿ ಕದನ – ಸಿಎಂ ಪಂಚೆ ಬೇರೆಯವ್ರು ಎಳಿತಿದ್ದಾರೋ ಏನೋ ಗೊತ್ತಿಲ್ಲ

    ಚಿಕ್ಕಮಗಳೂರು: ನಗರದಿಂದ (Chikkamagaluru) ತಿರುಪತಿಗೆ (Tirupati) ಸಂಚರಿಸುವ ರೈಲಿಗೆ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ (V.Somanna) ಚಾಲನೆ ನೀಡಿದರು. ಈ ಮೂಲಕ ಜಿಲ್ಲೆಯ ಜನರ ದಶಕಗಳ ಕನಸು ಇಂದು ನನಸಾಗಿದೆ.

    ಚಿಕ್ಕಮಗಳೂರು ರೈಲ್ವೆ ನಿಲ್ದಾಣದಲ್ಲಿ ಸೋಮಣ್ಣ ಹಸಿರು ನಿಶಾನೆ ತೋರುವ ಮೂಲಕ ರೈಲಿಗೆ ಚಾಲನೆ ನೀಡಿದರು. ಈ ವೇಳೆ, ತಿರುಪತಿಗೆ ಹೊರಟಿದ್ದ ವೃದ್ಧೆಯೊಬ್ಬರು ರೈಲಿಗೆ ಮೂರು ಬಾರಿ ನಮಸ್ಕರಿಸಿದರು. ಇದನ್ನೂ ಓದಿ: ಚಿಕ್ಕಮಗಳೂರು-ತಿರುಪತಿ ನಡುವೆ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಸೇವೆ ಪ್ರಾರಂಭ

    ರೈಲಿಗೆ ಚಾಲನೆ ನೀಡಿ, ಬಳಿಕ ಸಿಎಂ ಕುರ್ಚಿ ಕದನದ ವಿಚಾರವಾಗಿ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ಸಿಎಂ ಆಗಿ ನಾನೇ ಇರ್ತೀನಿ, ನಾನೇ ಇರ್ತೀನಿ ಎನ್ನುತ್ತಾರೆ. ನೀವು ಇದ್ದೀರೋ ಇಲ್ವೋ? ನಿಮ್ಮ ಪಂಚೆ ಬೇರೆಯವರು ಎಳೆದಿದ್ದಾರೋ ಏನೋ ಗೊತ್ತಿಲ್ಲ. ಆ ಕೆಲಸ ಮಾಡುತ್ತಿರುವವರು ನಿಮ್ಮವರೇ ಹೊರತು ನಾವಲ್ಲ. ಜನರನ್ನು ದಾರಿ ತಪ್ಪಿಸಲು ಡಿಕೆಶಿ-ಸಿದ್ದು ಇಬ್ಬರು ನಾಟಕ ಮಾಡುತ್ತಿದ್ದಾರೆ. ಇವರ ನಾಟಕಕ್ಕೆ ಕಾಂಗ್ರೆಸ್ ಹೈಕಮಾಂಡ್ ಕೃಪಾಪೋಷಿತ ನಾಟಕ ಮಂಡಳಿ. ಏನಾದ್ರೂ ಆಗಲಿ ಜನಕ್ಕೆ ಒಳ್ಳೆಯದನ್ನ ಮಾಡಲಿ. ರಾಜ್ಯದಲ್ಲಿ ಒಂದಾದರೂ ಕೆಲಸ ಆಗ್ತಿದ್ಯಾ ಎಂದು ಪ್ರಶ್ನಿಸಿದ್ದಾರೆ.

    ಸಿದ್ದರಾಮಯ್ಯ (Siddaramaiah) ಸಾಹೇಬ್ರೆ ಕಳೆದೋಗಿದ್ದೀರಾ? ನಿಮಗೆ ಯಾರು ತೊಂದರೆ ಮಾಡಿರೋದು ನಾವಾ? ನಿಮ್ಮ ಪಕ್ಷದವರೇ ನಿಮಗೆ ತೊಂದರೆ ಮಾಡಿರೋದು. ಗುಂಡಿ ಮುಚ್ಚಲು ಆಗಿಲ್ಲ, ಬೇರೆ ಕೆಲಸಗಳು ಆಗುತ್ತಿಲ್ಲ, ಅದರ ಬಗ್ಗೆ ನೋಡಿ. ಒಳ ಒಪ್ಪಂದ ಮಾಡಿಕೊಂಡು ಜನರನ್ನ ದಾರಿ ತಪ್ಪಿಸುತ್ತಿದ್ದಾರೆ ಎಂದು ವಾಗ್ದಾಳಿ ನೆಡೆಸಿದ್ದಾರೆ. ಇದನ್ನೂ ಓದಿ: ಸಿಎಂ ಉತ್ತರ ಕೊಟ್ಮೇಲೆ ಎಲ್ಲಾ ಮುಗೀತು; ದೆಹಲಿಯಿಂದ ವಾಪಸ್ಸಾದ ಡಿಕೆಶಿ ಫಸ್ಟ್ ರಿಯಾಕ್ಷನ್

  • ಚಿಕ್ಕಮಗಳೂರು-ತಿರುಪತಿ ನಡುವೆ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಸೇವೆ ಪ್ರಾರಂಭ

    ಚಿಕ್ಕಮಗಳೂರು-ತಿರುಪತಿ ನಡುವೆ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಸೇವೆ ಪ್ರಾರಂಭ

    ಬೆಂಗಳೂರು: ಆಂಧ್ರಪ್ರದೇಶ ಮತ್ತು ಕರ್ನಾಟಕದ ಮಲೆನಾಡು ಪ್ರದೇಶದ ನಡುವೆ ರೈಲು ಸಂಪರ್ಕವನ್ನು ವಿಸ್ತರಿಸುವ ಉದ್ದೇಶದಿಂದ, ರೈಲ್ವೆ ಮಂಡಳಿ ತಿರುಪತಿ ಮತ್ತು ಚಿಕ್ಕಮಗಳೂರು (Chikkamagaluru) ನಡುವಿನ ಹೊಸ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಸೇವೆ ಪ್ರಾರಂಭಕ್ಕೆ ಅನುಮೋದನೆ ನೀಡಿದೆ.

    ಉದ್ಘಾಟನಾ ವಿಶೇಷ ರೈಲು:
    ಈ ಸೇವೆಯ ಪ್ರಾರಂಭವನ್ನು ಸೂಚಿಸುವಂತೆ, ದಕ್ಷಿಣ ಮಧ್ಯ ರೈಲ್ವೆ ಒಂದು ಬಾರಿ ನಡೆಯುವ ಉದ್ಘಾಟನಾ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ನಡೆಸಲಿದೆ. ರೈಲು ಸಂಖ್ಯೆ 07424 ಚಿಕ್ಕಮಗಳೂರು–ತಿರುಪತಿ ಉದ್ಘಾಟನಾ ವಿಶೇಷ ಎಕ್ಸ್‌ಪ್ರೆಸ್ ಜುಲೈ 11 (ಶುಕ್ರವಾರ) ರಂದು ಚಲಿಸಲಿದ್ದು, ಮಧ್ಯಾಹ್ನ 12 ಕ್ಕೆ ಚಿಕ್ಕಮಗಳೂರಿನಿಂದ ಹೊರಟು, ಮರುದಿನ ಬೆಳಗ್ಗೆ 02:30 ಕ್ಕೆ ತಿರುಪತಿಗೆ ತಲುಪಲಿದೆ. ಈ ರೈಲಿಗೆ ಒಟ್ಟು 18 ಎಲ್‌ಹೆಚ್‌ಬಿ ಕೋಚ್‌ಗಳು ಇರುತ್ತವೆ. ಇದನ್ನೂ ಓದಿ: SSLC ಫಲಿತಾಂಶ ಹೆಚ್ಚಳಕ್ಕೆ ಕ್ರಮ – 29 ಅಂಶಗಳ ಕಾರ್ಯಕ್ರಮ ಅನುಷ್ಠಾನಗೊಳಿಸಿದ ಶಿಕ್ಷಣ ಇಲಾಖೆ

    ನಿಯಮಿತ ರೈಲು ಸೇವೆಗಳು:
    1. ರೈಲು ಸಂಖ್ಯೆ 17423 ತಿರುಪತಿ – ಚಿಕ್ಕಮಗಳೂರು ಸಾಪ್ತಾಹಿಕ ಎಕ್ಸ್‌ಪ್ರೆಸ್ 2025 ಜುಲೈ 17 (ಗುರುವಾರ)ರಿಂದ ನಿಯಮಿತ ಸೇವೆ ಪ್ರಾರಂಭವಾಗಲಿದೆ.
    2. ರೈಲು ಸಂಖ್ಯೆ 17424 ಚಿಕ್ಕಮಗಳೂರು – ತಿರುಪತಿ ಸಾಪ್ತಾಹಿಕ ಎಕ್ಸ್‌ಪ್ರೆಸ್ 2025 ಜುಲೈ 18 (ಶುಕ್ರವಾರ)ರಿಂದ ನಿಯಮಿತ ಸೇವೆ ಆರಂಭವಾಗಲಿದೆ.

    ವೇಳಾಪಟ್ಟಿ ಮತ್ತು ನಿಲ್ದಾಣಗಳು: ರೈಲು ಸಂಖ್ಯೆ 17423 ತಿರುಪತಿ – ಚಿಕ್ಕಮಗಳೂರು ಸಾಪ್ತಾಹಿಕ ಎಕ್ಸ್‌ಪ್ರೆಸ್ ಪ್ರತಿ ಗುರುವಾರ ರಾತ್ರಿ 9 ಗಂಟೆಗೆ ತಿರುಪತಿಯಿಂದ ಹೊರಟು, ಶುಕ್ರವಾರ ಬೆಳಗ್ಗೆ 10:30 ಕ್ಕೆ ಚಿಕ್ಕಮಗಳೂರಿಗೆ ತಲುಪಲಿದೆ. ಈ ಮಾರ್ಗದಲ್ಲಿ ರೈಲು ಈ ಕೆಳಗಿನ ನಿಲ್ದಾಣಗಳಲ್ಲಿ ನಿಲ್ಲಲಿದೆ:
    ಪಕಾಲಾ (21:28/21:30), ಚಿತ್ತೂರು (21:58/22:00), ಕಾಟ್ಪಾಡಿ (23:08/23:10), ಜೋಲಾರಪೇಟೆ (00:28/00:30 – ಶುಕ್ರವಾರ), ಕುಪ್ಪಂ (01:10/01:12), ಬಂಗಾರಪೇಟೆ (01:39/01:41), ವೈಟ್‌ಫೀಲ್ಡ್ (02:10/02:12), ಕೃಷ್ಣರಾಜಪುರಂ (02:23/02:25), ಎಸ್‌ಎಂವಿಟಿ ಬೆಂಗಳೂರು (03:05/03:15), ಚಿಕ್ಕಬಾಣಾವರ (03:50/03:52), ತುಮಕೂರು (04:43/04:45), ತಿಪಟೂರು (05:58/06:00), ಅರಸೀಕೆರೆ (07:30/07:50), ದೇವನೂರು (08:10/08:12), ಕಡೂರು (08:26/08:28), ಬೀರೂರು (08:50/09:10), ಬಿಸಲೇಹಳ್ಳಿ (09:26/09:27), ಹಾಗೂ ಸಖರಾಯಪಟ್ಟಣ (09:39/09:40). ಇದನ್ನೂ ಓದಿ: 2ಎ ಮೀಸಲಾತಿ ಹೋರಾಟಗಾರರ ಮೇಲೆ ಲಾಠಿಚಾರ್ಜ್ – ತನಿಖೆಗೆ ತಡೆ ನೀಡಲು ಹೈಕೋರ್ಟ್ ನಕಾರ

    ರೈಲು ಸಂಖ್ಯೆ 17424 ಚಿಕ್ಕಮಗಳೂರು – ತಿರುಪತಿ ಸಾಪ್ತಾಹಿಕ ಎಕ್ಸ್‌ಪ್ರೆಸ್ ಪ್ರತಿ ಶುಕ್ರವಾರ ಸಂಜೆ 17:30 ಕ್ಕೆ ಚಿಕ್ಕಮಗಳೂರಿನಿಂದ ಹೊರಟು, ಶನಿವಾರ ಬೆಳಗ್ಗೆ 07:40 ಕ್ಕೆ ತಿರುಪತಿಗೆ ತಲುಪಲಿದೆ. ಈ ಮಾರ್ಗದಲ್ಲಿ ರೈಲು ಈ ನಿಲ್ದಾಣಗಳಲ್ಲಿ ನಿಲ್ಲಲಿದೆ:

    ಸಖರಾಯಪಟ್ಟಣ (18:04/18:05), ಬಿಸಲೇಹಳ್ಳಿ (18:17/18:18), ಕಡೂರು (18:28/18:30), ಬೀರೂರು (18:45/19:05), ದೇವನೂರು (19:25/19:27), ಅರಸೀಕೆರೆ (19:50/20:10), ತಿಪಟೂರು (20:30/20:32), ತುಮಕೂರು (21:18/21:20), ಚಿಕ್ಕಬಾಣಾವರ (22:00/22:02), ಎಸ್‌ಎಂವಿಟಿ ಬೆಂಗಳೂರು (00:15/00:30 – ಶನಿವಾರ), ಕೃಷ್ಣರಾಜಪುರಂ (00:40/00:42), ವೈಟ್‌ಫೀಲ್ಡ್ (00:51/00:53), ಬಂಗಾರಪೇಟೆ (01:20/01:25), ಕುಪ್ಪಂ (01:55/01:57), ಜೋಲಾರಪೇಟೆ (03:25/03:30), ಕಟ್ಪಾಡಿ (05:00/05:10), ಚಿತ್ತೂರು (05:43/05:45), ಹಾಗೂ ಪಕಾಲಾ (06:13/06:15).

    ಕೋಚ್ ಸಂಯೋಜನೆ: ಈ ರೈಲುಗಳಲ್ಲಿ ಒಟ್ಟು 18 ಎಲ್‌ಹೆಚ್‌ಬಿ ಕೋಚ್‌ಗಳು ಇರುತ್ತವೆ. ಇವುಗಳಲ್ಲಿ:
    2 ಎಸಿ ಟು ಟೈಯರ್ ಕೋಚ್‌,
    4 ಎಸಿ ತ್ರಿ ಟೇಯರ್ ಕೋಚ್, 6 ಸ್ಲೀಪರ್ ಕ್ಲಾಸ್ ಕೋಚ್‌,
    4 ಸಾಮಾನ್ಯ ದ್ವಿತೀಯ ಶ್ರೇಣಿ ಕೋಚ್‌, 1 ದ್ವಿತೀಯ ಶ್ರೇಣಿಯ ಸಾಮಾನು ಮತ್ತು ಬ್ರೇಕ್ ವ್ಯಾನ್ – ದಿವ್ಯಾಂಗ ಜನರಿಗಾಗಿ ವಿಶಿಷ್ಟ ವಿಭಾಗ,
    1 ಸಾಮಾನು/ಜನರೇಟರ್/ಬ್ರೇಕ್ ವ್ಯಾನ್ ಕೋಚ್.

    ಈ ಹೊಸ ಸಾಪ್ತಾಹಿಕ ಎಕ್ಸ್‌ಪ್ರೆಸ್ ಸೇವೆಯು ತಿರುಪತಿಯ ದೇವಾಲಯ ನಗರದ ಮತ್ತು ಚಿಕ್ಕಮಗಳೂರಿನ ಕಾಫಿ ನಾಡಿನ ಪ್ರದೇಶದ ನಡುವೆ ಪ್ರಯಾಣಿಸುವ ಪ್ರಯಾಣಿಕರಿಗೆ ಆರಾಮದಾಯಕ ಮತ್ತು ಅನುಕೂಲಕರ ಸಾರಿಗೆ ಆಯ್ಕೆಯಾಗಿ ಸೇವೆ ನೀಡಲಿದೆ. ಜೊತೆಗೆ, ಮಧ್ಯಂತರ ಪಟ್ಟಣಗಳು ಹಾಗೂ ಜಿಲ್ಲೆಗಳ ಜನತೆಗೂ ಇದರಿಂದ ಲಾಭವಾಗಲಿದೆ.

  • ತಿರುಪತಿ ತಿಮ್ಮಪ್ಪ ಕೋಟಿ ಕೋಟಿ ಒಡೆಯ – ಒಂದೇ ದಿನಕ್ಕೆ 5.3 ಕೋಟಿ ದಾಖಲೆ ಕಾಣಿಕೆ ಸಂಗ್ರಹ

    ತಿರುಪತಿ ತಿಮ್ಮಪ್ಪ ಕೋಟಿ ಕೋಟಿ ಒಡೆಯ – ಒಂದೇ ದಿನಕ್ಕೆ 5.3 ಕೋಟಿ ದಾಖಲೆ ಕಾಣಿಕೆ ಸಂಗ್ರಹ

    ತಿರುಪತಿ: ತಿರುಮಲದ ವೆಂಕಟೇಶ್ವರ ದೇವಸ್ಥಾನದ (Tirupati) ಹುಂಡಿಯಲ್ಲಿ ಸೋಮವಾರ ಒಂದೇ ದಿನ 5.3 ಕೋಟಿ ರೂ. ದಾಖಲೆಯ ಕಾಣಿಕೆ ಸಂಗ್ರಹವಾಗಿದೆ.

    ಭಕ್ತರ ಸಂಖ್ಯೆ ಸಾಧಾರಣವಾಗಿದ್ದರೂ ಸಹ ಇದು ಕಳೆದ ಒಂದು ವರ್ಷದಲ್ಲಿ ದೇವಸ್ಥಾನಕ್ಕೆ ಬಂದ ಅತಿ ಹೆಚ್ಚು ಕಾಣಿಕೆಯಾಗಿದೆ. ಸೋಮವಾರ ತಿರುಮಲ ದೇವಸ್ಥಾನದಲ್ಲಿ 78,730 ಯಾತ್ರಿಕರು ಪೂಜೆ ಸಲ್ಲಿಸಿದ್ದಾರೆ. ಇದು ಸಾಮಾನ್ಯವಾಗಿ ಹಬ್ಬ ಹರಿದಿನಗಳು ಮತ್ತು ಬೇಸಿಗೆ ಕಾಲದಲ್ಲಿ ದಾಖಲಾಗುವ ಒಂದು ಲಕ್ಷ ಮತ್ತು ಅದಕ್ಕಿಂತ ಹೆಚ್ಚಿನ ಯಾತ್ರಾರ್ಥಿಗಳ ಸಂಖ್ಯೆಗಿಂತ ಕಡಿಮೆಯಾಗಿದೆ. ಇದನ್ನೂ ಓದಿ: ಜೈಸ್ವಾಲ್‌ ಅರ್ಧಶತಕ – ಶತಕ ಸಿಡಿಸಿ ಕೊಹ್ಲಿ ಸಾಧನೆ ಸರಿಗಟ್ಟಿದ ಗಿಲ್‌

    ಸಾಮಾನ್ಯ ಜನದಟ್ಟಣೆಯ ಹೊರತಾಗಿಯೂ, ವಿಶ್ವದ ಅತ್ಯಂತ ಶ್ರೀಮಂತ ಹಿಂದೂ ದೇವಾಲಯದ ಹುಂಡಿಗೆ 5.3 ಕೋಟಿ ರೂ. ಕಾಣಿಕೆ ಹರಿದುಬಂದಿದೆ. ಇದು ಇದುವರೆಗಿನ ವರ್ಷದ ಅತ್ಯಧಿಕ ಕಾಣಿಕೆಯಾಗಿದೆ.

    2023ರ ಜನವರಿ 2 ರಂದು ಒಂದೇ ದಿನದಲ್ಲಿ ಅತಿ ಹೆಚ್ಚು ಹುಂಡಿ ಕಾಣಿಕೆ ಸಂಗ್ರಹವಾಗಿತ್ತು. ಆ ದಿನ ದೇವಾಲಯಕ್ಕೆ 7.68 ಕೋಟಿ ರೂ. ಒಂದೇ ದಿನದಲ್ಲಿ ಹರಿದುಬಂದಿತ್ತು. ಹಿಂದೆಯೂ 6 ಕೋಟಿಗೂ ಹೆಚ್ಚು ಕಾಣಿಕೆ ಸಂಗ್ರಹವಾಗಿರುವ ನಿದರ್ಶನ ಇದೆ. ಇದನ್ನೂ ಓದಿ: 9 ಸಾವಿರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಮುಂದಾದ ಮೈಕ್ರೋಸಾಫ್ಟ್‌

    ಸಂಪತ್ತಿಗೆ ಹೆಸರುವಾಸಿಯಾದ ತಿರುಪತಿಗೆ ಪ್ರತಿ ತಿಂಗಳು 100 ಕೋಟಿಯಿಂದ 140 ಕೋಟಿ ರೂ. ಹುಂಡಿ ಹಣ ಸಂಗ್ರಹವಾಗುತ್ತಿದೆ. ಸುಮಾರು 100 ಕೆಜಿಯಿಂದ 140 ಕೆಜಿ ಚಿನ್ನವನ್ನು ಭಕ್ತರಿಂದ ದೇಣಿಗೆಯಾಗಿ ಪಡೆಯಲಾಗುತ್ತದೆ. ಬ್ಯಾಂಕುಗಳಲ್ಲಿ ಟಿಟಿಡಿಯ ಸ್ಥಿರ ಠೇವಣಿಗಳ ಮೊತ್ತ 20,000 ಕೋಟಿ ರೂ.ಗಿಂತ ಸ್ವಲ್ಪ ಹೆಚ್ಚು.