Tag: ತೀರ್ಥ

  • ಮಾಸ್ಕ್ ಹಾಕ್ಕೊಂಡೇ ತೀರ್ಥ ಸೇವಿಸಿದ ಗೆಹ್ಲೋಟ್ – ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್

    ಮಾಸ್ಕ್ ಹಾಕ್ಕೊಂಡೇ ತೀರ್ಥ ಸೇವಿಸಿದ ಗೆಹ್ಲೋಟ್ – ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್

    ಜೈಪುರ: ಕೊರೊನಾದಿಂದ ತಪ್ಪಿಸಿಕೊಳ್ಳಲು ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಬೇಕು ಎಂಬುದು ನಿಯಮ. ಆದರೆ ಜೀವ ರಕ್ಷಾಕವಚವಾದ ಅದೇ ಮಾಸ್ಕ್ ರಾಜಸ್ಥಾನದ(Rajasthan) ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್(Ashok Gehlot) ಅವರನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್ ಆಗುವಂತೆ ಮಾಡಿದೆ.

    ಹೌದು, ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಸೆಪ್ಟೆಂಬರ್ 2 ರಂದು ಜೈಸಲ್ಮೇರ್ ದೇವಾಲಯಕ್ಕೆ ಭೇಟಿ ನೀಡಿದ್ದಾಗ ಹಾಸ್ಯಕರ ಘಟನೆ ನಡೆದಿದೆ. ಮುಖಕ್ಕೆ ಹಾಕಿಕೊಂಡಿದ್ದ ಮಾಸ್ಕ್ ಅನ್ನು ಕಳಚಲು ಮರೆತ ಗೆಹ್ಲೋಟ್ ಮಾಸ್ಕ್ ಹಾಕಿಕೊಂಡೇ ತೀರ್ಥ ಪ್ರಸಾದವನ್ನು ಸೇವಿಸಿದ್ದಾರೆ. ಇದನ್ನೂ ಓದಿ: ದೇಶದ ಶೇ.80 ಸರ್ಕಾರಿ ಶಾಲೆಗಳು ಕಸದ ರಾಶಿಗಿಂತಲೂ ಕೆಟ್ಟದಾಗಿದೆ: ಕೇಜ್ರಿವಾಲ್

    ಗೆಹ್ಲೋಟ್ ಅವರು ಮಾಸ್ಕ್ ಧರಿಸಿಯೇ ತೀರ್ಥ ಸೇವಿಸಿರುವ ವೀಡಿಯೋ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಅಪಹಾಸ್ಯಕ್ಕೆ ಗುರಿಯಾಗಿದ್ದಾರೆ. ವೀಡಿಯೋ ವೀಕ್ಷಿಸಿದ ಅನೇಕರು ರಾಜಕೀಯದ ಆಟವಾಡಲು ಗೆಹ್ಲೋಟ್ ದೇವಾಲಯಕ್ಕೆ ಭೇಟಿ ನೀಡಿದ್ದಾಗಿ ಟೀಕಿಸಿದ್ದಾರೆ. ಇದನ್ನೂ ಓದಿ: ಉದ್ಘಾಟನೆ ಮಾಡುತ್ತಿದ್ದಂತೆಯೇ ಕುಸಿದುಬಿಡ್ತು ಸೇತುವೆ

    ಒಬ್ಬರು ಸಿಎಂ ತನ್ನ ಸ್ವಂತ ಲೋಕದಲ್ಲಿ ಕಳೆದು ಹೋಗಿರಬಹುದು ಎಂದು ಬರೆದಿದ್ದಾರೆ. ಇನ್ನೊಬ್ಬರು ಇದು ಯಾವ ರೀತಿಯ ತೀರ್ಥ ಸೇವನೆ ಎಂದು ಪ್ರಶ್ನಿಸಿದ್ದಾರೆ. ಮತ್ತೊಬ್ಬರು ಮಾಸ್ಕ್ ತೆಗೆಯದೇ ಎಲ್ಲಾ ಬುದ್ದಿವಂತರು ಈ ಚ್ಯಾಲೆಂಜ್ ಅನ್ನು ತೆಗೆದುಕೊಳ್ಳಿ ಎಂದು ಸವಾಲು ಹಾಕಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅಯ್ಯಪ್ಪ ಸ್ವಾಮಿ ತೀರ್ಥದಲ್ಲಿ ಕೈ ತೊಳೆದ ಕೇರಳದ ದೇವಸ್ವಂ ಸಚಿವ

    ಅಯ್ಯಪ್ಪ ಸ್ವಾಮಿ ತೀರ್ಥದಲ್ಲಿ ಕೈ ತೊಳೆದ ಕೇರಳದ ದೇವಸ್ವಂ ಸಚಿವ

    ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ತೆರಳಿದ್ದ ವೇಳೆ, ಕೇರಳದ ದೇವಸ್ವಂ ಸಚಿವ ಕೆ. ರಾಧಾಕೃಷ್ಣನ್ ಅವರು ದೇವರಿಗೆ ಮತ್ತು ಹಿಂದೂ ಸಂಪ್ರದಾಯಗಳಿಗೆ ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

    ವಾರ್ಷಿಕ ಯಾತ್ರೆಗೆ ಶಬರಿಮಲೆ ದೇಗುಲದ ಭಾಗಿಲ ತೆರೆದ ದಿನ ಸಚಿವ ರಾಧಾಕೃಷ್ಣನ್ ಅಯ್ಯಪ್ಪ ದೇಗುಲಕ್ಕೆ ತೆರಳಿದ್ದರು. ಈ ವೇಳೆ ಅವರು ಪೂಜೆ ವೇಳೆ ದೇವರಿಗೆ ಕೈಮುಗಿದಿರಲಿಲ್ಲ. ಜೊತೆಗೆ ಬಳಿಕ ಅರ್ಚಕರು ತೀರ್ಥ ನೀಡಿದಾಗ ಅದನ್ನು ಸೇವಿಸುವ ಬದಲು ಕೈಗೆ ಒರೆಸಿಕೊಂಡು ಸುಮ್ಮನಾಗಿದ್ದಾರೆ. ಈ ಕುರಿತ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜೊತೆಗೆ ಸಚಿವರ ವರ್ತನೆ ಬಗ್ಗೆ ಟೀಕೆ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ಅತ್ಯಾಚಾರಿಗಳ ಲೈಂಗಿಕ ಶಕ್ತಿಗೆ ಕತ್ತರಿ ಶಿಕ್ಷೆ

    ಈ ಕುರಿತಾಗಿ ಪ್ರತಿಕ್ರಿಯಿಸಿರುವ ಅವರು, ನಾನು ದಿನವೂ ನನ್ನ ತಾಯಿಗೆ ಕೈ ಮುಗಿಯುವುದಿಲ್ಲ ಎಂದ ಮಾತ್ರಕ್ಕೆ ನನಗೆ ನನ್ನ ತಾಯಿಯ ಮೇಲೆ ಗೌರವವಿಲ್ಲ ಎಂದರ್ಥವಲ್ಲ. ನಾನು ಕೆಲವೊಂದು ಪದಾರ್ಥಗಳನ್ನು ಸೇವಿಸುವುದಿಲ್ಲ. ಭಕ್ತಿಯ ಹೆಸರಿನಲ್ಲಿ ಯಾರೇ ಒತ್ತಾಯಿಸಿದರೂ ನಾನು ಅದನ್ನು (ತೀರ್ಥ) ಸೇವಿಸುವುದಿಲ್ಲ ಎಂದು ತಮ್ಮನ್ನು ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ಸೋನಿಯಾ ಮಗಳು, ಉಪೇಂದ್ರ ಪತ್ನಿ ಹೆಸರು ಪ್ರಿಯಾಂಕಾ ಆದ್ರೆ ಖರ್ಗೆ ಪುತ್ರ ಯಾವ ಪ್ರಿಯಾಂಕ: ಪ್ರತಾಪಸಿಂಹ ಪ್ರಶ್ನೆ