Tag: ತೀರ್ಥೋದ್ಭವ

  • ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ – ತೀರ್ಥರೂಪಿಣಿಯಾಗುವ ವಿಸ್ಮಯ ಕಾಣಲು ಜನ ಕಾತರ

    ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ – ತೀರ್ಥರೂಪಿಣಿಯಾಗುವ ವಿಸ್ಮಯ ಕಾಣಲು ಜನ ಕಾತರ

    – ಡಿಸಿಎಂ ಡಿಕೆ ಶಿವಕುಮಾರ್‌, ರಾಮಲಿಂಗಾರೆಡ್ಡಿ ಭಾಗಿ

    ಮಡಿಕೇರಿ: ಕರುನಾಡಿನ ಜೀವನದಿ ಕಾವೇರಿಯ (Kaveri) ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದೆ. ಸಹಸ್ರಾರು ಭಕ್ತರು ತೀರ್ಥಸ್ವರೂಪಿಣಿ ಕಾವೇರಿಮಾತೆಯನ್ನು ಕಣ್ತುಂಬಿಕೊಳ್ಳಲು ಕಾತರರಾಗಿದ್ದಾರೆ.

    ಪವಿತ್ರ ತೀರ್ಥೋದ್ಭವ ಕ್ಷೇತ್ರ ತಲಕಾವೇರಿಯಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ವರ್ಷಕ್ಕೊಮ್ಮೆ ಘಟಿಸುವ ಈ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ದೇಶದ ವಿವಿಧೆಡೆಗಳಿಂದ ಸಹಸ್ರಾರು ಸಂಖ್ಯೆಯ ಭಕ್ತರು ಕಾತರರಾಗಿದ್ದಾರೆ. ಕೊಡಗಿನ ಜನರ ಕುಲದೇವತೆ ಕರ್ನಾಟಕದ ಜೀವನದಿ ಕಾವೇರಿಯ ತೀರ್ಥೋದ್ಭವಕ್ಕೆ ಜಿಲ್ಲಾಡಳಿತ ತಯಾರಿ ಮಾಡಿಕೊಂಡಿದೆ.ಇದನ್ನೂ ಓದಿ: ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ – ಕಣ್ತುಂಬಿಕೊಳ್ಳಲಿರುವ ಡಿಕೆಶಿ, ರಾಮಲಿಂಗಾ ರೆಡ್ಡಿ

    ಶುಕ್ರವಾರ (ಅ.17) ಮಧ್ಯಾಹ್ನ 1:44ಕ್ಕೆ ಸಲ್ಲುವ ಮಕರ ಲಗ್ನದಲ್ಲಿ ಪವಿತ್ರ ತೀರ್ಥೋದ್ಭವ ಜರುಗಲಿದೆ. ಬ್ರಹ್ಮಕುಂಡಿಕೆಯಿಂದ ಪವಿತ್ರ ತೀರ್ಥ ಉಕ್ಕಿಬರಲಿದೆ. ಈ ವಿಸ್ಮಯ ನೋಡಲು ಜನರು ಕಾತರರಾಗಿ ಕಾಯುತ್ತಿದ್ದಾರೆ. ತೀರ್ಥೋದ್ಭವಕ್ಕೂ ಮೊದಲು ತಲಕಾವೇರಿ ಕ್ಷೇತ್ರದಲ್ಲಿ ಧಾರ್ಮಿಕ ಪೂಜೆಗಳು ಜರುಗಲಿವೆ. ಮಹಾಮಂಗಳಾರತಿ ನಂತರ ಭಕ್ತರಿಗೆ ಕ್ಷೇತ್ರಕ್ಕೆ ಪ್ರವೇಶ ಸಿಗಲಿದೆ. ಬೆಳಗ್ಗೆ 11:30ರಿಂದಲೇ ತೀರ್ಥೋದ್ಭವದ ತನಕ ಮಂತ್ರಪಠಣ ನಡೆಯಲಿದೆ.

    ಪವಿತ್ರ ತೀರ್ಥೋದ್ಭವವನ್ನು ಕಣ್ತುಂಬಿಕೊಳ್ಳಲು ಡಿಸಿಎಂ ಡಿಕೆ ಶಿವಕುಮಾರ್, ಸಚಿವ ರಾಮಲಿಂಗಾರೆಡ್ಡಿ ತಲಕಾವೇರಿಗೆ ಆಗಮಿಸಲಿದ್ದಾರೆ. ಇನ್ನೂ ಕಾವೇರಿ ತೀರ್ಥೋದ್ಭವ ನೋಡಲು ಮಂಡ್ಯ, ಮೈಸೂರು, ಬೆಂಗಳೂರು, ಹಾಸನ ಜಿಲ್ಲೆ ಸೇರಿದಂತೆ ದೇಶದ ಹಲವೆಡೆಗಳಿಂದ ಭಕ್ತರು ಬರುತ್ತಾರೆ. ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಸ್ನಾನಮಾಡಿ ಅಲ್ಲಿ ಭಗಂಢೇಶ್ವರನಿಗೆ ಪೂಜೆ ಸಲ್ಲಿಸಿ ನಂತರ ಕಾವೇರಿ ಮಾತೆಯ ದರ್ಶನ ಪಡೆಯುತ್ತಾರೆ. ತೀರ್ಥೋದ್ಭವವಾಗುತ್ತಿದ್ದಂತೆ ತೀರ್ಥವನ್ನು ಸಂಗ್ರಹಿಸಿ ಮನೆಗೆ ಕೊಂಡೊಯ್ಯುತ್ತಾರೆ.

    ಸದ್ಯ ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಭದ್ರತೆಗಾಗಿ ಹೆಚ್ಚಿನ ಸಿಸಿಟಿವಿ ಸೇರಿದಂತೆ 500ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.ಇದನ್ನೂ ಓದಿ: ಮಡಿಕೇರಿ | ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿ

  • ಇಂದು ರಾತ್ರಿ ತಲಕಾವೇರಿಯಲ್ಲಿ ತೀರ್ಥೋದ್ಭವ- ವಿಸ್ಮಯ ಕಣ್ತುಂಬಿಕೊಳ್ಳಲು ಜನ ಕಾತರ

    ಇಂದು ರಾತ್ರಿ ತಲಕಾವೇರಿಯಲ್ಲಿ ತೀರ್ಥೋದ್ಭವ- ವಿಸ್ಮಯ ಕಣ್ತುಂಬಿಕೊಳ್ಳಲು ಜನ ಕಾತರ

    ಮಡಿಕೇರಿ: ದಕ್ಷಿಣ ಭಾರತದ ಪ್ರಸಿದ್ಧ ಪುಣ್ಯ ಕ್ಷೇತ್ರ ಕೊಡಗಿನ (Kodagu) ತಲಕಾವೇರಿಯಲ್ಲಿ (Talakaveri) ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದು ರಾತ್ರಿ 1 ಗಂಟೆ 27 ನಿಮಿಷಕ್ಕೆ ಕಾವೇರಿ, ತೀರ್ಥರೂಪಿಣಿಯಾಗಿ ಆವಿರ್ಭವಿಸಲಿದ್ದಾಳೆ.

    ಕರ್ಕಾಟಕ ಲಗ್ನ ತುಲಾ ಸಂಕ್ರಮಣ ಪುಣ್ಯ ಕಾಲದಲ್ಲಿ ತೀರ್ಥೋದ್ಭವ ನಡೆಯಲಿದೆ. ಜೀವ ನದಿಯನ್ನ ಕಣ್ತುಂಬಿಸಿಕೊಳ್ಳಲು ಸಹಸ್ರಾರು ಮಂದಿ ಆಗಮಿಸುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ. ತುಲಾ ಮಾಸದ ಮೊದಲ ದಿನ ಅಂದರೆ ತುಲಾ ಸಂಕ್ರಮಣದ ದಿನ ಪ್ರತಿ ವರ್ಷ ಕಾವೇರಿ ಕೊಡಗಿನ ಮಡಿಕೇರಿ ತಾಲೂಕಿನ ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ತೀರ್ಥರೂಪಿಣಿಯಾಗಿ ಆವಿರ್ಭವಿಸಿ ಭಕ್ತರಿಗೆ ದರ್ಶನ ನೀಡುತ್ತಾಳೆ. ಈ ಪವಿತ್ರ ಘಳಿಗೆಯನ್ನು ಕಣ್ತುಂಬಿಸಿಕೊಳ್ಳಲು ದೇಶದ ಮೂಲೆ ಮೂಲೆಯಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ.

    ಇಂದು ರಾತ್ರಿ 1 ಗಂಟೆ 27 ನಿಮಿಷಕ್ಕೆ ತುಲಾ ಲಘ್ನದಲ್ಲಿ ಕಾವೇರಿ ತೀರ್ಥೋದ್ಭವವಾಗಲಿದೆ. ಪ್ರಧಾನ ಅರ್ಚಕ ಗುರುರಾಜ್ ಆಚಾರ್ ನೇತೃತ್ವದಲ್ಲಿ ಪೂಜಾ ಕಾರ್ಯಕ್ರಮಗಳು ನಡೆಯಲಿವೆ. ಈ ಬಾರಿ ಮಧ್ಯರಾತ್ರಿ ತೀರ್ಥೋದ್ಭವವಾಗುವುದರಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಹಾಗಾಗಿ ಬೆಳಗ್ಗೆಯಿಂದಲೇ ನಿತ್ಯ ಪೂಜಾಕರ್ಮಗಳು ನಡೆಯುತ್ತದೆ. ಸಂಜೆ 4 ಗಂಟೆಯ ಬಳಿಕ ಬ್ರಹ್ಮಕುಂಡಿಕೆ ಬಳಿಗೆ ಭಕ್ತರಿಗೆ ಪ್ರವೇಶ ನಿರಾಕರಿಸಲಾಗಿದೆ. ಕಲ್ಯಾಣಿಯ ಮೇಲ್ಭಾಗದಲ್ಲಿ ಭಕ್ತರಿಗೆ ಪವಿತ್ರ ತೀರ್ಥ ಹಂಚಲು ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ಮೋದಿ ಆರಿಸಿ ತಂದರೆ ಉಳಿತೀರಿ, ಇಲ್ಲ ಅಂದ್ರೆ ಉಳಿಯಲ್ಲ: ಮಹಾಲಿಂಗೇಶ್ವರ ಶ್ರೀ

    ಇಂದು ಸಂಜೆ 4 ಗಂಟೆಯ ಬಳಿಕ ಭಾಗಮಂಡಲದಿಂದ ತಲಕಾವೇರಿಗೆ ವಾಹನಗಳ ಪ್ರವೇಶ ನಿಷೇಧಿಸಲಾಗಿದೆ. ಆದರೆ ಭಕ್ತರ ಪ್ರಯಾಣಕ್ಕೆ ಉಚಿತ ಕೆಎಸ್‍ಆರ್ ಟಿಸಿ ಬಸ್‍ಗಳ ವ್ಯವಸ್ಥೆ ಮಾಡಲಾಗಿದೆ. ಭಕ್ತರ ಸ್ವಾಗತಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ. ದೇವಸ್ಥಾನದ ಆವರಣದಲ್ಲಿ ಭಕ್ತರ ನಿಯಂತ್ರಣಕ್ಕೆ ಬ್ಯಾರಿಕೇಡ್‍ಗಳನ್ನ ಹಾಕಲಾಗಿದೆ. ಅಲ್ಲಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದ್ದು, ಕಟ್ಟೆಚ್ಚರವಹಿಸಲಾಗುತ್ತದೆ. ಭದ್ರತೆಗಾಗಿ ಕೆಎಸ್‍ಆರ್‍ಪಿ ಮತ್ತು ಡಿಎಆರ್ ಪೊಲೀಸರನ್ನ ನಿಯೋಜಿಸಲಾಗಿದೆ. ತಲಕಾವೇರಿಗೆ ಎಲ್ಲರಿಗೂ ಮುಕ್ತ ಪ್ರವೇಶ ಕಲ್ಪಿಸಲಾದೆ. ಭಕ್ತರಿಗೆ ಊಟದ ವ್ಯವಸ್ಥೆಯನ್ನೂ ಮಾಡಲಾಗಿದೆ. ಅಲ್ಲದೆ ಈ ಬಾರಿ ತೀರ್ಥ ಕೊಂಡೊಯ್ಯಲು ಪ್ಲಾಸ್ಟಿಕ್ ಬಿಂದಿಗೆ ಬಾಟಲಿ ಡಬ್ಬಗಳನ್ನು ತರುವುದನ್ನು ನಿಷೇಧಿಸಲಾಗಿದೆ.

    ಜಿಲ್ಲಾಡಳಿತ, ಪೊಲೀಸ್ ಇಲಾಖೆ ಮತ್ತು ದೇವಸ್ಥಾನ ಸಮಿತಿ ಒಟ್ಟಾಗಿ ಕಾವೇರಿ (Cauvery) ಜಾತ್ರೆಯನ್ನು ಯಶಸ್ಸುಗೊಳಿಸಲು ಸಜ್ಜಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅ.17ರ ಮಧ್ಯರಾತ್ರಿ 1:27ಕ್ಕೆ ತಲಕಾವೇರಿಯಲ್ಲಿ ತೀರ್ಥೋದ್ಭವ

    ಅ.17ರ ಮಧ್ಯರಾತ್ರಿ 1:27ಕ್ಕೆ ತಲಕಾವೇರಿಯಲ್ಲಿ ತೀರ್ಥೋದ್ಭವ

    ಮಡಿಕೇರಿ: ತಲಕಾವೇರಿಯಲ್ಲಿ (Talacauvery) ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ (Theerthodbhava) ಮುಹೂರ್ತ ಫಿಕ್ಸ್ ಆಗಿದೆ. ಕೊಡಗಿನ ತಲಕಾವೇರಿಯಲ್ಲಿರುವ ತೀರ್ಥ ಕುಂಡಿಕೆಯಲ್ಲಿ ಅಕ್ಟೋಬರ್ 17 ರಂದು ಮಂಗಳವಾರ ರಾತ್ರಿ 1:27ಕ್ಕೆ ಕರ್ಕಾಟಕ ಲಗ್ನದಲ್ಲಿ ಕಾವೇರಿ ತೀರ್ಥ ರೂಪದಲ್ಲಿ ಉಗಮವಾಗಲಿದೆ.

    ಕಾವೇರಿಯ ಉಗಮ ಸ್ಥಳ ತಲಕಾವೇರಿಯ ಪವಿತ್ರ ಕುಂಡಿಕೆಯಲ್ಲಿ ಕಾವೇರಿ (Cauvery) ತೀರ್ಥರೂಪಿಣಿಯಾಗಿ ಉಕ್ಕಿ ಬರುತ್ತಾಳೆಂಬ ನಂಬಿಕೆ ಇದೆ. ಜೀವ ನದಿ ಕಾವೇರಿ ಉಗಮ ಸ್ಥಾನ ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ಮಾತೆ ಕಾವೇರಿ ಜಲರೂಪದಲ್ಲಿ ದರ್ಶನ ಕೊಡುತ್ತಾಳೆ ಎಂದು ನಂಬಲಾಗುವ ಪವಿತ್ರ ತೀರ್ಥೋದ್ಭವಕ್ಕೆ ಈಗಾಗಲೇ ‌ಸಿದ್ದತೆ ಕಾರ್ಯಗಳ ಚರ್ಚೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಹಳೆ ಸಂಸತ್‌ ಭವನದ ಮುಂದಿನ ಕಥೆ ಏನು?

    ಪ್ರತಿ ವರ್ಷವೂ ತುಲಾ ಮಾಸದಲ್ಲಿ ನಡೆಯುವ ಈ ಜಾತ್ರೆಗೆ ಸೆ.27ರಿಂದಲೇ ಸಿದ್ಧತೆ ಶುರುವಾಗುತ್ತದೆ. ಅಕ್ಟೋಬರ್‌ ಕಾಲಿಡುತ್ತಿದ್ದಂತೆಯೇ ಭಾಗಮಂಡಲ, ತಲಕಾವೇರಿಯಲ್ಲಿ ಸಂಭ್ರಮದ ವಾತಾವರಣ ನಿರ್ಮಾಣ ಆಗುತ್ತದೆ. ಇದುವರೆಗೂ ಕಾವೇರಿ ಭಕ್ತರ ಉತ್ಸಾಹಕ್ಕೆ ಯಾವುದೇ ಅಡ್ಡಿಯಾಗಿರಲಿಲ್ಲ. ಈ ಬಾರಿ ರಾತ್ರಿ ತೀರ್ಥೋದ್ಬವ ಅಗುತ್ತಿರುವುದರಿಂದ ರಾಜ್ಯದ ನಾನಾ ಭಾಗಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಅಗಮಿಸುವ ನಿರೀಕ್ಷೆ ಇದೆ.

     
    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿ

    ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿ

    ಮಡಿಕೇರಿ: ಪ್ರತೀ ವರ್ಷದಂತೆ ಈ ವರ್ಷವೂ ಜಿಲ್ಲೆಯ ತಲಕಾವೇರಿಯಲ್ಲಿ(Talacauvery) ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ(Theerthodbhava) ಮುಹೂರ್ತ ಫಿಕ್ಸ್ ಆಗಿದೆ. ಕೊಡಗಿನ ತಲಕಾವೇರಿಯಲ್ಲಿರುವ ಬ್ರಹ್ಮಕುಂಡಿಕೆಯಲ್ಲಿ ಅಕ್ಟೋಬರ್ 17 ರಂದು ಸೋಮವಾರ ರಾತ್ರಿ 7:21ಕ್ಕೆ ಮೇಷ ಲಗ್ನದಲ್ಲಿ ಕಾವೇರಿ(Cauvery) ತೀರ್ಥ ರೂಪದಲ್ಲಿ ಕಾಣಿಸಿಕೊಳ್ಳಲಿದ್ದಾಳೆ.

    ಕಾವೇರಿಯ ಉಗಮ ಸ್ಥಳ ತಲಕಾವೇರಿಯ ಪವಿತ್ರ ಕುಂಡಿಕೆಯಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ಉಕ್ಕಿ ಬರುತ್ತಾಳೆಂಬ ನಂಬಿಕೆ ಇದೆ. ಪವಿತ್ರ ತೀರ್ಥೋದ್ಭವಕ್ಕೆ ಈಗಾಗಲೇ ‌ಸಿದ್ದತೆ ಕಾರ್ಯಗಳ ಚರ್ಚೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಮೋದಿ ಹುಟ್ಟುಹಬ್ಬ – ನಾಳೆ ಹುಟ್ಟುವ ಮಕ್ಕಳಿಗೆ ಚಿನ್ನದುಂಗುರ ನೀಡಲಿದೆ ಬಿಜೆಪಿ

    ಪ್ರತಿ ವರ್ಷವೂ ತುಲಾ ಮಾಸದಲ್ಲಿ ನಡೆಯುವ ಈ ಜಾತ್ರೆಗೆ ಸೆ.27ರಿಂದಲೇ ಸಿದ್ಧತೆ ಶುರುವಾಗುತ್ತದೆ. ಅಕ್ಟೋಬರ್‌ ಕಾಲಿಡುತ್ತಿದ್ದಂತೆಯೇ ಭಾಗಮಂಡಲ, ತಲಕಾವೇರಿಯಲ್ಲಿ ಸಂಭ್ರಮದ ವಾತಾವರಣ ನಿರ್ಮಾಣ ಆಗುತ್ತದೆ.

    ಇಲ್ಲಿಯವರೆಗೆ ಕಾವೇರಿ ಭಕ್ತರ ಉತ್ಸಾಹಕ್ಕೆ ಯಾವುದೇ ಅಡ್ಡಿಯಾಗಿರಲಿಲ್ಲ. ಆದರೆ ಕಳೆದ ಎರಡು ವರ್ಷಗಳಿಂದ ಕೊರೊನಾದಿಂದ ಕಾವೇರಿ ಜಾತ್ರೆ ಸಂಪೂರ್ಣ ಕಳೆಗುಂದಿತ್ತು. ಹೆಚ್ಚಿನ ಭಕ್ತರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿರಲಿಲ್ಲ. ಆದರೆ ಈ ಬಾರಿ ರಾತ್ರಿ ತೀರ್ಥೋದ್ಬವ ಅಗುತ್ತಿರುವುದರಿಂದ ರಾಜ್ಯದ ನಾನಾ ಭಾಗಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಅಗಮಿಸುವ ನಿರೀಕ್ಷೆ ಇದೆ.

    Live Tv
    [brid partner=56869869 player=32851 video=960834 autoplay=true]

  • ತಲಕಾವೇರಿಯಲ್ಲಿ ತೀರ್ಥೋದ್ಭವ- ಭಕ್ತರ ದರ್ಶನಕ್ಕೆ ಸಕಲ ಸಿದ್ಧತೆ

    ತಲಕಾವೇರಿಯಲ್ಲಿ ತೀರ್ಥೋದ್ಭವ- ಭಕ್ತರ ದರ್ಶನಕ್ಕೆ ಸಕಲ ಸಿದ್ಧತೆ

    ಮಡಿಕೇರಿ: ಕರುನಾಡ ಜೀವನದಿ ಕಾವೇರಿಯ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಆರಂಭವಾಗಿದೆ. ತಲಕಾವೇರಿಯಲ್ಲಿ ಇದೇ ಅಕ್ಟೋಬರ್ 17ರಂದು ಭಾನುವಾರ ಮಧ್ಯಾಹ್ನ 1ಗಂಟೆ 11 ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ಕಾವೇರಿಯು ತೀರ್ಥರೂಪಿಣಿಯಾಗಿ ಭಕ್ತರಿಗೆ ಒಲಿಯಲಿದ್ದಾಳೆ.

    ಈ ಬಾರಿ ಕಾವೇರಿ ತೀರ್ಥೊದ್ಭವ ವೀಕ್ಷಿಸಲು ಎಲ್ಲರಿಗೂ ಮುಕ್ತ ಅವಕಾಶ ನೀಡಲಾಗುತ್ತದೆ. ಅದರೆ ಕೋವಿಡ್ ಪಾಸಿಟಿವ್ ರೇಟ್ ಏರಿಳಿತ ಅಗುತ್ತಿರುವುದರಿಂದ ಜನ ದಟ್ಟಣೆ ನಿಯಂತ್ರಣದಲ್ಲಿ ಇರಬೇಕಾಗುತ್ತದೆ ಎಂದು ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ತಿಳಿಸಿದ್ದಾರೆ. ಇದನ್ನೂ ಓದಿ: ಬಿಎಂಟಿಸಿ ಟು ಪಿಎ ಜರ್ನಿ – ಸಾವಿರ ಲೆಕ್ಕದಲ್ಲಿ ಸಂಬಳ ಪಡೆಯುತ್ತಿದ್ದವ ಕೋಟಿ ಕುಬೇರನಾದ ಕಥೆ ಓದಿ

    ಇಂದು ಕಾವೇರಿ ತೀರ್ಥೊದ್ಭವ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ತೀರ್ಥೂದ್ಭವ ಸಂದರ್ಭ ಸ್ಥಳೀಯರು ಆದಷ್ಟು ಮುನ್ನೆಚ್ಚರಿಕೆ ವಹಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಸ್ವಯಂನಿಯಂತ್ರಣ ಮಾಡಿಕೊಂಡು ಕಾವೇರಿ ದರ್ಶನ ಮಾಡಬೇಕು. ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಸ್ನಾನಕ್ಕೆ ಅವಕಾಶ ಇರುತ್ತದೆ. ತಲಕಾವೇರಿ ಕುಂಡಿಕೆ ಬಳಿ ಸ್ನಾನ ಮಾಡಲು ಅವಕಾಶ ಇಲ್ಲ. ಅಲ್ಲದೆ ಈ ಬಾರಿ ತಲಕಾವೇರಿಯಲ್ಲಿ ಭಕ್ತರಿಗೆ ಊಟದ ವ್ಯವಸ್ಥೆ ಇರುವುದಿಲ್ಲ. ಕೇವಲ ಸ್ವಯಂ ಸೇವಕರು ಪೊಲೀಸ್ ಹಾಗೂ ವಿವಿಧ ಇಲಾಖೆಯ ಸಿಬ್ಬಂದಿಗೆ ಮಾತ್ರ ಊಟ ವ್ಯವಸ್ಥೆಯನ್ನು ಕೊಡಗು ಏಕೀಕರಣ ರಂಗದ ಪ್ರಮುಖರು ಮಾಡಲ್ಲಿದ್ದಾರೆ ಎಂದು ತಿಳಿಸಿದರು.

    ಕೊಡಗಿನ ಧಾರ್ಮಿಕ ಕ್ಷೇತ್ರಗಳಿಗೆ ಬರುವ ಪ್ರವಾಸಿಗರು ವಸ್ತ್ರ ಸಂಹಿತೆ ನಿಯಮ ಪಾಲಿಸಬೇಕು. ಜಿಲ್ಲೆಯಲ್ಲಿರುವ ಹೋಮ್ ಸ್ಟೇ ಹೋಟೆಲ್ ರೇಸಾರ್ಟ್ ಮಾಲೀಕರು. ಬರುವ ಪ್ರವಾಸಿಗರಿಗೆ ಸರಿಯಾಗಿ ಮನವರಿಕೆ ಮಾಡಿ ಧಾರ್ಮಿಕ ಕ್ಷೇತ್ರಗಳಿಗೆ ಕಳುಹಿಸಬೇಕು. ಕೆಲ ಪ್ರವಾಸಿಗರು ಮದ್ಯಪಾನ ಮಾಡಿ, ತುಂಡು ಉಡುಗೆ ತೊಟ್ಟು ಬರುತ್ತಿದ್ದಾರೆ. ಕೊಡಗಿನ ತಲಕಾವೇರಿ, ಭಂಗಡೇಶ್ವರ, ಇರ್ಪು ರಾಮೇಶ್ವರ, ಪಾಡಿ ಇಗ್ಗುತಪ್ಪ, ಮಡಿಕೇರಿ ಓಂಕಾರೇಶ್ವರ ದೇವಾಲಯಗಳಿಗೆ ಹೋಗಬೇಕಾದರೆ ಸರಿಯಾದ ರೀತಿಯಲ್ಲಿ ವಸ್ತ್ರಗಳನ್ನು ಧರಿಸಿಕೊಂಡು ಹೋಗಬೇಕು. ಮದ್ಯಪಾನ ಮಾಡಿ ಬರುವವರಿಗೆ ಸ್ಥಳದಲ್ಲೇ ದಂಡ ಹಾಕುವ ವ್ಯವಸ್ಥೆ ಅಗಬೇಕು ಎಂದು ಶಾಸಕ ಬೋಪಯ್ಯ ತಿಳಿಸಿದ್ದಾರೆ. ಇದನ್ನೂ ಓದಿ: ಬಿಎಸ್‍ವೈ ಆಪ್ತನ ಮನೆ ಮೇಲೆ ಐಟಿ ರೇಡ್

    ಕೊರೊನಾ ಹಿನ್ನೆಲೆ ಪವಿತ್ರ ತೀರ್ಥೋದ್ಭವ ಕ್ಷೇತ್ರ ತಲಕಾವೇರಿಯಲ್ಲಿ ಈ ಬಾರಿ ಸರಳ ರೀತಿಯಲ್ಲಿ ಸಿದ್ಧತೆಗಳು ನಡೆಯುತ್ತಿವೆ. ವರ್ಷಕ್ಕೊಮ್ಮೆ ಘಟಿಸುವ ಈ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ದೇಶದ ವಿವಿಧೆಡೆಗಳಿಂದ ಸಹಸ್ರಾರು ಸಂಖ್ಯೆಯ ಭಕ್ತರು ಆಗಮಿಸುತ್ತಿದ್ದರು. ಆದರೆ ಕೊರಾನಾ ಹಿನ್ನೆಲೆಯಲ್ಲಿ ಹೆಚ್ಚು ಭಕ್ತರ ಆಗಮನಕ್ಕೆ ದೇವಾಲಯ ಅಡಳಿತ ಮಂಡಳಿ ಹಾಗೂ ಜಿಲ್ಲಾಡಳಿತ ತಡೆಯೊಡ್ಡಿದ್ದು, ಕಡಿಮೆ ಭಕ್ತರು ಆಗಮಿಸುವಂತೆ ಕೋರಿದೆ.

    ಈ ಬಾರಿ ತೀರ್ಥೋದ್ಭವ ವೀಕ್ಷಣಗೆ ಎಲ್ಲರಿಗೂ ಮುಕ್ತ ಅವಕಾಶ ಇದೆ. ಆದರೆ ಜನರೇ ಸ್ವಯಂಪ್ರೇರಿತವಾಗಿ ರಕ್ಷಣೆ ಮಾಡಿಕೊಳ್ಳುವ ಅಗತ್ಯ ಇರುವುದರಿಂದ ಈ ಬಾರಿ ಕಡಿಮೆ ಭಕ್ತರು ತೀರ್ಥೊದ್ಭವ ಸಂದರ್ಭದಲ್ಲಿ ಭಾಗವಹಿಸಬೇಕು. ಈ ಬಾರಿ ಕಾವೇರಿಯ ಕುಡಿಕೆ ಬಳಿ ಸ್ನಾನಕ್ಕೆ ಅವಕಾಶ ಇರುವುದಿಲ್ಲ. ಕೇವಲ ತೀರ್ಥ ಸ್ವೀಕರಿಸಿ ಹೋಗುವುದಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

  • ತಲಕಾವೇರಿಯಲ್ಲಿ ತೀರ್ಥೋದ್ಭವ- ತೀರ್ಥ ರೂಪದಲ್ಲಿ ಕಾವೇರಿ ದರ್ಶನ

    ತಲಕಾವೇರಿಯಲ್ಲಿ ತೀರ್ಥೋದ್ಭವ- ತೀರ್ಥ ರೂಪದಲ್ಲಿ ಕಾವೇರಿ ದರ್ಶನ

    ಮಡಿಕೇರಿ: ಕಾವೇರಿ ಮಾತೆ ತೀರ್ಥ ರೂಪಿಣಿಯಾಗಿ ದರ್ಶನ ನೀಡಿದ್ದಾರೆ.

    ಇಂದು ಬೆಳಗ್ಗೆ 7 ಗಂಟೆ 3 ನಿಮಿಷಕ್ಕೆ ಕನ್ಯಾಲಗ್ನದಲ್ಲಿ ತೀರ್ಥೋದ್ಭವವಾಗಿದೆ. ಬ್ರಹ್ಮಕುಂಡಿಕೆಯ ಬಳಿ ಗೋಪಾಲ್ ಕೃಷ್ಣ ಆಚಾರ್ ನೇ ತೃತ್ವದಲ್ಲಿ ವಿವಿಧ ಪೂಜಾ ಕೈಂಕರ್ಯ ನೆರವೇರುತ್ತಿದ್ದು, ಬ್ರಹ್ಮ ಕುಂಡಿಕೆ, ಅಗಸ್ತೇಶ್ವರ ದೇವಾಲಯ ಮತ್ತು ಭಾಗಮಂಡಲ ದೇವಾಲಯಗಳಿಗೆ ವಿದ್ಯುತ್ ದೀಪ ಮತ್ತು ಪುಷ್ಪಾಲಂಕಾರ ಮಾಡಲಾಗಿದೆ.

    ಕೋವಿಡ್ ಮಿತಿ ಮೀರುತ್ತಿರುವುದರಿಂದ ತೀರ್ಥೋಧ್ಭವ ಸಂದರ್ಭದಲ್ಲಿ ದೇವಾಲಯ ಅರ್ಚಕರು, ಸಿಬ್ಬಂದಿ ಮತ್ತು ಉಸ್ತುವಾರಿ ಸಚಿವರು ಹಾಗೂ ಕೆಲವೇ ಅಧಿಕಾರಿಗಳಿಗೆ ಮಾತ್ರವೇ ಭಾಗವಹಿಸಲು ಅವಕಾಶ ನೀಡಲಾಗಿದೆ. ತೀರ್ಥೋಧ್ಭವದ ಬಳಿಕ ಭಕ್ತರು ತಲಕಾವೇರಿಗೆ ಬಂದು ತೀರ್ಥ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

    ತೀರ್ಥ ಪಡೆದುಕೊಳ್ಳಲು ನೂಕುನುಗ್ಗಲು ಆಗದಂತೆ ಕೊಳದ ಸುತ್ತಮುತ್ತ ಬ್ಯಾರಿಕೇಡ್ ಅಳವಡಿಸಲಾಗಿದೆ. ತೀರ್ಥ ವಿತರಣೆಗೆ ಐದು ಕೌಂಟರ್ ತೆರಯಾಗಿದ್ದು, ಪ್ರತೀ ಕೌಂಟರ್ ಬಳಿ ತಲಾ ಎರಡು ಮೂರು ಕೊಳಾಯಿಗಳನ್ನು ಇಟ್ಟು ವ್ಯವಸ್ಥೆ ಮಾಡಲಾಗಿದೆ. ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಂದ ಬರುವ ಭಕ್ತರಿಗೆ ಕೋವಿಡ್ ಟೆಸ್ಟ್ ನೆಗೆಟಿವ್ ವರದಿ ಕಡ್ಡಾಯ ಮಾಡಲಾಗಿದೆ.

    ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಸಮಾಧಾನ:
    ಕಾವೇರಿ ತೀರ್ಥೋಧ್ಭವಕ್ಕೆ ಭಾಗವಹಿಸಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಸಮಾಧಾನ ಹೊರಹಾಕಿದ್ದಾರೆ. ತಲಕಾವೇರಿ ಹೆಬ್ಬಾಗಿಲಿನಲ್ಲೇ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಕೊಡಗಿನ ಪದ್ಧತಿ ಬಗ್ಗೆ ಡಿಸಿಗೆ ಏನು ಗೊತ್ತು. ತೀರ್ಥೋಧ್ಭವ ವರ್ಷಕ್ಕೆ ಒಮ್ಮೆ ಆಗೋದು. ಅದಕ್ಕೆ ಬಿಡೋದಿಲ್ಲ ಅಂದರೆ ಹೇಗೆ?. ಇದು ಭಾರತವೇ ಇಲ್ಲ ಪಾಕಿಸ್ತಾನವೇ. ಎಲ್ಲದಕ್ಕೂ ಕೊರೊನಾ ಕೊರೊನಾ ಎಂದರೆ ಹೇಗೆ?. ಎಲ್ಲವನ್ನು ಅವರ ಇಚ್ಛೆಯಂತೆ ಮಾಡಿದರೆ ಹೇಗೆ ಎಂದು ಪ್ರಶ್ನಿಸುವ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ.

  • ತಲಕಾವೇರಿ ತೀರ್ಥೋದ್ಭವಕ್ಕೆ ಭಕ್ತರಿಗೆ ನಿರ್ಬಂಧ

    ತಲಕಾವೇರಿ ತೀರ್ಥೋದ್ಭವಕ್ಕೆ ಭಕ್ತರಿಗೆ ನಿರ್ಬಂಧ

    ಮಡಿಕೇರಿ: ಇದೇ ಅಕ್ಟೋಬರ್ 17 ರಂದು ಕನ್ನಡನಾಡಿನ ಜೀವ ನದಿ ತಲಕಾವೇರಿಯಲ್ಲಿ ತೀರ್ಥೋದ್ಭವ ಜರುಗಲಿದೆ. ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ಕಾವೇರಿ ತೀರ್ಥೋದ್ಭವದ ವೇಳೆಯಲ್ಲಿ ಭಕ್ತರಿಗೆ ನಿರ್ಬಂಧ ಮಾಡಲಾಗಿದೆ ಎಂದು ಕೊಡಗು ಜಿಲ್ಲಾಧಿಕಾರಿ ಅನೀಸ್ ಕೆ ಜಾಯ್ ತಿಳಿಸಿದ್ದಾರೆ.

    ಮಡಿಕೇರಿ ತಾಲೂಕಿನ ತಲಕಾವೇರಿಯಲ್ಲಿ ತೀರ್ಥೋದ್ಭವ ಜನದಟ್ಟಣೆ ಆಗದಂತೆ ಸಾಂಪ್ರದಾಯಿಕ ವಿಧಿ-ವಿಧಾನಗಳಿಗೆ ಧಕ್ಕೆಯಾಗದಂತೆ ಪೂಜಾ ವಿಧಿ-ವಿಧಾನಗಳು ನಡೆಯಲಿದೆ. ಅಷ್ಟೇ ಅಲ್ಲದೇ ಈ ಬಾರಿ ತೀರ್ಥೋದ್ಭವದಲ್ಲಿ ಸ್ವಯಂಸೇವಕರು ಹಾಗೂ ಅರ್ಚಕಗಳಿಗೂ ಆರ್‍ಟಿಪಿಸಿಆರ್ ಕೊರೊನಾ ಟೆಸ್ಟ್ ಕಡ್ಡಾಯ. ಕೊವೀಡ್ ಪರೀಕ್ಷಾ ತಪಾಸಣೆಗೆ ಒಳಗಾಗಿ ನೆಗೆಟಿವ್ ವರದಿ ಬರುವವರಿಗೆ ಕಾರ್ಯಕ್ರಮಕ್ಕೆ ಭಾಗವಹಿಸಲು ಪೊಲೀಸ್ ಇಲಾಖೆ ಪಾಸ್ ನೀಡಲಿದೆ.

    ಅಷ್ಟೇ ಅಲ್ಲದೇ ಈ ಬಾರಿ ಅಕ್ಟೋಬರ್ 17 ಮತ್ತು 26 ದಸರಾ ಇರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳನ್ನು ಬಂದ್ ಮಾಡಲಾಗುವುದು. ಪ್ರವಾಸಿಗರು ಸ್ಥಳೀಯರು ಸಹಕಾರಿಸುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

  • ಬ್ರಹ್ಮಕುಂಡಿಕೆಯಲ್ಲಿ ಉದ್ಭವಿಸಿದ ಕೊಡಗಿನ ಕುಲದೇವತೆ

    ಬ್ರಹ್ಮಕುಂಡಿಕೆಯಲ್ಲಿ ಉದ್ಭವಿಸಿದ ಕೊಡಗಿನ ಕುಲದೇವತೆ

    – ಪುಣ್ಯಸ್ನಾನದಲ್ಲಿ ಮಿಂದೆದ್ದ ಭಕ್ತಸ್ತೋಮ

    ಮಡಿಕೇರಿ: ಕೊಡಗಿನ ಕುಲದೇವತೆ ಕನ್ನಡ ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ಮಾತೆ ಕಾವೇರಿ ತೀರ್ಥರೂಪಿಣಿಯಾಗಿ ಸಾವಿರಾರು ಭಕ್ತರಿಗೆ ದರ್ಶನ ನೀಡಿದ್ದಾಳೆ. ಈ ಅಪರೂಪದ ಕ್ಷಣಗಳಿಗೆ ಉಸ್ತುವಾರಿ ಸಚಿವ ವಿ ಸೋಮಣ್ಣ ಕಂದಾಯ ಸಚಿವ ಆರ್ ಅಶೋಕ್ ಸೇರಿದಂತೆ ವಿವಿಧ ಜನಪ್ರತಿನಿಧಿಗಳು ಸಾಕ್ಷಿಯಾದರು.

    ಅತ್ತ ಭಾವ ಪರವಶರಾಗಿ ಕಾವೇರಿ ಭಕ್ತರು ಸ್ತುತಿಸುತ್ತಿದ್ದರೆ, ಇತ್ತ ಪುರೋಹಿತರು ಮಹಾ ಸಂಕಲ್ಪ ಪೂಜೆ, ಮಹಾಪೂಜೆ ಸಹಸ್ರನಾಮಾರ್ಚನೆ, ಮಹಾಮಂಗಳಾರತಿ ಮಾಡುತ್ತಿದ್ದರು. ನಿಗದಿಯಂತೆ ರೋಹಿಣಿ ನಕ್ಷತ್ರ ಕರ್ಕಾಟಕ ಲಗ್ನದಲ್ಲಿ ತೀರ್ಥ ಸ್ವರೂಪಿಣಿಯಾಗಿ ರಾತ್ರಿ 12 ಗಂಟೆ 57 ನಿಮಿಷಕ್ಕೆ ಸರಿಯಾಗಿ ವಿಶ್ವಕ್ಕೆ ತನ್ನ ದರ್ಶನ ನೀಡಿದಳು.

    ಭಕ್ತರ ಸಂತಸ ಭಕ್ತಿ ಭಾವಕ್ಕೆ ಪಾರವೇ ಇರಲಿಲ್ಲ. ಅಲೆ ಅಲೆಯಾಗಿ ತೂಗುತ್ತಾ ತೀರ್ಥಕುಂಡಿಕೆಯಿಂದ ಪವಿತ್ರ ಜಲ ಉಕ್ಕಿಬಂದಿದ್ದನ್ನು ಕಂಡ ಭಕ್ತರು “ಜೈ ಜೈಮಾತಾ, ಕಾವೇರಿ ಮಾತಾ” ಎಂದು ಘೋಷ ಮೊಳಗಿಸುತ್ತಾ ಕಾವೇರಿ ಮಾತೆಯ ದರ್ಶನ ಪಡೆದು ಪುನೀತರಾದರು.

    ಕಾವೇರಿ ತನ್ನ ಸಹೋದರಿ ಗಂಗೆಯೊಂದಿಗೆ ಸೇರಿ ತುಲಾ ಸಂಕ್ರಮಣದ ಈ ಕಾಲದಲ್ಲಿ ತೀರ್ಥ ಸ್ವರೂಪಿಣಿಯಾಗಿ ಉಕ್ಕಿಬರುತ್ತಾಳೆ. ಈ ಸಮಯದಲ್ಲಿ ತಲಕಾವೇರಿಯಲ್ಲಿ ಪುಣ್ಯಸ್ನಾನ ಮಾಡಿ ತೀರ್ಥ ಸಂಗ್ರಹ ಮಾಡಿದರೆ ಪುಣ್ಯ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಇದೆ. ವರ್ಷಕ್ಕೊಮ್ಮೆ ಘಟಿಸುವ ಈ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ಉಸ್ತುವಾರಿ ಸಚಿವ ವಿ ಸೋಮಣ್ಣ, ಕಂದಾಯ ಸಚಿವ ಆರ್ ಅಶೋಕ್, ವಿರಾಜಪೇಟೆ ಶಾಸಕ ಕೆ. ಜಿ ಬೋಪಯ್ಯ ಸೇರಿದಂತೆ ಹಲವು ಜನಪ್ರತಿನಿಧಿಗಳು ಆಗಮಿಸಿದ್ದರು.

    ತೀರ್ಥ ಉದ್ಭವವಾದ ಒಂದು ತಿಂಗಳ ಕಾಲ ತುಲಾ ಸಂಕ್ರಮಣ ಮಹೋತ್ಸವ ನಡೆಯಲಿದ್ದು, ಒಂದು ತಿಂಗಳ ಅವಧಿಯಲ್ಲಿ ಲಕ್ಷಾಂತರ ಭಕ್ತರು ತಲಕಾವೇರಿಗೆ ಭೇಟಿ ನೀಡಿ ತಾಯಿ ಕೃಪೆಗೆ ಪಾತ್ರರಾಗಲಿದ್ದಾರೆ.

  • ತಲಕಾವೇರಿಯಲ್ಲಿ ತೀರ್ಥೋದ್ಭವ ತಯಾರಿ – ಮಧ್ಯರಾತ್ರಿ ತೀರ್ಥರೂಪಿಣಿಯಾಗಿ ಕಾವೇರಿ ದರ್ಶನ

    ತಲಕಾವೇರಿಯಲ್ಲಿ ತೀರ್ಥೋದ್ಭವ ತಯಾರಿ – ಮಧ್ಯರಾತ್ರಿ ತೀರ್ಥರೂಪಿಣಿಯಾಗಿ ಕಾವೇರಿ ದರ್ಶನ

    ಮಡಿಕೇರಿ: ಕರುನಾಡ ಜೀವನದಿ ಕಾವೇರಿಯ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದೆ. ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ಇಂದು ಕಾವೇರಿಯು ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಲಿದ್ದಾಳೆ.

    ಪವಿತ್ರ ತೀರ್ಥೋದ್ಭವ ಕ್ಷೇತ್ರ ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಭರ್ಜರಿ ಸಿದ್ಧತೆಗಳು ನಡೆಯುತ್ತಿದೆ. ಮಧ್ಯರಾತ್ರಿ 12.59ಕ್ಕೆ ಸಲ್ಲುವ ಕರ್ಕಾಟಕ ಲಗ್ನದಲ್ಲಿ ಪವಿತ್ರ ತೀರ್ಥೋದ್ಭವ ಜರುಗಲಿದ್ದು, ಬ್ರಹ್ಮ ಕುಂಡಿಕೆಯಿಂದ ಪವಿತ್ರ ತೀರ್ಥ ಉಕ್ಕಿ ಬರಲಿದೆ. ಈ ವಿಸ್ಮಯ ನೋಡಲು ಭಕ್ತರು ಕಾತರದಿಂದ ಕಾಯುತ್ತಿದ್ದಾರೆ. ತೀರ್ಥೋದ್ಭವಕ್ಕೂ ಮೊದಲು ತಲಕಾವೇರಿ ಕ್ಷೇತ್ರದಲ್ಲಿ ಧಾರ್ಮಿಕ ಪೂಜೆಗಳು ನೆರವೇರಲಿದೆ.

    ಇಂದು ಸಂಜೆ ಮಹಾಮಂಗಳಾರತಿ ನಂತರ ಭಕ್ತರಿಗೆ ಕ್ಷೇತ್ರಕ್ಕೆ ಪ್ರವೇಶ ಸಿಗಲಿದೆ. ನಾನಾ ಪೂಜಾ ಕೈಂಕರ್ಯಗಳು ನಡೆಯಲಿದ್ದು, ಅರ್ಚಕರ ತಂಡ ಕೂಡ ಕಾವೇರಿ ಮಾತೆಯ ಸ್ವಾಗತಕ್ಕೆ ಸಜ್ಜಾಗಿದೆ. ಮಂಡ್ಯ, ಮೈಸೂರು, ಹಾಸನ ಸೇರಿ ರಾಜ್ಯ, ದೇಶದ ನಾನಾ ಕಡೆಗಳಿಂದ ಭಕ್ತರು ಆಗಮಿಸಲಿದ್ದು, ಭಗಂಡೇಶ್ವರನಿಗೆ ಪೂಜೆ ಸಲ್ಲಿಸಿದ ನಂತರ ಕಾವೇರಿ ಮಾತೆಯ ದರ್ಶನ ಪಡೆಯಲಿದ್ದಾರೆ. ಹೀಗಾಗಿ ಈಗಾಗಲೇ ಲೈಟಿಂಗ್ ವ್ಯವಸ್ಥೆ, ಭದ್ರತೆಗಾಗಿ ಸಿಸಿಟಿವಿ ಸೇರಿ 500ಕ್ಕೂ ಹೆಚ್ಚು ಪೊಲೀಸರನ್ನ ನಿಯೋಜಿಸಲಾಗಿದೆ.

    ತಲಕಾವೇರಿಯಲ್ಲಿ ಭಕ್ತರು ತೀರ್ಥಸ್ವರೂಪಿಣಿ ಕಾವೇರಿಮಾತೆಯನ್ನು ಕಣ್ತುಂಬಿಕೊಳ್ಳಲು ಕಾತರರಾಗಿದ್ದಾರೆ. ತೀರ್ಥೋದ್ಭವದ ವಿಸ್ಮಯವನ್ನ ನೋಡಲು ಭಕ್ತರ ದಂಡೇ ತಲಕಾವೇರಿಗೆ ಆಗಮಿಸುತ್ತಿದೆ.

  • ಮೇಷ ಲಗ್ನದಲ್ಲಿ ತೀರ್ಥ ರೂಪಿಣಿಯಾಗಿ ಉಕ್ಕಿದ ಕಾವೇರಿ ಮಾತೆ

    ಮೇಷ ಲಗ್ನದಲ್ಲಿ ತೀರ್ಥ ರೂಪಿಣಿಯಾಗಿ ಉಕ್ಕಿದ ಕಾವೇರಿ ಮಾತೆ

    ಮಡಿಕೇರಿ: ನಾಡಿನ ಜೀವನದಿಯಾಗಿರುವ ಕಾವೇರಿ ತಾಯಿಯ ಉಗಮಸ್ಥಾನವಾಗಿರುವ ತಲಕಾವೇರಿಯಲ್ಲಿ ಸಂಜೆ ಸರಿಯಾಗಿ 6.43ರ ಮೇಷ ಲಗ್ನದಲ್ಲಿ ತೀರ್ಥ ರೂಪಿಣಿಯಾಗಿ ಉಕ್ಕಿ ಬಂದಿದ್ದಾಳೆ.

    ಇಂದು ಸಂಜೆ ಮಹಾಮಂಗಳಾರತಿಯ ನಂತರ ಕಾವೇರಿ ತಾಯಿಯು ತೀರ್ಥ ರೂಪದಲ್ಲಿ ಕಾವೇರಿ ಬ್ರಹ್ಮ ಕುಂಡಿಕೆಯಿಂದ ಹರಿದಿದ್ದಾಳೆ. ಉಗಮದ ನಂತರ ಭಕ್ತರ ದಂಡು ಕಾವೇರಿ ತೀರ್ಥವನ್ನು ಪಡೆಯಲು ಮುಗಿಬಿದ್ದಿದ್ದರು. ವರ್ಷಕ್ಕೊಮ್ಮೆ ನಡೆಯುವ ಈ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ದೇಶದ ವಿವಿಧೆಡೆಗಳಿಂದ ಸಹಸ್ರಾರು ಸಂಖ್ಯೆಯ ಭಕ್ತರು ಆಗಮಿಸಿದ್ದರು. ಅಲ್ಲದೇ ಈ ಬಾರಿ ಸಿಎಂ ಕುಮಾರಸ್ವಾಮಿಯವರು ಆಗಮಿಸಿದ್ದು ವಿಶೇಷವಾಗಿತ್ತು.

    ಸಿಎಂ ಕುಮಾರಸ್ವಾಮಿಯವರಿಗೆ, ಸಚಿವರಾದ ಸಾ.ರಾ.ಮಹೇಶ್, ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಹಾಗೂ ಶಾಸಕರಾದ ಅಪ್ಪಚ್ಚು ರಂಜನ್, ಬೋಪಯ್ಯ ಸಾಥ್ ನೀಡಿದ್ದರು. ಇವರಲ್ಲದೇ ಸಂಸದ ಪ್ರತಾಪ್ ಸಿಂಹ ಕೂಡ ಕಾವೇರಿ ತಾಯಿಯ ದರ್ಶನ ಪಡೆದುಕೊಂಡಿದ್ದಾರೆ.

    ಬ್ರಹ್ಮಗಿರಿಯ ಮಡಿಲಿನಲ್ಲಿ ಹುಟ್ಟುವ ಕಾವೇರಿ ಮಾತೆ ರಾಜ್ಯದಲ್ಲಿ ಹರಿದು ರೈತರ ಹೊಲಗದ್ದೆಗಳನ್ನು ಹಸಿರಾಗಿಸಿ, ಅನ್ನದಾತೆಯಾಗಿ ಹರಿಯುತ್ತಾಳೆ. ಹಾಗಾಗಿ ಕಾವೇರಿ ನೀರನ್ನು ಬಳಸುವ ಮಂಡ್ಯ, ಮೈಸೂರು, ಬೆಂಗಳೂರು, ಹಾಸನ ಜಿಲ್ಲೆಗಳಿಂದ ಸೇರಿದಂತೆ ದೇಶದ ಹಲವೆಡೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ.

    ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿ ಅಲ್ಲಿ ಭಗಂಡೇಶ್ವರನಿಗೆ ಪೂಜೆ ಸಲ್ಲಿಸಿ ನಂತರ ಕಾವೇರಿ ಮಾತೆಯ ದರ್ಶನ ಪಡೆಯುತ್ತಾರೆ. ತೀರ್ಥೋದ್ಭವವಾಗುತ್ತಿದ್ದಂತೆ ತೀರ್ಥ ಸಂಗ್ರಹಿಸಲು ಮುಗಿಬೀಳುವ ಜನರು ತೀರ್ಥವನ್ನು ಸಂಗ್ರಹಿಸಿ ಮನೆಗೆ ಕೊಂಡೊಯ್ಯುತ್ತಾರೆ.

    ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದ ಹಿನ್ನೆಲೆಯಲ್ಲಿ 12 ಕಿಲೋಮೀಟರ್ ದೂರದಿಂದಲೇ ಬೆಳಕಿನ ವ್ಯವಸ್ಥೆಗಾಗಿ 1,500 ಕ್ಕೂ ಹೆಚ್ಚು ಟ್ಯೂಬ್ ಲೈಟ್ ಗಳು, ತಾತ್ಕಾಲಿಕ ಶೌಚಾಲಯ, ಅನ್ನದಾನಕ್ಕೆ ವ್ಯವಸ್ಥೆ, ಭದ್ರತೆಗಾಗಿ ಹೆಚ್ಚಿನ ಸಿಸಿಟಿವಿ ಸೇರಿದಂತೆ 400 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು. ಯಾವುದೇ ರೀತಿಯಲ್ಲಿ ನೂಕು ನುಗ್ಗಲು ಉಂಟಾಗದಂತೆ ಏಕಮುಖ ಸಂಚಾರದಲ್ಲಿ ಬ್ಯಾರಿಕೇಡ್ ಹಾಕಲಾಗಿತ್ತು.

    ಸಂಪ್ರದಾಯಕ್ಕೆ ಸೆಡ್ಡು ಹೊಡೆದ ಸಿಎಂ ಎಚ್‍ಡಿಕೆ?
    ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಸಿಎಂ ಕುಮಾರಸ್ವಾಮಿ ಸಂಪ್ರದಾಯಕ್ಕೆ ಸೆಡ್ಡು ಹೊಡೆದು, ಕಾವೇರಿ ತಾಯಿಯ ತೀರ್ಥೋದ್ಭವದಲ್ಲಿ ಭಾಗವಹಿಸಿದ್ದಾರೆ. ವಾಡಿಕೆಯ ಪ್ರಕಾರ ಉನ್ನತ ಸ್ಥಾನದಲ್ಲಿರುವವರು, ಕಾವೇರಿ ತಾಯಿಯ ತೀರ್ಥೋದ್ಭವ ಕಾರ್ಯಕ್ರಮದಲ್ಲಿ ಭಾಗಿಯಾದರೆ, ಅಧಿಕಾರವನ್ನು ಕಳೆದುಕೊಳ್ಳುತ್ತಾರೆ ಎನ್ನುವ ಸಂಪ್ರದಾಯ ರೂಢಿಯಲ್ಲಿದೆ. ಹೀಗಾಗಿ ಇದುವರೆಗೂ ಯಾವೊಬ್ಬ ಮುಖ್ಯಮಂತ್ರಿಯೂ ಸಹ ತೀರ್ಥೋದ್ಭವ ಕಾರ್ಯದಲ್ಲಿ ಪಾಲ್ಗೊಂಡಿರಲಿಲ್ಲ.

    ಸಿಎಂ ಕುಮಾರಸ್ವಾಮಿ ತೀರ್ಥೋದ್ಭವಕ್ಕೆ ಆಗಮಿಸುತ್ತಾರೆ ಎನ್ನುವ ಬೆನ್ನಲ್ಲೇ, 3 ಕೆಎಸ್‍ಆರ್ ಪಿ ತುಕಡಿ, 8 ಡಿಎಆರ್, 2 ಎಎಎನ್‍ಎಫ್, 5 ಡಿವೈಎಸ್‍ಪಿ, 15 ಸಿಸಿಐ, 25 ಪಿಎಸ್‍ಐ, 80 ಎಎಸ್‍ಐ, 600 ಪಿಸಿ, 100 ಮಹಿಳಾ ಪಿಸಿ, 200 ಜನ ಗೃಹರಕ್ಷ ಕದಳ ಸಿಬ್ಬಂದಿ ಹಾಗೂ ಸುಮಾರು 20ಕ್ಕೂ ಹೆಚ್ಚಿನ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=Xorj0NG_ABk