Tag: ತೀಸ್ತಾ ನದಿ

  • ಸಿಕ್ಕಿಂ ಪ್ರವಾಹ – 102 ಜನ ನಾಪತ್ತೆ, ಸಾವಿನ ಸಂಖ್ಯೆ 14ಕ್ಕೆ ಏರಿಕೆ

    ಸಿಕ್ಕಿಂ ಪ್ರವಾಹ – 102 ಜನ ನಾಪತ್ತೆ, ಸಾವಿನ ಸಂಖ್ಯೆ 14ಕ್ಕೆ ಏರಿಕೆ

    ಗ್ಯಾಂಗ್ಟಾಕ್: ಸಿಕ್ಕಿಂನಲ್ಲಿ (Sikkim)‌ ಬುಧವಾರ ಮುಂಜಾನೆ ಸಂಭವಿಸಿದ ಹಠಾತ್ ಪ್ರವಾಹದಲ್ಲಿ (Flood) ಇದುವರೆಗೆ 14 ಜನರು ಸಾವನ್ನಪ್ಪಿದ್ದಾರೆ. 102 ಮಂದಿ ನಾಪತ್ತೆಯಾಗಿದ್ದಾರೆ ಎಂದು ಸಿಕ್ಕಿಂ ಸರ್ಕಾರ ತಿಳಿಸಿದೆ. ಮಾತ್ರವಲ್ಲದೇ ರಾಜ್ಯದ ವಿವಿಧ ಭಾಗಗಳಲ್ಲಿ 3,000 ಪ್ರವಾಸಿಗರು ಸಿಲುಕಿರುವ ಆತಂಕ ವ್ಯಕ್ತವಾಗಿದೆ.

    ವಾಯುವ್ಯ ಸಿಕ್ಕಿಂನಲ್ಲಿರುವ ಸೌತ್ ಲೊನಾಕ್ ಸರೋವರದಲ್ಲಿ ಬುಧವಾರ ಬೆಳಗ್ಗೆ ಸುರಿದ ನಿರಂತರ ಮಳೆಗೆ ಮೇಘಸ್ಫೋಟ (Cloudburst) ಉಂಟಾಗಿದೆ. ಇದರಿಂದ ತೀಸ್ತಾ ನದಿಯಲ್ಲಿ ಹಠಾತ್ ಪ್ರವಾಹ ಉಂಟಾಯಿತು. ಇದರಿಂದಾಗಿ ಸಿಂಗ್ಟಾಮ್ ಪಟ್ಟಣದ ತೀಸ್ತಾ ನದಿಯ ಇಂದ್ರೇಣಿ ಸೇತುವೆ ಮೂಲಕ ಪ್ರವಾಹ ಸಾಗಿದೆ. ಬೆಳಗಿನ ಜಾವ 4 ಗಂಟೆ ಸುಮಾರಿಗೆ ಬಲೂಟಾರ್ ಕುಗ್ರಾಮದ ಮತ್ತೊಂದು ಸಂಪರ್ಕ ಸೇತುವೆ ಕೂಡ ಕೊಚ್ಚಿ ಹೋಗಿದೆ.

    ಸಿಕ್ಕಿಂ ಮುಖ್ಯ ಕಾರ್ಯದರ್ಶಿ ವಿಬಿ ಪಾಠಕ್ ಅವರು ಹಂಚಿಕೊಂಡ ಮಾಹಿತಿಯ ಪ್ರಕಾರ, ಲೊನಾಕ್ ಸರೋವರದಲ್ಲಿ ಮಂಗಳವಾರ ರಾತ್ರಿ 10:42 ರ ಸುಮಾರಿಗೆ ಮೇಘಸ್ಫೋಟ ಉಂಟಾಗಿದೆ. ನಂತರ ಸರೋವರ ಅದರ ದಂಡೆಯನ್ನು ಭೇದಿಸಿ ತೀಸ್ತಾ ನದಿಯ ಕಡೆಗೆ ಪ್ರವಾಹ ರೂಪದಲ್ಲಿ ಸಾಗಿದೆ. ಶೀಘ್ರವೇ ತೀಸ್ತಾ ಜಲಾನಯನ ಪ್ರದೇಶದಲ್ಲಿ ನೀರಿನ ಮಟ್ಟ ಏರಿಕೆ ವರದಿಯಾಗಿದೆ. ವಿಶೇಷವಾಗಿ ಚುಂಗ್‌ಥಾಂಗ್‌ನಲ್ಲಿ ತೀಸ್ತಾ ಸ್ಟೇಜ್ 3 ಅಣೆಕಟ್ಟು ಒಡೆದು ಆತಂಕ ಸೃಷ್ಟಿಯಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: 2 ಲಕ್ಷ ಬಹುಮಾನಕ್ಕಾಗಿ 10 ನಿಮಿಷದಲ್ಲಿ ಒಂದು ಲೀಟರ್ ಮದ್ಯ ಕುಡಿದು ವ್ಯಕ್ತಿ ಸಾವು

    ಚುಂಗ್‌ಥಾಂಗ್‌ನ ತೀಸ್ತಾ ಸ್ಟೇಜ್ 3 ಅಣೆಕಟ್ಟಿನಲ್ಲಿ ಕೆಲಸ ಮಾಡುತ್ತಿದ್ದ 12-14 ಕಾರ್ಮಿಕರು ಇನ್ನೂ ಅಲ್ಲಿನ ಸುರಂಗಗಳಲ್ಲಿ ಸಿಲುಕಿಕೊಂಡಿದ್ದಾರೆ. ಮಂಗನ್ ಜಿಲ್ಲೆಯ ಚುಂಗ್ತಾಂಗ್ ಮತ್ತು ಗ್ಯಾಂಗ್ಟಾಕ್ ಜಿಲ್ಲೆಯ ಡಿಕ್ಚು, ಸಿಂಗ್ಟಾಮ್ ಮತ್ತು ಪಾಕ್ಯೊಂಗ್ ಜಿಲ್ಲೆಯ ರಂಗ್ಪೋದಿಂದ ಹಲವರು ನಾಪತ್ತೆಯಾಗಿದ್ದಾರೆ ಹಾಗೂ ಹೆಚ್ಚಿನವರಿಗೆ ಗಾಯಗಳಾಗಿವೆ.

    ಒಟ್ಟಾರೆಯಾಗಿ ರಾಜ್ಯದಾದ್ಯಂತ 26 ಜನರು ಗಾಯಗೊಂಡಿದ್ದಾರೆ. ಅವರೆಲ್ಲರನ್ನು ಆಸ್ಪತ್ರೆಗಳಿಗೆ ಸಾಗಿಸಲಾಗಿದೆ. ಬರ್ದಂಗ್‌ನಲ್ಲಿ 23 ಸೇನಾ ಸಿಬ್ಬಂದಿ ಇನ್ನೂ ನಾಪತ್ತೆಯಾಗಿದ್ದಾರೆ. ಅವರು ಬೆಂಗಾವಲು ವಾಹನ ಪ್ರವಾಹದ ಕೆಸರಿನಲ್ಲಿ ಮುಳುಗಿದೆ. ರಾಜ್ಯ ಸರ್ಕಾರ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ 3 ಹೆಚ್ಚುವರಿ ತುಕಡಿಗಳನ್ನು ಕೇಳಿದೆ. ಇದನ್ನು ಕೇಂದ್ರ ಸರ್ಕಾರ ಅನುಮೋದಿಸಿದೆ. ಎನ್‌ಡಿಆರ್‌ಎಫ್‌ನ ಒಂದು ತುಕಡಿ ಈಗಾಗಲೇ ರಂಗ್ಪೋ ಮತ್ತು ಸಿಂಗ್ಟಮ್ ಪಟ್ಟಣಗಳಲ್ಲಿ ಕಾರ್ಯನಿರ್ವಹಿಸುತ್ತಿದೆ. ಇದನ್ನೂ ಓದಿ: ‌ICC World Cup 2023: ಇಂದಿನಿಂದ ವಿಶ್ವಕಪ್‌ ಮಹಾಸಮರ – ಇಂದು ಇಂಗ್ಲೆಂಡ್‌ ವಿರುದ್ಧ ನ್ಯೂಜಿಲೆಂಡ್ ಸೆಣಸಾಟ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಿಕ್ಕಿಂನಲ್ಲಿ ಮೇಘಸ್ಫೋಟ – ಹಠಾತ್ ಪ್ರವಾಹದಲ್ಲಿ 23 ಸೈನಿಕರು ನಾಪತ್ತೆ

    ಸಿಕ್ಕಿಂನಲ್ಲಿ ಮೇಘಸ್ಫೋಟ – ಹಠಾತ್ ಪ್ರವಾಹದಲ್ಲಿ 23 ಸೈನಿಕರು ನಾಪತ್ತೆ

    ಗ್ಯಾಂಗ್ಟಾಕ್: ಸಿಕ್ಕಿಂನ (Sikkim) ಲೊನಾಕ್ ಸರೋವರದಲ್ಲಿ ಮೇಘಸ್ಫೋಟ (Cloudburst) ಉಂಟಾಗಿದ್ದು, ತೀಸ್ತಾ ನದಿಯಲ್ಲಿ (Teesta River) ಹಠಾತ್ ಪ್ರವಾಹ (Flood) ಉಂಟಾಗಿ 23 ಸೈನಿಕರು (Soldiers) ನಾಪತ್ತೆಯಾಗಿದ್ದಾರೆ.

    ಚುಂಗ್ಥಾಂಗ್ ಅಣೆಕಟ್ಟಿನಿಂದ ನೀರನ್ನು ಬಿಡುಗಡೆ ಮಾಡಿದ್ದರಿಂದ ನೀರಿನ ಮಟ್ಟ ಹಠಾತ್ತನೆ 15-20 ಅಡಿಗಳಷ್ಟು ಎತ್ತರಕ್ಕೆ ಏರಿದೆ. ಇದರಿಂದ ಸಿಂಗ್ಟಾಮ್ ಬಳಿಯ ಬರ್ದಂಗ್‌ನಲ್ಲಿ ನಿಲ್ಲಿಸಲಾಗಿದ್ದ ಸೇನಾ ವಾಹನಗಳು ಕೊಚ್ಚಿಕೊಂಡು ಹೋಗಿವೆ. ಈ ಹಿನ್ನೆಲೆ 23 ಸೇನಾ ಸಿಬ್ಬಂದಿ ಕಾಣೆಯಾಗಿದ್ದಾರೆ. ಇನ್ನೂ ಕೆಲವು ವಾಹನಗಳು ಮುಳುಗಿವೆ ಎಂದು ವರದಿಯಾಗಿದೆ.

    ಹಠಾತ್ ಪ್ರವಾಹದಿಂದ ಲಾಚೆನ್ ಕಣಿವೆಯ ಉದ್ದಕ್ಕೂ ಹಲವಾರು ಸೇನಾ ಸಂಸ್ಥೆಗಳಿಗೆ ಹಾನಿಯಾಗಿದೆ. ಇದೀಗ ನಾಪತ್ತೆಯಾಗಿರುವ ಸಿಬ್ಬಂದಿಯ ಪತ್ತೆಗೆ ಶೋಧಕಾರ್ಯ ನಡೆಸಲಾಗುತ್ತಿದೆ. ಇದನ್ನೂ ಓದಿ: 34 ದಿನಗಳ ಬಳಿಕ 100 ಅಡಿಯ ಗಡಿ ದಾಟಿದ ಕೆಆರ್‌ಎಸ್ ನೀರಿನ ಮಟ್ಟ

    ನದಿ ಉಕ್ಕಿ ಹರಿಯುತ್ತಿರುವುದರಿಂದ ತೀಸ್ತಾ ನದಿಯ ಮೇಲಿನ ಸಿಂಗ್‌ತಮ್ ಕಾಲು ಸೇತುವೆ ಕುಸಿದಿದೆ. ಪಶ್ಚಿಮ ಬಂಗಾಳದಿಂದ ಸಿಕ್ಕಿಂಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 10ರ ಹಲವು ಭಾಗಗಳು ಕೊಚ್ಚಿ ಹೋಗಿವೆ. ಭಾರೀ ಪ್ರವಾಹದ ಹಿನ್ನೆಲೆ ಅನೇಕ ರಸ್ತೆಗಳಲ್ಲಿ ಸಂಚಾರವನ್ನು ನಿರ್ಬಂಧಿಸಲಾಗಿದೆ.

    ಸಿಕ್ಕಿಂ ಸರ್ಕಾರ ರಾಜ್ಯದಲ್ಲಿ ಹೈ ಅಲರ್ಟ್ ಘೋಷಿಸಿದ್ದು, ತೀಸ್ತಾ ನದಿಯಿಂದ ಜನರನ್ನು ದೂರ ತೆರಳುವಂತೆ ಕೇಳಿಕೊಂಡಿದೆ. ಪಶ್ಚಿಮ ಬಂಗಾಳದ ಆಡಳಿತ ಮುನ್ನೆಚ್ಚರಿಕಾ ಕ್ರಮವಾಗಿ ಜಲಾನಯನ ಪ್ರದೇಶದಿಂದ ಜನರನ್ನು ಸ್ಥಳಾಂತರಿಸಲು ಪ್ರಾರಂಭಿಸಿದೆ. ಇದನ್ನೂ ಓದಿ: ಹುಬ್ಬಳ್ಳಿ, ಉತ್ತರ ಕನ್ನಡ, ಬೆಳಗಾವಿ ಅರಣ್ಯದಲ್ಲಿ ತರಬೇತಿ: ಉಗ್ರರಿಂದ ಸ್ಫೋಟಕ ಮಾಹಿತಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]