Tag: ತುಂಗಭದ್ರಾ

  • ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯ ಯಶಸ್ವಿ

    ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯ ಯಶಸ್ವಿ

    ಬಳ್ಳಾರಿ: ತುಂಗಭದ್ರಾ ಜಲಾಶಯದ (Tungabhadra Dam) ಕ್ರಸ್ಟ್ ಗೇಟ್ ಸಂಖ್ಯೆ 19ಕ್ಕೆ ಸ್ಟಾಪ್ ಲಾಗ್ ಗೇಟ್ ಅಳವಡಿಕೆ ಕಾರ್ಯ ಯಶಸ್ವಿಯಾಗಿದೆ.

    ಕೊಚ್ಚಿ ಹೋಗಿದ್ದ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್‌ಗೆ ಎಲಿಮೆಂಟ್ ಅಳವಡಿಕೆ ಮಾಡಲಾಗಿತ್ತು. 19ನೇ ಗೇಟ್ ಸಂಪೂರ್ಣ ಬಂದ್ ಆಗಿದ್ದು, ಸೋರಿಕೆಯಾಗುತ್ತಿದ್ದ ನೀರಿಗೆ ಬ್ರೇಕ್ ಹಾಕಿದ್ದಾರೆ.  ಇನ್ನೂ ಇದೆ: ನಕಲಿ ಎನ್‍ಸಿಸಿ ಶಿಬಿರ ಆಯೋಜಿಸಿ 13 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ – 11 ಮಂದಿ ಅರೆಸ್ಟ್  

    ಆಗಸ್ಟ್ 17 ರಂದು ಸಂಜೆ ಸ್ಟಾಪ್ ಲಾಗ್ ಗೇಟ್‌ನ ಐದು ಎಲಿಮೆಂಟ್‌ಗಳನ್ನು ಜೋಡಿಸಲಾಗಿತ್ತು. ಎಲಿಮೆಂಟ್‌ಗಳ ಸಂದುಗಳಿಂದ ಸುಮಾರು 509 ಕ್ಯೂಸೆಕ್ ನಷ್ಟು ನೀರು ಹೊರ ಹರಿಯುತ್ತಿತ್ತು. ಸಿಬ್ಬಂದಿಗಳು ದುರಸ್ತಿ ಕಾರ್ಯ ಮುಂದುವರೆಸಿ ಗೇಟ್‌ನ ಸಂದುಗಳನ್ನು ಮುಚ್ಚಿ ಸೋರಿಕೆ ತಡೆದಿದ್ದಾರೆ. ಇದರೊಂದಿಗೆ ಡ್ಯಾಂನಿಂದ 10,700 ಕ್ಯೂಸೆಕ್ ನೀರು ಮಾತ್ರ ಎಡ ಮತ್ತು ಬಲದಂಡೆ ಕಾಲುವೆಗಳಿಗೆ ಹರಿಸಲಾಗುತ್ತಿದೆ. ಈಗಾಗಲೇ ಜಲಾಶಯದಲ್ಲಿ ನೀರಿನ ಸಂಗ್ರಹಣೆ ಏರಿಕೆಯಾಗುತ್ತಿದೆ. ಇನ್ನೂ ಇದೆ: ಭಾರತೀಯರು ಜನಸಂಖ್ಯೆ ನಿಯಂತ್ರಣಕ್ಕೆ ಹೆಚ್ಚು ಗಮನ ಹರಿಸುತ್ತಿಲ್ಲ: ನಾರಾಯಣ ಮೂರ್ತಿ

    ಸ್ಟಾಪ್ ಲಾಗ್ ಗೇಟ್ ಅಳವಡಿಕೆ ಬಳಿಕ ಭಾನುವಾರ ರಾತ್ರಿ 8 ಗಂಟೆ ವೇಳೆಗೆ ಸುಮಾರು 2 ಟಿಎಂಸಿ ನೀರು ಸಂಗ್ರಹವಾಗಿದೆ. ಗೇಟ್ ದುರಸ್ತಿ ಕಾಮಗಾರಿ ಯಶಸ್ವಿಯಾಗಿರುವ ಹಿನ್ನೆಲೆ ಜಲಾಶಯಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಇನ್ನೂ ಇದೆ: ಡ್ರಾಪ್‌ ನೆಪದಲ್ಲಿ ಲೈಂಗಿಕ ದೌರ್ಜನ್ಯ – ಡ್ಯಾನ್ಸ್‌ ಕೊರಿಯೋಗ್ರಾಫರ್‌ ಅರೆಸ್ಟ್‌

  • ಗುರುರಾಘವೇಂದ್ರ ಸ್ವಾಮಿಗಳ ಏಕಶಿಲಾ ಬೃಂದಾವನ ಜಲಾವೃತ

    ಗುರುರಾಘವೇಂದ್ರ ಸ್ವಾಮಿಗಳ ಏಕಶಿಲಾ ಬೃಂದಾವನ ಜಲಾವೃತ

    ರಾಯಚೂರು: ತುಂಗಭದ್ರಾ ಜಲಾಶಯದಿಂದ (Tungabhadra Dam) ನದಿಗೆ ಭಾರೀ ಪ್ರಮಾಣದ ನೀರು ಹರಿಸಿರುವುದರಿಂದ ಗುರುರಾಘವೇಂದ್ರ ಸ್ವಾಮಿಗಳ ಏಕಶಿಲಾ ಬೃಂದಾವನ (Vrundavana) ಜಲಾವೃತವಾಗಿದ್ದು, ರಾಯರ ಜಪದ ಕಟ್ಟೆ ಮುಳುಗಡೆಯಾಗಿದೆ.

    ರಾಯಚೂರು (Raichuru) ತಾಲೂಕಿನ ಎಲೆಬಿಚ್ಚಾಲಿ ಗ್ರಾಮದಲ್ಲಿರುವ ರಾಯರ ಏಕಶಿಲಾ ಬೃಂದಾವನ ಜಲಾವೃತವಾಗಿದೆ. ತುಂಗಭದ್ರಾ ನದಿ (Tungabhadra River) ಮೈದುಂಬಿ ಹರಿಯುತ್ತಿರುವುದರಿಂದ ಬಿಚ್ಚಾಲಮ್ಮ ದೇವಿ ದೇವಾಲಯ ಬಳಿಯ ರಾಯರ ಬೃಂದಾವನಕ್ಕೆ ನೀರು ನುಗ್ಗಿದೆ.

    ಏಕಶಿಲಾ ಬೃಂದಾವನ ದರ್ಶನ ಪಡೆಯಲು ಭಕ್ತರು ಪರದಾಟ ನಡೆಸಿದ್ದಾರೆ. ರಾಯರ ಬೃಂದಾವನಕ್ಕೆ ನೀರಿನಲ್ಲೇ ತೆರಳಿ ಅರ್ಚಕರು ಪೂಜೆ, ಅಭಿಷೇಕ ಮಾಡಲು ಸಾಹಸಪಡುತ್ತಿದ್ದಾರೆ.

    ಗುರು ರಾಘವೇಂದ್ರ ಸ್ವಾಮಿಗಳು ತಪಸ್ಸು ಮಾಡಿದ್ದ ಜಪದ ಕಟ್ಟೆ ಸಂಪೂರ್ಣ ಮುಳುಗಡೆಯಾಗಿದೆ. ಮಂತ್ರಾಲಯಕ್ಕೆ ಬರುವ ಭಕ್ತರು ಎಲೆಬಿಚ್ಚಾಲಿಗೆ ತಪ್ಪದೇ ಭೇಟಿ ನೀಡುತ್ತಾರೆ. ರಾಯರ ಪರಮ ಭಕ್ತ ಅಪ್ಪಣ್ಣಾಚಾರ್ ಬೃಂದಾವನ ನಿರ್ಮಿಸಿ ಈ ಹಿಂದೆ ಪೂಜೆ ಮಾಡಿದ್ದರು.

    ಎಲೆಬಿಚ್ಚಾಲಿಯ ಬಿಚ್ಚಾಲಮ್ಮ ದೇವಾಲಯ ಸುತ್ತಲೂ ನೀರು ಆವರಿಸಿದೆ. ಇಲ್ಲಿನ ಉಗ್ರನರಸಿಂಹ ದೇವಾಲಯ, ನಾಗದೇವತೆ ಕಟ್ಟೆ, ಶಿವಲಿಂಗ ಜಲಾವೃತವಾಗಿದ್ದು ಮುಳುಗಡೆ ಹಂತದಲ್ಲಿವೆ.

     

  • ಟಿಬಿ ಡ್ಯಾಂ ಭರ್ತಿ, 28 ಕ್ರಸ್ಟ್‌ ಗೇಟ್‌ ಓಪನ್‌ – 83 ಸಾವಿರ ಕ್ಯುಸೆಕ್‌ ನೀರು ಹೊರಕ್ಕೆ

    ಟಿಬಿ ಡ್ಯಾಂ ಭರ್ತಿ, 28 ಕ್ರಸ್ಟ್‌ ಗೇಟ್‌ ಓಪನ್‌ – 83 ಸಾವಿರ ಕ್ಯುಸೆಕ್‌ ನೀರು ಹೊರಕ್ಕೆ

    ಕೊಪ್ಪಳ/ ಬಳ್ಳಾರಿ: ತುಂಗಭದ್ರಾ ಜಲಾಶಯ (Tungabhadra Dam)  ಬಹುತೇಕ ಭರ್ತಿಯಾಗಿದ್ದು ನದಿಗೆ 83,649 ಕ್ಯುಸೆಕ್‌ ನೀರನ್ನು ಬಿಡುಗಡೆ ಮಾಡಲಾಗಿದೆ.

    105 ಟಿಎಂಸಿ ಸಾಮರ್ಥ್ಯದ ತುಂಗಭದ್ರಾ ಜಲಾಶಯ‌ದಲ್ಲಿ 102. 576 ಟಿಎಂಸಿ ನೀರು ಸಂಗ್ರಹವಾಗಿದ್ದು,  28  ಕ್ರಸ್ಟ್ ಗೇಟ್‌ಗಳನ್ನು ತೆರೆಯುವ ಮೂಲಕ ನದಿಗೆ (Tungabhadra River) ನೀರು ಹರಿಸಲಾಗಿದೆ. ವಿಜಯನಗರ ಕಾಲುವೆ, ಎಡದಂಡೆ ಹಾಗೂ ಬಲದಂಡೆ ಕಾಲುವೆಗೂ ಸಹ ನೀರು ಬಿಡುಗಡೆ ಮಾಡಲಾಗಿದೆ.

    ಜಲಾಶಯಕ್ಕೆ ಸದ್ಯ 81030 ಕ್ಯೂಸೆಕ್ ನೀರು ಒಳಹರಿವು ಇದ್ದು, ಒಳಹರಿವಿನ ಪ್ರಮಾಣದಲ್ಲೇ ನದಿಗೆ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ಇದನ್ನೂ ಓದಿ: ಅತ್ತಿಗೆಯಿಂದಲೇ ದರ್ಶನ್ ಅಣ್ಣನಿಗೆ ಬಲ: ವಿಜಯಲಕ್ಷ್ಮಿ ಆಪ್ತೆ ಲತಾ ಜೈಪ್ರಕಾಶ್

     

    ಅಪಾರ ಪ್ರಮಾಣದ ನೀರು ನದಿಗೆ ಹರಿಸಿದ್ದರಿಂದ ಹಂಪಿಯ ಸಾಲು ಮಂಟಪ, ವಿಧಿ ವಿಧಾನ ಮಂಟಪ ಹಾಗೂ ಕೋದಂಡ ರಾಮ ದೇವಸ್ಥಾನಕ್ಕೆ ಮುಳುಗಡೆಯ ಭೀತಿ ಎದುರಾಗಿದೆ.  ನದಿಗೆ ಈಗಾಗಲೇ ನೀರು ಬಿಟ್ಟಿದ್ದರಿಂದ ನದಿಯಲ್ಲಿನ ಹಂಪಿಯ ಕೆಲ ಸ್ಮಾರಕಗಳು ಮುಳುಗಡೆಯಾಗಿವೆ.

    ಭಾರೀ ಪ್ರಮಾಣದ ನೀರನ್ನು ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ನದಿ ಪಾತ್ರಕ್ಕೆ ಜನರು ಮತ್ತು ಜಾನುವಾರುಗಳು ತೆರಳದಂತೆ ಜನರಿಗೆ ಡಂಗುರ ಸಾರಿ ಎಚ್ಚರಿಕೆ ನೀಡಲಾಗುತ್ತಿದೆ.

    ನದಿಗೆ ಅಳವಡಿಸಿದ್ದ ಪಂಪಸೆಟ್ ಮೋಟರ್‌ಗಳನ್ನ ತೆರವುಗೊಳಿಸಬೇಕು. ಮೀನುಗಾರಿಕೆ ನಡೆಸದಂತೆ ಎಚ್ಚರಿಕೆ ನೀಡಲಾಗಿದೆ.

     

  • ತುಂಗಭದ್ರಾ ಜಲಾಶಯಕ್ಕೆ ಒಂದೇ ದಿನದಲ್ಲಿ 5 TMC ನೀರಿನ ಒಳಹರಿವು

    ತುಂಗಭದ್ರಾ ಜಲಾಶಯಕ್ಕೆ ಒಂದೇ ದಿನದಲ್ಲಿ 5 TMC ನೀರಿನ ಒಳಹರಿವು

    ವಿಜಯನಗರ: ಕಲ್ಯಾಣ-ಕರ್ನಾಟಕದ ಜೀವನಾಡಿ ತುಂಗಭದ್ರಾ ಜಲಾಶಯಕ್ಕೆ (Tungabhadra Dam) ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸದ್ಯ 59,500 ಕ್ಯೂಸೆಕ್ ನೀರು ಒಳಹರಿವಿದ್ದು, ಕಳೆದ 24 ಗಂಟೆಯಲ್ಲಿ 5 ಟಿಎಂಸಿ ನೀರು ಜಲಾಶಯಕ್ಕೆ ಹರಿದು ಬಂದಿದೆ.

    ಸಂಪೂರ್ಣ ಖಾಲಿಯಾಗಿದ್ದ ಜಲಾಶಯ ನೀರಿನಿಂದ ಭರ್ತಿಯಾಗಿರುವುದು ಕಂಡು ಜನರು ಹರ್ಷಗೊಂಡಿದ್ದಾರೆ. ಒಂದೇ ದಿನದಲ್ಲಿ ತುಂಗಭದ್ರಾ ಜಲಾಶಯಕ್ಕೆ 5 ಟಿಎಂಸಿಗೂ ಅಧಿಕ ಪ್ರಮಾಣದ ನೀರು (Water Level) ಹರಿದುಬಂದಿದೆ. ಇದನ್ನೂ ಓದಿ: ತುಂಬಿ ಹರಿಯುತ್ತಿದ್ದ ಸೇತುವೆಯಲ್ಲೇ ಪಿಕಪ್ ಚಾಲನೆ!

    ಶನಿವಾರ 16.649 TMCನಷ್ಟಿದ್ದ ನೀರಿನ ಸಂಗ್ರಹ ಭಾನುವಾರವಾದ ಇಂದು 21.356 ಟಿಎಂಸಿಗೆ ಏರಿಕೆಯಾಗಿದೆ. ಒಳಹರಿವಿನ ಪ್ರಮಾಣವೂ ಹೆಚ್ಚಾಗಿದ್ದು, ಕಳೆದ 24 ಗಂಟೆಗಳಲ್ಲಿ 54,657 ಕ್ಯೂಸೆಕ್ ನೀರು ಜಲಾಶಯಕ್ಕೆ ಹರಿದು ಬಂದಿದೆ. ಪ್ರತಿ ದಿನ 41,572 ಕ್ಯೂಸೆಕ್ ನೀರು ಸದ್ಯ ಜಲಾಶಯ ಹರಿದು ಬರುತ್ತಿದೆ. ಇದನ್ನೂ ಓದಿ: ಭಾರೀ ಮಳೆ – ತುಂಬಿ ಹರಿಯುತ್ತಿದೆ ಮೂಕನಮನೆ ಜಲಪಾತ; ನೀರಿನಲ್ಲಿ ಸಿಲುಕಿದ್ದ ಪ್ರವಾಸಿಗನ ರಕ್ಷಣೆ

    ಇನ್ನೂ ಕಲ್ಯಾಣ ಕರ್ಣಾಟಕದ ಜೀವನಾಡಿಯಾಗಿರುವ ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆ (Rain) ಸುರಿಯುತ್ತಿದ್ದು, ಆದಷ್ಟು ಬೇಗ ನೀರು ಹರಿದು ಜಲಾಶಯ ತುಂಬಬೇಕು ಎನ್ನುವುದು ರೈತರ ಆಶಯ. ಜಲಾಶಯ ಪೂರ್ಣಗೊಂಡರೆ ಇಲ್ಲಿನ ಕೃಷಿ ಚಟುವಟಿಕೆಗಳು ಗರಿಗೆದರಲಿವೆ. ಹೀಗಾಗಿ ಇನ್ನೂ ಹೆಚ್ಚಿನ ಮಳೆಯಾಗಬೇಕೆನ್ನುವುದು ರೈತರ ಆಶಯವಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಂತ್ರಾಲಯದಲ್ಲಿ ತೆಪ್ಪೋತ್ಸವ – ತುಂಗಭದ್ರಾ ನದಿಯಲ್ಲಿ ಬೆಳಕಿನ ಸಂಭ್ರಮ

    ಮಂತ್ರಾಲಯದಲ್ಲಿ ತೆಪ್ಪೋತ್ಸವ – ತುಂಗಭದ್ರಾ ನದಿಯಲ್ಲಿ ಬೆಳಕಿನ ಸಂಭ್ರಮ

    ರಾಯಚೂರು: ಕಲಿಯುಗ ಕಾಮಧೇನು ಗುರು ರಾಘವೇಂದ್ರ ಸ್ವಾಮಿಗಳ ಸನ್ನಿಧಿ ಮಂತ್ರಾಲಯದಲ್ಲಿ (Mantralaya) ಕಾರ್ತಿಕ ಮಾಸ ಹಿನ್ನೆಲೆ ತುಂಗಾರತಿ ಸಂಭ್ರಮ ಕಳೆಗಟ್ಟಿದ್ದು, ತುಂಗಭದ್ರಾ ನದಿಯಲ್ಲಿ ಕಾರ್ತಿಕ ದೀಪೋತ್ಸವ ನೆರವೇರಿಸಲಾಯಿತು.

    ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ (Raghavendra Mutt) ದೀಪಗಳ ಉತ್ಸವವೇ ನಡೆಯಿತು. ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿಗಳು (Subudhendra Teertha Swamiji) ತುಂಗಾಪೂಜೆ ಮಾಡಿದರು. ಶ್ರೀಗಳಿಂದ ಗುರುರಾಜರಿಗೆ ಹಾಗೂ ಶ್ರೀನಿವಾಸರಾಯರಿಗೆ ತೆಪ್ಪೋತ್ಸವ ನಡೆಯಿತು. ತುಂಗಭದ್ರಾ ನದಿಯಲ್ಲಿ ದೀಪಗಳನ್ನು ತೇಲಿಬಿಟ್ಟು ಭಕ್ತರು ಸಂಭ್ರಮಿಸಿದರು. ಇದನ್ನೂ ಓದಿ: ಮಂತ್ರಾಲಯದಲ್ಲಿ ಕಾರ್ತಿಕ ಮಾಸಾಚರಣೆ – ವಿಶೇಷ ವನಭೋಜನ

    ತುಂಗಾರತಿ ಹಿನ್ನೆಲೆ ಮಠದ ಆವರಣದಲ್ಲಿ ಸಂಗೀತ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ನವೆಂಬರ್ 8 ಮಂಗಳವಾರ ಕಾರ್ತಿಕ ಪೌರ್ಣಿಮಾ ದಿನ ನಡೆಯಬೇಕಿದ್ದ ತುಂಗಾ ಆರತಿ ಕಾರ್ಯಕ್ರಮವನ್ನು ಚಂದ್ರಗ್ರಹಣ ಇರುವುದರಿಂದ ಭಾನುವಾರ ಮಂತ್ರಾಲಯದಲ್ಲಿ ಆಚರಿಸಲಾಯಿತು. ಇದನ್ನೂ ಓದಿ: ವೀರಶೈವ, ಲಿಂಗಾಯತ ಎರಡೂ ಒಂದೇ: ಬಿದರಿ ಸ್ಪಷ್ಟನೆ

    Live Tv
    [brid partner=56869869 player=32851 video=960834 autoplay=true]

  • ಉಕ್ಕಿ ಹರಿಯುವ ತುಂಗಭದ್ರಾ ನದಿಯಲ್ಲಿ ಪ್ರವಾಸಿಗರ ಮೋಜುಮಸ್ತಿ – ಮಿತಿಮೀರಿದ ಹುಚ್ಚಾಟ

    ಉಕ್ಕಿ ಹರಿಯುವ ತುಂಗಭದ್ರಾ ನದಿಯಲ್ಲಿ ಪ್ರವಾಸಿಗರ ಮೋಜುಮಸ್ತಿ – ಮಿತಿಮೀರಿದ ಹುಚ್ಚಾಟ

    ರಾಯಚೂರು: ಜಿಲ್ಲೆಯಲ್ಲಿ ತುಂಗಭದ್ರಾ ನದಿ ಉಕ್ಕಿ ಹರಿಯುತ್ತಿದ್ದರೂ ಯಾವುದೇ ಭಯವಿಲ್ಲದೆ ಪ್ರವಾಸಿಗರು ನದಿ ತಟದಲ್ಲಿ ಮೋಜುಮಸ್ತಿಗೆ ಮುಂದಾಗಿದ್ದಾರೆ.

    ಮಾನ್ವಿ ತಾಲೂಕಿನ ರಾಜಲಬಂಡಾ ಗ್ರಾಮದಲ್ಲಿ ಜನರು ಸೆಲ್ಫಿ ಕ್ಲಿಕ್ಕಿಸಿ ಹಾಗೂ ಹರಿಯುವ ನೀರಿಗೆ ಧುಮುಕಿ ಈಜುವ ಮೂಲಕ ಹುಚ್ಚಾಟ ಮೆರೆಯುತ್ತಿದ್ದಾರೆ. ರಾಜಲಬಂಡಾ ತಿರುವು ಯೋಜನೆ ಆಣೆಕಟ್ಟು ಬಳಿ ನೂರಾರು ಪ್ರವಾಸಿಗರಿಂದ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಇದನ್ನೂ ಓದಿ: ವರದಾ, ತುಂಗಭದ್ರಾ ನದಿಯಲ್ಲಿ ಹೆಚ್ಚಿದ ನೀರು – ಮೆಕ್ಕೆಜೋಳ ಸೇರಿ ವಿವಿಧ ಬೆಳೆ ಜಲಾವೃತ

    ತುಂಗಭದ್ರಾ ಜಲಾಶಯದಿಂದ 1,55,920 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದ್ದು, ಭಾರೀ ಪ್ರಮಾಣದ ನೀರಲ್ಲಿ ಸೆಲ್ಫಿಗೋಸ್ಕರ ಜನರು ನದಿಗೆ ಇಳಿಯುತ್ತಿದ್ದಾರೆ. ಯಾವುದೇ ಕ್ಷಣದಲ್ಲಿ ಅಪಾಯವಾಗುವ ಸಾಧ್ಯತೆಯ ನಡುವೆಯೇ ರಾಜಲಬಂಡಾ ಆಣೆಕಟ್ಟು ನೋಡಲು ಆಗಮಿಸುತ್ತಿರುವ ನೂರಾರು ಪ್ರವಾಸಿಗರು ಹುಚ್ಚಾಟ ಮಾಡುತ್ತಿದ್ದಾರೆ. ಇದನ್ನೂ ಓದಿ: ಯಾವುದೇ ಧರ್ಮ, ಜಾತಿಯವರಿಗೆ ಸಿಎಂ ಸ್ಥಾನ ಮೀಸಲು ಅಲ್ಲ: ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    ಮೀನು ಹಿಡಿಯಲು ದೂರದ ಊರುಗಳಿಂದ ಬರುತ್ತಿರುವ ಜನರು ನದಿ ತಟದಲ್ಲೇ ಕಾಲ ಕಳೆಯುತ್ತಿದ್ದಾರೆ. ಕ್ರೇಜ್‌ಗಾಗಿ ಮೀನು ಹಿಡಿಯಲು ಜನ ಮುಂದಾಗಿದ್ದಾರೆ. ಸ್ಥಳದಲ್ಲಿ ಯಾವೊಬ್ಬ ಅಧಿಕಾರಿ, ಸಿಬ್ಬಂದಿ ಇಲ್ಲದಿರುವುದರಿಂದ ಜನರ ಮೋಜು ಮಸ್ತಿ ಹೆಚ್ಚಾಗಿದೆ.

    Live Tv
    [brid partner=56869869 player=32851 video=960834 autoplay=true]

  • ವರದಾ, ತುಂಗಭದ್ರಾ ನದಿಯಲ್ಲಿ ಹೆಚ್ಚಿದ ನೀರು – ಮೆಕ್ಕೆಜೋಳ ಸೇರಿ ವಿವಿಧ ಬೆಳೆ ಜಲಾವೃತ

    ವರದಾ, ತುಂಗಭದ್ರಾ ನದಿಯಲ್ಲಿ ಹೆಚ್ಚಿದ ನೀರು – ಮೆಕ್ಕೆಜೋಳ ಸೇರಿ ವಿವಿಧ ಬೆಳೆ ಜಲಾವೃತ

    ಹಾವೇರಿ: ರಾಜ್ಯಾದ್ಯಂತ ಮಳೆರಾಯನ ಅರ್ಭಟ ಮುಂದುವರಿದಿದೆ. ಅದರಲ್ಲೂ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆ ಹಾವೇರಿ ಜಿಲ್ಲೆಯ ವರದಾ, ತುಂಗಭದ್ರಾ ನದಿ ನೀರಿನ ಪ್ರಮಾಣ ಹೆಚ್ಚಾಗುತ್ತಿದೆ.

    ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಕುಣಿಮೆಳ್ಳಿಹಳ್ಳಿ, ಹಲಸೂರು, ಹಾನಗಲ್ ತಾಲೂಕಿನ ಹರವಿ, ಕೂಡಲ, ಹಾವೇರಿ ತಾಲೂಕಿನ ವರದಹಳ್ಳಿ, ನಾಗನೂರು ಸೇರಿದಂತೆ ಹಲವು ಗ್ರಾಮಗಳ ರೈತರ ಜಮೀನುಗಳು ಜಲಾವೃತಗೊಂಡಿವೆ. ಜಮೀನಿನಲ್ಲಿ ಬೆಳೆದಿದ್ದ ಸುಗಂಧಿ ಹೂವು, ಗಲಾಟೆ ಹೂವು, ಮೆಕ್ಕೆಜೋಳ, ಕಬ್ಬು, ಹೂಕೋಸು ಸೇರಿದಂತೆ ಹಲವು ಬೆಳೆಗಳು ಸಂಪೂರ್ಣ ಜಲಾವೃತಗೊಂಡಿವೆ. ಇದನ್ನೂ ಓದಿ:  ಎಸಿಬಿ ವಿರುದ್ಧ ನ್ಯಾ. ಸಂದೇಶ್ ಮಾಡಿದ್ದ ಆರೋಪಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್

    ನೀರಿನಲ್ಲಿ ನಿಂತು ಎಲ್ಲ ಬೆಳೆಗಳು ಕೊಳೆತು ಹಾಳಾಗುತ್ತಿದ್ದು, ಬೋರವೇಲ್, ಪಂಪ್‍ಸೇಟ್ ಹಾಗೂ ಪೈಪ್ ಮುಳುಗಡೆಯಾಗಿವೆ. ಇದರಿಂದ ಅನ್ನದಾತರು ದಿಕ್ಕು ತೋಚದಂತಾಗಿದೆ. ನದಿ ಪಾತ್ರಗಳ ಸಾವಿರಾರು ಎಕರೆ ಪ್ರದೇಶದಲ್ಲಿನ ಬೆಳೆಗಳು ಹಾಳಾಗಿವೆ. ಸರ್ಕಾರ ರೈತರಿಗೆ ಸೂಕ್ತವಾದ ಪರಿಹಾರ ಘೋಷಣೆ ಮಾಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ತುಂಗಭದ್ರಾ ಜಲಾಶಯದಿಂದ ಭಾರೀ ಪ್ರಮಾಣದ ನೀರು ಬಿಡುಗಡೆ: ಮಂತ್ರಾಲಯ ಶ್ರೀಗಳಿಂದ ನದಿ ಪೂಜೆ

    ತುಂಗಭದ್ರಾ ಜಲಾಶಯದಿಂದ ಭಾರೀ ಪ್ರಮಾಣದ ನೀರು ಬಿಡುಗಡೆ: ಮಂತ್ರಾಲಯ ಶ್ರೀಗಳಿಂದ ನದಿ ಪೂಜೆ

    ರಾಯಚೂರು: ತುಂಗಭದ್ರಾ ಜಲಾಶಯದಿಂದ ನದಿಗೆ ಭಾರೀ ಪ್ರಮಾಣದ ನೀರು ಬಿಡುಗಡೆ ಹಿನ್ನೆಲೆ ಮಂತ್ರಾಲಯದಲ್ಲಿ ಗುರು ರಾಘವೇಂದ್ರ ಸ್ವಾಮಿ ಮಠದ ಶ್ರೀಗಳಾದ ಸುಬುಧೇಂದ್ರ ತೀರ್ಥ ಸ್ವಾಮಿಗಳು ತುಂಗಭದ್ರಾ ನದಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

    ಜಲಾಶಯದಿಂದ ತುಂಗಭದ್ರಾ ನದಿಗೆ 1 ಲಕ್ಷ 41 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ರಾಯಚೂರು ಜಿಲ್ಲೆಯಲ್ಲಿ ತುಂಗಭದ್ರೆ ಮೈದುಂಬಿ ಹರಿಯುತ್ತಿದ್ದಾಳೆ. ಮಂತ್ರಾಲಯಕ್ಕೆ ಭಾರೀ ಪ್ರಮಾಣದ ನೀರು ತಲುಪಿದ ಹಿನ್ನೆಲೆ ವಿಶೇಷ ಪೂಜೆಯ ಮೂಲಕ ಶ್ರೀಗಳು ತುಂಗಭದ್ರೆಯನ್ನು ಸ್ವಾಗತಿಸಿದ್ದಾರೆ. ಇದನ್ನೂ ಓದಿ: ಮೂರು ತಿಂಗಳ ಮೊದಲೇ KRS ಡ್ಯಾಂ ಸಂಪೂರ್ಣ ಭರ್ತಿ

    ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿರುವುದರಿಂದ ಮಂತ್ರಾಲಯ ರಾಯರ ಮಠದ ಬಳಿ ನದಿ ಪಾತ್ರಕ್ಕೆ ತೆರಳದಂತೆ ಭಕ್ತರಿಗೆ ಎಚ್ಚರಿಕೆ ನೀಡಲಾಗಿದೆ. ಪುಣ್ಯ ಸ್ನಾನಕ್ಕೆ ತೆರಳುವ ಭಕ್ತರಿಗೆ ನದಿ ಬಳಿ ನಿಷೇಧ ಹೇರಲಾಗಿದೆ. ಇದನ್ನೂ ಓದಿ: ಮಾಲ್‌ನಲ್ಲಿ ನಮಾಜ್ – ಮಾಲ್ ಬಹಿಷ್ಕರಿಸುವಂತೆ ಹಿಂದೂ ಸಂಘಟನೆಗಳಿಂದ ಕರೆ

    Live Tv
    [brid partner=56869869 player=32851 video=960834 autoplay=true]

  • ತುಂಗಭದ್ರಾ ಪುಷ್ಕರಕ್ಕೆ ಮಂತ್ರಾಲಯ ಮಠದಲ್ಲಿ ಭರ್ಜರಿ ಸಿದ್ಧತೆ

    ತುಂಗಭದ್ರಾ ಪುಷ್ಕರಕ್ಕೆ ಮಂತ್ರಾಲಯ ಮಠದಲ್ಲಿ ಭರ್ಜರಿ ಸಿದ್ಧತೆ

    ರಾಯಚೂರು: 12 ವರ್ಷಕ್ಕೆ ಒಂದು ಬಾರಿ ಬರುವ ಸಂಭ್ರಮದ ಪುಷ್ಕರ ಈ ಬಾರಿ ತುಂಗಭದ್ರಾ ನದಿಯಲ್ಲಿ ನಡೆಯಲಿದೆ. ಹೀಗಾಗಿ ಮಂತ್ರಾಲಯದ ಗುರು ರಾಘವೇಂದ್ರ ಸ್ವಾಮಿ ಮಠ ಪುಷ್ಕರಕ್ಕೆ ಭರ್ಜರಿ ತಯಾರಿ ನಡೆಸಿದೆ. ಭಕ್ತರ ಪುಣ್ಯ ಸ್ನಾನಕ್ಕೆ ಹದಿನೈದು ದಿನಗಳ ಮುಂಚಿತವಾಗಿಯೇ ಮಠ ಅಂತಿಮ ತಯಾರಿಗಳನ್ನು ಮಾಡಿಕೊಳ್ಳುತ್ತಿದೆ.

    ತುಂಗಭದ್ರಾ ನದಿಯ ಪುಷ್ಕರ ಪುಣ್ಯ ಸ್ನಾನಕ್ಕೆ ಈಗ ದಿನಗಣನೇ ಆರಂಭವಾಗಿದೆ. 12 ವರ್ಷಕ್ಕೆ ಒಂದು ಬಾರಿ ಬರುವ ಪುಷ್ಕರ ಆಚರಣೆ ಈ ವರ್ಷ ತುಂಗಾಭದ್ರ ನದಿಗೆ ಬಂದಿದೆ. ಪುಷ್ಕರವನ್ನು ಗುರು ಮಕರ ರಾಶಿಗೆ ಪ್ರವೇಶಿಸಿದ ಸಮಯದಿಂದ 12 ದಿನಗಳವರೆಗೆ ಆಚರಿಸಲಾಗುತ್ತದೆ. ನವೆಂಬರ್ 20ರಿಂದ ಡಿಸೆಂಬರ್ 1ರ ವರೆಗೆ ತುಂಗಭದ್ರಾ ನದಿಯ ಪುಷ್ಕರ ನಡೆಯಲಿದೆ. ಈ ವೇಳೆ ನದಿಯಲ್ಲಿ ಸ್ನಾನ ಮಾಡಿದರೆ ಪುಣ್ಯ ಲಭಿಸುತ್ತದೆ ಅನ್ನೋ ನಂಬಿಕೆಯಿದೆ. ಈ ಹಿನ್ನೆಲೆ ಮಂತ್ರಾಲಯದಲ್ಲಿ ಗುರು ರಾಯರ ಉತ್ಸವದೊಂದಿಗೆ ತುಂಗಭದ್ರಾ ನದಿಯ ತೀರದಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದೆ.

    ಮಠದಲ್ಲಿ ಅನ್ನಪ್ರಸಾದ, ಪರಿಮಳ ಪ್ರಸಾದದ ವ್ಯವಸ್ಥೆಯನ್ನು ಭಕ್ತರಿಗೆ ಕಲ್ಪಿಸಲಾಗಿದೆ. ಕೋವಿಡ್ ಹಿನ್ನೆಲೆ ಸಾಮಾಜಿಕ ಅಂತರ, ಮಾಸ್ಕ್ ಹಾಗೂ ಸ್ಯಾನಿಟೈಸರ್ ಕಡ್ಡಾಯವಾಗಿ ಬಳಸುವ ನಿಯಮಪಾಲನೆಗೆ ಒತ್ತುಕೊಡಲಾಗಿದೆ. ಪುಷ್ಕರದ ವೇಳೆ ದಿನಕ್ಕೆ 25 ಸಾವಿರ ಭಕ್ತಾಧಿಗಳು ಬರುವ ಸಾಧ್ಯತೆ ಇದೆ. ಆಂಧ್ರಪ್ರದೇಶ, ತೆಲಂಗಾಣ ಹಾಗೂ ಕರ್ನಾಟಕ ಮುಖ್ಯಮಂತ್ರಿಗಳಿಗೆ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ ಎಂದು ಮಠದ ಪೀಠಾಧಿಪತಿ ಸುಬುಧೇಂದ್ರತೀರ್ಥ ಸ್ವಾಮಿ ತಿಳಿಸಿದ್ದಾರೆ.

    ಪುಷ್ಕರ ವೇಳೆ ದೇಶದ ಮೂಲೆ ಮೂಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುವ ಹಿನ್ನೆಲೆ ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣ ಸರ್ಕಾರಗಳಿಗೆ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ಮಠ ಮನವಿ ಮಾಡಿದೆ. ಕೋವಿಡ್ ನಿಯಮ ಕಟ್ಟುನಿಟ್ಟಾಗಿ ಪಾಲಿಸಲು ಇಲ್ಲಿನ ಐದು ಘಾಟ್‍ಗಳಲ್ಲಿ ಒಂದು ಘಾಟ್ ನಲ್ಲಿ ಒಂದು ಗಂಟೆಗೆ 60 ಜನ ಸ್ನಾನ ಮಾಡಲು ಅವಕಾಶ ನೀಡಲಾಗುತ್ತದೆ. ಬೆಳಿಗ್ಗೆ 6 ಗಂಟೆಯಿಂದ 6 ಗಂಟೆಯವರೆಗೆ ತುಂಗಾಸ್ನಾನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ.

    ಮಠದ ಸಿಬ್ಬಂದಿಯಿಂದ ಆವರಣದಲ್ಲಿ ಕೋವಿಡ್ ನಿಯಮ ಪಾಲಿಸುವಂತೆ ಭಕ್ತರಿಗೆ ತಿಳುವಳಿಕೆ ನೀಡಲು ಸಿದ್ಧತೆ ನಡೆದಿದೆ. ವಿವಿಧೆಡೆಯಿಂದ ಪುಣ್ಯ ಸ್ನಾನ ಹಾಗೂ ರಾಯರ ದರ್ಶನಕ್ಕೆ ಬರುವ ಭಕ್ತಾಧಿಗಳಿಗೆ ವಸತಿ ಗೃಹ, ತಾತ್ಕಾಲಿಕ ಶಾಮಿಯಾನ ಕಲ್ಪಿಸಲಾಗುತ್ತಿದೆ. ಪ್ರಾಥಮಿಕ ಚಿಕಿತ್ಸೆ, ಶುದ್ಧ ಕುಡಿಯುವ ನೀರು ಸೇರಿದಂತೆ ಎಲ್ಲಾ ತಯಾರಿಗಳನ್ನು ಮಠದ ಆಡಳಿತ ಮಂಡಳಿ ನಡೆಸಿದೆ.

  • ತುಂಗಭದ್ರಾ ನದಿಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ-ನೂರಾರು ಎಕರೆಯಲ್ಲಿದ್ದ ಬೆಳೆ ನೀರುಪಾಲು

    ತುಂಗಭದ್ರಾ ನದಿಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ-ನೂರಾರು ಎಕರೆಯಲ್ಲಿದ್ದ ಬೆಳೆ ನೀರುಪಾಲು

    ರಾಯಚೂರು: ಜಲಾಶಯಗಳಿಂದ ಭಾರೀ ಪ್ರಮಾಣದ ನೀರು ಬಿಡುತ್ತಿರುವದರಿಂದ ತುಂಗಭದ್ರಾ ನದಿಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ನೂರಾರು ಎಕರೆಯಲ್ಲಿದ್ದ ಬೆಳೆ ನೀರುಪಾಲಾಗಿದ್ದು ಕೋಟ್ಯಂತರ ರೂಪಾಯಿ ನಷ್ಟವಾಗಿದೆ. 2009ರ ಬಳಿಕ ರಾಯಚೂರಿನಲ್ಲಿ ಕೃಷ್ಣಾ, ತುಂಗಭದ್ರಾ ನದಿಗಳು ಮೈದುಂಬಿ ಹರೀತಿವೆ. ತುಂಗಭದ್ರಾ ಡ್ಯಾಂನಿಂದ ಅಪಾರ ಪ್ರಮಾಣದ ನೀರು ನದಿಗೆ ಹರಿಯುತ್ತಿದ್ದು ಪ್ರವಾಹ ಭೀತಿ ಎದುರಾಗಿದೆ.

    ಮಾನ್ವಿ ತಾಲೂಕಿನ ರಾಜೊಳ್ಳಿ ಬಂಡ ತಿರುವು ಜಲಾಶಯ ಸಂಪೂರ್ಣ ತುಂಬಿದ್ದು ಹೆಚ್ಚುವರಿ ನೀರು ಆಂಧ್ರಪ್ರದೇಶಕ್ಕೆ ಹರಿದು ಹೋಗುತ್ತಿದೆ. ನೀರಿನ ಪ್ರಮಾಣ ಹೆಚ್ಚಾದಲ್ಲಿ ಜಲಾಶಯದ ಗೇಟ್ ಹಾಗೂ ಗೋಡೆ ಅಪಾಯಕ್ಕೊಳಗಾಗುವ ಸಾಧ್ಯತೆ ಇದೆ. ತುಂಗಭದ್ರಾ ನದಿಯ ಪ್ರವಾಹ ಭೀತಿ ರಾಯಚೂರು ಜಿಲ್ಲೆಯ ದೇವಾಲಯಗಳಿಗೂ ತಟ್ಟಿದೆ. ಎಲೆಬಿಚ್ಚಾಲಿ ಗ್ರಾಮದ ಗುರುರಾಘವೇಂದ್ರ ಸ್ವಾಮಿ ಏಕಶಿಲಾ ಬೃಂದಾವನ ಸಂಪೂರ್ಣ ಜಲಾವೃತವಾಗಿದೆ. ರಾಯರ ಮಠದ ಬಳಿಯ ಸ್ನಾನಘಟ್ಟದ ಮೆಟ್ಟಿಲುಗಳು ಕೂಡ ಮುಳುಗಡೆಯಾಗಿದ್ದು, ಮಠದ ಆವರಣದಲ್ಲಿನ ವ್ಯಾಪಾರಿಗಳು ಪ್ರವಾಹ ಭೀತಿಯಲ್ಲಿದ್ದಾರೆ.

    ತುಂಗಭದ್ರಾ ನದಿಯಲ್ಲಿ ನೀರು ಹೆಚ್ಚಾಗಿರುವುದರಿಂದ ಸಿಂಧನೂರು, ಮಾನ್ವಿ ಸೇರಿದಂತೆ ನದಿ ಪಾತ್ರದ ಗ್ರಾಮಗಳ ಜಮೀನಿಗೆ ನೀರು ನುಗ್ಗಿ, ಕೋಟ್ಯಂತರ ರೂಪಾಯಿ ಮೌಲ್ಯದ ಭತ್ತ ಹಾಗೂ ಹತ್ತಿ ಬೆಳೆ ಹಾನಿಯಾಗಿವೆ. ಪಂಪಸೆಟ್‍ಗಳು ಮುಳುಗಡೆಯಾಗಿವೆ. ಹೆಚ್ಚಿನ ಪ್ರಮಾಣದ ನೀರು ನದಿಗೆ ಬಿಟ್ಟಲ್ಲಿ ನದಿಪಾತ್ರದ ಗ್ರಾಮಗಳಿಗೂ ಅಪಾಯ ಕಾದಿದೆ.

    ರಾಯಚೂರಿನಲ್ಲಿ ಕೃಷ್ಣಾ ಹಾಗೂ ತುಂಗಭದ್ರಾ ಎರಡೂ ನದಿಗಳು ತುಂಬಿ ಹರೀತಿದ್ದರೂ ಮುಂಗಾರು ಮಳೆ ಬಾರದೇ ಬರಗಾಲ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಕೃಷಿ ಸಚಿವ ಎನ್.ಹೆಚ್.ಶಿವಶಂಕರ್ ರೆಡ್ಡಿ ಇಂದು ವಿಜಯನಗರ ಕ್ಯಾಂಪ್ ಹಾಗೂ ಸುಲ್ತಾನಪುರ ಭಾಗದ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.