ಶಿವಮೊಗ್ಗ: ಪ್ರೀತಿಸಲು (Love) ಹುಡುಗಿ ಸಿಗಲಿಲ್ಲ ಅಂತ ಹೇಳಿ, ಪದವಿ ವ್ಯಾಸಂಗ ಮಾಡ್ತಿದ್ದ ಯುವಕನೋರ್ವ ವಾಟ್ಸಪ್ ಸ್ಟೇಟಸ್‌ನಲ್ಲಿ ಡೆತ್‌ನೋಟ್ ಬರೆದಿಟ್ಟು ತುಂಗಾ ನದಿಗೆ (Tunga River) ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಜಯದೀಪ್ (24) ಎಂದು ಗುರುತಿಸಲಾಗಿದೆ.
ತೀರ್ಥಹಳ್ಳಿಯ ಪದವಿ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡ್ತಿದ್ದ ಯುವಕ ಜಯದೀಪ್ ತೀರ್ಥಹಳ್ಳಿ ತಾಲೂಕಿನ ಇಂದಾವರ ಗ್ರಾಮದ ನಿವಾಸಿ. ಮೃತ ಯುವಕ ಜಯದೀಪ್ ಕಳೆದ ಶನಿವಾರ ತನ್ನ ಬೈಕಿನಲ್ಲಿ ತುಂಗಾನದಿ ಬಳಿ ಆಗಮಿಸಿ ನದಿಯ ದಡದಲ್ಲಿ ಬೈಕ್ ನಿಲ್ಲಿಸಿ ನಾಪತ್ತೆಯಾಗಿದ್ದ. ಯುವಕನ ಬೈಕ್, ಆತನ ವಸ್ತುಗಳು ನದಿ ಬಳಿ ದೊರೆತಿದ್ದರಿಂದ ಕುಟುಂಬಸ್ಥರು ಆತ್ಮಹತ್ಯೆಯ ಶಂಕೆ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಅಧಿಕೃತವಾಗಿ ‘ಬಿಗ್ ಬಾಸ್’ ಮನೆಗೆ ಕಾಲಿಟ್ಟ ಕಂಟೆಸ್ಟೆಂಟ್ : ನಟ ನಾಗಾರ್ಜುನ ಬದಲಾಗಲಿಲ್ಲ
ಮೃತ ಯುವಕ ಜಯದೀಪ್ ಓದಿನಲ್ಲಿ ಮುಂದಿದ್ದ. ಆದರೆ ತನಗೆ ಪ್ರೀತಿ ಮಾಡಲು ಯುವತಿ ಸಿಗುತ್ತಿಲ್ಲ ಅಂತಾ ನೊಂದಿದ್ದ. ಜೊತೆಗೆ ಆನ್‌ಲೈನ್‌ನಲ್ಲಿ ಹಣ ತೊಡಗಿಸಲು ಸಾಲ ಮಾಡಿಕೊಂಡಿದ್ದ. ಈಗಾಗಿ ಮನನೊಂದ ಯುವಕ ವಾಟ್ಸಪ್ ಸ್ಟೇಟಸ್‌ನಲ್ಲಿ ಡೆತ್ ಹಂಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ತುಂಗಾನದಿಯಿಂದ ಮೃತದೇಹ ಹೊರ ತೆಗೆದು, ಮರಣೋತ್ತರ ಶವ ಪರೀಕ್ಷೆ ನಡೆಸಿ, ಕುಟುಂಬಸ್ಥರಿಗೆ ಹಸ್ತಾಂತರಿಸಿದರು. ಘಟನೆ ಕುರಿತು ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: Paris Paralympics | ಡಿಸ್ಕಸ್ ಥ್ರೋನಲ್ಲಿ ಭಾರತದ ಯೋಗೇಶ್ ಕಥುನಿಯಾಗೆ ಬೆಳ್ಳಿ
ಶಿವಮೊಗ್ಗ: ತುಂಗಾನದಿಯಲ್ಲಿ (Tunga River) ಈಜಲು (Swimming) ತೆರಳಿದ್ದ ಉಪನ್ಯಾಸಕರಿಬ್ಬರು (Lecturers) ನೀರುಪಾಲಾದ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ತೀರ್ಥಹಳ್ಳಿ (Thirthahalli) ತಾಲೂಕಿನ ತೀರ್ಥಮತ್ತೂರು ಗ್ರಾಮದಲ್ಲಿ ನಡೆದಿದೆ.
ಪುನೀತ್ (38), ಬಾಲಾಜಿ (36) ನೀರುಪಾಲಾದ ಉಪನ್ಯಾಸಕರು. ಇವರಿಬ್ಬರೂ ಕಾರ್ಕಳದ (Karkala) ನಿಟ್ಟೆ (Nitte) ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದರು. ಇಬ್ಬರೂ ಜೊತೆಯಾಗಿ ತುಂಗಾನದಿಯಲ್ಲಿ ಈಜಲು ತೆರಳಿದ್ದು, ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮುಳುಗಿದ ಇಬ್ಬರಲ್ಲಿ ಓರ್ವ ಉಪನ್ಯಾಸಕನ ಮೃತದೇಹ ಪತ್ತೆಯಾಗಿದೆ. ಇದನ್ನೂ ಓದಿ: ಮೀನು ಹಿಡಿಯಲು ತೆರಳಿದ್ದ ಮೂವರು ಬಾಲಕರು ನೀರುಪಾಲು
ಇನ್ನೋರ್ವ ಉಪನ್ಯಾಸಕನ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಸುತ್ತಿದ್ದು, ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಶ್ರೀನಿವಾಸ ಸಾಗರ ಜಲಾಶಯದಲ್ಲಿ ಮತ್ತೋರ್ವ ಯುವಕ ಬಲಿ
ಶಿವಮೊಗ್ಗ: ಮಲೆನಾಡಿನ ಜೀವನದಿ ತುಂಗಾನದಿ. ಗಂಗಾ ಸ್ನಾನ – ತುಂಗಾ ಪಾನ ಎಂಬುದು ಪ್ರಸಿದ್ಧ ನಾಣ್ಣುಡಿ. ಆದರೆ ಇನ್ನು ಮುಂದೆ ತುಂಗೆಯ ನೀರನ್ನು ಕುಡಿಯುವ ಮೊದಲು ಯೋಚಿಸಬೇಕಿದೆ. ಇದಕ್ಕೆ ಕಾರಣ ಪ್ರಯೋಗಾಲಯದ ವರದಿ.
ಮಲೆನಾಡಿನ ಜಿಲ್ಲೆ ಶಿವಮೊಗ್ಗ (Shivamogga) ಸೇರಿದಂತೆ ದಾವಣಗೆರೆ ಜಿಲ್ಲೆಯ ಹಲವು ಗ್ರಾಮಗಳಿಗೆ ಕುಡಿಯಲು ತುಂಗಾ ನದಿ (Tunga River) ನೀರೆ ಆಸರೆ. ಆದರೆ ಇತ್ತೀಚಿಗೆ ತುಂಗಾನದಿ ನೀರು ಮಲಿನವಾಗುತ್ತಿದೆ (Water Pollution) ಎಂಬ ಅಂಶ ಪ್ರಯೋಗಾಲಯದ ವರದಿಯಿಂದ ಬಹಿರಂಗಗೊಂಡಿದೆ. ಇದು ಮಲೆನಾಡಿನ ಜನತೆಯನ್ನು ಬೆಚ್ಚಿ ಬೀಳಿಸಿದೆ.
ತುಂಗಾ ನದಿ ನೀರು ಗಾಜನೂರು ಜಲಾಶಯದಿಂದ ಮುಂದೆ ಹರಿಯುವಾಗ ಮಲಿನಗೊಳ್ಳುತ್ತಿದೆ. ಅದರಲ್ಲೂ ಜಿಲ್ಲಾ ಕೇಂದ್ರ ತಲುಪುತ್ತಿದ್ದಂತೆ ಮತ್ತಷ್ಟು ವಿಷಕಾರಕ ಅಂಶಗಳು ನೀರಿಗೆ ಸೇರುತ್ತಿದೆ. ತುಂಗಾನದಿ ನೀರಿನಲ್ಲಿ ಅಲ್ಯುಮಿನಿಯಂ ಅಂಶ ಹೆಚ್ಚಿರುವುದು ದೃಢಪಟ್ಟಿದೆ.
ಗುಣಮಟ್ಟದ ನೀರಿನಲ್ಲಿ ಎಲ್ಲಾ ಖನಿಜಾಂಶಗಳು ನಿಗದಿತ ಪ್ರಮಾಣದಲ್ಲಿ ಇರಬೇಕು. ಆಗ ಮಾತ್ರ ಅದು ಕುಡಿಯಲು ಹಾಗೂ ಆರೋಗ್ಯಕ್ಕೆ ಪೂರಕವಾಗಿ ಇರುತ್ತದೆ. ಅತಿಯಾದರೆ ಅಮೃತವೂ ವಿಷ ಎಂಬಂತೆ ಖನಿಜಾಂಶ ಹೆಚ್ಚಳವಾದರೂ ಆರೋಗ್ಯಕ್ಕೆ ಅಪಾಯಕಾರಿ. ಈಗ ತುಂಗೆಯ ಸ್ಥಿತಿಯು ಅಪಾಯಕಾರಿ ಹಂತ ತಲುಪಿದೆ.
ಶಿವಮೊಗ್ಗದ ಕೆಲವು ಪರಿಸರ ಆಸಕ್ತರು ಸೇರಿಕೊಂಡು ನಿರ್ಮಲ ತುಂಗಾ ಅಭಿಯಾನ ಆರಂಭಿಸಿದ್ದರು. ಈ ತಂಡ ಜಲಾಶಯದ ಮಧ್ಯ ಭಾಗದಿಂದ ನದಿ ನೀರು ಹಾಗೂ ನೀರು ಶುದ್ಧೀಕರಣ ಘಟಕದಿಂದ ನಾಗರಿಕರಿಗೆ ಪೂರೈಕೆಯಾಗುವ ನೀರು ಎರಡನ್ನು ಪ್ರತ್ಯೇಕವಾಗಿ ಸಂಗ್ರಹಿಸಿ ಬೆಂಗಳೂರಿನ ಯುರೋಪಿನ್ಸ್ ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿತ್ತು. ಇದೀಗ ಪ್ರಯೋಗಾಲಯದಿಂದ ವರದಿ ಬಂದಿದ್ದು ತುಂಗಾ ನದಿಯಲ್ಲಿ ಅಲ್ಯುಮಿನಿಯಂ ಅಂಶ ಇರುವುದು ಪತ್ತೆಯಾಗಿದೆ.
ಅಲ್ಯುಮಿನಿಯಂ ಪ್ರಮಾಣ ಹೆಚ್ಚಿರುವ ನೀರು ಸೇವಿಸಿದರೆ ಕ್ರಮೇಣ ಮನುಷ್ಯನ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಅದರಲ್ಲಿಯೂ ನರಸಂಬಂಧಿ ಕಾಯಿಲೆಗಳು ಭಾಧಿಸುವ ಅಪಾಯ ಇರುತ್ತದೆ. ಇಂತಹ ನೀರು ಸೇವಿಸಿದರೆ ಅಡ್ಡ ಪರಿಣಾಮಗಳು ಇವೆ ಎಂಬುದು ಆತಂಕದ ಸಂಗತಿಯಾಗಿದೆ.
ತುಂಗಾ ನದಿ ನೀರಿನಲ್ಲಿ ಅಲ್ಯುಮಿನಿಯಂ ಅಂಶ ಮಾತ್ರ ಹೆಚ್ಚಳವಾಗಿರದೇ, ಈ ನೀರಿನಲ್ಲಿ ಇತರೆ ಲೋಹದ ಅಂಶಗಳು ಇವೆ. ಆದರೆ ಅವುಗಳು ನಿಗದಿತ ಪ್ರಮಾಣ ಮೀರಿಲ್ಲ ಎಂಬುದೇ ಸಮಾಧಾನಕರ ಸಂಗತಿ. ಬೇರಿಯಂ, ಬೋರಾನ್, ಕ್ಲೋರೈಡ್, ಮ್ಯಾಗ್ನೇಶಿಯಂ, ಕ್ಯಾಡ್ಮಿಯಂ, ಪಾದರಸ ಇರುವುದು ಪ್ರಯೋಗಾಲಯದ ವರದಿಯಲ್ಲಿ ಬಹಿರಂಗವಾಗಿದೆ.
ಒಟ್ಟಿನಲ್ಲಿ ತುಂಗಾನದಿಯಲ್ಲಿ ಅಲ್ಯುಮಿನಿಯಂ ಅಂಶ ಸೇರುತ್ತಿರುವುದರ ಜೊತೆಗೆ ನಾಗರಿಕರು ಸಹ ಕಸ ಹಾಗೂ ತ್ಯಾಜ್ಯವನ್ನು ಹಾಕುತ್ತಿದ್ದಾರೆ. ಇದು ಸಹ ನದಿ ಮಲಿನವಾಗಲು ಕಾರಣವಾಗುತ್ತಿದೆ. ಇನ್ನಾದರೂ ನಾಗರಿಕರು ಎಚ್ಚೆತ್ತುಕೊಂಡು ನದಿಗೆ ಕಸ ಎಸೆಯದಂತೆ, ತ್ಯಾಜ್ಯ ಸುರಿಯದಂತೆ ಕ್ರಮ ವಹಿಸಬೇಕಿದೆ. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಅಪಾಯವಂತು ಕಟ್ಟಿಟ್ಟ ಬುತ್ತಿ. ಇದನ್ನೂ ಓದಿ: ವಂದೇ ಭಾರತ್ ಸೆಮಿಸ್ಪೀಡ್ ರೈಲಿನಲ್ಲಿ ಓಡಾಡ್ಬೇಕು ಎಂಬ ಉತ್ತರ ಕರ್ನಾಟಕ ಜನರ ಕನಸು ಶೀಘ್ರವೇ ನನಸು!
ಬೆಂಗಳೂರು: ಹರಿಹರದ ಗತವೈಭವವನ್ನು ಮರಳಿ ಪಡೆಯುವ ಹಾಗೂ ದೇಶದಲ್ಲೇ ಹಿಂದೂಗಳ ಪ್ರಮುಖ ಯಾತ್ರಾಸ್ಥಳವನ್ನಾಗಿಸುವ ಗುರಿಯನ್ನು ಹೊಂದಿದ್ದೇವೆ ಎಂದು ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಜಗದ್ಗುರು ಶ್ರೀ ಶ್ರೀ ಶ್ರೀ ವಚನಾನಂದ ಮಹಾಸ್ವಾಮೀಜಿಗಳು ಹೇಳಿದರು.
ಇಂದು ಬೆಂಗಳೂರಿನ ಶ್ವಾಸಯೋಗ ಕೇಂದ್ರದಲ್ಲಿ ಫೆಬ್ರವರಿ 20 2022 ರಂದು ಸಿಎಂಗಳಿಂದ ನಡೆಯಲಿರುವ 108 ತುಂಗಾಭದ್ರಾ ಆರತಿ ಮಂಟಪಗಳ ‘ಶಿಲಾನ್ಯಾಸ ಕಾರ್ಯಕ್ರಮ’ದ ಮಾಹಿತಿ ಹಾಗೂ ಕಾನ್ಸೆಪ್ಟ್ ವೀಡಿಯೋವನ್ನು ಬಿಡುಗಡೆಗೊಳಿಸಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಈ ವೇಳೆ ಅವರು, ಉತ್ತರಕ್ಕೆ ಗಂಗೆಯ ರೀತಿ ದಕ್ಷಿಣ ಭಾರತಕ್ಕೆ ತುಂಗಾ ನದಿ ಪವಿತ್ರ ಎನಿಸಿದೆ. ಗಂಗಾ ಸ್ನಾನ-ತುಂಗಾ ಪಾನ ಎನ್ನುವ ಉಕ್ತಿಯೂ ಇದೆ ಎಂದು ಮಾತನಾಡಿದರು. ಇದನ್ನೂ ಓದಿ: ನ್ಯಾಯಾಲಯ ಆದೇಶಕ್ಕೆ ಧಾರ್ಮಿಕ ಮುಖಂಡರಿಂದ ಬೆಂಬಲ: ರಾಯಚೂರಿನಲ್ಲಿ ಗಲಾಟೆ ಇಲ್ಲ
ಗಂಗಾರತಿಯ ರೀತಿಯಲ್ಲಿಯೇ ತುಂಗಾರತಿಯನ್ನು ಏಕೆ ಆರಂಭಿಸಬಾರದು ಎನ್ನುವ ವಿಷಯ ನಮ್ಮ ಮನಸ್ಸಿಗೆ ಬಂದಿತ್ತು. ಈ ಯೋಚನೆ ಬರುತ್ತಿದ್ದಂತೆ, ಹರಿಹರ ಪಂಚಮಸಾಲಿ ಜಗದ್ಗುರು ಪೀಠದ ಬಳಿಯಿರುವ ತುಂಗಾ ತಟದಲ್ಲಿ ತುಂಗಾರತಿಯನ್ನು ಆರಂಭಿಸಲು ಯೋಚಿಸಿದೆವು. ಜೊತೆಗೆ ಗಂಗೆಯಂತೆ ತುಂಗಾ ನದಿಯನ್ನೂ ಶುಚಿಗೊಳಿಸಬೇಕು ಎನ್ನುವ ಮಹತ್ವಾಕಾಂಕ್ಷೆ ಬಂದಾಗ ಭಕ್ತಗಣದೊಂದಿಗೆ ಸೇರಿ ತುಂಗಾ ನದಿಯನ್ನು ಶುಚಿಗೊಳಿಸುವ, ನಮಾಮಿ ತುಂಗೆ ಯೋಜನೆಗೆ ಚಾಲನೆ ನೀಡಿದೆವು ಎಂದು ವಿವರಿಸಿದರು.
ಪ್ರತಿ ನಿತ್ಯ ಸೂರ್ಯಾಸ್ತವಾದ ನಂತರ ಗಂಗೋತ್ರಿ, ರುದ್ರಪ್ರಯಾಗ ದೇವಪ್ರಯಾಗ, ಋಷಿಕೇಶ, ಹರಿದ್ವಾರ ಸೇರಿದಂತೆ ನೂರಾರು ಪವಿತ್ರ ಗಂಗಾ ತಟಗಳಲ್ಲಿ ಗಂಗಾರತಿ ನಡೆಯುವ ರೀತಿಯಲ್ಲಿಯೇ ನಮ್ಮ ತುಂಗಾ ನದಿ ತಟದಲ್ಲೂ ತುಂಗಾರತಿ ಪ್ರಾರಂಭಿಸಬೇಕು. ಹೇಗೆ ಮನಮೋಹಕ ಗಂಗಾರತಿ ಲಕ್ಷಾಂತರ ಭಕ್ತರನ್ನು ಸೆಳೆಯಿತೋ ಹಾಗೆ, ತುಂಗಾರತಿ ಕೂಡ ನಾಡಿನ ಭಕ್ತರನನು ಸೆಳೆಯಬೇಕು ಎನ್ನುವುದು ನಮ್ಮ ಇಚ್ಛೆಯಾಗಿತ್ತು ಎಂದರು.
ಈ ಹಿನ್ನೆಲೆಯಲ್ಲಿ ನಾವು ಮಾಡಿದ ಮನವಿಗೆ ಸೂಕ್ತವಾಗಿ ಕರ್ನಾಟಕ ಸರ್ಕಾರ ಸ್ಪಂದಿಸಿದೆ. ಅಲ್ಲದೇ, 30 ಕೋಟಿ ರೂಪಾಯಿಗಳ ಅನುದಾನವೂ ನೀಡಿದ್ದು, ಭಾನುವಾರ ಫೆಬ್ರವರಿ 20 2022 ರಂದು ಮುಖ್ಯಮಂತ್ರಿಗಳು ಈ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.
ಏನಿದು ‘ತುಂಗಾಭದ್ರಾ ಆರತಿ’ ಯೋಜನೆ?
ಹರಿಹರದ ತುಂಗಭದ್ರಾ ನದಿ ತಟದಲ್ಲಿನ ರಾಘವೇಂದ್ರ ಶ್ರೀಗಳ ದೇವಸ್ಥಾನದಿಂದ ಹರಿಹರೇಶ್ವರ ದೇವಸ್ಥಾನದ ಮಧ್ಯದಲ್ಲಿ ತುಂಗಾ ಮಂಟಪಗಳನ್ನು ನಿರ್ಮಾಣ ಮಾಡುವ ಯೋಜನೆ ಇದಾಗಿದೆ. ಇದಕ್ಕೆ 30 ಕೋಟಿ ರೂ. ಖರ್ಚಾಗಬಹುದೆಂದು ಅಂದಾಜಿಸಲಾಗಿದೆ. 108 ಮಂಟಪ ನಿರ್ಮಾಣ, ಗಂಗಾ ಆರತಿಯಂತೆ ಪ್ರತಿನಿತ್ಯ ತುಂಗಾಭದ್ರಾ ಆರತಿ, ಪೂಜೆ ನಡೆಸುವ ಯೋಜನೆ ಇದಾಗಿದೆ ಎಂದು ವಿವರಿಸಿದರು.
ಉತ್ತರ ಮತ್ತು ದಕ್ಷಿಣ ಕರ್ನಾಟಕ ಒಂದುಗೂಡಿಸುವ ಮಹತ್ವದ ಯೋಜನೆ ಇದಾಗಿರಲಿದೆ. ಇದಕ್ಕೆ ಈಗಾಗಲೇ ಅನುದಾನ ಬಿಡುಗಡೆ ಆಗಿದ್ದು, ಯೋಜನೆಯ ನೀಲೀ ನಕ್ಷೆಯನ್ನು ಅಂತಿಮಗೊಳಿಸಲಾಗಿದೆ. ಅಲ್ಲದೆ, ಫೆಬ್ರವರಿ 20 ರಂದು ಮುಖ್ಯಮಂತ್ರಿಗಳು ಇದಕ್ಕೆ ಚಾಲನೆ ನೀಡಲಿದ್ದಾರೆ ಎಂದು ಹೇಳಿದರು.
ಗತವೈಭವ ಮರಳಿಸುವ ಗುರಿ!
ತುಂಗಾಭದ್ರಾ ಆರತಿಯ ಅನುಷ್ಠಾನದಿಂದ ಹರಿಹರ ನಗರ ಹಾಗೂ ತುಂಗಾಭದ್ರಾ ನದಿ ಹರಿಯುವ ಎಲ್ಲ ಕಡೆಯೂ ಪ್ರವಾಸೋದ್ಯಮ, ಉದ್ಯೋಗಾವಕಾಶ ಹಾಗೂ ಗತವೈಭವವನ್ನು ಮರಳಿಸುವ ಗುರಿಯನ್ನು ನಾವು ಹೊಂದಿದ್ದೇವೆ. ಹೇಗೆ ವಾರಣಾಸಿ ಕಾರಿಡಾರ್‍ನಲ್ಲಿ ಗಂಗಾನದಿ ಹರಿಯುವ ಎಲ್ಲ ಕಡೆಯೂ ಗಂಗಾ ಆರತಿ ನಡೆಯುವಂತೆ ತುಂಗಾಭದ್ರಾ ನದಿ ಹರಿಯುವ ಎಲ್ಲೆಡೆಯೂ ಆರತಿ ಕಾರ್ಯಕ್ರಮ ನಡೆಯಬೇಕು. ಈ ಮೂಲಕ ಜೀವ ನದಿಯನ್ನು ಸ್ವಚ್ಚವಾಗಿಟ್ಟುಕೊಳ್ಳುವ ಹಾಗೂ ಅದರ ಸುತ್ತಮುತ್ತಲಿನ ನಗರಗಳ ಸರ್ವತೋಮುಖ ಅಭಿವೃದ್ದಿಯಾಗುವುದು ನಮ್ಮ ಉದ್ದೇಶ ಮತ್ತು ಗುರಿಯಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಪಂಜಾಬ್ ಚುನಾವಣೆಗೂ ಮುನ್ನಾ ದಿನ 12,430 ಹೊಸ ಸ್ಮಾರ್ಟ್ ತರಗತಿ ಉದ್ಘಾಟಿಸಿದ ಕೇಜ್ರಿವಾಲ್
ತುಂಗಾಭದ್ರಾ ನದಿ ಹರಿಯುವ ಎಲ್ಲ ಸ್ಥಳಗಳಲ್ಲಿಯೂ ಕೂಡಾ ನಾವು ಪ್ರವಾಸೋದ್ಯಮ, ಉದ್ಯೋಗಾವಕಾಶ ಹೆಚ್ಚಿಸುವುದು ಮತ್ತು ದೇಶದ ಪ್ರಮುಖ ಹಿಂದೂಯಾತ್ರಾ ಸ್ಥಳಗಳಲ್ಲಿ ಒಂದಾಗಿ ಗುರುತಿಸುವಂತೆ ಮಾಡುವುದು ನಮ್ಮ ಉದ್ದೇಶವಾಗಿದೆ. ಈ ಕಾರ್ಯಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ನಮ್ಮ ಅಭಿನಂದನೆಗಳನ್ನು ತಿಳಿಸಿದರು.
ದೇವಸ್ಥಾನದ ಹಿಂಭಾಗದಲ್ಲಿ ಇರುವ ನದಿಗೆ ನೀರು ಕುಡಿಯಲು ಜಾನುವಾರುಗಳು ಬರುತ್ತವೆ. ಅಲ್ಲದೇ ದೇವಸ್ಥಾನಕ್ಕೆ ಬರುವ ಭಕ್ತರು ಹಾಗೂ ಗ್ರಾಮಸ್ಥರು ಕೈ, ಕಾಲು ತೊಳೆಯಲು ನದಿಗೆ ಇಳಿಯುತ್ತಾರೆ. ಹೀಗಾಗಿ ಈ ಭಾಗದಲ್ಲಿ ಮೊಸಳೆ ಮರಿ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಅಲ್ಲದೇ ಮೊಸಳೆ ಮರಿ ಪತ್ತೆಯಾಗಿರುವುದರಿಂದ ಈ ಭಾಗದಲ್ಲಿ ದೊಡ್ಡ ಮೊಸಳೆಯು ಇರಬಹುದು ಎಂಬ ಅನುಮಾನ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಇದನ್ನೂ ಓದಿ: ರಾಜ್ಯದಲ್ಲಿ 2ನೇ ದಿನದ ವೀಕೆಂಡ್ ಕರ್ಫ್ಯೂ ಬಹುತೇಕ ಯಶಸ್ವಿ
ಶಿವಮೊಗ್ಗ: ತುಂಗಾನದಿಗೆ ಹಾರಿ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆದರೆ ಯುವತಿ ಸಾವನ್ನಪ್ಪಿದ್ದು, ಯುವಕನಿಗಾಗಿ ಶೋಧಕಾರ್ಯ ಮಾಡುತ್ತಿರುವ ಘಟನೆ ನಗರದ ಬೈಪಾಸ್ ರಸ್ತೆಯ ಹೊಸ ಸೇತುವೆ ಬಳಿ ನಡೆದಿದೆ.
ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳನ್ನು ಜಿಲ್ಲೆಯ ಭದ್ರಾವತಿ ತಾಲೂಕಿನ ಹುರುಳಿಹಳ್ಳಿ ಗ್ರಾಮದ ಸಂತೋಷ್ (22) ಹಾಗೂ ಕಾಕನಹಸೂಡಿ ಗ್ರಾಮದ ಅನುಷಾ (19) ಎಂದು ಗುರುತಿಸಲಾಗಿದೆ. ಶುಕ್ರವಾರ ಸೇತುವೆ ಮೇಲಿನಿಂದ ತುಂಬಿ ಹರಿಯುತ್ತಿದ್ದ ತುಂಗಾ ನದಿಗೆ ಪ್ರೇಮಿಗಳಿಬ್ಬರು ಹಾರಿದ್ದಾರೆ.
ಈ ವೇಳೆ ಯುವಕ ನದಿಯಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ. ಯುವತಿ ನದಿಯಲ್ಲಿ ಮುಳುಗುತ್ತಿದ್ದನ್ನು ಗಮನಿಸಿದ ಸ್ಥಳೀಯರು ಯುವತಿಯನ್ನು ನದಿಯಿಂದ ರಕ್ಷಿಸಿ ಮೇಲೆ ತಂದು ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಯುವತಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.
ಕತ್ತಲಾಗುವರೆಗೂ ತುಂಗಾನದಿಯಲ್ಲಿ ಅಗ್ನಿಶಾಮಕ ಸಿಬ್ಬಂದಿ ಯುವಕನಿಗಾಗಿ ಶೋಧ ಕಾರ್ಯ ನಡೆಸಿದ್ದರು. ಆದರೆ ಯುವಕ ಮಾತ್ರ ಎಲ್ಲೂ ಪತ್ತೆಯಾಗಿಲ್ಲ. ಹೀಗಾಗಿ ಇಂದು ಕೂಡ ಪೊಲೀಸರು ಯುವಕನಿಗಾಗಿ ಶೋಧ ಕಾರ್ಯ ನಡೆಸಲಿದ್ದಾರೆ.
ಪ್ರೇಮಿಗಳು ಇಬ್ಬರು ಕಳೆದ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇವರಿಬ್ಬರ ಪ್ರೀತಿಗೆ ಜಾತಿ ಅಡ್ಡಿ ಆಗಿತ್ತು ಎನ್ನಲಾಗಿದೆ. ಇಬ್ಬರು ಬೇರೆ ಜಾತಿ ಆಗಿದ್ದರಿಂದ ಇಬ್ಬರ ಪ್ರೀತಿಗೆ ಎರಡು ಮನೆಯವರ ವಿರೋಧ ವ್ಯಕ್ತವಾಗಿತ್ತು. ಆದ್ದರಿಂದ ಮನನೊಂದ ಪ್ರೇಮಿಗಳು ಆತ್ಮಹತ್ಯೆಗೆ ಮುಂದಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ತುಂಗಾ ನಗರ ಪೊಲೀಸರು ಈ ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಚಿಕ್ಕಮಗಳೂರು: ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ತುಂಗಾ ನದಿಯಲ್ಲಿ ನಡೆದಿದೆ.
ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಹಲಸೂರು ಪ್ರಿಯದರ್ಶಿನಿ ಪ್ರೌಢಶಾಲೆಯ 9ನೇ ತರಗತಿ ಓದುತ್ತಿದ್ದ ತರುಣ್ ಗೌಡ ಮೃತ ವಿದ್ಯಾರ್ಥಿ. ಶಾಲೆಯಿಂದ ಸುಮಾರು 60 ವಿದ್ಯಾರ್ಥಿಗಳು ಬಸ್ ಮಾಡಿಕೊಂಡು ಶೃಂಗೇರಿಗೆ ಪ್ರವಾಸಕ್ಕೆಂದು ಬಂದಿದ್ದರು. ಈ ವೇಳೆ ಮಕ್ಕಳು ಸ್ನಾನಕ್ಕೆ ಬಂದಾಗ ಶೌಚಗೃಹದವರು ಒಬ್ಬರಿಗೆ 20 ರೂಪಾಯಿ ಎಂದಿದ್ದಾರೆ.
20 ರೂ. ಜಾಸ್ತಿಯಾಗುತ್ತದೆ ಎಂದು ತಿಳಿದು ಮಕ್ಕಳು ಸ್ನಾನ ಮಾಡಲು ತುಂಗಾ ನದಿಗೆ ಇಳಿದಿದ್ದಾರೆ. ಈ ವೇಳೆ ಈ ದುರ್ಘಟನೆ ಸಂಭವಿಸಿದೆ.
ಸ್ಥಳೀಯರು ಹಾಗೂ ಪೊಲೀಸರ ಸಹಕಾರದಿಂದ ಸುಮಾರು ಒಂದು ಗಂಟೆಯ ಬಳಿಕ ವಿದ್ಯಾರ್ಥಿಯ ಮೃತದೇಹವನ್ನ ನೀರಿನಿಂದ ಮೇಲೆತ್ತಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಶೃಂಗೇರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮಕ್ಕಳು ಪ್ರವಾಸಕ್ಕೆ ಖರ್ಚಿಗೆಂದು ಹೆಚ್ಚಿನ ಹಣ ತಂದಿರಲಿಲ್ಲ. ಒಬ್ಬರಿಗೆ 20 ರೂ. ಆಗುತ್ತದೆ ಎಂದು ಹೇಳಿದ ಹಿನ್ನೆಲೆಯಲ್ಲಿ ಎಲ್ಲ ವಿದ್ಯಾರ್ಥಿಗಳು ನದಿಯಲ್ಲೇ ಸ್ನಾನ ಮಾಡಲು ಇಳಿದಿದ್ದರು ಎನ್ನುವ ವಿಚಾರ ತಿಳಿದು ಬಂದಿದೆ.