Tag: ತುಘಲಕ್ ಲೇನ್‌

  • ಸತ್ಯ ಮಾತನಾಡಿದ್ದಕ್ಕಾಗಿ ನಾನು ಯಾವುದೇ ಬೆಲೆ ತೆರಲು ಸಿದ್ಧ – ಸರ್ಕಾರಿ ಬಂಗಲೆ ತೊರೆದ ರಾಗಾ

    ಸತ್ಯ ಮಾತನಾಡಿದ್ದಕ್ಕಾಗಿ ನಾನು ಯಾವುದೇ ಬೆಲೆ ತೆರಲು ಸಿದ್ಧ – ಸರ್ಕಾರಿ ಬಂಗಲೆ ತೊರೆದ ರಾಗಾ

    ನವದೆಹಲಿ: ಸತ್ಯವನ್ನ ಮಾತನಾಡಿದ್ದಕ್ಕಾಗಿ ಯಾವುದೇ ಬೆಲೆ ತೆರಲು ಸಿದ್ಧ ಎಂದು ಕಾಂಗ್ರೆಸ್‌ (Congress) ನಾಯಕ ರಾಹುಲ್‌ ಗಾಂಧಿ (Rahul Gandhi) ತಿಳಿಸಿದ್ದಾರೆ.

    ಸಂಸತ್‌ ಸದಸ್ಯತ್ವದಿಂದ ಅನರ್ಹಗೊಂಡ ಹಿನ್ನೆಲೆಯಲ್ಲಿ ರಾಹುಲ್‌ ಗಾಂಧಿ ಶನಿವಾರ ದೆಹಲಿಯಲ್ಲಿರುವ ಅಧಿಕೃತ ನಿವಾಸ ಖಾಲಿ ಮಾಡಿದರು. ಜನಪಥ್‌ನಲ್ಲಿರುವ ತಾಯಿ ಸೋನಿಯಾಗಾಂಧಿ ಅವರ ನಿವಾಸಕ್ಕೆ ತಮ್ಮ ವಸ್ತುಗಳನ್ನು ಸಾಗಿಸಿದರು. ರಾಹುಲ್‌ ಗಾಂಧಿ ಅವರು ಬಂಗಲೆಯಿಂದ ವಸ್ತುಗಳನ್ನ ಸಾಗಿಸಲು ಸಹೋದರಿ ಪ್ರಿಯಾಂಕಾ ಗಾಂಧಿ ಸಹಾಯ ಮಾಡಿದರು. ಮನೆ ಖಾಲಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ತಮ್ಮ ತಾಯಿಯೊಂದಿಗೆ ಉಳಿಯುವುದಾಗಿ ತಿಳಿಸಿದರು.

    ಮುಂದುವರಿದು ಮಾತನಾಡಿ, ಹಿಂದೂಸ್ತಾನದ ಜನರು ನನಗೆ 19 ವರ್ಷಗಳ ಕಾಲ ಈ ಮನೆಯನ್ನ ನೀಡಿದ್ದಾರೆ. ನಾನು ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಇದು ಸತ್ಯ ಮಾತನಾಡಿದ್ದಕ್ಕಾಗಿ ಕಟ್ಟಿದ ಬೆಲೆಯಾಗಿದೆ. ಸತ್ಯವನ್ನ ಮಾತನಾಡಿದ್ದಕ್ಕಾಗಿ ನಾನು ಯಾವುದೇ ಬೆಲೆ ತೆರಲು ಸಿದ್ಧನಿದ್ದೇನೆ ಎಂದು ಮತ್ತೊಮ್ಮೆ ಪುನರುಚ್ಛರಿಸಿದ್ದಾರೆ.

    ರಾಹುಲ್‌ ಗಾಂಧಿ ಅವರನ್ನು ಮನೆಯಿಂದ ಖಾಲಿ ಮಾಡಿಸಿರುವುದರ ಬಗ್ಗೆ ಕಾಂಗ್ರೆಸ್‌ ಹಾಗೂ ವಿರೋಧ ಪಕ್ಷದ ನಾಯಕರು ಆಕ್ರೋಶ ಹೊರಹಾಕಿದ್ದಾರೆ. ಇದು ಬಿಜೆಪಿ ಸರ್ಕಾರದ ರಾಜಕೀಯ ಸೇಡು ಹಾಗೂ ಪ್ರಜಾಪ್ರಭುತ್ವದ ಮೇಲಿನ ಆಕ್ರಮಣ ಎಂದು ಕಿಡಿ ಕಾರಿದ್ದಾರೆ. ಆದ್ರೆ ಬಿಜೆಪಿ ಇದು ನ್ಯಾಯಾಲಯದ ತೀರ್ಪು ಎಂದು ಸಮರ್ಥಿಸಿಕೊಂಡಿದೆ.

    ಏನಿದು ವಿವಾದ?
    ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ದೋಷಿ ಎಂದು ಸೂರತ್ ಜಿಲ್ಲಾ ಕೋರ್ಟ್‌ (Surat Court) ತೀರ್ಪು ನೀಡಿ 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಕಳೆದ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ (Kolara) ನಡೆದ ಕಾರ್ಯಕ್ರಮದಲ್ಲಿ ʻಪ್ರಧಾನಿ ಮೋದಿ ಓರ್ವ ಕಳ್ಳʼ ಎಂದು ಮೋದಿ ಉಪನಾಮ ಬಳಿಸಿ ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ್ದ ಕೋರ್ಟ್‌ ರಾಹುಲ್‌ ದೋಷಿ ಎಂದು ತೀರ್ಪು ನೀಡಿ ಶಿಕ್ಷೆಯ ಪ್ರಮಾಣ ಪ್ರಕಟಿಸಿತ್ತು.

    ಇದರಿಂದ ರಾಹುಲ್‌ ಗಾಂಧಿ ಅವರ ಸಂಸತ್‌ ಸದಸ್ಯತ್ವವನ್ನು ರದ್ದುಗೊಳಿಸಲಾಗಿತ್ತು. ಈ ಬೆನ್ನಲ್ಲೇ ಲೋಕಸಭಾ ವಸತಿ ಸಮಿತಿ ಸಂಸದರಿಗೆ ನೀಡಲಾಗುವ ವಸತಿ ಗೃಹದ ಸೌಲಭ್ಯ ಹಿಂಪಡೆಯಲು ನಿರ್ಧರಿಸಿ ದೆಹಲಿಯಲ್ಲಿರುವ ತುಘಲಕ್ ಲೇನ್‌ ಬಂಗಲೆ ತೊರೆಯುವಂತೆ ಆದೇಶಿಸಿತ್ತು.

  • ಧನ್ಯವಾದ, ಮನೆ ಖಾಲಿ ಮಾಡುವೆ – ಲೋಕಸಭೆಯ ವಸತಿ ಸಮಿತಿ ಪತ್ರಕ್ಕೆ ರಾಗಾ ಉತ್ತರ

    ಧನ್ಯವಾದ, ಮನೆ ಖಾಲಿ ಮಾಡುವೆ – ಲೋಕಸಭೆಯ ವಸತಿ ಸಮಿತಿ ಪತ್ರಕ್ಕೆ ರಾಗಾ ಉತ್ತರ

    ನವದೆಹಲಿ: ಲೋಕಸಭಾ ಸದಸ್ಯ (Lok Sabha Member) ಸ್ಥಾನದಿಂದ ಅನರ್ಹಗೊಂಡ ಬೆನ್ನಲ್ಲೇ ಸಂಸದರ ಅಧಿಕೃತ ಮನೆ ಖಾಲಿ ಮಾಡುವಂತೆ ಸೂಚಿಸಿ ಸುತ್ತೋಲೆ ಹೊರಡಿಸಿದ್ದ ಲೋಕಸಭೆಯ ಕಾರ್ಯದರ್ಶಿ ಮೋಹಿತ್ ರಾಜನ್ ಅವರಿಗೆ ರಾಹುಲ್ ಗಾಂಧಿ (Rahul Gandhi) ಪ್ರತ್ಯುತ್ತರ ನೀಡಿ, ಪತ್ರ ಬರೆದಿದ್ದಾರೆ.

    ವಾಸ್ತವ್ಯ ರದ್ದುಗೊಳಿಸುವ ಕುರಿತು ನಿಮ್ಮ ಪತ್ರಕ್ಕೆ ಧನ್ಯವಾದಗಳು ಎಂದು ಪ್ರತಿಕ್ರಿಯಿಸಿರುವ ಅವರು, ನಾನು ಇಲ್ಲಿ ಸಂತೋಷದ ಸಮಯ ಕಳೆದಿದ್ದೇನೆ, ಅದರ ನೆನಪುಗಳಿವೆ. ಜನರ ಆದೇಶಕ್ಕೆ ಋಣಿಯಾಗಿರುವುದಾಗಿ ಹೇಳಿದ್ದಾರೆ. ನನ್ನ ಹಕ್ಕುಗಳಿಗೆ ಯಾವುದೇ ಪೂರ್ವಾಗ್ರಹವಿಲ್ಲದೆ, ನಾನು ಖಂಡಿತವಾಗಿಯೂ ನಿಮ್ಮ ಪತ್ರದಲ್ಲಿರುವ ವಿವರಗಳಿಗೆ ಬದ್ಧನಾಗಿರುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾನು ಸಾವರ್ಕರ್ ಅಲ್ಲ, ಕ್ಷಮೆ ಕೇಳುವುದಿಲ್ಲ: ಅನರ್ಹತೆ ಕುರಿತು ರಾಹುಲ್ ಗಾಂಧಿ

    2019ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ನ್ಯಾಯಾಲಯವು 2 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾದ ನಂತರ ರಾಹುಲ್ ಗಾಂಧಿ ಅವರನ್ನ ಲೋಕಸಭಾ ಸಂಸದರಾಗಿ ಅನರ್ಹಗೊಳಿಸಲಾಗಿದೆ. ಉನ್ನತ ನ್ಯಾಯಾಲಯವು ಅವರ ಅಪರಾಧ ಮತ್ತು ಶಿಕ್ಷೆಯನ್ನು ತಡೆಹಿಡಿಯದ ಹೊರತು ಕಾಂಗ್ರೆಸ್ ನಾಯಕ 8 ವರ್ಷಗಳವರೆಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗುವುದಿಲ್ಲ. ಇದನ್ನೂ ಓದಿ: ರಾಹುಲ್ ಗಾಂಧಿ ಸಂಸದ ಸ್ಥಾನ ಅನರ್ಹ – ವಯನಾಡಿನಲ್ಲಿ ಬ್ಲ್ಯಾಕ್ ಡೇ ಆಚರಣೆ

    ನಿಯಮಗಳ ಪ್ರಕಾರ, ಅವರು ಅನರ್ಹಗೊಂಡ ಆದೇಶದ ದಿನಾಂಕದಿಂದ (ಮಾರ್ಚ್ 24) ಒಂದು ತಿಂಗಳೊಳಗೆ ತಮ್ಮ ಅಧಿಕೃತ ಬಂಗಲೆಯನ್ನು ಖಾಲಿ ಮಾಡಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಲೋಕಸಭೆಯ ವಸತಿ ಸಮಿತಿಯು ಏಪ್ರಿಲ್ 22ರೊಳಗೆ ಲುಟ್ಯೆನ್ಸ್ ದೆಹಲಿಯಲ್ಲಿ ಸರ್ಕಾರ ಮಂಜೂರು ಮಾಡಿದ ಬಂಗಲೆಯನ್ನು ಖಾಲಿ ಮಾಡುವಂತೆ ಪತ್ರ ಬರೆದಿತ್ತು. 2004ರಲ್ಲಿ ಲೋಕಸಭೆ ಸಂಸದರಾಗಿ ಆಯ್ಕೆಯಾದ ಬಳಿಕ ತುಘಲಕ್ ಲೇನ್‌ನಲ್ಲಿರುವ (Tughlaq Lane) ಬಂಗಲೆಯನ್ನು ರಾಹುಲ್‌ ಗಾಂಧಿ ಅವರಿಗೆ ಮಂಜೂರು ಮಾಡಲಾಗಿತ್ತು.