Tag: ತುಟ್ಟಿಭತ್ಯೆ

  • ಕೇಂದ್ರ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ – ಶೇ.3 ರಷ್ಟು ತುಟ್ಟಿಭತ್ಯೆ ಹೆಚ್ಚಳಕ್ಕೆ ಕ್ಯಾಬಿನೆಟ್‌ ಅನುಮೋದನೆ

    ಕೇಂದ್ರ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ – ಶೇ.3 ರಷ್ಟು ತುಟ್ಟಿಭತ್ಯೆ ಹೆಚ್ಚಳಕ್ಕೆ ಕ್ಯಾಬಿನೆಟ್‌ ಅನುಮೋದನೆ

    ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ ಸಿಕ್ಕಿದೆ. ಶೇ.3 ರಷ್ಟು ತುಟ್ಟಿಭತ್ಯೆ (ಡಿಎ) ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.

    ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು, ಪ್ರಧಾನಿ ಮೋದಿ ನೇತೃತ್ವದ ಸಮಿತಿಯ ಪ್ರಮುಖ ನಿರ್ಧಾರಗಳನ್ನು ಪ್ರಕಟಿಸಿದ್ದಾರೆ.

    ಮಾರ್ಚ್‌ನಲ್ಲಿ ತುಟ್ಟಿಭತ್ಯೆಯನ್ನು 4% ಹೆಚ್ಚಳ ಮಾಡಲಾಗಿತ್ತು. ಅದರಿಂದ ಕೇಂದ್ರ ಸರ್ಕಾರಿ ನೌಕರರು ತಮ್ಮ ಮೂಲ ವೇತನದ 50% ರಷ್ಟು DAಗೆ ಅರ್ಹರಾಗಿದ್ದರು. ಆದರೆ ಪಿಂಚಣಿದಾರರು ತಮ್ಮ ಮೂಲ ಪಿಂಚಣಿಯ 50% ನ DR ಅನ್ನು ಪಡೆಯುತ್ತಾರೆ.

    ಕೇಂದ್ರ ಸರ್ಕಾರವು ವರ್ಷಕ್ಕೆ ಎರಡು ಬಾರಿ ಡಿಎಯನ್ನು ಪರಿಷ್ಕರಿಸುತ್ತದೆ. ಜನವರಿ ಮತ್ತು ಜುಲೈ ತಿಂಗಳ ನಂತರದಲ್ಲಿ ಅಧಿಕೃತ ಪ್ರಕಟಣೆಗಳನ್ನು ಮಾಡಲಾಗುತ್ತದೆ. ಕೇಂದ್ರ ಸರ್ಕಾರದಲ್ಲಿ ಸೇವೆ ಸಲ್ಲಿಸುತ್ತಿರುವ ಉದ್ಯೋಗಿಗಳಿಗೆ ಡಿಎ ಅನ್ವಯಿಸುತ್ತದೆ. ಪಿಂಚಣಿದಾರರು ಡಿಆರ್ ಸ್ವೀಕರಿಸುತ್ತಾರೆ.

  • ಕೇಂದ್ರ ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಶೇ.4 ತುಟ್ಟಿಭತ್ಯೆ ಹೆಚ್ಚಳ

    ಕೇಂದ್ರ ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಶೇ.4 ತುಟ್ಟಿಭತ್ಯೆ ಹೆಚ್ಚಳ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸಚಿವ ಸಂಪುಟ ಬುಧವಾರ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಶೇ.4 ರಷ್ಟು ತುಟ್ಟಿಭತ್ಯೆ (DA) ಹೆಚ್ಚಿಸಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ (Anurag Thakur) ಮಾಹಿತಿ ನೀಡಿದರು. ಇದು ಜುಲೈ 1 ರಿಂದಲೇ ಜಾರಿಗೆ ಬರಲಿದೆ.

    ಜುಲೈ 1 ರಿಂದ ಜಾರಿಗೆ ಬರುವಂತೆ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಶೇ.4 ರಷ್ಟು ಡಿಎ ಹೆಚ್ಚಿಸಿ ಸಚಿವ ಸಂಪುಟ ಅನುಮೋದಿಸಿದೆ. ಇದರಿಂದ ಸರಿಸುಮಾರು 41.85 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 69.76 ಲಕ್ಷ ಪಿಂಚಣಿದಾರರಿಗೆ ಪ್ರಯೋಜನ ಆಗಲಿದೆ. ಇದನ್ನೂ ಓದಿ: ಪಿಎಫ್‌ಐ ನಂತೆಯೇ RSSನ್ನೂ ಬ್ಯಾನ್‌ ಮಾಡಿ: ಕೇರಳ ವಿಪಕ್ಷಗಳ ಒತ್ತಾಯ

    ಕೇಂದ್ರ ಸರ್ಕಾರವು ಪ್ರತಿ ವರ್ಷ ಜುಲೈ 1 ರಂದು ತುಟ್ಟಿಭತ್ಯೆಯನ್ನು ಪರಿಷ್ಕರಿಸುತ್ತದೆ. ಆದರೆ ಈ ನಿರ್ಧಾರವನ್ನು ಸಾಮಾನ್ಯವಾಗಿ ಸೆಪ್ಟೆಂಬರ್‌ನಲ್ಲಿ ಪ್ರಕಟಿಸಲಾಗುತ್ತದೆ.

    Live Tv
    [brid partner=56869869 player=32851 video=960834 autoplay=true]

  • ರಾಜ್ಯ ಸರ್ಕಾರಿ ನೌಕರರಿಗೆ ಯುಗಾದಿ ಗಿಫ್ಟ್

    ರಾಜ್ಯ ಸರ್ಕಾರಿ ನೌಕರರಿಗೆ ಯುಗಾದಿ ಗಿಫ್ಟ್

    ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸಮ್ಮಿಶ್ರ ಸರ್ಕಾರ ಯುಗಾದಿ ಹಬ್ಬದ ಕೊಡುಗೆಯಾಗಿ ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡಿದೆ.

    2018 ಪರಿಷ್ಕೃತ ವೇತನ ಶ್ರೇಣಿಯಲ್ಲಿ ಶೇ.2.75ರಷ್ಟು ಏರಿಕೆ ಮಾಡಿ ಆದೇಶ ಹೊರಡಿಸಿದೆ. ಜನವರಿ 1, 2019ರಿಂದ ಪೂರ್ವಾನ್ವಯವಾಗುವಂತೆ ತುಟ್ಟಿಭತ್ಯೆ ಶೇ.3.75ರಿಂದ ಶೇ.6.50ಕ್ಕೆ ಏರಿಕೆ ಮಾಡಿ ಹಣಕಾಸು ಇಲಾಖೆ ಇಂದು ಅಧಿಕೃತ ಆದೇಶ ಹೊರಡಿಸಿದ್ದು, ಇದರಿಂದಾಗಿ 8.5 ಲಕ್ಷ ನೌಕರರ ಮಾಸಿಕ ವೇತನ ಹಚ್ಚಳವಾಗಲಿದೆ.

    ಸರ್ಕಾರದ ಮತ್ತು ಜಿಲ್ಲಾ ಪಂಚಾಯತಿ ಪೂರ್ಣ ನೌಕರರಿಗೆ ಮತ್ತು ತಾತ್ಕಲಿಕ ನೌಕರಿ ವೇತನ ಶ್ರೇಣಿಯಲ್ಲಿರುವ ಪೂರ್ಣ ಅವಧಿ ವರ್ಕ್ ಚಾರ್ಜ್ ನೌಕರರಿಗೆ ಹಾಗು ಸರ್ಕಾರದಿಂದ ಸಹಾಯಧನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯದಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರಿಗೆ ಈ ಆದೇಶ ಅನ್ವಯವಾಗಲಿದೆ.

  • ಕೇಂದ್ರ ಸರ್ಕಾರಿ ನೌಕರರಿಗೆ ಬಂಪರ್: ಶೇ.2ರಷ್ಟು ತುಟ್ಟಿಭತ್ಯೆ ಏರಿಕೆ

    ಕೇಂದ್ರ ಸರ್ಕಾರಿ ನೌಕರರಿಗೆ ಬಂಪರ್: ಶೇ.2ರಷ್ಟು ತುಟ್ಟಿಭತ್ಯೆ ಏರಿಕೆ

    ನವದೆಹಲಿ: ಕೇಂದ್ರ ಸಚಿವ ಸಂಪುಟವು ಬುಧವಾರ ಶೇ.2 ರಷ್ಟು ಹೆಚ್ಚುವರಿಯಾಗಿ ತುಟ್ಟಿಭತ್ಯೆ ನೀಡಲು ನಿರ್ಧರಿಸಿದ್ದು, ಇದರಿಂದ ಒಟ್ಟು 1.1 ಕೋಟಿ ಕೇಂದ್ರ ಸರ್ಕಾರಿ ನೌಕರರಿಗೆ ಮತ್ತು ಪಿಂಚಣಿದಾರರಿಗೆ ಸಹಾಯವಾಗಲಿದೆ.

    ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ತುಟ್ಟಿಭತ್ಯೆ ನಿರ್ಧಾರ ಕೈಗೊಂಡಿದ್ದು, 2018 ಜುಲೈ 1ರಿಂದ ಪೂರ್ವಾನ್ವಯವಾಗುಂತೆ ಜಾರಿಯಾಗಲಿದೆ. ಈಗಾಗಲೇ ಕೇಂದ್ರ ಸರ್ಕಾರಿ ನೌಕರರು ಶೇ.7ರಷ್ಟು ತುಟ್ಟಿಭತ್ಯೆ ಪಡೆಯುತ್ತಿದ್ದು, ಈಗ ಈ ಪ್ರಮಾಣ ಶೇ.9ಕ್ಕೆ ಏರಿಕೆಯಾಗಿದೆ.

    7ನೇ ವೇತನ ಆಯೋಗದ ಶಿಫಾರಸಿನ ಹಿನ್ನೆಲೆಯಲ್ಲಿ ತುಟ್ಟಿಭತ್ಯೆ ಮತ್ತು ಪಿಚಣಿದಾರರ ತುಟ್ಟಿಭತ್ಯೆ ಪರಿಹಾರವನ್ನು(ಡಿಎಆರ್) ಏರಿಕೆ ಮಾಡಿದ್ದು, ಇದರಿಂದಾಗಿ 48.41 ಲಕ್ಷ ಕೇಂದ್ರ ಸರ್ಕಾರಿ ನೌಕರರಿಗೆ ಹಾಗೂ 62.03 ಲಕ್ಷ ನಿವೃತ್ತಿ ವೇತನ ಪಡೆಯುವವರಿಗೆ ಅನುಕೂಲವಾಗಲಿದೆ. 2018-19ರ ಹಣಕಾಸು ವರ್ಷದಲ್ಲಿ ತುಟ್ಟಿಭತ್ಯೆ ಏರಿಕೆಯಿಂದ 6,112.20 ಕೋಟಿ ರೂ. ಮತ್ತು ಡಿಆರ್ ಏರಿಕೆಯಿಂದ 4,074.80 ಕೋಟಿ ರೂ. ಸರ್ಕಾರ ಬೊಕ್ಕಸಕ್ಕೆ ಹೊರೆಯಾಗಲಿದೆ.

    ಸರ್ಕಾರಿ ನೌಕರರು, ಸಾರ್ವಜನಿಕ ವಲಯದ ನೌಕರರು ಹಾಗೂ ಪಿಂಚಣಿದಾರರರಿಗೆ ತುಟ್ಟಿ ಭತ್ಯೆ ಸಿಗಲಿದ್ದು, ಇದು ನೌಕರರ ಮೂಲ ವೇತನದ ಮೇಲೆ ನಿಗದಿಯಾಗುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv