Tag: ತುಟ್ಟಿ ಭತ್ಯೆ

  • ದೀಪಾವಳಿಗೆ ಸಿಹಿ ಸುದ್ದಿ- ರಾಜ್ಯದ ಸರ್ಕಾರಿ ನೌಕರರ DA 2% ಏರಿಕೆ

    ದೀಪಾವಳಿಗೆ ಸಿಹಿ ಸುದ್ದಿ- ರಾಜ್ಯದ ಸರ್ಕಾರಿ ನೌಕರರ DA 2% ಏರಿಕೆ

    ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ. ತುಟ್ಟಿ ಭತ್ಯೆಯನ್ನು (Dearness Allowance) ಶೇ. 2ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ.

    ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜುಲೈ 2025 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇ.12.25 ರಿಂದ ಶೇ.14.25 ಗೆ ಏರಿಕೆ ಮಾಡಿದೆ.  ಇದನ್ನೂ ಓದಿ:  ಬೆಂಗಳೂರು ನಿವಾಸಿಗಳಿಗೆ ದೀಪಾವಳಿಗೂ ಮೊದಲೇ ಗಿಫ್ಟ್‌; ಬಿ-ಖಾತಾ ಪರಿವರ್ತನೆಗೆ ಹೊಸ ಪೋರ್ಟಲ್‌

    ಕೇಂದ್ರ ಸರ್ಕಾರವು ತನ್ನ ನೌಕರರಿಗೆ ತುಟ್ಟಿ ಭತ್ಯೆ ಘೋಷಿಸಿದ ಬೆನ್ನಲ್ಲೇ ಸಾಮಾನ್ಯವಾಗಿ ರಾಜ್ಯ ಸರ್ಕಾರವೂ ಏರಿಕೆ ಮಾಡುತ್ತದೆ. ವಿಜಯದಶಮಿಯ (Vijayadashami) ಮುನ್ನ ದಿನ ಕೇಂದ್ರ ಸರ್ಕಾರಿ ನೌಕರರಿಗೆ ಮೋದಿ ಸರ್ಕಾರ ಹೆಚ್ಚುವರಿ 3% ತುಟ್ಟಿ ಭತ್ಯೆ ನೀಡಲು ಒಪ್ಪಿಗೆ ನೀಡಿತ್ತು.  ಇದನ್ನೂ ಓದಿ:  ಕೇದಾರನಾಥ ಯಾತ್ರಿಗಳಿಗೆ ಗುಡ್ ನ್ಯೂಸ್ – 12.9 ಕಿಮೀ ರೋಪ್‌ವೇ ನಿರ್ಮಿಸಲಿದೆ ಅದಾನಿ ಕಂಪನಿ

    ಬೆಲೆ ಏರಿಕೆಯನ್ನು ಸರಿದೂಗಿಸಲು, ಕೇಂದ್ರ ಸರ್ಕಾರಿ ನೌಕರರಿಗೆ ಹೆಚ್ಚುವರಿ ಕಂತು ತುಟ್ಟಿ ಭತ್ಯೆ (DA) ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರ (DR) ನೀಡಲು ಅನುಮೋದನೆ ನೀಡಿತ್ತು.

  • ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್ – ತುಟ್ಟಿ ಭತ್ಯೆ ಶೇ. 3.75 ಹೆಚ್ಚಳ

    ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್ – ತುಟ್ಟಿ ಭತ್ಯೆ ಶೇ. 3.75 ಹೆಚ್ಚಳ

    ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ ಸಿಕ್ಕಿದೆ. ತುಟ್ಟಿ ಭತ್ಯೆಯನ್ನು (Dearness Allowance) ಶೇ. 3.75 ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

    ಈ ಮೂಲಕ ಸರ್ಕಾರಿ ನೌಕರರ ತುಟ್ಟಿ ಭತ್ಯೆ 38.75% ಗೆ ಏರಿಕೆಯಾಗಿದೆ. ಇದನ್ನೂ ಓದಿ: ನಕಲಿ ವೋಟರ್ ಐಡಿ ಪ್ರಕರಣ; ಸಚಿವ ಭೈರತಿ ಸುರೇಶ್ ರಾಜೀನಾಮೆ ಕೊಡಬೇಕು: ರವಿಕುಮಾರ್

    UGC/ AICTE/ ICAR ವೇತನ ಶ್ರೇಣಿಗಳ ಬೋಧಕ ಸಿಬ್ಬಂದಿ ಹಾಗೂ NJPC ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳ ತುಟ್ಟಿ ಭತ್ಯೆಯನ್ಬು ಶೇ. 4 ರಷ್ಟು ಹೆಚ್ಚಿಸಿ (ಶೇ. 46 ಕ್ಕೆ ಪರಿಷ್ಕರಿಸಿ) ಸರ್ಕಾರ ಆದೇಶ ಹೊರಡಿಸಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ 4% ಹೆಚ್ಚಳ

    ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ 4% ಹೆಚ್ಚಳ

    ಬೆಂಗಳೂರು: ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ (Karnataka Government) ಸಿಹಿ ಸುದ್ದಿ ನೀಡಿದೆ.

    ತುಟ್ಟಿ ಭತ್ಯೆಯನ್ನು (Dearness Allowance) 4% ಹೆಚ್ಚಿಸಿ ಸರ್ಕಾರ ಆದೇಶ ಪ್ರಕಟಿಸಿದೆ. ಜನವರಿಯಿಂದ ಪೂರ್ವಾನ್ವಯವಾಗುವಂತೆ ಇದು ಜಾರಿಯಾಗಲಿದೆ. ಇದನ್ನೂ ಓದಿ: ಉಡುಪಿ, ದ.ಕ, ಶಿವಮೊಗ್ಗದಲ್ಲಿ ಖಾಸಗಿ ಬಸ್‌ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿ: ಸುನಿಲ್ ಕುಮಾರ್

    ಇಲ್ಲಿಯವರೆಗೆ 31% ತುಟ್ಟಿ ಭತ್ಯೆ ಇತ್ತು. ಈಗ ಇದು 35% ಏರಿಕೆಯಾಗಿದೆ.

  • ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ – ಶೇ.4 ರಷ್ಟು ತುಟ್ಟಿ ಭತ್ಯೆ ಹೆಚ್ಚಳ

    ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ – ಶೇ.4 ರಷ್ಟು ತುಟ್ಟಿ ಭತ್ಯೆ ಹೆಚ್ಚಳ

    ನವದೆಹಲಿ: ಯುಗಾದಿ ಹಬ್ಬದ ನಂತರ ಕೇಂದ್ರ ಸರ್ಕಾರ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ಕೊಟ್ಟಿದೆ. ತುಟ್ಟಿ ಭತ್ಯೆ (Dearness Allowance) ಶೇ.4ರಷ್ಟು ಹೆಚ್ಚಳಕ್ಕೆ ಅನುಮೋದನೆ ನೀಡಿದೆ.

    ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಘೋಷಣೆ ಮಾಡಿದೆ. ಈ ಹೆಚ್ಚಳವು 7ನೇ ಕೇಂದ್ರ ವೇತನ ಆಯೋಗದ (Central Pay Commission) ಶಿಫಾರಸುಗಳ ಆಧಾರದ ಮೇಲೆ ಅಂಗೀಕರಿಸಲ್ಪಟ್ಟ ಸೂತ್ರಕ್ಕೆ ಅನುಗುಣವಾಗಿದೆ. ಇದನ್ನೂ ಓದಿ: PSI ಅಕ್ರಮ ನೇಮಕಾತಿ ಪ್ರಕರಣ- ವಿಚಾರಣೆ ಎದುರಿಸಿದ್ದ ಮಧ್ಯವರ್ತಿ ಗಣಪತಿ ಭಟ್ ಶವವಾಗಿ ಪತ್ತೆ

    ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಸಿಹಿಸುದ್ದಿ ನೀಡಲಾಗಿದ್ದು, ಶೇ.4ರಷ್ಟು ತುಟ್ಟಿಭತ್ಯೆ ಹೆಚ್ಚಿಸಲಾಗಿದೆ. ಕೇಂದ್ರ ಸರ್ಕಾರವು ತನ್ನ ವ್ಯಾಪ್ತಿಯ 1 ಕೋಟಿಗೂ ಹೆಚ್ಚು ಉದ್ಯೋಗಿಗಳಿಗೆ ತುಟ್ಟಿಭತ್ಯೆ ಶೇ.4.ರಷ್ಟು ಹೆಚ್ಚಿಸಿದೆ. ಒಟ್ಟಾರೆಯಾಗಿ ತುಟ್ಟಿಭತ್ಯೆ ಹೆಚ್ಚಳ ಶೇ.38 ರಿಂದ ಶೇ.42ಕ್ಕೆ ಹೆಚ್ಚಾಗಿದೆ. ಇದನ್ನೂ ಓದಿ: ರಾಹುಲ್‌ ಗಾಂಧಿ ಅಜ್ಜಿ ಇಂದಿರಾ ಗಾಂಧಿ ಸಹ ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದರು..!

    ತುಟ್ಟಿಭತ್ಯೆ ಹೆಚ್ಚಳವನ್ನು 2023ರ ಜನವರಿಯಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಲಾಗಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ. ತುಟ್ಟಿಭತ್ಯೆ ಹೆಚ್ಚಳವನ್ನು ಪೂರೈಸಲು ಕೇಂದ್ರವು 12,815.60 ಕೋಟಿ ರೂ.ಗಳನ್ನ ಖರ್ಚು ಮಾಡಲಿದೆ. ಇದರಿಂದ ಸುಮಾರು 47.58 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 69.76 ಲಕ್ಷ ಪಿಂಚಣಿದಾರರು ಪ್ರಯೋಜನ ಪಡೆಯಲಿದ್ದಾರೆ ಎಂದೂ ಅವರು ಮಾಹಿತಿ ನೀಡಿದ್ದಾರೆ.

    ತುಟ್ಟಿಭತ್ಯೆ ಹೇಗೆ ಲೆಕ್ಕ ಹಾಕಲಾಗುತ್ತದೆ?
    ತುಟ್ಟಿಭತ್ಯೆಯನ್ನು ಹೇಗೆ ಲೆಕ್ಕ ಹಾಕಲಾಗುತ್ತದೆ ಎಂಬ ಮಾಹಿತಿಯನ್ನೂ ಅಧಿಸೂಚನೆಯಲ್ಲಿ ನೀಡಲಾಗಿದೆ. ಪರಿಷ್ಕೃತ ಮೂಲ ವೇತನ ಮತ್ತು ಭತ್ಯೆ ರಹಿತರ ಪ್ರಕಾರ ಡಿಎ ಲೆಕ್ಕಾಚಾರ ನಡೆಯಲಿದೆ. ಬೇರೆ ಯಾವುದೇ ಭತ್ಯೆ ಇಲ್ಲದಿದ್ದರೆ ಮೂಲ ವೇತನ ಮತ್ತು ಡಿಎ ಲೆಕ್ಕ ಹಾಕಲಾಗುತ್ತದೆ. ಈ ಹೆಚ್ಚಿದ ಡಿಎ, ಶಿಕ್ಷಕರು ಮತ್ತು ಸರ್ಕಾರಿ ಅನುದಾನಿತ ಸಂಸ್ಥೆಗಳ ಇತರ ನೌಕರರು ಹಾಗೂ ಸ್ಥಳೀಯ ಸಂಸ್ಥೆಗಳ ನೌಕರರಿಗೆ ಅನ್ವಯಿಸುತ್ತದೆ.

  • ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌: ತುಟ್ಟಿ ಭತ್ಯೆ ಹೆಚ್ಚಳ

    ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌: ತುಟ್ಟಿ ಭತ್ಯೆ ಹೆಚ್ಚಳ

    ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌. ಸರ್ಕಾರ ತುಟ್ಟಿ ಭತ್ಯೆಯನ್ನು ಹೆಚ್ಚಿಸಿದೆ.

    ಜನವರಿ 1 ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಶೇ. 2.75 ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ. ಇದನ್ನೂ ಓದಿ: ಬೆಂಗಳೂರಿನ ಐಟಿ ಕಂಪನಿಗಳಿಗೆ ತೆಲಂಗಾಣ ಆಫರ್ – ಬಿಜೆಪಿ ನಾಯಕರು ಕಿಡಿ

    ಈ ಸಂಬಂಧ ಮಾಹಿತಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1 ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಶೇ. 2.75 ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಸರ್ಕಾರ 1447 ಕೋಟಿ ರೂ. ವಾರ್ಷಿಕ ವೆಚ್ಚ ಭರಿಸಲಿದೆ. ಸರ್ಕಾರಿ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.

  • DA: ಕೇಂದ್ರ ಸರ್ಕಾರಿ ನೌಕರರಿಗೆ ಶೇ. 3 ತುಟ್ಟಿ ಭತ್ಯೆ ಹೆಚ್ಚಳ

    DA: ಕೇಂದ್ರ ಸರ್ಕಾರಿ ನೌಕರರಿಗೆ ಶೇ. 3 ತುಟ್ಟಿ ಭತ್ಯೆ ಹೆಚ್ಚಳ

    ನವದೆಹಲಿ: ಕೇಂದ್ರ ಸರ್ಕಾರದ ನೌಕರರಿಗೆ ತುಟ್ಟಿ ಭತ್ಯೆಯನ್ನು (DA) ಶೇ.3 ರಷ್ಟು ಹೆಚ್ಚಿಸಲಾಗಿದೆ. ನೌಕರರು ಹಾಗೂ ಪಿಂಚಣಿದಾರರಿಗೆ ಇದರ ಲಾಭ ದೊರೆಯಲಿದೆ.

    ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಸಭೆಯಲ್ಲಿ ಶೇ.3 ಡಿಎ ಹೆಚ್ಚಳಕ್ಕೆ ಬುಧವಾರ ಅನುಮೋದನೆ ನೀಡಲಾಯಿತು. ಇದನ್ನೂ ಓದಿ: ಮಮತಾ ಬ್ಯಾನರ್ಜಿ ʼಮಾಫಿಯಾʼ ಹಿಡಿತದಲ್ಲಿ ಬಂಗಾಳ: ಬಿಜೆಪಿ ವರದಿ

    ಡಿಎ ಮತ್ತು ಡಿಆರ್‌ನ ಹೊಸ ಭತ್ಯೆ 2022ರ ಜ.1ರಿಂದಲೇ ಜಾರಿಗೆ ಬರಲಿದೆ. ಪ್ರಸ್ತುತ ಮೂಲ ವೇತನದ ಶೇ.31ರಷ್ಟು ಮೊತ್ತವನ್ನು ತುಟ್ಟಿ ಭತ್ಯೆ ಅಥವಾ ಪರಿಹಾರವಾಗಿ ನೀಡಲಾಗುತ್ತಿದ್ದು, ಸರ್ಕಾರದ ಅನುಮೋದನೆಯ ಬಳಿಕ ಡಿಎ ಶೇ.34ಕ್ಕೆ ಏರಿಕೆಯಾದಂತಾಗಿದೆ.

    ಈ ಹೆಚ್ಚಳವು 7ನೇ ಕೇಂದ್ರೀಯ ವೇತನ ಆಯೋಗದ ಶಿಫಾರಸುಗಳನ್ನು ಆಧರಿಸಿದ ಸ್ವೀಕೃತ ಸೂತ್ರಕ್ಕೆ ಅನುಗುಣವಾಗಿದೆ. ತುಟ್ಟಿ ಭತ್ಯೆ ಹೆಚ್ಚಿಸುವ ನಿರ್ಧಾರದಿಂದಾಗಿ ಸರ್ಕಾರಕ್ಕೆ ವಾರ್ಷಿಕ 9,544.50 ಕೋಟಿ ರೂ. ಹೊರೆಯಾಗಲಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಬ್ರಾಂಡ್ ವ್ಯಾಲ್ಯೂ ಕಡಿಮೆಯಾದರೂ ಕೊಹ್ಲಿ ನಂ.1 – ಯಾರ ಮೌಲ್ಯ ಎಷ್ಟು

    ಡಿಎ ಹೆಚ್ಚಳವು ಕೇಂದ್ರ ಸರ್ಕಾರದ 47.68 ಲಕ್ಷ ನೌಕರರು ಮತ್ತು 68.62 ಲಕ್ಷ ಪಿಂಚಣಿದಾರರಿಗೆ 2022ರ ಜನವರಿ 1ರಿಂದಲೇ ಅನ್ವಯವಾಗಲಿದೆ.

  • ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ದೀಪಾವಳಿ ಗಿಫ್ಟ್: ತುಟ್ಟಿ ಭತ್ಯೆ ಹೆಚ್ಚಳ

    ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ದೀಪಾವಳಿ ಗಿಫ್ಟ್: ತುಟ್ಟಿ ಭತ್ಯೆ ಹೆಚ್ಚಳ

    ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ ದೀಪಾವಳಿ ಹಬ್ಬದ ಬಂಪರ್ ಉಡುಗೊರೆ ನೀಡಿದೆ.

    GOVT EMPLOYEES

    ಜುಲೈ 1ರಿಂದಲೇ ಪೂರ್ವಾನ್ವಯವಾಗುವಂತೆ ತುಟ್ಟಿ ಭತ್ಯೆಯನ್ನು ಶೇಕಡಾ 3ರಷ್ಟು ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಇದನ್ನೂ ಓದಿ: ಶಾಲೆ ಆರಂಭವಾದ ಬಳಿಕ ಕಲ್ಯಾಣ ಕರ್ನಾಟಕದಲ್ಲಿ ಮಕ್ಕಳ ಹಾಜರಾತಿ ಕಡಿಮೆ ಇದೆ: ಬಿ.ಸಿ ನಾಗೇಶ್

    ಸದ್ಯ ಮೂಲವೇತನ ಆಧರಿಸಿ ಶೇ. 21.50ರಷ್ಟು ತುಟ್ಟಿ ಭತ್ಯೆ (ಡಿಎ) ನೀಡಲಾಗುತ್ತಿದೆ. ಹೊಸದಾಗಿ ಡಿಎ ಹೆಚ್ಚಳದಿಂದ ಇನ್ಮುಂದೆ ನೌಕರರು ಮೂಲವೇತನದ ಶೇ. 24.50ರಷ್ಟು ತುಟ್ಟಿ ಭತ್ಯೆ ಪಡೆಯಲಿದ್ದಾರೆ. ನಿವೃತ್ತ ಸರ್ಕರಿ ನೌಕರಿಗೂ ಇದು ಅನ್ವಯವಾಗಲಿದೆ.  ಇದನ್ನೂ ಓದಿ: ಕಷ್ಟಕರವಾದ ರಸ್ತೆಗಳು ಸುಂದರ ತಾಣಗಳಿಗೆ ದಾರಿ ಮಾಡಿಕೊಡುತ್ತೆ: ದೀಪಿಕಾ ದಾಸ್

    MONEY

    ಡಿಎ ಹೆಚ್ಚಳದಿಂದ 6 ಲಕ್ಷ ಸರ್ಕಾರಿ ನೌಕರರು, 4.5 ಲಕ್ಷ ಪಿಂಚಣಿದಾರರು ಮತ್ತು ವಿವಿಧ ನಿಗಮ ಮಂಡಳಿಗಳಲ್ಲಿ ಸೇವೆ ಸಲ್ಲಿಸುತ್ತಿರುವ 3 ಲಕ್ಷ ಉದ್ಯೋಗಿಗಳಿಗೆ ಅನುಕೂಲವಾಗಲಿದೆ.

  • ಸರ್ಕಾರಿ ನೌಕರರಿಗೆ ದೀಪಾವಳಿ ಬಂಪರ್- ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಆದೇಶ

    ಸರ್ಕಾರಿ ನೌಕರರಿಗೆ ದೀಪಾವಳಿ ಬಂಪರ್- ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಆದೇಶ

    ಬೆಂಗಳೂರು: ಸರ್ಕಾರಿ ನೌಕರರಿಗೆ ದೀಪಾವಳಿ ಬಂಪರ್ ನೀಡಲಾಗಿದ್ದು, ತುಟ್ಟಿ ಭತ್ಯೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

    ಜುಲೈ 1ರಿಂದ ಪೂರ್ವಾನ್ವಯವಾಗುವಂತೆ ಹೆಚ್ಚಳ ಮಾಡಲಾಗಿದ್ದು, ಶೇ.4.35 ರಷ್ಟು ತುಟ್ಟಿ ಭತ್ಯೆ ಹೆಚ್ಚಿಸಿ ಸರ್ಕಾರ ಆದೇಶಿಸಿದೆ. ಆದರೆ ರಾಜ್ಯ ಪೋಲಿಸರಿಗೆ ಸ್ವಲ್ಪ ಸಿಹಿ, ಸ್ವಲ್ಪ ಕಹಿ ಎನ್ನುವಂತಾಗಿದ್ದು, ದೀಪಾವಳಿಗೂ ಔರಾದ್ಕರ್ ವರದಿ ಜಾರಿಯಾಗಿಲ್ಲ ಎಂಬ ಬೇಸರ ಒಂದು ಕಡೆ ಮನೆಮಾಡಿದೆ. ಈ ಮೂಲಕ ರಾಜ್ಯ ಪೊಲೀಸರಿಗೆ ಸರ್ಕಾರ ಶಾಕ್ ಕೊಟ್ಟಿದೆ.

    ಕಷ್ಟ ಪರಿಹಾರ ಭತ್ಯೆಯನ್ನು 1 ಸಾವಿರ ರೂಪಾಯಿ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನವೆಂಬರ್ 1ರಿಂದ ಅನ್ವಯವಾಗುವಂತೆ ಕಷ್ಟ ಪರಿಹಾರ ಭತ್ಯೆಯನ್ನು ಹೆಚ್ಚಳ ಮಾಡಲಾಗಿದೆ. ಔರಾದ್ಕರ್ ವರದಿ ಜಾರಿಯಾಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ಪೋಲೀಸರಿಗೆ ಸ್ವಲ್ಪ ಮಟ್ಟಿಗೆ ಬೇಸರವಾಗಿದೆ. ಆದರೆ ಜಮೇದಾರ್, ಪೊಲೀಸ್ ಪೇದೆ, ಮುಖ್ಯ ಪೇದೆ, ಎಎಸ್‍ಐ, ಎಸ್‍ಐಗಳಿಗೆ 1 ಸಾವಿರ ರೂ. ರಿಸ್ಕ್ ಅಲೋಯೆನ್ಸ್(ಕಷ್ಟ ಪರಿಹಾರ ಭತ್ಯೆ) ಹೆಚ್ಚಳ ಮಾಡುವ ಮೂಲಕ ಸ್ವಲ್ಪ ಮಟ್ಟಿಗೆ ಖುಷಿ ಪಡಿಸಿದೆ.

    ಜಮೇದಾರ್, ಮುಖ್ಯ ಪೇದೆ, ಎಎಸ್‍ಐ, ಎಸ್‍ಐಗಳಿಗೆ ಈ ಹಿಂದೆ 1 ಸಾವಿರ ರೂ. ಕಷ್ಟ ಪರಿಹಾರ ಭತ್ಯೆ ಇತ್ತು. ಈಗ 2 ಸಾವಿರ ರೂ. ಕಷ್ಟ ಪರಿಹಾರ ಭತ್ಯೆ ಸಿಗಲಿದೆ. ಪೇದೆಗಳಿಗೆ 2 ಸಾವಿರ ಕಷ್ಟ ಪರಿಹಾರ ಭತ್ಯೆ ಇತ್ತು, ಈಗ 3 ಸಾವಿರ ಭತ್ಯೆ ಸಿಗಲಿದೆ. ಅಲ್ಲದೆ ಹೊಸ ಪೊಲೀಸ್ ಇನ್ಸ್‍ಪೆಕ್ಟರ್ ಗಳಿಗೂ 1 ಸಾವಿರ ರೂ. ಕಷ್ಟ ಪರಿಹಾರ ಭತ್ಯೆ ನೀಡುವುದಾಗಿ ಸರ್ಕಾರ ಆದೇಶ ಹೊರಡಿಸಿದೆ.

  • ದಸರಾ ಹಬ್ಬಕ್ಕೆ ಸರ್ಕಾರಿ ನೌಕರರಿಗೆ ಸಮ್ಮಿಶ್ರ ಸರ್ಕಾರದಿಂದ ಗುಡ್‍ನ್ಯೂಸ್

    ದಸರಾ ಹಬ್ಬಕ್ಕೆ ಸರ್ಕಾರಿ ನೌಕರರಿಗೆ ಸಮ್ಮಿಶ್ರ ಸರ್ಕಾರದಿಂದ ಗುಡ್‍ನ್ಯೂಸ್

    ಬೆಂಗಳೂರು: ಜೆಡಿಎಸ್- ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ದಸರಾ ಹಬ್ಬದ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡಿದೆ.

    ಸರ್ಕಾರಿ ನೌಕರರಿಗೆ ಶೇ.2 ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. 2018ರ ಜುಲೈ 1 ರಿಂದ ಪೂರ್ವಾನ್ವಯವಾಗುವಂತೆ ಮೂಲ ವೇತನದ ಶೇ.1.75ರಿಂದ ಶೇ.3.75ಕ್ಕೆ ತುಟ್ಟಿ ಭತ್ಯೆ ಏರಿಕೆ ಮಾಡಿ ಹಣಕಾಸು ಇಲಾಖೆ ಇಂದು ಅಧಿಕೃತ ಆದೇಶ ಹೊರಡಿಸಿದೆ.

    ತುಟ್ಟಿ ಭತ್ಯೆ ಏರಿಕೆಯಿಂದ 8.5 ಲಕ್ಷ ಸರ್ಕಾರಿ ನೌಕರರ ಮಾಸಿಕ ವೇತನ ಹೆಚ್ಚಳವಾಗಲಿದೆ. ಕೇಂದ್ರ ಸರ್ಕಾರ ನೌಕರರ ವೇತನ ಪರಿಷ್ಕರಣೆಯ ಬಳಿಕ ತುಟ್ಟಿ ಭತ್ಯೆ ಹೆಚ್ಚಳ ಮಾಡಿತ್ತು. ಹೀಗಾಗಿ ರಾಜ್ಯ ಸರ್ಕಾರವೂ ನೌಕರರ ತುಟ್ಟಿಭತ್ಯೆ ಮಾಡುವ ನಿರೀಕ್ಷೆಯಿತ್ತು.

    ಗುರುವಾರ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಜುಲೈ ತಿಂಗಳಿನಿಂದ ಬಾಕಿ ಇರುವ ತುಟ್ಟಿ ಭತ್ಯೆಯನ್ನು ಏರಿಸುವಂತೆ ಮನವಿ ಮಾಡಿದ್ದರು. ಈ ಮನವಿಯನ್ನು ಸಿಎಂ ಪುರಸ್ಕರಿಸಿದ್ದು ಈಗ ತುಟ್ಟಿಭತ್ಯೆ ಏರಿಕೆಯಾಗಿದೆ.