Tag: ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ

  • ‘ಪಬ್ಲಿಕ್ ಟಿವಿ’ ವರದಿ ಇಂಪ್ಯಾಕ್ಟ್: ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಸ್ಲಾಬ್ ಕುಸಿತ – ಟೋಲ್ ಸಿಬ್ಬಂದಿಯಿಂದ ದುರಸ್ತಿ

    ‘ಪಬ್ಲಿಕ್ ಟಿವಿ’ ವರದಿ ಇಂಪ್ಯಾಕ್ಟ್: ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಸ್ಲಾಬ್ ಕುಸಿತ – ಟೋಲ್ ಸಿಬ್ಬಂದಿಯಿಂದ ದುರಸ್ತಿ

    ನೆಲಮಂಗಲ: ನೆಲಮಂಗಲ (Nelamangala) ಹಾಗೂ ಗೊರಗುಂಟೆಪಾಳ್ಯ (Gorguntepalya) ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸವಾರರಿಗೆ ಜೀವಕ್ಕೆ ಕುತ್ತು ಬರುವ ಹಾಗೇ ಗುಂಡಿಗಳ ಸಮಸ್ಯೆಯಿತ್ತು. ಇದಕ್ಕೆ ಸಂಬಂಧಿಸಿದಂತೆ ‘ಪಬ್ಲಿಕ್ ಟಿವಿ’ (PUBLiC TV) ವರದಿ ಮಾಡಿತ್ತು.ಇದನ್ನೂ ಓದಿ: ಬಾಲಿವುಡ್‌ನತ್ತ ನಟ- ‘ಜಬ್ ವಿ ಮೆಟ್’ ನಿರ್ದೇಶಕನ ಸಿನಿಮಾದಲ್ಲಿ ಫಹಾದ್ ಫಾಸಿಲ್

    ಪಬ್ಲಿಕ್ ಟಿವಿಯಲ್ಲಿ ವರದಿ ಬಿತ್ತರವಾದ ಹಿನ್ನೆಲೆ ಟೋಲ್ ನಿರ್ವಹಣೆಯ ಸಿಬ್ಬಂದಿ, ಕುಸಿದು ಬಿದ್ದ ಬೃಹತ್ ಸ್ಲಾಬ್‌ಗಳನ್ನು ದುರಸ್ತಿ ಮಾಡಿದ್ದಾರೆ. ಬೆಂಗಳೂರು ಹೊರವಲಯ ನೆಲಮಂಗಲ ನಗರದ ಕುಣಿಗಲ್ ಬೈಪಾಸ್ ಬಳಿ ಸ್ಲಾಬ್‌ಗಳು ಕುಸಿದಿದ್ದವು. ವರದಿ ಬಳಿಕ ಓಡೋಡಿ ಬಂದು ಟೋಲ್ ಸಿಬ್ಬಂದಿಗಳು ದುರಸ್ತಿ ಕಾರ್ಯ ಆರಂಭಿಸಿದ್ದಾರೆ.

    ವಾಹನ ಸವಾರರಿಗೆ ಯಮಸ್ವರೂಪಿ ಮೃತ್ಯು ಕೂಪವಾಗಿದ್ದ ಬೃಹತ್ ಗುಂಡಿ ಸ್ಲಾಬ್‌ಗಳನ್ನು ಅಳವಡಿಸಿದ್ದಾರೆ. ಕಂಡು ಕಾಣದಂತೆ ಇದ್ದ ಟೋಲ್ ನಿರ್ವಹಣೆ ಕಂಪನಿಯ ಸಿಬ್ಬಂದಿ ಬೆಂಗಳೂರು ಹಾಗೂ ತುಮಕೂರು ರಾಷ್ಟ್ರೀಯ ಹೆದ್ದಾರಿಯ (Bengaluru Tumkuru National Highway) ಗುಂಡಿಯನ್ನು ದುರಸ್ತಿ ಮಾಡಿದ್ದು, ಇನ್ನೂ ಸಾಕಷ್ಟು ದುರಸ್ತಿ ಕೆಲಸ ಮಾಡಬೇಕಿದೆ. ರಸ್ತೆಯಲ್ಲಿ ಗುಂಡಿ ಗಂಡಾಂತರ ಜನಾಕ್ರೋಶದ ವರದಿ ಪ್ರಸಾರ ಮಾಡಿದ್ದ ‘ಪಬ್ಲಿಕ್ ಟಿವಿ’ಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ಹರಿಯಾಣ ವಿಧಾನಸಭೆ ಚುನಾವಣೆ – ಆಪ್, ಕಾಂಗ್ರೆಸ್‌ ಮೈತ್ರಿ ಹಿಂದಿನ ಲೆಕ್ಕಾಚಾರ ಏನು?

  • ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಸರಣಿ ಅಪಘಾತಕ್ಕೆ ಮೂವರು ಬಲಿ

    ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಸರಣಿ ಅಪಘಾತಕ್ಕೆ ಮೂವರು ಬಲಿ

    ಬೆಂಗಳೂರು: ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ (Tumakuru-Bengaluru National Highway) ಸರಣಿ ಅಪಘಾತ ಸಂಭವಿಸಿದ್ದು, ಮೂವರು ಬಲಿಯಾಗಿದ್ದಾರೆ.

    ನೆಲಮಂಗಲ (Nelamangala) ತಾಲೂಕಿನ ಕುಲುವನಹಳ್ಳಿ ಬಳಿ ಅಪಘಾತವಾಗಿದ್ದು, ಸ್ಥಳದಲ್ಲೇ ಮೂವರು ದಾರುಣ ಸಾವನ್ನಪ್ಪಿದ್ದಾರೆ. ನಾಲ್ವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಮಣಿಪುರದಲ್ಲಿ ಬಾಂಬ್‌ ಸ್ಫೋಟ – ಬಿಜೆಪಿ ಮಾಜಿ ಶಾಸಕನ 2ನೇ ಪತ್ನಿ ದಾರುಣ ಸಾವು!

    ಲಾರಿ, ಟೆಂಪೋ, ಕಾಂಕ್ರಿಟ್‌ ಮಿಕ್ಸರ್‌ ವಾಹನ ನಡುವೆ ಅಪಘಾತ ಸಂಭವಿಸಿದೆ. ಕಾಂಕ್ರಿಟ್ ಕೆಲಸ ಮಾಡುವ ಮೂವರು ಕೂಲಿ ಕಾರ್ಮಿಕರು ಸಾವಿಗೀಡಾಗಿದ್ದಾರೆ. ಪರಿಣಾಮವಾಗಿ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.

    ನೆಲಮಂಗಲ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತೆರವು ಕಾರ್ಯ ನಡೆಸುತ್ತಿದ್ದಾರೆ. ಇದನ್ನೂ ಓದಿ: ದರೋಡೆ ಕೇಸ್; ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿ ಕಾಲಿಗೆ ಗುಂಡೇಟು

  • ನೆಲಮಂಗಲದಲ್ಲಿ ಹೆದ್ದಾರಿಗೆ ನುಗ್ಗಿದ ನೀರು – ಕಿಲೋಮೀಟರ್‌ಗಟ್ಟಲೇ ಟ್ರಾಫಿಕ್ ಜಾಮ್

    ನೆಲಮಂಗಲದಲ್ಲಿ ಹೆದ್ದಾರಿಗೆ ನುಗ್ಗಿದ ನೀರು – ಕಿಲೋಮೀಟರ್‌ಗಟ್ಟಲೇ ಟ್ರಾಫಿಕ್ ಜಾಮ್

    ಬೆಂಗಳೂರು/ನೆಲಮಂಗಲ: ತಡರಾತ್ರಿ ಸುರಿದ ಧಾರಾಕಾರ ಮಳೆಗೆ ನೆಲಮಂಗಲದಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ.

    ರಾತ್ರೀ ಇಡೀ ಸುರಿದ ಭಾರೀ ಮಳೆಗೆ ಮುಕ್ತನಾತೇಶ್ವರ ದೇವಾಲಯದ ರಸ್ತೆ ಸಂಪೂರ್ಣ ಜಲಾವೃತವಾಗಿದೆ. ಅಮಾನಿಕೆರೆ, ಹಾಗೂ ಬಿನ್ನಮಂಗಲದ ಕೆರೆಗಳು ಕೋಡಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಎಂಜಿ ರಸ್ತೆ ಸಂಪರ್ಕ ಕಡಿತಗೊಳಿಸಲಾಗಿದೆ ಹಾಗೂ ಜನಪ್ರಿಯ ಅಪಾರ್ಟ್‍ಮೆಂಟ್ ರಸ್ತೆ ಕೂಡ ಜಲಾವೃತಗೊಂಡಿದೆ. ಇದನ್ನೂ ಓದಿ: ಹಿಂದೂ ಸಂಪ್ರದಾಯದಂತೆ ಬ್ರಾಹ್ಮಣ ಯುವತಿಯನ್ನು ವರಿಸಿದ ಬಾಂಗ್ಲಾದೇಶದ ಮಹಿಳೆ

    ಅಮಾನಿಕೆರೆ ಹಾಗೂ ಬಿನ್ನಮಂಗಲದ ಕೆರೆಗಳು ಕೋಡಿ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿಗೆ ಕೆರೆಯ ನೀರು ನುಗ್ಗಿದ್ದು, ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಅವಾಂತರ ಸೃಷ್ಟಿಯಾಗಿದೆ. ಅಲ್ಲದೇ ನೂರಾರು ವಾಹನಗಳು ಮಳೆಯ ನೀರಿನಲ್ಲಿ ಮುಳುಗಡೆಯಾಗಿದೆ. ಇದೀಗ ನೆಲಮಂಗಲ ಬೆಂಗಳೂರು ಸರ್ವೀಸ್ ರಸ್ತೆಯನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಮತ್ತೊಂದೆಡೆ ಅಡಕಮಾರನಹಳ್ಳಿಯ ಜೈನ್ ಟೆಂಪಲ್ ಕೂಡ ನಾಲ್ಕೈದು ಅಡಿ ನೀರಿನಿಂದ ಜಲಾವೃತವಾಗಿದೆ.

    ಮಳೆಯಿಂದಾಗಿ ನೆಲಮಂಗಲ ಸರ್ವಿಸ್ ರಸ್ತೆಯಲ್ಲಿ ಕಿಲೋಮೀಟರ್ ದೂರ ಟ್ರಾಫಿಕ್ ಜಾಮ್ ಸಮಸ್ಯೆ ಎದುರಾಗಿತ್ತು. ಈ ವೇಳೆ ಹುಚ್ಚು ಸಾಹಸಕ್ಕೆ ಮುಂದಾದ ಗೂಡ್ಸ್ ವಾಹನದ ಚಾಲಕ ಜನರನ್ನು ತುಂಬಿಕೊಂಡು ವೇಗವಾಗಿ ಹರಿಯುತ್ತಿರುವ ನೀರಿನಲ್ಲಿ ಬಂದು ವಾಹನದಲ್ಲಿಯೇ ಲಾಕ್ ಆಗಿದ್ದಾರೆ. ನಂತರ ವಾಹನದಲ್ಲಿ ಇದ್ದ ಯುವಕರು ವಾಹನವನ್ನು ನೀರಿನಿಂದ ಹೊರತರಲು ಹರಸಾಹಾಸ ಪಟ್ಟಿದ್ದಾರೆ. ಇದನ್ನೂ ಓದಿ: ಮುಸ್ಲಿಂ ವ್ಯಕ್ತಿಯ ಪಾರ್ಥೀವ ಶರೀರದ ಮೆರವಣಿಗೆ ಕಂಡು ಡಿಜೆ ಬಂದ್ ಮಾಡಿದ ಗಣೇಶ ಭಕ್ತರು

    ಇನ್ನೊಂದೆಡೆ ನೆಲಮಂಗಲ ಅಡಕಮಾರನಹಳ್ಳಿ ಬಳಿ ಹರಿಯುತ್ತಿರುವ ನೀರಿನಲ್ಲಿ ರಸ್ತೆ ದಾಟಲು ಮಗನ ಜೊತೆಗೆ ಪೋಷಕರು ಹರಸಾಹಸ ಪಟ್ಟರು. ಇದೀಗ ಸರ್ವೀಸ್ ರಸ್ತೆಯಲ್ಲಿ ನೂರಾರು ಲಾರಿಗಳು ನೀರಿನಲ್ಲಿ ಮುಳುಗಡೆಯಾಗಿದ್ದು, ರಸ್ತೆಯನ್ನು ಸಂಪೂರ್ಣವಾಗಿ ಬ್ಲಾಕ್ ಮಾಡಲಾಗಿದೆ.

    Live Tv
    [brid partner=56869869 player=32851 video=960834 autoplay=true]