Tag: ತುಳು

  • ತುಳು ಭಾಷೆಯನ್ನ ಎರಡನೇ‌ ಭಾಷೆಯನ್ನಾಗಿಸಲು ಸಿಎಂ ಆಶ್ವಾಸನೆ

    ತುಳು ಭಾಷೆಯನ್ನ ಎರಡನೇ‌ ಭಾಷೆಯನ್ನಾಗಿಸಲು ಸಿಎಂ ಆಶ್ವಾಸನೆ

    – ತುಳುನಾಡಿನ ಜಾನಪದ ಕ್ರೀಡೆ ಕಂಡು‌ ಸಿಎಂ ಫುಲ್‌ ಖುಷ್
    – ಕಂಬಳ ಕೋಣಗಳ ಜೊತೆ ಫೋಟೋಗೆ ಫೋಸ್ ಕೊಟ್ಟ ಸಿಎಂ ಸಿದ್ದರಾಮಯ್ಯ

    ಮಂಗಳೂರು: ಸ್ಪೀಕರ್ ಯು.ಟಿ.ಖಾದರ್ ನೇತೃತ್ವದ ಕಂಬಳದಲ್ಲಿ ಭಾಗವಹಿಸಿದ್ದ ಸಿಎಂ ಸಿದ್ದರಾಮಯ್ಯ, ಕಂಬಳ ಕೂಟದಲ್ಲಿ ಕಂಬಳ ಪೇಟಾ ತೊಟ್ಟು ಮಿಂಚಿದರು. ತುಳುನಾಡ ಜಾನಪದ ಆಟ ಕಂಡು, ಕೋಣಗಳ ಜೊತೆ ಪೋಟೋಗೆ ಪೋಸ್ ಕೊಟ್ಟು ಖುಷಿ ಪಟ್ಟರು.

    ಕಂಬಳ ತುಳುನಾಡ ಜನಪದ ಕ್ರೀಡೆ, ತುಳುವರ ಸಂಸ್ಕೃತಿ ಕಂಬಳ. ಕಳೆದ ಮೂರು ವರ್ಷಗಳಿಂದ ಸ್ಪೀಕರ್ ಯು.ಟಿ.ಖಾದರ್, ತನ್ನ ಕ್ಷೇತ್ರದ ನರಿಂಗಾನ ಎಂಬಲ್ಲಿ ಲವ-ಕುಶ ಜೋಡುಕರೆ ಕಂಬಳವನ್ನು ಅದ್ದೂರಿಯಾಗಿ ಆಯೋಜನೆ ಮಾಡುತ್ತಿದ್ದಾರೆ. ಈ ಬಾರಿ ವಿಶೇಷ ಎಂಬಂತೆ ಸಿಎಂ ಸಿದ್ದರಾಮಯ್ಯ ಕಂಬಳದಲ್ಲಿ ಭಾಗವಹಿಸಿ ಕಂಬಳಕ್ಕೆ ಹೊಸ ಮೆರುಗು ತುಂಬಿದ್ದರು. ಕಂಬಳಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರನ್ನು ಆರತಿ ಬೆಳಗಿ, ಸಿಡಿಮದ್ದು ಸಿಡಿಸಿ ಅದ್ದೂರಿ ಸ್ವಾಗತ ನೀಡಲಾಯಿತು. ಕಂಬಳ ಪೇಟಾ ತೊಡಿಸಿ, ಬೆಳ್ಳಿ ನೊಗ, ಬೆಳ್ಳಿಯ ಹಿಡಿಯ ಬೆತ್ತ ನೀಡಿ ಗೌರವಿಸಲಾಯಿತು. ಕಂಬಳ ಕಂಡು ಆನಂದಿಸಿದ ಸಿಎಂ, ಹಿಂದೆ ಕಂಬಳ ನಿಂತಾಗ ನಾವೇ ನಿಷೇಧ ತೆರವುಗೊಳಿಸಿದ್ದು. ಕರಾವಳಿಯ 24 ಕಂಬಳ ನಡೆಸಲು ಪ್ರತಿ ಕಂಬಳಕ್ಕೆ 5 ಲಕ್ಷ ಸರ್ಕಾರ ನೀಡಿದೆ. ಎಲ್ಲ ಭಾಷೆ ಧರ್ಮ, ಸಂಸ್ಕೃತಿಯವರು ಭಾಗವಹಿಸುವ ಕಂಬಳವನ್ನು ನಾವು ಉಳಿಸಿ ಬೆಳೆಸಬೇಕು ಎಂದರು. ಸಿಎಂ ಸಿದ್ದುಗೆ ಸಚಿವ ದಿನೇಶ್ ಗುಂಡೂರಾವ್, ರಹಿಮಾನ್ ಖಾನ್ ಸಾಥ್ ನೀಡಿದರು.

    ತುಳು ಭಾಷೆಯನ್ನು ಎರಡನೇ ಭಾಷೆ ಮಾಡಬೇಕು ಎನ್ನುವುದನ್ನು ಗಂಭೀರವಾಗಿ ಪರಿಗಣಿಸುತ್ತೇವೆ ಎಂದು ಸಿಎಂ ಆಶ್ವಾಸನೆ ನೀಡಿದರು. ಕಂಬಳ ಕೋಣಗಳ ಜೊತೆ ನಿಂತು ಪೋಟೋಗೆ ಪೋಸ್ ನೀಡಿದರು. ಕಂಬಳಕ್ಕೆ ಪ್ರೋತ್ಸಾಹ ನೀಡಿ, ಸರ್ಕಾರ ಓಟಗಾರಿಗೆ ವಿಮೆ ನೀಡಬೇಕು ಎಂದು ಕಂಬಳ ಸಮಿತಿಯವರು ಮನವಿ ಸಲ್ಲಿಸಿದರು.

  • ರೂಪೇಶ್ ಶೆಟ್ಟಿಗೆ ಜೋಡಿಯಾದ ಕುಡ್ಲದ ಬೆಡಗಿ ಅದ್ವಿತಿ

    ರೂಪೇಶ್ ಶೆಟ್ಟಿಗೆ ಜೋಡಿಯಾದ ಕುಡ್ಲದ ಬೆಡಗಿ ಅದ್ವಿತಿ

    ‘ಬಿಗ್ ಬಾಸ್ ಕನ್ನಡ 9’ರ (Bigg Boss Kannada 9) ವಿನ್ನರ್ ರೂಪೇಶ್ ಶೆಟ್ಟಿ (Roopesh Shetty) ಅವರು ‘ಜೈ’ (Jai Film) ಎಂಬ ತುಳು ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ (Adhvithi Shetty) ಎಂಟ್ರಿ ಕೊಟ್ಟಿದ್ದಾರೆ. ಮೊದಲ ಬಾರಿಗೆ ತುಳು ಸಿನಿಮಾದಲ್ಲಿ ನಟಿಸುತ್ತಿರುವ ಖುಷಿಯನ್ನು ನಟಿ ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದ್ದಾರೆ.

    ರೂಪೇಶ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡುತ್ತಿರುವ ‘ಜೈ’ (Jai Film) ಸಿನಿಮಾದಲ್ಲಿ ಹೀರೋಯಿನ್ ಆಗಿ ಆಯ್ಕೆಯಾಗಿದ್ದಾರೆ. ಈಗಾಗಲೇ ಚಿತ್ರೀಕರಣದಲ್ಲೂ ಅವರು ಪಾಲ್ಗೊಂಡಿದ್ದಾರೆ. ನಟನೆಗೆ ಸ್ಕೋಪ್ ಇರುವ ವಿಭಿನ್ನ ಪಾತ್ರದಲ್ಲಿ ನಟಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ:ಸುದೀಪ್ ತಾಯಿ ಅಗಲಿಕೆಗೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ- ಪ್ರತಿಕ್ರಿಯಿಸಿದ ಕಿಚ್ಚ

    ಇನ್ನೂ ಅದ್ವಿತಿ ಶೆಟ್ಟಿ ಅವರು ಮೂಲತಃ ಮಂಗಳೂರಿನವರು. ಮಾತೃ ಭಾಷೆ ತುಳು ಆಗಿದ್ದರೂ ಅವರು ಮೊದಲ ಬಾರಿಗೆ ತುಳು ಭಾಷೆಯ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ‘ಜೈ’ ಸಿನಿಮಾದಲ್ಲಿ ನಟಿಸುವ ಮೂಲಕ ಮೊದಲ ಬಾರಿಗೆ ತುಳು ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿರುವ ಕುರಿತು ನಟಿ ಸಂತಸ ವ್ಯಕ್ತಪಡಿಸಿದ್ದಾರೆ. ತಮ್ಮನ್ನು ಆಯ್ಕೆ ಮಾಡಿದ್ದಕ್ಕೆ ರೂಪೇಶ್ ಮತ್ತು ಇಡೀ ತಂಡಕ್ಕೆ ನಟಿ ಧನ್ಯವಾದ ತಿಳಿಸಿದ್ದಾರೆ.

     

    View this post on Instagram

     

    A post shared by JAI TULU MOVIE (@jai_tulumovie2024)

    ಅಂದಹಾಗೆ, ರೂಪೇಶ್ ಶೆಟ್ಟಿ ಅವರಿಗೆ ತುಳು ಚಿತ್ರರಂಗ ಏನು ಹೊಸದಲ್ಲ. ಅವರು ಮೂಲತಃ ಮಂಗಳೂರಿನವರೇ ಆಗಿದ್ದಾರೆ. ‘ಜೈ’ ಸಿನಿಮಾದ ಜೊತೆಗೆ ಕನ್ನಡದ ‘ಅಧಿಪತ್ರ’ ಸೇರಿದಂತೆ ಹಲವು ಚಿತ್ರಗಳು ಅವರ ಕೈಯಲ್ಲಿವೆ.

  • ಗೂಗಲ್‌ ಟ್ರಾನ್ಸ್‌ಲೇಟ್‌ಗೆ ಸೇರ್ಪಡೆ ಆಯ್ತು ತುಳು!

    ಗೂಗಲ್‌ ಟ್ರಾನ್ಸ್‌ಲೇಟ್‌ಗೆ ಸೇರ್ಪಡೆ ಆಯ್ತು ತುಳು!

    ಬೆಂಗಳೂರು: ತುಳು ಭಾಷೆಯನ್ನು (Tulu Language) ಕಲಿಯಬೇಕೆಂಬ ಜನರಿಗೆ ಸಿಹಿ ಸುದ್ದಿ. ಈಗ ಗೂಗಲ್‌ ಟ್ರಾನ್ಸ್‌ಲೇಟ್‌ನಲ್ಲಿ ತುಳು ಭಾಷೆ ಸೇರ್ಪಡೆಯಾಗಿದೆ.

    ಗೂಗಲ್‌ ಟ್ರಾನ್ಸ್‌ಲೇಟ್‌ನಲ್ಲಿ ಹೊಸದಾಗಿ 110 ಭಾಷೆಗಳನ್ನು ಸೇರಿಸಿದೆ. ಭಾರತದ ತುಳು ಸೇರಿದಂತೆ ಅವಧಿ, ಬೋಡೋ, ಖಾಸಿ, ಕೊಕ್ಬೊರೊಕ್, ಮಾರ್ವಾಡಿ, ಸಂತಾಲಿಯನ್ನು ಸೇರಿಸಿದೆ.

    Google ಅನುವಾದವನ್ನು 2006 ರಲ್ಲಿ ಪರಿಚಯಿಸಲಾಗಿದ್ದು ಇಲ್ಲಿಯವರೆಗೆ 133 ಭಾಷೆಗಳನ್ನು ಬೆಂಬಲಿಸುತಿತ್ತು. ಆದರೆ ಈಗ ಒಂದೇ ಬಾರಿಗೆ 110 ಭಾಷೆಗಳನ್ನು ಸೇರಿಸಿದ್ದು ಒಟ್ಟು ಈಗ 243 ಭಾಷೆಗಳನ್ನು ಬೆಂಬಲಿಸುತ್ತಿದೆ.

    ಡೆಸ್ಕ್‌ಟಾಪ್‌ನಲ್ಲಿ translate.google.co.in ಹೋಗಿ ಭಾಷೆಯನ್ನು ಆಯ್ಕೆ ಮಾಡಬಹುದು. ಸ್ಮಾರ್ಟ್‌ಫೋನ್‌ ಬಳಕೆದಾರರು ಗೂಗಲ್‌ ಟ್ರಾನ್ಸ್‌ಲೇಟ್‌ ಆಪ್‌ ಡೌನ್‌ಲೋಡ್‌ ಅಥವಾ ಡೆಸ್ಕ್‌ಟಾಪ್‌ ಯುಆರ್‌ಎಲ್‌ ಲಿಂಕ್‌ ಬಳಸಿ ಭಾಷಾಂತರ ಮಾಡಬಹುದು. ಇದನ್ನೂ ಓದಿ: ಡಿಕೆಗೆ ಸಿಎಂ ಸ್ಥಾನ ಹೇಳಿಕೆ ಹಿಂದಿದ್ಯಾ ಕುತಂತ್ರ? – ಆಪ್ತರ ಬಳಿ ಸಿಎಂ ತೀವ್ರ ಅಸಮಾಧಾನ

    ಹಲವು ಪದಗಳು ನಿಖರವಾಗಿ ತುಳುವಿಗೆ ಅನುವಾದವಾದರೂ ಕೆಲವೊಂದು ಪದಗಳು ಸರಿಯಾಗಿ ಅನುವಾದವಾಗೇಬೇಕಿದೆ. ಕನ್ನಡ ಭಾಷೆಯನ್ನು ಆರಂಭದಲ್ಲಿ ಟ್ರಾನ್ಸ್‌ಲೇಟ್‌ಗೆ ಸೇರಿಸಿದಾಗಲೂ ಕೆಲವೊಂದು ಪದಗಳು ಸರಿಯಾಗಿ ಅನುವಾದವಾಗುತ್ತಿರಲಿಲ್ಲ. ಹಂತ ಹಂತವಾಗಿ ಗೂಗಲ್‌ ಇದನ್ನು ಸರಿಪಡಿಸುತ್ತಾ ಬಂದಿದೆ. ಗೂಗಲ್‌ನ ಆರಂಭಿಕ ಪ್ರಯತ್ನಕ್ಕೆ ತುಳು ಭಾಷಿಗರು ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

     

  • ಟ್ರೋಲ್‌ನಿಂದ ನನ್ನ ಕನ್ನಡ ಮತ್ತಷ್ಟು ಸ್ಪಷ್ಟವಾಗಲಿದೆ: ಯುಟಿ ಖಾದರ್‌

    ಟ್ರೋಲ್‌ನಿಂದ ನನ್ನ ಕನ್ನಡ ಮತ್ತಷ್ಟು ಸ್ಪಷ್ಟವಾಗಲಿದೆ: ಯುಟಿ ಖಾದರ್‌

    ಬೆಂಗಳೂರು: ಟ್ರೋಲ್‌ನಿಂದ (Troll) ನನ್ನ ಕನ್ನಡ ಮತ್ತಷ್ಟು ಸ್ಪಷ್ಟವಾಗಲಿದೆ ಎಂದು ವಿಧಾನಸಭಾ ಸ್ಪೀಕರ್‌ ಯುಟಿ ಖಾದರ್‌ (UT Khader) ಹೇಳಿದ್ದಾರೆ.

    ಬೆಂಗಳೂರು ಪ್ರೆಸ್ ಕ್ಲಬ್ ಆಯೋಜಿಸಿದ್ದ ಸಂವಾದದಲ್ಲಿ ಮಾತನಾಡಿದ ಅವರು, ನನ್ನ ಕನ್ನಡದ (Kannada) ಬಗ್ಗೆ ಟ್ರೋಲ್ ಮಾಡುವವರು ಮಾಡಲಿ. ಸಹಜವಾಗಿ ಕರಾವಳಿ ಪ್ರದೇಶದವರಾದ ನಾವು ತುಳು (Tulu) ಭಾಷೆ ಮಾತನಾಡುವವರು ಸಿಕ್ಕಿದಾಗ ತುಳುವಿನಲ್ಲೇ ಮಾತಾಡುತ್ತೇವೆ. ಅವರ ಟ್ರೋಲ್‌ನಿಂದಾಗಿ ನನ್ನ ಕನ್ನಡ ಇನ್ನಷ್ಟು ಚೆನ್ನಾಗಿ ಸ್ಪಷ್ಟವಾಗಲಿದೆ ಎಂದು ಟಾಂಗ್ ಕೊಟ್ಟರು. ಇದನ್ನೂ ಓದಿ: ಪಾಕಿಸ್ತಾನ ತಂಡದಲ್ಲಿ ಎಲ್ಲರೂ ಉತ್ತಮ ಬೌಲರ್‌ಗಳೇ – ರೋಹಿತ್‌ ಶರ್ಮಾ

     

    ಶಾಸಕರನ್ನು ಅಮಾನತು ಮಾಡಿದ್ದು ಸರಿಯೇ ಎಂದು ಕೇಳಲಾದ ಪ್ರಶ್ನೆಗೆ, ಸಂವಿಧಾನ ಪ್ರಕಾರ ನಾನು ನಡೆದುಕೊಂಡಿದ್ದೇನೆ. ಸದನ ಮುಗಿಯುವ‌ ತನಕ ಶಾಸಕರ ಅಮಾನತು ಇತ್ತು. ಈಗ ಸದನ ಮುಗಿದಿದೆ. ಮತ್ತೆ ಚರ್ಚೆ ಬೇಡ ಎಂದರು.

    ಶಾಸಕರ ತರಬೇತಿ ಶಿಬಿರಕ್ಕೆ ರವಿಶಂಕರ್ ಗುರೂಜಿಗೆ (Ravi Shankar Guruji) ಆಹ್ವಾನ‌ ನೀಡಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಾನು ಎಡವೂ ಅಲ್ಲ, ಬಲವೂ ಅಲ್ಲ‌. ಕಷ್ಟದಲ್ಲಿರುವ ಎಡ, ಬಲ ಪರ ಇದ್ದೇನೆ. ಕಷ್ಟದಲ್ಲಿರುವ ಇಬ್ಬರನ್ನ ಒಟ್ಟಿಗೆ ತೆಗೆದುಕೊಂಡು ಹೋಗುತ್ತೇನೆ. ಅಂದು ನೂತನ ಶಾಸಕರಿಗೆ ಯಾರಿಗೂ ವಿರೋಧ ಇರಲಿಲ್ಲ, ಸಾಮಾಜಿಕ ಜಾಲತಾಣದಲ್ಲಿ ವಿರೋಧ ಮಾಡಿದರು. ಹೊರಗೆ ಕೆಲವರು ವಿರೋಧ ಮಾಡಿದರು. ಈಗ ಶಿಬಿರವೂ ಮುಗಿದು ಹೋಯ್ತಲ್ಲ ಬಿಡಿ ಎಂದರು.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕನ್ನಡ, ತುಳು ಎರಡೂ ಭಾಷೆಗಳನ್ನು ಉಳಿಸಿ, ಬೆಳೆಸಬೇಕು: ಒಡಿಯೂರು ಶ್ರೀ

    ಕನ್ನಡ, ತುಳು ಎರಡೂ ಭಾಷೆಗಳನ್ನು ಉಳಿಸಿ, ಬೆಳೆಸಬೇಕು: ಒಡಿಯೂರು ಶ್ರೀ

    ಬೆಂಗಳೂರು: ಹೃದಯದ ಭಾವನೆಗಳ ಇನ್ನೊಂದು ರೂಪವೇ ಭಾಷೆ. ಭಾಷೆಗೆ ಸೆಳೆಯುವಂತಹ ಶಕ್ತಿ ಇದೆ. ತುಳುನಾಡಿನವರಿಗೆ ಎರಡು ಭಾಷೆ ಇದೆ. ಕನ್ನಡ (Kannada) ರಾಜ್ಯ ಭಾಷೆಯಾದ್ರೆ, ತುಳು (Tulu) ಮಾತೃಭಾಷೆಯಾಗಿದೆ. ಈ ಎರಡು ಭಾಷೆಗಳನ್ನು ಉಳಿಸುವ ಮತ್ತು ಬೆಳೆಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಒಡಿಯೂರು ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ (Shree Gurudevananda Swamiji Odiyoor) ಅವರು ಹೇಳಿದ್ದಾರೆ.

    ಬೆಂಗಳೂರಿನ ತುಳುವೆರೆ ಚಾವಡಿ 25ನೇ ವರ್ಷದ ʼಬೊಳ್ಳಿ ಪರ್ಬʼ ಕಾರ್ಯಕ್ರಮದಲ್ಲಿ ತುಳುನಾಡ್ದ್​ ಸಿರಿ ಪ್ರಶಸ್ತಿ ಮತ್ತು ಜೋಕುಲೆ ಉಜ್ಜಾಲ್​ ತುಳು ಪದಮಾಲೆ ಪುಸ್ತಕ ಹಾಗೂ ಸತ್ಯಪ್ಪೆ ಬಾಲೆಲು ಆಡಿಯೋ ಬಿಡುಗಡೆ ಮಾಡಿ ಮಾತನಾಡಿದ ಅವರು, ತುಳುಭಾಷೆಯನ್ನು 8ನೇ ಪರಿಚ್ಚೇದಕ್ಕೆ ಸೇರಿಸುವ ವಿಚಾರ ಕೂಡ ಹೋರಾಟದ ಹಾದಿಯಲ್ಲಿದೆ. ಆದರೆ ಅದಕ್ಕಿಂತ ಮುನ್ನ ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿಸಬೇಕು. ಈಗಾಗಲೇ ಸರ್ಕಾರ ಈ ಬಗ್ಗೆ ಅಧ್ಯಯನ ಸಮಿತಿಯನ್ನು ರಚಿಸಿದ್ದು, ಇದು ಆದಷ್ಟು ಬೇಗ ಜಾರಿಯಾಗಲು ತುಳುನಾಡಿನವರು ಎಲ್ಲರೂ ಒಗ್ಗಟ್ಟಿನಿಂದಿರಬೇಕು ಎಂದು ಹೇಳಿದರು.

    ಇನ್ನು ನಮ್ಮ ಮಾತೃಭಾಷೆಯನ್ನು ಎಲ್ಲರೂ ಉಳಿಸಿಕೊಳ್ಳಬೇಕು. ಕರಾವಳಿಯ ಜನರಲ್ಲಿ ನಾಯಕತ್ವದ ಗುಣವಿದೆ. ಸದಾ ಕ್ರೀಯಾಶೀಲತೆಯಿಂದ ಇರುವ ಜನ ಆತ್ಮವಿಶ್ವಾಸದಿಂದ ಇರುತ್ತಾರೆ. ಹಾಗೇ ತುಳುಭಾಷೆ ಜಾತಿ ಧರ್ಮವನ್ನು ಮೀರಿ ನಿಂತಿದೆ ಎಂದು ತುಳುಭಾಷೆಯಲ್ಲಿ ಅಡಗಿರುವ ಶಕ್ತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

    ರಾಜ್ಯ ಸರ್ಕಾರ ಈಗಾಗಲೇ ತುಳು ಭಾಷೆಯನ್ನು ಎರಡನೇ ಭಾಷೆಯನ್ನಾಗಿಸಲು ಅಧ್ಯಯನ ಸಮಿತಿಯನ್ನು ರಚಿಸಿದೆ. ಹಾಗೇ ತುಳು ಭಾಷೆಯ ಲಿಪಿಯೂ ಸರಿಯಾಗಬೇಕು. ಜೊತೆಗೆ ಶಾಲೆಗಳಲ್ಲಿ ತುಳು ಭಾಷೆಯನ್ನು ನಾಲ್ಕನೇ ತರಗತಿಯವರೆಗೆ ಆಯ್ಕೆಯ ಭಾಷೆಯನ್ನಾಗಿಸಬೇಕು ಎಂದು ಸಲಹೆ ನೀಡಿದರು. ಇದನ್ನೂ ಓದಿ: SSLC ಪೂರ್ವಸಿದ್ಧತಾ ಪರೀಕ್ಷೆಗೂ ವಿದ್ಯಾರ್ಥಿಗಳು ಶುಲ್ಕ ಕಟ್ಟಬೇಕು – ಶಿಕ್ಷಣ ಇಲಾಖೆಯಿಂದ ಹೊಸ ನಿಯಮ

    ಇದೇ ವೇಳೆ, ಖ್ಯಾತ ಯಕ್ಷಗಾನ ಕಲಾವಿದರಾದ ಸೀತಾರಾಮ ಕುಮಾರ್ ಕಟೀಲ್, ಹಿರಿಯ ತುಳು ಸಾಹಿತಿ ಕುಶಲಾಕ್ಷಿ ವಿ.ಕಣ್ವತೀರ್ಥ, ಸಮಾಜ ಸೇವಕ ರವಿ ಕಟಪಾಡಿ, ಪ್ರಕಾಶ್ ಜೆ ಶೆಟ್ಟಿಗಾರ್ ಇವರಿಗೆ ತುಳುನಾಡ್ದ ಸಿರಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.

    ಬೆಳ್ಳಿ ಹಬ್ಬ ಸಂಭ್ರಮದ ಪ್ರಯುಕ್ತ ಹಿರಿಯ ತುಳು -ಕನ್ನಡ ಸಾಹಿತಿ ಡಿ.ಕೆ.ಚೌಟ ಇವರ ಸಂಸ್ಮರರ್ಣಾಥವಾಗಿ ಹಿರಿಯ ತುಳು ಸಾಹಿತಿ ಉಗಪ್ಪ ಪೂಜಾರಿಯವರಿಗೆ ಪ್ರಶಸ್ತಿ ಮತ್ತು ಸಾಮಾಜಿಕ ಚಿಂತಕ ,ತುಳು ಹೊರಾಟಗಾರ ಡಾ.ಉದಯ ಧರ್ಮಸ್ಥಳ ಇವರ ಸಂಸ್ಮರರ್ಣಾಥವಾಗಿ ತುಳು ಸೇವೆಗಾಗಿ ಯುವ ಪ್ರತಿಭೆ ಸತೀಶ್ ಅಗ್ಪಲ್ ರವರಿಗೆ ಪ್ರಶಸ್ತಿ ನೀಡಲಾಯ್ತು. ವಿಶೇಷ ಚೇತನರಾದ ಉಲ್ಲಾಸ್ ಯು ನಾಯಕ್​, ಲಿಖಿತ ಮತ್ತು ಶ್ರಾವ್ಯ ಅವರಿಗೆ ಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

    ಕಾರ್ಯಕ್ರಮದಲ್ಲಿ ತುಳುವೆರೆ ಚಾವಡಿ ಸಂಘದ ಅಧ್ಯಕ್ಷ ಪುರುಷೋತ್ತಮ್ ಚೇಂಡ್ಲಾ, ಉಮೇಶ್ ಪೂಂಜಾ, ವಸಂತ್​ ಶೆಟ್ಟಿ ಬೆಳ್ಳಾರೆ, ಪ್ರೋ. ರಾಧಾಕೃಷ್ಣ ಸೇರಿದಂತೆ ಕಾರ್ಯಕ್ರಮದಲ್ಲಿ ತುಳುವೆರೆ ಚಾವಡಿ ಸಂಘದ ಪದಾಧಿಕಾರಿಗಳು, ಸದಸ್ಯರು ಭಾಗಿಯಾಗಿದ್ದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ರಾಜ್ಯದ ಎರಡನೇ ಅಧಿಕೃತ ಭಾಷೆಯಾಗುತ್ತಾ ತುಳು? – ಅಧ್ಯಯನಕ್ಕೆ ಸಮಿತಿ ರಚನೆ

    ರಾಜ್ಯದ ಎರಡನೇ ಅಧಿಕೃತ ಭಾಷೆಯಾಗುತ್ತಾ ತುಳು? – ಅಧ್ಯಯನಕ್ಕೆ ಸಮಿತಿ ರಚನೆ

    ಬೆಂಗಳೂರು: ತುಳು(Tulu) ಭಾಷೆಯನ್ನು ರಾಜ್ಯದಲ್ಲಿ (Karnataka) ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಅಧ್ಯಯನ ನಡೆಸಿ ವರದಿ ನೀಡಲು ಆಳ್ವಾಸ್‌ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ್‌ ಆಳ್ವ (Mohan Alva) ನೇತೃತ್ವದ ತಂಡವನ್ನು ರಚಿಸಲಾಗಿದೆ.

    ಕೇಶವ ಬಂಗೇರ, ಡಾ. ಮಾಧವ ಕೊಣಾಜೆ, ಗಣೇಶ್‌ ಅಮೀನ್‌ ಸಂಕಮಾರ್‌, ಪೃಥ್ವಿ ಕವತ್ತಾರು ಮಣಿಪಾಲ, ವಸಂತ ಶೆಟ್ಟಿ ಉಡುಪಿ, ಚಂದ್ರಹಾಸ ಕಣಂತೂರು, ಸಂಧ್ಯಾ ಆಳ್ವ ಅವರನ್ನು ಸದಸ್ಯರನ್ನಾಗಿ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರು ಸದಸ್ಯ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.

    ಒಂದು ವಾರದಲ್ಲಿ ವರದಿ ಕೊಡುವಂತೆ ಈ ಸಮಿತಿಗೆ ಸರ್ಕಾರ ಸೂಚನೆ ನೀಡಿದೆ. ತುಳು ಭಾಷೆಗೆ ರಾಜ್ಯದ ಅಧಿಕೃತ ಭಾಷೆಯಾಗಿ ಘೋಷಿಸಬೇಕೆಂದು ಸಂಘ, ಸಂಸ್ಥೆಗಳು ಮನವಿ ಮಾಡಿದ್ದವು. ಈ ಹಿನ್ನೆಲೆಯಲ್ಲಿ ಸರ್ಕಾರ ಸಮಿತಿ ರಚಿಸಿ ಆದೇಶ ಮಾಡಿದೆ.

    ಪಂಚ ದ್ರಾವಿಡ ಭಾಷೆಗಳಲ್ಲಿ ತುಳು ಭಾಷೆಯೂ ಒಂದಾಗಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಗಳಲ್ಲಿ ಹೆಚ್ಚಾಗಿ ಜನರು ತುಳು ಭಾಷೆ ಮಾತನಾಡುತ್ತಾರೆ.

    ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಮಾಡುವ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ (Sunil Kumar) ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

    ತುಳು ಭಾಷೆಯನ್ನು ಕರ್ನಾಟಕದ ಏರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಸಂಬಂಧ, ಅಧ್ಯಯನ ನಡೆಸಿ ಸೂಕ್ತ ಶಿಫಾರಸ್ಸಿನೊಂದಿಗೆ ವರದಿ ನೀಡಲು ಮೋಹನ್ ಆಳ್ವ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, ಈ ಸಮಿತಿಗೆ ಒಂದು ವಾರದಲ್ಲಿ ವರದಿ ನೀಡಲು ಸೂಚಿಸಲಾಗಿದೆ‌ ಎಂದು ಟ್ವೀಟ್ ನಲ್ಲಿ ಸಚಿವ ಸುನೀಲ್ ಕುಮಾರ್ ಸ್ಪಷ್ಟ ಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಫಸ್ಟ್ ಟೈಮ್ ತುಳು ಹಾಡಿಗೆ ದನಿಯಾದ ಗಾಯಕಿ ಮಂಗ್ಲಿ

    ಫಸ್ಟ್ ಟೈಮ್ ತುಳು ಹಾಡಿಗೆ ದನಿಯಾದ ಗಾಯಕಿ ಮಂಗ್ಲಿ

    ‘ಕಣ್ಣೀ ಅದಿರಿಂದಿ’ ಎಂದು ಕನ್ನಡಿಗರ ಹೃದಯಕ್ಕೆ ಬಾಣ ಬಿಟ್ಟಿದ್ದ ತೆಲುಗಿನ ಖ್ಯಾತ ಗಾಯಕಿ ಮಂಗ್ಲಿ, ಈಗ ಕನ್ನಡದ ಗಾಯಕಿಯೇ ಆಗಿ ಬಿಟ್ಟಿದ್ದಾರೆ. ಅವರ ಹಾಡು (Song) ಕೇಳಿದ್ರೆ ಸಾಕು ಇದು ಮಂಗ್ಲಿ ಹಾಡಿರೋ ಹಾಡು ಅಂತ ಗುರುತಿಸ್ತಾರೆ ಕನ್ನಡಿಗರು. ಇದೀಗ ಮಂಗ್ಲಿ (Mangli) ಇದೇ ಮೊದಲ ಬಾರಿ ತುಳು ಸಿನಿಮಾವೊಂದರ ಹಾಡಿಗೆ ಧ್ವನಿಯಾಗಿದ್ದಾರೆ. ತೆಲುಗು ಮತ್ತು ಕನ್ನಡದಲ್ಲಿ ತನ್ನದೇ ವಿಭಿನ್ನ ಕಂಠದ ಮೂಲಕ ಕೋಟ್ಯಂತರ ಅಭಿಮಾನಿಗಳ ಹೃದಯಗೆದ್ದ ಗಾಯಕಿ, ಇದೇ ಮೊದಲ ಬಾರಿ ತುಳು ಜನತೆಯ ಮನಗೆಲ್ಲಲು ಸಜ್ಜಾಗಿದ್ದಾರೆ.

    ಎ.ಆರ್ ಪ್ರೊಡಕ್ಷನ್ಸ್ ಬ್ಯಾನರ್‌ನಡಿ ಅರುಣ್ ರೈ ತೋಡಾರ್ ನಿರ್ಮಾಣ, ಎಸ್.ವಿ.ಬಾಬು ರಾಜೇಂದ್ರ ಸಿಂಗ್ (Rajendra Singh Babu) ನಿರ್ದೇಶನದ ‘ಬಿರ್ದ್‌ದ ಕಂಬಳ’ ಮತ್ತು ‘ಕನ್ನಡದ ವೀರ ಕಂಬಳ’ (Veera Kambala) ಸಿನಿಮಾಕ್ಕೆ ಹಾಡಿದ್ದಾರೆ. ತುಳು (Tulu) ಮತ್ತು ಕನ್ನಡ ಎರಡೂ ಭಾಷೆಯಲ್ಲೂ ಹಾಡು ಹಾಡಿರುವುದು ವಿಶೇಷ. ತುಳುವಿನ ಕೆ.ಕೆ.ಪೇಜಾವರ, ಕನ್ನಡದ ರಘು ಶಾಸ್ತ್ರಿ ಅವರ ಸಾಹಿತ್ಯಕ್ಕೆ ಕದ್ರಿ ಮಣಿಕಾಂತ್ (Manikanth Kadri) ಸಂಗೀತ ನೀಡಿದ್ದಾರೆ.

    ಕನ್ನಡದಲ್ಲಿ ರಾಬರ್ಟ್ ಸಿನಿಮಾದ ಕಣ್ಣೆ ಅದರಂದಿ ಹಾಡಿನ ಮೂಲಕ ಸ್ಯಾಂಡಲ್‌ವುಡ್ ಪ್ರವೇಶ ಮಾಡಿದ ಮಂಗ್ಲಿ, ಬಳಿಕ ಜೋಗಿ ಪ್ರೇಮ್ ನಿರ್ದೇಶನದ ಏಕ್ ಲವ್ ಯಾ ಚಿತ್ರದ ಎಣ್ಣೆಗೂ ಹೆಣ್ಣಿಗೂ ಗೀತೆಗೂ ದನಿಯಾದರು. ನಂತರ ಪುಷ್ಪಾ ಸಿನಿಮಾದ ಕನ್ನಡದ ಡಬ್ಬಿಂಗ್ ಸಿನಿಮಾದಲ್ಲಿ ಐಟಂ ಸಾಂಗ್‌ಗೂ ಮಂಗ್ಲಿ ಹಾಡಿದ್ದರು. ಅಷ್ಟೂ ಹಾಡುಗಳು ಸೂಪರ್‌ಹಿಟ್ ಆಗಿರುವುದೇ ವಿಶೇಷ.’

    ತುಳುನಾಡಿನ ಹೆಮ್ಮೆಯ ಜಾನಪದ ಕ್ರೀಡೆ ಕಂಬಳದ ಕುರಿತು ತುಳು ಮತ್ತು ಕನ್ನಡದಲ್ಲಿ ಚಿತ್ರ ನಿರ್ಮಾಣವಾಗಿದೆ. ಈ ಚಿತ್ರ ಸಂಪೂರ್ಣ ಕರಾವಳಿಯ ಜಾನಪದ ಕಲೆ ಕಂಬಳದ ಕುರಿತಾಗಿರದ್ದು, ಚಿತ್ರೀಕರಣದ ವೇಳೆ ಸುಮಾರು 20 ಜೊತೆ ಕೋಣ ಹಾಗೂ 500ಕ್ಕೂ ಹೆಚ್ಚಿನ ಕಲಾವಿದರೊಂದಿಗೆ ಚಿತ್ರೀಕರಣ ನಡೆದಿದೆ. ಇದನ್ನೂ ಓದಿ: ‘ಮಠ’ ಚಿತ್ರ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಬಂಧನ

    ತುಳುನಾಡಿನ ಹಲವಾರು ಪ್ರಸಿದ್ಧ ರಂಗಭೂಮಿ ಕಲಾವಿದರ ಜೊತೆಯಲ್ಲಿ ಖ್ಯಾತ ನಟರಾದ ಪ್ರಕಾಶ್ ರಾಜ್, ರವಿಶಂಕರ್ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ, ಕೋಣಗಳನ್ನು ಓಡಿಸುವುದರಲ್ಲಿ ಪ್ರಸಿದ್ಧರಾದ ಶ್ರೀನಿವಾಸ ಗೌಡ ಹಾಗೂ ಕಾಂತಾರ ಚಿತ್ರದ ಗುರುವಖ್ಯಾತಿಯ  ಸ್ವರಾಜ್ ಶೆಟ್ಟಿ ಕಂಬಳ ಓಡಿಸುವವರ ಪಾತ್ರದಲ್ಲಿ ಕಾಣಿಸಿಕೊಂಡರೆ, ನಟ ಆದಿತ್ಯ ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ. ನವೀನ್ ಡಿ  ಪಡಿಲ್, ಬೋಜರಾಜ ವಾಮಂಜೂರು, ಉಷಾ ಭಂಡಾರಿ, ರಾಧಿಕಾ ನಾರಾಯಣ, ಗೋಪಿನಾಥ್ ಭಟ್,   ಚಿತ್ರಕಥೆ- ಸಂಭಾಷಣೆ ವಿಜಯ ಕುಮಾರ್ ಕೊಡಿಯಾಲ್ ಬೈಲ್, ಸಂಕಲನ ಶ್ರೀನಿವಾಸ್ ಬಾಬು, ಛಾಯಾಗ್ರಹಣ ಆರ್ ಗಿರಿ, ಸಾಹಸ ಡಿಫರೆಂಟ್ ಡ್ಯಾನಿ, ಮಾಸ್ ಮಾದ. ರಾಜೇಶ್ ಕುಡ್ಲ ಕಾರ್ಯಾಕಾರಿ ನಿರ್ಮಾಪಕರು, ನೃತ್ಯ ಮದನ್ ಹರಿಣಿ, ಕಲೆ ಚಂದ್ರಶೇಖರ್ ಸುವರ್ಣ. ಈಗಾಗಲೇ ಚಿತ್ರೀಕರಣ ಕೊನೇ ಹಂತದಲ್ಲಿದ್ದು, ಶೀಘ್ರದಲ್ಲಿ ಬಿಡುಗಡೆಯಾಗಲಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ದೈವಾರಾಧನೆ ಕುರಿತು ಸಿನಿಮಾ ಮಾಡಿದರೆ ವಿರೋಧ: ದೈವಾರಾಧಕರು

    ದೈವಾರಾಧನೆ ಕುರಿತು ಸಿನಿಮಾ ಮಾಡಿದರೆ ವಿರೋಧ: ದೈವಾರಾಧಕರು

    ತುಳುನಾಡ ದೈವಾರಾಧನೆ ಹೆಸರಿನಲ್ಲಿ ದುಡ್ಡು ಮಾಡುವವರ ವಿರುದ್ಧ ದೈವಾರಾಧಕರು ತೊಡೆತಟ್ಟಿದ್ದಾರೆ. ಇನ್ಮುಂದೆ ವ್ಯಾಪಾರದ ಹೆಸರಿನಲ್ಲಿ ದೈವಾರಾಧನೆ ನಡೆಸಿದವರು, ಮುಂದೊಂದು ದಿನ ಕಾನೂನು ಕ್ರಮ ಹಾಗೂ ವಿರೋಧವನ್ನು ಎದುರಿಸಬೇಕಾಗುತ್ತದೆ ಎಂದು ದೈವಾರಾಧಕರು ತಿಳಿಸಿದ್ದಾರೆ. ದೈವಾರಾಧನೆ ಸಿನಿಮಾ ಮಾಡಿದರೆ, ಮುಲಾಜಿಲ್ಲದೇ ವಿರೋಧಿಸಲಾಗುವುದು ಎಂದಿದ್ದಾರೆ.

    ದೈವದ ಕೋಲಾ (Buta Kola), ಸೇವೆಯ ಹೆಸರಿನಲ್ಲಿ ಲಕ್ಷಾಂತರ ರೂ. ಲೂಟಿ ಮಾಡುತ್ತಿದ್ದಾರೆ ಎಂದು ತುಳುನಾಡ ದೈವಾರಾಧನ ಸಂರಕ್ಷಣಾ ಯುವವೇದಿಕೆ, ದೈವಾರಾಧನ ಸಮಿತಿ ಬೆಳ್ತಂಗಡಿ, ಹಿಂದೂ ಸಂರಕ್ಷಣಾ ಸಮಿತಿಗಳು ಆರೋಪಿಸಿವೆ. ದೈವ ನಿಂದನೆ ಮಾಡಿ ದಂಧೆ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿವೆ. ಇದನ್ನೂ ಓದಿ: `ಗಾಲ್ವಾನ್ ಹಾಯ್’ ಎಂದ ನಟಿಗೆ ಚಳಿ ಬಿಡಿಸಿದ ಸಚಿವ – ಕಾನೂನು ಕ್ರಮಕ್ಕೆ ಚಿಂತನೆ

    ಕರಾವಳಿ (Karavali) ಹೊರಗಿನ ದೈವಾರಾಧನೆ ವಿರುದ್ಧ ಮಂಗಳೂರಿನ ಜನ ಸಿಡಿದೆದ್ದಿದ್ದಾರೆ. ದೈವಗಳ ಹೆಸರಲ್ಲಿ ದಂಧೆಗೆ ಇಳಿದವರ ವಿರುದ್ಧ ಮಂಗಳೂರಿನ ಕುತ್ತಾರು ಬಳಿಕ ಕೊರಗಜ್ಜನ (Koragajja) ಆದಿಕ್ಷೇತ್ರದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ. ತುಳುನಾಡ ದೈವಾರಾಧನ ಸಂರಕ್ಷಣಾ ಯುವವೇದಿಕೆ, ದೈವಾರಾಧನ ಸಮಿತಿ ಬೆಳ್ತಂಗಡಿ, ಹಿಂದೂ ಸಂರಕ್ಷಣಾ ಸಮಿತಿ ಮಂಗಳೂರು (Mangaluru) ಹಾಗೂ ಸಮಸ್ತ ದೈವಾರಾಧಕರಿಂದ ಪ್ರಾರ್ಥನೆ ಸಲ್ಲಿಸಲಾಗಿದೆ. ಮೈಸೂರು ಮೂಲದ ಕೆಲ ಭಕ್ತರೂ ಆದಿ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.

    ಆದಿ ಸ್ಥಳ ಮತ್ತು ತುಳುನಾಡು ಹೊರತುಪಡಿಸಿ ಕೊರಗಜ್ಜನ ಪ್ರತಿಷ್ಠೆಗೆ ಅವಕಾಶ ಇಲ್ಲ. ಹೀಗಿದ್ದರೂ ರಾಜ್ಯದ ಕೆಲವೆಡೆ ಕೊರಗಜ್ಜನ ಹೆಸರಲ್ಲಿ ದಂಧೆ ನಡೆಯುತ್ತಿದೆ. ಕೊರಗಜ್ಜ ಆದಿಸ್ಥಳ ಬಿಟ್ಟು ಬೇರೆ ಕಡೆ ಆರಾಧನೆ ಮಾಡುತ್ತಿರೋದು ವ್ಯವಹಾರದ ಉದ್ದೇಶ. ಇದನ್ನ ತಡೆದ ಮೈಸೂರಿನ ಕೆಲವರಿಗೆ ಕೊಲೆ ಬೆದರಿಕೆ ಹಾಕಲಾಗಿದೆ. ಸಿನಿಮಾ ಮತ್ತು ಸಾಮಾಜಿಕ ತಾಣಗಳ ಕಾರಣದಿಂದ ಈ ದಂಧೆ ನಡೀತಾ ಇದೆ. ಇದನ್ನ ನಿಲ್ಲಿಸದೇ ಇದ್ದರೇ ಉಗ್ರ ಹೋರಾಟ ಮಾಡುವುದಾಗಿ ಕರಾವಳಿಯ ದೈವಾರಾಧಕರು ಎಚ್ಚರಿಕೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಕಾಂತಾರ’ ತುಳು ಸಿನಿಮಾ ನಿನ್ನೆಯೇ ಆಸ್ಟ್ರೇಲಿಯಾದಲ್ಲಿ ರಿಲೀಸ್

    ‘ಕಾಂತಾರ’ ತುಳು ಸಿನಿಮಾ ನಿನ್ನೆಯೇ ಆಸ್ಟ್ರೇಲಿಯಾದಲ್ಲಿ ರಿಲೀಸ್

    ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ಫಿಲ್ಮ್ಸ್ ಕಾಂಬಿನೇಷನ್ ನ ಕಾಂತಾರ ಸಿನಿಮಾ ಇದೀಗ ತುಳುವಿನಲ್ಲಿ ರಿಲೀಸ್ ಆಗುತ್ತಿದೆ. ಮೊನ್ನೆಯಷ್ಟೇ ತುಳು ಭಾಷೆಯ ಟ್ರೇಲರ್ ರಿಲೀಸ್ ಆಗಿದ್ದು ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ತುಳು ನಾಡಿನ ದೈವಾರಾಧನೆಯನ್ನೇ ಪ್ರಮುಖವಾಗಿಟ್ಟುಕೊಂಡು ಮಾಡಿರುವ ಸಿನಿಮಾ ಇದಾಗಿದ್ದರಿಂದ ಅತ್ಯಂತ ಭಕ್ತಿಯಿಂದಲೇ ಈ ಸಿನಿಮಾವನ್ನು ಸ್ವೀಕರಿಸಿದ್ದರು. ಇದೀಗ ಸಿನಿಮಾ ರಿಲೀಸ್ ಕೂಡ ಆಗಿದೆ.

    ಈಗಾಗಲೇ ತುಳು ಸಿನಿಮಾ ರಿಲೀಸ್ ದಿನಾಂಕವನ್ನು ಹೊಂಬಾಳೆ ಫಿಲ್ಮ್ಸ್ ಘೋಷಣೆ ಮಾಡಿದೆ. ಇದೇ ಡಿಸೆಂಬರ್ 2 ರಂದು ತುಳು ಭಾಷೆಯಲ್ಲಿ ಕಾಂತಾರ ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆ ಆಗುತ್ತಿದ್ದು, ಅದಕ್ಕೂ ಮುನ್ನ ಆಸ್ಟ್ರೇಲಿಯಾದಲ್ಲಿ ಚಿತ್ರವನ್ನು ಬಿಡುಗಡೆ ಮಾಡಲಾಗಿದೆ.  ಇದನ್ನೂ ಓದಿ: ಮತ್ತೆ ಕನ್ನಡಕ್ಕೆ ಬರಲಿದ್ದಾರೆ ಶಿಲ್ಪಾ ಶೆಟ್ಟಿ: ʻಕೆಡಿ’ಯಲ್ಲಿ ಲೇಡಿ ಪವರ್

    ಶುಕ್ರವಾರ, ಶನಿವಾರ ಮತ್ತು ಭಾನುವಾರ ಹಲವು ಶೋಗಳನ್ನು ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್ ಗಳಲ್ಲಿ ರಿಲೀಸ್ ಮಾಡಿದೆ ಡ್ರೀಮ್ಸ್ ಸ್ಕ್ರೀನ್ ಇಂಟರ್ ನ್ಯಾಷನಲ್ ಸಂಸ್ಥೆ. ಅಧಿಕೃವಾಗಿ ತನ್ನ ಪೇಜ್ ನಲ್ಲಿ ಯಾವೆಲ್ಲ ಶೋಗಳು ಎಷ್ಟು ಗಂಟೆಗೆ ಎಂದು ಬರೆದುಕೊಂಡಿದೆ. ನಿನ್ನೆ ಮತ್ತು ಇವತ್ತು ಒಳ್ಳೆಯ ಪ್ರತಿಕ್ರಿಯೆ ಕೂಡ ಸಿಕ್ಕಿದೆ ಎಂದು ಹೇಳಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ತುಳು ಸಿನಿಮಾ ರಂಗದ ಖ್ಯಾತ ನಟ ನವೀನ್ ಪಡೀಲ್ ಆಸ್ಪತ್ರೆ ದಾಖಲು

    ತುಳು ಸಿನಿಮಾ ರಂಗದ ಖ್ಯಾತ ನಟ ನವೀನ್ ಪಡೀಲ್ ಆಸ್ಪತ್ರೆ ದಾಖಲು

    ತುಳು ಸಿನಿಮಾ ರಂಗದ ಖ್ಯಾತ ನಟ ನವೀನ್ ಡಿ. ಪಡೀಲ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿನಿಮಾದ ಚಿತ್ರೀಕರಣ ವೇಳೆ ಬಿದ್ದು ಏಟು ಮಾಡಿಕೊಂಡ ಪರಿಣಾಮ ಅವರ ತೊಡೆಯ ಮೂಳೆ ಮುರಿತವಾಗಿದ್ದು, ಶಸ್ತ್ರ ಚಿಕಿತ್ಸೆ ಕೂಡ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ. ಮೂರು ತಿಂಗಳ ಕಾಲ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದು, ಸದ್ಯ  ಅವರು ಮಂಗಳೂರಿನ ಎ.ಜೆ ಆಸ್ಪತ್ರೆಗೆ ದಾಖಲಾಗಿ ವಿಶ್ರಾಂತಿ ಪಡೆಯುತ್ತಿದ್ದಾರೆ.

    ಬೆಳ್ತಂಗಡಿಯ ಮಡಂತ್ಯಾರಿನಲ್ಲಿ ನಡೆದ ಶೂಟಿಂಗ್ ನಲ್ಲಿ ಅವರು ಪಾಲ್ಗೊಂಡಿದ್ದರು. ಶೂಟಿಂಗ್ ವೇಳೆ ಬಿದ್ದ ಪರಿಣಾಮ ಬಲವಾಗಿಯೇ ತೊಡೆಗೆ ಏಟಾಗಿದೆ. ಹಾಗಾಗಿ ತೊಡೆ ಮೂಳೆ ಮುರಿತವಾಗಿದೆ. ತುಳು, ಮಲಯಾಳಂ ಹಾಗೂ ಕನ್ನಡದಲ್ಲಿ ಈ ಸಿನಿಮಾ ಮೂಡಿ ಬರುತ್ತಿದ್ದು, ಚಿತ್ರದಲ್ಲಿ ನವೀನ್ ಪ್ರಮುಖ ಪಾತ್ರ ಮಾಡುತ್ತಿದ್ದರು. ಶಸ್ತ್ರ ಚಿಕಿತ್ಸೆ ನಂತರ ವಿಶ್ರಾಂತಿ ಪಡೆಯುತ್ತಿರುವ ನವೀನ್, ಮೂರು ತಿಂಗಳ ನಂತರವಷ್ಟೇ ಈ ಸಿನಿಮಾದ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದನ್ನೂ ಓದಿ:‘ಡವ್ ಮಾಸ್ಟರ್’ ಸಿನಿಮಾದ ಟ್ರೇಲರ್ ರಿಲೀಸ್ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ

    ತುಳುವಿನಲ್ಲಿ ಸಾಕಷ್ಟು ಹೆಸರು ಮಾಡಿರುವ ನವೀನ್ ಪಡೀಲ್ ಕನ್ನಡಲ್ಲೂ ಹಲವಾರು ಚಿತ್ರಗಳಲ್ಲಿ ನಟಿಸಿದ್ದಾರೆ. ಅಲ್ಲದೇ, ಮಜಾ ಟಾಕೀಸ್ ನ ಗುಂಡು ಮಾಮಾ ಎಂದೇ ಫೇಮಸ್ ಆಗಿರುವ ಇವರು, ಹಾಸ್ಯ ಕಲಾವಿದರಾಗಿ ಸಾಕಷ್ಟು ಹೆಸರು ಮಾಡಿದ್ದಾರೆ. ರಂಗಭೂಮಿ, ಕಿರುತೆರೆ, ಹಾಗೂ ಹಿರಿತೆರೆಯಲ್ಲಿ ತಮ್ಮನ್ನು ತಾವು ಏಕಕಾಲಕ್ಕೆ ತೊಡಗಿಸಿಕೊಂಡಿದ್ದು ವಿಶೇಷ.

    Live Tv
    [brid partner=56869869 player=32851 video=960834 autoplay=true]